Tag: Belgaum

  • ನನ್ನ ಸ್ವಂತ ಹಣದಿಂದ ಕ್ಷೇತ್ರದ ಜನರಿಗೆ ಪರಿಹಾರ ನೀಡುತ್ತೇನೆ: ಶ್ರೀಮಂತ ಪಾಟೀಲ್

    ನನ್ನ ಸ್ವಂತ ಹಣದಿಂದ ಕ್ಷೇತ್ರದ ಜನರಿಗೆ ಪರಿಹಾರ ನೀಡುತ್ತೇನೆ: ಶ್ರೀಮಂತ ಪಾಟೀಲ್

    ಬೆಳಗಾವಿ: ಸರ್ಕಾರ ನೆರೆ ಪರಿಹಾರ ನೀಡದೇ ಇದ್ದರೆ ನನ್ನ ಸ್ವಂತ ಹಣದಿಂದ ಕ್ಷೇತ್ರದ ಜನರಿಗೆ ಪರಿಹಾರ ನೀಡುತ್ತೇನೆ ಎಂದು ಮಾಜಿ ಸಚಿವ ಹಾಗೂ ಕಾಗವಾಡ ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್ ಹೇಳಿದ್ದಾರೆ.

    ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೆಂಪವಾಡ ಗ್ರಾಮದ ನೆರೆ ಪರಿಹಾರದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೆರೆ ಪೀಡಿತ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ವಿಳಂಬವಾಗುತ್ತಿದೆ. ಈ ಕುರಿತು ನಾನು ಸಿಎಂ ಬಸವರಾಜ ಬೊಮ್ಮಾಯಿ ಅವರ ಬಳಿ ಮಾತನಾಡಿದ್ದೇನೆ. ಅವರಿಗೆ ಪರಿಹಾರ ನೀಡುವಂತೆ ಮನವಿ ಮಾಡಿದ್ದೇನೆ. ಸಿಎಂ ಪರಿಹಾರ ನೀಡುತ್ತಾರೆಂಬ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಇದನ್ನೂ ಓದಿ:ಕಾರು ಅಪಘಾತಕ್ಕೂ ಮುನ್ನ ಮದ್ಯ ಖರೀದಿಸಿದ್ದ ಇಷಿತಾ, ಬಿಂದು

    ಒಂದು ವೇಳೆ ಸರ್ಕಾರ ಪರಿಹಾರ ನೀಡದೇ ಇದ್ದರೆ ನನ್ನ ಜೇಬಿನಿಂದ ನನ್ನ ಕ್ಷೇತ್ರದ ಸಂತ್ರಸ್ತರಿಗೆ ಪರಿಹಾರ ನೀಡುತ್ತೇನೆ. ಪರಿಹಾರ ಸಿಗದ ಕಾರಣ ಕ್ಷೇತ್ರದ ಜನ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದರು. ಯಾರಿಗೂ ಪ್ರತಿಭಟನೆ ಮಾಡದಂತೆ ನಾನು ವಿನಂತಿ ಮಾಡಿಕೊಂಡಿದ್ದೇನೆ ಎಂದು ತಿಳಿಸಿದರು.ಇದನ್ನೂ ಓದಿ:ಹೆಲಿಕಾಪ್ಟರ್ ಗೆ ಮೃತ ದೇಹವನ್ನು ನೇತು ಹಾಕಿ ಹಾರಾಟ – ಮತ್ತೆ ಶುರುವಾಯ್ತು ಉಗ್ರರ ಅಟ್ಟಹಾಸ

    ಪ್ರವಾಹ ಸಂದರ್ಭದಲ್ಲಿ ನದಿ ತೀರದ ಜನರು ತಮ್ಮ ಆಹಾರ ಸಾಮಗ್ರಿ ಹಾಗೂ ಜಾನುವಾರುಗಳ ಸ್ಥಳಾಂತರಕ್ಕೆ ಹಣ ಖರ್ಚು ಮಾಡಿದ್ದಾರೆ. ಹೀಗಾಗಿ ನದಿ ನೀರು ಹೋದ ಮನೆಗಳ ಜೊತೆಗೆ ನದಿ ತೀರದ ಮನೆಗಳಿಗೂ ಪರಿಹಾರ ನೀಡಬೇಕು. ಇಲ್ಲವಾದಲ್ಲಿ ನಾನೇ ನನ್ನ ಜೇಬಿನಿಂದ ಪರಿಹಾರ ನೀಡುತ್ತೇನೆ ಎಂದು ಹೇಳಿದರು.ಇದನ್ನೂ ಓದಿ:ಸಾರ್ವಜನಿಕ ಗಣೇಶೋತ್ಸವ ಸೆಪ್ಟೆಂಬರ್ 5 ರಂದು ತೀರ್ಮಾನ : ಬೊಮ್ಮಾಯಿ

  • ಜಾತಿ, ಭಾಷೆಯ ವಿಷಬೀಜ ಬಿತ್ತಿ ಅಧಿಕಾರ ಹಿಡಿಯುವ ತಂತ್ರ ಪ್ರಾರಂಭವಾಗಿದೆ: ಈರಣ್ಣ ಕಡಾಡಿ

    ಜಾತಿ, ಭಾಷೆಯ ವಿಷಬೀಜ ಬಿತ್ತಿ ಅಧಿಕಾರ ಹಿಡಿಯುವ ತಂತ್ರ ಪ್ರಾರಂಭವಾಗಿದೆ: ಈರಣ್ಣ ಕಡಾಡಿ

    ಬೆಳಗಾವಿ: ಜಾತಿ, ಭಾಷೆಯ ವಿಷಬೀಜ ಬಿತ್ತಿ ಅಧಿಕಾರ ಹಿಡಿಯುವ ತಂತ್ರ ಪ್ರಾರಂಭವಾಗಿದೆ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದ್ದಾರೆ.

