ಕಳ್ಳರನ್ನು ಬಂಧಿಸಿರುವ ಪೊಲೀಸರು ಬರೊಬ್ಬರಿ 10 ಬೈಕ್ ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಎಸಿಪಿ ಸದಾಶಿವ ಕಟ್ಟಿಮನಿ ಹಾಗೂ ಮಾಳಮಾರುತಿ ಠಾಣೆ ಸಿಪಿಐ ಸುನೀಲ್ ಪಾಟೀಲ್ ನೇತೃತ್ವದ ತಂಡವು ಬೆಳಗಾವಿ ಸುತ್ತಮುತ್ತಲು ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಇದನ್ನೂ ಓದಿ: ಯಡಿಯೂರಪ್ಪ ವ್ಯಕ್ತಿ ಅಲ್ಲ ದೊಡ್ಡ ಶಕ್ತಿ: ಶ್ರೀರಾಮುಲು
ಬಂಧಿತ ಆರೋಪಿಯಿಂದ 7 ಲಕ್ಷ ಮೌಲ್ಯದ ವಿವಿಧ ಕಂಪನಿಗಳ 10 ಬೈಕ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಮಾಳಮಾರುತಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮಾಳಮಾರುತಿ ಪೊಲೀಸರ ಕಾರ್ಯಾಚರಣೆಗೆ ಬೆಳಗಾವಿ ನಗರ ಹಿರಿಯ ಪೊಲೀಸ್ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿ ನಗದು ಬಹುಮಾನ ಘೋಷಿಸಿದ್ದಾರೆ.
ಚಿಕ್ಕೋಡಿ(ಬೆಳಗಾವಿ): ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ಜನ ಹಿತ ಕಾರ್ಯ ನಿರಂತರವಾಗಿ ಮಾಡುತ್ತೇನೆ ಎಂದು ವಕ್ಫ್ ಹಾಗೂ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದಲ್ಲಿ ಕೋವಿಡ್-19 ಪರಿಹಾರಾರ್ಥವಾಗಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕಾರ್ಮಿಕ ಇಲಾಖೆ ವತಿಯಿಂದ ಅಂಗವಿಕಲರಿಗೆ ಹೋಮ್ ಗಾರ್ಡ್ ಸಿಬ್ಬಂದಿ, ತೃತೀಯ ಲಿಂಗಿಗಳು ಹಾಗೂ ಆಟೋಚಾಲಕರಿಗೆ 1,181 ಆಹಾರ ಸಾಮಾಗ್ರಿಗಳ ಕಿಟ್ ಗಳನ್ನು ವಿತರಣೆ ಮಾಡಲಾಯಿತು. ಇದನ್ನೂ ಓದಿ: ಸುರಕ್ಷಿತ, ಸುಂದರ, ಹಸಿರುಮಯ ಬೆಂಗಳೂರು ನಗರ ಮಾಡುವುದು ನಮ್ಮ ಗುರಿ: ಸಿಎಂ
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ಕಾರ್ಯಗಳೊಂದಿಗೆ ಜನರ ಹಿತ ಕಾಪಾಡುವುದು ಕೂಡ ನಮ್ಮ ಜವಾಬ್ದಾರಿ. ಹೀಗಾಗಿ ಕ್ಷೇತ್ರದ ಜನರಿಗೆ ಅಗತ್ಯ ನೆರವು ನೀಡುತ್ತಿದ್ದೇವೆ. ಜನರ ಹಿತ ಕಾಪಾಡಲು ನಾನು ಸದಾ ಸಿದ್ಧ ಎಂದು ಹೇಳಿದರು. ಈ ಸಂದರ್ಭದಲ್ಲಿ ನಿಪ್ಪಾಣಿ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸ್ಥಳೀಯ ಮುಖಂಡರು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.
