ಗೋಮಾಂಸ ಸಾಗಿಸುತ್ತಿದ್ದ ಚಾಲಕನನ್ನು ಕೆಳಗೆ ಇಳಿಸಿ ಥಳಿಸಿ ಕೂಡಿ ಹಾಕಿದ್ದಾರೆ. ಪರಿಶೀಲಿಸಿದಾಗ ಸುಮಾರು 7 ಕ್ವಿಂಟಾಲ್‌ನಷ್ಟು ಗೋಮಾಂಸ ಲಾರಿಯಲ್ಲಿ ಇರುವುದು ಪತ್ತೆಯಾಗಿದೆ. ಭಾರೀ ಪ್ರಮಾಣದ ಗೋಮಾಂಸ ಪತ್ತೆಯಾದ ಹಿನ್ನೆಲೆಯಲ್ಲಿ ಸಿಟ್ಟಾದ ಜನರು ಲಾರಿಗೆ ಬೆಂಕಿ ಹಚ್ಚಿದ್ದಾರೆ.
ಸ್ಥಳಕ್ಕೆ ಕಾಗವಾಡ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಐನಾಪುರ ಗ್ರಾಮದಲ್ಲಿ ಮುಂಜಾಗ್ರತವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಇಬ್ಬರು ಡಿಸ್‌ಎಸ್‌ಪಿ, 4 ಸಿಪಿಐ, 8 ಪಿಎಸ್‌ಐ ಸೇರಿ ಸೇರಿ ನೂರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಚಿಕ್ಕೋಡಿ: ಉಚ್ಚಾಟನೆಯ ವಿಷಯ ತಿಳಿಯುತ್ತಿದ್ದಂತೆ ಕೂಡಲಸಂಗಮ ಪೀಠದ (Panchamasali Jagadguru Peeta) ಜಯಮೃತ್ಯುಂಜಯ ಶ್ರೀಗಳು (Jaya Mruthyunjaya Swamiji) ಬೇಸರ ವ್ಯಕ್ತಪಡಿಸಿದರು.
ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ ತಾಲೂಕಿನ ಅಳಗವಾಡಿ ಗ್ರಾಮದ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಸ್ವಾಮೀಜಿ ಉಚ್ಚಾಟನೆ ವಿಷಯ ತಿಳಿಯುತ್ತಿದ್ದಂತೆ ಶ್ರೀಗಳ ಧ್ವನಿಯಲ್ಲಿ ಹತಾಶೆ ಭಾವ ಮೂಡಿತ್ತು. ಬದಲಾವಣೆ ಬಯಸಿದಂತಹ ವ್ಯಕ್ತಿಗಳಿಗೆ ತೊಂದರೆ ಕೊಡುವುದು ಸಹಜ. ಅದು ಯಾರನ್ನೂ ಬಿಟ್ಟಿಲ್ಲ. ಬಸವಣ್ಣನವರನ್ನು ಬಿಟ್ಟಿಲ್ಲ, ಅಂಬೇಡ್ಕರ್‌ರವರನ್ನು ಸಹ ಬಿಟ್ಟಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಕೂಡಲಸಂಗಮ ಪಂಚಮಸಾಲಿ ಪೀಠದಿಂದ ಬಸವಜಯಮೃತ್ಯುಂಜಯ ಶ್ರೀ ಉಚ್ಚಾಟನೆ
-ಸೆ.24ರಿಂದ ಅ.2ರವರೆಗೆ ತಿರುಮಲ ವಾರ್ಷಿಕ ಬ್ರಹ್ಮೋತ್ಸವ – 2024ರಲ್ಲಿ ಕಾಲ್ತುಳಿತದ ಹಿನ್ನೆಲೆ ಈ ಬಾರಿ ಎಚ್ಚರವಹಿಸಲು ಸೂಚನೆ
ಬೆಂಗಳೂರು/ಹೈದರಾಬಾದ್/ಬೆಳಗಾವಿ: ಬೆಳಗಾವಿಯಲ್ಲಿ (Belagavi) ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ (TTD) ಆಡಳಿತ ಮಂಡಳಿ ಅನುಮೋದನೆ ನೀಡಿದೆ ಎಂದು ಟಿಟಿಡಿ ಸದಸ್ಯ ಎಸ್.ನರೇಶ್‌ಕುಮಾರ್ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಬೆಳಗಾವಿಯ ಕೋಳಿಕೊಪ್ಪದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ನೀಡಿದ್ದು, ಈ ಮೂಲಕ ಉತ್ತರ ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯದ ಭಕ್ತಾದಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶ ಹೊಂದಿದೆ. ಇನ್ನೂ ಇದೇ ಸೆಪ್ಟೆಂಬರ್ 24ರಿಂದ ಅಕ್ಟೋಬರ್ 2ರವರೆಗೆ ತಿರುಮಲ ವಾರ್ಷಿಕ ಬ್ರಹ್ಮೋತ್ಸವ ನಡೆಯಲಿದ್ದು, ಸಕಲ ಸಿದ್ಧತೆ ನಡೆಯುತ್ತಿದೆ. ಕಳೆದ ಬಾರಿ ತಿರುಪತಿಯಲ್ಲಿ ಕಾಲ್ತುಳಿತ ಸಂಭವಿಸಿತ್ತು. ಹೀಗಾಗಿ ಈ ಬಾರಿ ಎಚ್ಚರ ವಹಿಸಲು ಸೂಚಿಸಲಾಗಿದೆ. ಬ್ರಹ್ಮೋತ್ಸವದ ಸಮಯದಲ್ಲಿ ವಿಶೇಷ ಗಮನಹರಿಸಲಿದ್ದು, ತಿರುಮಲದ ಪಾವಿತ್ರ‍್ಯತೆಯನ್ನು ಕಾಪಾಡುವುದು ಮತ್ತು ಸಾಮಾನ್ಯ ಭಕ್ತರಿಗೆ ಸುಲಭ ದರ್ಶನ ಸಿಗುವಂತೆ ಅವಕಾಶ ಮಾಡಿಕೊಡುತ್ತೇವೆ ಎಂದಿದ್ದಾರೆ.ಇದನ್ನೂ ಓದಿ: ಸೋಮವಾರದಿಂದಲೇ ನಂದಿನಿ ಉತ್ಪನ್ನಗಳ ದರ ಇಳಿಕೆ; ಯಾವುದಕ್ಕೆ ಎಷ್ಟು ದರ? – ಇಲ್ಲಿದೆ ಪಟ್ಟಿ
ಸೆಪ್ಟೆಂಬರ್ 28ರಂದು ಭಾನುವಾರ ಪ್ರಮುಖ ದಿನವಾಗಿದ್ದು, ಅಂದು ಅದ್ದೂರಿಯಾಗಿ ನಡೆಯುವ ಗರುಡ ಸೇವೆ ಭಕ್ತರ ಪ್ರಮುಖ ಆಕರ್ಷಣೆಯಾಗಿದೆ. ಈ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ದೇವರ ದರ್ಶನಕ್ಕೆ ಆಗಮಿಸಲಿದ್ದಾರೆ. ಹೀಗಾಗಿ ಬ್ರಹ್ಮೋತ್ಸವವನ್ನು ಸುಗಮವಾಗಿ ನಡೆಸಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಟಿಟಿಡಿಯ ಎಲ್ಲಾ ಇಲಾಖೆಗಳು ಸೂಕ್ಷ್ಮ ಮಟ್ಟದ ಯೋಜನೆಗಳನ್ನು ಸಿದ್ಧಪಡಿಸಿವೆ. ಭಕ್ತರಿಗೆ ಯಾವುದೇ ಅನಾನುಕೂಲತೆ ಉಂಟಾಗದಂತೆ ನೋಡಿಕೊಳ್ಳಲು ಈ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇನ್ನೂ ಕಲ್ಯಾಣ ಕಟ್ಟೆಗೆ ಹೆಚ್ಚುವರಿಯಾಗಿ 1,500 ಜನರನ್ನು ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ.
ವಸತಿ ಸೌಕರ್ಯ: ಬ್ರಹ್ಮೋತ್ಸವದ ಒಂಬತ್ತು ದಿನಗಳಲ್ಲಿ ಶಿಫಾರಸು ಪತ್ರಗಳ ಮೂಲಕ ಕೊಠಡಿಗಳನ್ನು ರದ್ದುಪಡಿಸಲಾಗಿದೆ. ಈ ಅವಧಿಯಲ್ಲಿ 3,500 ಕೊಠಡಿಗಳನ್ನು ಆಫ್‌ಲೈನ್‌ನಲ್ಲಿ ಹಂಚಿಕೆ ಮಾಡಲಾಗುವುದು, ಸಾಮಾನ್ಯ ಭಕ್ತರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.
ದರ್ಶನ ವ್ಯವಸ್ಥೆ: ವಾಹನ ಸೇವೆಗಳನ್ನು ವೀಕ್ಷಿಸಲು ಭಕ್ತರಿಗಾಗಿ 36 ಎಲ್‌ಇಡಿ ಪರದೆಗಳನ್ನು ಅಳವಡಿಸಲಾಗುವುದು. ಗರುಡ ಸೇವೆಯ ದಿನವನ್ನು ಹೊರತುಪಡಿಸಿ ಪ್ರತಿದಿನ 1.16 ಲಕ್ಷ ವಿಶೇಷ ದರ್ಶನ ಟಿಕೆಟ್‌ಗಳು ಮತ್ತು 25,000 ಎಸ್.ಎಸ್.ಡಿ. ಟೋಕನ್‌ಗಳನ್ನು ವಿತರಿಸಲಾಗುವುದು. ವಿಐಪಿ ಬ್ರೇಕ್ ದರ್ಶನವನ್ನು ಸ್ವತಃ ಹಾಜರಾಗುವ ವಿಐಪಿಗಳಿಗೆ ಮಾತ್ರ ಸೀಮಿತಗೊಳಿಸಲಾಗಿದೆ. ಉಳಿದ ಎಲ್ಲಾ ಸವಲತ್ತು ದರ್ಶನಗಳನ್ನು ರದ್ದುಗೊಳಿಸಲಾಗಿದೆ.ಇದನ್ನೂ ಓದಿ: ನಾಳೆ ಮಹಾಲಯ ಅಮಾವಾಸ್ಯೆ ಸೂರ್ಯಗ್ರಹಣ; ಯಾವೆಲ್ಲ ರಾಶಿಗಳಿಗೆ ಶುಭ-ಅಶುಭ?
ಲಡ್ಡುಗಳ ದಾಸ್ತಾನು: ಪ್ರತಿದಿನ 8 ಲಕ್ಷ ಲಡ್ಡುಗಳನ್ನು ಸಿದ್ಧವಾಗಿ ಇರಿಸಿಕೊಳ್ಳಲಾಗುವುದು.
ಸಹಾಯ ಕೇಂದ್ರಗಳು: ಭಕ್ತರಿಗೆ ಮಾಹಿತಿ ನೀಡಲು 20 ಸಹಾಯ ಕೇಂದ್ರಗಳನ್ನು (ಹತ್ತು ಹೆಚ್ಚುವರಿ) ತೆರೆಯಲಾಗಿದೆ.
