Tag: Belgaum

  • ಸಿದ್ದರಾಮಯ್ಯ ಇಂದು ತಮ್ಮ ರಾಜಕೀಯ ನಿವೃತ್ತಿ ಘೋಷಿಸಲಿ: ಅಶ್ವತ್ಥ್‌ನಾರಾಯಣ  ಟಾಂಗ್

    ಸಿದ್ದರಾಮಯ್ಯ ಇಂದು ತಮ್ಮ ರಾಜಕೀಯ ನಿವೃತ್ತಿ ಘೋಷಿಸಲಿ: ಅಶ್ವತ್ಥ್‌ನಾರಾಯಣ ಟಾಂಗ್

    ಬೆಳಗಾವಿ: ದಾವಣಗೆರೆಯಲ್ಲಿ ನಡೆಯುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ 75ನೇ ಜನ್ಮದಿನಕ್ಕೆ ಶುಭಕೋರುತ್ತಲೇ ಅವರಿಗೆ ಸಚಿವ ಅಶ್ವತ್ಥ್‌ನಾರಾಯಣ ಟಾಂಗ್ ನೀಡಿದರು.

    ನಗರದಲ್ಲಿ ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಪಡೀಬೇಕಾ ಅಂತಾ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ನೂರಕ್ಕೆ ನೂರು ರಿಟೈರ್‌ಮೆಂಟ್ ಪಡೆಯಬೇಕು. ಇವರ ಬಾರವನ್ನು ಹೊತ್ತುಕೊಂಡು ಎಲ್ಲಿಗೆ ಹೋಗಬೇಕು. ಇವರ ಮೋಜು ಮಸ್ತಿ ಏನ್ರಿ, ಎಲ್ಲವನ್ನೂ ಮರೆತಿದ್ದಾರೆ. ಇವರ ಕಥೆ ಏನ್ರಿ ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ:  ಸಿದ್ದರಾಮೋತ್ಸವ ಹೌಸ್ ಫುಲ್- ಸಿದ್ದರಾಮಯ್ಯ ಬಗ್ಗೆ ಹಾಡಿಗೆ ಕಂಬಳಿ ಬೀಸಿ ಡ್ಯಾನ್ಸ್ ಮಾಡಿದ ಅಭಿಮಾನಿಗಳು 

    ಇವತ್ತು ಇಂತಹ ಮಹಾಪುರುಷರ ಜನುಮ ದಿನ ಆಗ್ತಿದೆ. ಯಾವ ಕಾರಣಕ್ಕೆ ಜನ್ಮದಿನ ಆಗ್ತಿದೆ ಗೊತ್ತಿಲ್ಲ. ಏನ್ ಕೊಡುಗೆ ಕೊಟ್ಟಿದ್ದಾರೆ ಗೊತ್ತಿಲ್ಲ. ಅವರ ಭಾವನೆಗಳಿಗೆ ನಾನು ಅಗೌರವ ಕೊಡುವಂತದ್ದು ಆಗಬಾರದು. ಒಟ್ಟಾರೆ ಇದು ಅಪ್ರಸ್ತುತ, ಇಂದು ಅವರು ನಿವೃತ್ತಿ ಘೋಷಣೆ ಮಾಡಲಿ ಅಂತಾ ವಿನಂತಿಸುತ್ತೇನೆ ಎಂದರು.

    ಸಿದ್ದರಾಮಯ್ಯ ಅಮೃತ ಮಹೋತ್ಸವ ವಿಚಾರಕ್ಕೆ, ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯರ ಜನ್ಮದಿನಕ್ಕೆ ಹೃದಯಪೂರ್ವಕ ಶುಭಾಶಯಗಳು. ಸಿದ್ದರಾಮಯ್ಯ ಅವರಿಗೆ ಭಗವಂತ ಆಯುರಾರೋಗ್ಯ ಎಲ್ಲ ಕರುಣಿಸಲಿ ಅಂತಾ ಪ್ರಾರ್ಥಿಸುತ್ತೇನೆ.ಸಮಾಜದಲ್ಲಿ ರಾಜಕೀಯ ಪಕ್ಷದ ನಾಯಕನ ಯಾವುದೇ ಕಾರ್ಯಕ್ರಮ ಇದ್ದರೂ ರಾಜಕೀಯ ಕಾರ್ಯಕ್ರಮವೇ ಆಗುತ್ತದೆ ಎಂದು ತಿಳಿಸಿದರು.

    ಸಿದ್ದರಾಮಯ್ಯರ ಶಕ್ತಿ ಪ್ರದರ್ಶನವಾ ಅಂತಾ ಮಾಧ್ಯಮಗಳ ಪ್ರಶ್ನೆಗೆ, ಎಲ್ಲರೂ ಶಕ್ತಿ ಪ್ರದರ್ಶನ ಮಾಡಬೇಕು. ಮಾಡ್ತಾರೆ ಏನ್ ತಪ್ಪೇನಿಲ್ಲ. ಜನರ ವಿಶ್ವಾಸ ಪಡೆದು ಜನರ ಆಶೀರ್ವಾದ, ಬೆಂಬಲ ಪಡೆಯಬೇಕು. ಇದೊಂದು ಶುಭ ಸಂದರ್ಭ 75ನೇ ಜನ್ಮದಿನ ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಸಿಎಂ ಹಿಂದೆ ಆಗಿಬಿಟ್ಟಿದ್ದಾರೆ. ಇನ್ಮುಂದೆ ಆಗಲ್ಲ ಎಂದು ಕಿಡಿಕಾರಿದರು.

    ಕಾಂಗ್ರೆಸ್ ಪಕ್ಷ ಅಸ್ತಿತ್ವ ಕಳೆದುಕೊಂಡ ಪಕ್ಷ. ಪ್ರಸ್ತುತವಾದ ಪಕ್ಷ ಅಲ್ಲ. ವಿಚಾರ, ಧ್ಯೇಯೋದ್ದೇಶಗಳ ಸ್ಪಷ್ಟತೆ ಇಲ್ಲ. ಕಾಂಗ್ರೆಸ್ ಅಧಿಕಾರಕ್ಕಾಗಿ ಹಾತೊರೆಯುವಂತಹ ಪಕ್ಷವಾಗಿದೆ. ಇಂದು ಇಡೀ ದೇಶದಲ್ಲಿ ಉತ್ತಮವಾದ ಬುನಾದಿ ಹಾಕದೇ ಇದ್ದ ಪಕ್ಷ ಕಾಂಗ್ರೆಸ್. ಇಂದು ದೇಶದಲ್ಲಿ ಭ್ರಷ್ಟಾಚಾರ ತಾಂಡವವಾಡಲು ಮೂಲಪುರುಷರು, ಕಾರಣಿಕರ್ತರು ಕಾಂಗ್ರೆಸ್ ಪಕ್ಷದವರು. ಭ್ರಷ್ಟಾಚಾರ ಸಂಸ್ಕøತಿ ತಂದಿದ್ದಾರೆ. ಅದನ್ನ ಕ್ಲೀನ್ ಮಾಡಬೇಕು ಎಂದು ಆರೋಪಿಸಿದರು. ಇದನ್ನೂ ಓದಿ: ಮುಖ್ಯಮಂತ್ರಿ ಅಭ್ಯರ್ಥಿ ಚರ್ಚೆ ಕೈಬಿಡಿ – ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಸೂಚನೆ 

    ಹುಬ್ಬಳ್ಳಿಯಲ್ಲಿ ರಾಹುಲ್ ಗಾಂಧಿ ಒಗ್ಗಟ್ಟಿನ ಜಪ ವಿಚಾರಕ್ಕೆ, ಅವರ ಪಕ್ಷ ಉಳಿಸಿಕೊಳ್ಳಲು ಪ್ರಯತ್ನ ಮಾಡಬೇಕು. ಅವರ ಪಕ್ಷ ಸಂಪೂರ್ಣ ನೆಲೆ, ವಿಶ್ವಾಸ ಕಳೆದುಕೊಳ್ಳುತ್ತಿದೆ. ಕಾಂಗ್ರೆಸ್ ಪಕ್ಷ ಕೆಲವೇ ವರ್ಷಗಳಲ್ಲಿ ಮ್ಯೂಸಿಯಂ ಸೇರಿಕೊಳ್ಳುತ್ತದೆ. ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷ ಇತ್ತಪ್ಪಾ ಅಂತಾ ಮ್ಯೂಸಿಯಂ ಸೇರೋ ಕಾಲ ಬಂದಿದೆ ಎಂದು ಟೀಕಿಸಿದರು.

