ಕೃಷ್ಣಾ ಎಟಿಎಂಗೆ ಹಣ ಹಾಕುವ ಕೆಲಸ ಮಾಡುತ್ತಿದ್ದ. ಎಟಿಎಂ ಮಷಿನ್ ಕೀ ತನ್ನ ಬಳಿಯೇ ಇರ್ತಿತ್ತು. ಟೀಂ ಜೊತೆಗೆ ಬಂದು ಹಣ ಹಾಕಿ ಬಳಿಕ ಸಂಜೆ ಒಬ್ಬನೇ ಬಂದು ಕಳ್ಳತನ ಮಾಡಿದ್ದಾನೆ.
ಹಣ ಹಾಕಲು ಇರುತ್ತಿದ್ದ ಎಟಿಎಂ ಮಷಿನ್ ಕೀ ಬಳಸಿಯೇ ಎಂಟು ಲಕ್ಷ ಹಣ ಕಳ್ಳತನ ಮಾಡಿದ್ದಾನೆ. ಎರಡು ದಿನದ ಬಳಿಕ ಈತನ ಕೃತ್ಯ ಬೆಳಕಿಗೆ ಬಂದಿತ್ತು. ಸಿಸಿಟಿವಿ ದೃಶ್ಯ ಪರಿಶೀಲನೆ ಮಾಡಿದಾಗ ಎಟಿಎಂನಿಂದ ತಮ್ಮ ಸಿಬ್ಬಂದಿ ಹಣ ಕದ್ದಿದ್ದು ಕಂಡು ಇತರರು ಶಾಕ್ ಆಗಿದ್ದರು. ಇದನ್ನೂ ಓದಿ: ಆಸ್ತಿಗಾಗಿ ಸುಪಾರಿ ಕೊಟ್ಟು ತಮ್ಮನನ್ನೇ ಮುಗಿಸಿದ ಅಣ್ಣ – ಐವರು ಜೈಲು ಪಾಲು!
ಈ ಕುರಿತು ಮಾರ್ಕೆಟ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನಿಂದ ಒಂದು ಮಂಗಳಸೂತ್ರ, ಚಿನ್ನದ ಸರ, ಏಳು ಲಕ್ಷ ರೂ. ನಗದು ಜಪ್ತಿ ಮಾಡಲಾಗಿದೆ.
– ಬೆಳಗಾವಿಯಲ್ಲಿ ಯತ್ನಾಳ್ & ಟೀಮ್ ವಕ್ಫ್ ವಿರುದ್ಧ ಜನಜಾಗೃತಿ ಸಮಾವೇಶ
ಬೆಳಗಾವಿ: ಬೀದರ್ ಬಳಿಕ ಬೆಳಗಾವಿಯಲ್ಲೂ (Belagavi) ರೆಬಲ್ ನಾಯಕರು ಶಕ್ತಿಪ್ರದರ್ಶನಕ್ಕೆ ಮುಂದಾಗಿದ್ದು, ವಕ್ಫ್ ಬೋರ್ಡ್ ವಿರುದ್ಧ ಜನಜಾಗೃತಿ ಸಮಾವೇಶ ಹಮ್ಮಿಕೊಂಡಿದ್ದಾರೆ.
