Tag: belagavi

  • ರೋಗಿ ಕೊಳಲು ಊದುವಾಗಲೇ ಮೆದುಳು ಆಪರೇಷನ್ – 1.20 ಲಕ್ಷ ರೂ. ನಲ್ಲಿ ಶಸ್ತ್ರಚಿಕಿತ್ಸೆ ಯಶಸ್ವಿ

    ರೋಗಿ ಕೊಳಲು ಊದುವಾಗಲೇ ಮೆದುಳು ಆಪರೇಷನ್ – 1.20 ಲಕ್ಷ ರೂ. ನಲ್ಲಿ ಶಸ್ತ್ರಚಿಕಿತ್ಸೆ ಯಶಸ್ವಿ

    ಬೆಳಗಾವಿ: ರೋಗಿಯ ಕೈಗೆ ಕೊಳಲು (Flute) ಕೊಟ್ಟು ಊದಲು ಹೇಳಿ ವೈದ್ಯರು ಮೆದುಳು ಶಸ್ತ್ರಚಿಕಿತ್ಸೆ (Brain Operation) ಮಾಡಿ ಯಶಸ್ವಿಯಾದ ಘಟನೆ ಬೆಳಗಾವಿಯ (Belagavi) ಆಸ್ಪತ್ರೆಯೊಂದರಲ್ಲಿ ನಡೆದಿದೆ.

    ಕನ್ಹೇರಿ ಮಠದ ನರಶಸ್ತ್ರಚಿಕಿತ್ಸಕ ಡಾ. ಶಿವಶಂಕರ್ ಮರಜಕ್ಕೆ ಹಾಗೂ ಅರವಳಿಗೆ ತಜ್ಞ ಪ್ರಕಾಶ ಭರಮಗೌಡರಿಂದ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿರುವ ವೈದ್ಯರು. ಕೊಲ್ಲಾಪುರದ ಕನ್ಹೇರಿ ಮಠದ ಸಿದ್ಧಗಿರಿ ಆಸ್ಪತ್ರೆಯಲ್ಲಿ ಇಸ್ರೇಲ್‌ನಿಂದ (Israel) ಬಂದಿದ್ದ ರೈತನಿಗೆ ಮೆದುಳಿನಲ್ಲಿ ಗಡ್ಡೆ ಬೆಳೆದಿತ್ತು. ಅದನ್ನು ಟ್ಯೂಮರ್ ಆಪರೇಷನ್ ಮಾಡಿ ಹೊರ ತೆಗೆಯಬೇಕಿತ್ತು. ಈ ಸಂದರ್ಭದಲ್ಲಿ ವೈದ್ಯರು ರೋಗಿಯ ಕೈಗೆ ಕೊಳಲು ಕೊಟ್ಟು ಊದಲು ಹೇಳಿದ್ದಾರೆ. ಸುಮಾರು 5 ಗಂಟೆಗಳ ಕಾಲ ನಡೆದ ಶಸ್ತ್ರಚಿಕಿತ್ಸೆ ಸಂಪೂರ್ಣ ಯಶಸ್ವಿಯಾಗಿದೆ. ಇದನ್ನೂ ಓದಿ: ಜಾತಿ ನಿಂದನೆ ಕೇಸ್‌- ಮುನಿರತ್ನಗೆ ಜಾಮೀನು ಮಂಜೂರು

    ಅವೇಕ್ ಕ್ರೇನಿಯೊಟಮಿ (Awake Craniotomy) ಶಸ್ತ್ರಚಿಕಿತ್ಸೆಗೆ ಹೆಸರಾಗಿರುವ ಸಿದ್ದಗಿರಿ ಆಸ್ಪತ್ರೆ ಹೆಸರುವಾಸಿಯಾಗಿದೆ. ವೈದ್ಯರು ಈ ಹಿಂದೆ ರೋಗಿಗೆ ಐಸ್‌ಕ್ರೀಮ್ ಕೊಟ್ಟು ಆಪರೇಷನ್ ಮಾಡಿದ್ದರು. ವೈದ್ಯರ ತಂಡ ಈವರೆಗೂ ಒಟ್ಟು 103 ಮೆದುಳು ಶಸ್ತ್ರಚಿಕಿತ್ಸೆ ಮಾಡಿದೆ. ವೈದ್ಯರ ಸಾಧನೆಗೆ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಶ್ಲಾಘಿಸಿದ್ದಾರೆ.

    ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ತಾವು ಮಾಡಿದ ಆಪರೇಷನ್ ಕುರಿತು ಡಾ ಶಿವಶಂಕರ್ ಮರಜಕ್ಕೆ ಮಾತನಾಡಿ, ಗಡ್ಡೆ ಬೆಳೆದ ಜಾಗದ ಪಕ್ಕದಲ್ಲಿ ಮಾತ್ರ ಅರಿವಳಿಕೆ ನೀಡಿ ಆಪರೇಷನ್ ಮಾಡಲಾಗಿದೆ. ಕೇವಲ 1.20 ಲಕ್ಷ ರೂ. ನಲ್ಲಿ ಶಸ್ತ್ರಚಿಕಿತ್ಸೆ ಸೇರಿ ಆಸ್ಪತ್ರೆ ಸಂಪೂರ್ಣ ವೆಚ್ಚ ಆಗಿದೆ ಎಂದರು. ಇದನ್ನೂ ಓದಿ: ಶೃಂಗೇರಿ ಬಳಿಕ ಹೊರನಾಡಲ್ಲೂ ಡ್ರೆಸ್‌ಕೋಡ್ ಜಾರಿ – ಅನ್ನಪೂರ್ಣೇಶ್ವರಿ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ

  • ಗಡಿಭಾಗದ ಮಕ್ಕಳನ್ನು ಶಾಲೆಗೆ ಸೆಳೆಯೋಕೆ ಶಿಕ್ಷಕರ ಪ್ಲ್ಯಾನ್‌ – ಸ್ವಂತ ಖರ್ಚಿನಲ್ಲಿ ಎಲ್‌ಕೆಜಿ, ಯುಕೆಜಿ

    ಗಡಿಭಾಗದ ಮಕ್ಕಳನ್ನು ಶಾಲೆಗೆ ಸೆಳೆಯೋಕೆ ಶಿಕ್ಷಕರ ಪ್ಲ್ಯಾನ್‌ – ಸ್ವಂತ ಖರ್ಚಿನಲ್ಲಿ ಎಲ್‌ಕೆಜಿ, ಯುಕೆಜಿ

    – ಸರ್ಕಾರದ ಅನುದಾನವಿಲ್ಲದೇ ಉಚಿತ ಆಂಗ್ಲ ಮಾಧ್ಯಮ ಶಾಲೆ ಶುರು
    – ಖಾಸಗಿ ಶಾಲೆಗಳಿಗೆ ಸರ್ಕಾರಿ ಶಾಲೆ ಶಿಕ್ಷಕರು ಸಡ್ಡು

    ಚಿಕ್ಕೋಡಿ: ಗಡಿಭಾಗದ ಕನ್ನಡ ಮಾಧ್ಯಮ ಸರ್ಕಾರಿ ಶಾಲೆಗಳಲ್ಲಿ (Government School) ದಾಖಲಾತಿ ಕುಸಿಯುತ್ತಿರುವ ಕಾರಣ ಸರ್ಕಾರದ ಅನುದಾನವಿಲ್ಲದೇ ಎಲ್‌ಕೆಜಿ-ಯುಕೆಜಿ (LKG-UKG) ಆರಂಭಿಸುವ ಮೂಲಕ ಶಿಕ್ಷಕರು ಮಾದರಿಯಾಗಿದ್ದಾರೆ.

