Tag: belagavi

  • ಮಹಾರಾಷ್ಟ್ರದಲ್ಲಿ ಮಳೆಯಾರ್ಭಟ – ಕೃಷ್ಣಾ ನದಿಗೆ ಹೆಚ್ಚಿದ ಒಳಹರಿವು, 8 ಸೇತುವೆಗಳು ಜಲಾವೃತ

    ಮಹಾರಾಷ್ಟ್ರದಲ್ಲಿ ಮಳೆಯಾರ್ಭಟ – ಕೃಷ್ಣಾ ನದಿಗೆ ಹೆಚ್ಚಿದ ಒಳಹರಿವು, 8 ಸೇತುವೆಗಳು ಜಲಾವೃತ

    -16 ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಸಂಚಾರ ಸ್ಥಗಿತ

    ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ (Maharashtra) ಧಾರಾಕಾರ ಮಳೆಯಾಗುತ್ತಿರುವ (Heavy Rain) ಹಿನ್ನೆಲೆ ಕೃಷ್ಣಾ, ದೂದಗಂಗಾ ನದಿಗಳಿಗೆ ಒಳಹರಿವು ಹೆಚ್ಚಾಗಿದ್ದು, 8 ಸೇತುವೆಗಳು ಜಲಾವೃತಗೊಂಡಿವೆ.

    ಮಹಾರಾಷ್ಟ್ರದ ಜಲಾಶಯಗಳಿಂದ ಕೃಷ್ಣಾ, ದೂದಗಂಗಾ ನದಿಗಳಿಗೆ ನೀರು ಬಿಡುಗಡೆ ಮಾಡಲಾಗಿದ್ದು, ಎರಡು ನದಿಗಳು ಮೈದುಂಬಿ ಹರಿಯುತ್ತಿವೆ. ಕೃಷ್ಣಾ ನದಿ ನೀರಿನ ಮಟ್ಟದಲ್ಲಿ 30,000 ಕ್ಯೂಸೆಕ್ ಏರಿಕೆಯಾಗಿದ್ದು, ದೂದಗಂಗಾ ನದಿ ನೀರಿನಲ್ಲೂ ಗಣನೀಯ ಹೆಚ್ಚಳವಾಗಿದೆ. ಪರಿಣಾಮ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ 8 ಸೇತುವೆಗಳು 4ನೇ ಬಾರಿಗೆ ಜಲಾವೃತವಾಗಿವೆ.ಇದನ್ನೂ ಓದಿ: ಎತ್ತಿನ‌ಹೊಳೆ ಯೋಜನೆಗೆ ಹೆಚ್ಚುವರಿ 3,000 ಕೋಟಿ ಅನುದಾನ ಕೊಡಲಾಗಿದೆ, ಸಿಎಂಗೆ ರೈತರ ಬಗ್ಗೆ ಕಾಳಜಿ ಇದೆ: ಬೈರತಿ ಸುರೇಶ್

    ಕೃಷ್ಣಾ ನದಿಗೆ ಅಡ್ಡಲಾಗಿರುವ ಯಡೂರು-ಕಲ್ಲೋಳ, ಭಾವನಸೌಂದತ್ತಿ-ಮಾಂಜರಿ, ದೂದಗಂಗಾ ನದಿಯ ಮಲ್ಲಿಕವಾಡ-ದತ್ತವಾಡ, ಕಾರದಗಾ-ಭೋಜ, ಭೋಜವಾಡಿ-ಕಾರದಗಾ, ಎಕ್ಸಂಬಾ-ದತ್ತವಾಡ, ಭಾರವಾಡ-ಕುನ್ನೂರು, ಬೋಜವಾಡಿ-ಕುನ್ನೂರು ಸೇರಿ ಒಟ್ಟು 16 ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆಗಳು ಜಲಾವೃತಗೊಂಡಿವೆ. ಜನರು ಪರ್ಯಾಯ ಮಾರ್ಗಗಳ ಮೂಲಕ ಸಂಚಾರ ಮಾಡುತ್ತಿದ್ದು, ನದಿ ತೀರಕ್ಕೆ ತೆರಳದಂತೆ ಬೆಳಗಾವಿ ಜಿಲ್ಲಾಡಳಿತ ಸೂಚನೆ ನೀಡಿ ಬ್ಯಾರಿಕೇಡ್ ಅಳವಡಿಸಿದೆ.

    ಸದ್ಯ ಮಹಾರಾಷ್ಟ್ರ ಮಳೆಯಿಂದಾಗಿ ಅಲ್ಲಿನ ಜಲಾಶಯಗಳು ಭರ್ತಿಯಾಗುತ್ತಿದ್ದು, ಪರಿಣಾಮ ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ಒಂದು ವೇಳೆ ಮಳೆ ಹೀಗೆ ಮುಂದುವರೆದರೆ ಚಿಕ್ಕೋಡಿ (Chikkodi) ಉಪವಿಭಾಗದಲ್ಲಿ ಪ್ರವಾಹ ಎದುರಾಗುವ ಸಾಧ್ಯತೆಗಳಿವೆ.ಇದನ್ನೂ ಓದಿ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಸವಾರರ ದಾರುಣ ಸಾವು

  • ರಾಧಾನಗರಿ ಜಲಾಶಯದಿಂದ 4 ಗೇಟ್‌ಗಳ ಮೂಲಕ ನೀರು ಬಿಡುಗಡೆ – ದೂದ್‌ಗಂಗಾ ನದಿ ತೀರದಲ್ಲಿ ಹೈಅಲರ್ಟ್

    ರಾಧಾನಗರಿ ಜಲಾಶಯದಿಂದ 4 ಗೇಟ್‌ಗಳ ಮೂಲಕ ನೀರು ಬಿಡುಗಡೆ – ದೂದ್‌ಗಂಗಾ ನದಿ ತೀರದಲ್ಲಿ ಹೈಅಲರ್ಟ್

    ಚಿಕ್ಕೋಡಿ: ಮಹಾರಾಷ್ಟ್ರದ (Maharashtra) ಪಶ್ಚಿಮ ಘಟ್ಟ ಪ್ರದೇಶದಗಳಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮಹಾರಾಷ್ಟ್ರದ ಜಲಾಶಯಗಳು ಭರ್ತಿ ಹಂತ ತಲುಪಿವೆ. ರಾಧಾನಗರಿ ಜಲಾಶಯದಿಂದ 4 ಗೇಟ್‌ಗಳ ಮೂಲಕ ನೀರು ಬಿಡುಗಡೆ ಮಾಡಲಾಗಿದೆ.

    ಕೊಲ್ಲಾಪುರ ಜಿಲ್ಲೆಯ ರಾಧಾನಗರಿ ಜಲಾಶಯ (Radhanagari Dam) ಸಂಪೂರ್ಣ ಭರ್ತಿ ಹಿನ್ನಲೆಯಲ್ಲಿ ದೂದ್‌ಗಂಗಾ ನದಿ (Doodh Ganga River) ಮೂಲಕ ಕೃಷ್ಣಾ ನದಿಗೆ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. 8.5 ಟಿಎಂಸಿ ಸಾಮರ್ಥ್ಯದ ರಾಧಾನಗರಿ ಜಲಾಶಯದಿಂದ 4 ಗೇಟ್‌ಗಳ ಮೂಲಕ 10 ಸಾವಿರ ಕ್ಯೂಸೆಕ್ ನೀರು ದೂದ್‌ಗಂಗಾ ನದಿಗೆ ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: ಇನ್ಸ್ಟಾದಲ್ಲಿ ಬೆಂಗಳೂರಿಗರ ಬಗ್ಗೆ ನಾಲಗೆ ಹರಿಬಿಟ್ಟ ಒಡಿಶಾ ಯುವತಿ

    ಹೆಚ್ಚಿನ ನೀರು ಬಿಡುಗಡೆ ಹಿನ್ನೆಲೆಯಲ್ಲಿ ಬೆಳಗಾವಿ (Belagavi) ಜಿಲ್ಲೆಯ ನಿಪ್ಪಾಣಿ ಹಾಗೂ ಚಿಕ್ಕೋಡಿ ತಾಲೂಕಿನ ದೂದ್‌ಗಂಗಾ ನದಿ ತೀರದ ಜನರು ನದಿ ಪಾತ್ರಕ್ಕೆ ಇಳಿಯದಂತೆ ತಾಲೂಕಾಡಳಿತದಿಂದ ಸೂಚನೆ ನೀಡಲಾಗಿದೆ. ಇನ್ನೂ ಕೃಷ್ಣಾ ನದಿಗೆ ಚಿಕ್ಕೋಡಿ ತಾಲೂಕಿನ ಕಲ್ಲೋಳ ಬ್ಯಾರೇಜ್ ಬಳಿ 58 ಸಾವಿರ ಕ್ಯೂಸೆಕ್ ನೀರು ಒಳ ಹರಿವು ದಾಖಲಾಗಿದೆ.

  • DCC Bank Election|  ಲಿಂಗಾಯತ ನಾಯಕರ ಸಭೆಗೆ ಜಾರಕಿಹೊಳಿ ಬ್ರದರ್ಸ್‌ ಚೆಕ್‌ಮೇಟ್!

    DCC Bank Election| ಲಿಂಗಾಯತ ನಾಯಕರ ಸಭೆಗೆ ಜಾರಕಿಹೊಳಿ ಬ್ರದರ್ಸ್‌ ಚೆಕ್‌ಮೇಟ್!

    ಚಿಕ್ಕೋಡಿ: ಡಿಸಿಸಿ ಬ್ಯಾಂಕ್ ಚುನಾವಣೆ (Belagavi DCC Bank) ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಜಾರಕಿಹೊಳಿ ಸಹೋದರರನ್ನು ಬದಿಗಿಟ್ಟು ಡಿಸಿಸಿ ಬ್ಯಾಂಕ್ ಹತೋಟಿಗೆ ಪಡೆಯುವ ಬೆಳಗಾವಿ ಜಿಲ್ಲೆಯ ಪಕ್ಷಾತೀತ ಲಿಂಗಾಯತ ನಾಯಕರ ಪ್ಲಾನ್ ಫ್ಲಾಪ್ ಮಾಡುವಲ್ಲಿ ಜಾರಕಿಹೊಳಿ ಸಹೋದರರು (Jarkiholi Brothers) ಯಶಸ್ವಿಯಾಗಿದ್ದಾರೆ.

