ಚಿಕ್ಕೋಡಿ: ಹೆಣ್ಣು ಮಗುವಿನ ಭವಿಷ್ಯಕ್ಕೆ ಸುಕನ್ಯಾ ಸಮೃದ್ಧಿ ಯೋಜನೆ ಭದ್ರತೆಯಾಗಿದೆ ಎಂದು ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಮತಕ್ಷೇತ್ರದ ಭೋಜ ಗ್ರಾಮದಲ್ಲಿ ಸರ್ಕಾರದ ವತಿಯಿಂದ 700 ಫಲಾನುಭವಿಗಳಿಗೆ ಸುಕನ್ಯಾ ಸಮೃದ್ಧಿ ಪಾಸ್‍ಬುಕ್‍ಗಳನ್ನು ವಿತರಿಸಿದರು. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮನೆಯ ಭಾಗ್ಯಲಕ್ಷ್ಮಿಯಾಗಿರುವ ಹೆಣ್ಣು ಸಮಾಜದ ಕಣ್ಣು. ಅವರ ಆರೋಗ್ಯ ಕಾಪಾಡುವುದು, ಶಿಕ್ಷಣ, ಪ್ರತಿಭೆಗೆ ಪೆÇ್ರೀತ್ಸಾಹ ನೀಡುವುದು ನಮ್ಮ ಜವಾಬ್ದಾರಿ ಎಂದು ತಿಳಿಸಿದರು.
ಈ ನಿಟ್ಟಿನಲ್ಲಿ ಹೆಣ್ಣು ಮಕ್ಕಳ ಶ್ರೇಯೋಭಿವೃದ್ಧಿಗಾಗಿ ನಮ್ಮ ಸೇವೆ ಸದಾ ಅವಿರತವಾಗಿರುತ್ತದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಮಹಿಳೆಯ ಸ್ವಾವಲಂಬನೆಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಸರ್ಕಾರದ ಯೋಜನೆಗಳ ಲಾಭವನ್ನು ಮಹಿಳೆಯರು ಪಡೆಯುವಂತೆ ಈ ಸಂದರ್ಭದಲ್ಲಿ ಕರೆ ನೀಡಿದರು. ಇದನ್ನೂ ಓದಿ: ಯುದ್ಧ ವಿರೋಧಿ ರಷ್ಯನ್ನರ ಬಂಧನ- ಪುಟಿನ್ ರಷ್ಯಾದವನಲ್ಲ ಎಂದ ನಾವೆಲ್ನಿ
ಈ ಸಂದರ್ಭದಲ್ಲಿ ಸಿಡಿಪಿಓ, ಸುಮಿತ್ರಾ.ಡಿ.ಬಿ, ಸ್ಥಳೀಯ ಮುಖಂಡರು, ಗಣ್ಯರು, ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಳಗಾವಿ: ಮನೆ ಬೆಳಗುವ ಹೆಣ್ಣು ಮಕ್ಕಳಿಗೆ ಬಿಜೆಪಿ ಪಕ್ಷ ಮಹಿಳಾ ಮೋರ್ಚಾ ಎಂಬ ಉತ್ತಮ ವೇದಿಕೆ ಒದಗಿಸಿಕೊಟ್ಟಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಜಾರಿಗೆ ತಂದಿರುವ ಸುಕನ್ಯಾ ಸಮೃದ್ಧಿ ಯೋಜನೆ, ಬೇಟಿ ಬಚಾವೋ-ಬೇಟಿ ಪಡಾವೋ ಹೀಗೆ ಹಲವು ಯೋಜನೆಗಳು ಬಡ ಹೆಣ್ಣು ಮಕ್ಕಳ ಬಾಳಿಗೆ ಬೆಳಕಾಗುತ್ತಿವೆ ಎಂದು ಮುಜರಾಯಿ, ಹಜ್ ಹಾಗೂ ವಕ್ಫ್ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಜಿಲ್ಲೆಯ ನಿಪ್ಪಾಣಿ ಮತಕ್ಷೇತ್ರದ ಆಡಿ ಗ್ರಾಮದಲ್ಲಿ ಬಿಜೆಪಿ ನಿಪ್ಪಾಣಿ ಮಂಡಲ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಶಶಿಕಲಾ ಜೊಲ್ಲೆ ಹೆಣ್ಣು ಮಕ್ಕಳ ಶ್ರೇಯೋಭಿವೃದ್ಧಿ ಜತೆಗೆ ಸರ್ಕಾರದ ಎಲ್ಲಾ ಜನಪರ ಯೋಜನೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಕೆಲಸಕ್ಕೆ ನಮ್ಮೊಂದಿಗೆ ಕೈಜೋಡಿಸಬೇಕು ಎಂದು ಕಾರ್ಯಕರ್ತೆಯರಿಗೆ ಸಂದೇಶ ರವಾನಿಸಿದರು. ಹಾಗೂ ನಿಪ್ಪಾಣಿ ಮಹಿಳಾ ಮೋರ್ಚಾ ಸದಸ್ಯರು ಈಗಾಗಲೇ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಅವರಿಗೆ ಅಭಿನಂದನೆ ತಿಳಿಸಿದರು. ಇದನ್ನೂ ಓದಿ: ಚೇತನ್ ಅಹಿಂಸಾ ಬಿಡುಗಡೆ – ಖುಷ್ ಆದ ಅಭಿಮಾನಿಗಳು
