ಬೆಳಗಾವಿ: ಆಟವಾಡುತ್ತಾ ಸಂಪ್‍ಗೆ (Sump) ಬಿದ್ದು 2 ವರ್ಷದ ಮಗು ಸಾವನ್ನಪ್ಪಿದ ದುರ್ಘಟನೆ ನಗರದ (Belagavi) ಕಂಗ್ರಾಳ ಗಲ್ಲಿಯಲ್ಲಿ ನಡೆದಿದೆ.
ಮೃತಮಗುವನ್ನು ಸಾಯೀಶಾ ಎಂದು ಗುರುತಿಸಲಾಗಿದೆ. ಆಟವಾಡುತ್ತಿದ್ದ ಮಗು ಕಣ್ಮರೆಯಾಗಿದ್ದು, ಪೋಷಕರಿಗೆ ತೀವ್ರ ಹುಡುಕಾಟ ನಡೆಸಿದ್ದಾರೆ. ಎಷ್ಟೇ ಹುಡುಕಿದರೂ ಮಗು ಕಾಣದಿದ್ದಾಗ ಸಂಪ್ ತೆರೆದು ನೋಡಿದಾಗ ಮಗು ಬಿದ್ದಿರುವುದು ಕಂಡಿದೆ. ಕೂಡಲೇ ಮಗುವನ್ನು ಮಗುವನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ ಆಸ್ಪತ್ರೆಗೆ ಕರೆತರುವ ಮುನ್ನವೇ ಮಗು ಸಾವಿಗೀಡಾಗಿದೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಇದನ್ನೂ ಓದಿ: ಉಡುಪಿ ಹೈವೇಯಲ್ಲಿ ತಲ್ವಾರ್ ಹಿಡಿದು ಅಟ್ಟಹಾಸ – ಗರುಡ ಗ್ಯಾಂಗ್‍ನ 6 ಪುಡಿ ರೌಡಿಗಳು ಅರೆಸ್ಟ್
ಬೆಳಗಾವಿ: ಹುಬ್ಬಳ್ಳಿಯಲ್ಲಿ ನೇಹಾ, ಅಂಜಲಿ ಕೊಲೆ ಪ್ರಕರಣದ ನಂತರವೂ ಪಾಗಲ್ ಪ್ರೇಮಿಗಳ ಕಾಟ ತಪ್ಪಿಲ್ಲ. ಇದೀಗ ಬೆಳಗಾವಿಯಲ್ಲೊಬ್ಬ (Belagavi) ಸೈಕೋಪಾತ್ ಕಾಣಿಸಿಕೊಂಡಿದ್ದಾನೆ.
ಬೆಳಗಾವಿ ತಾಲೂಕಿನ ಕಿಣೈ ಗ್ರಾಮದ ತಿಪ್ಪಣ್ಣ ಡೋಕರೆ (27) ಎಂಬ ಪಾಗಲ್ ಪ್ರೇಮಿಯ ಕಾಟದಿಂದ ಯುವತಿ ಕುಟುಂಬ ಕಂಗಾಲಾಗಿದೆ. ಯುವತಿ ಅದೇ ಗ್ರಾಮದ ಕಿಣೈಯಲ್ಲಿರುವ ಮನೆಯಲ್ಲಿ ತಾಯಿ ಜೊತೆಗೆ ವಾಸವಿದ್ದಾಳೆ. ಬಿಕಾಂ ಓದುತ್ತಿರುವ ಈಕೆ ನಿತ್ಯ ಕಾಲೇಜಿಗೆ ಹೋಗುವಾಗಲೇ ಫಾಲೋ ಮಾಡಿ ತಿಪ್ಪಣ್ಣ ರೇಗಿಸುತ್ತಿದ್ದನು.
ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮನೆ ಮೇಲೆಯೇ ಕಲ್ಲು ತೂರಿ ನೇಹಾಳಂತೆ ಕೊಲೆ ಮಾಡುವ ಬೆದರಿಕೆ ಹಾಕಿದ್ದಾನೆ. ಪಾಗಲ್ ಪ್ರೇಮಿ ಕಾಟದಿಂದ ಯುವತಿ ಕಾಲೇಜಿಗೆ ಹೋಗುವುದನ್ನೇ ಬಿಟ್ಟಿದ್ದಾಳೆ. ಪ್ರೀತಿಸು, ಮದುವೆ ಆಗೆಂದು ಕಳೆದ ಮೂರು ವರ್ಷಗಳಿಂದ ಡೋಕರೆ ಪೀಡಿಸುತ್ತಿದ್ದಾನೆ. ಮದುವೆ ಮಾಡಿಕೊಡದಿದ್ದರೆ ಹತ್ಯೆಗೈಯ್ಯುವುದಾಗಿ ಯುವತಿ ಹಾಗೂ ತಾಯಿಗೆ ತಿಪ್ಪಣ್ಣ ಬೆದರಿಕೆ ಹಾಕಿದ್ದಾನೆ. ಇದನ್ನೂ ಓದಿ: ರಾತ್ರಿ ಸುರಿದ ಮಳೆಗೆ ರಾಜಕಾಲುವೆಗೆ ಉರುಳಿದ ಆಟೋ – ಚಾಲಕ ದುರ್ಮರಣ
ಕೆಲ ತಿಂಗಳ ಹಿಂದೆ ಯುವತಿ ಮನೆಯ ಹಿಂಬಾಗಿಲಿಗೆ ಬೆಂಕಿ ಹಚ್ಚಿ ಹುಚ್ಚಾಟ ಮೆರೆದಿದ್ದನು. ಯಾವುದೇ ಕೆಲಸ ಮಾಡದೇ ಕುಡಿದು ಊರಲ್ಲಿ ಸುತ್ತಾಡುವ ತಿಪ್ಪಣ್ಣನ ಕಿರಿಕಿರಿಗೆ ಬೇಸತ್ತು ಕುಟುಂಬ ಪೊಲೀಸರ ಮೊರೆ ಹೋಗಿದೆ. ಮೂರು ವರ್ಷಗಳ ಹಿಂದೆಯೇ ತಿಪ್ಪಣ್ಣ ವಿರುದ್ಧ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಆಗ ಪೊಲೀಸರ ವಾರ್ನ್‍ಗೆ ಕೆಲ ದಿನಗಳ ಕಾಲ ಯುವತಿ ತಂಟೆಗೆ ಹೋಗದೇ ಸೈಲೆಂಟ್ ಆಗಿದ್ದ. ಈಗ ಮತ್ತೆ ಬಾಲಬಿಚ್ಚಿರುವ ತಿಪ್ಪಣ್ಣ, ಯುವತಿಯ ಮನೆ ಮೇಲೆ ಕಲ್ಲು ತೂರಿ ಅಟ್ಟಹಾಸ ಮೆರೆದಿದ್ದಾನೆ.
ಸದ್ಯ ಕುಟುಂಬ ಮತ್ತೆ ರಕ್ಷಣೆ ಕೋರಿ ನಗರ ಪೊಲೀಸ್ ಆಯುಕ್ತರ ಕಚೇರಿ ಮೆಟ್ಟಿಲೇರಿದೆ. ಇದೀಗ ನಗರ ಪೊಲೀಸ್ ಆಯುಕ್ತರ ಸೂಚನೆ ಮೇರೆಗೆ ರಕ್ಷಣೆಗಾಗಿ ಯುವತಿ ಮನೆಗೆ ಓರ್ವ ಪೊಲೀಸ್ ಪೇದೆಯನ್ನು ನೇಮಿಸಲಾಗಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಬೆಳಗಾವಿ: ನಗರದ ಅಳ್ವಾನ್ ಗಲ್ಲಿಯಲ್ಲಿ (Alwan Galli, Belagavi) ಕ್ರಿಕೆಟ್ (Cricket) ಜಗಳ ವಿಕೋಪಕ್ಕೆ ಹೋಗಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಿಂದ ಬಿಗುವಿನ ವಾತಾವರಣನಿರ್ಮಾಣವಾಗಿದೆ.
ಗುರುವಾರ ಸಂಜೆ 5 ಗಂಟೆ ಸುಮಾರಿಗೆ ಚಿಕ್ಕ ಮಕ್ಕಳ ನಡುವೆ ಕ್ರಿಕೆಟ್ ವಿಚಾರದಲ್ಲಿ ಗಲಾಟೆ ಆರಂಭವಾಗಿದೆ. ಬಳಿಕ ಗಲಾಟೆಯಲ್ಲಿ ಮಧ್ಯಪ್ರವೇಶಿಸಿದ 2 ಗುಂಪಿನ ಯುವಕರು, ಮನೆಗಳ ಮೇಲೆ ಕಲ್ಲು ತೂರಿ ತಲ್ವಾರ್ ಪ್ರದರ್ಶನ ಮಾಡಿದ್ದಾರೆ. ಯುವಕರ ನಡುವಿನ ಗಲಾಟೆಯಲ್ಲಿ 8 ಮಂದಿಗೆ ಗಾಯಗಳಾಗಿವೆ. ಎರಡೂ ಕಡೆಯವರಿಗೆ ಗಾಯಗಳಾಗಿದ್ದು, ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಗಲಾಟೆಯಲ್ಲಿ ಓರ್ವ ಪೊಲೀಸ್ ಪೇದೆ ಅಮರ್‌ಗೂ ಗಾಯವಾಗಿದೆ. ಸದ್ಯ ಸ್ಥಳದಲ್ಲಿ ಕೆಎಸ್‍ರ್‍ಪಿ, ಮೂರು ಜನ ಸಿಪಿಐ ನಿಯೋಜನೆ ಮಾಡಲಾಗಿದೆ. ಇನ್ನು ಘರ್ಷಣೆ ವಿಚಾರದ ಕುರಿತಂತೆ ಶಹಾಪುರ ಪೊಲೀಸ್ ಠಾಣೆಗೆ ಆಗಮಿಸಿದ ನಗರ ಪೊಲೀಸ್ ಆಯುಕ್ತ ಮಾರ್ಟಿನ್, ಘಟನೆ ಕುರಿತು ಸಿಬ್ಬಂದಿಯಿಂದ ಮಾಹಿತಿ ಪಡೆದಿದ್ದಾರೆ. ಬಳಿಕ ಬೆಳಗಾವಿ ನಗರದಲ್ಲಿ ಹೈ ಅಲರ್ಟ್ ಘೋಷಿಸಿದ್ದಾರೆ. ಜೊತೆಗೆ ಎಲ್ಲ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವಂತೆ ಕಮಿಷನರ್ ಸೂಚನೆ ನೀಡಿದರು. ಇದನ್ನೂ ಓದಿ: ಟಿಬಿ ಡ್ಯಾಂ ಹಿನ್ನೀರಿನ ಕಂದಕಕ್ಕೆ ಬಿತ್ತು ಬೈಕ್ – ಯವಕ ಸಾವು, ಓರ್ವ ಗಂಭೀರ
