Tag: belagavi

  • ಹೆಬ್ಬಾಳ್ಕರ್, ಜಾರಕಿಹೊಳಿ ಮಧ್ಯೆ ಭಿನ್ನಾಭಿಪ್ರಾಯ – ಸ್ಥಳೀಯ ನಿಗಮಗಳ ವಿಚಾರಕ್ಕೇ ಗುದ್ದಾಟ

    ಹೆಬ್ಬಾಳ್ಕರ್, ಜಾರಕಿಹೊಳಿ ಮಧ್ಯೆ ಭಿನ್ನಾಭಿಪ್ರಾಯ – ಸ್ಥಳೀಯ ನಿಗಮಗಳ ವಿಚಾರಕ್ಕೇ ಗುದ್ದಾಟ

    ಬೆಂಗಳೂರು/ ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಖಾತೆಯ ಸಚಿವೆ ಲಕ್ಷಿ ಹೆಬ್ಬಾಳ್ಕರ್ (Lakshmi Hebbalkar) ಮತ್ತು ಲೋಕೋಪಯೋಗಿ ಇಲಾಖೆ ಖಾತೆಯ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಮಧ್ಯೆ ಭಿನ್ನಾಭಿಪ್ರಾಯ ಈಗ ಕಾಂಗ್ರೆಸ್‌ನಲ್ಲಿ (Congress) ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡ್ತಿದೆ.

    ಸ್ಥಳೀಯ ನಿಗಮಗಳ ಅಧ್ಯಕ್ಷರ ನೇಮಕ ವಿಷಯಕ್ಕೆ ಇಬ್ಬರಲ್ಲಿ ಭಿನ್ನಾಭಿಪ್ರಾಯ ಮೂಡಿದೆ. ತಮ್ಮವರೇ ಅಧ್ಯಕ್ಷರಾಗಬೇಕೆಂದು ಇಬ್ಬರು ಸಚಿವರ ಬಿಗಿ ಪಟ್ಟು ಇಷ್ಟಕ್ಕೆಲ್ಲ ಕಾರಣ ಎನ್ನಲಾಗ್ತಿದೆ.  ಇದನ್ನೂ ಓದಿ: ಪಕ್ಷದ ಬಗ್ಗೆ ಬಹಿರಂಗ ಹೇಳಿಕೆ ನೀಡುವಂತಿಲ್ಲ: ನಾಯಕರಿಗೆ ಡಿಕೆಶಿ ಸೂಚನೆ


    ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಘಟಪ್ರಭಾ ಮತ್ತು ಮಲಪ್ರಭಾ ಅಚ್ಚುಕಟ್ಟು ಪ್ರದೇಶಗಳ ಪ್ರಾಧಿಕಾರ ನಿಗಮಗಳಿಗೆ ಅಧ್ಯಕ್ಷರ ನಾಮಕರಣಕ್ಕೆ ಸಚಿವರಿಬ್ಬರ ಮಧ್ಯೆ ಮುಸುಕಿನ ಸಂಘರ್ಷ ನಡೆಯುತ್ತಿದೆ ಎನ್ನುವುದು ಸದ್ಯದ ಮಾಹಿತಿ.

    ತಮ್ಮ ಬೆಂಬಲಿಗರಿಗೆ ಅಧ್ಯಕ್ಷ ಪದವಿ ಕೊಡಿಸಲು ಪಟ್ಟು ಹಿಡಿದಿದ್ದು, ಹೈಕಮಾಂಡ್‌ ಮಧ್ಯ ಪ್ರವೇಶಕ್ಕೆ ಕಾದು ನೋಡುವ ತಂತ್ರಕ್ಕೆ ಸಚಿವರು ಮೊರೆಹೋಗಿದ್ದಾರೆ ಎನ್ನಲಾಗಿದೆ. ಸಮಾಧಾನ ಸೂತ್ರ ರಚಿಸದಿದ್ದರೆ ಸರ್ಕಾರಕ್ಕೆ ಬಂಡಾಯದ ಬಿಸಿ ತಟ್ಟುವ ಸಾಧ್ಯತೆ ಇದೆ.


    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನನ್ನ, ಡಿಕೆಶಿ ಮಧ್ಯೆ ಯಾವ ಭಿನ್ನಾಭಿಪ್ರಾಯವೂ ಇಲ್ಲ: ಸತೀಶ್ ಜಾರಕಿಹೊಳಿ

    ನನ್ನ, ಡಿಕೆಶಿ ಮಧ್ಯೆ ಯಾವ ಭಿನ್ನಾಭಿಪ್ರಾಯವೂ ಇಲ್ಲ: ಸತೀಶ್ ಜಾರಕಿಹೊಳಿ

    ಬೆಳಗಾವಿ: ಅಧಿವೇಶನ ಬಂದಾಗ ಒಬ್ಬರು ಗೋವಾ, ಕೊಲ್ಲಾಪುರ ಮಹಾಲಕ್ಷ್ಮಿ ದರ್ಶನಕ್ಕೆ ಹೋಗ್ತಾರೆ. ಇನ್ಯಾರೋ ಹುಬ್ಬಳ್ಳಿಗೆ ಹೋಗ್ತಾರೆ, ಕೆಲವರು ನಮ್ಮ ಜೊತೆಗೆ ಊಟಕ್ಕೆ ಬರುತ್ತಾರೆ. ಈ ಸಾರಿ ಅಧಿವೇಶನದಲ್ಲಿ ಇದೆಲ್ಲವೂ ವಿಶೇಷ ಆಗೋದು ನಾವೇನೂ ಮಾಡಲು ಆಗಲ್ಲ ಎಂದು ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ (Sathish Jarakiholi) ಹೇಳಿದರು.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಕುಸ್ತಿ ಇದ್ದೇ ಇರುತ್ತೆ. ಪಕ್ಷಕ್ಕೆ ಹೊಡೆತ ಬೀಳ್ತದೆ ಅಂದಾ ನೋಡೋಕೆ ಅಲ್ಲ. ಸರ್ಕಾರ ಹೇಗೆ ಬೀಳುತ್ತೆ, ಸರ್ಕಾರ ಬೀಳಿಸುವ ಪ್ರಶ್ನೆ ಉದ್ಭವ ಆಗಲ್ಲ ಎಂದರು.

