Tag: belagavi

  • ದೇವಸ್ಥಾನ ಒಡೆದು ಕಟ್ಟಿರುವ ಮಸೀದಿಯನ್ನ ನೀವಾಗಿ ನೀವೇ ಕಿತ್ತು ಹಾಕಿ.. ಇಲ್ದಿದ್ರೆ ರಾಮಭಕ್ತರು ಕಿತ್ತು ಹಾಕ್ತಾರೆ: ಈಶ್ವರಪ್ಪ

    ದೇವಸ್ಥಾನ ಒಡೆದು ಕಟ್ಟಿರುವ ಮಸೀದಿಯನ್ನ ನೀವಾಗಿ ನೀವೇ ಕಿತ್ತು ಹಾಕಿ.. ಇಲ್ದಿದ್ರೆ ರಾಮಭಕ್ತರು ಕಿತ್ತು ಹಾಕ್ತಾರೆ: ಈಶ್ವರಪ್ಪ

    ಬೆಳಗಾವಿ: ದೇವಸ್ಥಾನ ಒಡೆದು ಮಸೀದಿ ಕಟ್ಟಿದ ಮುಸ್ಲಿಮರು ನೀವಾಗಿ ನೀವೇ ಕಿತ್ತು ಹಾಕಿ. ಇಲ್ಲವಾದ್ರೆ ರಾಮನ ಭಕ್ತರು ನಾವು ಮಸೀದಿ ಕಿತ್ತು ಹಾಕುತ್ತೇವೆ ಎಂದು ಕೆ.ಎಸ್.ಈಶ್ವರಪ್ಪ (K.S.Eshwarappa) ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 500 ವರ್ಷದ ಕೆಳಗೆ ರಾಮ ಹುಟ್ಟಿದ ಜಾಗದಲ್ಲಿ ದೇವಸ್ಥಾನ ಕಿತ್ತು ಹಾಕಿದ್ರು. ಬಾಬರ್ ನಂತವನು ಬಂದು ಬಾಬ್ರಿ ಮಸೀದಿ ಕಟ್ಟಿದ್ರು. ಬಾಬ್ರಿ ಮಸೀದಿ ಅಂದ್ರೆ ಹೇಗೆ? ಈಗ ಯಾರಾದ್ರೂ ಮಂದಿರ ಕೆಡವಿ ಮಸೀದಿ ಕಟ್ಟಿದರೆ ಅವರಪ್ಪನಿಗೆ ಹುಟ್ಟಿದೋನು ಅಂತ ಕರೀತಿನಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ನಮ್ಮ ಮೆಟ್ರೋದಲ್ಲಿ ಕಾಮುಕನ ಚೇಷ್ಟೆ – ಖಾಸಗಿ ಅಂಗ ಸ್ಪರ್ಶಿಸಿ ಯುವತಿಗೆ ಕಿರುಕುಳ

    ವಿಶ್ವನಾಥ ದೇವಸ್ಥಾನದಲ್ಲಿ ಅರ್ಧ ಮಸೀದಿ ಹೇಗೆ ಬಂತು? ಮಥುರಾದಲ್ಲಿ ಅರ್ಧ ಮಸೀದಿ ಹೇಗೆ ಬಂತು? ಲಾಠಿ ಗೋಲಿ ಖಾಯೆಂಗೆ ಮಂದಿರ ವಹಿ ಬನ್ ಗಯಾ ಎಂದು ಕೂಗ್ತಿದ್ವಿ. ಇನ್ನೆರಡು ದೇವಸ್ಥಾನಗಳಿಗೆ ಕೋರ್ಟ್ ಆದೇಶ ನೀಡಿದೆ. ಅಲ್ಲಿರುವ ಮಸೀದಿಗಳು ದ್ವಂಸ ಆಗುತ್ತೆ, ದೇವಸ್ಥಾನ ತಲೆ ಎತ್ತುತ್ತದೆ. ದೇವಸ್ಥಾನ ಒಡೆದು ಮಸೀದಿ ಕಟ್ಟಿದ ಮುಸ್ಲಿಮರು ನೀವಾಗಿ ನೀವೇ ಕಿತ್ತು ಹಾಕಬೇಕು. ಇಲ್ಲವಾದ್ರೆ ರಾಮನ ಭಕ್ತರು ನಾವು ಮಸೀದಿ ಕಿತ್ತು ಹಾಕುತ್ತೇವೆ ಎಂದಿದ್ದಾರೆ‌.

    ಸಿದ್ದರಾಮಯ್ಯ ನಾವು ಜಾತ್ಯತೀತವಾದಿಗಳು ಅಂತಾರೆ. ನಾವು ನಿಮಗಿಂತ ಜಾತ್ಯತೀತವಾದಿಗಳು. ಹಿಂದೂ ಮುಸ್ಲಿಂ ಅನ್ಯೋನ್ಯಾಗಿರಬೇಕು ಎನ್ನುವವರು ನಾವು. ನೀವು ನಮಾಜ್ ಮಾಡ್ಕೊಳ್ಳಿ, ನಾವು ಅದರ ತಂಟೆಗೆ ಬರಲ್ಲ. ಬಾಬರ್ ಕಟ್ಟಡ ಈ ದೇಶದ ಜನರಿಗೆ ನೀವು ಗುಲಾಮರಾಗಿದ್ದಿರಿ ಅಂತಾ ಹೇಳ್ತಿತ್ತು. ನೀವಾಗಿ ನೀವೇ ಮಥುರಾ ಹಾಗೂ ಕೃಷ್ಣಾದ ಮಸೀದಿ ತೆಗೆಯಿರಿ. ತೆಗೆಯದಿದ್ದರೆ ಕೊಲೆಗಳಾಗುತ್ತೊ ಇನ್ನೇನಾಗುತ್ತೊ ಗೊತ್ತಿಲ್ಲ. ಅಧಿಕಾರದಾಸೆಗೆ ಪಾಕಿಸ್ತಾನವನ್ನು ನೆಹರೂ ಮಾಡಿದರು. ಈ ದೇಶದಲ್ಲಿ ಈಗಾಗಲೇ ತ್ರಿವಳಿ ತಲಾಕ್ ಬಂದಿದೆ. ಒಂದು ಗಂಡಿಗೆ ಒಂದು ಹೆಣ್ಣು ಎಂದು ಸಂದೇಶ ಸಾರಿದೆ‌. ನಮಗೆ ಒಂದು ಹೆಣ್ಣು ಒಂದು ಗಂಡು ಇತ್ತು. ಆದರೆ ಮುಸ್ಲಿಮರಿಗೆ ಹಮ್ ಪಾಚ್ ಹಮ್ಕೊ ಪಚ್ಚಿಸ್ ಎಂಬಂತಾಗಿದೆ. ಗೋವು ನಮ್ಮ ತಾಯಿ. ಗೋಹತ್ಯೆ ನಿಷೇಧ ಮಾಡಿದ್ದೀವಿ. ಗೋಹತ್ಯೆ ನಿಷೇಧ ಕಾಯ್ದೆಯನ್ನು ತಾಕತ್ತಿದ್ದರೆ ಹಿಂಪಡೆಯಿರಿ. ಅದನ್ನ ನಾವು ಹಿಂದೆ ತೆಗೆದುಕೊಳ್ಳಲು ಯಾವುದೇ ಕಾರಣಕ್ಕೂ ಬಿಡಲ್ಲ ಎಂದು ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.‌ ಇದನ್ನೂ ಓದಿ: ಬೆಳಗಾವಿಯಲ್ಲಿ ನೈತಿಕ ಪೊಲೀಸ್‌ಗಿರಿ; 9 ಮಂದಿ ಬಂಧನ

    ಸಮಾಜವಾದಿ ಎನ್ನುವ ಸಿದ್ದರಾಮಯ್ಯಗೆ ಅವರ ಥರದ ಮಗನೇ ಹುಟ್ಟಿದ್ದಾನೆ. ಹಿಂದೂರಾಷ್ಟ್ರ ಮಾಡುವ ಜನಗಳು ಎಂಎಲ್ಎ ಆಗಬೇಕು. ಸ್ವಾಮಿ ವಿವೇಕಾನಂದರು ಹೊರ ದೇಶಕ್ಕೆ ಹೋದಾಗ ಅವರನ್ನ ಮೂಸಿ ನೋಡಿರಲಿಲ್ಲ. ನಂತರ ಅವರ ಮಾತಿನಿಂದ ಎಲ್ಲರೂ ಅವರನ್ನು ಗೌರವದಿಂದ ಕಾಣಲು ಶುರುಮಾಡಿದರು. ಅಂತಹ ಧರ್ಮ ಅಂತಹ ಸಂಸ್ಕೃತಿ ನಮ್ಮದು ಎಂದು ತಿಳಿಸಿದ್ದಾರೆ.