    ಲಿಂಗಾಯತ ನಾಯಕರ ಸಭೆಗೆ (Lingayat Leaders Meeting) ಜಾರಕಿಹೊಳಿ ಬ್ರದರ್ಸ್‌ ಚೆಕ್ ಮೇಟ್ ನೀಡಿದ್ದು ಕೊಲ್ಲಾಪೂರ ಮಠವೊಂದರಲ್ಲಿ ನಡೆದ ಬೆಳಗಾವಿ ಲಿಂಗಾಯತ ನಾಯಕರ ಸಭೆ ಬಹುತೇಕ ವಿಫಲವಾದಂತಾಗಿದೆ. ಲಿಂಗಾಯತ ನಾಯಕರ ಸಭೆ ಬೆನ್ನಲ್ಲೇ ಲಿಂಗಾಯತ ಮುಖಂಡ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಜೊತೆ ಜಾರಕಿಹೊಳಿ‌ ಸಹೋದರರು ಸಂಧಾನ ಮಾಡಿಕೊಂಡಿದ್ದಾರೆ.  ಇದನ್ನೂ ಓದಿ: ರಾಹುಲ್ ಗಾಂಧಿ ಆರೋಪ ನಿಜ, ಬೆಂ.ಗ್ರಾಮಾಂತರ ಕ್ಷೇತ್ರದ ಮತದಾನದಲ್ಲೂ ಗೋಲ್ಮಾಲ್ ನಡೆದಿದೆ ಡಿಕೆಶಿ

    ಚಿಕ್ಕೋಡಿ ತಾಲೂಕಿನ ಎಕ್ಸಂಬಾ ಪಟ್ಟಣದಲ್ಲಿರುವ ಅಣ್ಣಾಸಾಹೇಬ ಜೊಲ್ಲೆ (Annasaheb Jolle) ಮಾಲೀಕತ್ವದ ಬ್ಯಾಂಕಿನಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕರ ಜೊತೆಗೆ ಬಾಲಚಂದ್ರ ಜಾರಕಿಹೊಳಿ‌ ಸಭೆ ನಡೆಸಿದ್ದಾರೆ. ಸಚಿವ ಸತೀಶ ಜಾರಕಿಹೊಳಿ, ಶಾಸಕ ರಮೇಶ ಜಾರಕಿಹೊಳಿ, ಲಕ್ಷ್ಮಣ ಸವದಿ, ಪ್ರಭಾಕರ ಕೋರೆ, ಬಾಲಚಂದ್ರ ಜಾರಕಿಹೊಳಿ‌, ಅಣ್ಣಾಸಾಹೇಬ ಜೊಲ್ಲೆ ನೇತೃತ್ವದಲ್ಲಿ ಚುನಾವಣೆ ನಡೆಸಲು ಸಭೆಯಲ್ಲಿ ತೀರ್ಮಾನಿಸಿರುವ ಕುರಿತು ಮಾಹಿತಿ ಲಭ್ಯವಾಗಿದೆ.  ಇದನ್ನೂ ಓದಿ: ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ

    ಎಲ್ಲ ಮುಖಂಡರ ಸೇರಿ ಸಮಿತಿ ಮಾಡಿ ಚುನಾವಣೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದ್ದು ಕತ್ತಿ ಕುಟುಂಬ ಹೊರಗಿಟ್ಟು ಸಮಿತಿ ರಚನೆ ಮಾಡಲು ತಯಾರಿ ನಡೆಸಲಾಗುತ್ತಿದೆ.

  • Belagavi | ಕೃಷಿ ಹೊಂಡದಲ್ಲಿ ಮುಳುಗಿ ತಂದೆ-ಮಗ ಸಾವು

    Belagavi | ಕೃಷಿ ಹೊಂಡದಲ್ಲಿ ಮುಳುಗಿ ತಂದೆ-ಮಗ ಸಾವು

    ಬೆಳಗಾವಿ: ಕೃಷಿ ಹೊಂಡದಲ್ಲಿ (Agricultural Pit) ಮುಳುಗಿ ತಂದೆ-ಮಗ ಸಾವನ್ನಪ್ಪಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಸವದತ್ತಿ (Savadatti) ತಾಲೂಕಿನ ಮಳಗಲಿ ಗ್ರಾಮದಲ್ಲಿ ನಡೆದಿದೆ.

    ತಂದೆ ಬಸವರಾಜ್ ಕೆಂಗೇರಿ (40), ಮಗ ಧರೆಪ್ಪ ಕೆಂಗೇರಿ (14) ಮೃತ ದುರ್ದೈವಿಗಳು. ಬಸವರಾಜ್ ಕೆಂಗೇರಿ ಸವದತ್ತಿ ತಾಲೂಕಿನ ಮುರಗೋಡ ಗ್ರಾಮದ ನಿವಾಸಿಯಾಗಿದ್ದು, ಹೆಂಡತಿ ಊರಲ್ಲಿರುವ ಜಮೀನಿಗೆ ಕೀಟನಾಶಕ ಹೊಡೆಯಲು ಹೋಗಿದ್ದ. ಈ ವೇಳೆ ಕೃಷಿ ಹೊಂಡದಲ್ಲಿ ನೀರು ತರಲು ಹೋಗಿ ಕಾಲು ಜಾರಿ ಬಿದ್ದ ಮಗ ಧರೆಪ್ಪ ಮತ್ತೋರ್ವ ಬಾಲಕ ಬಾಗಪ್ಪ ಸಣ್ಣಕ್ಕಿಯನ್ನು ರಕ್ಷಣೆ ಮಾಡಲು ಬಸವರಾಜ್ ಧಾವಿಸಿದ್ದ. ಈ ವೇಳೆ ಕೃಷಿ ಹೊಂಡದಲ್ಲಿ ಮುಳುಗಿ ಬಸವರಾಜ್ ಮತ್ತು ಧರೆಪ್ಪ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ ಭಾರೀ ಮಳೆ – 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

    ಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವರು ಬಾಗಪ್ಪನ ರಕ್ಷಣೆ ಮಾಡಿದ್ದಾರೆ. ಸದ್ಯ ಗಂಭೀರ ಸ್ಥಿತಿಯಲ್ಲಿರುವ ಬಾಲಕ ಬಾಗಪ್ಪಗೆ ಬೈಲಹೊಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಮುರಗೋಡ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: WTC Final | 2031ರ ವರೆಗೆ ಇಂಗ್ಲೆಂಡ್‌ನಲ್ಲೇ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯ

  • ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆ – ಜಾರಕಿಹೊಳಿ ಬ್ರದರ್ಸ್‌ ಸೋಲಿಸಲು ಪಕ್ಷಾತೀತವಾಗಿ ಒಂದಾದ ಲಿಂಗಾಯತ ನಾಯಕರು

    ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆ – ಜಾರಕಿಹೊಳಿ ಬ್ರದರ್ಸ್‌ ಸೋಲಿಸಲು ಪಕ್ಷಾತೀತವಾಗಿ ಒಂದಾದ ಲಿಂಗಾಯತ ನಾಯಕರು

    ಬೆಳಗಾವಿ: ಪ್ರತಿಷ್ಠಿತ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (DCC Bank) ಚುನಾವಣೆಯಲ್ಲಿ ಜಾರಕಿಹೊಳಿ ಸಹೋದರರ (Jarkiholi Brothers) ವಿರುದ್ಧದ ಹೋರಾಟಕ್ಕೆ ಲಿಂಗಾಯತ (Lingayat) ನಾಯಕರು ಸಜ್ಜಾಗಿದ್ದಾರೆ.

    ಹೌದು. ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಒಗ್ಗಟ್ಟು ಪ್ರದರ್ಶಿಸಲು ಲಿಂಗಾಯತ ನಾಯಕರು ನಿರ್ಧರಿಸಿದ್ದಾರೆ. ಮಹಾರಾಷ್ಟ್ರದ (Maharashtra) ಪ್ರಮುಖ ಮಠವೊಂದರಲ್ಲಿ ಲಿಂಗಾಯತ ನಾಯಕರು ರಹಸ್ಯ ಸಭೆ ನಡೆಸಿದ್ದಾರೆ. ಪಕ್ಷಾತೀತವಾಗಿ ಈ ಸಭೆಗೆ ಹಾಜರಾಗಿ ಡಿಸಿಸಿ ಬ್ಯಾಂಕ್‌ನಲ್ಲಿ ಹಿಡಿತ ಸಾಧಿಸಲು ಒಗ್ಗಟ್ಟಿನ ಹೋರಾಟದ ಬಗ್ಗೆ ಚರ್ಚೆ ನಡೆಸಿದ್ದಾರೆ.

    ಜಾರಕಿಹೊಳಿ ಬಣದಲ್ಲಿ ಗುರುತಿಸಿಕೊಂಡಿದ್ದ ನಾಯಕರು ಈ ಸಭೆಯಲ್ಲಿ ಭಾಗಿಯಾಗಿರುವುದು ಕುತೂಹಲ ಮೂಡಿಸಿದೆ. ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಜೊಲ್ಲೆ ದಂಪತಿ, ರಮೇಶ್ ಕತ್ತಿ, ಅಶೋಕ ಪಟ್ಟಣ್, ನಿಖಿಲ್ ಕತ್ತಿ, ಮಹಾದೇವಪ್ಪ ಯಾದವಾಡ, ರಾಜು ಕಾಗೆ, ಚನ್ನರಾಜ್ ಹಟ್ಟಿಹೊಳಿ ಸೇರಿ ಬಹುತೇಕ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಸಭೆಯ ಬಗ್ಗೆ ಯಾವುದೇ ಮಾಹಿತಿ ಬಹಿರಂಗ ಆಗದಂತೆ ನಾಯಕರು ಎಚ್ಚರಿಕೆ ವಹಿಸಿದ್ದಾರೆ.

     

    ಲಿಂಗಾಯತ ನಾಯಕರು ರಹಸ್ಯ ಸಭೆ ನಡೆಸಿದ ಬೆನ್ನಲ್ಲೇ ಡಿಸಿಸಿ ಬ್ಯಾಂಕ್ ಚುನಾವಣೆ ಅಖಾಡಕ್ಕೆ ಜಾರಕಿಹೊಳಿ ಬ್ರದರ್ಸ್ ಎಂಟ್ರಿಯಾಗಿದ್ದಾರೆ. ತಮ್ಮ ಬೆಂಬಲಿತರ ಪರ ಬಾಲಚಂದ್ರ ಜಾರಕಿಹೊಳಿ, ಸತೀಶ್‌ ಜಾರಕಿಹೊಳಿ ಪ್ರಚಾರ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕೊಪ್ಪಳ | ಮಾಜಿ ಶಾಸಕ ದಡೇಸೂಗುರು ಕಾರಿಗೆ ಕಲ್ಲೆಸೆದ ಕಿಡಿಗೇಡಿಗಳು

    ಲಿಂಗಾಯತ ನಾಯಕರ ಸಭೆ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಹುಕ್ಕೇರಿ ತಾಲೂಕಿನಲ್ಲಿರುವ ಪ್ರತಿಷ್ಠಿತ ನಿಡಸೋಸಿ ಲಿಂಗಾಯತ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ. ಲಿಂಗಾಯತ ಕಾರ್ಡ್ ಪ್ಲೇ ಮಾಡುವ ಮೂಲಕ ಸಚಿವ ಜಾರಕಿಹೊಳಿ ಎದುರಾಳಿಗಳಿಗೆ ತಿರುಗೇಟು ನೀಡಿದ್ದಾರೆ.

