ಬೆಳಗಾವಿ: ಗಡಿ ವಿವಾದ ಪ್ರಕರಣವನ್ನು ಮಹಾರಾಷ್ಟ್ರ ಸರ್ಕಾರ (Maharastra Govt) ಗಂಭೀರವಾಗಿ ಪರಿಗಣಿಸಿದ್ದು, ಗಡಿವಿವಾದ ಸಂಬಂಧ ಇಂದು ಮುಂಬೈನಲ್ಲಿ ಮಹಾರಾಷ್ಟ್ರ ಸರ್ಕಾರ ಸಭೆ ಕರೆದಿದೆ.
ಮುಂಬೈನಲ್ಲಿರುವ ಮಹಾರಾಷ್ಟ್ರ ಮಂತ್ರಾಲಯ (ವಿಧಾನಸೌಧ)ದ ಕಚೇರಿಯಲ್ಲಿ ಮಧ್ಯಾಹ್ನ 12.15ಕ್ಕೆ ಸಭೆ ನಿಗದಿಯಾಗಿದೆ. ಸಭೆಗೆ ಬೆಳಗಾವಿಯ ನಾಡದ್ರೋಹಿ ಎಂಇಎಸ್ ಪುಂಡರಿಗೆ ಆಹ್ವಾನ ನೀಡಲಾಗಿದ್ದು ಮಹಾರಾಷ್ಟ್ರದ ಗಡಿ ಉಸ್ತುವಾರಿ ಸಚಿವ ಶಂಭುರಾಜ್ ದೇಸಾಯಿ ನೇತೃತ್ವದಲ್ಲಿ ಸಭೆ ಆಯೋಜನೆ ಮಾಡಲಾಗಿದೆ. ಸಭೆಯಲ್ಲಿ ಗಡಿವಿವಾದ ಸಂಬಂಧ ಸಂಗ್ರಹಿಸಬೇಕಾದ ಸಾಕ್ಷ್ಯಾಧಾರ ದಾಖಲೆ ಸಂಬಂಧ ಚರ್ಚೆ ನಡೆಯಲಿದ್ದು, ಸುಪ್ರೀಂಕೋರ್ಟ್ ನಲ್ಲಿ ಗಡಿವಿವಾದ ಸಂಬಂಧ ನೇಮಿಸಿರುವ ವಕೀಲರ ತಂಡದ ಜೊತೆಯೂ ಚರ್ಚೆಗೆ ಮಹಾರಾಷ್ಟ್ರ ಮುಂದಾಗಿದೆ.
ಯಾವುದೇ ಸಮಯದಲ್ಲಿ ಸುಪ್ರೀಂಕೋರ್ಟ್ ನಲ್ಲಿ (Supreme Court) ಗಡಿವಿವಾದ ವಿಚಾರಣೆಗೆ ಬರುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಗಡಿವಿವಾದ ಗಂಭೀರವಾಗಿ ಪರಿಗಣಿಸಿ ಮಹಾರಾಷ್ಟ್ರ ಸರ್ಕಾರ ಸಭೆ ಮೇಲೆ ಸಭೆ ನಡೆಸುತ್ತಿದೆ. ಏನೂ ಗೊತ್ತಿಲ್ಲದಂತೆ ಇರುವ ಕರ್ನಾಟಕ ಸರ್ಕಾರದ ಮೌನ ನಡೆಗೆ ಗಡಿ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ, ಜೆಡಿಎಸ್‍ಗೆ ಅಲ್ಪಸಂಖ್ಯಾತರನ್ನು ಕಂಡರೆ ಆಗಲ್ಲ: ಡಿ.ಕೆ ಶಿವಕುಮಾರ್
ಬೆಳಗಾವಿ: ಇಂದು ಸಿಎಂ ಸಿದ್ದರಾಮಯ್ಯನವರು (Siddaramaiah) ಮಂಡಿಸಿರುವ ಬಜೆಟ್ ನಲ್ಲಿ ಬೆಳಗಾವಿ ಜಿಲ್ಲೆಯ ನಿರೀಕ್ಷೆಗೆ ತಕ್ಕಂತೆ ಮಹತ್ವ ಸಿಕ್ಕಿಲ್ಲ.
ಅಥಣಿ-ಕೊಟ್ಟಲಗಿ-ಅಮ್ಮಾಜೇಶ್ವರಿ, ಶ್ರೀ ಚನ್ನವೃಷಭೇಂದ್ರ, ಮಹಾಲಕ್ಷ್ಮಿ, ಸತ್ತಿಗೇರಿ, ಮಾರ್ಕಂಡೇಯ, ಬೈಲಹೊಂಗಲ ವಿಧಾನಸಭಾ ಕ್ಷೇತ್ರದ ಹಳೆಯ ಏತ ನೀರಾವರಿ ಯೋಜನೆಗಳ ಪುನಶ್ಚೇತನ ಮಾಡುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಬೆಳಗಾವಿ ನಗರ ಪರಿಮಿತಿಯಲ್ಲಿ ವಾಹನ ದಟ್ಟಣೆ ಹಾಗೂ ಸಂಚಾರ ದಟ್ಟಣೆ ನಿವಾರಿಸಲು 450 ಕೋಟಿ ರೂ. ವೆಚ್ಚದಲ್ಲಿ 4.50 ಕಿ.ಮೀ. ಉದ್ದದ ಮೇಲ್ಸೇತುವೆ (Elevated Corridor) ನಿರ್ಮಾಣ ಕಾಮಗಾರಿಯನ್ನು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ನಿರ್ಮಾಣ. ಗೋಕಾಕ್ ಜಲಪಾತವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿ. ಶ್ರೀ ಕ್ಷೇತ್ರ ರೇಣುಕಾ ಯಲ್ಲಮ್ಮನ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಸಂರಕ್ಷಿಸಿ ಅಭಿವೃದ್ಧಿಗೊಳಿಸಲು ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯನ್ನು ರಚಿಸಿ ಅಧಿಸೂಚನೆ ಹೊರಡಿಸಲಾಗಿದೆ.
ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನವು ಈ ವರ್ಷ ಶತಮಾನದ ಮೈಲಿಗಲ್ಲನ್ನು ಪೂರ್ಣಗೊಳಿಸುತ್ತಿದೆ. ಮಹಾತ್ಮಾ ಗಾಂಧೀಜಿಯವರು ಅಧ್ಯಕ್ಷತೆ ವಹಿಸಿದ್ದ ಏಕೈಕ ಅಧಿವೇಶನ ಇದಾಗಿದೆ. ಈ ಅಧಿವೇಶನದ ಕೊಡುಗೆಯನ್ನು ಸ್ಮರಿಸಲು 2 ಕೋಟಿ ರೂ. ವೆಚ್ಚದಲ್ಲಿ ಬೆಳಗಾವಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗುವುದು. ಅಲ್ಲದೇ ಮಹಾತ್ಮಾ ಗಾಂಧೀಜಿಯವರು ಕರ್ನಾಟಕದಲ್ಲಿ ಭೇಟಿ ನೀಡಿದ ಸ್ಥಳಗಳಲ್ಲಿ ಸ್ಮರಣಾರ್ಥ ಫಲಕಗಳನ್ನು ಅಳವಡಿಸುವ ಬಗ್ಗೆ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇದನ್ನೂ ಓದಿ: ಸಿಎಂಗೆ ಗೌರವ ಕೊಡುವುದು ನಮ್ಮ ಜವಾಬ್ದಾರಿ- ಅನಂತ್ ಕುಮಾರ್ ಹೆಗಡೆಗೆ ಹೈಕೋರ್ಟ್ ತರಾಟೆ
ಬೆಳಗಾವಿ: ಬಜೆಟ್‌ನಲ್ಲಿ (Karnataka Budget 2024) ಚಿಕ್ಕೋಡಿ (Chikkodi )ಪ್ರತ್ಯೇಕ ಜಿಲ್ಲೆಯಾಗುವ ನಿರೀಕ್ಷೆಯಲ್ಲಿದ್ದ ಜನರಿಗೆ ನಿರಾಸೆಯಾಗಿದೆ. ಈ ಸಲುವಾಗಿ ಚಿಕ್ಕೋಡಿಯಲ್ಲಿ ಹೋರಾಟ ಸಮಿತಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ 30 ವರ್ಷಗಳಿಂದ ಸತತವಾಗಿ ಹೋರಾಟ ಮಾಡಿದರೂ ಸರ್ಕಾರ ಸ್ಪಂದಿಸುವ ಕೆಲಸ ಮಾಡಿಲ್ಲ. ಚಳಿಗಾಲದ ಅಧಿವೇಶನದಲ್ಲಿ ಪ್ರತ್ಯೇಕ ಜಿಲ್ಲೆ ಘೋಷಣೆ ಆಗುತ್ತೆ ಎಂಬ ನಿರೀಕ್ಷೆ ಇತ್ತು. ಜಿಲ್ಲೆಯ ವಿಭಜನೆ ಆಗದೇ ಇರುವುದು ಚಿಕ್ಕೋಡಿ ಭಾಗದ ಜನರ ನಿರೀಕ್ಷೆಯನ್ನು ಹುಸಿಯಾಗಿಸಿದೆ ಎಂದು ಹೋರಾಟಗಾರರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ರಾಜ್ಯದ ಅಭಿವೃದ್ಧಿಯನ್ನು 20 ವರ್ಷ ಹಿಂದಕ್ಕೆ ಕೊಂಡೊಯ್ಯುವ ಬಜೆಟ್: ವಿಜಯೇಂದ್ರ ವಾಗ್ದಾಳಿ
ಮುಂದಿನ ದಿನಗಳಲ್ಲಿ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಹೋರಾಟ ಅನಿವಾರ್ಯವಾಗಿದೆ. ಇನ್ನು ಮುಂದೆ ಜನ ಪ್ರತಿನಿಧಿಗಳು ಜಿಲ್ಲಾ ವಿಭಜನೆ ಕುರಿತು ಮಾತನಾಡಬಾರದು. ಮಾತನಾಡಿದರೆ ಅಂತವರ ವಿರುದ್ಧ ಧಿಕ್ಕಾರ ಕೂಗುವ ಕೆಲಸ ಮಾಡುತ್ತೇವೆ. ಜನ ಪ್ರತಿನಿಧಿಗಳ ಮನೆ ಮುಂದೆ ಪ್ರತಿಭಟನೆ ಮಾಡುವ ಕೆಲಸ ಮಾಡುತ್ತೇವೆ ಎಂದು ಹೋರಾಟ ಸಮಿತಿ ಸದಸ್ಯರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಮೈಸೂರು ಏರ್‌ಪೋರ್ಟ್ ರನ್‌ವೇ ವಿಸ್ತರಣೆಗೆ ಅನುದಾನ ಘೋಷಣೆ – ತವರು ಜಿಲ್ಲೆಗೆ ಸಿಎಂ ಕೊಡುಗೆ ಏನು?
