ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಲಿಂಗನಮಠ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಚುಂಚವಾಡ ಗ್ರಾಮದ ಬಾಲಕ ಅನಂತು ಧರ್ಮೇಂದ್ರ ಪಾಶೆಟ್ಟಿ(15) ಸಾವನ್ನಪ್ಪಿದ್ದಾನೆ. ಧರ್ಮೇಂದ್ರ ಪಾಶೆಟ್ಟಿ ಮನೆಯವರು ತಾವು ವಾಸಿಸುವ ಮನೆಯ ಪಕ್ಕದಲ್ಲಿದ್ದ ಮನೆಯಲ್ಲಿ ದನ-ಕರುಗಳನ್ನು ಕಟ್ಟುತ್ತಿದ್ದರು.
ಗುರುವಾರ ರಾತ್ರಿ 10 ಗಂಟೆ ಸುಮಾರಿಗೆ ಕೊಟ್ಟಿಗೆಯಲ್ಲಿರುವ ದನ-ಕರುಗಳಿಗೆ ಮೇವು ಹಾಕಲು ಹೋದಾಗ ಗೋಡೆ ಏಕಾಏಕಿ ಕುಸಿದು ಬಿದ್ದಿರುವುದರಿಂದ ಬಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಸ್ಥಳಕ್ಕೆ ನಂದಗಡ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಅಮರನಾಥ ಯಾತ್ರೆ: ನೈಸರ್ಗಿಕ ವಿಕೋಪದಿಂದ 8 ಯಾತ್ರಾರ್ಥಿಗಳು ಸಾವು
ಈ ಕುರಿತು ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Live Tv
[brid partner=56869869 player=32851 video=960834 autoplay=true]
ಬೆಳಗಾವಿ: ಎರಡು ಸರ್ಕಾರಿ ಬಸ್‍ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಬೆಳಗಾವಿ ಸವದತ್ತಿ ತಾಲೂಕಿನ ಹಲಕಿ ಕ್ರಾಸ್ ಬಳಿ ನಡೆದಿದೆ.
ಸವದತ್ತಿ ತಾಲೂಕಿನ ಹಲಕಿ ಕ್ರಾಸ್ ಬಳಿ ಎರಡು ಸರ್ಕಾರಿ ಬಸ್‍ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಹತ್ತಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: ಭಾರೀ ಮಳೆಗೆ ಕಣ್ಣೂರಿನಲ್ಲಿ ಗುಡ್ಡ ಕುಸಿತ – 2 ಮನೆಗಳಿಗೆ ಹಾನಿ
ಸರ್ಕಾರಿ ಬಸ್ ಬೆಳಗಾವಿ ನಗರದಿಂದ ಬಾಗಲಕೋಟೆಗೆ ತೆರಳುತ್ತಿತ್ತು. ಈ ಮಧ್ಯೆ ಯರಗಟ್ಟಿಯಿಂದ ಬೆಳಗಾವಿಯತ್ತ ಬರುತ್ತಿದ್ದ ಬಸ್ ಅಪಘಾತವಾಗಿದ್ದು, ಎರಡು ಬಸ್‍ಗಳ ಮುಂಭಾಗ ನಜ್ಜುಗುಜ್ಜಾಗಿದೆ.
ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Live Tv
[brid partner=56869869 player=32851 video=960834 autoplay=true]
ಬೆಳಗಾವಿ: ಕೇದಾರದಿಂದ ಕರ್ನಾಟಕದ ಬೆಳಗಾವಿವರೆಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಆಶೀರ್ವಾದ ಮಾಡಲು ಬಂದಿದ್ದೇನೆ ಎಂದು ಕೇದಾರ ಪೀಠದ ಜಗದ್ಗುರು ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿಕೆ ಕೊಟ್ಟಿದ್ದಾರೆ.
ಕೇದಾರ ಪೀಠದ ಜಗದ್ಗುರು ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಕೇದಾರದಿಂದ ಕರ್ನಾಟಕದ ಬೆಳಗಾವಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಮನೆಗೆ ಬಂದಿದ್ದೇವೆ. ಕೇದಾರನಾಥ ಕಳಿಸಿಕೊಟ್ಟಿದ್ದಕ್ಕೆ ನಾವು ಬಂದಿದ್ದೇವೆ. ನಾಲ್ಕು ತಿಂಗಳ ಕಾಲ ನಾವು ಕೇದಾರನಾಥದಲ್ಲೇ ಇರಬೇಕಾಗುತ್ತದೆ. ಆನಂತರ ಆರು ತಿಂಗಳು ನಿಯೋಜಿತ ಕಾರ್ಯಕ್ರಮಗಳಾಗುತ್ತವೆ ಎಂದು ತಿಳಿಸಿದ್ದಾರೆ.
ರಾಯಚೂರು ಜಿಲ್ಲೆಯಲ್ಲಿ ಮಹಾಪೂಜೆ ಮುಗಿಸಿ, ತುಮಕೂರು, ಚಿತ್ರದುರ್ಗದಲ್ಲಿ ಕಾರ್ಯಕ್ರಮವಿದೆ. ಬೆಳಗಾವಿ ಜಿಲ್ಲೆಯ ಮುತ್ನಾಳ ಮಠಕ್ಕೆ ಬರಬೇಕು ಎಂದು ಹಠ ಹಿಡಿದಿದ್ರು. ಭಕ್ತರ ಮನೆಗೆ ಕರೆದುಕೊಂಡು ಹೋಗಬೇಕು ಎಂದು ಹಠ ಹಿಡಿದಿದ್ರು. ಲಕ್ಷ್ಮೀ ಹೆಬ್ಬಾಳ್ಕರ್ ಭಕ್ತಿಯಿಂದ ತಮ್ಮನ್ನು ತಾವು ಅರ್ಪಣೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.
