Tag: BelagaviControversy

  • ನಮ್ಮ ಮುಖ್ಯಮಂತ್ರಿ ದುರ್ಬಲರು.. ಅಮಿತ್ ಶಾ ಮಾತಿಗೆ ಕಿಮ್ಮತ್ತಿಲ್ಲ- ಸಿದ್ದರಾಮಯ್ಯ ವ್ಯಂಗ್ಯ

    ನಮ್ಮ ಮುಖ್ಯಮಂತ್ರಿ ದುರ್ಬಲರು.. ಅಮಿತ್ ಶಾ ಮಾತಿಗೆ ಕಿಮ್ಮತ್ತಿಲ್ಲ- ಸಿದ್ದರಾಮಯ್ಯ ವ್ಯಂಗ್ಯ

    ಬೆಳಗಾವಿ: ನಮ್ಮ ಮುಖ್ಯಮಂತ್ರಿ (Chief Minister) ದುರ್ಬಲ ಸಿಎಂ. ಕೇಂದ್ರ ಸಚಿವ ಅಮಿತ್ ಶಾ (Amit Shah) ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ವ್ಯಂಗ್ಯವಾಡಿದ್ದಾರೆ.

    ಬೆಳಗಾವಿ ಗಡಿ ಸಂಘರ್ಷಕ್ಕೆ (Belagavi Controversy) ಸಂಬಂಧಿಸಿದಂತೆ ಮಾತನಾಡಿದ ಅವರು, ಕರ್ನಾಟಕದ ಮುಖ್ಯಮಂತ್ರಿ ವೀಕ್ ಸಿಎಂ. ಕೇಂದ್ರ ಗೃಹ ಸಚಿವರು ಕರೆದು ಮಾತಾನಾಡಿದ್ರೂ ಗಲಾಟೆ ಆಗ್ತಿದೆ. ನಮ್ಮ ಸಿಎಂ ಗಟ್ಟಿ ಧ್ವನಿಯಲ್ಲಿ ಹೇಳಬೇಕಿತ್ತು, ಆದರೂ ದೊಡ್ಡ ಹೇಳಿಕೆಯನ್ನೇನು ನೀಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

    ಅಮಿತ್ ಶಾ ಶಾಂತಿ ಕಾಪಾಡಿ ಅಂದರೂ, ಮಹಾರಾಷ್ಟ್ರದವರು (Maharashtra) ಶಾಂತಿ ಕಾಪಾಡ್ತಿಲ್ಲ. ಅಮಿತ್ ಶಾ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಟೀಕಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮಂಡ್ಯ ಜಿಲ್ಲೆ ಜನರಿಗೆ ಅನ್ಯಾಯ – ಶಾಸಕ ದಿನೇಶ್‌ ಗೂಳಿಗೌಡ ಅಸಮಾಧಾನ

    ಕರ್ನಾಟಕ, ಮಹಾರಾಷ್ಟ್ರ, ಕೇಂದ್ರದಲ್ಲೂ ಬಿಜೆಪಿ ಸರ್ಕಾರವೇ (BJP Government) ಇದೆ. ತ್ರಿಬಲ್ ಇಂಜಿನ್ ಸರ್ಕಾರ ಇದ್ದರೂ ಪ್ರಯೋಜನವಾಗ್ತಿಲ್ಲ. ರಾಜ್ಯದ ನೆಲ-ಜಲ-ಭಾಷೆ ವಿಚಾರದಲ್ಲಿ ನಾವೆಲ್ಲರೂ ಒಂದಾಗುತ್ತೇವೆ. ಗಡಿ ವಿಚಾರದಲ್ಲಿ ಮಹಾಜನ್ ವರದಿಯೇ ಅಂತಿಮವಾಗಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನಾನು ಅಕ್ರಮವಾಗಿ ಸಂಪಾದನೆ ಮಾಡಿದ್ರೆ, ಅಷ್ಟೂ ಆಸ್ತಿ ದಾನ ಮಾಡ್ತೀನಿ – ಸಿ.ಟಿ ರವಿ

    ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಎರಡೂ ರಾಜ್ಯಗಳಲ್ಲಿ ಆಕ್ರೋಶ ಭುಗಿಲೆದ್ದಿದೆ. ಗಡಿ ಭಾಗದಲ್ಲಿ ಎರಡೂ ರಾಜ್ಯಗಳ ಬಸ್‌ಗಳಿಗೆ ಮಸಿ ಬಳಿದು ಆಕ್ರೋಶ ಕೂಡ ಹೊರಹಾಕಲಾಗಿತ್ತು. ವಿವಾದ ಉಲ್ಬಣವಾಗುತ್ತಿರುವುದನ್ನು ಅರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಎರಡೂ ರಾಜ್ಯಗಳ ಸಿಎಂ ಜೊತೆ ಸಭೆ ನಡೆಸಲಾಯಿತು. ಆದರೆ ಯಾವುದಕ್ಕೂ ಕ್ಯಾರೆ ಎನ್ನದ ಎಂಇಎಸ್ ಪುಂಡರು ಕರ್ನಾಟಕ ಗಡಿ ಪ್ರವೇಶಿಸಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ತಡೆದು ಕ್ರಮ ಜರುಗಿಸಿದ್ದಾರೆ. ಈ ಬೆನ್ನಲ್ಲೇ ಶಿವಸೇನಾ ಸಂಸದ ಸಂಜಯ್ ರಾವತ್ `ಚೀನಾ, ಭಾರತದ ಗಡಿ ನುಗ್ಗಿದಂತೆ ನಾವು ಕರ್ನಾಟಕ್ಕೆ ನುಗ್ಗುತ್ತೇವೆ ಎಂದು ನೀಡಿರುವ ಹೇಳಿಕೆ’ ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಗಡಿ ಜಿಲ್ಲೆಗಳ 1,800 ಗ್ರಾಪಂ ಅಭಿವೃದ್ಧಿಗೆ ವಿಶೇಷ ಯೋಜನೆ – ಬೊಮ್ಮಾಯಿ ಭರವಸೆ

    ಗಡಿ ಜಿಲ್ಲೆಗಳ 1,800 ಗ್ರಾಪಂ ಅಭಿವೃದ್ಧಿಗೆ ವಿಶೇಷ ಯೋಜನೆ – ಬೊಮ್ಮಾಯಿ ಭರವಸೆ

    ಬೆಳಗಾವಿ: ಕನ್ನಡಿಗರ ಅಭಿವೃದ್ಧಿ ಮತ್ತು ರಕ್ಷಣೆ ಸರ್ಕಾರದ ಜವಾಬ್ದಾರಿಯಾಗಿದೆ. ಅದಕ್ಕಾಗಿ ರಾಜ್ಯದ ಗಡಿಭಾಗದಲ್ಲಿರುವ ಜಿಲ್ಲೆಗಳ 1,800 ಗ್ರಾಮ ಪಂಚಾಯತಿ (Gram Panchayat) ಅಭಿವೃದ್ಧಿಪಡಿಸುವ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಭರವಸೆ ನೀಡಿದ್ದಾರೆ.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಸಂಪನ್ಮೂಲ ಇಲಾಖೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ, ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ರಾಮದುರ್ಗ ತಾಲೂಕಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂದಾಜು 671.28 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. ಇದನ್ನೂ ಓದಿ: ಐಪಿಎಲ್‍ಗೆ ನಿವೃತ್ತಿ ಘೋಷಿಸಿದ ಬ್ರಾವೋ – ಚೆನ್ನೈ ತಂಡದಲ್ಲಿ ಮುಂದುವರಿಕೆ

    ಸರ್ಕಾರ (Government) ಜನಪ್ರಿಯವಾದರೆ ಸಾಲದು, ಜನಪರವಾಗಬೇಕು. ಆಗ ಮಾತ್ರ ಕಟ್ಟಕಡೆಯ ಗ್ರಾಮಕ್ಕೂ ಅಭಿವೃದ್ಧಿ ಯೋಜನೆಗಳು ತಲುಪುತ್ತವೆ. ನಮ್ಮ ಸರ್ಕಾರ ಸಮಗ್ರ ಕರ್ನಾಟಕದ ಅಭಿವೃದ್ಧಿ ಹೆಸರಿನಲ್ಲಿ ಕೆಲಸ ಮಾಡುತ್ತಿವೆ. ಮಹಾರಾಷ್ಟ್ರ (Maharashtra), ತಮಿಳುನಾಡು (Tamil Nadu), ಗೋವಾ ಹಾಗೂ ತೆಲಂಗಾಣ ರಾಜ್ಯದ ಗಡಿಭಾಗದಲ್ಲಿರುವ ಜಿಲ್ಲೆಗಳಲ್ಲಿ 1,800 ಗ್ರಾಮ ಪಂಚಾಯತಿ ಅಭಿವೃದ್ಧಿಪಡಿಸುವ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಅದೇ ರೀತಿ ರಸ್ತೆಗಳ ಸುಧಾರಣೆಗೆ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಜನಾರ್ದನ ರೆಡ್ಡಿ ಮೊಮ್ಮಗಳ ನಾಮಕರಣ ಸಮಾರಂಭದಲ್ಲಿ ಬಿಎಸ್‌ವೈ ಭಾಗಿ

