Tag: bellandoor

  • ಬೆಳ್ಳಂದೂರು ರಸ್ತೆ ನಿರ್ಮಾಣಕ್ಕಾಗಿ ಬಿಬಿಎಂಪಿಗೆ ಭೂಮಿ ನೀಡಲು ರಕ್ಷಣಾ ಇಲಾಖೆ ಒಪ್ಪಿಗೆ: ಡಿಕೆಶಿ

    ಬೆಳ್ಳಂದೂರು ರಸ್ತೆ ನಿರ್ಮಾಣಕ್ಕಾಗಿ ಬಿಬಿಎಂಪಿಗೆ ಭೂಮಿ ನೀಡಲು ರಕ್ಷಣಾ ಇಲಾಖೆ ಒಪ್ಪಿಗೆ: ಡಿಕೆಶಿ

    ಬೆಂಗಳೂರು: ಲೋವರ್ ಆಗರಂನಿಂದ (Lower Agaram Road) ಸರ್ಜಾಪುರವರೆಗೂ (Sarjapura) ರಸ್ತೆ ಅಗಲೀಕರಣಕ್ಕೆ 12.34 ಎಕರೆ ಜಮೀನನ್ನು ರಕ್ಷಣಾ ಇಲಾಖೆ ಬಿಬಿಎಂಪಿಗೆ (BBMP) ನೀಡಿದ್ದು, ಇನ್ನೂ 10.77 ಎಕರೆ ನೀಡಲು ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಹೇಳಿದ್ದಾರೆ.

    ನಗರದ ಎಎಸ್‌ಸಿ ಸೆಂಟರ್ ಮತ್ತು ಕಾಲೇಜಿನ ಕಮಾಂಡೆಂಟ್ ಲೆಫ್ಟಿನೆಂಟ್ ಜನರಲ್ ಬಸಂತ್ ಕುಮಾರ್ ರೆಪ್ಸ್ವಾಲ್ ಅವರ ಜೊತೆ ಡಿಸಿಎಂ ಅವರು ಇಂದು (ಸೆ.28) ವಿಧಾನಸೌಧದಲ್ಲಿ ಸಮಾಲೋಚನೆ ನಡೆಸಿದರು.ಇದನ್ನೂ ಓದಿ: ಶೀಘ್ರವೇ ಗೃಹಲಕ್ಷ್ಮಿ ಹಣ, ಯೋಜನೆ ನಿಲ್ಲುವ ಮಾತೇ ಇಲ್ಲ: ಲಕ್ಷ್ಮಿ ಹೆಬ್ಬಾಳ್ಕರ್‌

    ಬಳಿಕ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂ.ಜಿ ರಸ್ತೆಯಿಂದ (M G Road) ಬೆಳ್ಳಂದೂರು ಭಾಗಕ್ಕೆ ತೆರಳಲು ಸುಮಾರು 1 ಗಂಟೆ ಸಮಯ ಬೇಕಾಗಿತ್ತು. ಈ ರಸ್ತೆ ನಿರ್ಮಾಣವಾದ ನಂತರ 5-8 ನಿಮಿಷಗಳ ಅಂತರದಲ್ಲಿ ಕ್ರಮಿಸಬಹುದು. ಬೆಳ್ಳಂದೂರು, ಈಜಿಪುರ, ಆಗರಂ ಭಾಗದ ಸಂಚಾರ ದಟ್ಟಣೆಗೆ ಮುಕ್ತಿ ಸಿಗಲಿದೆ. ನಾನು ಹಾಗೂ ಸಿಎಂ ಕೇಂದ್ರ ರಕ್ಷಣಾ ಮಂತ್ರಿಗಳಿಗೆ ಮನವಿ ಸಲ್ಲಿಸಿದ್ದೆವು ಎಂದರು.

    ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವಾಲಯ ಸ್ಪಂದಿಸಿ, ಒಟ್ಟು 22 ಎಕರೆ ಜಾಗವನ್ನು ರಸ್ತೆಗಾಗಿ ಬಿಟ್ಟುಕೊಡಲು ತೀರ್ಮಾನಿಸಿ ಸಹಕಾರ ನೀಡಿದೆ. ಈ ರಸ್ತೆ ನಿರ್ಮಾಣದ ಮೊದಲ ಹಂತದ 3.50 ಕಿ.ಮೀ ಕಾಮಗಾರಿಗೆ 35 ಕೋಟಿ ರೂ. ಮೊತ್ತದ ಟೆಂಡರ್ ಕರೆಯಲಾಗಿದೆ. ಟ್ರಿನಿಟಿ ಸರ್ಕಲ್, ಈಜಿಪುರ ಸೇರಿದಂತೆ ಒಂದಷ್ಟು ಕಡೆ ನೂತನ ರಸ್ತೆ ನಿರ್ಮಾಣಕ್ಕೆ ಇನ್ನೂ 10.77 ಎಕರೆ ಜಾಗವನ್ನು ರಕ್ಷಣಾ ಇಲಾಖೆ ನೀಡಬೇಕಿದೆ. ಇದರಿಂದ ಐಟಿ ಹಬ್‌ಗೆ ತೆರಳಲು ಇದ್ದ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಯಾಗಲಿದೆ ಎಂದು ತಿಳಿಸಿದರು.