ಬೆಳಗಾವಿ: ಮಹಾರಾಷ್ಟ್ರದಲ್ಲಿ ಇರೋದು ಮೂರಾಬಟ್ಟೆ ಸರ್ಕಾರ ಎಂದು ಸಚಿವ ಗೋವಿಂದ ಕಾರಜೋಳ ಕಿಡಿಕಾರಿದರು.
ಮಹಾರಾಷ್ಟ್ರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ವಿಚಾರವಾಗಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಇರೋದು ಮೂರಾಬಟ್ಟೆ ಸರ್ಕಾರ. ಎನ್‍ಸಿಪಿ, ಕಾಂಗ್ರೆಸ್, ಶಿವಸೇನೆ ಮೂರು ಪಕ್ಷ ಸೇರಿ ಮೂರಾಬಟ್ಟೆ ಸರ್ಕಾರ ಮಾಡಿದೆ. ಕಾಂಗ್ರೆಸ್, ಶಿವಸೇನೆಗೆ ಎಂದೂ ಹೊಂದಾಣಿಕೆ ಆಗಲು ಸಾಧ್ಯವಿಲ್ಲ. ನೀರಿಗೆ ಎಣ್ಣೆ ಸೇರಿಸಿದ ಹಾಗೇ ಆಗಿದೆ ಎಂದು ವಿರೋಧ ವ್ಯಕ್ತಪಡಿಸಿದರು.
ಬಾಳಾಸಾಹೇಬ್ ಠಾಕ್ರೆ ಮುಂಬೈನಲ್ಲಿ ಹಿಂದೂಗಳ ಮೇಲೆ ನಡೆಯುತ್ತಿದ್ದ ದೌರ್ಜನ್ಯದ ವಿರುದ್ಧ ಹೋರಾಟ ಮಾಡಿ ಶಿವಸೇನೆ ಪಕ್ಷವನ್ನು ಕಟ್ಟಿದ್ದಾರೆ. ಅಧಿಕಾರದ ಆಸೆಗೆ ಉದ್ಧವ್ ಠಾಕ್ರೆ ಕಾಂಗ್ರೆಸ್ ಜೊತೆಗೆ ಕೈಜೋಡಿಸಿದ್ದಾರೆ. ತತ್ವ, ಸಿದ್ಧಾಂತವಿಲ್ಲದ ಪಕ್ಷದ ಜೊತೆ ಕೈ ಜೋಡಿಸಿ ಸರ್ಕಾರ ಮಾಡಿದ್ದು, ಮಹಾ ಅಪರಾಧ ಎಂದು ಕಿಡಿಕಾರಿದರು. ಇದನ್ನೂ ಓದಿ: ಭಾರತೀಯ ಉಕ್ಕು ಪ್ರಾಧಿಕಾರದ ಮಾಜಿ ಅಧ್ಯಕ್ಷ ವಿ. ಕೃಷ್ಣಮೂರ್ತಿ ವಿಧಿವಶ
ಉದ್ಧವ ಠಾಕ್ರೆ ವಿರುದ್ಧ ಅವರದೇ ಪಕ್ಷದ ಶಾಸಕರು ಬಂಡೆದ್ದಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಆಗುತ್ತಾ ಎಂದು ಮಾಧ್ಯಮಗಳ ಪ್ರಶ್ನೆಗೆ ಕಾದು ನೋಡಬೇಕು. ಆಪರೇಷನ್ ನಾವು ಮಾಡಿಲ್ಲ. ಯಾವ ಪಕ್ಷಕ್ಕೆ ತತ್ವ ಸಿದ್ಧಾಂತವಿಲ್ಲ. ಅಂತವರ ವಿರುದ್ಧ ಪಕ್ಷದ ಶಾಸಕರೇ ಬಂಡೆದ್ದಿದ್ದಾರೆ. ಪ್ರಧಾನಿ ಮೋದಿ ಆಡಳಿತ ಮೆಚ್ಚಿ ಇಡೀ ಪ್ರಪಂಚದಲ್ಲಿ ಬಿಜೆಪಿ ಬಲಿಷ್ಠ ಪಕ್ಷವಾಗ್ತಿದೆ ಎಂದು ವಿವರಿಸಿದರು.
18 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿ ಇದೆ. ದೇಶದಲ್ಲಿ 1,378 ಬಿಜೆಪಿ ಶಾಸಕರಿದ್ದು, 301 ಬಿಜೆಪಿ ಸಂಸದರಿದ್ದಾರೆ. 95 ರಾಜ್ಯಸಭಾ ಸದಸ್ಯರಿದ್ದಾರೆ. ನರೇಂದ್ರ ಮೋದಿ ದೇಶಪ್ರೇಮ, ಅಭಿವೃದ್ಧಿ, ಇಡೀ ಪ್ರಪಂಚದಲ್ಲಿ ಬಿಜೆಪಿ ಕೀರ್ತಿ ಗೌರವ ಹೆಚ್ಚಾಗಿದ್ದರಿಂದ ಮೆಚ್ಚಿ ಬರುತ್ತಿದ್ದಾರೆ. ಸ್ಥಿರ ಸರ್ಕಾರ ಅಂದ್ರೆ ಏನು ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: ನಿಯಮಗಳನ್ನು ಮೀರಿ ಕಲ್ಲು ಕ್ವಾರಿಯಲ್ಲಿ ಭಾರೀ ಪ್ರಮಾಣದಲ್ಲಿ ಸ್ಫೋಟ
ಮಹಾರಾಷ್ಟ್ರದಲ್ಲಿ ಯಾವ ಪಕ್ಷಕ್ಕೂ ಬಹುಮತ ಬಂದಿರಲಿಲ್ಲ. ಆ ಸಂದರ್ಭದಲ್ಲಿ ಯಾವ ಪಕ್ಷಕ್ಕೆ ಹೆಚ್ಚಿನ ಸೀಟ್ ಬಂದಿರುತ್ತೆ ಅವರನ್ನು ಬೆಂಬಲಿಸಬೇಕು ಎಂದು ತಿಳಿಸಿದರು.
