Tag: belagavi

  • ಸಿಎಂ ಸಿದ್ದರಾಮಯ್ಯ ಮುಸ್ಲಿಮರನ್ನಷ್ಟೇ ಓಲೈಕೆ ಮಾಡುವುದು ಸರಿಯಲ್ಲ: ಆರ್‌.ಅಶೋಕ್‌

    ಸಿಎಂ ಸಿದ್ದರಾಮಯ್ಯ ಮುಸ್ಲಿಮರನ್ನಷ್ಟೇ ಓಲೈಕೆ ಮಾಡುವುದು ಸರಿಯಲ್ಲ: ಆರ್‌.ಅಶೋಕ್‌

    ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ (Siddaramaiah) ಟಿಪ್ಪು ಅಂದ್ರೆ ಬಹಳ ಪ್ರೀತಿ. ಅವರದ್ದು ಟಿಪ್ಪು ಅಜೆಂಡಾ. ಅವರು ಹಿಂದೂಗಳನ್ನ ಎರಡನೇ ದರ್ಜೆ ಥರಾ ನೋಡ್ತಾ ಇದ್ದಾರೆ. ಸಿದ್ದರಾಮಯ್ಯ ಅವರು ಮುಸ್ಲಿಮರನ್ನಷ್ಟೇ ಓಲೈಕೆ ಮಾಡುವುದು ಸರಿಯಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R.Ashok) ಹೇಳಿದರು.

    ಬೆಳಗಾವಿಯಲ್ಲಿ (Belagavi) ಮಾತನಾಡಿದ ಅವರು, ಮುಸ್ಲಿಂ ಮತಕ್ಕಾಗಿ ಸಿದ್ಧರಾಮಯ್ಯ ಈ‌ ರೀತ ರಾಜಕಾರಣ ಮಾಡುತ್ತಿದ್ದಾರೆ. ಅವರು ಮುಸ್ಲಿಮರ ಓಲೈಕೆ ಜೊತೆಗೆ ಟಿಪ್ಪು ಜಯಂತಿ, ಶಾದಿ ಭಾಗ್ಯ, ಇವೆಲ್ಲಾ ಕೈ ಬಿಡಬೇಕು ಎಂದರು. ಇದನ್ನೂ ಓದಿ: ಅರ್ಜುನ ಆನೆಗೆ 64 ವರ್ಷ.. ಕಾಡಾನೆ ಸೆರೆಗೆ ಯಾಕೆ ಬಳಸಿದ್ರು: ಸರ್ಕಾರಕ್ಕೆ ಕೋಟಾ ಪ್ರಶ್ನೆ

    ರಾಜ್ಯದಲ್ಲಿ 13 ತಾಲೂಕು ಬಿಟ್ರೆ ಉಳಿದ ಎಲ್ಲಾ ಕಡೆ ಬರಯಿದೆ. ಈ‌ ಸಮಯದಲ್ಲಿ ಸರ್ಕಾರಕ್ಕೆ ತಾಯಿ‌ ಹೃದಯ ಇರಬೇಕಿತ್ತು. ‌ಆದ್ರೆ ಸರ್ಕಾರಕ್ಕೆ ಕಟುಕನ ಹೃದಯವಿದೆ. ಬರ ನಿರ್ವಹಣೆ ಮಾಡೋದು ಬಿಟ್ಟು ತೆಲಂಗಾಣದಲ್ಲಿ ರಾಜಕೀಯ ಮಾಡುವುದಕ್ಕೆ ಹೋಗ್ತಾರೆ. ಇದು ಜನ ವಿರೋಧಿ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.

    ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಪೃಥ್ವಿ ಸಿಂಗ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸುವೆ. ಬಿಜೆಪಿ ಕಾರ್ಯಕರ್ತರ ಮೇಲೆ ಆರು ತಿಂಗಳಿಂದಲೂ ಹಲ್ಲೆ ಮಾಡಲಾಗುತ್ತಿದೆ. ಪೊಲೀಸರನ್ನು ಬಳಸಿಕೊಂಡು ಮಂಗಳೂರು, ಉಡುಪಿ ಭಾಗದಲ್ಲಿ ಬಿಜೆಪಿ ಕಾರ್ಯಕರ್ತರ ಗಡಿಪಾರು ಮಾಡಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಗರಂ ಆದರು. ಇದನ್ನೂ ಓದಿ: ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣ- ಡಿಕೆಶಿಗೆ ಮತ್ತೆ ನೋಟಿಸ್ ನೀಡುತ್ತಾ ಸಿಬಿಐ?

    ನಮ್ಮ ಸದಸ್ಯ ಏನೇ ಆಗಿರಲಿ. ಆದರೆ ಆತನಿಗೆ ಹೊಡೆಯಲು ಅಧಿಕಾರ ಕೊಟ್ಟವರಾರು? ಅದನ್ನು ನ್ಯಾಯಾಲಯ ತೀರ್ಮಾನ ಮಾಡುತ್ತೆ. ಕಾನೂನನ್ನ ಕೈಗೆತ್ತಿಕೊಳ್ಳಲು ಇವರು ಯಾರು? ಇದರಲ್ಲಿ ಕಾಂಗ್ರೆಸ್ ಕೈವಾಡ ಇದೆ ಆರೋಪಿಸಿದರು.

  • ಅರ್ಜುನ ಆನೆಗೆ 64 ವರ್ಷ.. ಕಾಡಾನೆ ಸೆರೆಗೆ ಯಾಕೆ ಬಳಸಿದ್ರು: ಸರ್ಕಾರಕ್ಕೆ ಕೋಟಾ ಪ್ರಶ್ನೆ

    ಅರ್ಜುನ ಆನೆಗೆ 64 ವರ್ಷ.. ಕಾಡಾನೆ ಸೆರೆಗೆ ಯಾಕೆ ಬಳಸಿದ್ರು: ಸರ್ಕಾರಕ್ಕೆ ಕೋಟಾ ಪ್ರಶ್ನೆ

    ಬೆಳಗಾವಿ: ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮೈಸೂರು ದಸರಾ ಖ್ಯಾತಿಯ ಅರ್ಜುನ (Arjuna Elephant) ಆನೆ ಬಲಿಯಾಗಿರುವುದಕ್ಕೆ ಅರಣ್ಯ ಇಲಾಖೆ ವಿರುದ್ಧ ವಿಧಾನ ಪರಿಷತ್‌ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ (Kota Srinivas Poojari) ಗರಂ ಆಗಿದ್ದಾರೆ.

