Tag: belagavi

  • ಉಗ್ರ ಸಂಘಟನೆ ಜೊತೆ ನಂಟು ಹೊಂದಿದ್ದ ಅಫ್ಸರ್ ಪಾಷಾ ಹಿಂಡಲಗಾ ಜೈಲಿಗೆ ಶಿಫ್ಟ್

    ಉಗ್ರ ಸಂಘಟನೆ ಜೊತೆ ನಂಟು ಹೊಂದಿದ್ದ ಅಫ್ಸರ್ ಪಾಷಾ ಹಿಂಡಲಗಾ ಜೈಲಿಗೆ ಶಿಫ್ಟ್

    – ಗಡ್ಕರಿಗೆ ಜೀವ ಬೆದರಿಕೆ ಕರೆ ಮಾಡಿ 100 ಕೋಟಿ ರೂ. ಬೇಡಿಕೆ ಇಟ್ಟಿದ್ದ ಆಸಾಮಿ

    ಬೆಳಗಾವಿ: ಉಗ್ರ ಸಂಘಟನೆ (Terrorist Organization) ಜೊತೆಗೆ ನಂಟು ಹೊಂದಿದ್ದ ಮೋಸ್ಟ್ ವಾಂಟೆಡ್ ಉಗ್ರ ಅಫ್ಸರ್ ಪಾಷಾನನ್ನು ಮಹಾರಾಷ್ಟ್ರದ (Maharashtra) ನಾಗ್ಪುರ ಜೈಲಿನಿಂದ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ (Hindalaga Jail) ಸೋಮವಾರ ರಾತ್ರಿ ಶಿಫ್ಟ್ ಮಾಡಲಾಗಿದೆ.

    ಕೇಂದ್ರ ಸಚಿವ ನಿತೀನ್ ಗಡ್ಕರಿಗೆ (Nitin Gadkari) ಜೀವ ಬೆದರಿಕೆ ಕರೆ ಮಾಡಿ 100 ಕೋಟಿ ರೂ. ಬೇಡಿಕೆಯಿಟ್ಟಿದ್ದ ಆಸಾಮಿ ಈತ. ಬೆಳಗಾವಿಯ ಹಿಂಡಲಗಾ ಜೈಲಿನಿಂದ ಜ.14 2023ರಂದು ನಾಗ್ಪುರದಲ್ಲಿರುವ ಸಚಿವ ಗಡ್ಕರಿ ಕಚೇರಿಗೆ ಫೋನ್ ಮಾಡಿ ಇಬ್ಬರು ಕೈದಿಗಳು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಇಬ್ಬರನ್ನೂ ವಶಕ್ಕೆ ಪಡೆದುಕೊಂಡು ಮಹಾರಾಷ್ಟ್ರದ ನಾಗ್ಪುರ ಠಾಣೆ ಪೊಲೀಸರು ಕರೆದೊಯ್ದಿದ್ದರು. ಇಷ್ಟು ದಿನ ನಾಗ್ಪುರ ಕೇಂದ್ರ ಕಾರಾಗೃಹದಲ್ಲಿದ್ದ ಅಫ್ಸರ್ ಪಾಷಾನನ್ನು ಮತ್ತೆ ಈಗ ಬೆಳಗಾವಿಗೆ ಶಿಫ್ಟ್ ಮಾಡಲಾಗಿದೆ. ಇದನ್ನೂ ಓದಿ: ಆ.30 ರಂದು ಬಿಜೆಪಿ ಸೇರಲಿದ್ದಾರೆ ಜಾರ್ಖಂಡ್‌ ಮಾಜಿ ಸಿಎಂ ಚಂಪೈ ಸೊರೆನ್‌

    ಸೋಮವಾರ ರಾತ್ರಿ ನಾಗ್ಪುರದಿಂದ ಅಫ್ಸರ್ ಪಾಷಾನನ್ನು ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಕರೆ ತಂದ ಪೊಲೀಸರು, ಬಿಗಿ ಪೊಲೀಸ್ ಭದ್ರತೆಯಲ್ಲಿ ರಸ್ತೆ ಮಾರ್ಗವಾಗಿ ಹಿಂಡಲಗಾ ಜೈಲಿಗೆ ರವಾನಿಸಿದ್ದಾರೆ. ಡಿ.15 2005ರಂದು ಬೆಂಗಳೂರಿನ ಇಂಡಿಯನ್ ಇನ್ಸಿ÷್ಟಟ್ಯೂಟ್ ಆಫ್ ಸೈನ್ಸ್ ಸ್ಫೋಟ ಪ್ರಕರಣದಲ್ಲಿ ಅಫ್ಸರ್ ಪಾಷಾ ಭಾಗಿಯಾಗಿದ್ದ ಹಿನ್ನೆಲೆಯಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದಾನೆ. ಅಲ್ಲದೇ ಪಿಎಫ್‌ಐ ಸಂಘಟನೆ ಜೊತೆಗೆ ನಂಟಿರುವ ಜಯೇಶ ಪೂಜಾರಿ ಜೊತೆಗೆ ಸೇರಿಕೊಂಡು ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಕರೆ ಮಾಡಿದ್ದ. ಅಫ್ಸರ್ ಪಾಷಾ ಮತ್ತು ಜಯೇಶ್ ಪೂಜಾರಿ ಇಬ್ಬರೂ ಹಿಂಡಲಗಾ ಜೈಲಿನಲ್ಲಿದ್ದುಕೊಂಡೇ ಈ ಖತರ್ನಾಕ್ ಪ್ಲಾನ್ ಮಾಡಿದ್ದರು. ಇದನ್ನೂ ಓದಿ: ಅತ್ತ ದರ್ಶನ್‌ಗೆ ರಾಜಾತಿಥ್ಯ – ಇತ್ತ ಎ5 ಆರೋಪಿ ನಂದೀಶ್ ಕುಟುಂಬ ಜೀವನ ಸಾಗಿಸಲು ಪರದಾಟ

  • ಪರಪ್ಪನ ಜೈಲಿಂದ ಹಿಂಡಲಗಾ ಜೈಲಿಗೆ ‘ಜಗ್ಗುದಾದ’ ಶಿಫ್ಟ್ ಸಾಧ್ಯತೆ – ಬೆಳಗಾವಿ ಜೈಲಿನ ವಿಶೇಷತೆ ಏನು?

    ಪರಪ್ಪನ ಜೈಲಿಂದ ಹಿಂಡಲಗಾ ಜೈಲಿಗೆ ‘ಜಗ್ಗುದಾದ’ ಶಿಫ್ಟ್ ಸಾಧ್ಯತೆ – ಬೆಳಗಾವಿ ಜೈಲಿನ ವಿಶೇಷತೆ ಏನು?

