Tag: Belgaum

  • ಸಂತೋಷ್ ಪಾಟೀಲ್ ಪತ್ನಿಗೆ 11 ಲಕ್ಷ ರೂ. ಚೆಕ್ ವಿತರಿಸಿದ ಡಿಕೆಶಿ

    ಸಂತೋಷ್ ಪಾಟೀಲ್ ಪತ್ನಿಗೆ 11 ಲಕ್ಷ ರೂ. ಚೆಕ್ ವಿತರಿಸಿದ ಡಿಕೆಶಿ

    ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ(ಇಂದು) ಬೆಳಗಾವಿ ತಾಲೂಕಿನ ಬಡಸ್ ಗ್ರಾಮಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ನೀಡಿದರು. ಈ ವೇಳೆ ಸಂತೋಷ್ ಕುಟುಂಬಸ್ಥರಿಗೆ 11 ಲಕ್ಷ ರೂ. ಚೆಕ್ ವಿತರಣೆ ಮಾಡಿದರು.

    ಬೆಳಗಾವಿ ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣದಿಂದ ನೇರವಾಗಿ ಬಡಸ ಗ್ರಾಮದಲ್ಲಿರುವ ಸಂತೋಷ್ ಅವರ ಮನೆಗೆ ಭೇಟಿ ನೀಡಿದ ಡಿ.ಕೆ.ಶಿವಕುಮಾರ್ ಮೃತ ಸಂತೋಷ್ ಪತ್ನಿ ಮತ್ತು ಆತನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.  ಇದನ್ನೂ ಓದಿ:  ಸತ್ತಿರುವ ವಿಚಾರಕ್ಕೆ ಹೋರಾಟ ಮಾಡಿದ್ದು ಸಣ್ಣ ವಿಚಾರನಾ?: ಸಿದ್ದರಾಮಯ್ಯ ಕಿಡಿ

    ಈ ವೇಳೆ ಡಿಕೆಶಿಗೆ ಶಾಸಕ ಮಹಾಂತೇಶ್ ಕೌಜಲಗಿ, ಶಾಸಕಿಯರಾದ ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್ ಸಾಥ್ ನೀಡಿದರು. ಬಳಿಕ ಮೃತ ಸಂತೋಷ್ ಕುಟುಂಬಕ್ಕೆ ಡಿ.ಕೆ.ಶಿವಕುಮಾರ್ ಕೆಪಿಸಿಸಿ ವತಿಯಿಂದ 11 ಲಕ್ಷ ರೂ. ಚೆಕ್ ವಿತರಣೆ ಮಾಡಿದರು. ಇದೇ ವೇಳೆ ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ 5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದರು. ಇದರ ಜೊತೆಗೆ ಕುಟುಂಬಸ್ಥರಿಗೆ ನ್ಯಾಯ ಕೊಡಿಸುವುದಾಗಿ ಡಿಕೆಶಿ ಭರವಸೆ ನೀಡಿದರು.

  • ಮಹಿಳೆ ಮೇಲೆ ಅತ್ಯಾಚಾರ ಮಾಡಿ ಎಸ್ಕೇಪ್ ಆಗಿದ್ದ ಆರೋಪಿ ಪೊಲೀಸರ ವಶ

    ಮಹಿಳೆ ಮೇಲೆ ಅತ್ಯಾಚಾರ ಮಾಡಿ ಎಸ್ಕೇಪ್ ಆಗಿದ್ದ ಆರೋಪಿ ಪೊಲೀಸರ ವಶ

    ಬೆಳಗಾವಿ: ಎರಡು ತಿಂಗಳ ಹಿಂದೆ ಅತ್ಯಾಚಾರ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಖಾನಾಪೂರ ಪೊಲೀಸರು ಜಾಂಬೋಟಿಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಖಾನಾಪೂರ ತಾಲೂಕಿನ ಸಂಗರಗಾಳಿ ಗ್ರಾಮದ ನಿವಾಸಿ ಆಸ್ಟಿನ್ ಡುಮಿಂಗ್ ಮಸ್ಕರೇನ್ ಬಂಧಿತ. ಕಳೆದ ಎರಡು ತಿಂಗಳ ಹಿಂದೆ ಆಸ್ಟಿನ್ ವಿರುದ್ಧ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ವರದಿಯಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಆಸ್ಟಿನ್ ಪರಾರಿಯಾಗಿದ್ದನು. ಆತನ ಪತ್ತೆಗೆ ಬಲೆ ಬೀಸಿದ್ದ ಪೊಲೀಸರು ಹರಸಾಹಸಪಟ್ಟಿದ್ದರು. ಇದನ್ನೂ ಓದಿ: ಸಿನಿಮೀಯ ರೀತಿ ದರೋಡೆಕೋರನನ್ನೇ ಹಿಡಿದ ಮನೆಯವರು

    CRIME 2

    ಜಾಂಬೋಟಿ ಗ್ರಾಮದಲ್ಲಿರುವ ಖಚಿತ ಮಾಹಿತಿ ಮೇರೆಗೆ ಇನ್ಸ್‌ಪೆಕ್ಟರ್ ಸುರೇಶ್ ನೇತೃತ್ವದಲ್ಲಿ ಖಾನಾಪುರ ಠಾಣೆಯ ಸಿಬ್ಬಂದಿ ಎಸ್.ಎಸ್.ತುರಮುಂದಿ, ಎಸ್.ಎಂ.ಸಾತಪ್ಪ ಅವರ, ಪ್ರಕಾಶ್ ಗಾಡಿವಡ್ಡರ ಮತ್ತು ಮಂಜುನಾಥ್ ಮುಸಳಿ ಅವರಿದ್ದ ಪೊಲೀಸರ ತಂಡ ಆಸ್ಟಿನ್‍ನನ್ನು ಬಂಧಿಸಿದ್ದು, ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಆಸ್ಟಿನ್ ವಿರುದ್ಧ ಅತ್ಯಾಚಾರದ ಜೊತೆಗೆ ಒಂದು ಕೊಲೆ ಹಾಗೂ ಅಕ್ರಮ ಗಾಂಜಾ ಸಾಗಾಟ ಪ್ರಕರಣವೂ ದಾಖಲಾಗಿದ್ದರಿಂದ ನ್ಯಾಯಾಧೀಶರು ಆತನಿಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ. ಮೂರೂ ಪ್ರಕರಣಗಳ ವಿಚಾರಣೆ ಮುಂದುವರೆದಿದೆ. ಇದನ್ನೂ ಓದಿ: PSI ನೇಮಕಾತಿ ಅಕ್ರಮ – ಬಿಜೆಪಿ ಮುಖಂಡೆ ದಿವ್ಯಾ ಹಾಗರಗಿ ಮನೆಗೆ ಸಿಐಡಿ ದಾಳಿ