    ನಾಡದ್ರೋಹಿ ಎಂಇಎಸ್ ಭಾಷೆ, ಜಾತಿ ಆಧಾರದಲ್ಲಿ ಮತಯಾಚನೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜನ ಇದರಿಂದ ರೋಸಿ ಹೋಗಿದ್ದು, ನಾವು ಅಭಿವೃದ್ಧಿಪರ ಮತ ಕೇಳಬೇಕಾಗುತ್ತೆ. ಭಾಷೆ, ಜಾತಿ ವಿಚಾರ ಬಿಟ್ಟು ಅಭಿವೃದ್ಧಿ ಪರ ಮತ ಮಾಡಲು ಮನವಿ ಮಾಡ್ತೇನೆ. ಕೇವಲ ಜಾತಿ, ಭಾಷೆಯ ವಿಷಬೀಜ ಬಿತ್ತಿ ಅಧಿಕಾರ ಹಿಡಿಯುವ ತಂತ್ರ ಪ್ರಾರಂಭವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ:ಸರ್ಕಾರದಿಂದ ಆದೇಶ ಹೊರಡಿಸಿ ಪುಣ್ಯ ಕಟ್ಟಿಕೊಳ್ಳಿ- ಮಾಜಿ ಸ್ಪೀಕರ್ ವಿರುದ್ಧ ಪೊಲೀಸರ ಆಕ್ರೋಶ

    ಪಾಲಿಕೆ ಚುನಾವಣೆಯಲ್ಲಿ ಎಂಇಎಸ್ ಎಂ ಪ್ಲಸ್ ಎಂ ಫಾರ್ಮುಲಾ ವಿಚಾರವಾಗಿ ಮಾತನಾಡಿದ ಅವರು, ನಾನು ನಗರದ ಮರಾಠಿ ಜನರಲ್ಲಿ ವಿನಂತಿ ಮಾಡಿಕೊಳ್ಳುತ್ತಿದ್ದೇನೆ. ಛತ್ರಪತಿ ಶಿವಾಜಿ ಮಹಾರಾಜರು ಹಿಂದವಿ ಸ್ವರಾಜ್ ಸ್ಥಾಪನೆಗೆ ಹೋರಾಟ ಮಾಡಿದ್ದರು. ಛತ್ರಪತಿ ಶಿವಾಜಿ ವಂಶಸ್ಥರು ಎಂಐಎಂಗೆ ಅವಕಾಶ ಕೊಡಲ್ಲ ಎಂಬ ವಿಶ್ವಾಸವಿದೆ. ಇವತ್ತು ಬಿಜೆಪಿ ಅಧಿಕಾರ ಬಂದ್ಮೇಲೆ ದೇಶ, ರಾಜ್ಯದಲ್ಲಿ ಬದಲಾವಣೆ ಆಗಿದೆ. ಆ ರೀತಿ ಬದಲಾವಣೆ ಬೆಳಗಾವಿ ನಗರಕ್ಕೂ ತರುವ ಕಲ್ಪನೆ ಇದೆ ಎಂದು ಆಸೆಯನ್ನು ವ್ಯಕ್ತಪಡಿಸಿದ್ದಾರೆ.

    ಬೆಳಗಾವಿ ಜನ ಎಂಇಎಸ್‍ನಿಂದ ರೋಸಿ ಹೋಗಿದ್ದು, ಅಭಿವೃದ್ಧಿ ಪರ ಮತ ಕೊಡ್ತಾರೆ. ಕೇವಲ ಜನರ ಭಾವನೆ ಕೆರಳಿಸಿ ಚುನಾವಣೆ ಮಾಡಲಾಗುವುದಿಲ್ಲ. ಇದರಿಂದ ಜನ ಬೇಸತ್ತು ಹೋಗಿದ್ದು, ಮುಂದಿನ ದಿನಗಳಲ್ಲಿ ತಕ್ಕ ಉತ್ತರ ಕಲಿಸುತ್ತಾರೆ ಎಂದು ಹೇಳಿದ್ದಾರೆ.ಇದನ್ನೂ ಓದಿ:ಟಿವಿ, ರೇಡಿಯೋಗಳಲ್ಲಿ ಮಹಿಳೆಯ ಧ್ವನಿ ಬ್ಯಾನ್- ತಾಲಿಬಾನ್ ಆದೇಶ

    ಭಾಷೆ, ಜಾತಿ ಆಧಾರದ ಮೇಲೆ ಎಂಇಎಸ್ ಮತಯಾಚನೆ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಚುನಾವಣಾ ಆಯೋಗ ಈ ಕುರಿತು ಕ್ರಮ ಕೈಗೊಳ್ಳಬೇಕು ಆಗ್ರಹ ಮಾಡ್ತೇನೆ. ಪೊಲೀಸ್ ವ್ಯವಸ್ಥೆ, ಚುನಾವಣಾ ಆಯೋಗ ಸ್ವಯಂಪ್ರೇರಿತವಾಗಿ ಕೆಲಸ ಮಾಡಬೇಕಾಗುತ್ತೆ. ನಮ್ಮದು ಮನೆ ಮನೆಗೆ ಹೋಗಿ ನಮ್ಮ ಪಕ್ಷದ ಬಗ್ಗೆ ತಿಳಿಸುವುದು. ಈ ಬಾರಿ ಬಿಜೆಪಿಯಿಂದ ಮೇಯರ್ ಆಯ್ಕೆ ಮಾಡುವುದಕ್ಕೆ ಯಾವ ರೀತಿಯ ಪ್ರಯತ್ನಬೇಕು ಅದನ್ನು ನಾವು ಮಾಡುತ್ತೇವೆ ಎಂದು ತಿಳಿಸಿದರು.

  • ಪೊಲೀಸರಿಗೆ ಒತ್ತಡ ಇದೆ, ಬೆಳಗ್ಗೆಯಿಂದ ರಾತ್ರಿಯವರೆಗೂ ಕೆಲಸ ಮಾಡ್ತಾರೆ: ಸತೀಶ್ ಜಾರಕಿಹೊಳಿ

    ಪೊಲೀಸರಿಗೆ ಒತ್ತಡ ಇದೆ, ಬೆಳಗ್ಗೆಯಿಂದ ರಾತ್ರಿಯವರೆಗೂ ಕೆಲಸ ಮಾಡ್ತಾರೆ: ಸತೀಶ್ ಜಾರಕಿಹೊಳಿ

    – ಇನ್ನೇನು ಮಾಡೋದು ಬಿಜೆಪಿ ಹಣೆಬರಹ ಅಷ್ಟೇ

    ಬೆಳಗಾವಿ: ಪೊಲೀಸರಿಗೆ ಒತ್ತಡ ಇದೆ, ಬೆಳಗ್ಗೆಯಿಂದ ರಾತ್ರಿಯವರೆಗೂ ಕೆಲಸ ಮಾಡುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

