Tag: Belgaum

  • ಪಬ್ಲಿಕ್ ಟಿವಿ ಬಿಗ್ ಇಂಪ್ಯಾಕ್ಟ್: ಶಾಲಾ ಕಟ್ಟಡ ದುರಸ್ತಿಗೆ ಜಿಲ್ಲಾಡಳಿತದಿಂದ 20ಲಕ್ಷ ರೂ. ಅನುದಾನ ಬಿಡುಗಡೆ

    ಪಬ್ಲಿಕ್ ಟಿವಿ ಬಿಗ್ ಇಂಪ್ಯಾಕ್ಟ್: ಶಾಲಾ ಕಟ್ಟಡ ದುರಸ್ತಿಗೆ ಜಿಲ್ಲಾಡಳಿತದಿಂದ 20ಲಕ್ಷ ರೂ. ಅನುದಾನ ಬಿಡುಗಡೆ

    ಬೆಳಗಾವಿ: ಟೆಂಟ್‍ನಲ್ಲಿ ವಿದ್ಯಾರ್ಥಿಗಳು ಪಾಠ ಕಲಿಯುತ್ತಿರುವ ಕುರಿತು ಪಬ್ಲಿಕ್ ಟಿವಿ ವರದಿ ಮಾಡಿದ ಬಳಿಕ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಶಾಲಾ ದುರಸ್ತಿಗೆ ತಕ್ಷಣಕ್ಕೆ 20 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿರುವುದಾಗಿ ಆದೇಶ ಹೊರಡಿಸಿದರು.

    ಶಿಥಿಲವಾದ ಶಾಲಾ ಕೊಠಡಿ ಹಿನ್ನೆಲೆ ರಾಮದುರ್ಗ ತಾಲೂಕಿನ ಮುದೇನೂರ ಗ್ರಾಮಸ್ಥರು ಸರ್ಕಾರಿ ಶಾಲಾ ಮೈದಾನದಲ್ಲಿಯೇ ಮೊದಲ ದಿನವೇ ಟೆಂಟ್‍ನಲ್ಲಿ ವಿದ್ಯಾರ್ಥಿಗಳು ಪಾಠಕ್ಕೆ ಪಟ್ಟುಡಿದಿದ್ದರು. ಈ ಬಗ್ಗೆ ಸಂಪೂರ್ಣವಾಗಿ ವರದಿ ಬಿತ್ತರಿಸಿ ಪಬ್ಲಿಕ್ ಟಿವಿ ಶಾಲಾ ಮಕ್ಕಳ ಸಮಸ್ಯೆಯನ್ನು ಎಳೆಎಳೆಯಾಗಿ ಪ್ರಸಾರ ಮಾಡುವ ಮೂಲಕ ಸರ್ಕಾರದ ಗಮನಕ್ಕೆ ತಂದಿತ್ತು. ಪರಿಣಾಮ, ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಶಾಲಾ ದುರಸ್ತಿ ತಕ್ಷಣಕ್ಕೆ 20 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿರುವುದಾಗಿ ಆದೇಶ ಹೊರಡಿಸಿದರು. ಇದನ್ನೂ ಓದಿ: ಯಾರಿಗೂ ತಿಳಿಯದೇ ವಾಟ್ಸಪ್ ಗ್ರೂಪ್‍ನಿಂದ ನಿರ್ಗಮಿಸುವುದು ಹೇಗೆ? 

    ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮುದ್ದೇನೂರು ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಬೀಡು ಬಿಟ್ಟಿರುವ ಪಬ್ಲಿಕ್ ಟಿವಿಯ ಪ್ರತಿನಿಧಿಗಳು ಮುದ್ದೇನೂರು ಗ್ರಾಮದ ಸರ್ಕಾರಿ ಶಾಲೆಯ ಸಮಸ್ಯೆಗಳ ಸರಮಾಲೆಯನ್ನು ಸರ್ಕಾರಕ್ಕೆ ಎಚ್ಚರಿಸಿತ್ತು. ಇದರ ಪರಿಣಾಮವಾಗಿ ರಾಜ್ಯ ಸರ್ಕಾರ ಮುದ್ದೇನೂರು ಗ್ರಾಮದ ಕನ್ನಡ ಶಾಲೆಯ ಏಂಟು ಕೊಠಡಿಗಳ ದುರಸ್ಥಿಗೆ 20 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿದೆ.

    ಜೊತೆಗೆ ತಕ್ಷಣವೇ ನಿತೇಶ್ ಪಾಟೀಲ್ ಅವರು, ದುರಸ್ತಿ ಕಾರ್ಯವನ್ನು ಪ್ರಾರಂಭ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಖಡಕ್ ಸೂಚನೆಯನ್ನು ಕೊಟ್ಟಿದ್ದಾರೆ.

  • ನಾವು ಕರ್ನಾಟಕದ ಕನ್ನಡಿಗರಲ್ಲ, ಗೋವಾ ಕನ್ನಡಿಗರು: ಸಿದ್ದಣ್ಣ ಮೇಟಿ

    ನಾವು ಕರ್ನಾಟಕದ ಕನ್ನಡಿಗರಲ್ಲ, ಗೋವಾ ಕನ್ನಡಿಗರು: ಸಿದ್ದಣ್ಣ ಮೇಟಿ

    ಬೆಳಗಾವಿ/ಪಣಜಿ: ನಾವು ಕರ್ನಾಟಕದ ಕನ್ನಡಿಗರಲ್ಲ, ಗೋವಾ ಕನ್ನಡಿಗರು ಎಂದು ಗೋವಾ ಕನ್ನಡ ಮಹಾಸಂಘದ ಗೌರವಾಧ್ಯಕ್ಷ ಸಿದ್ದಣ್ಣ ಮೇಟಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ಗೋವಾ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

    ಮುಂಬರುವ ಗೋವಾದ ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದಣ್ಣ ಮೇಟಿ, ನಾವು ಕರ್ನಾಟಕದ ಕನ್ನಡಿಗರಲ್ಲ, ಗೋವಾ ಕನ್ನಡಿಗರು. ಗೋವಾಗೆ ಹರಿಯುವ ಮಹದಾಯಿ ನೀರನ್ನು ಕರ್ನಾಟಕ ಸರ್ಕಾರ ನಿಲ್ಲಿಸಬಾರದು. ನಮ್ಮ ಕರ್ಮಭೂಮಿ ಗೋವಾ, ಜನ್ಮಭೂಮಿ ಕರ್ನಾಟಕ. ಗೋವಾ ನಮಗೆ ಅನ್ನ ನೀಡುತ್ತೆ, ಅದಕ್ಕೆ ಗೋವಾದ ಹೆಸರು ಹೇಳಬೇಕು ಎಂದು ಹೇಳಿಕೆ ಕೊಟ್ಟಿದ್ದರು.