ನಗರದ ತುಂಬೆಲ್ಲಾ ರೌಂಡ್ಸ್, ಸೂಕ್ಷ್ಮ ಪ್ರದೇಶದಲ್ಲಿ ನಿಗಾ ವಹಿಸುವಂತೆಯೂ ಸೂಚನೆ ಕೊಟ್ಟಿದ್ದಾರೆ. ಬೆಳಗಾವಿ ನಗರ ಸೇರಿದಂತೆ ಹೊರ ಜಿಲ್ಲೆಯಿಂದ ಹೆಚ್ಚುವರಿ ಸಿಬ್ಬಂದಿ ಕರೆಯಿಸುತ್ತಿದ್ದೇವೆ. ಗಲಾಟೆಯಲ್ಲಿ ಎಂಟು ಜನರಿಗೆ ಗಾಯವಾಗಿದ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ. ಕ್ರಿಕೆಟ್ ವಿಚಾರಕ್ಕೆ ಗಲಾಟೆಯಾಗಿದ್ದು ಬಳಿಕ ದೊಡ್ಡದಾಗಿದೆ. ತಲ್ವಾರ್ ಝಳಪಿಸಿದರ ಕುರಿತು ಮಾಹಿತಿ ಇದೆ. ಸ್ಥಳದಲ್ಲಿನ ಸಿಸಿಟಿವಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ. ಯಾರು ಸುಳ್ಳು ವದಂತಿ ಹರಡಿಸಬಾರದು, ಅಂತವರ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಪೊಲೀಸ್ ಆಯುಕ್ತ ನೀಡಿದ್ದಾರೆ.
ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಯಶ್ರೀ ಬುಧವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಇವರು ಉತ್ತರ ಕರ್ನಾಟಕ ಭಾಗದಲ್ಲಿ ರೈತ ಪರ ಹೋರಾಟ ಮಾಡುತ್ತಾ ಸಂಘಟನೆ ಮಾಡಿದ್ದರು. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ದೊಡ್ಡ ಮಟ್ಟದ ಹೋರಾಟ ನಡೆಸಿದ್ದರು. ಕಬ್ಬಿನ ಬಾಕಿ ಬಿಲ್ ಗಾಗಿ ಸುವರ್ಣ ಸೌಧಕ್ಕೆ ಕಬ್ಬು ತುಂಬಿದ ಲಾರಿ ತೆಗೆದುಕೊಂಡು ಹೋಗಿ ಪ್ರತಿಭಟನೆ ನಡೆಸುವ ಮೂಲಕ ಗಮನಸೆಳೆದಿದ್ದರು.
ಬೆಳಗಾವಿ: ಪ್ರಸಾದ ಸೇವಿಸಿ 46 ಮಂದಿ ಅಸ್ವಸ್ಥರಾಗಿದ್ದು, ಐವರ ಸ್ಥಿತಿ ಗಂಭೀರವಾದ ಘಟನೆ ಬೆಳಗಾವಿ (Belagavi) ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ಭೀರೇಶ್ವರ ಮತ್ತು ಕರೆಮ್ಮ ಜಾತ್ರೆ ನಡೆದಿತ್ತು. ಈ ಜಾತ್ರೆಯಲ್ಲಿ ಗ್ರಾಮದ ಜನ ಅನ್ನ ಪ್ರಸಾದ ಮತ್ತು ಮನೆಯಲ್ಲಿ ಮಾವಿನ ಹಣ್ಣಿನ ಶಿಖರಣಿ ಸೇವಿಸಿದ್ದರು. ಆದರೆ ಪ್ರಸಾದ ಸೇವಿಸಿದವರಲ್ಲಿ ಇಂದು ಏಕಾಏಕಿ ವಾಂತಿ-ಭೇದಿ ಆರಂಭವಾಗಿದೆ. ಕೂಡಲೇ ಅಸ್ವಸ್ಥಗೊಂಡವರಿಗೆ ಸ್ಥಳೀಯ ಆಸ್ಪತ್ರೆ, ಸವದತ್ತಿ ಸಾರ್ವಜನಿಕ ಆಸ್ಪತ್ರೆ ಹಾಗೂ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ತೀವ್ರ ಅಸ್ವಸ್ಥಗೊಂಡ ಐವರನ್ನ ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮದಲ್ಲಿಯೇ ಬೀಡುಬಿಟ್ಟಿದ್ದಾರೆ. ಇನ್ನು ಅಹಿತಕರ ಘಟನೆ ಆಗದಂತೆ ತಾಲೂಕಾಧಿಕಾರಿಗಳು ಗ್ರಾಮದಲ್ಲಿ ಕ್ಯಾಂಪ್ ತೆರೆದು ಪ್ರತಿಯೊಬ್ಬರ ಆರೋಗ್ಯ ತಪಾಸಣೆ ಮಾಡುತ್ತಿದ್ದಾರೆ. ಈವರೆಗೂ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಪಬ್ಲಿಕ್ ಟಿವಿಗೆ ಡಿಎಚ್‍ಓ ಮಾಹಿತಿ ನೀಡಿದ್ದಾರೆ.
