Tag: belagavi

  • ಬೆಳಗಾವಿ| ಕೆರೆಗೆ ಹಾರಿ ಯೋಧ ಆತ್ಮಹತ್ಯೆ

    ಬೆಳಗಾವಿ| ಕೆರೆಗೆ ಹಾರಿ ಯೋಧ ಆತ್ಮಹತ್ಯೆ

    ಬೆಳಗಾವಿ: ಭಾರತೀಯ ಸೇನೆಯಲ್ಲಿ (Indian Army) ಸೇವೆ ಸಲ್ಲಿಸುತ್ತಿದ್ದ ಯೋಧರೊಬ್ಬರು (Soldier) ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆ ಕಿತ್ತೂರು (Kittur) ತಾಲೂಕು ಪರಸನಟ್ಟಿ ಗ್ರಾಮದಲ್ಲಿ ನಡೆದಿದೆ.

    ಚೆನ್ನಮ್ಮನ ಕಿತ್ತೂರು ತಾಲೂಕು ದೇಗಾಂವ ಗ್ರಾಮದ ನರೇಶ್ ಯಲ್ಲಪ್ಪ ಆಗಸರ (28) ಶನಿವಾರ ಸಂಜೆ ಪರಸನಟ್ಟಿ ಗ್ರಾಮದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಐದು ವರ್ಷಗಳಿಂದ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್‌ – ಪ್ರತ್ಯಕ್ಷದರ್ಶಿ ಮೊಬೈಲ್‌ನಲ್ಲಿದ್ದ ಫೋಟೋ ರಿಟ್ರೀವ್

    ಕಳೆದ 20 ದಿನಗಳ ಹಿಂದೆ ರಜೆ ಮೇಲೆ ದೇಗಾಂವ ಗ್ರಾಮಕ್ಕೆ ಬಂದಿದ್ದರು. ರಜೆ ಮುಗಿಸಿ ನವೆಂಬರ್ 24ರಂದು ಸೇನಾ ಕರ್ತವ್ಯಕ್ಕೆ ಹಾಜರಾಗಬೇಕಾಗಿತ್ತು. ಆದರೆ ಇದೀಗ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಹಲವಾರು ಸಂದೇಹಗಳಿಗೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ಕಿತ್ತೂರು ಪಿಎಸ್‌ಐ ಪ್ರವೀಣ ಗಂಗೋಳ, ಪ್ರವೀಣ ಕೋಟಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಚನ್ನಪಟ್ಟಣ ಗೆಲುವಿಗೆ ಬಿಜೆಪಿಯವರೂ ಸಪೋರ್ಟ್ ಮಾಡಿದ್ದಾರೆ – ಡಿಕೆಶಿ ಅಚ್ಚರಿ ಹೇಳಿಕೆ

  • ಬೆಳಗಾವಿ| ಗಂಡು ಮಗುವಿಗೆ ಜನ್ಮ ನೀಡಿದ ತಾಯಿ ಸಾವು – ಬಿಮ್ಸ್‌ ಮುಂದೆ ಸಂಬಂಧಿಕರ ಪ್ರತಿಭಟನೆ

    ಬೆಳಗಾವಿ| ಗಂಡು ಮಗುವಿಗೆ ಜನ್ಮ ನೀಡಿದ ತಾಯಿ ಸಾವು – ಬಿಮ್ಸ್‌ ಮುಂದೆ ಸಂಬಂಧಿಕರ ಪ್ರತಿಭಟನೆ

    ಬೆಳಗಾವಿ: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವನ್ನಪ್ಪಿರುವ ಆರೋಪ ಕೇಳಿ ಬಂದಿದ್ದು, ರೊಚ್ಚಿಗೆದ್ದ ಕುಟುಂಬಸ್ಥರು ಬೆಳಗಾವಿ ಬಿಮ್ಸ್ ಆಸ್ಪತ್ರೆ (Belagavi BIMS Hospital) ಎದುರು ದಿಢೀರ್ ಪ್ರತಿಭಟನೆ (Protest) ನಡೆಸಿ, ತಪ್ಪಿತಸ್ಥ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ರಾಮದುರ್ಗ ತಾಲೂಕಿನ ನಾಗನೂರ ತಾಂಡಾದ ಬಾಣಂತಿ ಕಲ್ಪನಾ ಅನಿಲ ಲಮಾಣಿ (26) ಮೃತ ಮಹಿಳೆ. ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆ ಮುಂದೆ ಬಾಣಂತಿ ಕುಟುಂಬಸ್ಥರು ಮತ್ತು ಸಂಬಂಧಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ಪ್ರತಿಭಟಿಸಿದರು.