ಬೆಳಗಾವಿ: ಮಿದುಳು ಜ್ವರದಿಂದ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ಬಾಲಕನನ್ನು ಬೆಳಗಾವಿಯ ಯಶ್ ಆಸ್ಪತ್ರೆಗೆ ಕರೆತರಲಾಗಿದೆ.
ಪಬ್ಲಿಕ್ ಟಿವಿಯ ಕಳಕಳಿಯ ಸುದ್ದಿಗೆ ಸ್ಪಂದಿಸಿರುವ ಬೆಳಗಾವಿ ಫೇಸ್‍ಬುಕ್ ಫ್ರೆಂಡ್ಸ್ ಸರ್ಕಲ್ ತಂಡದವರು ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯ ವೆಚ್ಚವನ್ನು ಭರಿಸಿದ್ದಾರೆ. ಈಗಾಗಲೇ ಬಾಲಕನನ್ನು ನಗರದ ಯಶ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅಂಬರಡಾ ಗ್ರಾಮದ ಶೈಲೇಶ್(8)ಗೆ ಮಿದುಳು ಜ್ವರ ಬಂದು ಕೋಮಾದಲ್ಲಿದ್ದನು. ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದನು. ಇತ್ತ ಮಗನನ್ನು ಉಳಿಸಿಕೊಳ್ಳಲು ತಂದೆ-ತಾಯಿ ಆಸ್ಪತ್ರೆಗಳಿಗೆ ಅಲೆದಾಡಿ ಕೊನೆಗೆ ದೇವರ ಮೊರೆ ಹೋಗಿದ್ದರು. ಈ ಕುರಿತು ಪಬ್ಲಿಕ್ ಟಿವಿ ಇಂದು ಬೆಳಗ್ಗೆ ಮಾನವೀಯ ಸುದ್ದಿಯನ್ನು ಪ್ರಕಟಿಸಿತ್ತು. ಇದನ್ನೂ ಓದಿ: ನನ್ನ ಮಗನನ್ನು ಉಳಿಸು ದೇವರೇ – ಶಿಲುಬೆ ಮುಂದೆ ಕಂದನನ್ನು ಮಲಗಿಸಿದ ದಂಪತಿ
ಪಬ್ಲಿಕ್ ಟಿವಿ ಸುದ್ದಿಯನ್ನು ಗಮನಿಸಿದ ಫೇಸ್‍ಬುಕ್ ಫ್ರೆಂಡ್ ಸರ್ಕಲ್ ಯುವಕರು ಕೋಮಾದಲ್ಲಿದ್ದ ಬಾಲಕನನ್ನು ಖಾನಾಪೂರ ತಾಲೂಕಿನ ನಂದಗಡ ಗ್ರಾಮದಿಂದ ಬೆಳಗಾವಿಯ ಯಶ್ ಆಸ್ಪತ್ರೆಗೆ ಅಂಬುಲೆನ್ಸ್ ಮೂಲಕ ಕರೆದುಕೊಂಡು ಬಂದಿದ್ದಾರೆ. ಸದ್ಯ ಯಶ್ ಆಸ್ಪತ್ರೆಯಲ್ಲಿ ಶೈಲೇಶ್ ಆರೋಗ್ಯವನ್ನ ವೈದ್ಯರು ತಪಾಸಣೆ ಮಾಡುತ್ತಿದ್ದಾರೆ.
ಯಶ್ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಎಸ್.ಕೆ.ಪಾಟೀಲ್ ಅವರಿಂದ ಚಿಕಿತ್ಸೆ ಪ್ರಾರಂಭಿಸಲಾಗಿದೆ. ಬಾಲಕನನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ಆಸ್ಪತ್ರೆಗೆ ಬೆಳಗಾವಿ ಡಿಎಚ್‍ಓ ಅವರು ಭೇಟಿ ನೀಡಿ ಮಗುವಿನ ಆರೋಗ್ಯವನ್ನ ಪರಿಶೀಲನೆ ನಡೆಸಿದ್ದಾರೆ. ಮಗವಿನ ಚಿಕಿತ್ಸೆಗೆ ಬೇಕಾದ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಭರವಸೆ ಕೊಟ್ಟಿದ್ದಾರೆ. ಇದನ್ನೂ ಓದಿ: ರಾಜ್ಯಾದ್ಯಂತ ಮುಂದಿನ 4 ದಿನ ಭಾರೀ ಮಳೆ – 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಕೂಡ ಮಗುವಿನ ಆರೋಗ್ಯ ತಪಾಸಣೆಗೆ ಬೇಕಾದ ಅಗತ್ಯ ಖರ್ಚುವೆಚ್ಚವನ್ನು ಭರಿಸುವುದಾಗಿ ತಿಳಿಸಿದ್ದಾರೆ.
