Tag: belagavi

  • ಹಣ ಡಬಲ್ ಮಾಡೋದಾಗಿ ಸತೀಶ್ ಜಾರಕಿಹೊಳಿ ಆಪ್ತನಿಗೆ 25 ಲಕ್ಷ ರೂ. ವಂಚಿಸಿದ್ದ ಗ್ಯಾಂಗ್ ಅರೆಸ್ಟ್

    ಹಣ ಡಬಲ್ ಮಾಡೋದಾಗಿ ಸತೀಶ್ ಜಾರಕಿಹೊಳಿ ಆಪ್ತನಿಗೆ 25 ಲಕ್ಷ ರೂ. ವಂಚಿಸಿದ್ದ ಗ್ಯಾಂಗ್ ಅರೆಸ್ಟ್

    ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿ  (Satish Jarkiholi) ಆಪ್ತನಿಗೆ ಹಣ ಡಬಲ್ ಮಾಡಿ ಕೊಡುವುದಾಗಿ 25 ಲಕ್ಷ ರೂ. ವಂಚನೆ ಮಾಡಿ ಪರಾರಿಯಾಗಿದ್ದ ಏಳು ಜನ ಆರೋಪಿಗಳನ್ನು ಕಾಕತಿ ಪೊಲೀಸರು (Police) ಬಂಧಿಸಿದ್ದಾರೆ.

    ಬಾಗಲಕೋಟೆಯ ಮಹಾಲಿಂಗಪುರದ ಜಾಹ್ನವಿ ಸೇರಿದಂತೆ 7 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಈ ಗ್ಯಾಂಗ್ ಸಚಿವ ಸತೀಶ್ ಜಾರಕಿಹೊಳಿ ಆಪ್ತ ಸಿದ್ಧನಗೌಡ ಬಿರಾದಾರ್ ಅವರಿಗೆ ಕೊಲ್ಹಾಪುರದಿಂದ ವಾಪಸ್ ಬೆಳಗಾವಿಗೆ ಬರುವಾಗ ಬಸ್‍ನಲ್ಲಿ ಪರಿಚಯವಾಗಿರುತ್ತದೆ. ಈ ವೇಳೆ ಜಾಹ್ನವಿ ಸಿದ್ಧನಗೌಡರ ನಂಬರ್ ಪಡೆದು ನಂಬಿಕೆ ಗಳಿಸಿದ್ದಾಳೆ. ಇದನ್ನೂ ಓದಿ: ಬೈಲಹೊಂಗಲದಲ್ಲಿ ಭೀಕರ ರಸ್ತೆ ಅಪಘಾತ – ಇಬ್ಬರ ದುರ್ಮರಣ

    ನಮ್ಮ ಅಂಕಲ್ ಬ್ಯಾಂಕ್‍ನಲ್ಲಿ ಕೆಲಸ ಮಾಡ್ತಿದ್ರು, ಅವರ ಬಳಿ ಸಾಕಷ್ಟು ದುಡ್ದಿದೆ. ಹಣ ಕೊಟ್ಟರೆ ಡಬಲ್ ಮಾಡಿಕೊಡ್ತಿವಿ ಎಂದು ಸಿದ್ಧನಗೌಡ ಮುಂದೆ ಜಾಹ್ನವಿ ಕತೆ ಹೇಳಿದ್ದಾಳೆ. ಇದನ್ನ ನಂಬಿದ ಸಿದ್ಧನಗೌಡ ನವೆಂಬರ್ ತಿಂಗಳಿನಲ್ಲಿ 25 ಲಕ್ಷ ರೂ. ಹಣವನ್ನು ತೆಗೆದುಕೊಂಡು ಕಾಕತಿ ಠಾಣಾ ವ್ಯಾಪ್ತಿಯ ಹೋಟೆಲ್ ಒಂದಕ್ಕೆ ಹೋಗಿದ್ದಾರೆ. ಈ ವೇಳೆ ಆರೋಪಿಗಳು, ಪೊಲೀಸರಂತೆ ರೈಡ್ ಮಾಡಿ ಹಣ ದೋಚಿ ಪರಾರಿಯಾಗಿದ್ದರು.

    ಹಣವನ್ನು ಜಾಹ್ನವಿ ಕೈಗೆ ಇಡುತ್ತಿದ್ದಂತೆ ಅಲ್ಲಿಯೇ ಕುಳಿತಿದ್ದ ದರೋಡೆ ಗ್ಯಾಂಗ್‍ನ ನಕಲಿ ಪೊಲೀಸರು ಮಹಿಳೆಯನ್ನು ಅರೆಸ್ಟ್ ಮಾಡಿದ ರೀತಿಯಲ್ಲಿ ಕರೆದುಕೊಂಡು ಹೋಗಿದ್ದರು. ಇತ್ತ ಹಣ ಕಳೆದುಕೊಂಡ ಸಿದ್ಧನಗೌಡ ಏನು ಮಾಡಬೇಕೆಂದು ತೋಚದೆ ಕಾಕತಿ ಪೆÇಲೀಸ್ ಠಾಣೆಗೆ ಹೋಗಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಅಂತಹ ಪೊಲೀಸರು ಇಲ್ಲಿ ಯಾರೂ ಇಲ್ಲ. ಅಂತಹ ಪ್ರಕರಣ ದಾಖಲಾಗಿಲ್ಲ ಎಂದಿದ್ದಾರೆ. ಈ ವೇಳೆ ಸಿದ್ಧನಗೌಡ ತಾವು ಮೋಸ ಹೋಗಿದ್ದು ಅರಿವಾಗಿದೆ.