    ಇತ್ತೀಚಿನ ದಿನಗಳಲ್ಲಿ ಗಡಿಭಾಗದ ಕನ್ನಡ ಮಾಧ್ಯಮ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕುಸಿಯುತ್ತಿದ್ದು, ಇದರಿಂದಾಗಿ ಸರ್ಕಾರಕ್ಕೆ ದಾಖಲಾತಿ ಕಡಿಮೆಯಾಗುತ್ತಿರುವ ಟೆನ್ಶನ್ ಹೆಚ್ಚಾಗುತ್ತಿದೆ. ಇದರ ನಡುವೆಯೂ ಮಕ್ಕಳನ್ನು ಸರ್ಕಾರಿ ಶಾಲೆಗಳತ್ತ ಸೆಳೆಯುವಲ್ಲಿ ಶಿಕ್ಷಕರು (Teachers) ನಿರತರಾಗಿದ್ದು, ಸರಕಾರದ ಅನುದಾನವಿಲ್ಲದೆ ಎಲ್‌ಕೆಜಿ-ಯುಕೆಜಿ ಆರಂಭಿಸುವ ಮೂಲಕ ಮಾದರಿಯಾಗಿದ್ದಾರೆ.ಇದನ್ನೂ ಓದಿ: ಇಂದಿನಿಂದ ಭಾರತ v/s ಬಾಂಗ್ಲಾ ಟೆಸ್ಟ್‌ ಸರಣಿ ಶುರು – ವರ್ಕೌಟ್‌ ಆಗುತ್ತಾ ಗಂಭೀರ್‌ ಪ್ಲ್ಯಾನ್‌?

    ಮಹಾರಾಷ್ಟ್ರ (Maharashtra) ಗಡಿಭಾಗದ ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ (Hukkeri) ತಾಲೂಕಿನ ಗೋಟೂರ (Gotur) ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹಾಜರಾತಿ ಕೊರತೆ ಇತ್ತು. ಹೀಗಾಗಿ ಸರ್ಕಾರದ ಅನುದಾನವಿಲ್ಲದೇ ಇದ್ದರೂ ಶಾಲಾ ಸುಧಾರಣಾ ಸಮಿತಿ ಹಾಗೂ ಶಾಲೆಯ ಶಿಕ್ಷಕರು ಉಚಿತವಾಗಿ ಆಂಗ್ಲ ಮಾಧ್ಯಮದಲ್ಲಿ (English Medium) ಯುಕೆಜಿ – ಎಲ್‌ಕೆಜಿ ತರಗತಿ ಪ್ರಾರಂಭಿಸಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಮಾದರಿಯಲ್ಲಿಯೇ ಶಿಕ್ಷಣ ನೀಡಲು ರೂಪುರೇಷೆ ಹಾಕಿಕೊಂಡಿದ್ದಾರೆ. ಈ ಶಾಲಾ ಮಕ್ಕಳಿಗೆ ಶಿಕ್ಷಕರು ತಮ್ಮ ವೇತನದಲ್ಲಿ ನಿರ್ವಹಣೆ ವೆಚ್ಚ ಭರಿಸಲು ಮುಂದಾಗಿದ್ದಾರೆ. ಜೊತೆಗೆ ಶಾಲೆಗೆ ಮಕ್ಕಳನ್ನು ಕರೆತರಲು, ಬಟ್ಟೆ, ಪುಸ್ತಕವನ್ನು ಶಿಕ್ಷಕರು ತಮ್ಮ ಸಂಬಳದಿಂದಲೇ ಭರಿಸುತ್ತಿದ್ದಾರೆ.

    ವರ್ಷದಿಂದ ವರ್ಷಕ್ಕೆ ದಾಖಲಾತಿ ಕುಸಿಯುತ್ತಿದ್ದು, ಸಾಕಷ್ಟು ಅಭಿಯಾನ ನಡೆಸಿದರೂ ಸಹ ಯಾವುದೇ ಪ್ರಯೋಜನವಾಗುತ್ತಿರಲಿಲ್ಲ. ಇದೀಗ ತಾವು ಕಲಿಸುವ ಶಾಲೆಯ ಬೆಳವಣಿಗೆ ಬಯಸಿರುವ ಶಿಕ್ಷಕರು ಕ್ಷೇತ್ರ ಶಿಕ್ಷಣಾಧಿಕಾರಿ ಅನುಮತಿಯೊಂದಿಗೆ ಸ್ವಂತ ಖರ್ಚಿನಲ್ಲಿಯೇ ಎಲ್‌ಕೆಜಿ -ಯುಕೆಜಿ ತರಗತಿ ಆರಂಭಿಸುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ.

    ಇತ್ತೀಚಿಗೆ ಅಂಗನವಾಡಿಯಲ್ಲಿ ಎಲ್‌ಕೆಜಿ-ಯುಕೆಜಿ ಪ್ರಾರಂಭಿಸಲು ಸರ್ಕಾರ ಚಿಂತನೆ ನಡೆಸಿತ್ತು. ಈ ನಡುವೆಯೇ ಸರ್ಕಾರಿ ಶಾಲಾ ಶಿಕ್ಷಕರು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡಲು ಮುಂದಾಗಿದ್ದಾರೆ. ಖಾಸಗಿ ಶಾಲೆಯ ಮಾದರಿಯಲ್ಲಿಯೇ ಶಿಕ್ಷಣ ಪದ್ದತಿ ಅನುಸರಿಸಿದ್ದು, ಗ್ರಾಮೀಣ ಭಾಗದ ಪೋಷಕರ ಉತ್ಸಾಹಕ್ಕೆ ಕಾರಣವಾಗಿದೆ. ಎಲ್‌ಕೆಜಿ-ಯುಕೆಜಿ ಆರಂಭಿಸುತ್ತಿದ್ದಂತೆ ಇದೇ ವರ್ಷ 40 ಮಕ್ಕಳು ದಾಖಲಾಗಿದ್ದು, ಈ ಸಂಖ್ಯೆ ಮುಂದಿನ ಬಾರಿ ಹೆಚ್ಚಾಗುವ ವಿಶ್ವಾಸವಿದೆ ಎಂದಿದ್ದಾರೆ.ಇದನ್ನೂ ಓದಿ: ಲೋಕಾಯುಕ್ತದಲ್ಲಿ ವಿಚಾರಣೆಗೆ ಬಾಕಿ ಉಳಿದಿವೆ 18 ಸಾವಿರಕ್ಕೂ ಹೆಚ್ಚು ಕೇಸ್‌

    ಸರ್ಕಾರದ ಸಂಬಳ ಸಿಕ್ಕರೆ ಸಾಕು ನಾವು, ನಮ್ಮ ಕುಟುಂಬ ನೆಮ್ಮದಿಯಿಂದ ಇರಬಹುದು ಎನ್ನುವ ಜನರಿಗೆ ಗೋಟೂರ ಸರ್ಕಾರಿ ಶಾಲೆಯ ಶಿಕ್ಷಕರು ತಾವು ಕಲಿಸುತ್ತಿರುವ ಶಾಲೆಯ ಅಭಿವೃದ್ಧಿ ಬಯಸಿರುವುದು, ಇತರರಿಗೆ ಮಾದರಿಯಾಗಿದೆ.

