Tag: belagavi

  • 3 ಮಕ್ಕಳ ತಂದೆ, 2 ಮಕ್ಕಳ ತಾಯಿ ಲವ್ವಿಡವ್ವಿ – ಪ್ರೇಯಸಿಯನ್ನ ಇರಿದು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿ

    3 ಮಕ್ಕಳ ತಂದೆ, 2 ಮಕ್ಕಳ ತಾಯಿ ಲವ್ವಿಡವ್ವಿ – ಪ್ರೇಯಸಿಯನ್ನ ಇರಿದು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿ

    – 9 ಬಾರಿ ಪ್ರೇಯಸಿಗೆ ಇರಿದ ಪಾಗಲ್‌

    ಬೆಳಗಾವಿ:‌ ತನ್ನ ವಿವಾಹಿತ ಪ್ರೇಯಸಿಗೆ (Lover) 9 ಬಾರಿ ಚಾಕುವಿನಿಂದ ಇರಿದು ಕೊಂದ ಬಳಿಕ ಪಾಗಲ್‌ ಪ್ರೇಮಿ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ.

    ರೇಷ್ಮಾ (29), ಆನಂದ ಸತಾರ್‌ನನ್ನು (31) ಮೃತ ಪ್ರೇಮಿಗಳು. ಆನಂದ ಮೂರು ಮಕ್ಕಳ ತಂದೆಯಾಗಿದ್ದರೆ, ರೇಷ್ಮಾ 2 ಮಕ್ಕಳ ತಾಯಿಯಾಗಿದ್ದಳು. ಇದನ್ನೂ ಓದಿ: ಬೆಂಗಳೂರು | ನಗರ್ತಪೇಟೆಯಲ್ಲಿ ಭೀಕರ ಅಗ್ನಿ ದುರಂತ – ಓರ್ವ ಸುಟ್ಟು ಕರಕಲು, ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

    ಪಾಗಲ್‌ ಪ್ರೇಮಿ ಆನಂದ ಮದ್ವೆ ಬಳಿಕವೂ ವಿವಾಹಿತೆ ರೇಷ್ಮಾ ಜೊತೆಗೆ ಅನೈತಿಕ ಸಂಬಂದ ಹೊಂದಿದ್ದ. ನನ್ನ ಹೆಂಡ್ತಿಯಂತೆ ನೀನೂ ನನ್ನ ಮಾತು ಕೇಳಬೇಕು ಅಂತ ಆಕೆಯನ್ನ ಪೀಡಿಸುತ್ತಲೇ ಇದ್ದ. ಇದೀಗ ಪ್ರೇಯಸಿಯನ್ನ 9 ಬಾರಿ ಇರಿದು ಕೊಂದಿದ್ದಾನೆ. ಆಕೆ ಸಾವನಪ್ಪುತ್ತಿದ್ದಂತೆ ಭಯಗೊಂಡು ತಾನೂ ಅದೇ ಚಾಕುವಿನಿಂದ ಚುಚ್ಚಿಕೊಂಡಿದ್ದಾನೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಆನಂದನನ್ನ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೂ ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಆನಂದ ಸಾವನ್ನಪ್ಪಿದ್ದಾನೆ.

    ಆಂಟಿ-ಅಂಕಲ್‌ ಲವ್ವಿಡವ್ವಿ ಸ್ವಾರಸ್ಯ ಏನು?
    ಆನಂದ ಮದುವೆ ಬಳಿಕವೂ ರೇಷ್ಮಾ ಜೊತೆಗೆ 3 ವರ್ಷಗಳಿಂದ ಸಲುಗೆ ಹೊಂದಿದ್ದ. ಒಂದೇ ಊರಿನ, ಒಂದೇ ಕಾಲೊನಿಯ ಇಬ್ಬರ ಮಧ್ಯೆ ಹಲವು ವರ್ಷಗಳಿಂದ ಸ್ನೇಹ ಇತ್ತು. ಮದುವೆ ಬಳಿಕ ಸಲುಹೆ ಹೆಚ್ಚಾಗಿ ಅದು ಅಕ್ರಮ ಸಂಬಂಧಕ್ಕೆ ತಿರುಗಿತ್ತು. ಕಳೆದ ತಿಂಗಳಷ್ಟೇ ರೇಷ್ಮಾ ಪತಿ ಕೈಗೆ ಇಬ್ಬರೂ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದರು. ಈ ಬಗ್ಗೆ ನಂದಗಡ ಪೊಲೀಸರಿಗೆ ಮಾಹಿತಿ ರೇಷ್ಮಾ ಪತಿ ಶೀವು ತಿರವಿರ ಮಾಹಿತಿ ನೀಡಿದ್ದ. ಇದನ್ನೂ ಓದಿ: ಈ ದೇಶಗಳಲ್ಲಿ ಬೀದಿ ನಾಯಿಗಳಿಗೆ ಗ್ಯಾಸ್‌ ಚೇಂಬರ್‌, ದಯಾಮರಣ ಶಿಕ್ಷೆ – ಯಾವ ದೇಶದಲ್ಲಿ ಏನು ಕಾನೂನು?

    ಪೊಲೀಸರ ವಾರ್ನ್ ಬಳಿಕ ಆನಂದನಿಂದ ರೇಷ್ಮಾ ಅಂತರ ಕಾಯ್ದುಕೊಂಡಿದ್ದಳಿ. ಇದರಿಂದ ಸಿಟ್ಟಿಗೆದ್ದ ಪಾಗಲ್‌ ಆನಂದ ಮನೆಯ ಹಿಂಬಾಗಿಲಿನಿಂದ ಹೋಗಿ ರೇಷ್ಮಾಳನ್ನ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ರೇಷ್ಮಾ ಪುತ್ರಿಯ ಎದುರೇ ಚಾಕುವಿನಿಂದ 9 ಸಲ ಚುಚ್ಚಿ ಹತ್ಯೆಗೈದಿದ್ದಾನೆ. ಬಳಿಕ ಹೆದರಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ:ಉಕ್ರೇನ್‌ ಜೊತೆಗಿನ ಯುದ್ಧ ಕೊನೆಗೊಳಿಸದ  ಹೊರತು ನಮ್ಮ ನಡ್ವೆ ಒಪ್ಪಂದವಿಲ್ಲ – ಪುಟಿನ್‌ಗೆ ಟ್ರಂಪ್‌ ಸ್ಟ್ರೈಟ್‌ ಹಿಟ್‌

