Tag: belagavi

  • ಸುಳ್ಳು ಅತ್ಯಾಚಾರ ಕೇಸ್ – ದೂರುದಾರೆ ಸೇರಿ 13 ಜನರಿಗೆ ಜೈಲು

    ಸುಳ್ಳು ಅತ್ಯಾಚಾರ ಕೇಸ್ – ದೂರುದಾರೆ ಸೇರಿ 13 ಜನರಿಗೆ ಜೈಲು

    ಬೆಳಗಾವಿ: ಹೆಸ್ಕಾಂ ಸಹಾಯಕ ಇಂಜಿನಿಯರ್ ವಿರುದ್ಧ ಸುಳ್ಳು ಅತ್ಯಾಚಾರ ಕೇಸ್ ದಾಖಲಿಸಿದ್ದ ದೂರುದಾರೆ ಸೇರಿದಂತೆ 13 ಜನರಿಗೆ ಬೆಳಗಾವಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 3 ವರ್ಷ 6 ತಿಂಗಳು ಶಿಕ್ಷೆ ವಿಧಿಸಿದೆ.

    ಬಿ.ವಿ.ಸಿಂಧು ಸುಳ್ಳು ಕೇಸ್ ದಾಖಲಿಸಿ ಜೈಲು ಸೇರಿದ ಮಹಿಳೆಯಾಗಿದ್ದಾಳೆ. ಅಪರಾಧಿ ಸಿಂಧು ಅಂದಿನ ಹೆಸ್ಕಾಂ ಸಹಾಯಕ ಅಧೀಕ್ಷಕ ಅಭಿಯಂತರರಾದ ತುಕಾರಾಮ್ ಮಜ್ಜಿಗೆಯವರ ವಿರುದ್ಧ ಅತ್ಯಾಚಾರ ಹಾಗೂ ಜೀವ ಬೆದರಿಕೆ ಕೇಸ್ ದಾಖಲಿಸಿದ್ದಳು. ಸುಳ್ಳು ಕೇಸ್ ಎಂದು ವಿಚಾರಣೆ ವೇಳೆ ಸಾಬೀತಾದ ಹಿನ್ನೆಲೆ ದೂರುದಾರೆ ಬಿ.ವಿ ಸಿಂಧು ಸೇರಿ 13 ಜನರಿಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ. ಅಲ್ಲದೇ ಹದಿಮೂರು ಆರೋಪಿಗಳಿಗೂ ತಲಾ 86ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.

    ಏನಿದು ಪ್ರಕರಣ?: 2014ರ ನವೆಂಬರ್ 19ರಂದು ಮಾಳಮಾರುತಿ ಠಾಣೆಯಲ್ಲಿ ಅತ್ಯಾಚಾರ, ಜೀವ ಬೆದರಿಕೆ, ಆತ್ಮಹತ್ಯೆ ಪ್ರಚೋದನೆ ಆರೋಪ ಮಾಡಿ ಕೇಸ್ ದಾಖಲು ಮಾಡಿದ್ದರು. ಈ ಪ್ರಕರಣದಲ್ಲಿ ವಿಚಾರಣೆ ನಡೆಸಿದ ಮಾಳಮಾರುತಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಅತ್ಯಾಚಾರ, ಜೀವ ಬೆದರಿಕೆ ಹಾಕಿದ್ದು ಸುಳ್ಳು ಎಂದು ತನಿಖೆಯಲ್ಲಿ ಬಯಲಾಗಿದೆ.

    ಇತರೆ ಅಪರಾಧಿಗಳ ಪ್ರಚೋದನೆಗೆ ಒಳಗಾಗಿ ಸುಳ್ಳು ದೂರು ನೀಡಿದ್ದಾಗಿ ಕೋರ್ಟ್‍ಗೆ ಸಿಂಧು ಹೇಳಿದ್ದರು. 2017ರಲ್ಲಿ ದೂರುದಾರೆ ಸಿಂಧು ಸೇರಿ 13 ಜನರ ವಿರುದ್ಧ ಮಜ್ಜಗಿ ಕೇಸ್ ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ 13 ಜನ ಸಾಕ್ಷಿದಾರರಿಂದ 81 ಸಾಕ್ಷಿಗಳನ್ನು ಪೊಲೀಸರು ಸಂಗ್ರಹಿಸಿದ್ದರು.

  • ಮೂವರು ಮಕ್ಕಳನ್ನ ಬಿಟ್ಟು ವ್ಯಕ್ತಿ ಜೊತೆ ಓಡಿ ಹೋದ ತಾಯಿ – ಪೊಲೀಸ್ ಠಾಣೆ ಮೆಟ್ಟಿಲೇರಿದ ಮಕ್ಕಳು

    ಮೂವರು ಮಕ್ಕಳನ್ನ ಬಿಟ್ಟು ವ್ಯಕ್ತಿ ಜೊತೆ ಓಡಿ ಹೋದ ತಾಯಿ – ಪೊಲೀಸ್ ಠಾಣೆ ಮೆಟ್ಟಿಲೇರಿದ ಮಕ್ಕಳು

    ಬೆಳಗಾವಿ: ಹೆತ್ತ ಮಕ್ಕಳನ್ನು ಬಿಟ್ಟು 40 ವರ್ಷದ ವ್ಯಕ್ತಿಯ ಜೊತೆಗೆ ತಾಯಿ (Mother) ಓಡಿ ಹೋಗಿರುವ ವಿಚಿತ್ರ ಘಟನೆ ಬೆಳಗಾವಿಯ (Belagavi) ಗಣೇಶಪುರದಲ್ಲಿ ನಡೆದಿದ್ದು, ತಾಯಿಗಾಗಿ ಮಕ್ಕಳು ಬೆಳಗಾವಿ ಕ್ಯಾಂಪ್ ಪೊಲೀಸರ (Police) ಮೊರೆ ಹೋಗಿದ್ದಾರೆ.

    ಹೆತ್ತ ಮಕ್ಕಳನ್ನು ಬೀದಿಗೆ ಬಿಟ್ಟು ವ್ಯಕ್ತಿಯ ಜೊತೆಗೆ ಕಳೆದ ಕೆಲ ತಿಂಗಳಿನಿಂದ ಆ ಮಹಿಳೆ ಜೀವನ ನಡೆಸುತ್ತಿದ್ದಾಳೆ. ಸರ್ಕಾರಿ ನೌಕರಿಯಲ್ಲಿದ್ದ ಪತಿಯ ಅಕಾಲಿಕ ನಿಧನ ಹಿನ್ನೆಲೆಯಲ್ಲಿ ಅನುಕಂಪದ ಆಧಾರದಲ್ಲಿ ನೌಕರಿ ಗಿಟ್ಟಿಸಿಕೊಂಡಿದ್ದಳು. ತಂದೆ ತೀರಿ ಹೋದ ಬಳಿಕ ತಾಯಿ ಆಶ್ರಯದಲ್ಲಿದ್ದ ಮಕ್ಕಳೀಗ ಬೀದಿಗೆ ಬಂದಿದ್ದಾರೆ. ಇದನ್ನೂ ಓದಿ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು – ಮೈಸೂರು, ಹಾಸನ ಜಿಲ್ಲೆಗೆ ಪ್ರವೇಶಿಸದಂತೆ ಷರತ್ತು

     

    ತಾಯಿ ಬಿಟ್ಟು ಹೋಗಿದ್ದರಿಂದ ಆತಂಕಿತರಾಗಿರುವ ಮಕ್ಕಳು, ತಾಯಿ ಕಾಣೆಯಾಗಿದ್ದಾಳೆಂದು ಕ್ಯಾಂಪ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ವೇಳೆ ತಾಯಿ ಬೇರೊಬ್ಬನ ಜೊತೆಗೆ ನೆಲೆಸಿದ್ದಾಳೆ ಎಂಬ ವಿಚಾರ ಗೊತ್ತಾಗಿದೆ. ಆತನ ಬಿಟ್ಟು ತಮ್ಮ ಜೊತೆಗೆ ಬರುವಂತೆ ಹಲವು ಬಾರಿ ಮಕ್ಕಳು ಮನವಿ ಮಾಡಿಕೊಂಡರೂ ನಿಮ್ಮೊಟ್ಟಿಗೆ ನಾನು ಬರುವುದಿಲ್ಲ ಎಂದು 40 ವರ್ಷದ ತಾಯಿ ಹಠ ಹಿಡಿದು ಕುಳಿತಿದ್ದಾಳೆ.

    ತಾಯಿಯನ್ನು ತಮ್ಮೊಟ್ಟಿಗೆ ಕಳುಹಿಸುವಂತೆ ಪೊಲೀಸರಿಗೆ ಮಕ್ಕಳು ಮನವಿ ಮಾಡಿಕೊಂಡರೆ, ಮಕ್ಕಳೊಟ್ಟಿಗೆ ಹೋಗಲ್ಲ ಅಂತಾ ತಾಯಿ ಪಟ್ಟು ಹಿಡಿದಿದ್ದಾಳೆ. ಹಾಗಾಗಿ ಅಡಕತ್ತರಿ ಕ್ಯಾಂಪ್ ಠಾಣೆ ಪೊಲೀಸರು‌ ಸಿಲುಕುವಂತಾಗಿದೆ.

     
    ಬಾಡಿಗೆ ಕಟ್ಟದ್ದಕ್ಕೆ ಮನೆ ಮಾಲೀಕರು ಮಕ್ಕಳನ್ನು ಮನೆಯಿಂದ ಹೊರಗೆ ಹಾಕಿದ್ದಾರೆ. ತಾಯಿ ಬಂದರೆ ನಾವೇ ಶಾಲೆ, ಕಾಲೇಜು ಬಿಟ್ಟು ಕೆಲಸಕ್ಕೆ ಹೋಗಿ ಸಾಕುತ್ತೇವೆ ಎಂದು ಮಕ್ಕಳು ಕೇಳಿಕೊಳ್ಳುತ್ತಿದ್ದಾರೆ.

    ಇನ್ನು ಈ ಕುರಿತು ತಾಯಿಯನ್ನು ಮಾಧ್ಯಮಗಳು ಕೇಳಿದಕ್ಕೆ, ಇದು ನಮ್ಮ ವೈಯಕ್ತಿಕ ವಿಚಾರ. ಇದನ್ನು ಕೇಳಲು ನೀವ್ಯಾರು ಎಂದು ರೋಷಾವೇಷ ತೋರಿದ್ದಾಳೆ.

