Tag: Bellanduru

  • ಚಪ್ಪಲಿಯಿಂದ ಹೊಡೆದಿದ್ದು ತುಂಬಾ ಬೇಜಾರಾಗಿದೆ, ಯಾವ್ದೇ ಕಾರಣಕ್ಕೂ ಕೇಸ್ ವಾಪಸ್ ಪಡೆಯಲ್ಲ: ಆಟೋ ಚಾಲಕ

    ಚಪ್ಪಲಿಯಿಂದ ಹೊಡೆದಿದ್ದು ತುಂಬಾ ಬೇಜಾರಾಗಿದೆ, ಯಾವ್ದೇ ಕಾರಣಕ್ಕೂ ಕೇಸ್ ವಾಪಸ್ ಪಡೆಯಲ್ಲ: ಆಟೋ ಚಾಲಕ

    ಬೆಂಗಳೂರು: ಚಪ್ಪಲಿಯಿಂದ ಹೊಡೆದಾಗ ನನ್ನ ಮನಸ್ಸಿಗೆ ತುಂಬಾ ಬೇಜಾರಾಗಿದೆ, ಯಾವುದೇ ಕಾರಣಕ್ಕೂ ಕೇಸ್ ವಾಪಸ್ ಪಡೆಯಲ್ಲ ಎಂದು ಹಿಂದಿ ಮಹಿಳೆಯಿಂದ ಹಲ್ಲೆಗೊಳಗಾದ ಆಟೋ ಚಾಲಕ ಲೋಕೇಶ್ ಹೇಳಿದ್ದಾರೆ.

    ಈ ಕುರಿತು ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಹಲ್ಲೆ ಮಾಡಿದ ಮಹಿಳೆಯಲ್ಲಿ ಪಶ್ಚಾತ್ತಾಪ ಕಾಣುತ್ತಿದೆ. ಭಾನುವಾರ ಮಹಿಳೆ ಹಾಗೂ ಆಕೆಯ ಪತಿ ಬಂದು ಕ್ಷಮೆ ಕೇಳಿದ್ದಾರೆ. ಆದರೆ ಚಪ್ಪಲಿಯಿಂದ ಹೊಡೆದಾಗ ನನ್ನ ಮನಸ್ಸಿಗೆ ತುಂಬಾ ಬೇಸರ ಆಗಿತ್ತು. ನಾನು ಎರಡು ದಿನ ಮನೆಯವರ ಜೊತೆ ಮಾತನಾಡಿಲ್ಲ. ಮುಖ ತೋರಿಸಲು ಆಗುತ್ತಿರಲಿಲ್ಲ. ಯಾವುದೇ ಕಾರಣಕ್ಕೂ ಕೇಸ್ ವಾಪಸ್ ಪಡೆಯಲ್ಲ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಚಪ್ಪಲಿಯಿಂದ ಹೊಡೆದ ಪ್ರಕರಣ – ಆಟೋ ಚಾಲಕನ ಕಾಲಿಗೆ ಬಿದ್ದು ಕ್ಷಮೆ ಕೇಳಿದ ದಂಪತಿ

    ಚಪ್ಪಲಿಯಿಂದ ಹೊಡೆದ ವೀಡಿಯೋ ವೈರಲ್ ಆದ ಬಳಿಕ ಮಹಿಳೆಯ ವಿರುದ್ಧ ಆಕ್ರೋಶ ಹೆಚ್ಚಾಗಿತ್ತು. ಇದರ ಬೆನ್ನಲ್ಲೇ ಮಹಿಳೆ ಹಾಗೂ ಆಕೆಯ ಪತಿ ಆಟೋ ಚಾಲಕನ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ್ದರು. ಜೊತೆಗೆ ಎಲ್ಲಾ ಕನ್ನಡಿಗರು ನಮ್ಮನ್ನು ಕ್ಷಮಿಸಿ. ಆಟೋ ಚಾಲಕರ ಬಗ್ಗೆ ಗೌರವವಿದೆ. ಬೆಂಗಳೂರನ್ನು ಪ್ರೀತಿಸುತ್ತೇವೆ. ಇಲ್ಲಿನ ವಾತಾವರಣವನ್ನು ಪ್ರೀತಿಸುತ್ತೇವೆ ಎಂದಿದ್ದರು.