    ಮಹಾನಗರ ಪಾಲಿಕೆ ಸೂಪರ್ ಸೀಡ್ ವಿಚಾರಕ್ಕೆ ಸಂಬಂಧ ಮಾತನಾಡಿ, ಅಧಿಕಾರಿಗಳಿಂದ ಬರವಣಿಗೆ ಮಿಸ್ಟೇಕ್ ಆಗಿದೆ. ಅದನ್ನು ಶಾಸಕರು ದೊಡ್ಡ ಮಟ್ಟದಲ್ಲಿ ಪ್ರಚಾರ ಮಾಡಲು ಹೊರಟಿದ್ದಾರೆ. ಮಹಾನಗರ ಪಾಲಿಯೂ ಸಹ ಸರ್ಕಾರದ ಮಾತು ಕೇಳಬೇಕು. ಸಣ್ಣ ಮಿಸ್ಟೇಕ್ ದೊಡ್ಡ ಮಟ್ಟದಲ್ಲಿ ಮಾಡಲು ಸೌಥ್ ಶಾಸಕರು ಹೋಗ್ತಿದ್ದಾರೆ. ಒಂದು ತಪ್ಪಿನಿಂದ ಸೂಪರ್ ಸೀಡ್ ಮಾಡಲು ಆಗುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಪಾಕಿಸ್ತಾನ ಟೀಂಗೆ ಸಪೋರ್ಟ್ ಮಾಡೋಕೆ ಹೋಗಿದ್ರಾ – ಸಿಎಂಗೆ ಹೆಚ್‌ಡಿಕೆ ಪ್ರಶ್ನೆ

    ಡಿಕೆ ಶಿವಕುಮಾರ್ (DK Shivakumar) ಮತ್ತು ಸತೀಶ್ ಜಾರಕಿಹೊಳಿ ನಡುವೆ ಭಿನ್ನಾಭಿಪ್ರಾಯ ಇದೆಯಾ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಇಲ್ಲವೇ ಇಲ್ಲಾ. ಯಾರು ಹೇಳಿದ್ರೂ ಇದೆ ಅಂತಾ. ಡಿಸಿಎಂ ಅವರು ಬರುವುದು ತಡರಾತ್ರಿ ಫಿಕ್ಸ್ ಆಗಿದೆ. ಮೇಡಂ ಅವರನ್ನ ಯಾಕೆ ಕೇಳ್ತಿಲ್ಲ ಅವರು ಇರಲಿಲ್ಲ ಅಂದು. ಮೇಡಂ, ಚೆನ್ನರಾಜ್ ಇರಲಿಲ್ಲ ಅವರನ್ನ ಕೇಳಿ ಯಾಕೆ ಇರಲಿಲ್ಲ ಅಂತಾ. ನಮ್ಮದು ಖಾಸಗಿ ಕಾರ್ಯಕ್ರಮ ಇತ್ತು ಹೋಗಿದ್ವಿ, ಲಕ್ಷ್ಮಣ ಸವದಿಯವರು ಯಾಕೆ ಬಂದಿಲ್ಲ ಕೇಳಿ ಎಂದರು. ಅಧ್ಯಕ್ಷರು ಬಂದಾಗ ಬರೋದು ನಮ್ಮ ಡ್ಯೂಟಿ. ಹಿಂದೆ ಬಂದಾಗ ನಾವೆಲ್ಲ ಅಧ್ಯಕ್ಷರ ಸ್ವಾಗತಕ್ಕೆ ಬಂದಿದ್ದೇವೆ. ಮುಂದೆ ಬಂದಾಗ ಎಲ್ಲರೂ ಕೂಡಿಕೊಂಡು ಸ್ವಾಗತ ಮಾಡ್ತೀವಿ. ಡಿಕೆ ಶಿವಕುಮಾರ್ ಜೊತೆಗೆ ಭಿನ್ನಾಭಿಪ್ರಾಯ ಇಲ್ಲ ಎಂದು ಸತೀಶ್ ಹೇಳಿದರು.

    ಬೆಳಗಾವಿಗೆ ಅಧ್ಯಕ್ಷ ಬಂದಾಗ ಯಾರು ಬಾರದಿರುವ ವಿಚಾರದ ಕುರಿತು ಅಧ್ಯಕ್ಷರ ಜೊತೆ ಮಾತಾಡಿಲ್ಲ. ಅವರು ಸಿಕ್ಕಿಲ್ಲ, ಬೆಂಗಳೂರಿನಲ್ಲಿಯೂ ಅವರು ಇರಲಿಲ್ಲ. ಬೆಳಗಾವಿ ಬರುವ ಪೂರ್ವದಲ್ಲಿ ಅವರಿಗೆ ಭೇಟಿಯಾಗಿದ್ದೇನೆ.ಅದರ ಬಗ್ಗೆ ಗಂಭೀರವಾಗಿ ಚರ್ಚೆ ಅಗತ್ಯ ಇಲ್ಲ. ಬೆಳಗಾವಿ ಜಿಲ್ಲೆಯಲ್ಲಿ ಹೊರಗಿನ ಯಾರೂ ತಲೆ ಹಾಕಿಲ್ಲ, ಯಾರೂ ಸಹ ಡಿಸ್ಟರ್ಬ್ ಮಾಡಿಲ್ಲ. ನನ್ನ ಮತ್ತು ಡಿಸಿಎಂ ಮಧ್ಯೆ ಯಾವ ಭಿನ್ನಾಭಿಪ್ರಾಯವೂ ಇಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನನ್ನ ಮೌನವೂ ವೀಕ್ನೆಸ್ ಅಲ್ಲ: ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು

    ನನ್ನ ಮೌನವೂ ವೀಕ್ನೆಸ್ ಅಲ್ಲ: ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು

    ಬೆಳಗಾವಿ: ನನ್ನ ಮೌನವೂ ವೀಕ್ನೆಸ್ ಅಲ್ಲ ಎಂದು ಹೇಲುವ ಮೂಲಕ ಸಚಿವ ಸತೀಶ್ ಜಾರಕಿಹೊಳಿಗೆ (Sathish Jarakiholi) ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ತಿರುಗೇಟು ನೀಡಿದ್ದಾರೆ.

    ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ಜಿಲ್ಲಾ ರಾಜಕಾರಣದ ಬಗ್ಗೆ ಬೆಳಗಾವಿ ಮಾಧ್ಯಮಗಳಿಗೆ ಗೊತ್ತಿದೆ. ಬೇರೆ ಜಿಲ್ಲೆಯ ವರದಿಗಾರರು ಕೇಳಿದ್ರೆ ಉತ್ತರ ಕೊಡುತ್ತಿದ್ದೆ. ನಮ್ಮ ಜಿಲ್ಲೆಯಲ್ಲಿ ಯಾವುದೇ ರೀತಿಯ ಸಣ್ಣ ಸಮಸ್ಯೆಯಿಲ್ಲ. ರಾಜ್ಯದ ಜನರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. ನಾವೆಲ್ಲರೂ ಹೊಂದಾಣಿಕೆಯಿಂದ ಕೆಲಸ ಮಾಡ್ತಿದ್ದೇವೆ ಎಂದರು.