  • ಸುಪಾರಿ ಕೊಟ್ಟು ತಮ್ಮನನ್ನೇ ಕೊಲ್ಲಿಸಿದ ಅಣ್ಣ – ಹತ್ಯೆಗೈದಿದ್ದ 8 ಆರೋಪಿಗಳು ಅಂದರ್

    ಸುಪಾರಿ ಕೊಟ್ಟು ತಮ್ಮನನ್ನೇ ಕೊಲ್ಲಿಸಿದ ಅಣ್ಣ – ಹತ್ಯೆಗೈದಿದ್ದ 8 ಆರೋಪಿಗಳು ಅಂದರ್

    ಚಿಕ್ಕೋಡಿ: ಆಸ್ತಿಗಾಗಿ ಒಡಹುಟ್ಟಿದ ತಮ್ಮನನ್ನೇ ಸುಪಾರಿ ಕೊಟ್ಟು ಹತ್ಯೆ ಮಾಡಿಸಿದ ಪ್ರಕರಣ ಬೆಳಗಾವಿಯ ರಾಯಬಾಗ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ನಡೆದಿದೆ.

    ಬೆಳಗಾವಿಯ (Belagavi) ಸುಲ್ತಾನಪುರ ಗ್ರಾಮದ ಈರಪ್ಪ ಚೌಗಲಾ (24) ಹತ್ಯೆಗೀಡಾದ ದುರ್ದೈವಿ. ಕೇವಲ ಒಂದು ಎಕರೆ ಜಮೀನಿಗಾಗಿ ಈರಪ್ಪನನ್ನು ಆತನ ಸಹೋದರ ಶ್ರೀಶೈಲ್ ಚೌಗಲಾ ಕೊಲೆ ಮಾಡಿಸಿದ್ದಾನೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಪವಿತ್ರಾಗೌಡ ಮನೆಯಲ್ಲಿ ಸ್ಥಳ ಮಹಜರು – ಮನೆಯ ಮೂಲೆಮೂಲೆಯನ್ನೂ ಜಾಲಾಡಿದ ಅಧಿಕಾರಿಗಳು

    ಜೂ.4ರ ಸಂಜೆ 9 ಗಂಟೆ ವೇಳೆಗೆ ತೋಟದ ಮನೆ ಕಡೆಗೆ ತೆರಳುವಾಗ ಕಾರ್‌ನಲ್ಲಿ ಬಂದ ದುಷ್ಕರ್ಮಿಗಳು ಈರಪ್ಪನನ್ನ ಅಪಹರಿಸಿದ್ದರು. ಬಳಿಕ ಬಾಗಲಕೋಟೆಯ (Bagalkote) ಕೋಲಾರ್ ಜಾಕ್ವೆಲ್ ಬಳಿ ಆತನನ್ನು ಹತ್ಯೆಗೈದು ಮೃತದೇಹವನ್ನು ಎಸೆದಿದ್ದರು.

    ಈರಪ್ಪನ ಅಪಹರಿಸಿ ಹತ್ಯೆಗೈದ 8 ಜನ ಆರೋಪಿಗಳನ್ನು ಹಾರೋಗೇರಿ ಪೊಲಿಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಹತ್ಯೆಗೀಡಾದ ಈರಪ್ಪನ ಸಹೋದರನೇ ಸುಪಾರಿ ಕೊಟ್ಟಿರುವುದು ತಿಳಿದು ಬಂದಿದ್ದು, ಆತನನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

    ಈ ಸಂಬಂಧ ಹಾರೂಗೇರಿ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಮಗು ಮಾರಾಟ ಜಾಲ ಕೇಸ್ – ತೋಟದಲ್ಲಿ ಹೂತಿಟ್ಟಿದ್ದ ಭ್ರೂಣಗಳು ಪತ್ತೆ

  • ಬೆಳಗಾವಿಯಲ್ಲಿ ಮಗು ಮಾರಾಟ ಜಾಲ ಕೇಸ್ – ತೋಟದಲ್ಲಿ ಹೂತಿಟ್ಟಿದ್ದ ಭ್ರೂಣಗಳು ಪತ್ತೆ

    ಬೆಳಗಾವಿಯಲ್ಲಿ ಮಗು ಮಾರಾಟ ಜಾಲ ಕೇಸ್ – ತೋಟದಲ್ಲಿ ಹೂತಿಟ್ಟಿದ್ದ ಭ್ರೂಣಗಳು ಪತ್ತೆ

    ಬೆಳಗಾವಿ: ಮಗು ಮಾರಾಟ ಜಾಲ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಕಿಂಗ್‍ಪಿನ್ ಅಬ್ದುಲ್ ಲಾಡಖಾನ್‍ಗೆ ಸೇರಿದ ಕಿತ್ತೂರಿನ ಫಾರ್ಮಹೌಸ್‍ನಲ್ಲಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಈ ವೇಳೆ ಆರೋಪಿಗೆ ಸೇರಿದ ತೋಟದಲ್ಲಿ ಗರ್ಭಪಾತ (Foeticide Case) ನಡೆಸಿ ಹೂತಿಟ್ಟಿದ್ದ ಭ್ರೂಣಗಳು ಪತ್ತೆಯಾಗಿವೆ.