    ಪರಿಷತ್‌ ಕಲಾಪದ ವೇಳೆ ಮಾತನಾಡಿದ ಅವರು, 60 ವರ್ಷ ಮೀರಿದ ಅನೆಯನ್ನ ಕಾರ್ಯಾಚರಣೆಗೆ ಬಳಕೆ ಮಾಡಬಾರದು ಅಂತ ನಿಯಮ ಇತ್ತು. ಈಗ ಅರ್ಜುನ ಆನೆಗೆ 64 ವರ್ಷ. ಕಾಡಾನೆ ಸೆರೆ ಹಿಡಿಯಲು ಯಾಕೆ ಉಪಯೋಗ ಮಾಡಿದ್ರು ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಕಾಡಾನೆ ದಾಳಿಗೆ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಬಲಿ

    ಇದೊಂದು ಆತಂಕದ ವಿಚಾರ. ಸರ್ಕಾರ ಅರ್ಜುನ ಸಾವಿನ ಬಗ್ಗೆ ತನಿಖೆ ಮಾಡಬೇಕು. ಅರವಳಿಕೆ ಪುಂಡಾನೆಗೆ ಬದಲು ಅರ್ಜುನಿಗೆ ಬಿತ್ತು ಅಂತ ಆರೋಪ ಇದೆ. ಇದರ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.

    ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಳಿ ಕಾಡಾನೆ ಸೆರೆಗೆ ಸೋಮವಾರ ನಡೆದ ಕಾರ್ಯಾಚರಣೆಯಲ್ಲಿ ಕಾಡಾನೆ ದಾಳಿಯಿಂದ ಅರ್ಜುನ ಆನೆ ಮೃತಪಟ್ಟಿತು. ಇದನ್ನೂ ಓದಿ: ತನ್ನ ಪ್ರಾಣ ತ್ಯಾಗ ಮಾಡಿ ಹಲವರ ಜೀವ ಉಳಿಸಿದ ಅರ್ಜುನ – ನಡೆದಿದ್ದೇನು?

    ನಾಲ್ಕು ಸಾಕಾನೆಗಳೊಂದಿಗೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ವೈದ್ಯರು ಕಾರ್ಯಾಚರಣೆ ಆರಂಭಿಸಿದ್ದರು. ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಒಂಟಿಸಲಗ ಅಟ್ಯಾಕ್ ಮಾಡಿತ್ತು. ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಅರ್ಜುನ ಸ್ಥಳದಲ್ಲೇ ಪ್ರಾಣ ಬಿಟ್ಟಿದೆ.

    ಅರ್ಜುನ ಆನೆ ಸಾವಿನ ಬಗ್ಗೆ ಸ್ಥಳದಲ್ಲೇ ಇದ್ದ ಮಾವುತರು ಮತ್ತು ಕಾವಾಡಿಗರು ನೀಡಿರುವ ಹೇಳಿಕೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅರವಳಿಕೆ ಕಾಡಾನೆಗೆ ತಾಗುವ ಬದಲು ಅರ್ಜುನನಿಗೆ ತುಗಲಿತ್ತು ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ನಡೆದು ಹೋಯ್ತಾ ಮಹಾ ಪ್ರಮಾದ – ಗುರಿ ತಪ್ಪಿ ಬಿದ್ದ ಗುಂಡೇಟಿನಿಂದ ಅರ್ಜುನ ಸಾವು?

  • ಬಿಜೆಪಿ ಕಾರ್ಯಕರ್ತನ ಮೇಲಿನ ಹಲ್ಲೆ ಆರೋಪ ಸತ್ಯಕ್ಕೆ ದೂರವಾದದ್ದು: ಚನ್ನರಾಜ ಹಟ್ಟಿಹೊಳಿ

    ಬಿಜೆಪಿ ಕಾರ್ಯಕರ್ತನ ಮೇಲಿನ ಹಲ್ಲೆ ಆರೋಪ ಸತ್ಯಕ್ಕೆ ದೂರವಾದದ್ದು: ಚನ್ನರಾಜ ಹಟ್ಟಿಹೊಳಿ

    ಚಿಕ್ಕೋಡಿ (ಬೆಳಗಾವಿ): ಬಿಜೆಪಿ (BJP) ಕಾರ್ಯಕರ್ತನ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಸ್ವತಃ ಕಾಂಗ್ರೆಸ್ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ (Channaraja Hattiholi) ಸ್ಪಷ್ಟನೆ ನೀಡಿದ್ದಾರೆ.

    ಬೆಳಗಾವಿಯಲ್ಲಿ (Belagavi) ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿರುವ ಅವರು, ಈ ಆರೋಪ ಸತ್ಯಕ್ಕೆ ದೂರವಾಗಿದ್ದಾಗಿದೆ. ಸುಳ್ಳು ಆರೋಪ ಎಂದಿದ್ದಾರೆ. ನಾವು ಹಲ್ಲೆ ಮಾಡುವ ಕೆಲಸಕ್ಕೆ ಕೈ ಹಾಕುವುದಿಲ್ಲ, ಶಿಸ್ತಿನಿಂದ ರಾಜಕೀಯ ಮಾಡುತ್ತೇವೆ. ಈ ಬಗ್ಗೆ ತನಿಖೆ ಆಗಬೇಕು ಸ್ಪಷ್ಟ ಮಾಹಿತಿ ಹೊರಬರಬೇಕು. ಹಲ್ಲೆ ಯಾರು ಮಾಡಿದರೂ ಎನ್ನುವುದರ ಬಗ್ಗೆ ಫಾರೆನ್ಸಿಕ್ ರಿಪೋರ್ಟ್ ಬರಬೇಕಾಗುತ್ತದೆ. ಪೊಲೀಸ್ ಇಲಾಖೆಯಲ್ಲಿ ಈ ಬಗ್ಗೆ ಸಾಕಷ್ಟು ಅನುಮಾನಗಳಿವೆ ಎಂದಿದ್ದಾರೆ.

