ಬೆಂಗಳೂರು: ಭರ್ಜರಿ ಕಾರ್ಯಾಚರಣೆಯೊಂದರಲ್ಲಿ ಎನ್‌ಸಿಬಿ ಅಧಿಕಾರಿಗಳು (NCB Officers) 50 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು (Narcotics) ಜಪ್ತಿ ಮಾಡಿರುವ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಮೊದಲಿಗೆ ಥೈಲ್ಯಾಂಡ್‌ನಿಂದ ಡ್ರಗ್ಸ್ ಸಾಗಾಟ ಮಾಡುತ್ತಿರುವುದಾಗಿ ಅಧಿಕಾರಿಗಳಿಗೆ ಮಾಹಿತಿ ಬಂದಿತ್ತು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡ ಅಧಿಕಾರಿಗಳು ಕೊಲಂಬೋದಿಂದ ಬರ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಬಂಧಿತರಿಂದ 31 ಕೆಜಿ ಹೈಡ್ರೋಗಾಂಜಾ, 4 ಕೆಜಿ ಸೈಲೋಸಿಬಿನ್ ಅಣಬೆ ಜಪ್ತಿ ಮಾಡಿದ್ದರು. ಇವರಿಬ್ಬರ ವಿಚಾರಣೆ ವೇಳೆ ಮುಂದಿನ ಫ್ಲೈಟ್‌ನಲ್ಲಿ ಹ್ಯಾಂಡ್ಲರ್ ಶ್ರೀಲಂಕಾದಿಂದ ಬರುವ ಮಾಹಿತಿ ಸಿಕ್ಕಿತ್ತು. ಅದರಂತೆ ಕಾದು ಕುಳಿತಿದ್ದ ಅಧಿಕಾರಿಗಳು ಶ್ರೀಲಂಕಾದ ಪ್ರಜೆಯನ್ನೂ ಬಂಧಿಸಿ, ಆತನ ಬಳಿಯಿದ್ದ 14 ಕೆ ಜಿ ಹೈಡ್ರೋಗಾಂಜಾ, 2 ಕೆಜಿ ಅಣಬೆಯನ್ನು ಜಪ್ತಿ ಮಾಡಿದರು.
ಆರೋಪಿಗಳು ಒಟ್ಟು 250 ಫುಡ್ ಟಿನ್‌ಗಳಲ್ಲಿ ಡ್ರಗ್ಸ್ ಸೀಲ್ ಮಾಡಿಕೊಂಡು ಬಂದಿದ್ದರು. ಇನ್ನೂ ಈ ವರ್ಷ ಎನ್‌ಸಿಬಿ 100 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿದೆ. 18 ಕೇಸ್‌ಗಳಲ್ಲಿ ಪ್ರಕರಣಗಳಲ್ಲಿ 45 ಆರೋಪಿಗಳನ್ನ ಬಂಧಿಸಲಾಗಿದೆ. ಕೇರಳ, ರಾಜಸ್ಥಾನ, ಗುಜರಾತ್, ಮಾಹಾರಾಷ್ಟ್ರದಲ್ಲಿ ಗಾಂಜಾ ದಂಧೆ ನಡೆಸುತ್ತಿದ್ದ ಆರೋಪಿಗಳು ಎನ್‌ಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ: ʻಏಯ್ ಕರಿ ಟೋಪಿ ಎಂಎಲ್‌ಎ ಬಾರಪ್ಪʼ – ಡಿಕೆಶಿ Vs ವರ್ಸಸ್ ಮುನಿರತ್ನ ನಡ್ವೆ ʻಕರಿ ಟೋಪಿʼ ಕದನ!
ಬೆಂಗಳೂರು: ಬೆಂಗಳೂರಿನಿಂದ ಕೋಲ್ಕತ್ತಾಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಭಾನುವಾರ ರಾತ್ರಿ ಹೈಡ್ರಾಲಿಕ್ ವೈಫಲ್ಯದಿಂದಾಗಿ ಮಧ್ಯದಲ್ಲೇ ಹಿಂತಿರುಗಬೇಕಾಯಿತು ಎಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.
ಬೆಂಗಳೂರು-ಕೋಲ್ಕತ್ತಾ ಮಾರ್ಗದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ (ವಿಮಾನ IX 2718)ದಲ್ಲಿ ಟೇಕ್ ಆಫ್ ಆದ ಸ್ವಲ್ಪ ಸಮಯದಲ್ಲೇ ತಾಂತ್ರಿಕ ದೋಷ ಕಾಣಿಸಿಕೊಂಡಿತು. ಈ ಬಗ್ಗೆ ವರದಿ ಮಾಡಿ, ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹಿಂತಿರುಗಿದೆ.
ಕೆಐಎಯಿಂದ ಸಂಜೆ 7:05 ಕ್ಕೆ ಹೊರಡಬೇಕಿದ್ದ ವಿಮಾನವು ಸಂಜೆ 7:16 ಕ್ಕೆ ಹೊರಟು 9:19 ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದೆ.
–ಬೆಂಗಳೂರು 2ನೇ ಏರ್ಪೋರ್ಟ್ ಸ್ಥಳ, ವಿಜಯಪುರ ಏರ್‌ಪೋರ್ಟ್ ಕಾರ್ಯಾರಂಭಕ್ಕೆ ಕೋರಿಕೆ
ಬೆಂಗಳೂರು: ಇಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ಥಳ ಗುರುತು, ವಿಜಯಪುರ ವಿಮಾನ ನಿಲ್ದಾಣ ಲೋಕಾರ್ಪಣೆಗೆ ಒಪ್ಪಿಗೆ, ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸುವುದು ಸೇರಿದಂತೆ ಕರ್ನಾಟಕದ ವೈಮಾನಿಕ ವಲಯದ ಹಲವು ಬೇಡಿಕೆಗಳೊಂದಿಗೆ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ (MB Patil) ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ್ ನಾಯ್ಡು ಅವರೊಂದಿಗೆ ಮಾತುಕತೆ ನಡೆಸಿದರು.