    ಸ್ಥಳೀಯರಿಂದ ನಕಲಿ ವೈದ್ಯ ಲಾಡಖಾನ್ ಗರ್ಭಪಾತ ಮಾಡಿಸುತ್ತಿದ್ದ ಎಂಬ ಆರೋಪ ಕೇಳಿಬಂದಿತ್ತು. ಈ ಆರೋಪದ ಬೆನ್ನಲ್ಲೇ ಕಿತ್ತೂರು ಪೊಲೀಸ್ (Kittur police)  ಠಾಣೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಕೇಸ್ ದಾಖಲಿಸಿದ್ದರು. ಬಳಿಕ ಲಾಡಾಖಾನ್ ಹಾಗೂ ಆತನ ಸಹಾಯಕ ರೋಹಿತ್‍ನನ್ನು ಬಂಧಿಸಿದ್ದರು. ಇದೀಗ ನ್ಯಾಯಾಲಯದ ಅನುಮತಿ ಮೇರೆಗೆ ಫಾರ್ಮ್ ಹೌಸ್ ಇರುವ ಜಾಗದಲ್ಲಿ ಅಧಿಕಾರಿಗಳು ನೆಲ ಅಗೆದು ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಸಾರಿಗೆ ಬಸ್ ಚಾಲಕನಿಂದ ಹಿಟ್ & ರನ್- ಸುಳಿವುಕೊಟ್ಟ ಪ್ಲಾಸ್ಟಿಕ್ ಚೂರು

    ಭ್ರೂಣಗಳನ್ನು ಹೂತಿದ್ದ ಲಾಡಖಾನ್‍ನ ಸಹಾಯಕ ರೋಹಿತ್‍ನ ಸಮ್ಮುಖದಲ್ಲಿ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಬಳಿಕ ಹೂತಿಟ್ಟಿದ್ದ ಭ್ರೂಣಗಳನ್ನು ಹೊರತೆಗೆದು ಪೊಲೀಸರು ತೆಗೆದುಕೊಂಡು ಹೋಗಿದ್ದಾರೆ.

    ಕಳೆದ ಹತ್ತು ವರ್ಷಗಳಿಂದ ಆರೋಪಿ ಲಾಡಖಾನ್ ಆಸ್ಪತ್ರೆ ನಡೆಸುತ್ತಿದ್ದ ಎಂದು ತಿಳಿದು ಬಂದಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಆಸ್ಪತ್ರೆಯನ್ನು ಸೀಜ್ ಮಾಡಿದ್ದಾರೆ. ಬಂಧಿತ ಲಾಡಖಾನ್ ಗರ್ಭಪಾತ ಹಾಗೂ ಮಗು ಮಾರಾಟ ಕೇಸ್‍ನಲ್ಲಿ ಎ2 ಆರೋಪಿಯಾಗಿದ್ದಾನೆ.

    ಇತ್ತೀಚೆಗೆ ರಾಮತೀರ್ಥ ನಗರದಲ್ಲಿ ಮಕ್ಕಳ ರಕ್ಷಣಾ ಘಟಕದ ಕೈಗೆ ಸಿಕ್ಕಿ ಬಿದ್ದಿದ್ದ ಮಹಿಳೆಯಿಂದ ಈ ಜಾಲ ಪೊಲೀಸರ ಖೆಡ್ಡಾಕ್ಕೆ ಬಿದ್ದಿದೆ. ನಕಲಿ ವೈದ್ಯನೊಬ್ಬನಿಂದ ಮಗುವನ್ನು 60 ಸಾವಿರ ರೂ.ಗೆ ಪಡೆದು 1.40 ಲಕ್ಷ ರೂ.ಗೆ ಮಾರಾಟ ಮಾಡಲು ಮಹಾದೇವಿ ಎಂಬ ಮಹಿಳೆ ಬಂದಿದ್ದಳು. ಈ ವಿಷಯ ತಿಳಿದುಕೊಂಡಿದ್ದ ಮಕ್ಕಳ ರಕ್ಷಣಾ ಘಟಕ ಪೊಲೀಸರ ಸಹಾಯದಿಂದ ಆಕೆಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಇಡೀ ಪ್ರಕರಣ ಬೆಳಕಿಗೆ ಬಂದಿತ್ತು.

    ಇನ್ನೂ ಈ ಪ್ರಕರಣದಲ್ಲಿ ಕೇವಲ ಅಬ್ದುಲ್ ಗಫಾರ್ ಲಾಡಖಾನ್ ಮಾತ್ರ ಇರದೆ, ಹಲವು ವೈದ್ಯರು ಶಾಮೀಲಾಗಿರುವ ಕುರಿತು ಅಧಿಕಾರಿಗಳು ಹಾಗೂ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸ್ವಾಮಿ ಶವ ಎಸೆಯೋ ಬಗ್ಗೆ ದರ್ಶನ್ ಮನೆಯಲ್ಲೇ ನಡೆದಿತ್ತು ಸ್ಕೆಚ್!

  • ಧಾರಾಕಾರ ಮಳೆಗೆ ಬೈಕ್ ಮೇಲೆ ಬಿದ್ದ ಮರ – ಸವಾರ ದುರ್ಮರಣ

    ಧಾರಾಕಾರ ಮಳೆಗೆ ಬೈಕ್ ಮೇಲೆ ಬಿದ್ದ ಮರ – ಸವಾರ ದುರ್ಮರಣ

    ಬೆಳಗಾವಿ: ಭಾರೀ ಮಳೆಯ (Rain) ಪರಿಣಾಮ ಬೈಕ್ (Bike) ಮೇಲೆ ಮರವೊಂದು ಉರುಳಿ ಬಿದ್ದು ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿಯ  (Belagavi) ಬೆಳಲಳಗುಂದಿ ಗ್ರಾಮದಲ್ಲಿ ನಡೆದಿದೆ.

