Tag: bengakuru

  • ಶಬರಿಮಲೆಯಲ್ಲಿ ಚಿನ್ನ ನಾಪತ್ತೆ ಪ್ರಕರಣಕ್ಕೆ ಬೆಂಗಳೂರು ಲಿಂಕ್‌ – ಬಳ್ಳಾರಿಯಲ್ಲಿ ಚಿನ್ನ ಮಾರಾಟ ಮಾಡಿರೋ ಶಂಕೆ

    ಶಬರಿಮಲೆಯಲ್ಲಿ ಚಿನ್ನ ನಾಪತ್ತೆ ಪ್ರಕರಣಕ್ಕೆ ಬೆಂಗಳೂರು ಲಿಂಕ್‌ – ಬಳ್ಳಾರಿಯಲ್ಲಿ ಚಿನ್ನ ಮಾರಾಟ ಮಾಡಿರೋ ಶಂಕೆ

    – ಬಳ್ಳಾರಿಯಲ್ಲಿ 476 ಗ್ರಾಂ ಚಿನ್ನ, ಬೆಂಗಳೂರಲ್ಲಿ 2 ಲಕ್ಷ ನಗದು ವಶಕ್ಕೆ

    ಬೆಂಗಳೂರು/ತಿರುವನಂತಪುರಂ: ಶಬರಿಮಲೆಯಲ್ಲಿ (Sabarimala Ayyappan Temple) ಚಿನ್ನ ನಾಪತ್ತೆ ಪ್ರಕರಣಕ್ಕೆ ಈಗ ಕರ್ನಾಟಕದ ಬೆಂಗಳೂರು, ಬಳ್ಳಾರಿಯ ಲಿಂಕ್‌ ಸಿಕ್ಕಿದೆ. ಪ್ರಮುಖ ಆರೋಪಿ ಬೆಂಗಳೂರಿನ ಉನ್ನಿಕೃಷ್ಣನ್‌ ಪೊಟ್ಟಿಯನ್ನ (Unnikrishnan Potti) ವಿಶೇಷ ತನಿಖಾ ತಂಡದ (Kerala SIT) ಅಧಿಕಾರಿಗಳು ಸಾಕ್ಷ್ಯ ಸಂಗ್ರಹಕ್ಕಾಗಿ ಬೆಂಗಳೂರಿಗೆ ಕರೆತಂದಿದ್ದಾರೆ.

    ಬೆಂಗಳೂರಿನ (Bengaluru) ಶ್ರೀರಾಂಪುರದಲ್ಲಿ ಚಿನ್ನಲೇಪಿತ ಕವಚಗಳನ್ನು ಇರಿಸಿ ಈತ ದೇಣಿಗೆ ಸಂಗ್ರಹಿಸಿದ್ದ ಎಂಬ ಆರೋಪವೂ ಇದೆ. ಹೀಗಾಗಿ ಸಾಕ್ಷ್ಯ ಸಂಗ್ರಹಕ್ಕಾಗಿ ಬೆಂಗಳೂರಿಗೆ ಕರೆತರಲಾಗಿದೆ. ಅಲ್ಲದೇ ಕದ್ದ ಚಿನ್ನವನ್ನ ಬಳ್ಳಾರಿಯಲ್ಲಿ ಮಾರಾಟ ಮಾಡಿರುವ ಆರೋಪದ ಹಿನ್ನೆಲೆ ಬಳ್ಳಾರಿಯಲ್ಲು ತಪಾಸಣೆ ನಡೆಸಿದ್ದು,‌ ಒಂದಿಷ್ಟು ಚಿನ್ನವನ್ನ ರಿಕವರಿ ಮಾಡಲಾಗಿದೆ. ಅದಕ್ಕೆ ಪೂರಕವಾದ ದಾಖಲೆಗಳು ಬೆಂಗಳೂರಿನಲ್ಲಿದ್ದ ಕಾರಣ ಇಬ್ಬರು ಅಧಿಕಾರಿಗಳು ಕೋರ್ಟ್ ಅನುಮತಿಯೊಂದಿಗೆ ಬಂದು ದಾಖಲೆ ಕಲೆ ಹಾಕಿದ್ದಾರೆ