ಪ್ರಸಾದ ಸೇವಿಸಿದವರಲ್ಲಿ ವಾಂತಿ-ಭೇದಿ ಕಂಡುಬಂದ ತಕ್ಷಣವೇ ಎಲ್ಲರನ್ನೂ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಲಾಗಿದೆ. ಪ್ರತಿಗಂಟೆಗೂ ರೋಗಿಗಳ ಮಾನಿಟರ್ ಮಾಡಲಾಗುತ್ತಿದೆ. ಯಾವುದೇ ರೀತಿಯ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದ ಡಿಎಚ್‍ಓ ಡಾ.ಮಹೇಶ ಕೋಣಿ ತಿಳಿಸಿದ್ದಾರೆ.
ಬೆಳಗಾವಿ: ನಾಲ್ಕು ವರ್ಷದ ಮಗಳನ್ನ ಮಲತಾಯಿಯೇ ಕೊಲೆ ಮಾಡಿರುವ ಆರೋಪ ಬೆಳಗಾವಿ ನಗರಕ್ಕೆ ಹೊಂದಿಕೊಂಡಿರುವ ಕಂಗ್ರಾಳಿ ಕೆಎಚ್ ಗ್ರಾಮದಲ್ಲಿ ನಡೆದಿದೆ.
ಸಮೃದ್ಧಿ ರಾಯಣ್ಣ ನಾವಿ(4) ಮೃತ ಬಾಲಕಿ. ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಮನೆಯಲ್ಲಿ ಆಟವಾಡುತ್ತಿದ್ದ ಮಗು ಏಕಾಏಕಿ ಸಾವನ್ನಪ್ಪಿದೆ. ಹುಷಾರಿಲ್ಲವೆಂದು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಬರುವಾಗಲೇ ದಾರಿ ಮಧ್ಯೆ ಮಗು ಕೊನೆಯುಸಿರೆಳೆದಿದೆ. ಮಗು ಸಾವಿನ ಸುದ್ದಿ ತಿಳಿದು ಆಸ್ಪತ್ರೆಗೆ ಅಜ್ಜ, ಅಜ್ಜಿ ಆಸ್ಪತ್ರೆಗೆ ದೌಡಾಯಿಸಿದ್ದಾರೆ.
ಮಗುವಿನ ಸಾವಿಗೆ ಮಲತಾಯಿ ಸಪ್ನಾ ರಾಯಣ್ಣ ನಾವಿ ಕಾರಣ. 2021ರಲ್ಲಿ ವರದಕ್ಷಿಣೆ ಕಿರುಕುಳ ಕೊಟ್ಟು ತಾಯಿ ಭಾರತಿ ನಾವಿ ಕೊಲೆ ಮಾಡಲಾಗಿತ್ತು. ಈಗ ಮಲತಾಯಿ ಸಪ್ನಾಳೇ 4 ವರ್ಷದ ಮೊಮ್ಮಗಳನ್ನು ಕೊಲೆ ಮಾಡಿದ್ದಾರೆ ಎಂದು ಬಾಲಕಿ ಅಜ್ಜ ಸುನೀಲ ಹಂಪನ್ನವರ ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಹೆಲಿಕಾಪ್ಟರ್ ದುರಂತಕ್ಕೀಡಾದವರ ಮೃತದೇಹ ಸಾಗಿಸ್ತಿರೋ ಮೊದಲ ದೃಶ್ಯ ಬಿಡುಗಡೆ
ಮೃತ ಬಾಲಕಿ ತಂದೆ ರಾಯಣ್ಣ ನಾವಿ ಛತ್ತೀಸ್‌ಗಢದಲ್ಲಿ ಸಿಆರ್ ಪಿಎಫ್ ಯೋಧರಾಗಿ ಕೆಲಸ ಮಾಡುತ್ತಿದ್ದಾರೆ. ಮಗುವಿನ ತಂದೆ ಬರೋವರೆಗೂ ಕೇಸ್ ದಾಖಲಿಸಿಕೊಳ್ಳಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ. ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಘಟನೆಯಲ್ಲಿ ಝಾನ್ಸಿ (Jhansi) ಮೂಲದ ಟ್ರೇನ್ ಅಟೆಂಡರ್ ದೇವಋಷಿ ವರ್ಮಾ (23) ಸಾವನ್ನಪ್ಪಿದ್ದು, ನಾಲ್ವರು ತೀವ್ರ ಗಾಯಗೊಂಡಿದ್ದಾರೆ. ಬೆಳಗಾವಿಯ (Belagavi) ಖಾನಾಪುರ ತಾಲೂಕಿನ ಲೊಂಡಾ ಬಳಿ ಘಟನೆ ನಡೆದಿದ್ದು, ಟಿಕೆಟ್ ಕೇಳಿದಾಗ ಚೂರಿ ಇರಿದು ಆಗಂತುಕ ಪರಾರಿಯಾಗಿದ್ದಾನೆ. ನಾಲ್ವರು ಪ್ರಯಾಣಿಕರು ಸೇರಿ ಟಿಸಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಅಪರಿಚಿತ ಮುಸುಕುಧಾರಿಯಿಂದ ಕೃತ್ಯ ನಡೆದಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ – ಮೇ ತಿಂಗಳಲ್ಲೇ 172 ಕೇಸ್ ದಾಖಲು!