  • ಬೆಳಗಾವಿ | 30 ವರ್ಷದ ಹಿಂದೆ ಗುತ್ತಿಗೆದಾರನಿಗೆ ಸಿಗಬೇಕಿದ್ದ ಬಿಲ್ ಬಾಕಿ ಉಳಿಸಿಕೊಂಡಿದ್ದಕ್ಕೆ ಡಿಸಿ ಕಾರು ಜಪ್ತಿ

    ಬೆಳಗಾವಿ | 30 ವರ್ಷದ ಹಿಂದೆ ಗುತ್ತಿಗೆದಾರನಿಗೆ ಸಿಗಬೇಕಿದ್ದ ಬಿಲ್ ಬಾಕಿ ಉಳಿಸಿಕೊಂಡಿದ್ದಕ್ಕೆ ಡಿಸಿ ಕಾರು ಜಪ್ತಿ

    ಬೆಳಗಾವಿ: 30 ವರ್ಷಗಳ ಹಿಂದೆ ಗುತ್ತಿಗೆದಾರನಿಗೆ ನೀಡಬೇಕಿದ್ದ ಬಿಲ್ ಬಾಕಿ ಉಳಿಸಿಕೊಂಡಿದ್ದಕ್ಕೆ ಬೆಳಗಾವಿಯ ಜಿಲ್ಲಾಧಿಕಾರಿ (Belagavi DC) ಮೊಹಮ್ಮದ್ ರೋಷನ್ ಅವರು ಓಡಾಡ್ತಿದ್ದ ಕಾರು ಜಪ್ತಿ ಮಾಡಲಾಗಿದೆ.

    ದೂದಗಂಗಾ ನದಿಗೆ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸಲು ಸಣ್ಣ ನೀರಾವರಿ ಇಲಾಖೆ ಅಡಿಯಲ್ಲಿ ಕಾಮಗಾರಿಯೊಂದನ್ನ ದಿ.ನಾರಾಯಣ್ ಕಾಮತ್ ಎಂಬವರಿಗೆ ಗುತ್ತಿಗೆ ನೀಡಲಾಗಿತ್ತು. 1992-93ರಲ್ಲಿ ಚಿಕ್ಕೋಡಿ ತಾಲೂಕಿನಲ್ಲಿ ಕಾಮಗಾರಿ ಮಾಡಲಾಗಿತ್ತು. ಕಾಮಗಾರಿ ಮುಗಿದು 2 ವರ್ಷ ಕಳೆದಿದ್ದರೂ ಬಿಲ್‌ ಪಾವತಿ ಆಗಿರಲಿಲ್ಲ. ಹೀಗಾಗಿ ಬಿಲ್‌ಗಾಗಿ 1995ರಲ್ಲಿ ಗುತ್ತಿಗೆದಾರ ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದನ್ನೂ ಓದಿ: ಡಿಜಿಟಲ್ ಪೇಮೆಂಟ್ ಕೋಲಾಹಲ – ಲಕ್ಷ, ಲಕ್ಷ ಟ್ಯಾಕ್ಸ್ ನೋಟಿಸ್‌ ಕಂಡು ಹೌಹಾರಿದ ಜನ; ಕ್ಯಾಶ್‌ ವಹಿವಾಟಿಗೆ ದುಂಬಾಲು

    ಈ ವೇಳೆ ಬೆಳಗಾವಿ ಜಿಲ್ಲಾ ಮತ್ತು ಸೆಷನ್ಸ್‌ ಕೋರ್ಟ್‌ 34 ಲಕ್ಷ ರೂ. ಪರಿಹಾರಕ್ಕೆ ಆದೇಶಿಸಿತ್ತು. ಸ್ಥಳೀಯ ಕೋರ್ಟ್‌ ಆದೇಶ ಪ್ರಶ್ನಿಸಿ ಸಣ್ಣ ನೀರಾವರಿ ಇಲಾಖೆ ಹೈಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ಬಳಿಕ 2024ರ ಜೂನ್ ಒಳಗಾಗಿ ಗುತ್ತಿಗೆದಾರನಿಗೆ ಬಡ್ಡಿ ಸಮೇತ ಅರ್ಧ ಬಿಲ್ ಪಾವತಿ ಮಾಡುವಂತೆ ಹೈಕೋರ್ಟ್ ಕೂಡ ಸೂಚನೆ ನೀಡಿತ್ತು.

    ಹೈಕೋರ್ಟ್ ಆದೇಶ ಬಳಿಕವೂ ಬಾಕಿ ಬಿಲ್ ನೀಡಲು ವಿಫಲವಾದ ಹಿನ್ನೆಲೆ ಇಂದು (ಜು.18) ಡಿಸಿ ಕಾರು ಜಪ್ತಿ ಮಾಡಲಾಗಿದೆ. ಗುತ್ತಿಗೆದಾರನ ಪರ ಹಿರಿಯ ವಕೀಲ ಓ.ಬಿ ಜೋಶಿ ವಾದಿಸಿದ್ದರು. ಇದನ್ನೂ ಓದಿ: ಕೆಡಿಪಿ ಮೀಟಿಂಗ್‌ನಲ್ಲಿ ರಮ್ಮಿ ಆಡ್ತಿದ್ದ ಅರಣ್ಯಾಧಿಕಾರಿ – ಸಭೆಯಲ್ಲೇ ಗುಮ್ಮಿದ ಸಚಿವರು

  • ಬೆಳಗಾವಿ ಡಿಸಿಪಿಯಾಗಿ ನಾರಾಯಣ ಭರಮನಿ ವರ್ಗಾವಣೆ

    ಬೆಳಗಾವಿ ಡಿಸಿಪಿಯಾಗಿ ನಾರಾಯಣ ಭರಮನಿ ವರ್ಗಾವಣೆ

    ಬೆಂಗಳೂರು: ಸ್ವಯಂ ನಿವೃತ್ತಿಗಾಗಿ ಅರ್ಜಿ ಸಲ್ಲಿಸಿದ್ದ ಎಎಸ್‌ಪಿ ನಾರಾಯಣ ಭರಮನಿ (Narayan Barmani) ಅವರನ್ನು ಬೆಳಗಾವಿ ಡಿಸಿಪಿಯಾಗಿ (Belagavi DCP) ನೇಮಿಸಿ ಸರ್ಕಾರ ವರ್ಗಾವಣೆ (Transfer) ಮಾಡಿದೆ.