    ಸಿದ್ದಣ್ಣ ಮೇಟಿ ಹೇಳಿಕೆಗೆ ಗೋವಾ ಕನ್ನಡಿಗರಿಂದಲೇ ತೀವ್ರ ಅಸಮಾಧಾನ ವ್ಯಕ್ತವಾಗಿದ್ದು, ಸಿದ್ದಣ್ಣ ಮೇಟಿ ಹೇಳಿಕೆಗೆ ಪ್ರತಿಕ್ರಿಯಿಸಲು ಗೋವಾ ಕನ್ನಡಿಗರು ಹಿಂದೇಟು ಹಾಕಿದ್ದಾರೆ. ಇದನ್ನೂ ಓದಿ:  ಪ್ರಿಯಕರನ ಸಾವಿನಿಂದ ಮನನೊಂದ ಯುವತಿ ವಿಷ ಸೇವಿಸಿ ಆತ್ಮಹತ್ಯೆ 

    ಸ್ಥಳೀಯರು ವರ್ಸಸ್ ವಲಸಿಗರ ವಾರ್
    ಜೂನ್ ವೇಳೆಗೆ ಗೋವಾದ 196 ಗ್ರಾಮ ಪಂಚಾಯತಿ ಸ್ಥಾನಗಳಿಗೆ ಚುನಾವಣೆ ಹಿನ್ನೆಲೆ, ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕನ್ನಡಿಗ ಅಭ್ಯರ್ಥಿಗಳಿಗೆ ಬೆಂಬಲಿಸುತ್ತೇವೆ ಎಂಬ ಸಿದ್ದಣ್ಣ ಮೇಟಿ ಹೇಳಿಕೆ ಸ್ಥಳೀಯ ಪಕ್ಷಗಳಿಗೆ ನಡುಕ ಶುರುವಾಗಿದೆ. ಇದಾದ ಬಳಿಕ ಗೋವಾದಲ್ಲಿ ರೆವ್ಯೂಲೇಷನ್ ಗೋವನ್ ಪಕ್ಷ ಹಾಗೂ ಗೋವಾ ಕನ್ನಡಿಗರ ಮಧ್ಯೆ ವಾರ್ ಪ್ರಾರಂಭವಾಗಿದೆ.

    ರೆವಲ್ಯೂಷನರಿ ಗೋವನ್ಸ್ ಪಕ್ಷದ ಅಧ್ಯಕ್ಷ ತುಕಾರಾಂ ಪರಬ್ ವಿವಾದಿತ ಹೇಳಿಕೆ ನೀಡಿದ್ದು, ಗೋವಾ ಕನ್ನಡಿಗರು ನಮ್ಮ ಸಾಂಪ್ರದಾಯಿಕ ಹಬ್ಬಗಳಲ್ಲಿ ಏಕೆ ಮಧ್ಯಪ್ರವೇಶಿಸುತ್ತೀರಿ? ನೀವು ದುರ್ಗಾ ಪೂಜೆ, ಗಣೇಶ ಉತ್ಸವದಲ್ಲಿ ಭಾಗವಹಿಸುತ್ತೀರಿ. ರಾಜಕೀಯ ಲಾಭಕ್ಕಾಗಿ ಗೋವಾ ಕನ್ನಡಿಗರು ನಮ್ಮ ಹಬ್ಬಗಳಲ್ಲಿ ಭಾಗಿಯಾಗ್ತಿದ್ದಾರೆ. ಕನ್ನಡಿಗರು ಗೋವಾವನ್ನು ತಮ್ಮ ತಂದೆಯ ಆಸ್ತಿ ಎಂದು ಭಾವಿಸಿದ್ದಾರೆ ಎಂದು ಹೇಳಿದ್ದರು.

    ಗೋವಾದ ಎಲ್ಲೆಡೆ ಕನ್ನಡಿಗರು ದಾದಾಗಿರಿ ಪ್ರದರ್ಶಿಸುತ್ತಿದ್ದಾರೆ. ಇದು ನಿಮ್ಮ ತಂದೆಯ ಆಸ್ತಿ ಅಲ್ಲ, ನಮ್ಮ ತಂದೆಯ ಆಸ್ತಿ. ನೀವು ನಮ್ಮ ಹಬ್ಬಗಳ ಆಚರಣೆಯಲ್ಲೂ ಮಧ್ಯಪ್ರವೇಶ ಮಾಡುತ್ತೀರಿ. ರಾಜಕೀಯ ಲಾಭಕ್ಕಾಗಿ ದುರ್ಗಾಪೂಜೆ, ಗಣೇಶ ಉತ್ಸವದಲ್ಲಿ ಭಾಗಿಯಾಗುವಿರಿ ಎನ್ನುವ ಮೂಲಕ ವಿವಾದ ಸೃಷ್ಟಿಸಿದ್ದರು. ಇದನ್ನೂ ಓದಿ:  ಕಾಳೇನ ಅಗ್ರಹಾರ ಕೆರೆಗೆ ಭೇಟಿ ನೀಡಿ ಸಸಿನೆಟ್ಟ ನಿರ್ಮಲಾ ಸೀತಾರಾಮನ್ 

    ಹಿಂದೂ ಸಮಾರಂಭಗಳಲ್ಲಿ ಕನ್ನಡಿಗರು ಭಾಗವಹಿಸುವುದಕ್ಕೂ ರೆವಲ್ಯೂಷನರಿ ಗೋವನ್ಸ್ ಪಕ್ಷದ ಅಧ್ಯಕ್ಷ ತುಕಾರಾಂ ಪರಬ್ ಆಕ್ಷೇಪಿಸಿದ್ದಾರೆ. ಇದಲ್ಲದೇ ನಾವು ನಿಮಗೆ ‘ಅಕ್ರಮ ವಲಸಿಗರು’ ಅಂತಾ ಹೇಳಲು ಪ್ರಚೋದಸುತ್ತೀರಿ ಎಂದು ಹೇಳಿದ್ದರು.