    ಡಿಕೆಶಿ, ಸಿದ್ದರಾಮಯ್ಯ ಒಂದಾಗ್ತಾರಾ? ಯಾವ ವಿಚಾರದಲ್ಲಿ ಒಂದು ಆಗ್ತಾರೆ? ಯಾವ ತತ್ವ, ಯಾವ ಮೌಲ್ಯದ ಮೇಲೆ ಆಗ್ತಾರೆ. ಎಲ್ಲರೂ ನಾನು ನಾನು ಅಂತಾ ಅರ್ಜಿ ಹಾಕಿದ್ದಾರೆ. ವಯಸ್ಸಾದವರು, ಯುವಕರು, ಮಧ್ಯಮ ವಯಸ್ಸಿನವರು ಅರ್ಜಿ ಹಾಕಿದ್ದಾರೆ. ಈಗಿನ ಕಾಲಕ್ಕೆ ಇವರೆಲ್ಲ ಸಂಪೂರ್ಣವಾಗಿ ಅಪ್ರಸ್ತುತರಾಗಿದ್ದಾರೆ. ಇವರು ಈಗ ಮಾರ್ಗದರ್ಶಿಗಳಾಗಿ ಆಶೀರ್ವಾದ ಮಾಡಿಕೊಂಡು ಇರಬೇಕು ಎಂದು ಟಾಂಗ್ ಕೊಟ್ಟರು.

    Live Tv
    [brid partner=56869869 player=32851 video=960834 autoplay=true]

  • ಕಲುಷಿತ ಕುಡಿಯುವ ನೀರು ಸೇವಿಸಿ 40 ಮಂದಿ ಅಸ್ವಸ್ಥ – ವೃದ್ಧ ಸಾವು

    ಕಲುಷಿತ ಕುಡಿಯುವ ನೀರು ಸೇವಿಸಿ 40 ಮಂದಿ ಅಸ್ವಸ್ಥ – ವೃದ್ಧ ಸಾವು

    ಬೆಳಗಾವಿ: ಕಲುಷಿತಗೊಂಡಿದ್ದ ಕುಡಿಯುವ ನೀರನ್ನು ಸೇವಿಸಿ ಅಸ್ವಸ್ಥಗೊಂಡಿದ್ದ 40 ಜನರ ಪೈಕಿ ಚಿಕಿತ್ಸೆ ಫಲಿಸದೇ ವೃದ್ಧರೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಬೆನ್ನೂರ ಗ್ರಾಮದಲ್ಲಿ ನಡೆದಿದೆ.

    ಬೆಳಗಾವಿ ಜಿಲ್ಲೆಯ ರಾಮದುರ್ಗ ಸುರೇಬಾನ ಪಂಚಾಯತಿ ವ್ಯಾಪ್ತಿಯ ಬೆನ್ನೂರ ಗ್ರಾಮದಲ್ಲಿ ಕಲುಷಿತ ನೀರನ್ನು ಸೇವಿಸಿ ಸುಮಾರು 40ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದರು. ಅವರನ್ನು ರಾಮದುರ್ಗ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದ್ರೆ, ಕಳೆದ ರಾತ್ರಿ ಚಿಕಿತ್ಸೆ ಫಲಿಸದೇ ಬೆನ್ನೂರ ಗ್ರಾಮದ ಬಸಪ್ಪ ಖಾನಾಪೂರ(85) ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಶಿಂಧೆ ನಿಷ್ಠಾವಂತ ಅಧಿಕಾರಿ ಕಾರಿನ ಮೇಲೆ ಶಿವಸೈನಿಕರ ದಾಳಿ 

    ಕಲುಷಿತ ಕುಡಿಯುವ ನೀರು ಸೇವಿಸಿದ 40ಕ್ಕೂ ಹೆಚ್ಚು ಜನ ಏಕಾಏಕಿ ವಾಂತಿಭೇದಿಯಿಂದ ಬಳಲುತ್ತಿದ್ದಾರೆ. ಸದ್ಯ ಎಲ್ಲರಿಗೂ ಚಿಕಿತ್ಸೆ ಮುಂದುವರೆದಿದ್ದು, ಇನ್ನೂ ಮೂವರ ಸ್ಥಿತಿ ಗಂಭೀರವಾಗಿದೆ. ಇತ್ತ ವೃದ್ಧನ ಸಾವಿಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜೆಜಿಎಂ ಕಾಮಗಾರಿ ಮಾಡುತ್ತಿರುವ ಗುತ್ತಿಗೆದಾರರ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದ್ದು, ಮೃತರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬಚ್ಚನಕೇರಿ ಗ್ರಾಮದಲ್ಲಿ ಕಿತ್ತೂರು ಅರಮನೆ ನಿರ್ಮಾಣ – ಸ್ಥಳೀಯರಿಂದ ವಿರೋಧ

    ಬಚ್ಚನಕೇರಿ ಗ್ರಾಮದಲ್ಲಿ ಕಿತ್ತೂರು ಅರಮನೆ ನಿರ್ಮಾಣ – ಸ್ಥಳೀಯರಿಂದ ವಿರೋಧ

    ಬೆಳಗಾವಿ: ಕಿತ್ತೂರು ತಾಲೂಕಿನ ಬಚ್ಚನಕೇರಿ ಗ್ರಾಮದಲ್ಲಿ ಅರಮನೆ ನಿರ್ಮಾಣಕ್ಕೆ ಮುಂದಾಗಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

    ಕಿತ್ತೂರು ಕೋಟೆ ನಿರ್ಮಾಣವನ್ನು ಕಿತ್ತೂರು ಪಟ್ಟಣದಲ್ಲಿರುವ ಚೆನ್ನಮ್ಮನ ಕೋಟೆ ಪಕ್ಕದಲ್ಲೇ ಅರಮನೆ ನಿರ್ಮಾಣ ಮಾಡುವಂತೆ ಸ್ಥಳೀಯರು ಈ ಹಿಂದೆಯೇ ಬೇಡಿಕೆ ಇಟ್ಟಿದ್ದರು. ಆದರೆ ಈಗ ಬೆಳಗಾವಿ ಜಿಲ್ಲಾಡಳಿತ ಕಿತ್ತೂರು ತಾಲೂಕಿನ ಬಚ್ಚನಕೇರಿ ಗ್ರಾಮದಲ್ಲಿ ಅರಮನೆ ನಿರ್ಮಾಣಕ್ಕೆ ತಯಾರಿ ನಡೆಸಿದೆ. ಇದನ್ನೂ ಓದಿ: ಮ್ಯೂಸಿಕ್ ಶೂಟ್ ವೇಳೆ ದಾಳಿ: 8 ಮಹಿಳಾ ರೂಪದರ್ಶಿಗಳ ಮೇಲೆ ಅತ್ಯಾಚಾರ 

    ಬಚ್ಚನಕೇರಿ ಗ್ರಾಮದಲ್ಲಿ ಕೋಟೆಯ ಪ್ರತಿರೂಪದ ಅರಮನೆ ಮಾಡಲು ಮುಂದಾಗಿದ್ದು, ಈಗಾಗಲೇ ರಾಜ್ಯ ಸರ್ಕಾರ ಅರಮನೆ ನಿರ್ಮಾಣಕ್ಕೆ ಬಚ್ಚನಕೇರಿ ಗ್ರಾಮದಲ್ಲಿರುವ 57 ಎಕರೆ ಜಾಗವನ್ನು ಮೀಸಲಿಟ್ಟಿದೆ.

    ಅರಮನೆ ನಿರ್ಮಾಣಕ್ಕೆ ಸರ್ಕಾರಿ ಜಾಗವನ್ನು ಕಿತ್ತೂರು ಪ್ರಾಧಿಕಾರಕ್ಕೆ ನೀಡಲು ಸರ್ಕಾರ ಉದ್ದೇಶಿಸಿದೆ. ಈ ಸಂಬಂಧ ಬೈಲಹೊಂಗಲ ಉಪವಿಭಾಗಾಧಿಕಾರಿಗೆ ಬೆಳಗಾವಿ ಜಿಲ್ಲಾಡಳಿತ ಪತ್ರ ಬರೆದಿದೆ. ಈ ಸಂಬಂಧ ಆಕ್ಷೇಪಗಳಿದ್ದರೆ ಸಮರ್ಥವಾದ ಕಾರಣ ನೀಡುವಂತೆ ಕೋರಲಾಗಿದೆ.