ಬೆಳಗಾವಿ: ಮೂರು ದಿನಗಳ ಹಿಂದೆ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ನಡೆದಿದ್ದ ಸತೀಶ್ ಪಾಟೀಲ್ ಹತ್ಯೆ ಪ್ರಕರಣದಲ್ಲಿ 10 ಮಂದಿಯನ್ನು ಬಂಧಿಸಲಾಗಿದ್ದು, ಹಿಂಸಾಚಾರ ಪ್ರಕರಣದಲ್ಲಿ 22 ಆರೋಪಿಗಳನ್ನು ಕಾಕತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆನಂದ ಕುಟ್ರೆ(60), ಜಾಯಪ್ಪ ನೀಲಜಕರ(52), ಸುರೇಖಾ ನೀಲಜಕರ(47), ಸಂಜನಾ ನೀಲಜಕರ(21), ವೆಂಕಟೇಶ್ ಕುಟ್ರೆ(50), ದೌಲತ್ ಮುತಗೇಕರ(21), ಲಖನ್ ನೀಲಜಕರ(25), ಲಕ್ಷ್ಮಿ ಕುಟ್ರೆ(45), ಸಂಗೀತಾ ಕುಟ್ರೆ(45) ಹಾಗೂ ಶಶಿಕಲಾ ಕುಟ್ರೆ(50) ಬಂಧಿತರು. ಜೂನ್ 18ರ ರಾತ್ರಿ ಸತೀಶ್ ಪಾಟೀಲ್ ಹತ್ಯೆ ನಡೆದಿತ್ತು. ಕಾರು ಪಾರ್ಕಿಂಗ್ ವಿಚಾರಕ್ಕೆ ಪ್ರಾರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿತ್ತು. ಸತೀಶ್ ಹತ್ಯೆ ಬಳಿಕ ಗ್ರಾಮದಲ್ಲಿ ವಾಹನ, ಬಣವೆಗೆ ಉದ್ರಿಕ್ತರು ಬೆಂಕಿ ಇಟ್ಟಿದ್ದರು. ಇದನ್ನೂ ಓದಿ: ನನ್ನ ಮಗನನ್ನು ಉಳಿಸು ದೇವರೇ – ಶಿಲುಬೆ ಮುಂದೆ ಕಂದನನ್ನು ಮಲಗಿಸಿದ ದಂಪತಿ
ಹಳೆ ವೈಷಮ್ಯ
ಗ್ರಾಮದ ದೇವಸ್ಥಾನದ ಜಾಗವನ್ನು ಕೆಲ ಪ್ರಭಾವಿಗಳು ಒತ್ತುವರಿ ಪಡೆದುಕೊಂಡಿದ್ದರು. ದೇವಸ್ಥಾನದ ಜಾಗ ಮರಳಿ ಸಿಗಬೇಕೆಂದು ಸತೀಶ್ ಪಾಟೀಲ್ ಹೋರಾಟ ಮಾಡ್ತಿದ್ದರು. ಇದೇ ವೈಷಮ್ಯಕ್ಕೆ ಸತೀಶ್ ಪಾಟೀಲ್ ಹತ್ಯೆ ಮಾಡಲಾಗಿದೆ. ಕಾಕತಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಕಾರು ಪಾರ್ಕಿಂಗ್ ವಿಚಾರಕ್ಕೆ ಗಲಾಟೆ – ವ್ಯಕ್ತಿ ಬರ್ಬರ ಹತ್ಯೆ
ಕೊಲೆ ಬಳಿಕ ನಡೆದ ಹಿಂಸಾಚಾರ ಸಂಬಂಧ ಕಾಕತಿ ಠಾಣೆ ಪೊಲೀಸರು 22 ಆರೋಪಿಗಳ ಬಂಧಿಸಿದ್ದಾರೆ. ಕೊಲೆ ಹಾಗೂ ಹಿಂಸಾಚಾರ ಎರಡೂ ಪ್ರಕರಣಗಳ ಸಂಬಂಧ ಬಂಧಿತರ ಸಂಖ್ಯೆ ಒಟ್ಟು 32ಕ್ಕೆ ಏರಿಕೆಯಾಗಿದೆ.
ಬೆಳಗಾವಿ: ನನ್ನ ಮಗುವನ್ನು ಉಳಿಸು ಎಂದು ದಂಪತಿ ತನ್ನ ಏಳೂವರೆ ವರ್ಷದ ಮಗುವನ್ನು ಶಿಲುಬೆ ಮುಂದೆ ಮಲಗಿಸಿರುವ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ.
ನಂದಗಡ ಗ್ರಾಮದ ಪಶ್ಚಿಮ ಘಟ್ಟದ ಬೆಟ್ಟದ ಮೇಲಿರುವ ಐತಿಹಾಸಿಕ ಶಿಲುಬೆ(Holy Cross) ಮುಂದೆ ದಂಪತಿ ತಮ್ಮ ಏಳೂವರೆ ವರ್ಷದ ಮಗನನ್ನು ಮಲಗಿಸಿ ‘ಮಿದುಳು ಜ್ವರದಿಂದ ಬಳಲುತ್ತಿರುವ ನಮ್ಮ ಪುತ್ರನನ್ನು ಕಾಪಾಡು ದೇವರೇ ಎಂದು ಕಣ್ಣೀರಿಟ್ಟಿದ್ದಾರೆ.
ಏನಿದು ಘಟನೆ?