ಕೇಂದ್ರ ಸಚಿವರನ್ನು ಭೇಟಿ ಮಾಡಿದ ಅವರು, ಬೆಂಗಳೂರಿನ ಸಮೀಪ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಇದಕ್ಕಾಗಿ ಆಯ್ಕೆ ಮಾಡಿದ್ದ ಮೂರು ಸ್ಥಳಗಳನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಉನ್ನತ ಮಟ್ಟದ ತಂಡವು ಪರಿಶೀಲಿಸಿದೆ. ಹೀಗಾಗಿ ಒಂದು ಸ್ಥಳವನ್ನು ಆದಷ್ಟು ಶೀಘ್ರವೇ ಗುರುತು ಮಾಡಿದರೆ, ರಾಜ್ಯವು ಮುಂದಿನ ಕೆಲಸ ಕೈಗೆತ್ತಿಕೊಳ್ಳಲು ಅನುಕೂಲವಾಗಲಿದೆ. ಜೊತೆಗೆ, ವಿಜಯಪುರದಲ್ಲಿ ಉದ್ಘಾಟನೆಗೆ ಸಿದ್ಧವಾಗಿರುವ ವಿಮಾನ ನಿಲ್ದಾಣಕ್ಕೆ ಕೇಂದ್ರ ಪರಿಸರ ಇಲಾಖೆಯ ಅನುಮತಿ ಬಾಕಿಯಿರುವ ಬಗ್ಗೆ ಚರ್ಚಿಸಿದರು.
ಮೈಸೂರು, ಶಿವಮೊಗ್ಗ, ಹಾಸನ, ಕಾರವಾರ, ರಾಯಚೂರು ವಿಮಾನ ನಿಲ್ದಾಣಗಳ ಅಭಿವೃದ್ಧಿ ಮತ್ತು ಭವಿಷ್ಯದ ಯೋಜನೆಗಳ ಬಗ್ಗೆಯೂ ಸುದೀರ್ಘವಾದ ಚರ್ಚೆ ನಡೆದಿದೆ.
ಹುಬ್ಬಳ್ಳಿ, ಬೆಳಗಾವಿ ಏರ್‌ಪೋರ್ಟ್ ಮೇಲ್ದರ್ಜೆಗೇರಿಸಿ:
ಪ್ರಾದೇಶಿಕ ಮತ್ತು ಆರ್ಥಿಕ ಅಭಿವೃದ್ಧಿ ಹಾಗೂ ಉತ್ತರ ಕರ್ನಾಟಕ, ದಕ್ಷಿಣ ಮಹಾರಾಷ್ಟ್ರ ಮತ್ತು ಗೋವಾ ಈ ಭಾಗಗಳಿಗೆ ವಿಮಾನ ಸಂಪರ್ಕ ಸುಧಾರಣೆಯ ಅಗತ್ಯಗಳನ್ನು ಪರಿಗಣಿಸಿ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ದರ್ಜೆಗೇರಿಸಬೇಕೆಂದು ಮನವಿ ಸಲ್ಲಿಸಿದ್ದಾರೆ.
ಎರಡೂ ವಿಮಾನ ನಿಲ್ದಾಣಗಳಲ್ಲಿ ಗಂಟೆಗೆ 2,400 ಪ್ರಯಾಣಿಕರನ್ನು ನಿರ್ವಹಿಸಬಲ್ಲ ಹೊಸ ಟರ್ಮಿನಲ್ ನಿರ್ಮಿಸಲಾಗುತ್ತಿದೆ. ಎ321 ದರ್ಜೆಯ ವಿಮಾನಗಳ ಕಾರ್ಯಾಚರಣೆ ಸಾಧ್ಯವಾಗುವಂತೆ 12 ಪಾರ್ಕಿಂಗ್ ವೇ ಅಭಿವೃದ್ಧಿಪಡಿಸಲಾಗುತ್ತಿದ್ದು, ರಾತ್ರಿ ವೇಳೆಯಲ್ಲೂ ಲ್ಯಾಂಡಿಂಗ್ ಆಗುವಂತೆ ಕ್ರಮ ವಹಿಸಲಾಗಿದೆ. ಜೊತೆಗೆ ಬೆಳಗಾವಿಯಿಂದ ಫೌಂಡ್ರಿ, ಏರೋಸ್ಪೇಸ್ ಸಾಧನಗಳು, ಅಲ್ಯುಮಿನಿಯಂ ಸಾಧನಗಳು, ಹಣ್ಣು ಮತ್ತು ತರಕಾರಿಗಳನ್ನು ಸಾಗಿಸಲು ಪ್ರತ್ಯೇಕ ಟರ್ಮಿನಲ್ ಇದೆ. ಇದಲ್ಲದೆ ಬೆಳಗಾವಿಯಲ್ಲಿ 3 ವಿ.ವಿ,ಗಳು, 3 ಮೆಡಿಕಲ್ ಕಾಲೇಜುಗಳು, ಕೆಎಲ್‌ಇ ವಿವಿ ಎಲ್ಲವೂ ಇದ್ದು ವಿಶೇಷವಾಗಿ ಮಲೇಷ್ಯಾದಿಂದ ಹೆಚ್ಚಿನ ವಿದ್ಯಾರ್ಥಿಗಳು ಇಲ್ಲಿಗೆ ಬರುತ್ತಿದ್ದಾರೆ. ಇನ್ನೊಂದೆಡೆ, ರಕ್ಷಣಾ ವಲಯಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರದ ಏರ್‌ಮೆನ್ ತರಬೇತಿ ಶಾಲೆ, ಕಮ್ಯಾಂಡೋ ತರಬೇತಿ ಕೇಂದ್ರ, ಜೂನಿಯರ್ ಲೀಡರ್ಸ್ ವಿಂಗ್, ಇನ್ಫೆಂಟ್ರಿ ಸ್ಕೂಲ್, ಮರಾಠಾ ಲಘು ಪದಾತಿ ದಳದ ಕೇಂದ್ರ ಮತ್ತು ಐಟಿಬಿಪಿ ತರಬೇತಿ ಕೇಂದ್ರಗಳಿವೆ. ಇವೆಲ್ಲವನ್ನೂ ಮೇಲ್ದರ್ಜೆಗೇರಿಸಲು ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ಮನದಟ್ಟು ಮಾಡಿಕೊಟ್ಟಿದ್ದಾರೆ.