    ಆಕ್ಷೇಪಣೆ ಸಲ್ಲಿಸಲು ಸಾರ್ವಜನಿಕರಿಗೆ ಜಿಲ್ಲಾಡಳಿತ ಅವಕಾಶ ನೀಡಿದೆ. ಆದರೆ ಬಚ್ಚನಕೇರಿಯಲ್ಲಿ ಅರಮನೆ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ಕ್ರಮಕ್ಕೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:  ಫೈನಲ್ ತಲುಪಿದ ಕನ್ನಡಿಗ, ಈಜುಪಟು ಶ್ರೀಹರಿ ನಟರಾಜ್ 

    Live Tv
    [brid partner=56869869 player=32851 video=960834 autoplay=true]

  • ಯುವತಿ ಫೋಟೋ ಬಳಸಿ ಯುವಕರಿಂದ 19 ಲಕ್ಷ ರೂ. ಎಗರಿಸಿದ್ದ ಆರೋಪಿ ಅರೆಸ್ಟ್

    ಯುವತಿ ಫೋಟೋ ಬಳಸಿ ಯುವಕರಿಂದ 19 ಲಕ್ಷ ರೂ. ಎಗರಿಸಿದ್ದ ಆರೋಪಿ ಅರೆಸ್ಟ್

    ಬೆಳಗಾವಿ: ಸೋಶಿಯಲ್ ಮೀಡಿಯಾದಲ್ಲಿ ರಾತ್ರೋರಾತ್ರಿ ಫೇಮಸ್ ಆಗಬೇಕು ಎಂದು ಅದೇಷ್ಟೋ ಯುವತಿಯರು ಫೇಸ್‍ಬುಕ್, ಇನ್‍ಸ್ಟಾಗ್ರಾಮ್‍ನಲ್ಲಿ ಫೋಟೋ ಹಾಕಿ ಲೈಕ್, ಕಾಮೆಂಟ್‍ಗಳನ್ನು ಗಿಟ್ಟಿಸಿಕೊಳ್ಳುತ್ತಾರೆ. ಆದ್ರೆ, ಇಲ್ಲೊಬ್ಬ ಆಸಾಮಿ ಅದೇ ಸುಂದರ ಯುವತಿಯರ ಫೋಟೋ ಬಳಸಿಕೊಂಡು ಸುಮಾರು ಯುವಕರಿಗೆ 19 ಲಕ್ಷ ರೂ. ಗೂ ಅಧಿಕ ಹಣ ಪೀಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ನಾಯಿಹಿಂಗ್ಲಜ್ ಗ್ರಾಮದ ಮಹಾಂತೇಶ್ ಮೂಡಸೆ ಯುವತಿಯರ ಹೆಸರಿನಲ್ಲಿ ನಕಲಿ ಖಾತೆ ತೆಗೆದ ಬಂಧಿತ ಆರೋಪಿ. ಆರು ವರ್ಷಗಳ ಹಿಂದೆ ಅಂದರೆ 2016ರಲ್ಲಿ ಎಂ.ಸ್ನೇಹಾ ಹೆಸರಿನಲ್ಲಿ ಫೇಕ್ ಐಡಿ ಸೃಷ್ಟಿಸಿ ಫೇಸ್‍ಬುಕ್, ಇನ್‍ಸ್ಟಾಗ್ರಾಮ್ ಖಾತೆ ತೆರೆದಿದ್ದಾನೆ.

    ಹೇಗೆ ಮಾಡುತ್ತಿದ್ದ?
    ಹಣ ಮಾಡಲು ಕಳ್ಳದಾರಿ ಹಿಡಿದ ಮಹಾಂತೇಶ್ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ ಯುವತಿಯರ ಸುಂದರ ಫೋಟೋಗಳನ್ನು ಡೌನ್ಲೋಡ್ ಮಾಡಿಟ್ಟಿಕೊಳ್ಳುತ್ತಿದ್ದನು. ವಾಟ್ಸಾಪ್‍ನ ಡಿಪಿಗೂ ಅದೇ ಯುವತಿಯ ಫೋಟೋಗಳನ್ನು ಹಾಕಿಕೊಳ್ಳುತ್ತಿದ್ದ. ಬಳಿಕ ಫೇಸ್‍ಬುಕ್, ಇನ್‍ಸ್ಟಾಗ್ರಾಮ್‍ನಲ್ಲಿ ಯುವಕರಿಗೆ ರಿಕ್ವೆಸ್ಟ್ ಕಳುಹಿಸುತ್ತಿದ್ದ. ಇದನ್ನೂ ಓದಿ: ಮುಳುಗಡೆಯಾದ ಶ್ರೀಕೃಷ್ಣದೇವರಾಯ ಸಮಾಧಿ ಮಂಟಪ: ಮತ್ತೆ ಪ್ರವಾಹದ ಭೀತಿ 

    ಯುವತಿ ಫೋಟೋಗಳನ್ನು ನೋಡಿ ಫಾಲೋ ಮಾಡುವ ಯುವಕರನ್ನೇ ಟಾರ್ಗೆಟ್ ಮಾಡಿ ಅವರನ್ನು ಪರಿಚಯ ಮಾಡಿಕೊಂಡು ಸಲುಗೆಯಿಂದ ಇರುತ್ತಿದ್ದ. ಚೆಂದದ ಯುವತಿಯ ಫೋಟೋಗಳನ್ನು ನೋಡಿ ಮರುಳಾದ ಯುವಕರಿಂದ ಅವರ ಫೋನ್ ನಂಬರ್‌ಗಳನ್ನು ಪಡೆದುಕೊಳ್ಳುತ್ತಿದ್ದ. ಆದ್ರೆ, ಯುವಕರೊಂದಿಗೆ ಫೋನ್‍ನಲ್ಲಿ ಮಾತನಾಡದೇ ಕೇವಲ ಚಾಟ್ ಮಾಡುತ್ತಿದ್ದ.

    ಹಣ ಪಡೆದು ನಂಬರ್ ಬ್ಲಾಕ್
    ಈ ವೇಳೆ ಕೆಲವು ಯುವಕರಿಗೆ ಫೋಟೊಗಳನ್ನ ವಾಟ್ಸಪ್ ಮಾಡುತ್ತಿದ್ದ. ಈ ವೇಳೆ ಹಣದ ಅವಶ್ಯಕತೆ ಇದೆ ಅಂತಾ ಹತ್ತು ಸಾವಿರ, ಇಪ್ಪತ್ತು ಸಾವಿರ, ಐವತ್ತು ಸಾವಿರವರೆಗೂ ಹಣ ಹಾಕಿಸಿಕೊಂಡು ಬಳಿಕ ನಂಬರ್ ಬ್ಲಾಕ್ ಮಾಡುತ್ತಿದ್ದ. ಹೀಗೆ ಒಂದೇ ಯುವತಿ ಫೋಟೋ ಹಾಕಿದ್ದ ಅಕೌಂಟ್‍ಗೆ ಹದಿನೈದು ಸಾವಿರ ಫಾಲೋವರ್ಸ್ ಇದ್ದಾರೆ.

    ಯುವತಿಗೆ ಶಾಕ್
    ತನ್ನ ಫೋಟೋ ಬೇರೆಯವರು ಬಳಸುತ್ತಿದ್ದ ವಿಚಾರ ತಿಳಿದ ಯುವತಿ ಶಾಕ್ ಆಗಿದ್ದಾರೆ. ಇತ್ತ ಯುವತಿ ದುಬೈನಲ್ಲಿದ್ದರೂ ತನ್ನ ಫೋಟೋ ಮಿಸ್ ಯೂಸ್ ಆಗಿದ್ದನ್ನ ಕಂಡು ಶಾಕ್ ಆಗಿ ಖುದ್ದು ಮಹಾಂತೇಶ್‍ಗೆ ಮೆಸೇಜ್ ಮಾಡಿ ಅಕೌಂಟ್ ಡಿಲೀಟ್ ಮಾಡುವಂತೆ ಮನವಿ ಮಾಡಿದ್ದಾರೆ. ಇಷ್ಟಾದರೂ ಆತ ಕೇಳದ ಹಿನ್ನೆಲೆ ಜು.4ರಂದು ಬೆಳಗಾವಿಗೆ ಆಗಮಿಸಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಳಿಕ ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಇದನ್ನೂ ಓದಿ: ಚಿಕ್ಕ ವಯಸ್ಸಿನಿಂದಲೂ ಧರ್ಮದ ಬಗ್ಗೆ ಅಭಿಮಾನ – ಹಿಜಬ್ ಹೋರಾಟದಿಂದ ಸಿಟ್ಟಾಗಿದ್ದೆ

