Tag: Belgaum

  • ಮಹಾತ್ಮರ ಪುತ್ಥಳಿ ಹಾಳು ಮಾಡಿರುವುದನ್ನು ಸಹಿಸಲು ಸಾಧ್ಯವಿಲ್ಲ: ಬಿಎಸ್‍ವೈ

    ಮಹಾತ್ಮರ ಪುತ್ಥಳಿ ಹಾಳು ಮಾಡಿರುವುದನ್ನು ಸಹಿಸಲು ಸಾಧ್ಯವಿಲ್ಲ: ಬಿಎಸ್‍ವೈ

    ಶಿವಮೊಗ್ಗ: ಮಹಾತ್ಮರ ಪುತ್ಥಳಿ ಹಾಳು ಮಾಡಿರುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದರು.

    ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಉದ್ದೇಶಪೂರ್ವಕವಾಗಿ ಈ ರೀತಿ ಗಲಭೆ ಮಾಡುವ ಪ್ರಯತ್ನ ಮಾಡಿದ್ದಾರೆ. ಮಹಾತ್ಮರ ಪುತ್ಥಳಿ ಹಾಳು ಮಾಡಿರುವುದನ್ನು ಸಹಿಸಲು ಸಾಧ್ಯವಿಲ್ಲ. ನಾಳೆ ವಿಧಾನಮಂಡಲ ಅಧಿವೇಶನದಲ್ಲಿ ಈ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸುತ್ತೇವೆ. ಈಗಾಗಲೇ ಸಿಎಂ ಬೊಮ್ಮಾಯಿ ಕಠಿಣ ಕ್ರಮಕೈಗೊಳ್ಳಲು ಗೃಹ ಸಚಿವರಿಗೆ ತಿಳಿಸಿದ್ದಾರೆ ಎಂದರು. ಇದನ್ನೂ ಓದಿ: ಸಾವರ್ಕರ್‌ರನ್ನು ಭಾರತದಲ್ಲಿ ಬಿಟ್ಟರೆ ನಾವು ದೇಶ ಬಿಡಬೇಕಾಗುತ್ತೆ ಅನ್ನೋದು ಬ್ರಿಟಿಷರಿಗೆ ಗೊತ್ತಿತ್ತು: ಬೊಮ್ಮಾಯಿ

    ಸುಮಾರು 24 ಜನರನ್ನು ಈಗಾಗಲೇ ಜೈಲಿಗೆ ಕಳುಹಿಸಿದ್ದೇವೆ. ಇನ್ನು ಯಾರು ಯಾರು ಇದರಲ್ಲಿ ಶಾಮೀಲು ಆಗಿದ್ದಾರೋ ಅವರೆಲ್ಲರನ್ನು ಬಂಧಿಸುವ ಕೆಲಸ ಆಗುತ್ತದೆ. ವಿಧಾನ ಮಂಡಲದಲ್ಲಿ ಸಹ ವ್ಯಾಪಕವಾಗಿ ಚರ್ಚೆ ಮಾಡಿ, ಇನ್ನು ಮುಂದೆ ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ಸೂಚಿಸಲಾಗಿದೆ. ಅಪರಾಧಿಗಳು ಯಾರೇ ಇರಲಿ ಶಿಸ್ತಿನ ಕ್ರಮ ಕೈಗೊಳ್ಳಲು ಎಲ್ಲಾ ಪ್ರಯತ್ನ ಮಾಡ್ತೇವೆ ಎಂದು ಭರವಸೆಯನ್ನು ನೀಡಿದರು.

    ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಅವರು, ಸಚಿವ ಸಪುಟದ ವಿಷಯ ನನಗೆ ಗೊತ್ತಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಅವರನ್ನು ಕೇಳಬೇಕು. ನನಗೆ ಗೊತ್ತಿರುವ ಹಾಗೆ ಇದುವರೆಗೆ ಅಂತಹ ಯಾವುದೇ ಸುದ್ದಿ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: 10 ಲಕ್ಷ ರೂ. ವರದಕ್ಷಿಣೆ ಕೇಳಿದ ವರನಿಗೆ ಮದುವೆ ಮನೆಯಲ್ಲೇ ಬಿತ್ತು ಗುಸಾ

    by vijayendra

    ವಿಜಯೇಂದ್ರ ಅವರು ಸಚಿವ ಸಂಪುಟಕ್ಕೆ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇದರ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಇದು ಹೈಕಮಾಂಡ್ ಗೆ, ಮುಖ್ಯಮಂತ್ರಿ ಅವರಿಗೆ ಬಿಟ್ಟಿದ್ದು ಎಂದರು. ಮತಾಂತರ ನಿಷೇಧ ಕಾಯ್ದೆ ಜಾರಿ ವಿಚಾರವಾಗಿ ಮಾತನಾಡಿದ ಅವರು, ಮತಾಂತರ ಕಾಯ್ದೆ ನಿಷೇಧ ಜಾರಿ ವಿಷಯದಲ್ಲಿ ನಮಗೆ ನೂರಕ್ಕೆ ನೂರು ಬಹುಮತ ಸಿಕ್ಕೆ ಸಿಗುತ್ತದೆ. ಮತಾಂತರ ನಿಷೇಧ ಕಾಯ್ದೆ ಅಗತ್ಯ ಇರುವಂತಹದ್ದು, ಅದನ್ನು ಜಾರಿಗೆ ತಂದೇ ತರುತ್ತೇವೆ ಎಂದು ವಿಶ್ವಾಸದ ಮಾತುಗಳನ್ನು ಆಡಿದರು.

  • ಸಾವರ್ಕರ್‌ರನ್ನು ಭಾರತದಲ್ಲಿ ಬಿಟ್ಟರೆ ನಾವು ದೇಶ ಬಿಡಬೇಕಾಗುತ್ತೆ ಅನ್ನೋದು ಬ್ರಿಟಿಷರಿಗೆ ಗೊತ್ತಿತ್ತು: ಬೊಮ್ಮಾಯಿ

    ಸಾವರ್ಕರ್‌ರನ್ನು ಭಾರತದಲ್ಲಿ ಬಿಟ್ಟರೆ ನಾವು ದೇಶ ಬಿಡಬೇಕಾಗುತ್ತೆ ಅನ್ನೋದು ಬ್ರಿಟಿಷರಿಗೆ ಗೊತ್ತಿತ್ತು: ಬೊಮ್ಮಾಯಿ