ಹುಬ್ಬಳ್ಳಿಯಲ್ಲಿ ಕೂಡ 16,900 ಚ.ಮೀ. ವಿಸ್ತೀರ್ಣದ ಹೊಸ ಟರ್ಮಿನಲ್ ನಿರ್ಮಿಸಲಾಗುತ್ತಿದ್ದು, ಎಬಿ320 ದರ್ಜೆಯ ವಿಮಾನಗಳ ನಿರ್ವಹಣೆ ಸಾಧ್ಯವಾಗುವಂತೆ ಮಾಡಲಾಗುತ್ತಿದೆ. ಇಲ್ಲಿರುವ ಕಾರ್ಗೋ ಟರ್ಮಿನಲ್‌ನಲ್ಲಿ ಈಗ ವಾರ್ಷಿಕ 15 ಟನ್ ಸರಕು ಸಾಗಣೆ ಆಗುತ್ತಿದೆ. ಜೊತೆಗೆ ವರ್ಷಕ್ಕೆ 3 ಲಕ್ಷ ಪ್ರಯಾಣಿಕರ ನಿರ್ವಹಣೆ ನಡೆಯುತ್ತಿದೆ. ಮೊದಲಿನಿಂದಲೂ ವಾಣಿಜ್ಯ ವಲಯವಾಗಿರುವ ಹುಬ್ಬಳ್ಳಿ-ಧಾರವಾಡದಲ್ಲಿ ಇತ್ತೀಚೆಗೆ ಐಐಟಿ, ಐಐಐಟಿ ಸಂಸ್ಥೆಗಳು ಬಂದಿದ್ದು, ಕಿಮ್ಸ್ ಆಸ್ಪತ್ರೆ ಕೂಡ ಗಮನ ಸೆಳೆಯುತ್ತಿದೆ ಎಂದು ವಿವರಿಸಿದ್ದಾರೆ.
755 ಎಕರೆ ಇರುವ ಬೆಳಗಾವಿ ಏರ್‌ಪೋರ್ಟ್ 1990ರಿಂದ ಮತ್ತು 957 ಎಕರೆ ಇರುವ ಹುಬ್ಬಳ್ಳಿ ಏರ್‌ಪೋರ್ಟ್ 1980ರಿಂದ ಸಕ್ರಿಯವಾಗಿವೆ. ಇವುಗಳನ್ನು ಅಂತಾರಾಷ್ಟ್ರೀಯ ಮೇಲ್ದರ್ಜೆಗೆ ಏರಿಸಿದರೆ ಮಧ್ಯಪ್ರಾಚ್ಯ ದೇಶಗಳು, ಸಿಂಗಪುರ ಸೇರಿದಂತೆ ಆಗ್ನೇಯ ಏಷ್ಯಾ ರಾಷ್ಟ್ರಗಳೊಂದಿಗೆ ಸುಗಮ ವಿಮಾನ ಸಂಚಾರ ಸಾಧ್ಯವಾಗಲಿದೆ. ಜೊತೆಗೆ ಇ-ಕಾಮರ್ಸ್ ಅಭಿವೃದ್ಧಿಯಾಗಲಿದ್ದು, ಉತ್ತರ ಕರ್ನಾಟಕದ ಈ ಎರಡೂ ನಗರಗಳು ಲಾಜಿಸ್ಟಿಕ್ಸ್ ಹಬ್ ಆಗಿ ಬೆಳವಣಿಗೆಯಾಗಲಿವೆ ಎಂದು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ, ನಾಗರಿಕ ವಿಮಾನಯಾನ ವಲಯದಲ್ಲಿ ಕರ್ನಾಟಕ ರಾಜ್ಯವನ್ನು ಪಾಲುದಾರ ಎಂದು ಪರಿಗಣಿಸಬೇಕು. ಇದರಿಂದಾಗಿ ವಿಮಾನ ನಿಲ್ದಾಣ ಪ್ರಾಧಿಕಾರ ನಿರ್ವಹಿಸುತ್ತಿರುವ ರಾಜ್ಯದ ಮಂಗಳೂರು, ಮೈಸೂರು, ಹುಬ್ಬಳ್ಳಿ, ಕಲಬುರಗಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳಿಂದ ರಾಜ್ಯಕ್ಕೂ ಲಾಭದ ಪಾಲು ಸಿಗಲಿದೆ. ಈ ವಿಷಯದಲ್ಲಿ ರಾಜ್ಯದ ಪಾತ್ರವನ್ನು ಕೇವಲ ಭೂಸ್ವಾಧೀನ ಮತ್ತು ಸೌಕರ್ಯಗಳ ಅಭಿವೃದ್ಧಿಗೆ ಮಾತ್ರ ಸೀಮಿತಗೊಳಿಸಬಾರದು. ಜೊತೆಗೆ ನಾಗರಿಕ ವಿಮಾನಯಾನ ವಲಯದಲ್ಲಿನ ಆಸ್ತಿ ನಗದೀಕರಣ ಯೋಜನೆಯಲ್ಲೂ ರಾಜ್ಯವನ್ನು ಪಾಲುದಾರ ಎಂದು ಗುರುತಿಸಬೇಕು. 2021ರಲ್ಲಿ ಖಾಸಗೀಕರಣಕ್ಕೆಂದು ಗುರುತಿಸಿದ ದೇಶದ 13 ವಿಮಾನ ನಿಲ್ದಾಣಗಳಲ್ಲಿ ಹುಬ್ಬಳ್ಳಿ ಕೂಡ ಒಂದಾಗಿದೆ. ಆದರೆ, ಆ ಯೋಜನೆಯಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ಯಾವ ಪ್ರಗತಿಯೂ ಕಂಡುಬಂದಿಲ್ಲ ಎಂದು ಆಗ್ರಹಿಸಿದ್ದಾರೆ.
ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನ ರಾಮೇಶ್ವರಂ ಕೆಫೆ (Rameshwaram Cafe) ತಿಂಡಿಯಲ್ಲಿ ಜಿರಳೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಹಕನ ವಿರುದ್ಧ ಹಣಕ್ಕಾಗಿ ಬ್ಲ್ಯಾಕ್‌ಮೇಲ್ (Blackmail) ಆರೋಪದಡಿ ದೂರು ದಾಖಲಾಗಿದೆ.
ಗುರುವಾರ ಬೆಳಿಗ್ಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ (Bengaluru Airport) ರಾಮೇಶ್ವರಂ ಕೆಫೆಯಲ್ಲಿ ಗ್ರಾಹಕನೋರ್ವ ಪೊಂಗಲ್ ಖರೀದಿಸಿ, ಸೇವಿಸುತ್ತಿರುವಾಗ ಅದರಲ್ಲಿ ಜಿರಳೆ ಪತ್ತೆಯಾಗಿದೆ. ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆ ರಾಮೇಶ್ವರಂ ಕೆಫೆ ಸ್ಪಷ್ಟನೆ ನೀಡಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಗ್ರಾಹಕರು ಆಹಾರ ಮಾಲಿನ್ಯದ ಬಗ್ಗೆ ಸುಳ್ಳು ಆರೋಪ ಹೊರಿಸುತ್ತಿದ್ದು, ಈ ಮೂಲಕ ಬ್ರ್ಯಾಂಡ್‌ಮೇಲ್‌ಗೆ ಹಾನಿ ಮಾಡಲು ಹೊರಟಿದ್ದಾರೆ. ಜೊತೆಗೆ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ ಎಂದು ಆರೋಪಿಸಿದೆ. ಈ ಸಂಬಂಧ ಗ್ರಾಹಕನ ವಿರುದ್ಧ ದಾಖಲಾಗಿದೆ.ಇದನ್ನೂ ಓದಿ: ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
ಸ್ಪಷ್ಟನೆ ಏನು?
ಭಾರತದ ಅತ್ಯಂತ ಜನಪ್ರಿಯ ಕ್ವಿಕ್ ಸರ್ವಿಸ್ ರೆಸ್ಟೋರೆಂಟ್ ಬ್ರ್ಯಾಂಡ್‌ಗಳಲ್ಲಿ ಒಂದಾದ ರಾಮೇಶ್ವರಂ ಕೆಫೆ, ತನ್ನ ಬೆಂಗಳೂರು ವಿಮಾನ ನಿಲ್ದಾಣದ ಔಟ್‌ಲೆಟ್‌ನಲ್ಲಿ ಆಹಾರ ಮಾಲಿನ್ಯದ ಸುಳ್ಳು ಘಟನೆಯನ್ನು ಪ್ರದರ್ಶಿಸಿ, ಬ್ರ‍್ಯಾಂಡ್‌ಗೆ ಹಾನಿಯಾಗಿದೆ. ಜೊತೆಗೆ ಹಣ ಸುಲಿಗೆ ಮಾಡಲು ಯತ್ನಿಸಿದ ವ್ಯಕ್ತಿಗಳ ಗುಂಪಿನ ವಿರುದ್ಧ ಅಧಿಕೃತ ಪೊಲೀಸ್ ದೂರು ದಾಖಲಿಸಿದೆ.
ಬ್ರ‍್ಯಾಂಡ್‌ನ ಮುಖ್ಯಸ್ಥರು ನೀಡಿದ ಔಪಚಾರಿಕ ದೂರಿನ ಪ್ರಕಾರ, ಜು.24ರ ಬೆಳಿಗ್ಗೆ ಈ ಘಟನೆ ಸಂಭವಿಸಿದೆ, 5-7 ವ್ಯಕ್ತಿಗಳ ಗುಂಪು ಸಾರ್ವಜನಿಕವಾಗಿ ಗೊಂದಲ ಸೃಷ್ಟಿಸಿದ್ದಾರೆ. ನೀಡಿದ ಆಹಾರದಲ್ಲಿ ಜಿರಳೆಯಿದೆ ಎಂದು ತಪ್ಪಾಗಿ ಆರೋಪಿಸಿದ್ದಾರೆ. ಬಳಿಕ ವ್ಯಕ್ತಿಗಳು ನಮಗೆ ಪರಿಹಾರ ನೀಡದಿದ್ದಲ್ಲಿ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಉಲ್ಲೇಖಿಸಿದೆ.
ಸ್ವಲ್ಪ ಸಮಯದ ನಂತರ ಕೆಫೆಗೆ 25 ಲಕ್ಷ ರೂ. ನಗದು ನೀಡುವಂತೆ ಬೆದರಿಕೆ ಕರೆ ಬಂದಿತ್ತು. ಬಳಿಕ ಕೆಫೆಯು ಕರೆ ದಾಖಲೆಗಳು, ಸಂದೇಶಗಳ ಸ್ಕ್ರೀನ್‌ಶಾಟ್ ಮತ್ತು ಇತರ ದಾಖಲಾತಿಗಳನ್ನು ಪೊಲೀಸರಿಗೆ ಸಲ್ಲಿಸಿದೆ.