    ಕರ್ಲೆ ಗ್ರಾಮದ ಸೋಮನಾಥ್ ಮುಚ್ಚಂಡಿಕರ್ (21) ಮೃತ ದುರ್ದೈವಿಯಾಗಿದ್ದು, ವಿಠ್ಠಲ್ ತಳವಾರ್, ಸ್ವಪ್ನಿಲ್ ದೇಸಾಯಿ ಗಂಭೀರ ಗಾಯಗೊಂಡವರಾಗಿದ್ದಾರೆ. ಮೂವರು ಒಂದೇ ಬೈಕ್‍ನಲ್ಲಿ ಬೆಳಗಾವಿಗೆ ತೆರಳುತ್ತಿದ್ದರು. ಈ ವೇಳೆ ಧಾರಾಕಾವಾಗಿ ಸುರಿದ ಮಳೆಯ ಪರಿಣಾಮ ಬೈಕ್ ಮೇಲೆ ಮರ ಉರುಳಿ ಬಿದ್ದಿದೆ. ಪರಿಣಾಮ ಸ್ಥಳದಲ್ಲೇ ಓರ್ವ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಟ್ರೈಲರ್ ಸಮೇತ ನದಿಗೆ ಬಿದ್ದ ಟ್ರಾಕ್ಟರ್ – ಓರ್ವ ಕಣ್ಮರೆ, 12 ಮಂದಿ ಬಚಾವ್

    ಗಾಯಗೊಂಡಿರುವವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಬಿಳಿಗಿರಿರಂಗನ ಬೆಟ್ಟದ ಮೇಲಿಂದ ಜಿಗಿದು ರಿಯಲ್ ಎಸ್ಟೇಟ್ ಉದ್ಯಮಿ ಆತ್ಮಹತ್ಯೆ

  • ಬೆಳಗಾವಿಯಲ್ಲಿ ಟ್ರೈಲರ್ ಸಮೇತ ನದಿಗೆ ಬಿದ್ದ ಟ್ರಾಕ್ಟರ್ – ಓರ್ವ ಕಣ್ಮರೆ, 12 ಮಂದಿ ಬಚಾವ್

    ಬೆಳಗಾವಿಯಲ್ಲಿ ಟ್ರೈಲರ್ ಸಮೇತ ನದಿಗೆ ಬಿದ್ದ ಟ್ರಾಕ್ಟರ್ – ಓರ್ವ ಕಣ್ಮರೆ, 12 ಮಂದಿ ಬಚಾವ್

    ಬೆಳಗಾವಿ: ನಿರಂತರ ಮಳೆಯಿಂದ ತುಂಬಿ ಹರಿಯುತ್ತಿದ್ದ ಘಟಪ್ರಭಾ ನದಿಗೆ (Ghataprabha River) 13 ಜನರಿದ್ದ ಟ್ರಾಕ್ಟರ್ (Tractor) ಮಗುಚಿ ಬಿದ್ದ ಪರಿಣಾಮ ಓರ್ವ ನಾಪತ್ತೆ ಆಗಿದ್ದು, 12 ಮಂದಿ ಬಚಾವ್ ಆದ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ.

    ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ನಿರಂತರ ಮಳೆ (Rain) ಸುರಿಯುತ್ತಿದ್ದು, ಬ್ರಿಡ್ಜ್ ಕಮ್ ಬ್ಯಾರೇಜ್ ಸಂಪೂರ್ಣ ಜಲಾವೃತವಾಗಿತ್ತು. ಮೂಡಲಗಿ ತಾಲೂಕಿನ ಅವರಾದಿ ಗ್ರಾಮದ ನಂದಗಾಂವ್ ಬಳಿಯ ಮಧ್ಯೆ ಇರುವ ಬ್ರಿಡ್ಜ್ ಕಮ್ ಬ್ಯಾರೇಜ್ ಜಲಾವೃತವಾಗಿತ್ತು. ನದಿ ದಾಟುವ ಸಂದರ್ಭ 13 ಜನರಿದ್ದ ಟ್ರಾಕ್ಟರ್ ಟ್ರೈಲರ್ ಸಮೇತ ನೀರಿಗೆ ಬಿದ್ದಿದೆ. ಇದನ್ನೂ ಓದಿ: ನಮಗೆ ಫ್ರೀ ಬೇಡ, ಹೆಚ್ಚುವರಿ ಬಸ್ ಓಡಿಸಿ: ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ವಿದ್ಯಾರ್ಥಿನಿ ಕ್ಲಾಸ್

    ಅದೃಷ್ಟವಷಾತ್ 12 ಮಂದಿ ಈಜಿ ಸಾವಿನ ದವಡೆಯಿಂದ ಪಾರಾಗಿದ್ದಾರೆ. ಓರ್ವ ನೀರಿನಲ್ಲಿ ಕಣ್ಮರೆಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಣ್ಮರೆಯಾದವನಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಟ್ರಾಕ್ಟರ್‌ನಲ್ಲಿ ಪ್ರಯಾಣ ಮಾಡುತ್ತಿದ್ದವರು ಅವರಾದಿಯಿಂದ ನಂದಗಾಂವ್‌ಗೆ ಕೂಲಿ ಕೆಲಸಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಬ್ರಿಡ್ಜ್ ದಾಟುವಾಗ ಆಯತಪ್ಪಿ ಘಟಪ್ರಭಾ ನದಿಗೆ ಟ್ರಾಕ್ಟರ್ ಬಿದ್ದಿದೆ. ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಇನ್ನು 5 ದಿನ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಭಾರೀ ಮಳೆ