  • 2 ಗಂಟೆಗಳ ನಿರಂತರ ಕಾರ್ಯಾಚರಣೆಯಲ್ಲಿ ಬದುಕುಳಿದ ಕ್ಯಾಂಟರ್ ಚಾಲಕ

    2 ಗಂಟೆಗಳ ನಿರಂತರ ಕಾರ್ಯಾಚರಣೆಯಲ್ಲಿ ಬದುಕುಳಿದ ಕ್ಯಾಂಟರ್ ಚಾಲಕ

    ಬೆಳಗಾವಿ: ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಎರಡು ವಾಹನಗಳ ನಡುವೆ ರಸ್ತೆ ಅಪಘಾತ ಸಂಭವಿಸಿದ್ದು, ಕ್ಯಾಂಟರ್ ವಾಹನದಲ್ಲಿ ಸಿಲುಕಿದ್ದ ಚಾಲಕನನ್ನು ಜೀವಂತವಾಗಿ ಎಸ್‍ಡಿಆರ್‌ಎಫ್ ತಂಡದ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ನಡೆದಿದೆ.

    ತಾಲೂಕಿನ ಸುವರ್ಣ ವಿಧಾನಸೌಧದ ಹಲಗಾ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕ್ಯಾಂಟರ್ ವಾಹನಗಳ ನಡುವೆ ಅಪಘಾತ ಸಂಭವಿಸಿತು. ಕ್ಯಾಂಟರ್ ವಾಹನದಲ್ಲಿ ಚಾಲಕನೊಬ್ಬ ಎಸ್‍ಡಿಆರ್‌ಎಫ್ ತಂಡದ ಸಿಬ್ಬಂದಿ ಸತತ ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ವಾಹನ ಚಾಲಕನನ್ನು ಜೀವಂತವಾಗಿ ರಕ್ಷಿಸಿದ್ದಾರೆ.

    ನಡೆದಿದ್ದೇನು?
    ಹಾವೇರಿ ಮೂಲದ ಚಾಲಕ ಭೀಮಪ್ಪ ಶೇಖಪ್ಪ ಕನ್ನಪ್ಪ ಬದುಕುಳಿದವನು. ಈತ ತಡರಾತ್ರಿ ಹಿರೇಬಾಗೆವಾಡಿ ಕಡೆಯಿಂದ ಬೆಳಗಾವಿ ಕಡೆಗೆ ಬರುವಾಗ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಕ್ಯಾಂಟರ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಅಪಘಾತದ ರಭಸಕ್ಕೆ ಕ್ಯಾಂಟರ್ ವಾಹನದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದರಡಿ ಚಾಲಕ ಸಿಲುಕಿದ್ದನು. ಇದನ್ನೂ ಓದಿ:  ಕೆಲಸದಲ್ಲಿ ತೃಪ್ತಿ ಇಲ್ಲ – ಡೆತ್ ನೋಟ್ ಬರೆದು ಪೊಲೀಸ್ ಆತ್ಮಹತ್ಯೆ 

    ಪ್ರಾಣಾಪಾಯದಲ್ಲಿದ್ದ ಕ್ಯಾಂಟರ್ ವಾಹನ ಚಾಲಕನನ್ನ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇತ್ತ ಪೊಲೀಸರ ಮಾಹಿತಿ ಮೇರೆಗೆ ಸ್ಥಳಕ್ಕೆ ಎಸ್‍ಡಿಆರ್‌ಎಫ್ ತಂಡದ ಸಿಬ್ಬಂದಿ ಆಗಮಿಸಿದರು. ಈ ವೇಳೆ ವಾಹನದಲ್ಲಿ ಸಿಲುಕಿಕೊಂಡಿದ್ದ ವ್ಯಕ್ತಿಯನ್ನು ಸತತ ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ. ಹಿರೇಬಾಗೆವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ನೋಡ ನೋಡುತ್ತಿದ್ದಂತೆ ವೇದಿಕೆ ಮೇಲೆ ಉರುಳಿದ ಲೈಟಿಂಗ್ ಟ್ರೇಸ್: ಈರಣ್ಣ ಕಡಾಡಿ ಪಾರು

    ನೋಡ ನೋಡುತ್ತಿದ್ದಂತೆ ವೇದಿಕೆ ಮೇಲೆ ಉರುಳಿದ ಲೈಟಿಂಗ್ ಟ್ರೇಸ್: ಈರಣ್ಣ ಕಡಾಡಿ ಪಾರು

    ಬೆಳಗಾವಿ: ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದಲ್ಲಿ ರಾಜ್ಯಸಭೆ ಸದಸ್ಯ ಈರಣ್ಣಾ ಕಡಾಡಿ ಮೇಲೆ ಲೈಟಿಂಗ್ ಸೆಟ್ ಕಂಬವೊಂದು ಕುಸಿದ ಬಿದ್ದಿದೆ. ಅದೃಷ್ಟವಶಾತ್ ಅವಘಡದಲ್ಲಿ ಈರಣ್ಣ ಕಡಾಡಿ ಸೇರಿ ಇಪ್ಪತ್ತಕ್ಕೂ ಹೆಚ್ಚು ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ರಾಜಾಪುರ ಗ್ರಾಮದಲ್ಲಿ ಚೂನಮ್ಮ ದೇವಿ ಜಾತ್ರೆಯ ಅಂಗವಾಗಿ ಗ್ರಾಮದಲ್ಲಿ ರಸಮಂಜರಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮಕ್ಕೆ ಈರಣ್ಣಾ ಕಡಾಡಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದು, ಉದ್ಘಾಟನೆಗೊಳ್ಳುತ್ತಿದ್ದಾಗಲೇ ಲೈಟಿಂಗ್ ಸೆಟ್ ಕಂಬವೊಂದು ಕುಸಿದು ಬಿದ್ದಿದೆ. ಇದನ್ನೂ ಓದಿ: ಮತದಾನದ ದಿನ ಬೂತ್ ಮುಖ್ಯದ್ವಾರದಲ್ಲಿ ಮದ್ಯ ಪರೀಕ್ಷೆ ಯಂತ್ರವನ್ನು ಅಳವಡಿಸಿ: ಇಸಿಗೆ ಪತ್ರ 

