Tag: Belthangady Court

  • ಬಂಗ್ಲೆಗುಡ್ಡ ರಹಸ್ಯ | 7 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಕೊಡಗಿನ ವ್ಯಕ್ತಿಯ ಐಡಿ ಕಾರ್ಡ್‌, ವಾಕಿಂಗ್‌ ಸ್ಟಿಕ್‌ ಪತ್ತೆ

    ಬಂಗ್ಲೆಗುಡ್ಡ ರಹಸ್ಯ | 7 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಕೊಡಗಿನ ವ್ಯಕ್ತಿಯ ಐಡಿ ಕಾರ್ಡ್‌, ವಾಕಿಂಗ್‌ ಸ್ಟಿಕ್‌ ಪತ್ತೆ

    ಮಂಗಳೂರು: ಧರ್ಮಸ್ಥಳದ (Dharmasthala) ಬಂಗ್ಲೆಗುಡ್ಡದ ರಹಸ್ಯ ಬೇಧಿಸಲು ಹೊರಟ ವಿಶೇಷ ತನಿಖಾ ತಂಡ (SIT) ಇಂದು 2ನೇ ದಿನದ ಶೋಧ ಕಾರ್ಯ ನಡೆಸಿದೆ. ನಿನ್ನೆಯ ಶೋಧ ವೇಳೆ 5 ತಲೆ ಬುರುಡೆ ಸೇರಿ ನೂರಾರು ಮೂಳೆಗಳು ಸಿಕ್ಕಿದ್ದು ಅದೆಲ್ಲವೂ ಪುರುಷರದ್ದು ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ಇಂದು ಕೂಡ ಬುರುಡೆ ಮತ್ತು ಅಸ್ಥಿಪಂಜರ (Skeleton) ಸಿಕ್ಕಿದ್ದು, ಇದರ ಜೊತೆಗೆ ಕೊಡಗು ಮೂಲದ ಯು.ಬಿ ಅಯ್ಯಪ್ಪ ಎಂಬುವವರಿಗೆ ಸೇರಿದ ಮಹತ್ವದ ದಾಖಲೆಗಳು ಪತ್ತೆಯಾಗಿದೆ.

    ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಯು.ಬಿ ಅಯ್ಯಪ್ಪ ಎಂಬುವವರಿಗೆ ಐಡಿ ಕಾರ್ಡ್‌ (ID Card) ಹಾಗೂ ತ್ರಿಲೆಗ್‌ ಬ್ಯಾಲೆನ್ಸ್‌ ಸ್ಟಿಕ್‌ (ವಾಕಿಂಗ್‌ ಸ್ಟಿಕ್‌) ಬಂಗ್ಲೆಗುಡ್ಡದಲ್ಲಿ ಪತ್ತೆಯಾಗಿದೆ. 7 ವರ್ಷಗಳ ಹಿಂದೆ ಮೈಸೂರಿಗೆ ಚಿಕಿತ್ಸೆಗೆಂದು ತೆರಳಿದ್ದ ಅಯ್ಯಪ್ಪ ಅವರು ಬಳಿಕ ನಾಪತ್ತೆಯಾಗಿದ್ದಾರೆ ಎಂದು ಕುಟುಂಬಸ್ಥರು ಕುಟ್ಟ ಪೊಲೀಸ್‌ ಠಾಣೆಯಲ್ಲಿ (Kutta Police Station) ನಾಪತ್ತೆ ಪ್ರಕರಣ ದಾಖಲಿಸಿದ್ದರು. ಇದೀಗ ಬಂಗ್ಲೆಗುಡ್ಡದ ರಹಸ್ಯ ಕೆದಕಲು ಹೊರಟಿದ್ದ ಎಸ್‌ಐಟಿಗೆ ಅಯ್ಯಪ್ಪ ಅವರ ಐಡಿ ಕಾರ್ಡ್‌ ಹಾಗೂ ವಾಕಿಂಗ್‌ಸ್ಟಿಕ್‌ಗಳು ಸಿಕ್ಕಿದ್ದು, ಪ್ರಕರಣ ರೋಚಕ ತಿರುವು ಪಡೆದುಕೊಂಡಿದೆ. ಕುಟುಂಬಸ್ಥರು ದಾಖಲಿಸಿದ್ದ ಮಿಸ್ಸಿಂಗ್‌ ಕಂಪ್ಲೆಂಟ್‌ನಲ್ಲಿ ವಾಕಿ ಸ್ಟಿಕ್‌ ಬಗ್ಗೆ ಉಲ್ಲೇಖ ಮಾಡಲಾಗಿದೆ ಎಂದು ಎಸ್‌ಐಟಿ ಮೂಲಗಳಿಂದ ತಿಳಿದುಬಂದಿದೆ.