  • ಬರ್ತ್‍ಡೇ ಪಾರ್ಟಿಗೆ ಕರೆದು ಸ್ನೇಹಿತರಿಂದಲೇ ಯುವಕನ ಬರ್ಬರ ಹತ್ಯೆ

    ಬರ್ತ್‍ಡೇ ಪಾರ್ಟಿಗೆ ಕರೆದು ಸ್ನೇಹಿತರಿಂದಲೇ ಯುವಕನ ಬರ್ಬರ ಹತ್ಯೆ

    ಬೆಳಗಾವಿ: ಸ್ನೇಹಿತನನ್ನು ಬರ್ತ್‍ಡೇ (Birthday) ಪಾರ್ಟಿಗೆ ಕರೆದು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ನಡೆದಿದೆ.

    ಹತ್ಯೆಗೀಡಾದ ಯುವಕನನ್ನು ಬಸವರಾಜ್ ಮುದ್ದಣ್ಣವರ (23) ಎಂದು ಗುರುತಿಸಲಾಗಿದೆ. ಬಸವರಾಜ್ ಎಂಎಸ್‍ಡಬ್ಲ್ಯೂ (MSW) ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಆತನನ್ನು ಸ್ನೇಹಿತ ಮಲ್ಲಿಕಾರ್ಜುನ್ ಬರ್ತ್ ಡೇ ಪಾರ್ಟಿಗೆ ಕರೆದಿದ್ದ. ಬಳಿಕ ಆತ ಬರುತ್ತಿದ್ದಂತೆ ಗಲಾಟೆ ಆರಂಭಿಸಿ, ಐವರು ಸ್ನೇಹಿತರು ಸೇರಿ ಆತನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ಸಾಲ ವಾಪಸ್ ಕೊಡುತ್ತೇನೆಂದು ಕರೆಸಿ ಮಹಿಳೆ ಕೊಲೆ – ರೇಷ್ಮೆ ತೋಟದಲ್ಲಿ ಶವ ಹೂತಿಟ್ಟು ಆರೋಪಿ ಎಸ್ಕೇಪ್!

    ತೀವ್ರವಾಗಿ ಗಾಯಗೊಂಡ ಬಸವರಾಜ್‍ನನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾನೆ. ಮುರಗೋಡ ಪೊಲೀಸ್ (Muragod Police) ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಉತ್ತರಾಖಂಡ ಹಿಮಪಾತ- ಬೆಂಗಳೂರಿನ ಪ್ರಸಿದ್ಧ ಬಹುರಾಷ್ಟ್ರೀಯ ಕಂಪನಿ ಉದ್ಯೋಗಿ ಸಾವು

  • ಬೆಳಗಾವಿಯಲ್ಲಿ ಶೆಟ್ಟರ್‌ಗೆ ಗೆಲುವು- ಲಕ್ಷ್ಮಿ ಹೆಬ್ಬಾಳ್ಕರ್‌ಗೆ ತೀವ್ರ ಮುಖಭಂಗ

    ಬೆಳಗಾವಿಯಲ್ಲಿ ಶೆಟ್ಟರ್‌ಗೆ ಗೆಲುವು- ಲಕ್ಷ್ಮಿ ಹೆಬ್ಬಾಳ್ಕರ್‌ಗೆ ತೀವ್ರ ಮುಖಭಂಗ

    ಬೆಳಗಾವಿ: ವಲಸಿಗ ಎಂಬ ಹಣೆಪಟ್ಟಿಯ ನಡುವೆಯೂ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadeesh Shettar) ಭರ್ಜರಿ ಗೆಲುವು ಸಾಧಿಸಿದ್ದು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ (Laxmi Hebbalkar) ತೀವ್ರ ಮುಖಭಂಗವಾಗಿದೆ.

    8 ಲೋಕಸಭಾ ಮತಕ್ಷೇತ್ರ ಹೊಂದಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರದ ಪೈಕಿ ಗ್ರಾಮೀಣ ಕ್ಷೇತ್ರ ಪ್ರತಿನಿಧಿಸುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತವರು ಕ್ಷೇತ್ರದಲ್ಲೇ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಅತಿಹೆಚ್ಚು ಮತಗಳನ್ನ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಶ್ರೇಯಸ್‌ಗೆ ಸಿಂ`ಹಾಸನ’ – ಎರಡೂವರೆ ದಶಕಗಳ ಬಳಿಕ ಐತಿಹಾಸಿಕ ಗೆಲುವು!

    ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಸದ್ಯ 113495 ಮತ ಇದ್ದು ಕಾಂಗ್ರೆಸ್ ಮೃಣಾಲ್‌ ಹೆಬ್ಬಾಳ್ಕರ್ ಗೆ 67403ಮತಗಳು ಬಂದಿವೆ. ಈ ಮತಗಳ ಪೈಕಿ 46,092 ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿಗೆ ಹೆಚ್ಚು ಲೀಡ್‌ ಬಂದಿದ್ದು ಹೆಬ್ಬಾಳ್ಕರ್ ಗೆ ಕ್ಷೇತ್ರದಲ್ಲೇ ಮತದಾರರು ಕೈಕೊಟ್ಟಿದ್ದಾರೆ. ಇದನ್ನೂ ಓದಿ: ದಕ್ಷಿಣ ಕನ್ನಡದ ‘ಕ್ಯಾಪ್ಟನ್’ ಚೌಟ

  • ಮಾಧ್ಯಮ ಪ್ರತಿನಿಧಿಗಳಿಗೆ ಧಮ್ಕಿ ಹಾಕಿದ ವ್ಯಕ್ತಿ ಮಾನಸಿಕ ಅಸ್ವಸ್ಥ: ಶಾಸಕ ರಾಜು ಕಾಗೆ

    ಮಾಧ್ಯಮ ಪ್ರತಿನಿಧಿಗಳಿಗೆ ಧಮ್ಕಿ ಹಾಕಿದ ವ್ಯಕ್ತಿ ಮಾನಸಿಕ ಅಸ್ವಸ್ಥ: ಶಾಸಕ ರಾಜು ಕಾಗೆ

    ಚಿಕ್ಕೋಡಿ: ನನ್ನ ಎದುರೇ ಮಾಧ್ಯಮ ಪ್ರತಿನಿಧಿಗಳಿಗೆ ಧಮ್ಕಿ ಹಾಕಿದವನು ಮಾನಸಿಕ ಅಸ್ವಸ್ಥ ಎಂದು ಶಾಸಕ ರಾಜು ಕಾಗೆ (Raju Kage) ತಿಳಿಸಿದರು. ಅಲ್ಲದೇ ವ್ಯಕ್ತಿಯ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದರು.

    ಶಾಸಕ ರಾಜು ಕಾಗೆ ಎದುರೇ ಕಾಂಗ್ರೆಸ್ ಕಾರ್ಯಕರ್ತನಿಂದ ಪತ್ರಕರ್ತರಿಗೆ ವ್ಯಕ್ತಿಯೊಬ್ಬ ಧಮ್ಕಿ ಹಾಕಿದ್ದ. ಈ ವಿಚಾರವಾಗಿ ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ಶಾಸಕರು ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ಕೈ ಶಾಸಕ ರಾಜು ಕಾಗೆ ಎದುರಿನಲ್ಲೇ ಆಪ್ತನಿಂದ ಮಾಧ್ಯಮ ಪ್ರತಿನಿಧಿಗಳಿಗೆ ಧಮ್ಕಿ

    ಬೇವನೂರು ಗ್ರಾಮದ ಜಾತ್ರೆಗೆ ಆಹ್ವಾನಿಸಿದಾಗ ನಾನು ಹೋಗಿದ್ದೆ. ಜಾತ್ರೆಯಲ್ಲಿ ಮೋಳೆ ಗ್ರಾಮದ ಒಬ್ಬ ಯುವಕ ಸೆಲ್ಫಿ ತೆಗೆದುಕೊಳ್ಳುತ್ತಿದ್ದ. ಅವನ ಹೆಸರು ನನಗೆ ಗೊತ್ತಿಲ್ಲ. ಅವನು ಸೈಕಿಕ್ ಇದ್ದಾನೆ. ಅಲ್ಲಿಗೆ ವಾದ್ಯಗಳ ಸೌಂಡ್ ಜೋರಾಗಿದ್ದ ಕಾರಣ ಅವನು ಮಾತನಾಡಿದ್ದು ನನಗೆ ಕೇಳಿಸಿಲ್ಲ. ನನಗೆ ಕೇಳಿಸಿದ್ದರೆ ಅಲ್ಲೇ ಅವನಿಗೆ ನಾನು ತಿಳಿ ಹೇಳುತ್ತಿದ್ದೆ ಎಂದು ಸ್ಪಷ್ಟಪಡಿಸಿದರು.

    ಬೆಳಗ್ಗೆ ಕೆಲವು ವಾಟ್ಸಾಪ್‌ ಗ್ರೂಪ್‌ಗಳಲ್ಲಿ ಈ ವೀಡಿಯೋ ನೋಡಿ ನನಗೂ ಆಶ್ಚರ್ಯವಾಯಿತು. ನನ್ನ 40 ವರ್ಷದ ರಾಜಕಾರಣದಲ್ಲಿ ಮಾಧ್ಯಮಗಳ ಜೊತೆ ಉತ್ತಮ ಸಂಬಂಧ ಹೊಂದಿದ್ದೇನೆ. ಆ ಹೇಳಿಕೆಗೂ ನನಗೆ ಯಾವುದೇ ಸಂಬಂಧವಿಲ್ಲ. ನನ್ನ ಮೇಲಿನ‌ ಆರೋಪ ಸತ್ಯಕ್ಕೆ ದೂರವಾದದ್ದು ಎಂದರು. ಇದನ್ನೂ ಓದಿ: ಸಂಚಾರ ನಿಯಮ ಉಲ್ಲಂಘನೆ – ಮೈಸೂರಿನಲ್ಲಿ ಒಂದೇ ದಿನ ಬರೋಬ್ಬರಿ 7,336 ಕೇಸ್ ದಾಖಲು!