    – ನಟೋರಿಯಸ್ ಕೈದಿಗಳನ್ನಿರಿಸಲು 36 ಕತ್ತಲೆ ಕೋಣೆ

    ಬೆಳಗಾವಿ: ಕೊಲೆ ಆರೋಪಿ ದರ್ಶನ್‌ಗೆ (Darshan) ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಸದ್ಯ ದರ್ಶನ್&ಗ್ಯಾಂಗ್‌ಗೆ ಬೇರೆ ಜೈಲಿಗೆ ಶಿಫ್ಟ್ ಮಾಡಲು ಸಿಎಂ ಸೂಚನೆ ಕೊಟ್ಟಿದ್ದಾರೆ. ಹೀಗಾಗಿ ದರ್ಶನ್ ಮತ್ತು ಗ್ಯಾಂಗ್ ಅನ್ನು ನಟೋರಿಯಸ್ ಕೈದಿಗಳು ಇರುವ ಬೆಳಗಾವಿಯ (Belagavi) ಹಿಂಡಲಗಾ ಜೈಲಿಗೆ (Hindalaga Jail)  ಶಿಫ್ಟ್ ಮಾಡುವ ಸಾಧ್ಯತೆಯಿದೆ.

    ರೇಣುಕಾಸ್ವಾಮಿ ಕೊಲೆ ಆರೋಪಿ, ಕಿಲ್ಲಿಂಗ್ ಸ್ಟಾರ್ ದರ್ಶನ್ ಪರಪ್ಪನ ಅಗ್ರಹಾರದಲ್ಲಿ ಜಾಲಿ ಲೈಫ್ ನಡೆಸುತ್ತಿದ್ದಾರೆ. ಜೈಲಿನಲ್ಲಿ ರಾಜಾತಿಥ್ಯ ಕೊಡುತ್ತಿರುವ ಫೋಟೋ ಮತ್ತು ವೀಡಿಯೋ ವೈರಲ್ ಆದ ಬೆನ್ನಲ್ಲೇ ರಾಜ್ಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಪರಪ್ಪನ ಅಗ್ರಹಾರದ ಕರಾಳ ಮುಖ ಮತ್ತೊಮ್ಮೆ ಬಯಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಐಷಾರಾಮಿಯಾಗಿ ಬದುಕುತ್ತಿದ್ದ ದರ್ಶನ್ ಹಾಗೂ ಗ್ಯಾಂಗ್‌ಗೆ ಸಂಕಷ್ಟ ಫಿಕ್ಸ್ ಆಗಿದೆ. ಹಿಂಡಲಗಾ ಜೈಲಿನ `ಅಂಧೇರಿ’ ಸೆಲ್‌ಗಳಿಗೆ ಈ ಗ್ಯಾಂಗ್ ಶಿಫ್ಟ್ ಆಗುವ ಸಾಧ್ಯತೆ ಇದೆ. ಇದನ್ನೂ ಓದಿ: ಬೆಂಗಳೂರಿಗರೇ ಗಮನಿಸಿ – ಇಂದು ನಗರದಲ್ಲಿ ಟ್ರಾಫಿಕ್‌ ಸಮಸ್ಯೆಯಾಗುವ ಸಾಧ್ಯತೆ

    ಕರ್ನಾಟಕದ ಜೈಲುಗಳು ಅಂದರೆ ನೆನಪಾಗೋದೇ ಬೆಂಗಳೂರಿನ ಬಳಿ ಇರುವ ಪರಪ್ಪನ ಅಗ್ರಹಾರ ಮತ್ತು ಬೆಳಗಾವಿಯ ಹಿಂಡಲಗಾ ಜೈಲು ಅಥವಾ ಹಿಂಡಲಗಾ ಕೇಂದ್ರ ಕಾರಾಗೃಹ. ಸ್ಟಾರ್ ಎನಿಸಿಕೊಂಡವರು, ಪ್ರಭಾವಿಗಳು ಈ ಜೈಲುಗಳ ಊಟ ಉಂಡ ಎಷ್ಟೋ ಉದಾಹರಣೆಗಳಿವೆ. ಇದೀಗ ನಟ ದರ್ಶನ್ ಅವರನ್ನು ಪರಪ್ಪನ ಅಗ್ರಹಾರದಿಂದ ಹಿಂಡಲಗಾ ಜೈಲಿಗೆ ಸ್ಥಳಾಂತರಿಸುವ ಸಾಧ್ಯತೆ ಇದೆ. ಫೋಟೋ ಹಾಗೂ ವೀಡಿಯೋ ವೈರಲ್ ಬೆನ್ನಲ್ಲೇ ದರ್ಶನ್ ಮತ್ತು ಗ್ಯಾಂಗ್ ಅನ್ನು ಅನ್ಯ ಜಿಲ್ಲೆಯ ಜೈಲಿಗೆ ಶಿಫ್ಟ್ ಮಾಡಲು ಸಿಎಂ ಸೂಚನೆ ನೀಡಿದ್ದಾರೆ. ಒಂದು ವೇಳೆ ಕೊಲೆ ಆರೋಪಿ ದರ್ಶನ್ ಬೆಳಗಾವಿ ಜೈಲಿಗೆ ದಾಖಲಾದರೆ ಹಿಂಡಲಗಾ ಜೈಲು ಸೇರಿದ ಮೊದಲ ನಟ ಎಂಬ ಕುಖ್ಯಾತಿಗಳಿಸಲಿದ್ದಾರೆ. ಸ್ವಾತಂತ್ರ‍್ಯ ಹೋರಾಟಗಾರರು, ರಾಜಕೀಯ ಕೈದಿಗಳು ಇತರೆ ಕೈದಿಗಳು ಈ ಜೈಲಿನಲ್ಲಿದ್ದರು. ಇದನ್ನೂ ಓದಿ: Bengaluru | ನಟ ದರ್ಶನ್‌ಗೆ ಜೈಲಲ್ಲಿ ರೌಡಿಗಳ ನಂಟು – ದರ್ಶನ್‌ ಮೇಲೆ‌ ಮತ್ತೆರಡು ಎಫ್‌ಐಆರ್‌!

    ರಾಜ್ಯದಲ್ಲಿ ಗಲ್ಲಿಗೇರಿಸುವ ಏಕೈಕ ಜೈಲು ಎಂದರೆ ಬೆಳಗಾವಿ ಹಿಂಡಲಗಾ ಜೈಲು. ನಟೋರಿಯಸ್ ಕೈದಿಗಳನ್ನು ಇಡಲು 36 ಕತ್ತಲು ಕೋಣೆಯ ವ್ಯವಸ್ಥೆ ಬೆಳಗಾವಿ ಜೈಲಿನಲ್ಲಿದೆ. ಅದರಲ್ಲಿ 15 ಕೋಣೆಗಳು ಖಾಲಿ ಇದೆ. ಹೀಗಾಗಿ ಬೆಳಗಾವಿ ಹಿಂಡಲಗಾ ಜೈಲಿನ ಬಂದೋಬಸ್ತ್ ವ್ಯವಸ್ಥೆ ಕುರಿತು ಹಿರಿಯ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದಾರೆ. ಈಗಾಗಲೇ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಭೂಗತ ಪಾತಕಿ ಬನ್ನಂಜೆ ರಾಜಾ, ದಂಡುಪಾಳ್ಯ ಗ್ಯಾಂಗ್, ವೀರಪ್ಪನ್ ಸಹಚರರು, ಸೈನೈಡ್ ಮಲ್ಲಿಕಾ, ಬಳ್ಳಾರಿ ನಾಗ, ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ ಹಲವರು ಸೆರೆವಾಸ ಅನುಭವಿಸಿದ್ದಾರೆ. ಇದನ್ನೂ ಓದಿ: ಮೋದಿ ಉದ್ಘಾಟಿಸಿದ್ದ ಶಿವಾಜಿ ಮಹರಾಜ್‌ ಪ್ರತಿಮೆ 1 ವರ್ಷ ಪೂರ್ಣಗೊಳ್ಳುವ ಮುನ್ನವೇ ಕುಸಿತ!