    ಈ ನಡುವೆ ತಲೆಬುರುಡೆ ತಂದಿದ್ದ ವಿಠಲ ಗೌಡ ವಿರುದ್ಧ ಎಸ್‌ಐಟಿಗೆ ಧರ್ಮಸ್ಥಳ ಗ್ರಾಮಸ್ಥರೊಬ್ಬರು ದೂರು ನೀಡಿದ್ದಾರೆ. ಇನ್ನೊಂದೆಡೆ ಎಸ್‌ಐಟಿ ಅಧಿಕಾರಿಗಳು ಆರೋಪಿ ಚಿನ್ನಯ್ಯನನ್ನು ಬೆಳ್ತಂಗಡಿಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ತಲೆ ಬುರುಡೆ ತಂದ ವಿಠಲ ಗೌಡ ವಿರುದ್ದ ದೂರು
    ಧರ್ಮಸ್ಥಳದ ಶವ ಹೂತಿಟ್ಟ ಪ್ರಕರಣದಲ್ಲಿ ತಲೆ ಬುರುಡೆ ತಂದಿದ್ದ ಸೌಜನ್ಯಳ ಮಾವ ವಿಠಲಗೌಡನನ್ನು ಎರಡು ಬಾರಿ ಬಂಗ್ಲೆಗುಡ್ಡಕ್ಕೆ ಕರೆತಂದ ಎಸ್‌ಐಟಿ ಅಧಿಕಾರಿಗಳು ಮಹಜರು ನಡೆಸಿದ್ದರು. ಮಹಜರು ನಡೆದ ಬಳಿಕ ವಿಠಲ ಗೌಡ ಬಂಗ್ಲೆಗುಡ್ಡದಲ್ಲಿ ಹತ್ತಾರು ಅಸ್ಥಿಪಂಜರಗಳನ್ನ ನೋಡಿದ್ದೇನೆಂದು ವೀಡಿಯೋ ಮಾಡಿ ಹೇಳಿಕೆ ನೀಡಿದ್ದ. ಇದಾದ ಬಳಿಕ ಬಂಗ್ಲೆಗುಡ್ಡದಲ್ಲಿ (Banglegudde) ಏನೋ ರಹಸ್ಯ ಅಡಗಿದೆ ಎಂದು ಎಲ್ಲೆಡೆ ಸುದ್ದಿ ಹಬ್ಬಿತ್ತು. ಈ ರಹಸ್ಯ ಬೇಧಿಸಲು ನಿರ್ಧರಿಸಿದ ಎಸ್‌ಐಟಿ 13 ಎಕರೆ ವಿಸ್ತೀರ್ಣದಲ್ಲಿರುವ ಇಡೀ ಬಂಗ್ಲೆಗುಡ್ಡ ಅರಣ್ಯ ಪ್ರದೇಶದಲ್ಲಿ ಸರ್ಚ್ ನಡೆಸಲು ತೀರ್ಮಾನಿಸಿದ್ದರು. ಅದರಂತೆ ನಿನ್ನೆ ದಿನಪೂರ್ತಿ ಶೋಧ ನಡೆಸಿದ್ದ ವೇಳೆ ಐದು ಕಡೆಗಳಲ್ಲಿ ಭೂಮಿಯ ಮೇಲ್ಭಾಗದಲ್ಲಿ ಹರಡಿಕೊಂಡಿದ್ದ ಐದು ತಲೆ ಬುರುಡೆ ಹಾಗೂ ನೂರಕ್ಕೂ ಅಧಿಕ ಮೂಳೆಗಳು ಪತ್ತೆಯಾಗಿದೆ. ಎಲ್ಲವನ್ನ ವಶಕ್ಕೆ ಪಡೆದು ಮಹಜರು ನಡೆಸಿದ ಎಸ್‌ಐಟಿ ಅಧಿಕಾರಿಗಳು ಎಲ್ಲವನ್ನ ಎಫ್‌ಎಸ್‌ಎಲ್ ಗೆ ಕಳುಹಿಸಿಕೊಟ್ಟಿದ್ದಾರೆ. ಮಹಜರು ವೇಳೆ ಸ್ಥಳದಲ್ಲಿದ್ದ ತಜ್ಞ ವೈದ್ಯರು ಎಲ್ಲವೂ ಪುರುಷರ ತಲೆ ಬುರುಡೆ ಹಾಗೂ ಮೂಳೆಗಳು ಎಂದು ಮೇಲ್ನೋಟಕ್ಕೆ ಅಭಿಪ್ರಾಯಪಟ್ಟಿದ್ದಾರೆ. ಜೊತೆಗೆ ಅದೇ ಸ್ಥಳದ ಮರವೊಂದರಲ್ಲಿ ಎರಡು ಹಗ್ಗ ಒಂದು ಸೀರೆ ನೇತಾಡುವ ಸ್ಥಿತಿಯಲ್ಲಿದ್ದು ಅದರ ಅಡಿಭಾಗದ ಭೂಮಿಯ ಮೇಲ್ಭಾಗದಲ್ಲೇ ಕಳೇಬರ ಪತ್ತೆಯಾಗಿದೆ. ಹೀಗಾಗಿ ಇದು ಆತ್ಮಹತ್ಯೆ ಮಾಡಿಕೊಂಡವರ ಕಳೇಬರ ಎಂದು ಎಸ್‌ಐಟಿ ಅಭಿಪ್ರಾಯಪಟ್ಟಿದೆ.