    ಬೆಂಗಳೂರು: ವೀರ ಸಾವರ್ಕರ್ ಅವರನ್ನು ಭಾರತದಲ್ಲಿ ಬಿಟ್ಟರೆ ನಾವು ದೇಶ ಬಿಡಬೇಕಾಗುತ್ತೆ ಅಂತಾ ಬ್ರಿಟಷರಿಗೆ ಗೊತ್ತಿತ್ತು. ಸಾವರ್ಕರ್ ಬ್ರಿಟಿಷರ ಪಾಲಿಗೆ ನ್ಯೂಕ್ಲಿಯರ್ ಆಗಿದ್ರು. ಹಾಗಾಗಿ ದೇಶದ ಜನರಿಂದ ಬ್ರಿಟಿಷರು ಅವರನ್ನು ದೂರ ಇಟ್ಟರು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

    ಟೌನ್ ಹಾಲ್ ನಲ್ಲಿ ನಡೆದ ವೀರ ಸಾವರ್ಕರ್ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಆಗಮಿಸಿ ಮಾತನಾಡಿದ ಅವರು, ವೀರ ಸಾರ್ವಕರ್ ಅವರ ಈ ಪುಸ್ತಕದ ಟೈಟಲ್‍ನಲ್ಲೇ ಇದೊಂದು ಅಪರೂಪದ ಪುಸ್ತಕ ಅನ್ನೋದು ತಿಳಿಯುತ್ತೆ. ಈ ಪುಸ್ತಕ ಬಿಡುಗಡೆಯಲ್ಲಿ ನಾನು ಭಾಗಿಯಾಗಿರೋದು ನನಗೆ ಹೆಮ್ಮೆ. ವೀರ ಸಾರ್ವಕರ್ ಹೆಸರಿನಲ್ಲಿ ಒಂದು ಶಕ್ತಿ ಇದೆ. ನಾವು ಎಲ್ಲರನ್ನೂ ವೀರರು ಎಂದು ಕರೆಯುವುದಿಲ್ಲ. ಆದರೆ ಸಾವರ್ಕರ್ ಇಡೀ ದೇಶದಲ್ಲಿ ವೈಚಾರಿಕತೆ ಕಿಚ್ಚು ಹಚ್ಚಿ ನಾಗರೀಕತೆ ಹಾಗೂ ಸಂಸ್ಕೃತಿಯ ಕಿಡಿ ಹಚ್ಚಿದ್ರು ಎಂದು ಸ್ಮರಿಸಿಕೊಂಡರು. ಇದನ್ನೂ ಓದಿ: ಶಿಕ್ಷಕರು ಅನಕ್ಷರಸ್ಥ ಬಾಳಲ್ಲಿ ಅಕ್ಷರ ಬೆಳಕು ಮೂಡಿಸಿರಿ: ಅಶೋಕ್ ಸಿಂದಗಿ

    ಸಾವರ್ಕರ್ ಅವರನ್ನ ಸಾಕಷ್ಟು ಜನ ದೂರುತ್ತಾರೆ. ಅಂತವರೆಲ್ಲ ದಯಾಮಾಡಿ ಸಾವರ್ಕರ್ ಇದ್ದ ಜೈಲು ಕೋಣೆಗೆ ಹೋಗಿ ಬನ್ನಿ. ಆಗ ಅವರ ಬಗ್ಗೆ ನಿಮಗಿರುವ ಕೊಳಕು ಮನಸ್ಥಿತಿ ಹೋಗುತ್ತದೆ. ಇತಿಹಾಸವನ್ನು ಸರಿಯಾಗಿ ಓದಿದರೆ ಮಾತ್ರ ಭವಿಷ್ಯವನ್ನ ಕಟ್ಟಲು ಸಾಧ್ಯ ಎಂದು ತಿಳಿಸಿದರು.

    ನಾಗರಿಕತೆಯೇ ಸಂಸ್ಕೃತಿ ಅಲ್ಲ, ನಮ್ಮಲ್ಲಿ ಏನು ಇದೆ ಅದು ನಾಗರಿಕತೆ, ನಾವು ಏನಾಗಿದ್ದೀವಿ ಅನ್ನೋದು ಸಂಸ್ಕೃತಿ. ಸಿಂಧೂ ತಟ್ಟದಲ್ಲಿ ಬೆಳೆದುಬಂದ ಮೌಲ್ಯಗಳೇ ಸಂಸ್ಕೃತಿ. ನಮ್ಮ ಸಂಸ್ಕೃತಿ ಮಾತ್ರ ನಮ್ಮ ಅಂತಃಕರಣವನ್ನು ಜಾಗೃತಿಗೊಳಿಸಲು ಸಾಧ್ಯ ಅನ್ನೊದನ್ನು ಹೇಳೋದೆ ವೀರ ಸಾರ್ವಕರ್ ಪುಸ್ತಕವಾಗಿದೆ. ಕೆಲವು ಧರ್ಮಗಳು ಹಿಂಸೆಯ ನೆಲೆಗಟ್ಟಿನಲ್ಲಿ ಸ್ಥಾಪನೆಯಾಗಿವೆ. ನಮ್ಮ ಧರ್ಮ ಸಂಸ್ಕೃತಿಯ ನೆಲೆಗಟ್ಟಿನಲ್ಲಿ ಸ್ಥಾಪನೆಯಾಗಿದೆ ಎಂದರು.

    ವೈಚಾರಿಕವಾಗಿ ಬಾಬಾ ಸಾಹೇಬರ ಜೊತೆ ಸಾರ್ವಕರ್ ಉತ್ತಮ ಸಂಬಂಧ ಹೊಂದಿದ್ದರು. ಬ್ರಿಟಿಷರು ನಮ್ಮನ್ನ ಒಡೆಯಲಿಕ್ಕೆ ಅಸ್ಪೃಶ್ಯತೆ ಆರಂಭಿಸಿದರು. ಬಳಿಕ ಬಂದ ರಾಜಕಾರಣಿಗಳು ಲಾಭಕ್ಕಾಗಿ ಬಳಸಿಕೊಂಡು ಮುಂದುವರೆಸಿದರು. ಈಗ ಇದೆಲ್ಲ ಬದಲಾಗಬೇಕಿದೆ ಎಂದು ಸಾರಿದರು.