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅಂಬರಡಾ ಗ್ರಾಮದ ಕೃಷ್ಣಾ ಮತ್ತು ಸುತ್ರಾವಿ ಪುತ್ರ ಶೈಲೇಶ್‍ಗೆ ಏಳೂವರೆ ವರ್ಷ. ಕೃಷ್ಣಾ ಮತ್ತು ಸುತ್ರಾವಿ ಕೂಲಿ ವೃತ್ತಿಯನ್ನು ಮಾಡುತ್ತಿದ್ದಾರೆ. ಶೈಲೇಶ್ ಕಳೆದ ಕೆಲ ತಿಂಗಳ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದ. ಈ ಹಿನ್ನೆಲೆ ಆತನನ್ನು ದಂಪತಿ ವೈದ್ಯರ ಬಳಿ ಕರೆದುಕೊಂಡು ಹೋಗಿ ಪರೀಕ್ಷಿಸಿದ ಮೇಲೆ ಶೈಲೇಶ್‍ಗೆ ಮೆದುಳು ಜ್ವರ ಇರುವುದು ಪತ್ತೆಯಾಗಿದೆ.
ಈ ದಂಪತಿ ತಮ್ಮ ಮಗನನ್ನು ಉಳಿಸಿಕೊಳ್ಳಲು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುತ್ತಿದ್ದಾರೆ. ಆದರೆ ಶೈಲೇಶ್ ಎರಡು ತಿಂಗಳು ಕಳೆದರೂ ಗುಣಮುಖನಾಗದ ಹಿನ್ನೆಲೆ ವೈದ್ಯರು, ಮನೆಗೆ ಕರೆದುಕೊಂಡು ಹೋಗಿ. ಇವನು ಅರ್ಧ ಗಂಟೆ ಮಾತ್ರ ಬದುಕುತ್ತಾನೆ ಎಂದು ಹೇಳಿದ್ದಾರೆ.
ಕುಟುಂಬಸ್ಥರು ಆರು ದಿನ ಮನೆಯಲ್ಲಿ ಶೈಲೇಶ್‍ನನ್ನು ಇಟ್ಟುಕೊಂಡು ನಂದಗಡಕ್ಕೆ ಬಂದಿದ್ದಾರೆ. ಶಿಲುಬೆ ಎದುರು ಮಗುವನ್ನು ಮಲಗಿಸಿ ನನ್ನ ಮಗನನ್ನು ಬದುಕಿಸಿಕೊಡುವಂತೆ ದೇವರ ಮೊರೆ ಹೋಗಿದ್ದಾರೆ. ನಂತರ ದೇವರಿಗೆ ಪ್ರಾರ್ಥನೆ ಸಲ್ಲಿಸಿ ಕುಟುಂಬಸ್ಥರು ಮಗುವನ್ನು ಮನೆಗೆ ಕರೆದುಕೊಂಡು ಹೋಗಿದ್ದಾರೆ.
ಶಿಲುಬೆಯ ಇತಿಹಾಸವೇನು?
ನಂದಗಡ ಬೆಟ್ಟದಲ್ಲಿರುವ ಶಿಲುಬೆ ಐತಿಹಾಸಿಕ ಮಹತ್ವ ಪಡೆದಿದೆ. 1920ರಲ್ಲಿ ಪ್ಲೇಗ್ ಬಂದಾಗ ಪಾದ್ರಿಯೊಬ್ಬರು ಜನರನ್ನು ಇದೇ ಶಿಲುಬೆ ಇರುವ ಬೆಟ್ಟದ ಮೇಲೆ ಕರೆತಂದು ಸಾಮೂಹಿಕ ಪ್ರಾರ್ಥನೆ ನಡೆಸಿದ್ದರು. ಆ ಪ್ರಾರ್ಥನೆ ಫಲಿಸಿತು ಎಂಬ ಮಾತು ಪೀಳಿಗೆಯಿಂದ ಪೀಳಿಗೆಗೆ ಮುಂದುವರಿದು ಬಂದಿದೆ. ಹೀಗಾಗಿ, ಪ್ರತಿ ವರ್ಷ ಹಲವರು ತಮ್ಮ ಹರಕೆಗೆ ಇಲ್ಲಿಗೆ ಬರುವುದು ರೂಡಿ.
ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯನ್ನ ಕೊಲೆ ಮಾಡಿದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.
ಬೆಳಗಾವಿ ತಾಲೂಕಿನ ಮಂಡೋಳಿ ಗ್ರಾಮದ ರಸ್ತೆಯಲ್ಲಿ ಕಳೆದ ಎರಡು ತಿಂಗಳ ಹಿಂದೆ ರಿಯಲ್ ಎಸ್ಟೇಟ್ ಉದ್ಯಮಿ ರಾಜು ದೊಡ್ಡಬೊಮ್ಮನ್ನವರ್ ಅವರನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿತ್ತು. ರಾಜು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ಕು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಇಂದು ಬೆಳಗಿನಜಾವ ಖಚಿತ ಮಾಹಿತಿ ಮೇರೆಗೆ ಬೆಳಗಾವಿ ಮಾರ್ಕೆಟ್ ಎಸಿಪಿ ನಾರಾಯಣ್ ಭರಮನಿ ನೇತೃತ್ವದ ಪೊಲೀಸ್ ತಂಡವು ವೀರಭದ್ರೇಶ್ವರ ನಗರದ ಕೋಯ್ಲಾ ಹೋಟೆಲ್ ಬಳಿ ಕೊಲೆ ಆರೋಪಿ ವಿಶಾಲ್‍ಸಿಂಗ್ ಚೌಹಾನ್‍ನನ್ನು ಹಿಡಿಯಲು ಹೋಗಿದ್ದರು. ಈ ಸಂದರ್ಭದಲ್ಲಿ ನಾರಾಯಣ್ ಭರಮನಿ ಮತ್ತವರ ತಂಡದ ಮೇಲೆ ಮಾರಕಾಸ್ತ್ರಗಳಿಂದ ಆರೋಪಿ ಹಲ್ಲೆಗೆ ಮುಂದಾಗಿದ್ದಾನೆ. ಇದನ್ನೂ ಓದಿ: ದೇಸಿ ಶೈಲಿಯಲ್ಲಿ ಮಾಡಿ ‘ಹೆಸರು ಕಾಳಿನ ಪಲ್ಯ’