  • ಬೆಳಗಾವಿಯಲ್ಲಿ ನೈತಿಕ ಪೊಲೀಸ್‌ಗಿರಿ; 9 ಮಂದಿ ಬಂಧನ

    ಬೆಳಗಾವಿಯಲ್ಲಿ ನೈತಿಕ ಪೊಲೀಸ್‌ಗಿರಿ; 9 ಮಂದಿ ಬಂಧನ

    ಬೆಳಗಾವಿ: ಬೆಳಗಾವಿಯಲ್ಲಿ (Belagavi) ಯುವಕ ಮತ್ತು ಯುವತಿ ಮೇಲೆ ನೈತಿಕ ಪೊಲೀಸ್‌ಗಿರಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರೋಹನ್ ಜಗದೀಶ್‌ ತಿಳಿಸಿದ್ದಾರೆ.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯ ಕೋಟೆ ಕೆರೆಯಲ್ಲಿ ಸಚಿನ್ ಲಮಾಣ್‌ ಮತ್ತು ಮುಸ್ಕಾನ್ ಎಂಬವರು ಕುಳಿತಿದ್ದರು. ಈ ವೇಳೆ ಯುವಕರ ಗುಂಪು ಯುವಕ-ಯುವತಿ ಮೇಲೆ ಹಲ್ಲೆ ಮಾಡಿದೆ. ಘಟನೆ ಕುರಿತು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪ್ರೇಮಿಗಳೆಂದು ಅಕ್ಕ-ತಮ್ಮನನ್ನು ಕೂಡಿ ಹಾಕಿ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳು

    ಪ್ರಕರಣ ಸಂಬಂಧ 9 ಆರೋಪಿತರನ್ನು ಬಂಧಿಸಲಾಗಿದ್ದು, ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದವರಿದ್ದಾರೆ. ಮೊಮ್ಮಹದ್ ಇನಾಮದಾರ್ (22), ಆತೀಫ್ ಅಹಮ್ಮದ್ ಶೇಖ್‌ (22), ಮೊಹಮ್ಮದ್ ಅಮನ್(27), ಸೈಫಲಿ ಮಗ್ದುಮ್ (27), ಉಮರ ಬಡೇಗರ್ (19), ಅಜಾನ್ ಕಾಲಕುಂದ್ರಿ (19), ರಿಯಾನ್ ರೋಟವಾಲೆ (19) ಬಂಧಿತ ಆರೋಪಿಗಳು.

    ಕೋಟೆ ಕೆರೆ ಆವರಣದಲ್ಲಿ ಚಿಕ್ಕದಾದ ಶೆಡ್‌ನಲ್ಲಿ ಯುವಕರ ಮೇಲೆ ಹಲ್ಲೆ ಮಾಡಲಾಗಿದೆ. ಕೋಟೆ ಕೆರೆ ಆವರಣ ಕಾಂಪೌಂಡ್ ನಿರ್ಮಾಣ ಪೂರ್ಣವಾಗಿಲ್ಲ. ಈ ಕಾರಣಕ್ಕೆ ಕೆಲ ಯುವಕರು ‌ಚಿಕ್ಕಾದಾದ ದಾರಿ ಮಾಡಿಕೊಂಡು ಶೆಡ್ ನಿರ್ಮಿಸಿಕೊಂಡಿದ್ದಾರೆ. ಕಾಂಪೌಂಡ್ ನಿರ್ಮಿಸುವಂತೆ ಮಹಾನಗರ ಪಾಲಿಕೆಗೂ ಪತ್ರ ಬರೆಯುತ್ತೇವೆ. ಶೆಡ್‌ಗೆ ಹೊಂದಿಕೊಂಡು ಮನೆಯೊಂದು ಇದೆ. ಮಾಲೀಕರ ವಿಚಾರಣೆ ನಡೆಸುತ್ತೇವೆ. ಸಿಸಿಟಿವಿ ಕ್ಯಾಮರಾ ಪರಿಶೀಲಿಸಿ ಯಾರಾದರೂ ಇದ್ರೆ ಬಂಧಿಸಲಾಗುವುದು ಎಂದು ಡಿಸಿಪಿ ರೋಹನ್ ಜಗದೀಶ್ ತಿಳಿಸಿದ್ದಾರೆ. ಇದನ್ನೂ ಓದಿ: ಹೆಲ್ಮೆಟ್‌ನಿಂದ ಹೊಡೆದು 3 ತಿಂಗಳ ಗರ್ಭಿಣಿಯನ್ನು ಕೊಂದು ಅಪಘಾತವೆಂದ ಪತಿ!

  • ಪ್ರೇಮಿಗಳೆಂದು ಅಕ್ಕ-ತಮ್ಮನನ್ನು ಕೂಡಿ ಹಾಕಿ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳು

    ಪ್ರೇಮಿಗಳೆಂದು ಅಕ್ಕ-ತಮ್ಮನನ್ನು ಕೂಡಿ ಹಾಕಿ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳು

    – ಗಾಂಜಾ ನಶೆಯಲ್ಲಿ 7 ಮುಸ್ಲಿಂ ಯುವಕರಿಂದ ಕೃತ್ಯ?

    ಬೆಳಗಾವಿ: ಗಾಂಜಾ ನಶೆಯಲ್ಲಿದ್ದ ಮುಸ್ಲಿಂ ಯುವಕರು, ಪ್ರೇಮಿಗಳೆಂದು ತಿಳಿದು ಅಕ್ಕ-ತಮ್ಮನನ್ನು ಶೆಡ್‍ನಲ್ಲಿ ಕೂಡಿ ಹಾಕಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಗರದಲ್ಲಿ ನಡೆದಿದೆ.

    ಬೆಳಗಾವಿ (Belagavi) ಹೊರವಲಯದ ಯಮನಾಪುರದ ಸಹೋದರ ಹಾಗೂ ಸಹೋದರಿಯ ಮೇಲೆ ಹಲ್ಲೆ ನಡೆದಿದೆ ಎಂದು ತಿಳಿದು ಬಂದಿದೆ. ಕೋಟಿ ಕೆರೆಯ ದಡದಲ್ಲಿ ಅಕ್ಕ-ತಮ್ಮ ಇಬ್ಬರು ಕುಳಿತು ಮಾತಾಡುತ್ತಿದ್ದರು. ಈ ವೇಳೆ ಬಂದ ಕಿಡಿಗೇಡಿಗಳು ಇಬ್ಬರನ್ನು ಎಳೆದೊಯ್ದು ಶೆಡ್‍ನೊಳಗೆ ಕೂಡಿಹಾಕಿ ಹಲ್ಲೆ ನಡೆಸಿದ್ದಾರೆ. ಗಾಂಜಾ ನಶೆಯಲ್ಲಿದ್ದ ಏಳು ಜನ ಮುಸ್ಲಿಂ ಯುವಕರು ಸೇರಿ ಕೃತ್ಯ ಎಸಗಿರುವ ಬಗ್ಗೆ ಪೊಲೀಸರು (Police) ಶಂಕೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಎರಡೂ ಹೆಣ್ಣುಮಗು ಅಂತ ಸಿಟ್ಟಿಗೆದ್ದ ಪತಿ- 2ನೇ ಮಗುವನ್ನು ಮಾರಲು ಮುಂದಾದ ಪಾಪಿ