    ಈ ಕಾರ್ಯಕ್ರಮದಲ್ಲಿ ಆದುಚುಂಚನಗಿರಿ ಮಹಾಂಸ್ಥಾನ ಮಠದ ಡಾ. ನಿರ್ಮಲಾನಂದ ಸ್ವಾಮೀಜಿ, ಕೊಳ್ಳೇಗಾಲ ಶಾಸಕ ಎನ್.ಮಹೇಶ್, ಕೃತಿಯ ಲೇಖಕ ಉದಯ ಮಹೂರ್ಕರ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಉಪಸ್ಥಿತರಿದ್ದರು. ಇದನ್ನೂ ಓದಿ: ಎರಡು ವರ್ಷಗಳಲ್ಲಿ ಯಾದಗಿರಿ ಜಿಲ್ಲಾ ಪಂಚಾಯತ್ 57 ನೌಕರರ ವಿರುದ್ಧ ಶಿಸ್ತುಕ್ರಮ

    ಪುಸ್ತಕ ಬಿಡುಗಡೆ ವೇಳೆ ಕನ್ನಡ ಪರ ಸಂಘಟನೆಗಳು ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರಿಂದ ಹೈಡ್ರಾಮ ಸೃಷ್ಟಿಯಾಗಿತ್ತು. ಈ ವೇಳೆ ಟೌನ್ ಹಾಲ್ ಮುಂಭಾಗ ಹಿಂದೂ ಪರ ಕಾರ್ಯಕರ್ತರು ಮತ್ತು ಕನ್ನಡ ಪರ ಸಂಘಟನೆಗಳ ಪರ ವಿರೋಧ ಕೂಗಾಟ ನಡೆಯುತ್ತಿತ್ತು. ಪರಿಣಾಮ ಪೊಲೀಸರು ಈ ಪ್ರತಿಭಟನಕಾರರನ್ನು ವಶಕ್ಕೆ ಪಡೆದುಕೊಂಡರು. ಸಿಎಂ ಬರುವುದಕ್ಕೂ ಮುನ್ನ ಈ ಪ್ರತಿಭಟನೆ ನಡೆದಿತ್ತು.

  • ಕಪ್ಪು ಬಟ್ಟೆ ಮೇಲೆ MES ಎಂದು ಬರೆದು ಚಪ್ಪಲಿ ಏಟು ಕೊಟ್ಟ ರಾಯಣ್ಣನ ಅಭಿಮಾನಿಗಳು

    ಕಪ್ಪು ಬಟ್ಟೆ ಮೇಲೆ MES ಎಂದು ಬರೆದು ಚಪ್ಪಲಿ ಏಟು ಕೊಟ್ಟ ರಾಯಣ್ಣನ ಅಭಿಮಾನಿಗಳು

    ಧಾರವಾಡ: ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಮೆರೆದು ಸಂಗೊಳ್ಳಿ ರಾಯಣ್ಣನ ಮೂರ್ತಿ ಭಗ್ನ ಮಾಡಿದ್ದಕ್ಕೆ ಧಾರವಾಡದಲ್ಲಿ ರಾಯಣ್ಣನ ಅಭಿಮಾನಿಗಳು ಎಂಇಎಸ್ ಎಂದು ಕಪ್ಪು ಬಟ್ಟೆ ಮೇಲೆ ಬರೆದು ಚಪ್ಪಲಿ ಏಟು ಕೊಟ್ಟಿದ್ದಾರೆ.

    ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಎಂಇಎಸ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ರಾಯಣ್ಣನ ಅಭಿಮಾನಿಗಳು, ಕಪ್ಪು ಬಟ್ಟೆ ಮೇಲೆ ಎಂಇಎಸ್ ಎಂದು ಬರೆದು ಚಪ್ಪಲಿಯಿಂದ ಹೊಡೆದರು. ಇದೇ ವೇಳೆ ಎಂಇಎಸ್ ಅನ್ನು ಬ್ಯಾನ್ ಮಾಡಬೇಕು ಎಂದು ಒತ್ತಾಯಿಸಿದರು. ತಕ್ಷಣ ರಾಯಣ್ಣನ ಮೂರ್ತಿ ಭಗ್ನ ಮಾಡಿದವರನ್ನು ಬಂಧಿಸಿ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಮಾಡಿದರು. ಇದನ್ನೂ ಓದಿ: ಬೆಳಗಾವಿಯಲ್ಲಿ MES ಪುಂಡರ ದಾಂಧಲೆ – ರಾತ್ರಿ ಏನೇನು ಮಾಡಿದ್ದಾರೆ?

    ಎಂಇಎಸ್ ಎಂದು ಕಪ್ಪು ಬಟ್ಟೆ ಸುಡುವ ಪ್ರಯತ್ನಕ್ಕೆ ಬಂದಿದ್ದ ಪ್ರತಿಭಟನಾಕಾರರಿಗೆ ಪೊಲೀಸರು ಅವಕಾಶ ನೀಡದ ಹಿನ್ನೆಲೆ ಪ್ರತಿಭಟನಾಕಾರರು ಚಪ್ಪಲಿ ಏಟು ಕೊಟ್ಟರು. ಎಂಇಎಸ್ ಪುಂಡಾಟಿಕೆ ದಿನೇ-ದಿನೇ ಹೆಚ್ಚಾಗುತ್ತಿದ್ದು, ಅವರ ವಿರುದ್ಧ ಸರಿಯಾದ ಕ್ರಮ ತೆಗೆದುಕೊಳ್ಳುವಂತೆ ರಾಯಣ್ಣನ ಅಭಿಮಾನಿಗಳು ಆಗ್ರಹಿಸಿದ್ದಾರೆ. ಈ ಹಿನ್ನೆಲೆ ಎಂಇಎಸ್ ವಿರುದ್ಧ ಸರಿಯಾದ ಕ್ರಮವನ್ನು ತೆಗೆದುಕೊಳ್ಳುವುದಾಗಿ ಭರವಸೆಯನ್ನು ನೀಡಲಾಗಿದೆ.

  • ಕರ್ನಾಟಕದ ಕಾರಿನ ಮೇಲೆ ಶಿವಸೇನೆ ಪುಂಡರಿಂದ ಕಲ್ಲು ತೂರಾಟ

    ಕರ್ನಾಟಕದ ಕಾರಿನ ಮೇಲೆ ಶಿವಸೇನೆ ಪುಂಡರಿಂದ ಕಲ್ಲು ತೂರಾಟ

    ಬೆಳಗಾವಿ: ಕರ್ನಾಟಕದ ಖಾಸಗಿ ವಾಹನ ಮತ್ತು ಅಂಗಡಿಗಳ ಮೇಲೆ ಶಿವಸೇನೆ ಪುಂಡರ ದಾಳಿ ನಡೆಸಿದ ಘಟನೆ ಮಹಾರಾಷ್ಟ್ರ ಸಾಂಗ್ಲಿ ಜಿಲ್ಲೆಯ ಮೀರಜ ಪಟ್ಟಣದಲ್ಲಿ ನಡೆದಿದೆ.

    ಬೆಂಗಳೂರಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಅಪಮಾನ ಮಾಡಿರುವ ಆರೋಪವಾಗಿ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಶಿವಸೇನೆ ಪುಂಡರು ಈ ಕೃತ್ಯವನ್ನು ನಡೆಸುತ್ತಿದ್ದಾರೆ.