ಕುಂದಾನಗರಿ ಬೆಳಗಾವಿಯಲ್ಲಿ ಬಿಜೆಪಿ (BJP) ರೆಬಲ್ ನಾಯಕರ ಬೃಹತ್ ಹೋರಾಟ ಹಮ್ಮಿಕೊಂಡಿದ್ದು ವಕ್ಫ್ ಬೋರ್ಡ್ (Waqf Board) ಭೂಕಬಳಿಕೆ ವಿರುದ್ಧ ಬೃಹತ್ ಹೋರಾಟಕ್ಕೆ ಕರೆ ಕೊಟ್ಟಿದ್ದಾರೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ Basanagouda Patil Yatnal), ಮಾಜಿ ಸಚಿವ ರಮೇಶ್ ನೇತೃತ್ವದಲ್ಲಿ ನಡೆಯುತ್ತಿರುವ ವಕ್ಫ್ ವಿರುದ್ಧ ಹೋರಾಟ ನಡೆಯುತ್ತಿದೆ. ಇದನ್ನೂ ಓದಿ: Bengaluru| ಸಿಲಿಂಡರ್ ಸ್ಫೋಟಗೊಂಡು 3 ಮನೆಗಳಿಗೆ ಬೆಂಕಿ – ಒಂದೇ ಕುಟುಂಬದ ನಾಲ್ವರಿಗೆ ಗಾಯ
ಬೀದರ್ ಬಳಿಕ ಬೆಳಗಾವಿಯಲ್ಲೂ ವಕ್ಫ್ ಬೋರ್ಡ್ ವಿರುದ್ಧ ಹೋರಾಟಕ್ಕೆ ರೆಬಲ್ಸ್ ನಾಯಕರು ಅಣಿಯಾಗಿದ್ದು ಬೆಳಗಾವಿ ಚೆನ್ನಮ್ಮ ವೃತ್ತದಿಂದ ಹೋರಾಟ ಶುರುವಾಗಲಿದೆ. ಚೆನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಬಳಿಕ ಬೆಳಿಗ್ಗೆ 10.30ಕ್ಕೆ ಸಮಾವೇಶದ ಸ್ಥಳ ಗಾಂಧಿ ಭವನದವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಿದ್ದಾರೆ. ಪ್ರತಿಭಟನೆಯಲ್ಲಿ ಮಾಜಿ ಸಂಸದ ಪ್ರತಾಪ ಸಿಂಹ (Pratap Simha), ಜಿಎಂ ಸಿದ್ದೇಶ್ವರ, ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಶಾಸಕ ಕುಮಾರ್ ಬಂಗಾರಪ್ಪ, ಬಿ.ಪಿ ಹರೀಶ, ಎನ್.ಆರ್ ಸಂತೋಷ್ ಸೇರಿ ಹಲವರು ಸಾಥ್ ಕೊಡಲಿದ್ದಾರೆ. ಇದನ್ನೂ ಓದಿ: Cyclone Fengal | ಚಂಡಮಾರುತಕ್ಕೆ ಮೂವರು ಬಲಿ – 100ಕ್ಕೂ ಹೆಚ್ಚು ಮಂದಿ ರಕ್ಷಣೆ
ಈ ಕುರಿತು ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾಜಿ ಸಂಸದ ಪ್ರತಾಪ್ ಸಿಂಹ ಮಾತನಾಡಿ, ಯತ್ನಾಳ್ ವಕ್ಫ್ ಬಗ್ಗೆ ಜಾಗೃತಿ ಮೂಡಿಸಲು ಹೋರಾಟ ಮಾಡುತ್ತಿದ್ದಾರೆ. ವಿಜಯೇಂದ್ರ ಅವರು ನಮ್ಮ ರಾಜಾಧ್ಯಕ್ಷರು, ಅವರು ನ.20ರಂದು ಸುದ್ದಿಗೋಷ್ಠಿ ಮಾಡಲು ಕರೆಕೊಟ್ಟಿದ್ದರು. ಅದರಂತೆ ಎಲ್ಲಾ ಜಿಲ್ಲೆಗಳಲ್ಲಿ ಸುದ್ದಿಗೋಷ್ಠಿ ಮಾಡಿದ್ದೇವೆ. ನ.22ರಂದು ಎಲ್ಲಾ ಜಿಲ್ಲೆಯ ಡಿಸಿ ಕಚೇರಿಗಳಿಗೆ ಮುತ್ತಿಗೆ ಹಾಕಲು