  • ರಣಕುಂಡೆಯೆ ಯುವಕನ ಕೊಲೆ ಪ್ರಕರಣ – ನಾಲ್ವರು ಆರೋಪಿಗಳು ಅರೆಸ್ಟ್

    ರಣಕುಂಡೆಯೆ ಯುವಕನ ಕೊಲೆ ಪ್ರಕರಣ – ನಾಲ್ವರು ಆರೋಪಿಗಳು ಅರೆಸ್ಟ್

    ಬೆಳಗಾವಿ: ರಣಕುಂಡೆಯೆ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಹಂತಕರನ್ನು ಪೊಲೀಸರ ಬಂಧಿಸಿದ್ದಾರೆ.

    ಬೆಳಗಾವಿ ತಾಲೂಕಿನ ರಣಕುಂಡೆಯೆ ಗ್ರಾಮದ ನಿವಾಸಿ ನಾಗೇಶ್ ಪಾಟೀಲ್(31)ನನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಪರಿಣಾಮ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ತನಿಖೆ ಪ್ರಾರಂಭಿಸಲಾಗಿತ್ತು. ಈ ಹಿನ್ನೆಲೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಇಬ್ಬರು ಆರೋಪಿಗಳು ತಪ್ಪಿಸಿಕೊಂಡಿದ್ದಾರೆ. ಅವರನ್ನು ಆದಷ್ಟು ಬೇಗ ಬಂಧನ ಮಾಡಲಾಗುತ್ತದೆ ಎಂದು ಕಮಿಷನರ್ ಡಾ.ಬೋರಲಿಂಗಯ್ಯ ಹೇಳಿದ್ದಾರೆ.  ಇದನ್ನೂ ಓದಿ:  ಚಿಕನ್ ಖರೀದಿ ಮಾಡುವಾಗ ಗಲಾಟೆ – ಯುವಕ ಬರ್ಬರ ಹತ್ಯೆ

    ಪ್ರಕರಣ ಹಿನ್ನೆಲೆ: ಬೆಳಗಾವಿ ತಾಲೂಕಿನ ರಣಕುಂಡೆಯೆ ಗ್ರಾಮದ ನಿವಾಸಿ ನಾಗೇಶ್ ಪಾಟೀಲ್ ಮನೆಯಲ್ಲಿಯೇ ಮಲಗಿಕೊಂಡಿದ್ದ. ಆದರೆ ಆತನನ್ನು ಬಲವಂತವಾಗಿ ಹೊರಗಡೆ ಕರೆದುಕೊಂಡು ಹೋಗಿ ಭೀಕರವಾಗಿ ಹಲ್ಲೆಮಾಡಿ ಮನೆಯ ಮುಂದೆ ಬಿಸಾಡಿ ಹೋಗಿದ್ರು. ಇದಲ್ಲದೇ ನಾಗೇಶ್ ರಕ್ಷಣೆಗೆ ಮುಂದಾದ ಆತನ ಸಹೋದರ ಮನೋಜ್ ಪಾಟೀಲ್ ಮೇಲೂ ಆರೋಪಿಗಳು ಹಲ್ಲೆ ಮಾಡಿದ್ದಾರೆ.

    ಮಾರಣಾಂತಿಕ ಹಲ್ಲೆಯಿಂದ ನಾಗೇಶ್ ಪಾಟೀಲ್ ಸಾವನ್ನಪ್ಪಿದ್ದನು. ಇತ್ತ ಗಂಭೀರ ಗಾಯಗೊಂಡ ಮನೋಜ್ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

    ಪೆÇಲೀಸರ ಪ್ರಾಥಮಿಕ ತನಿಖೆಯಲ್ಲಿ, ಕೊಲೆಯಾದ ನಾಗೇಶ್ ತಂದೆ ಆರೋಪಿ ಪ್ರಮೋದ್ ಪಾಟೀಲ್ ಕುಟುಂಬಕ್ಕೆ 20 ಸಾವಿರ ರೂ. ಸಾಲ ನೀಡಿದ್ದರು. ತಂದೆ ಕೊಟ್ಟ ಹಣವನ್ನು ವಾಪಸ್ ಕೇಳೋದಕ್ಕೆ ನಾಗೇಶ್ ಪದೇ-ಪದೇ ಅವರ ಮನೆಗೆ ಹೋಗುತ್ತಿದೆ. ಈ ಹಿನ್ನೆಲೆ ಎರಡು ಕುಟುಂಬಗಳ ಮಧ್ಯೆ ಹಣಕಾಸಿನ ವಿಚಾರದಲ್ಲಿ ಗಲಾಟೆ ಆಗುತ್ತಿತ್ತು. ಇದರಿಂದ ವೈಯಕ್ತಿಕ ವೈಷಮ್ಯ ಬೆಳೆದು ಗಲಾಟೆಯಾಗಿ ಕೊಲೆಯಲ್ಲಿ ಅಂತ್ಯವಾಗಿದೆ. ಇದನ್ನೂ ಓದಿ: ನಾವು ಎಷ್ಟೇ ದೊಡ್ಡವರಾದರೂ ಶಾಲೆ, ಗುರುಗಳು ಅಂದಾಗ ಗೌರವದ ಭಾವ ಮೂಡುತ್ತೆ: ಆರ್.ಅಶೋಕ್ 

    ಬೆಳಗಾವಿ ತಾಲೂಕಿನ ರಣಕುಂಡೆ ಗ್ರಾಮದ ಪ್ರಮೋದ್ ಪಾಟೀಲ್(31), ಶ್ರೀಧರ್ ಪಾಟೀಲ್(28), ಮಹೇಂದ್ರ ಕಂಗ್ರಾಳಕರ(21), ಬೂಮನಿ ಡೋಕ್ರೆ(33) ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ದಾಖಲಾಗಿದೆ. ತನಿಖೆ ಮುಂದುವರೆದಿದೆ.