    ರಾಜ್ಯ ಸರ್ಕಾರದ ಯುವನಿಧಿ ಯೋಜನೆಗೆ (Yuva Nidhi Scheme) ಅರ್ಜಿ ಸಲ್ಲಿಸಲು ಸಹೋದರನ ಜೊತೆಗೆ ಯುವತಿ ಬೆಳಗಾವಿಗೆ ಆಗಮಿಸಿದ್ದಳು. ಈ ವೇಳೆ ಸೇವಾ ಕೇಂದ್ರದ ಸಿಬ್ಬಂದಿ ಸರ್ವರ್ ಸಮಸ್ಯೆ ಇದೆ, ಮಧ್ಯಾಹ್ನ 3 ಗಂಟೆಗೆ ಬರುವಂತೆ ತಿಳಿಸಿದ್ದಾರೆ. ಇದರಿಂದ ಅಕ್ಕ- ತಮ್ಮ ಮಧ್ಯಾಹ್ನ 1 ಗಂಟೆಯ ವೇಳೆಗೆ ಕೋಟೆ ಕೆರೆ ದಡದ ಮೇಲೆ ಬಂದು ಕುಳಿತಿದ್ದರು. ಈ ವೇಳೆ ಅಲ್ಲಿಗೆ ಬಂದ ಕಿಡಿಗೇಡಿಗಳು ಮುಸ್ಲಿಂ ಹುಡುಗಿ ಜೊತೆಗೆ ಏಕೆ ಕುಳಿತಿದ್ದೀಯಾ? ಎಂದು ಯುವಕನ ಜೊತೆಗೆ ಜಗಳ ತೆಗೆದಿದ್ದಾರೆ. ಈ ವೇಳೆ ನಾವು ಪ್ರೇಮಿಗಳಲ್ಲ, ಅಕ್ಕ-ತಮ್ಮ ಎಂದು ಮನವರಿಕೆ ಮಾಡಲು ಯತ್ನಿಸಿದ್ದಾರೆ. ಅಲ್ಲದೇ ಅವರ ಚಿಕ್ಕಪ್ಪನಿಗೆ ಫೋನ್ ಮಾಡಿ ಮನವರಿಕೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಫೋನ್ ಸ್ವಿಚ್ ಆಫ್ ಮಾಡಿ ಕೋಟೆ ಕೆರೆ ಪಕ್ಕದ ಶೆಡ್‍ಗೆ ಎಳೆದೊಯ್ದ ಕೂಡಿ ಹಾಕಿ ಇಬ್ಬರ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

    ಸ್ವಲ್ಪ ಸಮಯದ ಬಳಿಕ ಯುವತಿಯ ಚಿಕ್ಕಪ್ಪ ವಾಪಸ್ ಕರೆ ಮಾಡಿದ್ದು, ಈ ವೇಳೆ ಮೊಬೈಲ್ ಸ್ವಿಚ್ ಆಫ್ ಆಗಿದ್ದು ತಿಳಿಯುತ್ತಿದ್ದಂತೆ ಎಪಿಎಂಸಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಬಳಿಕ ಕೋಟೆ ಕೆರೆ ಸುತ್ತಲೂ ಅವರ ಚಿಕ್ಕಪ್ಪ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಕಿರಿಚಾಟದ ಶಬ್ಧ ಕೇಳಿ ಶೆಡ್ ಒಳಗೆ ನುಗ್ಗಿ ಇಬ್ಬರನ್ನು ರಕ್ಷಿಸಿದ್ದಾರೆ. ಬಳಿಕ ಇಬ್ಬರನ್ನೂ ಜಿಲ್ಲಾಸ್ಪತ್ರೆಗೆ ಕರೆದೊಯ್ದ ದಾಖಲಿಸಿದ್ದಾರೆ. ಅಕ್ಕ-ತಮ್ಮ ಇಬ್ಬರಿಗೂ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಯುವತಿಯ ತಾಯಿ ಹಾಗೂ ಯುವಕನ ತಾಯಿ ಸ್ವಂತ ಅಕ್ಕ-ತಂಗಿಯರಾಗಿದ್ದು, ಲಮಾಣಿ ಸಮುದಾಯಕ್ಕೆ ಸೇರಿದ್ದ ಯುವತಿಯ ತಾಯಿ ಮುಸ್ಲಿಂ ವ್ಯಕ್ತಿಯೊಂದಿಗೆ ವಿವಾಹವಾಗಿದ್ದರು. 11 ವರ್ಷಗಳ ಹಿಂದೆಯೇ ಯುವತಿಯ ತಂದೆ ಅಕಾಲಿಕ ಸಾವು ಹಿನ್ನೆಲೆಯಲ್ಲಿ ಸಹೋದರಿಯ ಮನೆ ಪಕ್ಕದ ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ.

    ಈ ಸಂಬಂಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ 17 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಕಿಲ್ಲಾ ಕೆರೆ ನಿವಾಸಿ ಅತೀಕ್ ಹಾಗೂ ಅಸದ್ ಖಾನ್ ಸೇರಿದಂತೆ ಏಳು ಜನ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಸ್ಪಾ ಹೆಸರಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ- 44 ಯುವತಿಯರ ರಕ್ಷಣೆ

  • ಬೆಳಗಾವಿಯಲ್ಲಿ ಬುದ್ಧಿಮಾಂದ್ಯ ಮಗಳ ಮೇಲೆ ತಂದೆಯಿಂದ ನಿರಂತರ ಅತ್ಯಾಚಾರ

    ಬೆಳಗಾವಿ: ಬುದ್ಧಿಮಾಂದ್ಯ ಮಗಳ (Daughter) ಮೇಲೆ ತಂದೆಯೇ (Father) ನಿರಂತರ ಅತ್ಯಾಚಾರ (Rape) ಎಸಗಿ, ಗರ್ಭಿಣಿಯನ್ನಾಗಿಸಿದ ಪ್ರಕರಣ ಮಗು ಜನಿಸಿದ ಬಳಿಕ ಬೆಳಕಿಗೆ ಬಂದ ಘಟನೆ ಬೆಳಗಾವಿ (Belagavi) ಜಿಲ್ಲೆಯ ಬೆಳವಟ್ಟಿ (Belavatti) ಗ್ರಾಮದಲ್ಲಿ ನಡೆದಿದೆ.

    ತಾಲೂಕಿನ ಬೆಳವಟ್ಟಿ ಗ್ರಾಮದಲ್ಲಿ ತಾಯಿ ಇಲ್ಲದ ಮಾನಸಿಕ ಅಸ್ವಸ್ಥ ಮಗಳೊಂದಿಗೆ ಮನೆಯಲ್ಲಿ ಆಕೆಯ ತಂದೆಯೇ ನಿರಂತರ ಅತ್ಯಾಚಾರ ಎಸಗಿದ್ದು, ಆಕೆ ಗರ್ಭಿಣಿಯಾಗಿರುವ ಬಗ್ಗೆ ಸ್ಥಳೀಯರಿಂದ ಅನುಮಾನ ವ್ಯಕ್ತವಾದ ಬಳಿಕ ಗ್ರಾಮದ ಆಶಾ ಕಾರ್ಯಕರ್ತೆಯರ ಮೂಲಕ ತಪಾಸಣೆ ನಡೆಸಿದಾಗ ಗರ್ಭಿಣಿಯಾಗಿರುವ ಮಾಹಿತಿ ದೃಢಪಟ್ಟಿದೆ. ಇದನ್ನೂ ಓದಿ: ಲಂಡನ್‌ ರೈಲಿನಲ್ಲಿ ಒಂಟಿ ಮಹಿಳೆಯ ಮುಂದೆ ಹಸ್ತಮೈಥುನ – ಭಾರತೀಯ ಮೂಲದ ವ್ಯಕ್ತಿಗೆ 9 ತಿಂಗಳು ಜೈಲು

    ಸರ್ಕಾರೇತರ ಸಂಸ್ಥೆಯೊಂದು 2023ರ ಫೆಬ್ರವರಿ ತಿಂಗಳಲ್ಲಿ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ. ಬುದ್ಧಿಮಾಂದ್ಯೆಯ ತಂದೆ ಮೇಲೆ ಅನುಮಾನಗೊಂಡು ತಂದೆ ಹಾಗೂ ಆಕೆಗೆ ಜನಿಸಿದ ಮಗುವಿನ ಡಿಎನ್‌ಎ ಪರೀಕ್ಷಿಸಿದ ಬಳಿಕ ಆತನೇ ಮಗುವಿನ ತಂದೆ ಎನ್ನುವುದು ದೃಢಪಟ್ಟಿದೆ ಎನ್ನಲಾಗಿದೆ. ಇದನ್ನೂ ಓದಿ: ಹಾಡಹಗಲೇ ಮನೆಯಲ್ಲಿದ್ದ ಒಂಟಿ ಮಹಿಳೆಯ ಕತ್ತು ಹಿಸುಕಿದ ದುಷ್ಕರ್ಮಿಗಳು

    ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ ಅವರು, ಬುದ್ಧಿಮಾಂದ್ಯೆಯ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂದು ಎನ್.ಜಿ.ಒ ದೂರು ನೀಡಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ಆಕೆಯ ತಂದೆಯೇ ಕೃತ್ಯ ಎಸಗಿರುವುದು ತಿಳಿದು ಬಂದಿದೆ. ಈ ಕುರಿತು ಸಂಬಂಧಿಸಿದ ನ್ಯಾಯಾಲಯಕ್ಕೆ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಡಬಲ್ ಬ್ಯಾರೆಲ್ ಗನ್‌ನಿಂದ ಶೂಟ್ ಮಾಡಿಕೊಂಡು BE ವಿದ್ಯಾರ್ಥಿ ಆತ್ಮಹತ್ಯೆ‌

  • ಡಿವೋರ್ಸ್ ಕೊಡು ಇಲ್ಲದಿದ್ರೆ  ಅಶ್ಲೀಲ ವೀಡಿಯೋ ವೈರಲ್ ಮಾಡ್ತೀನಿ- ಪತ್ನಿಗೆ ಬ್ಲ್ಯಾಕ್‍ಮೇಲ್

    ಡಿವೋರ್ಸ್ ಕೊಡು ಇಲ್ಲದಿದ್ರೆ ಅಶ್ಲೀಲ ವೀಡಿಯೋ ವೈರಲ್ ಮಾಡ್ತೀನಿ- ಪತ್ನಿಗೆ ಬ್ಲ್ಯಾಕ್‍ಮೇಲ್

    ಬೆಳಗಾವಿ: ಜಿಲ್ಲೆಯಲ್ಲಿ ದಿನಕ್ಕೊಂದು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಪತ್ನಿಯ ಜೊತೆಗಿನ ಖಾಸಗಿ ಕ್ಷಣಗಳನ್ನ ವೀಡಿಯೋ ರೆಕಾರ್ಡ್ ಮಾಡಿ. ಮತ್ತೆ ಹೆಂಡತಿಗೆ ಗಂಡನೇ ಬ್ಲ್ಯಾಕ್ ಮೇಲ್ (Blackmail) ಮಾಡಿರುವ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ.

    ಹೌದು. ಮತ್ತೊಂದು ಮದುವೆಗಾಗಿ ಹೆಂಡತಿಯಿಂದ ವಿಚ್ಛೇದನ ಪಡೆಯಲು ಬೆಳಗಾವಿ (Belagavi) ನಗರದ ನಿವಾಸಿ ಕಿರಣ್ ಪಾಟೀಲ್ ಎಂಬಾತ ಈ ರೀತಿ ಕೃತ್ಯ ಎಸಗಿದ್ದಾನೆ. ವಿಚ್ಛೇದನ (Divorce) ನೀಡು ಇಲ್ಲವಾದರೆ ಅಶ್ಲೀಲ ವೀಡಿಯೋ, ಫೋಟೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಗಂಡನ ಮಾತನ್ನು ಕೇಳಿ ಹೆಂಡತಿ ಶಾಕ್‍ಗೆ ಒಳಗಾಗಿದ್ದಾರೆ. ಅಲ್ಲದೇ ಸಾಕಷ್ಟು ಬಾರಿ ಮನವೊಲಿಸಲು ಯತ್ನಿದ್ರೂ ಯಾವುದೇ ಪ್ರಯೋಜನವಾಗಿಲ್ಲ.

    ಇತ್ತ ವಿಚ್ಛೇದನ ಕೋರಿ ಗಂಡ ಕಿರಣ್ ಕೋರ್ಟ್ ಮೆಟ್ಟಿಲು ಏರಿದ್ದಾರೆ. ಇನ್ನು ಕೋರ್ಟಿಗೆ ಹೋದ ಬಳಿಕವೂ ಹೆಂಡತಿಗೆ ನಿರಂತರವಾಗಿ ಕಿರಣ್ ಬ್ಲ್ಯಾಕ್ ಮೇಲ್ ಮಾಡಿದ್ದಾನೆ. ಇದರಿಂದ ದಿಕ್ಕೆ ತೋಚದಾದ ಮಹಿಳೆ ಪೊಲೀಸರ ಮೊರೆ ಹೋಗಿದ್ದಾರೆ. ಜಿಲ್ಲಾ ಸೈಬರ್ ಠಾಣೆಯಲ್ಲಿ ಕೇಸ್ ದಾಖಲಿಸಿ ನ್ಯಾಯ ಕೊಡಿಸುವಂತೆ ನೊಂದ ಮಹಿಳೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ರಾಮಮಂದಿರಕ್ಕೆ ಬಾಂಬ್ ಬೆದರಿಕೆ – ಇಬ್ಬರ ಬಂಧನ

    ಪ್ರಕರಣ ದಾಖಲಾದ ಬಳಿಕ ಠಾಣೆಗೆ ಕಿರಣ್ ಪಾಟೀಲ್ ನನ್ನು ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತನ ಮೊಬೈಲ್ ನಲ್ಲಿ ಹೆಂಡತಿ ಅಶ್ಲೀಲ ವೀಡಿಯೋ, ಫೋಟೋ ಇರುವುದು ಬೆಳಕಿಗೆ ಬಂದಿದೆ. ತಕ್ಷಣ ಅರೆಸ್ಟ್ ಮಾಡಲು ಮುಂದಾದಾಗ ತಪ್ಪಿಸಿಕೊಂಡು ಓಡಿ ಹೋಗಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಆತನನ್ನು ರಕ್ಷಣೆ ಮಾಡಿದ ಪೊಲೀಸರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಗುಣಮುಖನಾಗಿ ನಿನ್ನೆಯಷ್ಟೇ ಹಿಂಡಲಗಾ ಜೈಲಿಗೆ ಆರೋಪಿ ಕಿರಣ್ ನನ್ನು ರವಾನಿಸಲಾಗಿದೆ.

  • ಮಕ್ಕಳು ಹೂ ಕಿತ್ತಿದ್ದಕ್ಕೆ ಅಂಗನವಾಡಿ ಸಹಾಯಕಿ ಮೂಗು ಕತ್ತರಿಸಿದ ಮಾಲೀಕ

    ಮಕ್ಕಳು ಹೂ ಕಿತ್ತಿದ್ದಕ್ಕೆ ಅಂಗನವಾಡಿ ಸಹಾಯಕಿ ಮೂಗು ಕತ್ತರಿಸಿದ ಮಾಲೀಕ

    ಬೆಳಗಾವಿ: ಮಕ್ಕಳು ಹೂ ಕಿತ್ತಿದ್ದಕ್ಕೆ ಗಾರ್ಡನ್‌ನ ಮಾಲೀಕ, ಅಂಗನವಾಡಿ ಸಹಾಯಕಿಯ ಮೂಗನ್ನೇ ಕತ್ತರಿಸಿರುವ ಅಮಾನವೀಯ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ.

    ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸ್ವಕ್ಷೇತ್ರದಲ್ಲೇ ಈ ಘಟನೆ ನಡೆದಿದೆ. ಸುಗಂಧಾ ಮೋರೆ ಸಂತ್ರಸ್ತ ಮಹಿಳೆ. ಕಲ್ಯಾಣಿ ಮೋರೆ ಹಲ್ಲೆ ನಡೆಸಿದ ಆರೋಪಿ. ಇದನ್ನೂ ಓದಿ: ದಲಿತ ಯುವತಿಯ ಅತ್ಯಾಚಾರ ಮಾಡಿ ಕತ್ತು ಹಿಸುಕಿ ಹತ್ಯೆ ಮಾಡಿದ ಪೊಲೀಸ್ ಪೇದೆ

    ಸುಗಂಧಾ ಮೋರೆ ಅವರು ಬಾಸುರ್ತಿ ಗ್ರಾಮದ ಅಂಗನವಾಡಿಯಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ ಮೂರು ದಿನದ ಹಿಂದೆ ಇವರ ಮೇಲೆ ಹಲ್ಲೆ ನಡೆಸಲಾಗಿದೆ. ಮಕ್ಕಳು ಶಾಲೆಯ ಆವರಣದ ಪಕ್ಕದಲ್ಲಿರುವ ಗಾರ್ಡನ್‌ನಲ್ಲಿರುವ ಹೂ ಕಿತ್ತಿದ್ದಕ್ಕೆ, ಅಂಗನವಾಡಿ ಸಹಾಯಕಿ ಸುಗಂಧಾ ಮೇಲೆ ಹಲ್ಲೆ ನಡೆಸಲಾಗಿದೆ. ಅದೇ ಗ್ರಾಮದ ಗಾರ್ಡನ್‌ನ ಮಾಲೀಕ ಕಲ್ಯಾಣಿ ಮೋರೆ ಎಂಬಾತ ಹಲ್ಲೆ ನಡೆಸಿದ್ದಾನೆ.

    ಹಲ್ಲೆಗೊಳಗಾದ ಸುಗಂಧಾರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ. ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಶ್ರೀಕಾಂತ್ ಪೂಜಾರಿ ವಿರುದ್ಧ ಅಕ್ರಮ ಸಾರಾಯಿ, ಮಟ್ಕಾ, ಜೂಜಾಟ ಸೇರಿ 16 ಕೇಸ್‌ಗಳಿವೆ: ಹು-ಧಾ ಪೊಲೀಸ್ ಕಮಿಷನರ್

    ಘಟನೆ ನಡೆದು ಮೂರು ದಿನಗಳಾದರೂ ಸಹ ತಲೆ ಮರೆಸಿಕೊಂಡಿರುವ ಆರೋಪಿ ಕಲ್ಯಾಣಿ ಇನ್ನೂ ಅರೆಸ್ಟ್ ಆಗಿಲ್ಲ. ಸುಗಂಧಾ ಕುಟುಂಬದವರು ಬಡವರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗನವಾಡಿ ಸಹಾಯಕಿಯ ಕುಟುಂಬಕ್ಕೆ ಆಸ್ಪತ್ರೆಯ ಬಿಲ್ ಸಹ ಕಟ್ಟಲು ಸಾಧ್ಯವಾಗದ ಸ್ಥಿತಿ ಇದೆ. ಹೀಗಾಗಿ ಕುಟುಂಬಸ್ಥರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಬಳಿ ನೆರವಿಗೆ ಮನವಿ ಮಾಡಿದ್ದಾರೆ. ಮಹಿಳೆಗೆ ಸಹಾಯ ಮಾಡಬೇಕು. ಇಲಾಖೆಯಿಂದ ಸಹಾಯ ಮಾಡಬೇಕು ಎಂದು ಕೋರಿದ್ದಾರೆ.

  • ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ; ಮಹಿಳೆ ಅರೆಬೆತ್ತಲೆಗೊಳಿಸಿ ಹಲ್ಲೆ ಆರೋಪ – 20 ಜನರ ವಿರುದ್ಧ ದೂರು

    ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ; ಮಹಿಳೆ ಅರೆಬೆತ್ತಲೆಗೊಳಿಸಿ ಹಲ್ಲೆ ಆರೋಪ – 20 ಜನರ ವಿರುದ್ಧ ದೂರು

    ಬೆಳಗಾವಿ: ಈಚೆಗೆ ನಡೆದಿದ್ದ ಮಹಿಳೆಯನ್ನು ಅರೆಬೆತ್ತಲಾಗಿಸಿ ಹಲ್ಲೆ ಮಾಡಿದ ಘಟನೆ ದೇಶಾದ್ಯಂತ ಸದ್ದು ಮಾಡಿತ್ತು. ಇಂಥ ಅಮಾನವೀಯ ಘಟನೆ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಗಾವಿಯಲ್ಲಿ (Belagavi) ಬೆಳಕಿಗೆ ಬಂದಿದೆ.

    ಮಹಿಳೆಯನ್ನು ಎರಡೆರಡು ಬಾರಿ ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಸಂತ್ರಸ್ತ ಮಹಿಳೆಯು 20 ಮಂದಿ ವಿರುದ್ಧ ಬೆಳಗಾವಿ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಸಿನಿಮಾ ಸ್ಟೈಲ್‍ನಲ್ಲಿ ಬ್ರ್ಯಾಂಡೆಡ್ ಶೂಗಳ ಕಳ್ಳತನ

    ಪ್ರಕರಣ ಏನು?
    ಜಮೀನು ಒತ್ತುವರಿ ಮಾಡಿದ್ದನ್ನು ಪ್ರಶ್ನಿಸಿ ಮಹಿಳೆ ಕೋರ್ಟ್ ಮೆಟ್ಟಿಲೇರಿದ್ದರು. ಮಹಿಳೆಯ ಮಾವ ಜಮೀನಿನಲ್ಲಿ ಮೇವಿನ ಬಣವಿ ಒಟ್ಟಲು ನೀಡಿದ್ದರು. 6 ಎಕರೆ ಭೂಮಿ ಆಕೆಯ ಮಾವನ ಹೆಸರಿನಲ್ಲಿತ್ತು. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಈ ಜಮೀನು ಹೊಂದಿದ್ದರು. ಮಹಿಳೆಯನ್ನು ಆರೋಪಿಗಳೆಲ್ಲ ಸೇರಿ ಹೊಡೆದು ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.

    ತಿಗಡಿ ಗ್ರಾಮದ ಗ್ರಾಪಂ ಅಧ್ಯಕ್ಷೆ ಪತಿ ಸೇರಿ ಒಟ್ಟು 20 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಮೊದಲು ಬೈಲಹೊಂಗಲ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಾಗಿದ್ದರೂ ಪ್ರಕರಣದಲ್ಲಿ ಆರೋಪಿಗಳ ಬಂಧನ ಆಗಿಲ್ಲ. ಸದ್ಯ ಬೆಳಗಾವಿ ಮಹಿಳಾ ಪೊಲೀಸ್ ಠಾಣೆಗೆ ಪ್ರಕರಣ ವರ್ಗಾವಣೆಯಾಗಿದೆ. ಇದನ್ನೂ ಓದಿ: ದ್ವೇಷದ ರಾಜಕಾರಣ ಮಾಡೋ ಕಾಂಗ್ರೆಸ್ಸಿನ ಅಂತ್ಯಕಾಲ ಆರಂಭವಾಗಿದೆ: ರಾಮುಲು