  • ಬೆಳಗಾವಿ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ – ಪರಿಸ್ಥಿತಿ ಉದ್ವಿಗ್ನ

    ಬೆಳಗಾವಿ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ – ಪರಿಸ್ಥಿತಿ ಉದ್ವಿಗ್ನ

    -ಡ್ಯಾನ್ಸ್ ಮಾಡುವಾಗ ಕಾಲು ತಾಕಿದ್ದಕ್ಕೆ ಕಿರಿಕ್

    ಬೆಳಗಾವಿ: ಗಣೇಶ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿದಿರುವ ಘಟನೆ ನಗರದ ಚೆನ್ನಮ್ಮ ವೃತ್ತದ (Chennamma Circle) ಬಳಿ ನಡೆದಿದೆ.

    ಗಾಯಾಳುಗಳನ್ನು ಸಮಾಜ ಕಲ್ಯಾಣ ವಸತಿ ನಿಲಯದ ವಿದ್ಯಾರ್ಥಿಗಳಾದ ಪ್ರವೀಣ್ ಗುಂಡ್ಯಾಗೋಳ್, ದರ್ಶನ್ ಪಾಟೀಲ್ ಮತ್ತು ಸತೀಶ್ ಪೂಜಾರಿ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಕಿಡಿಗೇಡಿಗಳ ಅಟ್ಟಹಾಸಕ್ಕೆ ನಲುಗಿದ ನಾಗಮಂಗಲ – ಬೀದಿ ಪಾಲಾದ ಬದುಕು.. ಒಟ್ಟು 2.66 ಕೋಟಿ ನಷ್ಟ!

    ಘಟನೆ ಸಂಬಂಧ ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ (Iada Martin) ಮಾಹಿತಿ ನೀಡಿದ್ದಾರೆ. ಪ್ರವೀಣ್ ಗುಂಡ್ಯಾಗೋಳ್ ಎಂಬವರ ಸ್ಥಿತಿ ಗಂಭೀರವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ ಇಬ್ಬರಿಗೆ ಬಿಮ್ಸ್ ಆಸ್ಪತ್ರೆಯಲ್ಲಿ (BIMS) ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

    ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಈ ಘಟನೆ ನಡೆದಿದ್ದು, ಡ್ಯಾನ್ಸ್ ಮಾಡುವಾಗ ಕಾಲು ತಾಕಿದ್ದಕ್ಕೆ ಹುಡುಗರು ಕಿರಿಕ್ ಮಾಡಿಕೊಂಡಿದ್ದರು. ಬಳಿಕ ಮೆರವಣಿಗೆಯಿಂದ ಹೊರಬಂದು ಗಲಾಟೆ ಮಾಡಿದ್ದಾರೆ. ಈ ವೇಳೆ ಯುವಕರ ಗ್ಯಾಂಗ್‌ವೊಂದು ಮೂವರು ಹಾಸ್ಟೆಲ್ ವಿದ್ಯಾರ್ಥಿಗಳ ಹೊಟ್ಟೆ, ಬೆನ್ನು, ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಇರಿದು, ಸ್ಥಳದಿಂದ ಪಾರಾಗಿದ್ದಾರೆ.ಇದನ್ನೂ ಓದಿ: ಜಮ್ಮು-ಕಾಶ್ಮೀರ: ದಶಕದ ಮೊದಲ ವಿಧಾನಸಭಾ ಚುನಾವಣೆಗೆ ಇಂದು ಮತದಾನ

    ಬೈಕ್‌ನಲ್ಲಿ ಪಾರಾಗುತ್ತಿದ್ದ ಯುವಕರನ್ನು ಸಿಪಿಐ ವಿಶ್ವನಾಥ್ ಕಬ್ಬೂರ ಮತ್ತು ಇತರ ಸಿಬ್ಬಂದಿ ಸೆರೆಹಿಡಿದಿದ್ದಾರೆ. ಪೊಲೀಸರ ತನಿಖೆಯ ಬಳಿಕ ಚರ್ಚ್ ಗಲ್ಲಿಯ ಯುವಕರ ಗ್ಯಾಂಗ್ ಈ ಕೃತ್ಯ ಎಸಗಿದ್ದು, ವೈಯಕ್ತಿಕ ಕಾರಣದಿಂದ ಚಾಕು ಇರಿದಿದ್ದಾರೆ. ಗಾಂಜಾ ಮತ್ತಿನಲ್ಲಿ ಚಾಕು ಇರಿದಿದ್ದಾರೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಉಳಿದವರ ಬಗ್ಗೆಯೂ ಮಾಹಿತಿ ಸಿಕ್ಕಿದೆ. ಶೀಘ್ರ ಬಂಧಿಸುತ್ತೇವೆ ಎಂದು ತಿಳಿಸಿದ್ದಾರೆ.

  • ಕೆಲವೇ ದಿನಗಳಲ್ಲಿ ಬೆಳಗಾವಿಗೆ ಮತ್ತೊಂದು ರೈಲು: ವಿ.ಸೋಮಣ್ಣ

    ಕೆಲವೇ ದಿನಗಳಲ್ಲಿ ಬೆಳಗಾವಿಗೆ ಮತ್ತೊಂದು ರೈಲು: ವಿ.ಸೋಮಣ್ಣ

    ಬೆಳಗಾವಿ: ಜಿಲ್ಲೆಯಲ್ಲಿ ಇಂದು ವಂದೇ ಭಾರತ್ ರೈಲು (Vandre Bharat Train) ಉದ್ಘಾಟನೆ ಮಾಡುತ್ತೇನೆ. ಕೆಲ ದಿನಗಳ ನಂತರ ಮತ್ತೊಂದು ರೈಲು ಬೆಳಗಾವಿಗೆ ಬರಲಿದೆ ಎಂದು ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ (V Somanna) ಹೇಳಿದರು.

    ಉದ್ಘಾಟನೆಗೂ ಮುನ್ನ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) 7 ರೈಲು ಉದ್ಘಾಟನಾ ಮಾಡಲಿದ್ದಾರೆ. ಸಂಜೆ ನಾಲ್ಕು ಗಂಟೆಗೆ ಕೊಲ್ಹಾಪುರ-ಪುಣೆ ರೈಲು ಉದ್ಘಾಟನೆ ಮಾಡುತ್ತೇನೆ. ಬೆಳಗಾವಿಯಲ್ಲಿ ಪುಣೆಯಿಂದ ವಂದೇ ಭಾರತ್ ರೈಲು ರಿಸಿವ್ ಮಾಡುತ್ತೇನೆ ಎಂದರು.ಇದನ್ನೂ ಓದಿ: ಮಲೆನಾಡು ಸ್ಲೀಪರ್ ಸೆಲ್‌ಗಳ ತಾಣವಾಗ್ತಿದೆ – ಭಯೋತ್ಪಾದಕ ಕೃತ್ಯ ಎಸಗಲು ಇಲ್ಲಿ ತರಬೇತಿ ನೀಡಲಾಗ್ತಿದೆ: ಸಿ.ಟಿ ರವಿ ಬಾಂಬ್‌