  • ಬಡವರನ್ನು ಬಡವರಾಗಿಯೇ ಮಾಡುವುದು ಬಿಜೆಪಿ ಸಿದ್ಧಾಂತ: ಸತೀಶ್ ಜಾರಕಿಹೊಳಿ

    ಬಡವರನ್ನು ಬಡವರಾಗಿಯೇ ಮಾಡುವುದು ಬಿಜೆಪಿ ಸಿದ್ಧಾಂತ: ಸತೀಶ್ ಜಾರಕಿಹೊಳಿ

    ಬೆಳಗಾವಿ: ಬಡವರನ್ನು ಬಡವರಾಗಿಯೇ ಮಾಡುವುದು ಬಿಜೆಪಿ ಸಿದ್ಧಾಂತವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಪೆಟ್ರೋಲ್, ಡೀಸೆಲ್ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದು, ಜನ ಸಾಮಾನ್ಯರಿಗೆ ತೊಂದರೆ ಆಗುತ್ತಿದೆ. ಆದರೆ ಜನರ ಸಮಸ್ಯೆಗೆ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸ್ಪಂದಿಸಲ್ಲ ಎಂದು ಆರೋಪಿಸಿದರು. ಇದನ್ನೂ ಓದಿ: ಪ್ರಾಣಿ ವಧೆ ಮಾಡಿ ತಿನ್ನುವುದರಲ್ಲಿ ಮಾನವೀಯತೆ ಎಲ್ಲಿಂದ ಬಂತು: ದೇವನೂರು

    satish jarkiholi

    ಕಳೆದ ಎರಡು ದಿನಗಳ ಹಿಂದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಗಳೂರಿಗೆ ಬಂದಿದ್ದರು. ಪಕ್ಷ ಸಂಘಟನೆ ಬಗ್ಗೆ ಅವರೊಂದಿಗೆ ಚರ್ಚಿಸಲಾಗಿದೆ. ಪ್ರಸ್ತುತ ದಿನಗಳಲ್ಲಿ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಗೆ ತರಬೇತಿ ನೀಡುವುದು ಅಗತ್ಯವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ದೇಶದ ಮೊದಲ ಹಸಿರು ಸಂಚಾರಿ ಪಥ ಕಾಮಗಾರಿ: ಜಗದೀಶ್ ಶೆಟ್ಟರ್

    ಪದವೀಧರರ ಹಾಗೂ ಶಿಕ್ಷಕರ ಮತಕ್ಷೇತ್ರ ಚುನಾವಣೆಗೆ ಅಧಿಕೃತ ಅಭ್ಯರ್ಥಿಗಳನ್ನು ಇನ್ನೂ ಘೋಷಣೆ ಮಾಡಿಲ್ಲ. ರಾಜ್ಯ ನಾಯಕರೊಂದಿಗೆ ಚರ್ಚಿಸಿ ಆದಷ್ಟು ಬೇಗ ಅಭ್ಯರ್ಥಿಗಳನ್ನು ಘೋಷಿಸಲಾಗುವುದು ಎಂದರು.

  • ಇಂದು ರಾಜ್ಯದ ಮೊದಲ ಕೋಕಾ ಕೇಸ್‍ನ ತೀರ್ಪು ಪ್ರಕಟ- ಪಾತಕಿ ಬನ್ನಂಜೆ ರಾಜಾ ಸೇರಿ 13 ಪಾತಕಿಗಳ ಭವಿಷ್ಯ ನಿರ್ಧಾರ

    ಇಂದು ರಾಜ್ಯದ ಮೊದಲ ಕೋಕಾ ಕೇಸ್‍ನ ತೀರ್ಪು ಪ್ರಕಟ- ಪಾತಕಿ ಬನ್ನಂಜೆ ರಾಜಾ ಸೇರಿ 13 ಪಾತಕಿಗಳ ಭವಿಷ್ಯ ನಿರ್ಧಾರ

    ಬೆಳಗಾವಿ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಮೂಲದ ಅದಿರು ಉದ್ಯಮಿ ಆರ್.ಎನ್.ನಾಯಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಮೊದಲ ಕೋಕಾ ಕೇಸ್‍ನ ತೀರ್ಪು ಇಂದು ಪ್ರಕಟವಾಗಲಿದೆ.

    ಬೆಳಗಾವಿಯ ಕೋಕಾ ನ್ಯಾಯಾಲಯದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ತೀರ್ಪು ಪ್ರಕಟವಾಗಲಿದ್ದು, ರಾಜ್ಯದ ಮೊದಲ ಕೋಕಾ ಪ್ರಕರಣ ಇದಾಗಿದೆ. ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 13 ಪಾತಕಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಘಟನೆ ನಡೆದು ಬರೋಬ್ಬರಿ 9 ವರ್ಷಗಳ ಬಳಿಕ ತೀರ್ಪು ಪ್ರಕಟವಾಗುತ್ತಿದೆ.  ಇದನ್ನೂ ಓದಿ: ಆನ್‍ಲೈನ್ ಗೇಮ್ ನಿಷೇಧ ರದ್ದು: ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಅರ್ಜಿ

    ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕ ಕೆ.ಜಿ.ಪುರಾಣಿಕಮಠ ಅವರು ವಕಾಲತ್ತು ವಹಿಸಿದ್ದರು. ಈ ಪ್ರಕರಣದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳಾದ ಪ್ರತಾಪ್ ರೆಡ್ಡಿ, ಅಲೋಕ್ ಕುಮಾರ್, ಮಾಜಿ ಪೊಲೀಸ್ ಅಧಿಕಾರಿಗಳಾದ ಭಾಸ್ಕರ್ ರಾವ್, ಅಣ್ಣಾ ಮಲೈ ಸೇರಿ ಒಟ್ಟು 210 ಜನರು ಸಾಕ್ಷಿ ನುಡಿದಿದ್ದಾರೆ. 1,027 ದಾಖಲೆ ಪತ್ರಗಳು ಹಾಗೂ 138 ಮುದ್ದೆಮಾಲನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.