ಕರೆಕೊಟ್ಟಿದ್ದರು, ಅದೇ ರೀತಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ್ದೇವೆ. ಅದೇ ರೀತಿ ಯತ್ನಾಲ್ ಅವರು ಬಿಜಾಪುರದಿಂದ ಹೋರಾಟ ಆರಂಭ ಮಾಡಿದ್ದರು. ಆ ಹೋರಾಟದಲ್ಲಿ ಕೇಂದ್ರ ಸಚಿವರು ಭಾಗಿಯಾದ್ರು, ಹೀಗಾಗಿ ಈ ಹೋರಾಟದಲ್ಲಿ ಅಪಸ್ವರ, ಬಣ ಹೋರಾಟ ಎಂಬುದು ಅಪ್ರಸುತ್ತ ಅಗುತ್ತೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಬ್ರಿಟಿಷರ ಆಡಳಿತ ವಿರೋಧಿಸಿದ ಕೀರ್ತಿ ಟಿಪ್ಪುವಿನದ್ದು: ವಿದೇಶಾಂಗ ಸಚಿವ ಜೈಶಂಕರ್
ಯತ್ನಾಳ್ ಸಹ ಜನಪ್ರಿಯ ನಾಯಕರು:
ನಿನ್ನೆ ಸಹ ನಾನು ಹೇಳಿದ್ದೆ ಅಪ್ರಸ್ತುತ ವ್ಯಕ್ತಿಗಳು, ಜನರಿಂದ ತಿರಸ್ಕೃತವಾಗಿದ್ದವರು, ಮೂಲೆ ಗುಂಪಾಗಿದ್ದವರ ಬಗ್ಗೆ ಉತ್ತರ ಕೊಡುವ ಅಗತ್ಯವಿಲ್ಲ. ಹೋರಾಟದ ದಿಕ್ಕು ತಪ್ಪಿಸುವರ ಬಗ್ಗೆ ಮಾತನಾಡುದಿಲ್ಲ. ಇಡೀ ಬಿಜೆಪಿ ವಕ್ಫ್ ವಿರುದ್ಧ ವಿಜಯೇಂದ್ರ-ಯತ್ನಾಳ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ. ಇದಕ್ಕಾಗಿ ಯಾಕೆ ಅಪಸ್ವರ ಬರುತ್ತಿದೆ ನನಗೆ ಗೋತ್ತಿಲ್ಲ. ಯತ್ನಾಳ್ ಕೂಡ ಜನಪ್ರಿಯ ನಾಯರಾಗಿದ್ದಾರೆ. ಅವರ ನೇತೃತ್ವದಲ್ಲಿ ಹೋರಾಟ ಆರಂಭವಾಗಿದೆ. ವಕ್ಫ್ ವಿರುದ್ಧ ನಮ್ಮ ಹೋರಾಟ ಮುಂದುವರಿಯುತ್ತೆ ಎಂದು ಹೇಳಿದ್ದಾರೆ.
ಬೆಳಗಾವಿ: ಬಳ್ಳಾರಿಯಲ್ಲಿ (Ballari) ಬಾಣಂತಿಯರ ಸಾವಿಗೆ ಆರ್‌ಎಲ್‍ಎಸ್ ಐವಿ ಗ್ಲುಕೋಸ್ ಕಾರಣ ಎನ್ನಲಾದ ವಿಚಾರಕ್ಕೆ ಸಂಬಂಧಿಸಿದಂತೆ ಬಿಮ್ಸ್ ಆಸ್ಪತ್ರೆಯ (BIMS Hospital) ಆವರಣದಲ್ಲಿರುವ ಜಿಲ್ಲಾ ಔಷಧ ಉಗ್ರಾಣದ ಮೇಲೆ ಲೋಕಾಯುಕ್ತ (Lokayukta) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ದಾಳಿ ವೇಳೆ ಹತ್ತಾರು ಬಾಕ್ಸ್‌ಗಳಲ್ಲಿ ಆರ್‌ಎಲ್‍ಎಸ್ ಐವಿ ಗ್ಲುಕೋಸ್ ಪತ್ತೆಯಾಗಿದೆ. ಪಿಬಿಪಿ ಸಂಸ್ಥೆ ಸರಬರಾಜು ಮಾಡಿರುವ ಐವಿ ಗ್ಲುಕೋಸ್ ಬಾಕ್ಸ್‌ಗಳು ಇದಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಶೇಖರಿಸಿ ಇಟ್ಟಿದ್ದ ಬಾಕ್ಸ್‌ಗಳನ್ನು ಕಂಡು ಅಧಿಕಾರಿಗಳು ಶಾಕ್ ಆಗಿದ್ದಾರೆ.