    ಮೈಸೂರು ಪ್ರವಾಸದ ಲಿಸ್ಟ್ ನಲ್ಲಿ ನಾನೂ ಇದ್ದೆ. ನಾನೇ ನಮ್ಮ ಜಿಲ್ಲೆಯ ರಾಜು ಕಾಗೆ, ಮಹಾಂತೇಶ ಕೌಜಲಗಿ ಜೊತೆಗೆ ಮಾತನಾಡಿದ್ದೆ. ಎಲ್ಲರೂ ಸೇರಿ ಮೈಸೂರು ಪ್ರವಾಸಕ್ಕೆ ಹೋಗಲು ತೀರ್ಮಾನಿಸಿದ್ದೆವು. ಇದನ್ನು ಬಂಡಾಯ ಎಂದು ಬಿಂಬಿಸುವುದು ಸರಿಯಲ್ಲ. ಮೈಸೂರಿನಲ್ಲಿ ಮಹಿಳಾ ದಸರಾ ಉದ್ಘಾಟನೆ ನಾನೇ ಮಾಡಬೇಕಿತ್ತು. ಆದರೆ ಬಾಯ್ಲರ್ ಉದ್ಘಾಟನೆ ಮಾಡಬೇಕಿತ್ತು, ಸಹೋದರ ಕರೆದ. ಅದಕ್ಕೆ ನಾನು ಬೆಳಗಾವಿಗೆ (Belagavi) ಮರಳಿ ನಂತರ ಭದ್ರಾವತಿಗೆ ಹೋದೆ ಎಂದು ಹೇಳಿದರು. ಇದನ್ನೂ ಓದಿ: ದಾಂಡಿಯಾ ಹೆಸರಲ್ಲಿ ಡ್ರಗ್ಸ್ ಪಾರ್ಟಿನಾ? – ಮಂಗಳೂರಿನಲ್ಲಿ VHP ವಿರೋಧ

    ಮೈಸೂರು ಪ್ರವಾಸ ಕ್ಯಾನ್ಸಲ್ ಆಗಿದ್ದೇಕೆ ನನಗೆ ಗೊತ್ತಿಲ್ಲ ಸತೀಶ್ ಅವರನ್ನು ಕೇಳಿ. ಡಿಕೆಶಿ ಬೆಳಗಾವಿಗೆ ಬಂದಾಗ ಯಾರದರೂ ಶಾಸಕರು ಸ್ವಾಗತಕ್ಕೆ ಬರಬೇಕಿತ್ತು ಎಂದು ಹೇಳುವ ಮೂಲಕ ಮತ್ತೊಮ್ಮೆ ಬೇಸರ ವ್ಯಕ್ತಪಡಿಸಿದರು.

    ಮೊನ್ನೆಯಷ್ಟೇ ಸತೀಶ್ ಜಾರಕಿಹೊಳಿ ಮಾತನಾಡಿ, ಡಿಕೆಶಿ ಜೊತೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಾನು ತಿಂಗಳಿಂದ ಹೊಂದುಕೊಂಡು ಹೋಗುತ್ತಿದ್ದೇನೆ. ಸೈಲೆಂಟ್ ಆಗಿರೋದೇ ನನ್ನ ವೀಕ್ನೆಸ್ ಅಲ್ಲ ಎಂದು ಹೇಳಿದ್ದರು. ಇದೀಗ ಸತೀಶ್ ಜಾರಕಿಹೊಳಿಗೆ ಅವರದ್ದೇ ಮಾತಿನಲ್ಲೇ ಲಕ್ಷ್ಮಿ ಹೆಬ್ಬಾಳ್ಕರ್ ಉತ್ತರ ಕೊಟ್ರಾ ಅನ್ನೋ ಪ್ರಶ್ನೆ ಎದ್ದಿದೆ.

    ಒಂದೇ ವಿಮಾನದಲ್ಲಿ ಆಗಮನ: ಬೆಳಗಾವಿ ರಾಜಕೀಯದಲ್ಲಿ ಡಿಕೆ ಶಿವಕುಮಾರ ಹಸ್ತಕ್ಷೇಪ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ಇಂದು ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಸತೀಶ್ ಜಾರಕಿಹೊಳಿ ಒಂದೇ ವಿಮಾನದಲ್ಲಿ ಬೆಂಗಳೂರಿನಿಂದ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಮೂಲಕ ನಮ್ಮ ನಡುವೆ ಯಾವುದೇ ಅಸಮಾಧಾನ ಇಲ್ಲ ಎನ್ನುವುದ ತೋರಿಸುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡಿ. 4ರಿಂದ 15ರ ವರೆಗೆ ಚಳಿಗಾಲದ ಅಧಿವೇಶನ

    ಡಿ. 4ರಿಂದ 15ರ ವರೆಗೆ ಚಳಿಗಾಲದ ಅಧಿವೇಶನ

    ಬೆಂಗಳೂರು: ಡಿಸೆಂಬರ್ 4ರಿಂದ ಡಿಸೆಂಬರ್ 15 ರವರೆಗೆ ಚಳಿಗಾಲ ಅಧಿವೇಶನ (Winter Session) ನಡೆಸುವುದಾಗಿ ಇಂದಿನ (ಗುರುವಾರ) ಸಚಿವ ಸಂಪುಟದಲ್ಲಿ (Cabinet Meeting) ತೀರ್ಮಾನಿಸಲಾಗಿದೆ.

    ಈ ಹಿಂದೆ ನವೆಂಬರ್ ಕೊನೇ ವಾರದಲ್ಲಿ ಅಧಿವೇಶನ ಆರಂಭಿಸಿ, ಬೆಂಗಳೂರಿನಲ್ಲಿ 10 ದಿನ ಹಾಗೂ ಬೆಳಗಾವಿಯ ಸುವರ್ಣಸೌಧದಲ್ಲಿ 10 ದಿನ ಕಲಾಪ ನಡೆಸುವ ಬಗ್ಗೆ ಚಿಂತನೆ ನಡೆದಿತ್ತು ಎನ್ನಲಾಗಿತ್ತು. ಆದರೆ ಇಂದು ವಿಧಾನ ಸೌಧದಲ್ಲಿ ನಡೆದ ಸಭೆಯಲ್ಲಿ ಈ ಬಾರಿಯ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿಯೇ ನಡೆಸುವುದಾಗಿ ನಿರ್ಧಾರ ಕೈಗೊಳ್ಳಲಾಯಿತು. ಇದನ್ನೂ ಓದಿ: ಆತ್ಮಹತ್ಯೆ ಮಾಡ್ಕೊಂಡ ವ್ಯಕ್ತಿ ಯಾರು ಅಂತಲೇ ಗೊತ್ತಿಲ್ಲ: ಶರಣ ಪ್ರಕಾಶ್ ಪಾಟೀಲ್