    3 ಕೋಟಿ ರೂ. ಹಫ್ತಾ ಕೇಳಿದ್ದ ರಾಜಾ
    ಶಿಕ್ಷಣ ಹಾಗೂ ಸಹಕಾರ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಆರ್.ಎನ್.ನಾಯಕ್ ಅದಿರು ಉದ್ಯಮಿಯೂ ಆಗಿದ್ದರು. ಈ ಕಾರಣಕ್ಕೆ ಬನ್ನಂಜೆ ರಾಜಾ, ಆರ್.ಎನ್.ನಾಯಕ್ ಅವರನ್ನು ಟಾರ್ಗೆಟ್ ಮಾಡಿದ್ದ. ವಿದೇಶದಲ್ಲಿ ಕುಳಿತುಕೊಂಡೇ ಬನ್ನಂಜೆ ರಾಜಾ ನಾಯಕರ ಬಳಿ ಹಣಕ್ಕೆ ಬೇಡಿಕೆ ಇಡುತ್ತಿದ್ದ. 3 ಕೋಟಿ ರೂ. ಹಫ್ತಾ ನೀಡದಿದ್ರೆ ಪ್ರಾಣ ತೆಗೆಯುವ ಬೆದರಿಕೆಯನ್ನು ನಾಯಕ್ ಅವರಿಗೆ ಹಾಕಲಾಗಿತ್ತು. ಈ ಸಂಬಂಧ ನಾಯಕ್ ಅಂಕೋಲಾ ಠಾಣೆಯಲ್ಲಿ ದೂರು ನೀಡಿದ್ದರು.

  • ಜೈಲಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಕೈದಿ

    ಜೈಲಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಕೈದಿ

    ಬೆಳಗಾವಿ: ಕೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಿಂಡಲಗಾ ಜೈಲಿನಲ್ಲಿ ನಡೆದಿದೆ.

    ಸಿದ್ದಗೌಡ ಹಿಪ್ಪಲಕರ್(34) ಆತ್ಮಹತ್ಯೆ ಮಾಡಿಕೊಂಡ ಕೈದಿ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮೂಳೆ ಗ್ರಾಮದ ಸಿದ್ದಗೌಡ ಪಕ್ಕದ ಮನೆಯ ಮಗುವನ್ನ ಕೊಲೆ ಮಾಡಿದ ಕೇಸ್ ಅಡಿಯಲ್ಲಿ ಶಿಕ್ಷೆ ಅನುಭವಿಸುತ್ತಿದ್ದ. ಇದನ್ನೂ ಓದಿ: ಟಿಪ್ಪು ಬಗ್ಗೆ ಶೃಂಗೇರಿ ಮಠಕ್ಕೆ ಹೋಗಿ ಕೇಳಲಿ ಕೊಲ್ಲೂರಿನಲ್ಲಿ ತಿಳಿದುಕೊಳ್ಳಲಿ: ಡಿಕೆಶಿ

    ಸಿದ್ದಗೌಡ ಕಳೆದ ಆರು ವರ್ಷದಿಂದ ಹಿಂಡಲಗಾ ಜೈಲಿನಲ್ಲಿಯೇ ಶಿಕ್ಷೆ ಅನುಭವಿಸುತ್ತಿದ್ದ. ಆದರೆ ನಾಲ್ಕು ದಿನಗಳ ಹಿಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದನು. ಈ ಹಿನ್ನೆಲೆ ಸಿಬ್ಬಂದಿ ತಕ್ಷಣ ಸಿದ್ದಗೌಡನನ್ನು ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಿದ್ದಗೌಡ ಮಂಗಳವಾರ(ಇಂದು) ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಅಪ್ಪ-ಮಗನ್ನ ಕಣ್ತುಂಬಿಕೊಳ್ಳೋಕೆ ಅಭಿಮಾನಿಗಳ ಕಾತರ : ‘ಆಚಾರ್ಯ’ದಲ್ಲಿ ಒಂದಾದ ಮಗಧೀರ ಜೋಡಿ

    ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • 2023ರ ನಂತರ ನಮಗೆ ಶಾಪ ವಿಮೋಚನೆ ಆಗುತ್ತೆ: ಹೆಚ್.ವಿಶ್ವನಾಥ್

    2023ರ ನಂತರ ನಮಗೆ ಶಾಪ ವಿಮೋಚನೆ ಆಗುತ್ತೆ: ಹೆಚ್.ವಿಶ್ವನಾಥ್

    ಬೆಳಗಾವಿ: ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ರಚನೆ ಆಗುತ್ತೋ ವಿಸ್ತರಣೆ ಆಗುತ್ತೋ ಗೊತ್ತಿಲ್ಲ. ಆದ್ರೆ, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಬಿಜೆಪಿ ಎಂಎಲ್‍ಸಿ ಹೆಚ್.ವಿಶ್ವನಾಥ್ ಹೇಳಿದರು.

    ಬೆಳಗಾವಿ ಜಿಲ್ಲೆಯ ಗೋಕಾಕ್‍ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕ್ಯಾಬಿನೆಟ್ ಸಚಿವರು ಆಗುವ ಸಂದರ್ಭದಲ್ಲಿ ಅದನ್ನು ಮಣ್ಣು ಮಾಡಿದವರು ಮಾಜಿ ಸಿಎಂ ಯಡಿಯೂರಪ್ಪ ಮತ್ತು ಅವರ ಮಗ ವಿಜಯೇಂದ್ರ. ಸಮ್ಮಿಶ್ರ ಸರ್ಕಾರದ ಪತನ, ಬಿಜೆಪಿ ಸರ್ಕಾರದ ಸ್ಥಾಪನೆ ಆ ಸಂದರ್ಭದಲ್ಲಿ ಎಷ್ಟೇಲ್ಲ ಆಯ್ತು. ಇದಾದ ಬಳಿಕ ನಮ್ಮನ್ನ ಎಂಎಲ್‍ಸಿ ಮಾಡುವಾಗ ನಮಗೆಲ್ಲಾ ಅನ್ಯಾಯ ಆಯ್ತು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಜಗತ್ತಿನ ಮುಸ್ಲಿಂ ರಾಷ್ಟ್ರಗಳು ಭಾರತೀಯರಿಗೆ ನಿರ್ಬಂಧ ಹಾಕಿದರೆ ಏನಾಗಬಹುದು: ಬಿಜೆಪಿಗೆ ಎಚ್.ವಿಶ್ವನಾಥ್ ಪ್ರಶ್ನೆ