    ಸಾರ್ವಜನಿಕ ವೇದಿಕೆಯಲ್ಲೇ ಹೆಚ್ಚುವರಿ ಎಸ್‌ಪಿ ನಾರಾಯಣ ಭರಮನಿ ಅವರಿಗೆ ಸಿಎಂ ಸಿದ್ದರಾಮಯ್ಯ ಕಪಾಳಮೋಕ್ಷ ಮಾಡಲು ಮುಂದಾಗಿದ್ದರು. ಇದರಿಂದ ಭರಮನಿ ಅವರು ಸ್ವಯಂ ನಿವೃತ್ತಿಗಾಗಿ ಅರ್ಜಿ ಸಲ್ಲಿಸಿದ್ದರು. ಬಳಿಕ ಸರ್ಕಾರ ಅವರ ಮನವೊಲಿಸಿದೆ. ಇದೀಗ ಧಾರವಾಡ ಹೆಚ್ಚುವರಿ ಎಸ್‌ಪಿ ಹುದ್ದೆಯಿಂದ ಬೆಳಗಾವಿ ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಇದನ್ನೂ ಓದಿ: ಹಳೇ ಕೇಸ್‌ ಕೇಳಿದ ಸುಪ್ರೀಂ – ದರ್ಶನ್‌ಗೆ ಎದುರಾಗುತ್ತಾ ಸಂಕಷ್ಟ?

    ಇನ್ನೂ ಬೆಳಗಾವಿಗೆ ವರ್ಗಾವಣೆ ಕುರಿತು ಪ್ರತಿಕ್ರಿಯಿಸಿದ ನಾರಾಯಣ ಭರಮನಿ, ಸರ್ಕಾರ ಡಿಸಿಪಿ ಮಾಡಿ ವರ್ಗಾವಣೆ ಆದೇಶ ಬಂದಿದೆ. ಬೆಳಗಾವಿ ಡಿಸಿಪಿ ಮಾಡಿ ಸರ್ಕಾರ ಆದೇಶ ಮಾಡಿದೆ. ಬೆಳಗಾವಿ ನಗರದ ಕಾನೂನು ಸುವ್ಯವಸ್ಥೆ ನಿರ್ವಹಣೆ ಮಾಡಲು ನನಗೆ ಅವಕಾಶ ನೀಡಿದೆ, ಅದರ ಕಡೆ ಗಮನ ಕೊಡುತ್ತೇನೆ. ಹಿರಿಯ ಅಧಿಕಾರಿಗಳ, ಎಲ್ಲರ ಸಲಹೆ ಸೂಚನೆ ಮೇರೆಗೆ ನಾನು ಕೆಲಸ ಮಾಡುತ್ತೇನೆ. ಬೆಳಗಾವಿಯಲ್ಲಿ ಕೆಲಸ ಮಾಡಿದ ಅನುಭವ ಇದೆ. ಅದು ನನಗೆ ಅನಕೂಲ ಆಗಲಿದೆ ಎಂದಿದ್ದಾರೆ. ಇದನ್ನೂ ಓದಿ: ಬಿಕ್ಲು ಶಿವ ಮರ್ಡರ್ ಕೇಸ್ – ಕೊಲೆ ಮಾಡಿದ್ದು ನಾವು ಎಂದು ಐವರು ಶರಣಾಗತಿ

  • ಬಸ್ಸಿಗಾಗಿ ಹೆದ್ದಾರಿ ಬಂದ್‌ ಮಾಡಿ ಸುವರ್ಣ ಸೌಧದ ಮುಂಭಾಗ ವಿದ್ಯಾರ್ಥಿಗಳಿಂದ ದಿಢೀರ್‌ ಪ್ರತಿಭಟನೆ

    ಬಸ್ಸಿಗಾಗಿ ಹೆದ್ದಾರಿ ಬಂದ್‌ ಮಾಡಿ ಸುವರ್ಣ ಸೌಧದ ಮುಂಭಾಗ ವಿದ್ಯಾರ್ಥಿಗಳಿಂದ ದಿಢೀರ್‌ ಪ್ರತಿಭಟನೆ

    ಬೆಳಗಾವಿ: ಬಸ್ಸಿಗಾಗಿ ಆಗ್ರಹಿಸಿ ಬೆಂಗಳೂರು – ಪುಣೆ (Bengaluru-Pune) ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ವಿದ್ಯಾರ್ಥಿಗಳ ಪ್ರತಿಭಟನೆ (Students Protest) ನಡೆಸಿದ ಘಟನೆ ಬುಧವಾರ ಬೆಳಗಾವಿಯ ಸುವರ್ಣ ಸೌಧದ ಮುಂಭಾಗದಲ್ಲಿ ನಡೆದಿದೆ.