ಈ ಆರೋಪವನ್ನು ತಳ್ಳಿಹಾಕಿರುವ ರಾಮೇಶ್ವರಂ ಕೆಫೆಯ ಸಂಸ್ಥಾಪಕಿ ದಿವ್ಯಾ ರಾಘವ್, ನಮ್ಮ ಆಹಾರದಲ್ಲಿ ಹುಳು ಅಥವಾ ಕೀಟ ಕಂಡುಬಂದಿದೆ ಎಂಬ ಆಧಾರರಹಿತ ಆರೋಪವನ್ನು ನಾವು ಒಪ್ಪುವುದಿಲ್ಲ. ನಾವು ಕಟ್ಟುನಿಟ್ಟಾದ, ಗುಣಮಟ್ಟದ ಪ್ರೋಟೋಕಾಲ್‌ಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತೇವೆ. ವಿಶೇಷವಾಗಿ ವಿಮಾನ ನಿಲ್ದಾಣಗಳು ಮತ್ತು ಸೂಕ್ಷ್ಮ ಸ್ಥಳಗಳಲ್ಲಿ ಇದು ಸ್ಪಷ್ಟವಾಗಿ ಹಣ ಸುಲಿಗೆ ಮಾಡುವ ಮತ್ತು ನಮ್ಮ ಬ್ರ‍್ಯಾಂಡ್‌ಗೆ ಹಾನಿ ಮಾಡುವ ದುರುದ್ದೇಶದ ಕೃತ್ಯವಾಗಿದೆ ಎಂದಿದ್ದಾರೆ.
ಈ ಹಿಂದೆಯೂ ಇದೇ ರೀತಿಯ ಪ್ರಯತ್ನಗಳು ನಡೆದಿವೆ, ಗ್ರಾಹಕರು ಆಹಾರದಲ್ಲಿ ಕಲ್ಲು, ಕೀಟಗಳನ್ನು ಹಾಕಿದಾಗ ರೆಡ್‌ಹ್ಯಾಂಡ್‌ಗೆ ಸಿಕ್ಕಿಬಿದ್ದಿದ್ದಾರೆ. ನಾವು ಬೆದರಿಕೆ ಅಥವಾ ಬ್ಲ್ಯಾಕ್‌ಮೇಲ್‌ಗೆ ಮಣಿಯುವುದಿಲ್ಲ. ನಾವು ಅಧಿಕಾರಿಗಳೊಂದಿಗೆ ಸಂಪೂರ್ಣವಾಗಿ ಸಹಕರಿಸುತ್ತೇವೆ ಮತ್ತು ಅಂತಹ ಕೃತ್ಯಗಳನ್ನು ಬಹಿರಂಗಪಡಿಸಲು ಮತ್ತು ತಡೆಯಲು ಕಠಿಣ ಕಾನೂನು ಕ್ರಮವನ್ನು ಅನುಸರಿಸುತ್ತೇವೆ. ಗ್ರಾಹಕರನ್ನು ದಾರಿತಪ್ಪಿಸುವ ಕೆಲಸ ಮಾಡುವ ವ್ಯವಹಾರಗಳ ವಿಷಯವನ್ನು ಹಂಚಿಕೊಳ್ಳುವುದನ್ನು ತಡೆಯಲು ರಾಮೇಶ್ವರಂ ಕೆಫೆ ಸಾರ್ವಜನಿಕರು ಮತ್ತು ಮಾಧ್ಯಮಗಳನ್ನು ಒತ್ತಾಯಿಸುತ್ತದೆ ಎಂದಿದ್ದಾರೆ.ಇದನ್ನೂ ಓದಿ: ಕರ್ನಾಟಕದಲ್ಲಿ ವಂಚನೆ | ರಾಹುಲ್ ಆರೋಪಕ್ಕೆ ಹೈಕೋರ್ಟ್ ತೀರ್ಪಿಗಾಗಿ ಕಾಯಿರಿ ಎಂದ ಚುನಾವಣಾ ಆಯೋಗ
ನವದೆಹಲಿ: 168 ಪ್ರಯಾಣಿಕರನ್ನು ಹೊತ್ತು ಸಾಗಿದ್ದ ಇಂಡಿಗೋ (IndiGo Flight) ವಿಮಾನ ಹಾರಾಟದ ಸಮಯದಲ್ಲೇ ‘ಮೇಡೇ’ ಘೋಷಿಸಿದೆ. ಅದೃಷ್ಟವಶಾತ್ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ.
168 ಪ್ರಯಾಣಿಕರಿದ್ದ ಇಂಡಿಗೋದ ಗುವಾಹಟಿ-ಚೆನ್ನೈ ವಿಮಾನವು ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಮೂಲಗಳು ತಿಳಿಸಿವೆ. ಅಹಮದಾಬಾದ್‌ನಲ್ಲಿ ಟೇಕಾಫ್ ಆದ ಸ್ವಲ್ಪ ಸಮಯದಲ್ಲೇ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿತ್ತು. ಪೈಲಟ್‌ಗಳು ‘ಮೇಡೇ’ ಘೋಷಿಸಿದ ಕೆಲ ಹೊತ್ತಲ್ಲೇ ಈ ದುರಂತ ಸಂಭವಿಸಿತ್ತು. ಇದನ್ನೂ ಓದಿ: ʻಮೇ ಡೇʼ – ವಿಮಾನ ಪತನಕ್ಕೂ ಮುನ್ನ ಎಟಿಸಿಗೆ ಪೈಲಟ್ ಕೊಟ್ಟ ಕೊನೆಯ ಸಂದೇಶ
ಗುರುವಾರ ಈ ಘಟನೆ ನಡೆದಿದೆ. ಇಂಧನವು ತೀರಾ ಕಡಿಮೆ ಇದ್ದ ಇಂಡಿಗೋ ವಿಮಾನವು ಬೆಂಗಳೂರಿನಲ್ಲಿ ಸುರಕ್ಷಿತವಾಗಿ ಇಳಿಯಿತು. ವಿಪತ್ತಿನ ಕರೆ ಬಂದ ನಂತರ, ಎಟಿಸಿ (ವಾಯು ಸಂಚಾರ ನಿಯಂತ್ರಣ) ಸಿಬ್ಬಂದಿಗೆ ಮಾಹಿತಿ ನೀಡಿತು. ಅವರು ಕಾರ್ಯಪ್ರವೃತ್ತರಾದರು. ವೈದ್ಯಕೀಯ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳದಲ್ಲಿದ್ದರು. ವಿಮಾನವು ರಾತ್ರಿ 8:20 ಕ್ಕೆ ಸುರಕ್ಷಿತವಾಗಿ ಇಳಿಯಿತು ಎಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ಇದನ್ನೂ ಓದಿ: Mayday ಅಂದ್ರೆ ವಿಮಾನ ತುಂಬಾ ಡೆಂಜರ್‌ನಲ್ಲಿದ್ದಂತೆ – ದುರಂತದ ಬಗ್ಗೆ ಯುವ ಮಹಿಳಾ ಪೈಲಟ್ ಹೇಳಿದ್ದೇನು?