    ನೊಂದ ಮಹಿಳೆ ಹೇಳೋದೇನು?
    ಏಕಾಎಕಿ ನನ್ನ ಮೇಲೆ 25 ರಿಂದ 30 ಜನ ಹಲ್ಲೆ ಮಾಡಿದ್ದಾರೆ. ನನ್ನ ಕೂದಲು ಹಿಡಿದು ಎಳೆದಾಡಿ ಹಲ್ಲೆ ನಡೆಸಿದ್ದಾರೆ. ನನ್ನ ಖಾಸಗಿ ಅಂಗಾಂಗಗಳನ್ನು ಮುಟ್ಟಿ ಹಿಂಸೆ ಕೊಟ್ಟಿದ್ದಾರೆ. ದೂರು ಕೊಡಬೇಕೆಂದು ಪೊಲೀಸ್ ಠಾಣೆಗೆ ಹೋಗಲು ಬಸ್ ನಿಲ್ದಾಣಕ್ಕೆ ಬಂದೆ. ಅಲ್ಲಿಂದ ನನ್ನ ಎಳೆದುಕೊಂಡು ಬಂದು ಪಂಚಾಯ್ತಿಯಲ್ಲಿ ಕೂಡಿ ಹಾಕಿದರು. ಕೂಡಿ ಹಾಕಿ ನನ್ನ ಬಳಿ ಇದ್ದ ಫೋನ್ ಹಾಗೂ ಹಣವನ್ನು ಕಸಿದುಕೊಂಡರು. ನಂತರ ನನ್ನ ಕಡೆಯಿಂದ ಬಲವಂತವಾಗಿ ಕೆಲ ದಾಖಲಾತಿಗೆ ಸಹಿ ಮಾಡಿಸಿದರು. ಸಂಜೆಯ ವೇಳೆ ನನ್ನನ್ನು ಅಲ್ಲಿಂದ ಬಿಟ್ಟರು. ಮಾರನೇ ದಿನ ನಾನು ಬಂದು ಬೈಲಹೊಂಗಲ ಠಾಣೆಗೆ ದೂರು ನೀಡಿದ್ದೇನೆ ಎಂದು ಸಂತ್ರಸ್ತೆ ಅಳಲು ತೋಡಿಕೊಂಡಿದ್ದಾರೆ.

    ಕಲ್ಲಪ್ಪ ಡೊಂಕನ್ನವರ್, ಅಡಿವೆಪ್ಪ ದಳವಾಯಿ, ಕಲ್ಪನಾ ಡೊಂಕನ್ನವರ್, ಸಾಧಿಕ್ ಬಾಳೇಶಿ, ಶಿವಬಸಪ್ಪ ಕರಡಿಗುದ್ದಿ, ಬಸವರಾಜ್ ಕರಡಿಗುದ್ದಿ, ಮಾರುತಿ ಮುದ್ದೆನ್ನವರ್, ಸೋಮಲಿಂಗ್ ರಾವಜಿ, ಸೋಮಲಿಂಗ ಹಾದಿಮನಿ, ಮಲ್ಲವ್ವ ಕರಡಿಗುದ್ದಿ, ಬಾಬು ಕಾಜಗಾರ, ಮಾಲತಿ ರಾವಜಿ, ಗಂಗವ್ವ ಕಾಜಗಾರ, ಶಾಂತವ್ವ ಸಂಗೊಳ್ಳಿ, ಈರವ್ವ ಕರಕನ್ನವರ್, ಹರುನ್ ಕಂಡುಗೋಳ, ತಿಗಡಿ ಗ್ರಾಪಂ ಉಪಾಧ್ಯಕ್ಷೆಯ ಪತಿ ಸೇರಿ ಒಟ್ಟು 18 ಜನರ ವಿರುದ್ಧ ಸಂತ್ರಸ್ತೆ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ರೋಗಿ, ಕುಟುಂಬಸ್ಥರು ಒಪ್ಪದಿದ್ದರೆ ICUಗೆ ದಾಖಲಿಸುವಂತಿಲ್ಲ- ಕೇಂದ್ರದಿಂದ ಆಸ್ಪತ್ರೆಗಳಿಗೆ ಹೊಸ ರೂಲ್ಸ್‌

  • ಕಲ್ಯಾಣಮಂಟಪದಲ್ಲೇ ಹೈಡ್ರಾಮಾ – ಹಸೆಮಣೆ ಏರಬೇಕಿದ್ದ ಸರ್ಕಾರಿ ನೌಕರ ಜೈಲುಪಾಲು

    ಕಲ್ಯಾಣಮಂಟಪದಲ್ಲೇ ಹೈಡ್ರಾಮಾ – ಹಸೆಮಣೆ ಏರಬೇಕಿದ್ದ ಸರ್ಕಾರಿ ನೌಕರ ಜೈಲುಪಾಲು

    ಬೆಳಗಾವಿ: ಮದುವೆ ದಿನ ಕಲ್ಯಾಣಮಂಟಪದಲ್ಲೇ ಸರ್ಕಾರಿ ನೌಕರನೊಬ್ಬ (Government Employee) ವರದಕ್ಷಿಣೆಗೆ (Dowry) ಬೇಡಿಕೆಯಿಟ್ಟು ಹೈಡ್ರಾಮಾ ನಡೆಸಿ ಪೊಲೀಸರ ಅತಿಥಿಯಾದ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ.

    ಬೆಳಗಾವಿ ಡಿಸಿ ಕಚೇರಿಯಲ್ಲಿ ಎಸ್‌ಡಿಸಿ ಆಗಿರುವ ಸಚಿನ್ ಪಾಟೀಲ್ ಹೈಡ್ರಾಮಾ ನಡೆಸಿದ ವರ. ಈತ ಕಲ್ಯಾಣಮಂಟಪದಲ್ಲಿ ನಡೆಯುತ್ತಿದ್ದ ಅರಿಶಿಣ ಕಾರ್ಯಕ್ರಮದಲ್ಲಿ 200 ಗ್ರಾಂ ಚಿನ್ನಾಭರಣ, 10 ಲಕ್ಷ ನಗದು ನೀಡುವಂತೆ ವಧುವಿನ ಮನೆಯವರಿಗೆ ಡಿಮ್ಯಾಂಡ್ ಇಟ್ಟಿದ್ದಾನೆ. ವರನ ಡಿಮ್ಯಾಂಡ್‌ಗೆ ವಧುವಿನ ಸಂಬಂಧಿಕರು, ಮದುವೆಯಲ್ಲಿ ಪಾಲ್ಗೊಂಡ ಜನರು ತಬ್ಬಿಬ್ಬಾಗಿದ್ದಾರೆ. ಅಲ್ಲದೇ ನಾವು ಬಡವರು ಇಷ್ಟೊಂದು ಹಣ, ಚಿನ್ನಾಭರಣ ಎಲ್ಲಿಂದ ಕೊಡೋದು ಎಂದು ವಧುವಿನ ಪೋಷಕರು ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಭೀಕರ ಸರಣಿ ಅಪಘತ – 50 ಮೀಟರ್ ಹಾರಿ ಬಿದ್ದ ಯುವತಿ ಗಂಭೀರ

    ಈ ವೇಳೆ ವರದಕ್ಷಿಣೆ ಕೊಡದ ಹಿನ್ನೆಲೆ ಹಳದಿ ಕಾರ್ಯಕ್ರಮ ನಡೆಯುವಾಗಲೇ ಮಂಟಪದಿಂದ ವರ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ನಾನು ಹಳದಿ ಕಾರ್ಯದಲ್ಲಿ ಪಾಲ್ಗೊಳ್ಳಲ್ಲ ಎಂದು ಹೈಡ್ರಾಮ ನಡೆಸಿದ್ದಾನೆ. ಈ ವೇಳೆ ಮದುವೆ ದಿನ ವಿಚಿತ್ರವಾಗಿ ನಡೆದುಕೊಂಡ ವರನಿಗೆ ಹುಡುಗಿ ಮನೆಯವರು ಗೂಸಾ ನೀಡಿದ್ದು, ಕಲ್ಯಾಣ ಮಂಟಪದಿಂದ ಎಸ್ಕೇಪ್ ಆಗಲು ಯತ್ನಿಸಿದ್ದ ವರನನ್ನು ರೂಂನಲ್ಲೇ ಲಾಕ್ ಮಾಡಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ಹೊಸವರ್ಷದ ಮೊದಲ ದಿನವೇ ಹಿಂಸಾಚಾರ – ಗುಂಡಿನ ದಾಳಿಗೆ ನಾಲ್ವರು ಬಲಿ