    ಮರಣದಂಡನೆ ಶಿಕ್ಷೆಗೆ ಗುರಿಯಾದ ಕೈದಿಗಳು ಹಿಂಡಲಗಾ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ. ಹಿಂಡಲಗಾ ಜೈಲಿಗೆ ದರ್ಶನ್ ಅಥವಾ ಗ್ಯಾಂಗ್ ಶಿಫ್ಟ್ ಮಾಡಿದರೆ ಆಗುವ ಸಾಧಕಬಾಧಕ ಕುರಿತು ಮಾಹಿತಿ ಸಂಗ್ರಹಿಸಲಾಗಿದೆ. ಈ ಮಧ್ಯೆ ಜೈಲಿನಲ್ಲಿನ ಸೆಕ್ಯುರಿಟಿ ಕುರಿತು ಕೂಡ ಮಾಹಿತಿ ಪಡೆದುಕೊಳ್ಳಲಾಗಿದೆ. ಇದನ್ನೂ ಓದಿ: ಗುಡ್ & ಬ್ಯಾಡ್ ಟಚ್ ಸೆಷನ್‌ನಲ್ಲಿ ಕರಾಳ ಅನುಭವ ಬಿಚ್ಚಿಟ್ಟ ವಿದ್ಯಾರ್ಥಿನಿ – ಮುಂದಾಗಿದ್ದೇನು?

    ಒಟ್ಟಿನಲ್ಲಿ ಬೆಳಗಾವಿ ಹಿಂಡಲಗಾ ಜೈಲು ಈಗಾಗಲೇ ಅನೇಕ ಅಪಖ್ಯಾತಿಯಿಂದ ಸುದ್ದಿಯಲ್ಲಿತ್ತು. ಈಗ ಕೊಲೆ ಆರೋಪಿ ದರ್ಶನ್ ಗ್ಯಾಂಗ್ ಹಿಂಡಲಗಾ ಜೈಲಿಗೆ ಶಿಫ್ಟ್ ಆಗುತ್ತಾರಾ ಎಂಬ ಚರ್ಚೆ ಜೋರಾಗಿದೆ. ಸದ್ಯ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕುಖ್ಯಾತ ಕೈದಿಗಳಿದ್ದಾರೆ. ಹೀಗಿರುವಾಗ ದರ್ಶನ್&ಗ್ಯಾಂಗ್ ಬಂದರೆ ಹೇಗೆ ಎಂದು ಜೈಲು ಅಧಿಕಾರಿಗಳು ತಲೆ ಕೆಡಿಸಿಕೊಂಡಿದ್ದಾರೆ. ಇದನ್ನೂ ಓದಿ: Telegram Ban | ಭಾರತದಲ್ಲಿ ಬ್ಯಾನ್ ಆಗುತ್ತಾ ಟೆಲಿಗ್ರಾಂ ಆ್ಯಪ್?

  • ದರ್ಶನ್‍ಗೆ ಜೈಲಲ್ಲಿ ರಾಜಾತಿಥ್ಯ – ನಾವು ದರ್ಶನ್ ಪರವೂ ಇಲ್ಲ, ವಿರುದ್ಧವೂ ಇಲ್ಲ‌ ಎಂದ ಸಿಎಂ

    ದರ್ಶನ್‍ಗೆ ಜೈಲಲ್ಲಿ ರಾಜಾತಿಥ್ಯ – ನಾವು ದರ್ಶನ್ ಪರವೂ ಇಲ್ಲ, ವಿರುದ್ಧವೂ ಇಲ್ಲ‌ ಎಂದ ಸಿಎಂ

    – ಪ್ರಕರಣದಲ್ಲಿ ಹಿರಿಯ ಅಧಿಕಾರಿಗಳು ಶಾಮೀಲಾಗಿದ್ದರೆ ಅವರನ್ನೂ ಅಮಾನತು ಮಾಡ್ತೀವಿ

    ಬೆಳಗಾವಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ (Parappana Agrahara Jail) ನಟ ದರ್ಶನ್‍ಗೆ (Darshan) ಜೈಲಿನಲ್ಲಿ ವಿಶೇಷ ಸೌಲಭ್ಯ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ 7 ಅಧಿಕಾರಿಗಳನ್ನ ಈಗಾಗಲೇ ಅಮಾನತು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  (CM Siddaramaiah) ತಿಳಿಸಿದ್ದಾರೆ.

    ನಗರದಲ್ಲಿ (Belagavi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ದರ್ಶನ್‌ ಪರವೂ ಇಲ್ಲ, ವಿರುದ್ಧವೂ ಇಲ್ಲ. ಜೈಲಿನ ಒಳಗೆ ದರ್ಶನ್‌ ಮತ್ತು ಇನ್ನಿತರರಿಗೆ ರಾಜಾತಿಥ್ಯ ನೀಡುತ್ತಿರುವ ಘಟನೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಕರ್ತವ್ಯಲೋಪವಾಗಿದೆ. ಈಗಾಗಲೇ ಸಂಬಂಧಪಟ್ಟ 7 ಮಂದಿಯನ್ನು ಅಮಾನತು ಮಾಡಲಾಗಿದೆ. ಇನ್ನೂ ಕೆಲವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಇದು ಅಧಿಕಾರಿಗಳ ಮಟ್ಟದಲ್ಲಿ ನಡೆದಿರುವ ಲೋಪ ಎಂದು ಅವರು ಹೇಳಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಕೆಲವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಗೃಹ ಸಚಿವರಿಗೆ ಸೂಚಿಸಿದ್ದೇನೆ. ಅವರ ವರದಿ ಆಧಾರದಲ್ಲಿ ಸೂಕ್ತ ಕ್ರಮ ಜರುಗಿಸಲಾಗುತ್ತದೆ. ದರ್ಶನ್‍ನನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡಬೇಕಾ? ಬೇಡವೇ? ಎಂಬ ಬಗ್ಗೆಯೂ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

    ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಹೇಳಿಕೆಯೊಂದರ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ನಾವು ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ಜನರ ಪರ ಇರುವುದನ್ನು ಸಾಬೀತುಪಡಿಸಿದ್ದೇವೆ. ಈ ಕುರಿತು ಜೋಷಿಯವರಿಗೆ ನಮ್ಮನ್ನು ಪ್ರಶ್ನಿಸುವ ಯಾವುದೇ ನೈತಿಕತೆ ಇಲ್ಲ ಎಂದು ಕುಟುಕಿದರು.

    ಬೆಳಗಾವಿ ಜಿಲ್ಲೆ ದೊಡ್ಡ ಜಿಲ್ಲೆಯಾಗಿದ್ದು, ಅದನ್ನು ವಿಭಜನೆ ಮಾಡುವ ಕುರಿತು ಶಾಸಕರ ಜತೆ ಮಾತುಕತೆ ನಡೆಸಲಾಗುತ್ತದೆ ಎಂದು ಇದೇ ಸಂದರ್ಭದಲ್ಲಿ ಅವರು ತಿಳಿಸಿದ್ದಾರೆ.

  • ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿ

    ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿ

    ಚಿಕ್ಕೋಡಿ: ಗೃಹಲಕ್ಷ್ಮಿ ಯೋಜನೆಯಿಂದ (Gruhalakshmi Scheme) ಬಂದ ಹಣದಿಂದ ಅಜ್ಜಿಯೊಬ್ಬರು ಊರಿಗೆ ಹೋಳಿಗೆ ಊಟ ಹಾಕಿಸಿ ಗಮನ ಸೆಳೆದಿದ್ದಾರೆ.

    ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ಜನರಿಗೆ ಅಜ್ಜಿ ಹೋಳಿಗೆ ಊಟ ಹಾಕಿಸಿದ್ದಾರೆ. ಅಕ್ಕಾತಾಯಿ ಲಂಗೋಟಿ ಎಂಬ ವೃದ್ಧೆಯಿಂದ ಊರಿಗೆಲ್ಲಾ ಊಟ ಹಾಕಿಸಿದ್ದಾರೆ. ಇದನ್ನೂ ಓದಿ: Exclusive Video | ಸೆಂಟ್ರಲ್‌ ಜೈಲಲ್ಲಿ ಕೊಲೆ ಆರೋಪಿ ದರ್ಶನ್‌ ಬಿಂದಾಸ್‌?

    ಸಿದ್ದರಾಮಯ್ಯನವರು ಪ್ರತಿ ತಿಂಗಳು ನಮಗೆಲ್ಲಾ 2,000 ಹಣ ನೀಡುತ್ತಿದ್ದಾರೆ. ರಾಜಕೀಯವಾಗಿ ಸಿದ್ದರಾಮಯ್ಯನವರು ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು. ಹೀಗಾಗಿ ಗ್ರಾಮದ ದೇವತೆಗೆ ಪೂಜೆ ಸಲ್ಲಿಸಿ ಊರಿಗೆ ಹೋಳಿಗೆ ಊಟ ಹಾಕಿಸಿದ್ದಾರೆ.

    ಐದು ಜನ ಮುತ್ತೈದೆಯರಿಗೆ ಉಡಿ ತುಂಬಿ ಅಜ್ಜಿ ಹರಸಿದ್ದಾರೆ. ಅಜ್ಜಿಯ ಕಾರ್ಯಕ್ಕೆ ಸುಟ್ಟಟ್ಟಿ ಗ್ರಾಮದ ಮಹಿಳೆಯರು ಸಾಥ್ ನೀಡಿದ್ದಾರೆ. ಇದನ್ನೂ ಓದಿ: ದೋಸ್ತಿಗಳಿಂದ ರಾಜಭವನ ದುರುಪಯೋಗ ಹೈಕಮಾಂಡ್‍ಗೆ ಅರ್ಥವಾಗಿದೆ: ಹೆಚ್.ಸಿ.ಮಹಾದೇವಪ್ಪ

  • 10 ರೂ. ಆಸೆ ತೋರಿಸಿ 10ರ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಕಾಮುಕ ಅರೆಸ್ಟ್

    10 ರೂ. ಆಸೆ ತೋರಿಸಿ 10ರ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಕಾಮುಕ ಅರೆಸ್ಟ್

    ಚಿಕ್ಕೋಡಿ: ಹತ್ತು ರೂಪಾಯಿ ನೀಡುವ ಆಮಿಷ ಒಡ್ಡಿ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಜಿಲ್ಲೆಯ ನಿಪ್ಪಾಣಿ (Nipani) ಪಟ್ಟಣದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

    ದೇಶದಲ್ಲಿ ಹೆಣ್ಣು ಮಕ್ಕಳ ಮೇಲೆ ಶೋಷಣೆ ನಿಲ್ಲುತ್ತಿಲ್ಲ ಎನ್ನುವ ಕೂಗು ಹೆಚ್ಚಾಗುತ್ತಿದ್ದಂತೆ, ಗಡಿ ಜಿಲ್ಲೆ ಬೆಳಗಾವಿಯ ನಿಪ್ಪಾಣಿಯಲ್ಲಿ ಕಾಮುಕನೋರ್ವ ಅಪ್ರಾಪ್ತ 10 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.ಇದನ್ನೂ ಓದಿ: ಬೆಳಗಾವಿ ಎಸಿ ಕಚೇರಿಯನ್ನೇ ಜಪ್ತಿ ಮಾಡಿ ವಸ್ತುಗಳನ್ನು ಹೊತ್ತೊಯ್ದ ರೈತರು!

    ಆಸಿಫ್ ಭಾಗವಾನ ಕೃತ್ಯ ಎಸಗಿದ ಆರೋಪಿ. ನಿಪ್ಪಾಣಿಯ ಬಾದಲ್‌ಪ್ಲಾಟ್‌ನಲ್ಲಿ (Badal Plot) ಈ ಘಟನೆ ನಡೆದಿದೆ.

    ಕಾಮುಕ ಬಾಲಕಿಯ ಅಂಗಾಂಗ ಮುಟ್ಟಿದಾಗ ಪಾಲಕರ ಬಳಿ ವಿಷಯ ತಿಳಿಸಿದ್ದಾಳೆ. ಬಳಿಕ ಕಾಮುಕ ಆಸಿಫ್‌ನನ್ನು ಪಾಲಕರು ಥಳಿಸಿದ್ದಾರೆ. ಆ.16 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು ಬುಧವಾರ ನಿಪ್ಪಾಣಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಮೀಡಿಯಾ, ಸಾರ್ವಜನಿಕರು ಬೈದ್ರೂ ನೀರಿನ ದರ ಏರಿಸಿಯೇ ಏರಿಸುತ್ತೇವೆ: ಡಿಕೆಶಿ

  • ಬೆಳಗಾವಿ ಎಸಿ ಕಚೇರಿಯನ್ನೇ ಜಪ್ತಿ ಮಾಡಿ ವಸ್ತುಗಳನ್ನು ಹೊತ್ತೊಯ್ದ ರೈತರು!

    ಬೆಳಗಾವಿ ಎಸಿ ಕಚೇರಿಯನ್ನೇ ಜಪ್ತಿ ಮಾಡಿ ವಸ್ತುಗಳನ್ನು ಹೊತ್ತೊಯ್ದ ರೈತರು!

    ಬೆಳಗಾವಿ: ಪರಿಹಾರ ನೀಡಲು ವಿಳಂಬ ಮಾಡಿರುವ ಹಿನ್ನೆಲೆ ರೈತರು ಎಸಿ (Assistant Commisioner) ಕಚೇರಿ ವಸ್ತುಗಳನ್ನು ಜಪ್ತಿ ಮಾಡಿರುವ ಘಟನೆ ಬೆಳಗಾವಿ ತಾಲೂಕಿನಲ್ಲಿ ನಡೆದಿದೆ.