    ತಾಂತ್ರಿಕ ಸಮಸ್ಯೆ ನೆಪವೊಡ್ಡಿ ಬೆಳಗಾವಿ- ಬೆಂಗಳೂರು ವಂದೇ ಭಾರತ್ ರೈಲು ತಡೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು ಈಗ ಬೆಳಗಾವಿಗೆ ಮಂಜೂರಾಗಿದ್ದ ವಂದೇ ಭಾರತ್ ರೈಲು ಹುಬ್ಬಳ್ಳಿಗೆ ವಿಸ್ತರಣೆ ಮಾಡಲಾಗಿದೆ. ನಾನು ಬಂದು ಮೂರು ತಿಂಗಳು ಆಗಿದೆ. ಹಳೆಯದನ್ನು ಕೆದಕಿ ಕೆಲಸ ಮಾಡಲು ಆಗಲ್ಲ. ಬೆಳಗಾವಿಗೆ ಇಂದು ವಂದೇ ಭಾರತ್ ರೈಲು ಉದ್ಘಾಟನಾ ಮಾಡುತ್ತೇನೆ. ಕೆಲ ದಿನಗಳಲ್ಲಿ ಮತ್ತೊಂದು ರೈಲು ಬೆಳಗಾವಿಗೆ ಬರಲಿದೆ ಎಂದಿದ್ದಾರೆ.ಇದನ್ನೂ ಓದಿ: ಶಾಲೆಯಿಂದ ಮರಳುವಾಗ 5ನೇ ತರಗತಿ ಬಾಲಕಿ ಮೇಲೆ ಗ್ಯಾಂಗ್ ರೇಪ್

    ಇದಾದ ಬಳಿಕ ಬೆಂಗಳೂರು-ಬೆಳಗಾವಿ ವಂದೇ ಭಾರತ್ ಬಗ್ಗೆ ಚರ್ಚೆ ಮಾಡಿದ್ದೀವಿ. ಹಿಂದೆ ಏನಾಗಿದೆ ಎಂಬುದು ನನಗೆ ಗೊತ್ತಿಲ್ಲ. ಮೋದಿಯವರು ಹಳೆಯದು ಏನಾಯಿತು ಎಂದು ಕೆದಕಬಾರದು ಎಂದು ಮನವರಿಕೆ ಮಾಡಿದ್ದಾರೆ ಎಂದು ಸಮಜಾಯಿಷಿ ನೀಡಿದರು. ದಿ.ಸುರೇಶ ಅಂಗಡಿ ಇದ್ದ ಸಂದರ್ಭದಲ್ಲಿ ಬೆಳಗಾವಿ- ಹುಬ್ಬಳ್ಳಿ ನೇರ ರೈಲು ವಿಚಾರ ಮಾತನಾಡಿದ್ದಾರೆ. ನೇರ ರೈಲು ಮಾಡಲು ಎಲ್ಲಾ ವ್ಯವಸ್ಥೆ ಮಾಡುತ್ತೇವೆ ಎಂದಿದ್ದಾರೆ.

    ಬೆಳಗಾವಿ-ಮುಂಬೈಗೆ ನೇರ ರೈಲು ವಿಚಾರವಾಗಿ ಮಾತನಾಡಿ, ಈ ಬಗ್ಗೆ ಕುಳಿತು ಮಾತನಾಡೋಣ. ಜನ ಸಾಮಾನ್ಯರಿಗೆ ಅನುಕೂಲಕ್ಕೆ ಏನು ಬೇಕು ಎಲ್ಲವನ್ನು ಮಾಡುತ್ತೇವೆ. ಸವದತ್ತಿ-ಬೆಳಗಾವಿಗೆ ರೈಲು ಬಿಡುವ ವಿಚಾರ ಈ ಬಗ್ಗೆ ಸಂಸದ ಜಗದೀಶ್ ಶೆಟ್ಟರ್ ಚರ್ಚೆ ಮಾಡಿದ್ದರು. ಸರ್ವೇ ಕಾರ್ಯ ಮಾಡಲು ಸೂಚನೆ ನೀಡಿದ್ದೇನೆ. ಸರ್ವೇ ವರದಿ ಬಂದ ಮೇಲೆ ಕ್ರಮ ವಹಿಸುತ್ತೇವೆ ಎಂದು ತಿಳಿಸಿದರು.

  • ಚಿಕ್ಕೋಡಿ| 8 ವಾಹನಗಳ ಮಧ್ಯೆ ಭೀಕರ ಸರಣಿ ಅಪಘಾತ – ಇಬ್ಬರ ದುರ್ಮರಣ, 6 ಮಂದಿ ಗಂಭೀರ

    ಚಿಕ್ಕೋಡಿ| 8 ವಾಹನಗಳ ಮಧ್ಯೆ ಭೀಕರ ಸರಣಿ ಅಪಘಾತ – ಇಬ್ಬರ ದುರ್ಮರಣ, 6 ಮಂದಿ ಗಂಭೀರ

    ಚಿಕ್ಕೋಡಿ: 8 ವಾಹನಗಳ ಮಧ್ಯೆ ಭೀಕರ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 6 ಮಂದಿ ಗಂಭೀರ ಗಾಯಗೊಂಡ ಘಟನೆ ಬೆಳಗಾವಿ (Belagavi) ಜಿಲ್ಲೆಯ ನಿಪ್ಪಾಣಿ (Nippani) ತಾಲೂಕಿನ ಸ್ಥವನಿಧಿ ಘಾಟ್ ಬಳಿ ನಡೆದಿದೆ.

    ಕಂಟೇನರ್ ವಾಹನದ ಚಾಲಕನ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಕಂಟೇನರ್ ಮೂರು ಕಾರು, ಎರಡು ಲಾರಿ, ಒಂದು ಕಂಟೇನರ್ ಹಾಗೂ ಬೈಕ್‌ಗೆ ಗುದ್ದಿದ ಪರಿಣಾಮ ಒಬ್ಬ ಬೈಕ್ ಸವಾರ ಹಾಗೂ ಕಾರಿನಲ್ಲಿದ್ದ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಗದಗ: ಮಾನವ ಸರಪಳಿ ವೇಳೆ ಜನರ ಮೇಲೆ ಹೆಜ್ಜೇನು ದಾಳಿ – ಸ್ಥಳದಿಂದ ಚದುರಿದ ಜನ

    ಘಟನೆಯಲ್ಲಿ ಗಂಭೀರ ಗಾಯಗೊಂಡವರಿಗೆ ನಿಪ್ಪಾಣಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ನಿಪ್ಪಾಣಿ ಶಹರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿಪ್ಪಾಣಿ ಶಹರ ಪೊಲೀಸ್ ಠಾಣಾ ವ್ತಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ತುಮಕೂರು| ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಮೂವರ ದಾರುಣ ಸಾವು

  • ದೂದ್ ಸಾಗರ್ ಬಳಿ ಹಳಿ ತಪ್ಪಿದ ರೈಲು – ಮಾರ್ಗ ಬದಲು

    ದೂದ್ ಸಾಗರ್ ಬಳಿ ಹಳಿ ತಪ್ಪಿದ ರೈಲು – ಮಾರ್ಗ ಬದಲು

    ಬೆಳಗಾವಿ: ವಾಸ್ಕೋದಿಂದ ಬಳ್ಳಾರಿಗೆ (Ballary) ಕಲ್ಲಿದ್ದಲು ತುಂಬಿಕೊಂಡು ತೆರಳುತ್ತಿದ್ದ ಗೂಡ್ಸ್ ರೈಲಿನ (Goods Train) ವ್ಯಾಗನ್ ಗುರುವಾರ ಮಧ್ಯಾಹ್ನ ದೂದ್ ಸಾಗರ್ (Dudhsagar) ಬಳಿ ಹಳಿತಪ್ಪಿದ್ದು, ಕೆಲವು ರೈಲುಗಳು ಮಾರ್ಗ ಬದಲಾವಣೆ ಮಾಡಲಾಗಿದೆ. ಇನ್ನು ಕೆಲವೊಂದನ್ನು ಸ್ಥಗಿತಗೊಳಿಸಲಾಗಿದೆ.