    ಸೌಜನ್ಯಳ ಮಾವ ವಿಠಲ ಗೌಡ, ತಲೆ ಬುರುಡೆ ತಂದ ಹಿನ್ನಲೆಯಲ್ಲಿ ಮಹಜರು ನಡೆಸಿದ್ದರಿಂದ ಬಂಗ್ಲೆಗುಡ್ಡ ಅರಣ್ಯದಲ್ಲಿ ಈ ಅಸ್ಥಿಪಂಜರಗಳೂ ಸಿಕ್ಕಿದೆ. ಈ ನಡುವೆ ಇದೇ ವಿಠಲ ಗೌಡ ವಿರುದ್ಧ ಎಸ್‌ಐಟಿಯಲ್ಲಿ ದೂರೊಂದು ದಾಖಲಾಗಿದೆ. ವಿಠಲಗೌಡ ಮಹಜರು ನಡೆಸಿದ ಬಳಿಕ ಎಸ್‌ಐಟಿ ತನಿಖೆ ಬಗ್ಗೆ ವೀಡಿಯೋ ಮಾಡಿ ಹೇಳಿಕೆ ನೀಡಿ ತನಿಖೆಯ ಹಾದಿತಪ್ಪಿಸಲು ಹಾಗೂ ಸಾಕ್ಷ್ಯ ನಾಶ ಮಾಡಲು ಸಾರ್ವಜನಿಕವಾಗಿ ಹೇಳಿಕೆ ನೀಡಲಾಗಿದೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಧರ್ಮಸ್ಥಳದ ಗ್ರಾಮಸ್ಥ ಸಂದೀಪ್ ರೈ ಎಂಬವರು ಬೆಳ್ತಂಗಡಿಯಲ್ಲಿರೋ ಎಸ್‌ಐಟಿ ಕಚೇರಿಗೆ ದೂರು ನೀಡಿದ್ದು, ತನಿಖಾ ಹಂತದಲ್ಲಿ ವಿಠಲ ಗೌಡನಿಂದ ಎಸ್‌ಐಟಿ ತನಿಖೆ ದಾರಿ ತಪ್ಪಿಸೋ ಪ್ರಯತ್ನ ನಡೆದಿದೆ. ಎಸ್‌ಐಟಿ ಯಾವುದೇ ಮಾಹಿತಿ ನೀಡದೇ ಇದ್ದರೂ ವಿಠಲ ಗೌಡ ವಿಡಿಯೋ ಹರಿ ಬಿಟ್ಟು ತನಿಖೆ ಹಾದಿ ತಪ್ಪಿಸಿದ್ದಾನೆ. ವಿಠಲ ಗೌಡ ಹಿಂದೆ ಕೆಲ ವ್ಯಕ್ತಿಗಳು ಸೇರಿಕೊಂಡು ಷಡ್ಯಂತ್ರ ಮಾಡಿದ್ದಾರೆ. ಹೀಗಾಗಿ ವಿಠಲ ಗೌಡ ವಿರುದ್ದ ತನಿಖೆ ನಡೆಸುವಂತೆ ಎಸ್‌ಐಟಿಗೆ ದೂರು ನೀಡಲಾಗಿದೆ. ಎಸ್‌ಐಟಿ ಅಧಿಕಾರಿಗಳು ದೂರು ಸ್ವೀಕರಿಸಿ ಸ್ವೀಕೃತಿ ನೀಡಿದ್ದಾರೆ.

