ಬೆಳಗಾವಿ: ಸರ್ಕಾರಿ ಶಾಲಾ ಮಕ್ಕಳು (Govt School Students) ಬಸ್ಸಿನಲ್ಲಿ ಪ್ರವಾಸ ಕೈಗೊಳ್ಳುವುದು ಸಾಮಾನ್ಯ. ಆದರೆ ಬೆಳಗಾವಿ ತಾಲೂಕಿನ ಸೋನಟ್ಟಿ ಗ್ರಾಮದ ಮಕ್ಕಳು ವಿಮಾನದಲ್ಲಿ ಪ್ರವಾಸ (Flight Tour) ಮಾಡಿದ್ದಾರೆ.
ಮಕ್ಕಳ ಹಾಜರಾತಿ ಹೆಚ್ಚಿಸುವ ಸಲುವಾಗಿ ಶಿಕ್ಷಕ ಪ್ರಕಾಶ್ ದೇವಣ್ಣವರ್ ಸುಮಾರು ಎರಡೂವರೆ ಲಕ್ಷ ರೂ. ಖರ್ಚು ಮಾಡಿ 17 ವಿದ್ಯಾರ್ಥಿಗಳಿಗೆ ಪ್ರವಾಸ ಭಾಗ್ಯ ನೀಡಿದ್ದಾರೆ.
ಗುರುವಾರ ಸಂಜೆ ಬೆಳಗಾವಿಯಿಂದ (Belagavi) ಹೈದರಾಬಾದ್ (Hyderabad) ಹೋಗಿರುವ ಮಕ್ಕಳು ರಾಮೋಜಿ ಫಿಲ್ಮ್ ಸಿಟಿ, ಚಾರ್ ಮಿನಾರ್, ಗೋಲ್ಕೊಂಡ ಸೇರಿ ಹಲವು ಸ್ಥಳಗಳನ್ನು ನೋಡಿದ್ದಾರೆ. ಶನಿವಾರ ಸಂಜೆ ಶಿಕ್ಷಕ ಮತ್ತು ವಿದ್ಯಾರ್ಥಿಗಳು ಬೆಳಗಾವಿಗೆ ವಾಪಸ್ ಆಗಲಿದ್ದಾರೆ.
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಅಥಣಿ (Athani) ಪಟ್ಟಣದಲ್ಲಿ ಬುಧವಾರ ಪತ್ತೆಯಾಗಿದ್ದ ದಂಪತಿಯ ಕೊಳೆತ ಶವಗಳ (Couple Death) ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಇದು ಆತ್ಮಹತ್ಯೆ ಅಲ್ಲ ಜೋಡಿ ಕೊಲೆ (Murder) ಎಂದು ಬೆಳಗಾವಿ ಎಸ್ ಪಿ ಭೀಮಾಶಂಕರ್ ಗುಳೇದ ಮಾಹಿತಿ ನೀಡಿದ್ದಾರೆ.
ಈಗಾಗಲೇ ನಾಲ್ಕು ಜನರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದೇವೆ. ಕೊಲೆ ಮಾಡಿ ಆರು ದಿನಕ್ಕೆ ದುರ್ವಾಸನೆ ಬಂದಿದೆ. ವ್ಯವಸ್ಥಿತವಾಗಿ ಸಂಚು ರೂಪಿಸಿ ಕೊಲೆ ಮಾಡಲಾಗಿದೆ. ಆದಷ್ಟು ಬೇಗನೇ ನಾವು ಆರೋಪಿಗಳನ್ನು ಬಂಧನ ಮಾಡುತ್ತೇವೆ ಎಂದು ಭೀಮಾಶಂಕರ ಗುಳೆದ್ ಮಾಹಿತಿ ನೀಡಿದ್ದಾರೆ.
ಮದಭಾವಿ ರಸ್ತೆ ಚವ್ಹಾಣ ತೋಟದ ಮನೆಯ ಸುತ್ತಲೂ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಇಬ್ಬರ ಮೃತದೇಹ ಪತ್ತೆಯಾಗಿತ್ತು.
