ಬೆಂಗಳೂರು: ಬೆಳಗಾವಿಯಲ್ಲಿ ನಡೆದ ಗ್ಯಾಂಗ್ ರೇಪ್ (Belagavi Minor Gang Rape Case) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 5 ಜನರನ್ನು ಬಂಧನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ (Parameshwar) ತಿಳಿಸಿದ್ದಾರೆ.
ಘಟನೆ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬೆಳಗಾವಿಯಲ್ಲಿ ಗ್ಯಾಂಗ್ ರೇಪ್ ಪ್ರಕರಣ ಬಹಳ ಹಿಂದೆ ನಡೆದಿದೆ. ಡಿಸೆಂಬರ್, ಜನವರಿಯಲ್ಲಿ ನಡೆದಿರುವ ಘಟನೆಯ ಬಗ್ಗೆ ಯಾರು ದೂರು ಕೊಟ್ಟಿರಲಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಪ್ರಚೋದನಕಾರಿ ಭಾಷಣ – ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಕೇಸ್ ದಾಖಲು
ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಎಪಿಎಂಸಿ ಠಾಣೆಯಲ್ಲಿ 6 ಮಂದಿ ವಿರುದ್ಧ ಶನಿವಾರ ಎಫ್‌ಐಆರ್ ದಾಖಲಾಗಿತ್ತು. ಆರಂಭದಲ್ಲಿ ಒಬ್ಬನು ಬಾಲಕಿಯನ್ನು ಪರಿಚಯಿಸಿಕೊಂಡು, ಸ್ನೇಹ ಬೆಳೆಸಿದ್ದ. ಬಳಿಕ ಆತ ಮತ್ತು ಸ್ನೇಹಿತರು 2024ರ ಡಿಸೆಂಬರ್‌ನಲ್ಲಿ ಪುಸಲಾಯಿಸಿಕೊಂಡು ಹೋಗಿ ಅತ್ಯಾಚಾರ ಎಸಗಿದ್ದರು. ಅತ್ಯಾಚಾರದ ದೃಶ್ಯವನ್ನು ಆರೋಪಿಗಳು ವಿಡಿಯೊ ರೆಕಾರ್ಡ್ ಮಾಡಿದ್ದಾರೆ. ಅದನ್ನೇ ತೋರಿಸಿ ಬ್ಲ್ಯಾಕ್‌ಮೇಲ್ ಮಾಡಿ, 2025ರ ಜನವರಿಯಲ್ಲಿ ಮತ್ತೆ ಮೂವರು ಅತ್ಯಾಚಾರ ಮಾಡಿದ್ದಾರೆ. ಬೇರೆ ಬೇರೆ ಸ್ಥಳಗಳಲ್ಲಿ ಅತ್ಯಾಚಾರ ಮಾಡಲಾಗಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಪ್ರಯತ್ನಿಸಲಾಗುವುದು ಎಂದು ಬೆಳಗಾವಿ ನಗರ ಪೊಲೀಸ್ ಕಮಿಷನರ್ ಭೂಷಣ್ ಗುಲಾಬರಾವ್ ಬೊರಸೆ ಹೇಳಿದರು.
ಬೆಳಗಾವಿ: ರಸ್ತೆಯಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಟ್ಯಾಂಕರ್ (Tanker) ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡ ಘಟನೆ ಬೆಳಗಾವಿ (Belagavi) ಜಿಲ್ಲೆಯ ಕಿತ್ತೂರು (Kittur) ತಾಲೂಕಿನ ಇಟಗಿ ಕ್ರಾಸ್‌ನಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ-4 ಪುಣೆ ಬೆಂಗಳೂರು ರಸ್ತೆಯಲ್ಲಿ ದುರಂತ ಸಂಭವಿಸಿದೆ. ಕಲಬುರಗಿಯಿಂದ ಕೆಲಸಕ್ಕೆಂದು ಬೆಳಗಾವಿಗೆ ಬಂದಿದ್ದ ಕಾರ್ಮಿಕರು ಪುಣೆ ಬೆಂಗಳೂರು ಹೆದ್ದಾರಿಯಲ್ಲಿ ರಸ್ತೆ ರಿಪೇರಿ ಮಾಡುತ್ತಿದ್ದರು. ಈ ವೇಳೆ ಟ್ಯಾಂಕರ್ ಹರಿದಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಈ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ. ಇದನ್ನೂ ಓದಿ: ನೆರವು ಕೇಂದ್ರದ ಬಳಿ ಇಸ್ರೇಲಿ ಪಡೆಗಳಿಂದ ಗುಂಡಿನ ದಾಳಿ – 26 ಮಂದಿ ಪ್ಯಾಲೆಸ್ಟೀನಿಯನ್ನರು ಸಾವು