    ಪೃಥ್ವಿ ಸಿಂಗ್ ಒಬ್ಬ ನಟೋರಿಯಸ್ ಬ್ಲಾಕ್ ಮೇಲ್ ಮನುಷ್ಯ. ಅವನು ಸುಳ್ಳು ಹೇಳುತ್ತಿದ್ದಾನೆ. ನನ್ನ ಆತ್ನೀಯರು ಅವನ ಮನೆಗೆ ಭೇಟಿಗೆ ಹೋಗಿದ್ದು ನಿಜ. ಅವನ ಮನೆಯಲ್ಲಿ ಮೊದಲು ನಮ್ಮ ಕಚೇರಿಯಿತ್ತು. ಆ ರೆಂಟ್ ಅಗ್ರಿಮೆಂಟ್ ವಾಪಸ್ ಕೇಳಲು ನನ್ನ ಆತ್ಮೀಯರು ಹೋಗಿದ್ದರು. ಇದೇ ಸನ್ನಿವೇಶ ಇಟ್ಟುಕೊಂಡು ಆತ ದೃಶ್ಯ ಹೆಣೆದಿದ್ದಾನೆ. ಇದರಲ್ಲಿ ಯಾವುದೇ ರಾಜಕೀಯ ವೈಷಮ್ಯವಿಲ್ಲ. ಅವನಿಗೆ ರಿಕಾರ್ಡಿಂಗ್ ಮಾಡುವ ಹಾಗೂ ವೀಡಿಯೋ ಮಾಡುವ ಚಟ ಇದೆ. ಅವನು ನನಗೆ ಯಾವುದೇ ರೀತಿಯ ಬ್ಲಾಕ್ ಮೇಲ್ ಮಾಡಿಲ್ಲ. ಏನೋ ಮಾಡಲು ಹೋಗಿ ತಾನೇ ಸಿಕ್ಕಾಕಿಕೊಂಡಿದ್ದಾನೆ ಎಂದರು. ಇದನ್ನೂ ಓದಿ: ಜಾರಕಿಹೊಳಿ ಆಪ್ತನಿಗೆ ಚಾಕು ಇರಿತ – ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರನಿಂದ ಕೃತ್ಯ ಆರೋಪ

    ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಹೋಗುವುದು ಹೊಸದೇನಲ್ಲ. ಮಾಧ್ಯಮದಲ್ಲಿ ಬಂದಿದ್ದಕ್ಕೆ ಹೋಗಿ ಭೇಟಿ ನೀಡಿದ್ದಾರೆ. ಅವನು ಸುಳ್ಳು ಹೇಳುತ್ತಿದ್ದಾನೆ. ಅವನಿಗೆ ಬೆಂಬಲ ಕೊಡಬೇಡಿ. ತನಿಖೆ ಮಾಹಿತಿ ಬರೋವರೆಗೆ ತಾಳ್ಮೆಯಿಂದ ಇರುವಂತೆ ಬಿಜೆಪಿ ನಾಯಕರಿಗೆ ಚನ್ನರಾಜ ಹಟ್ಟಿಹೊಳಿ ಮನವಿ ಮಾಡಿದ್ದಾರೆ.

  • ಜಾರಕಿಹೊಳಿ ಆಪ್ತನಿಗೆ ಚಾಕು ಇರಿತ – ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರನಿಂದ ಕೃತ್ಯ ಆರೋಪ

    ಜಾರಕಿಹೊಳಿ ಆಪ್ತನಿಗೆ ಚಾಕು ಇರಿತ – ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರನಿಂದ ಕೃತ್ಯ ಆರೋಪ

    ಬೆಳಗಾವಿ: ಒಂದು ಕಡೆ ಬೆಳಗಾವಿಯಲ್ಲಿ (Belagavi) ಚಳಿಗಾಲದ ಅಧಿವೇಶನ ನಡೆಯುತ್ತಿರುವಾಗಲೇ, ಮತ್ತೊಂದು ಕಡೆ ನೆತ್ತರು ಹರಿದೆ. ಬಿಜೆಪಿ (BJP) ರಾಜ್ಯಕಾರ್ಯಕಾರಣಿ ಸದಸ್ಯ ಪೃಥ್ವಿ ಸಿಂಗ್ (Pruthvi Singh) ಮೇಲೆ ಚಾಕು ಇರಿತವಾಗಿದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಪರಮಾಪ್ತರಾಗಿರುವ ಪೃಥ್ವಿ ಸಿಂಗ್ ಮೇಲೆ, ಎಂಎಲ್‌ಸಿ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಸಹೋದರ ಚನ್ನರಾಜ್ (Channaraj) ಹಟ್ಟಿಹೊಳ್ಳಿ ಆಪ್ತರು ಈ ಮಾರಣಾಂತಿಕ ಹಲ್ಲೆ ನಡೆಸಿರುವ ಗಂಭೀರ ಆರೋಪ ಕೇಳಿಬಂದಿದೆ.

    ಸದ್ದಾಂ, ಸುಜಯ್ ಜಾಧವ್ ಮತ್ತು ಚನ್ನರಾಜ್ ಅವರು ಪೃಥ್ವಿ ಸಿಂಗ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಬಂದಿದೆ. ಸಂಜೆ ಪೃಥ್ವಿ ಸಿಂಗ್ ಮನೆಗೆ ಏಕಾಏಕಿ ಬಂದ ಆರೋಪಿಗಳು ಕೆಲಹೊತ್ತು ಮಾತಿನ ಚಕಮಕಿ ನಡೆಸಿದ್ದಾರೆ. ಬಳಿಕ ನೇರವಾಗಿ ಚಾಕುವಿನಿಂದ ಹಲ್ಲೆಗೆ ಮುಂದಾಗಿರುವ ಆರೋಪ ಕೇಳಿಬಂದಿದೆ. ಸದ್ಯ ಪೃಥ್ವಿ ಸಿಂಗ್‌ಗೆ ಕೆಎಲ್‌ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಇದನ್ನೂ ಓದಿ: ಸಿಪಿವೈ ಬಾವ ನಾಪತ್ತೆ ಪ್ರಕರಣ ದುರಂತ ಅಂತ್ಯ – ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನೆ, ಅಂತ್ಯಕ್ರಿಯೆಗೆ ಸಿದ್ಧತೆ