ಸಭೆಯಲ್ಲಿ ಬಿಜೆಪಿ ಮಹಿಳಾ ಮೋರ್ಚ ರಾಜ್ಯ ಪ್ರಧಾನ ಕಾರ್ಯದರ್ಶಿ ಜ್ಯೋತಿ ಚಿಂಚಲಿಕರ, ಬಿಜೆಪಿ ಚಿಕ್ಕೋಡಿ ಜಿಲ್ಲಾ ಪ್ರಭಾರಿ ವಿಜಯಲಕ್ಷ್ಮೀ ಉತಮನಳ್ಳಿ, ಬಿಜೆಪಿ ಚಿಕ್ಕೋಡಿ ಜಿಲ್ಲಾ ಸಹಪ್ರಭಾರಿ ವಿಜಯಲಕ್ಷ್ಮೀ ಅಮಿದಬಾನಿ, ಮಹಿಳಾ ಮೋರ್ಚಾ ಅಧ್ಯಕ್ಷ ಶಾಂಭವಿ ಅಶ್ವತಪೂರ, ವಿಭಾವರಿ ಖಾಂಡಕೆ, ಸರೋಜಿನಿ ಜಮದಾಡೆ, ಮಹಿಳಾ ಮೋರ್ಚಾ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು, ಕಾರ್ಯದರ್ಶಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು. ಇದನ್ನೂ ಓದಿ: ಸಾವು ನೋವುಗಳಿಗೆ ಮುಕ್ತಿ ನೀಡಿದ್ದಾರೆ ಗಡ್ಕರಿ: ಸಿಎಂ
ಚಿಕ್ಕೋಡಿ: ಯುವಕನೊಬ್ಬ ಕೇವಲ 7 ಗಂಟೆಯಲ್ಲಿ 02 ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಸುಮಾರು 28 ಟನ್ ಕಬ್ಬು ಹೇರಿದ್ದಾನೆ. ಈತನ ಸಾಧನೆ ಕಂಡು ಚಿಕ್ಕೋಡಿ ಜನರು ಹುಬ್ಬೇರಿಸಿದ್ದಾರೆ.
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಬರಮಖೋಡಿ ಗ್ರಾಮದ ಅನಿಲ್ ಕಾಬು ಜಾಧವ್ ಸಾಧನೆ ಮಾಡಿದ ಯುವಕ. ಆತನೊಬ್ಬನೇ ಕೇವಲ 7 ಗಂಟೆಯಲ್ಲಿ 02 ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಸುಮಾರು 28 ಟನ್ ಕಬ್ಬು ಹೇರಿ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾನೆ. ಈ ಹಿಂದೆ ಇದೇ ಬರಮಖೋಡಿ ಗ್ರಾಮದ ಮತ್ತೊಂದು ಕಬ್ಬಿನ ಗ್ಯಾಂಗಿನ ಯುವಕ ಇಷ್ಟೇ ಕಬ್ಬನ್ನು ಎರಡು ಟ್ರಾಲಿಗೆ ತುಂಬಿಸಲು ಸುಮಾರು 9 ಗಂಟೆ 30 ನಿಮಿಷ ಸಮಯ ತಗೊಂಡಿದ್ದನು. ಇದನ್ನೂ ಓದಿ: ಭಾರತೀಯರನ್ನು ತಾಯ್ನಾಡಿಗೆ ತರುವ ಪ್ರಾಮಾಣಿಕ ಪ್ರಯತ್ನವನ್ನು ಮೋದಿ ಸರ್ಕಾರ ಮಾಡುತ್ತಿದೆ: ಖೂಬಾ
ಇದೀಗ ಜಾಧವ ಗ್ಯಾಂಗಿನ ಅನಿಲ್ ಎರಡು ಡಬ್ಬಿಯಲ್ಲಿ ಸುಮಾರು 28 ಟನ್ ಕಬ್ಬನ್ನು 7 ತಾಸಿನಲ್ಲಿ ಹೇರಿ ದಾಖಲೆ ನಿರ್ಮಿಸಿದ್ದಾನೆ. ಈ ಮೂಲಕ ಹಳೆಯ ದಾಖಲೆಯನ್ನು ಮುರಿದಿದ್ದಾನೆ ಎಂದು ಅಲ್ಲಿದ್ದ ಕಾರ್ಮಿಕರು ಚಪ್ಪಾಳೆ ತಟ್ಟಿ ಅಭಿನಂದಿಸಿದ್ದಾರೆ.
ಈ ಕುತಿತು ಪ್ರತಿಕ್ರಿಯಿಸಿದ ಅನಿಲ್, ಸಾಧನೆ ಮಾಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದು, ಇನ್ನೂ ಹೆಚ್ಚಿನ ಸಾಧನೆ ಮಾಡುವ ವಿಶ್ವಾಸವನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾನೆ.