ಕೃತ್ಯ ಎಸಗಿ ಅಪರಿಚಿತ ಮುಸುಕುಧಾರಿ ಪರಾರಿಯಾಗಿದ್ದು, ಟಿ.ಸಿ ಸೇರಿ ನಾಲ್ವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಾಲುಕ್ಯ ರೈಲು ಧಾರವಾಡದಿಂದ ಬೆಳಗಾವಿಯತ್ತ ಬರುತ್ತಿದ್ದ ವೇಳೆ ಘಟನೆ ನಡೆದಿದೆ. ಚಿಂತಾಜನಕ ಸ್ಥಿತಿಯಲ್ಲಿರುವ ನಾಲ್ವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಪತ್ನಿಯನ್ನು ಕಾಡಿಗೆ ಕರೆದೊಯ್ದು ಮೊಣಕಾಲುಗಳಿಗೆ ಸುತ್ತಿಗೆಯಿಂದ ಹಲ್ಲೆಗೈದು, ಮಚ್ಚು ಬೀಸಿದ ಪತಿ!
ಬೆಳಗಾವಿ: ಪ್ರೀತಿಸುವಂತೆ (Lover) ಪೀಡಿಸುತ್ತಿದ್ದ ಯುವಕ ಹಾಗೂ ಆತನ ಸಹೋದರನ ಇಬ್ಬರನ್ನೂ ಯುವತಿ ತಂದೆಯೇ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಸವದತ್ತಿ ತಾಲೂಕಿನ ಕಾರಿಮನಿ ಗ್ರಾಮದಲ್ಲಿ ನಡೆದಿದೆ.
ಯುವಕ ಯಲ್ಲಪ್ಪ ಹಳೆಗೋಡಿ ಆರೋಪಿ ಫಕೀರಪ್ಪ ಪುತ್ರಿಯನ್ನು ಪ್ರೀತಿಸುವಂತೆ ಬೆನ್ನುಬಿದ್ದಿದ್ದ. ಇದರಿಂದ ಸಿಟ್ಟಿಗೆದ್ದ ಫಕೀರಪ್ಪ ಯುವಕನಿಗೆ ಎಚ್ಚರಿಕೆ ನೀಡಲು ಕಾರಿಮನಿ ಗ್ರಾಮಕ್ಕೆ ತೆರಳಿದ್ದ. ಈ ವೇಳೆ ಫಕೀರಪ್ಪ ಹಾಗೂ ಯಲ್ಲಪ್ಪ ಮಾತಿಗೆ-ಮಾತು ಬೆಳೆದು ವಿಕೋಪಕ್ಕೆ ತಿರುಗಿದೆ. ಫಕೀರಪ್ಪ ಯಲ್ಲಪ್ಪನಿಗೆ ಚಾಕುವಿನಿಂದ ಇರಿದಿದ್ದಾನೆ. ಅಲ್ಲದೇ ಯಲ್ಲಪ್ಪನನ್ನು ಬಿಡಿಸಿಕೊಳ್ಳಲು ಬಂದ ಸಹೋದರ ಮಾಯಪ್ಪನಿಗೂ ಚಾಕುವಿನಿಂದ ಇರಿದಿದ್ದಾನೆ.