    ಏನಿದು ಘಟನೆ?
    ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗ್ರಾಮವೊಂದರ ಯುವತಿ ಜೊತೆಗೆ ಸಚಿನ್ ಪಾಟೀಲ್ ನಿಶ್ಚಿತಾರ್ಥ ಆಗಿತ್ತು. ಇದ್ದ ಒಬ್ಬಳೇ ಹೆಣ್ಣುಮಗಳನ್ನು ಸರ್ಕಾರಿ ನೌಕರ ಎಂಬ ಕಾರಣಕ್ಕೆ ಸಚಿನ್‌ಗೆ ಕೊಡಲು ವಧುವಿನ ಪೋಷಕರು ನಿರ್ಧರಿಸಿದ್ದರು. ಇವರಿಬ್ಬರ ನಿಶ್ಚಿತಾರ್ಥ ಆರು ತಿಂಗಳ ಹಿಂದೆ ನಡೆದಿತ್ತು. ನಿಶ್ಚಿತಾರ್ಥ ಸಮಯದಲ್ಲೇ 25 ಸಾವಿರ ವರದಕ್ಷಿಣೆ, 50 ಗ್ರಾಂ ಚಿನ್ನಾಭರಣ ಕೊಡುವುದಾಗಿ ಮಾತುಕತೆ ಮಾಡಿದ್ದರು. ಇದರ ಜೊತೆಗೆ ಮದುವೆಯನ್ನು ತಾವೇ ಮಾಡಿಕೊಡುವುದಾಗಿ ಹುಡುಗಿ ಪೋಷಕರು ತಿಳಿಸಿದ್ದರು. ಈ ಮಾತುಕತೆಗೆ ಉಭಯ ಕುಟುಂಬಸ್ಥರೂ ಒಪ್ಪಿಗೆ ಸೂಚಿಸಿದ್ದರು. ಡಿಸೆಂಬರ್ 31ಕ್ಕೆ ಖಾನಾಪುರದ ಲೋಕಮಾನ್ಯ ಕಲ್ಯಾಣ ಮಂಟಪದಲ್ಲಿ ಮದುವೆ ನಿಶ್ಚಯವಾಗಿತ್ತು. ಎಲ್ಲಾ ಸಂಬಂಧಿಕರು, ಸ್ನೇಹಿತರಿಗೆ ಆಹ್ವಾನ ಪತ್ರಿಕೆಯನ್ನು ನೀಡಲಾಗಿತ್ತು. ಇದೀಗ ಹಸೆಮಣೆ ಏರಬೇಕಿದ್ದ ವರ ಜೈಲುಪಾಲಾಗಿದ್ದಾನೆ. ಇದನ್ನೂ ಓದಿ: ಮಕ್ಕಳಾಗದ ಮಹಿಳೆಯರನ್ನ ಗರ್ಭಿಣಿ ಮಾಡಿದ್ರೆ 13 ಲಕ್ಷ ರೂ. ಬಹುಮಾನ – ಆಫರ್‌ ಕೊಟ್ಟಿದ್ದ 8 ಮಂದಿ ಅರೆಸ್ಟ್‌

    ಮದುವೆ ದಿನವೇ ಹೈಡ್ರಾಮಾ ಮಾಡಿದ ಸರ್ಕಾರಿ ನೌಕರ ಹಿಂಡಲಗಾ ಜೈಲು ಪಾಲಾಗಿದ್ದು, ಸಚಿನ್ ಪಾಟೀಲ್‌ನನ್ನು ವಶಕ್ಕೆ ಪಡೆದು ಖಾನಾಪುರ ಪೊಲೀಸರು ವಿಚಾರಣೆ ನಡೆಸಿದ್ದಾರೆ. ನಿಶ್ಚಿತಾರ್ಥದ ಬಳಿಕ ಸಚಿನ್ ಯುವತಿ ಜೊತೆಗೆ ದೈಹಿಕ ಸಂಬಂಧ ಬೆಳೆಸಿದ್ದ ಎನ್ನಲಾಗಿದೆ. ಆಗಾಗ ಮನೆಗೆ ಹೋಗಿ ನಾಲ್ಕೈದು ಸಲ ಯುವತಿ ಜೊತೆಗೆ ದೈಹಿಕ ಸಂಪರ್ಕ ಸಾಧಿಸಿದ್ದ ಸಚಿನ್ ಆಕೆಯ ಸಹೋದರರು, ಸಂಬಂಧಿಕರ ಬಳಿ 1 ಲಕ್ಷ ಸಾಲವನ್ನೂ ಪಡೆದಿದ್ದ. ಅಲ್ಲದೇ ಹೆಚ್ಚಿನ ಪ್ರಮಾಣದಲ್ಲಿ ವರದಕ್ಷಿಣೆ ಕೊಡಲು ಒಪ್ಪದಿದ್ದಾಗ ಯುವತಿಗೂ ಜೀವ ಬೆದರಿಕೆ ಹಾಕಿದ್ದಾನೆ. ಇದೀಗ ಸಚಿನ್ ಪಾಟೀಲ್ ವಿರುದ್ಧ ಖಾನಾಪುರ ಠಾಣೆಯಲ್ಲಿ ಮೂರು ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 303 (ಕೊಲೆ ಬೆದರಿಕೆ), ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಐಪಿಸಿ ಸೆಕ್ಷನ್ 420 (ವಂಚನೆ) ಪ್ರಕರಣ ದಾಖಲಾಗಿದೆ. ಸೋಮವಾರ ಪೊಲೀಸರು ಆರೋಪಿ ಸಚಿನ್ ಪಾಟೀಲ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇದನ್ನೂ ಓದಿ: 14ರ ಹುಡುಗಿ ಮೇಲೆ ಪ್ರೀತಿ – ಶಾಲಾ ಬಸ್ ಡ್ರೈವರ್‌ ಪ್ರೇಮದಾಟಕ್ಕೆ ವಿದ್ಯಾರ್ಥಿನಿ ಬಲಿ

  • ಬೆಳಗಾವಿಯಲ್ಲಿ ಭೀಕರ ಸರಣಿ ಅಪಘತ – 50 ಮೀಟರ್ ಹಾರಿ ಬಿದ್ದ ಯುವತಿ ಗಂಭೀರ

    ಬೆಳಗಾವಿಯಲ್ಲಿ ಭೀಕರ ಸರಣಿ ಅಪಘತ – 50 ಮೀಟರ್ ಹಾರಿ ಬಿದ್ದ ಯುವತಿ ಗಂಭೀರ

    ಬೆಳಗಾವಿ: ವೇಗವಾಗಿ ಬಂದ ಕಾರೊಂದು (Car) ಹಿಂಬದಿಯಿಂದ ಸ್ಕೂಟಿಗೆ (Scooty) ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿಯಲ್ಲಿದ್ದ ಯುವತಿ (Young Woman) 50 ಮೀಟರ್ ಹಾರಿ ಬಿದ್ದು ಗಂಭೀರ ಗಾಯಗೊಂಡ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ.

