Tag: belagavi

  • ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳಾಗಬೇಕು ಅಂತ ಸಚಿವರಿಗೆ ಹೈಕಮಾಂಡ್‌ ಹೇಳಿಲ್ಲ: ಸತೀಶ್‌ ಜಾರಕಿಹೊಳಿ

    ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳಾಗಬೇಕು ಅಂತ ಸಚಿವರಿಗೆ ಹೈಕಮಾಂಡ್‌ ಹೇಳಿಲ್ಲ: ಸತೀಶ್‌ ಜಾರಕಿಹೊಳಿ

    ಬೆಳಗಾವಿ: ಇಲ್ಲಿವರೆಗೆ ಯಾವುದೇ ಸಚಿವರಿಗೆ ಲೋಕಸಭೆ ಚುನಾವಣೆಗೆ ಅಭ್ಯರ್ಥಿಯಾಗಬೇಕೆಂದು ಹೈಕಮಾಂಡ್‌ ಹೇಳಿಲ್ಲ. ಅಭ್ಯರ್ಥಿಗಳ ಆಯ್ಕೆಗಾಗಿ ಮೊದಲು ಅರ್ಜಿ ಕರೆಯಲಾಗುತ್ತೆ ಎಂದು ಸಚಿವ ಸತೀಶ್‌ ಜಾರಕಿಹೊಳಿ (Satish Jarkiholi) ತಿಳಿಸಿದರು.

    ನಗರದ ಕಾಂಗ್ರೆಸ್‌ (Congress) ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಲೋಕಸಭೆ ಚುನಾವಣೆಗೆ ತಯಾರಿ ನಡೆದಿದೆ. ಕಾರ್ಯಕರ್ತರು ಚುನಾವಣೆ ಎದುರಿಸಲು ಸಿದ್ಧರಾಗಿದ್ದಾರೆ. ಎಲ್ಲಾ ರೀತಿಯ ಮಾನದಂಡಗಳನ್ನು ಅನುಸರಿಸಿ, ಮೂರು ಹಂತಗಳಲ್ಲಿ ಚರ್ಚಿಸಿದ ನಂತರ ಹೈಕಮಾಂಡ್‌ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತದೆ. ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಲಿಂಗಾಯತ, ಚಿಕ್ಕೋಡಿ ಕ್ಷೇತ್ರಕ್ಕೆ ಕುರುಬ ಸಮಾಜದ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕೆಂದು ಚಿಂತನೆ ನಡೆದಿದೆ. ರಾಜ್ಯದ 20 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಗೆಲುವಿಗೆ ಗುರಿ ಇಟ್ಟುಕೊಳ್ಳಲಾಗಿದೆ ಎಂದರು. ಇದನ್ನೂ ಓದಿ: ಸರ್ಕಾರಿ ಶಾಲೆಯಲ್ಲಿ ಶೂ ಬದಲು ಚಪ್ಪಲಿ ಭಾಗ್ಯ – ದ್ವಂದ್ವ ನಿಲುವಿನ ಆದೇಶದಿಂದ ಹಠ ಹಿಡಿದ ಮಕ್ಕಳು

    ಅಭ್ಯರ್ಥಿಗಳ ಆಯ್ಕೆಗಾಗಿ ಮೊದಲು ಅರ್ಜಿ ಕರೆಯಲಾಗುತ್ತೆ. ಚುನಾವಣೆಗೆ ಸ್ಪರ್ಧಿಸಲು ಇಚ್ಛಿಸುವವರು ಅರ್ಜಿ ಸಲ್ಲಿಸಬೇಕು. ಅರ್ಜಿಗೆ ಯಾವುದೇ ರೀತಿಯ ಶುಲ್ಕ ಇರುವುದಿಲ್ಲ. ರಾಹುಲ್‌ ಜಾರಕಿಹೊಳಿ, ಮೃಣಾಲ್‌ ಹೆಬ್ಬಾಳ್ಕರ್‌ ಲೋಕಸಭೆಗೆ ಸ್ಪರ್ಧೆ ಮಾಡುತ್ತೇನೆಂದು ಎಲ್ಲಿಯೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು.

    ಹೆಚ್.ಡಿ. ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಜಾರಕಿಹೊಳಿ, ಹೆಚ್.ಡಿ. ಕುಮಾರಸ್ವಾಮಿಯವರು ವಿರೋಧ ಪಕ್ಷದಲ್ಲಿ ಇದ್ದಾರೆ. ಆರೋಪ ಮಾಡಲು ಅವರಿಗೆ ಹಕ್ಕು ಇದೆ. ಮಾತನಾಡುತ್ತಾರೆ, ನಾವು ಮಾತನಾಡಬೇಡ ಅಂತಾ ಹೇಳಲು ಆಗಲ್ಲ. ಹೆಚ್ಡಿಕೆ ಸೋಪಾ ಗಿಪ್ಟ್‌ ಆರೋಪಕ್ಕೆ ಮುಖ್ಯಮಂತ್ರಿ ಕಚೇರಿ ಅಧಿಕಾರಿಗಳು ಸ್ಪಷ್ಟೀಕರಣ ನೀಡುತ್ತಾರೆ. ಅದರ ಬಗ್ಗೆ ನಮಗೆ ಗೊತ್ತಿಲ್ಲ. ಸಚಿವರಿಗೆ ಹಣ ಸಂಗ್ರಹ ಟಾರ್ಗೆಟ್‌ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಆ ರೀತಿಯ ಕಂಡಿಷನ್‌ ನಮ್ಮ ಮಂತ್ರಿ ಮಂಡಲದಲ್ಲಿ ನಡೆದಿಲ್ಲ ಎಂದು ಆರೋಪ ತಳ್ಳಿಹಾಕಿದರು. ಇದನ್ನೂ ಓದಿ: ವಿಜಯೇಂದ್ರಗೆ ಮೋದಿ, ಅಮಿತ್‌ ಶಾ ಮಹತ್ವದ ಹೊಣೆ ನೀಡಿದ್ದಾರೆ: ಎಸ್.ಎಂ ಕೃಷ್ಣ ಶ್ಲಾಘನೆ