    ಪಿಎಸ್‍ಐ ದೈಹಿಕ ಪರೀಕ್ಷೆ ಪಾಸ್ ಆಗಿದ್ದ
    ಮಹಾಂತೇಶ್ ಕಳೆದ ಹಲವು ದಿನಗಳ ಹಿಂದೆ ನಡೆದಿದ್ದ ಪಿಎಸ್‍ಐ ದೈಹಿಕ ಪರೀಕ್ಷೆ ಪಾಸ್ ಆಗಿದ್ದ ಎಂಬ ವಿಚಾರ ಪೊಲೀಸರ ತನಿಖೆ ವೇಳೆ ಗೊತ್ತಾಗಿದೆ. ಯುವಕರಿಗೆ ಮೋಸ ಮಾಡಿ ಬಂದ ಹಣವನ್ನ ತೆಗೆದುಕೊಂಡು ಗೋವಾಗೆ ಹೋಗಿ ತನ್ನ ಗೆಳೆಯರೊಂದಿಗೆ ಮೋಜು-ಮಸ್ತಿ ಎಂದು ಸುತ್ತಾಡಿದ್ದಾನೆ. ಒಟ್ಟಾರೆ, ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಾಕುವ ಮುನ್ನವೇ ಯುವತಿಯರು ಎಚ್ಚರಿಕೆಯಿಂದ ಇರಬೇಕು ಎಂದು ಬೆಳಗಾವಿ ಕಮಿಷನರ್ ಡಾ.ಎಂ.ಬಿ.ಬೋರಲಿಂಗಯ್ಯ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಾಯಿಗಳ ಹಾವಳಿಗೆ ಬೆಚ್ಚಿ ಬಿದ್ದ ಕುಂದಾನಗರಿ ಜನ – ಆರು ತಿಂಗಳಲ್ಲಿ 14 ಸಾವಿರ ಮಂದಿಗೆ ನಾಯಿ ಕಡಿತ

    ನಾಯಿಗಳ ಹಾವಳಿಗೆ ಬೆಚ್ಚಿ ಬಿದ್ದ ಕುಂದಾನಗರಿ ಜನ – ಆರು ತಿಂಗಳಲ್ಲಿ 14 ಸಾವಿರ ಮಂದಿಗೆ ನಾಯಿ ಕಡಿತ

    ಬೆಳಗಾವಿ: ಜಿಲ್ಲೆಯಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಎಲ್ಲೆಂದರಲ್ಲಿ ಮಕ್ಕಳು, ಮಹಿಳೆಯರ ಮೇಲೆ ಈ ಶ್ವಾನಗಳು ಅಟ್ಯಾಕ್ ಮಾಡುತ್ತಿದ್ದು, ರಾತ್ರಿಯಾದರೆ ಸಾಕು ಮನೆಯಿಂದ ಹೊರ ಬಾರದ ಸ್ಥಿತಿ ನಿರ್ಮಾಣವಾಗಿದೆ. ಜನವರಿಯಿಂದ ಜುಲೈ ಮೊದಲ ವಾರದವರೆಗೆ ಕೇವಲ ಆರು ತಿಂಗಳಲ್ಲಿ ಬರೋಬ್ಬರಿ 14,278 ಜನರಿಗೆ ಈ ನಾಯಿಗಳು ಕಚ್ಚಿದ್ದು ಎಲ್ಲರೂ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದಾರೆ.

    ಈ ಬಗ್ಗೆ ಡಿಎಚ್‍ಒ ಡಾ.ಮಹೇಶ್ ಕೋಣಿ ಪ್ರತಿಕ್ರಿಯಿಸಿ, ಈ ವರ್ಷ ಆರು ತಿಂಗಳಲ್ಲೇ ಅತೀ ಹೆಚ್ಚು ಪ್ರಮಾಣದಲ್ಲಿ ನಾಯಿಗಳು ಜನರಿಗೆ ಕಚ್ಚಿವೆ. ಈಗಾಗಲೇ ಈ ಕುರಿತು ಇಲಾಖೆ ಸಭೆಯಲ್ಲಿ ಪ್ರಸ್ತಾವನೆ ಕೂಡ ಆಗಿದೆ. ಸಾರ್ವಜನಿಕ ಆಸ್ಪತ್ರೆಗಳಲ್ಲಿ ಹೆಚ್ಚು ಜನ ದಾಖಲಾಗಿದ್ದಾರೆ. ನಾಯಿ ಕಡಿತಕ್ಕೆ ಲಸಿಕೆ ಇದ್ದು ಯಾವ ತೊಂದರೆ ಇಲ್ಲ ಅಂದಿದ್ದಾರೆ.  ಇದನ್ನೂ ಓದಿ: ದೇಶದ ಚರಿತ್ರೆಯಲ್ಲಿ ಬುಡಕಟ್ಟು ಮಹಿಳೆಗೆ ರಾಷ್ಟ್ರಪತಿ ಪಟ್ಟ – ಇಂದು ದ್ರೌಪದಿ ಮುರ್ಮು ಪ್ರಮಾಣ ವಚನ ಸ್ವೀಕಾರ

    ಸದ್ಯ ಗ್ರಾಮೀಣ ಭಾಗ ಅಷ್ಟೇ ಅಲ್ಲದೇ ನಗರ ಪ್ರದೇಶದಲ್ಲೂ ನಾಯಿಗಳ ಹಾವಳಿ ಮೀತಿಮಿರಿದೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸ್ಥಳೀಯ ಶಾಸಕ ಅಭಯ್ ಪಾಟೀಲ್ ಕೂಡ ಸೂಚನೆ ನೀಡಿದ್ದಾರೆ. ಬಸ್ ನಿಲ್ದಾಣ, ಮಾರುಕಟ್ಟೆ ಪ್ರದೇಶ, ಶಾಲಾ ಆವರಣದ ಸುತ್ತಲೂ ಹೆಚ್ಚಿನ ಸಂಖ್ಯೆಯಲ್ಲಿ ನಾಯಿಗಳು ಗುಂಪು, ಗುಂಪಾಗಿ ಓಡಾಡುತ್ತಿದೆ. ಹೀಗಾಗಿ ಸಾರ್ವಜನಿಕರು ಸೇರಿದಂತೆ ಎಲ್ಲರೂ ಕೂಡ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಇನ್ನೂ ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಾಸಕ ಅಭಯ್ ಪಾಟೀಲ್ ಆದಷ್ಟು ಬೇಗ ನಾಯಿಗಳನ್ನು ನಗರದಿಂದ ಬೇರೆ ಕಡೆ ಸ್ಥಳಾಂತರ ಮಾಡುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಮೇಕೆದಾಟು ಡ್ಯಾಂಗೆ ತಮಿಳುನಾಡು ವಿರೋಧ – ಸುಪ್ರೀಂಕೋರ್ಟ್‍ನಲ್ಲಿ ಇಂದು ವಿಚಾರಣೆ

    ದಿನೇ ದಿನೇ ನಾಯಿಗಳ ಸಂಖ್ಯೆಯೂ ಹೆಚ್ಚಾಗುತ್ತಿದ್ದು ಒಂಟಿಯಾಗಿ ಓಡಾಡುವವರನ್ನೇ ಟಾರ್ಗೆಟ್ ಮಾಡುತ್ತಿದೆ. ಇನ್ನಾದರೂ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ಅಧಿಕಾರಿಗಳು ಎಚ್ಚೆತ್ತು ನಾಯಿಗಳನ್ನು ಹಿಡಿದು ಬೇರೆ ಕಡೆ ಬಿಡುವ ಕೆಲಸ ಮಾಡಬೇಕಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಮೂರಂತಸ್ತಿನ ಕಟ್ಟಡದಲ್ಲಿ ನೇತಾಡುತ್ತಿದ್ದ ಮಕ್ಕಳ ಮುದ್ದಿನ ಬೆಕ್ಕು – ಯಶಸ್ವಿ ಕಾರ್ಯಾಚರಣೆ

    ಮೂರಂತಸ್ತಿನ ಕಟ್ಟಡದಲ್ಲಿ ನೇತಾಡುತ್ತಿದ್ದ ಮಕ್ಕಳ ಮುದ್ದಿನ ಬೆಕ್ಕು – ಯಶಸ್ವಿ ಕಾರ್ಯಾಚರಣೆ

    ಬೆಳಗಾವಿ: ಮಕ್ಕಳ ಮುದ್ದಿನ ಬೆಕ್ಕನ್ನು ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ರಕ್ಷಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

