ಬೆಳಗಾವಿ: ಶಾರ್ಟ್ ಸರ್ಕ್ಯೂಟ್‌ನಿಂದ ಟೇಪ್ ತಯಾರಿಕಾ ಕಾರ್ಖಾನೆ ಹೊತ್ತಿ ಉರಿದ ಘಟನೆ ತಾಲೂಕಿನ ನಾವಗೆ ಗ್ರಾಮದಲ್ಲಿ ನಡೆದಿದೆ. ಕಾರ್ಖಾನೆಯಲ್ಲಿ 200 ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಸ್ನೇಹಂ ಕಾರ್ಖಾನೆಯಲ್ಲಿ ಲಿಫ್ಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಈ ಅವಘಡ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬಂದಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಒಳಗೆ ಹಲವು ಜನ ಕಾರ್ಮಿಕರು ಸಿಲುಕಿರುವ ಶಂಕೆ ಇದ್ದು, ಸ್ಥಳಕ್ಕೆ ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ.
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಘಟನೆ ಬಗ್ಗೆ ಪ್ರತಿಕ್ರಿಯಿದ್ದು, ಇಡೀ ಜಿಲ್ಲಾಡಳಿತ ಸ್ಥಳದಲ್ಲಿ ಇದೆ. ಆಸ್ಪತ್ರೆಯಲ್ಲಿ 200 ಬೆಡ್ ತಯಾರಿಡಲು ಸೂಚಿಸಲಾಗಿದೆ ಎಂದಿದ್ದಾರೆ.
– ಬೆಳಗಾವಿಯಲ್ಲಿ ವಿದ್ಯುತ್ ಶಾಕ್‍ಗೆ ಇಬ್ಬರು ಮಹಿಳೆಯರು ಬಲಿ
ಚಿಕ್ಕೋಡಿ: ಸಿಎಂ ಕಾರ್ಯಕ್ರಮದಲ್ಲಿ ವಿದ್ಯುತ್ ತಗುಲಿ (Electric shock) ಯುವಕನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಕಾಗವಾಳ ತಾಲೂಕಿನ ಜುಗುಳ ಗ್ರಾಮದಲ್ಲಿ ನಡೆದಿದೆ.
ವಿದ್ಯುತ್ ಶಾಕ್‍ನಿಂದ ಗಾಯಗೊಂಡ ಯುವಕನನ್ನು ಮಹೇಶ್ ಹುಣ್ಣರಗಿ (22) ಎಂದು ಗುರುತಿಸಲಾಗಿದೆ. ಯುವಕ ಸಿಎಂ ಸಿದ್ದರಾಮಯ್ಯ (Siddaramaiah) ಅವರನ್ನು ನೋಡಲು ಮೇಲ್ಛಾವಣಿ ಮೇಲೆ ಹತ್ತಿದ್ದ ವೇಳೆ ವಿದ್ಯುತ್ ತಗುಲಿದೆ. ಪರಿಣಾಮ ಯುವಕನ ಮುಖ ಹಾಗೂ ಕೈ ಭಾಗಕ್ಕೆ ಗಂಭೀರ ಗಾಯವಾಗಿದೆ. ಬಳಿಕ ಅಂಬುಲೆನ್ಸ್ ಸಹಾಯದಿಂದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಿಎಂ ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ಗ್ರಾಮಕ್ಕೆ ಬಂದಿದ್ದ ವೇಳೆ ಈ ಅವಘಡ ನಡೆದಿದೆ.
ಇಬ್ಬರು ಮಹಿಳೆಯರ ದುರ್ಮರಣ
ದೇವಸ್ಥಾನ ಸ್ವಚ್ಚಗೊಳಿಸುವ ವೇಳೆ ಇಬ್ಬರು ಮಹಿಳೆಯರಿಗೆ ವಿದ್ಯುತ್ ಶಾಕ್ ತಗುಲಿ ಸಾವಿಗೀಡಾದ ಘಟನೆ ಬೆಳಗಾವಿ (Belagavi) ತಾಲೂಕಿನ ಸುಳೇಬಾವಿ ಗ್ರಾಮದಲ್ಲಿ ನಡೆದಿದೆ.