    ಕಾಂಗ್ರೆಸ್‌ ಪಕ್ಷ ಸಾಕಷ್ಟು ಯೋಜನೆಗಳನ್ನು ಜನಕ್ಕೆ ನೀಡಿದೆ. ಆದರೆ ಪ್ರಚಾರ ಪಡೆದಿಲ್ಲ. ಪ್ರಚಾರ ಪಡೆಯುವ ಕಾರ್ಯ ಆಗಬೇಕಿದೆ. ಜಾತಿ ಜನಗಣತಿ ವರದಿ ಬಗ್ಗೆ ಗೊತ್ತಿಲ್ಲ. ಅದರಲ್ಲಿ ಏನಿದೆ, ಏನಿಲ್ಲ ಎನ್ನುವ ಅಂಶಗಳ ಕುರಿತು ಚರ್ಚೆ ನಡೆಯಬೇಕು. ಯಾರಿಗೆ ಜಾತಿ ಜನಗಣತಿ ಬಗ್ಗೆ ಗೊಂದಲ ಇದೆ ಅವರು ಸದನದಲ್ಲಿ ಹೇಳಲಿ. ಹೊರಗಡೆ ಹೇಳಿಕೆ ನೀಡಿದರೆ ಗೊಂದಲಕ್ಕೆ ಪರಿಹಾರ ಸಿಗಲ್ಲ ಎಂದರು.

    ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ
    ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಕೆಲವು ಚಿಕ್ಕ ವಯಸ್ಸಿನ ಯುವಕರು ಗುಂಪು ಕಟ್ಟಿಕೊಂಡು ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದು, ಅದೇ ಕಾರಣದಿಂದ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಲ್ಲಿ ಕೊಲೆಗಳು ಆಗುತ್ತಿವೆ. ಇದಕ್ಕೆ ಪೊಲೀಸ್‌ ಅಧಿಕಾರಿಗಳು ಕಾರಣರಲ್ಲ. ಪೊಲೀಸರ ಗಮನಕ್ಕೆ ಬಂದರೆ ಕೆಲ ಘಟನೆಗಳನ್ನ ತಡೆಯುತ್ತಾರೆ. ಆದರೆ ಆಕಸ್ಮಿಕವಾಗಿ ನಡೆದರೆ ಏನು ಮಾಡುವುದು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಸರಿಯಾದ ಸಮಯದಲ್ಲಿ ಆಯ್ಕೆ – ಹೆಚ್‌ಡಿಡಿ ಭೇಟಿಯಾದ ವಿಜಯೇಂದ್ರ

    ನಾವು ಆಪರೇಶನ್ ಹಸ್ತ ಮಾಡುವುದಿಲ್ಲ
    ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಸದಸ್ಯರಿಗೆ ಸ್ವಾತಂತ್ರ್ಯವಾಗಿ ಕೆಲಸ ಮಾಡಲು ಅವರ ನಾಯಕರು ಬಿಡುತ್ತಿಲ್ಲ. ಅದಕ್ಕಾಗಿ ಅವರು ಪದೇ ಪದೇ ಸಭೆ ಮಾಡುತ್ತಿದ್ದಾರೆ. ಜನ ಬಿಜೆಪಿಯವರಿಗೆ ಅಧಿಕಾರ ನೀಡಿದ್ದು, ಅವರು ಆಡಳಿತ ನಡೆಸಲಿ. ನಾವು ಆಪರೇಶನ್ ಹಸ್ತ ಮಾಡುವುದಿಲ್ಲ. ಮಹಾನಗರ ಪಾಲಿಕೆ ಅನುದಾನ ಒಂದೇ ಕಡೆ ಹೋಗಿದ್ದು, ಇದೇ ವಿಚಾರಕ್ಕೆ ಉತ್ತರ ಮತ್ತು ದಕ್ಷಿಣ ಶಾಸಕರಲ್ಲಿ ಚರ್ಚೆ ನಡೆಯುತ್ತಿದೆ ಎಂದು ತಿಳಿಸಿದರು.

    ಮಾಜಿ ಸಚಿವ ವೀರಕುಮಾರ ಪಾಟೀಲ್‌, ಮಾಜಿ ಶಾಸಕ ಕಾಕಾಸಾಹೇಬ್ ಪಾಟೀಲ್‌,‌ ಬೆಳಗಾವಿ ಗ್ರಾಮೀಣ ಕಾಂಗ್ರೆಸ್‌ ಅಧ್ಯಕ್ಷ ವಿನಯ ನಾವಲಗಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯಾದರ್ಶಿ ಸುನೀಲ್‌ ಹಣಮನ್ನವರ್‌, ಕೆಪಿಸಿಸಿ ಸದಸ್ಯ ಕಿರಣ ಸಾಧುನ್ನವರ್‌ ಸೇರಿದಂತೆ ಹಲವು ಮುಖಂಡರಿದ್ದರು.

  • ಗೋಕಾಕ್‍ನಲ್ಲಿ ಯುವಕನ ಬರ್ಬರ ಹತ್ಯೆ

    ಗೋಕಾಕ್‍ನಲ್ಲಿ ಯುವಕನ ಬರ್ಬರ ಹತ್ಯೆ

    ಬೆಳಗಾವಿ: ಹಳೇ ವೈಷಮ್ಯದಿಂದ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಗೋಕಾಕ್‍ನಲ್ಲಿ (Gokak) ನಡೆದಿದೆ.