ಬೆಳಗಾವಿ ಜಿಲ್ಲೆಯ ಅಥಣಿ, ಐಗಳಿ, ಕಾಗವಾಡ, ಸೇರಿದಂತೆ ಹಲವು ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳರನ್ನ ವಶಕ್ಕೆ ಪಡೆದು ಸುಮಾರು 40 ಲಕ್ಷ ರೂಪಾಯಿ ಮೌಲ್ಯದ 522 ಗ್ರಾಂ ಚಿನ್ನಾಭರಣ ಮತ್ತು ಮೋಟಾರ್ ಸೈಕಲನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಕಾರ್ಯಾಚರಣೆ ಮಾಡಿ ಕಳ್ಳರನ್ನ ಸೆರೆ ಹಿಡಿದು ಹೆಡೆಮುರಿ ಕಟ್ಟಿದ ಅಥಣಿ ಪೊಲೀಸರಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಅಥಣಿ ಪೊಲೀಸರ ಕಾರ್ಯಾಚರಣೆಗೆ ಬೆಳಗಾವಿ ಎಸ್‌ಪಿ ಭೀಮಾಶಂಕರ ಗುಳೇದ ಅವರು ಶ್ಲಾಘನೆ ವ್ಯಕ್ತ ಪಡಿಸಿದ್ದಾರೆ.
ಬೆಳಗಾವಿ: ಸಿಎಂ ಸಿದ್ದರಾಮಯ್ಯನವರು (CM Siddaramaiah) ಈಗಾಗಲೇ ಬರಾಕ್ ಒಬಾಮಾ (Barack Obama) ಅವರನ್ನು ಆಹ್ವಾನಿಸಿ ಪತ್ರವನ್ನು ಬರೆದಿರುತ್ತಾರೆ. ಡಿಸೆಂಬರ್ 26-27 ಅಥವಾ ಜನವರಿ 2025 ರಿಂದ ಅಕ್ಟೋಬರ್-2025ರೊಳಗಾಗಿ ದಿನಾಂಕ ನೀಡಲು ಕೋರಲಾಗಿದೆ. ಜಂಟಿ ಅಧಿವೇಶನವನ್ನು ಬೆಳಗಾವಿಯಲ್ಲಿಯೇ ನಡೆಸಲಾಗುವುದು ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ (HK Patel) ತಿಳಿಸಿದರು.
ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅಧಿವೇಶನಕ್ಕೆ ಸಾಕ್ಷಿಯಾದ ಸ್ಥಳಗಳಿಗೆ ಭೇಟಿ ನೀಡಿ, ವಿಸ್ತೃತವಾಗಿ ಚರ್ಚಿಸಿದ ಬಳಿಕ ಕಾರ್ಯಕ್ರಮದ ರೂಪುರೇಷೆ ಸಿದ್ಧಪಡಿಸಲಾಗುವುದು. ಅಕ್ಟೋಬರ್ 2 ರಿಂದ ಒಂದು ವರ್ಷಗಳ ಕಾಲ ಶತಮಾನೋತ್ಸವ ವರ್ಷಾಚರಣೆ. ಅಂತಾರಾಷ್ಟೀಯ ಮಹತ್ವ ಪಡೆಯಲು ವಿಧಾನಮಂಡಳ ಜಂಟಿ ಅಧಿವೇಶನ ನಡೆಸಲು ಹಾಗೂ ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಕರೆಸಲು ಉದ್ಧೇಶಿಸಲಾಗಿದೆ. ಗಾಂಧೀಜಿಯ (Mahatma Gandhi) ಕುರಿತು ವಿಶೇಷ ಅಭಿಮಾನ ಹೊಂದಿರುವ ಒಬಾಮಾ ಅವರು ಜಂಟಿ ಅಧಿವೇಶನ ಉದ್ಧೇಶಿಸಿ ಮಾತನಾಡಬೇಕು ಎಂಬುದು ಎಲ್ಲರ ಆಶಯ ಎಂದರು. ಇದನ್ನೂ ಓದಿ: ದೀಪಾವಳಿಯಂದು ಕೆಎಸ್‌ಆರ್‌ಟಿಸಿಗೆ ಬಂಪರ್ – ಒಂದೇ ದಿನ ಬರೋಬ್ಬರಿ 5.59 ಕೋಟಿ ಆದಾಯ
ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ಕಾಂಗ್ರೆಸ್ (Congress) ಅಧಿವೇಶನದ ಶತಮಾನ ಆಚರಣೆ ಮೂಲಕ ಗಾಂಧೀಜಿಯವರ ತತ್ವ ಸಿದ್ಧಾಂತಗಳನ್ನು ಇನ್ನಷ್ಟು ಪ್ರಚುಪಡಿಸಲು ಹಾಗೂ ಮನೆ ಮನೆಗೆ ಗಾಂಧೀಜಿ ಸಿದ್ಧಾಂತಗಳನ್ನು ತಲುಪಿಸುವ ಉದ್ದೇಶ ಹೊಂದಲಾಗಿದೆ. ಅರ್ಥಪೂರ್ಣ, ರಚನಾತ್ಮಕ ಕಾರ್ಯಕ್ರಮ ಆಯೋಜಿಸಲು ಗಾಂಧಿವಾದಿಗಳು, ಹಿರಿಯರ ಜತೆ ಚರ್ಚಿಸಿ ಅಧಿವೇಶನದ ಇತಿಹಾಸ ಮರುಸೃಷ್ಟಿ ಮತ್ತು ಮೆಲುಕು ಹಾಕಲು ಶತಮಾನೋತ್ಸವ ಆಚರಣೆ ಮಾಡಲಾಗುವುದು. ಇನ್ನು ಅಧಿವೇಶನ ಶತಮಾನೋತ್ಸವ ಆಚರಣೆಗೆ ಸರ್ಕಾರ 25 ಕೋಟಿ ರೂ. ನೀಡಲಿದ್ದು, ಅಗತ್ಯಬಿದ್ದರೆ ಹೆಚ್ಚುವರಿ ಅನುದಾನ ಕೂಡ ನೀಡಲಿದೆ ಎಂದು ಎಚ್.ಕೆ.ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.
ಬೆಳಗಾವಿಯ ವೀರಸೌಧ, ಹುದಲಿ ಸೇರಿ ಮತ್ತಿತರ ಸ್ಥಳಗಳಿಗೆ ಎಚ್.ಕೆ.ಪಾಟೀಲ್ ಸೇರಿ ಮತ್ತಿತರರು ಭೇಟಿ ನೀಡಲಿದ್ದಾರೆ. ಶತಮಾನೋತ್ಸವ ಸಮಿತಿಯ ಗೌರವ ಅಧ್ಯಕ್ಷ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಸಮಿತಿಯ ರಾಜ್ಯ ಸಂಚಾಲಕ ವಿಧಾನ ಪರಿಷತ್ ಮಾಜಿ ಸಭಾಪತಿ ಬಿ.ಎಲ್.ಶಂಕರ, ಸದಸ್ಯ ಎನ್.ಆರ್.ವಿಶುಕುಮಾರ್, ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್ ಸೇರಿ ಮತ್ತಿತರರು ಈ ವೇಳೆ ಇದ್ದರು.
ವಿಜಯಪುರ: ಪಂಚ ಗ್ಯಾರಂಟಿಯಿಂದ (Guarantees) ಸಚಿವರಿಗೆ ಎಲ್ಲಿ ಹಣ ತಿನ್ನಬೇಕು ಅನ್ನೋದು ಗೊತ್ತಾಗುತ್ತಿಲ್ಲ. ಗ್ಯಾರಂಟಿ ಕೊಟ್ಟ ಮೇಲೆ ಕಾಂಗ್ರೆಸ್ ಸರ್ಕಾರದ್ದೆ ಗ್ಯಾರಂಟಿ ಇಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ (Basanagouda Patil Yatnal) ಯತ್ನಾಳ್ ವ್ಯಂಗ್ಯವಾಡಿದ್ದಾರೆ.
ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ತಿಮ್ಮಾಪುರ್ ವರ್ಗಾವಣೆ ಭ್ರಷ್ಟಾಚಾರ ವಿಚಾರವಾಗಿ, ಕಾಂಗ್ರೆಸ್ ಸರ್ಕಾರ (Congress Governmnet) ಎಲ್ಲಾ ಇಲಾಖೆಗಳಲ್ಲಿ ಭ್ರಷ್ಟಾಚಾರ ಮಾಡಿದೆ. ಪಂಚ ಗ್ಯಾರಂಟಿಯಿಂದ ಸಚಿವರಿಗೆ ಎಲ್ಲಿ ಹಣ ತಿನ್ನಬೇಕು ಎಂದು ಗೊತ್ತಾಗುತ್ತಿಲ್ಲ. ಅಬಕಾರಿ ಇಲಾಖೆ ಹೊರತಾಗಿ ಸಚಿವರಿಗೆ ಮತ್ತೊಂದು ಸೋರ್ಸ್ ಇಲ್ಲ. ಅಬಕಾರಿ ಇಲಾಖೆಯ (Departmnet Of Excise) ವರ್ಗಾವಣೆಯಲ್ಲಿ ದೊಡ್ಡ ಉದ್ಯೋಗ ಹುಟ್ಟಿಕೊಂಡಿದೆ. ಏಕೆಂದರೆ ಅವರಿಗೆ ಗ್ಯಾರಂಟಿ ಇಲ್ಲ. ಗ್ಯಾರಂಟಿ ಕೊಟ್ಟ ಮೇಲೆ ಅವರ ಸರ್ಕಾರದ್ದೆ ಗ್ಯಾರಂಟಿ ಇಲ್ಲ ಎಂದು ಹೇಳಿದರು.ಇದನ್ನೂ ಓದಿ: Kamala, you’re fired – ಮಧ್ಯರಾತ್ರಿ 2:15 ಕ್ಕೆ ಕೊನೆಯ ಪ್ರಚಾರದಲ್ಲಿ ಗುಡುಗಿದ ಟ್ರಂಪ್
ಸಿಎಂ ಸಿದ್ದರಾಮಯಯ್ಯಗೆ (CM Siddaramaiah) ಎಷ್ಟು ದಿನ ಮುಂದುವರೆಯುತ್ತೇನೆ ಎನ್ನುವ ಗ್ಯಾರಂಟಿ ಇಲ್ಲ, ಎಲ್ಲರೂ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಕಾಂಗ್ರೆಸ್ ಶಾಸಕರಿಗೆ ಏನೂ ಸಿಗುತ್ತಿಲ್ಲ ಹೀಗಾಗಿ ಹತಾಶರಾಗಿದ್ದಾರೆ. ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದರಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಶೇ.90 ರಷ್ಟು ಭ್ರಷ್ಟಾಚಾರ ಇದೆ. ಆಗ ನಮ್ಮದು ಶೇ.40 ರಷ್ಟು ಭ್ರಷ್ಟಾಚಾರ ಇದೆ ಎಂದು ಹೇಳುತ್ತಿದ್ದರು. ಜೊತೆಗೆ ಬಿಜೆಪಿ ಮೇಲೆ ಪೇಸಿಎಂ ಎಂದು ಆರೋಪ ಮಾಡುತ್ತಿದ್ದರು. ಆದರೆ ಯಾಕೆ ತನಿಖೆ ಮಾಡಲಿಲ್ಲ? ತನಿಖೆ ಮಾಡಿ ಸಾಬೀತು ಮಾಡುವುದಕ್ಕೆ ಆಗಲಿಲ್ಲ ಎಂದು ಪ್ರಶ್ನಿಸಿದರು.
ಬೆಂಗಳೂರಲ್ಲಿ ಜಾಗಗಳ ಎನ್‌ಎ ಮಾಡಲು ಭ್ರಷ್ಟಾಚಾರ ಮಾಡಿದ್ದಾರೆ. ಎನ್‌ಎ ಮಾಡಲು ಡಿಕೆಶಿಗೆ ಹಣ ಕೊಡಬೇಕು. ಚದರ ಅಡಿಗೆ 75 ರಿಂದ 100 ರೂ. ಕೊಡಬೇಕು. ಡಿಕೆಶಿ (DCM DK Shivakumar) ಕ್ಯಾಲ್ಕುಲೇಟರ್ ತೆಗೆದುಕೊಂಡು ಕೂತಿರುತ್ತಾನೆ ಎಂದು ಆರೋಪಿಸಿದ್ದಾರೆ.