ಮೃತ ಮಹಿಳೆಯರನ್ನು ಕಲಾವತಿ (37) ಹಾಗೂ ಸವಿತಾ (36) ಎಂದು ಗುರುತಿಸಲಾಗಿದೆ. ವಾಲ್ಮೀಕಿ ದೇವಸ್ಥಾನ ಸ್ವಚ್ಛಗೊಳಿ ಬಾಗಿಲು ಹಾಕುವಾಗ ಈ ದುರ್ಘಟನೆ ನಡೆದಿದೆ. ಜಿಟಿ ಜಿಟಿ ಮಳೆಯ ಪರಿಣಾಮ ಪಕ್ಕದಲ್ಲಿದ್ದ ವಿದ್ಯುತ್ ಕಂಬದಿಂದ ವಿದ್ಯುತ್ ಪ್ರವಹಿಸಿ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಅಬಘಡದಲ್ಲಿ ಮೃತ ಕಲಾವತಿಯ ಪತಿ ಮಾರುತಿ ಬಿದರವಾಡಿ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಬೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಬೆಳಗಾವಿ: ಮಳೆಯಿಂದ (Rain) ಸಂಪೂರ್ಣ ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ 1.2 ಲಕ್ಷ ರೂ. ಪರಿಹಾರದ (Compensation) ಜೊತೆಗೆ ಮನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಘೋಷಿಸಿದ್ದಾರೆ.
ಬೆಳಗಾವಿಯಲ್ಲಿ (Belagavi) ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಬಿಜೆಪಿ ಪರಿಹಾರ ವಿತರಣೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಕ್ಕೆ ಅವರು ಪ್ರತಿಕ್ರಿಯಿಸಿದ್ದಾರೆ.
ಈ ಹಿಂದೆ ಬಿ.ಎಸ್.ಯಡಿಯೂರಪ್ಪನವರು ಸಂಪೂರ್ಣ ಮನೆ ಹಾನಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಈ ನೆರವಿನ ಹಣ ದುರುಪಯೋಗವಾಯಿತು. ಹಲವರಿಗೆ ಮೊದಲ ಕಂತು ಮಾತ್ರ ಬಿಡುಗಡೆಯಾಗಿ, ಎರಡು ಹಾಗೂ ಮೂರನೇ ಕಂತಿನ ಪರಿಹಾರ ಇನ್ನೂ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ 1.2 ಲಕ್ಷ ರೂ. ಪರಿಹಾರ ಹಾಗೂ ಮನೆ ನೀಡುವ ನಿರ್ಧಾರ ಮಾಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಜನರ ಸಹಕಾರವಿದ್ದರೆ ಪದೇ ಪದೇ ಮುಳುಗಡೆಯಾಗುವ ಹಳ್ಳಿಗಳ ಸ್ಥಳಾಂತರ ಮಾಡುವ ಮೂಲಕ ಶಾಶ್ವತ ಪರಿಹಾರ ಒದಗಿಸಲು ಚಿಂತನೆ ಮಾಡಲಾಗುವುದು. ರಾಜ್ಯದ ಹಲವೆಡೆ ಮಳೆಯಿಂದ ಹಾನಿಯಾಗಿದೆ. ಎಲ್ಲ ಕಡೆ ಪರಿಹಾರ ಕೆಲಸಗಳನ್ನು ಪ್ರಾರಂಭಿಸಲಾಗಿದೆ. ಮೈಸೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಭೇಟಿನೀಡಲಾಗಿದ್ದು, ಮೃತಪಟ್ಟವರಿಗೆ ಹಾಗೂ ಜಾನುವಾರುಗಳು ಸತ್ತಿರುವುದಕ್ಕೆ ಕೂಡಲೇ ಪರಿಹಾರ ವಿತರಿಸಲಾಗುತ್ತಿದೆ. ಮನೆಗಳು ಬಿದ್ದಿರುವುದಕ್ಕೆ ಪರಿಹಾರ, ವಿದ್ಯುತ್ ಕಂಬ, ಟ್ರಾನ್ಸ್‍ಫಾರ್ಮರ್‌ಗಳ ದುರಸ್ತಿ ಮೊದಲಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಮಳೆಗೆ ಕಟ್ಟೆಚ್ಚರ ವಹಿಸಲು ಸೂಚನೆ:
ಬೆಳಗಾವಿಯಲ್ಲಿ ಕಳೆದ 42 ದಿನದಿಂದ ನಿರಂತರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡುವಂತೆ ಸೂಚಿಸಲಾಗಿದೆ. ಮುಂದಿನ ವಾರ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಇದಕ್ಕಾಗಿ ಕಂದಾಯ, ವಿಪತ್ತು ನಿರ್ವಹಣೆ, ಅರಣ್ಯ ಇಲಾಖೆ, ಇಂಧನ, ನೀರಾವರಿ ಸೇರಿದಂತೆ ಎಲ್ಲಾ ಇಲಾಖೆಗಳು ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಗೃಹಲಕ್ಷ್ಮಿ ಮೂರು ತಿಂಗಳಿನಿಂದ ಬಾಕಿ ಇದೆ ಎಂಬ ಪತ್ರಕರ್ತರ ಪ್ರಶ್ನೆಗೆ ಜುಲೈ ತಿಂಗಳಿನದ್ದು ಮಾತ್ರ ಬಾಕಿ ಇದೆ. ಅದನ್ನೂ ಶೀಘ್ರವೇ ವಿತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಮುಂದುವರಿದ ಧಾರಾಕಾರ ಮಳೆ ಹಿನ್ನೆಲೆ ನಿಯಂತ್ರಣ ತಪ್ಪಿ ಉಕ್ಕಿಹರಿಯುವ ಮಾರ್ಕಂಡೇಯ ನದಿಗೆ (Markandeya River) ಬೈಕ್ ಬಿದ್ದಿರುವ ಕಂಗ್ರಾಳಿ ಬಳಿಯ ಮಾರ್ಕಂಡೇಯ ನದಿಯಲ್ಲಿ ಘಟನೆ ನಡೆದಿದೆ.
ಬೆಳಗಾವಿ ತಾಲೂಕಿನ ಅಲತ್ತಗಾ ಗ್ರಾಮದ ಓಂಕಾರ ಅರುಣ ಪಾಟೀಲ (23), ನಾಪತ್ತೆಯಾದವ, ಜ್ಯೋತಿನಾಥ್ ಪಾಟೀಲ ಈಜಿ ದಡ ಸೇರಿದವ. ಬೈಕ್‌ನಲ್ಲಿ ಹೋಗುತ್ತಿದ್ದ ಸಹೋದರರ ಪೈಕಿ ಓರ್ವನ ರಕ್ಷಣೆ ಮಾಡಿದ್ದು ಮತ್ತೋರ್ವ ನಾಪತ್ತೆ ಆಗಿದ್ದಾನೆ. ಸದ್ಯ ನಾಪತ್ತೆಯಾದ ಮತ್ತೋರ್ವ ಸಹೋದರನ ಪತ್ತೆಗೆ ಶೋಧ ಕಾರ್ಯಾಚರಣೆ ಮುಂದುವರೆದಿದ್ದು ಬೆಳಗಾವಿ ತಾಲೂಕಿನ ಕಂಗ್ರಾಳಿ ಬಳಿಯಿರುವ ಮಾರ್ಕಂಡೇಯ ನದಿಯಲ್ಲಿ ಕಾರ್ಯಾಚರಣೆ ಮಾಡಲಾಗುತ್ತಿದೆ. ಇದನ್ನೂ ಓದಿ: ವಯನಾಡು ಭೂಕುಸಿತಕ್ಕೆ ಗೋ ಹತ್ಯೆ ಕಾರಣ – ಬಿಜೆಪಿ ನಾಯಕ ವಿವಾದಾತ್ಮಕ ಹೇಳಿಕೆ