ಅಪಘಾತದಲ್ಲಿ ಕಲಬುರಗಿ ಜಿಲ್ಲೆಯ ರಾಮನ್ನ, ಮಹೇಶ್, ರಾಮಚಂದ್ರ ಎಂಬವರು ಮೃತಪಟ್ಟಿದ್ದಾರೆ. ಲಕ್ಷ್ಮೀಬಾಯಿ, ಅನುಶ್ರೀ, ಭೀಮಾಬಾಯಿ ಗಂಭೀರ ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಭೀಮಾಬಾಯಿಯ ಎರಡು ಕಾಲುಗಳು ಕಟ್ ಆಗಿದ್ದು, ಚಿಕಿತ್ಸೆಗಾಗಿ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಆಯಿಲ್ ತುಂಬಿದ್ದ ಟ್ಯಾಂಕರ್ ಕಾಮಿಕರ ಮೇಲೆ ಹರಿದು ಸರ್ವಿಸ್ ರಸ್ತೆಯಲ್ಲಿ ಪಲ್ಟಿಯಾಗಿದೆ. ಟ್ಯಾಂಕರ್‌ನಲ್ಲಿ ಸಿಲುಕಿದ್ದ ಚಾಲಕನನ್ನು ಪೊಲೀಸರು ಹೊರತೆಗೆದಿದ್ದಾರೆ. ಇದನ್ನೂ ಓದಿ: ಹಟ್ಟಿ ಚಿನ್ನದಗಣಿ | 2,800 ಅಡಿ ಆಳದಲ್ಲಿ ಏರ್ ಬ್ಲಾಸ್ಟ್ – ಕಾರ್ಮಿಕ ದುರ್ಮರಣ
ಘಟನೆ ಕುರಿತು ಗಾಯಾಳು ಲಕ್ಷ್ಮೀಬಾಯಿ ಮಾಧ್ಯಮಗಳೊಂದಿಗೆ ಮಾತನಾಡಿ, ನಾವು ಹೆದ್ದಾರಿ ಕೆಲಸಕ್ಕೆಂದು ಕಳೆದ ಏಳು ತಿಂಗಳ ಹಿಂದೆ ಬಂದಿದ್ದೆವು. ಇಂದು ರವಿವಾರವಿದ್ದ ಕಾರಣ ಮಧ್ಯಾಹ್ನವೇ ಕೆಲಸ ಮುಗಿಸಿಕೊಂಡು ಹೊರಟಿದ್ದೆವು. ಲಾರಿ ಚಾಲಕ ಫೋನ್‌ನಲ್ಲಿ ಮಾತನಾಡಿಕೊಂಡು ಡ್ರೈವಿಂಗ್ ಮಾಡುತ್ತಿದ್ದ. ಕೈ ಮಾಡಿದರೂ ಸಹ ನೋಡದೇ ಎಲ್ಲರ ಮೇಲೂ ಲಾರಿ ಹರಿಸಿದ. ನಾವು ಒಟ್ಟು ಆರು ಜನ ಇದ್ದೆವು. ಘಟನೆಯಲ್ಲಿ ನನ್ನ ಪತಿ ಹಾಗೂ ಮಗ ತೀರಿ ಹೋದರು. ನಮ್ಮ ಕುಟುಂಬಕ್ಕೆ ಇನ್ಯಾರು ದಿಕ್ಕು ಎಂದು ಕಣ್ಣೀರು ಹಾಕಿದರು. ಇದನ್ನೂ ಓದಿ: ಕರ್ನಾಟಕ, ಕನ್ನಡ ಭಾಷೆ ಬಗ್ಗೆ ಯಾರೇ ತಪ್ಪಾಗಿ ಮಾತಾಡಿದ್ರೂ ಒಪ್ಪಲ್ಲ: ಸುಧಾರಾಣಿ
ಬಳಿಕ ಅದೇ ವೀಡಿಯೊ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ಅಪ್ರಾಪ್ತೆಯ ಮೇಲೆ ಮತ್ತೊಮ್ಮೆ ರೇಪ್ ಮಾಡಿದ್ದರು. ಈ ಸಂದರ್ಭದಲ್ಲೂ ಸಹ ದುರುಳರು ವೀಡಿಯೊ ಮಾಡಿಕೊಂಡಿದ್ದರು. ಅತ್ಯಾಚಾರದ ವೀಡಿಯೊ ಇಟ್ಟುಕೊಂಡು, ಈಗ ಮತ್ತೆ ಅಪ್ರಾಪ್ತ ಬಾಲಕಿಯನ್ನು ಬೆದರಿಸುತ್ತಿರುವ ಹಿನ್ನೆಲೆ ಆರೋಪಿಗಳ ವಿರುದ್ಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಇಂದು ಪಂಜಾಬ್-ಮುಂಬೈ ನಡ್ವೆ ಕ್ವಾಲಿಫೈಯರ್-2 ಕದನ – ಗೆದ್ದವರೊಂದಿಗೆ ಪ್ರಶಸ್ತಿಗಾಗಿ ಆರ್‌ಸಿಬಿ ಗುದ್ದಾಟ!