  • ಯಲ್ಲಮ್ಮ ದೇವಿ ದೇಗುಲ ಖಾಸಗಿ ಆಸ್ತಿಯಲ್ಲ – ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಿದ ಸುಪ್ರೀಂ

    ಯಲ್ಲಮ್ಮ ದೇವಿ ದೇಗುಲ ಖಾಸಗಿ ಆಸ್ತಿಯಲ್ಲ – ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಿದ ಸುಪ್ರೀಂ

    ನವದೆಹಲಿ: ಬೆಳಗಾವಿ (Belagavi) ಜಿಲ್ಲೆಯ ರಾಯಭಾಗ ತಾಲ್ಲೂಕಿನ ಜಲಾಲ್ಪುರ ಗ್ರಾಮದ ಐತಿಹಾಸಿಕ ಯಲ್ಲಮ್ಮ ದೇವಿ ದೇಗುಲವನ್ನು ಖಾಸಗಿ ಆಸ್ತಿ ಎಂದು ತೀರ್ಮಾನಿಸಿ ಹೈಕೋರ್ಟ್ (Karnataka Highcourt) ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಗೊಳಿಸಿದೆ.

    ಈ ಕುರಿತ ಅರ್ಜಿಯ ವಿಚಾರಣೆ ನಡೆಸಿದ ಎಂ.ಎಂ ಸುಂದರೇಶ್ ಮತ್ತು ಕೋಟೇಶ್ವರ ಸಿಂಗ್ ಅವರ ಪೀಠವು, ಸಾರ್ವಜನಿಕರ ಪೂಜೆಗೆ ಮುಕ್ತವಾಗಿರುವ ಪ್ರಾಚೀನ ದೇವಾಲಯಗಳು ಸಾಮಾನ್ಯವಾಗಿ ಸಾರ್ವಜನಿಕ ದೇಗುಲಗಳು ಎಂಬ ಭಾವನೆಯಿದೆ ಎಂದು ಹೇಳಿದೆ. ಇದನ್ನೂ ಓದಿ: 3ನೇ ಬಾರಿಗೆ ಪರಪ್ಪನ ಅಗ್ರಹಾರ ಸೇರಿದ ದರ್ಶನ್‌

    ಇದನ್ನು ನಿರಾಕರಿಸಲು ಬಲವಾದ ಪುರಾವೆಗಳ ಅಗತ್ಯವಿದೆ ಎಂದು ಹೇಳಿತಲ್ಲದೇ, ಈ ಕುರಿತು ದಾಖಲೆಗಳು ಮತ್ತು ಸಾಕ್ಷ್ಯಗಳನ್ನು ಪರಿಶೀಲಿಸಿ ಹೊಸದಾಗಿ ನಿರ್ಧರಿಸುವಂತೆ ಪೀಠವು ಹೈಕೋರ್ಟ್‌ಗೆ ನಿರ್ದೇಶಿಸಿ, ಅರ್ಜಿಯನ್ನು ಹಿಂದಿರುಗಿಸಿತು. ಇದನ್ನೂ ಓದಿ: ದರ್ಶನ್ ಮತ್ತೆ ಜೈಲಿಗೆ; ಚಿತ್ರರಂಗಕ್ಕೆ ದೊಡ್ಡ ನಷ್ಟ ಎಂದ ನಟಿ ಉಮಾಶ್ರೀ

  • Belagavi | 500 ರೂ.ಗಾಗಿ ತಾಯಿ ಎದುರೇ ಸ್ನೇಹಿತನ ಕೊಲೆ

    Belagavi | 500 ರೂ.ಗಾಗಿ ತಾಯಿ ಎದುರೇ ಸ್ನೇಹಿತನ ಕೊಲೆ

    ಬೆಳಗಾವಿ: 500 ರೂ.ಗಾಗಿ (Money) ತಾಯಿ ಎದುರೇ ತನ್ನ ಸ್ನೇಹಿತನನ್ನು ಕೊಲೆ ಮಾಡಿದ ಘಟನೆ ಬೆಳಗಾವಿ (Belagavi) ತಾಲೂಕಿನ ಯಳ್ಳೂರು (Yellur) ಗ್ರಾಮದಲ್ಲಿ ನಡೆದಿದೆ.

    ಯಳ್ಳೂರು ಗ್ರಾಮದ ನಿವಾಸಿ ಹುಸೇನ್ ತಾಶೇವಾಲೆ (45) ಮೃತ ದುರ್ದೈವಿ. ಮಿಥುನ್ ಕುಬಚಿ, ಮನೋಜ್ ಇಂಗಳೇ ಕೊಲೆ ಆರೋಪಿಗಳು. ಗುಜುರಿ ಸಾಮಗ್ರಿ ವಿಚಾರಕ್ಕೆ ಸ್ನೇಹಿತರ ಮಧ್ಯೆ ಜಗಳವಾಗಿ ಮನಸ್ತಾಪಗಳಾಗಿತ್ತು. ಮೃತ ಹುಸೇನ್ ಕೊಲೆ ಆರೋಪಿಗಳಾದ ಮಿಥುನ್ ಮತ್ತು ಮನೋಜ್‌ಗೆ 500 ರೂ. ಕೊಡಬೇಕಿತ್ತು. ಹಣ ಕೇಳಲು ಹುಸೇನ್ ಮನೆಗೆ ಇಬ್ಬರೂ ಹೋಗಿದ್ದರು. ಈ ವೇಳೆ ಮೂವರ ಮಧ್ಯೆ ಗಲಾಟೆಯಾಗಿದೆ. ಇದನ್ನೂ ಓದಿ: Mysuru Dasara | ಅಂಬಾರಿ ಹೊರುವ ಅಭಿಮನ್ಯುಗಿಂತ ಭೀಮನೇ ಬಲಶಾಲಿ