ಏಪ್ರಿಲ್ ತಿಂಗಳಿಂದ ಬೆಳಗಾವಿ ಜಿಲ್ಲೆಯಾದ್ಯಂತ ಆರ್‍ಎಲ್‍ಎಸ್ ಐವಿ ಗ್ಲುಕೋಸ್ ಸರಬರಾಜಾಗಿದೆ. ಒಂದು ಗಂಟೆಗೂ ಹೆಚ್ಚಿನ ಸಮಯದಿಂದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಉಗ್ರಾಣದ ಅಧಿಕಾರಿಗಳಿಂದ ಎಲ್ಲೆಲ್ಲಿ ಐವಿ ಗ್ಲುಕೋಸ್ ಪೂರೈಕೆಯಾಗಿದೆ ಎಂಬ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ.
ಈ ವೇಳೆ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಪೂರೈಕೆ ಮಾಡಿರುವ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ.
ಬೆಳಗಾವಿ ಲೋಕಾಯುಕ್ತ ಎಸ್ಪಿ ಹನುಮಂತರಾಯ ನೇತೃತ್ವದಲ್ಲಿ ದಾಳಿ ನಡೆದಿದ್ದು, 8 ಜನ ಅಧಿಕಾರಿಗಳಿಂದ ಪರಿಶೀಲನೆ ಮುಂದುವರೆದಿದೆ.
ಬೆಳಗಾವಿ: ಹಾಡಹಗಲೇ ಯುವಕನೊಬ್ಬನಿಗೆ ಚಾಕು ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಸವದತ್ತಿ (Savadatti) ತಾಲೂಕಿನ ಮುರಗೋಡ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.
ಹತ್ಯೆಯಾದ ಯುವಕನನ್ನು ಸೋಹಿಲ್ ಅಹ್ಮದ್ ಕಿತ್ತೂರು (17) ಎಂದು ಗುರುತಿಸಲಾಗಿದೆ. ಯುವಕ ಗ್ರಾಮದಲ್ಲಿ ಎಗ್‍ರೈಸ್ ಅಂಗಡಿ ಇಟ್ಟುಕೊಂಡಿದ್ದ. ಆತನನ್ನು ಐವರು ಯುವಕರು ಹತ್ಯೆಗೈದಿದ್ದಾರೆ ಎಂದು ಶಂಕಿಸಲಾಗಿದೆ.
ಈ ಹಿಂದೆ ಕೆಲವು ಯುವಕರಿಂದ ಮೃತನಿಗೆ ಕೊಲೆ ಬೆದರಿಕೆ ಬಂದಿತ್ತು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಮುರಗೋಡು ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಯುವಕನ ಹತ್ಯೆ ಖಂಡಿಸಿ ಮುರಗೋಡ ಪೊಲೀಸ್ ಠಾಣೆ ಮುಂದೆ ಯುವಕನ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಪೊಲೀಸ್ ಠಾಣೆಯ ಹಾಲ್‌ನಲ್ಲಿ ಹೋಮ ಹವನ ಮಾಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಠಾಣೆಯ ಬಾಗಿಲಿಗೆ ಬೂದಗುಂಬಳಕಾಯಿ ಒಡೆದು, ಅರಿಶಿನ ಕುಂಕುಮ ಹಚ್ಚಿ ಪೂಜೆ ಮಾಡಿದ್ದಾರೆ. ಇಡೀ ಠಾಣೆಯಲ್ಲಿ ಶಾಂತಿ ನೆಲೆಸಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.
ಕಳೆದ ಒಂದೂವರೆ ತಿಂಗಳಲ್ಲಿ ಅತಿ ಹೆಚ್ಚು ಅಪರಾಧಗಳು ಪ್ರಕರಣಗಳು ಈ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿವೆ. ಕಳೆದ ವಾರ ಮಹಿಳೆಯೊಬ್ಬರನ್ನ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಅಮಾನವೀಯ ಘಟನೆಯೂ ನಡೆದಿತ್ತು. ಎರಡು ದಿನಗಳ ಹಿಂದೆಯಷ್ಟೇ ಪ್ರೀತಿಗಾಗಿ ಗುಂಡಿನ ಸದ್ದು ಕೇಳಿ ಬಂದಿತ್ತು. ಕೊಲೆ, ಸುಲಿಗೆ, ದರೋಡೆ, ಕಳ್ಳತನ ಸೇರಿ ಸುಮಾರು 45ಕ್ಕೂ ಹೆಚ್ಚು ಪ್ರಕರಣ ದಾಖಲಾಗಿವೆ.