ವಾರದ ಹಿಂದೆಯಷ್ಟೇ ರೆಸಾರ್ಟ್ ಒಂದರಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್ ಆಗಿತ್ತು. ಈ ಪ್ರಕರಣದಲ್ಲಿ ಇಬ್ಬರು ಬಾಲಾಪರಾಧಿ ಸೇರಿ ಐದು ಜನರ ಬಂಧನವಾಗಿತ್ತು. ಇದೀಗ ಜಿಲ್ಲೆಯಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಸರ್ಕಾರಿ ನೌಕರರಿಗೆ ಪ್ರತಿಭಟನೆ ಮಾಡಲು ಅವಕಾಶ ಇಲ್ಲ. ನನ್ನ ಇಲಾಖೆಯಲ್ಲಿ ಇಂತಹದ್ದನ್ನ ಸಹಿಸೋಕೆ ಸಾಧ್ಯವಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದ್ದಾರೆ.
ಬೆಳಗಾವಿಯಲ್ಲಿ (Belagavi) ಶಾಲಾ ಕೊಠಡಿಗಾಗಿ ಪ್ರತಿಭಟನೆ ಮಾಡಿದ ಶಿಕ್ಷಕನನ್ನು ಅಮಾನತು ಮಾಡಿರುವ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಸರ್ಕಾರಿ ನೌಕರರಿಗೆ ಕಾನೂನು ಇದೆ. ಇಂತಹ ಸಮಸ್ಯೆ ಇದ್ದರೆ ಇಲಾಖೆ ಗಮನಕ್ಕೆ ತರಬೇಕು. ಬಿಇಓ, ಡಿಡಿಪಿಐಗಳ ಗಮನಕ್ಕೆ ತರಬೇಕು. ಏಕಾಏಕಿ ಪ್ರತಿಭಟನೆ ಮಾಡೋದು ಸರಿಯಲ್ಲ ಎಂದಿದ್ದಾರೆ. ಇದನ್ನೂ ಓದಿ: ಭುಗಿಲೆದ್ದ ರೈತರ ಆಕ್ರೋಶ – ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಕಾಮಗಾರಿ ತಾತ್ಕಾಲಿಕ ಸ್ಥಗಿತ
ಹೀಗೆ ಅವರು ಪ್ರತಿಭಟನೆ ಮಾಡಿದರೆ ಅದನ್ನ ಸಹಿಸೋಕೆ ಆಗುವುದಿಲ್ಲ. ನನ್ನ ಇಲಾಖೆಯಲ್ಲಿ ಇದಕ್ಕೆ ಅವಕಾಶ ಇಲ್ಲ. ನಾವು ಬಿಲ್ಡಿಂಗ್ ಕೊಟ್ಟಿರೋದು ಅವರಿಗೆ ಗೊತ್ತಿದೆ. ಗೊತ್ತಿದ್ದು ಹೀಗೆ ಪ್ರತಿಭಟನೆ ಮಾಡಿದ್ದಾರೆ. ಹೀಗಾಗಿ ಬಿಇಓ ಅಮಾನತು ಮಾಡಿ ಆದೇಶ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
ಸರ್ಕಾರಿ ನೌಕರರು (Government Employees) ಇತಿಮಿತಿಯಲ್ಲಿ ಇರಬೇಕು. ಹೀಗೆ ಮಾಡೋದು ಸರಿಯಲ್ಲ. ಪ್ರತಿಭಟನೆ ಮಾಡೋಕೆ ಸರ್ಕಾರದಲ್ಲಿ ಅವಕಾಶ ಇಲ್ಲ. ಅವರ ಸಮಸ್ಯೆ ಬಗ್ಗೆ ಪ್ರತಿಭಟನೆ ಮಾಡಲಿ. ಅದು ಬಿಟ್ಟು ಇಂತಹ ವಿಷಯಕ್ಕೆ ಪ್ರತಿಭಟನೆ ಮಾಡೋದು ಸರಿಯಲ್ಲ. ಅನೇಕರು ನನಗೆ ಅಮಾನತು ವಾಪಸ್ ಪಡೆದುಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಈಗ ಅಮಾನತು ವಾಪಸ್ ಪಡೆಯಬೇಕು ಅಂತ ಕಡತ ತರಿಸಿದ್ದೇನೆ. ಪರಿಶೀಲನೆ ಮಾಡಿ ಮುಂದಿನ ಕ್ರಮ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ.