ಈ ವೇಳೆ ನಾರಾಯಣ್ ಅವರು ಆರೋಪಿ ವಿಶಾಲ್‍ಸಿಂಗ್ ಮೇಲೆ ಎರಡು ಸುತ್ತು ಫೈರಿಂಗ್ ಮಾಡಿದ್ದಾರೆ. ಪರಿಣಾಮ ವಿಶಾಲ್ ಸಿಂಗ್ ಕಾಲಿಗೆ ಗುಂಡು ತಗುಲಿದ್ದು, ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಪ್ರಸ್ತುತ ಈ ಪ್ರಕರಣ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಬೆಳಗಾವಿ: ಬಿಜೆಪಿ ಸರ್ಕಾರಕ್ಕೆ 16 ಕೋಟಿ ಉದ್ಯೋಗ ಕೊಡಲಾಗದಿದ್ದಕ್ಕೆ ಅಗ್ನಿಪಥ್ ಎಂಬ ಡ್ರಾಮಾ ರಿಲೀಸ್ ಮಾಡಿದ್ದಾರೆ. ಗೃಹ ಸಚಿವ ಅಮಿತ್ ಶಾ ಮಗ ಜಯ್ ಶಾಗೆ ಅಗ್ನಿಪಥ್ ಕೆಲಸಕ್ಕೆ ಹೋಗೋಕೆ ಹೇಳಿ ನೋಡೋಣ. ಯಾವ ಮಂತ್ರಿ, ಎಂಎಲ್‍ಎ ಮಕ್ಕಳು ಅಗ್ನಿಪಥ್ ಕೆಲಸಕ್ಕೆ ಹೋಗ್ತಾರೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದ ಪ್ರಧಾನಿ ರಾಜ್ಯಕ್ಕೆ ಬಂದಿದ್ದಾರೆ ಅಂದ್ರೆ ಅವರಿಗೆ ಮರ್ಯಾದೆ ಕೊಡೋದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಕಾಂಗ್ರೆಸ್‍ನವರು ಆಗಿರಬಹುದು ಬೇರೆ ಯಾರೋ ಆಗಿರಬಹುದು. ಕಾನೂನು ಸುವ್ಯವಸ್ಥೆ ಹದಗೆಡಬಾರದು ಅಂತಾ ಪೊಲೀಸರು ಕ್ರಮಕೈಗೊಂಡಿದ್ದಾರೆ. ಎಲ್ಲಾ ಕಡೆ ಬೆಂಕಿ ಹಚ್ಚೋದು ಕಲ್ಲು ಒಡೆಯೋದು ನಡೀತಿದೆ ಅದಕ್ಕೋಸ್ಕರ ಮುಂಜಾಗ್ರತೆ ತಗೆದುಕೊಂಡಿರಬಹುದು. ಆದ್ರೆ, ಪ್ರತಿಭಟನೆಯನ್ನು ಒಂದು ದಿನ ತಡೆಯಬಹುದು ಅಷ್ಟೇ ಎಂದರು. ಇದನ್ನೂ ಓದಿ: ಯಡಿಯೂರಪ್ಪ ಜೊತೆ ಮಾತ್ರ ಹೆಚ್ಚು ಮಾತನಾಡಿದ ಮೋದಿ
ಯಾರನ್ಯಾರು ತಡೆಯೋಕಾಗಲ್ಲ. ನನ್ನನ್ನು ನೀವು ತಡೆಯೋಕಾಗಲ್ಲ. ನಿಮ್ಮನ್ನು ನಾವು ತಡೆಯೋಕಾಗಲ್ಲ. ಅದೇ ರೀತಿ ಪ್ರಜಾಪ್ರಭುತ್ವದಲ್ಲಿ ಯಾವ ಹೋರಾಟ ತಡೆಯ ಸಾಧ್ಯವಿಲ್ಲ ಎರಡು ವರ್ಷ ಕೊರೊನಾ ಟೈಮ್ ಇತ್ತು. ಪ್ರತಿ ವರ್ಷ 45 ಸಾವಿರ ಹುದ್ದೆ ಭರ್ತಿ ಆಗ್ತಿತ್ತು. 1 ಲಕ್ಷ 35 ಸಾವಿರ ಹುದ್ದೆ ಖಾಲಿ ಇರುವಾಗ ಅವರಿಗೆ ಹೊಳೆದಿದ್ದು ಅಗ್ನಿಪಥ್ ಯೋಜನೆ. ಅಗ್ನಿಪಥ್ ಯೋಜನೆಯಲ್ಲಿ ರಿಟೈರ್‍ಮೆಂಟ್ ಆದವರನ್ನು ಸೆಕ್ಯೂರಿಟಿ ಗಾರ್ಡ್ ಆಗಿ ಇಟ್ಟುಕೊಳ್ತೀವಿ ಎಂದು ಹೇಳುತ್ತಿದ್ದಾರೆ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಯಾವ ದೇಶದಲ್ಲಿ ಸೈನಿಕ ಸೇವೆ ಕಡ್ಡಾಯ? – ಟೂರ್ ಆಫ್ ಡ್ಯೂಟಿ ಎಲ್ಲಿದೆ?