    ಈಗಾಗಲೇ ರಕ್ಷಣಾ ಇಲಾಖೆಯವರು 12.34 ಎಕರೆ ಜಾಗವನ್ನು ಬಿಬಿಎಂಪಿಗೆ ಹಸ್ತಾಂತರಿಸಿದ್ದಾರೆ. ಇದಕ್ಕಾಗಿ ನಮಗೆ ಸಹಕಾರ ಕೊಟ್ಟ ಲೆಫ್ಟನೆಂಟ್ ಜನರಲ್ ಬಸಂತ್ ಕುಮಾರ್ ರೆಪ್ಸ್ವಾಲ್ ಅವರು ಇದೇ 30 ರಂದು ನಿವೃತ್ತಿಯಾಗುತ್ತಿದ್ದು, ಅವರನ್ನು ನಮ್ಮ ಕಚೇರಿಗೆ ಆಹ್ವಾನಿಸಿ ಅಭಿನಂದಿಸಿದ್ದೇವೆ. ಬೆಂಗಳೂರಿನ ನಾಗರೀಕರಿಗೆ, ವಿಶೇಷವಾಗಿ ಐಟಿ ಹಬ್‌ಗೆ ತೆರಳುವವರಿಗೆ ಹಾಗೂ ಪೂರ್ವ ಬೆಂಗಳೂರಿಗರಿಗೆ ಈ ಯೋಜನೆಯಿಂದ ಸಾಕಷ್ಟು ಅನುಕೂಲವಾಗಲಿದೆ ಎಂದಿದ್ದಾರೆ.

    ನಾನು ಬೆಂಗಳೂರು ನಗರಭಿವೃದ್ಧಿ ಇಲಾಖೆಯ (Bengaluru Development Authority) ಜವಾಬ್ದಾರಿ ತೆಗೆದುಕೊಂಡ ನಂತರ ಬೆಳ್ಳಂದೂರು ಹಾಗೂ ಸುತ್ತಮುತ್ತಲ ಐಟಿ ಹಬ್ ಭಾಗದ ಜನರ ಸಮಸ್ಯೆ ಆಲಿಸಿದ್ದೆ. ಅಲ್ಲಿನ ಸಂಚಾರ ದಟ್ಟಣೆ ವಿಚಾರವಾಗಿ ದಿನನಿತ್ಯ 8-10 ಇ-ಮೇಲ್‌ಗಳು ನನಗೇ ಬರುತ್ತಿದ್ದವು. ಈ ಹಿನ್ನೆಲೆಯಲ್ಲಿ ನಾನು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೆವು. ಈ ಸಮಸ್ಯೆಗೆ ಈಗ ಪರಿಹಾರ ಸಿಕ್ಕಿದಂತಾಗಿದೆ ಎಂದು ಹೇಳಿದರು.ಇದನ್ನೂ ಓದಿ: ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹತ್ಯೆ – ಇಸ್ರೇಲ್ ಸೇನೆಯಿಂದ ಘೋಷಣೆ

    ಹೆಬ್ಬಾಳದ ಬಳಿಯ ಹೋಪ್ ಡೈರಿ ಫಾರ್ಮ್ ಬಳಿ ಟನಲ್ ರಸ್ತೆಯ ಪ್ರವೇಶಕ್ಕೆ ಜಾಗ ಅಗತ್ಯವಿದೆ. ಇದಕ್ಕೆ 2 ಎಕರೆ ಜಾಗ ಬಿಟ್ಟುಕೊಡಬೇಕು ಎಂಬ ಪ್ರಸ್ತಾವನೆ ನೀಡಲಿದ್ದೇವೆ. ಈ ಜಾಗಗಳನ್ನು ರಕ್ಷಣಾ ಇಲಾಖೆಯಿಂದ ಪಡೆಯಲು ನಾನು ಬಹಳಷ್ಟು ಪ್ರಯತ್ನ ಮಾಡಿದ್ದೇನೆ. ಕಾಗದದ ಕೆಲಸ ಮಾಡಿದ್ದೇನೆ. ನಿರಂತರವಾಗಿ ರಕ್ಷಣಾ ಇಲಾಖೆ ಜೊತೆ ಸಂಪರ್ಕ ಇಟ್ಟುಕೊಂಡು ಮನವಿ ಮಾಡಿದ್ದೇನೆ. ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಕ್ಷಣಾ ಇಲಾಖೆ ಸಚಿವರು ಹಾಗೂ ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿತ್ತು. ಭೂಮಿ ಹಸ್ತಾಂತರಕ್ಕೆ ರಕ್ಷಣೆ ಇಲಾಖೆ ಏನು ಬೇಡಿಕೆ ಇಟ್ಟಿದೆ ಎಂದು ಕೇಳಿದಾಗ “ರಕ್ಷಣಾ ಇಲಾಖೆಯು ಭೂಮಿಗೆ ಪರ್ಯಾಯವಾಗಿ ಮೂಲಭೂತ ಸೌಕರ್ಯ ಕಲ್ಪಿಸಿಕೊಡುವಂತೆ ಕೇಳಿದ್ದು, ನಾವು ಅದನ್ನು ಮಾಡುತ್ತೇವೆ” ಎಂದಿದ್ದಾರೆ.