ತೀವ್ರ ರಕ್ತಸ್ರಾವದಿಂದ ಯಲ್ಲಪ್ಪ ಸ್ಥಳದಲ್ಲೇ ಮೃತಪಟ್ಟರೆ, ಮಾಯಪ್ಪ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಮುರಗೋಡ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಲ್ಲದೇ ಈ ಹತ್ಯೆ ಬಳಿಕ ಪರಾರಿಯಾಗಿರುವ ಆರೋಪಿ ಫಕೀರಪ್ಪ ಭಾಂವಿಹಾಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಸ್ಥಳಕ್ಕೆ ರಾಮದುರ್ಗ DYSP ಭೇಟಿ ನೀಡಿದ್ದಾರೆ. ಇದನ್ನೂ ಓದಿ: ರೇವಣ್ಣ ವಿಚಾರದಲ್ಲಿ ಮಾತ್ರ ಹೋರಾಟ ಮಾಡ್ತೀನಿ, ಪ್ರಜ್ವಲ್‌ಗಾಗಿ ಅಲ್ಲ: ಹೆಚ್‌ಡಿಕೆ
ಬೆಳಗಾವಿ: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಕೇಸ್ ನಲ್ಲಿ ಡಿ.ಕೆ ಶಿವಕುಮಾರ್ ಆಡಿಯೋ ರಿಲೀಸ್ ವಿಚಾರಕ್ಕೆ ಆಡಿಯೋ ಸುತ್ತು ಹಾಕಿ ಇದೆ. ಆದರೆ ನನ್ನ ಕೇಸ್ ನಲ್ಲಿ ಡಿಕೆಶಿ ನೇರವಾಗಿ ಭಾಗಿಯಾದ ಬಗ್ಗೆ ಸಾಕ್ಷಿಗಳಿವೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.
ಗೋಕಾಕ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ಕೇಸ್ ನಲ್ಲಿ ಡಿ.ಕೆ ಶಿವಕುಮಾರ್ ಭಾಗಿಯಾಗಿರುವುದು ಬಯಲಾಗಿದೆ. ಅವರ ಬಳಿ ಅಲ್ಲಿ ಇಲ್ಲಿ ಅಂತಾ ಸುತ್ತು ಹಾಕಿರೋದು ಇದೆ. ನನ್ನ ಕೇಸ್ ನಲ್ಲಿ ಡಿಕೆ ಶಿವಕುಮಾರ್ (DK Shivakumar) ಮಾತಾಡಿದ್ದೇ ಕೊಡುತ್ತೇನೆ. ನನ್ನ ಬಗ್ಗೆ ಷಡ್ಯಂತ್ರ ಮಾಡಿದ್ದು ಇದೆ, ಆದರೆ ಮಾಧ್ಯಮದ ಮುಂದೆ ಕೊಡಲ್ಲ. ಸಿಬಿಐಗೆ ಕೇಸ್ ಕೊಟ್ಟರೆ ಸಾಕ್ಷಿ ಕೊಡುತ್ತೇನೆ ಎಂದು ಜಾರಕಿಹೊಳಿ ಹೇಳಿದರು.
ನನ್ನ ಕೇಸ್ ನಲ್ಲೂ ಎಸ್‌ಐಟಿ ಮೇಲೆ ವಿಶ್ವಾಸ ಇಲ್ಲ, ಈಗಲೂ ಎಸ್ಐಟಿ ಮೇಲೆ ವಿಶ್ವಾಸ ಇಲ್ಲ. ಸಿಬಿಐಗೆ ಕೇಸ್ ಕೊಟ್ಟರೂ ಹಾಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಮೇಲುಸ್ತುವಾರಿ ಮಾಡಬೇಕು. ಮಹಾನ್ ನಾಯಕ ಹಣದಲ್ಲಿ ಬಹಳಷ್ಟು ಪ್ರಭಾವಿ ಇದ್ದಾರೆ. ಹಣ ಕೊಟ್ಟು ಎಲ್ಲವನ್ನೂ ಖರೀದಿ ಮಾಡಬೇಕು ಅನ್ನೋ ಸೊಕ್ಕು ಇದೆ. ದೇಶದಲ್ಲಿ ಕಾನೂನು ಉಳಿಯಬೇಕು ಎಂದರೆ ಈ ಕೇಸ್ ನಲ್ಲಿ ಫಿಕ್ಸ್ ಆಗಬೇಕು. ನನ್ನ ಕೇಸ್ ನಲ್ಲಿ ಬರೀ ಡಿಕೆ ಶಿವಕುಮಾರ್ ಭಾಗಿಯಾಗಿಲ್ಲ. ನಮ್ಮವರೂ ಕೇಸ್ ನಲ್ಲಿದ್ದಾರೆ. ಜೂನ್ 4ರ ನಂತರ ಎಲ್ಲವನ್ನೂ ಬಹಿರಂಗ ಪಡಿಸುತ್ತೇನೆ. ಸತತ ನಾಲ್ಕು ವರ್ಷದಿಂದ ದೊಡ್ಡ ಪ್ರಶ್ನೆಯಾಗಿ ಕಾಡುತ್ತಿದ್ದು, ಇದೆಲ್ಲದಕ್ಕೂ ಜೂನ್ 4ರ ನಂತರ ಇತಿಶ್ರೀ ಹಾಡೋಣ ಎಂದರು.