    ಡಿಸಿ ಕಚೇರಿ ಆವರಣದಲ್ಲಿರುವ ಉಪವಿಭಾಗಾಧಿಕಾರಿ ಕಚೇರಿಯಲ್ಲಿನ ಪೀಠೋಪಕರಣಗಳನ್ನು ಜಪ್ತಿ ಮಾಡಿದ್ದಾರೆ. ಕಂಪ್ಯೂಟರ್, ಕುರ್ಚಿಗಳು, ಪ್ರಿಂಟರ್ ಸೇರಿದಂತೆ ವಿವಿಧ ವಸ್ತುಗಳನ್ನು ರೈತರು ಹೊತ್ತೊಯ್ದಿದ್ದಾರೆ.ಇದನ್ನೂ ಓದಿ: ‘ಕಾಂತಾರ ಚಾಪ್ಟರ್ 1’ರಲ್ಲಿ ಕಳರಿಪಯಟ್ಟು ವೀರನ ಪಾತ್ರದಲ್ಲಿ ರಿಷಬ್ ಶೆಟ್ಟಿ

    2008ರಲ್ಲಿ ಬೆಳಗಾವಿ (Belagavi) ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣ (Belagavi Airport) ವಿಸ್ತರಣೆ ಕಾಮಗಾರಿಗಾಗಿ ರೈತರು ತಮ್ಮ 270 ಎಕರೆ ಜಮೀನುಗಳನ್ನು ಕೊಟ್ಟಿದ್ದರು. ನ್ಯಾಯಾಲಯದ ಆದೇಶದ ಮೇರೆಗೆ ಜಮೀನುಗಳನ್ನು ಕೊಟ್ಟಿದ್ದ ರೈತರಿಗೆ ಪ್ರತಿ ಎಕರೆಗೆ ಕೇವಲ 2 ಲಕ್ಷ ರೂ. ಪರಿಹಾರ ನೀಡುವಂತೆ ಸರ್ಕಾರ ಆದೇಶಿಸಿತ್ತು.

    2011ರಲ್ಲಿ ರೈತರು ಹೆಚ್ಚಿನ ಪರಿಹಾರ ಕೋರಿ ಕೋರ್ಟ್ ಮೊರೆಹೋಗಿದ್ದರು. ಬೆಳಗಾವಿಯ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ ನಂತರ ವಿಚಾರಣೆ ನಡೆಸಿ 2018 ರಲ್ಲಿಯೇ ಪ್ರತಿ ಗುಂಟೆಗೆ 40 ಸಾವಿರ ರೂ. ಹೆಚ್ಚುವರಿ ಪರಿಹಾರ ನೀಡುವಂತೆ ಆದೇಶಿಸಲಾಗಿತ್ತು. ಇದಾದ ಬಳಿಕ 2021ರಲ್ಲಿ ಸಕಾಲಕ್ಕೆ ಪರಿಹಾರ ಕೊಡದೇ ಇದ್ದಿದ್ದರಿಂದ ರೈತರು ಮತ್ತೆ ನ್ಯಾಯಾಲಯದ ಮೊರೆಹೋಗಿದ್ದಾರೆ. ಆಗ ರೈತರಿಗೆ ತಕ್ಷಣವೇ ನ್ಯಾಯಯುತ ಪರಿಹಾರ ನೀಡುವಂತೆ ಮತ್ತೊಮ್ಮೆ ಕೋರ್ಟ್ ಆದೇಶಿಸಿದೆ. ಆಗಲೂ ಪರಿಹಾರ ನೀಡದಿದ್ದರಿಂದ ಬೆಳಗಾವಿ ಉಪವಿಭಾಗಾಧಿಕಾರಿ ಕಚೇರಿಯಲ್ಲಿನ ವಸ್ತು ಜಪ್ತಿ ಮಾಡುವಂತೆ ಕೋರ್ಟ್ ಸೂಚನೆ ನೀಡಿತ್ತು.ಇದನ್ನೂ ಓದಿ: MUDA Scam| ಪತ್ನಿ ಪತ್ರ ಬರೆದಿದ್ರೂ ಬರೆದಿಲ್ಲ ಎಂದು ಸಿಎಂ ಸುಳ್ಳು ಹೇಳಿದ್ರಾ?

    ಜಮೀನು ಕೊಟ್ಟಿದ್ದ 20 ರೈತರ 8 ಕೋಟಿ ರೂ. ಪರಿಹಾರ ಇನ್ನೂ ಬಾಕಿಯಿದ್ದು, ನ್ಯಾಯಾಲಯದ ಸೂಚನೆ ಮೇರೆಗೆ ಎಸಿ ಕಚೇರಿ ಪೀಠೋಪಕರಣಗಳನ್ನು ರೈತರು ಜಪ್ತಿ ಮಾಡಿ ಬಿಸಿ ಮುಟ್ಟಿಸಿದ್ದಾರೆ.

  • ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದಕ್ಕೆ ಖುಷಿ ಪಡೋರು ಕಾಂಗ್ರೆಸ್ ನಾಯಕರೇ: ಶೆಟ್ಟರ್

    ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದಕ್ಕೆ ಖುಷಿ ಪಡೋರು ಕಾಂಗ್ರೆಸ್ ನಾಯಕರೇ: ಶೆಟ್ಟರ್

    ಬೆಳಗಾವಿ: ಸಿಎಂ (CM) ವಿರುದ್ಧ ಪ್ರಾಸಿಕ್ಯೂಷನ್‌ಗೆ (Prosecution) ಅನುಮತಿ ಕೊಟ್ಟಿದಕ್ಕೆ ಖುಷಿ ಪಡೋರು ಕಾಂಗ್ರೆಸ್ (Congress) ನಾಯಕರೇ ಎಂದು ಸಂಸದ ಜಗದೀಶ್ ಶೆಟ್ಟರ್  (Jagadeesh Shettar)  ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಬೆಳಗಾವಿಯಲ್ಲಿ  (Belagavi) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಾಂಗ್ಲಾದೇಶ (Bangladesh) ಮಾದರಿಯಲ್ಲಿ ರಾಜಭವನದ ದಾಳಿ ಬಗ್ಗೆ ಐವಾನ್ ಡಿಸೋಜಾ (Ivan Dsouza) ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿ, ಕಾಂಗ್ರೆಸ್ ಮನಸ್ಥಿತಿ ಮತ್ತು ಸಂಸ್ಕ್ರತಿ ಯಾವ ರೀತಿ ಇದೆ ಅನ್ನೋದಕ್ಕೆ ಐವಾನ ಡಿಸೋಜಾ ಹೇಳಿಕೆಯೇ ಸಾಕ್ಷಿ ಎಂದಿದ್ದಾರೆ.ಇದನ್ನೂ ಓದಿ: ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ ಸೇಫ್

    ಕಾಂಗ್ರೆಸ್ ಪಕ್ಷದವರು ಎಲ್ಲದಕ್ಕೂ ತಯಾರಿದ್ದಾರೆ. ಅದಕ್ಕಾಗಿಯೇ ತಪ್ಪು ಮಾಡಿದ್ದಾರೆ. ಆದ ಕಾರಣ ಇಂದು ಅಪರಾಧಿ ಸ್ಥಾನದಲ್ಲಿದ್ದಾರೆ. ಕೋರ್ಟು, ಕಚೇರಿ ಮೇಲೆ ನಿಮಗೆ ನಂಬಿಕೆ ಇದೆಯೋ ಇಲ್ವೋ ಆದರಿಂದ ಅವರು ಇದನ್ನೆಲ್ಲಾ ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದಾರೆ. ಎಲ್ಲ ರೀತಿಯಲ್ಲೂ ದಂಗೆ ಮಾಡಲು ಕಾಂಗ್ರೆಸ್‌ನವರು ತಯಾರಿದ್ದಾರೆ. ಬಾಂಗ್ಲಾದ ಬಗ್ಗೆ ಮಾತನಾಡೋದು ತಪ್ಪು, ಅಲ್ಲಿ ಆಗಿರೋದು ತಪ್ಪು. ಆದರೆ ಇದೇ ರೀತಿ ಮಾಡಿದ್ರೆ ಜನರೆ ತಕ್ಕ ಪಾಠ ಕಲಿಸುತ್ತಾರೆ. ಕಾಂಗ್ರೆಸ್‌ನವರು ಮನೆಗೆ ಓಡಿ ಹೋಗುವ ಪರಿಸ್ಥಿತಿ ಬರುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.