    ಸುದ್ದಿ ತಿಳಿದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಎಂಎಲ್‌ಸಿ ಛಲವಾದಿ ನಾರಾಯಣಸ್ವಾಮಿ, ಮಾಜಿ ಶಾಸಕ ಸಂಜಯ್ ಪಾಟೀಲ್ ಸೇರಿದಂತೆ ಹಲವು ಮುಖಂಡರು ಆಸ್ಪತ್ರೆಗೆ ಭೇಟಿ ಪೃಥ್ವಿ ಸಿಂಗ್ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಮಾತನಾಡಿದ ಬಿವೈ ವಿಜಯೇಂದ್ರ ಸಿಎಂ, ಡಿಸಿಎಂ ಗೃಹ ಸಚಿವರು ಬೆಳಗಾವಿಯಲ್ಲಿ ಇರುವಾಗಲೇ ಈ ರೀತಿ ಘಟನೆ ನಡೆದಿದೆ. ಇದನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೆವೆ. ಘಟನೆ ನಡೆಯುವಾಗ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಹಾಗೂ ಎಂಎಲ್‌ಸಿ ಚನ್ನರಾಜ್ ಸ್ಥಳದಲ್ಲಿ ಇರುವ ಮಾಹಿತಿಯಿದೆ. ಇಂದು ರಾತ್ರಿಯೇ ಆರೋಪಿಗಳ ಬಂಧನವಾಗಬೇಕು ಇಲ್ಲದಿದ್ದರೆ ಬಿಜೆಪಿ ಕಾರ್ಯಕರ್ತರು ರಸ್ತೆಗಿಳಿಯುತ್ತಾರೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಮದುವೆಗೆ ಹೋಗಿ ಬರುತ್ತಿದ್ದವರ ಕಾರು ಅಪಘಾತ – ಇಬ್ಬರು ಸಾವು, ಐವರು ಗಂಭೀರ

    ಘಟನೆ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹ ಪ್ರತಿಕ್ರಿಯೆ ನೀಡಿದ್ದು, ನಾನು ನನ್ನ ಸಹೋದರನ ಜೊತೆಗೆ ಮಾತನಾಡಿ ಘಟನೆ ಬಗ್ಗೆ ಮಾಹಿತಿ ಪಡೆದಿದ್ದೇನೆ. ಈ ಬಗ್ಗೆ ಸತ್ಯಾಸತ್ಯತೆ ಗೊತ್ತಾಗಬೇಕು. ಇದರ ಹಿಂದೆ ಯಾರು ಇದ್ದಾರೆ? ಇದು ಷಡ್ಯಂತ್ರವೋ, ರಾಜಕೀಯ ಪ್ರೇರಿತವೋ ಎಂದು ಗೊತ್ತಾಗಬೇಕು. ಈ ಬಗ್ಗೆ ಪೃಥ್ವಿ ಸಿಂಗ್ ದೂರು ನೀಡಲಿ. ಪೊಲೀಸರು ಆರೋಪಿಗಳನ್ನು ಬಂಧನ ಮಾಡುತ್ತಾರೆ ಎಂದರು. ಇನ್ನೊಂದೆಡೆ ಹಲ್ಲೆ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಪರಮೇಶ್ವರ್, ಏನೇ ಇದ್ದರೂ ನಮ್ಮ ಪೊಲೀಸರು ನೋಡಿಕೊಳ್ಳುತ್ತಾರೆ. ಯಾರೇ ಭಾಗಿಯಾಗಿದ್ದರೂ ಕಾನೂನು ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿ ಟೆಕೆಟ್‌ಗಾಗಿ ಕೋಟಿ ಡೀಲ್‌ – ಚೈತ್ರಾಗೆ ಜಾಮೀನು ಮಂಜೂರು

    ಒಟ್ಟಿನಲ್ಲಿ ಅಧಿವೇಶನ ನಡೆಯುವಾಗಲೇ ಇಂತಹ ಪ್ರಕರಣ ನಡೆದಿದ್ದು, ಆಡಳಿತ ಸರ್ಕಾರಕ್ಕೆ ಮುಜುಗರ ತಂದಿದೆ. ಮತ್ತೊಂದು ಕಡೆ ಬಿಜೆಪಿ ಇದರ ವಿರುದ್ಧ ಯಾವೆಲ್ಲ ರೀತಿ ಹೋರಾಟ ಮಾಡಲಿದೆ ಎಂದು ಕಾದು ನೋಡಬೇಕಿದೆ. ಇದನ್ನೂ ಓದಿ: ತನ್ನ ಪ್ರಾಣ ತ್ಯಾಗ ಮಾಡಿ ಹಲವರ ಜೀವ ಉಳಿಸಿದ ಅರ್ಜುನ – ನಡೆದಿದ್ದೇನು?

  • ಸರಿಯಾದ ಸಮಯಕ್ಕೆ ಸಂಬಳವಾಗುತ್ತಿಲ್ಲ – ಅಧಿವೇಶನದ ಮೊದಲ ದಿನವೇ ಹಲವು ಪ್ರತಿಭಟನೆ

    ಸರಿಯಾದ ಸಮಯಕ್ಕೆ ಸಂಬಳವಾಗುತ್ತಿಲ್ಲ – ಅಧಿವೇಶನದ ಮೊದಲ ದಿನವೇ ಹಲವು ಪ್ರತಿಭಟನೆ

    ಬೆಳಗಾವಿ: ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ (Belagavi Winter Session) ಆರಂಭ ಹಿನ್ನೆಲೆ ಮೊದಲ ದಿನವೇ ಹಲವು ಪ್ರತಿಭಟನೆಗಳು (Protest) ನಡೆಯಿತು. ಸುವರ್ಣಸೌಧದ ಬಳಿಯ ಸುವರ್ಣ ಗಾರ್ಡನ್‌ನಲ್ಲಿ ವಿವಿಧ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದರು.

    ಮಹದಾಯಿ ನೀರಿಗಾಗಿ ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳ ರೈತರಿಂದ ಹೋರಾಟ ನಡೆಯಿತು. ಗದಗ- ಹರಪನಹಳ್ಳಿ ರೈಲ್ವೆ ಮಾರ್ಗಕ್ಕಾಗಿ ಮುಂಡರಗಿ ತಾಲೂಕು ಹೋರಾಟ ಸಮಿತಿಯಿಂದ ಧರಣಿ ನಡೆಸಲಾಯಿತು. ವಿಶೇಷ ಶಾಲೆಯ ಶಿಕ್ಷಕರ ಮತ್ತು ಶಿಕ್ಷಕೇತರರಿಗೆ ಸೇವಾ ಭದ್ರತೆ ಒದಗಿಸುವಂತೆ ಆಗ್ರಹಿಸಿ, ರಾಜ್ಯ ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ಇದನ್ನೂ ಓದಿ: ಶುಚಿ ಯೋಜನೆಗೆ ಮರು ಚಾಲನೆ – ಜನವರಿಯಿಂದ ಶಾಲೆಗಳಿಗೆ ತೆರಳಿ ನ್ಯಾಪ್ಕಿನ್ ವಿತರಣೆ: ದಿನೇಶ್ ಗುಂಡೂರಾವ್