    ಅಸೆಂಬ್ಲಿಯಿಂದ ಆಯ್ಕೆಯಾಗಿ ನಾನು ಕೌನ್ಸಿಲ್‍ಗೆ ಬರಬೇಕಾಗಿತ್ತು. ಅದನ್ನು ತಪ್ಪಿಸಿ ನಮ್ಮನ್ನು ನಾಮನಿರ್ದೇಶನ ಮಾಡಿದರು. ನಾಮನಿದೇಶನವಾದ ಸದಸ್ಯರಿಗೆ ಮಂತ್ರಿಯಾಗುವ ಯೋಗವಿಲ್ಲ. ಸುಪ್ರೀಂ ಕೋರ್ಟ್ ತೂಗುಗತ್ತಿ ಇದೆ. ಅದು ಗೊತ್ತಿದ್ದು ಕೂಡ ನಮಗೆ ಅನ್ಯಾಯವಾಗಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

    ಬಿಜೆಪಿ ನಮ್ಮನ್ನ ಕಡೆಗಣನೆ ಮಾಡುತ್ತಿಲ್ಲ
    ಬಿಜೆಪಿ ನಮ್ಮನ್ನು ಕಡೆಗಣನೆ ಮಾಡಿಲ್ಲ. ಬಿಜೆಪಿ ನಾಯಕರು ನಮ್ಮನ್ನು ಕಡೆಗಣನೆ ಮಾಡುತ್ತಿದ್ದಾರೆ. ಯಾರು ಯಾವುದೇ ಪಕ್ಷವನ್ನು ಆಪಾದನೆ ಮಾಡಬಾರದು. ಪಕ್ಷಗಳು ಎಲ್ಲವೂ ಚೆನ್ನಾಗಿರುತ್ತಾವೆ. ಪಕ್ಷ ನಡೆಸುವವರಿಂದ ಪಾರ್ಟಿಗಳು ಹಾಳಾಗುತ್ತಿವೆ. ಪಕ್ಷದ ಸಿದ್ದಾಂತಗಳು ಚೆನ್ನಾಗಿರ್ತವೆ ಪಕ್ಷ ಹಾಳು ಮಾಡುವವರು ನಾಯಕರು ಎಂದು ಕಿಡಿಕಾರಿದರು.

    ಕರ್ನಾಟಕದಲ್ಲಿ ಯಾರಾದರೂ ಒಬ್ಬರು ಮೋದಿ ಹೆಸರು ಹೇಳುತ್ತಾರಾ. ಯಾರಿಂದ ಇವರೆಲ್ಲಾ ಬಂದಿದ್ದಾರೆ. ಯಾರ ಹೆಸರು ಹೇಳಿ ಮುಂದಿನ ಚುನಾವಣೆಯಲ್ಲಿ ವೋಟ್ ಕೇಳ್ತಾರೆ. ಬಿಜೆಪಿ ರಾಜ್ಯಾಧ್ಯಕ್ಷ ಮಾತಾಡಲ್ಲ. ಮಂತ್ರಿಗಳು ಮಾತಾಡಲ್ಲ. ಮುಖ್ಯಮಂತ್ರಿ ಮಾತಾಡುವುದಿಲ್ಲ. ಮೋದಿ ಅವರ ಕಾರ್ಯಕ್ರಮಗಳ ಬಗ್ಗೆ ಯಾರೂ ಮಾತಾಡುವುದಿಲ್ಲ ಎಂದರು.

    ಈವರೆಗೂ ಹಿಂದುತ್ವದ ಬಗ್ಗೆ ಮಾತಾಡ್ತಾರೆ. ಮೋದಿ ಅವರು ಹಿಂದುತ್ವ ಬಗ್ಗೆ ಮಾತಾಡಿದ್ದರಾ..? ಮೋದಿ ಅವರೇ ಹಿಂದುತ್ವದ ಬಗ್ಗೆ ಮಾತಾಡಿಲ್ಲ. ಇವರ್ಯಾಕೆ ಮಾತಾಡ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.

    2023ರ ನಂತರ ನಮಗೆ ಶಾಪ ವಿಮೋಚನೆ ಆಗುತ್ತೆ. ಈ ಕಾರಣಕ್ಕೆ ಸದ್ಯ ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಸರ್ಕಾರದ ಜೊತೆಗೆ ಕೆಲಸ ಮಾಡುತ್ತೇನೆ. ನಾನು ಸಚಿವ ಸ್ಥಾನ ನೀಡುವಂತೆ ಯಾರಿಗೂ ಸಪೋರ್ಟ್ ಮಾಡಲ್ಲ. ರಮೇಶ್ ಜಾರಕಿಹೊಳಿ ನಮ್ಮ ಸ್ನೇಹಿತರು. ಬಿಜೆಪಿ ಸರ್ಕಾರ ಸ್ಥಾಪನೆಗೆ ಅವರು ಕೂಡ ಪ್ರಮುಖ ಕಾರಣರಾದವರು. ಹೈಕಮಾಂಡ್ ಯಾವ ರೀತಿ ತೀರ್ಮಾನ ತೆಗೆದುಕೊಳ್ಳುತ್ತೆ ನೋಡೋಣ. ರಾಜಕಾರಣದಲ್ಲಿ ಕೃತಜ್ಞತೆ ಪದಕ್ಕೆ ಅರ್ಥ ಇಲ್ಲದಂತಾಗಿದೆ. ಕೃತಜ್ಞತೆ ಇಲ್ಲದ ಜನನಾಯಕರಾಗುತ್ತಿದ್ದೇವೆ ನಾವು. ಮುಂಬರುವ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ತರಲು ದುಡಿಯುತ್ತೇವೆ ಎಂದರು.

    ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ಕೈತಪ್ಪುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಮೇಶ್ ಜಾರಕಿಹೊಳಿ ಸಚಿವ ಸ್ಥಾನ ತಪ್ಪಲು ಕಾಣುವ ಕೈಗಳೇ ಕಾರಣ. ರಮೇಶ್ ಜಾರಕಿಹೊಳಿಯನ್ನೂ ನಮ್ಮನ್ನೂ ಕಾಣುವ ಕೈಗಳೇ ಮುಗಿಸುತ್ತವೆ. ಸಿದ್ರಾಮಯ್ಯ, ನಾವು, ಜಾರಕಿಹೊಳಿ, ಹಿಂದುಳಿದ ವರ್ಗದವರು. ಯಾರು ಬದುಕುವ ಹಾಗೇ ಇಲ್ಲ ಇಲ್ಲಿ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಟ್ರ್ಯಾಕ್ಟರ್, ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಸಾವು

    ಜಾರಕಿಹೊಳಿ ಅವರು ಬಿಜೆಪಿ ಸರ್ಕಾರ ಸ್ಥಾಪನೆಗೆ ಪ್ರಮುಖ ಕಾರಣರಾದವರು. ಅವರಿಗೆ ಈ ರೀತಿ ಆಟ ಆಡಿಸುತ್ತಾ ಕುಳಿತಿದ್ದಾರೆ. ಜಾರಕಿಹೊಳಿಯನ್ನ, ವಿಶ್ವನಾಥ್‍ನ ಯಾರು ತುಳಿಯಲು ಆಗಲ್ಲ. ಇದೆಲ್ಲಾ ತಾತ್ಕಾಲಿಕ, ನಿಮಗೆ ಅಧಿಕಾರ ನಾವೇ ಕೊಟ್ಟಿದ್ದೇವೆ. ನಾವು ಕೊಟ್ಟ ತ್ರಿಶೂಲದಲ್ಲಿ ನಮ್ಮನ್ನ ತಿವಿತಿದ್ದೀರಿ ಎಂದು ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದರು.

  • ವಿಚ್ಛೇದನದ ವಿಚಾರಣೆ ಮುಗಿಸಿ ತವರಿಗೆ ಹೋಗುತ್ತಿದ್ದ ಪತ್ನಿ – ರಸ್ತೆಯಲ್ಲೇ ಕೊಚ್ಚಿ ಕೊಂದ ಪತಿ

    ವಿಚ್ಛೇದನದ ವಿಚಾರಣೆ ಮುಗಿಸಿ ತವರಿಗೆ ಹೋಗುತ್ತಿದ್ದ ಪತ್ನಿ – ರಸ್ತೆಯಲ್ಲೇ ಕೊಚ್ಚಿ ಕೊಂದ ಪತಿ

    ಬೆಳಗಾವಿ: ಹಾಡಹಗಲೇ ಪತ್ನಿಯನ್ನೇ ಪತಿ ಮಚ್ಚಿನಿಂದ ಕತ್ತು ಕೊಯ್ದು ಕೊಲೆ ಮಾಡಿರುವ  ಘಟನೆ ಬೆಳಗಾವಿಯ ಕೋಟೆ ಕೆರೆ ಬಳಿ ನಡೆದಿದೆ.

    ಬೆಳಗಾವಿಯ ಗಾಂಧಿನಗರದ ನಿವಾಸಿ ಹೀನಾ ಕೌಸರ್ ಮಂಜೂರ್ ಇಲಾಹಿ ನದಾಫ್(27) ಕೊಲೆಯಾದ ದುರ್ದೈವಿ. ಈ ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಆರೋಪಿ ಮಂಜೂರ್ ಇಲಾಹಿ ನದಾಫ್(34)ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಗಾಂಧಿನಗರದ ಹೀನಾಕೌಸರ್ ಕಳೆದ ನಾಲ್ಕು ವರ್ಷಗಳ ಹಿಂದೆ ಬೈಲಹೊಂಗಲ ತಾಲೂಕಿನ ದೇವಲಾಪುರ ಗ್ರಾಮದ ಮಂಜೂರ್‍ನನ್ನು ವಿವಾಹವಾಗಿದ್ದರು. ಈ ದಂಪತಿಗೆ ನಾಲ್ಕು ವರ್ಷದ ಪುತ್ರನಿದ್ದಾನೆ. ತಾಯಿ ಮೃತಪಟ್ಟಿದ್ದು, ತಂದೆ ಜೈಲು ಪಾಲಾದ ಕಾರಣಕ್ಕೆ ನಾಲ್ಕು ವರ್ಷದ ಮಗು ಈಗ ಅನಾಥವಾಗಿದೆ. ಇದನ್ನೂ ಓದಿ: ಮನೆಗೆ ನುಗ್ಗಿ ಎಲ್ಲರನ್ನೂ ಮುಗಿಸಿಬಿಡ್ತೇವೆ ಎಂದ ಪೋಷಕರು – ಭಯಭೀತರಾಗಿರುವ ನವಜೋಡಿ

    ವಿಚ್ಛೇದನಕ್ಕೆ ಅರ್ಜಿ
    ಮಂಜೂರ್-ಹೀನಾಕೌಸರ್ ನಡುವೆ ಕೌಟುಂಬಿಕ ಕಲಹವಿತ್ತು. ಈ ಕಾರಣಕ್ಕೆ ಕಳೆದ ಎಂಟು ತಿಂಗಳ ಹಿಂದೆ ಹೀನಾಕೌಸರ್ ವಿಚ್ಛೇದನ ಕೋರಿ, ಬೆಳಗಾವಿಯ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಇಂದು ಕೋರ್ಟ್‍ಗೆ ಹಾಜರಾಗಿ ಗಾಂಧಿನಗರದಲ್ಲಿರುವ ತವರು ಮನೆಗೆ ಹೀನಾಕೌಸರ್ ವಾಪಸ್ ಆಗುತ್ತಿದ್ದರು. ಈ ವೇಳೆ ಕೋಟೆ ಕೆರೆ ಬಳಿ ಆಗಮಿಸಿದ ಮಂಜೂರು ನಡೆದುಕೊಂಡು ಹೋಗುತ್ತಿದ್ದ ಹೀನಾಕೌಸರ್‌ನನ್ನು ಅಡ್ಡಗಟ್ಟಿದ್ದಾನೆ.