    ಈ ಸಂಬಂಧ ಸಿದ್ಧನಗೌಡ ಅವರು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಹೋಟೆಲ್‍ನ ಸಿಸಿಟಿವಿ ದೃಶ್ಯಾವಳಿ ಆಧರಿಸಿ ವಂಚಕರನ್ನು ಬಂಧಿಸಲಾಗಿದ್ದು, ಆರೋಪಿಗಳಿಂದ 6 ಲಕ್ಷ ರೂ. ವಸೂಲಿ ಮಾಡಿದ್ದಾರೆ. ವಿಚಾರಣೆ ವೇಳೆ ಗ್ಯಾಂಗ್‍ನ ಮುಖ್ಯ ಕಾಯಕವೇ ಹಣ ಡಬಲ್ ಮಾಡುವ ಹೆಸರಲ್ಲಿ ಜನರಿಗೆ ವಂಚಿಸುವುದಾಗಿದೆ ಎಂಬ ವಿಚಾರ ಬೆಳಕಿಗೆ ಬಂದಿದೆ. ಇನ್ನೂ ಯಾವೆಲ್ಲ ಪ್ರಕರಣದಲ್ಲಿ ಆರೋಪಿಗಳು ಭಾಗಿಯಾಗಿದ್ದಾರೆ ಎಂದು ತನಿಖೆಯ ಬಳಿಕ ತಿಳಿಯ ಬೇಕಿದೆ. ಇದನ್ನೂ ಓದಿ: ಟೀಚರ್ ಕೆಲಸಕ್ಕೆಂದು ಯುವತಿಯನ್ನು ಕರೆದೊಯ್ದು ನಿರಂತರ ಅತ್ಯಾಚಾರ – ಮೌಲ್ವಿ ಅರೆಸ್ಟ್

  • ಬೈಲಹೊಂಗಲದಲ್ಲಿ ಭೀಕರ ರಸ್ತೆ ಅಪಘಾತ – ಇಬ್ಬರ ದುರ್ಮರಣ

    ಬೈಲಹೊಂಗಲದಲ್ಲಿ ಭೀಕರ ರಸ್ತೆ ಅಪಘಾತ – ಇಬ್ಬರ ದುರ್ಮರಣ

    ಬೆಳಗಾವಿ: ಎರಡು ಕಾರುಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ (Accident) ಇಬ್ಬರು ಸಾವನ್ನಪ್ಪಿ, ನಾಲ್ವರು ಗಂಭೀರ ಗಾಯಗೊಂಡ ಘಟನೆ ಬೈಲಹೊಂಗಲದ (Bailhongal) ಇಂಚಲ ಗ್ರಾಮದಲ್ಲಿ ನಡೆದಿದೆ.

    ಮೃತರನ್ನು ಬೈಲಹೊಂಗಲ ನಗರದ ನಿವಾಸಿ ಮಂಗಲ ಭರಮನಾಯ್ಕರ್ (50), ಚಾಲಕ ಶ್ರೀಶೈಲ ನಾಗನಗೌಡರ್ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ರಾಯನಾಯ್ಕ ಭರಮನಾಯ್ಕರ್ (87), ಗಂಗವ್ವ ಭರಮನಾಯ್ಕರ್ (80), ಮಂಜುಳ ನಾಗನಗೌಡರ್ (30), ಮತ್ತೊಂದು ಕಾರಿನ ಇಂಚಲ ಗ್ರಾಮದ ಚಾಲಕ ಸುಬಾನಿ ವಕ್ಕುಂದ (28) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಚೆಕ್ ಬೌನ್ಸ್ ಕೇಸ್‌ – ಸಚಿವ ಮಧು ಬಂಗಾರಪ್ಪಗೆ 6.96 ಕೋಟಿ ದಂಡ

    ಗೋಕಾಕ್‍ನ ಕೊಣ್ಣೂರು ಪಟ್ಟಣದಿಂದ ಮನೆ ಗೃಹಪ್ರವೇಶಕ್ಕೆ ಬಟ್ಟೆ ಖರೀದಿಸಿ ಮರಳುವಾಗ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಸ್ಥಳಕ್ಕೆ ಮುರಗೋಡ ಠಾಣೆ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ನಾರಾಯಣಗೌಡ ಸೇರಿದಂತೆ ಎಲ್ಲಾ ಕಾರ್ಯಕರ್ತರ ಬಿಡುಗಡೆ ಮಾಡಿ – ಡಿಸಿಎಂಗೆ ಕರವೇ ಮನವಿ