ಬೆಳಗಾವಿ: ಫೆ.16ರಂದು (ಶುಕ್ರವಾರ) ಸಿಎಂ ಸಿದ್ದರಾಮಯ್ಯ (Siddaramaiah) ರಾಜ್ಯ ಸರ್ಕಾರದ ಪೂರ್ಣಾವಧಿ ಬಜೆಟ್ ಮಂಡನೆ ಮಾಡಲಿದ್ದಾರೆ. ಅಲ್ಲದೇ ಸಿದ್ದರಾಮಯ್ಯ ಅವರು ಮಂಡಿಸಲಿರುವ ದಾಖಲೆಯ 15ನೇ ಬಜೆಟ್ ಸಹ ಇದಾಗಿದೆ. ಬಜೆಟ್‌ನಲ್ಲಿ ಸರ್ಕಾರ ಹೊಸ ಜಿಲ್ಲೆಗಳನ್ನು ಘೋಷಣೆ ಮಾಡುವ ಸಾಧ್ಯತೆಗಳಿದ್ದು, ಬೆಳಗಾವಿ ಮತ್ತು ತುಮಕೂರು (Belagavi, Tumkur) ಜಿಲ್ಲೆ ವಿಭಜನೆ ಫಿಕ್ಸ್ ಆಗುತ್ತಾ ಅನ್ನೋ ಪ್ರಶ್ನೆ ಎದಿದೆ.
ಇದೇ ಫೆಬ್ರವರಿ 8ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯಲ್ಲಿ, ಅಸ್ತಿತ್ವದಲ್ಲಿ ಇರೋ ಜಿಲ್ಲೆಗಳ ಮಿತಿಯನ್ನು ಪುನರ್ ರಚಿಸುವ ಬಗ್ಗೆ ಉಲ್ಲೇಖಿಸಿತ್ತು. ನೋಂದಣಿ ಕಾಯ್ದೆ 1908 (ಕೇಂದ್ರ ಅಧಿನಿಯಮ 16, 1908) ಅಡಿಯಲ್ಲಿ ಜಿಲ್ಲೆಗಳ ಮಿತಿಯನ್ನು ಪುನರ್ ರಚಿಸುವ ಬಗ್ಗೆ ಉಲ್ಲೇಖಿಸಿತ್ತು. ಈ ಪೈಕಿ ರಾಜ್ಯದಲ್ಲಿ ದೊಡ್ಡ ಜಿಲ್ಲೆಗಳಾಗಿರುವ ಬೆಳಗಾವಿ ಹಾಗೂ ತುಮಕೂರು ಜಿಲ್ಲೆಗಳ ಹೆಸರನ್ನು ಉಲ್ಲೇಖಿಸಲಾಗಿತ್ತು. ಇದನ್ನೂ ಓದಿ: ‘ಮಿಂಟೋ’ ಆಸ್ಪತ್ರೆಯ ಕರ್ಮಕಾಂಡ – ಆಸ್ಪತ್ರೆಗೆ ಬೀಗ ಹಾಕಿ ರಸ್ತೆಯಲ್ಲೇ ರೋಗಿಗಳಿಗೆ ಚಿಕಿತ್ಸೆ
ಸದ್ಯ ಜಿಲ್ಲೆಗಳ ವಿಭಜನೆಯ ಸದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಪ್ರತ್ಯೇಕ ಜಿಲ್ಲೆಗಾಗಿ ಗೋಕಾಕ್, ಚಿಕ್ಕೋಡಿ, ಬೈಲಹೊಂಗಲ ಹಾಗೂ ಅಥಣಿ ನಡುವೆ ಫೈಟ್ ನಡೆಯುತ್ತಿದ್ದು, ಜನಪ್ರತಿನಿಧಿಗಳು ಅಲರ್ಟ್ ಆಗಿದ್ದಾರೆ. ಹಾಗಾಗಿ ಗುರುವಾರ (ಇಂದು) ಬೆಳಗಾವಿ ಶಾಸಕರು ಮುಖ್ಯಮಂತ್ರಿಗಳನ್ನು ಭೇಟಿ ಮಾಡುವ ಸಾಧ್ಯತೆಗಳಿದ್ದು, ತಮ್ಮ ಬೇಡಿಕೆಗಳನ್ನು ಮುಂದಿಡಲಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಲೋಕಸಭೆ ಚುನಾವಣೆ: RSS ಹಿನ್ನೆಲೆಯುಳ್ಳ ಅಭ್ಯರ್ಥಿಗಳು ಬಿಜೆಪಿಯಿಂದ ಕಣಕ್ಕೆ?