    ಶಬರಿಮಲೆಯ ಚಿನ್ನ ಬಳ್ಳಾರಿಯಲ್ಲಿ ಪತ್ತೆ
    ಎಸ್‌ಪಿ ಶಶಿಧರನ್ ನೇತೃತ್ವದ ಕೇರಳದ ಎಸ್‌ಐಟಿ ಚಿನ್ನ ನಾಪತ್ತೆ ಪ್ರಕರಣದ ತನಿಖೆ ನಡೆಸುತ್ತಿದ್ದು, ನಿನ್ನೆ ರೊದ್ದಂ ಜ್ಯುವೆಲ್ಸ್‌ ಮಳಿಗೆ ಮೇಲೆ ದಾಳಿ ನಡೆಸಿದೆ. ಈ ವೇಳೆ ನಾಣ್ಯಗಳ ರೂಪದಲ್ಲಿ 476 ಗ್ರಾಂ ಚಿನ್ನ ಪತ್ತೆಯಾಗಿದೆ. ಈ ಚಿನ್ನವನ್ನ ಪೊಟ್ಟಿಯಿಂದ ರೊದ್ದಂ ಗೋಲ್ಡ್ ಮಾಲೀಕ ಗೋವರ್ಧನ್ ಖರೀದಿ ಮಾಡಿದ್ದ. ಚಿನ್ನ ವಶಕ್ಕೆ ಪಡೆದ ಎಸ್‌ಐಟಿ ತಂಡ ಗೋವರ್ಧನ್‌ ವಿಚಾರಣೆ ನಡೆಸಿದೆ. ಸದ್ಯ ರೊದ್ದಂ ಗೋಲ್ಡ್ ಶಾಪ್ ಬೀಗ ಹಾಕಲಾಗಿದೆ.

    Sabarimala

    ಅಲ್ಲದೇ ಬೆಂಗಳೂರಿನ ಉನ್ನಿಕೃಷ್ಣನ್‌ ಮನೆಯಲ್ಲಿ ಚಿನ್ನದ ಗಟ್ಟಿ ಹಾಗೂ 2 ಲಕ್ಷ ರೂ. ನಗದು ಪತ್ತೆಯಾಗಿದೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.

    ಏನಿದು ಪ್ರಕರಣ?
    ಇತ್ತೀಚೆಗಷ್ಟೇ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಚಿನ್ನದ ಮೂರ್ತಿಗಳ ಕಳ್ಳತನ ಪ್ರಕರಣ ಬೆಳಕಿಗೆ ಬಂದಿತ್ತು. ದ್ವಾರಪಾಲಕ ವಿಗ್ರಹಕ್ಕೆ ಹೊದಿಸಿದ 42.8 ಕೆಜಿ ತೂಕದ ಕವಚದಲ್ಲಿ 4.5 ಕೆಜಿ ಚಿನ್ನ ನಾಪತ್ತೆಯಾಗಿದೆ. ಹಳೆಯ ತಾಮ್ರ ಮತ್ತು ಚಿನ್ನದ (Gold) ಲೇಪನ ಮೂರ್ತಿಗಳ ತೂಕದಲ್ಲಿ ವ್ಯತ್ಯಾಸ ಕಂಡು ಬಂದಿದೆ ಎಂದು ಆಯುಕ್ತರು ಆರೋಪಿಸಿದ್ದರು.

    2019ರಲ್ಲಿ ದೇವರ ಮೂರ್ತಿಗಳಿಗೆ ಪುನರ್‌ಲೇಪನ ಮಾಡಲಾಗಿತ್ತು. ಈ ವೇಳೆ ತಾಮ್ರದ ಮೂರ್ತಿಗೆ ಹೊದಿಸಿದ್ದ ಚಿನ್ನದ ಕವಚದಲ್ಲಿ 4.5 ಕೆಜಿ ಚಿನ್ನ ಕಳ್ಳತನವಾಗಿದೆ ಎಂಬ ಆರೋಪ ಕೇಳಿಬಂದಿತ್ತು.

  • ರಾಜ್ಯದ ನಗರಗಳ ಹವಾಮಾನ ವರದಿ: 14-10-2020

    ರಾಜ್ಯದ ನಗರಗಳ ಹವಾಮಾನ ವರದಿ: 14-10-2020

    ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದೆ. ಇನ್ನುಳಿದಂತೆ ಹಲವೆಡೆ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಲಿದೆ.

    ನಗರಗಳ ಗರಿಷ್ಠ, ಕನಿಷ್ಠ ಉಷ್ಣಾಂಶ ಮಾಹಿತಿ:
    ಬೆಂಗಳೂರು: 26-19
    ಮಂಗಳೂರು: 28-25
    ಶಿವಮೊಗ್ಗ: 25-21
    ಬೆಳಗಾವಿ: 25-21
    ಮೈಸೂರು: 27-20

    ಮಂಡ್ಯ: 28-21
    ರಾಮನಗರ: 27-20
    ಮಡಿಕೇರಿ: 22-17
    ಹಾಸನ: 23-19
    ಚಾಮರಾಜನಗರ: 28-20

    ಚಿಕ್ಕಬಳ್ಳಾಪುರ: 26-19
    ಕೋಲಾರ: 27- 19
    ತುಮಕೂರು: 26-19
    ಉಡುಪಿ: 28-25
    ಕಾರವಾರ: 28-26

    ಚಿಕ್ಕಮಗಳೂರು: 22-19
    ದಾವಣಗೆರೆ: 26-21
    ಚಿತ್ರದುರ್ಗ: 26-21
    ಹಾವೇರಿ: 26-22
    ಬಳ್ಳಾರಿ: 28-23