ಬಿಜೆಪಿ ಕಚೇರಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಇಟ್ಟುಕೊಳ್ತೀವಿ ಅಂತಾ ಬಿಜೆಪಿ ಲೀಡರ್ ಹೇಳ್ತಾರೆ. ಹಾಗಾದರೆ ಇವರ ಮೆಂಟಾಲಿಟಿ ಯಾವ ಮಟ್ಟಕ್ಕಿದೆ. ಬಡವರ ಮಕ್ಕಳು ಹೋಗ್ತಾರೆ. 16 ಕೋಟಿ ಉದ್ಯೋಗ ಕೊಡಲಾಗದಿದ್ದಕ್ಕೆ ಅಗ್ನಿಪಥ್ ಡ್ರಾಮಾ ರಿಲೀಸ್ ಮಾಡಿದ್ದಾರೆ. ಪ್ರತಿಯೊಂದರಲ್ಲೂ ಆರ್‍ಎಸ್‍ಎಸ್ ವಾದ ತರುತ್ತಿದ್ದಾರೆ. ವೈಯಕ್ತಿಕವಾಗಿ ನನಗೆ ವಿರೋಧ ಇಲ್ಲ. ಜಾಬ್ ಸೆಕ್ಯೂರಿಟಿ, ಹೆಲ್ತ್ ಸೆಕ್ಯೂರಿಟಿ, ಪೇನ್ಷನ್ ಇಲ್ಲ. ರಿಟೈಡ್ ಆದ ಎಷ್ಟೋ ಮಾಜಿ ಸೈನಿಕರಿಗೆ ಉದ್ಯೋಗ ಸಿಗುತ್ತಿಲ್ಲ ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ಬೆಳಗಾವಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ್ ಯೋಜನೆ ವಿರೋಧಿಸಿ ಬೆಳಗಾವಿ ಬಂದ್‍ಗೆ ಕರೆ ನೀಡಿದೆ. ಈ ಹಿನ್ನೆಲೆ ಬೆಳಗಾವಿ ನಗರ ಹಾಗೂ ಜಿಲ್ಲಾ ಪೊಲೀಸರು ಬಿಗಿ ಭದ್ರತೆ ವಹಿಸಿದ್ದು, ರ‍್ಯಾಪಿಡ್ ಆಕ್ಷನ್ ಫೋರ್ಸ್ ಪಂಥ ಸಂಚಲನ ನಡೆಸಿದೆ.
ವಾಟ್ಸಪ್ ಮೂಲಕ ಬೆಳಗಾವಿ ಬಂದ್‍ಗೆ ಅನಾಮಧೇಯ ಸೇನಾ ಆಕಾಂಕ್ಷಿ ಯುವಕರ ಆಹ್ವಾನ ಹಿನ್ನೆಲೆ ಬೆಳಗಾವಿ ನಗರ, ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ನಿಯೋಜಿಸಿದ್ದಾರೆ. ಈಗಾಗಲೇ ಸಂದೇಶ ರವಾನೆ ಮಾಡಿದ್ದ ಯುವಕರನ್ನ ಕರೆಯಿಸಿ ಪೊಲೀಸರು ಖಡಕ್ ವಾರ್ನಿಂಗ್ ಸಹ ಕೊಟ್ಟಿದ್ದಾರೆ. ಇದನ್ನೂ ಓದಿ: ಅಗ್ನಿಪಥ್ ಪ್ರತಿಭಟನೆಗಳ ನಡುವೆ, ಅಗ್ನಿವೀರರಿಗೆ ಆನಂದ್ ಮಹೀಂದ್ರಾ ಕೊಟ್ರು ಬಿಗ್ ಆಫರ್
ಸೇನಾಕಾಂಕ್ಷಿಗಳು, ಕೋಚಿಂಗ್ ಸೆಂಟರ್ ಮುಖ್ಯಸ್ಥರಿಂದ ಬಂದ್ ಮಾಡದಂತೆ ವೀಡಿಯೋ ಹೇಳಿಕೆ ರಿಲೀಸ್ ಮಾಡಲಾಗಿದೆ. ಬೆಳಗಾವಿ ನಗರ ಸಂಪರ್ಕ ಕಲ್ಪಿಸುವ ಮಾರ್ಗಗಳು, ಬಸ್ ನಿಲ್ದಾಣ, ರೈಲು ನಿಲ್ದಾಣ, ಟೋಲ್‍ಗಳಲ್ಲಿ ಬಿಗಿ ಬಂದೋಬಸ್ತ್ ಮಾಡುವ ಮೂಲಕ ಬೆಳಗಾವಿಗೆ ಬರುವ ಯುವಕರ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಇದರ ಜೊತೆಗೆ ಬೆಳಗಾವಿ ಜಿಲ್ಲಾ ಪೊಲೀಸ್ ವತಿಯಿಂದ ಎಸ್‍ಪಿ ಲಕ್ಷ್ಮಣ ನಿಂಬರಗಿ ನೇತೃತ್ವದಲ್ಲಿ ಗೋಕಾಕ್ ನಗರದಲ್ಲಿ ಪಥಸಂಚಲನ ಮಾಡುವ ಮೂಲಕ ಪ್ರತಿಭಟನೆ ಮಾಡುವ ಯುವಕರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ರ‍್ಯಾಪಿಡ್ ಆಕ್ಷನ್ ಫೋರ್ಸ್‌ನಿಂದ ಪಥಸಂಚಲನ
ಬೆಳಗಾವಿಯಲ್ಲಿ ಅಗ್ನಿಪಥ್ ವಿರೋಧಿಸಿ ಬೆಳಗಾವಿ ಬಂದ್ ಕರೆ ಹಿನ್ನೆಲೆ ನಗರದ ಚೆನ್ನಮ್ಮ ವೃತ್ತದಲ್ಲಿ ರೈಲ್ವೆ ಪೊಲೀಸರು, ರ‍್ಯಾಪಿಡ್ ಆಕ್ಷನ್ ಫೋರ್ಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೀಡುಬಿಟ್ಟಿದ್ದಾರೆ. ಇದಾದಬಳಿಕ ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ನೇತೃತ್ವದಲ್ಲಿ ನಗರದ ಚೆನ್ನಮ್ಮ ವೃತ್ತದಿಂದ ರೈಲ್ವೆ ಪೊಲೀಸರು, ರ‍್ಯಾಪಿಡ್ ಆಕ್ಷನ್ ಫೋರ್ಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳಿಂದ ಪಥಸಂಚಲನ ನಡೆಸಲಾಯಿತು.