ಕ್ರೈಂ ಕಂಟ್ರೋಲ್‌ಗೆ ಸಾಕಷ್ಟು ಪ್ರಯತ್ನ ಮಾಡಿದರೂ ಏನು ಪ್ರಯೋಜನವಾಗಿರಲಿಲ್ಲ. ಈ ಹಿನ್ನೆಲೆ ಠಾಣಾಧಿಕಾರಿ ಜೆ.ಎಮ್ ಖಾಲಿಮಿರ್ಚಿ ಅವರು ಇದೀಗ ದೇವರ ಮೊರೆ ಹೋಗಿದ್ದಾರೆ. ಇದು ಪೊಲೀಸರೇ ಮೂಢನಂಬಿಕೆ, ಮೌಢ್ಯಕ್ಕೆ ಶರಣಾಗಿದ್ದು ಪರ ವಿರೋಧ ಚರ್ಚೆಗೆ ಆಸ್ಪದ ನೀಡಿದೆ.ಇದನ್ನೂ ಓದಿ: ಓವರ್‌ಟೆಕ್ ಮಾಡಲು ಹೋಗಿ ಬೈಕ್‌ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು
ಬೆಳಗಾವಿ: ಅನ್ನ – ನೀರು ನೀಡದೆ ಕಾಲಿಗೆ ಕಬ್ಬಿಣದ ಸರಪಳಿ ಕಟ್ಟಿ ಕೋಳ ತೊಡಿಸಿ ಹೊಟೇಲ್ ಕಾರ್ಮಿಕರಿಗೆ (labourers) ಪ್ರತಿನಿತ್ಯ ಚಿತ್ರಹಿಂಸೆ ನೀಡುತ್ತಿದ್ದ ಅಮಾನವೀಯ ಘಟನೆ ಬೆಳಗಾವಿಯಲ್ಲಿ ಕಂಡುಬಂದಿದೆ. ಈ ದೃಶ್ಯಗಳನ್ನು ನೋಡಿದರೆ ಜೀತ ಪದ್ಧತಿ ಇನ್ನೂ ಜೀವಂತವಿದೆಯೇ ಎಂಬುದಕ್ಕೆ ಈ ವರದಿ ಪುಷ್ಟಿ ನೀಡಿತ್ತು. ಈ ಕುರಿತು ʻಪಬ್ಲಿಕ್ ಟಿವಿʼ (Public TV) ವರದಿ ಪ್ರಸಾರ ಮಾಡಿದ ಕೆಲವೇ ಸಮಯದಲ್ಲಿ ಚಿತ್ರಹಿಂಸೆ ಅನುಭವಿಸುತ್ತಿದ್ದ ಕಾರ್ಮಿಕರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.
ಮಾಲಿಕನ ಕುಕೃತ್ಯಕ್ಕೆ ರೋಸಿಹೋದ ಹೊಟೇಲ್ ಕೂಲಿ ಕಾರ್ಮಿಕರು ಬಿಡುಗಡೆ ಭಾಗ್ಯ ಯಾವಾಗ ಎಂಬುದನ್ನು ಕಾದು ನೋಡುತ್ತಿದ್ದರು. ಉತ್ತರ ಭಾರತದಿಂದ ಬಂದ ಯುವಕರಿಗೆ ಇಲ್ಲಿಯ ಭಾಷೆ ಬರುವುದಿಲ್ಲ. ಕಾಲಿಗೆ ಕೋಳ ತೊಟ್ಟುಕೊಂಡೇ ರೊಟ್ಟಿ ತಟ್ಟಿ ಜನರ ಹೊಟ್ಟೆ ತುಂಬಿಸುತ್ತಿದ್ದುದ್ದಂತು ವಿಷಾಧನಿಯ.