ಸಿಎಂ ದಾಖಲೆ ಬಜೆಟ್ ಮಂಡನೆ:
2023ರಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾದ ಬಳಿಕ ಸಿಎಂ ಸಿದ್ದರಾಮಯ್ಯ ಪೂರ್ಣಾವಧಿ ಬಜೆಟ್ ಮಂಡಿಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಇದು ಅವರ ದಾಖಲೆಯ 15ನೇ ಬಜೆಟ್ ಆಗಿದೆ. ಕಳೆದ ವರ್ಷ ಮಧ್ಯಂತರ ಬಜೆಟ್ ಮಂಡಿಸಿದ್ದರು. ಇದೀಗ ಪೂರ್ಣಾವಧಿ ಬಜೆಟ್ ಮಂಡಿಸುತ್ತಿದ್ದು, ರಾಜ್ಯದ ಜನರು ಹಲವು ನಿರೀಕ್ಷೆಗಳನ್ನಿಟ್ಟುಕೊಂಡಿದ್ದಾರೆ. ಇದನ್ನೂ ಓದಿ: ನಿಗೂಢ ಕೆಲಸಕ್ಕೆ 42 ಅಕ್ರಮ ಸಿಮ್‌ಗಳೊಂದಿಗೆ ಬೆಂಗಳೂರಿಗೆ ಹೊರಟಿದ್ದ ಯುವಕರು ಅರೆಸ್ಟ್
ಬೆಳಗಾವಿ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಪ್ರತಿಭಟನೆ (Belagavi Protest) ನಡೆಸಿದ ಬಳಿಕ ಇಲ್ಲಿನ ಕಾಂಗ್ರೆಸ್ ಭವನಕ್ಕೆ ನುಗ್ಗಿದ 27 ಬಿಜೆಪಿ ಕಾರ್ಯಕರ್ತರ (BJP Workers) ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬುಧವಾರ (ಫೆ.7) ಬೆಳಗ್ಗೆ ಚೆನ್ನಮ್ಮ ವೃತ್ತದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದ ಬಿಜೆಪಿ ಕಾರ್ಯಕರ್ತರು, ಪ್ರತಿಭಟನೆ ನಂತರ ಡಿಸಿ ಡಾ. ನಿತೇಶ ಪಾಟೀಲ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರು. ಇದಾದ ನಂತರ ಡಿಸಿ ಕಚೇರಿಯಿಂದ ಕಾಂಗ್ರೆಸ್ ಭವನಕ್ಕೆ ತೆರಳಿ ಪ್ರತಿಭಟನೆ ನಡೆಸಿದ 27 ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದರು. ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಂಗಳೂರಿನ ಕುಂಬಾರಪೇಟೆಯಲ್ಲಿ ಡಬಲ್ ಮರ್ಡರ್ – ಕೊಲೆ ಮಾಡಿ ತಾನೇ ಶರಣಾದ ಭೂಪ
ಬೆಳಗಾವಿ: ಬೆಳಗಾವಿಯಿಂದ-ಪುಣೆ ನಡುವೆ ವಿದ್ಯುದ್ದೀಕರಣದ ಕಾಮಗಾರಿ ಮುಗಿದ ತಕ್ಷಣ ಕುಂದಾನಗರಿಯ ಜನರ ಬಹು ನಿರೀಕ್ಷೆಯ ವಂದೇ ಭಾರತ್ ರೈಲು (Vande Bharat Train) ಸಂಚಾರ ಪ್ರಾರಂಭವಾಗಲಿದೆ ಎಂದು ಹುಬ್ಬಳಿ ನೈರುತ್ಯ ರೆಲ್ವೆ ವಲಯ ಪ್ರಯಾಣಿಕರ ಸಲಹಾ ಮಂಡಳಿ ಸದಸ್ಯ ಹಾಗೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ (Eranna Kadadi) ತಿಳಿಸಿದ್ದಾರೆ.