ಸೋಮವಾರ (ಆ.4) ಶ್ರಾವಣ ಅಮಾವಾಸ್ಯೆ ಹಿನ್ನೆಲೆ ಕಟ್ಟಿಂಗ್ ಮಾಡಿಸಿಕೊಳ್ಳಲು ಬೆಳಗಾವಿಗೆ ಬರುತ್ತಿದ್ದಾಗ ಬೈಕ್ ಸವಾರನ ನಿಯಂತ್ರಣ ತಪ್ಪಿ ಹರಿಯುವ ನೀರಿನಲ್ಲಿ ಬೈಕ್ ಬಿದ್ದಿದೆ. ಈ ವೇಳೆ ಜ್ಯೋತಿನಾಥ ಪಾಟೀಲ ಅಪಾಯದಿಂದ ಪಾರಾಗಿದ್ದು ಈಜಿಕೊಂಡು ದಡ ಸೇರಿದ್ದು ಮತ್ತೋರ್ವ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ಶೋಧ ಕಾರ್ಯಾಚರಣೆ ಮುಂದಯವರಿದಿದೆ. ಸ್ಥಳಕ್ಕೆ ಬೆಳಗಾವಿ ನಗರ ಡಿಸಿಪಿ ಪಿ.ವಿ ಸ್ನೇಹಾ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ: 104 ಸಂಭವನೀಯ ಭೂಕುಸಿತ, ಪ್ರವಾಹ ಪ್ರದೇಶಗಳ ಗುರುತು – 2,995 ಕುಟುಂಬಗಳ ಸ್ಥಳಾಂತರಕ್ಕೆ ಪ್ಲ್ಯಾನ್
ಬೆಳಗಾವಿ: ಘಟಪ್ರಭಾ ನದಿಯ (Ghataprabha River) ಅಬ್ಬರಕ್ಕೆ ಗೋಕಾಕ್ (Gokak) ತಾಲೂಕಿನ ಮೆಳವಂಕಿ ಗ್ರಾಮದಲ್ಲಿರುವ 500ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿ ಊರಿಗೆ ಊರೇ ಜಲ ಪ್ರಳಯದಲ್ಲಿ (Flood) ಮುಳುಗಿಹೊಗಿದೆ.
ಮನೆಗಳ ಅರ್ಧದಷ್ಟು ಭಾಗ ನೀರಿನಲ್ಲಿ ಮುಳುಗಿದೆ. ನಡು ರಸ್ತೆಯಲ್ಲಿಯೇ ಸೊಂಟದ ಮಟ್ಟದವರೆಗೆ ನೀರು ನಿಂತಿದೆ. 2019, 2021ರಲ್ಲೂ ಸಹ ಮುಳುಗಿ ಮೆಳವಂಕಿ ಗ್ರಾಮ ನಡು ಗಡ್ಡೆಯಂತಾಗಿತ್ತು. ಈಗ ಮತ್ತೊಮ್ಮೆ ನೀರಿನಲ್ಲಿ ಗ್ರಾಮ ಮುಳುಗಿದೆ.
ಬೆಳಗಾವಿ: ಘಟಪ್ರಭಾ ನದಿಯ ಪ್ರವಾಹದ ಅಬ್ಬರಕ್ಕೆ ಬೆಳಗಾವಿಯ ಮಸಗುಪ್ಪಿ ಗ್ರಾಮ ಸಂಪೂರ್ಣವಾಗಿ ಜಲಾವೃತವಾಗಿದೆ.
ಸಾವಿರಾರು ಮನೆಗಳ ಸುತ್ತಮುತ್ತ ಸಾಗರ ರೀತಿಯಲ್ಲಿ ನೀರು ಆವರಿಸಿಕೊಂಡಿದೆ. ಮಸಗುಪ್ಪಿ ಗ್ರಾಮದ ಸುತ್ತಮುತ್ತ ಗ್ರಾಮದ ಜಲಭಾಧೆಯಲ್ಲಿ ಜರ್ಜರಿತವಾಗಿದೆ. ನೀರು ಆವರಿಸಿದ ಗ್ರಾಮದ ದೃಶ್ಯ ಗಳು ಪಬ್ಲಿಕ್ ಟಿವಿಯ ಡ್ರೋಣ ಕ್ಯಾಮರಾದಲ್ಲಿ ಸೆರೆಯಾಗಿವೆ.