    ಮಂಗಳವಾರ ನಸುಕಿನ 2:30ರ ಸುಮಾರಿಗೆ ಶಸ್ತ್ರಚಿಕಿತ್ಸೆ ಮೂಲಕ ಗಂಡು ಮಗುವಿಗೆ ಕಲ್ಪನಾ ಜನ್ಮ ನೀಡಿದ್ದರು. ಈ ವೇಳೆ ಮಗು ಮತ್ತು ತಾಯಿ ಆರೋಗ್ಯ ಇರುವುದಾಗಿ ವೈದ್ಯರು ಹೇಳಿದ್ದರಂತೆ. ಬೆಳಗ್ಗೆ 8:30ರವರೆಗೂ ಆರೋಗ್ಯವಾಗಿದ್ದ ಕಲ್ಪನಾ ಅವರ ಆರೋಗ್ಯದಲ್ಲಿ ಏಕಾಏಕಿ ಏರುಪೇರಾಗಿ ಸಾವುನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದಲೇ ಬಾಣಂತಿ ಸಾವಾಗಿದೆ. ಎರಡು ಬಾರಿ ಸಿಸೇರಿಯನ್ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇನ್ನು ತಾಯಿ ಮೃತರಾಗಿದ್ದರೆ, ಹಸಗೂಸು ಆಸ್ಪತ್ರೆಯ ಐಸಿಯು ಘಟಕದಲ್ಲಿದೆ.

     

    ಆಪರೇಷನ್ ಸಂದರ್ಭದಲ್ಲಿ ಧರಿಸುವ ವಸ್ತ್ರ ಧರಿಸಿಲ್ಲ, ತರಾತುರಿಯಲ್ಲಿ ಸಿಸೇರಿಯನ್‌ ಮಾಡಿದ್ದಾರೆ. ಆರೋಗ್ಯದಲ್ಲಿ ಏರುಪೇರು ಆದಾಗ ಬೇರೆಡೆ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತೇವೆ ಎಂದು ಕುಟುಂಬಸ್ಥರು ಮನವಿ ಮಾಡಿದರೂ, ಬೇರೆ ಆಸ್ಪತ್ರೆಗೆ ಕಳುಹಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ. ನಿರ್ಲಕ್ಷ್ಯ ತೋರಿದ ವೈದ್ಯರನ್ನು ಈ ಕೂಡಲೇ ವಜಾ ಮಾಡುವಂತೆ ಕಲ್ಪನಾ ಕುಟುಂಬಸ್ಥರು ಪಟ್ಟು ಹಿಡಿದಿದ್ದರು. ಇದನ್ನೂ ಓದಿ: MUDA Scam| ನೋಟಿಸ್‌ ಇಲ್ಲದೇ ರಾತ್ರಿ ದಿಢೀರ್‌ ಲೋಕಾ ಎಸ್‌ಪಿ ಕಚೇರಿಗೆ ಭೇಟಿ ನೀಡಿದ ಸಿಎಂ ಬಾಮೈದ!

    ಹೆರಿಗೆ ಶಾಸ್ತ್ರ ಮತ್ತು ಶಿಶುವೈದ್ಯಶಾಸ್ತ್ರ ವಿಭಾಗಕ್ಕೆ ಬಿಮ್ಸ್ ನಿರ್ದೇಶಕ ಡಾ. ಅಶೋಕ ಶೆಟ್ಟಿ ಆಗಮಿಸುತ್ತಿದ್ದಂತೆ ಆಸ್ಪತ್ರೆ ಬಾಗಿಲಿನಲ್ಲಿಯೇ ಅವರನ್ನು ಕಲ್ಪನಾ ಕುಟುಂಬಸ್ಥರು ಘೇರಾವ್ ಹಾಕಿದರು. ಮಗಳ ಸಾವಿಗೆ ನ್ಯಾಯ ಸಿಗಬೇಕು, ನಮಗೆ ಆದಂತಹ ಪರಿಸ್ಥಿತಿ ಯಾರಿಗೂ ಆಗಬಾರದು. ಈ ಕೂಡಲೇ ನಿರ್ಲಕ್ಷ್ಯ ತೋರಿದ ವೈದ್ಯರ ವಜಾ ಮಾಡುವಂತೆ ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಾ. ಅಶೋಕ ಶೆಟ್ಟಿ ಮೂವರು ಜನರ ನೇತೃತ್ವದಲ್ಲಿ ಸಮಿತಿ ರಚಿಸಿ ತನಿಖೆ ಮಾಡಿಸುತ್ತೇನೆ. ತಪ್ಪಿತಸ್ಥ ವೈದ್ಯರ ವಿರುದ್ಧ ಪೊಲೀಸ್ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.