     

    ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಶಿಕ್ಷಕರುಗಳು (Teacher) ಭಾಗಿಯಾಗಿದ್ದರು. ಶಿಶು ಕೇಂದ್ರೀಕೃತ ಯೋಜನೆಯಡಿ ಒಟ್ಟು 136 ಶಾಲೆಗಳಿವೆ ಇದರಲ್ಲಿ ಸಾವಿರಾರು ಜನ ಶಿಕ್ಷಕರರಿದ್ದಾರೆ. ಆದರೆ ಶಿಕ್ಷಕರಿಗೆ ಯಾವುದೇ ಸೇವಾ ಭದ್ರತೆ ಇಲ್ಲ, ಸರಿಯಾದ ಸಮಯಕ್ಕೆ ಸಂಬಳವಾಗುತ್ತಿಲ್ಲ, ಯಾವುದೇ ಸೌಲಭ್ಯಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ‌ ನೀಡುತ್ತಿಲ್ಲ‌ ಎಂದು ಪ್ರತಿಭಟನಾಕಾರರು ತಮ್ಮ ಅಸಮಾಧಾನ ಹೊರಹಾಕಿದರು.

    ಪ್ರತಿಭಟನಾ ಸ್ಥಳಕ್ಕೆ ಸಚಿವ ಎಚ್ ಸಿ ಮಹಾದೇವಪ್ಪ ಭೇಟಿ ನೀಡಿ ಅಹವಾಲು ಸ್ವೀಕಾರ ಮಾಡಿದರು. ಕೂಡಲೇ ಸಂಬಂಧಿಸಿದ ಇಲಾಖೆಯ ಮುಖ್ಯಾಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ಶಿಕ್ಷಕರಿಗೆ ಸೇವಾ ಭದ್ರತೆ ನೀಡಲು ಸೂಚನೆ ನೀಡುವ ಮೂಲಕ ಸ್ಥಳದಲ್ಲಿಯೇ ಪರಿಹಾರ ಸೂಚಿಸಿದರು.

     

  • ಬೈಕ್ ಸವಾರನಿಗೆ ಆವಾಜ್ ಹಾಕಿದ ಪ್ರಕರಣ – ಭವಾನಿ ಪರ ಮಾತಾಡುತ್ತಲೇ ವಿಷಾದ ವ್ಯಕ್ತಪಡಿಸಿದ ರೇವಣ್ಣ

    ಬೈಕ್ ಸವಾರನಿಗೆ ಆವಾಜ್ ಹಾಕಿದ ಪ್ರಕರಣ – ಭವಾನಿ ಪರ ಮಾತಾಡುತ್ತಲೇ ವಿಷಾದ ವ್ಯಕ್ತಪಡಿಸಿದ ರೇವಣ್ಣ

    ಬೆಳಗಾವಿ: ಭವಾನಿ ರೇವಣ್ಣ (Bhavani Revanna) ಆಡಿದ ಮಾತುಗಳಿಂದ ಯಾರಿಗಾದರೂ ನೋವಾಗಿದ್ದರೆ ರಾಜ್ಯದ ಜನರಿಗೆ ಪತ್ನಿಯ ಪರವಾಗಿ ನಾನೇ ಕ್ಷಮೆ ಕೇಳುತ್ತೇನೆ ಎಂದು ಹೆಚ್‌ಡಿ ರೇವಣ್ಣ (HD Revanna) ಹೇಳಿದ್ದಾರೆ.

    ಬೆಳಗಾವಿಯ (Belagavi) ಸುವರ್ಣ ಸೌಧದಲ್ಲಿ ಮಾತನಾಡಿದ ಹೆಚ್‌ಡಿ ರೇವಣ್ಣ, ಬೈಕ್ ಚಾಲಕನಿಗೆ ಹೆಚ್ಚು ಕಡಿಮೆ ಆಗಿದ್ದರೆ ಏನಾಗುತ್ತಿತ್ತು? ಭವಾನಿಯವರು ಏನೂ ಅಹಂಕಾರದ ಮಾತಾಡಿಲ್ಲ. ಭವಾನಿಯವರು ಯಾರದ್ದೋ ಸ್ನೇಹಿತರ ಕಾರಿನಲ್ಲಿ ಹೋಗಿದ್ದರು. ಅವರು ಅಪಘಾತ ಸಂಭವಿಸಿದಾಗ ಸಿಟ್ಟಿನಲ್ಲಿ ಮಾತನಾಡಿದ್ದಾರೆ. ನಮ್ಮ ಕುಟುಂಬ ಯಾರಿಗೂ ನೋವು ಆಗುವ ಕೆಲಸ ಮಾಡಿಲ್ಲ ಎಂದು ಹೇಳಿದರು.

    ಏನಾದರೂ ಹೆಚ್ಚು ಕಡಿಮೆ ಆಗಿದ್ದರೆ ಏನಾಗುವುದು? ಅದರ ವೀಡಿಯೋವನ್ನು ಬೇಕಂತಲೇ ಯಾರೋ ವೈರಲ್ ಮಾಡಿದ್ದಾರೆ. ಅವರು ಬೈಕ್‌ನವನ ಪ್ರಾಣದ ಬಗ್ಗೆ ಮಾತನಾಡಿಲ್ಲ. ಇವರದ್ದೇ ಪ್ರಾಣ ಹೋಗಿದ್ದರೆ ಏನು ಮಾಡುವುದು? ಅದರಿಂದ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ. ಬೇಕಿದ್ದರೆ ಭವಾನಿ ಹತ್ತಿರನೂ ಕ್ಷಮೆ ಕೇಳಿಸೋಣ ಬಿಡಿ ಎಂದು ಹೇಳಿಕೆ ನೀಡಿದರು. ಇದನ್ನೂ ಓದಿ: ತಾಯಿ ಅಕ್ಷಮ್ಯ ಪದ ಬಳಕೆಗೆ ಕ್ಷಮೆಯಾಚಿಸಿದ ಸೂರಜ್ ರೇವಣ್ಣ