ಬೆಳಗಾವಿಯ ರಾಣಿ ಚನ್ನಮ್ಮಾಜಿ ವೃತ್ತದಿಂದ ಆರಂಭವಾದ ಪಥಸಂಚಲನ ಲಿಂಗರಾಜು ಕಾಲೇಜು ರಸ್ತೆ, ಧರ್ಮವೀರ ಸಂಭಾಜಿ ಸರ್ಕಲ್, ಕಿರ್ಲೋಸ್ಕರ್ ರೋಡ್, ರಾಮದೇವ ಗಲ್ಲಿ, ಖಡೇ ಬಜಾರ್ ಬಳಿಕ ಅಂತಿಮವಾಗಿ ಚೆನ್ನಮ್ಮಾಜಿ ವೃತ್ತಕ್ಕೆ ಆಗಮಿಸಿ ಅಂತ್ಯವಾಯಿತು. ಪರೇಡ್‍ನಲ್ಲಿ ಸ್ವತಃ ಬೋರಲಿಂಗಯ್ಯ ಅವರು ಹೆಜ್ಜೆ ಹಾಕಿದ್ರು. ಕಮಿಷನರ್‌ಗೆ ಡಿಸಿಪಿ ರವೀಂದ್ರ ಗಡಾದಿ, ಎಸಿ ರವೀಂದ್ರ ಕರಿಲಿಂಗನ್ನವರ, ಎಸಿಪಿ ಚಂದ್ರಪ್ಪ, ಸಿಪಿಐ ಧೀರಜ ಶಿಂಧೆ, ಸಿಪಿಐ ದಿಲೀಪ ನಿಂಬಾಳ್ಕರ್, ಸಿಪಿಐ ರಾಘವೇಂದ್ರ ಹವಾಲ್ದಾರ್ ಸೇರಿದಂತೆ ಇನ್ನಿತರ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಹುಕ್ಕೇರಿ, ಹಿರೇಬಾಗೆವಾಡಿ ಚೆಕ್ ಪೋಸ್ಟ್‌ನಲ್ಲಿ ಹೈ ಅಲರ್ಟ್:
ಬೆಳಗಾವಿ ಚಲೋ, ಬೆಳಗಾವಿ ಬಂದ್‍ಗೆ ಕರೆ ಹಿನ್ನೆಲೆ ಬೆಳಗಾವಿ ಜಿಲ್ಲೆಯಾದ್ಯಂತ ಇರುವ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ಹೈ ಅಲರ್ಟ ಘೋಷಣೆ ಮಾಡಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದ್ದಾರೆ. ಹುಕ್ಕೇರಿ ತಾಲೂಕಿನ ಹತ್ತರಗಿ ಚೆಕ್ ಹಾಗೂ ನಿಪ್ಪಾಣಿ ತಾಲೂಕಿನ ಕುಗನೊಳ್ಳಿಯಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ. ಇದರ ಜೊತೆಗೆ ಬೆಳಗಾವಿ ತಾಲೂಕಿನ ಹಿರೇಬಾಗೆವಾಡಿ ಚೆಕ್ ಪೋಸ್ಟ್‌ನಲ್ಲಿ ಬೆಳಗಾವಿಗೆ ಬರುವ ಯುವಕರನ್ನು ತಡೆಯಲು ಸಜ್ಜಾಗಿದ್ದು, ಬೆಳಗಾವಿ ನಗರಕ್ಕೆ ಬರುವ ಯುವಕರನ್ನು ಅಲ್ಲಿಯೇ ತಡೆದು ವಾಪಸ್ ಕಳಿಸಲು ನಿರ್ಧರಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಆಸ್ಕರ್ ಪ್ರಶಸ್ತಿ ವಿಜೇತ ನಿರ್ದೇಶಕ ಅರೆಸ್ಟ್
ಕುಂದಾನಗರಿ ಬೆಳಗಾವಿಯಲ್ಲಿ ಎಂದಿನಂತೆ ಜನಜೀವನ
ಅಗ್ನಿಪಥ್ ಯೋಜನೆ ವಿರೋಧಿಸಿ ಬೆಳಗಾವಿ ಬಂದ್ ಕರೆ ಹಿನ್ನೆಲೆ ಕುಂದಾನಗರಿ ಬೆಳಗಾವಿಯಲ್ಲಿ ಎಂದಿನಂತೆ ಜನಜೀವನ ನಡೆದಿದೆ. ಅಂಗಡಿ ಮುಂಗಟ್ಟುಗಳಲ್ಲಿ ವ್ಯಾಪಾರ ವಹಿವಾಟು ನಡೆದಿದ್ದು, ಶಾಲಾ-ಕಾಲೇಜುಗಳು, ಬಸ್‍ಗಳು ಎಂದಿನಂತೆ ಸಂಚಾರ ನಡೆಸಿವೆ.