Tag: benagaluru< BJP

  • ಎನ್‍ಆರ್ ರಮೇಶ್‍ಗೆ ಟಿಕೆಟ್ ಸಿಗದ್ದಕ್ಕೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ!

    ಎನ್‍ಆರ್ ರಮೇಶ್‍ಗೆ ಟಿಕೆಟ್ ಸಿಗದ್ದಕ್ಕೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ!

    ಬೆಂಗಳೂರು: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಎನ್ ಆರ್ ರಮೇಶ್ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅವರ ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

    ರಾಜೇಂದ್ರ ನಾಯ್ಡು ಎಂಬವರೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯಗೆ ಯತ್ನಿಸಿದ ರಮೇಶ್ ಅಭಿಮಾನಿಯಾಗಿದ್ದು, ಇದೀಗ ಸಚಿವ ಆರ್ ಅಶೋಕ್ ವಿರುದ್ಧ ಸ್ಪರ್ಧಿಸಿ ಅಂತ ಅಭಿಮಾನಿಗಳ ಒತ್ತಡ ಹಾಕುತ್ತಿದ್ದಾರೆ. ಇದನ್ನೂ ಓದಿ: ಮೊದಲ ಪಟ್ಟಿ ಬಿಡುಗಡೆ ಬೆನ್ನಲ್ಲೇ ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ

    ಅಶೋಕ್ ರಿಂದಾಗಿಯೇ ಅನ್ಯಾಯವಾಗಿದೆ ಅಂತ ಆಕ್ರೋಶ ವ್ಯಕ್ತವಾಗುತ್ತಿದ್ದು, ಹಿರಿಯ ಅಭಿಮಾನಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಯತ್ನಿಸಿದ್ದಾರೆ. ಒಟ್ಟಿನಲ್ಲಿ ಚಿಕ್ಕಪೇಟೆ ಕ್ಷೇತ್ರದ ಬಿಜೆಪಿ ಟಿಕೆಟ್ ವಿಚಾರದಲ್ಲಿ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಯಡಿಯೂರು ವಾರ್ಡ್, ಎನ್ ಆರ್ ಕಾಲೊನಿ ಅಂಗಡಿ ಮುಂಗಟ್ಟುಗಳು ಬಂದ್ ಮಾಡಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

    ಗುರುವಾರ ರಾತ್ರಿ ಚುನಾವಣಾ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ದೆಹಲಿಯಲ್ಲಿ ಬಿಡುಗಡೆ ಮಾಡಿದೆ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ದೀರ್ಘ ಚರ್ಚೆ ನಡೆದಿದ್ದು, ಮೊದಲ ಲಿಸ್ಟ್ ನಲ್ಲಿ 72 ಜನರ ಹೆಸರು ಪ್ರಕಟವಾಗಿದೆ.ಈ ಪಟ್ಟಿಯಲ್ಲಿ ಚಿಕ್ಕಪೇಟೆ ಕ್ಷೇತ್ರದಿಂದ ಉದಯ್ ಗರುಡಾಚರ್ ಟಿಕೆಟ್ ಸಿಕ್ಕಿದೆ.ರಾಜ್ಯದಲ್ಲಿ ನಡೆಸಲಾಗಿರುವ ಸುಮಾರು 16 ರೀತಿಯ ಸಮೀಕ್ಷೆಗಳನ್ನ ಆಧರಿಸಿ ವರಿಷ್ಠರು ಟಿಕೆಟ್ ಫೈನಲ್ ಮಾಡಿದ್ದಾರೆ ಎನ್ನಲಾಗಿದೆ. ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಇತ್ತ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ. ಇದನ್ನೂ ಓದಿ: ಬಿಜೆಪಿಯ 72 ಮಂದಿ ಅಧಿಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್: ಯಾವ ಕ್ಷೇತ್ರದಲ್ಲಿ ಯಾರು ಸ್ಪರ್ಧೆ? 

    2013ರ ಫಲಿತಾಂಶ ಏನಿತ್ತು?
    2013ರ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಆರ್.ವಿ. ದೇವರಾಜ್ 13,059 ಮತಗಳ ಅಂತರದಿಂದ ಜಯಗಳಿಸಿದ್ದರು. ದೇವರಾಜ್ ಪರವಾಗಿ 44,174 ಮತಗಳು ಬಿದ್ದಿದ್ದರೆ, ಉದಯ್ ಗರುಡಾಚರ್ ಅವರಿಗೆ 31,655 ಮತಗಳು ಬಿದ್ದಿತ್ತು.