ಇದೀಗ ʻಪಬ್ಲಿಕ್ ಟಿವಿʼ ವರದಿ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಕಾರ್ಮಿಕರನ್ನು ರಕ್ಷಿಸುವ ಕೆಲಸ ಮಾಡಿದ್ದಾರೆ. ಈ ಸಂಬಂಧ ಮಾತನಾಡಿರುವ ಕಾರ್ಮಿಕ ಇಲಾಖೆ ಅಧಿಕಾರಿಗಳು, ಇಷ್ಟೊಂದು ಕಾಯ್ದೆ ಕಾನೂನುಗಳು ಪ್ರಬಲವಾಗಿದ್ದರೂ ಇಂಥ ಅಮಾನವೀಯ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಜೀತ ಪದ್ದತಿ ಸಂಪೂರ್ಣ ಹೊಗಲಾಡಿಸಲು ಕಠಿಣ ಕಾನೂನುಗಳಿದ್ದು ಹೋಟೆಲ್ ಮಾಲಿಕರಿಗೆ ಶಿಕ್ಷೆಯಾಗುತ್ತದೆ ಮತ್ತು ದಂಡ ವಿಧಿಸಲಾಗುತ್ತದೆ ತಿಳಿಸಿದ್ದಾರೆ.
ಬೆಳಗಾವಿ: ನಗರದ ಖಾಸಗಿ ಆಸ್ಪತ್ರೆಯ (Hospital) ನರ್ಸ್ (Nurse) ಮೇಲೆ ಪಾಗಲ್ ಪ್ರೇಮಿಯೊಬ್ಬ ಆಸ್ಪತ್ರೆಯ ಕೌಂಟರ್ ಬಳಿಯೇ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಅ.30ರ ಮಧ್ಯಾಹ್ನ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ನಗರದ ಪ್ರಕಾಶ್ ಜಾಧವ್ ಎಂಬಾತ ನರ್ಸ್ ಮೇಲೆ ಹಲ್ಲೆ ನಡೆಸಿದ್ದು, ಈ ವೇಳೆ ಪ್ರಾಣ ಪಣಕ್ಕಿಟ್ಟು ಆಕೆ ಹೋರಾಡಿದ್ದಳು. ಆರೋಪಿಯ ಕೃತ್ಯ ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವಿಚಾರ ಗೊತ್ತಾಗುತ್ತಿದ್ದಂತೆ ಆಸ್ಪತ್ರೆಗೆ ಆಗಮಿಸಿದ್ದ ಖಡೇಬಜಾರ್ ಪೊಲೀಸರು(Police), ಪ್ರಕಾಶ್‍ನನ್ನು ಬಂಧಿಸಿದ್ದರು.
ಆರೋಪಿ ಹೆಲ್ಮೆಟ್ ಧರಿಸಿಕೊಂಡು ಆಸ್ಪತ್ರೆಗೆ ಬಂದಿದ್ದ. ಬಳಿಕ ಪ್ಲಾಸ್ಟಿಕ್ ಕವರ್‍ನಲ್ಲಿ ತಂದಿದ್ದ ಮಚ್ಚಿನಿಂದ ನರ್ಸ್ ಮೇಲೆ ದಾಳಿ ನಡೆಸಿದ್ದ. ಈ ವೇಳೆ ಆಸ್ಪತ್ರೆಯಲ್ಲಿದ್ದ ರೋಗಿಗಳು ಹೆದರಿ ಅಲ್ಲಿಂದ ಓಡಿದ್ದರು.
ಆರೋಪಿ ಪ್ರಕಾಶ್ ಹಲ್ಲೆಗೊಳಗಾದ ನರ್ಸ್‍ನ 10ನೇ ತರಗತಿಯ ಸಹಪಾಠಿಯಾಗಿದ್ದ. ಕೆಲ ದಿನಗಳ ಹಿಂದೆ ಕುಟುಂಬಸ್ಥರನ್ನು ಆಕೆಯ ಮನೆಗೆ ಕರೆದುಕೊಂಡು ಹೋಗಿ ಮದುವೆ ಪ್ರಸ್ತಾಪ ಮಾಡಿದ್ದ. ಅಲ್ಲದೇ ಪ್ರೀತಿಸುವಂತೆ ಪೀಡಿಸುತ್ತಿದ್ದ. ಇದಕ್ಕೆ ಯುವತಿ ಒಪ್ಪಿರಲಿಲ್ಲ ಎಂದು ತನಿಖೆ ವೇಳೆ ತಿಳಿದು ಬಂದಿದೆ.