    ಬೆಳಗಾವಿಯ ಬ್ರಹ್ಮನಗರ ನಿವಾಸಿ ದಿವ್ಯಾ ಸುಜಯ್ ಪಾಟೀಲ್ (23) ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವತಿ. ವೇಗವಾಗಿ ಬಂದ ಕಾರು ಹಿಂಬದಿಯಿಂದ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದು, ಸ್ಕೂಟಿ ಜೊತೆಗೆ ಮುಂದಿದ್ದ ಮತ್ತರೆಡು ಕಾರುಗಳಿಗೂ ಗುದ್ದಿದೆ. ಸರಣಿ ಅಪಘಾತದ ಪರಿಣಾಮ ಸ್ಕೂಟಿ ಪೀಸ್ ಪೀಸ್ ಆಗಿದ್ದು, ಮೂರೂ ಕಾರುಗಳು ಜಖಂಗೊಂಡಿದೆ. ಇದನ್ನೂ ಓದಿ: 14ರ ಹುಡುಗಿ ಮೇಲೆ ಪ್ರೀತಿ – ಶಾಲಾ ಬಸ್ ಡ್ರೈವರ್‌ ಪ್ರೇಮದಾಟಕ್ಕೆ ವಿದ್ಯಾರ್ಥಿನಿ ಬಲಿ

    ಗಾಯಾಳು ದಿವ್ಯಾ ಬೆಳಗಾವಿಯ ಮಜಂಗಾವ ಕಡೆಯಿಂದ ಪೀರನವಾಡಿ ಕಡೆಗೆ ಹೊರಟಿದ್ದರು. ಈ ವೇಳೆ ಕಾರು ಚಾಲಕ ಭರತ್ ಚೌಗಲೆ ಎಂಬಾತನಿಂದ ಸರಣಿ ಅಪಘಾತ ನಡೆದಿದೆ. ಸ್ಕೂಟಿ ಹಾಗೂ ಕಾರುಗಳ ನಡುವಿನ ಸರಣಿ ಅಪಘಾತದ ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ದಿವ್ಯಾ ಪಾಟೀಲ್ ಅವರನ್ನು ಸ್ಥಳೀಯರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಕುರಿತು ಬೆಳಗಾವಿ ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಯುವಕನ ಬರ್ಬರ ಹತ್ಯೆ

  • ಫಾಲ್ಸ್ ನೋಡಲು ತೆರಳಿದ್ದ ವಿದ್ಯಾರ್ಥಿಗಳು ಕಾಡಿನಲ್ಲಿ ಕಣ್ಮರೆ – ಅರಣ್ಯ ಇಲಾಖೆ ಸಿಬ್ಬಂದಿಯಿಂದ 9 ಜನರ ರಕ್ಷಣೆ

    ಫಾಲ್ಸ್ ನೋಡಲು ತೆರಳಿದ್ದ ವಿದ್ಯಾರ್ಥಿಗಳು ಕಾಡಿನಲ್ಲಿ ಕಣ್ಮರೆ – ಅರಣ್ಯ ಇಲಾಖೆ ಸಿಬ್ಬಂದಿಯಿಂದ 9 ಜನರ ರಕ್ಷಣೆ

    ಬೆಳಗಾವಿ: ಚಾರಣಕ್ಕೆಂದು (Trekking) ಹೋಗಿ ಕಾಡಿನಲ್ಲಿ ಕಣ್ಮರೆಯಾಗಿದ್ದ ಬೆಳಗಾವಿ (Belagavi) ಕಾಲೇಜುವೊಂದರ 9 ವಿದ್ಯಾರ್ಥಿಗಳನ್ನು (Students) ಕರ್ನಾಟಕ ಹಾಗೂ ಗೋವಾ ಅರಣ್ಯ ಇಲಾಖೆ (Forest Department) ಸಿಬ್ಬಂದಿ ಜಂಟಿ ಕಾರ್ಯಾಚರಣೆ ಮೂಲಕ ರಕ್ಷಣೆ ಮಾಡಿದ್ದಾರೆ.

    ಕಣ್ಮರೆಯಾಗಿದ್ದ 9 ವಿದ್ಯಾರ್ಥಿಗಳು ಕರ್ನಾಟಕ-ಗೋವಾ ಗಡಿಭಾಗದಲ್ಲಿರುವ ಜಲ್ವಾಣಿ ಫಾಲ್ಸ್ (Jalwani Falls) ನೋಡುವ ಸಲುವಾಗಿ ಕಣಕುಂಬಿ ಅರಣ್ಯ ಪ್ರದೇಶದ ಮೂಲಕ ತೆರಳಿದ್ದರು. ಈ ಯುವಕರು ಪಾರವಾಡ ಗ್ರಾಮದಿಂದ ಮೂರು ಕಿಲೋಮೀಟರ್ ಬೈಕ್‌ನಲ್ಲಿ ತೆರಳಿದ್ದು, ಬಳಿಕ ಕಾಲು ದಾರಿಯಲ್ಲೇ ಜಲ್ವಾಣಿ ಫಾಲ್ಸ್‌ಗೆ ತೆರಳಿ ಎಂಜಾಯ್ ಮಾಡಿದ್ದರು. ಶುಕ್ರವಾರ ಸಂಜೆ ಮರಳಿ ಬರುವ ವೇಳೆ ದಾರಿ ತಿಳಿಯದೇ ಯುವಕರು ದಟ್ಟ ಕಾಡಿನಲ್ಲಿ ಕಣ್ಮರೆಯಾಗಿದ್ದಾರೆ. ತಕ್ಷಣವೇ ಯುವಕರು ಸ್ನೇಹಿತರಿಗೆ ಫೋನ್ ಮಾಡಿ ಕಾಡಿನಲ್ಲಿ ಕಣ್ಮರೆಯಾಗಿರುವ ಕುರಿತು ಮಾಹಿತಿ ರವಾನಿಸಿದ್ದಾರೆ. ಇದನ್ನೂ ಓದಿ: ನಿದ್ದೆ ಮಂಪರಿನಲ್ಲಿ ಟೀ ಅಂಗಡಿಗೆ ಟ್ರಕ್‌ ನುಗ್ಗಿಸಿದ ಚಾಲಕ- ಐವರ ದುರ್ಮರಣ

    ಇದಾದ ಬಳಿಕ ರಾತ್ರಿಯಿಡೀ ಕರ್ನಾಟಕ ಹಾಗೂ ಗೋವಾ ಅರಣ್ಯ ಇಲಾಖೆ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ 30 ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ವಿದ್ಯಾರ್ಥಿಗಳನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಕಾಡಿನಿಂದ ಹೊರಗೆ ಕರೆದುಕೊಂಡು ಬಂದಿದ್ದಾರೆ. ಖಾನಾಪುರ ಎಸಿಎಫ್ ಸಂತೋಷ ಚೌಹಾಣ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಇದನ್ನೂ ಓದಿ: ಅಪಾರ್ಟ್‍ಮೆಂಟ್‍ನ 33ನೇ ಫ್ಲೋರ್‌ನಿಂದ ಬಿದ್ದು ಟೆಕ್ಕಿ ದುರ್ಮರಣ

    ಕಣಕುಂಬಿ ಆರ್‌ಎಫ್‌ಒ ಶಿವಕುಮಾರ್, ಭೀಮಗಡ ಆರ್‌ಎಫ್‌ಒ ರಾಕೇಶ್, ಖಾನಾಪುರ ಆರ್‌ಎಫ್‌ಓ ನಾಗರಾಜ್, ಡಿಆರ್‌ಎಫ್‌ಒ ವಿನಾಯಕ್ ಪಾಟೀಲ್, ಗೋವಾದ ಮಹಾದಾಯಿ ವೈಲ್ಡ್ ಲೈಫ್ ಡಿಎಫ್‌ಒ ಆನಂದ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಇನ್ನು ಅಕ್ರಮ ಅರಣ್ಯ ಪ್ರದೇಶ ಪ್ರವೇಶ ಆರೋಪದಡಿ ಗೋವಾ ಅರಣ್ಯ ಇಲಾಖೆಯಿಂದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಲಾಗಿದೆ. ಇದನ್ನೂ ಓದಿ: 5 ಅಸ್ಥಿಪಂಜರ ಪತ್ತೆ ಪ್ರಕರಣ- ತಮ್ಮ ತಮ್ಮ ಮನೆಗಳಿಗೆ ಬೀಗ ಹಾಕಿ ತೆರಳಿದ ಅಕ್ಕಪಕ್ಕದ ನಿವಾಸಿಗಳು