    ಮಹಾರಾಷ್ಟçಕ್ಕೆ ಬರುವ ಕರ್ನಾಟಕದ ನಂಬರ್ ಪ್ಲೇಟ್ ಇರುವ ವಾಹನಗಳನ್ನು ತಡೆದು ಅವುಗಳ ಮೇಲೆ ಕಲ್ಲು ತೂರಾಟ ನಡೆಸಿ, ವಾಹನಗಳ ಮೇಲೆ ಜೈ ಮಹಾರಾಷ್ಟ್ರ ಎಂದು ಬರೆದಿದ್ದಾರೆ. ಪೊಲೀಸರ ಎದುರೇ ಕನ್ನಡಿಗರ ವಾಹನವನ್ನು ತಡೆದು ಶಿವಸೇನೆ ಪುಂಡರು ದೌರ್ಜನ್ಯ ನಡೆಸಿದ್ದಾರೆ. ಇದನ್ನೂಓದಿ:  ಬೆಳಗಾವಿಯಲ್ಲಿ MES ಪುಂಡರ ಅಟ್ಟಹಾಸ – ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ, ಬಸ್ ಮೇಲೆ ಕಲ್ಲು ತೂರಾಟ

    ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಘಟನೆಯಲ್ಲಿ 5 ಜನರಿಗೆ ಗಾಯಗಳಾಗಿವೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರೋಲ್ಲ, ಕನ್ನಡಿಗರ ಶಕ್ತಿ ಪ್ರದರ್ಶಿಸುವ ಕಾಲ ಬಂದಿದೆ: ಹೆಚ್‍ಡಿಕೆ

     

  • ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಹಾನಿ ಮಾಡಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ: ಆರಗ ಜ್ಞಾನೇಂದ್ರ

    ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಹಾನಿ ಮಾಡಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ: ಆರಗ ಜ್ಞಾನೇಂದ್ರ

    ಶಿವಮೊಗ್ಗ: ವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಹಾನಿ ಮಾಡಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಒಂದೆರಡು ದಿನದಿಂದ ಬೆಳಗಾವಿಯಲ್ಲಿ ಪುಂಡತನ ಹೆಚ್ಚಾಗುತ್ತಿದ್ದು, ನಿನ್ನೆ ರಾತ್ರಿಯೂ ಗುಂಪು ಸೇರಿ ಸರ್ಕಾರಿ ವಾಹನಗಳಿಗೆ ಬೆಂಕಿ ಇಡುವ ಮೂಲಕ ಶಾಂತಿಯನ್ನು ಕದಡುವ ಕೆಲಸ ಮಾಡಿದ್ದಾರೆ. ಇಂತಹ ಕೆಲಸವನ್ನು ಮಾಡಿದವರು ಯಾರೇ ಆದರೂ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ. ಇನ್ನೊಮ್ಮೆ ಇಂತಹ ಪ್ರಕರಣ ಆಗದಿರುವ ಹಾಗೇ ನೋಡಿಕೊಳ್ಳುತ್ತೇವೆ ಎಂದು ಹೇಳಿದರು. ಇದನ್ನೂಓದಿ:  ಬೆಳಗಾವಿಯಲ್ಲಿ MES ಪುಂಡರ ಅಟ್ಟಹಾಸ – ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ, ಬಸ್ ಮೇಲೆ ಕಲ್ಲು ತೂರಾಟ

    ಸಂಗೊಳ್ಳಿ ರಾಯಣ್ಣ ಹಾಗೂ ಶಿವಾಜಿ ಮಹಾರಾಜ್ ಅವರು ನಮ್ಮೆಲ್ಲರ ಹೆಮ್ಮೆಯ ಪ್ರತೀಕವಾಗಿದ್ದಾರೆ. ಇವರಿಬ್ಬರೂ ಪ್ರತಿಯೊಬ್ಬ ನಾಗರಿಕರೂ ಹೆಮ್ಮೆ ಹಾಗೂ ಗರ್ವದಿಂದ ನೆನಸಿಕೊಳ್ಳುವಂತಹ ಭಾರತೀಯ ಪುತ್ರರು. ಇವರ ಹೆಸರಿನಲ್ಲಿ, ಕೆಲವು ಕಿಡಿಗೇಡಿಗಳು ದುಷ್ಕೃತ್ಯ ನಡೆಸಿ, ಭಾಷೆ ಹಾಗೂ ಸಹೋದರತ್ವ ಬಾಂಧವ್ಯವನ್ನು ಕೆಡಿಸುವಂತಹ ಕೃತ್ಯ ಎಸಗಿರುವುದು ಅಕ್ಷಮ್ಯ ಅಪರಾಧವಾಗಿದೆ. ಜೊತೆಗೆ ಸಂಗೊಳ್ಳಿ ರಾಯಣ್ಣ ರವರ ಪ್ರತಿಮೆಗೆ ಹಾನಿ ಮಾಡಿರುವ ಘಟನೆಯನ್ನು ಖಂಡಿಸುತ್ತೇನೆ ಎಂದರು. ಇದನ್ನೂ ಓದಿ: ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರೋಲ್ಲ, ಕನ್ನಡಿಗರ ಶಕ್ತಿ ಪ್ರದರ್ಶಿಸುವ ಕಾಲ ಬಂದಿದೆ: ಹೆಚ್‍ಡಿಕೆ

    ಘಟನೆಯ ಕುರಿತು ಮಾಹಿತಿಯನ್ನು ಪಡೆದುಕೊಂಡಿದ್ದೇನೆ. ಬೆಂಗಳೂರು ಹಾಗೂ ಬೆಳಗಾವಿ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಎಫ್‌ಐಆರ್ ದಾಖಲಾಗಿದ್ದು, ಕೆಲವರನ್ನು ವಶಕ್ಕೆ ಪಡೆಯಲಾಗಿದೆ. ರಾಜ್ಯದ ಜನತೆ ಶಾಂತಿ ಹಾಗೂ ಸಾಮರಸ್ಯ ಕಾಪಾಡಲು ಸಹಕರಿಸೇಕೆಂದು, ವಿನಂತಿಸುತ್ತೇನೆ ಎಂದು ಮನವಿ ಮಾಡಿದರು. ಇದನ್ನೂ ಓದಿ: MES ಪುಂಡಾಟಿಕೆಯನ್ನು ಖಂಡಿಸಿದ ಸಿಎಂ – 27 ಮಂದಿ ಅರೆಸ್ಟ್

    ರಾಯಣ್ಣ ಮೂರ್ತಿ ಭಂಗ ಪ್ರಕರಣದ ಕುರಿತು ಮಾತನಾಡಿದ ಅವರು, ರಾಯಣ್ಣ ಮೂರ್ತಿ ಭಂಗ ಮಾಡಿದವರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಪ್ರಕರಣ ಸಂಬಂಧ ಕೆಲವರ ವಶ ಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