    ಹತ್ಯೆಗೀಡಾದ ಯುವಕನನ್ನು ಶಾನೂರು ಪೂಜಾರಿ (27) ಎಂದು ಗುರುತಿಸಲಾಗಿದೆ. ಹತ್ಯೆಗೀಡಾದ ಯುವಕ ನಗರದ ಪೆಟ್ರೊಲ್ ಬಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಕೊಲೆ ವಿಚಾರ ತಿಳಿಯುತ್ತಿದ್ದಂತೆ ಮೃತ ಯುವಕನ ಪರವಾಗಿ ಮತ್ತೊಂದು ಗುಂಪು ಆದಿಜಾಂಬವ ನಗರದಲ್ಲಿರುವ ಆರೋಪಿಯ ಮನೆ ಮುಂದೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಉದ್ವಿಘ್ನ ಯುವಕರ ಗುಂಪು ಆರೋಪಿಯ ಮನೆ ಮೇಲೆ ಕ್ಲಲು ತೂರಾಟ ನಡೆಸಿದೆ. ಅಲ್ಲದೇ ಯುವಕರು ಬೈಕ್ ಹಾಗೂ ಕಾರುಗಳನ್ನು ಜಖಂಗೊಳಿಸಿದ್ದಾರೆ. ಇದನ್ನೂ ಓದಿ: ಗುಟುಕು ಮದ್ಯ ಕೊಡಲು ನಿರಾಕರಿಸಿದ್ದಕ್ಕೆ ವೈನ್ ಶಾಪ್‌ಗೇ ಬೆಂಕಿ ಇಟ್ಟ ಭೂಪ

    ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ ಕೆಎಸ್‍ಆರ್‍ಪಿ ತುಕಡಿ ನಿಯೋಜನೆ ಮಾಡಲಾಗಿದೆ. ತಕ್ಷಣವೇ ಆರೋಪಿಗಳನ್ನು ಬಂಧಿಸುವಂತೆ ಯುವಕರು ಆಗ್ರಹಿಸಿದ್ದಾರೆ. ಉದ್ವಿಘ್ನ ಗುಂಪನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ.

    ಈ ಸಂಬಂಧ ಗೋಕಾಕ್ ಶಹರ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಲು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಅಗ್ನಿ ಅವಘಡ – ಐಟಿ ಕಂಪನಿ ಭಾಗಶಃ ಭಸ್ಮ

  • ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಫೋಟೋ ಎಡಿಟ್ ಮಾಡಿ ಬ್ಲಾಕ್‍ಮೇಲ್ – ಆರೋಪಿ ಅರೆಸ್ಟ್

    ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಫೋಟೋ ಎಡಿಟ್ ಮಾಡಿ ಬ್ಲಾಕ್‍ಮೇಲ್ – ಆರೋಪಿ ಅರೆಸ್ಟ್

    ಬೆಳಗಾವಿ: ಪ್ರೀತಿಸಲು ಒಪ್ಪದ ಯುವತಿಯ ಫೋಟೋವನ್ನು ನಗ್ನ ಚಿತ್ರವೊಂದಕ್ಕೆ ಜೋಡಿಸಿ ಎಡಿಟ್ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು (Police) ಬಂಧಿಸಿದ್ದಾರೆ.

    ಬಂಧನಕ್ಕೊಳಗಾದ ಆರೋಪಿಯನ್ನು ಮಂಥನ್ ಪಾಟೀಲ್ (22) ಎಂದು ಗುರುತಿಸಲಾಗಿದೆ. ಆರೋಪಿ ಖಾನಾಪುರದ (Khanapur ) ಕಾಲೇಜಿನ ವಿದ್ಯಾರ್ಥಿನಿ ಒಬ್ಬಳನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ. ಆಕೆ ಒಪ್ಪದಿದ್ದಾಗ ಆಕೆಯ ಫೋಟೋವನ್ನು ನಗ್ನ ಚಿತ್ರದ ಜೊತೆ ಸೇರಿಸಿ ಎಡಿಟ್ ಮಾಡಿ ಕಿರುಕುಳ ಕೊಟ್ಟಿದ್ದಾನೆ. ಇಷ್ಟಕ್ಕೆ ಸುಮ್ಮನಾಗದೆ ಆಕೆಯ ಮೂವರು ಸ್ನೇಹಿತೆಯರ ಫೋಟೋ ಬಳಸಿ ಇದೇ ರೀತಿ ಬ್ಲಾಕ್‍ಮೇಲ್ ಮಾಡಿದ್ದಾನೆ. ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ ಅಲ್ಲಿ ಅಪ್ಲೋಡ್ ಮಾಡಿದ್ದಾನೆ. ಇದನ್ನೂ ಓದಿ: PublicTV Explainer: ‘ಸೋಷಿಯಲ್‌’ನಲ್ಲಿ ಬೆತ್ತಲಾದ ‘ಡೀಪ್‌ಫೇಕ್’; ಏನಿದು ತಂತ್ರಜ್ಞಾನ? ಇದರ ಆಳ ಎಷ್ಟು? ಅಪರಾಧಕ್ಕೆ ಶಿಕ್ಷೆ ಏನು?

    ಆರೋಪಿ ಬೆಂಗಳೂರಿನಲ್ಲಿ (Bengaluru) ಖಾಸಗಿ ಕಂಪನಿ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಡೀಪ್ ಫೇಕ್ ಆಪ್ ಮಾದರಿಯ ಮತ್ತೊಂದು ಆಪ್‍ನಲ್ಲಿ ಫೋಟೋ ಎಡಿಟ್ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಈ ಸಂಬಂಧ ಯುವತಿ ಖಾನಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ದೂರಿನ ಅನ್ವಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಏನಿದು ಡೀಪ್‌ಫೇಕ್‌ ತಂತ್ರಜ್ಞಾನ? ಹೇಗೆ ಮಾಡುತ್ತಾರೆ? – ನೀವು ತಿಳ್ಕೋಳ್ಳಲೇಬೇಕು

  • ಚಿಂಚಣಿ ಮಠದ ಅಲ್ಲಮಪ್ರಭು ಮಹಾಸ್ವಾಮೀಜಿ ಲಿಂಗೈಕ್ಯ

    ಚಿಂಚಣಿ ಮಠದ ಅಲ್ಲಮಪ್ರಭು ಮಹಾಸ್ವಾಮೀಜಿ ಲಿಂಗೈಕ್ಯ

    ಚಿಕ್ಕೋಡಿ (ಬೆಳಗಾವಿ): ಚಿಂಚಣಿ ಸಿದ್ದಸಂಸ್ಥಾನ ಮಠದ ಅಲ್ಲಮಪ್ರಭು ಮಹಾಸ್ವಾಮೀಜಿ (63) (Sri Allamaprabhu Swamiji) ಅನಾರೋಗ್ಯದಿಂದ ಲಿಂಗೈಕ್ಯರಾಗಿದ್ದಾರೆ.