    ಘಟನೆ ಸಂಬಂಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ (Bellanduru Police Station) ಮಹಿಳೆ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಭಾನುವಾರ ಪೊಲೀಸರು ಮಹಿಳೆಯನ್ನು ಕರೆಸಿ, ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದ್ದರು. ವಿಚಾರಣೆ ವೇಳೆ, ಆಟೋ ಚಾಲಕನ ಮೇಲೆ ಹಲ್ಲೆ ಮಾಡಿರುವುದನ್ನು ಮಹಿಳೆ ಒಪ್ಪಿಕೊಂಡಿದ್ದಳು.

    ಘಟನೆ ಏನು?
    ಬೆಳ್ಳಂದೂರಿನ ಸೆಂಟ್ರಲ್ ಮಾಲ್ ಬಳಿ ಗರ್ಭಿಣಿ ಮಹಿಳೆಯೊಬ್ಬರು ಆಸ್ಪತ್ರೆಗೆ ತೆರಳಿ ವಾಪಸ್ ಆಗುತ್ತಿದ್ದರು. ಈ ವೇಳೆ ಬೆಳ್ಳಂದೂರು ಬಳಿ ಆಕೆಯ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಆಟೋ ಡಿಕ್ಕಿಯಾಗಿತ್ತು. ಇದನ್ನು ಪ್ರಶ್ನಿಸಿದ್ದಕ್ಕೆ ಆಟೋ ಡ್ರೈವರ್ ಬೈದು ಹಲ್ಲೆಗೆ, ಯತ್ನಿಸಿದ್ದ. ಹೀಗಾಗಿ ಕೋಪಗೊಂಡು ಚಪ್ಪಲಿಯಿಂದು ಹಲ್ಲೆ ಮಾಡಿದೆ ಎಂದು ಪೊಲೀಸರ ಮುಂದೆ ಮಹಿಳೆ ಹೇಳಿಕೊಂಡಿದ್ದರು. ಇದನ್ನೂ ಓದಿ: ಬೆಂಗಳೂರು | ಆಟೋ ಚಾಲಕನ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿದ್ದ ಮಹಿಳೆಯ ವಿಚಾರಣೆ

  • ಬೆಂಗಳೂರು | ಆಟೋ ಚಾಲಕನ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿದ್ದ ಮಹಿಳೆಯ ವಿಚಾರಣೆ

    ಬೆಂಗಳೂರು | ಆಟೋ ಚಾಲಕನ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿದ್ದ ಮಹಿಳೆಯ ವಿಚಾರಣೆ

    – ಹಲ್ಲೆ ಮಾಡಿದ್ದು ನಿಜ ಎಂದ ಮಹಿಳೆ

    ಬೆಂಗಳೂರು: ಬೆಳ್ಳಂದೂರಿನಲ್ಲಿ (Bellanduru) ಆಟೋ ಚಾಲಕನ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿದ್ದ ಮಹಿಳೆ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾಳೆ. ವಿಚಾರಣೆ ವೇಳೆ ಆಟೋ ಚಾಲಕನ ಮೇಲೆ ಹಲ್ಲೆ ಮಾಡಿರುವುದನ್ನು ಮಹಿಳೆ ಒಪ್ಪಿಕೊಂಡಿದ್ದಾಳೆ.

    ಹಲ್ಲೆ ಮಾಡಿದ್ದ ಮಹಿಳೆ ಪನ್ಪೂರಿ ಮಿಶ್ರಾಳನ್ನು (28) ಬೆಳ್ಳಂದೂರು ಪೊಲೀಸ್ ಠಾಣೆಗೆ ಕರೆಸಲಾಗಿತ್ತು. ಮಹಿಳೆ ಬಿಹಾರ ಮೂಲದವಳಾಗಿದ್ದು, ತನ್ನ ಪತಿಯೊಂದಿಗೆ ವಾಸವಾಗಿದ್ದಾಳೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಬೆಂಗಳೂರು | ಆಟೋ ಚಾಲಕನಿಗೆ ಹಿಂದಿಯಲ್ಲಿ ಯುವತಿಯ ಆವಾಜ್ – ಚಪ್ಪಲಿಯಲ್ಲಿ ಹಲ್ಲೆ ನಡೆಸಿ ಕ್ರೌರ್ಯ