    ಈ ವೇಳೆ ಹುಸೇನ್ ಹೊಟ್ಟೆಯ ಭಾಗಕ್ಕೆ ಕೈಯಿಂದ ಇಬ್ಬರೂ ಆರೋಪಿಗಳು ಗುದ್ದಿದ್ದಾರೆ. ಹೊಟ್ಟೆಯ ಭಾಗಕ್ಕೆ ಬಲವಾಗಿ ಪೆಟ್ಟು ಬಿದ್ದಿದ್ದರಿಂದ ಹುಸೇನ್ ಸಾವನ್ನಪ್ಪಿದ್ದಾನೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ ನಡೆದಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್; ಇಂದು ಪಾಯಿಂಟ್ 17ರಲ್ಲಿ ಉತ್ಖನನ – ಸಿಗುತ್ತಾ ಬುರುಡೆ, ಮೂಳೆ ಕುರುಹು?

  • ಬೆಂಗಳೂರು-ಬೆಳಗಾವಿ ವಂದೇಭಾರತ್‌ ರೈಲಿಗೆ ಮೋದಿ ಹಸಿರು ನಿಶಾನೆ

    ಬೆಂಗಳೂರು-ಬೆಳಗಾವಿ ವಂದೇಭಾರತ್‌ ರೈಲಿಗೆ ಮೋದಿ ಹಸಿರು ನಿಶಾನೆ

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮೆಜೆಸ್ಟಿಕ್‌ ಬಳಿ ಇರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಿಂದ ಮೂರು ವಂದೇಭಾರತ್‌ ರೈಲಿಗೆ (Vande Bharat Express) ಹಸಿರು ನಿಶಾನೆ ತೋರಿಸಿದ್ದಾರೆ.

    ಇದೇ ಸಮಯದಲ್ಲಿ ಅಮೃತ್‍ಸರ್ ದಿಂದ ಶ್ರೀ ಮಾತಾ ವೈಷ್ಣೋದೇವಿ ಕತ್ರಾ ಹಾಗೂ ನಾಗ್‍ಪುರ್ (ಅಜ್ನಿ) ಯಿಂದ ಪುಣೆಯ ವರೆಗೆ ಚಲಿಸಲಿರುವ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲುಗಳಿಗೂ ಸಹ ವರ್ಚುವಲ್ ಮೂಲಕ ಚಾಲನೆ ನೀಡಿದರು.

    ಈ ಸಮಯದಲ್ಲಿ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಸೇರಿದಂತೆ ಗಣ್ಯರು ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಮೋದಿ Live – 3 ವಂದೇ ಭಾರತ್‌ ರೈಲುಗಳಿಗೆ ಮೋದಿ ಚಾಲನೆ

    ಬೆಂಗಳೂರು- ಬೆಳಗಾವಿ  ರೈಲು ಸಂಚಾರದಿಂದ ಬೆಂಗಳೂರು, ತುಮಕೂರು, ದಾವಣಗೆರೆ, ಹಾವೇರಿ, ಧಾರವಾಡ ಹಾಗೂ ಬೆಳಗಾವಿ ಮಧ್ಯೆ ಸಂಪರ್ಕ ಹೆಚ್ಚಲಿದ್ದು, ಈ ಭಾಗದ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

    ಈ ರೈಲು 8 ಜಿಲ್ಲೆಗಳ ಮೂಲಕ ಹಾದು ಹೋಗಲಿದ್ದು, ಬುಧವಾರ ಹೊರತುಪಡಿಸಿ ವಾರದ 6 ದಿನ ಈ ರೈಲು ಸಂಚರಿಸಲಿದೆ. ಕಿತ್ತೂರು ಕರ್ನಾಟಕ, ದಕ್ಷಿಣ ಕರ್ನಾಟಕ ಮೂಲಕ ರಾಜ್ಯ ರಾಜಧಾನಿ ಸಂಪರ್ಕಿಸಲಿದೆ. ಬೆಳಗಾವಿಯಿಂದ ಬೆಳಗ್ಗೆ 5:20ಕ್ಕೆ ಹೊರಟು ಮಧ್ಯಾಹ್ನ 1:50ಕ್ಕೆ ಬೆಂಗಳೂರು ತಲುಪುವ ರೈಲು, ಮಧ್ಯಾಹ್ನ 2:20ಕ್ಕೆ ಬೆಂಗಳೂರಿನಿಂದ ಹೊರಟು ರಾತ್ರಿ 10:40ಕ್ಕೆ ಬೆಳಗಾವಿ ತಲುಪಲಿದೆ. ಈ ರೈಲು ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಧಾರವಾಡ ನಡುವೆ ಸಂಪರ್ಕಿಸಲಿದೆ.

    ಒಟ್ಟಿನಲ್ಲಿ ಈ ವಂದೇ ಭಾರತ್ ರೈಲು 8 ಗಂಟೆ 50 ನಿಮಿಷಗಳಲ್ಲಿ 611 ಕಿಲೋ ಮೀಟರ್ ದೂರ ಕ್ರಮಿಸಲಿದ್ದು, ರಾಜ್ಯದ ರೈಲ್ವೆ ಇತಿಹಾಸದಲ್ಲಿ ಮೈಲುಗಲ್ಲಾಗಿದೆ.

  • ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ – ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಜಲದಿಗ್ಬಂಧನ

    ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ – ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಜಲದಿಗ್ಬಂಧನ

    – ಹಲವು ರಸ್ತೆಗಳು ಜಲಾವೃತ, ಸವಾರರಿಗೆ ಸಂಕಷ್ಟ

    ಬೆಳಗಾವಿ: ಜಿಲ್ಲೆಯಾದ್ಯಂತ ಸುರಿದ ಧಾರಾಕಾರ ಮಳೆಗೆ (Rain) ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದ್ದು, ಜಲಾವೃತಗೊಂಡ ರಸ್ತೆ ದಾಟಲು ಆಗದೇ ಯಲ್ಲಮ್ಮನ (Savadatti Yallamma) ಗುಡ್ಡದ ಭಕ್ತರು ಪರದಾಡಿದ್ದಾರೆ. ಮತ್ತೊಂದೆಡೆ ನಿರಂತರ ಮಳೆಗೆ ಯಲ್ಲಮ್ಮನ ಗುಡ್ಡದ ಪ್ರದೇಶದಲ್ಲಿ ಸಹ್ಯಾದ್ರಿ, ಕೊಡಚಾದ್ರಿ ಸೃಷ್ಟಿಯಾಗಿದ್ದು ಪ್ರವಾಸಿಗರನ್ನ ಕೈಬೀಸಿ ಕರೆಯುತ್ತಿದೆ.

    ಸುಡುಬಿಸಿಲಿನ ಬೇಗೆಗೆ ಬೆಂದಿದ್ದ ಸವದತ್ತಿ ಜನರಿಗೆ ಮಳೆರಾಯನ ತಂಪೆರಿದಿದ್ದಷ್ಟೇ ಅಲ್ಲಾ, ಸಾಕಷ್ಟು ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ರಭಸವಾಗಿ ಸುರಿದ ಧಾರಾಕಾರ ಮಳೆಗೆ ಯಲ್ಲಮ್ಮನ ಗುಡ್ಡಕ್ಕೆ ಸಂಪರ್ಕಿಸುವ ರಸ್ತೆಗಳು ಹಳ್ಳಗಳಿಂದ ಜಲಾವೃತಗೊಂಡು ಸಂಪೂರ್ಣ ಬಂದ್ ಆಗಿದೆ. ಇದರಿಂದಾಗಿ ದೇವಸ್ಥಾನಕ್ಕೆ ಬರೋ ಭಕ್ತರು ದೇವಿಯ ದರ್ಶನವಿಲ್ಲದೇ ಪರದಾಡಿದ್ದಾರೆ. ನೂಲಹುಣ್ಣಿಮೆ ಹಿನ್ನೆಲೆ ರೇಣುಕಾ ಯಲ್ಲಮ್ಮನ ದೇವಸ್ಥಾನದಲ್ಲಿ ಜಾತ್ರೆ ಪ್ರಾರಂಭವಾಗುತ್ತದೆ. ಹಾಗಾಗಿ ಯಲ್ಲಮ್ಮನ ಗುಡ್ಡಕ್ಕೆ ಮಹಾರಾಷ್ಟ್ರ, ಗೋವಾ, ವಿಜಯಪುರ, ಬಾಗಲಕೋಟೆ, ಗದಗ, ಧಾರವಾಡ, ಹುಬ್ಬಳ್ಳಿ ಸೇರಿದಂತೆ ಕರ್ನಾಟಕದ ಮೂಲೆಮೂಲೆಗಳಿಂದ ಭಕ್ತರು ದೇವಿಯ ದರ್ಶನಕ್ಕೆ ಆಗಮಿಸುತ್ತಾರೆ. ಇದನ್ನೂ ಓದಿ: ಮೇಘಸ್ಪೋಟಕ್ಕೆ ನಾಶವಾಯ್ತು ಧರಾಲಿ – ಗ್ರಾಮದ ವಿಶೇಷತೆ ಏನು? ಮೊದಲು ಹೇಗಿತ್ತು?

    ಆದರೆ ಉಗರಗೋಳದಲ್ಲಿ ರಸ್ತೆ ಸಂಪೂರ್ಣವಾಗಿ ಬಂದ್ ಆಗಿದ್ದರಿಂದ ಭಕ್ತರು ಪರದಾಡಿದ್ದರು. ಅಷ್ಟೇ ಅಲ್ಲದೇ ಉಗರಗೋಳ ಗ್ರಾಮದಲ್ಲಿ ಕೊಚ್ಚಿಕೊಂಡು ಹೋಗುತ್ತಿರುವ ಬೈಕ್ ರಕ್ಷಣೆಗೆ ವ್ಯಕ್ತಿಯೊಬ್ಬರು ಹರಸಾಹಸ ಪಟ್ಟಿದ್ದಾರೆ. ಜೊತೆಗೆ ಯಲ್ಲಮ್ಮನ ಗುಡ್ಡದ ಎಣ್ಣೆ ಹೊಂಡದಲ್ಲಿ ರಭಸವಾಗಿ ಹರಿಯುತ್ತಿರುವ ಮಳೆಯ ನೀರಿನಲ್ಲಿ ವ್ಯಕ್ತಿಯೊಬ್ಬರು ಸಿಲುಕಿದ್ದರು. ಇದನ್ನೂ ಓದಿ: `ಪಬ್ಲಿಕ್ ಟಿವಿ’ ವಿದ್ಯಾಮಂದಿರಕ್ಕೆ ಇಂದು ಚಾಲನೆ