ಅನ್ನಪ್ರಸಾದಂ: ಗರುಡ ಸೇವೆ ದಿನದಂದು ಗ್ಯಾಲರಿಗಳಲ್ಲಿರುವ ಭಕ್ತರಿಗೆ 14 ಬಗೆಯ ತಿಂಡಿ-ತಿನಿಸುಗಳನ್ನು ವಿತರಿಸಲಾಗುವುದು. ಅನ್ನಪ್ರಸಾದಂ ಕಾಂಪ್ಲೆಕ್ಸ್ನಲ್ಲಿ ಪ್ರತಿದಿನ ಬೆಳಿಗ್ಗೆ 8 ರಿಂದ ರಾತ್ರಿ 11ರವರೆಗೆ ಅನ್ನಪ್ರಸಾದ ಸೇವೆ ಇರುತ್ತದೆ.
ಪಾರ್ಕಿಂಗ್ ಸೌಲಭ್ಯ: ತಿರುಮಲದಲ್ಲಿ ಸುಮಾರು 4,000 ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಇದೆ. ತಿರುಪತಿಯಲ್ಲಿ ದ್ವಿಚಕ್ರ ಮತ್ತು ನಾಲ್ಕು ಚಕ್ರ ವಾಹನಗಳಿಗಾಗಿ ಒಟ್ಟು 5,250 ಮತ್ತು 2,700 ಪಾರ್ಕಿಂಗ್ ಸ್ಥಳಗಳು ಲಭ್ಯವಿದೆ.
ಆರ್.ಟಿ.ಸಿ ಬಸ್ ಸೇವೆ: ತಿರುಪತಿಯ ವಿವಿಧ ಪಾರ್ಕಿಂಗ್ ಸ್ಥಳಗಳಿಂದ ತಿರುಮಲಕ್ಕೆ ಭಕ್ತರನ್ನು ಕರೆದೊಯ್ಯಲು ಆರ್.ಟಿ.ಸಿ. ಬಸ್ಸುಗಳು ಲಭ್ಯವಿರುತ್ತವೆ. ಇತರ ದಿನಗಳಲ್ಲಿ 1,900 ಟ್ರಿಪ್‌ಗಳು ಮತ್ತು ಗರುಡ ಸೇವೆ ದಿನದಂದು 3,200 ಟ್ರಿಪ್‌ಗಳು ಇರುತ್ತವೆ.
ಭದ್ರತಾ ವ್ಯವಸ್ಥೆ: 2,000 ಟಿಟಿಡಿ ಭದ್ರತಾ ಸಿಬ್ಬಂದಿ, 4,700 ಪೊಲೀಸ್ ಸಿಬ್ಬಂದಿ, 3,500 ಶ್ರೀವಾರಿ ಸೇವಕರು ಮತ್ತು 450 ಟಿಟಿಡಿ ಹಿರಿಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. 3,000 ಸಿಸಿಟಿವಿ ಕ್ಯಾಮೆರಾಗಳನ್ನು ಕಮಾಂಡ್ ಕಂಟ್ರೋಲ್ ರೂಮ್‌ಗೆ ಸಂಪರ್ಕಿಸಲಾಗಿದೆ.
ಇತರ ಸಿಬ್ಬಂದಿ: ಬ್ರಹ್ಮೋತ್ಸವಕ್ಕಾಗಿ 2,300 ನೈರ್ಮಲ್ಯ ಸಿಬ್ಬಂದಿ ಜೊತೆಗೆ ಹೆಚ್ಚುವರಿಯಾಗಿ 960 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. 1,150 ಕೇಶಮುಂಡನ ಸಿಬ್ಬಂದಿಗಳು ಸೇವೆ ಸಲ್ಲಿಸಲಿದ್ದಾರೆ.
– 10,000 ರೂ. ದಂಡ, ಸಂತ್ರಸ್ತೆಗೆ 4 ಲಕ್ಷ ರೂ. ಪರಿಹಾರ ನೀಡಲು ಆದೇಶ
ಚಿಕ್ಕೋಡಿ: ನಿಪ್ಪಾಣಿ (Nippani) ತಾಲೂಕಿನ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಅಪರಾಧಿ ವಿರುದ್ಧ ಬೆಳಗಾವಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪೋಕ್ಸೋ ಕಾಯ್ದೆಯಡಿ (POCSO Act) ಪ್ರಕರಣ ದಾಖಲಿಸಿದ್ದು, ಅಪರಾಧಿಗೆ 30 ವರ್ಷ ಜೈಲು ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿದೆ.