    ಶಾಸಕ ರಾಜು ಕಾಗೆ ಎದುರೇ ಸೆಲ್ಫಿ ವೀಡಿಯೋ‌ ಮಾಡಿ ಮಾಧ್ಯಮದವರಿಗೆ ಸಂತೋಷ ಎಂಬಾತ ಧಮ್ಕಿ ಹಾಕಿದ್ದ. ಶಾಸಕ ರಾಜು ಕಾಗೆ ವಿರುದ್ಧ ಸುದ್ದಿ ಹಾಕಿದರೆ ಮನೆಗೆ ನುಗ್ಗಿ ಕೈ-ಕಾಲು ಮುರಿಯುತ್ತೇವೆ ಎಂದು ಎಚ್ಚರಿಕೆ ನೀಡಿದ್ದ. ಈ ದೃಶ್ಯದ ವೀಡಿಯೋ ವೈರಲ್‌ ಆಗಿತ್ತು.

  • ಹೆರಿಗೆಗೂ ಮುನ್ನ ಲಿಂಗಪರೀಕ್ಷೆ- ಗರ್ಭಪಾತವಾಗಿ ಮಹಿಳೆ ಸಾವು

    ಹೆರಿಗೆಗೂ ಮುನ್ನ ಲಿಂಗಪರೀಕ್ಷೆ- ಗರ್ಭಪಾತವಾಗಿ ಮಹಿಳೆ ಸಾವು

    – ಮೂವರು ಪೊಲೀಸರ ವಶಕ್ಕೆ

    ಮುಂಬೈ: ಹೆರಿಗೆಗೂ ಮುನ್ನ ಒತ್ತಾಯಪೂರ್ವಕವಾಗಿ ಲಿಂಗಪರೀಕ್ಷೆಗೆ ಒಳಗಾದ 32 ವರ್ಷದ ಮಹಿಳೆಗೆ ಗರ್ಭಪಾತವಾಗಿ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ (Maharastra) ಸಾಂಗ್ಲಿ ಜಿಲ್ಲೆಯಲ್ಲಿ ನಡೆದಿದೆ.

    ಸೋಮವಾರ ಸಾಂಗ್ಲಿ ನಗರದಲ್ಲಿ ಕಾರಿನಲ್ಲಿ ಮಹಿಳೆಯೊಬ್ಬರು ಶವವಾಗಿ ಪತ್ತೆಯಾಗಿದ್ದರು. ವಿಷಯ ತಿಳಿದ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಕಾರಿನಿಂದ ಮೃತದೇಹವನ್ನು ವಶಕ್ಕೆ ಪಡೆದುಕೊಂಡರು. ಬಳಿಕ ತನಿಖೆ ನಡೆಸಿದ ವೇಳೆ ವಿಚಾರ ಬಯಲಿಗೆ ಬಂದಿದೆ. ಘಟನೆ ಸಂಬಂಧ ಮೃತ ಮಹಿಳೆಯ ಕುಟುಂಬದ ಮೂವರು ಸದಸ್ಯರನ್ನು ವಶಕ್ಕೆ ಪಡೆದು ಕರ್ನಾಟಕ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಮೀರಜ್ ತಾಲೂಕಿನ ನಿವಾಸಿಯಾಗಿರುವ ಮಹಿಳೆಗೆ ಇಬ್ಬರು ಮಕ್ಕಳಿದ್ದು, ಪತಿ ಸೇನೆಯಲ್ಲಿದ್ದಾರೆ. ಗರ್ಭಿಣಿಯನ್ನು ನೆರೆಯ ಕರ್ನಾಟಕದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಆಕೆಯ ಕುಟುಂಬಸ್ಥರು ಪ್ರಸವಪೂರ್ವ ಲಿಂಗ ಪರೀಕ್ಷೆಗೆ ಒಳಗಾಗುವಂತೆ ಒತ್ತಾಯಿಸಿದ್ದಾರೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಪೆನ್‍ಡ್ರೈವ್ ಪ್ರಕರಣದಿಂದ ಸೈಡ್ ಎಫೆಕ್ಟ್- ಫೋಟೋಗ್ರಾಫರ್‌ಗಳಿಗೆ ತಟ್ಟಿದ ಬಿಸಿ!

    ಅಧಿಕಾರಿಗಳ ಪ್ರಕಾರ, ಪರೀಕ್ಷೆಯ ನಂತರ ಮಹಿಳೆಗೆ ಗರ್ಭಪಾತವಾಗಿದೆ. ಪರಿಣಾಮ ಆಕೆ ಸಾವನ್ನಪ್ಪಿದ್ದಾಳೆ. ಆದರೆ ಮಹಿಳೆ ಮಹಾರಾಷ್ಟ್ರದ ನಿವಾಸಿ ಎಂದು ಉಲ್ಲೇಖಿಸಿ ಮರಣ ಪ್ರಮಾಣಪತ್ರವನ್ನು ನೀಡಲು ಆಸ್ಪತ್ರೆ ನಿರಾಕರಿಸಿತು.

    ನಾವು ಘಟನೆಯ ಬಗ್ಗೆ ಗಮನಹರಿಸಿದ್ದೇವೆ, ಆದರೆ ಪ್ರಕರಣವನ್ನು ದಾಖಲಿಸಿಲ್ಲ. ಮರಣೋತ್ತರ ಪರೀಕ್ಷೆಯ ನಂತರ ನಾವು ಕರ್ನಾಟಕ ಪೊಲೀಸರಿಗೆ ತಿಳಿಸಿದ್ದೇವೆ. ಏಕೆಂದರೆ ಅವರ ವ್ಯಾಪ್ತಿಯಲ್ಲಿ ಸಾವು ಸಂಭವಿಸಿದೆ ಎಂದು ಪೊಲೀಸರು ತಿಳಿಸಿದರು.