    ಗರ್ಭಿಣಿಯಾಗಿರುವ ಮಹಿಳೆ, ಆಸ್ಪತ್ರೆಗೆ ತೆರಳಿ ವಾಪಸ್ ಆಗುತ್ತಿದ್ದಳು. ಈ ವೇಳೆ ಬೆಳ್ಳಂದೂರು ಬಳಿ ಆಕೆಯ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಆಟೋ ಡಿಕ್ಕಿಯಾಗಿತ್ತು ಎಂದು ಹೇಳಿಕೊಂಡಿದ್ದಾಳೆ. ಇದನ್ನ ಪ್ರಶ್ನಿಸಿದ್ದಕ್ಕೆ ಆಟೋ ಡ್ರೈವರ್ ಬೈದು ಹಲ್ಲೆಗೆ, ಯತ್ನಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ.

    ಘಟನೆ ವೇಳೆ ಕೋಪಗೊಂಡು ಚಪ್ಪಲಿಯಿಂದು ಹಲ್ಲೆ ಮಾಡಿದೆ ಎಂದು ಪೊಲೀಸರ ಮುಂದೆ ಹೇಳಿಕೊಂಡಿದ್ದಾಳೆ. ಮಹಿಳೆಯ ಹೇಳಿಕೆ ದಾಖಲಿಸಿಕೊಂಡು ಪೊಲೀಸರು ಆಕೆಯನ್ನು ವಾಪಸ್ ಕಳುಹಿಸಿದ್ದಾರೆ.

    ಈ ಸಂಬಂಧ ಜೂನ್ 2 ರಂದು ಕೋರ್ಟ್‍ಗೆ ಚಾರ್ಜ್‍ಶೀಟ್ ಸಲ್ಲಿಸಲು ಪೊಲೀಸರು ಮುಂದಾಗಿದ್ದಾರೆ.

    ಘಟನೆ ಸಂಬಂಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿತ್ತು. ಹಲ್ಲೆ ಮಾಡಿದ್ದ ಮಹಿಳೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಟೋ ಚಾಲಕರು ಹಾಗೂ ಸಾರ್ವಜನಿಕರು ಆಗ್ರಹಿಸಿದ್ದರು. ಇದನ್ನೂ ಓದಿ: ತಿರುಪತಿಗೆ ತೆರಳಿದ್ದ ಉದ್ಯಮಿ ಮನೆಯಲ್ಲಿ ಚಿನ್ನಾಭರಣ ದೋಚಿದ ನೇಪಾಳಿ ದಂಪತಿ

  • ಪಬ್‌ನಲ್ಲಿ ಡ್ರಿಂಕ್ಸ್ ಮಾಡುವಂತೆ ಒತ್ತಾಯಿಸಿ ಯುವತಿ ಜೊತೆ ಅಸಭ್ಯ ವರ್ತನೆ – ಕೇಸ್ ದಾಖಲು

    ಪಬ್‌ನಲ್ಲಿ ಡ್ರಿಂಕ್ಸ್ ಮಾಡುವಂತೆ ಒತ್ತಾಯಿಸಿ ಯುವತಿ ಜೊತೆ ಅಸಭ್ಯ ವರ್ತನೆ – ಕೇಸ್ ದಾಖಲು

    ಬೆಂಗಳೂರು: ನ್ಯೂ ಇಯರ್ ಪಾರ್ಟಿ ವೇಳೆ ಯುವತಿ ಜೊತೆ ಅಸಭ್ಯ ವರ್ತನೆ ಮಾಡಿದ ಘಟನೆ ಬೆಳ್ಳಂದೂರಿನ (Bellanduru) ಪಬ್‌ವೊಂದರಲ್ಲಿ ನಡೆದಿದೆ.ಇದನ್ನೂ ಓದಿ: ಕೌಟುಂಬಿಕ ಕಲಹ – ನದಿಗೆ ಹಾರಿ ಪ್ರಾಣ ಬಿಟ್ಟ ಇಂಜಿನಿಯರ್