ಬೆಳಗಾವಿ: ಮದುವೆ ಮಂಟಪದಿಂದ ಫೋಟೊಗ್ರಾಫರ್ ಕಿಡ್ನ್ಯಾಪ್ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದಲ್ಲಿ 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿಯ ಕೆಪಿಟಿಸಿಎಲ್ ಕಲ್ಯಾಣ ಮಂಟಪದಲ್ಲಿ ಘಟನೆ ನಡೆದಿದ್ದು, ಕಲ್ಯಾಣ ಮಂಟಪದಿಂದ ಫೋಟೊಗ್ರಾಫರ್ ಕಿಡ್ನ್ಯಾಪ್ ಮಾಡಿಕೊಂಡು ಹೋಗುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಫೋಟೋಗ್ರಾಫರ್ ಉಮೇಶ್ ಹೊಸೂರು ಅಪಹರಣವಾಗಿ ಹಲ್ಲೆಗೊಳಗಾಗಿ ವ್ಯಕ್ತಿ. ಇವರು ಬೈಲಹೊಂಗಲ ಪಟ್ಟಣದಲ್ಲಿ ನೆಲೆಸಿದ್ದಾರೆ. ನಾಲ್ಕು ದಿನಗಳ ಹಿಂದೆ ಮದುವೆ ಆರ್ಡರ್ ಅಂತಾ ಬೆಳಗಾವಿ ನಗರಕ್ಕೆ ಬಂದಿದ್ದರು. ಈ ವೇಳೆ ಆತನನ್ನ ಹಿಂಬಾಲಿಸಿಕೊಂಡು ನಾಲ್ವರು ಬಂದಿದ್ದರು. ಕಲ್ಯಾಣ ಮಂಟಪಕ್ಕೆ ಬಂದು ಹೊರಗೆ ಕರೆದುಕೊಂಡು ಹೋಗಿ ಅಲ್ಲಿಂದ ಕಾರಿನಲ್ಲಿ ಕಿಡ್ನ್ಯಾಪ್ ಮಾಡಿದ್ದಾರೆ.
ಬೈಲಹೊಂಗಲ ತಾಲೂಕಿನ ಚಿವಟಗುಂಡಿ ಕ್ರಾಸ್ ಬಳಿ ಕಾರು ನಿಲ್ಲಿಸಿ ಹಲ್ಲೆ ನಡೆಸಿದ್ದಾರೆ. ರಾಡ್‌ನಿಂದ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿ ಬಿಟ್ಟು ಹೋಗಿದ್ದಾರೆ. ಉಮೇಶ್ ಆರೋಪಿಗಳ ಮನೆಯ ಹೆಣ್ಣುಮಕ್ಕಳಿಗೆ ಕಾಡಿಸುತ್ತಿರುವುದಾಗಿ ಸುಳ್ಳು ಹೇಳಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಎಂಟು ಜನರ ವಿರುದ್ಧ ಮಾಳಮಾರುತಿ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.
ಕೇಸ್ ದಾಖಲಾಗ್ತಿದ್ದಂತೆ ಇಬ್ಬರು ಮಹಿಳೆಯರು ಸೇರಿ ಎಂಟು ಜನರನ್ನು ಬಂಧಿಸಲಾಗಿದೆ. ಫೋಟೊಗ್ರಾಫರ್ ಉಮೇಶ್, ಬೈಲಹೊಂಗಲ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಫೋಟೋಗ್ರಫಿ ವೃತ್ತಿ ವೈಷಮ್ಯದಿಂದ ಹಲ್ಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಆರೋಪಿಗಳಾದ ವಿಕ್ಕಿ, ಪ್ರವೀಣ್ ಉಮರಾಣಿ, ಬಸವರಾಜ ನರಟ್ಟಿ ಸೇರಿ ಎಂಟು ಜನರ ಬಂಧಿಸಲಾಗಿದೆ.
ಬೆಳಗಾವಿ: ಟ್ರ್ಯಾಕ್ಟರ್‌ಗಳಲ್ಲಿ (Tractor) ಅತಿಯಾದ ಸೌಂಡ್ ಬಳಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಚಾಲಕರಿಗೆ ಬೆಳಗಾವಿ ಪೊಲೀಸರು (Belagavi Police) ಬಿಸಿ ಮುಟ್ಟಿಸಿದ್ದಾರೆ.