ಮಸಗುಪ್ಪಿ ಗ್ರಾಮ ಜಲಾವೃತ
ಖಾನಾಪುರ ಮತ್ತು ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಆಗುತ್ತಿರುವ ಹಿನ್ನಲೆಯಲ್ಲಿ ಬೆಳಗಾವಿ (Belagavi) ಜಿಲ್ಲೆಯ ಸವದತ್ತಿ (Savadatti) ತಾಲೂಕಿನಲ್ಲಿನ ನವಿಲುತೀರ್ಥ ಜಲಾಶಯದಿಂದ (Naviluteertha Dam) ನೀರು ಬಿಡುಗಡೆ ಮಾಡಲಾಗಿದೆ.
ಮಲಪ್ರಭಾ ನದಿಗೆ (Malaprabha River) ಅಡ್ಡಲಾಗಿ ಮುನವಳ್ಳಿ ಸಮೀಪ ಕಟ್ಟಲಾಗಿರುವ ನವೀಲುತೀರ್ಥ ಜಲಾಶಯ 2079.50 ಅಡಿ ಇದ್ದು ಈಗಾಗಲೇ 2072 ಅಡಿ ನೀರು ಸಂಗ್ರಹವಾಗಿದೆ. ಜಲಾಶಯ ಭರ್ತಿಗೆ 7 ಅಡಿ ಬಾಕಿ ಇರುವುದರಿಂದ ಜಲಾಶಯದಿಂದ ನೀರು ಬಿಡಲಾಗಿದೆ. ಮಲಪ್ರಭಾ ನದಿಗೆ 20 ಸಾವಿರ ಕ್ಯೂಸೆಕ್ ಒಳಹರಿವು ಇದೆ. ಹಾಗಾಗಿ ನವೀಲುತೀರ್ಥ ಜಲಾಶಯದಿಂದ 5000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ.
ಮಸಗುಪ್ಪಿ ಗ್ರಾಮ ಜಲಾವೃತ
ಮಲಪ್ರಭಾ ನದಿಗೆ ನೀರು ಬಿಡುಗಡೆ ಮಾಡಿರುವ ಹಿನ್ನೆಲೆ ರಾಮದುರ್ಗ, ಮುನವಳ್ಳಿ ಸೇರಿದಂತೆ ಮಲಪ್ರಭಾ ತೀರದ ಜನರಿಗೆ ಪ್ರವಾಹದ ಆತಂಕ ಸೃಷ್ಟಿಯಾಗಿದೆ.
ಮೊಸಳೆ ಪ್ರತ್ಯಕ್ಷ: ಉಕ್ಕಿಹರಿಯುತ್ತಿರುವ ಮಲಪ್ರಭಾ ನದಿ ತಟದಲ್ಲಿ ಬೃಹತ್ ಮೊಸಳೆಯೊಂದು ಪ್ರತ್ಯಕ್ಷವಾಗಿದೆ. ಬೈಲಹೊಂಗಲ ತಾಲೂಕಿನ ಮಾಟೋಳ್ಳಿ ಗ್ರಾಮದ ಬಳಿ ನದಿ ದಂಡೆಯ ಮೇಲೆ ಕಾಣಿಸಿಕೊಂಡಿದ್ದು, ಮೊಬೈಲ್ ನಲ್ಲಿ ಸ್ಥಳೀಯರು ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ಮೊಸಳೆ ಪ್ರತ್ಯಕ್ಷದಿಂದ ಈ ಭಾಗದ ರೈತರಲ್ಲಿ ಆತಂಕ ಮೂಡಿದೆ. ಹಾಗಾಗಿ, ತಕ್ಷಣವೇ ಅರಣ್ಯ ಇಲಾಖೆ ಅಧಿಕಾರಿಗಳು ಮೊಸಳೆ ಪತ್ತೆ ಹಚ್ಚುವಂತೆ ಇಲ್ಲಿನ ಜನರು ಮನವಿ ಮಾಡಿಕೊಂಡಿದ್ದಾರೆ.
