Tag: Belgaum Session

  • ಸರ್ಕಾರಿ ಆಸ್ಪತ್ರೆಗೆ ಹೋಗಬಾರದವ್ವ ಅಂತ ಮಹಿಳೆಯರು ಮಾತಾಡ್ಕೊಳ್ತಿದ್ದಾರೆ – ಆರ್‌. ಅಶೋಕ್‌

    ಸರ್ಕಾರಿ ಆಸ್ಪತ್ರೆಗೆ ಹೋಗಬಾರದವ್ವ ಅಂತ ಮಹಿಳೆಯರು ಮಾತಾಡ್ಕೊಳ್ತಿದ್ದಾರೆ – ಆರ್‌. ಅಶೋಕ್‌

    – ಬಾಣಂತಿಯರ ಸಾವು, ಮೆಡಿಕಲ್ ಮಾಫಿಯಾ ವಿಚಾರ ಚರ್ಚೆ
    – ಸದನದಲ್ಲಿ ಗದ್ದಲ, ಕೋಲಾಹಲ

    ಬೆಂಗಳೂರು/ಬೆಳಗಾವಿ: ಬಾಣಂತಿಯರ ಸಾವು (Maternal Deaths) ಕರ್ನಾಟಕವನ್ನೇ ಬೆಚ್ಚಿ ಬೀಳಿಸುವಂತಹ ಘಟನೆಯಾಗಿದೆ. ಇನ್ಮುಂದೆ ಸರ್ಕಾರಿ ಆಸ್ಪತ್ರೆಗೆ ಹೋಗಬಾರದವ್ವ ಅಂತ ಮಹಿಳೆಯರು ಮಾತಾಡ್ಕೊಳ್ತಿದ್ದಾರೆ. 50% ಮಹಿಳೆಯರು ಸರ್ಕಾರಿ ಆಸ್ಪತ್ರೆಗೆ ಹೋಗದೇ ಖಾಸಗಿ ಆಸ್ಪತ್ರೆಗೆ ಹೋಗ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಆರೋಪಿಸಿದರು.

    ವಿಧಾನಸಭೆ ಸದನದಲ್ಲಿ ಬಾಣಂತಿಯರ ಸಾವು, ಮೆಡಿಕಲ್ ಮಾಫಿಯಾ (Medical Mafia) ವಿಚಾರವಾಗಿ ಚರ್ಚೆ ನಡೆಯಿತು. ನಿಯಮ 69 ಅಡಿಯಲ್ಲಿ ನಡೆದ ಚರ್ಚೆಯಲ್ಲಿ ವಿಪಕ್ಷ ನಾಯಕ ಆರ್.‌ ಅಶೋಕ್‌ ಮಾತನಾಡಿದರು. ಇದನ್ನೂ ಓದಿ: ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ನಡುವೆ ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ

    ಬಾಣಂತಿಯರ ಸಾವು ಪ್ರಕರಣ ಕರ್ನಾಟಕವನ್ನೇ ಬೆಚ್ಚಿ ಬೀಳಿಸುವ ಘಟನೆಯಾಗಿದೆ. ಬಳ್ಳಾರಿ ಮಾತ್ರವಲ್ಲ ರಾಯಚೂರು, ಬೆಳಗಾವಿ, ಚಿತ್ರದುರ್ಗದಲ್ಲೂ ಬಾಣಂತಿಯರ ಸಾವಾಗಿದೆ. ಆರೋಗ್ಯ ಇಲಾಖೆ ರೋಗ ಪೀಡಿತ ಇಲಾಖೆ ಆಗಿದೆ. ಘಟನೆ ಆದ 6 ದಿನದ ಬಳಿಕ ಸಚಿವರು ಜಿಲ್ಲೆಗೆ ಹೋಗಿದ್ದಾರೆ. ವೈದ್ಯರು ತಪ್ಪು ಒಪ್ಪಿಕೊಳ್ಳುತ್ತಿಲ್ಲ, ಡ್ರಗ್ ಕಂಟ್ರೋಲರ್‌ನನ್ನು ಬಲಿಪಶು ಮಾಡಲಾಗಿದೆ ಎಂದು ದೂರಿದರಲ್ಲದೇ ಒಂದೆಡೆ ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ಜೋರಾಗಿದೆ. ಆರೋಗ್ಯ ಇಲಾಖೆ ಸಕ್ರಿಯವಾಗಿ ಕೆಲಸ ಮಾಡುತ್ತಿಲ್ಲ. ವಯನಾಡ್‌ನಲ್ಲಿ ಆನೆ ತುಳಿತ ಪ್ರಕರಣಕ್ಕೆ 15 ಲಕ್ಷ ಪರಿಹಾರವನ್ನು ರಾಜ್ಯ ಸರ್ಕಾರ ನೀಡಿದ್ದರು. ಆದರೆ ಬಾಣಂತಿಯರ ಸಾವಿಗೆ 2 ಲಕ್ಷ ಪರಿಹಾರ ಕೊಡಲಾಗಿದೆ ಎಂದು ಆರೋಪಿಸಿದರು.

    ಮೃತಪಟ್ಟ ಮಹಿಳೆಯರನ್ನು (ಬಾಣಂತಿಯರು) ನೋಡಿದರೆ ನೋವಾಗುತ್ತೆ. ಸರ್ಕಾರಿ ಆಸ್ಪತ್ರೆಗೆ ಹೋಗಬಾರದವ್ವ ಅಂತ ಮಹಿಳೆಯರು ಮಾತಾಡ್ಕೊಳ್ತಿದ್ದಾರೆ. 50% ಮಹಿಳೆಯರು ಸರ್ಕಾರಿ ಆಸ್ಪತ್ರೆಗೆ ಹೋಗ್ತಿಲ್ಲ, ಖಾಸಗಿ ಆಸ್ಪತ್ರೆಗೆ ಹೋಗ್ತಿದ್ದಾರೆ ಎಂದರು. ಈ ವೇಳೆ ಅಶೋಕ್ ಮಾತಿಗೆ ಶಾಸಕ ಕೋನರೆಡ್ಡಿ ಆಕ್ಷೇಪ ವ್ಯಕ್ತಪಡಿಸಿದರು. ವಿಪಕ್ಷ ನಾಯಕರಾಗಿ ಸರ್ಕಾರಿ ಆಸ್ಪತ್ರೆಗೆ ಹೋಗಬೇಡಿ ಅಂತ ಸಂದೇಶ ಕೊಡ್ತಿದ್ದೀರಾ? ಜನರಿಗೆ ಏನು ಸಂದೇಶ ಹೋಗುತ್ತೆ? ಒಳ್ಳೆಯ ಸಲಹೆ ಕೊಡಿ. ಸರ್ಕಾರ ಆಸ್ಪತ್ರೆಗಳ ಪರಿಸ್ಥಿತಿ ಉತ್ತಮಗೊಳಿಸಿದೆ, ಸರಿಯಾಗಿ ಮಾತಾಡಿ. ಸರ್ಕಾರಿ ಆಸ್ಪತ್ರೆ, ವೈದ್ಯರ ಮೇಲೆ ಕೆಟ್ಟ ಭಾವನೆ ಬರುವಂತೆ ಮಾತನಾಡಬೇಡಿ ಎಂದರು. ಈ ವೇಳೆ ಸದನದಲ್ಲಿ ಗದ್ದಲ ಕೋಲಾಹಲ ಏರ್ಪಟ್ಟಿತು.

    ಮುಂದುವರಿದು ಮಾತನಾಡಿದ ಅಶೋಕ್‌, ಅವಧಿ ಮೀರಿ 6 ತಿಂಗಳು ಮುಗಿದಿರೋ ಔಷಧಗಳ ಬಳಕೆ ಆಗಿದೆ. ಇದರ ಬಗ್ಗೆ ಡ್ರಗ್ ಕಂಟ್ರೋಲ್ ಬೋರ್ಡ್ ಹೇಳಿದೆ. ಇಂತ ಔಷಧ ಬಳಸದಂತೆ ಸೂಚಿಸಿದೆ, ಒಂದು ವೇಳೆ ಪೂರೈಸಿದ್ದರೆ ಯೂಸ್ ಮಾಡಬೇಡಿ ಎಂದಿದೆ. ಹಾಗಿದ್ದರೂ ಯೂಸ್ ಮಾಡಿದ್ದು ಸರಿಯೇ? ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: 7 ವಾರಗಳ ಬಳಿಕ ಸರ್ಜರಿ ಮಾಡಿಸದೇ ದರ್ಶನ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಇದಕ್ಕೆ ಉತ್ತರಿಸಿದ ಸಚಿವ ದಿನೇಶ್‌ ಗುಂಡೂರಾವ್‌, ನಾವು ಈ ಔಷಧವನ್ನ ಸ್ಟಾಪ್ ಮಾಡಿದ್ದೆವು. ಕಂಪನಿಯನ್ನ ಬ್ಲಾಕ್ ಲಿಸ್‌ಗೆ ಹಾಕಿದ್ದೆವು. ಅವರು ಕೋರ್ಟ್‌ಗೆ ಹೋಗಿ ಸ್ಟೇ ತಂದ್ರು, ಸೆಂಟ್ರಲ್ ಡ್ರಗ್ ಕಮೀಷನ್ ಐವಿ ದ್ರಾವಣ ಸರಿಯಿದೆ ಅಂದಿತ್ತು. ಹೀಗಾದಾಗ ನಾವೇನು ಮಾಡಬೇಕು? ಎಂದು ಅಶೋಕ್ ಆರೋಪಕ್ಕೆ ತಿರುಗೇಟು ನೀಡಿದರು.

    ಮಾತು ಮುಂದುವರಿಸಿದ ಆರ್‌. ಅಶೋಕ್‌, ನಕಲಿ ಔಷಧ ಪೂರೈಸುವ ಕಂಪನಿಗಳಿಗೆ ಈ ಸದನದಿಂದ ಸ್ಟ್ರಾಂಗ್ ಸಂದೇಶ ರವಾನೆ ಆಗಬೇಕು. ಹಾಲಿ ಜಡ್ಜ್ ನೇತೃತ್ವದಲ್ಲಿ ಬಾಣಂತಿಯರ ಸಾವು ಪ್ರಕರಣದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಮಂಡ್ಯದಲ್ಲೊಂದು ದುರಂತ ಪ್ರೇಮ ಕಥೆ | ಲವರ್‌ಗಾಗಿ ನದಿಗೆ ಹಾರಿದ ಗೃಹಿಣಿ – ಪ್ರಿಯಕರ ನೇಣಿಗೆ ಶರಣು

  • ಬೀಫ್ ರಫ್ತಿನಲ್ಲಿ ದೇಶ ಮುಂಚೂಣಿಯಲ್ಲಿದೆ, ತಾಕತ್ತಿದ್ದರೆ ಈಶ್ವರಪ್ಪ ತಡೆಯಲಿ: ಉಗ್ರಪ್ಪ ಸವಾಲು

    ಬೀಫ್ ರಫ್ತಿನಲ್ಲಿ ದೇಶ ಮುಂಚೂಣಿಯಲ್ಲಿದೆ, ತಾಕತ್ತಿದ್ದರೆ ಈಶ್ವರಪ್ಪ ತಡೆಯಲಿ: ಉಗ್ರಪ್ಪ ಸವಾಲು

    ಬೆಂಗಳೂರು: ಬೀಫ್(ದನದ ಮಾಂಸ) ರಫ್ತಿನಲ್ಲಿ ಭಾರತ ಮುಂಚೂಣಿಯಲ್ಲಿದ್ದು, ಈಶ್ವರಪ್ಪನವಗೆ ಧಮ್ಮು, ತಾಕತ್ತು ಇದ್ದರೆ ದೇಶದ ಬೀಫ್ ರಫ್ತನ್ನು ತಡೆಯಲಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪನವರಿಗೆ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಸವಾಲು ಹಾಕಿದ್ದಾರೆ.

    ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯನವರ ಬಗ್ಗೆ ಉಡಾಫೆಯಾಗಿ ಮಾತನಾಡುವುದನ್ನು ಬಿಡಬೇಕು ಮಿಸ್ಟರ್ ಈಶ್ವರಪ್ಪ. ನಿನ್ನೆಯಷ್ಟೇ ಈಶ್ವರಪ್ಪನವರು ಬಿಜೆಪಿಗೆ ಮತ ಹಾಕದವರು ಪಾಕ್ ಪರ ಇರುತ್ತಾರೆ ಎಂದು ಹೇಳಿಕೆ ನೀಡಿದ್ದರು ಇದಕ್ಕೆ ಇಂದು ಉಗ್ರಪ್ಪ ತಿರುಗೇಟು ನೀಡಿದ್ದಾರೆ.

    ಹಿಂದಿ ಹೇರಿಕೆ ಬಗ್ಗೆ ಅಮಿತ್ ಶಾ ಮಾತನಾಡಿದ್ದಾರೆ. ದೇಶದಲ್ಲಿ ಹಲವು ಭಾಷೆಗಳಿವೆ. ಗುಜರಾತಿ, ಕನ್ನಡ, ಮಲೆಯಾಳಿ, ತಮಿಳು, ತೆಲುಗು, ಅಸ್ಸಾಮಿ, ಪಂಜಾಬಿ ಸೇರಿ 22 ಭಾಷೆಗಳಿವೆ. ನಿಮ್ಮ ಗುಜರಾತಿ ಕೂಡ ಪ್ರಾಂತೀಯ ಭಾಷೆ. ಇದನ್ನು ನೋಡಿಯೂ ನೀವು ಹಿಂದಿ ಹೇರಿಕೆಗೆ ಹೊರಟಿದ್ದೇಕೆ, ವಿವಿಧತೆಯಲ್ಲಿ ಏಕತೆಯನ್ನು ಮುರಿಯೋಕೆ ನೋಡುತ್ತಿದ್ದೀರಾ, ಸಂವಿಧಾನದ ಬಗ್ಗೆ ನಿಮಗೆ ಗೌರವವಿದ್ದರೆ ಈ ನಿರ್ಧಾರವನ್ನು ಕೈಬಿಡಿ ವಾಗ್ದಾಳಿ ನಡೆಸಿದ್ದಾರೆ.

    ರಾಜ್ಯ ಮತ್ತು ಕೇಂದ್ರದ ಬಿಜೆಪಿ ನಾಯಕರಿಗೆ ಮನುಷ್ಯತ್ವ ಇಲ್ಲ. ನೆರೆ ವಿಚಾರದಲ್ಲಿ ಒಂದು ರೂಪಾಯಿ ಪರಿಹಾರ ಬಿಡುಗಡೆ ಮಾಡಲಿಲ್ಲ. ಈಶ್ವರಪ್ಪ, ಮಾಧುಸ್ವಾಮಿ, ಲಕ್ಷ್ಮಣ ಸವದಿ ಬಳಸಿರುವ ಪದಗಳು ಅಧಿಕಾರದ ಮದ ನೆತ್ತಿಗೇರಿರುವುದನ್ನು ಸಾಬೀತುಪಡಿಸುತ್ತವೆ. ನಾನು ನೀಲಿ ಚಿತ್ರ ನೋಡಿದ್ದೇನಷ್ಟೇ. ಕಾಂಗ್ರೆಸ್ ಅವರು ನೀಲಿಚಿತ್ರ ಮಾಡುತ್ತಾರೆ ಎಂದು ಸವದಿ ಹೇಳಿದ್ದಾರೆ. ಯಾರು ಮಾಡುತ್ತಿದ್ದಾರೆ ಎಂದು ಬಹಿರಂಗ ಪಡಿಸಲಿ. ಒಬ್ಬ ಉನ್ನತ ಹುದ್ದೆಯಲ್ಲಿ ಇರುವವರಿಗೆ ಈ ರೀತಿ ಮಾತು ಜಾರಬಾರದು ಎಂದು ಎಚ್ಚರಿಸಿದ್ದಾರೆ.

    ಬೆಳಗಾವಿಯಲ್ಲಿ ಅಧಿವೇಶನ ನಡೆಸಲೇ ಬೇಕು. ಅಲ್ಲಿ ಅಧಿವೇಶನ ನಡೆಸದಿದ್ದರೆ ಆ ಭಾಗದ ಜನರಿಗೆ ಸರ್ಕಾರ ಮೋಸ ಮಾಡಿದಂತೆ. ಅಲ್ಲದೆ, ಅನ್ಯಾಯ ಮಾಡಿದಂತೆ. ಇದು ಬಿಜೆಪಿಗರ ಮನಸ್ಥಿತಿಯನ್ನು ತೋರಿಸುತ್ತದೆ. ಅಲ್ಲದೆ, ಎಸ್‍ಇಪಿ, ಟಿಎಸ್‍ಪಿ ಹಣವನ್ನು ನೆರೆ ಪರಿಹಾರಕ್ಕೆ ಬಳಸಿಕೊಳ್ಳಲು ಸರ್ಕಾರ ತೀರ್ಮಾನಿಸಿದೆ. ಶೋಷಿತ ಜನರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಡೈವರ್ಟ್ ಮಾಡಲು ಹೊರಟಿರುವುದು ಸರಿಯಲ್ಲ. ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟು ಹೋಗಿದೆ. ಅತ್ಯಾಚಾರ ಸಂತ್ರಸ್ತರಿಗೆ, ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಲು ಸಹ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

  • ಪರಿಷತ್‍ನಲ್ಲಿ ಕಣ್ಣೀರಿಟ್ಟ ರಮೇಶ್ ಕುಮಾರ್: ಪರಿಶೀಲನಾ ಸಮಿತಿಯ ವರದಿಯಲ್ಲಿ ಏನಿದೆ?

    ಪರಿಷತ್‍ನಲ್ಲಿ ಕಣ್ಣೀರಿಟ್ಟ ರಮೇಶ್ ಕುಮಾರ್: ಪರಿಶೀಲನಾ ಸಮಿತಿಯ ವರದಿಯಲ್ಲಿ ಏನಿದೆ?

    ಬೆಳಗಾವಿ: ವೈದ್ಯರ ಕೆಂಗಣ್ಣಿಗೆ ಗುರಿಯಾಗಿರುವ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ಮಸೂದೆಯನ್ನು ಆರೋಗ್ಯ ಸಚಿವ ರಮೇಶ್ ಕುಮಾರ್ ಸಮರ್ಥಿಸಿಕೊಂಡಿದ್ದಾರೆ.

    ಪರಿಷತ್‍ನಲ್ಲಿ ಹೇಳಿಕೆ ನೀಡಿದ ರಮೇಶ್ ಕುಮಾರ್, ವಿಧೇಯಕದ ಬಗ್ಗೆ ಭಾವುಕರಾಗಿ ಮಾತನಾಡಿ ಕಣ್ಣೀರಿಟ್ಟರು. ರೋಗಿಗಳ ಸಾವಿನಿಂದ ಕಳೆದ ರಾತ್ರಿ ನಾನು ನಿದ್ರೆಯೇ ಮಾಡಿಲ್ಲ ಎಂದು ಪರಿತಪಿಸಿದರು.

    ಈಶ್ವರಪ್ಪ ನನ್ನ ಕೊಲೆಗುಡುಕ ಅಂತ ಹೇಳಿದ್ದಾರೆ. ನಾನು ಎಷ್ಟು ಕೊಲೆ ಮಾಡಿದ್ದೇನೆ. ನನ್ನ ವಿರುದ್ಧ ಎಷ್ಟು ಕೇಸು ದಾಖಲಾಗಿದೆ ಅನ್ನೋದನ್ನು ತಿಳಿಸಿ ಅಂತ ತಿರುಗೇಟು ನೀಡಿದರು. ವಿದೇಶದಲ್ಲಿರೋ ನನ್ನ ಮಗ ನಿನ್ನೆ ರಾತ್ರಿ ದೂರವಾಣಿ ಕರೆ ಮಾಡಿ ನಿಮ್ಮಿಂದ ನಾನು ಬದುಕಲು ಸಾಧ್ಯವಾಗುತ್ತಿಲ್ಲ. ನಿನ್ನ ದಾರಿ ನೀನು ನೋಡಿಕೋ ಅಂತ ಹೇಳಿದ ಅಂತ ರಮೇಶ್ ಕುಮಾರ್ ಕಣ್ಣೀರು ಸುರಿಸಿದ್ರು.

    ನಾನು ಶಿರಡಿ ಸತ್ಯಬಾಬಾ ಭಕ್ತ. ಬೆಂಗಳೂರು ವೈಟ್ ಫೀಲ್ಡ್ ನ ಆಸ್ಪತ್ರೆಯಲ್ಲಿ ಉಚಿತವಾಗಿ ಚಿಕಿತ್ಸೆ ನೀಡುತ್ತಾರೆ. ಅಲ್ಲಿನ ಸ್ವಾಮೀಜಿ ಒಬ್ಬರು ನಾನೇ ಉಚಿತವಾಗಿ ಚಿಕಿತ್ಸೆ ನೀಡುವಾಗ ನಿಮಗೇನು ಆಗಿದೆ ಎಂದು ಹಿಂದೆ ನನ್ನನ್ನು ಪ್ರಶ್ನೆ ಮಾಡಿದ್ದರು. ಇದರಿಂದ ನಾನು ಪ್ರಭಾವಿತನಾಗಿ ತಿದ್ದುಪಡಿ ಮಸೂದೆಯನ್ನು ತಂದಿದ್ದೇನೆ. ನಾನು ದೇವರಾಜ್ ಅರಸರ ಗರಡಿಯಲ್ಲಿ ಬೆಳೆದಿದ್ದೇನೆ. ಅವರು ಕೆಲ ಆದರ್ಶಗಳು ನನ್ನಲ್ಲೇ ಬಿಟ್ಟು ಹೋಗಿದ್ದಾರೆ. ಅವರ ಹಾದಿಯಲ್ಲೆ ನಾನು ನಡೆಯುತ್ತಿದ್ದೇನೆ ಎಂದು ಭಾವುಕರಾಗಿ ಮಾತನಾಡಿದರು.

    ಮೂಲಗಳ ಪ್ರಕಾರ, ಮಸೂದೆ ಮಂಡನೆಗೆ ಸಂಪುಟದ ಬಹುತೇಕ ಸಚಿವರು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಮಸೂದೆ ಮಂಡನೆಯಾಗದೇ ಇದ್ದರೆ ರಾಜೀನಾಮೆ ನೀಡುವುದಾಗಿ ಸಚಿವ ರಮೇಶ್ ಕುಮಾರ್ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

    ಕಾರಣವಾಗಿರುವ ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ತಿದ್ದುಪಡಿ ಮಸೂದೆಯನ್ನು ಪರಿಶೀಲನೆಯ ಕೆ.ಎನ್. ರಾಜಣ್ಣ ಅಧ್ಯಕ್ಷತೆಯ ಜಂಟಿ ಸದನ ಸಮಿತಿ ತನ್ನ ಪರಿಶೀಲನಾ ವರದಿಯನ್ನ ವಿಧಾನಸಭೆಯಲ್ಲಿ ಮಂಡಿಸಿದೆ. ವರದಿಯಲ್ಲಿ ಖಾಸಗಿ ವೈದ್ಯರಿಗೆ ಸ್ವಲ್ಪ ರಿಲೀಫ್ ಸಿಕ್ಕಿದ್ದು, ಹಿಂದೆ ವಿಧೇಯಕದಲ್ಲಿದ್ದ ಜೈಲು ಶಿಕ್ಷೆಯನ್ನ ಕೈಬಿಡಲಾಗಿದ್ದು, ದಂಡದ ಪ್ರಮಾಣವನ್ನೂ ಇಳಿಕೆ ಮಾಡಲಾಗಿದೆ. ಜೊತೆಗೆ, ಏಕರೂಪ ದರ ತೆಗೆದು ಹಾಕಲಾಗಿದೆ. ಸರ್ಕಾರವೇ ಹಣ ಪಾವತಿಸಲಿದೆ.

    ಪರಿಶೀಲನಾ ಸಮಿತಿಯ ವರದಿಯಲ್ಲಿ ಏನಿದೆ?
    ಖಾಸಗಿ ಆಸ್ಪತ್ರೆಗಳಿಗೆ ವಿಧಿಸಲು ಮುಂದಾಗಿದ್ದ ಏಕರೂಪ ದರ ಇಲ್ಲ. ಸರ್ಕಾರ ನಿಗದಿ ಪಡಿಸಿದ ದರ ಪಟ್ಟಿಯನ್ನು ಖಾಸಗಿ ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು. ಜೈಲು ಶಿಕ್ಷೆ ಇಲ್ಲ. ಬದಲಿಗೆ ದಂಡದ ಮೊತ್ತವನ್ನು 5 ಲಕ್ಷದಿಂದ 1 ಲಕ್ಷ ರೂ.ಗೆ ಇಳಿಸಲಾಗಿದೆ.

    ರೋಗಿ ಸಾವನ್ನಪಿದ್ರೆ ಸಂಬಂಧಿಕರು ಬಾಕಿ ಹಣ ಪಾವತಿ ಮಾಡಲು ವಿಫಲವಾದರೆ ಸರ್ಕಾರವೇ ವಿವಿಧ ಯೋಜನೆಗಳಡಿ ಹಣ ಪಾವತಿಸಬೇಕು. ವೈದ್ಯಕೀಯ ಸಂಸ್ಥೆಗಳು ಆನ್‍ಲೈನ್ ಜತೆಗೆ ಅರ್ಜಿ ಮೂಲಕವೂ ನೋಂದಣಿಗೆ ಅರ್ಜಿ ಸಲ್ಲಿಸಬಹುದು. 90 ದಿನಗಳಲ್ಲಿ ಅರ್ಜಿ ಇತ್ಯರ್ಥ ಆಗಬೇಕು.

    ಖಾಸಗಿ ಆಸ್ಪತ್ರೆಗಳು ಇರುವ ಸ್ಥಳ, ಅವುಗಳ ಗ್ರೇಡ್ ಆಧಾರದ ಮೇಲೆ ವರ್ಗೀಕರಣ ಮಾಡಿ ದಿ ಕ್ಲಿನಿಕಲ್ ಎಸ್ಟಾಬ್ಲಿಷ್‍ಮೆಂಟ್ಸ್ ರೂಲ್ಸ್ 2012ರ ಅನ್ವಯ ದರ ನಿಗದಿ. ದರದ ಬಗ್ಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶವಿದ್ದು, ಸರ್ಕಾರಿ ಆಸ್ಪತ್ರೆಗಳು ಇರುವ ಜಾಗದಿಂದ 200 ಮೀಟರ್ ಒಳಗಡ ವೈದ್ಯಕೀಯ ರೋಗ ಪತ್ತೆ ಪ್ರಯೋಗಾಲಯಗಳು ಇರಬಹುದು.

    5 ವರ್ಷಕ್ಕೆ 1 ಬಾರಿ ನೋಂದಣಿ ನವೀಕರಣ ಮಾಡಿಸಿಕೊಳ್ಳಬೇಕು. ಖಾಸಗಿ ಆಸ್ಪತ್ರೆಗಳ ವಿರುದ್ಧ ದೂರು ಬಗ್ಗೆ ವಿಚಾರಣೆ ನಡೆಸಲು ಕುಂದುಕೊರತೆ ಪರಿಹಾರಗಳ ಸಮಿತಿ ರಚನೆಗೆ ಅಪರ ಜಿಲ್ಲಾಧಿಕಾರಿ ಅಥವಾ ವಿಶೇಷ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚನೆಗೆ ಶಿಫಾರಸು.

  • ಸದನಕ್ಕೆ ಚಕ್ಕರ್, ಉಪ್ಪು ಹುಳಿ ಖಾರಕ್ಕೆ ಅಂಬರೀಶ್ ಹಾಜರ್

    ಸದನಕ್ಕೆ ಚಕ್ಕರ್, ಉಪ್ಪು ಹುಳಿ ಖಾರಕ್ಕೆ ಅಂಬರೀಶ್ ಹಾಜರ್

    ಬೆಂಗಳೂರು: ಬೆಳಗಾವಿಯಲ್ಲಿ ಆಯೋಜನೆಗೊಂಡಿರುವ ವಿಶೇಷ ಅಧಿವೇಶನಕ್ಕೆ ಚಕ್ಕರ್ ಹಾಕಿ ಉಪ್ಪು ಹುಳಿ ಖಾರ ಸಿನಿಮಾದ ಕಾರ್ಯಕ್ರಮಕ್ಕೆ ಮಾಜಿ ವಸತಿ ಸಚಿವ ಅಂಬರೀಶ್ ಹಾಜರಾಗಿದ್ದು ಟೀಕೆಗೆ ಗುರಿಯಾಗಿದೆ.

    ಸೋಮವಾರದಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಆರಂಭವಾಗಿದೆ. ಆದರೆ ನಟ ಅಂಬರೀಶ್ `ಉಪ್ಪು ಹುಳಿ ಖಾರ’ ಚಿತ್ರದ ಟೀಸರ್ ಲಾಂಚ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕುಣಿದು ಕುಪ್ಪಳಿಸಿದ್ದಾರೆ.

    ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ನಡೆದ `ಉಪ್ಪು ಹುಳಿ ಖಾರ’ ಚಿತ್ರದ ಟೀಸರ್ ಲಾಂಚ್ ಮಾಡಲು ಅಂಬರೀಶ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ  ಟೀಸರ್ ಲಾಂಚ್ ಮಾಡಿದ ಅಂಬರೀಶ್ ಉಪ್ಪು ಹುಳಿ ಖಾರ ಚಿತ್ರದ ರೋಮಿಯೋ ಹಾಡಿಗೆ ಸ್ಜೇಜ್ ಮೇಲೆ ಸ್ಟೆಪ್ ಹಾಕಿದರು. ಮಾಲಾಶ್ರೀ ಅಂಬರೀಶ್‍ಗೆ ಲವ್ ಯು ಅಂದ್ರು ಅದಕ್ಕೆ ಅಂಬರೀಶ್ ಮೀಟು ಲವ್ ಎಂದು ಹೇಳಿ ಸ್ಜೇಜ್ ಮೇಲೆ ಮನೋರಂಜನೆ ನೀಡಿದರು.

    ವಿಧಾನಸಭಾ ಸಚಿವಾಲಯದಿಂದ ಸಿಕ್ಕಿದ ಮಾಹಿತಿ ಪ್ರಕಾರ ಸಚಿವ ಸ್ಥಾನ ಕಳೆದುಕೊಂಡ ಮೇಲೆ ಕೇವಲ ನಾಲ್ಕು ದಿನ ಮಾತ್ರ ಕಲಾಪಕ್ಕೆ ಅಂಬರೀಶ್ ಹಾಜರಾಗಿದ್ದಾರೆ. ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಅಂಬರೀಶ್ ಮೇ 2013ರಿಂದ 2016ರ ಜೂನ್ ವರೆಗೆ ವಸತಿ ಸಚಿವರಾಗಿ ಕಾರ್ಯನಿರ್ವಹಿಸಿ ಬಳಿಕ ರಾಜೀನಾಮೆ ನೀಡಿದ್ದರು.

    ಉತ್ತರ ಕರ್ನಾಟಕದ ಸಮಸ್ಯೆ ಪರಿಹಾರಕ್ಕಾಗಿ ಬೆಳಗಾವಿಯಲ್ಲಿ ಅಧಿವೇಶನ ಕರೆಯಲಾಗಿದೆ. ಒಟ್ಟು 225 ಶಾಸಕರ ಪೈಕಿ ಮೊದಲ ದಿನ ಬೆಳಗ್ಗೆ 11 ಗಂಟೆಗೆ ಹಾಜರಾಗಿದ್ದು ಕೇವಲ 20 ಮಂದಿ ಮಾತ್ರ.

    ಕೊನೇ ಪಕ್ಷದ ಇದು ವರ್ಷದ ಕೊನೇ ಅಧಿವೇಶನ. ಚುನಾವಣೆ ಹತ್ತಿರ ಇದೆ. ಜನ ನಮ್ಮ ನೋಡುತ್ತಿರುತ್ತಾರೆ. ಈ ಬಾರಿಯಾದ್ರೂ ನಾವು ಸದನದಲ್ಲಿ ಕಾಣಿಸಿಕೊಳ್ಳೋಣ ಎನ್ನುವ ಭಯವೂ ಶಾಸಕರಿಗೆ ಇಲ್ಲ. ಜವಾಬ್ದಾರಿ ಮೊದಲೇ ಇಲ್ಲದಂತೆ ವರ್ತಿಸಿದ್ದಾರೆ. ಶಾಸಕರ ಹಾಜರಾತಿ ಕಡಿಮೆ ಇದ್ದ ಕಾರಣ ಒಂದೇ ನಿಮಿಷಕ್ಕೆ ಸ್ಪೀಕರ್ ಕೋಳಿವಾಡ ಕಲಾಪವನ್ನು ಮುಂದೂಡಿದ್ದರು.

    10 ದಿನಗಳ ಅಧಿವೇಶನಕ್ಕೆ ಬರೋಬ್ಬರಿ 28 ರಿಂದ 30 ಕೋಟಿ ರೂ. ಖರ್ಚು ಆದರೆ ದಿನಕ್ಕೆ ಎರಡೂವರೆಯಿಂದ ಮೂರು ಕೋಟಿ ರೂ. ವೆಚ್ಚವಾಗುತ್ತದೆ. ಬೆಳಗಾವಿಯಲ್ಲಿ ವಾಸ್ತವ್ಯ ಹೂಡಿರುವ ಶಾಸಕರಿಗೆ 2,500 ರೂ. ಸಾರಿಗೆ ಭತ್ಯೆ ನೀಡಿದರೆ, ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡಿರುವ ಶಾಸಕರಿಗೆ 5 ಸಾವಿರ ರೂ.ಸಾರಿಗೆ ಭತ್ಯೆ ನೀಡಲಾಗುತ್ತದೆ.