    ಕೋರ್ಟ್‌ನಲ್ಲಿ ಚಿನ್ನಯ್ಯನ ವಿಚಾರಣೆ
    ಈ ನಡುವೆ ಶವ ಹೂತಿಟ್ಟ ಪ್ರಕರಣದ ಆರೋಪಿ ಚಿನ್ನಯ್ಯನನ್ನು ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಧೀಶರ ಮುಂದೆ ಈ ಹಿಂದೆ ನೀಡಿದ್ದ ಹೇಳಿಕೆಗೆ ಹೆಚ್ಚುವರಿ ಹೇಳಿಕೆ ಸೇರ್ಪಡೆ ಪ್ರಕ್ರಿಯೆಯನ್ನು ಮಾಡಲಾಗಿದೆ. ಕಳೆದ ಸೆ.6ರಂದು ಬೆಳ್ತಂಗಡಿ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಶಿವಮೊಗ್ಗ ಜೈಲಿಗೆ ಕಳಿಸಲಾಗಿದೆ. ಇಂದು ಅಲ್ಲಿಂದ ಕರೆತಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಒಟ್ಟಿನಲ್ಲಿ ಈ ಬುರುಡೆ ಪ್ರಕರಣ ದಿನದಿಂದ ದಿನಕ್ಕೆ ಒಂದೊಂದು ತಿರುವು ಪಡೆಯುತ್ತಿದ್ದು, ಇನ್ನೇನು ಆಗುತ್ತೆ ಅನ್ನೋ ಕುತೂಹಲ ಎಲ್ಲರಲ್ಲಿದೆ.

  • ಧರ್ಮಸ್ಥಳ ಕೇಸ್ | ಇಂದು ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟ್‍ಗೆ ಹಾಜರುಪಡಿಸಲಿರುವ ಎಸ್‍ಐಟಿ

    ಧರ್ಮಸ್ಥಳ ಕೇಸ್ | ಇಂದು ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟ್‍ಗೆ ಹಾಜರುಪಡಿಸಲಿರುವ ಎಸ್‍ಐಟಿ

    ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದ (Dharmasthala Case) ಆರೋಪಿ ಚಿನ್ನಯ್ಯನನ್ನು ಇಂದು (ಸೆ.18) ಬೆಳ್ತಂಗಡಿ ಕೋರ್ಟ್‍ಗೆ (Belthangady Court) ಪೊಲೀಸರು ಹಾಜರುಪಡಿಸಲಿದ್ದಾರೆ.