  • ಸಾಲಮನ್ನಾ ಆಸೆಗಾಗಿ ರೈತರು ಬರಗಾಲಕ್ಕೆ ಕಾಯುತ್ತಾರೆ- ಶಿವಾನಂದ್ ಪಾಟೀಲ್ ವಿವಾದಾತ್ಮಕ ಹೇಳಿಕೆ

    ಸಾಲಮನ್ನಾ ಆಸೆಗಾಗಿ ರೈತರು ಬರಗಾಲಕ್ಕೆ ಕಾಯುತ್ತಾರೆ- ಶಿವಾನಂದ್ ಪಾಟೀಲ್ ವಿವಾದಾತ್ಮಕ ಹೇಳಿಕೆ

    ಚಿಕ್ಕೋಡಿ (ಬೆಳಗಾವಿ): ಇತ್ತೀಚೆಗಷ್ಟೆ ರೈತರಿಗೆ (Farmers) ಪರಿಹಾರ ನೀಡಿದ ಬಳಿಕ ರೈತರ ಆತ್ಮಹತ್ಯೆ ಸಂಖ್ಯೆಗಳು ಹೆಚ್ಚಾಗುತ್ತಿವೆ ಎಂದು ರೈತರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ (Shivanand Patil) ಮತ್ತೊಮ್ಮೆ ರೈತರ ಬಗ್ಗೆ ಲಘುವಾಗಿ ಮಾತನಾಡಿ ವಿವಾದ ಸೃಷ್ಟಿಸಿದ್ದಾರೆ.

    ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ಗ್ರಾಮೀಣ ಕೃಷಿ ಸ್ವ ಸಹಾಯ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತಾನಾಡಿರುವ ಸಚಿವರು, ಸಾಲ ಮನ್ನಾದ ಆಸೆಗಾಗಿ ಬರಗಾಲ ಬರಲೆಂದು ರೈತರು ಕಾಯುತ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾವು ಪರಿಹಾರ ಕೊಡೋಕೆ ಶುರು ಮಾಡಿದ್ಮೇಲೆ ರೈತರ ಆತ್ಮಹತ್ಯೆಗಳು ಹೆಚ್ಚಾಗುತ್ತಿವೆ: ಶಿವಾನಂದ ಪಾಟೀಲ್

    ಕೃಷ್ಣಾ ನದಿ ನೀರು ಪುಕ್ಕಟೆ ಆಗಿದೆ. ಕರೆಂಟ್ ಪುಕ್ಕಟೆ ಸಿಗುತ್ತಿದೆ. ಬಹಳಷ್ಟ ಮುಖ್ಯಮಂತ್ರಿಗಳು ಬೆಳೆ ಬೆಳೆಯಲು ಬೀಜನೂ ಕೊಟ್ಟರು, ಗೊಬ್ಬರನೂ ಕೊಟ್ಟರು. ಇನ್ನೂ ರೈತರಿಗೆ ಏನಪ್ಪಾ ಅಂದ್ರೆ ಒಂದು ಆಸೆ ಇರುತ್ತೆ, ಮಗನ್ ಮ್ಯಾಲ ಮ್ಯಾಲ ಬರಗಾಲ ಬೀಳಲಿ ಅಂತ ಹೇಳಿ. ಯಾಕಂದ್ರೆ ಸಾಲ ಮನ್ನಾ ಗುತ್ತೆ ಅಂತಾ. ಈ ರೀತಿಯಾಗಿ ಬಯಸಬಾರದು ಎಂದು ಹೇಳಿದ್ದಾರೆ.

    ಹಿಂದಿನ ಸರ್ಕಾರಗಳು ಸಾಲ ಮನ್ನಾ ಮಾಡಿವೆ. ಆದ್ರೆ ಸರ್ಕಾರ ಸಂಕಷ್ಟದಲ್ಲಿದ್ದಾಗ ಅದು ಕಷ್ಟ ಸಾಧ್ಯ. ಸರ್ಕಾರ ಸದಾ ನರೆವಿಗೆ ಬರಲು ಸಾಧ್ಯವಿಲ್ಲ ಎಂದು ಸಚಿವರು ಮಾತನಾಡಿದ್ದಾರೆ.

  • ಸ್ಮೃತಿ ಇರಾನಿ ಭೇಟಿಯಾದ ಲಕ್ಷ್ಮಿ ಹೆಬ್ಬಾಳ್ಕರ್: ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಿಡುಗಡೆಗೆ ಮನವಿ

    ಸ್ಮೃತಿ ಇರಾನಿ ಭೇಟಿಯಾದ ಲಕ್ಷ್ಮಿ ಹೆಬ್ಬಾಳ್ಕರ್: ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಿಡುಗಡೆಗೆ ಮನವಿ

    ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿಯವರನ್ನು (Smriti Irani) ದೆಹಲಿಯಲ್ಲಿ (Delhi) ಭೇಟಿ ಮಾಡಿ, ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಿಡುಗಡೆ ಕುರಿತಂತೆ ಸುದೀರ್ಘವಾಗಿ ಮಾತುಕತೆ ನಡೆಸಿದ್ದಾರೆ.