    ಭವಾನಿ ಯಾವತ್ತೂ ಯಾರಿಗೂ ನೋವು ಮಾಡಿಲ್ಲ. ಸ್ನೇಹಿತರ ಕಾರು ಅಂತ ಅವರು ಹಾಗೆ ಮಾಡಿದ್ದಾರೆ. ನಮ್ಮ ಕುಟುಂಬ ಆ ಥರ ಇಲ್ಲ. ಗಾಡಿ ಅವಘಡ ಆದ ಮೇಲೆ ದೂರು ಕೊಡದಿದ್ದರೆ ತಪ್ಪಾಗಲ್ಲವಾ? ಘಟನೆ ನಡೆದ ಬಳಿಕ ಠಾಣೆಗೆ ತಿಳಿಸಬೇಕಲ್ಲವಾ? ಯಾರಿಗಾದರೂ ನೋವಾಗಿದ್ದರೂ ವಿಷಾದ ವ್ಯಕ್ತಪಡಿಸುತ್ತೇನೆ. ಆತ ಕುಡಿದು ಬಂದು ಗಾಡಿಗೆ ಗುದ್ದಿದ್ದಾನೆ. ಕಾರಿನಲ್ಲಿದ್ದವರ ಪ್ರಾಣಕ್ಕೆ ತೊಂದರೆ ಆಗಿದ್ದರೆ? ಎಷ್ಟೇ ನಿಧಾನವಾಗಿ ಹೋಗಿದ್ದರು ಬಂದು ಮಧ್ಯದಲ್ಲಿ ಗುದ್ದಿದ್ದಾನೆ. ಅದನ್ನು ದೊಡ್ಡ ವಿಷಯ ಮಾಡಬೇಡಿ ಎಂದು ಕೇಳಿಕೊಂಡರು.

    ಕಾರನ್ನು ಎಷ್ಟೇ ಸೈಡಿಗೆ ತೆಗೆದುಕೊಂಡು ಹೋದರೂ ಬೈಕಿನವ ಕಾರಿಗೆ ಅಡ್ಡ ಬಂದು ಅಪಘಾತ ಮಾಡಿದ್ದಾನೆ. ದೂರು ಕೊಟ್ಟಿದ್ದಾರೆ, ಕಾರು ಅಪಘಾತ ಆಗಿರುವ ಕಾರಣ ಇನ್‌ಶ್ಯೂರೆನ್ಸ್ಗಾಗಿ ದೂರು ನೀಡಿದ್ದಾರೆ. ಯಾರನ್ನೂ ಪ್ರಕರಣದಲ್ಲಿ ಸಿಲುಕಿಸುವ ಉದ್ದೇಶ ಹೊಂದಿಲ್ಲ. ಬೈಕ್ ಸವಾರ ಕುಡಿದಿದ್ದ ಕಾರಣ ಅಪಘಾತ ಸಂಭವಿಸಿದೆ. ಆತನ ವಿರುದ್ಧ ದೂರು, ಕ್ರಮ ಕೈಗೊಳ್ಳಲ್ಲ. ಯಾರೂ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ನಮ್ಮ ಕುಟುಂಬದಿಂದ ಯಾರಿಗೂ ನೋವನ್ನುಂಟು ಮಾಡುವುದಿಲ್ಲ. ಅವರ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಹೆಚ್‌ಡಿ ರೇವಣ್ಣ ನುಡಿಸಿದ್ದಾರೆ. ಇದನ್ನೂ ಓದಿ: ಎಕ್ಸೆಲ್ ಕಟ್ ಆಗಿ ನಿಯಂತ್ರಣ ತಪ್ಪಿದ್ದ ಬಸ್ – ದೊಡ್ಡ ದುರಂತ ತಪ್ಪಿಸಿದ ಚಾಲಕನಿಗೆ ಸನ್ಮಾನ

  • ಪೊಲೀಸರ ಸರ್ಪಗಾವಲಿನಲ್ಲಿ ಬೆಳಗಾವಿ ಅಧಿವೇಶನ – ಭದ್ರತೆಗೆ 5,000 ಸಿಬ್ಬಂದಿ ನಿಯೋಜನೆ

    ಪೊಲೀಸರ ಸರ್ಪಗಾವಲಿನಲ್ಲಿ ಬೆಳಗಾವಿ ಅಧಿವೇಶನ – ಭದ್ರತೆಗೆ 5,000 ಸಿಬ್ಬಂದಿ ನಿಯೋಜನೆ

    ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ (Suvarna Soudha) ಚಳಿಗಾಲದ ಅಧಿವೇಶನ (Belagavi Session) ಸೋಮವಾರ (ಡಿ.4)ದಿಂದ ಆರಂಭವಾಗುತ್ತಿದ್ದು, ಬಿಗಿ ಭದ್ರತೆಗೆ 5 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

    ಅಧಿವೇಶನದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬೆಳಗಾವಿ ಆಗಮಿಸುತ್ತಿದ್ದಂತೆ ಮೇಯರ್ ಶೋಭಾ ಸೋಮನ್ನಾಚೆ, ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕ ಆಸೀಫ್ ಸೇಠ್ ಸೇರಿ ಹಲವರು ಸ್ವಾಗತ ಕೋರಿದ್ದಾರೆ. ಇದನ್ನೂ ಓದಿ: Cyclone Michaung- ನೆಲ್ಲೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಬಾಲಕ ದುರ್ಮರಣ

    ಬೆಳಗಾವಿ ಜಿಲ್ಲೆಯಲ್ಲಿ ಸಾಲು ಸಾಲು ಪ್ರತಿಭಟನೆಗಳು ಹಮ್ಮಿಕೊಂಡಿರುವುದರಿಂದ ಭದ್ರತೆಗೆ 5 ಸಾವಿರ ಪೊಲೀಸ್ ಸಿಬ್ಬಂದಿಯನ್ನು (Belagavi Police) ನಿಯೋಜಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಎಸ್.ಎನ್ ಸಿದ್ದರಾಮಪ್ಪ ನೇತೃತ್ವದಲ್ಲಿ ಭದ್ರತಾ ತಂಡವನ್ನು ನಿಯೋಜಿಸಲಾಗಿದೆ.

    ಒಟ್ಟು 9 IPS ದರ್ಜೆ, 12 ಹೆಚ್ಚುವರಿ SP, 37 DYSP, 92 PI, 219 ಪಿಎಸ್‌ಐ, 366 ಎಎಸ್‌ಐ, 3 ಸಾವಿರ ಪೊಲೀಸ್ ಕಾನ್ಸ್ಟೇಬಲ್, 200 ಹೋಮ್ ಗಾರ್ಡ್ಸ್, 35 ಕೆಎಸ್‌ಆರ್‌ಪಿ ತುಕಡಿಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ. 2 ಸಾವಿರ ಪೊಲೀಸ್ ಸಿಬ್ಬಂದಿ ವಾಸ್ತವ್ಯಕ್ಕೆ ಸುವರ್ಣ ಸೌಧ ಸಮೀಪದಲ್ಲೇ ಜರ್ಮನ್ ಟೆಂಟ್ ನಿರ್ಮಾಣ ಮಾಡಲಾಗಿದ್ದು, ಕಾಟ್, ಬೆಡ್, ತಲೆದಿಂಬು, ಚಾರ್ಜಿಂಗ್ ಪಾಯಿಂಟ್, ಬಿಸಿ ನೀರು ವ್ಯವಸ್ಥೆಗಳನ್ನೂ ಕಲ್ಪಿಸಲಾಗಿದೆ.

    ಇನ್ನೂ ಚಳಿಗಾಲದ ಅಧಿವೇಶನಕ್ಕೆ ಪ್ರತಿಯಾಗಿ ಅನುಮತಿ ನಿರಾಕರಣೆ ನಡುವೆಯೂ ಮಹಾಮೇಳಾವ್ ನಡೆಸಲು ಉದ್ದೇಶಿಸಿದ್ದ ಬೆಳಗಾವಿ ನಗರ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಮಹಾಮೇಳಾವ್ ನಡೆಸಲು ನಿಗಧಿಯಾಗಿದ್ದ ಲೇಲೆ ಮೈದಾನದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

    ಈ ಹಿನ್ನೆಲೆಯಲ್ಲಿ ಬೆಳಗಾವಿ ನಗರದಿಂದ 18 ಕಿಮೀ ದೂರದಲ್ಲಿರುವ ಮಹಾರಾಷ್ಟ್ರದ ಶಿನ್ನೋಳ್ಳಿ ಗ್ರಾಮದಲ್ಲಿ ಮಹಾಮೇಳಾವ್ ನಡೆಸಲು ಎಂಇಎಸ್ ನಿರ್ಧರಿಸಿದೆ. ಮಹಾರಾಷ್ಟ್ರದ ಶಿವಸೇನೆ, ಎನ್‌ಸಿಪಿ ಮುಖಂಡರು ಮಹಾಮೇಳಾವ್‌ದಲ್ಲಿ ಭಾಗಿಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಸರ್ಕಾರಿ ಸಂಸ್ಥೆಗಳಿಂದಲೇ ಸಾವಿರಾರು ಕೋಟಿ ಕರೆಂಟ್ ಬಿಲ್ ಬಾಕಿ – BBMP ಮೇಲೆ ಬೆಸ್ಕಾಂ ಅಧಿಕಾರಿಗಳು ಗರಂ

  • ಆಂಗ್ಲ ಭಾಷೆಯಲ್ಲಿದ್ದ ಜಾಹೀರಾತು ಫಲಕ ಹರಿದು ಆಕ್ರೋಶ; 50 ಕರವೇ ಕಾರ್ಯಕರ್ತರ ಬಂಧನ

    ಆಂಗ್ಲ ಭಾಷೆಯಲ್ಲಿದ್ದ ಜಾಹೀರಾತು ಫಲಕ ಹರಿದು ಆಕ್ರೋಶ; 50 ಕರವೇ ಕಾರ್ಯಕರ್ತರ ಬಂಧನ

    ಬೆಳಗಾವಿ: ಆಂಗ್ಲ ಭಾಷೆಯಲ್ಲಿದ್ದ ಜಾಹೀರಾತು ಫಲಕಗಳನ್ನು ಹರಿದು ಕರ್ನಾಟಕ ರಕ್ಷಣಾ ವೇದಿಕೆ (Karnataka Rakshana Vedike) ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ.

    ನಗರದ ವಿವಿಧ ಬಡಾವಣೆಗಳಲ್ಲಿ ಅಳವಡಿಸಿರುವ ಜಾಹೀರಾತು ಫಲಕಗಳಲ್ಲಿ ಕನ್ನಡ ಕಡೆಗಣಿಸಿದವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಕರವೇ (ಟಿ‌.ಎ‌‌.ನಾರಾಯಣಗೌಡ ಬಣ) ಕಾರ್ಯಕರ್ತರು ನಗರದ ರಾಣಿ ಚನ್ನಮ್ಮನ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಇದನ್ನೂ ಓದಿ: ಬೈಕ್ ಡಿಕ್ಕಿ- ವೃದ್ಧನ ತಲೆಯಲ್ಲಿದ್ದ ದಿನಸಿ ಚೀಲಕ್ಕೆ ಕೈತಾಗಿ ಬಿದ್ದಾಕೆಯ ಮೇಲೆ ಹರಿದ ಬಸ್!

    ಆಂಗ್ಲ ಭಾಷೆಯಲ್ಲಿದ್ದ ಹಲವು ಫಲಕಗಳನ್ನು ಹರಿದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಜಿಲ್ಲಾಡಳಿತ ವಿರುದ್ಧ ಘೋಷಣೆ ಕೂಗಿದರು. ಅವರನ್ನು ತಡೆಯಲು ಪೊಲೀಸರು ಯತ್ನಿಸಿದಾಗ, ಪರಸ್ಪರ ವಾಗ್ವಾದ ನಡೆಯಿತು‌.

    ವೃತ್ತದಲ್ಲೇ ಪ್ರತಿಭಟನೆ ಮುಂದುವರಿಸಿದ್ದ 50ಕ್ಕೂ ಅಧಿಕ ಕರವೇ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದುಕೊಂಡರು. ಸದ್ಯ ಬೆಳಗಾವಿ ಚೆನ್ನಮ್ಮ ವೃತ್ತದಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಚೀಟಿ ತೋರಿಸಿ ಮಹಿಳೆಯ ಮಾಂಗಲ್ಯ ಕದ್ದೊಯ್ದ ಕಳ್ಳ – ಸಿಸಿಟಿವಿಯಲ್ಲಿ ಕೃತ್ಯ ಸೆರೆ

  • ಬೈಕ್ ಡಿಕ್ಕಿ- ವೃದ್ಧನ ತಲೆಯಲ್ಲಿದ್ದ ದಿನಸಿ ಚೀಲಕ್ಕೆ ಕೈತಾಗಿ ಬಿದ್ದಾಕೆಯ ಮೇಲೆ ಹರಿದ ಬಸ್!