    ಬೆಳಗಾವಿ (Belagavi) ತಾಲೂಕಿನ ಕೊಂಡಸಕಪ್ಪ ಗ್ರಾಮದ ವಿದ್ಯಾರ್ಥಿಗಳು ದಿಢೀರ್‌ ಪ್ರತಿಭಟನೆ ನಡೆಸಿ ಬಿಸಿ ಮುಟ್ಟಿಸಿದ್ದಾರೆ. ಬಸ್ಸು ಬಿಡುವಂತೆ ಹಲವಾರು ಬಾರಿ ಮನವಿ ಮಾಡಿದರೂ ಸ್ಪಂದಿಸದ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ವಿರುದ್ಧ ಏಕಾಏಕಿ ಇಂದು ರಸ್ತೆ ತಡೆ ಮಾಡಿ ತಮ್ಮೂರಿಗೆ ಬಸ್ ಬಿಡುವಂತೆ ಒತ್ತಾಯಿಸಿದರು. ಇದನ್ನೂ ಓದಿ: ಸರಿಯಾದ ಸಮಯಕ್ಕೆ ಬಾರದ ಬಸ್; ನಿತ್ಯ ಕುದುರೆ ಏರಿ ಶಾಲೆಗೆ ಹೋಗ್ತಿದ್ದಾನೆ ಬಾಲಕ

    ಬೆಳಗ್ಗೆ ಸರಿಯಾದ ಸಮಯದಲ್ಲಿ ಬಸ್ಸು ಬಾರದೇ ಇದ್ದರೆ ಶಾಲೆ, ಕಾಲೇಜಿಗೆ ಹೋಗಲು ಅನಾನುಕೂಲ ಆಗುತ್ತಿದೆ.  ಹೀಗಾಗಿ ಸ್ ಬಿಡುವವರೆಗೆ ರಸ್ತೆ ಬಂದ್ ಮಾಡುವುದಾಗಿ ವಿದ್ಯಾರ್ಥಿಗಳ ಪೋಷಕರ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ನಿತ್ಯ 1.05 ಕೋಟಿ ಲೀಟರ್ ಹಾಲು – KMF ಇತಿಹಾಸದಲ್ಲೇ ಮೊದಲ ಬಾರಿಗೆ ಅತಿಹೆಚ್ಚು ಸಂಗ್ರಹ

    ಹೆದ್ದಾರಿಯಲ್ಲಿ ಒಂದು ಕಿ.ಮೀ ಗೂ ಅಧಿಕ ಟ್ರಾಫಿಕ್ ಜಾಮ್ ಆಗಿತ್ತು. ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರ ಭೇಟಿ ನೀಡಿ ಬಸ್ಸು ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದ ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಕೈಬಿಟ್ಟರು.

     

  • ಗಂಡನನ್ನು ಕೊಲ್ಲದಿದ್ರೆ ಆತ್ಮಹತ್ಯೆ ಮಾಡ್ಕೋತಿನಿ – ಪ್ರಿಯಕರನನ್ನು ಬ್ಲ್ಯಾಕ್‍ಮೇಲ್ ಮಾಡಿ ಕೊಲೆ ಮಾಡಿಸಿದ್ದ ಲೇಡಿ ಅಂದರ್

    ಗಂಡನನ್ನು ಕೊಲ್ಲದಿದ್ರೆ ಆತ್ಮಹತ್ಯೆ ಮಾಡ್ಕೋತಿನಿ – ಪ್ರಿಯಕರನನ್ನು ಬ್ಲ್ಯಾಕ್‍ಮೇಲ್ ಮಾಡಿ ಕೊಲೆ ಮಾಡಿಸಿದ್ದ ಲೇಡಿ ಅಂದರ್

    ಬೆಳಗಾವಿ: ಗಂಡನನ್ನು (Husband) ಕೊಲ್ಲದಿದ್ರೆ ಆತ್ಮಹತ್ಯೆ ಮಾಡ್ಕೋತಿನಿ ಅಂತ ಬ್ಲ್ಯಾಕ್‍ಮೇಲ್ ಮಾಡಿ ಪ್ರಿಯಕರನಿಂದ ಪತಿಯನ್ನು ಕೊಲೆ ಮಾಡಿಸಿದ್ದ ಪಾಪಿ ಪತ್ನಿ (Wife) ಸೇರಿ ಹಾಗೂ ಮೂವರು ಆರೋಪಿಗಳನ್ನು ರಾಮದುರ್ಗ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಗಳನ್ನು ಕಮಲವ್ವ, ಪ್ರಿಯಕರ ಸಾಬಪ್ಪ ಮಾದರ್ ಆತನ ಸ್ನೇಹಿತ ಫಕ್ಕೀರಪ್ಪ ಕಣವಿ ಎಂದು ಗುರುತಿಸಲಾಗಿದೆ. ರಾಮದುರ್ಗ ತಾಲೂಕಿನ ಜುನಿಪೇಟೆ ಗ್ರಾಮದ ಹರ್ಲಾಪುರದಿಂದ ರಾಮಾಪುರಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ಮಹಿಳೆಯ ಪತಿ ಈರಪ್ಪ ಆಡಿನ್ ಕೊಲೆಯಾಗಿತ್ತು. ವಾರದ ಹಿಂದೆ ಕತ್ತು ಹಿಸುಕಿ ಕೊಂದು ಶವ ಬಿಸಾಕಿ ಪತ್ನಿ ತವರುಮನೆ ಸೇರಿದ್ದಳು. ಇದನ್ನೂ ಓದಿ: ಬಿಷ್ಣೋಯ್ ಹೆಸರಲ್ಲಿ ಬೆದರಿಕೆ ಹಾಕಿ ಒಂದು ಕೋಟಿಗೆ ಡಿಮ್ಯಾಂಡ್ – ತಿಹಾರ್‌ ಜೈಲಲ್ಲಿ ಫ್ರೆಂಡ್ಸ್‌ ಆಗಿದ್ದ ಗ್ಯಾಂಗ್‌ ಅಂದರ್‌!