    ಯಾವುದೇ ಅಹಿತಕರ ಘಟನೆ ಆಗದಂತೆ ಆಸ್ಪತ್ರೆ ಮುಂಭಾಗದಲ್ಲಿ ಪೊಲೀಸ್ ಸಿಬ್ಬಂದಿಗಳ ನಿಯೋಜಿಸಲಾಗಿದೆ. ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

     

  • ಬೆಳಗಾವಿಯಲ್ಲಿ ಡಿ.9 ರಿಂದ ಚಳಿಗಾಲದ ಅಧಿವೇಶನ

    ಬೆಳಗಾವಿಯಲ್ಲಿ ಡಿ.9 ರಿಂದ ಚಳಿಗಾಲದ ಅಧಿವೇಶನ

    ಬೆಂಗಳೂರು: ಬೆಳಗಾವಿಯಲ್ಲಿ (Belagavi) ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ (Winter Session) ದಿನಾಂಕ ನಿಗದಿಯಾಗಿದೆ.

    ಡಿಸೆಂಬರ್ 9 ರಿಂದ ಆರಂಭವಾಗಲಿರುವ ವಿಧಾನಮಂಡಲದ ಅಧಿವೇಶನ ಡಿ.20ವರೆಗೆ ನಡೆಯಲಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯು ಅಧಿವೇಶನ ಕರೆಯುವ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‍ ಅವರಿಗೆ ಕಡತ ರವಾನಿಸಿದ್ದು, ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ.

    ಡಿಸೆಂಬರ್ 9ರಂದು ಬೆಳಿಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗುತ್ತಿದೆ.

  • ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಇದು ಕೊಲೆ – ಬಿರುಗಾಳಿ ಎಬ್ಬಿಸಿದ ಪತ್ರ

    ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಇದು ಕೊಲೆ – ಬಿರುಗಾಳಿ ಎಬ್ಬಿಸಿದ ಪತ್ರ

    ಬೆಳಗಾವಿ: ಬೆಳಗಾವಿಯ (Belagavi) ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಎ ರುದ್ರೇಶ್ (SDA Rudresh) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಧೇಯ ಪತ್ರವೊಂದು ಅಧಿಕಾರಿಗಳ ಕಚೇರಿಗೆ ಬಂದಿದ್ದು ಬಿರುಗಾಳಿ ಸೃಷ್ಟಿಸಿದೆ.

    ಜಿಲ್ಲೆಯ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಎ ರುದ್ರೇಶ್ ಆತ್ಮಹತ್ಯೆ ಪ್ರಕರಣದ ಆರೋಪಿಗಳಾಗಿರುವ ಎ1 ತಹಶೀಲ್ದಾರ್ ಬಸವರಾಜ ನಾಗರಾಳ, ಎ2 ಅಶೋಕ ಕಬ್ಬಲಿಗೇರ್, ಎ3 ಹೆಬ್ಬಾಳ್ಕರ್ ಪಿಎ ಸೋಮುಗೆ ಜಾಮೀನು ಸಿಕ್ಕಿತ್ತು. ಜಾಮೀನು ಸಿಕ್ಕ ಬೆನ್ನಲ್ಲೇ ಅನಾಮಧೇಯ ಪತ್ರವೊಂದು ಅಧಿಕಾರಿಗಳ ಕಚೇರಿ ತಲುಪಿದೆ.

    ರಾಜ್ಯಪಾಲರು, ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು, ನಗರ ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿ ಸೇರಿದಂತೆ ಪ್ರಕರಣದ ತನಿಖಾಧಿಕಾರಿಗಳಿಗೆ ಪೋಸ್ಟ್ ಮೂಲಕ ಅನಾಮಧೇಯ ಪತ್ರ ತಲುಪಿದೆ.ಇದನ್ನೂ ಓದಿ: ದನ ಮೇಯಿಸಲು ಹೋಗಿ ಹಳ್ಳದಲ್ಲಿ ಕೊಚ್ಚಿ ಹೋದ ಬಾಲಕರು – ಓರ್ವನ ಶವ ಪತ್ತೆ

    ಪತ್ರದಲ್ಲೇನಿದೆ?
    ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿಲ್ಲ ಇದು ಕೊಲೆ. ತಹಶೀಲ್ದಾರ್ ಆಪ್ತ ಡ್ರೈವರ್ ಯಲ್ಲಪ್ಪ ಬಡಸದ ಈ ಕೊಲೆಯ ಸೂತ್ರಧಾರ. ತಹಶೀಲ್ದಾರ್ ಜೀಪ್ ಚೆಕ್ ಮಾಡಿದರೆ ಎಲ್ಲಾ ಸತ್ಯ ಹೊರಬರುತ್ತದೆ. ಅದು ಸೂಸೈಡ್ ಎಂದು ಹೇಳುತ್ತಿದ್ದಾರೆ ಆದರೆ ಅದು ಸೂಸೈಡ್ ಅಲ್ಲ. ಯಲ್ಲಪ್ಪನ ಹೆಂಡತಿ ಅನೈತಿಕ ಸಂಬಂಧ ಇಟ್ಟುಕೊಂಡು ಅವನ ಎಲ್ಲ ದುಡ್ಡು ಹೊಡೆದಿರುತ್ತಾಳೆ. ಡ್ರೈವರ್ ಯಲ್ಲಪ್ಪನನ್ನು ವಿಚಾರಣೆ ಮಾಡಿದರೆ ಕೊಲೆ ರಹಸ್ಯ ಹೊರಗೆ ಬರುತ್ತದೆ. ಸತ್ತವನಿಗೆ ನ್ಯಾಯ ಸಿಗಬೇಕು ಕೇಸ್ ಮುಚ್ಚಿ ಹಾಕಬಾರದು ಎಂದು ಉಲ್ಲೇಖಿಸಲಾಗಿದೆ.