    ಈ ವೇಳೆ ವೇದಿಕೆಯ ಮೇಲೆ ಕಡಾಡಿ ಅವರು ಸೇರಿ ಇಪ್ಪತ್ತಕ್ಕೂ ಹೆಚ್ಚು ಗಣ್ಯರು ಅವಘಡದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

    ಕಡಾಡಿ ಪ್ರತಿಕ್ರಿಯೆ ಏನು?
    ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಚೂನಮ್ಮ ದೇವಿ ಜಾತ್ರೆಯಲ್ಲಿ ಲೈಟಿಂಗ್ ಅಳವಡಿಸಿದ್ದ ಕಂಬ ವೇದಿಕೆ ಮೇಲೆ ಉರುಳಿ ಆಕಸ್ಮಿಕ ಅವಘಡ ಸಂಭವಿಸಿತು. ಇಬ್ಬರು ಮೂವರಿಗೆ ಗಾಯ ಆಗಿದ್ದು ನಾವೆಲ್ಲರೂ ಬಚಾವ್ ಆಗಿದ್ದೇವೆ. ಇದನ್ನೂ ಓದಿ:  ಜನರು ಕಡಿಮೆ ನಾಟಕವನ್ನು ಬಯಸಿದ್ದರಿಂದ ಬೈಡನ್ ಆಯ್ಕೆಯಾದರು: ಟ್ರಂಪ್‌ ಕಾಲೆಳೆದ ಮಸ್ಕ್

    ಗ್ರಾಮದ ಜಮೀನಿನಲ್ಲಿ ಕಾರ್ಯಕ್ರಮ ಇಟ್ಟುಕೊಂಡಿದ್ದಕ್ಕೆ ಅವಘಡ ಸಂಭವಿಸಿದೆ. ಸ್ವಲ್ಪ ಆಯತಪ್ಪಿದ್ರೂ ವೇದಿಕೆ ಮೇಲಿದ್ದ ಗಣ್ಯರ ಪ್ರಾಣಹಾನಿ ಆಗುತ್ತಿತ್ತು. ವಿದ್ಯುತ್ ಅವಘಡ ಕೂಡ ಸಂಭವಿಸುವ ಸಾಧ್ಯತೆ ಇತ್ತು. ದೇವಿಯ ಆಶೀರ್ವಾದದಿಂದ ನಾವೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದೇವೆ ಎಂದರು.

  • ಕರ್ತವ್ಯದ ವೇಳೆ ಕಂಠಪೂರ್ತಿ ಕುಡಿದು ರಂಪಾಟ ಮಾಡಿದ ಸರ್ಕಾರಿ ನೌಕರ

    ಕರ್ತವ್ಯದ ವೇಳೆ ಕಂಠಪೂರ್ತಿ ಕುಡಿದು ರಂಪಾಟ ಮಾಡಿದ ಸರ್ಕಾರಿ ನೌಕರ

    ಬೆಳಗಾವಿ: ಸಾಕಷ್ಟು ಜನರು ಸರ್ಕಾರಿ ನೌಕರಿಗಾಗಿ ಪರದಾಡುತ್ತಿದ್ದಾರೆ. ಆದರೆ ಇಲ್ಲೊಬ್ಬ ಸರ್ಕಾರಿ ನೌಕರ ತನ್ನ ಕೆಲಸಕ್ಕೆ ಮರ್ಯಾದೆ ಕೊಡದೆ ರಂಪಾಟ ಮಾಡಿದ್ದಾನೆ. ಕರ್ತವ್ಯದ ವೇಳೆ ಕಂಠಪೂರ್ತಿ ಕುಡಿದು ಅಡ್ಡಲಾಗಿ ಮಲಗಿದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ತಹಶೀಲ್ದಾರ್ ಕಚೇರಿ ಎದುರು ನಡೆದಿದೆ.

    ಸಂಜು ಬೆಣ್ಣಿ ಕಂಠಪೂರ್ತಿ ಕುಡಿದು ಮಲಗಿದ್ದ ಗ್ರಾಮ ಲೆಕ್ಕಾಧಿಕಾರಿ. ಈ ಮೊದಲು ಸಂಜು ಬೆಣ್ಣಿ ಸವದತ್ತಿ ತಾಲೂಕಿನ ಗೊರವನಕೊಳ್ಳ ಗ್ರಾಮದಲ್ಲಿ ಗ್ರಾಮಲೆಕ್ಕಾಧಿಕಾರಿಯಾಗಿ ಕೆಲಸಕ್ಕಿದ್ದ. ಅಲ್ಲಿಯೂ ಕರ್ತವ್ಯದ ವೇಳೆ ಕಂಠಪೂರ್ತಿ ಕುಡಿಯುತ್ತಿದ್ದ ಹಿನ್ನೆಲೆ ಸವದತ್ತಿ ತಹಶೀಲ್ದಾರ್ ಕಚೇರಿ ಕರ್ತವ್ಯಕ್ಕೆ ನಿಯೋಜಿಸಿದ್ದರು. ಇದನ್ನೂ ಓದಿ: 80ಕ್ಕೂ ಹೆಚ್ಚು ಮಕ್ಕಳನ್ನ ಕಾಡುತ್ತಿದೆ ಟೊಮೆಟೊ ಜ್ವರ – ಏನಿದರ ಲಕ್ಷಣ? 