ಬೆಳಗಾವಿ: ಮನೆಗೆ ಪ್ರವಾಹದ ನೀರು ನುಗ್ಗಿದ ವಿಚಾರ ಕೇಳಿ ಮನೆಯ ಮಾಲೀಕ ಹೃದಯಾಘಾತದಿಂದ (Heart attack) ಮೃತಪಟ್ಟ ಘಟನೆ ಗೋಕಾಕ್‌ನ ಡಾಳಂಬರಿ ತೋಟದ ಬೋಜಗಾರ ಗಲ್ಲಿಯಲ್ಲಿ ನಡೆದಿದೆ.
ಮೃತರನ್ನು ಗ್ರಾಮದ ದಶರಥ ಬಂಡಿ (72) ಎಂದು ಗುರುತಿಸಲಾಗಿದೆ. ಘಟಪ್ರಭಾ ನದಿಯಿಂದ (Ghataprabha River) ಪ್ರವಾಹ (Flood) ಬಂತು ಎಲ್ಲರೂ ಮನೆ ಖಾಲಿ ಮಾಡಿ ಎಂಬ ಸುದ್ದಿ ಕೇಳುತ್ತಿದ್ದಂತೆ ಅವರಿಗೆ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ.
ಧಾರಾಕಾರದ ಮಳೆಯಲ್ಲಿಯೇ ಅವರ ಅಂತ್ಯ ಸಂಸ್ಕಾರ ಮಾಡಿದ ಕುಟುಂಬ, ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿದೆ. ಒಂದೆಡೆ ತಂದೆಯ ಸಾವು, ಇನ್ನೊಂದೆಡೆ ಮನೆ ಮುಳುಗಡೆಯಿಂದ ದಿಕ್ಕು ತೋಚದಂತಾಗಿದೆ ಎಂದು ಮೃತರ ಮಗಳು ಲಕ್ಷ್ಮೀ ಬಂಡಿ `ಪಬ್ಲಿಕ್ ಟಿವಿ’ ಜೊತೆ ದುಃಖ ತೋಡಿಕೊಂಡಿದ್ದಾರೆ.
ಕಳೆದ ಕೆಲವು ದಿನಗಳಿಂದ ಬೆಳಗಾವಿ ಸುತ್ತಮುತ್ತ ಭಾರೀ ಮಳೆಯಾಗುತ್ತಿದ್ದು, ಘಟಪ್ರಭಾ ನದಿಯ ನೀರು ತೀವ್ರ ಏರಿಕೆಯಾಗಿದೆ. ಇದೀಗ ನದಿ ಪಾತ್ರಗಳಲ್ಲಿರುವ ಗ್ರಾಮಗಳಿಗೂ ನದಿ ನೀರು ನುಗ್ಗುತ್ತಿದ್ದು, ಅಪಾರ ಪ್ರಮಾಣದ ಹಾನಿಯುಂಟು ಮಾಡಿದೆ.
ಚಿಕ್ಕೋಡಿ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಸಹೋದರರಿಬ್ಬರು ಪರಸ್ಪರ ಹೊಡೆದುಕೊಂಡು ಸಾವನ್ನಪ್ಪಿದ ಘಟನೆ ಬೆಳಗಾವಿಯ (Belagavi) ಅಥಣಿ (Athani) ತಾಲೂಕಿನ ಖೋತವಾಡಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಹಣಮಂತ ರಾಮಚಂದ್ರ ಖೋತ (35) ಹಾಗೂ ಖಂಡೋಭಾ ತಾನಾಜಿ ಖೋತ (30) ಎಂದು ಗುರುತಿಸಲಾಗಿದೆ. ಭೂ ವಿವಾದ ಹಿನ್ನೆಲೆಯಲ್ಲಿ ಸಹೋದರ ಸಂಬಂಧಿಗಳ ನಡುವೆ ಸೋಮವಾರ ರಾತ್ರಿ ಗಲಾಟೆ ನಡೆದಿತ್ತು. ಈ ವೇಳೆ ಒಬ್ಬರಿಗೊಬ್ಬರು ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿದ್ದರು. ಹೊಡೆದಾಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ಮಹಾರಾಷ್ಟ್ರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಸಾವನ್ನಪ್ಪಿದ್ದಾರೆ.