    ಚಿಂಚಣಿ ಶ್ರೀಗಳು ಕಿಡ್ನಿ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ ಬೆಳಗಾವಿಯ (Belagavi) ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು (ಭಾನುವಾರ) ಮುಂಜಾನೆ ಲಿಂಗೈಕ್ಯರಾಗಿದ್ದಾರೆ. ಇದನ್ನೂ ಓದಿ: ಹಾಸನಾಂಬೆ ದೇಗುಲಕ್ಕೆ ದಾಖಲೆಯ ಆದಾಯ- 9 ದಿನಗಳಲ್ಲಿ 4,56,22,580 ರೂ. ಸಂಗ್ರಹ

    ಗಡಿಭಾಗದಲ್ಲಿ ಕನ್ನಡದ ಸ್ವಾಮೀಜಿ ಎಂದೇ ಅವರು ಖ್ಯಾತಿಯಾಗಿದ್ದರು. ಸ್ವಾಮೀಜಿಗಳ ಅಗಲಿಕೆಯಿಂದ ಭಕ್ತ ವೃಂದದಲ್ಲಿ ಶೋಕ ಮನೆಮಾಡಿದೆ. ಇದನ್ನೂ ಓದಿ: ಅತಿವೃಷ್ಠಿಯಲ್ಲಿ ಬಿಎಸ್‍ವೈ ಭಿಕ್ಷೆ ಬೇಡಿದ್ದರು, ಸಿದ್ದರಾಮಯ್ಯರಂತೆ ಡ್ಯಾನ್ಸ್ ಮಾಡಿರಲಿಲ್ಲ: ಆರಗ ಜ್ಞಾನೇಂದ್ರ ವ್ಯಂಗ್ಯ

  • ಟಿಪ್ಪು ಸೇರಿ ಇತರೆ ಮುಸ್ಲಿಂ ರಾಜರ ಅವಮಾನಿಸುವ ರೀತಿ ಸ್ಟೇಟಸ್‌ – ಚಿಕ್ಕೋಡಿಯಲ್ಲಿ ಬಿಗುವಿನ ವಾತಾವರಣ

    ಟಿಪ್ಪು ಸೇರಿ ಇತರೆ ಮುಸ್ಲಿಂ ರಾಜರ ಅವಮಾನಿಸುವ ರೀತಿ ಸ್ಟೇಟಸ್‌ – ಚಿಕ್ಕೋಡಿಯಲ್ಲಿ ಬಿಗುವಿನ ವಾತಾವರಣ

    ಚಿಕ್ಕೋಡಿ: ವಾಟ್ಸಪ್ ಸ್ಟೇಟಸ್, ಬ್ಯಾನರ್ ವಿಚಾರವಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ (Chikkodi) ಹೊಸಪೇಟೆ (Hospet) ಗಲ್ಲಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

    ಟಿಪ್ಪು ಸುಲ್ತಾನ್‌ (Tipu Sultan) ಸೇರಿ ಇತರೆ ಮುಸ್ಲಿಂ ರಾಜರ ಅವಮಾನಿಸುವ ರೀತಿ ವಾಟ್ಸಪ್ ಸ್ಟೇಟಸ್ ಇಟ್ಟವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಒಂದು ಸಮುದಾಯದ ಜನ ಜಮಾವಣೆಗೊಂಡು ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಇದೇ ವೇಳೆ ಅಖಂಡ‌ ಭಾರತ ಹೆಸರಿನಡಿ “ಅಖಂಡ್ ಭಾರತ್ ಕಾ ಸಪ್ನಾ ಹೈ… ಅಫ್ಘಾನಿಸ್ತಾನ ತಕ್ ಹಮಾರಾ ಹೈ” ಎಂಬ ಬರಹದಡಿ ಬ್ಯಾನರ ಅಳವಡಿಸಲಾಗಿತ್ತು. ಇದನ್ನೂ ಓದಿ: ವಿಜಯೇಂದ್ರ ಆಯ್ಕೆ ‘ಹೊಸ ಬಾಟಲಿಗೆ ಹಳೆ ವೈನ್’ ಹಾಕಿದಂತೆ: ಡಿ.ಸುಧಾಕರ್

    ತಕ್ಷಣ ಸ್ಥಳಕ್ಕೆ ಚಿಕ್ಕೋಡಿ ಡಿವೈಎಸ್‌ಪಿ ಸಿ.ಬಿ.ಗೌಡರ, ಸಿಪಿಐ, ಪಿಎಸ್ಐ ಭೇಟಿ ನೀಡಿ ವಿವಾದಿತ ಸ್ಟೇಟಸ್ ಇಟ್ಟ ಓರ್ವನ ವಶಕ್ಕೆ ಪಡೆದು ಪೊಲೀಸ್ ಬಿಗಿ ಭದ್ರತೆ ಕಲ್ಪಿಸಿದ್ದಾರೆ. ಚಿಕ್ಕೋಡಿಯ ಹೊಸಪೇಟೆ ಗಲ್ಲಿಯಲ್ಲಿ 50 ಕ್ಕೂ ಹೆಚ್ಚು ಪೊಲೀಸರಿಂದ ಬಿಗಿ ಭದ್ರತೆ ಕಲ್ಪಿಸಲಾಗಿದೆ.