    ಹುಬ್ಬಳ್ಳಿ ವಿಭಾಗದ ಸೋನಾಲಿಯಂ ಮತ್ತು ದೂದ್ ಸಾಗರ ನಿಲ್ದಾಣಗಳ ನಡುವೆ ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಗೂಡ್ಸ್ ರೈಲಿನ ವ್ಯಾಗನ್ ಹಳಿತಪ್ಪಿದೆ.ಇದನ್ನೂ ಓದಿ: ಪತಿಯಿಂದಲೇ ಮಿಸ್ ಸ್ವಿಜರ್ಲೆಂಡ್ ಹತ್ಯೆ: ಕೊಲೆ ಬಳಿಕ ಬ್ಲೆಂಡರ್ ಬಳಸಿ ಮೃತದೇಹ ಪೀಸ್ ಪೀಸ್

    ಈ ಘಟನೆಯಿಂದಾಗಿ ಮಧ್ಯಾಹ್ನ ಗೋವಾಗೆ ತೆರಳುತ್ತಿದ್ದ ಅಮರಾವತಿ ಎಕ್ಸ್ಪ್ರೆಸ್ (Amaravati Express) ರೈಲು ಕರಂಜೋಳ್‌ವರೆಗೆ ತೆರಳಿ ಪುನಃ ಲೋಂಡಾವರೆಗೆ ವಾಪಸ್ ತಂದು ಪ್ರಯಾಣಿಕರನ್ನು ಅಲ್ಲಿಯೇ ಬಿಟ್ಟು ಬಸ್ ಮೂಲಕ ತೆರಳಲು ವ್ಯವಸ್ಥೆ ಮಾಡಿದೆ ಎನ್ನಲಾಗಿದೆ.

    ಇನ್ನು ರೈಲು ಸಂಖ್ಯೆ 12779 ವಾಸ್ಕೋ ಡ ಗಾಮಾ – ಹಜರತ್ ನಿಜಾಮುದ್ದೀನ್ ಎಕ್ಸ್ಪ್ರೆಸ್ ಪ್ರಯಾಣವನ್ನು ಮಡಗಾಂವ್, ರೋಹಾ, ಪನ್ವೆಲ್, ಪುಣೆ, ದೌಂಡ್ ಕಾರ್ಡ್ ಲೈನ್ ಮತ್ತು ಮನ್ಮಾಡ್ ನಿಲ್ದಾಣಗಳ ಮೂಲಕ ತಿರುಗಿಸಲಾಗಿದೆ.

    18048 ವಾಸ್ಕೋ ಡ ಗಾಮಾ (Vasco da Gama)- ಶಾಲಿಮಾರ್ ಎಕ್ಸ್ಪ್ರೆಸ್ ಪ್ರಯಾಣವು ವಾಸ್ಕೋ ಡ ಗಾಮಾ ಬದಲಿಗೆ ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಹೊರಡಲಿದ್ದು, ವಾಸ್ಕೋ ಡ ಗಾಮಾ – ಎಸ್‌ಎಸ್‌ಎಸ್ ಹುಬ್ಬಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ.ಇದನ್ನೂ ಓದಿ: Nagamangala Violence | 52 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

    ಪ್ರಯಾಣಿಕರ ಸೌಕರ್ಯವನ್ನು ಖಚಿತಪಡಿಸಿಕೊಳ್ಳಲು, ಲೋಂಡಾ ನಿಲ್ದಾಣದಲ್ಲಿ ರೈಲು ಸಂಖ್ಯೆ 18047ರ ಅಂದಾಜು 1,100 ಪ್ರಯಾಣಿಕರಿಗೆ ಆಹಾರ ಮತ್ತು ನೀರಿನ ವ್ಯವಸ್ಥೆ ಮಾಡಲಾಗಿದೆ. ಲೋಂಡಾದಲ್ಲಿಯೇ ಸಿಲುಕಿರುವ ಪ್ರಯಾಣಿಕರನ್ನು ಕರೆದೊಯ್ಯಲು 25 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಪ್ರಯಾಣ ಪುನಃಸ್ಥಾಪನೆ ತ್ವರಿತಗೊಳಿಸಲು ಅಪಘಾತ ಪರಿಹಾರ ರೈಲನ್ನು ವಾಸ್ಕೋ ಡ ಗಾಮಾದಿಂದ ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

  • ಸಿದ್ದರಾಮಯ್ಯ ಎಲ್ಲಿಯವರೆಗೆ ಇರ್ತಾರೋ ಅಲ್ಲಿಯವರೆಗೆ ಅವರೇ ಮುಖ್ಯಮಂತ್ರಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

    ಸಿದ್ದರಾಮಯ್ಯ ಎಲ್ಲಿಯವರೆಗೆ ಇರ್ತಾರೋ ಅಲ್ಲಿಯವರೆಗೆ ಅವರೇ ಮುಖ್ಯಮಂತ್ರಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

    ಬೆಳಗಾವಿ: ಮುಖ್ಯಮಂತ್ರಿ ಯಾರಾಗಬೇಕು ಎಂಬುದು ಹಾದಿ, ಬೀದಿಯಲ್ಲಿ ಚರ್ಚೆ ಮಾಡುವಂತಹದಲ್ಲ. ಧೀಮಂತ ಮತ್ತು ಗಟ್ಟಿ ನಾಯಕತ್ವ ಸಿದ್ದರಾಮಯ್ಯನವರಿಗೆ (CM Siddaramaiah) ಇದೆ. ಹಾಗಾಗಿ, ಅವರು ಎಲ್ಲಿಯವರೆಗೆ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎನ್ನುತ್ತಾರೋ, ಅಲ್ಲಿಯವರೆಗೆ ನಮ್ಮ ಶಾಸಕರ ಬೆಂಬಲ ಇರುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalakr) ಹೇಳಿದರು.