    ಆದ್ರೆ, ಇಲ್ಲಿಯೂ ಸಹ ಸಂಜು ಬೆಣ್ಣಿ ತನ್ನ ಹಳೇ ಚಾಳಿ ಮುಂದುವರಿಸಿದ್ದಾನೆ. ಈತನ ರಂಪಾಟದ ಜೊತೆಗೆ ಗ್ರಾಮಸ್ಥರ ಜೊತೆ ದುರ್ವರ್ತನೆ ಮಾಡುತ್ತಿದ್ದಾನೆ ಎಂಬ ಆರೋಪ ಕೇಳಿಬರುತ್ತಿದೆ. ಇದರ ಜೊತೆ ಸಂಜು ಬೆಣ್ಣಿ ವಿರುದ್ಧ ಕ್ರಮಕೈಗೊಳ್ಳದ ತಹಶೀಲ್ದಾರ್ ಪ್ರಶಾಂತ್ ಪಾಟೀಲ್ ವಿರುದ್ಧವೂ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ದೇಶದ ಸಮಗ್ರ ಅಭಿವೃದ್ಧಿಗೆ ಎನ್‍ಇಪಿ ಅವಶ್ಯಕ: ಅಶ್ವಥ್ ನಾರಾಯಣ

    ದೇಶದ ಸಮಗ್ರ ಅಭಿವೃದ್ಧಿಗೆ ಎನ್‍ಇಪಿ ಅವಶ್ಯಕ: ಅಶ್ವಥ್ ನಾರಾಯಣ

    ಬೆಳಗಾವಿ: ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಭಾರತ ಜ್ಞಾನ ಜಗತ್ತಿನ ಬಲಶಾಲಿ ರಾಷ್ಟ್ರವಾಗಲಿದೆ. ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದರಿಂದ, ಸಮತೆಯುಳ್ಳ ಮತ್ತು ಚಲನಶೀಲ ಜ್ಞಾನ ಸಮಾಜದ ಪರಿವರ್ತನೆಗೆ ಹಾಗೂ ದೇಶದ ಸಮಗ್ರ ಅಭಿವೃದ್ಧಿಗೆ ಎನ್‍ಇಪಿ ಅವಶ್ಯಕ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ ತಿಳಿಸಿದರು.

    ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಸಭಾಂಗಣದಲ್ಲಿ ನಡೆದ ‘ರಾಷ್ಟೀಯ ಶಿಕ್ಷಣ ನೀತಿ-2020 ಅನುಷ್ಠಾನದ ರಾಷ್ಟ್ರೀಯ ಸಮ್ಮೇಳನ’ ಕಾರ್ಯಕ್ರಮದಲ್ಲಿ ಮಾತನಾಡಿದರು. ಇದನ್ನೂ ಓದಿ:  ತಾಕತ್ತಿದ್ದರೆ ನನ್ನ ವಿರುದ್ಧ ರೇವಣ್ಣ ನಿಲ್ಲಲಿ :ಪ್ರೀತಂ ಸವಾಲು

    ಪ್ರಸ್ತುತ ಕಾಲಘಟ್ಟದಲ್ಲಿ ವಿಶ್ವದ ಅನೇಕ ದೇಶಗಳು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಬೆಳವಣಿಗೆ ಹೊಂದಿವೆ ಇದಕ್ಕೆ ಅನುಗುಣವಾಗಿ ಬಲಿಷ್ಠ ಭಾರತ ನಿರ್ಮಾಣಕ್ಕೆ ರಾಷ್ಟೀಯ ಶಿಕ್ಷಣ ನೀತಿ ಅವಶ್ಯವಿದ್ದು, ದೇಶದಲ್ಲಿ 34 ವರ್ಷಗಳ ನಂತರ ಈ ನೀತಿಯನ್ನು ಜಾರಿಗೆ ತರಲಾಗಿದೆ. ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದರ ಜೊತೆಗೆ ವೃತ್ತಿಪರ ಬೆಳವಣಿಗೆ ಮೂಲಕ ವಿದ್ಯಾರ್ಥಿಗಳಲ್ಲಿ ಕೌಶಲ್ಯ ಅಭಿವೃದ್ದಿ ಹೆಚ್ಚಿಸುವುದು ಈ ಶೈಕ್ಷಣಿಕ ಪದ್ಧತಿಯ ಉದ್ದೇಶವಾಗಿದೆ. ವಿದ್ಯಾರ್ಥಿಗಳ ವಿದ್ಯಾಭ್ಯಾಸದ ನಂತರ ಸಲೀಸಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುಬಹುದು ಎಂದು ಹೇಳಿದರು.

    ಮಾನವ ಸಂಪನ್ಮೂಲ ಶಕ್ತಿ ಸದ್ಬಳಕೆ
    ಸ್ವಾಂತಂತ್ರ್ಯ ನಂತರ ನೂತನ ರಾಷ್ಟೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸುವುದು ಬಹಳ ಸವಾಲಿನ ಕೆಲಸವಾಗಿತ್ತು. ಆದರೆ ಮುಂಬರುವ ದಿನಗಳಲ್ಲಿ ಈ ಶಿಕ್ಷಣ ನೀತಿ ದೇಶದ ಅಭಿವೃದ್ಧಿಗೆ ಅನುಕೂಲವಾಗಲಿದೆ. ಭವಿಷ್ಯದಲ್ಲಿ ಸಮಾಜ ಬದಲಾವಣೆಯ ಉತ್ತಮ ಶಿಕ್ಷಣ ನೀತಿ ಇದಾಗಲಿದೆ.

    ವಿದ್ಯಾರ್ಥಿಗಳು, ಯುವಕರು ಉದ್ಯೋಗ ಅರಸಿ ಹೋಗದೆ ಕೌಶಲ್ಯಾಭಿವೃದ್ಧಿಯಿಂದ ಸ್ವಯಂ ಉದ್ಯೋಗ ಸೃಷ್ಟಿಸುವ ಕಾರ್ಯಕ್ಕೆ ಮುಂದಾಗಬೇಕು. ದೇಶದಲ್ಲಿನ ಮಾನವ ಸಂಪನ್ಮೂಲನ ಶಕ್ತಿ ಸದ್ಬಳಕೆ ಮಾಡಿಕೊಂಡು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಬದಲಾವಣೆ ಜೊತೆಗೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಎನ್‍ಇಪಿ ಸಹಾಯ ಆಗಲಿದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಪರಿಣಾಮಕಾರಿಯಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ:  ಬೆಂ.ನ.ಜಿಲ್ಲೆಗೆ ಕೆ.ಸಿ.ವ್ಯಾಲಿ ನೀರು: ಒತ್ತುವರಿಯಾಗಿದ್ದ ರಾಜಕಾಲುವೆ, ಖಾಸಗಿ ಬಡಾವಣೆ ತೆರವು 

    ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಹೆಚ್ಚಿಸಿ, ಕಲೆ, ವಾಣಿಜ್ಯ ಹಾಗೂ ತಂತ್ರಜ್ಞಾನ ಸೇರಿದಂತೆ ವಿವಿಧ ವಿಭಾಗದ ವಿದ್ಯಾರ್ಥಿಗಳ ಜ್ಞಾನಮಟ್ಟವನ್ನು ಸುಧಾರಿಸಲಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯಲಿದೆ ಎಂದು ತಿಳಿಸಿದರು.

  • ಸೂರ್ಯ-ಚಂದ್ರ ಇರುವವರೆಗೂ ಹಿಂದೂ ಧರ್ಮ, ಮಾತೃ ಭಾಷೆ ಶಾಶ್ವತವಾಗಿರುತ್ತೆ: ಕಾರಜೋಳ

    ಸೂರ್ಯ-ಚಂದ್ರ ಇರುವವರೆಗೂ ಹಿಂದೂ ಧರ್ಮ, ಮಾತೃ ಭಾಷೆ ಶಾಶ್ವತವಾಗಿರುತ್ತೆ: ಕಾರಜೋಳ

    ಬೆಳಗಾವಿ: ಕರ್ನಾಟಕದಲ್ಲಿ 2,500 ಸಾವಿರ ವರ್ಷಗಳಿಂದ ಕನ್ನಡ ನಾಡಿನಲ್ಲಿ, ಕನ್ನಡ ಉಳಿಸುವ ಬೆಳೆಸುವ ಕೆಲಸ ಅನೇಕ ಮಹನೀಯರು ಮಾಡಿದ್ದಾರೆ. ಸೂರ್ಯ-ಚಂದ್ರ ಇರುವವರೆಗೂ ಕನ್ನಡ ಭಾಷೆ ಇರುತ್ತದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ ಹೇಳಿದರು.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭೂಮಿ ಮೇಲೆ ಜನರು ಇರೋವರೆಗೂ ಕನ್ನಡ ಭಾಷೆ ಇರುತ್ತದೆ. ನಮ್ಮನ್ನು ಪರಕೀಯರು 600 ವರ್ಷಗಳ ಕಾಲ ಆಳಿದ್ದಾರೆ. ಕನ್ನಡ ಭಾಷೆಗೆ ಯಾರ ಜಟಾಪಟಿನೂ ಅಗತ್ಯತೆ ಇಲ್ಲ. ದೇಶದಲ್ಲಿ ಆಯಾ ಪ್ರದೇಶ, ರಾಜ್ಯಗಳಲ್ಲಿ ಮಾತೃಭಾಷೆಗಳಿರುತ್ತವೆ. ಅದೇ ರೀತಿ ಕರ್ನಾಟಕದಲ್ಲೂ ಕನ್ನಡ ಮಾತೃಭಾಷೆ ಇದೆ ಎಂದರು. ಇದನ್ನೂ ಓದಿ:  90 ವರ್ಷದ ಬುದ್ಧಿಮಾಂದ್ಯ ತಾಯಿ, ಮಗನನ್ನು ಗುರುತಿಸುವ ಭಾವನಾತ್ಮಕ ವೀಡಿಯೋ ವೈರಲ್

    ಕನ್ನಡ ಭಾಷೆ ನಮಗೆ ತಾಯಿ ಸಮಾನವಾಗಿದೆ. ಹೀಗಾಗಿ 2,500 ಸಾವಿರ ವರ್ಷದಿಂದ ಈ ನಾಡಿನಲ್ಲಿ ಕನ್ನಡ ಉಳಿಸುವ ಬೆಳೆಸುವ ಕೆಲಸ ಅನೇಕರು ಮಾಡಿದ್ದಾರೆ. ಸೂರ್ಯ-ಚಂದ್ರ ಇರುವವರೆಗೂ ಕನ್ನಡ ಭಾಷೆ ಇರುತ್ತದೆ. ಭೂಮಿ ಮೇಲೆ ಜನರು ಇರೋವರೆಗೂ ಕನ್ನಡ ಭಾಷೆ ಇರುತ್ತದೆ ಎಂದು ತಿಳಿಸಿದರು.

    ಬ್ರಿಟಿಷರು, ಮುಸ್ಲಿಮರು, ಪೋರ್ಚುಗೀಸರು ಸೇರಿ ಪರಕೀಯರು ನಮ್ಮನ್ನು ಆಳಿದ್ದಾರೆ. ಆದರೂ ಸಹ ಕನ್ನಡ ಭಾಷೆ ನಶಿಸಿ ಹೋಗಿಲ್ಲ, ಹಿಂದೂ ಧರ್ಮ ನಶಿಸಿ ಹೋಗಿಲ್ಲ. ಹಿಂದೂ ಧರ್ಮ ಮತ್ತು ಮಾತೃ ಭಾಷೆ ಶಾಶ್ವತವಾಗಿ ಇರುತ್ತದೆ ಎಂದು ನುಡಿದರು. ಇದನ್ನೂ ಓದಿ:  ಹಾಡಹಗಲೇ ಅತ್ಯಾಚಾರ – ‘ಕಾಲಿಗೆ ಬೀಳುತ್ತೇನೆ ನನ್ನನ್ನು ಬಿಟ್ಟು ಬಿಡಿ’ ಎಂದ್ರೂ ಬಿಡದ ಪಾಪಿಗಳು

  • ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್

    ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್

    ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಕುರಿತಂತೆ ಉಡುಪಿ ಪೊಲೀಸರು ನಡೆಸುತ್ತಿರುವ ತನಿಖೆ ಇಂದು(ಬುಧವಾರ) 5ನೇ ದಿನಕ್ಕೆ ಕಾಲಿಟ್ಟಿದ್ದು, ಹೊಸದೊಂದು ಟ್ವಿಸ್ಟ್ ಸಿಕ್ಕಿದೆ.

    ಬೆಳಗಾವಿ ತಾಲೂಕಿನ ಬಡಸ ಗ್ರಾಮದ ಮೃತ ಗುತ್ತಿಗೆದಾರ ಸಂತೋಷ್ ಪಾಟೀಲ್ ಮನೆಯನ್ನು ಹಿಂಡಲಗಾ ಗ್ರಾಮ ಪಂಚಾಯತಿ ಅಧ್ಯಕ್ಷ ನಾಗೇಶ್ ಮನ್ನೋಳ್ಕರ್ ಹಾಗೂ ಎನ್.ಎಸ್.ಪಾಟೀಲ್ ಸೇರಿ ಅವರ ಮನೆಯನ್ನು ಜಿಪಿಎ ಮಾಡಿಸಿಕೊಂಡಿದ್ದಾರೆ. ಈ ಮಹತ್ವದ ದಾಖಲೆಗಳು ಉಡುಪಿ ಪೊಲೀಸರಿಗೆ ತನಿಖೆಯಲ್ಲಿ ಸಿಕ್ಕಿವೆ ಎನ್ನಲಾಗಿದೆ. ಇದನ್ನೂ ಓದಿ:  ಕಲಬುರಗಿಯಲ್ಲಿ ನಾಳೆಯಿಂದ 2 ದಿನ ಬಿಜೆಪಿ ಕೋರ್ ಕಮಿಟಿ ಸಭೆ – ಸಿಎಂ ಸೇರಿ ಹಲವರು ಭಾಗಿ

    ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಕುರಿತಂತೆ ಉಡುಪಿ ಪೊಲೀಸರು ನಡೆಸುತ್ತಿರುವ ತನಿಖೆ ಇಂದು 5ನೇ ದಿನಕ್ಕೆ ಕಾಲಿಟ್ಟಿದೆ. ಕಳೆದ ಐದು ದಿನಗಳಿಂದ ಬೆಳಗಾವಿಯಲ್ಲಿ ಬೀಡುಬಿಟ್ಟಿರುವ ಉಡುಪಿ ಪೊಲೀಸರು ಸಂತೋಷ್ ಪತ್ನಿ ಜಯಶ್ರೀ, ಆತನ ಕುಟುಂಬಸ್ಥರು, ಪ್ರಸ್ತುತ ಪಿಡಿಒ ವಸಂತಕುಮಾರಿ, ಹಿಂದಿನ ಪಿಡಿಒ ಗಂಗಾಧರ್ ನಾಯಿಕ್ ಅವರನ್ನು ತೀವ್ರ ವಿಚಾರಣೆ ನಡೆಸಿದ್ದರು.

    ಮಂಗಳವಾರ(ನಿನ್ನೆ) ಗ್ರಾಮ ಪಂಚಾಯತಿ ಅಧ್ಯಕ್ಷರನ್ನು ಸೇರಿದಂತೆ 12 ಜನ ತುಂಡು ಗುತ್ತಿಗೆದಾರನ್ನು ಉಡುಪಿ ಪೊಲೀಸರು ವಿಚಾರಣೆ ನಡೆಸಿದ್ದರು. ಈ ವೇಳೆ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಸಂತೋಷ್ ಮನೆಯನ್ನು ಗ್ರಾ.ಪಂ.ಅಧ್ಯಕ್ಷ ನಾಗೇಶ್ ಮನ್ನೋಳಕರ್ ಜಿಪಿಎ ಮಾಡಿಸಿಕೊಂಡಿದ್ರಾ? ಎನ್ನುವ ಮಾತುಗಳು ಕೇಳಿಬಂದಿವೆ.

    ಹಿಂಡಲಗಾ ಗ್ರಾಪಂ ಅಧ್ಯಕ್ಷ ನಾಗೇಶ್ ಮನ್ನೋಳಕರ್, ಉದ್ಯಮಿ ಹಾಗೂ ಗ್ರಾ.ಪಂ ಸದಸ್ಯ ಎನ್.ಎಸ್.ಪಾಟೀಲ್ ಸೇರಿ ಮೃತ ಸಂತೋಷ್ ಪಾಟೀಲ್ ಮನೆಯನ್ನು ಜಿಪಿಎ ಮಾಡಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ಉಡುಪಿ ಪೊಲೀಸರ ತನಿಖೆ ವೇಳೆ ಮಹತ್ವದ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ:  ಏಪ್ರಿಲ್ 28 ರಂದು ಇಸ್ರೇಲ್‍ನಲ್ಲಿ ಬಿಡುಗಡೆಯಾಗಲಿದೆ ‘ದಿ ಕಾಶ್ಮೀರ್ ಫೈಲ್ಸ್’

    ಈ ವೇಳೆ ಉಡುಪಿ ಪೊಲೀಸರಿಗೆ ಮಾಹಿತಿ ನೀಡಿರುವ ಗ್ರಾಮ ಪಂಚಾಯತಿ ಅಧ್ಯಕ್ಷ, ನಾಗೇಶ್ ಮನ್ನೋಳಕರ್ ಮನೆ ಜಿಪಿಎ ಮಾಡಿಸಿಕೊಂಡಿದ್ದಕ್ಕೂ ಕಾಮಗಾರಿ ವ್ಯವಹಾರಕ್ಕೂ ಸಂಬಂಧವಿಲ್ಲ. ಅದು ಬೇರೆ ವ್ಯವಹಾರ, ಇದು ಬೇರೆ ವ್ಯವಹಾರ ಇದೆ ಅಂತಾ ಹೇಳಿದ್ದಾರೆ. ಸಂತೋಷ್ ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಸಂಪೂರ್ಣ ತನಿಖೆ ನಂತರವಷ್ಟೇ ಸತ್ಯಾಸತ್ಯತೆ ಹೊರಬರಲಿದೆ.

  • ಅತ್ಯಾಚಾರ ಆರೋಪಿಗೆ ಜಾಮೀನು ನಿರಾಕರಿಸಿದ ಕೋರ್ಟ್

    ಅತ್ಯಾಚಾರ ಆರೋಪಿಗೆ ಜಾಮೀನು ನಿರಾಕರಿಸಿದ ಕೋರ್ಟ್

    ಬೆಳಗಾವಿ: ಕಳೆದ ಜುಲೈ 2021ರಲ್ಲಿ ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಫೋಕ್ಸೋ ಪ್ರಕರಣದ ಪ್ರಮುಖ ಆರೋಪಿಗೆ ಹೈಕೋರ್ಟ್ ಹಾಗೂ ಸ್ಥಳೀಯ ಕೋರ್ಟ್‍ನಲ್ಲಿ ಜಾಮೀನು ನಿರಾಕರಿಸಲಾಗಿದೆ.

    ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ರೋಷನ್ ಡಿಕ್ರೋಜ್‍ಗೆ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಬಗ್ಗೆ ಆರೋಪಿ ತಪ್ಪು ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆ ಆರೋಪಿಯ ಜಾಮೀನನ್ನು ಕೋರ್ಟ್ ನಿರಾಕರಿಸಿದೆ. ಇದನ್ನೂ ಓದಿ: ಬಸವಣ್ಣನಂತೆ ಬೊಮ್ಮಾಯಿ ಕೆಲಸ ಮಾಡುತ್ತಿದ್ದಾರೆ: ದೇಶಿಕೇಂದ್ರ ಮಹಾಸ್ವಾಮಿಜೀ 

    STOP RAPE

    ಸಂತ್ರಸ್ತ ಕುಟುಂಬದ ಪರವಾಗಿ ಹೈಕೋರ್ಟ್ ವಕೀಲರಾದ ವಾಕರ್ ಅಹ್ಮದ್ ಶಹಾಪುರಿ ಹಾಗೂ ತಂಡದವರು ವಾದ ಮಂಡಿಸುತ್ತಿದ್ದರು. ಸದ್ಯ ಸಂತ್ರಸ್ತರಿಗೆ ನ್ಯಾಯ ಕೊಡಿಸುವವರಿಗೂ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ.

  • ರಮೇಶ್ ಜಾರಕಿಹೊಳಿ ಜನರ ಮುಂದೆ ಎಲ್ಲ ಬಿಚ್ಚಿಟ್ಟಿದ್ದಾರೆ, ಇದನ್ನೂ ಬಿಚ್ಚಿಡಲಿ: ಡಿಕೆಶಿ

    ರಮೇಶ್ ಜಾರಕಿಹೊಳಿ ಜನರ ಮುಂದೆ ಎಲ್ಲ ಬಿಚ್ಚಿಟ್ಟಿದ್ದಾರೆ, ಇದನ್ನೂ ಬಿಚ್ಚಿಡಲಿ: ಡಿಕೆಶಿ

    ಬೆಳಗಾವಿ: ಬಿಜೆಪಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಜನರ ಮುಂದೆ ಎಲ್ಲ ಬಿಚ್ಚಿಟ್ಟಿದ್ದಾರೆ. ಇದನ್ನೂ ಬಿಚ್ಚಿಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದರು.

    ಬಡಸ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಜಾರಕಿಹೊಳಿ ಹೇಳಿಕೆ ಕುರಿತು ಮಾತನಾಡಿದ ಅವರು, ಸಮಯ ಯಾಕೆ ಬೇಕು? ರಮೇಶ್ ಅವರು ಬಹಳಷ್ಟು ಅನುಭವಸ್ಥರಿದ್ದಾರೆ. ಅವರ ಕಾಲದಲ್ಲಿ ಕೆಲಸ ಆರಂಭವಾಗಿರೋದಕ್ಕೆ ಸಾಕಷ್ಟು ದಾಖಲೆಗಳಿವೆ. ಮುಕ್ತವಾಗಿ ಜನರ ಮುಂದೆ ಎಲ್ಲವನ್ನು ಇಡಲಿ. ಜನರ ಮುಂದೆ ಎಲ್ಲ ಬಿಚ್ಚಿಟ್ಟಿದ್ದಾರೆ. ಇದನ್ನೂ ಬಿಚ್ಚಿಡಲಿ ಎಂದು ತಿರುಗೇಟು ಕೊಟ್ಟರು. ಇದನ್ನೂ ಓದಿ: ಸಂತೋಷ್ ಪಾಟೀಲ್ ಪತ್ನಿಗೆ 11 ಲಕ್ಷ ರೂ. ಚೆಕ್ ವಿತರಿಸಿದ ಡಿಕೆಶಿ

    ಗೋಕಾಕ್‍ನಲ್ಲಿ ಗುತ್ತಿಗೆದಾರರು ಸಹ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಆಗಿದ್ದಾರೆ. ನನ್ನನ್ನು ನೋಡಿದ ತಕ್ಷಣ ಕೆಲವರಿಗೆ ಖುಷಿ ಆಗುತ್ತದೆ. ರಾಮ, ಹನುಮಾನ್ ಹೇಳಿದ್ರೆ ಕೆಲವರಿಗೆ ಶಕ್ತಿ ಬರುತ್ತದೆ. ಹಾಗೆಯೇ ನನ್ನ ಹೆಸರನ್ನು ಹೇಳಿದ್ರೆ ಗಂಡಸರಾಗ್ತಾರೆ ಎಂದರು.

    ಎಫ್‍ಐಆರ್‌ನಲ್ಲಿ ಇರೋ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿಲ್ಲ. ದಪ್ಪ ಚರ್ಮದ ಸರ್ಕಾರ ಇದು. ಸಿಎಂ ಬೊಮ್ಮಾಯಿ, ಕೆ.ಎಸ್.ಈಶ್ವರಪ್ಪ ಪರ ಮಾತನಾಡುತ್ತಿದ್ದಾರೆ. ಹುಬ್ಬಳ್ಳಿ ಗಲಾಟೆಗೆ ಕಾಂಗ್ರೆಸ್‍ಗೆ ಸಂಬಂಧ ಇಲ್ಲ. ಪೊಲೀಸರು ಒಳ್ಳೆಯ ಕೆಲಸ ಮಾಡಿದ್ದಾರೆ ಎಂದರು. ಇದನ್ನೂ ಓದಿ: ಸತ್ತಿರುವ ವಿಚಾರಕ್ಕೆ ಹೋರಾಟ ಮಾಡಿದ್ದು ಸಣ್ಣ ವಿಚಾರನಾ?: ಸಿದ್ದರಾಮಯ್ಯ ಕಿಡಿ