ಬೆಳಗಾವಿ: ಜಿಲ್ಲೆಯ ನಿಪ್ಪಾಣಿ ನಗರದ ಹೊರವಲಯದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರನ್ನು ಬಂಧಿಸಿದ್ದಾರೆ.
ಸಂಜಯ ಭೈರಪ್ಪ ಮಾಳಿ, ಅರುಣ್ ಜೈಪಾಲ ಶೇಕಣ್ಣವರ್, ಖಂಡೋಬಾ ಚವ್ಹಾಣ ಬಂಧಿತ ಆರೋಪಿಗಳು. ಖಚಿತ ಮಾಹಿತಿ ಮೇರೆಗೆ ನಿಪ್ಪಾಣಿ ಸಿಪಿಐ ಸಂಗಮೇಶ ಶಿವಯೋಗಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿ 5 ಜನ ಮಹಿಳೆಯರನ್ನ ಮಹಿಳಾ ಸಾಂತ್ವಾನ ಕೇಂದ್ರಕ್ಕೆ ರವಾನಿಸಲಾಗಿದೆ. ಇದನ್ನೂ ಓದಿ: ಮಾಲೀಕ ಯುದ್ಧಕ್ಕೆ ಹೋಗಿದ್ದಾರೆ, ಅವರ ಮಕ್ಕಳನ್ನು ಬಿಟ್ಟು ನಾನು ಬರಲ್ಲ ಎಂದ ವಿದ್ಯಾರ್ಥಿನಿ!
ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾರ್ಯಾಚರಣೆಯಲ್ಲಿ ನಗರ ಠಾಣೆಯ ಸಬ್ ಇನ್ಸ್ ಪೆಕ್ಟರ್ ಕೃಷ್ಣವೇಣಿ ಗುರ್ಲಹೊಸೂರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ ಫೈಜಾ, ನಾವು ರೊಮೇನಿಯಾ ಗಡಿಗೆ ಬಂದು ಅಲ್ಲಿಂದ 12 ಗಂಟೆ ಪ್ರಯಾಣ ಮಾಡಿ ಏರ್‍ಪೆÇೀರ್ಟ್ ತಲುಪಿದ್ವಿ. ನಾವು ಉಕ್ರೇನ್ ಪಶ್ಚಿಮ ಭಾಗದಲ್ಲಿ ಇದ್ವಿ. ಅಲ್ಲಿ ಅಷ್ಟೊಂದು ತೊಂದರೆ ಇರಲಿಲ್ಲ. ನಮ್ಮ ಭಾರತ ಸರ್ಕಾರದ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ಸಂತೋಷ ವ್ಯಕ್ತಪಡಿಸಿದರು.
ನಾವು ವಾಪಾಸ್ ಆಗಿರುವುದು ಬಹಳ ಸಂತೋಷ ಆಗ್ತಿದೆ. ಇದಕ್ಕೆ ಕಾರಣವಾದ ಪ್ರಧಾನಿ ಮೋದಿ ಅವರಿಗೂ ಧನ್ಯವಾದ ತಿಳಿಸುತ್ತೇನೆ. ಯುದ್ದ ಆರಂಭವಾದಾಗ ನಮಗೆ ಬಹಳ ಭಯ ಅನಿಸಿತ್ತು. ನಾನು ವೆಸ್ಟರ್ನ್ ಉಕ್ರೇನ್‍ದಲ್ಲಿದ್ದೆ. ಅಲ್ಲಿ ಯುದ್ಧದ ಭೀತಿ ಇರಲಿಲ್ಲ. ಏಕಾಏಕಿ ಯುದ್ದ ಆರಂಭವಾಗಿದನ್ನು ಕೇಳಿ ಶಾಕ್ ಆಯ್ತು. ಬೆಳಂಬೆಳಗ್ಗೆ ಐದು ಗಂಟೆಗೆ ಯುದ್ಧ ಆರಂಭವಾದ ಸುದ್ದಿ ತಿಳಿಯಿತು. ಯಾರು ಕೂಡ ರಷ್ಯಾ ಯುದ್ಧ ಮಾಡುತ್ತೆ ಎಂದು ಊಹೆಯನ್ನೂ ಸಹ ಮಾಡಿಕೊಂಡಿರಲಿಲ್ಲ ಎಂದು ತಮ್ಮ ಅನುಭವವನ್ನು ಹಂಚಿಕೊಂಡರು.