ಬೆಳಗಾವಿ/ಬಾಗಲಕೋಟೆ/ಬಳ್ಳಾರಿ: ರಾಜ್ಯದ ಏಳು ಜಿಲ್ಲೆಗಳಲ್ಲಿಂದು ಲೋಕಾಯುಕ್ತ ಅಧಿಕಾರಿಗಳ ತಂಡ ಏಕಾಏಕಿ ದಾಳಿ (Lokayukta Raid) ನಡೆಸಿದ್ದು, ಭ್ರಷ್ಟ ಅಧಿಕಾರಿಗಳಿಗೆ ಬಿಸಿಮುಟ್ಟಿಸಿದೆ.
ಬೆಳಗಾವಿ ಸುವರ್ಣ ಸೌಧದ ದೇವರಾಜ್ ಅರಸು ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಸಿದ್ದಲಿಂಗಪ್ಪ, ಬಾಗಲಕೋಟೆಯ ಜಿಲ್ಲಾಡಳಿತ ಕಚೇರಿ ಲೆಕ್ಕಪತ್ರ ವಿಭಾಗದ ಎಫ್‌ಡಿಎ ಶೈಲ ಸುಭಾಷ್ ತತ್ರಾಣಿ, ಬಳ್ಳಾರಿಯ ಕಾರ್ಯಪಾಲಕ ಎಂಜಿನಿಯರ್ ಅಮೀನ್ ಮುಕ್ತಾರ್ ಅಹಮದ್, ದಾವಣಗೆರೆಯ ಶಿಗ್ಗಾಂವಿ ಪಂಚಾಯಿತಿ ಪಿಡಿಓ (PDO) ರಾಮಕೃಷ್ಣ, ಉಡುಪಿ ಜಿಲ್ಲೆ ಕಾರ್ಕಳದ ಮೆಸ್ಕಾಂ ಅಕೌಂಟೆಂಟ್ ಗಿರೀಶ್ ರಾವ್, ಗದಗದ ನಿರ್ಮಿತಿ ಕೇಂದ್ರದ ಯೋಜನಾಧಿಕಾರಿ ಗಂಗಾಧರ, ಧಾರವಾಡದ ಪಿಡಬ್ಲುಡಿ ಮುಖ್ಯ ಇಂಜಿನಿಯರ್ ಹೆಚ್.ಸುರೇಶ್ ಅವರ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.
ಗದಗ:
ಗದಗ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಮನೆ ಗಂಗಾಧರ ಶಿರೋಳ ಅವರ ಮನೆ, ಕಚೇರಿ ಹಾಗೂ ಅಳಿಯ, ಭಾವನ ಮನೆಗಳು ಸೇರಿ 6 ಕಡೆ ಲೋಕಾಯುಕ್ತ ತಂಡ ದಾಳಿ ನಡೆಸಿದೆ. ಗದಗ ನಗರದ ಅಳಿಯ ವಿಜಯ ಯಳಮೇಲಿ, ಭಾವ ನಾಗರಾಜ್ ಅಕ್ಕಿ ಮನೆ, ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ಹಾಗೂ ಹಾವೇರಿ ಜಿಲ್ಲೆಯಲ್ಲಿ ಸಂಬಧಿಕರ ಮನೆ ಮೇಲೆ ಲೋಕಾಯುಕ್ತ ಎಸ್ಪಿ ಹಣಮಂತರಾಯ, ಡಿವೈಎಸ್ಪಿ ವಿಜಯ ಬಿರಾದಾರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ ಅಪಾರ ಪ್ರಮಾಣದ ಚಿನ್ನಾಭರಣ, ಬೆಳ್ಳಿ, ವಾಹನಗಳು, ಆಸ್ತಿಪತ್ರಗಳು ದೊರೆತಿದ್ದು ಶೋಧ ಕಾರ್ಯ ಮುಂದುವರಿದಿದೆ.