    ಗಡಿಭಾಗದ ಶಾಲೆಗಳ ಅಭಿವೃದ್ಧಿಗೆ 100 ಕೋಟಿ:
    ನಮ್ಮ ಸರ್ಕಾರ ಗಡಿಭಾಗದ ಶಾಲೆಗಳ (Schools) ಅಭಿವೃದ್ಧಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಪ್ರಸಕ್ತ ವರ್ಷದಲ್ಲೇ 100 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಿದೆ. ಗೋವಾದಲ್ಲಿ 10 ಕೋಟಿ ರೂಪಾಯಿ ವೆಚ್ಚದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ ಮಾಡಿದೆ. ಜೊತೆಗೆ ಸೊಲ್ಲಾಪುರ ಹಾಗೂ ಕಾಸರಗೂಡಿನಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ತಲಾ 10 ಕೋಟಿ ರೂ. ಸಹ ನೀಡಲಿದೆ ಎಂದು ಭರವಸೆ ನೀಡಿದರು.

    ತಡೆಗೋಡೆ ನಿರ್ಮಾಣ- ಕೆರೆಗಳಿಗೆ ನೀರು:
    ರಾಮದುರ್ಗ ತಾಲ್ಲೂಕಿನ ಕೆಲ ಗ್ರಾಮಗಳು ಪದೇ ಪದೆ ಪ್ರವಾಹಕ್ಕೆ ಸಿಕ್ಕಿ ನಲುಗುತ್ತಿವೆ. ಆದ್ದರಿಂದ ಮಲಪ್ರಭಾ ನದಿತೀರದಲ್ಲಿ ತಡೆಗೋಡೆ ನಿರ್ಮಿಸಲು ಸರ್ಕಾರ ಮುಂದಾಗಿದೆ. ಏತ ನೀರಾವರಿಯಿಂದ ವಂಚಿತಗೊಂಡಿರುವ 19 ಗ್ರಾಮಗಳ ಕೆರೆ ತುಂಬಿಸುವ ಯೋಜನೆ ಜಾರಿಗೆ ತರಬೇಕು ಎಂದು ಶಾಸಕ ಮಹಾದೇವಪ್ಪ ಯಾದವಾಡ ಅವರು ನಿರಂತರ ಒತ್ತಡ ತಂದಿದ್ದಾರೆ. ಕ್ಷೇತ್ರದ ಬಗ್ಗೆ ಅವರ ಕಳಕಳಿಯನ್ನು ಅರಿತುಕೊಂಡು ಅವರ ಒತ್ತಾಯದಂತೆ 19 ಕೆರೆಗಳನ್ನು ತುಂಬಿಸುವ ಯೋಜನೆಗೆ ಕೂಡಲೇ ಡಿಪಿಆರ್ ತಯಾರಿಸಿ ಮುಂದಿನ ಬಜೆಟ್ ನಲ್ಲಿ ಅನುದಾನ ಮೀಸಲಿಡುತ್ತೇನೆ ಎಂದು ಸಿಎಂ ಘೋಷಿಸಿದರು.

    600 ಕೋಟಿ ಶಿಷ್ಯ ವೇತನ:
    ರಾಜ್ಯದ 10 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ 600 ಕೋಟಿ ರೂಪಾಯಿಗಿಂತಲೂ ಅಧಿಕ ಶಿಷ್ಯವೇತನವನ್ನು ರೈತನಿಧಿ ಯೋಜನೆ ಮೂಲಕ ಒದಗಿಸಲಾಗಿದೆ. ಇದೇ ರೀತಿ ಕೃಷಿ ಕೂಲಿಕಾರರು, ಮೀನುಗಾರರು, ಚಾಲಕರ ಮಕ್ಕಳಿಗೂ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸಲಾಗಿದೆ ಎಂದರು.

    Live Tv
    [brid partner=56869869 player=32851 video=960834 autoplay=true]