    ನ್ಯಾಯಾಧೀಶರ ಮುಂದೆ ಚಿನ್ನಯ್ಯ ಮತ್ತಷ್ಟು ಹೇಳಿಕೆ ನೀಡಲಿದ್ದಾನೆ. ಈ ಹಿಂದೆ ನೀಡಿದ್ದ ಹೇಳಿಕೆಗೆ ಹೆಚ್ಚುವರಿ ಹೇಳಿಕೆ ಸೇರ್ಪಡೆ ಪ್ರಕ್ರಿಯೆ ನಡೆಯಲಿದೆ. ಸದ್ಯ ಶಿವಮೊಗ್ಗ ಜೈಲಿನಲ್ಲಿರುವ ಚಿನ್ನಯ್ಯನನ್ನು ಸೆ.6ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಮತ್ತೆ ಅಸ್ಥಿಪಂಜರ ಸದ್ದು – ಬಂಗ್ಲೆಗುಡ್ಡದಲ್ಲಿ 5 ತಲೆಬುರುಡೆ, 113 ಮೂಳೆಗಳು ಪತ್ತೆ

    ಶಿವಮೊಗ್ಗ ಜೈಲಿನಿಂದ ಚಿನ್ನಯ್ಯನನ್ನು ಎಸ್‍ಐಟಿ ಅಧಿಕಾರಿಗಳು ಬೆಳಗ್ಗೆ 11:30ಕ್ಕೆ ಬೆಳ್ತಂಗಡಿ ಕೋರ್ಟ್‍ಗೆ ಹಾಜರುಪಡಿಸುವ ಸಾಧ್ಯತೆ ಇದೆ.

    ಎಸ್‌ಐಟಿ ತನಿಖೆಗೆ ಟ್ವಿಸ್ಟ್‌
    ಧರ್ಮಸ್ಥಳದ ಬುರುಡೆ ಕೇಸ್‌ನಲ್ಲಿ ಸೌಜನ್ಯ ಮಾವ ವಿಠಲಗೌಡ ಬಂಗ್ಲೆಗುಡ್ಡದಲ್ಲಿ (Banglegudde) ರಾಶಿರಾಶಿ ಕಳೇಬರ ಸಿಗುತ್ತವೆ ಎಂಬ ವೀಡಿಯೋ ಹೇಳಿಕೆ ಬೆನ್ನಲ್ಲೇ ಎಸ್‌ಐಟಿ (SIT) ತನಿಖೆಗೆ ಟ್ವಿಸ್ಟ್ ಸಿಕ್ಕಿದೆ.

    ನೇತ್ರಾವತಿ ನದಿ (Nethravathi River) ದಡದ ಬಂಗ್ಲೆಗುಡ್ಡಕ್ಕೆ ಎಸ್‌ಐಟಿ ಎಂಟ್ರಿ ಕೊಟ್ಟಿದೆ. ತನಿಖಾಧಿಕಾರಿ ಜಿತೇಂದ್ರ ದಯಾಮ ನೇತೃತ್ವದಲ್ಲಿ ಸುಮಾರು 7 ಗಂಟೆಗಳ ಕಾಲ ಮಹಜರು ನಡೆಯಿತು. ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಸೋಕೋ ಟೀಮ್, ಕಂದಾಯ ಇಲಾಖೆ, ಪಂಚಾಯತ್ ಸಿಬ್ಬಂದಿ ಮಹಜರಿನಲ್ಲಿ ಭಾಗಿಯಾಗಿದ್ದರು. 13 ಎಕರೆ ವಿಸ್ತೀರ್ಣದ ಬಂಗ್ಲೆಗುಡ್ಡದಲ್ಲಿ 5 ಕಡೆ ಮಹಜರು ನಡೆದಿದೆ. ಈ ವೇಳೆ 5 ತಲೆಬುರಡೆ, 113 ಮೂಳೆಗಳು ಸಿಕ್ಕಿವೆ ಎನ್ನಲಾಗಿದೆ. ಇದನ್ನೂ ಓದಿ: ತಿಮರೋಡಿ ವಿರುದ್ಧ ಎಸ್‌ಐಟಿಯಿಂದ ಆರ್ಮ್ಸ್ ಆಕ್ಟ್ ಅಡಿ ಕೇಸ್‌ ದಾಖಲು