    ಮೈಸೂರಿನ ಗ್ಯಾಂಗ್‍ರೇಪ್ ಆರೋಪಿಗಳ ಬಂಧನ ವಿಚಾರ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದೆ ಈ ರೀತಿ ಘಟನೆ ಆಗದಂತೆ ಕ್ರಮ ಕೈಗೊಳ್ಳಬೇಕು. ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದೆ. ಹೊಸ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ಗಮನ ಹರಿಸಬೇಕು. ಪೊಲೀಸ್ ವ್ಯವಸ್ಥೆಯಲ್ಲಿ ಸಮಗ್ರ ಬದಲಾವಣೆಯಾಗಬೇಕು ಎಂದು ಒತ್ತಾಯ ಮಾಡಿದ್ದಾರೆ.ಇದನ್ನೂ ಓದಿ: ಮಹಿಳೆಯರಿಗೆ ಹೇಗೆ ಗೌರವ ಕೊಡಬೇಕು ಎಂಬುದನ್ನು ಗಂಡು ಮಕ್ಕಳಿಗೆ ಮನೆಯಲ್ಲಿ ಹೇಳಬೇಕು: ಪೂಜಾಗಾಂಧಿ

    ಒಂದೊಂದು ಪೊಲೀಸ್ ಠಾಣೆಯಲ್ಲಿ ಹತ್ತತ್ತು ಸಿಬ್ಬಂದಿ ಕೊರತೆ ಇದೆ. ಬೆಳಗ್ಗೆ 8 ರಿಂದ ರಾತ್ರಿ 8ರವರೆಗೆ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಅದಕ್ಕೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಯಾರಿಗೆ ಏನೇ ಆದರೂ ಪೊಲೀಸರು ಬರಲೇಬೇಕು. ಅವರು ಬೆಳಗ್ಗೆಯಿಂದ ರಾತ್ರಿಯವರೆಗೂ ಒತ್ತಡದಲ್ಲಿ ಕೆಲಸ ಮಾಡ್ತಾರೆ. ಹೀಗಾಗಿ ಪೊಲೀಸ್ ಇಲಾಖೆಯಲ್ಲಿ ಸಮಗ್ರ ಬದಲಾವಣೆ ಆಗಬೇಕು ಎಂದು ಪೊಲೀಸರ ಪರವಾಗಿ ನಿಂತಿದ್ದಾರೆ.ಇದನ್ನೂ ಓದಿ:ಕಾಲೇಜಿಗೆಂದು ಹೋದ ವಿದ್ಯಾರ್ಥಿನಿ ಶವವಾಗಿ ಪತ್ತೆ

    ನಮ್ಮಲ್ಲಿ ಯಾವುದೇ ಹೊಸ ತಂತ್ರಜ್ಞಾನವಿಲ್ಲ, ನಾವು ಇನ್ನೂ ಹಳೆಯ ವ್ಯವಸ್ಥೆಯಲ್ಲಿ ಇದ್ದೇವೆ. ಸಮಗ್ರವಾಗಿ ಪೊಲೀಸ್ ಇಲಾಖೆಯಲ್ಲಿ ಬದಲಾವಣೆ ಆಗಬೇಕು. ಹೊಯ್ಸಳ ಹೋಯ್ತು, ಗರುಡ ಹೋಯ್ತು ಈಗ 112 ಟೀಮ್ ಬಂದಿದೆ. ವಾಹನ ಬದಲಾಗುವುದು ಮಾತ್ರವಲ್ಲ ವ್ಯವಸ್ಥೆಯೂ ಬದಲಾಗಬೇಕು. ಎಲ್ಲ ಇಲಾಖೆಯಲ್ಲಿ ಬದಲಾವಣೆ ಆಗಬೇಕು. ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆ ಭರ್ತಿ ಆಗಬೇಕು ಎಂದು ಸಿಎಂಗೆ ಆಗ್ರಹಿಸಿದ್ದಾರೆ.

    ಗೃಹಸಚಿವ ಅರಗ ಜ್ಞಾನೇಂದ್ರ ರೇಪ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಹಿಂದಿನಿಂದಲೂ ಈ ರೀತಿ ಹೇಳಿಕೆ ಕೊಟ್ಟಿದ್ದಾರೆ. ಇನ್ನೇನು ಮಾಡೋದು ಅವರ ಹಣೆಬರಹ ಅಷ್ಟೇ. ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅದರ ಬಗ್ಗೆ ಏನೇನೋ ಹೇಳಿಕೊಳ್ಳುತ್ತಾರೆ. ಮಂತ್ರಿಗಳ ಈ ರೀತಿ ಹೇಳಿಕೆಯಿಂದ ಅವರಿಗೆ ವ್ಯತಿರಿಕ್ತ ಆಗೋ ಸಾಧ್ಯತೆ ಇದೆ. ಕೇಂದ್ರ ಸಚಿವರು, ರಾಜ್ಯದ ಸಚಿವರು ಸಾಕಷ್ಟು ಬಾರಿ ಈ ಕುರಿತು ಹೇಳಿಕೆ ಕೊಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

  • ಜೈಲಿಗೆ ಬಂದು ಸಾಕಷ್ಟು ಓದುವುದನ್ನು ಕಲಿತೆ, ಇದು ನನ್ನ ಜೀವನದಲ್ಲಿ ಅತೀ ದೊಡ್ಡ ಬದಲಾವಣೆ: ವಿನಯ್ ಕುಲಕರ್ಣಿ

    ಜೈಲಿಗೆ ಬಂದು ಸಾಕಷ್ಟು ಓದುವುದನ್ನು ಕಲಿತೆ, ಇದು ನನ್ನ ಜೀವನದಲ್ಲಿ ಅತೀ ದೊಡ್ಡ ಬದಲಾವಣೆ: ವಿನಯ್ ಕುಲಕರ್ಣಿ

    – ಜೈಲಿನಿಂದ ಹೊರ ಬಂದ ಬಳಿಕ ಮೊದಲ ಪ್ರತಿಕ್ರಿಯೆ

    ಬೆಳಗಾವಿ: ಬರೋಬ್ಬರಿ 9 ತಿಂಗಳ ಜೈಲು ವಾಸದ ಬಳಿಕ ಮಾಜಿ ಸಚಿವ ವಿನಯ್ ಕುಲಕರ್ಣಿ ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗಿದ್ದು, ಆದೇಶ ಪ್ರತಿ ತಲುಪಿದ ಹಿನ್ನೆಲೆ ಇಂದು ಜೈಲಿನಿಂದ ಹೊರ ಬಂದಿದ್ದಾರೆ.