    ರಾಜ್ಯದ ಮೊದಲ ಮಹಿಳಾ ಮುಖ್ಯಮಂತ್ರಿ ತಾವಾಗಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭವಾಗಿರುವ ಕುರಿತು ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಅವರು, ಸದ್ಯಕ್ಕೆ ಆ ಚರ್ಚೆ ಎಲ್ಲಾ ನಗಣ್ಯ. ಮುಡಾ ಹಗರಣದಲ್ಲಿ (MUDA Scam) ಬಿಜೆಪಿಯವರು ಸುಳ್ಳು ದಾಖಲೆ ಹುಟ್ಟಿಸಿ ಏನೋ ಮಾಡುತ್ತಿದ್ದಾರೆ. ಇಂಥ ಪ್ರಸ್ತುತ ರಾಜಕೀಯ ಪರಿಸ್ಥಿತಿಯಲ್ಲಿ, 135 ಶಾಸಕರು ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ಗಟ್ಟಿಯಾಗಿ ನಿಂತ ಸಂದರ್ಭದಲ್ಲಿ, ಇದೆಲ್ಲಾ ಬಾಲಿಷ. ಈ ವಿಚಾರದಲ್ಲಿ ನಾನು ಹೆಚ್ಚಿಗೆ ಏನೂ ಮಾತನಾಡುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಗೋಕರ್ಣ ಬೀಚ್‌ನಲ್ಲಿ ಮುಳುಗಿ ಬೆಂಗ್ಳೂರಿನ ಯುವಕ ದುರ್ಮರಣ – ಐವರು ಅಸ್ವಸ್ಥ

    ನಾವೂ ಸಿಎಂ ಸ್ಥಾನದ ಆಕಾಂಕ್ಷಿ ಎಂಬ ‘ಕೈ’ ನಾಯಕರ ಹೇಳಿಕೆ ಬಗ್ಗೆ ಮಾತನಾಡಿ, ನಾನು ಓರ್ವ ಜವಾಬ್ದಾರಿಯುತ ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೇಳುತ್ತಿದ್ದೇನೆ. ನಮ್ಮದು ಶಿಸ್ತಿನ ಪಕ್ಷ. ಪಕ್ಷದ ಹೈಕಮಾಂಡ್ ಮತ್ತು ಶಾಸಕರು ಇದನ್ನು ನಿರ್ಣಯಿಸುತ್ತಾರೆ. ಅಲ್ಲಿ, ಇಲ್ಲಿ, ಗಲ್ಲಿಯಲ್ಲಿ ಮಾತನಾಡುವ ವಿಷಯಗಳು ಇವಲ್ಲ ಎಂದು ಪರೋಕ್ಷವಾಗಿ ತಮ್ಮದೇ ನಾಯಕರಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಟಾಂಗ್ ಕೊಟ್ಟರು. ಇದನ್ನೂ ಓದಿ: ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ: ಸಿದ್ದರಾಮಯ್ಯ

    ಧೀಮಂತ ಮತ್ತು ಗಟ್ಟಿ ನಾಯಕತ್ವ ನಮಗಿದೆ. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರ ಬಹಳ ಒಳ್ಳೆಯ ಕೆಲಸ ಮಾಡುತ್ತಿದೆ. ನಾವೆಲ್ಲಾ ಅವರ ಜೊತೆಗಿದ್ದೇವೆ. ಬೇರೆ ಏನೇ ಇದ್ದರೂ ಅದನ್ನು ಹೈಕಮಾಂಡ್ ವಿಚಾರ ಮಾಡುತ್ತದೆ. ಎಲ್ಲಿಯವರೆಗೆ ಹೈಕಮಾಂಡ್ ಸಿದ್ದರಾಮಯ್ಯ ಅವರೇ ರಾಜ್ಯದ ಮುಖ್ಯಮಂತ್ರಿಯಾಗಿ ಇರಬೇಕು ಎಂದು ಬಯಸುತ್ತದೆಯೋ, ಅಲ್ಲಿಯವರೆಗೆ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ಸಿದ್ದರಾಮಯ್ಯ ಪರ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದರು. ಇದನ್ನೂ ಓದಿ: ಯಾವುದೇ ಬೆಂಬಲವನ್ನು ನೀಡಿಲ್ಲ- ಪಿ.ಟಿ.ಉಷಾ ವಿರುದ್ಧ ಫೋಟೋ ಕ್ಲಿಕ್ಕಿಸಿದ ಬಗ್ಗೆ ಫೋಗಟ್ ಕಿಡಿ

  • ಸಿಎಂ ರೇಸ್‌ನಲ್ಲಿ ಯಾರೂ ಇಲ್ಲ, ಸಿದ್ದರಾಮಯ್ಯನವರೇ ಮುಂದುವರಿಯುತ್ತಾರೆ: ದಿನೇಶ್ ಗುಂಡೂರಾವ್

    ಸಿಎಂ ರೇಸ್‌ನಲ್ಲಿ ಯಾರೂ ಇಲ್ಲ, ಸಿದ್ದರಾಮಯ್ಯನವರೇ ಮುಂದುವರಿಯುತ್ತಾರೆ: ದಿನೇಶ್ ಗುಂಡೂರಾವ್

    ಬೆಳಗಾವಿ: ಸಿದ್ದರಾಮಯ್ಯನವರೇ (CM Siddaramaiah) ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಮುಖ್ಯಮಂತ್ರಿ ರೇಸ್‌ನಲ್ಲಿ ಯಾರೂ ಇಲ್ಲವೇ ಇಲ್ಲಾ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ಹೇಳಿಕೆ ನೀಡಿದ್ದಾರೆ.

    ದೀಪಾವಳಿ ನಂತರ ಕಾಂಗ್ರೆಸ್ (Congress) ಸರ್ಕಾರ ಪತನ ಆಗುತ್ತೆ ಎಂಬ ಬಿಜೆಪಿ (BJP) ನಾಯಕರ ಹೇಳಿಕೆ ವಿಚಾರಕ್ಕೆ ಬೆಳಗಾವಿಯಲ್ಲಿ (Belagavi) ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರಿಗೆ ಸ್ಥಿರ ಸರ್ಕಾರವನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಸರ್ಕಾರ ಅಸ್ಥಿರ ಮಾಡುವುದು, ಸರ್ಕಾರ ಬೀಳಿಸುವುದು, ಸರ್ಕಾರ ಒಡೆಯುವುದು, ಆಪರೇಷನ್ ಮಾಡುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರದವರಿಗೆ ಇದೇ ಕೆಲಸ ಆಗಿದೆ. ಸರ್ಕಾರ ಬೀಳಿಸುವುದೇ ಒಂದೇ ಅವರ ಕಾರ್ಯಕ್ರಮ ಆಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: Mysuru| ಕಲುಷಿತ ನೀರು ಸೇವನೆ ಶಂಕೆ- ಓರ್ವ ಸಾವು, 12 ಜನ ಅಸ್ವಸ್ಥ

    ನಾಳೆ ಸಿಎಂ ಭವಿಷ್ಯ ನಿರ್ಧಾರ ಆಗುತ್ತಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಆಗುವುದಿಲ್ಲ. ಸಿಎಂ ಅವರ ಭವಿಷ್ಯವನ್ನು ನಿರ್ಧರಿಸುವ ಪ್ರಶ್ನೆಯಿಲ್ಲ. ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ. ಸಿಎಂ ರೇಸ್‌ನಲ್ಲಿ ಯಾರು ಇಲ್ಲ ಎಂದು ಸಮರ್ಥಿಸಿಕೊಂಡರು. ಇದನ್ನೂ ಓದಿ: ರಾಯಚೂರು| ತರಗತಿಯಲ್ಲಿ ಲೋ ಬಿಪಿಯಿಂದ ಕುಸಿದು ಬಿದ್ದ ವಿದ್ಯಾರ್ಥಿ – ಹೃದಯಾಘಾತದಿಂದ ಸಾವು

    ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಭ್ರಷ್ಟ ಸಿಎಂ, ಭ್ರಷ್ಟ ಸಿಎಂ ಆಕಾಂಕ್ಷಿಗಳು ಎಂದು ಪೋಸ್ಟ್ ಹಾಕಿರುವ ಕುರಿತು, ಅವರ ಸೋಷಿಯಲ್ ಮೀಡಿಯಾದಲ್ಲಿ ಏನೇನೂ ಹಾಕಿರುತ್ತಾರೆ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ದೇಶದಲ್ಲಿ ನಂಬರ್ ಒನ್ ಅಲ್ವಾ? ಸುಳ್ಳು ಸುದ್ದಿ ಪ್ರಚೋದನೆ ಮಾಡುವುದರಲ್ಲಿ ಬಿಜೆಪಿಯವರು ದೇಶದಲ್ಲಿ ನಂಬರ್ ಒನ್ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಅತ್ಯಾಚಾರ ಕೇಸ್‌ – ಪ್ರಜ್ವಲ್‌ ರೇವಣ್ಣಗೆ ಸೀರೆ ಸಂಕಷ್ಟ!