ಬೆಳಗಾವಿ: ಇಂದು 29ನೇ ದಿವಸಕ್ಕೆ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್ ಬೃಹತ್ ಅಭಿಯಾನ ಕಾಲಿಟ್ಟಿದೆ ಎಂದು ಬೆಳಗಾವಿಯಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಧಿವೇಶನದಲ್ಲಿ ಮೀಸಲಾತಿ ನೀಡುವ ವಿಚಾರವಾಗಿ ಧ್ವನಿ ಎತ್ತಿದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಇತರ ಶಾಸಕರಿಗೆ ಈ ಮೂಲಕ ಅಭಿನಂದನೆಯನ್ನು ತಿಳಿಸಿದರು.
ಮೀಸಲಾತಿ ನೀಡುವ ಬಗ್ಗೆ ಮಾರ್ಚ್ 15ರಂದು ವಿಧಾನಸಭೆ ಅಧಿವೇಶನದಲ್ಲಿ ಸರ್ಕಾರ ಮಾತು ಕೊಟ್ಟಿತ್ತು. ಸರ್ಕಾರ ಕೊಟ್ಟ ಮಾತು ಸೆಪ್ಟೆಂಬರ್ 15ಕ್ಕೆ ಮುಕ್ತಾಯಗೊಂಡಿದೆ. ಮಲೆಮಹದೇಶ್ವರ ಬೆಟ್ಟದಿಂದ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್ ಬೃಹತ್ ಅಭಿಯಾನ ಪ್ರಾರಂಭವಾಗಿದ್ದು, ಇಂದು 29ನೇ ದಿವಸಕ್ಕೆ ನಮ್ಮ ಬೃಹತ್ ಅಭಿಯಾನ ಕಾಲಿಟ್ಟಿದೆ. ಕರ್ನಾಟಕದ ಸೆ.7 ರಷ್ಟು ಭಾಗ ಪೂರೈಸಿ ಬೆಳಗಾವಿಗೆ ಬಂದಿದ್ದೇವೆ ಎಂದರು. ಇದನ್ನೂ ಓದಿ: ಕೊರೊನಾ ಇಳಿಮುಖ – ಉಡುಪಿ ಕೃಷ್ಣಮಠದಲ್ಲಿ ಸಾರ್ವಜನಿಕ ಅನ್ನಪ್ರಸಾದ ಸೇವೆ ಆರಂಭ
ಅಧಿವೇಶನದಲ್ಲಿ ಕೊಟ್ಟ ಮಾತು ನೆನಪಿಸಲು ಭಾರತದ ಬಾಹುಬಲಿ ಬಸನಗೌಡ ಪಾಟೀಲ್ ಯತ್ನಾಳ್ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಶಾಸಕರಾದ ಅರವಿಂದ್ ಬೆಲ್ಲದ, ಸಿದ್ದು ಸವದಿ, ಶಿವಾನಂದ ಪಾಟೀಲ್ ಅವರು ಸಹ ಇದಕ್ಕೆ ಸಾಥ್ ಕೊಟ್ಟಿದ್ದಾರೆ. ಯತ್ನಾಳ್ ಅವರ ಜೊತೆ ದನಿಗೂಡಿಸಿ ಧರಣಿ ಮಾಡ್ತಿದ್ದಾರೆ. ಇದನ್ನು ನೋಡಿದ್ರೆ ಪಂಚಮಸಾಲಿ ಮೀಸಲಾತಿ ಕೆಲವೇ ದಿನಗಳಲ್ಲಿ ನ್ಯಾಯ ಪಡೆದುಕೊಳ್ಳುವ ನಿರೀಕ್ಷೆ ಹೆಚ್ಚಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಾವು ಸಹ ಅಧಿವೇಶನ ಮುಕ್ತಾಯದೊಳಗೆ ಯಾರಾದರೂ ಈ ಕುರಿತು ಧ್ವನಿ ಎತ್ತುತ್ತಾರೆ ಎಂದು ನಿರೀಕ್ಷೆ ಇಟ್ಟುಕೊಂಡಿದ್ವಿ. ಆಡಳಿತಾರೂಢ ಪಕ್ಷದ ಶಾಸಕರಾಗಿ ಬಸನಗೌಡ ಪಾಟೀಲ್ ಯತ್ನಾಳ್ ಧ್ವನಿ ಎತ್ತಿದ್ದಾರೆ. ನಮ್ಮ ಜೊತೆ ಮೀಸಲಾತಿ ಬಯಸುವ ಎಲ್ಲ ಸಮುದಾಯದ ಪರ ಎಲ್ಲರೂ ಸಹ ಧ್ವನಿ ಎತ್ತಿದ್ದಾರೆ. ಪಂಚಮಸಾಲಿಗಳು ಎಲ್ಲರ ಜೊತೆ ಕೂಡಿ ಬಾಳೋರು ಎಂಬುದನ್ನು ಅಧಿವೇಶನದಲ್ಲಿ ತೋರಿಸುವ ಕೆಲಸ ಯತ್ನಾಳ್ ಗೌಡರು ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಕಲುಷಿತ ನೀರು ಕುಡಿದು 50ಕ್ಕೂ ಹೆಚ್ಚು ಜನ ಅಸ್ವಸ್ಥ
ಧ್ವನಿ ಎತ್ತಿದ ನಾಲ್ಕು ನಾಯಕರಿಗೆ ಪಂಚಮಸಾಲಿ ಸಮುದಾಯದ ಪರ ಅನಂತ ಅನಂತ ಧನ್ಯವಾದ. ಕೂಡಲೇ ಯತ್ನಾಳ್, ಬೆಲ್ಲದ್‍ರವರ ಹಕ್ಕೊತ್ತಾಯ ಮಂಡನೆಗೆ ಸಿಎಂ ಬಸವರಾಜ ಬೊಮ್ಮಾಯಿ ಉತ್ತರ ಕೊಡಬೇಕು. ನಾಳೆ ಬೆಳಗಾವಿಗೆ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಬರ್ತಿದ್ದಾರೆ. ನಮ್ಮ ಸಮಾಜದ ಎಲ್ಲ ನಾಯಕರು ಬೆಳಗಾವಿಗೆ ಬರ್ತಿದ್ದಾರೆ. ನಾಳೆ ಜಿಲ್ಲಾ ಮಟ್ಟದ ಪ್ರತಿಜ್ಞಾ ಪಂಚಾಯತ್ ಅಭಿಯಾನ ಗಾಂಧಿ ಭವನದಲ್ಲಿ ನಡೆಯುತ್ತಿದೆ. ಇದಾದ ಬಳಿಕ ರಾಜ್ಯ ಕಾರ್ಯಕಾರಿಣಿ ಸಭೆ ಕರೆಯಲಾಗಿದೆ. ಮುಂದಿನ ಹೋರಾಟ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮೃತನ ಕುಟುಂಬಕ್ಕೆ ಬಹುಮಾನದ ಹಣ ನೀಡಿದ ಮೈಸೂರು ಪೊಲೀಸರು
ಬೊಮ್ಮಾಯಿ ಅವರು ಸಹ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚೆ ಮಾಡಿದ್ದಾರೆ. ಸಚಿವರಾದ ಸಿ.ಸಿ.ಪಾಟೀಲ್ ಹಾಗೂ ಯತ್ನಾಳ್ ಜೊತೆ ಸಿಎಂ ಚರ್ಚಿಸಿದ್ದಾರೆ. ಅಕ್ಟೋಬರ್ ಒಂದನೇ ತಾರೀಖಿನೊಳಗೆ ನಾವು ಗಡುವು ಕೊಟ್ಟಿದ್ದೇವೆ. ಒಂದನೇ ತಾರೀಖಿನೊಳಗೆ ನಮಗೆ ಸರ್ಕಾರ ನ್ಯಾಯ ದೊರಕಿಸಿಕೊಡುತ್ತೆಂಬ ವಿಶ್ವಾಸ ಇದೆ. ನಮ್ಮ ಅಭಿಯಾನ ಮುಕ್ತಾಯ ಆಗೋದ್ರೊಳಗಾಗಿ ನ್ಯಾಯ ಸಿಗದಿದ್ರೆ ಮತ್ತೆ ಧರಣಿ ಸತ್ಯಾಗ್ರಹ ಮಾಡ್ತೀವಿ ಎಂದು ಎಚ್ಚರಿಕೆ ನೀಡಿದರು.
ಬೆಳಗಾವಿ: ನಗರದಲ್ಲಿ ಯಾವುದೇ ಕಾರಣಕ್ಕೂ ಹಿಂದೂ ದೇವಸ್ಥಾನಗಳನ್ನು ತೆರವುಗೊಳಿಸಬಾರದು ಎಂದು ಆಗ್ರಹಿಸಿ ಬೆಳಗಾವಿ ನಗರ ದೇವಸ್ಥಾನ ಮಂಡಳದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 46 ಧಾರ್ಮಿಕ ಕೇಂದ್ರಗಳಿದ್ದು, ಅವುಗಳಲ್ಲಿ ಈಗಾಗಲೇ 17 ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸಲಾಗಿದೆ. ಬೆಳಗಾವಿ ನಗರ ದೇವಸ್ಥಾನ ಮಂಡಳ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ಹಿಂದೂ ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸಬಾರದು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು. ಇದನ್ನೂ ಓದಿ: ಚಿತ್ರದುರ್ಗದ ಮಕ್ಕಳಲ್ಲಿ ವಿಚಿತ್ರ ರೋಗ – ಸರ್ಕಾರಿ ಜಿಲ್ಲಾಸ್ಪತ್ರೆ ಹೌಸ್ ಫುಲ್
ಈ ಸಂದರ್ಭದಲ್ಲಿ ಬೆಳಗಾವಿ ನಗರ ದೇವಸ್ಥಾನ ಮಂಡಳದ ಅಧ್ಯಕ್ಷ ರಂಜೀತ್ ಚವ್ಹಾಣ್ ಪಾಟೀಲ್, ಪದಾಧಿಕಾರಿಗಳಾದ ಸಾಗರ ಪಾಟೀಲ್, ವಿ.ಎಮ್.ಹಲಗೇಕರ್, ಎಂ.ಬಿ.ಬಾರದೇಶಕರ್, ವಿಕಾಸ ಕಲಘಟಗಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಬೆಳಗಾವಿ: ಜಿಎಸ್‍ಟಿ ಇಲ್ಲದೇ ಸಾಗಿಸುತ್ತಿದ್ದ 7 ಕೋಟಿ ಮೊತ್ತದ ಅಡಿಕೆಯನ್ನು ಜಪ್ತಿ ಮಾಡಿ 7 ಜನರನ್ನು ಬಂಧನಕ್ಕೆ ಪಡೆದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ರಾಜ್ಯ ಸರಕು ಸೇವಾ ಇಲಾಖೆಯ ಯಾವ ಕೆಲಸವನ್ನು ಮಾಡಬೇಕೋ ಅದನ್ನು ಕೇಂದ್ರೀಯ ಸರಕು ಮತ್ತು ಸಾಗಾಣಿಕೆ ಇಲಾಖೆ ಮಾಡಿ ತೋರಿಸಿದೆ. ಜಿಎಸ್‍ಟಿ ಇಲ್ಲದೇ ಸಾಗಿಸಲಾಗುತ್ತಿದ್ದ ಸುಮಾರು 7 ಕೋಟಿ ರೂ. ಮೊತ್ತದ ಅಡಿಕೆ ತುಂಬಿದ 7 ಲಾರಿಗಳನ್ನು ಬೆಳಗಾವಿಯ ಕೇಂದ್ರೀಯ ಜಿಎಸ್‍ಟಿ ಮತ್ತು ಕೇಂದ್ರೀಯ ಅಬಕಾರಿ ಆಯುಕ್ತಾಲಯ ಜಪ್ತಿ ಮಾಡಿ 7 ಜನರನ್ನು ಬಂಧಿಸಿದೆ. ಇದನ್ನೂ ಓದಿ: ಅಂಗಾಂಗಗಳನ್ನು ದಾನ ಮಾಡಿ – ಡೆತ್‍ನೋಟ್ ಬರೆದು ಉಡುಪಿಯ ಬಿಜೆಪಿ ನಾಯಕಿ ಆತ್ಮಹತ್ಯೆ
ಮಂಗಳೂರಿನ ಡಿಜಿಜಿಐ ಅವರು ನೀಡಿದ ಖಚಿತ ಮಾಹಿತಿಯ ಮೇರೆಗೆ ಬೆಳಗಾವಿಯ ಕೇಂದ್ರೀಯ ಜಿಎಸ್‍ಟಿ ಮತ್ತು ಕೇಂದ್ರೀಯ ಅಬಕಾರಿ ಆಯುಕ್ತಾಲಯದ ವತಿಯಿಂದ ಈ ಕಾರ್ಯಾಚರಣೆಯನ್ನು ನಡೆಸಲಾಗಿದೆ.
ಮಾಹಿತಿ ಸಿಕ್ಕ ಕೂಡಲೇ ಕಾಯ್ದು ಕುಳಿತಿದ್ದ ಕೇಂದ್ರ ಇಲಾಖೆಯ ಅಧಿಕಾರಿಗಳು ಹುಬ್ಬಳ್ಳಿ ಮತ್ತು ನವಲಗುಂದ ಮಾರ್ಗವಾಗಿ ಸಾಗಿಸಲಾಗುತ್ತಿದ್ದ ಲಾರಿಗಳನ್ನು ತಡೆದಿದ್ದಾರೆ. ಅಡಿಕೆಗೆ ಶೇ.5 ರಷ್ಟು ಜಿಎಸ್‍ಟಿ ನೀಡಬೇಕು. ಆದರೆ ಜಿಎಸ್‍ಟಿಯನ್ನು ತುಂಬದೇ ಬಹುದೊಡ್ಡ ತೆರಿಗೆ ವಂಚನೆ ನಡೆಸುತ್ತಿರುವುದು ಗಮನಕ್ಕೆ ಬಂದಿದ್ದು, ಲಾರಿಯನ್ನು ಪರಿಶೀಲಿಸಿದಾಗ ಸತ್ಯ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಅಮ್ಮ ನೀವು ಸೂಪರ್ ವುಮೆನ್ – ಹಾಡಿ ಹೊಗಳಿದ ರಾಧಿಕಾ ಪಂಡಿತ್
ಕೇಂದ್ರಿಯ ಜಿಎಸ್‍ಟಿ ಇಲಾಖೆಯ ಸಹಾಯಕ ಆಯುಕ್ತ ಅಜಿಂಕ್ಯ ಕಾಟಕರ ಅವರ ನೇತೃತ್ವದ ತಂಡ ನಡೆಸಿದ ಸಿನೀಮಿಯ ರೀತಿಯ ಕಾರ್ಯಾಚರಣೆಯಲ್ಲಿ ರಾಜೀವ್ ಹೆಗ್ಗಡೆ, ರಿಯಾಜ್ ಬೆಳಗಾಂವಕರ್, ಎಸ್‍ಪಿ ನಾಯಿಕ್, ಆಬೀದ್‍ಹುಸೇನ್ ನೇಸರಗಿ, ವಿಶ್ವನಾಥ್ ನಿಡಗುಂದಿ ಇನ್ನುಳಿದವರು ಭಾಗಿಯಾಗಿದ್ದರು. ವರಿಷ್ಠ ಅಧಿಕಾರಿಗಳು ಈ ಕಾರ್ಯಾಚರಣೆಯನ್ನು ಯಶಸ್ವಿಗೊಳಿಸಿದ ಅಧಿಕಾರಿಗಳ ಕಾರ್ಯವೈಖರಿಯನ್ನು ಪ್ರಶಂಸಿದ್ದಾರೆ. ಇದನ್ನೂ ಓದಿ: ರೌಡಿಶೀಟರ್ನಿಂದ ಪಾನ್ ಶಾಪ್ ಮಾಲೀಕನ ಬರ್ಬರ ಹತ್ಯೆ
ಶಿವಮೊಗ್ಗದಲ್ಲಿ ಅಡಿಕೆಗಳನ್ನು ಬೆಳೆದು, ದೆಹಲಿ ಮತ್ತು ಅಹಮದಾಬಾದ್‍ಗೆ ಪೂರೈಸಲಾಗುತ್ತದೆ. ಕರ್ನಾಟಕದ ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಬೆಳಗಾವಿ ವಾಣಿಜ್ಯ ತೆರಿಗೆ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಿಜಯಪುರ ಮತ್ತು ದಾವಣಗೆರೆ ಅಧಿಕಾರಿಗಳು ಅಕ್ರಮವನ್ನು ತಡೆಯುವಲ್ಲಿ ವಿಫಲರಾಗಿದ್ದಾರೆಂಬ ಆರೋಪಗಳು ಕೇಳಿ ಬರುತ್ತಿವೆ. ದಾವಣಗೆರೆ, ಶಿವಮೊಗ್ಗ ಮತ್ತು ಹುಬ್ಬಳ್ಳಿಯಲ್ಲಿ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಜಾಣಕುರುಡುತನ ಪ್ರದರ್ಶಿಸಿದ್ದಾರೆ.
ಚಿಕ್ಕೋಡಿ: ಮಕ್ಕಳ ಮೊದಲ ಕಲಿಕೆಯ ಮೆಟ್ಟಿಲಾಗಿರುವ ಅಂಗನವಾಡಿ ಕೇಂದ್ರವನ್ನು ಉತ್ತಮ ಗುಣಮಟ್ಟದಲ್ಲಿ ನಿರ್ಮಿಸಿ, ಮೂಲಸೌಕರ್ಯಗಳ ವ್ಯವಸ್ಥೆ ಮಾಡಿ, ಅನುಕೂಲ ಕಲ್ಪಿಸಲಾಗಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಮತಕ್ಷೇತ್ರದ ಲಖನಾಪುರ ಗ್ರಾಮದಲ್ಲಿ, ನಬಾರ್ಡ್ ಆರ್‍ಐಡಿಎಫ್-25 ಯೋಜನೆಯಡಿ 17 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ನೂತನ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ರಾಮದ ಪುಟಾಣಿಗಳ ಏಳಿಗೆಗಾಗಿ ಈ ಕೇಂದ್ರ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದ ಮಾಂತ್ರಿಕನಿಂದ ಕೃಷ್ಣಾ ಕಿತ್ತೂರಿನಲ್ಲಿ ವಾಮಾಚಾರ..!
ಅಷ್ಟೆ ಅಲ್ಲದೇ ಕ್ಷೇತ್ರದ ಅಂಗನವಾಡಿ ಕೇಂದ್ರಗಳ ಸವಾರ್ಂಗೀಣ ಅಭಿವೃದ್ದಿಗೆ ಶ್ರಮಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಇದನ್ನೂ ಓದಿ: ಗಣಪತಿಯ ಕುತ್ತಿಗೆಗೆ ಸುತ್ತಿಕೊಂಡ ನಾಗರ
ಚಿಕ್ಕೋಡಿ(ಬೆಳಗಾವಿ): ನಾನು ಬಿಜೆಪಿಗೆ ಬರುವ ಮುನ್ನ ನನಗೆ ಹಣದ ಆಫರ್ ಕೊಟ್ಟಿದ್ದು ನಿಜ ಎಂದು ವಲಸಿಗ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಶ್ರೀಮಂತ ಪಾಟೀಲ್ ಸ್ಫೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ.
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದಲ್ಲಿ ಸಚಿವ ಸ್ಥಾನ ಕಳೆದುಕೊಂಡ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ ಹಣದ ಆಫರ್ ಕೊಟ್ಟರೂ ನಾನು ಬೇಡ ಎಂದಿದ್ದೆ. ಯಾವುದೇ ಹಣ ನನಗೆ ಬೇಡ. ಬಿಜೆಪಿಗೆ ಬರ್ತೀನಿ ಒಳ್ಳೆಯ ಸ್ಥಾನ-ಮಾನ ನನಗೆ ಬೇಕು ಎಂದಿದ್ದೆ. ಹಣದ ಬದಲು ನನ್ನ ಕ್ಷೇತ್ರದ ಜನರಿಗೆ ಒಳ್ಳೆಯ ಸೇವೆ ಮಾಡುವ ನಿಟ್ಟಿನಲ್ಲಿ ಯೋಗ್ಯ ಸ್ಥಾನಮಾನ ನೀಡುವಂತೆ ಕೇಳಿಕೊಂಡಿದ್ದೆ ಎಂದಿದ್ದಾರೆ. ಇದನ್ನೂ ಓದಿ: ಅರಣ್ಯ ಇಲಾಖೆಯ ಹುತಾತ್ಮ ಅಧಿಕಾರಿ, ಸಿಬ್ಬಂದಿಗೆ ಗೌರವ ನಮನ ಸಲ್ಲಿಕೆ
ಚಿಕ್ಕೋಡಿ: ಸಾಲಬಾಧೆ ತಾಳದೆ ರೈತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ನಡೆದಿದೆ.
ಸತ್ತಿ ಗ್ರಾಮದ ಬಾಬು ಯಮನಪ್ಪ ಮಾದರ(43) ಆತ್ಮಹತ್ಯೆ ಮಾಡಿಕೊಂಡ ರೈತ. ರಡ್ಡೇರಹಟ್ಟಿ ಗ್ರಾಮದ ದಳವಾಯಿ ತೋಟದ ವಸತಿ ಪ್ರದೇಶದಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣು ಬಿಗಿದುಕೂಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2 ಎಕರೆ 20 ಗುಂಟೆ ಜಮೀನು ಹೊಂದಿದ್ದ ಯಮನಪ್ಪ ಸತ್ತಿಯ ಕೆನರಾ ಬ್ಯಾಂಕ್ ನಲ್ಲಿ 3 ಲಕ್ಷ ಮತ್ತು ಇತರ 2 ಲಕ್ಷ ಸೇರಿ ಒಟ್ಟು 5 ಲಕ್ಷ ರೂ. ಸಾಲ ಮಾಡಿದ್ದರು ಎನ್ನಲಾಗುತ್ತಿದೆ. ಇದನ್ನೂ ಓದಿ: ಸಿಲಿಂಡರ್ ಸ್ಫೋಟ- ಮೊಮ್ಮಗಳ ಸಮಯ ಪ್ರಜ್ಞೆಯಿಂದ ಉಳೀತು ಅಜ್ಜಿ ಜೀವ
ಚಿಕ್ಕೋಡಿ (ಬೆಳಗಾವಿ): ಮುಂಬರುವ ದಿನಗಳಲ್ಲಿ ಸಚಿವ ಸ್ಥಾನ ನೀಡುವುದಾಗಿ ಬಿಜೆಪಿ ಹೈಕಮಾಂಡ್ ಭರವಸೆ ನೀಡಿದ್ದಾರೆ ಎಂದು ಶಾಸಕ ಹಾಗೂ ಮಾಜಿ ಸಚಿವ ಶ್ರೀಮಂತ ಪಾಟೀಲ್ ಹೇಳಿದರು.
ಕಾಗವಾಡ ಮತಕ್ಷೇತ್ರದ ಕೆಂಪವಾಡ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಾಜಿ ಸಿಎಂ ಯಡಿಯೂರಪ್ಪ ಸರ್ಕಾರದಲ್ಲಿ ಸಚಿವನಾಗಿ ಕಾರ್ಯನಿರ್ವಹಿಸಿದ್ದೇನೆ. ಆದರೆ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ನನ್ನನ್ನು ಕೈಬಿಡಲಾಗಿದೆ. ಮುಂದೆ ಸಚಿವ ಸಂಪುಟದಲ್ಲಿ ನನಗೆ ಮಂತ್ರಿಗಿರಿ ನೀಡುವುದಾಗಿ ಹೈಕಮಾಂಡ್ ಭರವಸೆ ನೀಡಿದೆ ಎಂದರು. ಇದನ್ನೂ ಓದಿ: ಮೊಬೈಲ್ ನುಂಗಿ 4 ದಿನ ಹೊಟ್ಟೆಯಲ್ಲಿಟ್ಟುಕೊಂಡ
ಉತ್ತರ ಕರ್ನಾಟಕಕ್ಕೆ ಸಿಎಂ ಸ್ಥಾನ ಸಿಕ್ಕಿದ್ದು ಸಂತೋಷ ಉಂಟುಮಾಡಿದೆ. ಈ ಭಾಗದಲ್ಲಿ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಬೇಸಿಗೆ ಸಂದರ್ಭದಲ್ಲಿ ಕೃಷ್ಣಾ ನದಿ ಬತ್ತಿ ಹೋಗುತ್ತದೆ. ಆ ಸಮಯದಲ್ಲಿ ಮಹಾರಾಷ್ಟ್ರ ರಾಜ್ಯದಿಂದ ನಮಗೆ ನೀರು ಹರಿಸುವ ಯೋಜನೆ ಒಪ್ಪಂದ ಸದ್ಯದಲ್ಲೇ ಆಗುವುದರಿಂದ ನಮ್ಮ ಭಾಗಕ್ಕೆ ಹೆಚ್ಚಿನ ಅನುಕೂಲ ಆಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ:ಮಳೆಗಾಗಿ ಹುಡುಗಿಯರ ಬೆತ್ತಲ ಮೆರವಣಿಗೆ