ನವದೆಹಲಿಯಲ್ಲಿ (New Delhi) ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಬೆಳಗಾವಿ-ಪುಣೆ (Belagavi-Pune) ನಡುವೆ ವಂದೇ ಭಾರತ್ ರೈಲಿನ ಅವಶ್ಯಕತೆಯ ಬಗ್ಗೆ ಮನವರಿಕೆ ಮಾಡಿ ಮನವಿ ಮಾಡಿದ ನಂತರ ರೈಲ್ವೆ ಸಚಿವರು ಪುಣೆ- ಬೆಳಗಾವಿ ನಡುವೆ ವಿದ್ಯುದೀಕರಣ ಕಾಮಗಾರಿ ಮುಕ್ತಾಯದ ನಂತರ ವಂದೇ ಭಾರತ್ ರೈಲು ಸಂಚಾರ ಪ್ರಾರಂಭಿಸುವ ಬಗ್ಗೆ ಲಿಖಿತವಾಗಿ ಮಾಹಿತಿಯನ್ನು ನೀಡಿದ್ದಾರೆ ಎಂದರು. ಇದನ್ನೂ ಓದಿ: UCC ಬಿಲ್ ಪಾಸ್ – ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿದ ದೇಶದ ಮೊದಲ ರಾಜ್ಯ ಉತ್ತರಾಖಂಡ
ಬೆಳಗಾವಿ ಜಿಲ್ಲೆಯ ರೈಲ್ವೆಗೆ ಸಂಬಂಧಪಟ್ಟ ವಿಷಯಗಳ ಕುರಿತು ಸಚಿವರ ಗಮನಕ್ಕೆ ತಂದ ಸಂಸದ ಕಡಾಡಿ ಅವರು ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಪ್ರಸ್ತಾವನೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು. ಈ ವೇಳೆ ಬೆಳಗಾವಿ ಕೋರ್ ಡೆವಲಪ್‌ಮೆಂಟ್ ಗ್ರೂಪ್ ಸದಸ್ಯರಾದ ಶೈಲೇಶ್ ಯಲಮಳ್ಳಿ, ಅಶ್ವಿನ್ ಪಾಟೀಲ್, ಸಂದೀಪ್ ಪಾಟೀಲ್ ಉಪಸ್ಥಿತರಿದ್ದರು. ಇದನ್ನೂ ಓದಿ: ಕರ್ನಾಟಕದ GSTಯ ಒಂದು ಪೈಸೆಯೂ ಬಾಕಿ ಉಳಿಸಿಕೊಂಡಿಲ್ಲ – ನಿರ್ಮಲಾ ಸೀತಾರಾಮನ್
ಬೆಳಗಾವಿ: ಶಾಲೆ ಬಳಿ ಎರಡನೇ ತರಗತಿ ವಿದ್ಯಾರ್ಥಿನಿಯ (Student) ಅಪಹರಣಕ್ಕೆ (Kidnap) ಪ್ರಯತ್ನಿಸಿದ್ದು, ಅದು ವಿಫಲವಾಗಿರುವ ಘಟನೆ ಚಿಕ್ಕೋಡಿ (Chikodi) ಪಟ್ಟಣದ ವಿದ್ಯಾನಗರ ಬಡಾವಣೆಯಲ್ಲಿ ನಡೆದಿದೆ.
ಶಾಲೆ ಕಾಂಪೌಂಡ್ ಬಳಿ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಕುಳಿತ ಕಿಡ್ನಾಪರ್ಸ್ ವಿದ್ಯಾರ್ಥಿನಿ ಬರುವುದನ್ನೇ ಕಾಯುತ್ತಿದ್ದ. ಶಾಲೆಯಿಂದ ವಿದ್ಯಾರ್ಥಿನಿ ಹೊರ ಬರುತ್ತಿದ್ದಂತೆ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಾಲಕಿಯನ್ನು ಅಪಹರಿಸಿ 200 ಮೀಟರ್ ಓಡಿದ್ದಾನೆ. ಬಳಿಕ ವಿದ್ಯಾರ್ಥಿ ವ್ಯಕ್ತಿಯ ಕೈಗೆ ಕಚ್ಚಿ ಆತನಿಂದ ತಪ್ಪಿಸಿಕೊಂಡು ಬಂದಿದ್ದಾಳೆ. ಇದನ್ನೂ ಓದಿ: ಪೋರ್ನ್ ವೀಡಿಯೋ ನೋಡಿ ಉದ್ರೇಕ – ಸ್ವಂತ ತಂಗಿಯ ಮೇಲೆ ಅತ್ಯಾಚಾರಗೈದ ಕಾಮುಕ ಅಣ್ಣ
ನಂತರ ವಿದ್ಯಾರ್ಥಿನಿ ಕಿರುಚಾಟದಿಂದ ವ್ಯಕ್ತಿ ಸ್ಥಳದಿಂದ ಓಡಿ ಹೋಗಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಲಾ ಆವರಣದ ಸಿಸಿಟಿವಿ ಪರಿಶೀಲನೆ ನಡೆಸಿ ಮಕ್ಕಳ ಕಳ್ಳರ ಕುರಿತು ಪೊಲೀಸ್ ಪ್ರಕಟಣೆ ಜಾರಿ ಮಾಡಿದ್ದಾರೆ. ಇದನ್ನೂ ಓದಿ: ಮಾಜಿ ಗ್ರಾಪಂ ಸದಸ್ಯನಿಂದ 120 ಎಕರೆ ಕೆರೆ ಭೂಮಿ ಕಬಳಿಕೆ!
ಬೆಳಗಾವಿ: ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಕುಂದಾನಗರಿ ಬೆಳಗಾವಿಯಲ್ಲಿ ಬಿಜೆಪಿ (BJP) ಕಾರ್ಯಕರ್ತರು ಪ್ರತಿಭಟನೆ ನಡೆಸಿ ನಗರದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು (Police) ವಶಕ್ಕೆ ಪಡೆದಿದ್ದಾರೆ.