  • ಕನ್ನಡ ಧ್ವಜ ಸುಟ್ಟ ದ್ರೋಹಿಗಳ ವಿರುದ್ಧ ಆಕ್ರೋಶ: ಪಕ್ಷಬೇಧ ಮರೆತು ಖಂಡನಾ ನಿರ್ಣಯ

    ಕನ್ನಡ ಧ್ವಜ ಸುಟ್ಟ ದ್ರೋಹಿಗಳ ವಿರುದ್ಧ ಆಕ್ರೋಶ: ಪಕ್ಷಬೇಧ ಮರೆತು ಖಂಡನಾ ನಿರ್ಣಯ

    ಬೆಳಗಾವಿ: ಕೊಲ್ಲಾಪುರದಲ್ಲಿ ಎಂಇಎಸ್ ಪುಂಡರು ಕನ್ನಡ ಧ್ವಜ ಸುಟ್ಟ ಪ್ರಕರಣ ಖಂಡಿಸಿ ವಿಧಾನಸಭೆಯಲ್ಲಿ ಇವತ್ತು ಖಂಡನಾ ನಿರ್ಣಯ ಮಂಡಿಸಲಾಯಿತು. ಜೆಡಿಎಸ್ ಶಾಸಕ ಅನ್ನದಾನಿ ಎಂಇಎಸ್ ಪುಂಡರ ಕೃತ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿ ಖಂಡನಾ ನಿರ್ಣಯ ಮಂಡಿಸಿದ್ರು. ಈ ಖಂಡನಾ ನಿರ್ಣಯಕ್ಕೆ ಪಕ್ಷಬೇಧ ಮರೆತು ಸಹಮತ ವ್ಯಕ್ತವಾಯ್ತು.

    ಕನ್ನಡ ಧ್ವಜಕ್ಕೆ ಅಪಮಾನ ಮಾಡಿದ್ದಾರೆ ಎಂದು ಕನ್ನಡ ಧ್ವಜ ಹಿಡಿದು ಶೂನ್ಯವೇಳೆಯಲ್ಲಿ ಶಾಸಕ ಅನ್ನದಾನಿ ಆಕ್ರೋಶ ವ್ಯಕ್ತಪಡಿಸಿದ್ದು, ಇದು ನನ್ನ ತಾಯಿ. ನನ್ನ ತಾಯಿಗೆ ಬೆಂಕಿ ಹಚ್ಚಿದ್ದಾರೆ. ಮಂಗಳವಾರ ಬೆಂಕಿ ಹಚ್ಚಿದ್ದು, ಮಹಾರಾಷ್ಟ್ರ ಸರ್ಕಾರ ಏನು ಮಾಡುತ್ತಿದೆ? ಎರಡು ದಿನ ಆದ್ರೂ ಕ್ರಮ ಕೈಗೊಂಡಿಲ್ಲ. ಕರುನಾಡ ಜನ ಕರುಣಾಮಯಿಗಳು, ಎಂಟು ಜ್ಞಾನಪೀಠ ಪ್ರಶಸ್ತಿ ಪಡೆದ ನಾಡು ನಮ್ಮದು. ಉದ್ದೇಶಪೂರ್ವಕವಾಗಿ ನಮ್ಮನ್ನ ಕೆಣಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ನಿಯಮ 69ರಡಿ ಚರ್ಚೆಗೆ ಅವಕಾಶ ಕೊಡಿ ಎಂದು ಧರಣಿ ಕೂಡ ನಡೆಸಿದ್ರು. ಇದನ್ನೂ ಓದಿ:  ಸರ್ಕಾರದ ಯೋಜನೆಯ ಪ್ರಯೋಜನ ಪಡೆಯಲು ಅಣ್ಣ-ತಂಗಿಯನ್ನೇ ಮದುವೆಯಾದ!

    ಇದೇ ವೇಳೆ ಮಧ್ಯಪ್ರವೇಶ ಮಾಡಿ ಧ್ವನಿಗೂಡಿಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಅನ್ನದಾನಿ ಬಹಳ ಪ್ರಾಮುಖ್ಯ ವಿಷಯ ಪ್ರಸ್ತಾಪಿಸಿದ್ದಾರೆ. ಮಹಾರಾಷ್ಟ್ರ ಪುಂಡರು ಬಾವುಟ ಸುಟ್ಟು ಹಾಕಿದ್ದಾರೆ. ಅವರನ್ನು ಮತಿಹೀನರು ಎಂದು ಕರೆಯಬೇಕಾಗುತ್ತದೆ. ನಾವೆಲ್ಲರೂ ಭಾರತೀಯರು, ಆದರೆ ಭಾಷವಾರು ಪ್ರಾಂತ್ಯವನ್ನಾಗಿ ಮಾಡಿಕೊಂಡಿದ್ದೇವೆ. ಕನ್ನಡ ಬಾವುಟದ ಮೇಲೆ ಭಾವನಾತ್ಮಕ ಸಂಬಂಧ ಇದೆ. ಇದನ್ನು ನಾನು ನಿಜವಾಗಿಯೂ ಖಂಡಿಸುತ್ತೇನೆ. ಇದರಿಂದ ರಾಜ್ಯ-ರಾಜ್ಯಗಳ ನಡುವೆ ದ್ವೇಷ ಅಸೂಯೆಗಳು ಉಂಟಾಗುತ್ತೆ. ಹೀಗಾಗಿ ಕನ್ನಡಕ್ಕೆ ಒಂದು ನಿರ್ಣಯ ಮಾಡಿ, ಶಿಕ್ಷೆ ಕೊಡಿ ಎಂದು ಕೇಂದ್ರ ಸರ್ಕಾರ ಹಾಗೂ ಮಹಾರಾಷ್ಟ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿಕೊಡೋಣ ಎಂದು ತಿಳಿಸಿದರು.