    ಅಖಂಡ ಭಾರತ ಹೆಸರಿನಡಿ ಭೂಪಟದ ಬ್ಯಾನರ್‌ ಅಳವಡಿಸಿದ ಸ್ಥಳದಲ್ಲೂ ಭದ್ರತೆ ಒದಗಿಸಲಾಗಿದೆ. ಗಡಿ ಭಾಗದಲ್ಲಿ ದೀಪಾವಳಿ ನಿಮಿತ್ತ ನಿರ್ಮಿಸುವ ಕೋಟೆ ಮಾದರಿ ಬಳಿ ಬ್ಯಾನರ್ ಅಳವಡಿಸಲಾಗಿದ್ದು, ಬ್ಯಾನರ್ ಅಳವಡಿಸಿದ ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಇದನ್ನೂ ಓದಿ: ಹಾಸನಾಂಬೆ ದರ್ಶನಕ್ಕೆ ಮುಂದಾದ ಸಚಿವರನ್ನು ಗರ್ಭಗುಡಿ ಬಾಗಿಲಲ್ಲೇ ತಡೆದ ಮಹಿಳಾ ಕಾನ್ಸ್‌ಟೇಬಲ್

    ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರ ತೀವ್ರ ನಿಗಾ ವಹಿಸಿದ್ದು, ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ನಿಮ್ಮನ್ನು ಅರೆಸ್ಟ್ ಮಾಡಿಸ್ತೀನಿ – ಬಸ್ ಬಿಡುವಂತೆ ಮನವಿ ಸಲ್ಲಿಸಲು ಬಂದಿದ್ದ ವಿದ್ಯಾರ್ಥಿಗಳಿಗೆ ತಹಶೀಲ್ದಾರ್ ಧಮ್ಕಿ!

    ನಿಮ್ಮನ್ನು ಅರೆಸ್ಟ್ ಮಾಡಿಸ್ತೀನಿ – ಬಸ್ ಬಿಡುವಂತೆ ಮನವಿ ಸಲ್ಲಿಸಲು ಬಂದಿದ್ದ ವಿದ್ಯಾರ್ಥಿಗಳಿಗೆ ತಹಶೀಲ್ದಾರ್ ಧಮ್ಕಿ!

    ಬೆಳಗಾವಿ: ಬಸ್ ಬಿಡುವಂತೆ ಮನವಿ ಸಲ್ಲಿಸಲು ತಹಶೀಲ್ದಾರರ ಕಚೇರಿಗೆ ಬಂದಿದ್ದ ಶಾಲಾ ವಿದ್ಯಾರ್ಥಿಗಳಿಗೆ (Students) ಖಾನಾಪುರ (Khanapur) ತಹಶೀಲ್ದಾರ್ (Tehsildar) ಧಮ್ಕಿ ಹಾಕಿರುವ ಘಟನೆ ನಡೆದಿದೆ.

    ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕರಂಜಾಳ, ಹಳಸಾಲ, ಬಾಲ್ಕಿ ಬಿಹೆಚ್ ಗ್ರಾಮದ ವಿದ್ಯಾರ್ಥಿಗಳು ಖಾನಾಪುರ ತಹಶೀಲ್ದಾರ್ ಪ್ರಕಾಶ್ ಗಾಯಕ್ವಾಡ್‌ಗೆ ಮನವಿ ಸಲ್ಲಿಸಲು ಹೋಗಿದ್ದರು. ಈ ವೇಳೆ ಪೊಲೀಸರನ್ನು ಕರೆಸಿ ನಿಮ್ಮನ್ನು ಅರೆಸ್ಟ್ ಮಾಡಿ ಒಳಗಡೆ ಹಾಕಿಸುತ್ತೇನೆ ಎಂದು ತಹಶೀಲ್ದಾರ್ ಮಕ್ಕಳ ಮೇಲೆ ದರ್ಪ ತೋರಿದ್ದಾರೆ.

    ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿಕೊಡುವಂತೆ ಮನವಿ ಸಲ್ಲಿಸಲು ತಹಶೀಲ್ದಾರರ ಕಚೇರಿಗೆ ವಿದ್ಯಾರ್ಥಿಗಳು ಬಂದಿದ್ದರು. ಶಾಲಾ ಮಕ್ಕಳ ಸಮಸ್ಯೆಗೆ ಧ್ವನಿಯಾಗಬೇಕಿದ್ದ ತಹಶೀಲ್ದಾರ್ ವರ್ತನೆಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಈ ವೇಳೆ ಆವಾಜ್ ಹಾಕಿದ ತಹಶೀಲ್ದಾರ್ ಪ್ರಕಾಶ್ ಗಾಯಕ್ವಾಡ್, ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸುತ್ತಿದ್ದೀರಿ ಎಂದು ಮಕ್ಕಳ ಮೇಲೆಯೇ ಆರೋಪಿಸಿದ್ದಾರೆ. ಇದನ್ನೂ ಓದಿ: ಕಳೆಗಟ್ಟಿದ ಹಾಸನಾಂಬೆ ದರ್ಶನೋತ್ಸವ ಸಂಭ್ರಮ – ಇಂದು ದೇವಿಯ ದರ್ಶನ ಪಡೆಯಲಿರುವ ಸಿಎಂ

    ಕಳೆದ ಹಲವಾರು ವರ್ಷಗಳಿಂದ ಬಸ್ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿಗಳು ಮನವಿ ಕೊಟ್ಟಿದ್ದರು. ಆದರೆ ಈವರೆಗೆ ಬಸ್ ಸೌಕರ್ಯ ಇಲ್ಲದೇ ಮಕ್ಕಳು ಪರದಾಟ ನಡೆಸಿದ್ದರು. ನಿತ್ಯ ನಡೆದುಕೊಂಡು ಹೋಗಿ ರಾತ್ರಿ ಮನೆ ಸೇರುವ ಪರಿಸ್ಥಿತಿ ನಿರ್ಮಾಣ ಆಗಿತ್ತು.