ಆಕಾಶ್ ಅಲಿಯಾಸ್ ಅಕ್ಷಯ್ ಮಹಾದೇವ್ಮ ಸಾಳುಂಕೆ ಶಿಕ್ಷೆಗೊಳಗಾದ ಅಪರಾಧಿ. ಈತ ಬೆಳಗಾವಿ (Belagavi) ಜಿಲ್ಲೆಯ ನಿಪ್ಪಾಣಿಯ ಬುದ್ಧನಗರದಲ್ಲಿ ವಾಸಿಸುತ್ತಿದ್ದ. 2019ರ ಆಗಸ್ಟ್ 18ರಂದು ನಿಪ್ಪಾಣಿಯಲ್ಲಿ ಆಕಾಶ್ ಸಾಳುಂಕೆ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ. ಈ ಸಂಬಂಧ, ನಿಪ್ಪಾಣಿ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 55/2019ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 376 ಮತ್ತು ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ʻಬೆಂಕಿಯ ಬಲೆʼಯಲ್ಲಿ ನೇಪಾಳ – ಕನ್ನಡಿಗರ ರಕ್ಷಣೆಗೆ ತಂಡ ರಚಿಸಿದ ರಾಜ್ಯ ಸರ್ಕಾರ
ಸಾಕ್ಷಿಗಳ ಹೇಳಿಕೆಗಳು ಮತ್ತು ಸಂಬಂಧಿತ ಕಾಂಕ್ರೀಟ್ ಸಾಕ್ಷ್ಯಗಳನ್ನು ಸಂಗ್ರಹಿಸಿದ ನಂತರ, ಜಿಲ್ಲಾ ಸೆಷನ್ಸ್ ನ್ಯಾಯಾಧೀಶರಾದ ಸಿ.ಎಂ. ಪುಷ್ಪಲತಾ 2025ರ ಸೆಪ್ಟೆಂಬರ್ 4ರಂದು ತೀರ್ಪು ನೀಡಿದರು. ಅಪರಾಧಿ ವಿರುದ್ಧ ಐಪಿಸಿ ಸೆಕ್ಷನ್ 376 ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, 30 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ಸಂತ್ರಸ್ತೆಗೆ 4 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದರು. ಇದನ್ನೂ ಓದಿ: ಮಂಗಳೂರು | ಬೈಕಂಪಾಡಿಯಲ್ಲಿ ಅಗ್ನಿ ಅವಘಡ – ಅಮೆಜಾನ್ ಸುಗಂಧದ್ರವ್ಯ ತಯಾರಕ ಕಂಪನಿ ಬೆಂಕಿಗಾಹುತಿ
– ಪ್ರಾಥಮಿಕ ಕೃಷಿ ಪತ್ತಿನ ನಿರ್ದೇಶಕನಿಗೆ ರಸ್ತೆಯಲ್ಲೇ ಕ್ಲಾಸ್
ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಹಾಗೂ ಮಾಜಿ ಸಂಸದ ರಮೇಶ ಕತ್ತಿ (Ramesh Katti) ನಡುವಿನ ಡಿಸಿಸಿ ಬ್ಯಾಂಕ್ ಚುನಾವಣೆಯ (DCC Bank Election) ಫೈಟ್ ಜೋರಾಗಿದ್ದು, ಇಬ್ಬರ ನಡುವಿನ ತಿಕ್ಕಾಟದಿಂದ ಶಾಂತವಾಗಿದ್ದ ಹುಕ್ಕೇರಿ ಕ್ಷೇತ್ರದಲ್ಲಿ ಗಲಾಟೆ ನಡೆದಿದೆ.
ಜಾರಕಿಹೊಳಿ ಬೆಂಬಲಿತ ಅಭ್ಯರ್ಥಿ ರಾಜೇಂದ್ರ ಪಾಟೀಲ ವಿರುದ್ಧ ಅಕ್ಟೋಬರ್ 19 ರಂದು ಚುನಾವಣೆ ನಡೆಯಲಿದೆ. ಒಂದು ಪ್ರಾಥಮಿಕ ಕೃಷಿ ಪತ್ತಿನಿಂದ ಒಂದು ಮತ ಚಲಾಯಿಸುವ ಅಧಿಕಾರ ಇರುತ್ತದೆ. ಹುಕ್ಕೇರಿ ತಾಲೂಕಿನಲ್ಲಿ ಒಟ್ಟು 90 ಕೃಷಿ ಪತ್ತಿನ ಸಂಘಗಳಿದ್ದು ಒಟ್ಟು 90 ಮತಗಳ ಚಲಾವಣೆ ಆಗಬೇಕಿದೆ.
ಈ ಕಾರಣಕ್ಕೆ ಪ್ರತಿನಿತ್ಯ ಹುಕ್ಕೇರಿ ತಾಲೂಕಿನಲ್ಲಿ ಪ್ರಾಥಮಿಕ ಕೃಷಿ ಪತ್ತಿನ ನಿರ್ದೇಶಕರ ಬಹುಮತ ಪಡೆಯಲು ಹರಸಾಹಸ ನಡೆಸುತ್ತಿದ್ದಾರೆ. ಇದಕ್ಕಾಗಿ ಸತೀಶ್ ಜಾರಕಿಹೊಳಿ ಎದುರೇ ಗಲಾಟೆ ಆಗಿದೆ. ಜಾರಕಿಹೊಳಿ ಬೆಂಬಲಿಸಿದ್ದ ಪ್ರಾಥಮಿಕ ಕೃಷಿ ಪತ್ತಿನ ಸಂಘದ ನಿರ್ದೇಶಕನ ಪತ್ನಿ ನಿರ್ದೇಶಕನ ಕೊರಳು ಪಟ್ಟಿ ಹಿಡಿದು ಎಳೆದಾಡಿ ಕಪಾಳ ಮೋಕ್ಷ ಮಾಡಿ ರಸ್ತೆಯಲ್ಲೇ ತರಾಟೆ ತೆಗೆದುಕೊಂಡಿದ್ದಾಳೆ.
ಮದಿಹಳ್ಳಿ ಪಿಕೆಪಿಎಸ್ ಸದಸ್ಯ ಮಾರುತಿ ಸನದಿಗೆ ಪತ್ನಿ ಲಗಮವ್ವ ಏಟು ನೀಡಿದ್ದಾಳೆ. ಗಂಡ ಹೆಂಡತಿ ಜಗಳ ಬಿಡಿಸಲು ಸಚಿವ ಸತೀಶ್ ಜಾರಕಿಹೊಳಿ ಹಾಗೂ ಪೊಲೀಸರು ಸುಸ್ತಾಗಿ ಹೋಗಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಬಂದ ಮಾಜಿ ಸಂಸದ ರಮೇಶ್ ಕತ್ತಿ ಕೂಡ ಬಂದಿದ್ದರಿಂದ ಎರಡು ಗುಂಪುಗಳ ನಡುವೆ ಕೈ ಕೈ ಮಿಲಾಯಿಸುವ ಹಂತಕ್ಕೆ ಗಲಾಟೆ ತಲುಪಿತ್ತು.