    ಡಿಸೆಂಬರ್ 3 ರಂದು ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಹೊರಬೀಳಲಿದೆ. ಈ ಬೆನ್ನಲ್ಲೇ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಡಿಸೆಂಬರ್ 15 ರ ನಂತರ ಶೂನ್ಯ ಮಾಸ ಕಾರಣ ಈ ದಿನಗಳಲ್ಲಿ ಸರ್ಕಾರ ಅಧಿವೇಶನ ನಡೆಸಲ್ಲ. ಇನ್ನು ನವೆಂಬರ್ ನಲ್ಲಿ ದೀಪಾವಳಿ ರಜೆ, ಕನಕ ಜಯಂತಿ ಇರುವುದರಿಂದ ಅಧಿವೇಶನ ನಡೆಸಲು 10 ದಿನಗಳು ಸಿಗಲ್ಲ. ಈ ಎಲ್ಲಾ ಕಾರಣಗಳಿಂದ ಡಿಸೆಂಬರ್ 4 ರಿಂದ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಹಾಗೂ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಜಿಲ್ಲೆಯಲ್ಲಿ ಪಕ್ಷದ ಎಲ್ಲಾ ಶಾಸಕರು ಒಗ್ಗಟ್ಟಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ನನಗೆ ಬಹಳ ಒಳ್ಳೆಯ ಖಾತೆ ಕೊಟ್ಟಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ವಹಿಸಿದ್ದಾರೆ. ಸತೀಶ್ ಜಾರಕಿಹೊಳಿ ಅವರು ಆರು ಬಾರಿ ಶಾಸಕರಾಗಿ, ನಾನು ಎರಡು ಬಾರಿ ಶಾಸಕಿಯಾಗಿ, ಮೊದಲ ಬಾರಿ ಸಚಿವೆ ಆಗಿರುವೆ. ಸತೀಶಣ್ಣ ಬಹಳ ಅನುಭವ ಇರುವವರು. ಅವರ ನೇತೃತ್ವದಲ್ಲಿ ನಾವೆಲ್ಲ ಒಂದಾಗಿ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಈಶ್ವರಪ್ಪ ನ್ಯಾಯಾಧೀಶರಾಗಿ ನನ್ನ ಜೈಲಿಗೆ ಕಳುಹಿಸಲಿ: ಡಿಸಿಎಂ

    ಜಿಲ್ಲೆಗೆ ಯಾವುದೇ ಅಧಿಕಾರಿಯನ್ನು ಸತೀಶ್ ಜಾರಕಿಹೊಳಿ ಅವರು ಹಾಕಿದಾಗ ನಾನು ಎಸ್ ಎನ್ನುತ್ತೇನೆ. ನಾನು ಯಾವುದೇ ಅಧಿಕಾರಿ ಹಾಕಿದಾಗ ಅವರು ಎಸ್ ಎನ್ನುತ್ತಾರೆ. ಅದೇ ಕಾಂಪ್ರಮೈಸ್ ಅಷ್ಟೇ. ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರ ಎಂಎಲ್‌ಸಿ ಚುನಾವಣೆಯಿಂದ ಹಿಡಿದು ಇಲ್ಲಿ ತನಕ ಒಂದೇ ಒಂದು ವಿಚಾರದಲ್ಲೂ ಸತೀಶ್ ಅವರ ಜೊತೆ ಭಿನ್ನಾಭಿಪ್ರಾಯಗಳು ಬಂದಿಲ್ಲ. ನಾನು ಗಟ್ಟಿ ಧ್ವನಿಯಲ್ಲಿ ಸ್ಪಷ್ಟಪಡಿಸುತ್ತೇನೆ. ಒಂದೇ ಒಂದು ವಿಚಾರದಲ್ಲೂ ನನ್ನ ಹಾಗೂ ಸತೀಶಣ್ಣ ಮಧ್ಯೆ ಭಿನ್ನಾಭಿಪ್ರಾಯ ಇಲ್ಲ ಎಂದರು. ಇದನ್ನೂ ಓದಿ: ರಾಜಸ್ಥಾನ ಚುನಾವಣೆಯಲ್ಲಿ ಮಹಿಳೆಯರಿಗೆ ಯಾಕೆ ಆದ್ಯತೆ?

    ನಾನು ಯಾವುದಾದರೂ ಹಸ್ತಕ್ಷೇಪ ಮಾಡಿದ್ದೀನಾ? ಜಿಲ್ಲಾಡಳಿತದಲ್ಲೇನಾದ್ರೂ ನನ್ನಿಂದ ತೊಂದರೆ ಆಗ್ತಿದೆಯಾ ಅಂತ ಮತ್ತೊಮ್ಮೆ ಸಚಿವರನ್ನೇ ಕೇಳಿ ಎಂದ ಹೆಬ್ಬಾಳ್ಕರ್, ಬೆಳಗಾವಿ ರಾಜಕೀಯ ವಿಷಯಕ್ಕೆ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಅವರನ್ನು ಯಾಕೆ ಎಳೆದು ತರ್ತೀರಾ ಎಂದು ಮಾಧ್ಯಮದವರನ್ನ ಪ್ರಶ್ನಿಸಿದರು. ಅಧ್ಯಕ್ಷರು ಇಡೀ ರಾಜ್ಯ ಸುತ್ತಾಡಿ 135 ಎಂಎಲ್‌ಎ ಗಳು ಗೆಲ್ಲುವುದಕ್ಕೆ ತಮ್ಮದೇ ಕೊಡುಗೆ ಕೊಟ್ಟಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ನನ್ನ ವಿಚಾರಣೆ ಮಾಡೇ ಇಲ್ಲ, 90% ತನಿಖೆ ಪೂರ್ಣ ಹೇಗೆ ಆಗುತ್ತೆ: ಡಿಕೆಶಿ ಪ್ರಶ್ನೆ

    ಬುಧವಾರ ಬೆಳಗಾವಿಯಲ್ಲಿ ಡಿ.ಕೆ.ಶಿವಕುಮಾರ್ ಅವರ ಸ್ವಾಗತಕ್ಕೆ ಜಿಲ್ಲೆಯ ಶಾಸಕರು ಹೋಗದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮುಜುಗರ ಅನ್ನೋ ಶಬ್ದ ರಾಜಕಾರಣದಲ್ಲಿ ಇಲ್ಲ. ಅದರ ಹೊರತಾಗಿ ನಾವು ರಾಜಕಾರಣ ಮಾಡಬೇಕಾಗುತ್ತದೆ. ಒಂದು ತಿಂಗಳು ಮೊದಲೇ ನನ್ನ ಮೊಮ್ಮಗಳ ನಾಮಕರಣ ನಿಗದಿಯಾಗಿತ್ತು. ಹೀಗಾಗಿ ನಾನು ಭದ್ರಾವತಿಗೆ ಹೋದೆ. ಉಸ್ತುವಾರಿ ಸಚಿವರೂ ಕೂಡ ಮೊದಲೇ ತಿಳಿಸಿದ್ದರು, ಅವರು ಬೆಂಗಳೂರಲ್ಲೇ ಇದ್ದರು. ದಸರಾ ಹಬ್ಬ, ವಿವಿಧ ಕಾರಣಗಳಿಂದ ಇತರ ಶಾಸಕರು ಹೋಗಿರಲಿಲ್ಲ. ನಾನು ಅಧ್ಯಕ್ಷರಿಗೆ ಮುಂಚಿತವಾಗಿ ಗಮನಕ್ಕೆ ತಂದಿದ್ದೆ ಎಂದರು. ಇದನ್ನೂ ಓದಿ: ಯಾವುದೇ ಅಪರಾಧ ಮಾಡಿಲ್ಲ, ಹಾಗಾಗಿ ಟ್ರಬಲ್ ಇಲ್ಲ: ಡಿಕೆ ಸುರೇಶ್

    ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ಕೋರ್ಟ್ ಅನುಮತಿ ನೀಡಿರುವ ಕುರಿತು ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಸಮರ್ಥರಿದ್ದಾರೆ. ಯಾವುದೇ ಕಾನೂನು ಹೋರಾಟವಾದರೂ ಸಮರ್ಥವಾಗಿ ಎದುರಿಸುತ್ತಾರೆ. ಎಲ್ಲವನ್ನೂ ನಿಭಾಯಿಸುತ್ತಾರೆ. ಸಂವಿಧಾನ ಕಾನೂನಿನ ಬಗ್ಗೆ ಗೌರವವಿದೆ. ಸಮರ್ಥವಾಗಿ ನಿಭಾಯಿಸಿ ಜಯಶಾಲಿಯಾಗಿ ಹೊರಬರುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಜೆಡಿಎಸ್‌ನಿಂದ ಸಿಎಂ ಇಬ್ರಾಹಿಂ ಉಚ್ಛಾಟನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಿಕ್ಷೆ ಬೇಡಲು ಹೋಗಿದ್ದೆ: ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕ ಕಿಡಿ

    ಭಿಕ್ಷೆ ಬೇಡಲು ಹೋಗಿದ್ದೆ: ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕ ಕಿಡಿ

    ಬೆಳಗಾವಿ: ಐತಿಹಾಸಿಕ ಕಿತ್ತೂರು ಉತ್ಸವಕ್ಕೆ (Kittur Utsav) ನಿರೀಕ್ಷಿತ ಪ್ರಮಾಣದಲ್ಲಿ ಅನುದಾನ ಬಿಡುಗಡೆ ಆಗದಿರುವ ವಿಚಾರಕ್ಕೆ ರಾಜ್ಯ ಸರ್ಕಾರದ ವಿರುದ್ಧ ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ (Babasaheb Patil) ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಿತ್ತೂರು ಉತ್ಸವಕ್ಕೆ ಇನ್ನಷ್ಟು ಅನುದಾನ ನೀಡಿ ಎಂದು ಭಿಕ್ಷೆ ಬೇಡಲು ಬೆಂಗಳೂರಿಗೆ ಹೋಗಿದ್ದೆ. ಈಗಾಗಲೇ ಉತ್ಸವಕ್ಕೆ ಸರ್ಕಾರ 2 ಕೋಟಿ ರೂ. ಅನುದಾನ ನೀಡಿದೆ. ಇನ್ನಷ್ಟು ಅನುದಾನ ಕೊಡಲಿ ಎಂದು ಭಿಕ್ಷೆ ಬೇಡಲು ಹೋಗಿದ್ದೆ. ಕಳೆದ ವರ್ಷದಿಂದ ರಾಜ್ಯಮಟ್ಟದ ಉತ್ಸವವಾಗಿ ಕಿತ್ತೂರು ಉತ್ಸವ ಆಚರಿಸಲಾಗಿತ್ತು ಎಂದಿದ್ದಾರೆ. ಇದನ್ನೂ ಓದಿ: ಟೆರರ್ ಫಂಡಿಂಗ್‍ಗೆ ಕಡಿವಾಣ – ವಿದೇಶಿ ವ್ಯವಹಾರದ ಮೇಲೆ ಕೇಂದ್ರ ಕಣ್ಣು

    ಹಿಂದಿನ ಬಿಜೆಪಿ (BJP) ಸಿಎಂ ಬಸವರಾಜ್ ಬೊಮ್ಮಾಯಿಯವರು ಈ ಉತ್ಸವವನ್ನು ರಾಜ್ಯಮಟ್ಟದ ಉತ್ಸವವನ್ನಾಗಿ ಘೋಷಣೆ ಮಾಡಿದ್ದರು. 2021ರಲ್ಲೇ ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವಾಗಿ ಆಚರಿಸಲಾಗುವುದು ಎಂದು ಬೊಮ್ಮಾಯಿ ಹೇಳಿದ್ದರು. ಜೊತೆಗೆ ಕಿತ್ತೂರು ಉತ್ಸವಕ್ಕೆ 5 ಕೋಟಿ ರೂ. ಅನುದಾನ ನೀಡುವುದಾಗಿಯೂ ಘೋಷಣೆ ಮಾಡಿದ್ದರು. ಈಗಿನ ಸರ್ಕಾರ ಕೇವಲ 2 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಈಜು ಬಾರದೇ ಯುವಕ ಕೆರೆಯಲ್ಲಿ ಮುಳುಗಿ ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜಾರಕಿಹೊಳಿ ಸೇರಿಗೆ ಡಿಕೆಶಿ ಸವ್ವಾ ಸೇರು – ಯಾರಿಗೆ ಸಿಗುತ್ತೆ ಲೋಕಸಭೆ ಟಿಕೆಟ್?

    ಜಾರಕಿಹೊಳಿ ಸೇರಿಗೆ ಡಿಕೆಶಿ ಸವ್ವಾ ಸೇರು – ಯಾರಿಗೆ ಸಿಗುತ್ತೆ ಲೋಕಸಭೆ ಟಿಕೆಟ್?

    ಬೆಳಗಾವಿ/ ಬೆಂಗಳೂರು: ಲೋಕಸಭೆ ಚುನಾವಣೆಯ (Lok Sabha Election) ಬೆಳಗಾವಿ ಸಮರದಲ್ಲೂ ಪ್ರತಿಷ್ಠೆಯ ಪೈಪೋಟಿ ನಡೆಯುವ ಎಲ್ಲಾ ಲಕ್ಷಣ ಕಾಣುತ್ತಿದೆ. ಬೆಳಗಾವಿಯಲ್ಲಿ ಸಿಎಂ ಕೋಟಾ, ಡಿಸಿಎಂ ಕೋಟಾ ಲೆಕ್ಕದಲ್ಲಿ ಟಿಕೆಟ್ ಹಂಚಿಕೆಯಾಗುವ ಸಾಧ್ಯತೆಯಿದೆ.

    ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಕಟ್ಟಿ ಹಾಕಲು ಕುರುಬ ಅಭ್ಯರ್ಥಿ ದಾಳ ಉರುಳಿಸಿದ ಸತೀಶ್ ಜಾರಕಿಹೊಳಿ (Satish Jarkiholi) ಸಿಎಂ ಪರ ಪಾನ್ ಮೂವ್ ಮಾಡಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ಬೆನ್ನು ತಟ್ಟುತ್ತಿರುವ ಡಿಕೆ ಶಿವಕುಮಾರ್‌ (Shivakumar) ಜಾರಕಿಹೊಳಿ ಹಿಡಿತವನ್ನೇ ತಪ್ಪಿಸಲು ಪ್ಲಾನ್ ಮಾಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

     

    ಬೆಳಗಾವಿ ಜಿಲ್ಲೆಯಲ್ಲಿ ಎರಡು ಲೋಕಸಭಾ ಕ್ಷೇತ್ರ ಇದ್ದು ಈ ಪೈಕಿ ಒಂದು ಸಿಎಂ ಕೋಟಾ ಇನ್ನೊಂದು ಡಿಸಿಎಂ ಕೋಟಾ ಎಂಬ ವಿಷಯದ ಬಗ್ಗೆ ಚರ್ಚೆ ಆರಂಭವಾಗಿದೆ.  ಈ ಪೈಕಿ  ಒಂದು ಟಿಕೆಟ್ ಕುರುಬ ಸಮುದಾಯಕ್ಕೆ ಕೊಡಬೇಕು ಎಂದು ಸತೀಶ್ ಜಾರಕಿಹೋಳಿ ಘೋಷಣೆ ಮಾಡಿದ್ದಾರೆ. ಇದರ ಮಧ್ಯೆ ಇನ್ನೊಂದು ಸ್ಥಾನಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಪುತ್ರನ ತರುವ ಬಗ್ಗೆ  ಸಿದ್ದತೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಡಿಕೆಶಿ ಹಸ್ತಕ್ಷೇಪಕ್ಕೆ ಸತೀಶ್ ಕಿಡಿ – ಕಾಂಗ್ರೆಸ್‌ಗೂ ಬೆಳಗಾವಿ ರಾಜಕೀಯ ಕಂಟಕನಾ?

    ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯತ್ನಕ್ಕೆ ಡಿಸಿಎಂ ಡಿಕೆಶಿ ಸಾಥ್ ನೀಡಿದರೆ ಸತೀಶ್ ಜಾರಕಿಹೊಳಿ ತಮ್ಮ ರಾಜಕೀಯ ಗುರು ಸಿದ್ದರಾಮಯ್ಯ (Siddaramaiah) ಪರ ಬ್ಯಾಟ್ ಬೀಸಿದ್ದಾರೆ. ಇದು ಸಹಜವಾಗಿಯೇ ಜಾರಕಿಹೊಳಿ ತಮ್ಮ ಆಪ್ತರನ್ನು ಅಥವಾ ಕುಟುಂಬದವರನ್ನ ಸ್ಪರ್ಧೆಗೆ ಇಳಿಸುವುದಕ್ಕೆ ಡಿಕೆಶಿ ಚೆಕ್‌ಮೇಟ್ ಕೊಟ್ಟಂತಿದೆ.

    ಸಿಎಂ, ಡಿಸಿಎಂ ಕೋಟಾದಲ್ಲಿ ಟಿಕೆಟ್ ಹಂಚಿಕೆ ಆದರೆ ಸಹಜವಾಗಿಯೇ ಜಾರಕಿಹೊಳಿ ವೈಯಕ್ತಿಕ ಲೆಕ್ಕಾಚಾರ ತಪ್ಪುವ ಸಾಧ್ಯತೆಯು ಇದೆ ಎನ್ನಲಾಗಿದೆ. ಒಟ್ಟಾರೆ ಬೆಳಗಾವಿ ಲೋಕಸಭೆ ಅಭ್ಯರ್ಥಿ ಆಯ್ಕೆಯಲ್ಲೂ ಡಿಕೆಶಿ ವರ್ಸಸ್ ಜಾರಕಿಹೋಳಿ ಫೈಟ್ ಮತ್ತೊಂದು ರೀತಿಯಲ್ಲಿ ಶುರುವಾಗುವ ಲಕ್ಷಣಗಳು ಕಾಣುತ್ತಿವೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡಿಕೆಶಿ ಹಸ್ತಕ್ಷೇಪಕ್ಕೆ ಸತೀಶ್ ಕಿಡಿ – ಕಾಂಗ್ರೆಸ್‌ಗೂ ಬೆಳಗಾವಿ ರಾಜಕೀಯ ಕಂಟಕನಾ?

    ಡಿಕೆಶಿ ಹಸ್ತಕ್ಷೇಪಕ್ಕೆ ಸತೀಶ್ ಕಿಡಿ – ಕಾಂಗ್ರೆಸ್‌ಗೂ ಬೆಳಗಾವಿ ರಾಜಕೀಯ ಕಂಟಕನಾ?

    ಬೆಂಗಳೂರು: ಬೆಳಗಾವಿಯಲ್ಲಿ ರಾಜಕಾರಣ (Belagavi Politics) ಬೆಂಕಿ ಉರಿದಾಗ ಅನಾಹುತವೇ ನಡೆದಿದೆ. ಈ ಬಾರಿಯೂ ಏನಾದರೊಂದು ರಾಜಕೀಯ ಅವಘಡಕ್ಕೆ ಸುಳಿವು ಕೊಡುತ್ತಿದ್ಯಾ ಕುಂದಾನಗರಿ ಪವರ್ ಪಾಲಿಟಿಕ್ಸ್ ಎಂಬ ಅನುಮಾನ ಈಗ ಶುರುವಾಗಿದೆ.

    ಹಿಂದಿನ ಜೆಡಿಎಸ್-ಕಾಂಗ್ರೆಸ್ (JDS-Congress) ಸಮ್ಮಿಶ್ರ ಸರ್ಕಾರಕ್ಕೆ ಬೆಳಗಾವಿ ರಾಜಕಾರಣ ಮುಳುವಾಗಿತ್ತು. ಈಗ ಮತ್ತೊಮ್ಮೆ ರಾಜಕಾರಣ ಗರಿಗೆದರಿದ್ದು, ಇಬ್ಬರು ಪ್ರಭಾವಿ ಸಚಿವರ ಮಧ್ಯೆ ಕಿತ್ತಾಟ ಈಗ ಭುಗಿಲೆದ್ದಿದೆ.

    ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ನಡುವೆ ಪವರ್ ಪ್ರತಿಷ್ಠೆ ಶುರುವಾಗಿದೆ. ಜಿಲ್ಲೆ ಮೇಲಿನ ತಮ್ಮ ಪ್ರಭಾವ, ಹಿಡಿತ ಕಮ್ಮಿ ಮಾಡಲು ಹುನ್ನಾರ ಮಾಡಿದ್ದಾರೆಂದು ಸತೀಶ್ ಜಾರಕಿಹೊಳಿ ಆರೋಪ ಮಾಡಿದ್ದಾರೆ.