    ಬಳಿಕ ಸರ್ಕಾರದ ಪರವಾಗಿ ಉತ್ತರಿಸಿದ ಕಂದಾಯ ಸಚಿವ ಆರ್.ಅಶೋಕ್, ಖಂಡನಾ ನಿರ್ಣಯಕ್ಕೆ ಸಹಮತ ವ್ಯಕ್ತಪಡಿಸಿದ್ರು. ಇದು ನಿಜವಾಗಿಯೂ ನಮಗೆಲ್ಲ ನೋವನ್ನು ತಂದಿದೆ. ಯಾವುದೇ ಸರ್ಕಾರ ಇದ್ರು, ನೆಲ, ಜಲ, ಭಾಷೆ ರಕ್ಷಣೆ ಮಾಡೋದು ನಮ್ಮೆಲ್ಲರ ಕರ್ತವ್ಯ. ಎಂಇಎಸ್ ಅವರು ಪದೇ-ಪದೇ ಪುಂಡಾಡಿಕೆ ಮಾಡ್ತಿದ್ದಾರೆ. ಧ್ವಜ ಸುಟ್ಟು ಹಾಕಿರುವರು ಕಿಡಿಗೇಡಿಗಳು. ನಮ್ಮ ನೆಲದಲ್ಲಿ ಈ ರೀತಿ ಆಗಿದಿದ್ರೆ ಅವರನ್ನು ಸುಮ್ಮನೆ ಬಿಡುತ್ತಿರಲಿಲ್ಲ. ಆದರೆ ಅಲ್ಲಿನ ನೆಲದಲ್ಲಿ ಆಗಿರೋದ್ರಿಂದ ಅಲ್ಲಿನ ಸರ್ಕಾರ ಕ್ರಮ ಕೈಗೊಳ್ಳಬೇಕಾಗುತ್ತದೆ. ಈ ಬಗ್ಗೆ ಮಹಾರಾಷ್ಟ್ರ ಸರ್ಕಾರದ ಜೊತೆ ಮಾತಾಡ್ತೇವೆ. ಜೊತೆಗೆ ಖಂಡನಾ ನಿರ್ಣಯವನ್ನು ಮಹಾರಾಷ್ಟ್ರ ಸರ್ಕಾರಕ್ಕೆ ಕಳುಹಿಸಿಕೊಡ್ತೇವೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಪಾಂಡವರ ಕಾಲದ ಕೋಟೆ ಬೆಟ್ಟ ಬೊಳ್ಲಪ್ಪ ಈಶ್ವರ ದೇವಾಲಯದಲ್ಲಿ ಉತ್ಸವ

  • ಶೌರ್ಯ, ಶೌರ್ಯೇತರ ಪ್ರಶಸ್ತಿ ಪಡೆದ ಯೋಧರ ಅನುದಾನ ಹೆಚ್ಚಳಕ್ಕೆ ಸಿಎಂ ಅಸ್ತು

    ಶೌರ್ಯ, ಶೌರ್ಯೇತರ ಪ್ರಶಸ್ತಿ ಪಡೆದ ಯೋಧರ ಅನುದಾನ ಹೆಚ್ಚಳಕ್ಕೆ ಸಿಎಂ ಅಸ್ತು

    – ಪ್ರಶಸ್ತಿಗಳ ವಿವರ ಇಂತಿದೆ

    ಬೆಳಗಾವಿ: ಶೌರ್ಯ ಹಾಗೂ ಶೌರ್ಯೇತರ ಪ್ರಶಸ್ತಿ ಪಡೆದ ಯೋಧರಿಗೆ ರಾಜ್ಯ ಸರ್ಕಾರ ನೀಡುವ ಅನುದಾನ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

    ಬೆಳಗಾವಿಯಲ್ಲಿ ವಿಜಯ್ ದಿವಸ್ ಅಂಗವಾಗಿ ಮರಾಠ ಲೈಟ್ ಇನ್ಫೆಂಟ್ರಿ ರೆಜಿಮೆಂಟ್‌ನ ತರಬೇತಿ ಶಾಲೆಯ ಯುದ್ಧ ಸ್ಮಾರಕಕ್ಕೆ ಗೌರವ ಸಲ್ಲಿಸಿದ ನಂತರ ಮಾತನಾಡಿ, ಪ್ರಶಸ್ತಿ ಮೊತ್ತದ ಆದೇಶವನ್ನು ಪ್ರಕಟಿಸಿದರು. ಪರಮವೀರಚಕ್ರ ಪಡೆದವರಿಗೆ 25 ಲಕ್ಷ ರೂ.ದಿಂದ 1.5 ಕೋಟಿ ರೂ.ಗಳು, ಮಹಾವೀರಚಕ್ರ ವಿಜೇತರಿಗೆ 12 ಲಕ್ಷ ರೂ.ಗೆ ಬದಲಾಗಿ 1 ಕೋಟಿ ರೂ.ಗಳು, ಅಶೋಕ ಚಕ್ರ ಪಡೆದವರಿಗೆ 25 ಲಕ್ಷ ರೂ.ಗಳಿಗೆ ಬದಲಾಗಿ 1.5 ಕೋಟಿ ರೂ.ಗಳು, ಕೀರ್ತಿ ಚಕ್ರ ಪಡೆವರಿಗೆ 1 ಕೋಟಿ ರೂ.ಗಳು, ವೀರಚಕ್ರ ವಿಜೇತರಿಗೆ 50 ಲಕ್ಷ ರೂ.ಗಳು, ಶೌರ್ಯ ಚಕ್ರ ವಿಜೇತರಿಗೆ 50 ಲಕ್ಷ ರೂ.ಗಳು, ಸೇನಾ, ನೌಕಾ, ವಾಯು ಸೇನಾ ಮೆಡಲ್ ಪಡೆದವರಿಗೆ 15 ಲಕ್ಷ ರೂ.ಗಳು, ಮೆನ್‌ಶನ್ ಎನ್.ಡಿ.ಎಸ್ ಪ್ಯಾಚ್ ಪಡೆದವರಿಗೆ 15 ಲಕ್ಷ ರೂ.ಗಳನ್ನು ಹೆಚ್ಚಿಸಲು ಆದೇಶವನ್ನು ಹೊರಡಿಸಲಾಗಿದೆ ಎಂದು ವಿವರಿಸಿದರು.

    ಪ್ರಶಸ್ತಿ ವಿಜೇತರಿಗೆ ಸುಮಾರು ಐದು ಪಟ್ಟು ಅನುದಾನವನ್ನು ಹೆಚ್ವಿಸಲಾಗಿದೆ. ನಿವೃತ್ತರಾದ ಮೇಲೆ ಉತ್ತಮ ಜೀವನ ನಡೆಸಲು ಹಾಗೂ ಸಾವನ್ನಪ್ಪಿದಾಗ ಅವರ ಕುಟುಂಬಕ್ಕೆ ಸರ್ಕಾರ ಸಹಾಯ ಮಾಡುತ್ತಾ ಬಂದಿದ್ದೇವೆ. ಪ್ರಶಸ್ತಿ ಪಡೆದಾಗಲು ಅವರನ್ನು ಗೌರವಿಸುವ ನಿಟ್ಟಿನಲ್ಲಿ ಅನುದಾನವನ್ನು ಹೆಚ್ವಿಸಲಾಗಿದೆ ಎಂದರು.