    ಮೂರಂತಸ್ತಿನ ಕಟ್ಟಡದ ಬಾಲ್ಕನಿಯಲ್ಲಿ ಸಿಲುಕಿ ನೇತಾಡುತ್ತಿದ್ದ ಮಕ್ಕಳ ಮುದ್ದಿನ ಬೆಕ್ಕನ್ನು ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಸತತ ಎರಡು ಘಂಟೆಗಳ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ. ಈ ಹಿನ್ನೆಲೆ ಮಕ್ಕಳು ಸೇರಿ ಸ್ಥಳೀಯರು ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕೊನೆ ಕ್ಷಣದಲ್ಲಿ ಟ್ರಿಪ್‍ಗೆ ಕೈಕೊಟ್ಟ ಪತ್ನಿ- ಪಿಲ್ಲೊ ಜೊತೆ ಹೊರಟ ಪತಿ

    ನಡೆದಿದ್ದೇನು?
    ಬೆಳಗಾವಿಯ ಖಡೇಬಜಾರ್ ರಸ್ತೆಯಲ್ಲಿರುವ ಮೂರಂತಸ್ತಿನ ಕಟ್ಟಡದ ಬಾಲ್ಕನಿಯಲ್ಲಿ ಬೆಕ್ಕು ಸಿಲುಕಿಕೊಂಡಿತ್ತು. ಶನಿವಾರ ರಾತ್ರಿ ಕಟ್ಟಡದ ಮೂರಂತಸ್ತಿನ ತುದಿಗೆ ಇಳಿದಿದ್ದ ಬೆಕ್ಕು ಮರಳಿ ಬಾಲ್ಕನಿ ಕಿಟಕಿಗೆ ನೆಗೆಯಲಾಗದೇ ಪ್ರಾಣಭಯದಲ್ಲಿ ಪರದಾಡುತ್ತಿತ್ತು. ಸುಮಾರು ಎರಡು ಗಂಟೆಗಳ ಕಾಲ ಮ್ಯಾಂವ್… ಮ್ಯಾಂವ್… ಎಂದು ಗುಡುತ್ತ ಅತ್ತಿಂದಿತ್ತ, ಇತ್ತಿಂದತ್ತ ಸುಳಿದಾಡುತ್ತಿತ್ತು.

    ಈ ವೇಳೆ ಬೆಕ್ಕನ್ನು ರಕ್ಷಿಸುವಂತೆ ಪಾಲಕರ ಬಳಿ ಮಕ್ಕಳು ಹಠ ಹಿಡಿದಿದ್ದರು. ಈ ವೇಳೆ ಪೋಷಕರು ಬೆಕ್ಕನ್ನು ರಕ್ಷಣೆ ಮಾಡಲು ಹರಸಾಹಸಪಟ್ಟಿದ್ದಾರೆ. ಆದ್ರೆ, ಅದು ಅವರಿಗೆ ಸಾಧ್ಯವಾಗದೇ ಇದ್ದಾಗ ಅನಿಮಲ್ ವೆಲ್ಪೇರ್ ಅಸೋಸಿಯೇಷನ್‍ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಅನಿಮಲ್ ವೆಲ್ಪೇರ್ ಅಸೋಸಿಯೇಷನ್ ವರುಣ್ ಕರ್ಕನೀಸ್ ತಂಡದವರ ಪ್ರಯತ್ನ ಫಲ ನೀಡಿಲ್ಲ. ಇದನ್ನೂ ಓದಿ: ಜಮೀರ್ ಅಹ್ಮದ್ ಖಾನ್ ನಮ್ಮ ಪಕ್ಷದ ಬಾಹುಬಲಿ: ಸತೀಶ್ ಜಾರಕಿಹೊಳಿ

    ಬಳಿಕ ಅಗ್ನಿಶಾಮಕ ದಳ, ಪೊಲೀಸ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ವಾಹನದ ಏಣಿ ಸಹಾಯದಿಂದ ಬಾಲ್ಕನಿ ಏರಿ ಬೆಕ್ಕನ್ನು ರಕ್ಷಣೆ ಮಾಡಿದ್ದಾರೆ. ಇತ್ತ ಬೆಕ್ಕನ್ನು ರಕ್ಷಣೆ ಮಾಡಿದ ದೃಶ್ಯವನ್ನು ನೋಡಿ ಸುತ್ತ ನೆರೆದಿದ್ದ ಜನರು ಚಪ್ಪಾಳೆ ತಟ್ಟಿ, ಕೂಗಾಡಿ ಖುಷಿಪಟ್ಟರು.

    Live Tv
    [brid partner=56869869 player=32851 video=960834 autoplay=true]

  • ಇಬ್ರಾಹಿಂ ಸಾಹೇಬ್ರು ಸೋತು ಸುಣ್ಣವಾಗಿದ್ದಾರೆ: ಜಮೀರ್ ತಿರುಗೇಟು

    ಇಬ್ರಾಹಿಂ ಸಾಹೇಬ್ರು ಸೋತು ಸುಣ್ಣವಾಗಿದ್ದಾರೆ: ಜಮೀರ್ ತಿರುಗೇಟು

    ಬೆಳಗಾವಿ: ಮಾಜಿ ಸಿಎಂ ಸಿದ್ದರಾಮಯ್ಯ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ನೀಡಿದ ಹೇಳಿಕೆಗೆ ತಿರುಗೇಟು ನೀಡಿರುವ ಶಾಸಕ ಜಮೀರ್ ಅಹ್ಮದ್ ಅವರು, ಇಬ್ರಾಹಿಂ ಸಾಹೇಬ್ರು ಸೋತು ಸುಣ್ಣವಾಗಿದ್ದಾರೆ. ಅದೇ ರೀತಿ ಎಲ್ಲವನ್ನೂ ತಿಳಿದುಕೊಂಡಿದ್ದಾರೆ ಎಂದರು.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2013ರ ಚುನಾವಣೆಯಲ್ಲಿ ಅವರ ತವರು ಕ್ಷೇತ್ರ ಭದ್ರಾವತಿಯಲ್ಲಿ ಕಾಂಗ್ರೆಸ್‍ನಿಂದ ಸ್ಪರ್ಧಿಸಿ ಸೋತಿದ್ದಾರೆ. ಸಿದ್ದರಾಮಯ್ಯ ನಿಯಮ ಉಲ್ಲಂಘಿಸಿ ಹಾಲಿ ಶಾಸಕರಿಗೆ ಟಿಕೆಟ್ ತಪ್ಪಿಸಿ ಇಬ್ರಾಹಿಂಗೆ ಟಿಕೆಟ್ ಕೊಡಿಸಿದ್ದರು. ರಾಹುಲ್ ಗಾಂಧಿ, ಸೋನಿಯಾ ಗಾಂಧಿಗೆ ಹೇಳಿ ಸಿದ್ದರಾಮಯ್ಯ ಟಿಕೆಟ್ ಕೊಡಿಸಿದ್ದರು. ಮೂರನೇ ಸ್ಥಾನಕ್ಕೆ ಕುಸಿದು ಸೋಲು ಕಂಡರು ಎಂದು ಟೀಕಿಸಿದರು. ಇದನ್ನೂ ಓದಿ: ಹಳ್ಳದಲ್ಲಿ ಕೊಚ್ಚಿ ಹೋಗಿದ್ದವ ಶವವಾಗಿ ಪತ್ತೆ – ತಕ್ಷಣವೇ ಐದು ಲಕ್ಷ ರೂ. ಪರಿಹಾರ ವಿತರಣೆ 

    Kerur violence: Woman throws Rs 2 lakh given by Siddaramaiah | Deccan Herald

    ಸಿದ್ದರಾಮಯ್ಯ ಅವರಿಗೆ ಚಾಮರಾಜಪೇಟೆಯಿಂದ ಸ್ಪರ್ಧೆ ಮಾಡಿ ಎಂದು ನಾನೇ ಒತ್ತಡ ಹಾಕುತ್ತಿದ್ದೇನೆ. ಅವರು ಎಂದಿಗೂ ಯಾರನ್ನೂ ಸ್ಪರ್ಧೆ ಮಾಡುವ ಬಗ್ಗೆ ಒತ್ತಡ ಹೇರಿಲ್ಲ. ಸಿದ್ದರಾಮಯ್ಯ ಸ್ಪರ್ಧೆಗೆ ಎಲ್ಲ ಕಡೆಯಿಂದ ಒತ್ತಡ ಬರುತ್ತಿದೆ. ಹರಿಹರ, ಕೋಲಾರ, ಚಿಕ್ಕಪೇಟೆ ಸೇರಿ ರಾಜ್ಯದ ಎಲ್ಲ ಮೂಲೆಗಳಿಂದ ಸ್ಪರ್ಧಿಸುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಹೇಳಿದರು.