    ಕೇಂದ್ರ ಪುರಸ್ಕೃತ ಯೋಜನೆಗಳಾದ ಸಖಿ ಒನ್ ಸ್ಟಾಪ್ ಸೆಂಟರ್, ಸಖಿ ನಿವಾಸ್, ಶಕ್ತಿ ಸದನ್, ಉಜ್ವಲ್ ಹಾಗೂ ಸ್ವಾಧಾರ ಗೃಹ ಯೋಜನೆಗಳ ಅನುದಾನ ಬಿಡುಗಡೆ ಮಾಡಬೇಕು. ಅಲ್ಲದೇ ಐಸಿಡಿಎಸ್ ಯೋಜನೆಯಡಿ ಅಂಗನವಾಡಿಗಳಿಗೆ ನೀಡಬೇಕಿರುವ ಅಕ್ಕಿ ಮತ್ತು ಗೋಧಿ ಕಳೆದ ಒಂದು ವರ್ಷದಿಂದ ಬಿಡುಗಡೆಯಾಗದೆ ಬಾಕಿ ಉಳಿದಿದೆ. ಈ ಕುರಿತು ಕೇಂದ್ರ ಸಚಿವರ ಗಮನಕ್ಕೆ ತಂದ ಅವರು ಕೂಡಲೇ ಬಿಡುಗಡೆಗೊಳಿಸಲು ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ ಬರಗಾಲ ಪರಿಹಾರ ಬಿಡುಗಡೆ ವಿಚಾರವಾಗಿ ಡಿ.23ಕ್ಕೆ ಕೇಂದ್ರದ ಸಭೆ: ಕೃಷ್ಣಬೈರೇಗೌಡ

    ರಾಜ್ಯದಲ್ಲಿ ಹೊಸದಾಗಿ ರಚನೆಯಾಗಿರುವ 51 ತಾಲೂಕುಗಳಿಗೆ ಶಿಶು ಅಭಿವೃದ್ಧಿ ಕಚೇರಿ ಮಂಜೂರು ಮಾಡುವಂತೆ, ಸಿಬ್ಬಂದಿ ನೀಡುವಂತೆ ಹಾಗೂ ಸಕ್ಷಮ್ ಯೋಜನೆಯಡಿಯ ಅಂಗನವಾಡಿ ಕೇಂದ್ರಗಳನ್ನು ಸ್ಮಾರ್ಟ್ ಕ್ಲಾಸ್ ರೂಂ ಆಗಿ ಪರಿವರ್ತಿಸಬೇಕು ಎಂದು ಮನವಿ ಮಾಡಿದರು. ಈ ಮನವಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸ್ಕೃತಿ ಇರಾನಿ, ತಕ್ಷಣ ಈ ಬಗ್ಗೆ ಸಂಬಂಧಿಸಿದಂತೆ ಸಮಗ್ರ ವರದಿ ನೀಡುವಂತೆ ಮತ್ತು ಅನುದಾನ ಬಿಡುಗಡೆಗೆ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದ್ದಾರೆ.

    ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಜೆ.ಸಿ.ಪ್ರಕಾಶ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್ ಈ ವೇಳೆ ಉಪಸ್ಥಿತರಿದ್ದರು. ಇದನ್ನೂ ಓದಿ: ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆ ಕಸರತ್ತು; 2-3 ದಿನದಲ್ಲಿ ಹೈಕಮಾಂಡ್ ತೀರ್ಮಾನ‌ ಮಾಡಲಿದೆ: ಸಿದ್ದರಾಮಯ್ಯ

  • ಪ್ರೇಮಿಗಳು ಪರಾರಿ – ಯುವತಿಯ ಕಡೆಯವರಿಂದ ಯುವಕನ ತಂದೆಗೆ ಥಳಿತ

    ಪ್ರೇಮಿಗಳು ಪರಾರಿ – ಯುವತಿಯ ಕಡೆಯವರಿಂದ ಯುವಕನ ತಂದೆಗೆ ಥಳಿತ

    – ಬೆಳಗಾವಿ ಮಹಿಳೆ ವಿವಸ್ತ್ರ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಹೀನ ಕೃತ್ಯ

    ಬೆಳಗಾವಿ: ಜಿಲ್ಲೆಯ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಹೀನ ಕೃತ್ಯ ಮುನ್ನೆಲೆಗೆ ಬಂದಿದೆ. ಬೆಳಗಾವಿಯಲ್ಲಿ (Belagavi) ಪ್ರೇಮಿಗಳು (Lovers) ಪರಾರಿಯಾದ ಹಿನ್ನೆಲೆ ಯುವತಿಯ ಕಡೆಯವರು ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕನ ತಂದೆಯ (Father) ಶರ್ಟ್ ಕಾಲರ್ ಹಿಡಿದು ಎಳೆದು ತಂದು ನೆಲಕ್ಕೆ ಕೆಡವಿ ಥಳಿಸಿದ ಅಮಾನವೀಯ ಘಟನೆ ನಡೆದಿದೆ.