    ಧಾರವಾಡ: 26-21
    ಗದಗ: 26-21
    ಕೊಪ್ಪಳ: 27-22
    ರಾಯಚೂರು: 26-22
    ಯಾದಗಿರಿ: 26-23

    ವಿಜಯಪುರ: 26-19
    ಬೀದರ್: 24-21
    ಕಲಬುರಗಿ: 24-22
    ಬಾಗಲಕೋಟೆ: 26-22

  • ಲಿವಿಂಗ್‌ ಟುಗೆದರ್‌ನಲ್ಲಿದ್ದ ಯುವತಿಯ ಅನುಮಾನಾಸ್ಪದ ಸಾವು

    ಲಿವಿಂಗ್‌ ಟುಗೆದರ್‌ನಲ್ಲಿದ್ದ ಯುವತಿಯ ಅನುಮಾನಾಸ್ಪದ ಸಾವು

    ಬೆಂಗಳೂರು: ಯುವತಿಯೊಬ್ಬಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲದಲ್ಲಿ ನಡೆದಿದೆ.

    ಗೀತಾ ಮೃತ ಯುವತಿ. ಗೀತಾ ಗೋಲ್ಡನ್ ಸಿಮ್ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದಳು. ಮೂಲತಃ ಶಿವಮೊಗ್ಗದ ಸಾಗರದ ನಿವಾಸಿಯಾಗಿದ್ದು, ಕಳೆದ ಎರಡು ವರ್ಷಗಳಿಂದ ವಿಕಾಸ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ವಿಕಾಸ್ ಕೂಡ ಅದೇ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದನು. ಅಷ್ಟೇ ಅಲ್ಲದೇ ವಿಕಾಸ್ ಮತ್ತು ಗೀತಾ ಎರಡು ವರ್ಷಗಳಿಂದ ಲಿವಿಂಗ್ ಟುಗೆದರ್‌ನಲ್ಲಿದ್ದ ಇದ್ದರು. ಆದರೆ ಇದೀಗ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಮನೆಯಲ್ಲಿ ಮೃತಪಟ್ಟಿದ್ದಾಳೆ.

    ಮದುವೆಯ ವಿಚಾರವಾಗಿ ವಿಕಾಸ್ ಮತ್ತು ಗೀತಾ ನಡುವೆ ಜಗಳವಾಗಿತ್ತು. ಎರಡು ವರ್ಷ ಪ್ರೀತಿಸಿ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದನು. ಈಗ ಗೀತಾಳನ್ನ ಮದುವೆಯಾಗಲು ವಿಕಾಸ್ ನಿರಾಕರಣೆ ಮಾಡಿದ್ದನು. ಇದೇ ವಿಚಾರವಾಗಿ ಪದೇ ಪದೇ ಇಬ್ಬರು ಜಗಳವಾಡಿಕೊಂಡಿದ್ದರು. ಅಷ್ಟೇ ಅಲ್ಲದೇ ತಾನು ಬೇರೆ ಯುವತಿಯನ್ನ ಮದುವೆಯಾಗುವುದಾಗಿ ವಿಕಾಸ್ ಹೇಳಿದ್ದನು. ಈಗ ಇದೇ ವಿಚಾರಕ್ಕೆ ಗೀತಾಳನ್ನ ವಿಕಾಸ್ ಕೊಲೆ ಮಾಡಿರುವುದಾಗಿ ಪೋಷಕರು ಆರೋಪಿಸಿದ್ದಾರೆ.

    ಈ ಕುರಿತು ಪೋಷಕರು ಅತ್ಯಾಚಾರ ಮಾಡಿ ಹತ್ಯೆ ಮಾಡಿರುವುದಾಗಿ ದೂರು ನೀಡಿದ್ದಾರೆ. ಈ ಹಿಂದೆ ಮನೆ ಕಟ್ಟಲು ಗೀತಾಳ ಬಳಿ ವಿಕಾಸ್ ಮೂರು ಲಕ್ಷ ಹಣ ಪಡೆದುಕೊಂಡಿದ್ದನು ಎಂದು ತಿಳಿದು ಬಂದಿದೆ. ಸದ್ಯಕ್ಕೆ ವಿಕಾಸ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

    ಆರೋಪಿಯನ್ನ ಕರೆತಂದು ವಿಚಾರಣೆ ಮಾಡದೆ ಪೊಲೀಸರು ಹಣ ಪಡೆದುಕೊಂಡು ಬಿಟ್ಟು ಕಳುಹಿಸಲಾಗಿದೆ ಎಂದು ಪೋಷಕರು ಆರೋಪ ಮಾಡಿದ್ದಾರೆ. ಸದ್ಯಕ್ಕೆ ಯುವತಿಯ ಮೃತ ದೇಹ ಮರಣೋತ್ತರ ಪರೀಕ್ಷೆಗೆಂದು ನೆಲಮಂಗಲ ಆಸ್ಪತ್ರೆಗೆ ರವಾನಿಸಲಾಗಿದೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]