ಮಧುರೈಗೆ ಹೋಗುತ್ತಿದ್ದ ಇಂಡಿಗೋ ವಿಮಾನವು ಆಕಾಶದಲ್ಲೇ ತಾಂತ್ರಿಕ ದೋಷವನ್ನು ಅನುಭವಿಸಿತು. ಸುಮಾರು 168 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಸುರಕ್ಷಿತವಾಗಿ ಇಳಿಯಿತು. ಎಲ್ಲಾ ಪ್ರಯಾಣಿಕರನ್ನು ಸೂಕ್ತ ಸುರಕ್ಷತಾ ಕ್ರಮಗಳೊಂದಿಗೆ ಕೆಳಗಿಳಿಸಲಾಯಿತು.
– ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಯಶಸ್ಸನ್ನ ಕಟ್ಟಿಹಾಕ್ತಿದೆ ಎಂದು ಆಕ್ಷೇಪ
– ಕರ್ನಾಟಕ ದೇಶದ ಆರ್ಥಿಕತೆಯ ಎಂಜಿನ್ ಅಂತ ಬಣ್ಣನೆ
ಬೆಂಗಳೂರು: ಬೋಸ್ಟನ್, ಸ್ಯಾನ್‌ಫ್ರಾನ್ಸಿಸ್ಕೋ ನಗರಗಳಲ್ಲಿ ಆಯೋಜನೆಗೊಂಡಿದ್ದ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಲು ವಿದೇಶಕ್ಕೆ ತೆರಳಿದ್ದ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ಅಮೆರಿಕಗೆ (USA) ಕ್ಲಿಯರೆನ್ಸ್ ಸಿಗದ ಹಿನ್ನೆಲೆ ಇಂದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬರ್ತಿದ್ದಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Bengaluru Airport) ಬಂದಿಳಿದ ಪ್ರಿಯಾಂಕ್ ಖರ್ಗೆ ಮಾಧ್ಯಮಗಳೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಯಶಸ್ಸನ್ನ ಕಟ್ಟಿಹಾಕುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಮೆರಿಕಗೆ ತೆರಳಲು ನೋ ಕ್ಲಿಯರೆನ್ಸ್ – ಪ್ರಿಯಾಂಕ್ ಖರ್ಗೆಗೆ ಬಿಗ್ ಶಾಕ್
ಅಮೆರಿಕ ಭೇಟಿಗೆ ಕೇಂದ್ರದಿಂದ ಕ್ಲಿಯರೆನ್ಸ್ ಸಿಗದ ಕುರಿತು ಮಾತನಾಡಿ, ತಿರಸ್ಕಾರ ಮಾಡಲಿ, ಆದ್ರೆ ಅದಕ್ಕೆ ಕಾರಣ ಕೊಡಬೇಕು. ʻಮೇಕ್ ಇನ್ ಇಂಡಿಯಾʼ ಅಂತಾ ದೊಡ್ಡ ದೊಡ್ಡ ಮಾತುಗಳು ಹೇಳ್ತಾರೆ. ಯಾವುದೇ ಘೋಷಣೆ ಕೊಟ್ಟರೂ ಅದು ಪ್ರಾರಂಭವಾಗಬೇಕಿರೋದು ಕರ್ನಾಟಕದಿಂದ್ಲೇ. ನಮ್ಮಲ್ಲಿ ಅಷ್ಟೊಂದು ಮಾನವ ಸಂಪನ್ಮೂಲ ಹಾಗೂ ಅರ್ಹತೆ ಇದೆ. ಡೆಲಿಗೇಷನ್‌ಗೆ ಮೊದಲು ತಿರಸ್ಕಾರ ಮಾಡಿದ್ರು ನಂತರ, ಡೆಲಿಗೇಷನ್‌ಗೆ ಅನುಮತಿ ಕೊಟ್ರು ಅದ್ರೆ ನಮಗೆ ತಿರಸ್ಕಾರ ಮಾಡಿದ್ರು ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಉತ್ತರ ಕನ್ನಡ | ಅರಬ್ಬಿ ಸಮುದ್ರದಲ್ಲಿ ಭಾರೀ ಅಲೆ ಸಾಧ್ಯತೆ – ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ
ಕರ್ನಾಟಕ ದೇಶದ ಅರ್ಥಿಕತೆಯ ಎಂಜಿನ್