    ಖಾನಾಪುರದ ಬಹುತೇಕ ಗ್ರಾಮಗಳು ಕಾಡಂಚಿನ ಪ್ರದೇಶದಲ್ಲಿ ಇದ್ದು, ಕಾಡು ಪ್ರಾಣಿಗಳ ಹಾವಳಿಯೂ ಹೆಚ್ಚಾಗಿದೆ. ಹೀಗಾಗಿ ಗ್ರಾಮಗಳಿಗೆ ಬಸ್ ಸೌಲಭ್ಯ ಕಲ್ಪಿಸುವಂತೆ ಮನವಿ ಸಲ್ಲಿಸಲು ವಿದ್ಯಾರ್ಥಿಗಳು ಮುಂದಾಗಿದ್ದರು. ಇದನ್ನೂ ಓದಿ: ಕರ್ತವ್ಯದಲ್ಲಿದ್ದಾಗಲೇ ಕುಸಿದು ಬಿದ್ದು ವೈದ್ಯ ಸಾವು

  • ಸ್ನೇಹಿತರ ಭೇಟಿಗೆ ಬಂದಿದ್ದ ಯೋಧನ ಮೇಲೆ ಮಾರಣಾಂತಿಕ ಹಲ್ಲೆ- ವೀಡಿಯೋ ವೈರಲ್

    ಸ್ನೇಹಿತರ ಭೇಟಿಗೆ ಬಂದಿದ್ದ ಯೋಧನ ಮೇಲೆ ಮಾರಣಾಂತಿಕ ಹಲ್ಲೆ- ವೀಡಿಯೋ ವೈರಲ್

    ಬೆಳಗಾವಿ: ಸ್ನೇಹಿತರ ಭೇಟಿಗೆ ಬಂದಿದ್ದ ಯೋಧನ (Soldier) ಮೇಲೆ ಅಪರಿಚಿತರು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಗಣೇಶಪುರದಲ್ಲಿ ನಡೆದಿದೆ.

    ಮಹಾರಾಷ್ಟ್ರದ (Maharashtra) ಚಂದಗಡ ಮೂಲದ ಪರುಶುರಾಮ್ ಪಾಟೀಲ್ ಹಲ್ಲೆಗೊಳಗಾದ ಯೋಧ. ನಗರದ ಬಾರ್ ಎದುರು ನಡುರಸ್ತೆಯಲ್ಲೇ ಯೋಧನ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಅಲ್ಲದೇ ಕಾಲಿನಿಂದ ಒದ್ದು ಅಲ್ಲಿಂದ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಸತೀಶ್ ಜಾರಕಿಹೊಳಿಗೆ ಸಿಎಂ ಆಗುವ ಎಲ್ಲಾ ಅರ್ಹತೆ ಇದೆ- ಸಚಿವರ ಪರ ವಾಲ್ಮೀಕಿ ಶ್ರೀ ಬ್ಯಾಟಿಂಗ್

    ಹಲ್ಲೆಯಿಂದ ಅಸ್ವಸ್ಥನಾಗಿದ್ದ ಯೋಧನನ್ನು ತಕ್ಷಣವೇ ಅಂಬುಲೆನ್ಸ್ ಮೂಲಕ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೂರು ದಿನಗಳ ಹಿಂದೆ ಯೋಧನ ಮೇಲೆ ಹಲ್ಲೆಗೈಯಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಗೈದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಯೋಧ ಪರುಶುರಾಮ್ ಜಮ್ಮುವಿನಲ್ಲಿ (Jammu) ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಬೆಳಗಾವಿಯ (Belagavi) ಕ್ಯಾಂಪ್ ಪೊಲೀಸ್ (Police) ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಭಾರತದ ಸೇನೆಗೆ AI ತಂತ್ರಜ್ಞಾನದ ಬಲ – ಏನಿದರ ಮಹತ್ವ?

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್- 10 ದಿನದೊಳಗೆ ಅಂಗನವಾಡಿಗಳಿಗೆ ಹಣ

    ಪಬ್ಲಿಕ್ ಟಿವಿ ಇಂಪ್ಯಾಕ್ಟ್- 10 ದಿನದೊಳಗೆ ಅಂಗನವಾಡಿಗಳಿಗೆ ಹಣ

    – ಕ್ರಮಕ್ಕೆ ಮುಂದಾದ ಸಚಿವೆ

    ಬೆಂಗಳೂರು: ಅಂಗನವಾಡಿ (Anganawadi) ಮಕ್ಕಳು ಹಾಗೂ ಗರ್ಭಿಣಿಯರಿಗೆ (Pregnant) ಕೊಡುವ ಮೊಟ್ಟೆ (Egg) ಖರೀದಿ ಹಾಗೂ ಗ್ಯಾಸ್ (Gas) ಖರೀದಿ ದುಡ್ಡು ಕೊಡದೇ ಸತಾಯಿಸುತ್ತಿದ್ದಾರೆ ಎಂಬುದರ ಕುರಿತು ಪಬ್ಲಿಕ್ ಟಿವಿಯಲ್ಲಿ ವರದಿ ಬಿತ್ತರಗೊಂಡಿತ್ತು. ಈ ವರದಿ ಬೆನ್ನಲ್ಲೇ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi  Hebbalkar) ಎಚ್ಚೆತ್ತುಕೊಂಡಿದ್ದಾರೆ.