    ಒಡಿಶಾ (Odisha) ಮೂಲದ ಯುವತಿ ಬಾಯ್‌ಫ್ರೆಂಡ್ ಜೊತೆ ನ್ಯೂ ಇಯರ್ ಪಾರ್ಟಿಗೆ ತೆರಳಿದ್ದರು. ಈ ವೇಳೆ ಪಾರ್ಟಿ ಮಾಡುತ್ತಿದ್ದಾಗ ಕಿಡಿಗೇಡಿಯೊಬ್ಬ ಮದ್ಯ ಸೇವಿಸುವಂತೆ ಆಫರ್ ಮಾಡಿದ್ದ. ಆದರೆ ಯುವತಿ ಮದ್ಯವನ್ನು ನಿರಾಕರಿಸಿದ್ದಳು. ಆಗ ಎಣ್ಣೆ ಸೇವಿಸಲೇಬೇಕೆಂದು ಒತ್ತಾಯ ಮಾಡಿ ಅಸಭ್ಯ ವರ್ತನೆ ಮಾಡಿದ್ದ.

    ರಿಜೆಕ್ಟ್ ಮಾಡಿದಾಗ ಮಾತಿಗೆ ಮಾತು ಬೆಳೆದ ಪರಿಣಾಮ ತಕ್ಷಣ ಪಬ್ ಸಿಬ್ಬಂದಿ ಸ್ಥಳಕ್ಕೆ ಬಂದಿದ್ದಾರೆ. ಸಿಬ್ಬಂದಿ ಬರುತ್ತಲೇ ಯುವಕ ಪಬ್‌ನಿಂದ ಎಸ್ಕೇಪ್ ಆಗಿದ್ದ. ಅಸಭ್ಯ ವರ್ತನೆ ಮತ್ತು ಲೈಂಗಿಕ ಕಿರುಕುಳ ಆರೋಪದಡಿ ಯುವತಿ ದೂರು ನೀಡಿದ್ದು, ಸದ್ಯ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಹೊಸ ವರ್ಷದ ಎಣ್ಣೆ ಏಟಲ್ಲಿ ವಾಹನ ಚಾಲನೆ – ಒಂದೇ ರಾತ್ರಿ 513 ಕೇಸ್ ದಾಖಲು

  • ಬೆಂಗಳೂರು ಕಾಲೇಜಿನಲ್ಲಿ ರ‍್ಯಾಗಿಂಗ್ – ಗಡ್ಡ ಶೇವ್ ಮಾಡದ್ದಕ್ಕೆ ಜೂನಿಯರ್ ಮೇಲೆ ಹಲ್ಲೆ

    ಬೆಂಗಳೂರು ಕಾಲೇಜಿನಲ್ಲಿ ರ‍್ಯಾಗಿಂಗ್ – ಗಡ್ಡ ಶೇವ್ ಮಾಡದ್ದಕ್ಕೆ ಜೂನಿಯರ್ ಮೇಲೆ ಹಲ್ಲೆ

    ಬೆಂಗಳೂರು: ಗಡ್ಡ ಶೇವ್ ಮಾಡಿಲ್ಲವೆಂದು ಸೀನಿಯರ್‌ಗಳು ಜೂನಿಯರ್ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ (Bengaluru) ಪ್ರತಿಷ್ಠಿತ ಕಾಲೇಜಿನಲ್ಲಿ ನಡೆದಿದೆ. ಮೂವರು ವಿದ್ಯಾರ್ಥಿಗಳ ಮೇಲೆ ಬೆಳ್ಳಂದೂರು ಠಾಣೆಯಲ್ಲಿ ಎಫ್.ಐ.ಆರ್ (FIR) ದಾಖಲಾಗಿದೆ.