    ಇನ್ನು, ಸವದತ್ತಿ ತಾಲೂಕಿನಾದ್ಯಂತ ಸುರಿದ ಭಾರೀ ಮಳೆಯಿಂದಾಗಿ ಸಹ್ಯಾದ್ರಿ-ಕೊಡಚಾದ್ರಿಯನ್ನೇ ಮೀರಿಸುವಂತೆ ಸುಕ್ಷೇತ್ರ ಯಮ್ಮಲ್ಲನ ಗುಡ್ಡದ ಸುತ್ತಮುತ್ತಲಿನ ಪ್ರದೇಶ ನಿರ್ಮಾಣವಾಗಿದೆ. ಬೆಟ್ಟ-ಕಲ್ಲುಬಂಡೆಗಳ ಮೇಲೆ ಎಲ್ಲೆಂದರಲ್ಲಿ ಸುಂದರ ಕಿರುಜಲಪಾತಗಳು ಸೃಷ್ಟಿಯಾಗಿದ್ದು, ಬೆಟ್ಟದಿಂದ ನೀರು ಜಾರಿ ದುಮ್ಮಿಕ್ಕುತ್ತಿದೆ. ಬೆಟ್ಟದಿಂದ ಜಾರುವ ನೀರ್ಝರಿಗಳ ದೃಶ್ಯ ನೋಡುಗರ ಕಣ್ಮನ ಸೆಳೆಯುತ್ತಿದೆ. ಮತ್ತೊಂದೆಡೆ ಯಲ್ಲಮ್ಮನ ಗುಡ್ಡದಲ್ಲಿ ಭಾರಿ ಮಳೆಗೆ ಎಣ್ಣೆಹೊಂಡ ಸಂಪೂರ್ಣ ಜಲಾವೃತಗೊಂಡರೆ, ಧಾರಾಕಾರ ಮಳೆಯ ನೀರು ಶ್ರೀರೇಣುಕಾ ಯಲ್ಲಮ್ಮನ ದೇವಸ್ಥಾನಕ್ಕೆ ನುಗ್ಗಿದೆ. ದೇವಸ್ಥಾನ ಕೌಂಟರ್‌ಗಳು, ದೇವಸ್ಥಾನ ಗರ್ಭಗುಡಿ ಹೀಗೆ ದೇವಸ್ಥಾನ ಸುತ್ತಲೂ ಮಳೆ ನೀರು ಆವರಿಸಿಕೊಂಡಿದೆ. ಉತ್ತರ ಕರ್ನಾಟಕ ಶಕ್ತಿದೇವಿ ಯಲ್ಲಮ್ಮನ ದೇವಿಗೂ ಮಳೆರಾಯ ಜಲದಿಗ್ಭಂಧನ ಹಾಕಿದ್ದಾನೆ. ಇದನ್ನೂ ಓದಿ: ಭಾರತದ ಮೋಸ್ಟ್‌ ವಾಂಟೆಡ್‌ ʻಸಲೀಂ ಪಿಸ್ತೂಲ್ʼ ನೇಪಾಳದಲ್ಲಿ ಅರೆಸ್ಟ್‌

    ರಾಮದುರ್ಗ ತಾಲೂಕಿನಲ್ಲೂ ಭಾರೀ ಪ್ರಮಾಣದಲ್ಲಿ ಮಳೆಯಾಗಿದ್ದು, ತಾಲೂಕಿನ ಕಿಲ್ಲಾತೋರಗಲ್ ಬಳಿ ಗುಡ್ಡ ಕುಸಿತವಾಗಿದೆ. ನಡುರಸ್ತೆಯಲ್ಲೇ ಬೃಹತ್ ಕಲ್ಲು ಬಂಡೆಗಳು ಉರುಳಿ ಬಿದಿದ್ದು, ಯಾವುದೇ ವಾಹನ ಸಂಚಾರವಿಲ್ಲದೇ ಭಾರೀ ಅನಾಹುತವೊಂದು ತಪ್ಪಿದೆ. ಮಳೆಯಿಂದ ಏನೆಲ್ಲಾ ಅನಾಹುತ ಆಗಿದೇ ಅನೋದನ್ನ ಪರಿಶೀಲನೆ ಮಾಡುತ್ತಿದ್ದೇವೆ ಎಂದು ಸವದತ್ತಿ ತಹಶಿಲ್ದಾರರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬಿಹಾರದಲ್ಲಿ ಮತಪಟ್ಟಿ ವಿಶೇಷ ಪರಿಷ್ಕರಣೆಗೆ ವಿರೋಧವೇಕೆ?- ಕಾಂಗ್ರೆಸ್ಸಿಗರಿಗೆ ಬಿ.ವೈ.ವಿಜಯೇಂದ್ರ ಪ್ರಶ್ನೆ

  • 5ರ ಬಾಲೆಯ ಮೇಲೆ ರೇಪ್‌ – ಬೆಳಗಾವಿಯಲ್ಲಿ ಬಾಗಲಕೋಟೆ ಮೂಲದ ವ್ಯಕ್ತಿ ಅರೆಸ್ಟ್‌

    5ರ ಬಾಲೆಯ ಮೇಲೆ ರೇಪ್‌ – ಬೆಳಗಾವಿಯಲ್ಲಿ ಬಾಗಲಕೋಟೆ ಮೂಲದ ವ್ಯಕ್ತಿ ಅರೆಸ್ಟ್‌

    ಬೆಳಗಾವಿ: ಎರಡು ವರ್ಷದ ಹಿಂದೆ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ (Rape Case) ಸಂಬಂಧಿಸಿದಂತೆ ವ್ಯಕ್ತಿಯನ್ನು ಬಂಧಿಸಲಾಗಿದೆ.

    ಜಿಲ್ಲಾ‌‌ ಮಕ್ಕಳ ರಕ್ಷಣಾ ಘಟಕ ನೀಡಿದ ದೂರಿನ ಅನ್ವಯ ಮಂಗಳವಾರ ರಾತ್ರಿ ಆರೋಪಿ ತುಫೇಲ್ ಅಹ್ಮದ್ ದಾದಾಫೀರ್‌ನನ್ನು ಬಂಧಿಸಿದ್ದೇವೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ್ (Bheemashankar Guled) ತಿಳಿಸಿದ್ದಾರೆ.

    ಎಸ್‌ಪಿ ಹೇಳಿದ್ದೇನು?
    ಮಂಗಳವಾರ ಸಂಜೆ ಪುನೀತ್ ಕೆರೆಹಳ್ಳಿ ಒಂದು ವಿಡಿಯೋ ಪೋಸ್ಟ್ ಮಾಡಿದ್ದರು. ಅದರಲ್ಲಿ ಓರ್ವ ವ್ಯಕ್ತಿ ಮಾತಾಡಿದ ಆಡಿಯೋ ಮತ್ತು ವಿಡಿಯೋ ತುಣುಕು ಇತ್ತು. ಇದರಲ್ಲಿ ಬಾಲಕಿ ಮೇಲೆ ಓರ್ವ ವ್ಯಕ್ತಿ ಮಲಗುವ ರೀತಿಯಲ್ಲಿತ್ತು. ಇದನ್ನೂ ಓದಿ: ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ ಕೊಪ್ಪಳ ಮೂಲದ ಓರ್ವ ವಶಕ್ಕೆ