ಇದಕ್ಕೂ ಮೊದಲು ನಗರದ ಚೆನ್ನಮ್ಮ ವೃತ್ತದಲ್ಲಿ ಎಮ್ಮೆಗಳನ್ನು ರಸ್ತೆಗೆ ತಂದು ಬಿಜೆಪಿಯ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ (Anil Benake) ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಮ್ಮಾ ನಿರ್ಮಲಾ, ನಮ್ಮ ದುಡ್ಡು ನೀಡಮ್ಮ: ಸಿದ್ದರಾಮಯ್ಯ
ಕಳೆದ 10 ತಿಂಗಳಲ್ಲಿ 716 ಕೋಟಿ ರೂ ಬಾಕಿ ಉಳಿಸಿಕೊಂಡಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೂ ಸಹ ಕತ್ತರಿ ಹಾಕಿದೆ. ರಾಜ್ಯ ಸರ್ಕಾರ ನೀಡುತ್ತಿದ 4 ಸಾವಿರ ಪ್ರೋತ್ಸಾಹ ಧನಕ್ಕೂ ಕತ್ತರಿ ಹಾಕಿದೆ. ಜಮೀನು ವಹಿವಾಟಿನ ಮೇಲೆ ದುಪ್ಪಟ್ಟು ಮುದ್ರಾಂಕ ಶುಲ್ಕ ವಿಧಿಸಿದೆ. ತಡೆ ಹಿಡಿದಿರುವ 4 ಸಾವಿರ ರೂ ಪ್ರೋತ್ಸಾಹ ಧನ ಶೀಘ್ರವೇ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಜಾನುವಾರುಗಳ ಸಮೇತ ಪ್ರತಿಭಟನೆ ಮಾಡುತ್ತೀವಿ ಎಂದು ಎಚ್ಚರಿಕೆ ನೀಡಿದರು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಇದನ್ನೂ ಓದಿ: ಗ್ಯಾರಂಟಿಯನ್ನು ಪೂರ್ಣ ಜಾರಿ ಮಾಡದೇ ಕೇಂದ್ರದ ಮೇಲೆ ಗೂಬೆ: ವಿಜಯೇಂದ್ರ ಕಿಡಿ
ಬೆಳಗಾವಿ: ಲಕ್ಷ್ಮಣ ಸವದಿಯವರನ್ನು ಕರೆದುಕೊಂಡು ಬರುವ ಜವಾಬ್ದಾರಿ ಎಲ್ಲರ ಹೆಗಲಿಗಿದೆ. ನಾನಿರಬಹುದು, ಈರಣ್ಣಾ ಕಡಾಡಿ, ಮಹಾಂತೇಶ್ ದೊಡ್ಡಗೌಡರ, ರಮೇಶ್ ಕತ್ತಿ (Ramesh Katti) ಸೇರಿ ಜಿಲ್ಲೆಯ ಎಲ್ಲ ನಾಯಕರ ಮೇಲಿದ್ದು ಸವದಿ ಬಿಜೆಪಿ ಬಂದ್ರೆ ಅನುಕೂಲ ಆಗುತ್ತದೆ ಎಂದ ಸಂಸದ ಅಣ್ಣಾಸಾಹೇಬ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಕ್ಷ್ಮಣ ಸವದಿಯನ್ನ (Laxman Savadi) ಕರೆದುಕೊಂಡು ಬರುವ ಜವಾಬ್ದಾರಿ ಎಲ್ಲರ ಹೆಗಲಿಗಿದೆ. ಈ ಬಗ್ಗೆ ಸವದಿ ಅವರು ಒಪ್ಪಿಗೆ ಕೊಡಬೇಕು. ಕೇಂದ್ರದರ ಮುಖಂಡರ ಜೊತೆಗೆ ಚರ್ಚೆ ಆಗಬೇಕು. ಸವದಿಯವರು ಬರಲಿ ಅನ್ನೋದು ನಮ್ಮ ಆಶಯ ಬಂದರೆ ಪಕ್ಷಕ್ಕೆ, ಬೆಳಗಾವಿ (Belagavi) ಜಿಲ್ಲೆಗೆ ಒಳ್ಳೆಯದಾಗುತ್ತೆ. ನಮ್ಮ ಪಕ್ಷದಿಂದ ಹೊರ ಹೋದವರಿಗೆ ನಾವು ಆಹ್ವಾನ ಕೊಟ್ಟಿದ್ದೇವೆ. ಸವದಿಯರಿಗೆ ನಾವು ಕೂಡ ಆಹ್ವಾನ ಕೊಟ್ಟಿದ್ದೇವೆ. ನಮ್ಮ ರಾಜ್ಯಾಧ್ಯಕ್ಷರು, ಎಲ್ಲರು ಕೂಡ ಪ್ರಯತ್ನ ಮಾಡುತ್ತಿದ್ದಾರೆ ಎಂದರು.