ಮೊದಲ ವಿಮಾನದಲ್ಲಿ ನಾನು ವಾಪಸ್ ಬಂದಿದ್ದಕ್ಕೆ ಬಹಳ ಖುಷಿಯಾಗ್ತಿದೆ. ನಮ್ಮ ವಿಮಾನದಲ್ಲಿ ಹದಿನೈದು ಜನ ವಿದ್ಯಾರ್ಥಿಗಳು ವಾಪಸ್ ಬಂದ್ರು. ಮುಂಬೈನಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ನಮ್ಮನ್ನು ಸ್ವಾಗತಿಸಿದ್ರು. ಖಾರ್ಕೀವ್‍ನಲ್ಲಿ ಪರಿಸ್ಥಿತಿ ಬಹಳ ಗಂಭೀರವಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಅಗೌರವದಿಂದ ನೋವಾಗಿದೆ: ಬಿಜೆಪಿ ಸೇರ್ಪಡೆಯಾದ ಗುಲಾಂ ನಬಿ ಸೋದರಳಿಯ
ಖಾರ್ಕೀವ್, ಕೀವ್‍ನಲ್ಲಿದ್ದ ವಿದ್ಯಾರ್ಥಿಗಳನ್ನು ಆದಷ್ಟು ಬೇಗ ಕರೆಯಸಿಕೊಳ್ಳಬೇಕು. ಎಟಿಎಂಗಳಲ್ಲಿ ಹಣ ಸಿಗುತ್ತಿಲ್ಲ, ಊಟಕ್ಕೂ ಅವರಿಗೆ ತುಂಬಾ ತೊಂದರೆ ಆಗ್ತಿದೆ. ಹೀಗಾಗಿ ನನ್ನಂತೆ ಅವರನ್ನು ಸುರಕ್ಷಿತವಾಗಿ ಮರಳಿ ದೇಶಕ್ಕೆ ಬರಬೇಕು ಎಂದು ಕೋರಿಕೊಂಡರು.
ಬೆಳಗಾವಿ: ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ನೋಡಲ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮಾಹಿತಿ ಕೊಟ್ಟರು.
ಉಕ್ರೇನ್‍ನಲ್ಲಿ ಸಿಕ್ಕಿಕೊಂಡಿರುವ ವಿದ್ಯಾರ್ಥಿಗಳ ಕುರಿತು ಮಾತನಾಡಿದ ಅವರು, ಉಕ್ರೇನ್ ನಲ್ಲಿ ಬೆಳಗಾವಿ ಜಿಲ್ಲೆಯ 7 ವಿದ್ಯಾರ್ಥಿಗಳಿದ್ದಾರೆ. ರಾಜ್ಯದ 125ಕ್ಕೂ ಹೆಚ್ಚು ಜನ ಉಕ್ರೇನ್ ನಲ್ಲಿ ಇದ್ದಾರೆ. ದೇಶದ 20 ಸಾವಿರ ಜನ ಉಕ್ರೇನ್‍ನಲ್ಲಿ ಸಿಲುಕಿದ್ದಾರೆ. ಅವರನ್ನು ಸುರಕ್ಷಿತವಾಗಿ ಇಲ್ಲಿ ಕರೆತಲಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ರಕ್ಷಣೆಗೆ ರಾಜ್ಯ ಸರ್ಕಾರದಿಂದ ವೆಬ್ ಪೋರ್ಟಲ್ ಪ್ರಾರಂಭ
ಯುದ್ಧ ನಿಲ್ಲಿಸಲು ಮೋದಿಯಿಂದ ರಷ್ಯಾದ ಪ್ರಧಾನಿಗೆ ಮನವಿ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ನೋಡಲ್ ಅಧಿಕಾರಿಯನ್ನು ಸಹ ನೇಮಕ ಮಾಡಲಾಗಿದೆ. ಸುರಕ್ಷಿತವಾಗಿ ಭಾರತೀಯರನ್ನು ಕರೆ ತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ವಿವರಿಸಿದರು.
ಚುನಾವಣೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ಬಾರಿಯೂ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತೆ. ಇವತ್ತೆ ನನ್ನ ಹೆಸರು ಬರೆದಿಟ್ಟುಕೊಳ್ಳಿ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಬರುತ್ತೆ. 2024ಕ್ಕೆ ಮೋದಿ ಸರ್ಕಾರ ಅಧಿಕಾರಕ್ಕೆ ಬರುತ್ತೆ. ಕಾಂಗ್ರೆಸ್ ಮುಗಿದು ಹೋದ ಪಕ್ಷ, ಅಲ್ಲೊಂದು ಇಲ್ಲೊಂದು ಕಾಂಗ್ರೆಸ್ ಪುಡಾರಿಗಳಿದ್ದಾರೆ. ಹಾಳಾದ ಊರಿಗೆ ಉಳಿದವನೇ ಗೌಡ ಅಂತಾ ಉತ್ತರ ಕರ್ನಾಟಕದಲ್ಲಿ ನಾಣ್ಣುಡಿ ಇದೆ. ಅದೇ ಪರಿಸ್ಥಿತಿಯಲ್ಲಿ ಕಾಂಗ್ರೆಸ್‍ಗೆ ಇದೆ ಎಂದು ಆಕ್ರೋಶ ಹೊರಹಾಕಿದರು.