     

    ಈ ವಿಡಿಯೋ ಪ್ರಕಟವಾದ ನಂತರ ನಮ್ಮ ಸೈಬರ್‌ ಕ್ರೈಂ ಪೊಲೀಸರಿಗೆ (Cyber Crime Police) ಮಾಹಿತಿ ನೀಡಲಾಗಿತ್ತು. ವಿಡಿಯೋದಲ್ಲಿನ ವಿಳಾಸ ಆಧರಿಸಿ ನಮ್ಮ ಪೊಲೀಸರು ತನಿಖೆ ಶುರು ಮಾಡಿದ್ದರು. ಕೂಡಲೇ ನಮ್ಮ ಮುರಗೋಡ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿತ್ತು.  ಇದನ್ನೂ ಓದಿ: ಅಪಹರಣಕ್ಕೆ ಸೂಚನೆ ನೀಡಿಲ್ಲ, ಯಾವುದೇ ಪುರಾವೆ ಇಲ್ಲ ಜಾಮೀನು ರದ್ದು ಮಾಡ್ಬೇಡಿ: ದರ್ಶನ್‌ ವಾದ ಏನು?

    ಈ ಘಟನೆ 2023 ಅಕ್ಟೋಬರ್ 5 ರಂದು ನಡೆದಿದ್ದು ಮಸೀದಿ ಪಕ್ಕದ ಮನೆಯ ವ್ಯಕ್ತಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಆರೋಪಿ ಘಟನೆ ನಡೆದ ಹಿಂದಿನ ದಿನ ಬಾಗಲಕೋಟೆಯ ಮಹಾಲಿಂಗಪುರದಿಂದ ಬಂದಿದ್ದ. ಚಿಕ್ಕಮ್ಮನ ಮನೆಗೆ ಬಂದಾಗ ಹೀನಾಯ ಕೃತ್ಯ ಎಸಗಿದ್ದ.

     
    ಈ ವಿಚಾರ ಗೊತ್ತಾದಾಗ ಅಲ್ಲಿರುವ ಸ್ಥಳೀಯರು ಬಾಲಕಿ ತಂದೆ ಕರೆದು ಮಾತಾಡಿದ್ದರು. ಆ ದಿನ ದೂರು ಕೊಡುವುದು ಬೇಡಾ ಅಂತಾ ತೀರ್ಮಾನಿಸಿ ಬಿಟ್ಟಿದ್ದರು. ಇದಾದ ಬಳಿಕ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಾಲಕಿ ಪೋಷಕರ ಜೊತೆಗೆ ಮಾತಾಡಲಾಗಿತ್ತು.

    ತಂದೆ ತಾಯಿ ದೂರು ನೀಡಲು ಒಪ್ಪದ ಕಾರಣ ಜಿಲ್ಲಾ‌‌ ಮಕ್ಕಳ ರಕ್ಷಣಾ ಘಟಕದಿಂದ ದೂರು ಪಡೆದು ರಾತ್ರಿಯೇ ಆರೋಪಿ ತುಫೇಲ್ ಅಹ್ಮದ್ ದಾದಾಫೀರ್ ಬಂಧಿಸಿದ್ದೇವೆ. ಆರೋಪಿ ಮೌಲ್ವಿ ಅಲ್ಲ. ಆತ ವೆಲ್ಡಿಂಗ್‌ ಕೆಲಸ ಮಾಡಿಕೊಂಡಿದ್ದ. ಕೆಲಸ ಇಲ್ಲದೇ ಇದ್ದಾಗ ಮಸೀದಿಗಳಿಗೆ ಹೋಗಿ ಭಾಷಣ ಮಾಡುತ್ತಿದ್ದ ಎಂದು ತಿಳಿಸಿದರು.

  • ಬೈಕ್‌ ಸಮೇತ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ

    ಬೈಕ್‌ ಸಮೇತ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ

    ಬೆಳಗಾವಿ: ರಭಸವಾಗಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ಬೈಕ್ ಸಮೇತ ವ್ಯಕ್ತಿ ನೀರಲ್ಲಿ ಕೊಚ್ಚಿಕೊಂಡು ಹೋದ ಘಟನೆ ಬೆಳಗಾವಿಯ (Belagavi) ತಾರಿಹಾಳ ಬಳಿ ನಡೆದಿದೆ.

    ಹಳ್ಳ ದಾಟುವಾಗ ಬೈಕ್ (Bike) ಸಮೇತ ನೀರಿನಲ್ಲಿ ಪಂಚಾಯತ್‌ ಸಿಬ್ಬಂದಿ ಸುರೇಶ್‌ ನಿಜಗುಣಿ ಗುಂಡನ್ನವರ್ (50) ಕೊಚ್ಚಿ ಹೋಗಿದ್ದಾರೆ. ಇದನ್ನೂ ಓದಿ: Rain Alert | ಇಂದು 5 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ – ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ

    ಪಂಚಾಯತ್‌ನಲ್ಲಿ ಕೆಲಸ ಮುಗಿಸಿ ರಾತ್ರಿ ಮನೆಗೆ ಹೋಗುವಾಗ ಘಟನೆ ನಡೆದಿದೆ. ಸುರೇಶ್‌ಗಾಗಿ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ. ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ – ಕೊಲೆಯಲ್ಲಿ ಅಂತ್ಯ

    ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ – ಕೊಲೆಯಲ್ಲಿ ಅಂತ್ಯ

    ಚಿಕ್ಕೋಡಿ: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಜಗಳ ನಡೆದು, ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

    ಹುಸೇನ್ ಸಾಬ್ ದಸ್ತಗಿರ ಪರೀಟ್ (25) ಕೊಲೆಯಾದ ದುರ್ದೈವಿ. ಇಮ್ತಿಯಾಜ್ ಶೇಗಡಿ (25) ಕೊಲೆ ಮಾಡಿರುವ ಆರೋಪಿ. ಇದನ್ನೂ ಓದಿ: ಬಿಹಾರ | ಕನ್ವರ್‌ ಯಾತ್ರಾರ್ಥಿಗಳಿದ್ದ ವ್ಯಾನ್ ಕಂದಕಕ್ಕೆ ಪಲ್ಟಿ – ಐವರ ದುರ್ಮರಣ