    ಮುಡಾ (MUDA) ಕೇಸ್‌ನ ಎಲ್ಲಾ ಫೈಲ್ ನೋಡಿದ್ದೇನೆ. ಕೃಷಿ ಭೂಮಿ ಎಂದು ತೋರಿಸಿದ್ದಾರೆ. ಖರೀದಿಸಿದ ಹಾಗೇ ಭೂಮಿಯನ್ನು ೫೦:೫೦ ಅನುಪಾತದಲ್ಲಿ ಹಂಚಿಕೆ ಮಾಡಬೇಕಿತ್ತು. ಕಾನೂನು ಉಲ್ಲಂಘನೆ ಮಾಡಿ ಬೇರೆ ಕಡೆ ೧೪ ಜಾಗ ತೆಗೆದುಕೊಂಡಿದ್ದಾರೆ. ಚುನಾವಣೆ ಅಫಿಡವಿಟ್‌ನಲ್ಲಿ ಕಡಿಮೆ ಹಣ ತೋರಿಸಿದ್ದಾರೆ. ಮುಡಾ ಅಧಿಕಾರಿಗಳು ರಾಜ್ಯ ಸರ್ಕಾರ ಅನುಮತಿ ಇಲ್ಲದೇ ತಾವೇ ಹಂಚಿಕೆ ಮಾಡಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಮುಡಾ ಪ್ರಕರಣದಲ್ಲಿ ತಪ್ಪು ಮಾಡಿರುವುದು ಹೌದು. ಮುಂದೆ ಅವರಿಗೆ ಜೈಲಿಗೆ ಹೋಗುವ ಪರಿಸ್ಥಿತಿ ಬರಲಿದೆ ಎಂದು ಕಿಡಿಕಾರಿದ್ದಾರೆ.

    ನಿರಾಣಿ, ಜೊಲ್ಲೆ ಯಾವುದೇ ಅಧಿಕಾರದಲ್ಲಿ ಇಲ್ಲ. ಈಗ ಹೆಚ್.ಡಿ ಕುಮಾರಸ್ವಾಮಿ (H.D.Kumarswami) ಕೇಂದ್ರ ಸಚಿವರಾಗಿದ್ದಾರೆ. ವಿಧಾನಸಭೆಯಲ್ಲಿ ಅಂದಿನ ವಿರೋಧ ಪಕ್ಷದ ನಾಯಕರು ಯಾಕೆ ಮಾತನಾಡಲಿಲ್ಲ? ಆಗ ಬಿಜೆಪಿ (BJP) ಸರ್ಕಾರದ ಸಚಿವರು ಏನಾದ್ರು ಅನುಮತಿ ಕೊಟ್ಟಿದ್ದರೆ, ಅದು ಕಾನೂನು ಬಾಹಿರ ಆಗುತ್ತಿತ್ತು ಎಂದು ಶೆಟ್ಟರ್ ಹೇಳಿದ್ದಾರೆ.ಇದನ್ನೂ ಓದಿ: ನೈತಿಕತೆ ಇದ್ದರೆ ಸಿದ್ದರಾಮಯ್ಯ ಮುಡಾ ಸೈಟ್ ವಾಪಸ್ ಕೊಡಲಿ: ಎಸ್.ಆರ್.ಹಿರೇಮಠ್

    ನಾವು ಸಿದ್ದರಾಮಯ್ಯನವರ ಹಿಂದೆ ಇದ್ದೇವೆ, ಅವರ ಹೋರಾಟಕ್ಕೆ ಬೆಂಬಲಸುತ್ತೇವೆ ಎನ್ನುವವರು ಒಳಗೊಳಗೆ ಖುಷಿ ಪಡುತ್ತಾರೆ. ಅವರೆಲ್ಲಾ ಕಾಂಗ್ರೆಸ್ ನಾಯಕರೇ. ಅದರ ಪರಿಣಾಮ ಏನು ಅಂತಾ ಸ್ವಲ್ಪದರಲ್ಲೇ ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.

    ಇದೇ ವೇಳೆ ಅಕ್ಕಪಕ್ಕದಲ್ಲಿರುವವರೇ ದಾಖಲೆ ಬಿಡುಗಡೆ ಮಾಡಿದ್ರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅವರು ಕೊಟ್ಟಿದ್ದಾರೋ, ಬಿಟ್ಟಿದ್ದಾರೋ ಅನ್ನೋದನ್ನು ನಾನು ಯಾಕೆ ಹೇಳಬೇಕು? ಅದು ಈಗ ಹೊರಗಡೆಗೆ ಬಂದಿದೆ, ಖುಷಿ ಪಡೋರು ಜಾಸ್ತಿ ಇದ್ದಾರೆ ಎಂದು ಟಾಂಗ್ ಕೊಟ್ಟಿದ್ದಾರೆ.

  • ಬೈಕ್‌ನಲ್ಲಿ ಹೋಗುತ್ತಿದ್ದಾಗ ಹೃದಯಾಘಾತ – ಬೆಳಗಾವಿಯಲ್ಲಿ ಯೋಧ ಸಾವು

    ಬೈಕ್‌ನಲ್ಲಿ ಹೋಗುತ್ತಿದ್ದಾಗ ಹೃದಯಾಘಾತ – ಬೆಳಗಾವಿಯಲ್ಲಿ ಯೋಧ ಸಾವು

    ಬೆಳಗಾವಿ: ಬೈಕ್‌ನಲ್ಲಿ ಹೋಗುತ್ತಿದ್ದಾಗ ಹೃದಯಾಘಾತವಾಗಿ ಯೋಧ ಸಾವಿಗೀಡಾಗಿರುವ ಘಟನೆ ನಗರದ ಎಂಎಲ್‌ಐಆರ್‌ಸಿ ಕ್ಯಾಂಪ್‌ನಲ್ಲಿ ನಡೆದಿದೆ.

    ಸುನೀಲ್ ಸಲಾಂ (37) ಮೃತ ಯೋಧ. ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ನಿರ್ದೋಷಿಯಾಗಿ ಮತ್ತೆ ಸಿಎಂ ಆಗಲಿ: ಸುರೇಶ್ ಬಾಬು

    ಯೋಧ ಮರಾಠ ಲಘು ಪದಾತಿದಳಲ್ಲಿ ಹವಾಲ್ದಾರ್ ಆಗಿ ಕೆಲಸ ಮಾಡುತ್ತಿದ್ದರು. ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆಯಲ್ಲಿ ಹೃದಯಾಘಾತ ಸಂಭವಿಸಿದೆ. ಹೃದಯಾಘಾತದಿಂದ ಯೋಧ ಬೈಕ್‌ನಿಂದ ಕೆಳಗೆ ಬಿದ್ದಿದ್ದಾರೆ. ಇದನ್ನೂ ಓದಿ: ಯುಎಸ್ ಕಾರು ಅಪಘಾತ; ಭಾರತೀಯ ಮೂಲದ ಒಂದೇ ಕುಟುಂಬದ ಮೂವರು ಸಾವು

    ಯೋಧ ಮೃತಪಡುವ ಅಂತಿಮ ಕ್ಷಣಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಹಾರಾಷ್ಟ್ರದ ಚಂದಗಡ ತಾಲೂಕಿನ ಘುಳೇವಾಡಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.