ಇದೇ ವೇಳೆ ತಹಶಿಲ್ದಾರ್ ಕಚೇರಿ ಎಸ್‌ಡಿಎ ಆತ್ಮಹತ್ಯೆಯಲ್ಲಿ ಹೆಬ್ಬಾಳ್ಕರ್ (Lakshmi Hebbalkar) ಪಿಎ ಹೆಸರು ಬರೆದಿಟ್ಟ ವಿಚಾರವಾಗಿ ಮಾತನಾಡಿ, ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಬಹಳಷ್ಟು ದೂರುಗಳಿವೆ. ಭ್ರಷ್ಟಾಚಾರದ ತುತ್ತ ತುದಿಯಲ್ಲಿದ್ದಾರೆ. ಹಿಂದೆ ಮಾಡಿದ ಪಾಪದ ಫಲ ಈಗ ಕಾಡುತ್ತಿದೆ. ಈಶ್ವರಪ್ಪ ರಾಜೀನಾಮೆ ಕೊಡುವಂತೆ ಮಾಡಿದ ಪಾಪದ ಕೊಡ ತುಂಬಿ ಈಗ ಬೆನ್ನು ಹತ್ತಿದೆ. ಬೆಳಗಾವಿಯಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಐದಾರು ಸಾವಿರ ರೂ. ಕೆಲಸಕ್ಕೂ ಲಂಚ ಕೊಡಬೇಕಿದೆ. ಪಿಎ ಹೆಸರು ಬರೆದಿರುವುದಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್ ಅವರೇ ಹೊಣೆ. ಲಕ್ಷ್ಮಿ ಹೆಬ್ಬಾಳ್ಕರ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: Pushpa 2: ಅಲ್ಲು ಅರ್ಜುನ್ ಜೊತೆ ಶ್ರೀಲೀಲಾ ಡ್ಯಾನ್ಸ್?
ಬೆಳಗಾವಿ: ಇಲ್ಲಿನ ತಹಸೀಲ್ದಾರ್ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಏಕಾಏಕಿ ವರ್ಗಾವಣೆ ಮಾಡಿದ ಹಿನ್ನೆಲೆ, ತಹಶೀಲ್ದಾರ್ ಕಚೇರಿ ದ್ವೀತಿಯ ದರ್ಜೆ ಗುಮಾಸ್ತ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿಗಳು, ನಿನ್ನೆ ಬೆಳಗಾವಿ ತಹಶೀಲ್ದಾರ್ ಕಚೇರಿಯಿಂದ ಸವದತ್ತಿ ಎಲ್ಲಮ್ಮ ಆಡಳಿತ ಕಚೇರಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದರು.
ವರ್ಗಾವಣೆ ರದ್ದುಗೊಳಿಸುವಂತೆ ತಹಶೀಲ್ದಾರ್ ಹಾಗೂ ಡಿಸಿ ಮೊಹಮ್ಮದ್ ರೋಷನ್ ಅವರಿಗೆ ರುದ್ರಣ್ಣ ಮನವಿ ಮಾಡಿದ್ದರು. ಈ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಚೇರಿಗೂ ಹೋಗಿ ಅಳಲು ತೋಡಿಕೊಂಡಿದ್ದರು. ಈ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ಕೆಲವೊಂದು ಪೋಸ್ಟ್ ಕೂಡ ಹಾಕಿದ್ದರು.
ನಾನು ಜೀವ ಕಳೆದುಕೊಂಡರೆ ಅದಕ್ಕೆ ತಹಶೀಲ್ದಾರ್ ಹಾಗೂ ಡಿಸಿ ಕಾರಣ ಎಂದು ಡಿಪಾರ್ಟ್‌ಮೆಂಟ್ ವಾಟ್ಸಪ್‌ನಲ್ಲಿ ಪೋಸ್ಟ್ ಮಾಡಿದ್ದರು. ಘಟನೆ ನಂತರ ಪೋಸ್ಟ್ ಡಿಲೀಟ್ ಆಗಿದ್ದು ಚರ್ಚೆಗೆ ಗ್ರಾಸವಾಗಿದೆ. ಸ್ಥಳಕ್ಕೆ ಡಿಸಿಪಿ ರೊಹಬ್ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
– ರ‍್ಯಾಶ್ ಡ್ರೈವಿಂಗ್ ಪ್ರಶ್ನಿಸಿದ್ದಕ್ಕೆ ಕುಡಿದ ಅಮಲಿನಲ್ಲಿ ಹಲ್ಲೆ ಆರೋಪ – ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದ ಎಸ್‌ಪಿ
ಬೆಳಗಾವಿ: ನೋಡಿಕೊಂಡು ಕಾರು ಚಲಾಯಿಸಿ ಎಂದಿದ್ದಕ್ಕೆ ಮೂವರ ಮೇಲೆ ನಾ ಡ್ರೈವರ್ (Na Driver) ಹಾಗೂ ಹಿತ್ತಲಕ್ಕೆ ಕರಿ ಬೇಡ ಮಾವ ಖ್ಯಾತಿಯ ಜನಪದ ಗಾಯಕ ಮಾಳು ನಿಪನಾಳ (Malu Nipanal) ಹಾಗೂ ಗ್ಯಾಂಗ್ ಸೇರಿ ಹಲ್ಲೆ ಮಾಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ ತಾಲೂಕಿನ ನಿಪನಾಳ ಗ್ರಾಮದ ಬಳಿ ನಡೆದಿದೆ.