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್ ಯಾರು ಹೆಮ್ಮೆ ಪಡುವ ವಿಷಯ ಅಲ್ಲ. ಎಲ್ಲರೂ ತಲೆ ತಗ್ಗಿಸುವ ವಿಷಯ, ಬಹಳ ಕೆಟ್ಟ ಪ್ರಮಾಣದಲ್ಲಿ ಆಗಿದೆ. ರೇವಣ್ಣ ಕಾನೂನು ರೀತಿ ಹೋರಾಟ ಮಾಡಲಿ. ಕಾನೂನು ಒಂದೇ ಅದಕ್ಕೆ ಉತ್ತರ ಎಂದು ರಮೇಶ್ ಜಾರಕಿಹೊಳಿ (Ramesh Jarakiholi) ಹೇಳಿದರು.
ಬೆಳಗಾವಿ: ದೇವೇಗೌಡರ (H.D.Deve Gowda) ಕುಟುಂಬದ ಸದಸ್ಯರು ಹಾಸನವಷ್ಟೇ ಅಲ್ಲ ಕರ್ನಾಟಕದ ಹೆಸರು ಕೆಡಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ (Veerappa Moily) ವಾಗ್ದಾಳಿ ನಡೆಸಿದರು.
ಬೆಳಗಾವಿಯಲ್ಲಿ (Belagavi) ಮಾತನಾಡಿದ ಅವರು, ದೇವಗೌಡರ ಮಗ, ಮೊಮ್ಮಗನಿಂದ ಒಂದಲ್ಲ 2 ಸಾವಿರ ಮಹಿಳೆಯರ ಮೇಲೆ ದೌರ್ಜನ್ಯವಾಗಿದೆ. ದೇವೇಗೌಡರ ಕುಟುಂಬ ಸದಸ್ಯರು ಹಾಸನವಷ್ಟೇ ಅಲ್ಲ ಕರ್ನಾಟಕದ ಹೆಸರು ಕೆಡಿಸಿದ್ದಾರೆ. ರಾಜಕೀಯ ಕೆಡಸಿದ್ದಾರೆ, ದೇಶದ ಎದುರು ಕರ್ನಾಟಕ ತಲೆತಗ್ಗಿಸುವಂತೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ನಾರಿಶಕ್ತಿ, ಬೇಟಿ ಪಡಾವೋ, ಬೇಟಿ ಬಚಾವೋ ಅಂತಾರೆ. ಭಾರತ ಸರ್ಕಾರದ ಬಳಿಯೇ ನ್ಯಾಷನಲ್ ಕ್ರೈಂ ರೆಕಾರ್ಡ್ ಮಾಹಿತಿ ಇದೆ. ಯುಪಿಎ ಸಮಯದಲ್ಲಿ ಮೂರು ಲಕ್ಷ ಮಹಿಳೆಯರ ಮೇಲೆ ದೌರ್ಜನ್ಯ ಆಗ್ತಿತ್ತು. ಈಗ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣಗಳ ಪ್ರಮಾಣ 22 ಲಕ್ಷ ದಾಟಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಪ್ರಜ್ವಲ್ ಪೆನ್‍ಡ್ರೈವ್ ಪ್ರಕರಣದ ತನಿಖೆಗೆ ಸಂಪೂರ್ಣ ಸಹಕಾರ: ಅಣ್ಣಾಮಲೈ
ಬಿಜೆಪಿ ಆಡಳಿತ ನಡೆಸುತ್ತಿರುವ ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಅಧಿಕವಾಗಿವೆ. ಪ್ರಜ್ವಲ್ ಸೆಕ್ಸ್ ಸ್ಕ್ಯಾಂಡಲ್‌ನ ಎಲ್ಲ ಸೂತ್ರದಾರರು ಪ್ರಧಾನಿ ಮೋದಿ ಜೊತೆಗೆ ವೇದಿಕೆ ಹಂಚಿಕೊಳ್ತಿದ್ದಾರೆ. ಗೃಹ ಸಚಿವ ಅಮಿತ್ ಶಾ ಮಲಗಿದ್ದಾರೆಯೇ? ಇಂಥ ಕೃತ್ಯ ಎಸಗಿ, ಹಣದೋಚಿಕೊಂಡು ದೇಶದಿಂದ ಪರಾರಿ ಆಗ್ತಿದ್ದಾರೆ. ಕೇಂದ್ರದಲ್ಲಿ ಇಂಥ ಸರ್ಕಾರ ಇದ್ದರೆ ಏನು ಪ್ರಯೋಜನ ಎಂದು ಮೊಯ್ಲಿ ಆಕ್ರೋಶ ಹೊರಹಾಕಿದರು.
ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗವೂ ಆಗಲಿಲ್ಲ. ಮಹಾದಾಯಿ ಯೋಜನೆಯನ್ನು ಜಾರಿಗೆ ತರಲಿಲ್ಲ. ಕರ್ನಾಟಕದಲ್ಲಿ ನರೇಂದ್ರ ಮೋದಿಗೆ ಮತ ಕೇಳಲು ನೈತಿಕ ಹಕ್ಕೂ ಇಲ್ಲ, ಭೌತಿಕ ಹಕ್ಕೂ ಇಲ್ಲ. ಹೊಸ ಮುಖಗಳಿಗೆ ಈ ಸಲ ಕಾಂಗ್ರೆಸ್ ಅವಕಾಶ ಕೊಟ್ಟಿದೆ, ಅವರ ಗೆಲುವು ಆಗಬೇಕು. ಬೆಳಗಾವಿ ಬಿಜೆಪಿ ಟಿಕೆಟ್ ಆ ಪುಣ್ಯಾತ್ಮ ಜಗದೀಶ್ ಶೆಟ್ಟರ್‌ಗೆ ಸಿಕ್ಕಿದೆ. ಕಾಂಗ್ರೆಸ್ ಪಕ್ಷಕ್ಕೆ ಜಗದೀಶ್ ಶೆಟ್ಟರ್ ವಿಶ್ವಾಸದ್ರೋಹ ಮಾಡಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಪೆನ್‍ಡ್ರೈವ್ ಹಂಚಿದ ಆರೋಪ- ನವೀನ್ ಗೌಡಗೆ SIT ನೋಟಿಸ್
ಅನಾರೋಗ್ಯದ ಮಧ್ಯೆಯೂ ಸೋನಿಯಾ ಗಾಂಧಿ ಹುಬ್ಬಳ್ಳಿಗೆ ಬಂದು ಪ್ರಚಾರ ಮಾಡಿದ್ರು. ನಮ್ಮ ಜೊತೆಗೆ ಬಂದವರಿಗೆ ಗೌರವ ಕೊಡಬೇಕೆಂದು ಅಂದು ಸೋನಿಯಾ ಬಂದಿದ್ರು. ಹೀಗಿದ್ದರೂ ಈ ಪುಣ್ಯಾತ್ಮನಿಗೆ ಕೃತಜ್ಞತಾ ಭಾವ ಇಲ್ಲ. ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ ಆಗಿದ್ದು ಯಾರಿಗೂ ನೆನಪಿಲ್ಲ. ಏಕೆಂದರೆ ಅವರ ಕೊಡುಗೆ ಶೂನ್ಯ. ಹುಬ್ಬಳ್ಳಿಯಿಂದ ಕಣಕ್ಕಿಳಿದಿದ್ರೆ ಇನ್ನೂ ಹಲವು ಸಲ ಸೋಲಿಸುತ್ತಿದ್ದರು. ಅಲ್ಲಿ ಸಲ್ಲದವರು ಇಲ್ಲಿ ಸಲ್ಲುವುದು ಸಾಧ್ಯವೇ? ಪಾಪ ಮಹಿಳೆ, ಗಂಡನ ಕಳೆದುಕೊಂಡ ವಿಧವೆಯ ಟಿಕೆಟ್‌ನ್ನು ಶೆಟ್ಟರ್ ತಪ್ಪಿಸಿದರು. ವಿಧವೆ ಟಿಕೆಟ್ ತಪ್ಪಿಸಿ ಜಗದೀಶ್ ಶೆಟ್ಟರ್ ಬೆಳಗಾವಿಯಿಂದ ಸ್ಫರ್ಧಿಸುತ್ತಿದ್ದಾರೆ ಎಂದು ಟೀಕಿಸಿದರು.
ಪ್ರಜ್ವಲ್ ಕರ್ನಾಟಕದಲ್ಲಿ ಇದ್ದಿದ್ದು ನಾಚಿಕೆಗೇಡಿನ ಸಂಗತಿ. ದೇವಗೌಡರು ಈ ಪ್ರಕರಣದಲ್ಲಿ ಸುಮ್ಮನೆ ಇರಬೇಕು, ಅಂದಾಗ ಅವರೂ ಕೃತ್ಯ ಖಂಡಿಸಿದಂತೆ ಆಗ್ತದೆ. ರಮೇಶ್ ಜಾರಕಿಹೊಳಿ, ಪ್ರಜ್ವಲ್ ರೇವಣ್ಣ ಅನ್ಯಾಯ ಮಾಡಿದ್ದಾರೆ. ಈ ಇಬ್ಬರು ಏನು ಪುರುಷಾರ್ಥದ ಕೆಲಸ ಮಾಡಿದ್ದಾರಾ? ದೌರ್ಜನ್ಯ ಎಸಗಿದ್ದು ಸ್ಪಷ್ಟವಾಗಿದೆ. ದಾಖಲೆಗಳಿವೆ ನಾಚಿಕೆಗೇಡಿನ ಕೆಲಸ ಮಾಡಿದ್ದಾರೆ. ಈಗ ಡಿಕೆ ಶಿವಕುಮಾರ್ ವಿರುದ್ಧ ಬೆರಳು ತೋರುವ ಕೆಲಸ ಮಾಡಬಾರದು ಎಂದರು.