    ಅನಾಮಧೇಯ ಪತ್ರದಲ್ಲಿನ ಅಂಶಗಳನ್ನು ಕಂಡು ಖಾಕಿಯೇ ಶಾಕ್ ಆಗಿದ್ದು, ಪತ್ರದಲ್ಲಿನ ಎಲ್ಲ ಅಂಶಗಳ ಕುರಿತು ಖಡೇಬಜಾರ್ ಪೊಲೀಸರು ತನಿಖೆ ನಡೆಸುತ್ತಾರಾ? ಮುಂದೆ ಈ ಪ್ರಕರಣ ಯಾವ ರೀತಿ ತಿರುವು ಪಡೆದುಕೊಳ್ಳುತ್ತದೆ ಎನ್ನುವ ಕುತೂಹಲ ಹೆಚ್ಚಾಗಿದೆ

    ಏನಿದು ಪ್ರಕರಣ?
    ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಎ (ದ್ವಿತೀಯ ದರ್ಜೆ ಸಹಾಯಕ) ರುದ್ರೇಶ್ (ರುದ್ರಣ್ಣ) ಯಡಣ್ಣನವರ್ ನವೆಂಬರ್ 5 ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದಕ್ಕೂ ಮುನ್ನ ಅವರು, ತನ್ನ ಸಾವಿಗೆ ಇವರೇ ಕಾರಣ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಸೋಮು, ತಹಶಿಲ್ದಾರ್ ಬಸವರಾಜ ನಾಗರಾಳ, ಸಹೊದ್ಯೋಗಿ ಅಶೋಕ ಕಬ್ಬಲಿಗೇರ್ ಹೆಸರು ಉಲ್ಲೇಖಿಸಿ ವಾಟ್ಸಪ್ ಗ್ರೂಪಿನಲ್ಲಿ ಸಂದೇಶ ಕಳುಹಿಸಿದ್ದರು.ಇದನ್ನೂ ಓದಿ: ಕೌಟುಂಬಿಕ ಜಗಳ- ಅತ್ತಿಗೆಯ ಕುತ್ತಿಗೆಗೆ ಚಾಕು ಇರಿದು ಕೊಲೆಗೈದ ಮೈದುನ

  • ಅಡ್ಡಾದಿಡ್ಡಿ ಲಾರಿ ಚಾಲನೆ, ವಾಹನಗಳಿಗೆ ಡಿಕ್ಕಿ – ಚಾಲಕನ ಬರ್ಬರ ಹತ್ಯೆ

    ಅಡ್ಡಾದಿಡ್ಡಿ ಲಾರಿ ಚಾಲನೆ, ವಾಹನಗಳಿಗೆ ಡಿಕ್ಕಿ – ಚಾಲಕನ ಬರ್ಬರ ಹತ್ಯೆ

    ಚಿಕ್ಕೋಡಿ: ಅಡ್ಡಾದಿಡ್ಡಿಯಾಗಿ ಲಾರಿ ಓಡಿಸಿಕೊಂಡು ಹೊರಟಿದ್ದ ಚಾಲಕನನ್ನು (Driver) ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ (Belagavi) ‌ಜಿಲ್ಲೆಯ ಹುಕ್ಕೇರಿ (Hukkeri) ತಾಲೂಕಿನ ಬೆನಕೋಳಿ ಗ್ರಾಮದ ಬಳಿ ನಡೆದಿದೆ.

    ಹುಕ್ಕೇರಿ ತಾಲೂಕಿನ ಸೊಲ್ಲಾಪುರ ಗ್ರಾಮದ ಅಜೀಮ್ ಇಪ್ಪೇರಿ (23) ಮೃತ ಲಾರಿ ಚಾಲಕ. ಸಂಕೇಶ್ವರದಿಂದ ಬೆಳಗಾವಿ ಕಡೆಗೆ ಲಾರಿ ಚಲಾಯಿಸಿಕೊಂಡು ಬರುತ್ತಿದ್ದ ಅಜೀಮ್ ಚಾಲನೆ ವೇಳೆ ಬೈಕ್, ಕ್ಯಾಂಟರ್‌ಗೆ ಗುದ್ದಿ ಗಾಬರಿಯಿಂದ ಹೊರಟಿದ್ದ. ಈ ವೇಳೆ ಪರಸಪ್ಪಗೆ ಸೇರಿದ ಬೈಕ್, ಹಣಮಂತ ಇಡ್ಲಿಗೆ ಸೇರಿದ ಕ್ಯಾಂಟರ್‌ಗೆ ಗುದ್ದಿದ್ದ.