    ಬೆಳಗಾವಿ ಮಹಾನಗರದಲ್ಲಿ ಹಾಡುಹಗಲೇ ನಡುರಸ್ತೆಯಲ್ಲಿ ಮಾರಣಾಂತಿಕ ಹಲ್ಲೆ ನಡೆಸಿ ಅಪಹರಣಕ್ಕೆ ಯತ್ನಿಸಿದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಯುವಕನ ತಂದೆಯನ್ನು ಅಮಾನವೀಯವಾಗಿ ಹಲ್ಲೆ ಮಾಡಿರುವ ದೃಶ್ಯ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಯವತಿಯನ್ನು ತಮಗೆ ಒಪ್ಪಿಸುವಂತೆ ಆಗ್ರಹಿಸಿ ಮೂವರು ಮಹಿಳೆಯರು ಸೇರಿದಂತೆ 8 ಜನರಿಂದ ಯುವಕನ ತಂದೆಗೆ ಜೀವ ಬೆದರಿಕೆಯೊಡ್ಡಿದ್ದು, ಮೊಬೈಲ್ ಕಸಿದುಕೊಂಡು ಹಲ್ಲೆ (Assault) ನಡೆಸಿದ್ದಾರೆ. ಅಲ್ಲದೇ ಅಪಹರಣಕ್ಕೆ ಯತ್ನಿಸಿರುವುದಾಗಿ ಯುವಕನ ತಂದೆ ಹೇಳಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲೇ ಕನ್ನಡಿಗರ ಮೇಲೆ ದೌರ್ಜನ್ಯ – ಕನ್ನಡ ಧ್ವಜ ಅಳವಡಿಸಿದ್ದಕ್ಕೆ ಯುವಕರಿಗೆ ಥಳಿಸಿದ ಮರಾಠ ಪುಂಡರು

    ಘಟನೆಯ ಕುರಿತು ಯುವಕನ ತಂದೆ ಪೊಲೀಸ್ ಠಾಣೆ ಮೆಟ್ಟಿಲೇರಿ ದೂರು ದಾಖಲಿಸಿದ್ದಾರೆ. ತಕ್ಷಣ ಕಾರ್ಯಪ್ರವತ್ತರಾದ ಬೆಳಗಾವಿ ನಗರ ಪೊಲೀಸರು 8 ಜನರನ್ನು ಬಂಧಿಸಿ ಯುವಕನ ತಂದೆಗೆ ರಕ್ಷಣೆ ನೀಡಿ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ. ಇದನ್ನೂ ಓದಿ: ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ವ್ಯಕ್ತಿ ಸ್ಥಳದಲ್ಲೇ ಸಾವು

  • ಕರ್ನಾಟಕದಲ್ಲೇ ಕನ್ನಡಿಗರ ಮೇಲೆ ದೌರ್ಜನ್ಯ – ಕನ್ನಡ ಧ್ವಜ ಅಳವಡಿಸಿದ್ದಕ್ಕೆ ಯುವಕರಿಗೆ ಥಳಿಸಿದ ಮರಾಠ ಪುಂಡರು

    ಕರ್ನಾಟಕದಲ್ಲೇ ಕನ್ನಡಿಗರ ಮೇಲೆ ದೌರ್ಜನ್ಯ – ಕನ್ನಡ ಧ್ವಜ ಅಳವಡಿಸಿದ್ದಕ್ಕೆ ಯುವಕರಿಗೆ ಥಳಿಸಿದ ಮರಾಠ ಪುಂಡರು

    ಚಿಕ್ಕೋಡಿ: ಕರ್ನಾಟಕದಲ್ಲಿಯೇ (Karnataka) ಕನ್ನಡಿಗರ ಮೇಲೆ ದೌರ್ಜನ್ಯ ನಡೆದಿದೆ. ಕನ್ನಡ ಧ್ವಜ (Kannada Flag) ಅಳವಡಿಸಿದ್ದಕ್ಕೆ ಕನ್ನಡಿಗ (Kannadiga) ಯುವಕರಿಗೆ ಮರಾಠ (Marathas) ಪುಂಡರು ಥಳಿಸಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ (Hukkeri) ತಾಲೂಕಿನ ಅಂಕಲಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದಲ್ಲಿ ಶಿವಾಜಿ ಪುತ್ಥಳಿ ಬಳಿ ಅಳವಡಿಸಿದ್ದ ಕನ್ನಡ ಧ್ವಜವನ್ನು ತೆರವು ಮಾಡುವ ವಿಚಾರಕ್ಕೆ ಗಲಾಟೆ ಉಂಟಾಗಿತ್ತು. ಅಳವಡಿಸಿದ್ದ ಧ್ವಜವನ್ನು ತೆರವು ಮಾಡುವಂತೆ ಮರಾಠ ಪುಂಡರು ಕನ್ನಡಿಗರಿಗೆ ಥಳಿಸಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ಕೆಲ ಮರಾಠ ಸಮುದಾಯದವರು ಕನ್ನಡಿಗರ ಮೇಲೆ ಹಲ್ಲೆ ಮಾಡುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ವೀಡಿಯೋ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಎಚ್ಚೆತ್ತಿದ್ದಾರೆ. ಇದನ್ನೂ ಓದಿ: ಕರ್ತವ್ಯ ಲೋಪ ಆರೋಪ – ಮೂವರು ಪಿಎಸ್‌ಐ ಸೇರಿ ಐವರು ಪೊಲೀಸರ ಅಮಾನತು