    ಬೆಳಗಾವಿ ಜಿಲ್ಲೆಯ ಹುಕ್ಕೇರಿ (Hukkeri) ತಾಲೂಕಿನ ಯಮಕನಮರಡಿ ಗ್ರಾಮದ ನಿವಾಸಿಗಳಾದ ಹುಸೇನ್ ಸಾಬ್ ಪರೀಟ್ ಹಾಗೂ ಸ್ನೇಹಿತ ಇಮ್ತಿಯಾಜ್ ಇಬ್ಬರು ಅಂಕಲಿ ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿ ಮೀನು ಹಿಡಿಯಲು ಬಂದಿದ್ದರು. ಇದನ್ನೂ ಓದಿ: ಮತಾಂತರ, ಮದುವೆ ಆಗಲು ನಿರಾಕರಿಸಿದ್ದಕ್ಕೆ ಹರಿಯಿತು ನೆತ್ತರು – ಹಿಂದೂ ಮಹಿಳೆಯ ಕ್ರೂರ ಹತ್ಯೆ

    ಮಹಾರಾಷ್ಟ್ರದ ಸಾಂಗಲಿ ನಗರಕ್ಕೆ ಹೋಗುವ ವಿಚಾರದಲ್ಲಿ ಇಬ್ಬರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಕೋಪಗೊಂಡ ಇಮ್ತಿಯಾಜ್ ಕಟ್ಟಿಗೆಯಿಂದ ಹುಸೇನ್ ಸಾಬ್ ತಲೆಗೆ ಹೊಡೆದ ಪರಿಣಾಮ ಹುಸೇನ್ ಸಾಬ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

    ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • Belagavi | ಮುಸ್ಲಿಂ ಹೆಡ್ ಮಾಸ್ಟರ್ ವರ್ಗಾವಣೆ ಮಾಡಲು ಮಕ್ಕಳಿಗೆ ವಿಷವಿಟ್ಟ ಪಾಪಿಗಳು

    Belagavi | ಮುಸ್ಲಿಂ ಹೆಡ್ ಮಾಸ್ಟರ್ ವರ್ಗಾವಣೆ ಮಾಡಲು ಮಕ್ಕಳಿಗೆ ವಿಷವಿಟ್ಟ ಪಾಪಿಗಳು

    ಬೆಳಗಾವಿ: ಶಾಲಾ ಮುಖ್ಯ ಶಿಕ್ಷಕ (School Head Master) ಮುಸ್ಲಿಂ ಎಂಬ ಕಾರಣಕ್ಕೆ ಆತನನ್ನು ಶಾಲೆಯಿಂದ ಎತ್ತಂಗಡಿ ಮಾಡಿಸಬೇಕು ಎಂದು ಶಾಲೆಯ ಆವರಣದಲ್ಲಿದ್ದ ಮಕ್ಕಳು ಕುಡಿಯುವ ನೀರಿನ ಟ್ಯಾಂಕ್‌ಗೆ ಅಪ್ರಾಪ್ತ ಮಗುವಿನ ಕಡೆಯಿಂದಲೇ ವಿಷ ಪ್ರಾಷಣ ಮಾಡಿಸಿದ ಘಟನೆ ಬೆಳಗಾವಿ (Belagavi) ಜಿಲ್ಲೆಯ ಸವದತ್ತಿ (Savadatti) ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ.

    ಹೂಲಿಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 41 ಮಕ್ಕಳು ವ್ಯಾಸಾಂಗ ಮಾಡುತ್ತಿದ್ದು, ಮುಖ್ಯ ಶಿಕ್ಷಕ ಸುಲೇಮಾನ್ ಗೋರಿನಾಯಕ್ ಹಾಗೂ ಮತ್ತೋರ್ವ ಮೇಷ್ಟ್ರು ಕೆಲಸ ಮಾಡುತ್ತಿದ್ದಾರೆ. ಸುಲೇಮಾನ್ ಗೋರಿನಾಯಕ್ ಕಳೆದ 13 ವರ್ಷಗಳಿಂದ ಒಂದೇ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಎಂಬ ಕಾರಣ ಹಾಗೂ ಆತ ಮುಸ್ಲಿಂ ಸಮುದಾಯಕ್ಕೆ ಸೇರಿದವ ಎಂಬ ಕಾರಣಕ್ಕೆ ಆತನನ್ನು ಶಾಲೆಯಿಂದ ಎತ್ತಂಗಡಿ ಮಾಡಿಸಬೇಕು ಎಂದು ಸಾಗರ್ ಪಾಟೀಲ್ ಪ್ಲಾನ್ ಮಾಡಿ ಕೃಷ್ಣಾ ಪಾಟೀಲ್ ಎಂಬಾತನನ್ನು ಬ್ಲಾಕ್ ಮೇಲ್ ಮಾಡಿ ಮನವಳ್ಳಿಯಿಂದ ಕೀಟನಾಶಕ ತರಿಸಿ ಮಾಜಾ ಬಾಟಲ್‌ನಲ್ಲಿ ವಿಷ ಬೆರೆಸಿ ಅಪ್ರಾಪ್ತ ಮಗುವನ್ನು ಬಳಸಿಕೊಂಡು ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ್ದರು. ಇದನ್ನೂ ಓದಿ: ಕಲಬುರಗಿ ಕರ್ನಾಟಕ ಕೇಂದ್ರಿಯ ವಿವಿ ವಿದ್ಯಾರ್ಥಿನಿ ಕೆನ್ನೆಗೆ ಮುತ್ತಿಟ್ಟ ಕ್ಯಾಂಟೀನ್ ಓನರ್