ಬೆಳವಣಿಗೆಗಳ ನಡುವೆ ಬೆಲ್ಲದ ಬಾಗೇವಾಡಿ ಗ್ರಾಮದ ಕತ್ತಿ ಒಡೆತನದ ವಿಎಸ್‌ಎಲ್ ಸಕ್ಕರೆ ಕಾರ್ಖಾನೆಯಲ್ಲಿ ತಡರಾತ್ರಿ ಹೈಡ್ರಾಮಾ ನಡೆಯಿತು. ಪಾಶ್ಚಾಪೂರ ಗ್ರಾಮದ 6 ಪಿಕೆಪಿಎಸ್ ನಿರ್ದೇಶಕರನ್ನು ಯಮಕನಮರಡಿ ಪೊಲೀಸರು ಬಂದು ವಾಪಸ್ ಪಾಶ್ಚಾಪೂರ ಗ್ರಾಮಕ್ಕೆ ಕರೆ ತಂದಿದ್ದಾರೆ.
ಕೆಲದಿನಗಳಿಂದ ಕಾಣೆಯಾಗಿದ್ದಾರೆ ಎಂದು ಕುಟುಂಬಸ್ಥರು ದೂರು ನೀಡಿದ ಹಿನ್ನೆಲೆಯಲ್ಲಿ ಯಮಕನಮರಡಿ ಪಿಐ ಜಾವೇದ ಮುಶಾಪೂರೆ ವಿಎಸ್‌ಎಲ್ ಕಾರ್ಖಾನೆಗೆ ತೆರಳಿ ವಾಪಸ್ ಕಳಿಸುವಂತೆ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಸಂಸದ ರಮೇಶ ಕತ್ತಿ ಯಾವುದೇ ಕಾರಣಕ್ಕೂ ವಾಪಸ್ ಕಳುಹಿಸಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಪೊಲೀಸರು ಹಾಗೂ ರಮೇಶ ಕತ್ತಿ ನಡುವೆ ವಾಗ್ವಾದ ನಡೆದಿದೆ. ಬಳಿಕ ಪೊಲೀಸರು ನಿರ್ದೇಶಕರನ್ನು ವಾಪಸ್ ಪಾಶ್ಚಾಪೂರ ಗ್ರಾಮಕ್ಕೆ ಕರೆ ತಂದು ಕುಟಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.
ಒಟ್ಟಿನಲ್ಲಿ ದಿನದಿಂದ ದಿನಕ್ಕೆ ಕತ್ತಿ ಹಾಗೂ ಜಾರಕಿಹೊಳಿ ಕುಟುಂಬಗಳ ತಿಕ್ಕಾಟ ತಾರಕಕ್ಕೇರುತ್ತಿದ್ದು, ಮುಂದೆ ಬೆಳಗಾವಿ ಜಿಲ್ಲೆಯಲ್ಲಿ ಈ ಎರಡು ಕುಟುಂಬಗಳ ರಣಯುದ್ಧ ಹೊಸ ಅಧ್ಯಾಯ ಬರೆಯುವದರಲ್ಲಿ ಸಂಶಯವೇ ಇಲ್ಲ.
ಬೆಳಗಾವಿ: ಬರೋಬ್ಬರಿ 38 ಗಂಟೆಗಳ ಕಾಲ ಗಣೇಶ ವಿಸರ್ಜನೆ (Ganesh Procession) ನಡೆಯವ ಮೂಲಕ ಬೆಳಗಾವಿ (Belagavi) ಹೊಸ ದಾಖಲೆ ಬರೆದಿದೆ. ಮಹಾರಾಷ್ಟ್ರದ (Maharashtra) ಮುಂಬೈ ಮಹಾನಗರಕ್ಕೂ ಮೀರಿ ಬೆಳಗಾವಿಯಲ್ಲಿ ಈ ಬಾರಿ ಗಣೇಶ ವಿಸರ್ಜನ ಮಹೋತ್ಸವ ಜರುಗಿದ್ದು ಹೊಸ ಇತಿಹಾಸ ಸೃಷ್ಟಿಯಾಗಿದೆ.
ಗಣೇಶ ಮೆರವಣಿಗೆ ಶಾಂತ ರೀತಿಯಲ್ಲಿ ನಡೆಸಿಕೊಟ್ಟ ಮಹಾನಗರ ಪಾಲಿಕೆ ಸದಸ್ಯರು ಹಾಗೂ ಪೊಲೀಸರಿಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದರು. ಬೆಳಗಾವಿಯ ಕಪಿಲೇಶ್ವರ ಹೊಂಡದಲ್ಲಿ ವಿಸರ್ಜನೆಯಾಗಿರುವ ಗಣೇಶ ಮೂರ್ತಿಗಳ ವಿಲೇವಾರಿ ಕಾರ್ಯವೂ ಸಹ ಪ್ರಾರಂಭವಾಗಲಿದೆ.
ಬೆಳಗಾವಿ: ಬಡವರಿಗೆ ಉಪಯೋಗವಾಗಲಿ ಅಂತ ಸರ್ಕಾರ ಕೊಟ್ಯಂತರ ರೂ. ಆಸ್ಪತ್ರೆಗಳ ಮೇಲೆ ಖರ್ಚು ಮಾಡ್ತಿದೆ. ಆದರೆ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಅಲ್ಲಿನ ಆಡಳಿತ ಮಂಡಳಿ ಹೇಗೆ ಕೆಲಸ ಮಾಡ್ತಿದೆ ಎನ್ನುವುದಕ್ಕೆ ಇಲ್ಲೊಂದು ತಾಜಾ ಉದಾಹರಣೆ ಇದೆ. ಬಿಮ್ಸ್‌ನಲ್ಲಿ (BIMS Hospital) 3 ತಿಂಗಳು ಖಾಸಗಿ ಕಾಲೇಜಿನ ವೈದ್ಯ ವಿದ್ಯಾರ್ಥಿನಿಯೊಬ್ಬಳು ಯಾರಿಗೂ ಅನುಮಾನ ಬರದಂತೆ ಕೆಲಸ ಮಾಡಿದ್ದಾಳೆ.