    ಕೋರ್ಟಿನಲ್ಲಿ ಯಾವುದೇ ರೀತಿ ವ್ಯತಿರಿಕ್ತವಾದ ತೀರ್ಮಾನ ಬರುವುದಿಲ್ಲ. ಕೋರ್ಟ್ನಲ್ಲಿ ರಾಜ್ಯಪಾಲರು ತನಿಖೆಗೆ ಕೊಟ್ಟಿರುವುದು ಸರಿಯೋ ಇಲ್ಲವೋ ಅಷ್ಟೇ ಇರೋದು. ಅವರು ತಪ್ಪು ಮಾಡಿದ್ದಾರೆ ಎನ್ನುವುದು ಇಲ್ಲ. ನಮ್ಮ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಯಾವುದೇ ಅಧಿಕಾರದ ದುರುಪಯೋಗವು ಮಾಡಿಲ್ಲ ಎಂದು ಸಮಜಾಯಿಷಿ ನೀಡಿದರು. ಇದನ್ನೂ ಓದಿ: ಇನ್‌ಸ್ಟಾದಲ್ಲಿ ತಲಾಕ್ ಕೊಟ್ಟಿದ್ದ ದುಬೈ ರಾಜಕುಮಾರಿಯಿಂದ `ಡಿವೋರ್ಸ್’ ಪರ್ಫ್ಯೂಮ್ ಬಿಡುಗಡೆ

    ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಕುಮಾರಸ್ವಾಮಿ, ಜೊಲ್ಲೆ, ನಿರಾಣಿ ಮೇಲೆ ಇರುವ ಭ್ರಷ್ಟಾಚಾರದ ಕುರಿತ ಅರ್ಜಿ ರಾಜ್ಯಪಾಲರ ಕಚೇರಿಯಲ್ಲಿ ತಿಂಗಳುಗಟ್ಟಲೇ ಹಾಗೇ ಬಿದ್ದಿದೆ. ರಾಜ್ಯಪಾಲರು ಇವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಇವಾಗ ಸಿಎಂ ವಿರುದ್ಧ ಖಾಸಗಿ ದೂರು ಬಂದ ತಕ್ಷಣವೇ ನೋಟಿಸ್ ಕೊಟ್ಟಿದ್ದಾರೆ. ಇದರಲ್ಲಿ ರಾಜ್ಯಪಾಲರ ಮನಸ್ಥಿತಿ ಮತ್ತು ಪಕ್ಷಪಾತ ಮಾಡುತ್ತಿರುವುದು ಗೊತ್ತಾಗುತ್ತದೆ ಎಂದು ಹರಿಹಾಯ್ದರು. ಇದನ್ನೂ ಓದಿ: ಗಣೇಶೋತ್ಸವದಲ್ಲಿ ಡ್ಯಾನ್ಸ್ ಮಾಡಿದ್ದು ಸಾಕು, ಮನೆಗೆ ಬಾ ಅಂದಿದ್ದಕ್ಕೆ ಯುವಕ ಆತ್ಮಹತ್ಯೆ

    ಸಿಎಂ ಸಿದ್ದರಾಮಯ್ಯ ಮೇಲೆ ಯಾವುದೇ ದೋಷ ಇಲ್ಲವೇ ಇಲ್ಲ. ರಾಜ್ಯಪಾಲರು ತನಿಖೆಗೆ ಕೊಟ್ಟಿರುವ ಅನುಮತಿ ಸರಿಯೋ ತಪ್ಪೋ ಅನ್ನೋದು ಅಷ್ಟೇ ಕೋರ್ಟ್ ಮುಂದೆ ಇರೋದು. ಕೋರ್ಟ್ನಲ್ಲಿ ಸಿಎಂ ತಪ್ಪು ಮಾಡಿದ್ದಾರೆ ಅನ್ನೋದು ಇಲ್ಲವೇ ಇಲ್ಲ ಎಂದು ಪುನರುಚ್ಛರಿಸಿದರು.

    ಇಂದು ಖಾನಾಪುರದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟಿಸುತ್ತಿದ್ದೇನೆ. ಗೋಕಾಕ್‌ನಲ್ಲಿ ಆಸ್ಪತ್ರೆ ಕಾಮಗಾರಿ ಪರಿಶೀಲಿಸಲಿದ್ದೇನೆ. ಆರೋಗ್ಯ ಇಲಾಖೆಯಲ್ಲಿ ವೈದ್ಯರ ಕೊರತೆಯಿದೆ. ವೈದ್ಯರ ಕೊರತೆ ನಿವಾರಿಸಲು ಪ್ರಯತ್ನಿಸುತ್ತಿದ್ದೇನೆ. ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡುತ್ತಿದ್ದೇವೆ. ನಿರೀಕ್ಷಿತ ಪ್ರಮಾಣದಲ್ಲಿ ತಜ್ಞ ವೈದ್ಯರು ಬರುತ್ತಿಲ್ಲ. ನಕಲಿ ವೈದರು ಎಲ್ಲಾ ಕಡೆಯಿದ್ದಾರೆ. ನಕಲಿ ವೈದ್ಯರ ವಿರುದ್ಧ ಕಾನೂನು ರೀತಿ ಮುಲಾಜಿಲ್ಲದೇ ಕ್ರಮ ಜರುಗಿಸಲು ಹೇಳಿದ್ದೇನೆ. ನಕಲಿ ವೈದ್ಯರ ವಿರುದ್ಧ ಕಾನೂನು ಕ್ರಮ ಆಗಲಿದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಅಮೃತ್ ಯೋಜನೆ ಉಲ್ಲೇಖಿಸಿ ರಾಜಮನೆತನಕ್ಕೆ ಟಾಂಗ್‌ ನೀಡಿ ಚಾಮುಂಡಿ ಬೆಟ್ಟ ಪ್ರಾಧಿಕಾರ ಪರ ಪ್ರತಾಪ್ ಸಿಂಹ ಬ್ಯಾಟಿಂಗ್‌

  • ಮುಡಾ, ವಾಲ್ಮೀಕಿ ಹಗರಣದಲ್ಲಿ ಸರ್ಕಾರ ಮುಳುಗಿ ಹೋಗಿದೆ: ಜಗದೀಶ ಶೆಟ್ಟರ್

    ಮುಡಾ, ವಾಲ್ಮೀಕಿ ಹಗರಣದಲ್ಲಿ ಸರ್ಕಾರ ಮುಳುಗಿ ಹೋಗಿದೆ: ಜಗದೀಶ ಶೆಟ್ಟರ್

    ಬೆಳಗಾವಿ: ರಾಜ್ಯದಲ್ಲಿ ಮುಡಾ, ವಾಲ್ಮೀಕಿ ಹಗರಣದಲ್ಲಿ ಸರ್ಕಾರ ಮುಳುಗಿ ಹೋಗಿದೆ. ಇದರಿಂದ ಕಾಂಗ್ರೆಸ್ ರಾಜ್ಯದಲ್ಲಿ ನಿರ್ಣಾಮವಾಗಲಿದೆ. ರಾಜ್ಯ ಸರಕಾರ ತನ್ನ ತಪ್ಪಿನಿಂದ ಪತನಗೊಳ್ಳಲಿದೆ ಎಂದು ಸಂಸದ ಜಗದೀಶ ಶೆಟ್ಟರ್ (Jagadish Shettar) ಭವಿಷ್ಯ ನುಡಿದರು.