    ಮಾಜಿ ಸಚಿವ ಈಶ್ವರಪ್ಪ ಮುಸ್ಲಿಮರ ಮತಗಳು ಬೇಡ ಎನ್ನುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಹಗಲು ಹೊತ್ತಿನಲ್ಲಿ ಬೇಡ ಎನ್ನುತ್ತಾರೆ. ರಾತ್ರಿ ಮುಸ್ಲಿಂ ಮತಗಳನ್ನು ಕೇಳುತ್ತಾರೆ. ಈ ಬಗ್ಗೆ ನೀವೇ ಈಶ್ವರಪ್ಪ ಅವರನ್ನು ಕೇಳಿ ವ್ಯಂಗ್ಯವಾಡಿದರು. ಇದನ್ನೂ ಓದಿ:  ದ್ರೌಪದಿ ಮುರ್ಮು ಗೆಲುವಿಗೆ ಪುಟಿನ್ ಅಭಿನಂದನೆ ಸಂದೇಶ

    Live Tv
    [brid partner=56869869 player=32851 video=960834 autoplay=true]

  • ಒಳ್ಳೆಯದಾಗಬೇಕೆಂದ್ರೆ ಜನ 2023ರಲ್ಲಿ ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ಬಯಸುತ್ತಿದ್ದಾರೆ: ಜಮೀರ್

    ಒಳ್ಳೆಯದಾಗಬೇಕೆಂದ್ರೆ ಜನ 2023ರಲ್ಲಿ ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ಬಯಸುತ್ತಿದ್ದಾರೆ: ಜಮೀರ್

    ಬೆಳಗಾವಿ: ರಾಜ್ಯದಲ್ಲಿ ಒಳ್ಳೆಯದಾಗಬೇಕೆಂದ್ರೆ ಜನ 2023ರಲ್ಲಿ ಸಿದ್ದರಾಮಯ್ಯ ಸಿಎಂ ಆಗಬೇಕು ಅಂತಾ ಬಯಸುತ್ತಿದ್ದಾರೆ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ನನ್ನ ಅಭಿಪ್ರಾಯ ಹೇಳಿದ್ದೇನೆ. ಯಾರು ತೀರ್ಮಾನ ಮಾಡಕ್ಕಾಗಲ್ಲ. ನಮ್ಮ ನಾಯಕಿ ಸೋನಿಯಾ ಗಾಂಧಿ ಇದ್ದಾರೆ. ನನ್ನ ಅಭಿಪ್ರಾಯ ಹೇಳೋದು ತಪ್ಪೇನಿಲ್ಲವಲ್ಲ. ನಮ್ಮ ಸಂವಿಧಾನದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವಕಾಶ ಮಾಡಿಕೊಟ್ಟಿದ್ದಾರೆ. ಹಾಗಾಗಿ ನನ್ನ ಅಭಿಪ್ರಾಯ ಹೇಳಿದ್ದೇನೆ ಎಂದರು. ಇದನ್ನೂ ಓದಿ: ಕಿಡ್ನಾಪ್ ಮಾಡಿ ಗಣೇಶಪುರದ ಮಾವಿನ ತೋಪಿನಲ್ಲಿ ಕೂಡಿಹಾಕಿದ್ದ: ನವ್ಯಶ್ರೀ

    ಯಾರೇ ಇದ್ರು ಬಾಯಿ ಮುಚ್ಚಿಕೊಂಡು ಕೆಲಸ ಮಾಡಬೇಕು ಎಂಬ ಡಿಕೆಶಿ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯೆ ಕೊಟ್ಟ ಅವರು, ಇದನ್ನ ಚಾಲನೆ ಯಾರು ಕೊಟ್ಟಿದ್ದು? ಅವರು ಹೇಳಿದ್ಮೇಲೆ ತಾನೇ ಬಂದಿದ್ದು. ಅಧ್ಯಕ್ಷರು ನಮ್ಮ ಒಕ್ಕಲಿಗ ಸಮಾಜ ಕಾರ್ಯಕ್ರಮದಲ್ಲಿ ಅವರಾಗಿ ಅವರು ನನಗೆ ಮುಂದೆ ಅವಕಾಶ ಕೊಡಿ ಎಂದು ಚಾಲನೆ ಕೊಟ್ಟಿದ್ದಾರೆ. ಕೇಳಿದ್ದು ಅವರೇ ತಾನೇ? ಎಂದು ಡಿಕೆಶಿಗೆ ಪ್ರಶ್ನೆ ಮಾಡಿದರು.

    ಎಲ್ಲರೂ ಕ್ಲೇಮ್ ಮಾಡೋದು ಸಹಜ. ಎಲ್ಲರಿಗೂ ಆಸೆ ಇರುತ್ತದೆ. ಬಹಳ ಜನರಿಗೆ ಆಸೆ ಇದೆ. ಆಸೆ ಇರೋದ್ರಲ್ಲಿ ತಪ್ಪೇನಿಲ್ಲ. ಮೊನ್ನೆ ನಾನು ಹೇಳಿದ್ದೀನಿ ಮುಸ್ಲಿಂರಿಗೂ ಅವಕಾಶ ಸಿಗಬೇಕು. ನನಗೂ ಸಿಎಂ ಆಗಬೇಕೆಂಬ ಆಸೆ ಇದೆ. ನಾವು ಜನಸಂಖ್ಯೆಯನುಸಾರ ಶೇಕಡಾ.15ರಷ್ಟು ಇದ್ದೇವೆ ಎಂದು ತಿಳಿಸಿದರು.

    ಒಂದೇ ಸಮಾಜ ವೋಟ್ ಕೊಟ್ಟರೇ ಸಿಎಂ ಆಗಲು ಸಾಧ್ಯವಾಗಲ್ಲ. ಎಲ್ಲ ಸಮಾಜದವರನ್ನು ನಾವು ಜೊತೆಗೆ ತಗೆದುಕೊಂಡು ಹೋಗಬೇಕು. ಎಲ್ಲ ಸಮಾಜ ಸೇರಿ ಆಶೀರ್ವಾದ ಮಾಡಿದ್ರೆ ಸರ್ಕಾರ ಬರಲು ಸಾಧ್ಯವಾಗಲಿದೆ. ಒಂದೇ ಒಂದು ಸಮಾಜ ಬೆಂಬಲ ಕೊಟ್ಟರೆ ಯಾರು ಸಿಎಂ ಆಗಲು ಸಾಧ್ಯವಾಗಲ್ಲ ಎಂದರು.

    ವ್ಯಕ್ತಿ ಪೂಜೆ ಮಾಡಬಾರದು ಪಕ್ಷ ಪೂಜೆ ಮಾಡಬೇಕೆಂಬ ಡಿಕೆಶಿ ಹೇಳಿಕೆ ವಿಚಾರಕ್ಕೆ, ಪಕ್ಷ ಪೂಜೆ ಮಾಡ್ತಿದ್ದೀವಿ. ಅದರ ಜೊತೆ ವ್ಯಕ್ತಿ ಪೂಜೆ ಮಾಡಬೇಕಾಗುತ್ತದೆ. ಡಿಕೆಶಿ ಭೇಟಿಯಾಗ್ತೀರಾ ಅಂತಾ ಮಾಧ್ಯಮಗಳ ಪ್ರಶ್ನೆಗೆ, ಖಂಡಿತ. ನಮ್ಮ ಅಧ್ಯಕ್ಷರು ಇದ್ದಾರೆ, ಅವರನ್ನು ಬಿಟ್ಟು ಕಟೀಲ್ ಅವರನ್ನ ಭೇಟಿಯಾಗಬೇಕಾಗುತ್ತೆ ಎಂದು ಟೀಕಿಸಿದರು.

    ಬಿಜೆಪಿ ಅಧ್ಯಕ್ಷರಿಗೆ ಭೇಟಿ ಮಾಡಕ್ಕಾಗುತ್ತ? ನನ್ನ ಕಾರ್ಯಕ್ರಮ ಮುಗಿಸಿ ಡಿಕೆಶಿ ಅವರನ್ನು ಭೇಟಿ ಆಗುತ್ತೇನೆ. ಬಾಯಿಮುಚ್ಚು ಅಂತಾ ಪರ್ಟಿಕ್ಯುಲರ್ ಆಗಿ ನನಗೆ ಹೇಳಿದ್ದಾರಾ? ನಾನು ಅವರ ಹೇಳಿಕೆ ನೋಡಿದ್ದೇನೆ. ಎಲ್ಲ ಜನ ಸೇರಿ ಪಕ್ಷ ಅಧಿಕಾರಕ್ಕೆ ತರಬೇಕು ಅಂದಿದ್ದಾರೆ ಎಂದು ಹೇಳಿದರು.