ನಾವು ಆಟ ಅಡೋದಕ್ಕೆ ಅಲ್ಲಿಗೆ ಹೋಗ್ತಿಲ್ಲ, ಜನರಿಗೆ ಉದ್ಯೋಗ ಸೃಷ್ಟಿ ಮಾಡೋದು ನಮ್ಮ ಕರ್ತವ್ಯ. ಬಂಡವಾಳ ತರೋದು ಕೂಡ ನಮ್ಮ ಕರ್ತವ್ಯವಾಗಿದೆ. ಕರ್ನಾಟಕಕ್ಕೆ ಒಳ್ಳೆದಾದ್ರೆ ನಮ್ಮ ರಾಷ್ಟ್ರಕ್ಕೆ ತಾನೆ ಒಳ್ಳೆದು, ಕರ್ನಾಟಕ ದೇಶದ ಅರ್ಥಿಕತೆಯ ಎಂಜಿನ್. ವಿನಾಃ ಕಾರಣ ಸಾರಸಾಗಟಾಗಿ ತಿರಸ್ಕಾರ ಮಾಡೋದು ಸರಿಯಲ್ಲ. ಹೋದ ಬಾರಿ ನಾವು ಎಂ.ಬಿ ಪಾಟೀಲ್ ಅವರು ಅಮೆರಿಕಗೆ ಹೋಗಿದ್ವಿ. ಆಗ 35 ರಿಂದ 40 ಸಾವಿರ ಕೋಟಿ ಲೆಟರ್ ಆಫ್ ಇಂಟೆಂಟ್ ಹಾಗೂ ಎಂಓಯೂ ಗಳಾಗಿದ್ವು. ಅದನ್ನ ಇನ್ವೆಸ್ಟ್ ಕರ್ನಾಟಕದಲ್ಲಿ ಸಾಲಿಡಿಫೈ ಮಾಡಿದ್ವಿ. ಮೊನ್ನೆ ಸೆಮಿಕಂಡಕ್ಟರ್ ಮತ್ತೆ ಎಲೆಕ್ಟ್ರಾನಿಕ್ಸ್ ಮ್ಯಾನಿಫಾಕ್ಚರ್‌ಗೆ ಸುಮಾರು 20 ಸಾವಿರ ಕೋಟಿ ರೂ ಅನುಮೋದನೆ ಕೊಟ್ಟಿದ್ದೀವಿ. ಇದರ ಪ್ರತಿಫಲವಾಗಿ ಕರ್ನಾಟಕ ಎಲೆಕ್ಟ್ರಾನಿಕ್ಸ್ ಹಬ್ ಹಾಗೂ ಏರೋಸ್ಪೇಸ್ ಹಬ್ ಆಗಿದೆ. ನವೋದ್ಯಮದಲ್ಲಿ ಅಗ್ರಸ್ಥಾನ ಪಡೆದು ಕೊಳ್ಳಲು ಕರ್ನಾಟಕಕ್ಕೆ ಸಾಧ್ಯವಾಗುತ್ತಿದೆ ಎಂದು ರಾಜ್ಯ ಸರ್ಕಾರದ ಕಾರ್ಯಕ್ಷಮತೆಯನ್ನ ವಿವರಿಸಿದ್ದಾರೆ.
ಕಳೆದ 1 ವರ್ಷದಲ್ಲಿ ಇಷ್ಟೆಲ್ಲ ಮಾಡಿದ್ರು ಯಾಕೆ ರಿಜೆಕ್ಟ್ ಮಾಡಿದ್ರು ಗೊತ್ತಿಲ್ಲ. ಇವೆಲ್ಲದರ ಬಗ್ಗೆ ಏನೇನು ಮಾಹಿತಿಯಿದೆ ಅದನ್ನ ಮುಖ್ಯಮಂತ್ರಿಗೆ ಮೊದಲು ತಿಳಿಸ್ತೀನಿ. ಆಮೇಲೆ ಮಾಧ್ಯಮಗಳ ಮುಂದೆ ಬರ್ತೀನಿ ಕೇಂದ್ರ ಸರ್ಕಾರದ ನಡೆ ಸರಿಯಿಲ್ಲ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಜ್ವಾಲಾಮುಖಿ ಸ್ಫೋಟ – ದೆಹಲಿಯಿಂದ ಬಾಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ವಾಪಸ್
ಏನಾಗಿತ್ತು?
ಐಟಿ ಬಿಟಿಗೆ ಸಂಬಂಧಪಟ್ಟಂತೆ ಪ್ರಿಯಾಂಕ್ ಖರ್ಗೆ ಬೋಸ್ಟನ್, ಸ್ಯಾನ್‌ಫ್ರಾನ್ಸಿಸ್ಕೋ ನಗರಗಳಲ್ಲಿ ಆಯೋಜನೆಗೊಂಡಿದ್ದ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಬೇಕಿತ್ತು. ಪ್ರಿಯಾಂಕ್ ಜೊತೆ ತೆರಳಿದ್ದ ಐಎಎಸ್ ಅಧಿಕಾರಿಗೆ ಅಮೆರಿಕಗೆ ತೆರಳಲು ಕ್ಲಿಯರೆನ್ಸ್ ಸಿಕ್ಕಿದೆ. ಆದ್ರೆ ಪ್ಯಾರಿಸ್ ಪ್ರವಾಸದ ಬಳಿಕ ಅಮೆರಿಕಗೆ ತೆರಳಬೇಕಿದ್ದ ಐಟಿ ಬಿಟಿ ಸಚಿವರಿಗೆ ಕ್ಲಿಯರೆನ್ಸ್ ಸಿಗದ ಹಿನ್ನೆಲೆ ಅವರಿಂದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ.
ಬೆಂಗಳೂರು: ಉಗ್ರರ ಪೋಷಕ ಪಾಕಿಸ್ತಾನಕ್ಕೆ (Pakistan) ಬೆಂಬಲ ಘೋಷಿಸಿದ ಟರ್ಕಿಗೆ ಶಾಕ್ ಮೇಲೆ ಶಾಕ್ ಎದುರಾಗಿದೆ. ಭಾರತದಾದ್ಯಂತ ಟರ್ಕಿ ಮೇಲೆ ಹಲವು ನಿರ್ಬಂಧಗಳನ್ನು ವಿಧಿಸಲಾಗಿದ್ದು, ಈಗ ಆ ಸಾಲಿಗೆ ಬೆಂಗಳೂರು ಕೂಡ ಸೇರಿಕೊಂಡಿದೆ.