    ಜೈಲಿನಿಂದ ಹೊರ ಬರುತ್ತಿದ್ದಂತೆ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ನಾನು ನಿರ್ದೋಷಿಯಾಗಿ ಹೊರಗೆ ಬರುತ್ತೇನೆ ಎಂದು ಈ ಹಿಂದೆಯೇ ಹೇಳಿದ್ದೆ. ನ್ಯಾಯಾಂಗದ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ, ಈ ಹೋರಾಟದಿಂದ ಹೊರಗೆ ಬರುತ್ತೇನೆ. ರಾಜಕೀಯ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಕುಟುಂಬಸ್ಥರು ನನಗಾಗಿ ಸಾಕಷ್ಟು ಶ್ರಮ ವಹಿಸಿದ್ದಾರೆ. ಅವರೆಲ್ಲರಿಗೂ ನಾನು ಋಣಿಯಾಗಿದ್ದೇನೆ ಎಂದರು.

    ನಾನು ಸಾಮಾನ್ಯ ರೈತ ಕುಟುಂಬದಿಂದ ಬಂದು ಈ ಮಟ್ಟಕ್ಕೆ ಬೆಳೆದಿದ್ದೇನೆ. ಕ್ಷೇತ್ರದ ಜನ, ನನ್ನನ್ನು ನಂಬಿದವರಿಗಾಗಿ ಎಂತಹದ್ದೇ ಹೋರಟವಾದರೂ ಮಾಡಲು ಸಿದ್ಧ. ಬರೋಬ್ಬ 9 ತಿಂಗಳು 16 ದಿನಗಳ ಕಾಲ ಜೈಲು ವಾಸ ಅನುಭವಿಸಿದ್ದೇನೆ. ನನ್ನ ಜೀವನದಲ್ಲಿ ಇದೊಂದು ಟಾಸ್ಕ್, ನಿಭಾಯಿಸಿದ್ದೇನೆ. ಕಾನೂನು ಪ್ರಕಾರ ನಡೆದುಕೊಂಡಿದ್ದೇನೆ. ಇನ್ನೊಂದು ಖುಷಿ ವಿಚಾರ ಎಂದರೆ ನನಗೆ ಓದುವ ಹವ್ಯಾಸ ಇರಲಿಲ್ಲ. ಆದರೆ ಜೈಲಿಗೆ ಬಂದ ಮೇಲೆ ಸಾಕಷ್ಟು ಓದುವುದನ್ನು ಕಲಿತಿದ್ದೇನೆ. ಸಾಕಷ್ಟು ವಿಚಾರಗಳನ್ನು ತಿಳಿದುಕೊಂಡಿದ್ದೇನೆ. ನನ್ನ ಜೀವನದಲ್ಲಿ ದೊಡ್ಡ ಬದಲಾವಣೆಯನ್ನು ಕಂಡುಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಯಾವ ರೀತಿ ಹೆಜ್ಜೆ ಇಡಬೇಕು ಎಂಬುದರ ಕುರಿತು ಹಲವಾರು ವಿಚಾರಗಳನ್ನು ಅರಿತಿದ್ದೇನೆ ಎಂದರು.

    ಹೊರ ಬರುತ್ತಿದ್ದಂತೆ ಅಭಿಮಾನಿಗಳು ಮುತ್ತಿದ್ದು, ಜನ ಜಾತ್ರೆ ಉಂಟಾಗಿದೆ. ಅಲ್ಲದೆ ಕಾರ್ ನಲ್ಲೇ ವಿನಯ್ ಕುಲಕರ್ಣಿಯವರನ್ನು ಮೆರವಣಿಗೆ ಮೂಲಕ ಕರೆದೊಯ್ಯಲಾಗಿದೆ. ಅಭಿಮಾನಿಗಳು ಕಿಕ್ಕಿರಿದು ತುಂಬಿದ್ದು ಹಾರ ಹಾಕಿ, ಹೂವು ಎರಚಿ ಸಂಭ್ರಮಿಸುತ್ತಿದ್ದಾರೆ.

    ಇದೀಗ ವಿನಯ್ ಕುಲಕರ್ಣಿ ಬೆಳಗಾವಿಯ ಶಿವಬಸವ ನಗರದಲ್ಲಿರುವ ನಾಗನೂರು ರುದ್ರಾಕ್ಷಿಮಠಕ್ಕೆ ಭೇಟಿ ನೀಡಿ ಮಠದ ಅಲ್ಲಮಪ್ರಭು ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ. ರುದ್ರಾಕ್ಷಿಮಠಕ್ಕೆ ಭೇಟಿ ಬಳಿಕ ಮಧ್ಯಾಹ್ನ ಬೆಂಗಳೂರಿಗೆ ತೆರಳುವ ಸಾಧ್ಯತೆ ಇದೆ ಎನ್ನಲಾಗಿದೆ. ಸಾಂಬ್ರಾ ಏರ್‍ಪೋರ್ಟ್‍ಗೆ ತೆರಳಿ ಮಧ್ಯಾಹ್ನ 3.40ರ ಫ್ಲೈಟ್‍ಗೆ ಬೆಂಗಳೂರಿಗೆ ತೆರಳುವ ಸಾಧ್ಯತೆ ಇದೆ.

    ವಿನಯ್ ಕುಲಕರ್ಣಿಯವರಿಗೆ ಗುರುವಾರ ಜಾಮೀನು ನೀಡಲಾಗಿದೆ. ಆದರೆ ಶುಕ್ರವಾರ ಕೋರ್ಟ್ ಆದೇಶದ ಪ್ರತಿ ಸಿಗದ ಹಿನ್ನೆಲೆ ಬಿಡುಗಡೆ ಸಾಧ್ಯವಾಗಿರಲಿಲ್ಲ. ಕೋರ್ಟ್ ಆದೇಶ ಪ್ರತಿಯನ್ನು ಇ-ಮೇಲ್ ಮಾಡದೆ, ಪೋಸ್ಟ್ ಮೂಲಕ ಕಳುಹಿಸಲಾಗಿತ್ತು. ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆ ಸರ್ಕಾರಿ ಕಚೇರಿಗಳಿಗೆ ರಜೆ ಇರುವುದರಿಂದ ಪೋಸ್ಟ್ ಮೂಲಕ ಬರಬೇಕಿರುವ ಆದೇಶ ಪ್ರತಿ ತಲುಪುವುದು ವಿಳಂಬವಾಗಿತ್ತು.