  • ಧರ್ಮಸ್ಥಳ ಕೇಸ್‌| ಎಸ್‌ಐಟಿ ಕಸ್ಟಡಿ ಅಂತ್ಯ – ಶಿವಮೊಗ್ಗ ಜೈಲಿಗೆ ಚಿನ್ನಯ್ಯ

    ಧರ್ಮಸ್ಥಳ ಕೇಸ್‌| ಎಸ್‌ಐಟಿ ಕಸ್ಟಡಿ ಅಂತ್ಯ – ಶಿವಮೊಗ್ಗ ಜೈಲಿಗೆ ಚಿನ್ನಯ್ಯ

    ಮಂಗಳೂರು: ಧರ್ಮಸ್ಥಳ (Dharmasthala) ಬುರುಡೆ ಪ್ರಕರಣದ ಆರೋಪಿಯಾಗಿರುವ ಚಿನ್ನಯ್ಯನಿಗೆ (Chinnayya) ಕೋರ್ಟ್‌ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

    ಇಂದು ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡದ ಪೊಲೀಸರು (SIT Police) ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಕೋರ್ಟ್‌ ಚಿನ್ನಯ್ಯನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತು.

    ಕೋರ್ಟ್‌ ಆದೇಶದ ಅನ್ವಯ 15 ದಿನಗಳ ಎಸ್‌ಐಟಿ ಕಸ್ಟಡಿಯಲ್ಲಿದ್ದ ಚಿನ್ನಯ್ಯನನ್ನು ಶಿವಮೊಗ್ಗ ಜೈಲಿಗೆ (Shivamogga Jail) ಕಳುಹಿಸಲು ಪೊಲೀಸರು ಈಗ ಸಿದ್ಧತೆ ನಡೆಸುತ್ತಿದ್ದಾರೆ.

    ಭದ್ರತಾ ದೃಷ್ಟಿಯಿಂದ ಆರೋಪಿ ಚಿನ್ನಯ್ಯನನ್ನು ಪೊಲೀಸರು ಮಂಗಳೂರಿನ ಬದಲು ಶಿವಮೊಗ್ಗ ಜೈಲಿಗೆ ಕಳುಹಿಸಲು ಮುಂದಾಗಿದ್ದಾರೆ ಎಂಬ ವಿಚಾರ ತಿಳಿದು ಬಂದಿದೆ.

  • ಧರ್ಮಸ್ಥಳ ಪ್ರಕರಣ | ಮತ್ತೆ 4 ದಿನ ಎಸ್‌ಐಟಿ ಕಸ್ಟಡಿಗೆ ʻಬುರುಡೆʼ ಚಿನ್ನಯ್ಯ

    ಧರ್ಮಸ್ಥಳ ಪ್ರಕರಣ | ಮತ್ತೆ 4 ದಿನ ಎಸ್‌ಐಟಿ ಕಸ್ಟಡಿಗೆ ʻಬುರುಡೆʼ ಚಿನ್ನಯ್ಯ

    ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ (Dharmasthala Case) ಬಂಧಿತನಾಗಿರುವ ʻಬುರುಡೆʼ ಚಿನ್ನಯ್ಯನನ್ನ ಮತ್ತೆ 4 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶಿಸಿದೆ. ಸೆ.6ರಂದು ಚಿನ್ನಯ್ಯನನ್ನ ಕೋರ್ಟ್‌ಗೆ ಹಾಜರುಪಡಿಸುವಂತೆ ಬೆಳ್ತಂಗಡಿ ನ್ಯಾಯಾಲಯ (Belthangady Court) ಆದೇಶಿಸಿದೆ.