  • ಅಪಾರ್ಟ್ಮೆಂಟ್‌ನ 12ನೇ ಮಹಡಿಯಿಂದ ಬಿದ್ದು 10ನೇ ತರಗತಿ ವಿದ್ಯಾರ್ಥಿನಿ ಸಾವು

    ಅಪಾರ್ಟ್ಮೆಂಟ್‌ನ 12ನೇ ಮಹಡಿಯಿಂದ ಬಿದ್ದು 10ನೇ ತರಗತಿ ವಿದ್ಯಾರ್ಥಿನಿ ಸಾವು

    ಬೆಂಗಳೂರು: ಅಪಾರ್ಟ್ಮೆಂಟ್‌ನ 12ನೇ ಮಹಡಿಯಿಂದ ಬಿದ್ದು 10ನೇ ತರಗತಿಯ ವಿದ್ಯಾರ್ಥಿನಿ (Student) ಸಾವನ್ನಪ್ಪಿರುವ ಘಟನೆ ನಗರದ ಬೆಳ್ಳಂದೂರಿನ (Bellandoor) ಕ್ಲಾಸಿಕ್ ಅಪಾರ್ಟ್ಮೆಂಟ್‌ನಲ್ಲಿ ನಡೆದಿದೆ.

    ಜೆಸ್ಸಿಕಾ (15) ಸಾವನ್ನಪ್ಪಿದ ಬಾಲಕಿ. ಮಂಗಳವಾರ ಬೆಳಗ್ಗೆ 10:30ರ ವೇಳೆಗೆ ಘಟನೆ ನಡೆದಿದೆ. ಕಳೆದ 2 ವರ್ಷಗಳಿಂದ ಬಾಲಕಿ (Girl) ತನ್ನ ತಂದೆ ಹಾಗೂ ತಾಯಿಯೊಂದಿಗೆ ಕ್ಲಾಸಿಕ್ ಅಪಾರ್ಟ್ಮೆಂಟ್‌ನ 11ನೇ ಮಹಡಿಯಲ್ಲಿ ವಾಸವಿದ್ದಳು.

    ಮೂಲತಃ ತಮಿಳುನಾಡಿನ ಕುಟುಂಬವಾಗಿದ್ದು, ತಂದೆ ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ತಾಯಿ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಜೆಸ್ಸಿಕಾ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದಳು. ಇದನ್ನೂ ಓದಿ: ಪಟಾಕಿ ಸಂಗ್ರಹ ಘಟಕಕ್ಕೆ ಬೆಂಕಿ – 1.5 ಕೋಟಿ ರೂ. ಮೌಲ್ಯದ ಪಟಾಕಿ ಭಸ್ಮ

    ಜೆಸ್ಸಿಕಾ ಇತ್ತೀಚೆಗೆ ಶಾಲೆಗೂ ಸರಿಯಾಗಿ ಹೋಗುತ್ತಿರಲಿಲ್ಲ ಎಂಬುದು ತಿಳಿದುಬಂದಿದೆ. ಕಳೆದ 3 ತಿಂಗಳಲ್ಲಿ 6 ದಿನ ಮಾತ್ರವೇ ಜೆಸ್ಸಿಕಾ ಶಾಲೆಗೆ ಹೋಗಿದ್ದಳು. ಇಂದು ಬೆಳಗ್ಗೆ ಬಾಲಕಿ ಶಾಲೆಗೆ ಹೋಗುವುದಾಗಿ ಹೇಳಿ ಹೋಗಿದ್ದಳು. ನಂತರ  ಮನೆಗೆ ವಾಪಸ್ ಬಂದಿದ್ದಾಳೆ. ಬಳಿಕ ಟೀಚರ್ ತಾಯಿಗೆ ಕರೆ ಮಾಡಿ ಮಗಳು ಶಾಲೆಗೆ ಬಂದಿಲ್ಲ ಎಂದು ಹೇಳಿದ್ದಾರೆ. ನಂತರ ಪೋಷಕರು ಪರಿಶೀಲನೆ ಮಾಡಿದಾಗ ವಿಚಾರ ತಿಳಿದುಬಂದಿದೆ.