ಮರಾಠಾ ಮಹಾಸಭಾ ಸಿಎಂ ಭೇಟಿ ವಿಚಾರವಾಗಿ ಮಾತನಾಡಿದ ಅವರು, ಮರಾಠಾ ಸಮುದಾಯದ ಹಲವಾರು ಬೇಡಿಕೆಗಳ ವಿಚಾರವಾಗಿ ಸಿಎಂ ಭೇಟಿ ಮಾಡಿದ್ದಾರೆ. ಕರ್ನಾಟಕ ಭಾಗದಲ್ಲಿ ಆರ್ಥಿಕ, ಶೈಕ್ಷಣಿಕವಾಗಿ ಹಿಂದುಳಿದ ಕಾರಣಕ್ಕೆ ಹೆಚ್ಚು ಆದ್ಯತೆ ನೀಡುವಂತೆ ಕೇಳಿಕೊಂಡಿದ್ದಾರೆ. ಜೊತೆ ನನಗೆ ಸಚಿವ ಸ್ಥಾನ ನೀಡುವಂತೆಯೂ ಸಿಎಂಗೆ ಮನವಿ ಸಲ್ಲಿಸಿದ್ದಾರೆಂದು ಹೇಳಿದರು.
ಬೆಳಗಾವಿ: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಮೊದಲ ಬಾರಿಗೆ ಭರ್ಜರಿ ಗೆಲುವು ಸಾಧಿಸಿದೆ.
ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 36 ವಾರ್ಡ್ ಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದು, ಮೊದಲ ಬಾರಿಗೆ ಪಾಲಿಕೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಂತಾಗಿದೆ. ಈ ಮೂಲಕ ಎಂಇಎಸ್ ಪುಂಡಾಟಕ್ಕೆ ಸಂಪೂರ್ಣ ಕಡಿವಾಣ ಬಿದ್ದಂತಾಗಿದೆ. ಇದನ್ನೂ ಓದಿ: ವ್ಯಾಕ್ಸಿನ್ ಪಡೆದ ನಂತರ ಮಗನ ಸಾವು – ಪೋಷಕರ ಆರೋಪ
ಬಿಜೆಪಿ 35, ಕಾಂಗ್ರೆಸ್ 10, ಎಂಇಎಸ್ 2, ಪಕ್ಷೇತರ 10 ಹಾಗೂ ಎಐಎಂಐಎಂ 1 ವಾರ್ಡ್ ನಲ್ಲಿ ಗೆಲುವು ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಇದನ್ನೂ ಓದಿ: ಮಗನ ಪ್ರಾಣ ಉಳಿಸಿಕೊಳ್ಳಲು ವೈದ್ಯರ ಕಾಲು ಹಿಡಿದ ತಾಯಿ
ಬಿಜೆಪಿ ವಿಜಯೋತ್ಸವದ ವೇಳೆ ನೂಕು ನುಗ್ಗಲು ಹೆಚ್ಚಾಗಿದ್ದು, ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಈ ಪರಿಣಾಮ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಬೈಕ್ ಗಳು ಜಖಂಗೊಂಡಿವೆ.