    ಎರಡು ಕಡೆ ಅಪಘಾತ ಎಸಗಿದರೂ ಲಾರಿ ನಿಲ್ಲಿಸದೇ ಪರಾರಿಯಾಗಲು ಅಜೀಂ ಯತ್ನಿಸಿದ್ದ. ಈ ವೇಳೆ ಬೆನ್ನತ್ತಿ ಕಾಟಬಳಿ ಗ್ರಾಮದ ಹತ್ತಿರ ಲಾರಿಗೆ ಕಲ್ಲೆಸೆದು ಪರಸಪ್ಪ ಹಾಗೂ ಹಣಮಂತ ತಡೆದಿದ್ದರು.

    ಈ ವೇಳೆ ಪರಸಪ್ಪ ತನ್ನ ಐವರು ಸ್ನೇಹಿತರ ಜೊತೆಗೂಡಿ ಅಜೀಂ ಜೊತೆಗೆ ವಾಗ್ವಾದ ನಡೆಸಿದ್ದ. ಇದು ವಿಕೋಪಕ್ಕೆ ತಿರುಗಿ ಅಜೀಂ ಮರ್ಮಾಂಗಕ್ಕೆ ಒದ್ದು, ಐವರು ಬಡಿಗೆಯಿಂದ ಮಾರಣಾಂತಿಕ ಹಲ್ಲೆ ಎಸಗಿದ್ದರು.  ಇದನ್ನೂ ಓದಿ: ಮಸ್ಕ್‌ ಜೊತೆ ಒಪ್ಪಂದ – ಫಸ್ಟ್‌ ಟೈಂ ಸ್ಪೇಸ್‌ ಎಕ್ಸ್‌ ರಾಕೆಟ್‌ನಲ್ಲಿ ಹಾರಲಿದೆ ಇಸ್ರೋ ಉಪಗ್ರಹ

    ಪರಸಪ್ಪ, ಹಣಮಂತಗೆ ಹಾಳಪ್ಪ ಹಳ್ಯಾಗೋಳ, ಈರಪ್ಪ ನಾಯಿಕ್, ಅಮಿತ್ ಶಿಂಧೆ ಸಾಥ್ ನೀಡಿದ್ದರು‌. ತೀವ್ರ ಅಸ್ವಸ್ಥಗೊಂಡಿದ್ದ ಅಜೀಂಗೆ ಬೆಳಗಾವಿಯ ಬೀಮ್ಸ್‌‌ಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಲಾರಿ ಚಾಲಕ ಅಜೀಂ ಇಪ್ಪೇರಿ ಮೃತಪಟ್ಟಿದ್ದಾನೆ.

    ಲಾರಿ ಚಾಲಕನ ಹತ್ಯೆಗೆ ಕಾರಣರಾದ ಐವರೂ ಆರೋಪಿಗಳನ್ನ ಯಮಕನಮರಡಿ ಪೊಲೀಸರು ಬಂಧಿಸಿ ಬೆಳಗಾವಿ ಹಿಂಡಲಗಾ ಜೈಲಿಗೆ (Hindalga Jail) ರವಾನೆ ಮಾಡಿದ್ದಾರೆ‌. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

     

  • ಆಸ್ತಿಗಾಗಿ ಸ್ವಂತ ಅಣ್ಣನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿಸಿದ ತಂಗಿ!

    ಆಸ್ತಿಗಾಗಿ ಸ್ವಂತ ಅಣ್ಣನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿಸಿದ ತಂಗಿ!

    ಚಿಕ್ಕೋಡಿ: ಆಸ್ತಿಗಾಗಿ ಸ್ವಂತ ತಂಗಿಯೇ (Sister) ಅಣ್ಣನ ಮೇಲೆ ಹಲ್ಲೆ ಮಾಡಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ (Atahani) ಪಟ್ಟಣ ಹೊರ ವಲಯದಲ್ಲಿ ನಡೆದಿದೆ.