    ಕೆಲ ಹೊತ್ತು ಹೀನಾಕೌಸರ್ ಜೊತೆಗೆ ವಾಗ್ವಾದವನ್ನೂ ಮಾಡಿದ್ದಾನೆ. ಬಳಿಕ ಹೀನಾಕೌಸರ್ ಕುತ್ತಿಗೆ, ಕೈಗೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ರಕ್ತದ ಮಡುವಿನಲ್ಲಿ ವಿಲವಿಲನೇ ಒದ್ದಾಡುತ್ತಿದ್ದ ಆಕೆಯನ್ನು, ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ಹೀನಾಕೌಸರ್ ಮೃತಪಟ್ಟಿದ್ದಾರೆ.

    ಮೃತದೇಹವನ್ನು ಜಿಲ್ಲಾಸ್ಪತ್ರೆಯಿಂದ ಶವಾಗಾರಕ್ಕೆ ಸಾಗಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಪೊಲೀಸರು  ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಿದ್ದಾರೆ. ಸ್ಥಳಕ್ಕೆ ಮಾರ್ಕೆಟ್ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದರು. ಇದನ್ನೂ ಓದಿ: ಕೊಡಗಿನಲ್ಲೂ ಹೊತ್ತಿದ ಧರ್ಮದ ಕಿಡಿ – ಮುಸ್ಲಿಂ ವ್ಯಾಪಾರಸ್ಥ ಅಂಗಡಿ ಖಾಲಿ ಮಾಡಿಸಿದ ಭಜರಂಗದಳ

    ಮಂಜೂರ್ ಕೆಲ ವರ್ಷಗಳಿಂದ ಹೀನಾಮಂಜೂರ್ ಮೇಲೆ ದೈಹಿಕ ಹಲ್ಲೆ ಜೊತೆಗೆ ಮಾನಸಿಕ ಕಿರುಕುಳ ನೀಡುತ್ತಿದ್ದ. ಈ ಕಾರಣಕ್ಕೆ ಹೀನಾಕೌಸರ್ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು.

  • ಮಾಜಿ ಸಿಎಂ ಸಿದ್ದರಾಮಯ್ಯ ನಾಡಿನ ಮಠಾಧೀಶರ ಕ್ಷಮೆ ಕೇಳಬೇಕು: ಅಭಿನವ ಮಂಜುನಾಥ ಶ್ರೀ

    ಮಾಜಿ ಸಿಎಂ ಸಿದ್ದರಾಮಯ್ಯ ನಾಡಿನ ಮಠಾಧೀಶರ ಕ್ಷಮೆ ಕೇಳಬೇಕು: ಅಭಿನವ ಮಂಜುನಾಥ ಶ್ರೀ

    ಚಿಕ್ಕೋಡಿ: ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ಮಠಾಧೀಶರ ಪೇಟದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಮಠಾಧೀಶರ ಕ್ಷಮೆ ಕೇಳಬೇಕು ಎಂದು ಇಂಚಿಗೇರಿ ಶಾಖಾ ಮಠದ ಅಭಿನವ ಮಂಜುನಾಥ ಶ್ರೀ ಆಗ್ರಹಿಸಿದರು.

    ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿರುವ ಇಂಚಿಗೇರಿ ಶಾಖಾಮಠದಲ್ಲಿ ಪಬ್ಲಿಕ್ ಟಿವಿಗೆ ಹೇಳಿಕೆ ನೀಡಿರುವ ಶ್ರೀಗಳು, ಮಠಾಧೀಶರ ಪೇಟದ ಬಗ್ಗೆ ಪ್ರಶ್ನೆ ಹಾಕಿರುವುದನ್ನು ವಿರೋಧಿಸುತ್ತೇವೆ. ಮಠಾಧೀಶರ ಬಗ್ಗೆ ಅಸಹ್ಯ ಹಾಗೂ ಅಪಾಹಾಸ್ಯ ಮಾಡಿದ್ದು ಖಂಡನೀಯ. ಸ್ಚಾಮೀಜಿಗಳ ಪೇಟ ನಾಡನ್ನ ಕಾಪಾಡುವ ಶಸ್ತ್ರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಸತತ 3ನೇ ದಿನ ಪೆಟ್ರೋಲ್, ಡೀಸೆಲ್ ದರ ಏರಿಕೆ

    ಮಠಾಧೀಶರ ಮೇಲೆ ಕ್ಷುಲ್ಲಕ ವಿಷಯ ತಂದು ಪರಂಪರೆಗೆ ಧಕ್ಕೆ ತರುವ ಕಾರ್ಯ ಮಾಡಬಾರದು. ಅಪಹಾಸ್ಯವಾಗಿ ನುಡಿದಿರುವದನ್ನ ವಿರೋಧ ಮಾಡುತ್ತೇವೆ. ಎಲ್ಲ ಮಠಾಧೀಶರ ಒಕ್ಕೂಟ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಲು ಸಜ್ಜಾಗಿದ್ದೇವೆ. ವಿವಾದಕ್ಕೆ ತೆರೆ ಎಳೆಯಬೇಕಾದರೇ ತಕ್ಷಣವೇ ಸಿದ್ದರಾಮಯ್ಯ ನಾಡಿನ ಮಠಾಧೀಶರ ಕ್ಷಮೆ ಕೇಳಬೇಕು ಎಂದು ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ಹೊರಹಾಕಿದರು.