    12 ದಿನಗಳ ಎಸ್‌ಐಟಿ ಕಸ್ಟಡಿ ಇಂದು ಅಂತ್ಯಗೊಂಡಿದ್ದ ಹಿನ್ನೆಲೆ ಚಿನ್ನಯ್ಯನನ್ನ (Chinnayya) ಬೆಳ್ತಂಗಡಿ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಬೆಳ್ತಂಗಡಿ ತಾಲೂಕು ನ್ಯಾಯಾಲಯದ ಹೆಚ್ಚುವರಿ ವ್ಯಾವಹಾರಿಕ ಮತ್ತು ಪ್ರಥಮ ದರ್ಜೆ ನ್ಯಾಯಾಧೀಶರಾದ ವಿಜಯಾನಂದ.ಟಿ ಅವರ ಎದುರು ಹಾಜರುಪಡಿಸಲಾಗಿತ್ತು. ತನಿಖಾಧಿಕಾರಿ ಎಸ್ಪಿ ಜಿತೇಂದ್ರ ಕುಮಾರ್‌ ದಯಾಮ, ಸರ್ಕಾರಿ ಅಭಿಯೋಜಕರು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಇಬ್ಬರು ವಕೀಲರು ಈ ವೇಳೆ ಕೋರ್ಟ್‌ನಲ್ಲಿ ಹಾಜರಿದ್ದರು. ಬಳಿಕ ಕೋರ್ಟ್‌ನ ಬಾಗಿಲುಗಳನ್ನು ಮುಚ್ಚಿ ವಿಚಾರಣೆ ನಡೆಸಲಾಯಿತು. ಇದನ್ನೂ ಓದಿ: ಧರ್ಮಸ್ಥಳ ಪ್ರಕರಣಕ್ಕೆ ದೊಡ್ಡ ತಿರುವು – ಸೌಜನ್ಯ ಪ್ರಕರಣದಲ್ಲಿ ಕ್ಲೀನ್‌ ಚಿಟ್‌ ಪಡೆದವರಿಗೆ SIT ಬುಲಾವ್‌

    ವಿಚಾರಣೆಗೂ ಮುನ್ನ ಸರ್ಕಾರಿ ಅಭಿಯೋಜಕರು ಕೋರ್ಟ್‌ಗೆ ತನಿಖಾ ಪ್ರಗತಿ ವರದಿಯನ್ನು ಸಲ್ಲಿಕೆ ಮಾಡಿದರು. ಅಲ್ಲದೇ ಸಾಕ್ಷಿ ಸಂಗ್ರಹಣೆ, ಬಾಕಿ ವಿಚಾರಣೆ ಇತ್ಯಾದಿ ವಿವರಗಳನ್ನೂ ಸಲ್ಲಿಸಿದರು. ಇದೇ ವೇಳೆ ಎಸ್‌ಐಟಿಯಿಂದಲೂ ತನಿಖಾ ಪ್ರಗತಿ ವರದಿಯನ್ನ ಕೋರ್ಟ್‌ಗೆ ಸಲ್ಲಿಸಲಾಯಿತು. ಇದನ್ನೂ ಓದಿ: ತಲೆಬುರುಡೆ ರಹಸ್ಯ | ಶೀಘ್ರದಲ್ಲೇ ಎಲ್ಲದಕ್ಕೂ ಕ್ಲ್ಯಾರಿಟಿ ಕೊಡ್ತೀನಿ: ಯೂಟ್ಯೂಬರ್ ಸಮೀರ್ ಫಸ್ಟ್ ರಿಯಾಕ್ಷನ್

    ಈ ವೇಳೆ ಕಾನೂನು ಸೇವಾ ಪ್ರಾಧಿಕಾರದ ವಕೀಲರು ಚಿನ್ನಯ ಪರ ವಾದ ಮಂಡಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರಿ ವಕೀಲರು ದೆಹಲಿ, ತಮಿಳುನಾಡಿನಲ್ಲಿ ಮಹಜರು ನಡೆಸಬೇಕಿರುವುದರಿಂದ ಮತ್ತೆ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ವಾದ ಪ್ರತಿವಾದಗಳನ್ನು ಆಲಿಸಿದ ಬಳಿಕ ಕೋರ್ಟ್‌ ಚಿನ್ನಯ್ಯನನ್ನ ಮತ್ತೆ 4 ದಿನ ಕಸ್ಟಡಿಗೆ ನೀಡಿ ಆದೇಶಿಸಿತು. ಸೆ.6ರಂದು ಮತ್ತೆ ಕೋರ್ಟ್‌ಗೆ ಹಾಜರುಪಡಿಸುವಂತೆ ಸೂಚಿಸಿದೆ. ಇದನ್ನೂ ಓದಿ: ಧರ್ಮಸ್ಥಳ ಪರ ಬಿಜೆಪಿ `ಧರ್ಮ’ ಸಮರ – ಎನ್‌ಐಎ ತನಿಖೆಗೆ ವಹಿಸುವಂತೆ ಆಗ್ರಹ