  • ಬೆಳಗಾವಿಯಲ್ಲಿ ಬೋರ್‌ವೆಲ್‌ ನೀರು ಸೇವಿಸಿ 41 ಜನ ಅಸ್ವಸ್ಥ

    ಬೆಳಗಾವಿಯಲ್ಲಿ ಬೋರ್‌ವೆಲ್‌ ನೀರು ಸೇವಿಸಿ 41 ಜನ ಅಸ್ವಸ್ಥ

    ಬೆಳಗಾವಿ: ಸವದತ್ತಿ ತಾಲ್ಲೂಕಿನ ಚಚಡಿ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಆರಂಭವಾದ ವಾಂತಿ – ಭೇದಿ ಉಲ್ಬಣಗೊಂಡಿದೆ. ಒಂದೇ ದಿನ 41 ಮಂದಿಗೆ ವಾಂತಿ-ಭೇದಿ ಕಾಣಿಸಿಕೊಂಡಿದೆ. ತೀವ್ರ ಅಸ್ವಸ್ಥರಾದ ಮೂವರನ್ನ ಬೆಳಗಾವಿ ಜಿಲ್ಲಾಸ್ಪತ್ರೆಗೆ (Belagavi District Hospital_, ಮೂವರನ್ನು ಬೈಲಹೊಂಗಲ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

    ನಿತ್ರಾಣಗೊಂಡಿರುವ ಈರವ್ವ ಗಾಳಿಮಠ (63) ಅವರನ್ನು ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ICU) ಸೇರಿಸಲಾಗಿದೆ. ಇನ್ನಿಬ್ಬರು ಒಳರೋಗಿಗಳಾಗಿ ದಾಖಲಾಗಿದ್ದಾರೆ. ಉಳಿದವರು ಚಚಡಿ ಹಾಗೂ ಇಂಚಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ (Health Center) ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಷಯ ತಿಳಿದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ ಕೋಣಿ ಭೇಟಿ ನೀಡಿ ತುರ್ತು ಚಿಕಿತ್ಸೆಯ ವ್ಯವಸ್ಥೆ ಮಾಡಿದರು. ಇದನ್ನೂ ಓದಿ: ಟಿಬಿ ಡ್ಯಾಂ ನೀರು ಉಳಿಸಲು ಹರಸಾಹಸ – ಇಂದೇ ತಾತ್ಕಾಲಿಕ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ

    ಕಲುಷಿತ ನೀರು (Contaminated Water) ಸೇವನೆಯಿಂದ ವಾಂತಿ ಭೇದಿ ಕಾಣಿಸಿಕೊಂಡಿದೆ. ಪ್ರಾಣಾಪಾಯ ಆಗಿಲ್ಲ. ನಿತ್ರಾಣಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿಕೊಂಡು ಚಿಕಿತ್ಸೆ ಮುಂದುವರಿಸಲಾಗಿದೆ. ಗ್ರಾಮದಲ್ಲಿ ನಾಲ್ವರು ವೈದ್ಯರು ಹಾಗೂ ಹಲವು ವೈದ್ಯಕೀಯ ಸಿಬ್ಬಂದಿ ಸ್ಥಳದಲ್ಲೇ ಇದ್ದಾರೆ. ನೀರನ್ನು ಕುದಿಸಿ 90% ಕುಡಿಯುವಂತೆ ಜಾಗೃತಿ ವಹಿಸಲಾಗಿದೆ. ಸವದತ್ತಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಯಶವಂತ ಕುಮಾರ್‌ ಮಾತನಾಡಿ, ಸಮಸ್ಯೆ ಉಲ್ಬಣವಾಗುತ್ತಿದ್ದಂತೆ ಎಚ್ಚರಿಕೆ ಕ್ರಮವಹಿಸಲಾಗಿದೆ. ಬೋರ್‌ವೆಲ್‌ಗಳ ಗ್ರಾಮದ ನೀರನ್ನು ತಪಾಸಣೆಗೆ ಕಳಿಸಲಾಗಿದೆ. ಗ್ರಾಮಕ್ಕೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲಾಗಿದೆ. ಓವರ್‌ಹೆಡ್ ಟ್ಯಾಂಕಿನಿಂದ ನೀರು ಸ್ಥಗಿತ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    ಗ್ರಾಮದ ಬೋರ್‌ವೆಲ್‌ಗಳ ಮೂಲಕ ಓವರ್‌ಹೆಡ್‌ ಟ್ಯಾಂಕ್‌ಗೆ ನೀರು ತುಂಬಿಸಲಾಗುತ್ತದೆ. ಅಲ್ಲಿಂದ ಮನೆ-ಮನೆಗೆ ನಳಗಳ ಮೂಲಕ ಹರಿಸಲಾಗುತ್ತದೆ. ಮನೆಗಳಿಗೆ ನೀರು ಸರಬರಾಜು ಮಾಡುವ ಪೈಪ್‌ಲೈನ್‌ನಲ್ಲಿ ಚರಂಡಿ ನೀರು ಸೇರಿಕೊಂಡಿದ್ದರಿಂದ ಈಗ ಅವಘಡ ಸಂಭವಿಸಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಸದ್ಯ ವೀರಭದ್ರೇಶ್ವರ ದೇವಸ್ಥಾನದ ಸುತ್ತಲಿನ ಪ್ರದೇಶದಲ್ಲಿ ಸಮಸ್ಯೆ ಉಲ್ಬಣವಾಗಿದೆ. ಇಡೀ ಊರಿಗೆ ಹಬ್ಬುವ ಮುನ್ನವೇ ಕ್ರಮ ವಹಿಸಬೇಕು ಎಂದೂ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಅಮೆರಿಕದಲ್ಲಿ ಭಾರತದ ರಾಯಭಾರಿಯಾಗಿ ವಿನಯ್ ಮೋಹನ್ ಕ್ವಾತ್ರಾ ಅಧಿಕಾರ ಸ್ವೀಕಾರ

    ಇದಕ್ಕೆ ಪ್ರತಿಕ್ರಿಯಿಸಿರುವ ಅಧಿಕಾರಿಗಳು, ಟ್ಯಾಂಕನ್ನು ಸಂಪೂರ್ಣ ಖಾಲಿ ಮಾಡಿ, ಒಣಗಿಸಿ ಮತ್ತೆ ನೀರು ಭರ್ತಿ ಮಾಡಲಾಗುವುದು. ಆ ನೀರನ್ನು ಕೂಡ ನಳಗಳ ಮೂಲಕ ಹರಿಬಿಟ್ಟು ಮತ್ತೆ ಟ್ಯಾಂಕ್ ಖಾಲಿ ಮಾಡಲಾಗುವುದು. ಇದರಿಂದ ಟ್ಯಾಂಕ್ ಅಥವಾ ನಳಗಳಲ್ಲಿ ಎಲ್ಲಿಯೇ ಮಲಿನ ನೀರು ಸೇರಿಕೊಂಡಿದ್ದರೂ ಸ್ವಚ್ಛವಾಗುತ್ತದೆ. ಮತ್ತೊಮ್ಮೆ ತಪಾಸಣೆ ಮಾಡಿದ ಬಳಿಕ ನೀರು ಪೂರೈಸಲಾಗುವುದು. ಕುಡಿಯುವ ನೀರಿನ ಬವಣೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಎಂದು ತಿಳಿಸಿದ್ದಾರೆ.