ನಿಪನಾಳ ಗ್ರಾಮದ ಬಳಿ ಬೈಕ್ ಮೇಲೆ ತೆರಳುತ್ತಿದ್ದವರ ಮೇಲೆ ಹಲ್ಲೆ ಮಾಡಿದ ಪರಿಣಾಮ ಮೂವರಿಗೆ ಗಂಭೀರ ಗಾಯಗಳಾಗಿವೆ. ರ‍್ಯಾಶ್ ಡ್ರೈವಿಂಗ್ ಪ್ರಶ್ನಿಸಿದ್ದಕ್ಕೆ ಗಂಭೀರವಾಗಿ ಮಲ್ಲು ನಿಪನಾಳ ಗ್ಯಾಂಗ್ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಬಂದಿದೆ. ಶೇಖರ ಹಕ್ಯಾಗೋಳ, ಅಶ್ವಿನಿ ಈರಿಗಾರ, ರೂಪಾ ಹಕ್ಯಾಗೋಳ ಎಂಬುವರ ಮೇಲೆ ಹಲ್ಲೆ ಮಾಡಿದ್ದು ಹಲ್ಲೆಯಿಂದ ಶೇಖರ ಹಕ್ಯಾಗೋಳ ತಲೆಗೆ ಗಂಭೀರ ಗಾಯವಾದರೆ ಮಹಿಳೆಯ ಕೈಗೆ ಗಂಭೀರ ಗಾಯವಾಗಿದೆ. ಇದನ್ನೂ ಓದಿ: ವಕ್ಫ್ ಆಸ್ತಿ ಉಳಿಸೋದು ಕಾಂಗ್ರೆಸ್‍ನ 6ನೇ ಗ್ಯಾರಂಟಿ: ರೇಣುಕಾಚಾರ್ಯ ಕಿಡಿ
ಕುಡಿದ ಅಮಲಿನಲ್ಲಿ 10 ಜನ ಸೇರಿ ಮಹಿಳೆ ಎನ್ನುವದನ್ನ ಲೆಕ್ಕಿಸದೇ ಹಲ್ಲೆ ಮಾಡಿದ್ದಾರೆ ಎಂದು ಸಂತ್ರಸ್ತರು ದೂರಿದ್ದಾರೆ. ಗಾಯಾಳುಗಳು ಚಿಕ್ಕೋಡಿ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆಗೊಳಗಾದವರು ಚಿಕ್ಕೋಡಿ ತಾಲೂಕಿನ ಕೇರೂರು ಗ್ರಾಮದವರಾಗಿದ್ದು ಕೇರೂರು ಗ್ರಾಮದಿಂದ ಕಲ್ಲೋಳಿ ದೇವಸ್ಥಾನಕ್ಕೆ ಹೋಗುವಾಗ ನಿಪನಾಳ ಗ್ರಾಮದ ಬಳಿ ಘಟನೆ ನಡೆದಿದೆ. ಇದನ್ನೂ ಓದಿ: ನಾಲ್ವರಿದ್ದ ಬೈಕ್‌ಗೆ ಕಾರು ಡಿಕ್ಕಿ – ಇಬ್ಬರು ಸ್ಥಳದಲ್ಲಿಯೇ ಸಾವು, ಇಬ್ಬರು ಗಂಭೀರ
ತನ್ನೂರಿನಲ್ಲೇ ಮಾಳು ಈ ರೀತಿ ಗೂಂಡಾವರ್ತನೆ ತೋರಿದ್ದನ್ನು ಸ್ಥಳೀಯರು ನೋಡಿದ್ದಾರೆ. ಹಲ್ಲೆ ಮಾಡಿ ಅಲ್ಲಿಂದ ಮಾಳು ಪರಾರಿಯಾದರೆ ಸ್ಥಳೀಯರು ಗಾಯಾಳುಗಳಿಗೆ ಕೂಡಲೇ ರಾಯಬಾಗ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ಮೂವರು ಚಿಕ್ಕೋಡಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ಬಂದು ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸದ್ಯ ಗಾಯಾಳುಗಳಿಂದ ಮಾಹಿತಿ ಪಡೆಯುತ್ತಿರುವ ಪೊಲೀಸರು ಮಾಳು ವಿರುದ್ಧ ಕೇಸ್ ದಾಖಲಿಸಿಕೊಳ್ಳುತ್ತಿದ್ದಾರೆ. ಈ ರೀತಿ ಹಲ್ಲೆ ಮಾಡಿದ ಗಾಯಕ ಮಾಳು ಎಸ್ಕೇಪ್ ಆಗಿದ್ದಾರೆ ಎಂಬ ಮಾಹಿತಿ ಇದೆ. ಘಟನೆ ಕುರಿತು ಮಾಹಿತಿ ಪಡೆದಿದ್ದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಬೆಳಗಾವಿ ಎಸ್‌ಪಿ ಡಾ.ಭೀಮಾಶಂಕರ್ ಗುಳೇದ್ ಹೇಳಿದ್ದಾರೆ. ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
7 ಎಕರೆ 31 ಗುಂಟೆ ಜಮೀನು ಹೊಂದಿರುವ ಬಸವರಾಜ ಹಾಗೂ ಅವರ ಅಣ್ಣತಮ್ಮಂದಿರ ಹೆಸರಿನಲ್ಲಿರುವ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿದೆ.
ವಕ್ಫ ಆಸ್ತಿ ನಮೂದಾದ ಹಿನ್ನೆಲೆಯಲ್ಲಿ ರೈತನ ಕುಟುಂಬದಲ್ಲಿ ಆತಂಕ ಎದುರಾಗಿದೆ. ತಕ್ಷಣ ಸರ್ಕಾರ ಪಹಣಿಯಲ್ಲಿ ನಮೂದಾಗಿರುವ ವಕ್ಫ ಆಸ್ತಿಯನ್ನು ತೆಗೆದು ಹಾಕುವಂತೆ ರೈತರ ಆಗ್ರಹಿಸಿದ್ದಾರೆ.
ಬೆಳಗಾವಿ: ಕರ್ನಾಟಕ ರಾಜ್ಯೋತ್ಸವಕ್ಕೆ (Karnataka Rajyotsava) ಪ್ರತಿಯಾಗಿ ಎಂಇಎಸ್ (MES) ನಡೆಸಿದ ಕರಾಳ ದಿನಾಚರಣೆ ಸಂಬಂಧ 45ಕ್ಕೂ ಹೆಚ್ಚು ಎಂಇಎಸ್ ನಾಯಕರು ಹಾಗೂ ಕಾರ್ಯಕರ್ತರ ವಿರುದ್ಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲಾಡಳಿತ ಕರಾಳ ದಿನಾಚರಣೆಗೆ ಅನುಮತಿ ನೀಡದಿದ್ದರೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ಮನವಿಗೆ ಸ್ಪಂದಿಸಿ ಕಾರ್ಯಕರ್ತರು ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿದ್ದರು. ಇದನ್ನೂ ಓದಿ: ನಾಲ್ಕು ಅನುಮಾನಗಳಿಗೆ ಕಾರಣವಾದ ಗುರುಪ್ರಸಾದ್ ಸಾವು!