  • ಗೋಹತ್ಯೆ, ಗೋಮಾಂಸ ತಿನ್ನುವುದನ್ನು ನಿಲ್ಲಿಸುವವರೆಗೂ ಮುಸ್ಲಿಮರಿಗೆ ಆರ್ಥಿಕ ಬಹಿಷ್ಕಾರ: ಮುತಾಲಿಕ್

    ಗೋಹತ್ಯೆ, ಗೋಮಾಂಸ ತಿನ್ನುವುದನ್ನು ನಿಲ್ಲಿಸುವವರೆಗೂ ಮುಸ್ಲಿಮರಿಗೆ ಆರ್ಥಿಕ ಬಹಿಷ್ಕಾರ: ಮುತಾಲಿಕ್

    ಬೆಳಗಾವಿ: ಮುಸ್ಲಿಂ ವಿಸ್ತಾರವಾದ, ಪ್ರತ್ಯೇಕವಾದ ಹಿನ್ನೆಲೆ ಆರ್ಥಿಕ ಬಹಿಷ್ಕಾರ, ಮುಸ್ಲಿಮರ ಜೊತೆಗೆ ವ್ಯಾಪಾರ ವಹಿವಾಟು ಮಾಡಬಾರದು ಅನ್ನೋದು ಪ್ರಾರಂಭವಾಗಿದೆ. ಹೀಗಾಗಿ ಜಾತ್ರೆಯಲ್ಲಿ ಮುಸ್ಲಿಂ ಅಂಗಡಿಗಳು ನಡೆಯಬಾರದು ಅನ್ನೋದಕ್ಕೆ ಶ್ರೀರಾಮ ಸೇನೆ ಬೆಂಬಲ ವ್ಯಕ್ತಪಡಿಸಲಿದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದರು.

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತ್ರೆಯಲ್ಲಿ ಮುಸ್ಲಿಂ ಅಂಗಡಿ ನಡೆಯಬಾರದು ಅನ್ನೋದಕ್ಕೆ ಶ್ರೀರಾಮ ಸೇನೆಯ ಬೆಂಬಲವಿದೆ. ಮುಸ್ಲಿಂರ ಮಾನಸಿಕತೆ, ಕ್ರೌರ್ಯ ಮೊದಲಿನಿಂದಲೂ ಬಂದಿದೆ. ಇದನ್ನ ನಿಲ್ಲಿಸುವವರೆಗೂ ರೀತಿ ಪ್ರಕ್ರಿಯೆ ನಡೆಯುತ್ತಿರುತ್ತವೆ. ಮುಂದಿನ ದಿನಗಳಲ್ಲಿ ಮುಸ್ಲಿಂರ ಜೊತೆಗೆ ವ್ಯಾಪಾರ ವಹಿವಾಟು ನಡೆಸಬಾರದು ಅನ್ನೋ ಬಹಿಷ್ಕಾರ ಮಾಡಲಾಗುತ್ತದೆ. ಅದು ಗೋಹತ್ಯೆ, ಗೋಮಾಂಸ ತಿನ್ನುವುದನ್ನ ನಿಲ್ಲಿಸುವವರೆಗೂ ಈ ಬಹಿಷ್ಕಾರ ಮುಂದುವರೆಯಲಿದೆ ಎಂದರು. ಇದನ್ನೂ ಓದಿ: ಮಾನಸಿಕತೆ ತಿದ್ದಬೇಕಾದರೆ ಮುಸ್ಲಿಮರಿಗೆ ಆರ್ಥಿಕ ಬಹಿಷ್ಕಾರ ಹಾಕಿದ್ರೆ ಮಾತ್ರ ಸಾಧ್ಯ: ಮುತಾಲಿಕ್

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತ್ರೆಯಲ್ಲಿ ಮುಸ್ಲಿಂ ಅಂಗಡಿ ನಡೆಯಬಾರದು ಅನ್ನೋದಕ್ಕೆ ಶ್ರೀರಾಮ ಸೇನೆಯ ಬೆಂಬಲವಿದೆ. ಮುಸ್ಲಿಂರ ಮಾನಸಿಕತೆ, ಕ್ರೌರ್ಯ ಮೊದಲಿನಿಂದಲೂ ಬಂದಿದೆ. ಇದನ್ನ ನಿಲ್ಲಿಸುವವರೆಗೂ ರೀತಿ ಪ್ರಕ್ರಿಯೆ ನಡೆಯುತ್ತಿರುತ್ತವೆ. ಮುಂದಿನ ದಿನಗಳಲ್ಲಿ ಮುಸ್ಲಿಂರ ಜೊತೆಗೆ ವ್ಯಾಪಾರ ವಹಿವಾಟು ನಡೆಸಬಾರದು ಅನ್ನೋ ಬಹಿಷ್ಕಾರ ಮಾಡಲಾಗುತ್ತದೆ. ಅದು ಗೋಹತ್ಯೆ, ಗೋಮಾಂಸ ತಿನ್ನುವುದನ್ನ ನಿಲ್ಲಿಸುವವರೆಗೂ ಈ ಬಹಿಷ್ಕಾರ ಮುಂದುವರೆಯಲಿದೆ ಎಂದರು.

    ಬೆಳಗ್ಗೆ ಐದು ಗಂಟೆಗೆ ಆಜಾನ್ ಕೂಗುವುದನ್ನ ನಿಲ್ಲಿಸಬೇಕು. ಇಡೀ ರಾಜ್ಯಾದ್ಯಂತ ಆರ್ಥಿಕ ಬಹಿಷ್ಕಾರ ಹಾಕಲು ಶ್ರೀರಾಮ ಸೇನೆ ಆಂದೋಲನವಾಗಿದೆ. ಆಕ್ಷನ್‍ಗೆ ರಿಯಾಕ್ಷನ್ ನಾವು ಕೊಡುತ್ತಿದ್ದೇವೆ. ಬಹುಸಂಖ್ಯಾತ ಹಿಂದೂ ಸಮಾಜದ ಗೌರವ ಕಾಣುವ ಪ್ರಕ್ರಿಯೆ ಆಗಬೇಕು. ನಮ್ಮ ದೇವರನ್ನು ಒಪ್ಪದ ನೀವು ನಮ್ಮ ಜಾತ್ರೆಯಲ್ಲಿ ಯಾಕೆ ಬರುತ್ತೀರಿ. ಈ ದೇಶದ ಕಾನೂನು, ಸಂವಿಧಾನ, ಪೆÇಲೀಸ್ ನಿಯಮ ಪಾಲಿಸುವವರೆಗೂ ಬಹಿಷ್ಕಾರ ಮುಂದುವರೆಸುತ್ತೇವೆ ಎಂದು ಆಗ್ರಹಿಸಿದರು. ಇದನ್ನೂ ಓದಿ: ಕೆಪಿಎಸ್‍ಸಿಗೆ ಹೊಸ ರೂಪ ಕೊಡ್ತೀವಿ: ಬೊಮ್ಮಾಯಿ