    ಕ್ಯಾಂಟಿನ್‍ನಲ್ಲಿ ಕೆಲಸ ಮಾಡ್ತಿದ್ದ ಕಮಲವ್ವಗೆ ಪರಿಚಯವಾಗಿದ್ದ ವಿಕಲಾಂಗ ಸಾಬಪ್ಪ ಮಾದರ್ ಜೊತೆ ಅನೈತಿಕ ಸಂಬಂಧವಿತ್ತು. ಆತನ ಬಳಿ, ಗಂಡನ ಕಿರುಕುಳಕ್ಕೆ ಬೇಸತ್ತು, ಆತನ ಕೊಲೆಗೆ ಕಮಲವ್ವ ಸೂಚಿಸಿದ್ದಳು. ಕೊಲೆಗೂ ಮುನ್ನಾ ದಿನ 30ಬಾರಿ ಕರೆ ಮಾಡಿದ್ದ ಕಮಲವ್ವ. ಗಂಡನನ್ನ ಕೊಲೆ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಳು.

    ಜು.7ರಂದು ಗಂಡನಿಗೆ ಕುಡಿಸಿ ಬಳಿಕ ನಿರ್ಜನ ಪ್ರದೇಶಕ್ಕೆ ಕಮಲವ್ವ ಕರೆದುಕೊಂಡು ಹೋಗಿದ್ದಳು. ಬಳಿಕ ಪ್ರಿಯಕರ ಹಾಗೂ ಆತನ ಸ್ನೇಹಿತ ಸೇರಿ ಈರಪ್ಪನ ಕತ್ತಿಗೆ ಟವೆಲ್ ಬಿಗಿದು ಸಾಯಿಸಿದ್ದರು.

    ಶವ ಪತ್ತೆಯಾಗುತ್ತಿದ್ದಂತೆ ಕೊಲೆ ಕೇಸ್ ದಾಖಲಿಸಿಕೊಂಡಿದ್ದ ರಾಮದುರ್ಗ ಠಾಣೆ ಪೊಲೀಸರು, ಹೆಂಡತಿ ಫೋನ್ ಹಿಸ್ಟರಿ ಚೆಕ್ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿತ್ತು. ಇದನ್ನೂ ಓದಿ: ಯುಎಇಯಲ್ಲಿ ಕೇರಳದ ಮಹಿಳೆ ಆತ್ಮಹತ್ಯೆ; ಪತಿ, ಅತ್ತೆ-ಮಾವ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ

  • ಸರಿಯಾದ ಸಮಯಕ್ಕೆ ಬಾರದ ಬಸ್; ನಿತ್ಯ ಕುದುರೆ ಏರಿ ಶಾಲೆಗೆ ಹೋಗ್ತಿದ್ದಾನೆ ಬಾಲಕ

    ಸರಿಯಾದ ಸಮಯಕ್ಕೆ ಬಾರದ ಬಸ್; ನಿತ್ಯ ಕುದುರೆ ಏರಿ ಶಾಲೆಗೆ ಹೋಗ್ತಿದ್ದಾನೆ ಬಾಲಕ

    ಚಿಕ್ಕೋಡಿ: ಸರಿಯಾದ ಸಮಯಕ್ಕೆ ಬಸ್ ಬಾರದ ಕಾರಣ ಬಾಲಕನೊಬ್ಬ ಕುದುರೆ ಏರಿ ನಿತ್ಯ ಶಾಲೆಗೆ ತೆರಳುವ ಮೂಲಕ ಎಲ್ಲರ ಗಮನ ಸೆಳೆದಿರುವ ಘಟನೆ ಸೊಲ್ಹಾಪುರ (Solapura) ನಡೆದಿದೆ.

    ಮಹಾರಾಷ್ಟ್ರದ (Maharashtra) ಸೊಲ್ಹಾಪುರ ಜಿಲ್ಲೆ ಬಾರ್ಶಿ ತಾಲೂಕಿನ ವ್ಯರಾಗ್ ಪಟ್ಟಣದ ಹೊರವಲಯದ ಗ್ರಾಮೀಣ ಭಾಗದ 9 ವರ್ಷದ ಆದರ್ಶ ಸಾಳುಂಕ ಎಂಬ ಬಾಲಕ ಸರಿಯಾದ ಸಮಯಕ್ಕೆ ಬಾರದ ಬಸ್‌ಗೆ ಗೋಲಿ ಮಾರೋ ಎಂದು ಕುದುರೆ ಸವಾರಿ ಮಾಡಿಕೊಂಡು ಶಾಲೆಗೆ ಹೋಗುತ್ತಿದ್ದಾನೆ. ಇದನ್ನೂ ಓದಿ: ಅಕ್ರಮ ಮುಸ್ಲಿಂ ವಲಸಿಗರು ಭಯೋತ್ಪಾದನೆ, ಜನೋತ್ಪಾದನೆಯಲ್ಲಿ ತೊಡಗಿದ್ದಾರೆ: ಪ್ರತಾಪ್‌ ಸಿಂಹ


    ಬಾಲಕನ ಅಜ್ಜನ ಬಳಿ ಇರುವ 7 ಕುದುರೆಗಳ ಪೈಕಿ 1 ಕುದುರೆಯನ್ನು ಓಡಿಸಿಕೊಂಡು ಹೋಗಿ ಸರಿಯಾದ ಸಮಯಕ್ಕೆ ಶಾಲೆಗೆ ಹೋಗುವ ಮೂಲಕ ಗ್ರಾಮಸ್ಥರ ಗಮನ ಸೆಳೆದಿದ್ದಾನೆ.