    ಬೆಳಗಾವಿಯಲ್ಲಿ (Belagavi) ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ನಡೆದಿದೆ. ಇಲ್ಲಿಯವರೆಗೂ ಒಳಗಡೆ ನಡೆಯುತ್ತಿದ್ದ ಚರ್ಚೆ ಈಗ ಬಹಿರಂಗವಾಗಿ ನಡೆಯುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ ಕೇಂದ್ರ ಸರ್ಕಾರದ ವೈಫಲ್ಯ: ಶಾಸಕ ರಂಗನಾಥ್

    ಒಳಗಡೆ ನಾವು ಸಿದ್ದರಾಮಯ್ಯ (CM Siddaramaiah) ಅವರ ಪರವಾಗಿದ್ದೇವೆ. ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ಸಚಿವರು, ಕಾಂಗ್ರೆಸ್ ನಾಯಕರು ಹೇಳಿಕೆ ನೀಡುತ್ತಿದ್ದಾರೆ. ಆದರೆ ತೆರೆಮರೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾತು ಜೋರಾಗಿ ನಡೆಯುತ್ತಿದೆ. ರಾಜ್ಯದಲ್ಲಿ ಈಗ ಹತ್ತಾರು ಮುಖ್ಯಮಂತ್ರಿಗಳು ಹುಟ್ಟಿಕೊಂಡಿದ್ದಾರೆ ಎಂದರು. ಇದನ್ನೂ ಓದಿ: ಸಿಎಂ ಸ್ಥಾನ ಖಾಲಿ ಇಲ್ಲ – ಖಾಲಿ ಇಲ್ಲದ ಸ್ಥಾನದ ಬಗ್ಗೆ ಚರ್ಚೆ ಅಪ್ರಸ್ತುತ: ಡಾ.ರಂಗನಾಥ್

    ನಾವು ಆಪರೇಷನ್ ಕಮಲ ಮಾಡುವುದು ಬೇಕಾಗಿಲ್ಲ. ಅವರ ಶಾಸಕ, ಸಚಿವರೇ ಒಬ್ಬರಿಗೊಬ್ಬರು ಕಾಲು ಎಳೆಯುವುದು ಆರಂಭವಾಗಿದೆ. ಬೆಳಗಾವಿ ಮಹಾನಗರ ಪಾಲಿಕೆಯ ಆರ್ಥಿಕ ದಿವಾಳಿಯಾಗುವ ಪ್ರಶ್ನೆಗೆ ಉತ್ತರಿಸಿದ ಅವರು, ಪಾಲಿಕೆಯನ್ನು ಆರ್ಥಿಕವಾಗಿ ಸುಧಾರಣೆ ಮಾಡಲು ನನ್ನಿಂದ ಮಾತ್ರ ಸಾಧ್ಯವಿಲ್ಲ. ಎಲ್ಲರ ಜೊತೆಗೆ ಚರ್ಚೆ ಮಾಡಿ ತೀರ್ಮಾನ ಮಾಡಬೇಕಿದೆ. ಅಧಿಕಾರಿಗಳ ಯಡವಟ್ಟಿನಿಂದ ಸಮಸ್ಯೆ ಆಗಿದೆ. ಅಧಿಕಾರಿಗಳ ಮೇಲೆ ನಿಯಂತ್ರಣ ಇಲ್ಲದೇ ಇದ್ದರೆ ಈ ರೀತಿಯ ಸಮಸ್ಯೆ ಆಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಪ್ರತಿಭಟನೆ ನಿಲ್ಲಿಸಿ, ದುರ್ಗಾಪೂಜೆಗೆ ಗಮನ ಹರಿಸಿ – ದೀದಿ ಹೇಳಿಕೆಗೆ ಮೃತ ಟ್ರೈನಿ ವೈದ್ಯೆಯ ತಾಯಿ ಆಕ್ರೋಶ

  • ನಡು ರಸ್ತೆಯಲ್ಲಿ ಮೊಸಳೆ ಪ್ರತ್ಯಕ್ಷ – ಕೃಷ್ಣ ನದಿ ತೀರದ ಗ್ರಾಮಸ್ಥರಲ್ಲಿ ಹೆಚ್ಚಾದ ಆತಂಕ

    ನಡು ರಸ್ತೆಯಲ್ಲಿ ಮೊಸಳೆ ಪ್ರತ್ಯಕ್ಷ – ಕೃಷ್ಣ ನದಿ ತೀರದ ಗ್ರಾಮಸ್ಥರಲ್ಲಿ ಹೆಚ್ಚಾದ ಆತಂಕ

    ಚಿಕ್ಕೋಡಿ: ಬೆಳಗಾವಿ (Belagavi) ಜಿಲ್ಲೆಯ ಅಥಣಿ ತಾಲೂಕಿನ ಬಳವಾಡ ಗ್ರಾಮದಲ್ಲಿ ನಡು ರಸ್ತೆಯಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು (Crocodile) ಕಾಣಿಸಿಕೊಂಡಿದೆ.

    ಬಡವಾಡ ಹರೋಲಿ ತೋಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮೇಲೆ ಸರಿ ಸುಮಾರು ಹತ್ತು ಅಡಿಯಷ್ಟು ಉದ್ದದ ಮೊಸಳೆ ಪ್ರತ್ಯಕ್ಷವಾಗಿದೆ. ಇದನ್ನೂ ಓದಿ: ಮನೆಯೊಳಗೆ ರಾಜಕೀಯ ಪ್ರವೇಶಿಸಬಾರದು: ಅಜಿತ್ ಪವಾರ್

    ರಾತ್ರಿ ಹೊತ್ತು ಹಳ್ಳದ ರಸ್ತೆ ಮೇಲೆ ಮೊಸಳೆ ಕಾಣಿಸಿಕೊಳ್ಳುತ್ತಿದ್ದು, ಕೃಷ್ಣಾ ನದಿ (Krishna River) ಪ್ರವಾಹ ಬಂದು ಹೋದ ಮೇಲೆ ನದಿ ತೀರದ ಗ್ರಾಮಸ್ಥರಲ್ಲಿ ಮೊಸಳೆ ಆತಂಕ ಹೆಚ್ಚಾಗಿದೆ. ಇದನ್ನೂ ಓದಿ: MUDA Scam | ಹೈಕೋರ್ಟ್‌ ತೀರ್ಪಿನ ಬಳಿಕ ರಾಜ್ಯದಲ್ಲಿ ಅಸಲಿ ಗೇಮ್‌ ಶುರು?