ಅರವಿಂದ್ ಪಾಟೀಲ್ ಬಿಜೆಪಿ ಸೇರ್ಪಡೆಗೆ ವಿರೋಧ ಕುರಿತು ಮಾತನಾಡಿದ ಅವರು, ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ ನಿನ್ನೆ ಸೇರ್ಪಡೆಯಾಗಿದ್ದಾರೆ. ಬಿಜೆಪಿಗೆ ಯಾರೇ ಸೇರ್ಪಡೆಯಾದರೂ ಆಶ್ವಾಸನೆ ಕೊಡಲ್ಲ. ಬಿಜೆಪಿ ನಿಂತ ನೀರಲ್ಲ, ಹರಿಯುವ ನೀರು, ಯಾರೂ ಬಂದರೂ ಸ್ವಾಗತ ಮಾಡಿದ್ದೇವೆ. ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆ ವಿಚಾರವಾಗಿ ಮಾತನಾಡಿದ ಅವರು, ಹೊರಟ್ಟಿ ನಮ್ಮ ಊರಿನವರೇ ನಮ್ಮ ಆತ್ಮೀಯರು. ಅವರು ಬರ್ತೀವಿ ಅಂತಾನೂ ಹೇಳಿಲ್ಲ. ಇಲ್ಲ ಅಂತಾನೂ ಹೇಳಿಲ್ಲ. ಅವರು ಬಂದ್ರೆ ಸ್ವಾಗತ ಮಾಡ್ತೀವಿ ಎಂದು ತಿಳಿಸಿದರು. ಇದನ್ನೂ ಓದಿ: ರಷ್ಯಾ ದಾಳಿಯಿಂದ ರಕ್ಷಿಸಿಕೊಳ್ಳಲು ಭೂಗತ ಹ್ಯಾಕರ್‌ಗೆ ಉಕ್ರೇನ್ ಕರೆ!
ಬೆಳಗಾವಿ ಕೆಡಿಪಿ ಸಭೆಯಲ್ಲಿ ಮೂವರು ಕಂದಮ್ಮಗಳ ಸಾವು ಪ್ರಕರಣ ಪ್ರಸ್ತಾಪವಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬೋಚಬಾಳ, ಮಲ್ಲಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಇದರಿಂದ ತುಂಬಾ ನೋವಾಗಿದೆ. ಈ ಕುರಿತು ಮೂರು ದಿನಗಳಲ್ಲಿ ಪ್ರಕರಣದ ಸಮರ್ಪಕ ವರದಿ ನೀಡಬೇಕು. ಇಲ್ಲವಾದರೆ ನಾಲ್ಕನೇ ದಿನಕ್ಕೆ ಕೆಲಸ ಬಿಡಿ ಎಂದು ಖಡಕ್ ಎಚ್ಚರಿಕೆ ಕೊಟ್ಟರು.
ಬೆಳಗಾವಿ: ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯ ವಿವಿಧ ಕಾಮಗಾರಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಪರಿಶೀಲಿಸಿ, ಡಿಸೆಂಬರ್ ಅಂತ್ಯದ ವೇಳೆಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.
ನಗರದ ಸಿಬಿಟಿ ಕಾಮಗಾರಿ, ವಿವಿಧ ರಸ್ತೆಗಳು, ಇಂಟಿಗ್ರೇಟೆಡ್ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್, ಟಿಳಕವಾಡಿಯ ಕಲಾಮಂದಿರ ಮತ್ತಿತರ ಕಾಮಗಾರಿಗಳನ್ನು ಕಾರಜೋಳ ವೀಕ್ಷಿಸಿದ್ದಾರೆ. ಈ ಸಂದರ್ಭದಲ್ಲಿ ಸಿಬಿಟಿ 2018ರಲ್ಲಿ ಕಾಮಗಾರಿ ಆರಂಭವಾಗಿದೆ. ರಕ್ಷಣಾ ಇಲಾಖೆಯ ಜಾಗೆ ಇರುವುದರಿಂದ ಎನ್‍ಓಸಿ ಸಿಗದೇ ಒಂದು ವರ್ಷ ಕಾಮಗಾರಿ ವಿಳಂಬವಾಯಿತು. ಉದ್ದೇಶಿತ ನೂತನ ಸಿಬಿಟಿಯಲ್ಲಿ 28 ಬಸ್ ಪಾಕಿರ್ಂಗ್ ಫ್ಲ್ಯಾಟ್ ಫಾರ್ಮ್, ಎಲ್ಲ ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಸಾರಿಗೆ ಸಂಸ್ಥೆಗೆ ವಾಣಿಜ್ಯ ಸಂಕೀರ್ಣ, ರೆಸ್ಟೋರೆಂಟ್ ಮತ್ತಿತರ ಸೌಲಭ್ಯ ಒದಗಿಸಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು.