    ದೇಶದ ತಾಂತ್ರಿಕ ಅಭಿವೃದ್ಧಿಗೆ ಸೇನಾಪಡೆಗಳ ಕೊಡುಗೆ: ಸೇನಾಪಡೆಗಳು ದೇಶದ ರಕ್ಷಣೆ ಮಾತ್ರವಲ್ಲದೆ ಆಂತರಿಕ ಭದ್ರತೆಯನ್ನು ಕಾಪಾಡುವಲ್ಲಿಯೂ ಮಹತ್ವದ ಪಾತ್ರ ವಹಿಸುತ್ತದೆ. ದೇಶದ ತಾಂತ್ರಿಕ ಬೆಳವಣಿಗೆಯಲ್ಲಿಯೂ ಸೇನಾಪಡೆಗಳು ಪ್ರಮುಖವಾದ ಪಾತ್ರವನ್ನು ನಿರ್ವಹಿಸುತ್ತವೆ. ಸೇನೆಯ ಬಗ್ಗೆ ನಮಗೆ ಅತ್ಯಂತ ಹೆಮ್ಮೆ ಇದೆ. ಪ್ರತಿ ಬಾರಿಯೂ ಗಡಿಯುದ್ದಕ್ಕೂ ಅವರು ಸವಾಲುಗಳನ್ನು ಎದುರಿಸುತ್ತಾರೆ. ಪೂರ್ವ, ಪಶ್ಚಿಮ, ಉತ್ತರ ಗಡಿಗಳಾಗಲಿ, ಅವರಿಗೆ ಎದುರಾದ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಿ, ಶತ್ರುಪಡೆಗಳನ್ನು ಸೋಲಿಸಿದ್ದಾರೆ. ಇದನ್ನೂ ಓದಿ:ಬದುಕಿದ್ದೀವಿ ಎಂದು ತೋರಿಸಲು ಕಾಂಗ್ರೆಸ್ ಪ್ರತಿಭಟನೆ: ಈಶ್ವರಪ್ಪ

    ವಿಶೇಷವಾಗಿ 1971 ರಲ್ಲಿ ನಡೆದ ಇಂಡೋ-ಪಾಕಿಸ್ತಾನ ಯುದ್ಧವು ನಮ್ಮ ಸೇನಾಪಡೆಯ ಶಕ್ತಿ, ಬುದ್ದಿವಂತಿಕೆ, ಶೌರ್ಯ ಹಾಗೂ ಮೂರು ರಕ್ಷಣಾ ಪಡೆಗಳ ನಡುವಿನ ಸಮನ್ವಯಕ್ಕೆ ಸಾಕ್ಷಿಯಾಗಿದೆ ಎಂದರು. ಇದನ್ನೂ ಓದಿ: ಬಿಜೆಪಿ ಸರ್ಕಾರದ ಸಚಿವರಿಗೆ ಬಿಜೆಪಿ ಶಾಸಕರಿಂದಲೇ ಶಾಕ್..!

    ಇದೇ ಸಂದರ್ಭದಲ್ಲಿ ಹೆಲಿಕಾಪ್ಟರ್ ದುರಂತದಲ್ಲಿ ಇತ್ತೀಚೆಗೆ ಮಡಿದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ ಎಲ್ಲರಿಗೂ ಶ್ರದ್ದಾಂಜಲಿ ಸಲ್ಲಿಸಿದರು. ಗೃಹ ಸಚಿವ ಆರಗ ಜ್ಞಾನೇಂದ್ರ, ಮೇಜರ್ ಜನರಲ್ ಜೆ.ವಿ. ಪ್ರಸಾದ್ ಇತರರಿದ್ದರು.

  • ಜನಬಲಕ್ಕೆ ಸೋಲಾಗಿದೆ, ನಾವು ಧೃತಿಗೆಡುವುದಿಲ್ಲ: ಶರವಣ

    ಜನಬಲಕ್ಕೆ ಸೋಲಾಗಿದೆ, ನಾವು ಧೃತಿಗೆಡುವುದಿಲ್ಲ: ಶರವಣ

    ಬೆಳಗಾವಿ: ವಿಧಾನ ಪರಿಷತ್ ಫಲಿತಾಂಶ ಪ್ರಕಟವಾಗಿದೆ. ಹಣಬಲ, ಜನಬಲದ ನಡುವೆ ಜನಬಲಕ್ಕೆ ಸೋಲಾಗಿದೆ. ಆದರೆ ಅದಕ್ಕೆ ನಾವು ಧೃತಿಗೆಡುವುದಿಲ್ಲ ಎಂದು ಜೆಡಿಎಸ್ ವಕ್ತಾರ ಶರವಣ ಹೇಳಿದರು.

    ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಶರವಣ ಅವರು ಇತರ ಪಕ್ಷಗಳ ಮೋಸದ ಆಟ ನೋವು ತರುತ್ತಿದೆ. ಆದರೆ ನಮಗೆ ಜನರ ಮೇಲೆ ಅಪಾರ ವಿಶ್ವಾಸವಿದೆ. ನಮ್ಮ ಪಕ್ಷ ಮತ್ತೆ ಅಧಿಕಾರಕ್ಕೆ ಬಂದು ಜನರ ಸೇವೆ ಮಾಡುವ ಭರವಸೆ ಇದೆ ಎಂದರು. ಇದನ್ನೂ ಓದಿ: ಗಮನಿಸಿ, ಡಿ.29ಕ್ಕೆ ಕೆಪಿಎಸ್‍ಸಿ ಮರುಪರೀಕ್ಷೆ – ಯಾವೆಲ್ಲ ದಾಖಲೆ ಸಲ್ಲಿಸಬೇಕು?

    ಯಾವ ನೈತಿಕತೆ ಇಲ್ಲದೆ ಕುಟುಂಬ ರಾಜಕಾರಣ ಎಂದು ಬೊಬ್ಬೆ ಹೊಡೆದು ಕೊಳ್ಳುತ್ತಿರುವ ಕಾಂಗ್ರೆಸ್ ಹಾಗು ಬಿಜೆಪಿ ಅವರು ತಮ್ಮ ಕುಟುಂಬದವರು, ಸಂಬಂಧಿಕರಿಗೆ ಟಿಕೆಟ್ ನೀಡಿದೆ. ಜನಪರವಾಗಿ ಹೋರಾಡುತ್ತಿರುವ ಜೆಡಿಎಸ್ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಮಾಡಿ, ಕಾಂಚಾಣ ಹಂಚಿಕೆಯಿಂದ ಮೋಸದ ಗೆಲುವು ಕಂಡ ಇಂತಹ ಪಕ್ಷಗಳ ಕೊಡುಗೆ ಈ ರಾಜ್ಯಕ್ಕೆ ಏನು ಇಲ್ಲ ಎಂದು ಕಿಡಿಕಾರಿದರು.