    ಕೃಷ್ಣಾ ಮಾದರ್ ಅದೇ ಗ್ರಾಮದ ಅನ್ಯ ಜಾತಿಯ ಯುವತಿಯನ್ನು ಪ್ರೀತಿಸುತ್ತಿದ್ದ. ತಾನು ಹೇಳಿದ ಕೆಲಸವನ್ನು ಮಾಡದಿದ್ದರೆ ನೀನು ಅನ್ಯಜಾತಿಯ ಹುಡುಗಿಯ ಪ್ರೀತಿಸುತ್ತಿರುವ ವಿಚಾರವನ್ನು ಊರಿಗೆಲ್ಲ ಪುಕಾರು ಮಾಡುತ್ತೇನೆ ಎಂದು ಬ್ಲಾಕ್ ಮೇಲ್ ಮಾಡಿದ್ದ. ಹೀಗಾಗಿ ಕೃಷ್ಣಾ ಮಾದರ್ ತನ್ನ ಸ್ನೇಹಿತ ನಾಗನಗೌಡ ಪಾಟೀಲ್ ಜೊತೆ ಸೇರಿ ಕೃತ್ಯ ಮಾಡಲು ಸಜ್ಜಾಗುತ್ತಾರೆ. ಮುನವಳ್ಳಿಯಿಂದ ವಿಷ ತೆಗೆದುಕೊಂಡು ಬಂದು ಅದೇ ಶಾಲೆಯ ಮಗುವಿಗೆ 500 ರೂಪಾಯಿ ದುಡ್ಡು ನೀಡಿ ಅದೂ ಅಲ್ಲದೆ ತಿನ್ನಲು ಕುರ್ಕುರೆ ಹಾಗೂ ಚಾಕಲೇಟ್ ನೀಡಿ ನೀರಿನ ಟ್ಯಾಂಕ್‌ಗೆ ಹಾಕುವಂತೆ ಹೇಳಿದ್ದರು. ಕೃಷ್ಣಾ ಮಾದರ್ ಹಾಗೂ ನಾಗನಗೌಡ ಹೇಳಿದಂತೆ ಆ ಅಪ್ರಾಪ್ತ ಮಗು ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿತ್ತು. ಇದನ್ನೂ ಓದಿ: ಭಾರತದ ಮೇಲೆ ಅಮೆರಿಕ 25% ಟ್ಯಾರಿಫ್‌ – ‘ಸ್ವದೇಶಿ’ ವಸ್ತು ಖರೀದಿಸಿ: ಮೋದಿ ಕರೆ

    ವಿಷ ಬೆರೆಸಿದ ನಂತರ ಮಕ್ಕಳು ಅದೇ ನೀರು ಕುಡಿದು ಜುಲೈ 14 ರಂದು ಅಸ್ವಸ್ಥರಾಗಿದ್ದರು. ಅಸ್ವಸ್ಥರಾದ 11 ಮಕ್ಕಳನ್ನು ಕೂಡಲೇ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಸದ್ಯ ಮಕ್ಕಳು ಚೇತರಿಸಿಕೊಂಡಿದ್ದಾರೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸಾಗರ್ ಪಾಟೀಲ್, ಕೃಷ್ಣಾ ಮಾದರ್, ಹಾಗೂ ನಾಗನಗೌಡ ಪಾಟೀಲ್‌ರನ್ನು ಬಂಧಿಸಿದ್ದಾರೆ. ಈ ಕುರಿತು ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಾಧ್ಯಮಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ ಮಾಹಿತಿ ನೀಡಿದರು. ಇದನ್ನೂ ಓದಿ: ಪತ್ನಿಗೆ ಅಕ್ರಮ ಸಂಬಂಧ – ಎರಡು ಮಕ್ಕಳಿಗೆ ವಿಷವುಣಿಸಿ ಪತಿ ಆತ್ಮಹತ್ಯೆ

  • ಬೆಳಗಾವಿ | ಕೆಲಸದಿಂದ ವಜಾ ಮಾಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

    ಬೆಳಗಾವಿ | ಕೆಲಸದಿಂದ ವಜಾ ಮಾಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

    ಬೆಳಗಾವಿ: ಕೆಲಸದಿಂದ ವಜಾ ಮಾಡಿದ್ದಕ್ಕೆ ಯುವಕನೋರ್ವ ಮನನೊಂದು ನೇಣಿಗೆ ಶರಣಾಗಿರುವ ಘಟನೆ ಬೆಳಗಾವಿ (Belagavi) ತಾಲೂಕಿನ ಮೊದಗಾ ಗ್ರಾಮದಲ್ಲಿ ನಡೆದಿದೆ.

    ಮೊದಗಾ (Modaga) ಗ್ರಾಮದ ನಿವಾಸಿ ರವಿ ವೀರನಗೌಡ ಹಟ್ಟಿಹೊಳಿ (24) ಆತ್ಮಹತ್ಯೆಗೆ ಶರಣಾದ ಯುವಕ. ಇದನ್ನೂ ಓದಿ: 56 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದಿದ್ದ ಖದೀಮರು ಅರೆಸ್ಟ್

    ಎಂಸಿಎ ಪದವೀಧರನಾಗಿದ್ದ ರವಿ ಹಟ್ಟಿಹೊಳಿ, ಕಳೆದೊಂದು ವರ್ಷದಿಂದ ಪುಣೆಯ (Pune) ಗ್ಲೋಬಲ್ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ. 15 ದಿನಗಳ ಹಿಂದೆ ರವಿಯನ್ನು ಕೆಲಸದಿಂದ ತೆಗೆದು ಹಾಕಿದ್ದರು. ಇದನ್ನೂ ಓದಿ: ಧರ್ಮಸ್ಥಳ ಫೈಲ್ಸ್‌ | ನಿಗೂಢ ಸತ್ಯದ ಬೆನ್ನತ್ತಿದ SIT – ನೇತ್ರಾವತಿ ಸ್ನಾನಘಟ್ಟ ಬಳಿ ಶವಗಳ ಉತ್ಖನನ ಕಾರ್ಯ ಶುರು

    ಇದರಿಂದ ಮನನೊಂದ ರವಿ, ಸ್ವಗ್ರಾಮಕ್ಕೆ ಮರಳಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಮಾರಿಹಾಳ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.