    ಪಬ್ಲಿಕ್ ವರದಿ ಬೆನ್ನಲ್ಲೇ ಕ್ರಮಕ್ಕೆ ಮುಂದಾದ ಸಚಿವೆ, ಸಮಸ್ಯೆ ಬಗ್ಗೆ ಮಾಹಿತಿ ಪಡೆದು ಕ್ರಮಕ್ಕೆ ಸೂಚನೆ ನೀಡುತ್ತೇನೆ ಎಂದರು. 10 ದಿನದೊಳಗೆ ಅಂಗನವಾಡಿಗಳಿಗೆ ಹಣ ಬಿಡುಗಡೆ ಮಾಡುವುದಾಗಿ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಸಿದ್ದರಾಮಣ್ಣ ಹೇಳಿದ್ದಾರೆ.

    ಇತ್ತ ಬೆಳಗಾವಿಯಲ್ಲಿ (Belagavi) ಈ ಸಂಬಂಧ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್, ಮೊಟ್ಟೆ ಖರೀದಿಯಲ್ಲಿ ಪಾರದರ್ಶಕತೆ ಇರಬೇಕು ಮತ್ತು ಉತ್ತಮ ಗುಣಮಟ್ಟದ ಮೊಟ್ಟೆಗಳನ್ನು ಖರೀದಿ ಮಾಡಬೇಕು ಎಂಬ ನಿಟ್ಟಿನಲ್ಲಿ ಇಲಾಖೆಯಲ್ಲಿ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಕಾರ್ಯಕರ್ತೆಯರ ಖಾತೆಗೆ ಹಣ ಜಮಾವನೆ ವಿಚಾರದಲ್ಲಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಹಣ ಸಂದಾಯ ಆಗಿದೆ. ಬೀದರ್ ಹಾಗೂ ಬೆಂಗಳೂರು ಜಿಲ್ಲೆಗಳನ್ನು ಹೊರತುಪಡಿಸಿದರೆ ಉಳಿದೆಲ್ಲ ಸರಿಯಾಗಿದೆ. ಈ ಎರಡು ಜಿಲ್ಲೆಗಳಲ್ಲಿ ಏನಾಗಿದೆ ಎಂಬ ಮಾಹಿತಿಯನ್ನು ಪಡೆಯುತ್ತಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 4 ತಿಂಗಳಿಂದ ಗ್ಯಾಸ್ ಬಿಲ್‌, ಮೊಟ್ಟೆ ಹಣವೂ ಇಲ್ಲ- ಅಂಗನವಾಡಿ ಕಾರ್ಯಕರ್ತೆಯರ ಗೋಳು ಕೇಳೋರಿಲ್ಲ

    ಬೆಂಗಳೂರಿನಲ್ಲಿ ನಾಲ್ಕು ವರ್ಷದಿಂದ ಒಂದು ಸಾವಿರ ಆಯಾ ಹಾಗೂ 440 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಈಗಾಗಲೇ 13 ಜಿಲ್ಲೆಗಳಲ್ಲಿ ನೇಮಕಾತಿ ಪ್ರಕ್ರಿಯೆ ಮುಗಿದಿದೆ. ಇದರ ಬಗ್ಗೆ ಮಾಹಿತಿ ಪಡೆದು ಕ್ರಮಕ್ಕೆ ಸೂಚನೆ ನೀಡುತ್ತೇನೆ. ಹಣಕಾಸು ಬಿಡುಗಡೆ ವಿಚಾರದಲ್ಲಿ ಯಾವಾಗಲೂ ನನ್ನ ಮತ್ತು ಫೈನಾನ್ಸ್ ಡಿಪಾರ್ಟ್‍ಮೆಂಟ್ ನಡುವೆ ಒಂದು ತರಹ ಕಾಂಪಿಟೇಶನ್ ಇದ್ದೇ ಇರುತ್ತದೆ ಎಂದು ಅವರು ಹೇಳಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕರಾಳ ದಿನ ಆಚರಿಸಿದ MES ಪುಂಡರಿಗೆ ಬಿಸಿ ಮುಟ್ಟಿಸಿದ ಪೊಲೀಸರು – 18 ಮಂದಿ ವಿರುದ್ಧ FIR

    ಕರಾಳ ದಿನ ಆಚರಿಸಿದ MES ಪುಂಡರಿಗೆ ಬಿಸಿ ಮುಟ್ಟಿಸಿದ ಪೊಲೀಸರು – 18 ಮಂದಿ ವಿರುದ್ಧ FIR

    ಬೆಳಗಾವಿ: ಜಿಲ್ಲೆಯ ಮಹಾರಾಷ್ಟ್ರ ಗಡಿ ಭಾಗದಲ್ಲಿ MES ಪುಂಡರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಕನ್ನಡ ರಾಜ್ಯೋತ್ಸವಕ್ಕೆ (Kannada Rajyotsava) ವಿರುದ್ಧವಾಗಿ ಕರಾಳ ದಿನಾಚರಣೆ ಮಾಡಿದ 18 ಮಂದಿ ಎಂಇಎಸ್ ಪುಂಡರ ವಿರುದ್ಧ ಕೇಸ್ ದಾಖಲಾಗಿದೆ.

    ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ (Market Police Station) ಎಂಇಎಸ್ ಕಿಡಿಗೇಡಿಗಳ ವಿರುದ್ಧ FIR ದಾಖಲಾಗಿದೆ. ಕನ್ನಡ ರಾಜ್ಯೋತ್ಸವ ದಿನದಂದು ಕರಾಳ ದಿನ ಆಚರಿಸಿ ನಾಡದ್ರೋಹ ಘೋಷಣೆ ಕೂಗಿದ್ದ 18 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: 5 ವರ್ಷ ಸಿಎಂ ಆಗಿ ಮುಂದುವರಿಯೋ ವಿಚಾರ ಗೊತ್ತಿರೋದು ಸಿದ್ದರಾಮಯ್ಯ, ಡಿಸಿಎಂಗೆ ಮಾತ್ರ: ಪರಂ