ಕಲಬುರಗಿ:
ಕಲಬುರಗಿ ನಗರದ ಹುಸೇನಿ ಗಾರ್ಡನ್ ಬಡಾವಣೆಯಲ್ಲಿರುವ ಬಳ್ಳಾರಿ ಲೋಕೋಪಯೋಗಿ ಇಲಾಖೆಯ ಸರ್ಕಲ್ ಆಫೀಸ್ ಅಧೀಕ್ಷಕ ಇಂಜಿನಿಯರ್ ಅಮೀನ್ ಮುಕ್ತಾರ್ ನಿವಾಸದ ಮೇಲೆ ಇಂದು ನಸುಕಿನಲ್ಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಲಬುರಗಿ ಮೂಲದವರೇ ಆಗಿರುವ ಅಮೀನ್ ಮುಕ್ತಾರ್ ಈ ಹಿಂದೆ ಇದೇ ಇಲಾಖೆಯ ಎಕ್ಸಿಕ್ಯುಟಿವ್ ಇಂಜಿನಿಯರ್ ಆಗಿ ಸಹ ಸೇವೆ ಸಲ್ಲಿಸಿದ್ದಾರೆ. ಇಂದು ನಸುಕಿನಲ್ಲಿ ಮನೆಯ ಬಾಗಿಲು ತಟ್ಟಿದ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮುಂದಯವರೆಸಿದ್ದು, ಅಮೀನ್ ಅವರ ಸಹೋದರ ಡಾ.ಆರೀಫ್ ಅವರಿಗೆ ಸೇರಿದ ಏಷ್ಯನ್ ಲೈಫ್ ಸ್ಟೈಲ್ ಅಪಾರ್ಟ್‌ಮೆಂಟ್ ಮೇಲೆ ಸಹ ದಾಳಿ ನಡೆಸಿದ್ದಾರೆ. ಇದರ ಜೊತೆಗೆ, ಬಳ್ಳಾರಿ ಮತ್ತು ಬಸವಕಲ್ಯಾಣದಲ್ಲೂ ದಾಳಿ ನಡೆದಿದೆ. ಆದಾಯಕ್ಕೂ ಹೆಚ್ಚು ಆಸ್ತಿ ಗಳಿಕೆ ಆರೋಪದ ಅಡಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಕೈಗೊಂಡಿದ್ದಾರೆ. ಇದನ್ನೂ ಓದಿ: ಕೊಡಗು | ಪೊನ್ನಂಪೇಟೆ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ
ಬಾಗಲಕೋಟೆ:
ಇಲ್ಲಿನ ಜಿಲ್ಲಾಡಳಿತ ಕಚೇರಿ ಲೆಕ್ಕಪತ್ರ ವಿಭಾಗದ ಎಫ್‌ಡಿಎ ಶ್ರೀಶೈಲ್ ತತ್ರಾಣಿ ಅವರ ಅಮೀನಗಢ ಪಟ್ಟಣದಲ್ಲಿರುವ ಮನೆ ಹಾಗೂ ಆಭರಣ ಮಳಿಗೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಬಾಗಲಕೋಟೆ ಲೋಕಾಯುಕ್ತ ಡಿಎಸ್‌ಪಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ಮಹತ್ವದ ದಾಖಲೆಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಮೊಂಟೆಪದವು ಗುಡ್ಡಕುಸಿತಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ – ಪಿಡಿಓ ಇತರ ಅಧಿಕಾರಿಗಳ ವಿರುದ್ಧ ದೂರು
ಹಾವೇರಿ:
ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ಬಾಡ ಗ್ರಾಮ ಪಂಚಾಯತಿ ಕಚೇರಿಯ ಮೇಲೆ ದಾಳಿ ಮಾಡಿದ್ದಾರೆ. ಗ್ರಾಮ ಪಂಚಾಯತಿ ಪಿಡಿಓ ರಾಮಕೃಷ್ಷಪ್ಪ ಗುಡಗೇರಿ ಎಂಬ ಪಿಡಿಓ ಸಂಬಂಧಿಸಿದ ಮನೆ ಮತ್ತು ಕಚೇರಿಯಲ್ಲಿ ದಾಖಲೆಗಳನ್ನ ಪರಿಶೀಲನೆ ನಡೆಸಿದ್ದಾರೆ. ಧಾರವಾಡದ ಮನೆ ಮತ್ತು ಬಾಡ ಗ್ರಾಮದ ಗ್ರಾಮ ಪಂಚಾಯತಿಯಲ್ಲಿ ದಾವಣಗೆರೆ ಮತ್ತು ಹಾವೇರಿ ಲೋಕಾಯುಕ್ತರ ಪೊಲೀಸ್ ಸಿಬ್ಬಂದಿ ದಾಖಲೆಗಳನ್ನ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಯುದ್ಧ ಹಡಗು, ಜಲಾಂತರ್ಗಾಮಿಗಳ ಸೂಕ್ಷ್ಮ ಮಾಹಿತಿಯನ್ನ ಪಾಕ್‌ಗೆ ರವಾನಿಸ್ತಿದ್ದ ಮೆಕ್ಯಾನಿಕಲ್ ಎಂಜಿನಿಯರ್ ಅರೆಸ್ಟ್!