    ಶಂಕರ್ ಭಜಂತ್ರಿ ಕುಟುಂಬದ ಮೇಲೆ ತಂಗಿ ಹಾಗೂ ಆಕೆಯ ಮಕ್ಕಳಿಂದ ಹಲ್ಲೆ (Assault) ನಡೆದಿದೆ ಎನ್ನುವ ಆರೋಪ ಕೇಳಿ ಬಂದಿದೆ. ಮೂರು ಎಕರೆ ಆಸ್ತಿಯಲ್ಲಿ ಪಾಲು ನೀಡದ್ದಕ್ಕೆ ಗುಂಪು ಕಟ್ಟಿಕೊಂಡು ಬಂದು ಮಾರಕಾಸ್ತ್ರಗಳಿಂದ ತಡರಾತ್ರಿ ಮನೆಗೆ ನುಗ್ಗಿ ಆರೋಪಿಗಳು ಹಲ್ಲೆ ಮಾಡಿದ್ದಾರೆ.

     

    ಗಲಾಟೆಯಲ್ಲಿ ಶಂಕರ್ ಭಜಂತ್ರಿ, ಆನಂದ ಭಜಂತ್ರಿ, ಸುಧೀರ್, ವಜ್ರಮುನಿ ಗೆ ಗಂಭೀರ ಗಾಯಗಳಾಗಿವೆ. ಮಹಾರಾಷ್ಟ್ರದ (Maharashtra) ಮಿರಜ್ ಆಸ್ಪತ್ರೆಗೆ ಗಾಯಾಳುಗಳು ರವಾನಿಸಲಾಗಿದೆ. ಇದನ್ನೂ ಓದಿ: ಅಮೆರಿಕದ ಗುಪ್ತಚರ ವಿಭಾಗಕ್ಕೆ ತುಳಸಿ ಬಾಸ್‌- ಭಾರತ ಸಂಬಂಧ ಇಲ್ಲದೇ ಇದ್ದರೂ ಹಿಂದೂ ಹೆಸರು ಬಂದಿದ್ದು ಹೇಗೆ?

    ಸಹೋದರಿ ಲಕ್ಷ್ಮಿ ಭಜಂತ್ರಿ ಮತ್ತು ಕುಟುಂಬಸ್ಥರಿಂದ ಹಲ್ಲೆ ಆಗಿದೆ ಎಂದು ಹಲ್ಲೆಗೊಳಗಾದವರು ಆರೋಪಿಸಿದ್ದಾರೆ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ‌.

     

  • ಸತೀಶ್ ಜಾರಕಿಹೊಳಿ ಬೆಂಬಲಿಗನಿಗೆ ಬೆಳಗಾವಿ ಡಿಸಿಸಿ ಬ್ಯಾಂಕ್‌ ಪಟ್ಟ

    ಸತೀಶ್ ಜಾರಕಿಹೊಳಿ ಬೆಂಬಲಿಗನಿಗೆ ಬೆಳಗಾವಿ ಡಿಸಿಸಿ ಬ್ಯಾಂಕ್‌ ಪಟ್ಟ

    – ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಜಾರಕಿಹೊಳಿ ಬ್ರದರ್ಸ್‌

    ಬೆಳಗಾವಿ: ಬೆಳಗಾವಿ ಡಿಸಿಸಿ ಬ್ಯಾಂಕ್ (Belagavi DCC Bank) ಅಧ್ಯಕ್ಷ ಸ್ಥಾನಕ್ಕೆ ಈ ಬಾರಿ ಹೊಸಬರಿಗೆ ಅವಕಾಶ ನೀಡಿದ್ದೇವೆ. ಭವಿಷ್ಯದ ದೃಷ್ಟಿಯಿಂದ ಅಳೆದು ತೂಗಿ ಸರ್ವಾನುಮತದಿಂದ ಅಪ್ಪಾಸಾಹೇಬ ಕುಲಗುಡೆ (Appasaheb Kulgude) ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ‌ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ (Satish Jarkiholi) ಹೇಳಿದ್ದಾರೆ.

    ನೂತನ ಅಧ್ಯಕ್ಷರ ಆಯ್ಕೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅಣ್ಣಾಸಾಹೇಬ ಜೊಲ್ಲೆ, ಮಹಾಂತೇಶ ದೊಡ್ಡಗೌಡರ, ಸುಭಾಷ ಢವಳೇಶ್ವರ, ಅರವಿಂದ ಪಾಟೀಲ ಅವರ ಹೆಸರು ಅಧ್ಯಕ್ಷ ಸ್ಥಾನಕ್ಕೆ ಕೇಳಿ ಬಂದಿದ್ದವು. ಆದರೆ ಅಂತಿಮವಾಗಿ ಜಿಲ್ಲಾ ನಾಯಕರು, ನಿರ್ದೇಶಕರು, ಶಾಸಕರು, ಮಾಜಿ ಶಾಸಕರ ಜೊತೆ ಚರ್ಚಿಸಿ ಒಮ್ಮತದ ನಿರ್ಧಾರಕ್ಕೆ ಬಂದಿದ್ದೇವೆ. ರಾಯಬಾಗ ಕ್ಷೇತ್ರದ ನಿರ್ದೇಶಕ ಅಪ್ಪಾಸಾಹೇಬ ಕುಲಗುಡೆ ಅವರನ್ನು ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದೇವೆ. ಅದೇ ರೀತಿ ಉಪಾಧ್ಯಕ್ಷರಾಗಿ ಸುಭಾಷ ಢವಳೇಶ್ವರ ಮುಂದುವರಿಯಲಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: MUDA Scam | ಬ್ಲ್ಯಾಕ್‌ಮೇಲ್‌ ಆರೋಪ – ಸ್ನೇಹಮಯಿ ಕೃಷ್ಣ ವಿರುದ್ಧ ಎಫ್‌ಐಆರ್‌

     

    ತಮ್ಮ ನೇತೃತ್ವದಲ್ಲಿ ನಡೆದ ಸಭೆಗೆ ರಮೇಶ್ ಕತ್ತಿ ಗೈರಾಗಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ರಮೇಶ ಕತ್ತಿ ಅವರು ಕೂಡ ನೇರವಾಗಿ ಬ್ಯಾಂಕ್ ಸಭೆಗೆ ಬರಲಿದ್ದಾರೆ. ಈ ಆಯ್ಕೆ ಹಿಂದೆ ಯಾವುದೇ ತಂತ್ರಗಾರಿಕೆ ಇಲ್ಲ. ಶಾಂತಿಯಿಂದ ಚುನಾವಣೆ ನಡೆಯಬೇಕು ಎನ್ನುವುದಷ್ಟೇ ನಮ್ಮ ಉದ್ದೇಶವಾಗಿತ್ತು ಎಂದರು.

    ಜಾರಕಿಹೊಳಿ ಮೂವರು ಸಹೋದರರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ವಿಚಾರಕ್ಕೆ ಮೂವರಿಗೂ ಒಬ್ಬೊಬ್ಬರು ಅಭ್ಯರ್ಥಿಗಳು ಇದ್ದರು. ಒಬ್ಬರನ್ನೇ ಆಯ್ಕೆ ಮಾಡಬೇಕಿದ್ದರಿಂದ ಮೂವರು ಒಂದು ಕಡೆ ಸೇರಬೇಕಾಯಿತು ಎಂದು ಸತೀಶ್‌ ಜಾರಕಿಹೊಳಿ ಹೇಳಿದರು.

    ನೂತನ ಅಧ್ಯಕ್ಷ ಅಪ್ಪಾಸಾಹೇಬ ಕುಲಗುಡೆ ನಿಮ್ಮ ಆಪ್ತರು ಎಂಬ ಪ್ರಶ್ನೆಗೆ ಲಕ್ಷ್ಮಣ ಸವದಿ, ಡಾ.ಪ್ರಭಾಕರ ಕೋರೆ, ಮಹಾಂತೇಶ ಕವಟಗಿಮಠ, ಪ್ರಕಾಶ ಹುಕ್ಕೇರಿ ಸೇರಿ ಎಲ್ಲರ ಅಭ್ಯರ್ಥಿ ಅವರು ಎಂದು ಉತ್ತರಿಸಿದರು.

  • ಗೋಕಾಕ್‌ ಜಿಲ್ಲೆಗೆ ಆಗ್ರಹಿಸಿ ನಿರಂತರ ಹೋರಾಟ : ಶ್ರೀ ಮುರುಘರಾಜೇಂದ್ರ ಸ್ವಾಮೀಜಿ

    ಗೋಕಾಕ್‌ ಜಿಲ್ಲೆಗೆ ಆಗ್ರಹಿಸಿ ನಿರಂತರ ಹೋರಾಟ : ಶ್ರೀ ಮುರುಘರಾಜೇಂದ್ರ ಸ್ವಾಮೀಜಿ

    ಬೆಳಗಾವಿ: ಗೋಕಾಕ್‌ (Gokak) ನೂತನ ಜಿಲ್ಲೆಗೆ ಆಗ್ರಹಿಸಿ ಎಲ್ಲರೊಂದಿಗೆ ಚರ್ಚಿಸಿ ನಿರಂತರ ಹೋರಾಟ ಕೈಗೊಳ್ಳಲಾಗುವುದು ಎಂದು ಗೋಕಾಕ್‌ ಜಿಲ್ಲಾ ರಚನಾ ಹೋರಾಟ ಚಾಲನಾ ಸಮಿತಿಯ ಅಧ್ಯಕ್ಷ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು (Muruga Rajendra Swamiji) ಹೇಳಿದರು.

    ಗೋಕಾಕ್‌ ನಗರದಲ್ಲಿ ಜಿಲ್ಲಾ ರಚನಾ ಹೋರಾಟ ಚಾಲನಾ ಸಮಿತಿ, ವಕೀಲರ ಸಂಘ ಹಾಗೂ ನಗರದ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಪ್ರತಿಭಟನೆ ನಡೆಸಲಾಯಿತು. ಇದನ್ನೂ ಓದಿ: ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಗುಡ್‌ನ್ಯೂಸ್ – ಮೊದಲ ಬಾರಿಗೆ KSRTCಯಿಂದ ಶಬರಿಮಲೆಗೆ ವೋಲ್ವೋ ಬಸ್ ಸಂಚಾರ

    ಕಳೆದ 4 ದಶಕಗಳಿಂದ ಗೋಕಾಕ್‌ ಜಿಲ್ಲಾ ಹೋರಾಟ ನಡೆಯುತ್ತಿದೆ. ಜಿಲ್ಲೆ ಮಾಡಲು ನಿರಂತರ ಹೋರಾಟಗಳನ್ನು ಮಾಡಿ ಸರ್ಕಾರಕ್ಕೆ ಮನವಿ ಸಲ್ಲಿಸಿ ಮನವರಿಕೆ ಮಾಡಿದರೂ ಅದು ಈಡೇರಿಲ್ಲ. ಮುಂಬರುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸರ್ಕಾರದ ಮೇಲೆ ಒತ್ತಡ ಹಾಕಿ ಜಿಲ್ಲೆಯ ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತಗೆದುಕೊಂಡು ಗೋಕಾಕ್‌ ನೂತನ ಜಿಲ್ಲಾ ಕೇಂದ್ರವನ್ನಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಆಗ್ರಹಿಸಿದರು.

     

  • ಬೆಳಗಾವಿ| ಗ್ರಾಮ ಪಂಚಾಯಿತಿ ಕಟ್ಟಡಕ್ಕೆ ಪೆಟ್ರೋಲ್‌ ಬಾಂಬ್‌ ಎಸೆದ ಕಿಡಿಗೇಡಿಗಳು

    ಬೆಳಗಾವಿ| ಗ್ರಾಮ ಪಂಚಾಯಿತಿ ಕಟ್ಟಡಕ್ಕೆ ಪೆಟ್ರೋಲ್‌ ಬಾಂಬ್‌ ಎಸೆದ ಕಿಡಿಗೇಡಿಗಳು

    ಬೆಳಗಾವಿ: ತಾಲೂಕಿನ ಕಲಕಾಂಬ ಗ್ರಾಮ ಪಂಚಾಯಿತಿ ಕಟ್ಟಡದ ಮೇಲೆ ತಡರಾತ್ರಿ ದುಷ್ಕರ್ಮಿಗಳು ಪೆಟ್ರೋಲ್‌ ಬಾಂಬ್‌ ಎಸೆದಿರುವ ಘಟನೆ ನಡೆದಿದೆ.

    ನಿನ್ನೆ ರಾತ್ರಿ ಗ್ರಾಮ ಪಂಚಾಯಿತಿಯಲ್ಲಿ ಎರಡು ಗುಂಪುಗಳ ಮಧ್ಯೆ ತೀವ್ರ ಗಲಾಟೆ ಆಗಿರುವ ಮಾಹಿತಿ ಲಭ್ಯವಾಗಿದೆ.‌ ಅದೇ ವಿಚಾರಕ್ಕೆ ತಡರಾತ್ರಿ ಕಿಡಿಗೇಡಿಗಳಿಂದ ಗ್ರಾಮ ಪಂಚಾಯಿತಿ ಕಟ್ಟಡಕ್ಕೆ ಬೆಂಕಿ ಹಚ್ಚಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ.‌

    ತಡರಾತ್ರಿ ಆಗಮಿಸಿದ್ದ ಕಿಡಿಗೇಡಿಗಳು ಬಿಯರ್ ಬಾಟಲ್‌ನಲ್ಲಿ ಪೆಟ್ರೋಲ್ ಸುರಿದು ಬಟ್ಟೆ ಹಾಕಿ ಬೆಂಕಿ ಹಚ್ಚಿ ಎಸ್ಕೇಪ್ ಆಗಿದ್ದಾರೆ.‌ ಅಲ್ಲದೇ, ಗ್ರಾಮ ಪಂಚಾಯಿತಿ ಆವರಣ ಹಾಗೂ ಒಳಗಡೆ ಬಿಯರ್ ಬಾಟಲ್‌ಗಳನ್ನು ಎಸೆಯಲಾಗಿದೆ.‌ ಕೃತ್ಯ ಎಸಗಿ ಸಿಕ್ಕಿಬಿಳುತ್ತೇವೆ ಎಂದು ಗ್ರಾಪಂ ಕಟ್ಟಡದ ಸಿಸಿಟಿವಿ ಕ್ಯಾಮೆರಾ ತೆಗೆದುಕೊಂಡು ಹೋಗಿದ್ದಾರೆ.‌

    ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಗ್ರಾಮದಲ್ಲಿ ಪೊಲೀಸರು ಠಿಕಾಣಿ ಹೂಡಿದ್ದಾರೆ.