ಅದೇ ರೀತಿ ಎಷ್ಟು ಜನ ಬಿಜೆಪಿಗೆ ಬರ್ತಾರೆ ಅಂತಾ ಹೇಳಲು ಆಗಲ್ಲ. ಬಿಟ್ಟು ಹೋದವರು ಎಲ್ಲರೂ ಬರಬಹುದು. ಯಾಕೆಂದರೆ ಬಿಜೆಪಿಯಲ್ಲಿದ್ದವರು ಹೊರಗೆ ಇರುವುದೇ ಕಷ್ಟ ಹೀಗಾಗಿ ನಮ್ಮ ಪಕ್ಷಕ್ಕೆ ಬರ್ತಾರೆ. ಚುನಾವಣೆ ಮೊದಲು ಸವದಿಯವರು ಪಕ್ಷಕ್ಕೆ ಬಂದ್ರೆ ಒಳ್ಳೆಯದಾಗುತ್ತೆ. ಸವದಿಯವರು ಪಕ್ಷಕ್ಕೆ ಬರಲು ಒಲವು ತೋರಿಸಬಹುದು ಅನಿಸುತ್ತೆ. ಅವರು ಬರುವವರೆಗೂ ಪಾಸಿಟಿವ್ ಇದ್ದಾರೆ ಅಂತಾನೇ ಹೇಳ್ತಾ ಹೋಗೊದು ಎಂದರು. ಇದನ್ನೂ ಓದಿ: ಮಾಜಿ ಪ್ರಧಾನಿಯೊಬ್ಬರ ಮಗ ಜಿಲ್ಲೆಗೆ ಬಂದು ಶಾಂತಿ ಕದಡುವ ನಿರ್ಧಾರ ಮಾಡಿರೋದು ಸರಿಯಲ್ಲ: ಚಲುವರಾಯಸ್ವಾಮಿ
ಒಟ್ಟಾರೆ ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆಯಾದ ಬಳಿಕ ಶತಾಯಗತಾಯ ಲಕ್ಷ್ಮಣ ಸವದಿಯನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಕೇಸರಿ ಪಡೆ ರಣತಂತ್ರ ರೂಪಿಸುತ್ತಿರುವುದು ಈಗ ಗುಟ್ಟಾಗಿ ಉಳಿದಿಲ್ಲ. ಆದರೆ ಸವದಿ ಮಾತ್ರ ನಾನು ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ಅಂತಿಮವಾಗಿ ಸವದಿ ಕೂಡ ಮರಳಿ ಗೂಡು ಸೇರುತ್ತಾರಾ ಎಂಬುದನ್ನು ಕಾಲವೇ ಉತ್ತರಿಸಬೇಕಿದೆ.
ಬೆಳಗಾವಿ: ಲಕ್ಷ್ಮಣ ಸವದಿಯವರು (Laxman Savadi) ಬಿಜೆಪಿಗೆ (BJP) ಮರಳಿ ಬಂದರೆ ಪಕ್ಷಕ್ಕೆ ಹೆಚ್ಚಿನ ಶಕ್ತಿ ಬರುತ್ತದೆ ಎಂದು ಮಾಜಿ ಸಂಸದ ರಮೇಶ್ ಕತ್ತಿ ( Ramesh Katti) ಹೇಳಿದ್ದಾರೆ.
ಲಕ್ಷ್ಮಣ ಸವದಿ ಬಿಜೆಪಿಗೆ ಸೇರ್ತಾರೆ ಎಂಬ ವಿಚಾರ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿ, ಲಕ್ಷ್ಮಣ ಸವದಿಯವರು ಬಿಜೆಪಿಗೆ ಬರುವ ಕುರಿತು ಈಗಾಗಲೇ ಚರ್ಚೆ ಶುರುವಾಗಿದೆ. ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದಲ್ಲಿ ಚರ್ಚೆ ಪ್ರಾರಂಭ ಆಗಿದೆ. ನಮ್ಮನ್ನೂ ಕೂಡ ವರಿಷ್ಠರು ಕರೆದು ಮಾತನಾಡಿಸಿ ಅಭಿಪ್ರಾಯ ಕೇಳಿದ್ದಾರೆ. ಸವದಿಯವರನ್ನ ಕರೆತರುವ ಚರ್ಚೆಯಲ್ಲಿ ನಾನು ಕೂಡ ಒಬ್ಬ ಎಂದಿದ್ದಾರೆ. ಇದನ್ನೂ ಓದಿ: ಗೋಸುಂಬೆ ಉರುಫ್ ಊಸರವಳ್ಳಿ ಕಾಂಗ್ರೆಸ್ ಪಕ್ಷಕ್ಕೆ ಒಳಗೊಂದು ಹೊರಗೊಂದು ವೇಷ: ಜೆಡಿಎಸ್ ವಾಗ್ದಾಳಿ
ಸವದಿ ಅವರಿಗೆ ಸ್ಥಾನಮಾನ ಕೊಡುವ ಬಗ್ಗೆ ಮಾತನಾಡಿದ ಅವರು, ಸ್ಥಾನಮಾನಕ್ಕಾಗಿ ಯಾರೂ ಬರುವುದಿಲ್ಲ. ಕಾಂಗ್ರೆಸ್‌ಗೆ ಹೋದಾಗ ಏನು ಸ್ಥಾನಮಾನ ಕೇಳಿ ಹೋಗಿದ್ದರು ಅವರು ಏನು ಕೊಟ್ಟರೊ. ನಮ್ಮ ಪಕ್ಷಕ್ಕೆ ಬಂದರೆ ಏನು ಕೊಡಬೇಕು ಎಂಬುದನ್ನು ನಮ್ಮನ್ನ ಕರೆದು ನಿರ್ಣಯ ಮಾಡ್ತಾರೆ. ರಾಜ್ಯ ಮತ್ತು ರಾಷ್ಟ್ರೀಯ ವರಿಷ್ಠರು ಹೇಳಿದಂತೆ ಗೌರವಯುತವಾಗಿ ಅವರನ್ನ ಬರಮಾಡಿಕೊಳುತ್ತೇವೆ ಎಂದು ಪರೋಕ್ಷವಾಗಿ ಸವದಿಯನ್ನ ಕರೆತರುವ ವಿಚಾರ ಫೈನಲ್ ಹಂತಕ್ಕೆ ತಲುಪಿದೆ ಎನ್ನುವುದರ ಸುಳಿವು ಬಿಟ್ಟುಕೊಟ್ಟಿದ್ದಾರೆ. ಇದನ್ನೂ ಓದಿ: ನಮ್ಮ ಮಕ್ಕಳು ಲೆಹೆಂಗಾ ಧರಿಸಿ ಶಾಲೆಗೆ ಹೋಗ್ತಾರೆ: ಹಿಜಬ್ ವಿರುದ್ಧ ಬಿಜೆಪಿ ಶಾಸಕ ಹೇಳಿಕೆ
ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೇಳಿರುವ ಬಗ್ಗೆ ಮಾತನಾಡಿ, ಅವಶ್ಯಕವಾಗಿ ನಾನು ಒಬ್ಬ ಟಿಕೆಟ್ ಆಕಾಂಕ್ಷಿ. ಪಕ್ಷದ ವರಿಷ್ಠರಲ್ಲಿ ವಿನಂತಿ ಮಾಡಿದ್ದೇನೆ. ಹಿಂದಿನ ಬಾರಿ ತಪ್ಪಿ ಹೋಗಿದೆ. ಈ ಬಾರಿಯಾದ್ರೂ ಟಿಕೆಟ್ ಕೊಡುವಂತೆ ಮನವಿ ಮಾಡಿದ್ದೇನೆ. ಎಲ್ಲಿಯಾದರು ಒಂದು ಕಡೆ ಅವಕಾಶ ಮಾಡಿಕೊಡಿ ಅಂತಾ ಕೇಳಿದ್ದೇನೆ. ಬಿಜೆಪಿ ಪಕ್ಷ ನಮ್ಮ ಅಣ್ಣನಿಗೆ ನನಗೆ ಸಾಕಷ್ಟು ಅವಕಾಶ ಮಾಡಿಕೊಟ್ಟಿದೆ. ನಾನು ಬೇರೆ ಪಕ್ಷಕ್ಕೆ ಹೋಗುತ್ತೇನೆ ಅಂತಾ ಎಲ್ಲಿಯೂ ಹೇಳಿಲ್ಲ. ಈ ಬಾರಿ ಅವಕಾಶ ತಪ್ಪುವುದಿಲ್ಲ ಅನ್ನೋ ನನಗೆ ನಂಬಿಕೆ ಇದೆ ಎಂದಿದ್ದಾರೆ. ಇದನ್ನೂ ಓದಿ: ವಾಹನ ಸವಾರರಿಗೆ ಗುಡ್‌ನ್ಯೂಸ್ – ಪೀಣ್ಯ ಫ್ಲೈಓವರ್‌ನಲ್ಲಿ ಹೆವಿ ವೆಹಿಕಲ್ ಸಂಚಾರಕ್ಕೆ ಗ್ರೀನ್ ಸಿಗ್ನಲ್
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನದಿಂದ ಕತ್ತಿಯನ್ನು ಕೆಳಗಿಳಿಸುತ್ತಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವುದು ಬ್ಯಾಂಕ್‌ನಲ್ಲಿ ಚರ್ಚೆಗೆ ಬಂದಿಲ್ಲ. ನಮ್ಮ ನಿರ್ದೇಶಕರ ಗಮನಕ್ಕೂ ಬಂದಿಲ್ಲ. ಎಲ್ಲರು ಸೇರಿಕೊಂಡು ಸಭೆ ಮಾಡಿದ್ದೇವೆ. ಎಲ್ಲೋ ಊಹಾಪೋಹದಿಂದ ಆಗಿರುವ ಲೋಪ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಅಂಬೇಡ್ಕರ್ ನಾಮಫಲಕ ವಿಚಾರ – ಎರಡು ಗುಂಪುಗಳ ನಡುವೆ ಘರ್ಷಣೆ
ಜಗದೀಶ್ ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆಯಾದ ಕುರಿತು ಪ್ರತಿಕ್ರಿಯಿಸಿ, ಜಗದೀಶ್ ಶೆಟ್ಟರ್ ಅವರು ಎಂಟು ತಿಂಗಳಿಂದ ಅಲ್ಲಿದ್ರೂ ಅವರ ಮನಸ್ಸು ಬಿಜೆಪಿಯಲ್ಲಿತ್ತು. ಅವರು ದೈಹಿಕವಾಗಿ ಅಲ್ಲಿದ್ದರು. ಅವರು ಬಂದಿದ್ದು ಒಳ್ಳೆಯದಾಯಿತು. ಶಕ್ತಿ ತುಂಬಿದರು. ರಾಷ್ಟ್ರೀಯ ಮತ್ತು ರಾಜ್ಯಾಧ್ಯಕ್ಷರಿಗೆ ಅಭಿನಂದನೆ ಹೇಳುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೆ.ಎನ್.ರಾಜಣ್ಣ, ಶಾಮನೂರು ಶಿವಶಂಕರಪ್ಪಗೆ ಕೈ ಹೈಕಮಾಂಡ್ ವಾರ್ನಿಂಗ್