ಕರ್ನಾಟಕ ಸರ್ಕಾರವು ಕಾಲಕಾಲಕ್ಕೆ ನಾಯಕರು ಮತ್ತು ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸುವ ಮೂಲಕ ಗಡಿ ಒಡೆಯಲು ಪ್ರಯತ್ನಿಸುತ್ತಿದೆ. ಆದರೆ ಕರ್ನಾಟಕ ಸರ್ಕಾರವು ಈ ಬಾರಿ ಮರಾಠಿ ಭಾಷಿಕ ಪತ್ರಕರ್ತರು ಮತ್ತು ವಕೀಲರ ವಿರುದ್ಧವೂ ಪ್ರಕರಣಗಳನ್ನು ದಾಖಲಿಸಿದೆ ಎಂದು ಸಮಿತಿ ಈಗ ಆರೋಪ ಮಾಡಿದೆ.
ಮಾಜಿ ಶಾಸಕ ಮನೋಹರ ಕಿಣೇಕರ, ಮಾಜಿ ಮೇಯರ್ ಮಾಲೋಜಿ ಅಷ್ಟೇಕರ, ಪ್ರಕಾಶ ಮರಗಾಳೆ, ರಮಾಕಾಂತ ಕೊಂಡುಸ್ಕರ್, ರಂಜಿತ್ ಚವ್ಹಾಣ, ಅಮರ ಯಳೂರಕರ, ಗಜಾನನ ಪಾಟೀಲ, ನೇತಾಜಿ ಜಾಧವ, ಅಂಕುಶ ಕೇಸರಕರ, ವಿಕಾಸ ಕಲಘಟಗಿ, ಮದನ ಬಾಮನೆ, ಸಚಿನ ಕೇಳೇಕರ, ಪ್ರಶಾಂತ ಭಾಮನೆ, ಪ್ರಶಾಂತ್, ಕಿರಣ್ ಗಾವಡೆ, ಮಹಾದೇವ ಪಾಟೀಲ, ಶುಭಂ ಶೆಲ್ಕೆ, ರೇಣು ಕಿಲ್ಲೇಕರ್, ಸರಸ್ವತಿ ಪಾಟೀಲ, ಸರಿತಾ ಪಾಟೀಲ, ಕಿರಣ ಹುದ್ದಾರ್, ದತ್ತಾ ಉಘಾಡೆ, ಶ್ರೀಕಾಂತ ಕದಂ, ಚಂದ್ರಕಾಂತ ಕೊಂಡುಸ್ಕರ, ಸಂತೋಷ ಕೃಷ್ಣಾಚೆ, ಗುಂಡು ಕದಂ, ಸುನೀಲ ಬಾಳೇಕುಂದ್ರಿ, ಗಣೇಶ ದಡ್ಡಿಕರ, ಪ್ರಕಾಶ ಶಿರೋಲ್ಕರ್, ಆರ್. ಎಂ. ಚೌಗುಲೆ, ಸುಧೀರ ಚವ್ಹಾಣ, ಮಲ್ಲಪ್ಪ ಪಾಟೀಲ, ನಾಗೇಶ ಪಾಟೀಲ, ಸೂರಜ್ ಯಳ್ಳೂರಕರ, ಶ್ರೀಕಾಂತ ಚವ್ಹಾಣ, ಸದಾ ಚವ್ಹಾಣ, ಕಿರಣ ಮೋದಗೇಕರ, ಶಿವಾಜಿ ಮಂಡೋಳಕರ ಸೇರಿದಂತೆ ಹಲವು ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:ಆತ್ಮಹತ್ಯೆ ಮಾಡಿಕೊಂಡ ಪತಿ ಗುರುಪ್ರಸಾದ್ ನೋಡಲು ಕಣ್ಣೀರಿಡುತ್ತಲೇ ಧಾವಿಸಿದ 2ನೇ ಪತ್ನಿ
ಬೆಳಗಾವಿ: ಅಂದಾಜು 40 ವರ್ಷದ ತಾಯಿ (Mother) ಜೊತೆ ಮಗನ ಶವ ಭಾರತೀಯ ಸೇನೆ (Indian Army) ವ್ಯಾಪ್ತಿಯಲ್ಲಿರುವ ಹಿಂಡಲಗಾ ಗಣಪತಿ ದೇವಸ್ಥಾನದ (Ganapathi Temple) ಮುಂಭಾಗದಲ್ಲಿರುವ ಕೊಳದಲ್ಲಿ ಪತ್ತೆಯಾಗಿದೆ.