    ಮುಂಬರುವ 2023ರ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷವನ್ನು ಜನರು ಕೈಹಿಡಿದು ಮುನ್ನಡೆಸಲಿದ್ದಾರೆ ಎಂಬ ಭರವಸೆಯಿದೆ ಎಂದು ವಿಶ್ವಾಸದ ಮಾತನ್ನು ಆಡಿದರು. ಇದನ್ನೂ ಓದಿ: ದುರ್ಗಾಪೂಜೆಗೆ ಪಾರಂಪರಿಕ ಸ್ಥಾನಮಾನ ಕೊಟ್ಟ UNESCO

  • ಕ್ಯಾ. ವರುಣ್ ಸಿಂಗ್ ನಿಧನ ದೇಶಕ್ಕೆ ತುಂಬಲಾರದ ನಷ್ಟ: ಸಿಎಂ

    ಕ್ಯಾ. ವರುಣ್ ಸಿಂಗ್ ನಿಧನ ದೇಶಕ್ಕೆ ತುಂಬಲಾರದ ನಷ್ಟ: ಸಿಎಂ

    ಬೆಳಗಾವಿ: ಹೆಲಿಕಾಪ್ಟರ್ ಪತನದಲ್ಲಿ ಗಾಯಗೊಂಡಿದ್ದ ಕ್ಯಾಪ್ಟನ್ ವರುಣ್ ಸಿಂಗ್ ಅವರ ನಿಧನದಿಂದ ದೇಶಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

    ಸುವರ್ಣ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಯಾಪ್ಟನ್ ವರುಣ್ ಸಿಂಗ್ ಅವರಿಗೆ ಶೇ.80 ಕ್ಕಿಂತ ಹೆಚ್ವು ಸುಟ್ಟ ಗಾಯಗಳಾಗಿತ್ತು. ವೈದ್ಯರ ಚಿಕಿತ್ಸೆಯ ಹೊರತಾಗಿಯೂ ಅವರು ನಿಧನರಾಗಿದ್ದಾರೆ. ಭಾರತ ಮಾತೆಯ ವೀರ ಯೋಧನನ್ನು ಕಳೆದುಕೊಂಡಿದೆ. ಅವರ ಮರಣದಿಂದ ಭಾರತದ ಸೇನೆ ಮತ್ತು ಜನತೆ ದು:ಖತಪ್ತವಾಗಿದೆ. ಅವರ ಕುಟುಂಬದವರೆಲ್ಲರೂ ಸೈನ್ಯದಲ್ಲಿದ್ದರು ಎಂದು ನೆನೆದರು. ಇದನ್ನೂ ಓದಿ: ದುರ್ಗಾಪೂಜೆಗೆ ಪಾರಂಪರಿಕ ಸ್ಥಾನಮಾನ ಕೊಟ್ಟ UNESCO

    ವೀರ ಯೋಧನ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕುಟುಂಬಕ್ಕೆ ನೀಡಲಿ ಹಾಗೂ ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಕೋರಿದರು.

    ವಿಧಾನ ಪರಿಷತ್ತಿನಲ್ಲಿ ಸಚಿವರೊಬ್ಬರ ಕುರಿತು ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರ ನೀಡಿದ ಮುಖ್ಯ ಮಂತ್ರಿಗಳು, ಸದನದ ಒಳಗೆ ಆಗಿರುವ ವಿಷಯಗಳಿಗೆ ಸದನ ಹೊರಗೆ ಉತ್ತರ ನೀಡಲು ಬರುವುದಿಲ್ಲ ಎಂದರು. ಇದನ್ನೂ ಓದಿ: ಶ್ರೀನಿವಾಸ್ ಪೂಜಾರಿ ಒಂದು ರೂಪಾಯಿ ಖರ್ಚು ಮಾಡದೇ ಗೆದ್ದಿದ್ದಾರೆ: ಬಿ.ಎಲ್.ಸಂತೋಷ್

  • ವೇಸ್ಟ್ ಬಾಡಿ ಯಾರು ಅಂತ ಇಡೀ ರಾಜ್ಯಕ್ಕೆ ತಿಳಿದಿದೆ: ಜಾರಕಿಹೊಳಿಗೆ ತಿವಿದ ಸಿದ್ದರಾಮಯ್ಯ

    ವೇಸ್ಟ್ ಬಾಡಿ ಯಾರು ಅಂತ ಇಡೀ ರಾಜ್ಯಕ್ಕೆ ತಿಳಿದಿದೆ: ಜಾರಕಿಹೊಳಿಗೆ ತಿವಿದ ಸಿದ್ದರಾಮಯ್ಯ

    ಬೆಳಗಾವಿ: ವೇಸ್ಟ್ ಬಾಡಿ ಯಾರು ಅಂತ ಇಡೀ ರಾಜ್ಯಕ್ಕೆ ತಿಳಿದಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ರಮೇಶ್ ಜಾರಕಿಹೊಳಿಗೆ ಟಾಂಗ್ ನೀಡಿದರು.

    ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ವೇಸ್ಟ್ ಬಾಡಿ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿ, ಯಾರು ವೇಸ್ಟ್ ಬಾಡಿ, ಯಾರು ಉಪಯೋಗ ಆಗುವ ಬಾಡಿ ಎಂದು ರಾಜ್ಯದ ಜನತೆಗೆ ತಿಳಿದಿದೆ. ಅದರ ಬಗ್ಗೆ ಹೇಳುವುದೆನಿಲ್ಲ. ಸಂಸ್ಕೃತಿ, ರಾಜಕೀಯ ಕಲ್ಚರ್ ಇಲ್ಲದೇ ಇರುವವರು ಈ ರೀತಿ ಮಾತುಗಳನ್ನು ಆಡುತ್ತಾರೆ ಎಂದು ವ್ಯಂಗ್ಯವಾಡಿದರು.  ಇದನ್ನೂ ಓದಿ: ಸಿದ್ದರಾಮಯ್ಯ ಒಬ್ಬ ವೇಸ್ಟ್‌ ಬಾಡಿ: ರಮೇಶ್‌ ಜಾರಕಿಹೊಳಿ ವಾಗ್ದಾಳಿ

    40 ಪರ್ಸೆಂಟ್ ಕಮಿಷನ್ ಆರೋಪದ ವಿಚಾರವಾಗಿ ಸದನದಲ್ಲಿ ದಾಖಲೆ ಬಿಡುಗಡೆ ಮಾಡಲಿ ಎಂಬ ಪ್ರಶ್ನೆಗೆ ಅಸೆಂಬ್ಲಿಯಲ್ಲಿ ನೋಡಿ ಎಂದು ಹೇಳುವ ಮುಖಾಂತರ ಸಿದ್ದರಾಮಯ್ಯ ದಾಖಲೆ ಬಿಡುಗಡೆಯ ಸುಳಿವು ಬಿಟ್ಟುಕೊಟ್ಟರು.  ಇದನ್ನೂ ಓದಿ: ತಿರುಪತಿ ತಿಮ್ಮಪ್ಪ ಮೂರು ತರ ಕಾಣೋ ರೀತಿಯಲ್ಲಿ ಜಾರಕಿಹೊಳಿ ಮಾತಾಡ್ತಾರೆ: ಸತೀಶ್