     

    ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಹೊರಗಿನವರ ಹಸ್ತಕ್ಷೇಪ ಎಂದು ಡಿಕೆಶಿಗೂ (DK Shivakumar) ಠಕ್ಕರ್ ಕೊಟ್ಟಿದ್ದಾರೆ. ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರ ನೇಮಕ ವಿಚಾರದಲ್ಲಿ ಕಡೆಗಣನೆ ಮಾಡಿದ್ದಲ್ಲದೇ ನಿಗಮ ಮಂಡಳಿ ಸದಸ್ಯ ಸ್ಥಾನದಲ್ಲಿ ತಮ್ಮ ಬೆಂಬಲಿಗರಿಗೆ ಕೊಕ್ ನೀಡಿದ್ದಾರೆ. ಅಧಿಕಾರಿಗಳ ವರ್ಗಾವಣೆ ವಿಚಾರವಾಗಿ ಜಟಾಪಟಿ ನಡೆದಿದ್ದು, ಈ ಎಲ್ಲಾ ಕಾರಣದಿಂದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಮುನಿಸಿಕೊಂಡಿದ್ದಾರೆ.  ಇದನ್ನೂ ಓದಿ: ಬೆಂಗಳೂರಲ್ಲಿ ವಿಶ್ವಕಪ್‌ ಪಂದ್ಯಾವಳಿ; ನಮ್ಮ ಮೆಟ್ರೋದಿಂದ ವಿಶೇಷ ಟಿಕೆಟ್‌ ವ್ಯವಸ್ಥೆ

    ಸತೀಶ್ ಜಾರಕಿಹೊಳಿ ಬಣ ವರ್ಸಸ್ ಲಕ್ಷ್ಮಿ ಹೆಬ್ಬಾಳ್ಕರ್ ಬಣದ ಮಧ್ಯೆ ಪರಸ್ಪರ ವೈಯಕ್ತಿಕ ಪ್ರತಿಷ್ಠೆ, ಜಿದ್ದಾಜಿದ್ದಿ ಏರ್ಪಟ್ಟಿದೆ. ಡಿಕೆಶಿ ಕೂಡಾ ಮತ್ತೊಮ್ಮೆ ಬೆಳಗಾವಿ ರಾಜಕೀಯದಲ್ಲಿ ಹಸ್ತಕ್ಷೇಪಕ್ಕೆ ಸತೀಶ್ ಜಾರಕಿಹೊಳಿ ಬೇಸರ ವ್ಯಕ್ತಪಡಿಸಿದ್ದಾರೆ.

    ರಾಜ್ಯದಲ್ಲಿ ಯಾವುದೇ ಸರ್ಕಾರ ಬಂದರೂ ಸಾಹುಕಾರ್ ಬ್ರದರ್ಸ್ ಆಟ ಇದ್ದಿದ್ದೇ. ಸತೀಶ್, ರಮೇಶ್ ಹಾಗೂ ಬಾಲಚಂದ್ರ ಜಾರಕಿಹೊಳಿ ದಾಳಗಳಿಗೆ ಸರ್ಕಾರಗಳಲ್ಲಿ ತಲ್ಲಣ ಸೃಷ್ಟಿಸಿದೆ ಸಾಹುಕಾರ್ ಸಹೋದರರ ಮೇಲಾಟದ ಬಿಸಿ ಯಡಿಯೂರಪ್ಪ, ಸಿದ್ದರಾಮಯ್ಯ ಹಾಗೂ ಹೆಚ್‌ಡಿಕೆಗೆ ಸರಿಯಾಗಿಯೇ ತಾಕಿದೆ. ಈಗ ಲೋಕಸಭೆ ಚುನಾವಣೆ ಹೊತ್ತಿಗೆ ಸಿದ್ದರಾಮಯ್ಯ (Siddaramaiah) ಸರ್ಕಾರಕ್ಕೂ ಗಂಡಾಂತರ ಆಗುತ್ತಾ ಎಂಬ ಚರ್ಚೆ ನಡೆಯುತ್ತಿದೆ.

    ಸತೀಶ್- ಲಕ್ಷ್ಮಿ ಜಟಾಪಟಿ ಯಾವುದೋ ರಾಜಕೀಯ ಅವಘಡಕ್ಕೆ ಸುಳಿವು ಕೊಡುತ್ತಿದೆ ಎಂಬ ಗುಮಾನಿ ಹಲವರದ್ದು. ಕುಂದಾನಗರಿ ಪವರ್ ಪಾಲಿಟಿಕ್ಸ್ ಐದೇ ತಿಂಗಳಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಡೇಂಜರ್ ಅಲಾರಂ ಆಗುವ ಲಕ್ಷಣ ತೋರಿಸುತ್ತಿದೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸತೀಶ್ ಜಾರಕಿಹೊಳಿ, ನನ್ನ ನಡುವೆ ಏನೂ ಇಲ್ಲ: ಡಿಕೆಶಿ

    ಸತೀಶ್ ಜಾರಕಿಹೊಳಿ, ನನ್ನ ನಡುವೆ ಏನೂ ಇಲ್ಲ: ಡಿಕೆಶಿ

    ಬೆಳಗಾವಿ: ಸತೀಶ್ ಜಾರಕಿಹೊಳಿ (Satish Jarkiholi) ಮತ್ತು ನನ್ನ ನಡುವೆ ಏನೂ ಇಲ್ಲ. 136 ಶಾಸಕರು ಮತ್ತು ನನ್ನ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಖಾಸಗಿ ಕಾರ್ಯಕ್ರಮದ ನಿಮಿತ್ತವಾಗಿ ಕಾಂಗ್ರೆಸ್ (Congress) ಕಾರ್ಯಕರ್ತರನ್ನು ಭೇಟಿಯಾಗಲು ಬಂದಿದ್ದೇನೆ. ಜಲಸಂಪನ್ಮೂಲ ಇಲಾಖೆ ಕೆಲ ಯೋಜನೆ ಬಗ್ಗೆ ಸಭೆ ಮಾಡುತ್ತೇನೆ ಎಂದರು. ಇದನ್ನೂ ಓದಿ: ITದಾಳಿ ಜಟಾಪಟಿ; ಕಲೆಕ್ಷನ್ ಟಾಸ್ಕ್ ಸ್ಲೇಟ್ ಹಿಡಿದ ಸಚಿವರ ಪೋಸ್ಟರ್ ಹಾಕಿ ಬಿಜೆಪಿ ಟಾಂಗ್