ಈ ಸಂಬಂಧ ಅಥಣಿ ಪೊಲೀಸ್ (Athani Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಬೆಳಗಾವಿ ಎಸ್‍ಪಿ ಭೀಮಶಂಕರ್ ಗುಳೇದ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ಬೆಳಗಾವಿಗೆ (Belagavi) ವಂದೇ ಭಾರತ್ ರೈಲು (Vande Bharat Express) ವಿಸ್ತರಣೆ ಮಾಡಲು ಮೂಲಭೂತ ಸೌಕರ್ಯಗಳ ಕೊರತೆ ಸರಿಯಿಲ್ಲ ಎಂದು ರೈಲ್ವೆ ಇಲಾಖೆ ಪ್ರಸ್ತಾವನೆ ತಿರಸ್ಕಾರ ಮಾಡಿದೆ ಎಂದು ಮೂಲಭೂತ ಸೌಕರ್ಯಗಳ ಸಚಿವ ಎಂಬಿ ಪಾಟೀಲ್ (MB Patil) ತಿಳಿಸಿದ್ದಾರೆ.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಪ್ರಕಾಶ್ ಹುಕ್ಕೇರಿ ಪ್ರಶ್ನೆಗೆ ಎಂಬಿ ಪಾಟೀಲ್ ಉತ್ತರಿಸಿದರು. ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಯೋಜನೆಯನ್ನು ಬೆಳಗಾವಿಗೆ ವಿಸ್ತರಣೆ ಮಾಡಬೇಕು. ಈಗಾಗಲೇ ರೈಲ್ವೆ ಇಲಾಖೆ ಟ್ರಯಲ್ ರನ್ ಮಾಡಿದೆ. ಆದರೆ ಈಗ ಮೂಲಭೂತ ಸೌಕರ್ಯಗಳ ಕೊರತೆ ಇದೆ ಎಂದು ಹೇಳಿ ಯೋಜನೆ ವಿಸ್ತರಣೆ ಮಾಡುವುದಿಲ್ಲ ಎಂದು ಹೇಳಿದೆ. ಇದಕ್ಕೆ ನಾವು ಒಪ್ಪುವುದಿಲ್ಲ. ಕೂಡಲೇ ಬೆಳಗಾವಿಗೆ ವಂದೇ ಭಾರತ್ ವಿಸ್ತರಣೆ ಮಾಡಲು ಕ್ರಮವಹಿಸಿ. ವಂದೇ ಭಾರತ್ ವಿಸ್ತರಣೆ ಮಾಡದೇ ಹೋದರೆ ರಾಜ್ಯ ಸರ್ಕಾರ ರೈಲ್ವೆ ಯೋಜನೆಗೆ ಬಿಡುಗಡೆ ಮಾಡುವ ಹಣ ತಡೆಹಿಡಿಯಿರಿ ಎಂದು ಒತ್ತಾಯಿಸಿದರು. ಇದನ್ನೂ ಓದಿ: ಆಭರಣ ಪ್ರಿಯರಿಗೆ ಸಿಹಿ ಸುದ್ದಿ – ಕಡಿಮೆಯಾಗಲಿದೆ ಚಿನ್ನ, ಬೆಳ್ಳಿ ದರ
ಇದಕ್ಕೆ ಸಚಿವ ಎಂಬಿ ಪಾಟೀಲ್ ಉತ್ತರ ನೀಡಿ, ರೈಲ್ವೆ ಇಲಾಖೆಯಿಂದ ಮಾಹಿತಿ ಪಡೆದು ಉತ್ತರ ನೀಡಲಾಗಿದೆ. ಈಗಾಗಲೇ ರೈಲ್ವೆ ಇಲಾಖೆ ಟ್ರಯಲ್ ರನ್ ಮಾಡಿದೆ. ಟ್ರಯಲ್ ಮಾಡಿ ಮೂಲಭೂತ ಸೌಕರ್ಯಗಳು ಇಲ್ಲ ಎಂದು ವಿಸ್ತರಣೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ನಾವು ಮತ್ತೆ ಮನವಿ ಮಾಡುತ್ತೇವೆ. ರೈಲ್ವೆ ಸಚಿವರು ನಮ್ಮ ರಾಜ್ಯದವರೇ ಆಗಿದ್ದಾರೆ. ಹೀಗಾಗಿ ಮತ್ತೊಮ್ಮೆ ಬೆಳಗಾವಿಗೆ ವಂದೇ ಭಾರತ್ ರೈಲು ವಿಸ್ತರಣೆ ಮಾಡುವ ಬಗ್ಗೆ ಮನವಿ ಮಾಡುತ್ತೇವೆ ಎಂದರು. ಇದನ್ನೂ ಓದಿ: ಬಜೆಟ್ 2024 – ಯಾವೆಲ್ಲ ವಸ್ತುಗಳ ಬೆಲೆ ಏರಿಕೆ? ಯಾವುದರ ಬೆಲೆ ಇಳಿಕೆ?