ಇದರೊಂದಿಗೆ ಬಳ್ಳಾರಿ, ಉಡುಪಿ, ದಾವಣಗೆರೆ ಜಿಲ್ಲೆಗಳಲ್ಲೂ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿದ್ದು, ಅಪಾರ ಪ್ರಮಾಣದ ಚಿನ್ನಾಭರಣ, ಅಕ್ರಮ ಆಸ್ತಿ ಹಾಗೂ ಮಹತ್ವದ ದಾಖಲೆಗಳು ಪತ್ತೆಯಾಗಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.
ಬೆಳಗಾವಿ: ಪಂಜಾಬ್ ಕಿಂಗ್ಸ್ ವಿರುದ್ಧ ಕ್ವಾಲಿಫೈಯರ್-1ನಲ್ಲಿ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ 4ನೇ ಬಾರಿ ಫೈನಲ್‌ಗೆ ಲಗ್ಗೆಯಿಟ್ಟಿದೆ. 2009, 2011, 2016ರ ಬಳಿಕ ನಾಲ್ಕನೇ ಬಾರಿ ಐಪಿಎಲ್ ಫೈನಲ್ ತಲುಪಿದ್ದು, ಟ್ರೋಫಿ ಗೆಲ್ಲುವ ನಿರೀಕ್ಷೆ ಮೂಡಿಸಿದೆ. ಹೀಗಾಗಿ ಆರ್‌ಸಿಬಿ ಫ್ಯಾನ್ಸ್ ವತಿಯಿಂದ ರಾಜ್ಯದ ಮುಖ್ಯಮಂತ್ರಿಗಳಿಗೆ (Chief Minister) ವಿಶೇಷ ಪತ್ರ ಬರೆಯಲಾಗಿದೆ.
ಗೋಕಾಕ ಮೂಲದ ಯುವಕ ಶಿವಾನಂದ ಮಲ್ಲನ್ನವರ್ ಎಂಬ ಯುವಕ ಸಿಎಂಗೆ ಪತ್ರ ಬರೆದಿದ್ದು ರಾಜ್ಯೋತ್ಸವದ ರೀತಿಯಲ್ಲಿ ಆರ್‌ಸಿಬಿ ಫ್ಯಾನ್ಸ್ ಹಬ್ಬದ ರೀತಿಯಲ್ಲಿ ಆಚರಣೆಗೆ ಅವಕಾಶ ನೀಡಿ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ. ಈ ಪತ್ರ ಸೋಷಿಯಲ್ ಮೀಡಿಯಾದಲ್ಲೂ ವೈರಲ್ ಆಗಿದೆ. ಇದನ್ನೂ ಓದಿ: ಕಪ್ ಗೆಲ್ಲೋಕೆ ಇನ್ನೊಂದೇ ಹೆಜ್ಜೆ – ಅನುಷ್ಕಾ ಕಡೆ ತಿರುಗಿ ಸನ್ನೆ ಮಾಡಿದ ಕೊಹ್ಲಿ
ಕಳೆದ 7 ವರ್ಷಗಳಲ್ಲಿ ಕ್ವಾಲಿಫೈಯರ್-1 ಗೆದ್ದೋರೇ ಚಾಂಪಿಯನ್:
ಇನ್ನೂ 2009, 2011, 2016ರ ಬಳಿಕ 4ನೇ ಬಾರಿಗೆ ಫೈನಲ್‌ಗೆ ಲಗ್ಗೆಯಿಟ್ಟಿರುವ ಆರ್‌ಸಿಬಿ ಈ ಬಾರಿ ಟ್ರೋಫಿ ಮುಡಿಗೇರಿಸಿಕೊಳ್ಳಲಿದೆ ಎಂದು ಕ್ರಿಕೆಟ್ ತಜ್ಞರು ಭವಿಷ್ಯ ನುಡಿದಿದ್ದಾರೆ. ಏಕೆಂದರೆ ಕಳೆದ 7 ವರ್ಷಗಳಲ್ಲಿ ನಡೆದ ಐಪಿಎಲ್ ಆವೃತ್ತಿಗಳಲ್ಲಿ ಐಪಿಎಲ್ ಕ್ವಾಲಿಫೈರ್-1 ನಲ್ಲಿ ಗೆದ್ದ ತಂಡಗಳೇ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿರುವುದು ಇದಕ್ಕೆ ಸಾಕ್ಷಿಯಾಗಿದೆ. ಇದನ್ನೂ ಓದಿ: ‘ಇದು ಅಭಿಮಾನಿ ದೇವ್ರುಗಳಿಗೆ’: ಅಣ್ಣಾವ್ರ ಸ್ಟೈಲಲ್ಲಿ ಕೈಮುಗಿದ ಕೊಹ್ಲಿ – ಆರ್‌ಸಿಬಿ ಫ್ಯಾನ್ಸ್ ಥ್ರಿಲ್
ಯಾವ ವರ್ಷ – ಯಾವ ತಂಡ?