    ಸತೀಶ್ ಜಾರಕಿಹೊಳಿ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಗೈರು ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸತೀಶ್ ಜಾರಕಿಹೊಳಿ ಬೆಂಗಳೂರಿನಲ್ಲಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಖಾಸಗಿ ಕಾರ್ಯಕ್ರಮದ ನಿಮಿತ್ತ ಭದ್ರಾವತಿಯಲ್ಲಿದ್ದಾರೆ. ಇದು ಪೂರ್ವ ನಿಯೋಜಿತ ಕಾರ್ಯಕ್ರಮ ಅಲ್ಲ. ಮಂಗಳವಾರ ರಾತ್ರಿ ಬೆಳಗಾವಿಗೆ ಬರಲು ನಿರ್ಧಾರ ಮಾಡಿದೆ. ನಾನು ಬರುವುದರ ಬಗ್ಗೆ ಯಾರಿಗೂ ಮಾಹಿತಿ ಕೊಟ್ಟಿಲ್ಲ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಇಳಿವಯಸ್ಸಿನಲ್ಲೂ ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿ ಮಾಡಿ ಸರ್ಕಾರಕ್ಕೆ ಚಾಟಿ ಬೀಸಿದ ಗ್ರಾಪಂ ಸದಸ್ಯ

    ಸತೀಶ್ ಜಾರಕಿಹೊಳಿ ಮುನಿಸು ವಿಚಾರದ ಕುರಿತು ಮಾತನಾಡಿದ ಅವರು, ನನ್ನ ಮತ್ತು ಅವರ ನಡುವೆ ಏನೂ ಇಲ್ಲ. 136 ಶಾಸಕರು ಮತ್ತು ನನ್ನ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಇತ್ತೀಚಿಗೆ ಸತೀಶ್ ಜಾರಕಿಹೊಳಿ ನನ್ನನ್ನು ಭೇಟಿ ಮಾಡಿದ್ದರು. ಶಾಸಕರ ಜೊತೆಗೆ ಪ್ರವಾಸ ಹೋಗುವ ಕುರಿತು ನನ್ನ ಜೊತೆಗೆ ಚರ್ಚೆ ಮಾಡಿಲ್ಲ. ನನ್ನನ್ನು ಭೇಟಿಯಾದಾಗಲೂ ಪ್ರವಾಸದ ಕುರಿತು ಮಾತನಾಡಿಲ್ಲ ಎಂದರು. ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ ಮನೆಯೊಂದು ನೂರಾರು ಬಾಗಿಲು: ಮುನಿಸ್ವಾಮಿ ವ್ಯಂಗ್ಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಳಗಾವಿಯಲ್ಲಿ ಡಿಕೆಶಿ ಲ್ಯಾಂಡ್ – ಸ್ವಾಗತಕ್ಕೆ ಬಾರದ ಶಾಸಕರು, ಸಚಿವರು

    ಬೆಳಗಾವಿಯಲ್ಲಿ ಡಿಕೆಶಿ ಲ್ಯಾಂಡ್ – ಸ್ವಾಗತಕ್ಕೆ ಬಾರದ ಶಾಸಕರು, ಸಚಿವರು

    ಬೆಳಗಾವಿ: ರಾಜ್ಯ ಕಾಂಗ್ರೆಸ್ (Karnataka Congress) ಸರ್ಕಾರದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂದು ವಿರೋಧ ಪಕ್ಷದ ನಾಯಕರು ಆಗಾಗ ಆರೋಪ ಮಾಡುತ್ತಿರುತ್ತಾರೆ. ಈ ಆರೋಪಕ್ಕೆ ಪುಷ್ಠಿ ನೀಡುವಂತೆ ಬೆಳಗಾವಿಯ (Belagavi) ವಿಮಾನ ನಿಲ್ದಾಣದ ಈ ದೃಶ್ಯಗಳು ಸಾಕ್ಷಿಯಾಗಿವೆ.

    ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರು ಬೆಳಗಾವಿಗೆ ಬಂದಾಗ ಬೆಳಗಾವಿಯ ಯಾವೊಬ್ಬ ಶಾಸಕರು, ಸಚಿವರು ಸ್ವಾಗತಕ್ಕೆ ಬಂದಿರಲಿಲ್ಲ.

    ಸಚಿವ ಸತೀಶ್ ಜಾರಕಿಹೊಳಿ ಬೆಂಗಳೂರು ಪ್ರವಾಸದಲ್ಲಿದ್ದರೆ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಖಾಸಗಿ ಕಾರ್ಯಕ್ರಮ ನಿಮಿತ್ತ ಭದ್ರಾವತಿಯಲ್ಲಿದ್ದಾರೆ. ಬೆಳಗಾವಿಯ 11 ಕಾಂಗ್ರೆಸ್ ಶಾಸಕರು ತಮ್ಮ ವೈಯಕ್ತಿಕ ಕಾರಣಗಳಿಂದಾಗಿ ಬೆಳಗಾವಿಯಲ್ಲಿ ಇಲ್ಲ ಎಂದು ತಿಳಿದುಬಂದಿದೆ.

    ಅಥಣಿ ಶಾಸಕ ಲಕ್ಷ್ಮಣ ಸವದಿ, ಕಾಗವಾಡ ಶಾಸಕ ರಾಜುಕಾಗೆ, ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ, ಚಿಕ್ಕೋಡಿ ಶಾಸಕ ಗಣೇಶ್ ಹುಕ್ಕೇರಿ, ರಾಮದುರ್ಗ ಶಾಸಕ ಅಶೋಕ್ ಪಟ್ಟಣ, ಸವದತ್ತಿ ಶಾಸಕ ವಿಶ್ವನಾಥ ವೈದ್ಯ, ಬೆಳಗಾವಿ ಶಾಸಕ ರಾಜು ಶೇಠ್ ಹಾಗೂ ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ್ ತಮ್ಮ ಕೆಲಸದ ನಿಮಿತ್ತ ಬೆಂಗಳೂರಿನಲ್ಲಿಯೇ ಇದ್ದಾರೆ. ಬೈಲಹೊಂಗಲ ಶಾಸಕ ಮಹಾಂತೇಶ್ ಕೌಜಲಗಿ ಅನಾರೋಗ್ಯದ ಕಾರಣ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಇದನ್ನೂ ಓದಿ: ವ್ಯಾಪಾರಕ್ಕೆ ಯಾರನ್ನೂ ನಿರ್ಬಂಧನೆ ಮಾಡುವುದು ಸರಿಯಲ್ಲ: ದಿನೇಶ್ ಗುಂಡೂರಾವ್

    ಈ ಎಲ್ಲಾ ಕಾರಣಗಳಿಂದ ಸಚಿವ, ಶಾಸಕರು ಬೆಳಗಾವಿಯಲ್ಲಿ ಡಿಕೆಶಿ ಸ್ವಾಗತಕ್ಕೆ ಗೈರು ಹಾಜರಾಗಿದ್ದಾರೆ. ಕಾಂಗ್ರೆಸ್ ನಾಯಕರು ಉದ್ದೇಶಪೂರ್ವಕವಾಗಿಯೇ ಗೈರಾಗಿದ್ದಾರೆ ಎಂಬ ಮಾತುಗಳು ಈಗ ಬೆಳಗಾವಿ ರಾಜಕೀಯದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ FIR ದಾಖಲು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]