Tag: belagavi

  • ಗೋವಾದಿಂದ ಟ್ರಾನ್ಸ್‌ಫಾರ್ಮರ್‌ನಲ್ಲಿ ಮದ್ಯ ಸಾಗಾಟ – ಆರೋಪಿ ಅರೆಸ್ಟ್

    ಗೋವಾದಿಂದ ಟ್ರಾನ್ಸ್‌ಫಾರ್ಮರ್‌ನಲ್ಲಿ ಮದ್ಯ ಸಾಗಾಟ – ಆರೋಪಿ ಅರೆಸ್ಟ್

    ಬೆಳಗಾವಿ: ನಕಲಿ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ ಸೃಷ್ಟಿಸಿ ಅದರಲ್ಲಿ ಗೋವಾ ಮದ್ಯದ (Goa Liquor) ಬಾಕ್ಸ್‌ಗಳನ್ನು ತುಂಬಿಕೊಂಡು ಬರುತ್ತಿದ್ದ ಆರೋಪಿಯನ್ನು ಅಬಕಾರಿ ಇಲಾಖೆ (Excise Department) ಅಧಿಕಾರಿಗಳು ಹಿರೇಬಾಗೇವಾಡಿ ಬಳಿ ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ಮಹಾರಾಷ್ಟ್ರ ಮೂಲದ ಶ್ರೀಧರ್ ಎಂದು ಗುರುತಿಸಲಾಗಿದೆ. ಆರೋಪಿ ಐಷರ್ ವಾಹನದಲ್ಲಿ ನೋಡಲು ಟ್ರಾನ್ಸ್‌ಫಾರ್ಮರ್‌ನಂತೆ ಕಾಣುವ ಎರಡು ಪೆಟ್ಟಿಗೆಯನ್ನು ಸಿದ್ಧಪಡಿಸಿದ್ದಾನೆ. ಬಳಿಕ ಅದರಲ್ಲಿ ಗೋವಾ ಮದ್ಯವನ್ನು ತುಂಬಿಸಿಕೊಂಡು ಬಂದಿದ್ದಾನೆ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದನ್ನೂ ಓದಿ: 20 ವರ್ಷಗಳ ಹಿಂದಿನ ಕೊಲೆ ಪ್ರಕರಣ – ಮೃತ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು!

    ಕಳೆದ 15 ದಿನಗಳಿಂದ ಈ ರೀತಿ ಸಾಗಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಇತ್ತು. ನಮ್ಮ ಸಿಬ್ಬಂದಿ ವಾಹನಕ್ಕಾಗಿ ಕಾರ್ಯಾಚರಣೆ ನಡೆಸುತ್ತಿದ್ದರು. ಈಗ ಖಚಿತ ಮಾಹಿತಿ ಮೇರೆಗೆ ವಾಹನವನ್ನು ವಶಪಡಿಸಿಕೊಂಡಿದ್ದೇವೆ. ಗೋವಾದಿಂದ ಕರ್ನಾಟಕ ಮಾರ್ಗವಾಗಿ ತೆಲಂಗಾಣಕ್ಕೆ (Telangana) ಈ ಮದ್ಯ ಸಾಗಾಟ ಆಗುತ್ತಿರುವ ಬಗ್ಗೆ ಮಾಹಿತಿ ಇದೆ ಎಂದು ಅಬಕಾರಿ ಜಂಟಿ ಆಯುಕ್ತ ಮಂಜುನಾಥ ಹೇಳಿದ್ದಾರೆ.

    ಕಳೆದ ಬಾರಿ ಫ್ಲೈವುಡ್ ಶೀಟ್‍ನಲ್ಲಿ ಮದ್ಯ ಇಟ್ಟು ಸಾಗಾಟ ಮಾಡಿದ್ದರು. ಇದು ಎಲ್ಲಿಂದ ಖರೀದಿ ಆಗಿದೆ ಎನ್ನುವುದು ಕಂಡು ಹಿಡಿಯುವುದು ಕಷ್ಟ. ವಾಹನವನ್ನು ಜಿಪಿಎಸ್ ಮೂಲಕ ಆನ್ ಆಂಡ್ ಆಫ್ ಮಾಡುವ ಮೂಲಕ ಆರೋಪಿಗಳಿಗೆ ಅಧಿಕಾರಿಗಳಿಗೆ ಶಾಕ್ ನೀಡಿದ್ದರು. ನಾವು ವಾಹನ ಹಿಡಿದ ತಕ್ಷಣ ಜಿಪಿಎಸ್ ಮೂಲಕ ವಾಹನವನ್ನು ಆಫ್ ಮಾಡಿದ್ದರು. ನಂತರ ಜಿಪಿಎಸ್ ಡಿಸ್ಕ್ ಕನೆಕ್ಟ್ ಮಾಡಿ ವಾಹನ ಜಪ್ತಿ ಮಾಡಿದ್ದೆವು. ಇದರ ಹಿಂದೆ ಯಾರಿದ್ದಾರೆ ಎನ್ನುವುದರ ಬಗ್ಗೆ ತನಿಖೆ ನಡೆಸುತ್ತೇವೆ. ಅಬಕಾರಿ ಡಿಸಿ ವಿಜಯಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ FIR ದಾಖಲು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಹಿಳೆಗೆ ಚಪಲಿ ಹಾರ ಹಾಕಿ ಮೆರವಣಿಗೆ ಪ್ರಕರಣ- 13 ಜನರ ಬಂಧನ

    ಮಹಿಳೆಗೆ ಚಪಲಿ ಹಾರ ಹಾಕಿ ಮೆರವಣಿಗೆ ಪ್ರಕರಣ- 13 ಜನರ ಬಂಧನ

    ಬೆಳಗಾವಿ: ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡುವ ಮೂಲಕ ವಿಕೃತಿ ಮೆರೆದಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಘಟಪ್ರಭಾದಲ್ಲಿ (Ghataprabha) ನಡೆದಿದ್ದು, ಇದೀಗ ಪೊಲೀಸರು 13 ಮಂದಿಯನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.

    ಕೆಲ ಜನರು ಮಹಿಳೆಯೊಬ್ಬರ ಮೇಲೆ ಹಲ್ಲೆ ಮಾಡಿ, ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ನಂತರ ಆಕೆಗೆ ಚಪ್ಪಲಿ ಹಾರವನ್ನು ಹಾಕಿ ಮೆರವಣಿಗೆ ಮಾಡಿದ್ದಾರೆ. ಈ ವೇಳೆ ನಮ್ಮ ಪೊಲೀಸರು ಮಹಿಳೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿರುವುದಾಗಿ ಬೆಳಗಾವಿಯಲ್ಲಿ ಎಸ್‌ಪಿ ಡಾ. ಭೀಮಾಶಂಕರ್ ಗುಳೇದ ತಿಳಿಸಿದ್ದಾರೆ.

    ಘಟನೆಯೇನು?
    ಹನಿಟ್ರ್ಯಾಪ್ ಹಾಗೂ ಬ್ಲಾಕ್‌ಮೇಲ್ ಆರೋಪ ಹೊರಿಸಿ ಮಹಿಳೆಯೊಬ್ಬರಿಗೆ ಸ್ಥಳೀಯರೇ ಥಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದರು. ಊರಿನವರು ಹಾಗೂ ಮಹಿಳೆ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಇದೇ ಕಾರಣಕ್ಕೆ ಮೃತ್ಯುಂಜಯ ಸರ್ಕಲ್‌ನಲ್ಲಿ ಮಹಿಳೆ ಮೇಲೆ ಸ್ಥಳೀಯರು ಅಮಾನವೀಯವಾಗಿ ವರ್ತಿಸಿದ್ದಾರೆ. ಇದನ್ನೂ ಓದಿ: ಪಾಕ್ ಕ್ರಿಕೆಟಿಗರಿಗೆ ಜೈ ಶ್ರೀರಾಮ್‌ ಘೋಷಣೆ: ಉದಯನಿಧಿ ಆಕ್ಷೇಪ

    ಇದೀಗ ಮಹಿಳೆಯ ದೂರಿನ ಆಧಾರದ ಮೇರೆಗೆ ಪ್ರಕರಣ ದಾಖಲಿಸಿ 13 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭೀಮಾಶಂಕರ್ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಹೃದಯಾಘಾತದಿಂದ ಅರಭಾವಿಮಠದ ಸ್ವಾಮೀಜಿ ಲಿಂಗೈಕ್ಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೃದಯಾಘಾತದಿಂದ ಅರಭಾವಿಮಠದ ಸ್ವಾಮೀಜಿ ಲಿಂಗೈಕ್ಯ

    ಹೃದಯಾಘಾತದಿಂದ ಅರಭಾವಿಮಠದ ಸ್ವಾಮೀಜಿ ಲಿಂಗೈಕ್ಯ

    ಬೆಳಗಾವಿ: ಅರಭಾವಿ ಮಠದ (Arabhavi Mutt) ದುರದುಂಡೇಶ್ವರ ಮಠದ ಸಿದ್ದಲಿಂಗ ಸ್ವಾಮೀಜಿ (64) (Siddalinga Swamiji) ಹೃದಯಾಘಾತದಿಂದ (Heart Attack) ಲಿಂಗೈಕ್ಯರಾಗಿದ್ದಾರೆ.

    ಮಠದಲ್ಲಿರುವಾಗಲೇ ಸ್ವಾಮೀಜಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಗೋಕಾಕ್‍ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ. ಇದನ್ನೂ ಓದಿ: ದಸರಾ ವಿಶೇಷ – ವಾಯುವ್ಯ ಸಾರಿಗೆಯಿಂದ 500ಕ್ಕೂ ಹೆಚ್ಚು ಬಸ್ ವ್ಯವಸ್ಥೆ

    ಸ್ವಾಮೀಜಿ ನಿಧನದಿಂದ ಅಪಾರ ಭಕ್ತ ಸಮೂಹ ಶೋಕಸಾಗರಲ್ಲಿ ಮುಳುಗಿದೆ. ಮಠಕ್ಕೆ ಕರ್ನಾಟಕ ಮಾತ್ರವಲ್ಲದೇ ಹೊರ ರಾಜ್ಯಗಳಲ್ಲಿಯೂ ಅಪಾರ ಭಕ್ತರಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ವಿವಿಧ ಮಠಾಧೀಶರು ಹಾಗೂ ಗಣ್ಯರು ಮಠಕ್ಕೆ ಆಗಮಿಸಿದ್ದಾರೆ.

    ಇಂದು ನಾಡಿನ ಹಲವು ಮಠಾಧೀಶರ ಸಮ್ಮುಖದಲ್ಲಿ ವಿಧಿ ವಿಧಾನಗಳೊಂದಿಗೆ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಲಾಗಿದೆ. ಇದನ್ನೂ ಓದಿ: ಪಾಕ್ ಕ್ರಿಕೆಟಿಗರಿಗೆ ಜೈ ಶ್ರೀರಾಮ್‌ ಘೋಷಣೆ: ಉದಯನಿಧಿ ಆಕ್ಷೇಪ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದಸರಾ ವಿಶೇಷ – ವಾಯುವ್ಯ ಸಾರಿಗೆಯಿಂದ 500ಕ್ಕೂ ಹೆಚ್ಚು ಬಸ್ ವ್ಯವಸ್ಥೆ

    ದಸರಾ ವಿಶೇಷ – ವಾಯುವ್ಯ ಸಾರಿಗೆಯಿಂದ 500ಕ್ಕೂ ಹೆಚ್ಚು ಬಸ್ ವ್ಯವಸ್ಥೆ

    ಬೆಳಗಾವಿ: ದಸರಾ (Dasara) ಹಬ್ಬಕ್ಕೆ (Festival) ರಾಜ್ಯ ಹಾಗೂ ಹೊರ ರಾಜ್ಯಗಳ ವಿವಿಧ ಸ್ಥಳಗಳಿಂದ ಆಗಮಿಸುವ ಮತ್ತು ಹಬ್ಬ ಮುಗಿಸಿಕೊಂಡು ಹಿಂದಿರುಗುವ ಪ್ರಯಾಣಿಕರ ಅನುಕೂಲಕ್ಕಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ (North West Transport) 500ಕ್ಕೂ ಹೆಚ್ಚು ವಿಶೇಷ ಬಸ್‍ಗಳ ವ್ಯವಸ್ಥೆ ಮಾಡಲಾಗಿದೆ.

    ದಸರಾಕ್ಕೆ ಮಂಗಳೂರು, ಗೋವಾ, ಮಹಾರಾಷ್ಟ್ರದ ಪುಣೆ ಸೇರಿದಂತೆ ರಾಜ್ಯದ ಮತ್ತು ನೆರೆಯ ರಾಜ್ಯಗಳ ವಿವಿಧ ಭಾಗಗಳಿಂದ ಜನ ಹೆಚ್ಚಿನ ಸಂಖ್ಯೆಯಲ್ಲಿ ಬರುವ ನಿರೀಕ್ಷೆ ಇದೆ. ಹಬ್ಬಕ್ಕೆ ಆಗಮಿಸುವ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಅ.20, 21 ಹಾಗೂ 22ರಂದು ಬೆಂಗಳೂರು, ಮಂಗಳೂರು, ಪುಣೆ, ಗೋವಾ ಮುಂತಾದ ಸ್ಥಳಗಳಿಂದ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ, ಹಾವೇರಿ, ಬಾಗಲಕೋಟೆ ಮತ್ತಿತರ ಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ಬಸ್‍ಗಳನ್ನು ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: 69 ರನ್‌ಗಳ ಭರ್ಜರಿ ಜಯ – ಇಂಗ್ಲೆಂಡ್ ಶಾಕ್, ಅಫ್ಘಾನ್ ರಾಕ್

    ಅಲ್ಲದೇ ಸ್ಥಳೀಯ ಬಸ್ ನಿಲ್ದಾಣಗಳಿಂದ ಜಿಲ್ಲೆಯೊಳಗೆ ಹಾಗೂ ನೆರೆಯ ಜಿಲ್ಲೆಗಳಿಗೆ ಪ್ರಯಾಣಿಕರ ದಟ್ಟಣೆಗೆ ತಕ್ಕಂತೆ ಹೆಚ್ಚುವರಿ ಬಸ್‍ಗಳನ್ನು ಬಿಡಲಾಗುತ್ತದೆ. ಇದಕ್ಕಾಗಿ ವೋಲ್ವೊ, ಸ್ಲೀಪರ್, ರಾಜಹಂಸ ಮುಂತಾದ 50 ಐಷಾರಾಮಿ ಬಸ್ಸುಗಳು ಹಾಗೂ 200 ವೇಗದೂತ ಸಾರಿಗೆಗಳು ಸೇರಿದಂತೆ 250ಕ್ಕೂ ಹೆಚ್ಚು ಹೆಚ್ಚುವರಿ ಬಸ್ಸುಗಳನ್ನು ಬಿಡಲು ನಿರ್ಧರಿಸಲಾಗಿದೆ.

    ಅದೇ ರೀತಿ ಹಬ್ಬ ಮುಗಿಸಿಕೊಂಡು ಹಿಂದಿರುವ ಪ್ರಯಾಣಿಕರ ಅನುಕೂಲಕ್ಕಾಗಿ ಅ.24 ಹಾಗೂ 25ರಂದು ಸಂಸ್ಥೆಯ ವ್ಯಾಪ್ತಿಯ ಪ್ರಮುಖ ಬಸ್ ನಿಲ್ದಾಣಗಳಿಂದ ಬೆಂಗಳೂರು, ಮಂಗಳೂರು, ಗೋವಾ, ಮಹಾರಾಷ್ಟ್ರದ ಪುಣೆ ಸೇರಿದಂತೆ ರಾಜ್ಯದ ಮತ್ತು ನೆರೆಯ ರಾಜ್ಯಗಳ ವಿವಿಧ ಜನದಟ್ಟಣೆಗೆ ಅನುಗುಣವಾಗಿ 250ಕ್ಕೂ ಹೆಚ್ಚು ವಿಶೇಷ ಬಸ್ಸುಗಳು ಸಂಚರಿಸಲಿವೆ.

    ಮುಂಗಡ ಬುಕ್ಕಿಂಗ್ ವ್ಯವಸ್ಥೆ ಇದ್ದು ಸಾರ್ವಜನಿಕರು ಉಪಯೋಗಿಸಿಕೊಳ್ಳುವಂತೆ ತಿಳಿಸಲಾಗಿದೆ. ನಾಲ್ಕು ಅಥವಾ ಹೆಚ್ಚು ಆಸನಗಳನ್ನು ಒಂದೇ ಟಿಕೆಟ್‍ನಲ್ಲಿ ಕಾಯ್ದಿರಿಸಿದರೆ ಪ್ರಯಾಣ ದರದಲ್ಲಿ 5% ರಷ್ಟು ರಿಯಾಯಿತಿ ನೀಡಲಾಗುತ್ತದೆ. ಹೋಗುವ ಹಾಗೂ ಬರುವ ಪ್ರಯಾಣಕ್ಕೆ ಒಂದೇ ಟಿಕೆಟ್ ಪಡೆದರೆ ಹಿಂದಿರುಗುವ ಪ್ರಯಾಣ ದರದಲ್ಲಿ 10% ರಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ತಿಳಿಸಿದೆ. ಇದನ್ನೂ ಓದಿ: ಸಿಎಂ, ಡಿಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಬೃಹತ್ ಹೋರಾಟ: ಕಟೀಲ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಹಿಷಾಸುರ ದುರ್ಗುಣಗಳ ಪ್ರತೀಕ; ಮಹಿಷ ದಸರಾ ಸಮಾಜಕ್ಕೆ ಒಳ್ಳೆಯ ಸಂದೇಶ ಸಾರುವುದಿಲ್ಲ: ಪೇಜಾವರ ಶ್ರೀ

    ಮಹಿಷಾಸುರ ದುರ್ಗುಣಗಳ ಪ್ರತೀಕ; ಮಹಿಷ ದಸರಾ ಸಮಾಜಕ್ಕೆ ಒಳ್ಳೆಯ ಸಂದೇಶ ಸಾರುವುದಿಲ್ಲ: ಪೇಜಾವರ ಶ್ರೀ

    ಚಿಕ್ಕೋಡಿ: ಮಹಿಷಾಸುರ (Mahishasur) ದುರ್ಗುಣಗಳ ಪ್ರತೀಕ ಎಂದು ಮಹಿಷ ದಸರಾ ಉತ್ಸವ ಆಚರಣೆ ಕುರಿತು ಉಡುಪಿಯ ಪೇಜಾವರ ಶ್ರೀಗಳು (Pejavara Sri) ಪ್ರತಿಕ್ರಿಯೆ ನೀಡಿದ್ದಾರೆ.

    ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ (Hukkeri) ಪಟ್ಟಣದ ಹುಕ್ಕೇರಿ ಹಿರೇಮಠದ ದಸರಾ ಉತ್ಸವದಲ್ಲಿ ಭಾಗಿಯಾಗಿ ಪೇಜಾವರ ಶ್ರೀಗಳು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದರು. ಮಹಿಷಾಸುರ ಮರ್ದಿನಿ ಎಂದು ಚಾಮುಂಡೇಶ್ವರಿ ಪೂಜೆ ಮಾಡುತ್ತೇವೆ. ದುಷ್ಟ ಅಂತ ಹೇಳಿ ಚಾಮುಂಡೇಶ್ವರಿ ಮಹಿಷಾಸುರನನ್ನು ಮರ್ದನ ಮಾಡಿದ್ದಾಳೆ ಎಂದು ತಿಳಿಸಿದರು.

    ಚಾಮುಂಡೇಶ್ವರಿ ಉತ್ಸವವನ್ನು ಸರ್ಕಾರವೇ ಮಾಡುತ್ತಿದೆ. ಮತ್ತೊಂದು ಕಡೆ ಮಹಿಷಾಸುರನ ಉತ್ಸವ ಮಾಡುವಲ್ಲಿ ಅರ್ಥವಿಲ್ಲ. ದುರ್ಗುಣಗಳ ಉತ್ಸವ ಮಾಡುವುದು ಸಮಾಜಕ್ಕೆ ಒಳ್ಳೆಯ ಸಂದೇಶ ಸಾರುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಭಾರತದಲ್ಲಿ ಇರಬೇಕೆಂದರೆ ಭಾರತ್ ಮಾತಾ ಕಿ ಜೈ ಎನ್ನಬೇಕು: ಕೇಂದ್ರ ಸಚಿವ

    ಪ್ರೋ.ಕೆಎಸ್ ಭಗವಾನ್ ಒಕ್ಕಲಿಗರ ಸಮಾಜದ ಬಗ್ಗೆ ಅವಹೇಳನಕಾರಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದು ಭಗವಾನ್ ಅವರ ವಿಚಾರಕ್ಕೆ ಬಿಟ್ಟಿದ್ದು. ಸಮಾಜದಲ್ಲಿ ಹೆಸರು ಬರಲು ದೊಡ್ಡವರ ಬಗ್ಗೆ ತುಚ್ಛವಾಗಿ ನಿಂದಿಸುವ, ಪ್ರಚಾರ ಪಡೆಯುವ ಹುನ್ನಾರ ಭಗವಾನ್ ಅವರದ್ದಾಗಿದೆ ಎಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಪಬ್ಲಿಕ್ ಟಿವಿಗೆ ಪೇಜಾವರ ಶ್ರೀಗಳು ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಐಸಿಎಸ್‌ಐ ವಾಕಥಾನ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  •  ಹನಿಟ್ರ್ಯಾಪ್ ಆರೋಪ ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ

     ಹನಿಟ್ರ್ಯಾಪ್ ಆರೋಪ ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ

    ಬೆಳಗಾವಿ: ಹನಿಟ್ರ್ಯಾಪ್ (Honey Trap) ಮಾಡುತ್ತಿರುವ ಆರೋಪ ಹೊರಿಸಿ ಮಹಿಳೆಯೊಬ್ಬಳಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಅಮಾನವೀಯ ಘಟನೆ ಗೋಕಾಕ್‌ನ ಘಟಪ್ರಭಾದಲ್ಲಿ ನಡೆದಿದೆ.

    ಮಹಿಳೆ ವಿರುದ್ಧ ಹನಿಟ್ರ‍್ಯಾಪ್ ಹಾಗೂ ಬ್ಲಾಕ್‌ಮೇಲ್ ಆರೋಪವನ್ನು ನಗರದ ಮಹಿಳೆಯರು ಹಾಗೂ ಸ್ಥಳೀಯರು ಮಾಡಿದ್ದಾರೆ. ಇದೇ ಕಾರಣಕ್ಕೆ ನಗರದ ಮೃತ್ಯುಂಜಯ ಸರ್ಕಲ್‌ನಲ್ಲಿ ಮಹಿಳೆ ಮೇಲೆ ಈ ರೀತಿಯಾಗಿ ವರ್ತಿಸಿದ್ದಾರೆ. ಮಹಿಳೆ ಬ್ಲಾಕ್‌ಮೇಲ್ ಮಾಡುತ್ತಿರುವ ವಿಚಾರವಾಗಿ ಈ ಹಿಂದೆ ಸಹ ಗಲಾಟೆಯಾಗಿತ್ತು ಎನ್ನಲಾಗಿದೆ. ಇದನ್ನೂ ಓದಿ: ಪ್ರಿಯಕರನಿಂದ ಕಿರುಕುಳ – ವಿವಾಹಿತೆ ನೇಣುಬಿಗಿದುಕೊಂಡು ಆತ್ಮಹತ್ಯೆ

    ಆಗಾಗ ಊರಿನವರು ಹಾಗೂ ಮಹಿಳೆಯ ನಡುವೆ ಗಲಾಟೆ ನಡೆಯುತ್ತಿತ್ತು. ಮಹಿಳೆ ಹನಿಟ್ರ್ಯಾಪ್ ಮಾಡುತ್ತಿರುವ ಬಗ್ಗೆ ಕೆಲವು ದಿನಗಳ ಹಿಂದೆ ಎಸ್‌ಪಿಗೂ ಮನವಿ ಮಾಡಲಾಗಿತ್ತು. ಆದರೂ ಮಹಿಳೆಯೊಂದಿಗೆ ಗಲಾಟೆ ಮುಂದುವರೆದಿದ್ದು ಸ್ಥಳೀಯರು ಈ ರೀತಿ ನಡೆದುಕೊಂಡಿದ್ದಾರೆ. ಘಟನೆ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನೂ ಓದಿ: 15 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ – ಹಾಸ್ಟೆಲ್ ಅಡುಗೆಯಾತ, ನಿರ್ವಾಹಕ ಅರೆಸ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 5 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದ ಐಟಿ ಅಧಿಕಾರಿ

    5 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದ ಐಟಿ ಅಧಿಕಾರಿ

    ಬೆಳಗಾವಿ: ಚಿನ್ನಾಭರಣದ ಅಂಗಡಿ ಮಾಲೀಕನಿಂದ 5 ಲಕ್ಷ ರೂ. ಹಣ ಪಡೆಯುತ್ತಿದ್ದ ವೇಳೆ ಐಟಿ ಅಧಿಕಾರಿಯೊಬ್ಬನನ್ನು (IT Officer) ರೆಡ್‍ಹ್ಯಾಂಡ್ ಆಗಿ ಪೊಲೀಸರು (Police) ವಶಕ್ಕೆ ಪಡೆದಿರುವ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ.

    ಐಟಿ ಅಧಿಕಾರಿ ಅವಿನಾಶ್ ಟೊನಪೆ ಎಂಬಾತ ಚಿಕ್ಕೋಡಿಯ (Chikkodi) ಅಂಕಲಿಯ ಪರಶುರಾಮ್ ಬಂಕಾಪುರ ಎಂಬವರ ಬಳಿ 10 ಲಕ್ಷ ರೂ. ನೀಡುವಂತೆ ಬೇಡಿಕೆ ಇಟ್ಟಿದ್ದ. ಈ ಬಗ್ಗೆ ಪರಶುರಾಮ್ ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದರಂತೆ ಯೋಜನೆ ರೂಪಿಸಿದ್ದ ಪೊಲೀಸರು, ಖಾಸಗಿ ಡೆಂಟಲ್ ಕಾಲೇಜ್ ಮೈದಾನದಲ್ಲಿ ಅಧಿಕಾರಿ ಹಣ ಪಡೆಯುತ್ತಿದ್ದ ವೇಳೆ ಸಿನಿಮೀಯ ರೀತಿ ದಾಳಿ ಮಾಡಿ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಅಜ್ಞಾತ ಸ್ಥಳಕ್ಕೆ ಎಳೆದೊಯ್ದು ಯುವತಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದ ಆರೋಪಿ ಬಂಧನ

    ಬೆಳಗಾವಿ ಮಾರ್ಕೆಟ್ ವಿಭಾಗದ ಎಸಿಪಿ ನಾರಾಯಣ ಭರಮನಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಪೊಲೀಸರು ಅಧಿಕಾರಿಯನ್ನು ಬೆಳಗಾವಿಯ ಎಸಿಪಿ ಕಚೇರಿಗೆ ಕರೆದೊಯ್ದಿದ್ದಾರೆ.

    ನಾಲ್ಕು ದಿನಗಳ ಹಿಂದೆಯಷ್ಟೇ ಐಟಿ ಅಧಿಕಾರಿ ಅವಿನಾಶ್ ಟೋನಪಿ ನೇತೃತ್ವದ ತಂಡ ಅಂಕಲಿ ಗ್ರಾಮದಲ್ಲಿರುವ ಬಂಕಾಪುರ ಚಿನ್ನದಂಗಡಿ ಮೇಲೆ ದಾಳಿ ಮಾಡಿತ್ತು. ಪೊಲೀಸರು ಅಧಿಕಾರಿಯನ್ನು ವಶಕ್ಕೆ ಪಡೆದಿರುವ ವೀಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಹಾಡಹಗಲೇ ಗ್ರಾಮ ಪಂಚಾಯತ್ ಅಧ್ಯಕ್ಷನ ಬರ್ಬರ ಕೊಲೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಿನ್ನ ಬಳಿ ಸಾಲ ತಗೊಳಲ್ಲ- ಮಹಿಳೆಗೆ ಚಾಕು ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ!

    ನಿನ್ನ ಬಳಿ ಸಾಲ ತಗೊಳಲ್ಲ- ಮಹಿಳೆಗೆ ಚಾಕು ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ!

    ಬೆಳಗಾವಿ: ನಿನ್ನ ಬಳಿ ನಾನು ಸಾಲ (Money) ತಗೊಳಲ್ಲ ಎಂದು ಮಹಿಳೆಗೆ ಚಾಕು ಇರಿದ ಭೂಪನೊಬ್ಬ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೊಂದು ಬೆಳಗಾವಿ (Belagavi) ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲೆಯ ಗೋಕಾಕ ತಾಲೂಕಿನ ಘಟಪ್ರಭಾದಲ್ಲಿ ಕಳೆದ ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಯನಾ ಪ್ರವೀಣ ಶೆಟ್ಟಿ(34) ಚಾಕು ಇರಿತಕ್ಕೊಳಗಾದ ಮಹಿಳೆಯಾಗಿದ್ದು, ಮಲ್ಲಿಕಾರ್ಜುನ ಕುಂಬಾರ ಚಾಕು ಇರಿದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ.

    ನಡೆದಿದ್ದೇನು..?: ಆರೋಪಿ ಮಲ್ಲಿಕಾರ್ಜುನ್ ಕಳೆದ ಒಂದು ವರ್ಷದ ಹಿಂದೆ ನಯನಾ ಪತಿಗೆ 1 ಲಕ್ಷ ಸಾಲ ನೀಡಿದ್ದ. ಸಾಲ ಪಡೆದ ಹಣವನ್ನು ನಯನಾ ಪತಿ ಪ್ರವೀಣ್ ಮತ್ತೆ ಮರಳಿ ಕೊಟ್ಟಿದ್ದರು. ಆಗ ಮಲ್ಲಿಕಾರ್ಜುನ್, ಮತ್ತೆ ಏನಾದರೂ ಸಾಲ ಬೇಕಾದರೆ ತೆಗೆದುಕೊಳ್ಳಿ ಎಂದಿದ್ದ. ಈ ವೇಳೆ ನಯನಾ, ನೀವು ಕೊಟ್ಟ ಹಣಕ್ಕೆ ಜಾಸ್ತಿ ಬಡ್ಡಿ ತೆಗೆದುಕೊಳ್ತಿರಿ ನಮಗೆ ಸಾಲ ಬೇಡ ಎಂದಿದ್ದರು. ಇದೇ ಕಾರಣಕ್ಕೆ ನಯನಾ ಮೇಲೆ ಆರೋಪಿ ಮಲ್ಲಿಕಾರ್ಜುನ್ ಸಿಟ್ಟಾಗಿದ್ದನು. ಇದನ್ನೂ ಓದಿ:

    ಕಳೆದ 2 ದಿನಗಳ ಹಿಂದೆ ನಯನಾ ಮೇಲೆ ಮಲ್ಲಿಕಾರ್ಜುನ್ ಮಾರಣಾಂತಿಕ ಹಲ್ಲೆ ನಡೆಸಿದ್ದನು. ನಂತರ ಮನೆಗೆ ಬಂದು ವಿಷ ಸೇವಿಸಿದ್ದನು. ಕೂಡಲೇ ಕುಟುಂಬಸ್ಥರು ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಘಟನೆ ಸಂಬಂಧ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಳಗಾವಿಯಲ್ಲಿ ಮತ್ತೋರ್ವ ಗುತ್ತಿಗೆದಾರ ಆತ್ಮಹತ್ಯೆಗೆ ಯತ್ನ

    ಬೆಳಗಾವಿಯಲ್ಲಿ ಮತ್ತೋರ್ವ ಗುತ್ತಿಗೆದಾರ ಆತ್ಮಹತ್ಯೆಗೆ ಯತ್ನ

    ಬೆಳಗಾವಿ: ಬಾಕಿ ಬಿಲ್ ಕೊಡಲು ಅಧಿಕಾರಿಗಳ ಹಿಂದೇಟು ಹಿನ್ನೆಲೆ ಬೆಳಗಾವಿ ಲೋಕೋಪಯೋಗಿ ಇಲಾಖೆ (PWD) ಕಚೇರಿ‌ ಮುಂಭಾಗದಲ್ಲಿ ಗುತ್ತಿಗೆದಾರರೊಬ್ಬರು (Contractor) ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

    ನಗರದ ಕೋಟೆ ಆವರಣದಲ್ಲಿರುವ ಲೋಕೋಪಯೋಗಿ ಇಲಾಖೆಯಲ್ಲಿ ಆಗಮಿಸಿದ ಬೈಲಹೊಂಗಲ ತಾಲೂಕಿನ ನಾಗಪ್ಪ ಬಂಗಿ ಆತ್ಮಹತ್ಯೆಗೆ (Suicide Attempt) ಯತ್ನಿಸಿದ್ದಾರೆ.

    ಬೆಳಗಾವಿ ಎಕ್ಸ್‌ಕ್ಯೂಟಿವ್‌ ಎಂಜಿನಿಯರ್‌ ಎಸ್ ಎಸ್. ಸೊಬರದ ಮುಂದೆಯೇ ಗುತ್ತಿಗೆದಾರ ನಾಗಪ್ಪ ಆತ್ಮಹತ್ಯೆಗೆ ಯತ್ನಿಸಿದರು. ಈ ಕೂಡಲೇ ನಾಗಪ್ಪ ಬಂಗಿ ಅವರನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ನಾಗಪ್ಪ ಬಂಗಿ ಪ್ರಾಣಾಪಾಯದಿಂದ ಪಾರಾಗಿದ್ದು ಚಿಕಿತ್ಸೆ ಮುಂದುವರೆದಿದೆ.  ಇದನ್ನೂ ಓದಿ: ಡಿಕೆಶಿ ಕಾಲಿಗೆ ಬಿದ್ದ ಶಾಸಕ ಮುನಿರತ್ನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಳಗಾವಿ ಹಿಂಡಲಗಾ ಜೈಲಿಗೆ ಬಾಂಬ್ ಬೆದರಿಕೆ ಕರೆ!

    ಬೆಳಗಾವಿ ಹಿಂಡಲಗಾ ಜೈಲಿಗೆ ಬಾಂಬ್ ಬೆದರಿಕೆ ಕರೆ!

    ಬೆಳಗಾವಿ: ಬಂದಿಖಾನೆ ಇಲಾಖೆಯ ಉತ್ತರ ವಲಯ ಡಿಐಜಿಪಿ ಟಿಪಿ ಶೇಷ ಅವರಿಗೆ ಅನಾಮಧೇಯ ಬೆದರಿಕೆ ಕರೆ ಬಂದಿದ್ದು ಜೈಲು ಅಧಿಕಾರಿಗಳಲ್ಲಿ ಆತಂಕ ಶುರುವಾಗಿದೆ.

    ಬೆಂಗಳೂರು ಕಾರಾಗೃಹ, ಬೆಳಗಾವಿ (Belagavi) ಹಿಂಡಲಗಾ ಕೇಂದ್ರ ಕಾರಾಗೃಹ (Hindalaga Jail) ಸ್ಫೋಟಿಸಲಾಗುವುದು. ಅಲ್ಲದೇ ತಾವು ವಾಸಿಸುವ ವಸತಿ ಗೃಹದ ಮೇಲೆ ಬಾಂಬ್ (Bomb) ಸ್ಫೋಟಿಸುವುದಾಗಿ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಕರೆ (Threat Call) ಬಂದಿದೆ.

    ಹಿಂಡಲಗಾ ಜೈಲಿನ ಸಿಬ್ಬಂದಿಯ ಪರಿಚಯಸ್ಥನೆಂದು ಹೇಳಿ ಬೆದರಿಕೆ ಕರೆ ಮಾಡಿ, ಜೈಲಿನಲ್ಲಿ ಗಲಭೆ ಸೃಷ್ಟಿಸಿ ಹಲ್ಲೆ ಮಾಡಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಹಿಂಡಲಗಾ ಜೈಲಿನ ಹೆಡ್ ವಾಡರ್‌ಗಳಾದ ಜಗದೀಶ್ ಗಸ್ತಿ, ಎಸ್‌ಎಂ ಗೋಟೆ ಪರಿಚಯಸ್ಥನೆಂದು ಹೇಳಿದ್ದಾನೆ. ಅಲ್ಲದೇ ಫೋನ್ ಕರೆಯಲ್ಲಿ ಭೂಗತ ಪಾತಕಿ ಬನ್ನಂಜೆ ರಾಜಾ ಹೆಸರೂ ಉಲ್ಲೇಖ ಮಾಡಿ ತಾನು ಜೈಲಿನಲ್ಲಿದ್ದಾಗ ಬನ್ನಂಜೆ ರಾಜಾಗೆ ಸಹಾಯ ಮಾಡಿದ್ದೇನೆ ಎಂದು ಹೇಳಿದ್ದಾನೆ. ಇದನ್ನೂ ಓದಿ: ಯಾವುದಕ್ಕೂ ಡಿಸ್ಟರ್ಬ್ ಆಗಲ್ಲ, ಮ್ಯಾನಿಪುಲೇಟ್ ಮಾಡಲ್ಲ- ಪಬ್ಲಿಕ್ ಟಿವಿಗೆ ಸಿಎಂ EXCLUSIVE ಸಂದರ್ಶನ

    ಈ ಅನಾಮಧೇಯ ವ್ಯಕ್ತಿಯಿಂದ ಕಾರಾಗೃಹ ಆಡಳಿತಕ್ಕೆ ಧಕ್ಕೆ ಆಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅನಾಮಧೇಯ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ಬಂಧಿಖಾನೆ ಇಲಾಖೆಯ ಡಿಐಜಿಪಿ ಟಿಪಿ ಶೇಷ ಪ್ರಕರಣ ದಾಖಲಿಸಿದ್ದಾರೆ. ಇದೀಗ ಬಾಂಬ್ ಬೆದರಿಕೆ ಕರೆ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಕೆಆರ್‌ಎಸ್‌ ಡ್ಯಾಂನಿಂದ ತಮಿಳುನಾಡಿಗೆ ಮುಂದುವರಿದ ನೀರು ಬಿಡುಗಡೆ; ಈಗ ನೀರು ಎಷ್ಟಿದೆ?