2018 – CSK.
2019 – MI.
2020 – MI.
2021 – CSK.
2022 – GT.
2023 – CSK.
2024 – KKR
2025 – ….?
2018ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್, 2019 ಮತ್ತು 2020ರಲ್ಲಿ ಮುಂಬೈ ಇಂಡಿಯನ್ಸ್, 2021ರಲ್ಲಿ ಸಿಎಸ್‌ಕೆ, 2022ರಲ್ಲಿ ಗುಜರಾತ್ ಟೈಟಾನ್ಸ್, 2023ರಲ್ಲಿ ಸಿಎಸ್‌ಕೆ, 2024ರಲ್ಲಿ ಕೆಕೆಆರ್ ತಂಡಗಳು ಕ್ವಾಲಿಫೈಯರ್-1ನಲ್ಲಿ ಗೆಲುವು ಸಾಧಿಸಿ ಚಾಂಪಿಯನ್ ಪಟ್ಟವನ್ನು ತಮ್ಮದಾಗಿಸಿಕೊಂಡಿವೆ. ಇದೀಗ 18ನೇ ಆವೃತ್ತಿಯ ಕ್ವಾಲಿಫೈಯರ್-1 ನಲ್ಲಿ ಗೆದ್ದು ಫೈನಲ್ ಪ್ರವೇಶಿಸಿರುವ ಆರ್‌ಸಿಬಿ ಚಾಂಪಿಯನ್ ಪಟ್ಟಕ್ಕೆ ಕೊರಳೊಡ್ಡಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.
ಬೆಳಗಾವಿ: ಹೆಂಡತಿ ಕಾಟಕ್ಕೆ ಬೇಸತ್ತು ಡೆತ್ ನೋಟ್ (Death Note) ಬರೆದಿಟ್ಟು ಗಂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ (Belagavi) ನಗರದ ಅನಗೋಳದ ದುರ್ಗಾ ಕಾಲೋನಿಯಲ್ಲಿ ನಡೆದಿದೆ.
ಸುನೀಲ್ ಮೂಲಿಮನಿ (33) ಆತ್ಮಹತ್ಯೆ (Suicide) ಮಾಡಿಕೊಂಡ ಪತಿ. ತನ್ನದೇ ಕಂಪ್ಯೂಟರ್ ಶಾಪ್‌ನಲ್ಲಿ ವೈಯರ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 4 ವರ್ಷಗಳ ಹಿಂದೆ ಪೂಜಾ ಎಂಬಾಕೆಯನ್ನ ಸುನೀಲ್ ಮದುವೆಯಾಗಿದ್ದರು. ಈಗ ದಂಪತಿಗೆ ಮೂರು ವರ್ಷದ ಮಗು ಇದೆ. ಇದನ್ನೂ ಓದಿ: ಲಾರಿ, ಬೈಕ್ ನಡುವೆ ಭೀಕರ ಅಪಘಾತ – ಹಾರಿ ಹೋದ ಬೈಕ್ ಸವಾರನ ರುಂಡ
ಬೆಳಗಾವಿ: ಕೊರೊನಾ (Corona) ಮಹಾಮಾರಿಗೆ ಬೆಳಗಾವಿಯಲ್ಲಿ (Belagavi) ಮೊದಲ ಬಲಿಯಾಗಿದೆ. ಇದೀಗ ರಾಜ್ಯದಲ್ಲಿ ಕೋವಿಡ್ ವೈರಸ್‌ನಿಂದ ಇಬ್ಬರು ಮೃತಪಟ್ಟಿದ್ದಾರೆ.