    ಹಲ್ಲೆಗೊಳಗಾದ ವಿದ್ಯಾರ್ಥಿ ಕೇರಳ (Kerala) ಮೂಲದನಾಗಿದ್ದು, ದೊಡ್ಡ ಸಿದ್ದಾಪುರದಲ್ಲಿ ಸ್ನೇಹಿತರ ಜೊತೆ ಬಾಡಿಗೆ ಮನೆಯಲ್ಲಿ ವಾಸಮಾಡುತ್ತಿದ್ದನು. ಈತನನ್ನು ಆಗಸ್ಟ್ 30 ರಂದು ಕರೆ ಮಾಡಿ ಸಿದ್ದಾಪುರದ ಚರ್ಚ್ ಬಳಿ ಬರುವಂತೆ 3 ಬಾರಿ ಕಾಲ್ ಮಾಡಿ ಸೀನಿಯರ್‌ಗಳು ಕರೆಸಿಕೊಂಡಿದ್ದರು.  ಇದನ್ನೂ ಓದಿ: IC 814: The Kandahar Hijack : ಮುಸ್ಲಿಂ ಬದಲು ಹಿಂದೂಗಳ ಹೆಸರು | ಕೇಂದ್ರದ ಕ್ಲಾಸ್‌, ಅಪಹರಣಕಾರರ ನಿಜವಾದ ಹೆಸರು ಹಾಕಲು ಒಪ್ಪಿಕೊಂಡ ನೆಟ್‌ಫ್ಲಿಕ್ಸ್‌

    ವಿದ್ಯಾರ್ಥಿ ಬರುವಾಗಲೇ ಗಡ್ಡ ಹಾಗೂ ಮೀಸೆ ಟ್ರಿಮ್ ಮಾಡುವಂತೆ ಒತ್ತಾಯ ಮಾಡಿದ್ದು, ಇದನ್ನು ನಿರಾಕರಣೆ ಮಾಡಿದಾಗ ಆತನ ಮೇಲೆ ಅದೇ ಕಾಲೇಜಿನ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ನೀವು ಬಸ್ಸು, ಟ್ರಕ್, ವ್ಯಾನ್ ಚಾಲಕರಾಗಬೇಕೇ? – ಇಲ್ಲಿದೆ ಸುವರ್ಣಾವಕಾಶ, ಕೂಡಲೇ ಹೆಸರು ನೋಂದಾಯಿಸಿಕೊಳ್ಳಿ

    ಹಲ್ಲೆಗೊಳಗಾದ ವಿದ್ಯಾರ್ಥಿ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಅವರ ದೂರಿನ ಆಧಾರದಲ್ಲಿ ಬೆಳ್ಳಂದೂರು (Bellandur) ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ ಲಾಗಿದೆ. ಘಟನೆಯ ಕುರಿತಾಗಿ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: ರಾಜಮನೆತನ, ಸರ್ಕಾರ ಮಧ್ಯೆ ನಿಲ್ಲದ ಚಾಮುಂಡಿ ಪ್ರಾಧಿಕಾರ ಸಂಘರ್ಷ – ಮೊದಲ ಸಭೆಯಲ್ಲಿ ಏನೇನು ಚರ್ಚೆಯಾಗಿದೆ?

  • ಇಂದಿರಾ ಕ್ಯಾಂಟೀನ್ ಮೇಲಿರುವ ಆಸಕ್ತಿ ಬೆಳ್ಳಂದೂರು ಕೆರೆ ಮೇಲಿಲ್ಲ ಯಾಕೆ: ಸರ್ಕಾರಕ್ಕೆ ಹೈಕೋರ್ಟ್ ಚಾಟಿ

    ಇಂದಿರಾ ಕ್ಯಾಂಟೀನ್ ಮೇಲಿರುವ ಆಸಕ್ತಿ ಬೆಳ್ಳಂದೂರು ಕೆರೆ ಮೇಲಿಲ್ಲ ಯಾಕೆ: ಸರ್ಕಾರಕ್ಕೆ ಹೈಕೋರ್ಟ್ ಚಾಟಿ

    ಬೆಂಗಳೂರು: ನಗರದ ಬೆಳ್ಳಂದೂರು ಕೆರೆ ಸ್ವಚ್ಛತೆಯ ಕುರಿತು ಹೈಕೋರ್ಟ್ ಸರ್ಕಾರವನ್ನು ತೀವ್ರವಾಗಿ ತರಾಟೆ ತೆಗೆದುಕೊಂಡಿದೆ.