    ಹೀಗಾಗಿ 2020ರ ನವೆಂಬರ್ 5ರಂದು ಹಿಂಡಲಗಾ ಜೈಲು ಸೇರಿದ್ದ ವಿನಯ್ ಕುಲಕರ್ಣಿಗೆ ಜಾಮೀನು ಸಿಕ್ಕರೂ ಬಿಡಗಡೆ ಭಾಗ್ಯ ಲಭಿಸಿರಲಿಲ್ಲ. ಅಂತಿಮವಾಗಿ ಇಂದು ಸ್ಪೀಡ್ ಪೋಸ್ಟ್ ಮೂಲಕ ಆದೇಶ ಪ್ರತಿ ಹಿಂಡಲಗಾ ಜೈಲು ತಲುಪಿದ್ದು, ಇದೀಗ ಹೊರ ಬಂದಿದ್ದಾರೆ.

  •  ಕಂಟೇನರ್​ಗೆ ಲಾರಿ ಡಿಕ್ಕಿ – ಇಬ್ಬರ ದುರ್ಮರಣ

     ಕಂಟೇನರ್​ಗೆ ಲಾರಿ ಡಿಕ್ಕಿ – ಇಬ್ಬರ ದುರ್ಮರಣ

    ಬೆಳಗಾವಿ: ಕಂಟೇನರ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿಯ ಹೊರ ವಲಯದಲ್ಲಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬಳಿಯ ವಂಟಮೂರಿ ಘಾಟ್‍ನಲ್ಲಿ ನಡೆದಿದೆ.

    ಮಂಗಳವಾರ ತಡರಾತ್ರಿ 1 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು, ಶಿಗ್ಗಾಂವಿ ಕಡೆಯಿಂದ ಮಹಾರಾಷ್ಟ್ರಕ್ಕೆ ಮೆಕ್ಕೆಜೋಳದ ಹಿಟ್ಟನ್ನು ತುಂಬಿಕೊಂಡು ಹೋಗುತ್ತಿದ್ದ ಕಂಟೇನರ್, ರಾಷ್ಟ್ರೀಯ ಹೆದ್ದಾರಿ-4ರ ಸುತಗಟ್ಟಿ ಇಳಿಜಾರು ಪ್ರದೇಶದಲ್ಲಿ ಡಿವೈಡರ್ ಹಾರಿ ಮಹಾರಾಷ್ಟ್ರ ಕಡೆಯಿಂದ ಬೆಳಗಾವಿಗೆ ಈರುಳ್ಳಿ ತುಂಬಿಕೊಂಡು ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

    ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನೀರಜ್ ಹಾಗೂ ರಾಜೇಂದ್ರ ಎಂಬ ಇಬ್ಬರು ಮೃತಪಟ್ಟಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಕಂಟೇನರ್ ನ ಮೇಲ್ಭಾಗ ಕಿತ್ತು ಬಿದ್ದು, ಔಷಧಿ ತುಂಬಿಕೊಂಡು ನಿಂತಿದ್ದ ಕಂಟೇನರ್​ಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಕಾಕತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ:ಮಹಿಳೆಗೆ ಪ್ಯಾಂಟ್ ಬಿಚ್ಚಿ ಮರ್ಮಾಂಗ ತೋರಿಸಿದ ಗ್ರೇಡ್ 2 ತಹಶೀಲ್ದಾರ್

  • ಜನರ ಆರೋಗ್ಯ ಕಾಳಜಿಗಾಗಿ ಉಚಿತ ಅಂಬುಲೆನ್ಸ್ ನೀಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

    ಜನರ ಆರೋಗ್ಯ ಕಾಳಜಿಗಾಗಿ ಉಚಿತ ಅಂಬುಲೆನ್ಸ್ ನೀಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

    ಬೆಳಗಾವಿ: ಗ್ರಾಮೀಣ ವಿಧಾನಸಭಾ ಕ್ಷೇತ್ರದ ದೇಸೂರು ಗ್ರಾಮಕ್ಕೆ ಲಕ್ಷ್ಮೀ ತಾಯಿ ಫೌಂಡೇಶನ್ ಹಾಗೂ ಹರ್ಷ ಶುಗರ್ಸ್ ವತಿಯಿಂದ ಉಚಿತ ಅಂಬ್ಯುಲೆನ್ಸ್ ವಾಹನದ ಸೇವೆಯನ್ನು ಒದಗಿಸಲಾಗಿದೆ.

    ಕೊರೊನಾ ಸಂಕಷ್ಟದ ಸಮಯದಲ್ಲಿ ಸೋಂಕಿನಿಂದಾಗಿ ಜನರು ತತ್ತರಿಸಿದ್ದಾರೆ. ಜನರ ಆರೋಗ್ಯದ ವಿಶೇಷ ಕಾಳಜಿಯಡಿ ಈ ಸೇವೆ ಒದಗಿಸಲಾಗಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಇದನ್ನೂ ಓದಿ: ಅಂದು ವಿರೋಧಿಗಳು-ಇಂದು ಸ್ನೇಹಿತರು: ಮೂವರು ಸೇರಿ ಬರ್ತ್ ಡೇ ಆಚರಣೆ

    ಜನರು ಭಯಪಡದೇ ಹೆಚ್ಚಿನ ಪ್ರಮಾಣದಲ್ಲಿ ಗಂಟಲು ದ್ರವಗಳ ಮಾದರಿಯ ನೀಡಿ ಪರೀಕ್ಷಿಸಿಕೊಳ್ಳಬೇಕು. ಜೊತೆಗೆ ಕೋವಿಡ್ ಲಸಿಕೆಗಳನ್ನು (ವ್ಯಾಕ್ಸಿನೇಷನ್) ತ್ವರಿತಗತಿಯಲ್ಲಿ ಹಾಕಿಸಿಕೊಳ್ಳಬೇಕು. ಅಲ್ಲದೆ ಮಾಸ್ಕ್, ಸ್ಯಾನಿಟೈಜರ್‍ಗಳನ್ನು ಕಡ್ಡಾಯವಾಗಿ ಬಳಸಬೇಕು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು ಹಾಗೂ ಚಿಕ್ಕ ಮಕ್ಕಳ ಬಗ್ಗೆ ಜಾಗ್ರತೆ ಇರಲಿ ಎಂದು  ಲಕ್ಷ್ಮಿ ಹೆಬ್ಬಾಳ್ಕರ್   ಕ್ಷೇತ್ರದ ಜನರಲ್ಲಿ ವಿನಂತಿಸಿದ್ದಾರೆ.

    ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಕೆಯ ಹಾದಿ ಮುಂದುವರೆದಿದ್ದು, ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯಾವಾದ 24 ಗಂಟೆಗಳ ಅವಧಿಯಲ್ಲಿ 91,702 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 3,403 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,92,74,823ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 3,63,079ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 11,21,671ಕ್ಕೆ ಇಳಿಕೆಯಾಗಿದೆ.

  • ಸುಸಜ್ಜಿತ ಸಂಚಾರಿ ಆಸ್ಪತ್ರೆ ಉದ್ಘಾಟಿಸಿದ ಡಿಸಿಎಂ ಲಕ್ಷ್ಮಣ ಸವದಿ

    ಸುಸಜ್ಜಿತ ಸಂಚಾರಿ ಆಸ್ಪತ್ರೆ ಉದ್ಘಾಟಿಸಿದ ಡಿಸಿಎಂ ಲಕ್ಷ್ಮಣ ಸವದಿ

    ಚಿಕ್ಕೋಡಿ: ಕೊರೊನಾ ನಿಯಂತ್ರಣಕ್ಕಾಗಿ ವಿಶೇಷವಾಗಿ ನಿರ್ಮಿಸಿರುವ ಸುಸಜ್ಜಿತ ಪ್ರಥಮ ಚಿಕಿತ್ಸೆ ಸಂಚಾರಿ ಆಸ್ಪತ್ರೆಯನ್ನು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಉದ್ಘಾಟಿಸಿದರು.

    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಪರಿವರ್ತನೆಗೊಳಿಸಿ ಕೊಡಲಾದ ಈ ಬಸ್ಸಿನಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್ ಅಳವಡಿಸಿದ ನಾಲ್ಕು ಬೆಡ್, ಒಂದು ವೆಂಟಿಲೇಟರ್ ಬೆಡ್ ಸೇರಿದಂತೆ ಆಸ್ಪತ್ರೆ ಸಿಬ್ಬಂದಿ ಈ ಬಸ್ಸಿನಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ. ಇದನ್ನೂ ಓದಿ: ಈ ವಯಸ್ಸಿನಲ್ಲೂ ಬಿಎಸ್‍ವೈ ಉತ್ತಮ ಕೆಲಸ ಮಾಡುತ್ತಿದ್ದಾರೆ, ಬದಲಾವಣೆ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್ ಜೋಶಿ

    ಬಸ್ ಉದ್ಘಾಟಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಹಳಷ್ಟು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಕ್ಸಿಜನ್ ಬೆಡ್ ಇಲ್ಲದ ಕಾರಣ ಪ್ರಾಥಮಿಕ ಚಿಕಿತ್ಸೆ ಕೊಡಲು ಮೊಬೈಲ್ ಆಸ್ಪತ್ರೆಗಳನ್ನ ಆರಂಭಿಸಲಾಗಿದೆ. ಬೆಂಗಳೂರು, ರಾಯಚೂರು, ಕೊಪ್ಪಳ, ಬೆಳಗಾವಿ ಸೇರಿದಂತೆ ಹಲವೆಡೆ ಈ ರೀತಿಯ ಬಸ್ಸುಗಳ ಸಂಚಾರ ಮಾಡಲಿವೆ. ಸದ್ಯ ಕರ್ನಾಟಕದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದಿದೆ. ಮೂರನೇ ಅಲೆಗೆ ಸಜ್ಜಾಗುವ ದೂರ ದೃಷ್ಟಿಯಿಂದ ಸಾರಿಗೆ ಇಲಾಖೆಯಿಂದ ಇಂಥ ಬಸ್ಸುಗಳನ್ನ ಚಿಕಿತ್ಸೆಗಾಗಿ ಸಂಚಾರಿ ಆಸ್ಪತ್ರೆಗಳನ್ನ ನಿರ್ಮಾಣ ಮಾಡಲಾಗಿದೆ ಎಂದರು. ಇದನ್ನೂ ಓದಿ: ಎಲ್ಲಿಯವರೆಗೆ ಹೈಕಮಾಂಡ್‍ಗೆ ವಿಶ್ವಾಸ ಇರುತ್ತೋ ಅಲ್ಲಿವರೆಗೂ ನಾನು ಸಿಎಂ ಆಗಿರುತ್ತೇನೆ – ಬಿಎಸ್‍ವೈ

    ಈ ಸಂದರ್ಭದಲ್ಲಿ ತಹಶೀಲ್ದಾರ ದುಂಡಪ್ಪ ಕೋಮಾರ, ತಾಲೂಕಾ ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ರವಿ ಬಂಗಾರಪ್ಪನವರ, ಉಪ ತಹಶೀಲ್ದಾರ ಮಹಾದೇವ ಬಿರಾದಾರ, ಡಾ.ಬಸನಗೌಡ ಕಾಗೆ, ಡಾ. ಸಿ ಎಸ್ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

  • 100 ಮರಗಳನ್ನು ನೆಟ್ಟು ಪರಿಸರ ದಿನ ಆಚರಣೆ

    100 ಮರಗಳನ್ನು ನೆಟ್ಟು ಪರಿಸರ ದಿನ ಆಚರಣೆ

    ತುಮಕೂರು/ ಚಿಕ್ಕೋಡಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಅರಣ್ಯ ಇಲಾಖೆ ಹಾಗೂ ಪುರಸಭೆ ಹಾಗೂ ಸಂಕೇಶ್ವರ ಫೌಂಡೇಶನ್  100ಕ್ಕೂ ಹೆಚ್ಚು ಮರಗಳನ್ನೂ ನೆಡಲಾಯಿತ್ತು. ತುಮಕೂರಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಅವರು ಸಸಿ ನೆಟ್ಟು ನೀರುಣಿಸಿದರು.

    ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಪರಿಸರ ದಿನದ ನಿಮಿತ್ತವಾಗಿ 100 ಕ್ಕೂ ಹೆಚ್ಚು ಮರಗಳನ್ನ ನೆಡಲಾಯಿತು. ಸಂಕೇಶ್ವರ ಪುರಸಭೆ ಮುಖ್ಯಾಧಿಕಾರಿ ಆದ ಜಗದೀಶ್ ಈಟಿ ಸಹಕಾರದೊಂದಿಗೆ ಸುಮಾರು 100 ಕ್ಕೂ ಹೆಚ್ಚು ಮರಗಳನ್ನ ಸಂಕೇಶ್ವರದ ದನಗಳ ಪೇಟೆ ಹಾಗೂ ಎಸ್ ಡಿ ವಿ ಎಸ್ ಶಾಲಾ ಮೈದಾನದಲ್ಲಿ ನೆಡಲಾಯಿತು. ಇದನ್ನೂ ಓದಿ: ಮೃಗಾಲಯಗಳನ್ನ ಉಳಿಸಿ ಬೆಳೆಸಿ: ದರ್ಶನ್ ಮನವಿ

    ಕೊರೊನಾ ಸಂದರ್ಭದಲ್ಲಿ ಹಣ ನೀಡಿ ಆಕ್ಸಿಜನ್ ಪಡೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಹೆಚ್ಚಿನ ಮರಗಳನ್ನ ನೆಟ್ಟರೇ ಮಾತ್ರ ಮುಂದಿನ ದಿನಗಳಲ್ಲಿ ಉತ್ತಮ ಆಕ್ಸಿಜನ್ ಸಿಗಲು ಸಾಧ್ಯ ಇಲ್ಲವಾದಲ್ಲಿ ಪರಿಸ್ಥಿತಿ ಸಾಕಷ್ಟು ಹದಗೆಡಲಿದೆ ಎಂದು ಪುರಸಭೆ ಸದಸ್ಯ ಹಾಗೂ ವೈದ್ಯರಾಗಿರುವ ಡಾ ಮಂದಾರ ಹಾವಳ್ ಹೇಳಿದ್ದಾರೆ. ಈ ಸಂದರ್ಭದಲ್ಲಿ ಎಸ್‍ಡಿವಿಎಸ್ ಕಾಲೇಜಿನ ಪ್ರಾಂಶುಪಾಲರಾದ ಮುನ್ನೊಳೀ ಕ್ರೀಡಾ ಪ್ರೇಮಿ ಅಮಿತ್ ಘಸ್ತಿ ಹಾಗೂ ಸಂಕೇಶ್ವರ ಫ್ರೆಂಡ್ಸ್ ಫೌಂಡೆಶನ ಸದಸ್ಯರಾದ ಉಮೇಶ್ ಗೊಟುರೆ ಲಾಡಜಿ ಮುಲ್ತಾನಿ,ಪ್ರಭಾಕರ ಪಾಟೀಲ್ ಕುಮಾರ ಸೌoಸುದ್ದಿ ,ದಯಾನಂದ್ ಆಲೂರೆ ವಿನಯ ಬಕಾಯಿ ಆನಂದ ಶಿರಕೋಳಿ, ರೋಹಿತ್,ಮಹೇಂದ್ರ ಮಾಳಗಿ ಅರಣ್ಯ ಇಲಾಖೆಯ ಮಲೀಕ್ ಮುಲ್ತಾನಿ ಉಪಸ್ಥಿತರಿದ್ದರು. ಇದನ್ನೂ ಓದಿ: ಖಾಸಗಿ ಅನುದಾನ ರಹಿತ ಶಿಕ್ಷಕರಿಗೆ ಸರ್ಕಾರದಿಂದ ಪ್ಯಾಕೇಜ್ ಘೋಷಣೆ- ಸಿಎಂಗೆ ಬಸವರಾಜ ಹೊರಟ್ಟಿ ಅಭಿನಂದನೆ

    ಕೋವಿಡ್ ಸೋಂಕು ಇರುವುದರಿಂದ ವಿಶ್ವ ಪರಿಸರ ದಿನಾಚರಣೆಯನ್ನು ತುಮಕೂರಿನಲ್ಲಿ ಸರಳವಾಗಿ ಆಚರಿಸಲಾಗುತ್ತಿದೆ. ಜಿಲ್ಲಾದ್ಯಂತ ಗಿಡಗಳನ್ನು ನೆಟ್ಟು ಹಸಿರನ್ನು ಬೆಳೆಸಿ ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಮಕ್ಕಳಲ್ಲಿ ಮರಗಿಡಗಳನ್ನು ಬೆಳೆಸುವ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಿದಾಗ ಮಾತ್ರ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಉಳಿಸಲು ಸಾಧ್ಯ ವಾಗುತ್ತದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಕರೆ ನೀಡಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ವಂಶಿಕೃಷ್ಣ, ಉಪ ವಿಭಾಗಾಧಿಕಾರಿ ಅಜಯ್, ತಹಶಿಲ್ದಾರ್ ಮೋಹನ್, ಮತ್ತಿತರರು ಹಾಜರಿದ್ದರು.

  • ಸತೀಶ್ ಜಾರಕಿಹೊಳಿ ಹುಟ್ಟುಹಬ್ಬ- 10 ಸಾವಿರ ಮಾಸ್ಕ್, ಸ್ಯಾನಿಟೈಸರ್ ವಿತರಣೆ

    ಸತೀಶ್ ಜಾರಕಿಹೊಳಿ ಹುಟ್ಟುಹಬ್ಬ- 10 ಸಾವಿರ ಮಾಸ್ಕ್, ಸ್ಯಾನಿಟೈಸರ್ ವಿತರಣೆ

    ಬೆಳಗಾವಿ: ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಜನ್ಮದಿನದ ನಿಮಿತ್ತ ಇಂದು ಜಾರಕಿಹೊಳಿ ಬೆಂಬಲಿಗರು ತಾಲೂಕಿನ ಕೊರೊನಾ ವಾರಿಯರ್ಸ್‍ಗಳಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಣೆ ಮಾಡಿದರು.