ಬೆಳಗಾವಿ: ಬಸ್ ಟಿಕೆಟ್ ದರ ಹೆಚ್ಚಿಸುವ ಚಿಂತನೆಯಲ್ಲಿದ್ದೇವೆ ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ರಾಜು ಕಾಗೆ (Raju Kage) ತಿಳಿಸಿದ್ದಾರೆ.
ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನಂತರ ಬಸ್ ಟಿಕೆಟ್ ದರ ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿರುವ ಬಗ್ಗೆ ರಾಜು ಕಾಗೆ ಸುಳಿವು ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ ನಷ್ಟದಲ್ಲಿದೆ. ಡಿಸೇಲ್ ಹಾಗೂ ಬಸ್ ಸ್ಪೇರ್ ಪಾರ್ಟ್ಸ್‌ಗಳ ದರ ಕೂಡ ಹೆಚ್ಚಾಗಿದೆ. ಕಳೆದ 10 ವರ್ಷಗಳಿಂದ ಟಿಕೆಟ್ ದರ ಏರಿಕೆ ಮಾಡಿಲ್ಲ. ಶಕ್ತಿ ಯೋಜನೆಯಿಂದ ನಾವು ನಷ್ಟದಲ್ಲಿದ್ದೇವೆ. ಆದರೂ ನಾವು ನಡೆಸಿಕೊಂಡು ಹೋಗುತ್ತಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರು ಮೆಟ್ರೋ ನಿಲ್ದಾಣಗಳಿಗೆ ಶಂಕರ್ ನಾಗ್, ಅಪರ್ಣಾ ಹೆಸರಿಡಿ: ಸರ್ಕಾರಕ್ಕೆ ಯತ್ನಾಳ್ ಆಗ್ರಹ
ನಿಗಮದ ಆಸ್ತಿಗಳನ್ನು ಪರಭಾರೆ ಮಾಡ್ತೀವಿ. ಸಂಸ್ಥೆಗೆ ಸೇರಿದ ಹಳೆ ಬಿಲ್ಡಿಂಗ್ ನವೀಕರಿಸಿ ಬಾಡಿಗೆ ಕೊಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.
ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಕೆಲ ವಾರಗಳ ಹಿಂದೆ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಟ್ಯಾಕ್ಸ್ ಹೆಚ್ಚಳ ಹಿನ್ನೆಲೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಿಸಿದೆ. ಈ ಹಿಂದೆ ಟ್ಯಾಕ್ಸ್ ದರ ಪೆಟ್ರೋಲ್- 25.92% ಇದ್ದದ್ದು, ಈಗ 29.84% ಗೆ ಏರಿಕೆ (3.9% ಹೆಚ್ಚಳ)ಯಾಗಿದೆ. ಅಂತೆಯೇ ಡಿಸೇಲ್ ಈ ಹಿಂದೆ- 14.34% ಇದ್ದದ್ದು, ಈಗ 18.44%ಗೆ ಏರಿಕೆ ಕಂಡಿದೆ (4.1% ರಷ್ಟು ಏರಿಕೆ). ಇದನ್ನೂ ಓದಿ: ಯಾದಗಿರಿಯಲ್ಲಿ ಕಲುಷಿತ ನೀರು ಸೇವಿಸಿ 9 ಮಂದಿ ಅಸ್ವಸ್ಥ – ಕಾಕಲವಾರ ಗ್ರಾಪಂ ಪಿಡಿಒ ಅಮಾನತು