    ಈ ಬಗ್ಗೆ 5 ಮರಾಠ ಪುಂಡರ ವಿರುದ್ಧ ಸಂಕೇಶ್ವರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಉಳಿದ ನಾಲ್ವರು ಪರಾರಿಯಾಗಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಶಾಸಕರ ಬ್ಯಾನರ್ ಪ್ರೇಮ – ಪಂಚಾಯತ್‌ನಿಂದ ರಸ್ತೆ ದುರಸ್ತಿ, ಬ್ಯಾನರ್ ಶಾಸಕರದ್ದು

  • ಸಿಲಿಂಡರ್ ಸ್ಫೋಟ – ಮನೆಯಲ್ಲಿದ್ದ 2 ಲಕ್ಷ ನಗದು, ಚಿನ್ನಾಭರಣ ಭಸ್ಮ

    ಸಿಲಿಂಡರ್ ಸ್ಫೋಟ – ಮನೆಯಲ್ಲಿದ್ದ 2 ಲಕ್ಷ ನಗದು, ಚಿನ್ನಾಭರಣ ಭಸ್ಮ

    ಬೆಳಗಾವಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು (Cylinder Explosion) ಮನೆಯಲ್ಲಿದ್ದ 2 ಲಕ್ಷ ರೂ. ನಗದು (Money) ಹಾಗೂ ಚಿನ್ನದ ಆಭರಣಗಳು ಅಗ್ನಿಗೆ ಆಹುತಿಯಾದ ಘಟನೆ ಮೂಡಲಗಿಯ ಹುಣಶ್ಯಾಳ ಪಿವೈ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಗಂಗಪ್ಪ ಹಣಮಂತ ಕುರುಬರ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಕುಟುಂಬದ ಸದಸ್ಯರು ಹೊಲಕ್ಕೆ ತೆರಳಿದ್ದ ವೇಳೆ ಸಿಲಿಂಡರ್ ಆಕಸ್ಮಿಕವಾಗಿ ಸ್ಫೋಟಗೊಂಡಿದೆ. ಸ್ಫೋಟದಿಂದಾಗಿ ಮನೆ ಹೊತ್ತಿ (Fire Accident) ಉರಿದಿದ್ದು, ಮನೆಯಲ್ಲಿದ್ದ ವಸ್ತುಗಳು ಸೇರಿದಂತೆ 2 ಲಕ್ಷ ರೂ. ಹಣ ಸೇರಿದಂತೆ ಚಿನ್ನದ ಆಭರಣಗಳು ಸುಟ್ಟು ಕರಕಲಾಗಿದೆ. ಇದನ್ನೂ ಓದಿ: ಹಾಸ್ಟೆಲ್‍ಗೆ ತೆರಳುವಾಗ ಅಪಘಾತವಾಗಿ 8 ವಿದ್ಯಾರ್ಥಿಗಳಿಗೆ ಗಾಯ – ಕ್ಯಾಂಪಸ್‍ನಲ್ಲೇ ವಸತಿನಿಲಯಕ್ಕೆ ಆಗ್ರಹ

    ಸಿಲಿಂಡರ್ ಸ್ಫೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ವೇಳೆ ಮನೆಯಲ್ಲಿ ಯಾರೂ ಇಲ್ಲದಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

    ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಹಿಟ್&ರನ್‌ಗೆ ವೃದ್ಧೆ ಬಲಿ

  • ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ- ಸಿಐಡಿಗೆ ಹಸ್ತಾಂತರ

    ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ- ಸಿಐಡಿಗೆ ಹಸ್ತಾಂತರ

    ಬೆಳಗಾವಿ: ಜಿಲ್ಲೆಯ ವಂಟಮೂರಿ ಗ್ರಾಮದ ಮಹಿಳೆಯೊಬ್ಬರನ್ನು (Woman) ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಧಿಕೃತವಾಗಿ ಬೆಂಗಳೂರಿನ ಸಿಐಡಿ (Woman) ಕಚೇರಿಗೆ ತೆರಳಿ ಕೇಸ್‍ನ ಕಡತಗಳನ್ನು ತನಿಖಾಧಿಕಾರಿ ಹಾಗೂ ಎಸಿಪಿ ಗಿರೀಶ್ ಅವರಿಗೆ ಹಸ್ತಾಂತರಿಸಲಾಗಿದೆ.

    ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಗದಗದಲ್ಲಿ ಮಾತನಾಡಿದ್ದು, ತನಿಖೆಯನ್ನು ಎಲ್ಲಿಗೆ ಬೇಕಾದರೂ ವಹಿಸಲು ತಯಾರಾಗಿದ್ದೇನೆ. ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಪ್ರಕರಣದ ತನಿಖೆ ಮಾಡಲು ನಮ್ಮ ಪೊಲೀಸರು ಸಮರ್ಥರಿದ್ದಾರೆ. ಸಾಕ್ಷ್ಯ ಸಂಗ್ರಹಿಸಿ ಶಿಕ್ಷೆ ಕೊಡಿಸಲು ಪೊಲೀಸರೇ ತಯಾರಾಗಿದ್ದಾರೆ ಎಂದು ಹೇಳಿದ್ದರು. ಇದನ್ನೂ ಓದಿ: ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ- ಸಂತ್ರಸ್ತೆ ಭೇಟಿ ನಿಷೇಧಿಸಿದ ಹೈಕೋರ್ಟ್

    ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ತಂಡ ಬೆಳಗಾವಿಗೆ ಆಗಮಿಸಿದೆ. ಡಿಎಸ್ಪಿ ಮಟ್ಟದ ಅಧಿಕಾರಿಗಳ ತಂಡದಿಂದ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಸೋಮವಾರ ಬೆಳಗಾವಿಗೆ ಡಿಐಜಿ ಸುನೀಲ್ ಕುಮಾರ್ ಮೀನಾ ಆಗಮಿಸಲಿದ್ದಾರೆ.

    ಪ್ರಕರಣದ ತನಿಖಾಧಿಕಾರಿ ಎಸಿಪಿ ಗಿರೀಶ್ ಅವರನ್ನು ಕರೆಸಿಕೊಂಡು ಘಟನೆ ಕುರಿತು ಸಂಪೂರ್ಣ ಮಾಹಿತಿ ಸಂಗ್ರಹಿಸಿದ್ದಾರೆ. ಘಟನೆ ನಡೆದ ಬಳಿಕ ಪೊಲೀಸರು ಏನೆಲ್ಲಾ ಮಾಡಿದ್ದಾರೆ. ಬಳಿಕ ಯಾವೆಲ್ಲ ಕ್ರಮ ಕೈಕೊಂಡಿದ್ದಾರೆ ಎಂದು ಮಾಹಿತಿ ಪಡೆದುಕೊಂಡಿದ್ದು, ಪ್ರಕರಣದ ಕುರಿತಾಗಿ ಮತ್ತೆ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಉಳಿದ ಇಬ್ಬರಿಗೆ ಹುಡುಕಾಟ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

    ಪ್ರಕರಣ ನಡೆದ ಬಳಿಕ ಘಟನಾ ಸ್ಥಳಕ್ಕೆ ಹೋಗಲು ತಡ ಮಾಡಿದ್ದ ಕಾಕತಿ ಸಿಪಿಐ ವಿಜಯ್ ಸಿನ್ನೂರ್ ಅವರನ್ನ ಅಮಾನತು ಮಾಡಲಾಗಿದೆ. ಇದನ್ನೂ ಓದಿ: ಪ್ರೀತಿಸುತ್ತಿದ್ದ ಯುವತಿಯೊಂದಿಗೆ ಯುವಕ ಪರಾರಿಯಾಗಿದ್ದಕ್ಕೆ ತಾಯಿಯ ವಿವಸ್ತ್ರಗೊಳಿಸಿ ಹಲ್ಲೆ

  • ರಾತ್ರಿ ವೇಳೆ ಭೀಕರ ಸಿಲಿಂಡರ್ ಸ್ಫೋಟ – ಹಸುಗೂಸು ಸೇರಿ ಒಂದೇ ಕುಟುಂಬದ 7 ಮಂದಿಗೆ ಗಂಭೀರ ಗಾಯ

    ರಾತ್ರಿ ವೇಳೆ ಭೀಕರ ಸಿಲಿಂಡರ್ ಸ್ಫೋಟ – ಹಸುಗೂಸು ಸೇರಿ ಒಂದೇ ಕುಟುಂಬದ 7 ಮಂದಿಗೆ ಗಂಭೀರ ಗಾಯ

    ಬೆಳಗಾವಿ: ರಾತ್ರಿ ವೇಳೆ ಭೀಕರ ಸಿಲಿಂಡರ್ ಸ್ಫೋಟ (Cylinder Blast) ಸಂಭವಿಸಿದ ಪರಿಣಾಮ 9 ತಿಂಗಳ ಮಗು ಸೇರಿದಂತೆ ಒಂದೇ ಕುಟುಂಬದ 7 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಗೋಕಾಕ್ (Gokak) ತಾಲೂಕಿನ ಅಕ್ಕತಂಗೇರಹಾಳ ಗ್ರಾಮದಲ್ಲಿ ನಡೆದಿದೆ.