ಸ್ಮಾರ್ಟ್ ಸಿಟಿ ಕಮಾಂಡ್ ಸೆಂಟರ್ ವೀಕ್ಷಣೆ:
ಸಚಿವ ಗೋವಿಂದ ಕಾರಜೋಳ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಲಾಗಿರುವ ಇಂಟಿಗ್ರೇಟೆಡ್ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್‍ಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದುಕೊಂಡರು. 46ಕೋಟಿ ವೆಚ್ಚದಲ್ಲಿ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ನಿರ್ಮಿಸಲಾಗಿದೆ. ಬಸ್, ಆ್ಯಂಬ್ಯುಲೆನ್ಸ್ ಹಾಗೂ ತುರ್ತು ಸೇವೆಗೆ ವಾಹನಗಳ ಮೇಲೆ ನಿಗಾ ವಹಿಸಲಾಗುತ್ತದೆ ಎಂದು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಡಾ. ಪ್ರವೀಣ ಬಾಗೇವಾಡಿ ತಿಳಿಸಿದರು. ಇದನ್ನೂ ಓದಿ: ಮೊಬೈಲ್ ಟವರ್‌ಗಳಿಂದ ಅಪಾಯಕಾರಿ ವಿಕಿರಣ ಹೊರಹೊಮುತ್ತದೆ ಎನ್ನುವುದು ತಪ್ಪು ಕಲ್ಪನೆ: ರಾಕೇಶ್ ಕುಮಾರ್ ದುಬೇ
67 ನಗರ ಸಾರಿಗೆ ಬಸ್‍ಗಳಿಗೆ ಜಿಪಿಎಸ್, ಹತ್ತು ಬಸ್ ಶೆಲ್ಟರ್‍ಗಳಲ್ಲಿ ಕ್ಯಾಮೆರಾ, ನಗರದ ಸ್ಮಾರ್ಟ್ ಬಸ್ ಶೆಲ್ಟರ್‍ಗಳಲ್ಲಿ ಮಾಹಿತಿ ಫಲಕ ಅಳವಡಿಸಲಾಗಿದೆ. ಕಸ ಹಾಕುವವರ ಮೇಲೆ ನಿಗಾ ವಹಿಸಲು 20 ಸ್ಥಳಗಳಲ್ಲಿ ಕ್ಯಾಮೆರಾ ಅಳವಡಿಸಲಾಗಿದೆ. ಒಂಬತ್ತು ಸ್ಥಳಗಳಲ್ಲಿ ಸ್ಮಾರ್ಟ್ ಪೋಲ್ ಅಳವಡಿಸಲಾಗಿದೆ. 360 ಡಿಗ್ರಿ ಕ್ಯಾಮೆರಾ ರೊಟೇಟ್ ಆಗುತ್ತದೆ. ತುರ್ತು ಸಂದರ್ಭದಲ್ಲಿ ತಕ್ಷಣವೇ ಸಂಬಂಧಿಸಿದ ವರಿಗೆ ಮಾಹಿತಿಯನ್ನು ನೀಡಲಾಗುತ್ತದೆ ಎಂದು ಮಾಹಿತಿಯನ್ನು ನೀಡಿದರು.
ಡಿಸೆಂಬರ್‍ಗೆ ಪೂರ್ಣ:
ಇದೇ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಸಚಿವ ಗೋವಿಂದ ಕಾರಜೋಳ ಎರಡು ವರ್ಷಗಳಿಂದ ಕೋವಿಡ್ ಹಾಗೂ ಅತಿಯಾದ ಮಳೆಯಿಂದ ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬವಾಗಿವೆ. ಡಿಸೆಂಬರ್ ಅಂತ್ಯದ ವೇಳೆಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಟಿಳಕವಾಡಿಯಲ್ಲಿ 43.62 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕಲಾಮಂದಿರ ಕಾಮಗಾರಿಯನ್ನು ವೀಕ್ಷಿಸಿದರು. ಕಾಮಗಾರಿ ಒಂದು ವರ್ಷ ವಿಳಂಬವಾಗಿದೆ. ಯೋಜನೆಯ ಸ್ವಲ್ಪ ಜಾಗೆಗೆ ಸಂಬಂಧಿಸಿದಂತೆ ಇರುವ ಕಾನೂನು ತೊಡಕು ನಿವಾರಿಸಿಕೊಂಡು ಮುಂದಿನ ಡಿಸೆಂಬರ್ ವೇಳೆಗೆ ಕಾಮಗಾರಿ ಪೂರ್ಣಗೊಳಿಸುವಂತೆ ಸಚಿವ ಗೋವಿಂದ ಕಾರಜೋಳ ಸೂಚನೆ ನೀಡಿದರು. ಇದನ್ನೂ ಓದಿ: ಉಕ್ರೇನಲ್ಲಿರುವ ವಿದ್ಯಾರ್ಥಿಗಳನ್ನು ದೇಶಕ್ಕೆ ಕರೆತರಲು ಸರ್ವಪ್ರಯತ್ನ: ಕಾರಜೋಳ
ಕಾಮಗಾರಿ ಪೂರ್ಣಗೊಂಡ ಬಳಿಕ ಇದರಿಂದ ಬರುವ ಆದಾಯದಲ್ಲಿ ಐದು ವರ್ಷಗಳಲ್ಲಿ ಯೋಜನಾ ವೆಚ್ಚ ಮರಳಿ ಬರಲಿದೆ. ಆದ್ದರಿಂದ ಆದಷ್ಟು ಬೇಗನೆ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ತಿಳಿಸಿದರು. ಕಲಾಮಂದಿರದ ವೈಶಿಷ್ಟ್ಯಗಳನ್ನು ಶಾಸಕ ಅಭಯ್ ಪಾಟೀಲ ಅವರು ಸಚಿವರಿಗೆ ವಿವರಿಸಿದರು.