    ಕೊರೊನಾ ವೇಳೆ ಹಗಲಿರುಳು ಶ್ರಮಿಸುತ್ತಿರುವ ಸತೀಶ್ ಜಾರಕಿಹೊಳಿ ಫೌಂಡೇಶನ್ ಹಾಗೂ ಸತೀಶ್ ಶುಗರ್ಸ್ ವತಿಯಿಂದ ಕೊರೊನಾ ವಾರಿಯರ್ಸ್‍ಗಳಾದ ಪೊಲೀಸ್ ಇಲಾಖೆ ಸಿಬ್ಬಂದಿ, ಅಂಗನವಾಡಿ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಬೆಂಬಲಿಗರಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ಕರೆದೊಯ್ದ ಪುತ್ರ ಯತೀಂದ್ರ

    ಈ ವೇಳೆ ಮಾತನಾಡಿದ ಜಾರಕಿಹೊಳಿ ಆಪ್ತ ಸಹಾಯಕ ಕಿರಣ ರಜಪೂತ, ಸತೀಶ್ ಜಾರಕಿಹೊಳಿ ಅವರ ಜನ್ಮದಿನದ ಅಂಗವಾಗಿ ಜಿಲ್ಲೆಯಾದ್ಯಂತ ಕೊರೊನಾ ನಿಯಂತ್ರಣದಲ್ಲಿ ಮುಂಚೂಣಿಯಲ್ಲಿರುವ ವಾರಿಯರ್ಸ್‍ಗಳಿಗೆ ಜಿಲ್ಲೆಯಾದ್ಯಂತ ಸೂಮಾರು 10 ಸಾವಿರಾರ ಸ್ಯಾನಿಟೈಸರ್ 10 ಸಾವಿರ ಮಾಸ್ಕ್ ವಿತರಣೆ ಮಾಡಲಾಗುತ್ತಿದೆ. ಇದಲ್ಲದೇ ಸತೀಶ್ ಜಾರಕಿಹೊಳಿ ಫೌಂಡೇಶನ್ ಹಾಗೂ ಸತೀಶ್ ಶುಗರ್ಸ್ ತಾಲೂಕಿನಲ್ಲಿ ಕೊರೊನಾದಿಂದ ಮೃತಪಟ್ಟ ವ್ಯಕ್ತಿಗಳನ್ನು ಆಯಾ ಧರ್ಮದ ಅನುಸಾರ ಸರಕಾರದ ನಿಯಮದ ಪ್ರಕಾರ ಅಂತ್ಯ ಸಂಸ್ಕಾರ ಮಾಡಲಾಗುತ್ತಿದೆ ಎಂದು ಹೆಳಿದರು. ಇದನ್ನೂ ಓದಿ: ನಾವು ಪವರ್ ಬೆಗ್ಗರ್ಸ್ ಬಗ್ಗೆ ಮಾತನಾಡಲ್ಲ: ಡಿಕೆಶಿ

    ಈ ಸಂಧರ್ಭದಲ್ಲಿ ಯಮಕನಮರಡಿ ಬ್ಲಾಕ್ ಕಾಂಗ್ರೆಸ್ ಯುವ ಘಟಕ ಅಧ್ಯಕ್ಷ ವಿನಯ ಪಾಟೀಲ, ಇಲಿಯಾಸ ಇನಾಮದಾರ, ಅಕ್ಷಯ ವಿರಮುಖ, ಸಂಜು ಗಂಡ್ರಾಳಿ, ಜಿ.ಪಂ ಸದಸ್ಯ ಮಹಾಂತೇಶ ಮಗದುಮ್ಮ ಸೇರಿದಂತೆ ಸತೀಶ್ ಜಾರಕಿಹೊಳಿ ಬೆಂಬಲಿಗರು ಇದ್ದರು.

  • ಸೆಕ್ಯೂರಿಟಿ ಕೈ ಕಾಲು ಕಟ್ಟಿದ ಖದೀಮರು -ನಾಲ್ಕುವರೆ ಲಕ್ಷದ ಮದ್ಯ ಕದ್ದು ಪರಾರಿ

    ಸೆಕ್ಯೂರಿಟಿ ಕೈ ಕಾಲು ಕಟ್ಟಿದ ಖದೀಮರು -ನಾಲ್ಕುವರೆ ಲಕ್ಷದ ಮದ್ಯ ಕದ್ದು ಪರಾರಿ

    ಚಿಕ್ಕೋಡಿ: ಕೊರೊನಾ ಲಾಕ್‍ಡೌನ್ ನಡುವೆ ಸೆಕ್ಯುರಿಟಿ ಕೈ ಕಾಲು ಕಟ್ಟಿ ಸಾರಾಯಿ ಕದ್ದು ಖದೀಮರು ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ.

    ರಾತ್ರಿ ಬಂದು ಸೆಕ್ಯೂರಿಟಿ ಬಳಿ ಸಾರಾಯಿ ಕೇಳಿದ್ದಾರೆ. ಮದ್ಯವನ್ನು ನೀಡದ ಕಾರಣ ಸಾರಾಯಿ ಅಂಗಡಿಯಲ್ಲಿಯೇ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಸೆಕ್ಯೂರಿಟಿ ಕೈ ಕಾಲು ಕಟ್ಟಿಹಾಕಿ 4.5 ಲಕ್ಷ ರೂ ಮೌಲ್ಯದ ಸಾರಾಯಿ ಕದ್ದ ಖದೀಮರು ಎಸ್ಕೇಪ ಆಗಿದ್ದಾರೆ.

    ತಡರಾತ್ರಿ 1 ಗಂಟೆಗೆ ಅಥಣಿಯ ವೆಂಕಟೇಶ್ವರ ವೈನ್ ಶಾಪ್‍ಗೆ ಬಂದ ಖದೀಮರ ಕೈಚಳಕ ತೋರಿದ್ದಾರೆ. ಕಾರಿನಲ್ಲಿ ಬಂದ 6 ಮಂದಿ ನಾಲ್ಕುವರೆ ಲಕ್ಷ ಮೌಲ್ಯದ ಮಧ್ಯ ಕಳ್ಳತನ ಮಾಡಿ ಸೆಕ್ಯೂರಿಟಿ ಗಾರ್ಡ್‍ಗೆ ಜೀವ ಬೆದರಿಕೆ ಹಾಕಿದ್ದಾರೆ. ಘಟನೆಯಿಂದ ಅಥಣಿ ವೈನ್ ಶಾಪ್ ಮಾಲೀಕರು ಬೆಚ್ಚಿ ಬಿದ್ದಿದ್ದು, ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.