ಬೆಳಗಾವಿ ಜಿಲ್ಲೆಯಾದ್ಯಂತ ಎಲ್ಲ ಸಕ್ಕರೆ ಕಾರ್ಖಾನೆಗಳಲ್ಲಿ (Sugar Factory) ಕಬ್ಬು ನುರಿಸುವ ಪ್ರಕ್ರಿಯೆ ಆರಂಭವಾಗಿದೆ. ಜಮೀನಿನಿಂದ ಕಾರ್ಖಾನೆಗೆ ಕಬ್ಬು ಒಯ್ಯುವ ಟ್ರ್ಯಾಕ್ಟರ್‌ಗಳಲ್ಲಿ ಚಾಲಕರು ವಿಪರೀತ ಸೌಂಡ್ ಬಳಸ್ತಿದ್ದಾರೆ. ಜಾನಪದ ಹಾಡುಗಳನ್ನು ಹಚ್ಚಿ ಅಧಿಕ ಸೌಂಡ್‌ನೊಂದಿಗೆ ಚಾಲಕರು ಕಬ್ಬು ಒಯ್ಯುತ್ತಿದ್ದಾರೆ.
ಮುನವಳ್ಳಿ ಪಟ್ಟಣದಲ್ಲಿ ಟ್ರ್ಯಾಕ್ಟರ್‌ಗಳ ಮೇಲೆ ಸವದತ್ತಿ ಪೊಲೀಸರು ದಾಳಿ ನಡೆಸಿದ್ದಾರೆ. ಟೇಪ್‌ಗಳನ್ನು ಟ್ರ್ಯಾಕ್ಟರ್ ಚಕ್ರಕ್ಕೆ ಇಟ್ಟು ಹಾನಿಗೊಳಿಸಿದ್ದಾರೆ. ಸಾರ್ವಜನಿಕರಿಗೆ ತೊಂದರೆ ಮಾಡಿದ್ರೆ ಕಠಿಣ ಕ್ರಮದ ಎಚ್ಚರಿಕೆಯನ್ನು ಪೊಲೀಸರು ನೀಡಿದ್ದಾರೆ. ಇದನ್ನೂ ಓದಿ: ಒಕ್ಕಲಿಗರ ಕಾರ್ಯಕ್ರಮದಲ್ಲಿ ರಾಜಕೀಯ ಭಾಷಣ ಮಾಡಿ ಮುಜುಗರಕ್ಕೀಡಾದ ಜಾರ್ಜ್
ಬೆಳಗಾವಿ: ಚಲಿಸುತ್ತಿದ್ದ ಕಾರಿನ ಮೇಲೆ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ (Belagavi) ಹೊರವಲಯದ ಸುವರ್ಣಸೌಧದ ಬಳಿ ನಡೆದಿದೆ.
ಬೆಳಗಾವಿ ಹೊರವಲಯದ ಸುವರ್ಣಸೌಧದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಧ್ಯರಾತ್ರಿ ಈ ಘಟನೆ ನಡೆದಿದೆ. ಬೆಳಗಾವಿಗೆ ಬರ್ತ್ಡೇ ಪಾರ್ಟಿಗೆಂದು ಮೂವರು ಯುವಕರು ಬಂದಿದ್ದರು. ಪಾರ್ಟಿ ಮುಗಿಸಿ ಮರಳಿ ಹುಬ್ಬಳ್ಳಿಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಪಕ್ಕದಲ್ಲಿ ಚಲಿಸುತ್ತಿದ್ದ ಕಬ್ಬು ತುಂಬಿದ ಟ್ರ್ಯಾಕ್ಟರ್ ಏಕಾಏಕಿ ಕಾರಿನ ವಾಲಿ ಪಲ್ಟಿ ಹೊಡೆದಿದೆ.
ಪಲ್ಟಿ ಹೊಡೆದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪ್ರಥಮ್ ಎಂಬಾತ ಗಂಭೀರ ಗಾಯಗೊಂಡಿದ್ದಾನೆ. ಸದ್ಯ ಯುವಕನ ಸ್ಥಿತಿ ಗಂಭೀರ, ಮತ್ತೋರ್ವನಿಗೆ ಸಣ್ಣಪುಟ್ಟ ಗಾಯಗಳಾಗಿವೆ.