    ಬೆಳ್ಳಂದೂರು ಕೆರೆ ತ್ಯಾಜ್ಯ ನಿರ್ವಹಣೆಯ ಕುರಿತು ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿಯವರು ಸಲ್ಲಿಸಿದ್ದ ಪಿಐಎಲ್ ವಿಚಾರಣೆ ಇಂದು ಹೈಕೋರ್ಟ್ ನ ವಿಭಾಗೀಯ ಪೀಠದಲ್ಲಿ ನಡೆಯಿತು. ವಿಚಾರಣೆ ವೇಳೆ ನಗರಾಭಿವೃದ್ಧಿ ಇಲಾಖೆಯ ಮುಖ್ಯ ಆಯುಕ್ತರಾದ ಮಹೇಂದ್ರ ಕುಮಾರ್ ಜೈನ್ ಹಾಗೂ ಬಿಡಿಎ ಆಯುಕ್ತರಾದ ರಾಕೇಶ್ ಸಿಂಗ್ ಹಾಜರಾಗಿದ್ದರು.

    ನ್ಯಾಯಮೂರ್ತಿಗಳಾದ ಎಚ್.ಜಿ.ರಮೇಶ್, ಬೆಳ್ಳಂದೂರು ಕೆರೆ ತ್ಯಾಜ್ಯ ನಿರ್ವಹಣೆ ಏನು ಕ್ರಮ ತೆಗೆದುಕೊಂಡಿದ್ದೀರಾ? ಇಂದಿರಾ ಕ್ಯಾಂಟೀನ್ ಸ್ಥಾಪನೆಗೆ ತಜ್ಞರ ನೇಮಕಕ್ಕೆ ಪತ್ರಿಕೆಯಲ್ಲಿ ಜಾಹೀರಾತು ನೀಡಿದ್ದೀರಿ, ಸರ್ಕಾರಕ್ಕೆ ಇಂದಿರಾ ಕ್ಯಾಂಟೀನ್ ಮೇಲಿರುವ ಕಾಳಜಿ ಕರೆಗಳ ಮೇಲಿಲ್ಲವೇ? ಕೆರೆ ಸ್ವಚ್ಛತೆ, ತ್ಯಾಜ್ಯ ನಿರ್ವಹಣೆಗೆ ಜಾಹೀರಾತು ನೀಡಿದ್ದೀರಾ ಎಂದು ಪ್ರಶ್ನಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

    ಈ ಪ್ರಶ್ನೆಗೆ ಮಹೇಂದ್ರ ಕುಮಾರ್ ಜೈನ್ ಬೆಳ್ಳಂದೂರು ಕೆರೆ ಸ್ವಚ್ಛತೆಗಾಗಿ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯಲ್ಲಿ ಐಐಟಿಯ ತಜ್ಞರು, ಪ್ರೊಫೆಸರ್ ಗಳು ಸೇರಿದ್ದಾರೆ. ಸಾಕಷ್ಟು ಒತ್ತುವರಿಯನ್ನು ತೆರವುಗಳಿಸಲಾಗಿದ್ದು ತ್ಯಾಜ್ಯ ನೀರನ್ನು ತಡೆಯಲಾಗಿದೆ. ಕೆರೆಗೆ ಕಾಂಪೌಂಡ್ ಸಹ ಹಾಕಿ, ತ್ಯಾಜ್ಯ ಹಾಕದಂತೆ ತಡೆಯಲು ಗಾರ್ಡ್‍ಗಳನ್ನು ಸಹ ನೇಮಿಸಲಾಗಿದೆ. 2020 ರ ವೇಳೆ ಬೆಳ್ಳಂದೂರು ಕೆರೆ ಸಂಪೂರ್ಣವಾಗಿ ಸರಿಹೋಗುತ್ತದೆ ಎಂದು ಉತ್ತರಿಸಿದರು.