ಬೆಳಗಾವಿ: ಉಕ್ರೇನಿನಲ್ಲಿರುವ ವಿದ್ಯಾರ್ಥಿಗಳನ್ನು ದೇಶಕ್ಕೆ ಕರೆತರಲು ಸರ್ವಪ್ರಯತ್ನ ಮಾಡಲಾಗುತ್ತಿದೆ ಎಂದು ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಕ್ರೇನ್‍ನಲ್ಲಿರುವ ವಿದ್ಯಾರ್ಥಿಗಳನ್ನ ಸುರಕ್ಷಿತವಾಗಿ ಕರೆಸುವ ಪ್ರಯತ್ನ ಸರ್ಕಾರ ಮಾಡ್ತಿದೆ. ಬೆಳಗಾವಿ ಇಬ್ಬರು, ವಿಜಯಪುರದ ಒಬ್ಬ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಸಿಲುಕಿದ್ದಾರೆ. ಸರ್ಕಾರ ಹೆಚ್ಚಿನ ಪ್ರಯತ್ನ ಮಾಡಿ ವಿದ್ಯಾರ್ಥಿಗಳನ್ನ ಮರಳಿ ಸುರಕ್ಷಿತವಾಗಿ ಕರೆತಲಾಗುತ್ತದೆ ಎಂದರು. ಇದನ್ನೂ ಓದಿ: ಉಕ್ರೇನ್‍ನಲ್ಲಿ ಸಿಲುಕಿದ್ದಾರೆ 10 ಮಂದಿ ಕರ್ನಾಟಕ ವಿದ್ಯಾರ್ಥಿಗಳು!
ಉಕ್ರೇನ್ ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಬಗ್ಗೆ ಸಿಎಂ ಬೊಮ್ಮಾಯಿ ಗಮನಕ್ಕೆ ತರಲಾಗಿದೆ. ಈಗಾಗಲೇ ಎಲ್ಲ ಜಿಲ್ಲಾಧಿಕಾರಿ ಸೂಚನೆ ಕೊಡಲಾಗಿದ್ದು, ವಿದ್ಯಾರ್ಥಿಗಳ ನೆರವಿಗೆ ಧಾವಿಸುವಂತೆ ತಿಳಿಸಲಾಗಿದೆ. ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ವಿದ್ಯಾರ್ಥಿಗಳು ಪೋಷಕರ ಜೊತೆಗೆ ಸಂಪರ್ಕದಲ್ಲಿ ಇದ್ದಾರೆ. ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ ಎಂದು ಮಾಹಿತಿ ನೀಡಿದರು.
ಬೆಳಗಾವಿ: ಜಿಲ್ಲೆಯಲ್ಲಿ ನೆರೆ ಸಂಭವಿಸಿ 30 ತಿಂಗಳು ಕಳೆದಿವೆ. ಇಲ್ಲಿಯವರೆಗೂ ಪರಿಹಾರ ನೀಡದ ಅಧಿಕಾರಿಗಳ ವಿರುದ್ಧ ನೆರೆ ಸಂತ್ರಸ್ತರು ಆಕ್ರೋಶಗೊಂಡು ಪ್ರತಿಭಟನೆ ನಡೆಸಿದ್ದಾರೆ.
ಪರಿಹಾರ ನೀಡದ ಅಧಿಕಾರಿಗಳು ಪರಿಹಾರದ ಆದೇಶ ನೀಡಿ ಇಲ್ಲವೇ ಸಾಯಲು ವಿಷ ನೀಡಿ ಎಂದು ನೂರಾರು ನೆರೆ ಸಂತ್ರಸ್ತರು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ನೇತೃತ್ವದಲ್ಲಿ ಜಿಲ್ಲಾ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಹೀಗೆ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ.