    ಗ್ರಾಮದಲ್ಲಿ ಪಿಡಿಒ ನಿರ್ಲಕ್ಷ್ಯ ವಹಿಸಿದ್ದರಿಂದ ಸಮಸ್ಯೆ ಉಲ್ಬಣವಾಗಿದೆ. ಗ್ರಾಮದಲ್ಲಿ ಕುಡಿಯುವ ನೀರಿನ ಶುದ್ಧೀಕರಣ ಘಟಕಗಳು ಇದ್ದರೂ ಅವುಗಳನ್ನ ಸರಿಯಾಗಿ ನಿರ್ವಹಣೆ ಮಾಡಿಲ್ಲ. ವಾಂತಿ-ಭೇದಿ ಸಮಸ್ಯೆ ಸಣ್ಣದು ಇದ್ದಾಗಲೇ ಎಚ್ಚೆತ್ತುಕೊಂಡಿಲ್ಲ ಎಂದು ದೂರಲಾಗಿದೆ.

  • ರಾಜ್ಯ ಬಿಜೆಪಿಯಲ್ಲಿ ಮತ್ತೆ ಜೋರಾದ ಭಿನ್ನಮತ – ‘ದೋಸ್ತಿ’ ಪಾದಯಾತ್ರೆಗೆ ಬಿಜೆಪಿ ರೆಬೆಲ್ಸ್ ಠಕ್ಕರ್?

    ರಾಜ್ಯ ಬಿಜೆಪಿಯಲ್ಲಿ ಮತ್ತೆ ಜೋರಾದ ಭಿನ್ನಮತ – ‘ದೋಸ್ತಿ’ ಪಾದಯಾತ್ರೆಗೆ ಬಿಜೆಪಿ ರೆಬೆಲ್ಸ್ ಠಕ್ಕರ್?

    – ಕುಂದಾನಗರಿಯಲ್ಲಿ ಬಿಜೆಪಿ ಬಂಡಾಯ ನಾಯಕರ ಸಭೆ

    ಬೆಳಗಾವಿ: ರಾಜ್ಯ ಬಿಜೆಪಿಯಲ್ಲಿ ಮತ್ತೊಮ್ಮೆ ಭಿನ್ನಮತ ಜೋರಾಗಿದೆ. ಮೈಸೂರು ಪಾದಯಾತ್ರೆ ಸಮಾರೋಪದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮುಂದಾಳತ್ವ ವಹಿಸಿ ಯಶಸ್ವಿಯಾಗಿದ್ದರು. ಆದರೆ, ಇದು ಬಿಜೆಪಿ ರೆಬೆಲ್ ನಾಯಕರ ಕಣ್ಣು ಕೆಂಪಾಗಿಸಿದೆ.

    ಬಿಜೆಪಿ ಬಂಡಾಯ (BJP Rebels) ನಾಯಕರು ಬೆಳಗಾವಿಯಲ್ಲಿ (Belagavi) ಜಾಂಬೋಟಿ ರಸ್ತೆಯ ಖಾಸಗಿ ರೆಸಾರ್ಟ್‌ನಲ್ಲಿ ಸಭೆ ಸೇರಿದ್ದರು. ರಮೇಶ್ ಜಾರಕಿಹೊಳಿ, ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅರವಿಂದ ಲಿಂಬಾವಳಿ, ಜಿ.ಎಂ.ಸಿದ್ದೇಶ್ವರ, ಪ್ರತಾಪ್ ಸಿಂಹ, ಅಣ್ಣಾಸಾಹೇಬ್ ಜೊಲ್ಲೆ, ಕುಮಾರ ಬಂಗಾರಪ್ಪ, ಬಿಎಸ್‌ವೈ ಆಪ್ತ ಎನ್.ಆರ್.ಸಂತೋಷ್ ಸೇರಿದಂತೆ 10ಕ್ಕೂ ಹೆಚ್ಚು ನಾಯಕರು ಭಾಗಿಯಾಗಿದ್ದರು. ಇದನ್ನೂ ಓದಿ: ಬ್ರ್ಯಾಂಡ್ ಬೆಂಗಳೂರು ಬ್ಯಾಂಡ್ ಬೆಂಗಳೂರು ಆಗದಿರಲಿ: ಬಸವರಾಜ ಬೊಮ್ಮಾಯಿ

    ವಾಲ್ಮೀಕಿ ನಿಗಮ ಹಗರಣ ಖಂಡಿಸಿ ಕೂಡಲಸಂಗಮದಿಂದ ಬಳ್ಳಾರಿಯವರೆಗೂ ಪಾದಯಾತ್ರೆ ನಡೆಸುವ ಕುರಿತು ಚರ್ಚೆ ನಡೆಸಲಾಗಿದೆ. ಸೆಪ್ಟೆಂಬರ್ 17ರಂದು ಅಥವಾ ದೀಪಾವಳಿ ಬಳಿಕ ಕೂಡಲಸಂಗಮದಿಂದ ಬಳ್ಳಾರಿವರೆಗೆ ಪಾದಯಾತ್ರೆ ನಡೆಸಲು ಮುಹೂರ್ತ ಫಿಕ್ಸ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

    ಜೊತೆಗೆ, ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ನಾಯಕರೆಲ್ಲರೂ ಒಕ್ಕೊರಲಾಗಿ ಆಕ್ರೋಶ ಹೊರಹಾಕಿದ್ದಾರೆ ಎಂದು ತಿಳಿದು ಬಂದಿದೆ. ಸಭೆ ಬಗ್ಗೆ ಪ್ರತಿಕ್ರಿಯಿಸಿರುವ ಅರವಿಂದ ಲಿಂಬಾವಳಿ, ಇದು ಭಿನ್ನಮತ ನಾಯಕರ ಸಭೆ ಅಲ್ಲ. ವಾಲ್ಮೀಕಿ ನಿಗಮ ಹಗರಣ, ಎಸ್‌ಸಿ/ಎಸ್‌ಟಿ ಅನುದಾನ ದುರ್ಬಳಕೆ ವಿರುದ್ಧ ಹೋರಾಟ ಬಗ್ಗೆ ಚರ್ಚೆ ನಡೆದಿದ್ದು, ಮತ್ತೊಂದು ಸುತ್ತಿನ ಸಭೆ ಮಾಡಿ ನಿರ್ಧಾರ ಮಾಡ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಭತ್ತ ನಾಟಿ ಮಾಡಿದ ಹೆಚ್‍ಡಿಕೆ