ಕಾರವಾರ (Karwar) ಮೂಲದ ಯುವತಿ ವೈದ್ಯರಿಗೆ ಗೊತ್ತಾಗದಂತೆ ಕಳೆದ ಮೂರು ತಿಂಗಳಿನಿಂದ ಇದೇ ಆಸ್ಪತ್ರೆಯ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದಾಳೆ. ಇದಕ್ಕೆ ಯಾರು ಅವಕಾಶ ಕೊಟ್ರು? ಬರೊಬ್ಬರಿ ಈಕೆ ಮೂರು ತಿಂಗಳು ಕೆಲಸ ಮಾಡಿದ್ರೂ ಸಹ ಆಸ್ಪತ್ರೆ ವೈದ್ಯರಾಗಲಿ ಅಥವಾ ಆಡಳಿತ ಮಂಡಳಿಯಾಗಲಿ ಈಕೆ ಯಾರು ಎಲ್ಲಿಂದ ಬಂದಿದ್ದಾಳೆ, ಎಂದು ಪರಿಶೀಲನೆ ನಡೆಸದೆ ಅಸಡ್ಡೆ ತೋರಿಸಿದ್ದಾರೆ. ಬಡವರ ಆಸ್ಪತ್ರೆಗೆ ವೈಟ್ ಎಪ್ರಾನ್ ಹಾಕಿಕೊಂಡು ಬರೋರೆಲ್ಲ ವೈದ್ಯರಾಗಿ ಬಿಡಬಹುದು ಎಂದು ಜನ ಮಾತನಾಡಿಕೊಳ್ತಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶ | ನಕಲಿ ಐಎಎಸ್ ಅಧಿಕಾರಿ ಅರೆಸ್ಟ್ – ಐಷಾರಾಮಿ ಕಾರುಗಳು ಸೀಜ್
ವೈದ್ಯ ವಿದ್ಯಾರ್ಥಿನಿಗೆ ಆಸ್ಪತ್ರೆ ಸಿಬ್ಬಂದಿ ಹಲವು ಬಾರಿ ಪ್ರಶ್ನಿಸಲು ಮುಂದಾಗಿದ್ದರಂತೆ. ಆಗೆಲ್ಲ ಆಕೆ ಬಿಮ್ಸ್ ನಿರ್ದೇಶಕ ಅಶೋಕ್ ಶೆಟ್ಟಿಯವರ ಹೆಸರು ಹೇಳಿ ಹೆದರಿಸುತ್ತಿದ್ದಳಂತೆ. ಗುರುವಾರ (ಸೆ.4) ಚಿಕಿತ್ಸೆ ನೀಡುವಾಗಲೇ ಭದ್ರತಾ ಸಿಬ್ಬಂದಿಗೆ ಸಿಕ್ಕಿಬಿದ್ದಿದ್ದಳು. ಈ ಮಾಹಿತಿಯನ್ನು ವೈದ್ಯರಿಗೆ ತಿಳಿಸಿದ್ದರು. ಬಳಿಕ ವಿಚಾರಿಸಿದಾಗ ಆಕೆಯೊಬ್ಬ ವಿದ್ಯಾರ್ಥಿನಿ ಎಂಬುದು ತಿಳಿದುಬಂದಿದೆ.
ಬೆಳಗಾವಿ: ರಾಜ್ಯದ ಎರಡನೇ ಶಕ್ತಿಸೌಧದ ವಿದ್ಯುತ್ ಶುಲ್ಕವನ್ನೇ ಅಧಿಕಾರಿಗಳು ಬಾಕಿ ಉಳಿಸಿಕೊಂಡಿದ್ದಾರೆ. ಬೆಳಗಾವಿಯ ಸುವರ್ಣಸೌಧದ (Belagavi Suvarna Soudha) ವಿದ್ಯುತ್ ಬಿಲ್ 1.20 ಲಕ್ಷ ರೂಪಾಯಿಯನ್ನು ಲೋಕೋಪಯೋಗಿ ಇಲಾಖೆಯ (PWD) ಅಧಿಕಾರಿಗಳು ಹೆಸ್ಕಾಂ ಇಲಾಖೆಗೆ ಇನ್ನೂ ಪಾವತಿಸಿಲ್ಲ.
ಈ ತಿಂಗಳು ಬಾಕಿ ಬಿಲ್ ಪಾವತಿಸದಿದ್ದರೆ ಸುವರ್ಣಸೌಧದ ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತೇವೆ ಎಂದು ಲೋಕಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಹೆಸ್ಕಾಂ ಅಧಿಕಾರಿಗಳು ನೋಟಿಸ್ ನೀಡಿ ಎಚ್ಚರಿಕೆ ನೀಡಿದ್ದಾರೆ. ಇದನ್ನೂಓದಿ: ಕಿಚ್ಚನ ಅಭಿಮಾನಿಯಿಂದ ಬಡ ಮಹಿಳೆಗೆ ಸೂರು ಉಡುಗೊರೆ!
ಸುವರ್ಣ ಸೌಧಕ್ಕೆ ಬಣ್ಣ ಬಳಿಯಲೂ ಸಹ ಸರ್ಕಾರದ ಬಳಿ ದುಡ್ಡಿಲ್ವಾ ಎನ್ನುವ ಅನುಮಾನಗಳು ಕಾಡುತ್ತಿವೆ. 2012 ರಲ್ಲಿ ನಿರ್ಮಾಣವಾದ ಸುವರ್ಣಸೌಧಕ್ಕೆ ಸುಣ್ಣ ಬಣ್ಣ ಬಳಿದಿಲ್ಲ. ಸುಣ್ಣ ಬಣ್ಣ ಬಳಿಯಲು ಲೋಕೋಪಯೋಗಿ ಇಲಾಖೆ ಸಲ್ಲಿಸಿದ್ದ 9 ಕೋಟಿ ರೂ. ಪ್ರಸ್ತಾವನೆಯನ್ನು ಹಣಕಾಸು ಇಲಾಖೆ ತಿರಸ್ಕರಿಸಿದೆ.
ಬೆಳಗಾವಿ: ಹೋಟೆಲ್‌ನಲ್ಲಿ ಕೆಲಸ ಮಾಡ್ತಿದ್ದ ಕಾರ್ಮಿಕನ ಕೂಡಿಹಾಕಿ ಹಿಂಸೆ ನೀಡಿ, ಹಲ್ಲೆ ಮಾಡಿದ ಪರಿಣಾಮ ಗಂಭೀರ ಗಾಯಗೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಖಾನಾಪುರ (Khanapura) ತಾಲೂಕಿನಲ್ಲಿ ನಡೆದಿದೆ.
ಮಾಣಿಕವಾಡಿ ನಿವಾಸಿ ವೆಂಕಪ್ಪ ಮೈಯೆಕರ್(18) ಸಾವನ್ನಪ್ಪಿದ ಕಾರ್ಮಿಕ ಎಂದು ಗುರುತಿಸಲಾಗಿದೆ. ಖಾನಾಪುರ ಹೊರವಲಯದ ಸ್ವರಾಜ್ ಹೋಟೆಲ್‌ನಲ್ಲಿ ಮೂರು ತಿಂಗಳಿನಿಂದ ಯುವಕ ಕೆಲಸ ಮಾಡುತ್ತಿದ್ದ. ಆ.20 ರಂದು ಯುವಕನ ಮೇಲೆ ಕಳ್ಳತನ ಆರೋಪ ಹೊರಿಸಿ, ಆತನನ್ನು ಕೂಡಿ ಹಾಕಿ ಹೋಟೆಲ್ ಮಾಲೀಕ ನಾಗೇಶ್ ಗುಂಡು ಬೆಡರೆ, ಸಹೋದರ ವಿಜಯ್ ಬೆಡರೆ ಕಿರುಕುಳ ನೀಡಿ, ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಸ್ಪೈ ಕ್ಯಾಮೆರಾ ಬಳಸಿ ಮಹಿಳೆ ವೀಡಿಯೋ ರೆಕಾರ್ಡ್ – ದೆಹಲಿಯಲ್ಲಿ ಪೈಲಟ್ ಬಂಧನ
ತೀವ್ರವಾಗಿ ಗಾಯಗೊಂಡ ಯುವಕನನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದ. ಈ ಬಗ್ಗೆ ಪ್ರಶ್ನೆ ಮಾಡಲು ಹೋದ ಯುವಕನ ಪೋಷಕರಿಗೆ ಹೋಟೆಲ್ ಮಾಲೀಕ 10 ಸಾವಿರ ರೂ. ಹಣ ನೀಡಿ, ದೂರು ನೀಡದಂತೆ ಧಮ್ಕಿ ಹಾಕಿದ್ದ ಎನ್ನಲಾಗಿದೆ. ಹೋಟೆಲ್ ಮಾಲೀಕನ ಧಮ್ಕಿಗೆ ಹೆದರಿ ಪೊಲೀಸರಿಗೆ ದೂರು ನೀಡಲು ಯುವಕನ ತಂದೆ, ತಾಯಿ ಹಿಂಜರಿದಿದ್ದರು. ಇದನ್ನೂ ಓದಿ: ಸಿಗರೇಟ್ ವಿಚಾರಕ್ಕೆ ಗಲಾಟೆ – ರಿಪೀಸ್ ಪಟ್ಟಿಯಿಂದ ಮಾರಣಾಂತಿಕ ಹಲ್ಲೆ, ಇಬ್ಬರು ಅರೆಸ್ಟ್
ಈ ವಿಚಾರ ತಿಳಿದ ಗ್ರಾಮಸ್ಥರು ಯುವಕನ ತಂದೆಯ ಬೆನ್ನಿಗೆ ನಿಂತು, ಖಾನಾಪುರ ಪೊಲೀಸ್ (Khanapura Police) ಠಾಣೆಗೆ ದೂರು ನೀಡಿದ್ದಾರೆ. ಇದೀಗ ಪೊಲೀಸರು ಕೊಲೆ ಕೇಸ್ ದಾಖಲಿಸಿಕೊಂಡಿದ್ದಾರೆ. ಇದ್ದ ಒಬ್ಬ ಮಗನನ್ನು ಕಳೆದುಕೊಂಡ ಪೋಷಕರು ಮಗನ ಸಾವಿಗೆ ನ್ಯಾಯ ಕೊಡಿಸುವಂತೆ ಕಣ್ಣೀರಿಟ್ಟಿದ್ದಾರೆ.
ಬೆಂಗಳೂರು: ನಾಡಹಬ್ಬ ಮೈಸೂರು ದಸರಾ (Mysuru Dasara) ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿವೆ. ದಸರಾ ಹಬ್ಬ ಕಣ್ತುಂಬಿಕೊಳ್ಳಲು ರಾಜ್ಯದ ಬೇರೆ ಬೇರೆ ಕಡೆಯಿಂದ ಜನರು ಆಗಮಿಸುತ್ತಾರೆ. ಈ ಹಿನ್ನೆಲೆ ಪ್ರಯಾಣಿಕರ ದಟ್ಟಣೆ ನಿಯಂತ್ರಣಕ್ಕೆ ವಿಶೇಷ ರೈಲುಗಳು ಸಂಚರಿಸಲಿವೆ.
1. ರೈಲು ಸಂಖ್ಯೆ 06271/06272: ಎಸ್‌ಎಂವಿಟಿ ಬೆಂಗಳೂರು-ಬೆಳಗಾವಿ–ಮೈಸೂರು ಎಕ್ಸ್‌ಪ್ರೆಸ್ ವಿಶೇಷ ರೈಲು:
ರೈಲು ಸಂಖ್ಯೆ 06271 2025ರ ಸೆಪ್ಟೆಂಬರ್ 30ರಂದು ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಸಂಜೆ 7 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 7.30ಕ್ಕೆ ಬೆಳಗಾವಿ ತಲುಪಲಿದೆ. ಈ ರೈಲು ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್‌ಎಂಎಂ ಹಾವೇರಿ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.