2019ರಲ್ಲಿ ಘಟಪ್ರಭಾ ನದಿಯ ಪ್ರವಾಹದಿಂದ ಗೋಕಾಕ್ ತಾಲೂಕಿನ ಅಡಿಬಟ್ಟಿ, ಚಿಗಡೊಳ್ಳಿ, ಮೆಳವಂಕಿ, ಕಲಾರಕೊಪ್ಪ, ಹಡಗಿನಾಳ, ಉದಗಟ್ಟಿ, ಲೋಳಸೂರ, ನಲ್ಲಾನಟ್ಟಿ, ಬಸಳೀಗುಂದಿ, ಬಳೋಬಾಳ, ಬೀರನಗಡ್ಡಿ, ತಳಕಟ್ನಾಳ ಹಾಗೂ ಮೂಡಲಗಿ ತಾಲೂಕಿನ ಹುಣಶ್ಯಾಳ ಪಿ.ಜಿ, ಪುಲಗಡ್ಡಿ, ತಿಗಡಿ, ರಂಗಾಪುರ, ಹುಣಶ್ಯಾಳ ಪಿ.ವಾಯ್, ಡವಳೇಶ್ವರ, ಅರಳಿಮಟ್ಟಿ, ಅವರಾದಿ ಸೇರಿದಂತೆ ಇತರ ಗ್ರಾಮಗಳು ಸಂಪೂರ್ಣ ಜಲಾವೃತಗೊಂಡಿದ್ದವು. ಪ್ರವಾಹದಲ್ಲಿ ಗ್ರಾಮಗಳಲ್ಲಿನ ಹಲವು ಮನೆಗಳಿಗೆ ಹಾನಿಯಾಗಿದ್ದವು. ಇದನ್ನೂ ಓದಿ: ಪಲಾವ್ ತಿಂದು ಏರ್ ಕಂಡೀಷನ್ ಹಾಕಿ ಧರಣಿ ಮಾಡೋದಲ್ಲ: ವಿಶ್ವನಾಥ್
ನೆರೆ ಪರಿಹಾರ ವಿತರಣೆಯಲ್ಲಿ ಭ್ರಷ್ಟಾಚಾರ ನಡೆದಿದೆ. ಭ್ರಷ್ಟಾಚಾರ ಕುರಿತು ಸಮಗ್ರ ತನಿಖೆ ನಡೆಸಬೇಕು. ಮನೆ ಪರಿಹಾರದ ಆದೇಶವನ್ನು ತಕ್ಷಣ ನೀಡಬೇಕು. ನೆರೆ ಪರಿಹಾರ ಮಜೂರಾದ ಮನೆಗಳಿಗೆ ಸಮಯಕ್ಕೆ ಸರಿಯಾಗಿ ಪರಿಹಾರ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಬೆಳಗಾವಿ: ಖಾನಾಪುರ ತಾಲೂಕಿನ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲನ್ನು ಧರಿಸಿ ತರಗತಿಗೆ ಹಾಜರಾಗಿದ್ದಾರೆ.
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡದಲ್ಲಿರುವ ಮಹಾತ್ಮ ಗಾಂಧಿ ಪಿಯು ಕಾಲೇಜಿನಲ್ಲಿ ಸಮವಸ್ತ್ರ ನಿಯಮ ಇಲ್ಲ. ಹೀಗಾಗಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಬ್ ಧರಿಸಿ ತರಗತಿಗಳಿಗೆ ಹಾಜರಾಗಿರುವ ಹಿನ್ನೆಲೆಯಲ್ಲಿ ಕಾಲೇಜಿನ ಕೆಲ ಯುವಕರು ಕೇಸರಿ ಶಾಲನ್ನು ಧರಿಸಿ ಬಂದಿದ್ದಾರೆ. ಇದನ್ನೂ ಓದಿ: ಇವ್ರರನ್ನು ಅರೆಸ್ಟ್ ಮಾಡ್ರಿ – ವಿದ್ಯಾರ್ಥಿನಿಯರ ವಿರುದ್ಧ ಮಡಿಕೇರಿ ಪ್ರಿನ್ಸಿ ಕೆಂಡಾಮಂಡಲ
ಸಮವಸ್ತ್ರ ನಿಗದಿ ಪಡಿಸಿದ ಕಾಲೇಜುಗಳಲ್ಲಿ ಸಮವಸ್ತ್ರ ನಿಯಮ ಕಡ್ಡಾಯ ಪಾಲನೆ ಮಾಡಬೇಕಿದೆ. ಸಮವಸ್ತ್ರ ನಿಗದಿ ಮಾಡದ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಡ್ರೆಸ್ ಕೋಡ್ ಇಲ್ಲ. ಹೀಗಾಗಿ ವಿದ್ಯಾರ್ಥಿಗಳು ಕೇಸರಿ ಶಾಲು ಮತ್ತು ಹಿಜಬ್ ಧರಿಸಿ ಕಾಲೇಜಿಗೆ ಹಾಜರಾಗಿದ್ದಾರೆ. ಇದನ್ನೂ ಓದಿ: ಹಿಜಬ್ ಪ್ರತಿಭಟನೆ – ಕಾಲೇಜು ವಿದ್ಯಾರ್ಥಿನಿಯರ ವಿರುದ್ಧ ಎಫ್‌ಐಆರ್ ದಾಖಲು
ಈ ಸಂದರ್ಭದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿ ಸ್ಥಳಕ್ಕೆ ನಂದಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.
ಕಾಲೇಜಿನಲ್ಲಿ ಹಿಜಬ್ ವರ್ಸಸ್ ಕೇಸರಿ ಶಾಲು ಹಿನ್ನೆಲೆ ಆಡಳಿತ ಮಂಡಳಿ ನೇತೃತ್ವದಲ್ಲಿ ಎರಡು ಸಮುದಾಯದ ಮುಖಂಡರನ್ನು ಕರೆಸಿ ಸಭೆ ಮಾಡಲಾಗುತ್ತಿದೆ. ಕೇಸರಿ ಶಾಲು ಹಾಕಿಕೊಂಡು ಬಂದಿದ್ದ ವಿದ್ಯಾರ್ಥಿಗಳನ್ನು ವಾಪಸ್ ಕಳುಹಿಸಲಾಗಿದೆ.