    ರಾತ್ರಿ ಮನೆಮಂದಿಯೆಲ್ಲಾ ಮಲಗಿದ್ದ ವೇಳೆ ಮನೆಯಲ್ಲಿದ್ದ ಸಿಲಿಂಡರ್ ಗ್ಯಾಸ್ (Gas) ಸೋರಿಕೆಯಾಗಿತ್ತು. ಈ ವೇಳೆ ಗ್ಯಾಸ್ ವಾಸನೆಗೆ ಮೊಬೈಲ್ ಟಾರ್ಚ್ ಆನ್ ಮಾಡಿ ನೋಡಲು ಹೋದಾಗ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ರಭಸಕ್ಕೆ ಮನೆಯ ಹಂಚು ಹಾರಿ ಹೋಗಿದೆ. ಮನೆಯ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಇದನ್ನೂ ಓದಿ: 353ಕ್ಕೂ ಹೆಚ್ಚು ಮಕ್ಕಳು ಶಾಲೆಗೆ ಗುಡ್‌ಬೈ – ಬಡತನ, ಪೋಷಕರ ನಿರಾಸಕ್ತಿಯೇ ಕಾರಣ

    ಘಟನೆಯಲ್ಲಿ ರಾಜಶ್ರೀ ನಿರ್ವಾಣಿ (42), ಅಶೋಕ ನಿರ್ವಾಣಿ (45), ಸೋಮನಗೌಡ (44), ದೀಪಾ (42), ನವೀನ (14), ವಿದ್ಯಾ (13), ಬಸನಗೌಡ ನಿರ್ವಾಣಿ (9 ತಿಂಗಳು) ಗಾಯಗೊಂಡಿದ್ದಾರೆ. ಈ ಪೈಕಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದವರಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ದೇಶದಲ್ಲಿ ಮತ್ತೆ ಕೊರೊನಾ ಆತಂಕ; ಪಕ್ಕದ ಕೇರಳದಲ್ಲಿ ಜೆಎನ್.1 ಸೋಂಕು ಪತ್ತೆ – ಕರ್ನಾಟಕದಲ್ಲೂ ಹೈ ಅಲರ್ಟ್

  • ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ- ಸಂತ್ರಸ್ತೆಗೆ 2 ಎಕರೆ ಜಮೀನು ಮಂಜೂರು

    ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ- ಸಂತ್ರಸ್ತೆಗೆ 2 ಎಕರೆ ಜಮೀನು ಮಂಜೂರು

    ಬೆಳಗಾವಿ: ಇಲ್ಲಿನ ಹೊಸ ವಂಟಮುರಿ ಗ್ರಾಮದಲ್ಲಿ ಇತ್ತೀಚೆಗೆ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಗೆ ಸರ್ಕಾರವು 2.03 ಎಕರೆ ಜಮೀನು ಮಂಜೂರು ಮಾಡಿ ಆದೇಶಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ( Sathish Jarakiholi) ತಿಳಿಸಿದ್ದಾರೆ.

    ದೌರ್ಜನ್ಯಕ್ಕೆ ಒಳಗಾಗಿರುವ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸ ವಂಟಮುರಿ (Hosavantamuri Woman) ಗ್ರಾಮದ ಸಂತ್ರಸ್ತ ಮಹಿಳೆಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಭೂ ಒಡೆತನ ಯೋಜನೆಯಡಿ ಜಮೀನು ಮಂಜೂರು ಮಾಡಿ ಆದೇಶಿಸಲಾಗಿರುತ್ತದೆ.

    ಪರಿಶಿಷ್ಟ ವರ್ಗಗಳ ಕಲ್ಯಾಣ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಚಿವರಾದ ಬಿ.ನಾಗೇಂದ್ರ ಅವರು ವಿಶೇಷ ಪ್ರಕರಣವೆಂದು ಪರಿಗಣಿಸಿ ತಕ್ಷಣವೇ ಜಮೀನು ಮಂಜೂರಾತಿಗೆ ನಿರ್ದೇಶನ ನೀಡಿದ್ದರು. ಈ ಹಿನ್ನೆಲೆಯಲ್ಲಿ ನೊಂದ ಮಹಿಳೆಗೆ ಆರ್ಥಿಕ ಸ್ಥಿರತೆ ಒದಗಿಸುವ ದೃಷ್ಟಿಯಿಂದ ವಿಶೇಷ ಪ್ರಕರಣವೆಂದು ಪರಿಗಣಿಸಿ ಜಮೀನು ಮಂಜೂರು ಮಾಡಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಅನುಮೋದನೆ ನೀಡಿರುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

    2.03 ಎಕರೆ ಜಮೀನು ಮಂಜೂರಾತಿ ಜತೆಗೆ ಸರ್ಕಾರವು ಈಗಾಗಲೇ ಐದು ಲಕ್ಷ ರೂಪಾಯಿ ಪರಿಹಾರವನ್ನು ಕೂಡ ಘೋಷಿಸಿರುತ್ತದೆ.