    ಈ ವೇಳೆ ಮಧ್ಯಪ್ರವೇಶಿಸಿದ ಹೈಕೋರ್ಟ್, ಬೆಂಗಳೂರು ಸಿಲಿಕಾನ್ ಸಿಟಿ ಆಫ್ ದಿ ವಲ್ರ್ಡ್ ಹಾಗೂ ಐಐಟಿ ಸೇರಿದಂತೆ ಅನೇಕ ತಂತ್ರಜ್ಞಾನ ಸಂಶೋಧನೆ ಕೇಂದ್ರಗಳಿವೆ. ಇವುಗಳನ್ನು ನೀವು ಬಳಸಿಕೊಂಡಿಲ್ಲ ಯಾಕೆ? ಬೆಂಗಳೂರು ಗ್ಲೋಬಲ್ ಲೀಡರ್ ಆಗಿದ್ದು, ಕೆಟ್ಟ ಸುದ್ದಿಗಳಿಗೆ ಸುದ್ದಿಯಾಗಿದೆ. ಕಸ ವಿಲೇವಾರಿ, ಕೆರೆಗಳಲ್ಲಿ ಬೆಂಕಿಯಿಂದ ವಿಶ್ವದೆಲ್ಲೆಡೆ ಸುದ್ದಿಯಾಗಿದೆ. ನಾರ್ವೆಯಲ್ಲಿ ಕಸದಿಂದ ವಿದ್ಯುತ್ ಉತ್ಪಾದನೆ, ಸ್ಯಾನಿಟರಿ ನೀರನ್ನು ಶುದ್ಧ ಮಾಡಿ ಕುಡಿಯುವ ನೀರಾಗಿ ಪರಿವರ್ತಿಸಲಾಗುತ್ತದೆ. ಆದರೆ ನಮ್ಮ ಬೆಂಗಳೂರಿನಲ್ಲಿ ಕಾಲುವೆಗಳ ಬಳಿ ನಿಲ್ಲಲು ಸಾಧ್ಯವಿಲ್ಲ, ಸರ್ಕಾರ ಕಸದಿಂದ ವಿದ್ಯುತ್ ಉತ್ಪಾದನೆ ಮಾಡಲು ಚಿಂತಿಸಿದೆಯೇ ಎಂದು ಹೈಕೋರ್ಟ್ ಸರ್ಕಾರವನ್ನು ಪುನಃ ಪ್ರಶ್ನಿಸಿತು.

    ಇದಕ್ಕೆ ಉತ್ತರಿಸಿದ ಆಯುಕ್ತರು ನಗರದ ನಾಲ್ಕು ಭಾಗಳಲ್ಲಿ ವಿದ್ಯುತ್ ತಯಾರಿಸಲು ಮುಂದಾಗಿದ್ದೇವೆ, ಬೆಳ್ಳಂದೂರು ಕೆರೆ ಶುದ್ದಿಗೆ ಹಲವು ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಇನ್ನು ಎರಡು ವರ್ಷಗಳಲ್ಲಿ ಪೂರ್ಣಗೊಳಿಸುವುದಾಗಿ ಮಾಹಿತಿ ನೀಡಿದರು.

    ವಾದವನ್ನು ಆಲಿಸಿದ ಹೈಕೋರ್ಟ್ ಬೆಳ್ಳಂದೂರು ಕೆರೆಯ ಸ್ವಚ್ಛತೆಯ ಕುರಿತು ನಿರ್ದೇಶನಗಳನ್ನು ಸರ್ಕಾರಕ್ಕೆ ನೀಡಿತು. ಇದರಲ್ಲಿ ಮೊದಲು ಸಮಿತಿ ಸಭೆಯಲ್ಲಿ ತಜ್ಞರ ಸಲಹೆ ಸೂಚನೆಗಳನ್ನು ಪರಿಗಣಿಸಿ ಕ್ರಿಯಾಯೋಜನೆ ಸಿದ್ದಪಡಿಸಬೇಕು, ಸಮನ್ವತೆಯಿಂದ ಸಮಯ ವ್ಯರ್ಥ ಮಾಡದಂತೆ ಕೆಲಸ ಮುಂದುವರಿಸಿಕೊಂಡು ಹೋಗಬೇಕು. ಕೆರೆ ಸ್ವಚ್ಛತೆಗೆ ಗುತ್ತಿಗೆ ನೀಡಬೇಕು, ಅನಗತ್ಯವಾಗಿ ಹಣ ಖರ್ಚಾಗದಂತೆ ನಿಗಾ ವಹಿಸಬೇಕು. ಮುಂದಿನ ವಿಚಾರಣೆ ದಿನದೊಳಗೆ ಕಾಮಗಾರಿ ಪ್ರಗತಿಯ ವರದಿಯನ್ನು ಸಲ್ಲಿಸಬೇಕು ಎಂದು ಆದೇಶಿಸಿ ಸೆಪ್ಟೆಂಬರ್ 18ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿತು.