Tag: belagavi

  • ಬೆಳಗಾವಿಯಲ್ಲಿ ಸಿಲಿಂಡರ್ ಸ್ಫೋಟ – ಇಬ್ಬರ ದಾರುಣ ಸಾವು, ಮೂವರ ಸ್ಥಿತಿ ಗಂಭೀರ

    ಬೆಳಗಾವಿಯಲ್ಲಿ ಸಿಲಿಂಡರ್ ಸ್ಫೋಟ – ಇಬ್ಬರ ದಾರುಣ ಸಾವು, ಮೂವರ ಸ್ಥಿತಿ ಗಂಭೀರ

    ಬೆಳಗಾವಿ: ಸಿಲಿಂಡರ್ ಸ್ಫೋಟಗೊಂಡು (Cylinder Blast) ಇಬ್ಬರು ಬಲಿಯಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ  (Belagavi) ನಗರದ ಬಸವನಗಲ್ಲಿಯ ಅಪಾರ್ಟ್ಮೆಂಟ್‌ನಲ್ಲಿ (Apartment) ನಡೆದಿದೆ.

    ಉಡುಪಿ ಮೂಲದ ಕಾಮಾಕ್ಷಿ ಭಟ್ (80), ಹೇಮಂತ್ ಭಟ್ (27) ಮೃತ ದುರ್ದೈವಿಗಳು. ಅಪಾರ್ಟ್ಮೆಂಟ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭೀಕರ ಅಪಘಾತ ನಡೆದಿದ್ದು, ಮನೆಯಲಿದ್ದ ಐವರಿಗೆ ಗಂಭೀರ ಗಾಯಗಳಾಗಿವೆ.  ಇದನ್ನೂ ಓದಿ: ಟೆಕ್ಕಿ ಯುವತಿಯನ್ನ ಗುಂಡಿಕ್ಕಿ ಹತ್ಯೆಗೈದ ಪ್ರಿಯತಮ – ಪೊಲೀಸರು ಪ್ರಕರಣ ಭೇದಿಸಿದ್ದು ಹೇಗೆ?

    ಘಟನೆಯಲ್ಲಿ ಗಾಯಗೊಂಡಿದ್ದ ಐವರ ಪೈಕಿ ಇಬ್ಬರು ಸಾವನ್ನಪ್ಪಿದ್ದು, ಇನ್ನೂ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸದ್ಯ ಗಾಯಾಳುಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ವೇಣೂರಿನಲ್ಲಿ ಪಟಾಕಿ ಗೋಡೌನ್ ಸ್ಫೋಟ – ಮೂವರು ಕಾರ್ಮಿಕರ ದಾರುಣ ಸಾವು

    ಘಟನೆ ಕುರಿತು ಖಡೇಬಜಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಶಾಲಾ ಬಸ್-ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ – ನಾಲ್ವರು ವಿದ್ಯಾರ್ಥಿಗಳ ದುರ್ಮರಣ

     

  • 75th Republic Day: ದೆಹಲಿಯಲ್ಲಿ ನಡೆಯುವ ಪಥಸಂಚಲನಕ್ಕೆ ಬೆಳಗಾವಿ ಮೂಲದ ಯೋಧ ಆಯ್ಕೆ

    75th Republic Day: ದೆಹಲಿಯಲ್ಲಿ ನಡೆಯುವ ಪಥಸಂಚಲನಕ್ಕೆ ಬೆಳಗಾವಿ ಮೂಲದ ಯೋಧ ಆಯ್ಕೆ

    ಬೆಳಗಾವಿ: ದೇಶಾದ್ಯಂತ ಇಂದು 75ನೇ ಗಣರಾಜ್ಯೋತ್ಸವವನ್ನು (75th Republic Day) ಆಚರಿಸಲಾಗುತ್ತಿದೆ. ಅದರಂತೆ ದೆಹಲಿಯಲ್ಲಿ ನಡೆಯಲಿರುವ ಪಥಸಂಚಲನಕ್ಕೆ ಬೆಳಗಾವಿ ಮೂಲದ ಯೋಧರೊಬ್ಬರು ಆಯ್ಕೆಯಾಗಿದ್ದಾರೆ.

    ಹೌದು. ಬೆಳಗಾವಿ (Belagavi) ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಿಕಟ್ಟಿ ಗ್ರಾಮದ ಯೋಧ ಅದೃಶ್ಯ ಮಾವಿನಕಟ್ಟಿ ಆಯ್ಕೆಯಾಗಿದ್ದಾರೆ. ಇವರು ಮದ್ರಾಸ್ ರೆಜಿಮೆಂಟ್ ಕ್ರೊಪ ವೆಲ್ಲಿಂಗ್ಟನ್ ನಲ್ಲಿ ತರಬೇತಿ ಪಡೆದಿದ್ದಾರೆ.

    ಬೆಳಗಾವಿ ಲಿಂಗರಾಜ ಕಾಲೇಜಿನಲ್ಲಿ ಎನ್ ಸಿಸಿ (NCC) ತರಬೇತಿ ಕೂಡ ಪಡೆದಿದ್ದಾರೆ. ಇದೀಗ ದೆಹಲಿಯಲ್ಲಿ ನಡೆಯುವ ಪೆರೇಡ್‌ನಲ್ಲಿ ಅದೃಶ್ಯ ಭಾಗಿಯಾಗಿರುವುದು ಕುಟುಂಬಸ್ಥರು ಸೇರಿದಂತೆ ಎಲ್ಲರಿಗೂ ಸಂತಸ ತಂದಿದೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಜಾಗದಲ್ಲೇ ಹಿಂದೂ ದೇವಾಲಯವಿತ್ತು – ಪುರಾತತ್ವ ಇಲಾಖೆ ವರದಿ ಬಹಿರಂಗ

  • ʻಜೈ ಶ್ರೀರಾಮ್ʼ ಘೋಷಣೆ ಕೂಗುತ್ತಿದ್ದ ಯುವಕರ ಗುಂಪಿನ ಮೇಲೆ ಕಲ್ಲು ತೂರಾಟ

    ʻಜೈ ಶ್ರೀರಾಮ್ʼ ಘೋಷಣೆ ಕೂಗುತ್ತಿದ್ದ ಯುವಕರ ಗುಂಪಿನ ಮೇಲೆ ಕಲ್ಲು ತೂರಾಟ

    – ಪೊಲೀಸರಿಂದ ಲಘು ಲಾಠಿ ಪ್ರಹಾರ

    ಬೆಳಗಾವಿ: ಕೊನೆಗೂ ಅಯೋಧ್ಯೆಯಲ್ಲಿ (Ayodhya) ಭವ್ಯ ರಾಮಮಂದಿರ ನಿರ್ಮಾಣಗೊಂಡಿದೆ. 500 ವರ್ಷಗಳ ಕಾಯುವಿಕೆ ಅಂತ್ಯವಾಗಿದ್ದು, ಕೋಟ್ಯಂತರ ರಾಮಭಕ್ತರ ಕನಸು ನನಸಾಗಿದೆ.

    ಜನವರಿ 22ರಂದು ಅಯೋಧ್ಯೆಯಲ್ಲಿ ಬಾಲರಾಮನ (Ramlalla) ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ಇಡೀ ದೇಶಾದ್ಯಂತ ರಾಮನ ಭಕ್ತರು ವಿಶೇಷ ಪೂಜಾ ಕೈಂಯರ್ಯಗಳನ್ನು ನೆರವೇರಿಸುವ ಮೂಲಕ ರಾಮನ ಕೃಪೆಗೆ ಪಾತ್ರರಾದರು. ಇದೇ ವೇಳೆ ಬೆಳಗಾವಿಯಲ್ಲಿ (Belagavi) ಜೈಶ್ರೀರಾಮ್ ಘೋಷಣೆ ಕೂಗುತ್ತಾ ಮೆರವಣಿಗೆ ಹೊರಟ್ಟಿದ ಯುವಕರ ಗುಂಪಿನ ಮೇಲೆ ಅನ್ಯ ಗುಂಪೊಂದು ಕಲ್ಲು ತೂರಾಟ ನಡೆಸಿದ ಘಟನೆ ಬೆಳಕಿಗೆ ಬಂದಿದೆ.‌ ಇದನ್ನೂ ಓದಿ: ರೀಲ್ಸ್ ಮಾಡ್ತಾ ಸೋಶಿಯಲ್ ಮೀಡಿಯಾದಲ್ಲಿ ಫುಲ್‌ ಆಕ್ಟೀವ್ ಆಗಿದ್ದ ಶಿಕ್ಷಕಿ – ಸಾವಿನ ಸುತ್ತ ಅನುಮಾನಗಳ ಹುತ್ತ!

    ಜೈಶ್ರೀರಾಮ್ (Jai Shri Ram) ಘೋಷಣೆ ಕೂಗುತ್ತಾ ಹೊರಟಿದ್ದ ಯುವಕ ಮೇಲೆ ಅನ್ಯ ಗುಂಪೊಂದು ಕಲ್ಲು ತೂರಾಟ ನಡೆಸಿದೆ. ಬಳಿಕ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ. ಇದರಿಂದ ಕೆಲಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿದೆ. ತಕ್ಷಣವೇ ಕ್ರಮ ಕೈಗೊಂಡ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

    ಮುಂಚಿತವಾಗಿಯೇ ಸ್ಥಳದಲ್ಲಿ ಎರಡು ಕೆಎಸ್‌ಆರ್‌ಪಿ ತುಕಡಿಗಳನ್ನ ನಿಯೋಜನೆ ಮಾಡಿದ್ದ ಪೊಲೀಸರು, ಲಾಠಿ ಪ್ರಹಾರ ಮಾಡಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಈ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು, ಪುಂಡರ ವಿರುದ್ಧ ಕ್ರಮ ವಹಿಸಲು ಘಟನಾವಳಿಯ ಸಿಸಿಟಿವಿ ದೃಶ್ಯಗಳನ್ನ ಪರಿಶೀಲಿಸುತ್ತಿದ್ದಾರೆ. ಇದನ್ನೂ ಓದಿ: ಸಾರ್ವಜನಿಕರಿಗೆ ತೆರೆಯುತ್ತಿದ್ದಂತೆಯೇ ರಾಮಮಂದಿರಕ್ಕೆ ಹರಿದು ಬರ್ತಿದೆ ಜನಸಾಗರ!

    ಪ್ರಾಣಪ್ರತಿಷ್ಠೆ ಸಂಪನ್ನ: ಅಯೋಧ್ಯೆಯ ರಾಮಮಂದಿರದಲ್ಲಿ ಸೋಮವಾರ ಬಾಲರಾಮನ ಪ್ರಾಣಪ್ರತಿಷ್ಠೆ ಶಾಸ್ತ್ರೋಕ್ತವಾಗಿ ನೆರವೇರಿತು. ಸರಿಯಾಗಿ ಮಧ್ಯಾಹ್ನ 12 ಗಂಟೆ 30 ನಿಮಿಷ 32 ಸೆಕೆಂಡ್‌ಗಳ ಮಧ್ಯೆ ಅಭಿಜಿನ್‌ ಲಗ್ನದಲ್ಲಿ (ಅಭಿಜಿಬ್‌ ಅಂದ್ರೆ ʻವಿಜಯಶಾಲಿʼ ಎಂದರ್ಥ) ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಾಯಿತು. ಅರ್ಚಕರು, ಪಂಡಿತರು ಹಾಗೂ ಯಜಮಾನ ಸ್ಥಾನದಲ್ಲಿದ್ದ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಪ್ರಾಣಪ್ರತಿಷ್ಠೆ ನೆರವೇರಿತು. ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌, ಸಿಎಂ ಯೋಗಿ ಆದಿತ್ಯನಾಥ್‌, ಗುಜರಾತ್‌ ರಾಜ್ಯಪಾಲೆ ಆನಂದಿಬೆನ್‌ ಪಟೇಲ್‌ ಮೊದಲಾದವರು ಉಪಸ್ಥಿತರಿದ್ದರು. ದೇವಾಲಯ ಆವರಣದಲ್ಲಿ ಸರಿಸುಮಾರು 8 ಸಾವಿರ ಅತಿಥಿಗಳು ನೆರೆದಿದ್ದರು.

  • 3,000 ಮಹಿಳೆಯರಿಂದ 108 ಬಾರಿ ಹನುಮಾನ್ ಚಾಲೀಸಾ ಪಠಣ – ಶ್ರೀರಾಮನ ಕೃಪೆಗೆ ಪಾತ್ರರಾದ ಬೆಳಗಾವಿ ಮಹಿಳೆಯರು

    3,000 ಮಹಿಳೆಯರಿಂದ 108 ಬಾರಿ ಹನುಮಾನ್ ಚಾಲೀಸಾ ಪಠಣ – ಶ್ರೀರಾಮನ ಕೃಪೆಗೆ ಪಾತ್ರರಾದ ಬೆಳಗಾವಿ ಮಹಿಳೆಯರು

    – ಒಂದೇ ರೀತಿಯ ವೇಷಭೂಷಣ ಧರಿಸಿ ಮಂತ್ರಪಠಣ

    ಬೆಳಗಾವಿ: ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ (RamLalla) ಪ್ರಾಣಪ್ರತಿಷ್ಠೆಗೆ ಕ್ಷಣಗಣನೆ ಶುರುವಾಗಿದೆ. ವಿಶ್ವದಾದ್ಯಂತ ನೆಲೆಸಿರುವ ರಾಮಭಕ್ತರು ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ತುದಿಗಾಲಿನಲ್ಲಿ ಕಾಯುತ್ತಿದ್ದಾರೆ. ದೇಶದ ಮೂಲೆ ಮೂಲೆಗಳಲ್ಲಿಯೂ ವಿಶಿಷ್ಟ ರೀತಿಯಲ್ಲಿ ಪ್ರಾಣಪ್ರತಿಷ್ಠೆಯನ್ನು ಕೊಂಡಾಡಲು ಸಜ್ಜಾಗಿದ್ದಾರೆ.

    ಈ ನಡುವೆ ಬೆಳಗಾವಿಯ (Belagavi) ಗೋಕಾಕ್‌ ನಗರದ ಮಹಾಲಕ್ಷ್ಮಿ ದೇವಿ ಕಲ್ಯಾಣ ಮಂಟಪದಲ್ಲಿ ಸುಮಾರು 3,000 ಮಹಿಳೆಯರು ಏಕಕಾಲಕ್ಕೆ 108 ಬಾರಿ ಹನುಮಾನ್ ಚಾಲೀಸಾ (Hanuman Chalisa) ಪಠಿಸುವ ಮೂಲಕ ಗಮನ ಸೆಳೆದಿದ್ದಾರೆ. ಇದನ್ನೂ ಓದಿ: ರಾಮಮಂದಿರಕ್ಕೆ ಹೋಗಲ್ಲ.. ನಾವು ಅಣ್ಣಮ್ಮ, ಮಾರಮ್ಮ, ಭೂತ ಪೂಜೆ ಮಾಡೋರು.. ಅಲ್ಲಿಗೆ ಹೋಗ್ತೀವಿ: ಬಿ.ಕೆ.ಹರಿಪ್ರಸಾದ್

    ವಿಶ್ವ ಹಿಂದೂ ಪರಿಷತ್, ರಾಷ್ಟ್ರೀಯ ಸೇವಿಕಾ ಸಮಿತಿಯಿಂದ ಆಯೋಜಿಸಲಿದ್ದ ಕಾರ್ಯಕ್ರಮದಲ್ಲಿ ಸಾವಿರಾರು ಮಹಿಳೆಯರು ಒಂದೇ ರೀತಿಯ ವೇಷಭೂಷಣ ಧರಿಸಿ, ಕೈಯಲ್ಲಿ ರುದ್ರಾಕ್ಷಿ ಮಾಲೆ ಹಿಡಿದು, 108 ಬಾರಿ ಹನುಮಾನ್ ಚಾಲೀಸಾ ಮಂತ್ರಪಠಣ ಮಾಡಿದ್ದಾರೆ. ಈ ಮೂಲಕ ಶ್ರೀರಾಮನ ಕೃಪೆಗೆ ಪಾತ್ರರಾಗಿದ್ದಾರೆ. ಇದನ್ನೂ ಓದಿ: ಶೋಯೆಬ್‌ ಮಲಿಕ್‌ರಿಂದ ವಿಚ್ಛೇದನ ಪಡೆದಿದ್ದಾರೆ – ಡಿವೋರ್ಸ್ ವದಂತಿಗೆ ತೆರೆಎಳೆದ ಸಾನಿಯಾ ಕುಟುಂಬ

    ಯಾದಗಿರಿಯಲ್ಲಿ ಮಕ್ಕಳಿಗೆ ಶ್ರೀರಾಮನ ವೇಷ ತೊಡಿಸಿ ಸಂಭ್ರಮ: ಬಾಲರಾಮನ ಪ್ರಾಣಪ್ರತಿಷ್ಠೆ ಹಿನ್ನೆಲೆ ಯಾದಗಿರಿಯಲ್ಲಿ ಪುಟ್ಟ ಮಕ್ಕಳು ಭಗವಾನ್ ಶ್ರೀರಾಮ ಹಾಗೂ ಸೀತಾ ಮಾತೆಯ ವೇಷ ಧರಿಸಿ ಭಕ್ತಿಯಪರಕಾಷ್ಠೆ ಮೆರೆದಿದ್ದಾರೆ. ಪೋಷಕರು ಮಕ್ಕಳಿಗೆ ಶ್ರೀರಾಮ ಹಾಗೂ ಸೀತೆಯ ವೇಷಧಾರಿಗಳನ್ನಾಗಿ ಮಾಡಿ ಮಕ್ಕಳಲ್ಲಿ ಶ್ರೀರಾಮ ಹಾಗೂ ಸೀತಾಮಾತೆಯನ್ನು ಕಂಡು ಸಂತಸಗೊಂಡರು. ಇದನ್ನೂ ಓದಿ: ಪ್ರಾಣಪ್ರತಿಷ್ಠೆಗಾಗಿ ಅರ್ಧದಿನ ರಜೆ ಘೋಷಿಸಿದ್ದ AIIMS – ಒಂದು ದಿನದ ನಂತ್ರ ಆದೇಶ ವಾಪಸ್‌! 

  • ಮೂರ್ಖರಿಗೆ ಜನರು ಚಪ್ಪಾಳೆ ತಟ್ಟಬಾರದು- ಅನಂತ್ ಕುಮಾರ್ ವಿರುದ್ಧ ಸಿಎಂ ಕಿಡಿ

    ಮೂರ್ಖರಿಗೆ ಜನರು ಚಪ್ಪಾಳೆ ತಟ್ಟಬಾರದು- ಅನಂತ್ ಕುಮಾರ್ ವಿರುದ್ಧ ಸಿಎಂ ಕಿಡಿ

    ಬೆಳಗಾವಿ: `ಅವನೊಬ್ಬ ಮೂರ್ಖ’ ಅಂತ ಏಕವಚನದಲ್ಲೇ ಸಂಸದ ಅನಂತ್ ಕುಮಾರ್ ಹೆಗಡೆ (Anant Kumar Hegade) ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕಿಡಿಕಾರಿದ್ದಾರೆ.

    ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಕ್ರಾತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟಿಸಿ ಬಳಿಕ ಮಾತನಾಡಿದ ಅವರು, ರಾಯಣ್ಣನ ದೇಶಪ್ರೇಮ, ದೇಶಭಕ್ತಿ ಬೆಳೆಸಿಕೊಳ್ಳಬೇಕು. ಪರಸ್ಪರರು ದ್ವೇಷ ಮಾಡಬಾರದು, ಪ್ರೀತಿಸುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು. ಅವನೊಬ್ಬ ಮೂರ್ಖ ಮಸೀದಿ ದ್ವಂಸಗೊಳಿಸಿ ದೇವಸ್ಥಾನ ಕಟ್ಟಿಸುವುದಾಗಿ ಹೇಳಿಕೆ ನೀಡಿದ್ದಾನೆ. ಈ ಹಿಂದೆ ಆದ ಸಣ್ಣ ತಪ್ಪಿನಿಂದ ಆಗಿದ್ದನ್ನೇ ಈಗ ಕೆದಕುತ್ತಿದ್ದಾರೆ. ಇಂತಹ ಮೂರ್ಖರಿಗೆ ಜನರು ಚಪ್ಪಾಳೆ ತಟ್ಟುತ್ತಾರೆ, ಆದರೆ ಇಂಥವರಿಗೆ ಚಪ್ಪಾಳೆ ತಟ್ಟಬಾರದು ಎಂದು ವಾಗ್ದಾಳಿ ನಡೆಸಿದರು.

    ಗ್ಯಾರಂಟಿ ಯೋಜನೆ ಜಾರಿಯಾಗಲ್ಲ ಎಂದಿದ್ರು, ನಾವು ಯೋಜನೆ ಜಾರಿಗೆ ತಂದಿದ್ದೇವೆ. ರಾಜ್ಯ ಆರ್ಥಿಕವಾಗಿಯೂ ಸದೃಢವಾಗಿದೆ. ಗ್ಯಾರಂಟಿ ಯೋಜನೆ ಜಾರಿ ಜೊತೆಗೆ ರಾಜ್ಯದ ಅಭಿವೃದ್ಧಿಯನ್ನೂ ಮಾಡುತ್ತೇವೆ ಎಂದು ಹೇಳುವ ಮೂಲಕ ರಾಜ್ಯ ದಿವಾಳಿ ಆಗಿದೆ ಎನ್ನುತ್ತಿರುವ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು. ಇದನ್ನೂ ಓದಿ: ಅಯೋಧ್ಯೆಗೆ ಪಟಾಕಿ ಸಾಗಿಸುತ್ತಿದ್ದ‌ ಟ್ರಕ್‌ ಅಗ್ನಿಗಾಹುತಿ!

    ರಾಜ್ಯದ ಜನರ ಆಶೀರ್ವಾದದಿಂದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಎಲ್ಲ ಧರ್ಮಿಯರಿಗೂ ಗ್ಯಾರಂಟಿ ಯೋಜನೆ ಜಾರಿಗೊಳಿಸಿದ್ದೇವೆ. ನಂದಗಡದ ಮ್ಯೂಸಿಯಂ ನಿರ್ಮಾಣಕ್ಕೆ ಕೂಡ ಶೀಘ್ರವೇ ಆದ್ಯತೆ ನೀಡುತ್ತೇವೆ ಎಂದರು.

  • ರಾಮಲಲ್ಲಾ ಪ್ರಾಣಪ್ರತಿಷ್ಠೆ ದಿನ ಶಾಸಕ ಅಭಯ ಪಾಟೀಲ್‌ ಕಡೆಯಿಂದ 5 ಲಕ್ಷ ಲಾಡು ವಿತರಣೆ

    ರಾಮಲಲ್ಲಾ ಪ್ರಾಣಪ್ರತಿಷ್ಠೆ ದಿನ ಶಾಸಕ ಅಭಯ ಪಾಟೀಲ್‌ ಕಡೆಯಿಂದ 5 ಲಕ್ಷ ಲಾಡು ವಿತರಣೆ

    ಬೆಳಗಾವಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ (Ayodhya) ರಾಮಲಲ್ಲಾ ಪ್ರಾಣಪ್ರತಿಷ್ಠೆ ನೆರವೇರಲು ಇನ್ನು 7 ದಿನಗಳು ಬಾಕಿಯಿವೆ. ಈ ಐತಿಹಾಸಿಕ ಕ್ಷಣಕ್ಕಾಗಿ ದೇಶ, ವಿದೇಶಗಳಲ್ಲಿ ನೆಲೆಸಿರುವ ರಾಮನ ಭಕ್ತರು ಉತ್ಸುಕರಾಗಿ ಕಾಯುತ್ತಿದ್ದಾರೆ. ಅಲ್ಲದೇ ಶ್ರೀರಾಮನ ಭಕ್ತಿಯನ್ನು ನಾಡಿನಾದ್ಯಂತ ಪಸರಿಸಲು ಹಲವು ರೀತಿಯ ಸೇವಾ ಕಾರ್ಯಗಳನ್ನು ಭಕ್ತರು ಹಮ್ಮಿಕೊಂಡಿದ್ದಾರೆ.

    ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಯ ದಿನದಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲ್‌ (Abhay Patil), ತಮ್ಮ ಕ್ಷೇತ್ರದ 1 ಲಕ್ಷ ಮನೆಗಳಿಗೆ 5 ಲಕ್ಷ ಮೋತಿಚೂರು ಲಾಡು ವಿತರಣೆ ಮಾಡುವ ಯೋಜನೆ ಹಾಕಿಕೊಂಡಿದ್ದಾರೆ. ಇದನ್ನೂ ಓದಿ: ರಾಮಮಂದಿರಕ್ಕಾಗಿ 44 ವರ್ಷಗಳಿಂದ ಊಟ ತ್ಯಾಗ, ಮೌನ ವ್ರತ – ಪ್ರಾಣಪ್ರತಿಷ್ಠೆಗೆ ಆಹ್ವಾನ ಸಿಗದೇ ಮೌನಿ ಬಾಬಾ ನಿರಾಸೆ

    ಅಂದು ದಕ್ಷಿಣ ಕ್ಷೇತ್ರದಲ್ಲಿ 1 ಲಕ್ಷ ಮನೆಗಳಿಗೆ ಲಾಡು ವಿತರಿಸಲಿದ್ದಾರೆ. 300 ಗ್ರಾಮದ ಪ್ರತಿ ಮನೆಗಳಿಗೆ 5 ಲಾಡುಗಳನ್ನೊಳಗೊಂಡ ಬಾಕ್ಸ್‌ ವಿತರಿಸಲಿದ್ದಾರೆ. ಅದರತೆ 1 ಲಕ್ಷ ಮನೆಗಳಿಗೆ 5 ಲಕ್ಷ ಲಾಡು ಆಗಲಿದೆ. ಇದನ್ನೂ ಓದಿ: ರಾಮಮಂದಿರ ಪ್ರಾಣಪ್ರತಿಷ್ಠೆಗೆ 55 ರಾಷ್ಟ್ರಗಳ 100ಕ್ಕೂ ಹೆಚ್ಚು ಗಣ್ಯರಿಗೆ ಆಹ್ವಾನ – ಯಾವ್ಯಾವ ದೇಶಕ್ಕೆ ಆಮಂತ್ರಣ?

    ಈಗಾಗಲೇ ಲಾಡು ತಯಾರಿಸುವ ಕಾರ್ಯ ಆರಂಭಗೊಂಡಿದೆ. ಅದಕ್ಕಾಗಿ ರಾಜಸ್ಥಾನದಿಂದ 50 ಮಂದಿ ನುರಿತರು ಬೆಳಗಾವಿಗೆ ಬಂದಿದ್ದಾರೆ. ಸ್ಥಳೀಯ 250 ಮಹಿಳೆಯರು ಮೋತಿಚೂರು ಲಾಡು ತಯಾರಿಕೆ ಕಾರ್ಯದಲ್ಲಿ ಭಾಗಿಯಾಗಿದ್ದಾರೆ. ಕಾರ್ಯಕರ್ತರು ಮನೆ ಮನೆಗೆ ತೆರಳಿ ಲಾಡು ವಿತರಿಸುವ ಕಾರ್ಯಕ್ಕೆ ಸಜ್ಜಾಗುತ್ತಿದ್ದಾರೆ. ಸ್ವಾತಂತ್ರ‍್ಯ ಅಮೃತಮಹೋತ್ಸವ ಸಮಯದಲ್ಲಿ ಪ್ರತಿ ಮನೆಗೆ ಜಿಲೇಬಿ ವಿತರಿಸಿದ್ದ ಶಾಸಕ ಅಭಯ್ ಪಾಟೀಲ್‌ ರಾಮಮಂದಿರ ಉದ್ಘಾಟನೆಗೆ ಲಾಡು ವಿತರಿಸಲಿದ್ದಾರೆ.

    ಅಲ್ಲದೇ 10 ಸಾವಿರ ರಾಮಭಕ್ತರ ಕೈಮೇಲೆ ಶ್ರೀರಾಮನ ಟ್ಯಾಟೂ ಹಾಕಿಸಲಿದ್ದಾರೆ. ಇದನ್ನೂ ಓದಿ: Ayodhya Ram Mandir: ಕಾಶಿ ಯಜ್ಞಶಾಲೆಯಲ್ಲಿ 40 ದಿನ ವಿಶೇಷ ಪೂಜೆ – ಶಂಕರಾಚಾರ್ಯ ವಿಜಯೇಂದ್ರ ಸರಸ್ವತಿ

  • ನಾಮಫಲಕಗಳಲ್ಲಿ ಕನ್ನಡ ಬಳಕೆ ಕಡ್ಡಾಯ – ಎಂಇಎಸ್‌ಗೆ ಬೆಳಗಾವಿ ಪಾಲಿಕೆ ಆಯುಕ್ತರ ಶಾಕ್!

    ನಾಮಫಲಕಗಳಲ್ಲಿ ಕನ್ನಡ ಬಳಕೆ ಕಡ್ಡಾಯ – ಎಂಇಎಸ್‌ಗೆ ಬೆಳಗಾವಿ ಪಾಲಿಕೆ ಆಯುಕ್ತರ ಶಾಕ್!

    ಬೆಳಗಾವಿ: ನಾಡದ್ರೋಹಿ ಎಂಇಎಸ್‌ಗೆ (MES) ಬೆಳಗಾವಿ ಪಾಲಿಕೆ ಆಯುಕ್ತರು ಶಾಕ್ ಕೊಟ್ಟಿದ್ದಾರೆ. ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸಲಾಗಿದೆ. ಅಲ್ಲದೇ ‘ಬೆಳಗಾವಿ’ ಎಂಬ ಪದವನ್ನೇ ಬಳಸಬೇಕು ಎಂದು ಸೂಚನೆ ನೀಡಿದೆ.

    ಬೆಳಗಾವಿ (Belagavi) ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಅವರು ಈ ಆದೇಶ ಹೊರಡಿಸಿದ್ದಾರೆ. ಬೆಳಗಾಂವ, ಬೆಳಗಾಮ್ ಅಂತಾ ಬರೆದಿರೋ ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ನನಗೆ 92 ವಯಸ್ಸಾಯ್ತು.. ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಲ್ಲ: ಹೆಚ್‌ಡಿಡಿ

    ‘ಬೆಳಗಾವಿ’ ಅಂತಾ ಬಳಸಲು ಹಿಂದೇಟು ಹಾಕುತ್ತಾ ಬಂದಿದ್ದ ನಾಡದ್ರೋಹಿಗಳಿಗೆ ಇದರಿಂದ ಶಾಕ್ ಆಗಿದೆ. ಸರ್ಕಾರದ ಆದೇಶವನ್ನ ಕಟ್ಟುನಿಟ್ಟಾಗಿ ಪಾಲಿಸಲು 2 ಸಾವಿರ ಅಂಗಡಿಗಳಿಗೆ ನೋಟಿಸ್ ನೀಡಲಾಗಿದೆ.

    ಆದೇಶ ಪಾಲಿಸದವರ ಅಂಗಡಿ ಲೈಸನ್ಸ್ ರದ್ದು ಮಾಡುವ ಎಚ್ಚರಿಕೆ ನೀಡಲಾಗಿದೆ. ಬೆಳಗಾವಿ ಮಹಾನಗರದಲ್ಲಿ ಅನೇಕ ವರ್ಷಗಳಿಂದ ಕನ್ನಡ ಹೋರಾಟಗಾರ ಒತ್ತಾಯವಿತ್ತು. ಸರ್ಕಾರದ ಆದೇಶದಂತೆ ಶೇ.60 ರಷ್ಟು ನಾಮಫಲಕದಲ್ಲಿ ಕನ್ನಡ ಬರೆಸಬೇಕು ಎಂದಿದೆ. ಇದನ್ನೂ ಓದಿ: ಮೆಕ್ಕೆಜೋಳದಲ್ಲಿ ಅರಳಿದ ರಾಮಮಂದಿರ – ಭಗವಾನ್ ರಾಮನ ದರ್ಶನಕ್ಕೆ ಬನ್ನಿ..

    ಬೆಳಗಾAವ, ಬೆಳಗಾಮ್ ಬದಲಾಗಿ ಬೆಳಗಾವಿ ಬಳಸುವಂತೆ ಕನ್ನಡಪರ ಹೋರಾಟಗಾರರು ಪ್ರತಿಭಟನೆ ನಡೆಸಿದ್ದರು. ಈಗ ಸರ್ಕಾರದ ಆದೇಶ ಹಾಗೂ ಕನ್ನಡಿಗರ ಬೇಡಿಕೆ ಅನುಷ್ಠಾನಕ್ಕೆ ಪಾಲಿಕೆ ಆಯಕ್ತರೇ ಫೀಲ್ಡಿಗಿಳಿದು ಕ್ರಮಕೈಗೊಂಡಿದ್ದಾರೆ.

  • ಮೂಲ Vs ವಲಸಿಗ : ಬೆಳಗಾವಿಯಲ್ಲಿ ಬಿಜೆಪಿ ಸಂಘರ್ಷ ಜೋರು

    ಮೂಲ Vs ವಲಸಿಗ : ಬೆಳಗಾವಿಯಲ್ಲಿ ಬಿಜೆಪಿ ಸಂಘರ್ಷ ಜೋರು

    ಬೆಳಗಾವಿ: ಲೋಕಸಭಾ ಚುನಾವಣೆ (Lok Sabha Election) ಸಿದ್ಧತೆ ನಡೆಸುತ್ತಿರುವ ಬಿಜೆಪಿಗೆ ಬೆಳಗಾವಿ ಭಿನ್ನಮತ (BJP) ಬಿಸಿ ತುಪ್ಪವಾಗಿದೆ. ಕ್ಷೇತ್ರವಾರು ನಡೆದ ಬಿಜೆಪಿ ಸಭೆಯಲ್ಲಿ ಮೂಲ ವರ್ಸಸ್ ವಲಸಿಗರ ಸಂಘರ್ಷ ಜೋರಾಗಿದೆ.

    ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ವಿರುದ್ಧ ಮೂಲ ಬಿಜೆಪಿಗರು ಸಿಡಿದೆದ್ದಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿಗೆ (Ramesh Jarkiholi) ಚುನಾವಣೆ ಹೊಣೆ ಹೊರೆಸಲಾಗಿತ್ತು. ಪರಿಣಾಮ ಜಿಲ್ಲೆಯ 13 ಕ್ಷೇತ್ರಗಳಲ್ಲಿದ್ದ ಬಿಜೆಪಿ (BJP) ಶಾಸಕರ ಸಂಖ್ಯೆ 7ಕ್ಕೆ ಇಳಿದಿದೆ. ಕಾಂಗ್ರೆಸ್ (Congress) 5 ಕ್ಷೇತ್ರಗಳಿಂದ 11 ಕ್ಷೇತ್ರಗಳಿಗೆ ಸಂಖ್ಯೆ ಹೆಚ್ಚಿಸಿಕೊಂಡಿದೆ. ಈಗ ಲೋಕಸಭೆ ಚುನಾವಣೆಯಲ್ಲಿ ಜಾರಕಿಹೊಳಿ ಮಾತು ಕೇಳಬೇಡಿ. ಜಿಲ್ಲೆಯಲ್ಲಿ ಸೃಷ್ಟಿಯಾಗಿರುವ ಬಿಕ್ಕಟ್ಟು ಶಮನ ಮಾಡುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಹುಟ್ಟು ಮುಸ್ಲಿಂ ಆಗದಿದ್ರೂ, ಟೋಪಿ ಹಾಕಿದಾಗ ಒರಿಜಿನಲ್‌ ಮುಸ್ಲಿಂ ಥರ ಕಾಣ್ತಾರೆ: ಸಿ.ಟಿ.ರವಿ

     
    ಮೊದಲು ಜಿಲ್ಲಾ ಮಟ್ಟದಲ್ಲಿ ಒಗ್ಗಟ್ಟು ಮೂಡಿಸಿ ಎಂದು ಕೆಲ ನಾಯಕರು ಹೇಳಿದ್ದಾರೆ. ಜಿಲ್ಲೆಯ ಎಲ್ಲಾ ನಾಯಕರ ಸಲಹೆ ಪಡೆದು ಚುನಾವಣಾ ತಂತ್ರಗಾರಿಕೆ ಮಾಡಬೇಕು.ಯಾರದ್ದೋ ಒಬ್ಬರ ಮಾತು ಕೇಳಿ ಜಿಲ್ಲೆಯ ಜವಾಬ್ದಾರಿ ಕೊಡಬೇಡಿ ಎಂದಿದ್ದಾರೆ.

    ಪಕ್ಷದ ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿಗಳ ಆಯ್ಕೆ ಮಾಡಬೇಕು. ಜಿಲ್ಲೆಯಲ್ಲಿ ಕಾಂಗ್ರೆಸ್ ಶಕ್ತಿ ಹೆಚ್ಚಾಗುತ್ತಿದೆ. ಅದು ನಮಗೆ ಮುಳುವಾಗದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

    ಸಚಿವ ಸತೀಶ್ ಜಾರಕಿಹೊಳಿ ಸ್ಪರ್ಧೆ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ಬರುವ ಎರಡು ಕ್ಷೇತ್ರಗಳು ಗೆಲ್ಲಬೇಕು ಅಂದರೆ ಒಗ್ಗಟ್ಟು ಬೇಕು. ಈ ನಿಟ್ಟಿನಲ್ಲಿ ಶೀಘ್ರದಲ್ಲೇ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಸ್ಥಳೀಯರ ಸಭೆ ಕರೆಯಿರಿ ಎಂದು ಬೆಳಗಾವಿ ಭಾಗದ ಮುಖಂಡರು ಒತ್ತಾಯಿಸಿರುವ ವಿಚಾರ ಮೂಲಗಳಿಂದ ಪಬ್ಲಿಕ್‌ ಟಿವಿಗೆ ತಿಳಿದುಬಂದಿದೆ. ಇದನ್ನೂ ಓದಿ: ಅಭಿಮನ್ಯು ನೇತೃತ್ವದಲ್ಲಿ ಅರ್ಜುನನ ಕೊಂದಿದ್ದ ಆನೆ ಸೆರೆ ಕಾರ್ಯಾಚರಣೆ

    ಇದೀಗ ಬೆಳಗಾವಿ ಆಂತರಿಕ ಸಂಘರ್ಷವನ್ನು ಹೈಕಮಾಂಡ್ ಅಂಗಳಕ್ಕೆ ತಲುಪಿಸಲು ರಾಜ್ಯಾಧ್ಯಕ್ಷ ವಿಜಯೇಂದ್ರ (Vijayendra) ಮುಂದಾಗಿದ್ದಾರೆ.

     

  • ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ರನ್ನ ಕರೆದು ಸಿಎಂ ಬುದ್ಧಿ ಮಾತು ಹೇಳಲಿ: ಹೆಚ್‌ಡಿಕೆ

    ಬೆಂಗಳೂರು: ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ (Belagavi) ಮಹಾರಾಷ್ಟ್ರಕ್ಕೆ (Maharashtra) ಸೇರಿತ್ತು ಎಂಬ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿಕೆ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ವಾಗ್ದಾಳಿ ನಡೆಸಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಈ ಕುರಿತು ಮಾತನಾಡಿದ ಅವರು, ಈ ಮಂತ್ರಿಗಳಿಗೆ ನಾಡಿನಲ್ಲಿ ಗ್ಯಾರಂಟಿ ಹೆಸರಲ್ಲಿ ಸರ್ಕಾರ ರಚನೆ ಮಾಡಿ ಯಾವುದೇ ಅಭಿವೃದ್ಧಿ ರಾಜ್ಯದಲ್ಲಿ ಕಾಣುತ್ತಿಲ್ಲ. ಇದನ್ನು ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಹೇಳಿದ್ದಾರೆ. ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿ ಕುಂಠಿತ ಆಗಿದೆ. ಸರ್ಕಾರ ಬಂದು 8 ತಿಂಗಳು ಆಗಿದೆ. ಬರ ಪರಿಹಾರ ವಿಚಾರದಲ್ಲಿ ಸರ್ಕಾರ ಹೇಗೆ ನಡೆದುಕೊಳ್ಳುತ್ತಿದೆ. 2 ಸಾವಿರ ಹಣ ಕೊಡಲು 105 ಕೋಟಿ ಹಣ ಬಿಡುಗಡೆ ಮಾಡಿದ್ದಾರೆ. ಅದು ಎಷ್ಟು ಜನರಿಗೆ ಹೋಗುತ್ತದೆ. 30 ಸಾವಿರ ಕೋಟಿ ನಷ್ಟ ಅಂತ ಹೇಳಿ 105 ಕೋಟಿ ಬಿಡುಗಡೆ ಮಾಡಿದ್ರೆ ಸಾಕಾ? ಇಷ್ಟು ಹಣದಿಂದ ಯಾವ ಪುರುಷಾರ್ಥ ಸಾಧಿಸುತ್ತಾರೆ? ರೈತರನ್ನು ಬದುಕಿಸೋಕೆ ಸಾಧ್ಯನಾ? ಈ ಸರ್ಕಾರದ ನಡವಳಿಕೆ ಗಮನಿಸುತ್ತಿದ್ದೇನೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಡಿಕೆ ಶಿವಕುಮಾರ್ ದೊಡ್ಡ ಆಲದಹಳ್ಳಿಯಲ್ಲಿ ಅಕ್ಕಿ ಬೆಳೆದಿರೋದಾ – ಹೆಚ್‌ಡಿಕೆ

    ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ ಅದು ಈಗ ಮುಗಿದು ಹೋಗಿರೋ ಅಧ್ಯಾಯ. ಮತ್ತೆ ಅದನ್ನು ನೆನಪು ಮಾಡಿಕೊಳ್ಳುತ್ತಿರುವುದು ಸಚಿವರಿಗೆ ಮಹಾರಾಷ್ಟ್ರದ ಮೇಲೆ ಇನ್ನೂ ವ್ಯಾಮೋಹ ಇದೆ ಅಂತ ಎದ್ದು ಕಾಣುತ್ತಿದೆ. ಜವಾಬ್ದಾರಿಯುತ ಸ್ಥಾನದಲ್ಲಿ ಇರೋ ಸಚಿವರೇ ಇಂತಹ ವಿಷಯಗಳನ್ನ ಮಾತಾಡಿದ್ರೆ ನೀವೇ ನೀರು ಎರೆದ ಹಾಗೆ ಅಲ್ಲವಾ? ಸಿಎಂ ಅವರಿಗೆ ಮಂತ್ರಿಗಳ ಬಗ್ಗೆ ಹಿಡಿತ ಇದ್ದರೆ ಅವರನ್ನ ಕರೆದು ಸರಿಯಾಗಿ ಬುದ್ಧಿ ಹೇಳೋದು ಒಳ್ಳೆಯದು ಎಂದು ಸಲಹೆ ನೀಡಿದರು. ಇದನ್ನೂ ಓದಿ: ವಿದ್ಯುತ್ ಸ್ಪರ್ಶಿಸಿ ಯಶ್ ಅಭಿಮಾನಿಗಳ ದುರ್ಮರಣ – ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ

  • ಕಾಂಗ್ರೆಸ್‌ನವರು ವೋಟಿಗಾಗಿ ಕಾಶ್ಮೀರ ಸಹ ಪಾಕಿಸ್ತಾನಕ್ಕೆ ಸೇರಿದ್ದು ಅಂತಾರೆ – ವಿಶ್ವನಾಥ್ ಕಿಡಿ

    ಕಾಂಗ್ರೆಸ್‌ನವರು ವೋಟಿಗಾಗಿ ಕಾಶ್ಮೀರ ಸಹ ಪಾಕಿಸ್ತಾನಕ್ಕೆ ಸೇರಿದ್ದು ಅಂತಾರೆ – ವಿಶ್ವನಾಥ್ ಕಿಡಿ

    – ಆರೂವರೆ ಕೋಟಿ ಕನ್ನಡಿಗರಿಗೆ ಲಕ್ಷ್ಮಿ ಹೆಬ್ಬಾಳ್ಕರ್‌ರಿಂದ ಅಪಮಾನ
    – ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು – ಬಿಜೆಪಿ ಶಾಸಕ
    – ಅನ್ನಭಾಗ್ಯ ಅಕ್ಕಿಯಿಂದಲೇ ಮಂತ್ರಾಕ್ಷತೆ – ಡಿಕೆಶಿ ಹೇಳಿಕೆಗೆ ಅಶ್ವಥ್‌ ನಾರಾಯಣ್‌ ಕೆಂಡ

    ಬೆಂಗಳೂರು: ಕಾಂಗ್ರೆಸ್‌ನವರ ಮನಸ್ಥಿತಿ ಹೇಗಿದೆ ಅಂದ್ರೆ, ವೋಟಿಗಾಗಿ ಕಾಶ್ಮೀರ ಸಹ ಪಾಕಿಸ್ತಾನಕ್ಕೆ (Pakistan) ಸೇರಿದ್ದು ಅಂತಾರೆ ಎಂದು ಬಿಜೆಪಿ ಶಾಸಕ ಎಸ್‌.ಆರ್ ವಿಶ್ವನಾಥ್ (Vishwanath) ಕಿಡಿ ಕಾರಿದ್ದಾರೆ.

    ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರಿಂದು, ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹರಾಷ್ಟ್ರಕ್ಕೆ ಸೇರಿತ್ತು ಎಂಬ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿಕೆಗೆ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಮದುವೆ, ಪ್ರವಾಸಕ್ಕೆ ಸಿಗಲಿದೆ ಬಿಎಂಟಿಸಿ ಬಸ್ – ಯಾವ್ಯಾವ ಬಸ್‍ಗೆ ಎಷ್ಟು ರೇಟ್?

    ಬೆಳಗಾವಿ (Belagavi) ವಿಶಾಲ ಕರ್ನಾಟಕಕ್ಕೆ ಸೇರಿ ಅನೇಕ ವರ್ಷಗಳಾಗಿವೆ, ಅದು ಮುಗಿದ ಕತೆ. ಆದ್ರೆ ವೋಟಿನ ರಾಜಕಾರಣಕ್ಕೆ ಸಚಿವೆ ನೀಡಿರುವ ಹೇಳಿಕೆ ವಿಷಾದಕರ. ಸದ್ಯ ಕಾಂಗ್ರೆಸ್‌ನವರ ಮನಸ್ಥಿತಿ ಹೇಗಿದೆ ಅಂದ್ರೆ, ಕಾಶ್ಮೀರ ಕೂಡ ಪಾಕಿಸ್ತಾನಕ್ಕೆ ಸೇರಿದ್ದು ಅಂತ ಹೇಳ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕರ್ನಾಟಕದ ಆರೂವರೆ ಕೋಟಿ ಕನ್ನಡಿಗರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಪಮಾನ ಮಾಡಿದ್ದಾರೆ. ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು, ಹಾಗಾಗಿಯೇ ಬೆಳಗಾವಿಯಲ್ಲಿ ಅಧಿವೇಶನ ಮಾಡಲಾಗುತ್ತಿದೆ. ಅವರ ಹೇಳಿಕೆ ಬೇರೆಯವರನ್ನ ಕೆರಳಿಸಲಿದೆ, ಆದ್ದರಿಂದ ಸಿಎಂ ಸಿದ್ದರಾಮಯ್ಯ ಅವರು ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನ ಸಚಿವ ಸಂಪುಟದಿಂದ ಹೊರಗಿಡಬೇಕು ಎಂದು ಒತ್ತಾಯಿಸಿದ್ದಾರೆ.

    ಮರಾಠಿಗರೂ ಇವರ ಹೇಳಿಕೆಯನ್ನ ಬೆಂಬಲಿಸಲ್ಲ: ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಾಜಿ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್, ಇಂತಹ ಸಂದರ್ಭದಲ್ಲಿ ಈ ಹೇಳಿಕೆ ಅವಶ್ಯಕತೆ ಇರಲಿಲ್ಲ. ಬೆಳಗಾವಿ ಈಗ ಕರ್ನಾಟಕಕ್ಕೆ ಸೇರಿದೆ. ರಾಜಕೀಯ ಪ್ರೇರಿತ ಹೇಳಿಕೆ ನೀಡುವ ಕೆಲಸ ಆಗಬಾರದು. ಯಾವುದೇ ಕೆಲಸಗಳು ಜನರ ವಿಶ್ವಾಸ ಗಳಿಸುವಂತಿರಬೇಕು. ಕನ್ನಡಿಗರು ವಿವಿಧ ಸಂಸ್ಕೃತಿಯಲ್ಲಿ ಏಕತೆ ಕಾಣಬೇಕು. ಆದ್ರೆ ಸಚಿವರ ಹೇಳಿಕೆಯನ್ನು ಕನ್ನಡಿಗರು ಮಾತ್ರವಲ್ಲ, ಮರಾಠಿಗರೂ ಬೆಂಬಲಿಸಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಐವರ ಅಸ್ಥಿಪಂಜರ ಪತ್ತೆ ಕೇಸ್‌ – ಮರಣೋತ್ತರ ಪರೀಕ್ಷಾ ವರದಿಯಲ್ಲೂ ಪತ್ತೆಯಾಗದ ಸತ್ಯಾಂಶ

    ಅಯೋಧ್ಯೆ ಮಂತ್ರಾಕ್ಷತೆ ವಿಚಾರದಲ್ಲಿ ಡಿಕೆಶಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅಶ್ವಥ್ ನಾರಾಯಣ್, ಅನ್ನಭಾಗ್ಯ ಅಕ್ಕಿಯಿಂದಲೇ ಮಂತ್ರಾಕ್ಷತೆ ಮಾಡಲಾಗ್ತಿದೆ ಅನ್ನೋ ಡಿಕೆ ಶಿವಕುಮಾರ್ ಹೇಳಿಕೆ ಕೀಳುಮಟ್ಟದಿಂದ ಕೂಡಿದೆ. ಹಿಂದೂ ಧರ್ಮದ ವ್ಯಕ್ತಿ ಈ ರೀತಿ ಹೇಳಿಕೆ ನೀಡೋದು ಸರಿಯಲ್ಲ. ಭಗವಂತನನ್ನ ಪೂಜಿಸೋರು, ಈ ರೀತಿಯ ಹೇಳಿಕೆ ನೀಡಬಾರದು, ಕೂಡಲೇ ಕ್ಷಮೆಯಾಚಿಸಿ, ಗೌರವದಿಂದ ನಡೆದುಕೊಳ್ಳಿ. ನಿಮ್ಮ ಗೌರವಕ್ಕೆ ಧಕ್ಕೆ ತಂದುಕೊಳ್ಳಬೇಡಿ ಎಂದು ಸಲಹೆ ನೀಡಿದ್ದಾರೆ.