    ಬೈಕ್ ಡಿಕ್ಕಿ- ವೃದ್ಧನ ತಲೆಯಲ್ಲಿದ್ದ ದಿನಸಿ ಚೀಲಕ್ಕೆ ಕೈತಾಗಿ ಬಿದ್ದಾಕೆಯ ಮೇಲೆ ಹರಿದ ಬಸ್!

    ಬೆಳಗಾವಿ: ನಗರದ ಕೇಂದ್ರ ಬಸ್ ನಿಲ್ದಾಣದ (Bus Stand) ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಮಹಿಳೆ ಸಾವನ್ನಪ್ಪಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಧಾರವಾಡ (Dharwad) ಮೂಲದ ವಿದ್ಯಾಶ್ರೀ (32) ಮೃತ ದುರ್ದೈವಿ. ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆ ಪಕ್ಕದಲ್ಲಿ ದಿನಸಿ ಹೊತ್ತು ಹೊರಟಿದ್ದ ವೃದ್ಧನಿಗೆ ಬೈಕ್ ಡಿಕ್ಕಿಯಾಗಿತ್ತು. ಈ ವೇಳೆ ವೃದ್ಧನ ಚೀಲಕ್ಕೆ ಬೈಕ್‌ನಲ್ಲಿ ಕುಳಿತಿದ್ದ ವಿದ್ಯಾಶ್ರೀ ಕೈತಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಕ್ರದಡಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಮದುವೆ ಒಪ್ಪಂದಕ್ಕೆ ಒಪ್ಪದ ಶಿಕ್ಷಕಿಯ ಅಪಹರಣ

    ಬೈಕ್ ಸವಾರ ಬಚಾವ್ ಆಗಿದ್ದಾರೆ. ತಲೆಗೆ ಹೆಲ್ಮೆಟ್ ಹಾಕಿದ್ದರಿಂದ ಬಸ್‌ನ ಚಕ್ರ ತಲೆಯ ಮೇಲೆ ಹರಿದಿದೆ. ಅದೃಷ್ಟವಶಾತ್ ಈ ಅಪಘಾತದಲ್ಲಿ ಬೈಕ್ ಸವಾರ ಬದುಕುಳಿದಿದ್ದಾರೆ. ಇದನ್ನೂ ಓದಿ: ಪೊಲೀಸರ ಕಣ್ತಪ್ಪಿಸಲು ಸಿಗರೇಟ್‌ಗೆ ಸೀಕ್ರೆಟ್ ರೂಮ್‌ – ಬ್ರ‍್ಯಾಂಡೆಡ್ ಹೆಸರಿನ ನಕಲಿ ಸಿಗರೇಟ್ ಸೀಜ್..!

    ಸಂಬಂಧಿಕರ ಮನೆಗೆ ಬೈಕ್‌ನಲ್ಲಿ ವಿದ್ಯಾಶ್ರೀ ಬಂದಿದ್ದರು. ಎರಡು ದಿನದ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ಇದನ್ನೂ ಓದಿ: ಕೆಳಗೆ ನಿಂತು ಟ್ರ್ಯಾಕ್ಟರ್ ಆನ್ ಮಾಡಿದ ರೈತ – ಮೈಮೇಲೆ ಟ್ರ್ಯಾಕ್ಟರ್ ಹರಿದು ಸಾವು

  • ವಿದ್ಯುತ್ ಶಾಕ್ ತಗುಲಿ ತಂದೆ-ಮಗ ಸಾವು

    ವಿದ್ಯುತ್ ಶಾಕ್ ತಗುಲಿ ತಂದೆ-ಮಗ ಸಾವು

    ಚಿಕ್ಕೋಡಿ (ಬೆಳಗಾವಿ): ಬೆಂಗಳೂರಿನಲ್ಲಿ (Bengaluru) ಪಾದಚಾರಿ ಮಾರ್ಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ವೈರ್ ತುಳಿದು ತಾಯಿ ಹಾಗೂ ಮಗು ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಅಥಣಿಯಲ್ಲಿ (Athani) ತಂದೆ (Father) ಮತ್ತು ಮಗನಿಗೆ (Son) ವಿದ್ಯುತ್ ಶಾಕ್ (Electrocution) ತಗುಲಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಸಂಭವಿಸಿದೆ.

    ಬೆಳಗಾವಿ (Belagavi) ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಮಲ್ಲಿಕಾರ್ಜುನ ಸದಾಶಿವ ಪೂಜಾರಿ (32) ಹಾಗೂ ಪ್ರೀತಮ್ ಮಲ್ಲಿಕಾರ್ಜುನ ಪೂಜಾರಿ (7) ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಭಾನುವಾರ ಮಧ್ಯಾಹ್ನ ಮಲ್ಲಿಕಾರ್ಜುನ ತೋಟದಲ್ಲಿ ಬೋರ್‌ವೆಲ್ ಮೋಟಾರ್ ಆನ್ ಮಾಡಿ ಬೇರೆ ಕಡೆ ನೀರು ತಿರುವಿಗೆ (ವಾಲ್ ಟರ್ನ್) ಮುಂದಾಗಿದ್ದಾರೆ. ಇದನ್ನೂ ಓದಿ: ಫಸಲಿಗೆ ಬಂದ 70ಕ್ಕೂ ಹೆಚ್ಚು ತೆಂಗಿನ ಮರಗಳನ್ನು ಕಡಿದ ಕಿಡಿಗೇಡಿಗಳು – ಕಣ್ಣೀರಿಟ್ಟ ರೈತ

    ಆದರೆ ಬೋರ್‌ವೆಲ್ ಹತ್ತಿರ ವೈರ್ ತುಂಡಾಗಿದ್ದು ಗಮನಿಸದೇ ವಿದ್ಯುತ್ ಕೈಗೆ ತಗುಲಿ ಸಾವು ಸಂಭವಿಸಿದೆ. ಅಪ್ಪನನ್ನು ಉಳಿಸಲು ಹೋಗಿ ಮಗ ಪ್ರೀತಮ್ ಕೂಡ ಸ್ಥಳದಲ್ಲಿ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮರಳು ದಂಧೆ ತಡೆಯಲು ಹೋಗಿದ್ದ ಅಧಿಕಾರಿ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