    ಜೆಸ್ಸಿಕಾ ಕುಟುಂಬ ವಾಸವಿದ್ದ ಫ್ಲೋರ್‌ನ ಮೇಲಿನ ಫ್ಲೋರ್‌ಗೆ ತೆರಳಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾಳೆ. ಮನೆಯಲ್ಲಿ, ಅಕ್ಕ-ಪಕ್ಕದಲ್ಲಿ ಯಾರೂ ಇಲ್ಲದ ಸಂದರ್ಭ 12ನೇ ಫ್ಲೋರ್‌ನಿಂದ ಬಿದ್ದು ಸಾವನ್ನಪ್ಪಿದ್ದಾಳೆ. ಪ್ರಾಥಮಿಕವಾಗಿ ಬಾಲಕಿ ಶಾಲೆಗೆ ಹೋಗಿ ಕ್ಲಾಸ್ ಅಟೆಂಡ್ ಮಾಡದೆ ವಾಪಸ್ ಬರುತ್ತಿದ್ದಳು ಎಂಬುದು ತಿಳಿದುಬಂದಿದೆ. ಆಕೆ ಮಾನಸಿಕವಾಗಿ ನೊಂದಿದ್ದಳು ಎನ್ನಲಾಗಿದೆ.

    ಆತ್ಮಹತ್ಯೆಗೆ ಕಾರಣ ಏನು ಎಂಬುದು ಸ್ಪಷ್ಟವಾಗಿಲ್ಲ. ಘಟನೆ ಬಗ್ಗೆ ಬೆಳ್ಳಂದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಮಹಿಳಾ ಸೆಕ್ಯುರಿಟಿ ಗಾರ್ಡ್ ಮೇಲೆ ಸಾಮೂಹಿಕ ಅತ್ಯಾಚಾರ, ಹಲ್ಲೆ – ಚಿಕಿತ್ಸೆ ಫಲಕಾರಿಯಾಗದೇ ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಳ್ಳಂದೂರು ಕೆರೆಯಲ್ಲಿ ಮತ್ತೆ ನೊರೆ ಸಮಸ್ಯೆ

    ಬೆಳ್ಳಂದೂರು ಕೆರೆಯಲ್ಲಿ ಮತ್ತೆ ನೊರೆ ಸಮಸ್ಯೆ

    ಬೆಂಗಳೂರು: ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಬೆಳ್ಳಂದೂರು ಕೆರೆಯಲ್ಲಿ ಮತ್ತೆ ನೊರೆ ಸಮಸ್ಯೆ ಉಂಟಾಗಿದೆ.

    ರಾತ್ರಿ ಸುರಿದ ಧಾರಾಕಾರ ಮಳೆಯಿಂದ ನೀರಿನ ಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೆಳ್ಳಂದೂರು ಕೆರೆ ಕೋಡಿ ಹರಿದಿದ್ದು ಈಗ ನೊರೆ ಬೆಟ್ಟದಂತೆ ಶೇಖರಣೆಯಾಗಿದೆ. ಇದರಿಂದಾಗಿ ಬೆಳ್ಳಂದೂರು – ಹೆಚ್‍ಎಎಲ್ ಮಾರ್ಗವಾಗಿ ಸಂಚರಿಸುವ ವಾಹನ ಸವಾರರ ಮೇಲೆ ಗಾಳಿ ಬಂದಾಗ ನೊರೆಯ ಸಿಂಚನವಾಗಿ ಕಿರಿಕಿರಿ ಅನುಭವಿಸುತ್ತಿದ್ದಾರೆ.

    ಕೆಲ ವರ್ಷಗಳಿಂದ ಈ ಸಮಸ್ಯೆ ಕಾಡುತ್ತಿದ್ದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿ ಟಿ) ಬಿಬಿಎಂಪಿಗೆ ಹಲವು ಬಾರಿ ಚಾಟಿ ಬೀಸಿದ್ರೂ ಸಂಬಂಧಪಟ್ಟ ಅಧಿಕಾರಿಗಳು ಕೆರೆಯನ್ನು ಶುಚಿಗೊಳಿಸಿ, ಕೆರೆಗೆ ಬರುವ ಕರುಷಿತ ನೀರಿಗೆ ಕಡಿವಾಣ ಹಾಕದೆ ಇರುವುದರಿಂದ ಈಗ ಮತ್ತೆ ನೊರೆ ಕಾಣಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=ovmwvtWl0HU