    ಜಿಲ್ಲಾಡಳಿತದಿಂದ ಎಂಇಎಸ್ ಕರಾಳ ದಿನಾಚರಣೆಗೆ ಅನುಮತಿ ನಿರಾಕರಿಸಲಾಗಿತ್ತು‌. ಅನುಮತಿ ಇಲ್ಲದಿದ್ದರೂ ನಗರದಲ್ಲಿ ಕರಾಳ ದಿನಾಚರಣೆ ಹೆಸರಲ್ಲಿ ಮೆರವಣಿಗೆ ಮಾಡಿ ಬೆಳಗಾವಿ, ಬೀದರ್, ಭಾಲ್ಕಿ, ನಿಪ್ಪಾಣಿ, ಕಾರವಾರ ಸಂಯುಕ್ತ ಮಹಾರಾಷ್ಟ್ರ ಅಂತ ನಾಡದ್ರೋಹಿ ಘೋಷಣೆ ಕೂಗಿ ಮೊಂಡತನ ಪ್ರದರ್ಶನ ಮಾಡಿದ್ದರು. ಇದನ್ನೂ ಓದಿ: ಶಮಿ ಬೆಂಕಿ ಬೌಲಿಂಗ್‌ಗೆ ನೀಲಿ ತಾರೆ ಫಿದಾ – ಕೇಂದ್ರ ಲಸ್ಟ್‌ ರಿಯಾಕ್ಷನ್‌ ಸಿಕ್ಕಾಪಟ್ಟೆ ವೈರಲ್‌

    ನಾಡದ್ರೋಹಿ ಘೋಷಣೆ ಕೂಗಿದ ಎಂಇಎಸ್‌ನ ಮಾಲೋಜಿರಾವ್ ಅಷ್ಟೇಕರ್, ಮನೋಹರ ಕಿಣೇಕರ, ರಂಜಿತ್ ಚವ್ಹಾಣ, ಸರಿತಾ ಪಾಟೀಲ, ಸಾರಿಕಾ ಪಾಟೀಲ, ಅಮರ, ಯಳ್ಳೂರಕರ್ ಪ್ರಕಾಶ ಮರಗಾಲಿ, ರವಿ ಸಾಳುಂಕೆ, ಅಂಕುಶ ಕೇಸರಕರ್ ಸೇರಿದಂತೆ 18 ಜನರ ವಿರುದ್ಧ ಕೇಸ್ ದಾಖಲಾಗಿದೆ. ಇದನ್ನೂ ಓದಿ: ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್-3: ಶುಭ ಕೋರಿದ ಬಸವರಾಜ ಹೊರಟ್ಟಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಡೆದುಕೊಂಡು ಹೋಗ್ತಿದ್ದ ಇಬ್ಬರ ಮೇಲೆ ಹರಿದ ಬೈಕ್- ಸವಾರ, ಪಾದಾಚಾರಿ ದುರ್ಮರಣ

    ನಡೆದುಕೊಂಡು ಹೋಗ್ತಿದ್ದ ಇಬ್ಬರ ಮೇಲೆ ಹರಿದ ಬೈಕ್- ಸವಾರ, ಪಾದಾಚಾರಿ ದುರ್ಮರಣ

    ಬೆಳಗಾವಿ: ಕನ್ನಡ ರಾಜ್ಯೋತ್ಸವ (Kannada Rajyotsava) ಮುಗಿಸಿಕೊಂಡು ಮರಳುತ್ತಿದ್ದ ವೇಳೆ, ಬೈಕ್‌ವೊಂದು ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಿತ್ತೂರು (Kittur) ತಾಲೂಕಿನ ಎಂ.ಕೆ.ಹುಬ್ಬಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ನಡೆದಿದೆ.

    ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲೆ ರಾತ್ರಿ 11 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಮೃತರು ಧಾರವಾಡ (Dharwad) ಜಿಲ್ಲೆಯ ನರೇಂದ್ರದ ಲಬೈಕ್ ಹಲಸಿಗರ ಹಾಗೂ ಬೆಳಗಾವಿ ತಾಲೂಕಿನ ಬಾಳೇಕುಂದ್ರಿ ಗ್ರಾಮದ ಶ್ರೀನಾಥ ಗುಜನಾಳ ಎಂದು ಗುರುತಿಸಲಾಗಿದೆ. ಘಟನೆಯಿಂದ ಧಾರವಾಡ ನಗರದ ಅಲ್ತಾಫ್ ನಾಲಬಂದ ಹಾಗೂ ಕಡತನ ಬಾಗೇವಾಡಿಯ ಅರ್ಜುನ ರಂಗಣ್ಣವರ್ ತೀವ್ರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್

    ಯುವಕರ ಮೃತದೇಹ ಬಿದ್ದ ಸ್ಥಳದಿಂದ 300 ಮೀಟರ್ ದೂರದಲ್ಲಿ ಬೈಕ್ ಪತ್ತೆಯಾಗಿದೆ. ಇಬ್ಬರು ಯುವಕರು ಬೈಕ್‌ನಲ್ಲಿ ವೇಗವಾಗಿ ಹೊರಟಿದ್ದರು. ಇದೇ ವೇಳೆ ಹೆದ್ದಾರಿ ಪಕ್ಕದ ಹೋಟೆಲ್‌ನಲ್ಲಿ ಊಟ ಮಾಡಿದ ಇಬ್ಬರು ಯುವಕರು ಹೆದ್ದಾರಿ ದಾಟುತ್ತಿದ್ದರು. ಆ ವೇಳೆ ಪಾದಚಾರಿಗಳಿಗೆ ಬೈಕ್ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್ ಸವಾರ ಹಾಗೂ ಓರ್ವ ಪಾದಚಾರಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅಂತಾರಾಜ್ಯ ಅಡಿಕೆ ವ್ಯಾಪಾರಿಯ 1 ಕೋಟಿ ಹಣ ಕಳವು – ಮೂವರ ಬಂಧನ