    ಲೆವೆಲ್ ಬಗ್ಗೆ ಡಿಕೆಶಿ ಹೇಳಿಕೆ ವಿಚಾರಕ್ಕೆ, ಆಯ್ತು ಸ್ವಾಮಿ ಅವರ ಲೆವೆಲ್ ದೊಡ್ಡದಿರಬಹುದು. ನನ್ನ ಲೆವೆಲ್ ಚಿಕ್ಕದೇ ಇರಬಹುದು. ಅವರೇ ದೊಡ್ಡವರಾಗಲಿ. ಇದನ್ನು ನನ್ನ ಪಕ್ಷ ತೀರ್ಮಾನ ಮಾಡಬೇಕು. ನನ್ನ ಅಭಿಪ್ರಾಯ ಹೇಳಿದ್ದೇನೆ. ರಾಜ್ಯದ ಅಭಿಪ್ರಾಯ ಹೇಳಿದ್ದೇನೆ. ರಾಜ್ಯ ಪ್ರವಾಸ ಮಾಡ್ತಿದೀನಿ, ಎಷ್ಟು ಜನ ಇದ್ದಾರೆ ಎಲ್ಲರನ್ನೂ ಕೇಳಿ ಎಂದು ಸವಾಲು ಹಾಕಿದರು.

    ಸಿದ್ದರಾಮಯ್ಯ 2013 ರಿಂದ 2018ರವರೆಗೂ ಕೊಟ್ಟಿದ ಆಡಳಿತಕ್ಕೆ ಸಿದ್ದರಾಮಯ್ಯ ಸಿಎಂ ಆಗಬೇಕು ಎಂಬುದು ಜನರ ಅಭಿಪ್ರಾಯವಾಗಿದೆ. ಮತ ಕೊಡೋರು ಯಾರು, ಅಧಿಕಾರನಾ ತರಲು ಸಾಧ್ಯವಾಗುತ್ತಾ? ಜನ ಮತ ಕೊಟ್ರೆ ಅಧಿಕಾರ ಬರಲು ಸಾಧ್ಯ. ಸಿದ್ದರಾಮಯ್ಯ ಕೊಟ್ಟ ಕಾರ್ಯಕ್ರಮ ಇವತ್ತು ಜನ ನೆನೆಸುತ್ತಿದ್ದಾರೆ. ರಾಜ್ಯ ಒಳ್ಳೆಯದಾಗಬೇಕೆಂದ್ರೆ 2023ರಲ್ಲಿ ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ಜನರು ಬಯಸುತ್ತಿದ್ದಾರೆ ಎಂದು ವಿವರಿಸಿದರು.

    ನಾವು ನೀವು ಯಾರೂ ತೀರ್ಮಾನ ಮಾಡಕ್ಕಾಗಲ್ಲ. ಡಿ.ಕೆ.ಶಿವಕುಮಾರ್ ಸಹ ಮಾಡಕ್ಕಾಗಲ್ಲ. ನಾನು ಸಹ ಮಾಡಕ್ಕಾಗಲ್ಲ. ನಮ್ಮ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ತೀರ್ಮಾನ ಮಾಡ್ತಾರೆ. ನಮ್ಮ ಅಭಿಪ್ರಾಯ ಹೇಳಿದ್ದು ಜನ ತೀರ್ಮಾನ ಮಾಡುತ್ತಾರೆ ಎಂದರು. ಇದನ್ನೂ ಓದಿ: ಭಾರತದ ಗಡಿಯಲ್ಲಿ ಮತ್ತೆ ಪಾಕ್ ಡ್ರೋನ್ ಹಾರಾಟ

    ಡಿಕೆ, ಡಿಕೆ ಅಂತಾ ಅಭಿಮಾನಿಗಳ ಘೋಷಣೆ ವಿಚಾರ, ಇದು ವ್ಯಕ್ತಿ ಪೂಜೆ ಅಲ್ವಾ ಅಂತಾ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಇದನ್ನ ನೀವು ಕೇಳಬೇಕು. ಪಕ್ಷದಲ್ಲಿ ಅಲ್ಪಸಂಖ್ಯಾತರ ಕಡೆಗಣಿಸುತ್ತಿಲ್ಲ. ಮೊದಲು ಕಾಂಗ್ರೆಸ್ ಆಮೇಲೆ ಸಿದ್ದರಾಮಯ್ಯ. ಆಮೇಲೆ ಡಿಕೆಶಿನಾ ಅಂತಾ ಮಾಧ್ಯಮಗಳ ಪ್ರಶ್ನೆಗೆ, ಮೊದಲು ಕಾಂಗ್ರೆಸ್ ಆಮೇಲೆ ಸಿದ್ದರಾಮಯ್ಯ ಎಂದು ಪುನರುಚ್ಚಾರ ಮಾಡಿದರು.

    Live Tv
    [brid partner=56869869 player=32851 video=960834 autoplay=true]

  • ಮೊದಲು ಯಡಿಯೂರಪ್ಪ ಸಾಹೇಬರಿಗೆ ಮರ್ಯಾದೆ ಕೊಡಲಿ: ಬಿಎಸ್‌ವೈಯನ್ನು ಹಾಡಿ ಹೊಗಳಿದ ಹೆಬ್ಬಾಳ್ಕರ್

    ಮೊದಲು ಯಡಿಯೂರಪ್ಪ ಸಾಹೇಬರಿಗೆ ಮರ್ಯಾದೆ ಕೊಡಲಿ: ಬಿಎಸ್‌ವೈಯನ್ನು ಹಾಡಿ ಹೊಗಳಿದ ಹೆಬ್ಬಾಳ್ಕರ್

    ಬೆಳಗಾವಿ: ಮೊದಲು ಮಾಜಿ ಸಿಎಂ ಯಡಿಯೂರಪ್ಪ ಸಾಹೇಬರಿಗೆ ಕೊಡುವಂತಹ ಮರ್ಯಾದೆ ಕೊಡಲಿ ಎಂದು ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿಗೆ ಟಾಂಗ್ ಕೊಟ್ಟರು.

    ಮಾಜಿ ಸಿಎಂ ಸಿದ್ದರಾಮಯ್ಯ ಮೇಲೆ ಡಿ.ಕೆ.ಶಿವಕುಮಾರ್ ಅವರಿಗೆ ಭಿನ್ನಮತವಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ ಆರೋಪಕ್ಕೆ ನಾನೂ ಉತ್ತರ ಕೊಡಲಿಕ್ಕೆ ಆಗಲ್ಲ. ಅವರ ಮನೆಯನ್ನ ಮೊದಲು ಸರಿ ಮಾಡಿಕೊಳ್ಳಲಿ. ಮೊದಲು ಯಡಿಯೂರಪ್ಪ ಸಾಹೇಬರಿಗೆ ಕೊಡುವಂತಹ ಮರ್ಯಾದೆ ಕೊಡಲಿ ಎಂದು ಟೀಕಿಸಿದರು. ಇದನ್ನೂ ಓದಿ: ದೇವಸ್ಥಾನದ ಆವರಣದಲ್ಲಿ ಮಾಂಸ ಎಸೆದ ದುಷ್ಕರ್ಮಿಗಳು- 3 ಮಾಂಸದ ಅಂಗಡಿಗಳಿಗೆ ಬೆಂಕಿ

    ದಕ್ಷಿಣ ಭಾರತ ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಬರಲಿಕ್ಕೆ ಯಡಿಯೂರಪ್ಪ ಸಾಹೇಬ್ರು ಕಾರಣರಾಗಿದ್ದಾರೆ. ಮೊದಲು ಅವರಿಗೆ ಕೊಡುವಂತಹ ಗೌರವ ಸ್ಥಾನಮಾನ ಕೊಡಲಿ. ಮೊದಲು ಅವರ ಎಡೆಯಲ್ಲಿ ಬಿದ್ದಿರೋದನ್ನ ತಗೆದು ಸುಧಾರಿಸಿಕೊಳ್ಳಲಿ. ಆಮೇಲೆ ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡಲಿ ಎಂದು ಯಡಿಯೂರಪ್ಪ ಅವರನ್ನ ಹಾಡಿ ಹೊಗಳಿದರು.

    ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸಿಎಂ ರೇಸ್‍ಗಾಗಿ ಹೊಡೆದಾಟ ನಡೆಯುತ್ತಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ಕೊಟ್ಟ ಅವರು, ಕೂಸು ಹುಟ್ಟುವುದಕ್ಕಿಂತ ಮುಂಚೆ ಕುಲಾವಿ ಅನ್ನೋ ರೀತಿ ಇದಾಗಿದೆ. ಮೊದಲು ನಮ್ಮ ಪಕ್ಷ 125 ಶಾಸಕರು ಆಯ್ಕೆಯಾಗಲಿ. ಶಾಸಕಾಂಗ ಸಭೆಯಲ್ಲಿ ತೀರ್ಮಾನ ಆಗಲಿ, ಹೈಕಮಾಂಡ್ ತೀರ್ಮಾನ ಆಗಲಿ. ಈಗಲೇ ಯಾರು ಗುದ್ದಾಡುತ್ತಿಲ್ಲ, ಜಿದ್ದಿಗೆ ಬಿದ್ದಿಲ್ಲ ಎಂದು ಸ್ಪಷ್ಟನೆ ಕೊಟ್ಟರು.

    ಸಿದ್ದರಾಮೋತ್ಸವ ಅವರ ಹುಟ್ಟುಹಬ್ಬವನ್ನು ಎಲ್ಲರೂ ಕೂಡ ತುಂಬು ಮನಸ್ಸಿನಿಂದ ಮಾಡ್ತಾ ಇದ್ದೇವೆ. ರಾಜಕೀಯದಲ್ಲಿ 40 ವರ್ಷ ಏರಿಳಿತ ಕಂಡ ಒಬ್ಬ ನಾಯಕನ 75ನೇ ಹುಟ್ಟುಹಬ್ಬ ಎಲ್ಲರೂ ಸೇರಿ ಮಾಡ್ತಾ ಇದ್ದೇವೆ. ಇದಕ್ಕೆ ನಮ್ಮ ಪಕ್ಷದಲ್ಲಿ ಯಾವುದೇ ವಿರೋಧವಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಬೆಂಗಳೂರಲ್ಲಿ ಉಚಿತ ಬೈಕ್ ಅಂಬುಲೆನ್ಸ್ – 5 ತಿಂಗಳಿನಿಂದ ವ್ಯಕ್ತಿಯಿಂದ ಫ್ರೀ ಸರ್ವೀಸ್

    ಸಿದ್ದರಾಮಯ್ಯ ನಾನೇ ಸಿಎಂ ಆಗುತ್ತೇನೆಂಬ ಹೇಳಿಕೆಗೆ ಉತ್ತರ ಕೊಟ್ಟ ಅವರು, ನಾನೇ ಸಿಎಂ ಆಗ್ತೇನೆಂದು ಸಿದ್ದರಾಮಯ್ಯ ಅವರು ಇಂಗಿತ ವ್ಯಕ್ತಪಡಿಸಿದ್ದು, ನಾವೆಲ್ಲೂ ಕೇಳಿಲ್ಲ. ನಮ್ಮ ಕಾಂಗ್ರೆಸ್ ಪಕ್ಷದಲ್ಲಿ ಮುಂಚೆಯಿಂದನೂ ಒಂದು ಪದ್ಧತಿ ಇದೆ. ಶಾಸಕರು ಆಯ್ಕೆಯಾಗಬೇಕು, ಶಾಸಕರ ಸಭೆ, ಹೈಕಮಾಂಡ್ ತೀರ್ಮಾನವಾಗಬೇಕು. ರಿಸಲ್ಟ್ ಬಂದಿಲ್ಲ ಈಗಲೇ ಅದನ್ನ ಹೇಳಲಿಕ್ಕೆ ಆಗಲ್ಲ. ಸಿದ್ದರಾಮಯ್ಯ ಸಾಹೇಬ್ರು ಇದನ್ನೆ ಹೇಳಿದ್ದಾರೆ ಎಂದು ಸಮರ್ಥನೆ ಮಾಡಿಕೊಂಡರು.

    Live Tv
    [brid partner=56869869 player=32851 video=960834 autoplay=true]

  • ಬಡವರ ಉದ್ಧಾರಕ್ಕಾಗಿ ಅಲ್ಲ, ರಾಜಕೀಯ ಲಾಭಕ್ಕಾಗಿ ಸಿದ್ದರಾಮಯ್ಯೋತ್ಸವ: ಹಾಲಪ್ಪ ಕಿಡಿ

    ಬಡವರ ಉದ್ಧಾರಕ್ಕಾಗಿ ಅಲ್ಲ, ರಾಜಕೀಯ ಲಾಭಕ್ಕಾಗಿ ಸಿದ್ದರಾಮಯ್ಯೋತ್ಸವ: ಹಾಲಪ್ಪ ಕಿಡಿ

    ಬೆಳಗಾವಿ: ರಾಜಕೀಯ ಲಾಭಕ್ಕಾಗಿ ಸಿದ್ದರಾಮೋತ್ಸವ ಮಾಡುತ್ತಿದ್ದು, ಜನರ ಉದ್ಧಾರಕ್ಕೆ ಅಲ್ಲ ಎಂದು ಧಾರವಾಡ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಕಿಡಿಕಾರಿದರು.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ 60 ವರ್ಷಗಳಿಂದ ಅಧಿಕಾರಿ ಅನುಭವಿಸಿ ಇದೀಗ ಅಧಿಕಾರ ಕಳೆದುಕೊಂಡಿದ್ದಾರೆ. ಮರಳಿ ಅಧಿಕಾರ ಪಡೆಯಲು ಪ್ರಯತ್ನ ಮಾಡ್ತಿದ್ದಾರೆ. ಅಧಿಕಾರಕ್ಕೆ ಬರಬೇಕು ಎನ್ನುವ ಕಾರಣಕ್ಕೆ ಇವೆಲ್ಲವೂ ಪಾದಯಾತ್ರೆ, ಸಿದ್ದರಾಮೋತ್ಸವ ಮಾಡಿ ಜನರನ್ನು ಆಕರ್ಷಣೆ ಮಾಡ್ತಿದ್ದಾರೆ. ರಾಜಕೀಯ ಲಾಭಕ್ಕಾಗಿ ಸಿದ್ದರಾಮೋತ್ಸವ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಅಮರನಾಥ ಯಾತ್ರೆ: ನೈಸರ್ಗಿಕ ವಿಕೋಪದಿಂದ 8 ಯಾತ್ರಾರ್ಥಿಗಳು ಸಾವು 

    Siddaramaiah

    ಇದು ಜನರ ಉದ್ಧಾರಕ್ಕೆ ಅಲ್ಲ. ಅವರ ರಾಜಕೀಯ ಲಾಭಕ್ಕಾಗಿ ಉತ್ಸವ ಮಾಡಿಕೊಳ್ಳುತ್ತಿದ್ದಾರೆ. ಜನರಿಗೆ ಒಳ್ಳೆಯದು ಮಾಡುವುದಕ್ಕೆ ಎಂದು ನನಗೆ ಅನಿಸಿಲ್ಲ. ಜನರ ಮಧ್ಯೆ ಇದ್ದೇವೆ ಎಂದು ತೋರಿಸಲು ಇಂತಹ ಕಾರ್ಯಕ್ರಮ ಮಾಡ್ತಿದ್ದಾರೆ ಎಂದರು.

    ಸಚಿವ ಸಂಪುಟ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮದು ರಾಷ್ಟ್ರೀಯ ಪಕ್ಷ. ಇದಕ್ಕೆ ರಾಷ್ಟ್ರೀಯ, ನಾಯಕರು, ರಾಜ್ಯದ ಹಿರಿಯರು ಎಲ್ಲರೂ ಕೂಡಿಕೊಂಡು ಒಟ್ಟಿಗೆ ನಿರ್ಣಯ ತೆಗೆದುಕೊಳ್ಳುತ್ತಾರೆ. ಹೀಗಾಗಿ ಸೂಕ್ತ ಸಮಯದಲ್ಲಿ ನಮ್ಮ ರಾಷ್ಟ್ರೀಯ ನಾಯಕರು ಒಳ್ಳೆಯ ನಿರ್ಧಾರ ಕೈಗೊಳ್ಳುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಜೇಮ್ಸ್ ವೆಬ್ ಟೆಲಿಸ್ಕೋಪ್‍ನಲ್ಲಿ ಸೆರೆ ಸಿಕ್ಕ ಗುರು-ಚಂದ್ರನ ಬೆರಗುಗೊಳಿಸುವ ಫೋಟೋ 

    Live Tv
    [brid partner=56869869 player=32851 video=960834 autoplay=true]