ಬೆಳಗಾವಿ ತಾಲೂಕಿನ 70 ವರ್ಷದ ರೋಗಿ ಕೊರೊನಾದಿಂದ ಮೃತಪಟ್ಟಿದ್ದಾರೆ. ರೋಗಿಯು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಪತ್ತೆಯಾಗಿತ್ತು. ಬಳಿಕ ಅವರನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಇದನ್ನೂ ಓದಿ: ಬಿಷ್ಣೋಯ್ ಗ್ಯಾಂಗ್‌ನ ಶಾರ್ಪ್‌ಶೂಟರ್ ನವೀನ್ ಕುಮಾರ್ ಎನ್‌ಕೌಂಟರ್
ರೋಗಿಗೆ ಬುಧವಾರವಷ್ಟೇ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಪಾಸಿಟಿವ್ ಅಂತಾ ಗೊತ್ತಾದ ತಕ್ಷಣವೇ ರೋಗಿಯನ್ನು ಕೋವಿಡ್ ವಾರ್ಡ್‌ಗೆ ಶಿಫ್ಟ್ ಮಾಡಲಾಗಿತ್ತು. ಇವರು ವಯೋಸಹಜ ಕಾಯಿಲೆಯಿಂದಲೂ ಬಳಲುತ್ತಿದ್ದರು. ತಡರಾತ್ರಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ರೋಗಿಯ ಕುಟುಂಬಸ್ಥರು ಕೋವಿಡ್ ನಿಯಮಾವಳಿಯ ಪ್ರಕಾರ ರಾತ್ರಿಯೇ ಅಂತ್ಯಸಂಸ್ಕಾರ ಮಾಡಿದ್ದಾರೆ.
ಚಿಕ್ಕೋಡಿ: ವರದಕ್ಷಿಣೆ ಕಿರುಕುಳ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವೀರಕುಮಾರ ಪಾಟೀಲ (Veerkumar Patil) ಪುತ್ರ ಪ್ರೀತಮ್‌ನನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ.
ವೈಷ್ಣವಿ ಹಗವಣೆ ವರದಕ್ಷಿಣೆ ಕಿರುಕುಳ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಾದ ವೈಷ್ಣವಿ ಮಾವ ರಾಜೇಂದ್ರ, ಮೈದುನ ಸುಶೀಲ್‌ಗೆ ಆಶ್ರಯ ಹಾಗೂ ಆರ್ಥಿಕ ಸಹಾಯ ಆರೋಪದಡಿ ಪ್ರೀತಮ್‌ನನ್ನು ಬಂಧಿಸಲಾಗಿದೆ.
ಚಿಕ್ಕೋಡಿ: ಮಹಾರಾಷ್ಟ್ರದ (Maharastra Rain) ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಕೃಷ್ಣಾ ನದಿ (Krishna River) ನೀರಿನ ಪ್ರಮಾಣ ಕ್ಷಣದಿಂದ ಕ್ಷಣಕ್ಕೆ ಏರಿಕೆಯಾಗುತ್ತಿದೆ.
ಸದ್ಯಕ್ಕೆ ಯಾವುದೇ ಕೆಳ ಹಂತದ ಸೇತುವೆ ಮುಳುಗಡೆಯಾಗಿಲ್ಲ. ನೀರು ಜಾಸ್ತಿ ಆಗುತ್ತಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ನದಿಗೆ ಇಳಿಯದಂತೆ ಚಿಕ್ಕೋಡಿ ತಾಲೂಕಾಡಳಿತ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಧಾರಾಕಾರ ಮಳೆ – ಹೇಮಾವತಿ ಡ್ಯಾಂ ಒಳಹರಿವಿನಲ್ಲಿ ಭಾರೀ ಏರಿಕೆ
ನಿರಂತರ ಮಳೆಯಿಂದ ಕೊಲ್ಲಾಪುರದ ಪಂಚಗಂಗಾ ನದಿಯ (Panchganga River) ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಇದರಿಂದಾಗಿ ಪಂಚಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಹಲವು ಬ್ರಿಡ್ಜ್ ಕಮ್ ಬ್ಯಾರೇಜ್ ಮುಳುಗಡೆಯಾಗಿದೆ. ಮುಳುಗಡೆಯಾದ ಸೇತುವೆ ಮೇಲೆ ವಾಹಗಳ ಸಂಚಾರ ಸ್ಥಗಿತಗೊಳಿಸಿದ್ದು ಜಿಲ್ಲಾ ಆಡಳಿತ ಪೋಲಿಸರನ್ನು ನಿಯೋಜಿಸಿದೆ.