ರೈಲು ಸಂಖ್ಯೆ 06272 2025ರ ಅಕ್ಟೋಬರ್ 1 ರಂದು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಿಗ್ಗೆ 7.45ಕ್ಕೆ ಮೈಸೂರಿಗೆ ತಲುಪಲಿದೆ. ಈ ರೈಲು ಮಾರ್ಗದಲ್ಲಿ ಖಾನಾಪುರ, ಲೋಂಡಾ, ಅಳ್ನಾವರ, ಧಾರವಾಡ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಎಸ್‌ಎಂಎಂ ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಚಿಕ್ಕಬಾಣಾವರ, ಯಶವಂತಪುರ, ಕೆಎಸ್‌ಆರ್ ಬೆಂಗಳೂರು ಮತ್ತು ಮಂಡ್ಯ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.
2. ರೈಲು ಸಂಖ್ಯೆ 06273/06274 ಮೈಸೂರು–ಬೆಳಗಾವಿ–ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ವಿಶೇಷ ರೈಲು:
ರೈಲು ಸಂಖ್ಯೆ 06273 2025ರ ಅಕ್ಟೋಬರ್ 2ರಂದು ಮೈಸೂರಿನಿಂದ ರಾತ್ರಿ 11.45ಕ್ಕೆ ಹೊರಟು, ಅಕ್ಟೋಬರ್ 3 ರಂದು ಮಧ್ಯಾಹ್ನ 12.30ಕ್ಕೆ ಬೆಳಗಾವಿಯನ್ನು ತಲುಪಲಿದೆ. ಈ ರೈಲು ಮಂಡ್ಯ, ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್‌ಎಂಎಂ ಹಾವೇರಿ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.
ರೈಲು ಸಂಖ್ಯೆ 06274 2025ರ ಅಕ್ಟೋಬರ್ 3ರಂದು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಿಗ್ಗೆ 5.00ಕ್ಕೆ ಬೆಂಗಳೂರಿನ ಎಸ್‌ಎಂವಿ ಟರ್ಮಿನಲ್ ತಲುಪಲಿದೆ. ಇದು ಖಾನಾಪುರ, ಲೋಂಡಾ, ಅಳ್ನಾವರ, ಧಾರವಾಡ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಎಸ್‌ಎಂಎಂ ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು ಮತ್ತು ಚಿಕ್ಕಬಾಣಾವರ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.
3. ರೈಲು ಸಂಖ್ಯೆ 06275/06276 ಎಸ್‌ಎಂವಿಟಿ ಬೆಂಗಳೂರು–ಬೆಳಗಾವಿ–ಎಸ್‌ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು:
ರೈಲು ಸಂಖ್ಯೆ 06275 2025ರ ಅಕ್ಟೋಬರ್ 4 ರಂದು ಬೆಂಗಳೂರಿನ ಎಸ್‌ಎಂವಿಟಿಯಿಂದ ಸಂಜೆ 7 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 8.25ಕ್ಕೆ ಬೆಳಗಾವಿ ತಲುಪಲಿದೆ.
ರೈಲು ಸಂಖ್ಯೆ 06276 2025ರ ಅಕ್ಟೋಬರ್ 5ರಂದು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಿಗ್ಗೆ 5.00ಕ್ಕೆ ಬೆಂಗಳೂರಿನ ಎಸ್‌ಎಂವಿಟಿಗೆ ತಲುಪಲಿದೆ.
ಈ ರೈಲು ಎರಡೂ ದಿಕ್ಕಿನಲ್ಲಿಯೂ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್‌ಎಂಎಂ ಹಾವೇರಿ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.
ಮೇಲೆ ತಿಳಿಸಿದ ಎಲ್ಲಾ ರೈಲುಗಳು (06271/06272, 06273/06274 ಮತ್ತು 06275/06276) ಒಟ್ಟು 19 ಬೋಗಿಗಳನ್ನು ಹೊಂದಿದ್ದು, ಅವುಗಳಲ್ಲಿ 1 ಎಸಿ 2-ಟೈರ್, 3 ಎಸಿ 3-ಟೈರ್, 10 ಸ್ಲೀಪರ್ ಕ್ಲಾಸ್, 3 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್‌ಎಲ್‌ಆರ್/ಡಿ ಬೋಗಿಗಳು ಇರಲಿವೆ.
ಹಬ್ಬದ ಸಮಯದಲ್ಲಿ ಪ್ರಯಾಣಿಕರು ಈ ವಿಶೇಷ ಸೇವೆಗಳ ಸದುಪಯೋಗ ಪಡೆದುಕೊಳ್ಳುಬೇಕು, ಹೆಚ್ಚಿನ ವಿವರಗಳಿಗಾಗಿ, ಪ್ರಯಾಣಿಕರು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು, ಸಹಾಯವಾಣಿ ಸಂಖ್ಯೆ 139ಗೆ ಕರೆ ಮಾಡಬಹುದು ಅಥವಾ ಹತ್ತಿರದ ರೈಲು ನಿಲ್ದಾಣವನ್ನು ಸಂಪರ್ಕಿಸಬಹುದು.ಇದನ್ನೂ ಓದಿ: ಮಣಿಪುರ ಮಾತುಕತೆ ಸಫಲ; ರಾಷ್ಟ್ರೀಯ ಹೆದ್ದಾರಿ ತೆರೆಯಲು ಕುಕಿ ಗ್ರೂಪ್ ಒಪ್ಪಿಗೆ