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಕಿಯ ಸೆಲೆಬಿ ಏವಿಯೇಷನ್ ಏರ್ಪೋರ್ಟ್ ಸೇವೆಗಳನ್ನು ಗುರುವಾರ ತಡರಾತ್ರಿಯಿಂದಲೇ ಸ್ಥಗಿತಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಆದೇಶದ ಬೆನ್ನಲ್ಲೇ ಬೆಂಗಳೂರು ವಿಮಾನ ನಿಲ್ದಾಣದಲ್ಲಿಯೂ ಕ್ರಮ ಕೈಗೊಳ್ಳಲಾಗಿದೆ. ಇದನ್ನೂ ಓದಿ: Boycott Turkey| ಟರ್ಕಿಗೆ ದೊಡ್ಡ ಹೊಡೆತ – ಸೆಲೆಬಿ ಲೈಸೆನ್ಸ್ ರದ್ದು!
ಟರ್ಕಿಯ ಕಂಪನಿಗೆ ಬೆಂಗಳೂರಿನಲ್ಲಿಯೂ ಭಾರಿ ಹೊಡೆತ ಬಿದ್ದಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿನಿತ್ಯ 15 ಅಂತಾರಾಷ್ಟ್ರೀಯ ವಿಮಾನಗಳು ಮತ್ತು ಕಾರ್ಗೋ ವಿಮಾನಗಳನ್ನು ಸೆಲೆಬಿ ಏವಿಯೇಷನ್ ನಿರ್ವಹಣೆ ಮಾಡುತ್ತಿತ್ತು. ಅವುಗಳನ್ನು ಗುರುವಾರ ರಾತ್ರಿಯಿಂದಲೇ ಬೇರೆ ಏರ್ ಸರ್ವೀಸಸ್ ಕಂಪನಿಗಳ ಮೂಲಕ ನಿರ್ವಹಣೆ ಮಾಡಲಾಗುತ್ತಿದೆ ಅಂತಾ ಪ್ರಕಟಣೆಯಲ್ಲಿ ತಿಳಿಸಿದೆ.
ದೇಶದ 9 ವಿಮಾನ ನಿಲ್ದಾಣಗಳಲ್ಲಿ ಪ್ರಾಥಮಿಕ ಹಂತದ ಸೇವೆಗಳನ್ನು ನೀಡುತ್ತಿದ್ದ ಟರ್ಕಿಯ ಸೆಲೆಬಿ (Celebi) ಏವಿಯೇಷನ್ ಕಂಪನಿಗೆ ನೀಡಲಾಗಿದ್ದ ಸೇವಾ ಲೈಸನ್ಸ್ ಗಳನ್ನು ಭಾರತೀಯ ನಾಗರಿಕ ವಿಮಾನಯಾನ ಸುರಕ್ಷಾ ಬ್ಯೂರೋ (ಬಿಸಿಸಿಎಸ್) ರದ್ದು ಮಾಡಿದೆ. ರಾಷ್ಟ್ರೀಯ ಭದ್ರತಾ ಕಾಳಜಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆದೇಶಿಸಲಾಗಿತ್ತು. ಇದನ್ನೂ ಓದಿ: ಜಮ್ಮು & ಕಾಶ್ಮೀರದಲ್ಲಿ 2 ಎನ್‌ಕೌಂಟರ್ – ಭಾರತೀಯ ಸೇನೆ 6 ಉಗ್ರರನ್ನು ಹೊಡೆದುರುಳಿಸಿದ್ದು ಹೇಗೆ?
ಬೆಂಗಳೂರು, ಮುಂಬೈ, ದೆಹಲಿ, ಹೈದರಾಬಾದ್, ಕೊಚ್ಚಿನ್, ಕಣ್ಣೂರು, ಚೆನ್ನೈ, ಗೋವಾದಲ್ಲಿ ಈ ಕಂಪನಿ ಪ್ರಾಥಮಿಕ ಸೇವೆ ನೀಡುತ್ತಿತ್ತು. ಸದ್ಯವೇ ವಿಶಾಖಪಟ್ಟಣಂ ವಿಮಾನ ನಿಲ್ದಾಣದಲ್ಲಿ ಪ್ರಾಥಮಿಕ ಸೇವೆಗಳನ್ನು ನೀಡುವ ಗುತ್ತಿಗೆಯ ಆ ಕಂಪನಿ ಪಡೆಯಲು ಸಿದ್ಧತೆ ನಡೆಸಿತ್ತು. ಅಷ್ಟರಲ್ಲೇ ಭಾರತ ಸರ್ಕಾರ ಸೆಲೆಬಿಗೆ ನೀಡಲಾಗಿದ್ದ ಸೇವಾ ಲೈಸೆನ್ಸ್ ರದ್ದುಗೊಳಿಸಿದೆ.
ಸೆಲೆಬಿ ಏವಿಯೇಷನ್ ಎರಡು ಪ್ರತ್ಯೇಕ ಘಟಕಗಳನ್ನು ಹೊಂದಿದೆ. ಸೆಲೆಬಿ ಏರ್‌ಪೋರ್ಟ್ ಸರ್ವೀಸಸ್ ಇಂಡಿಯಾ ವಿಮಾನ ನಿಲ್ದಾಣ ನಿರ್ವಹಣೆ ಕಾರ್ಯಾಚರಣೆ ನಡೆಸುತ್ತಿದ್ದರೆ ಸೆಲೆಬಿ ದೆಹಲಿ ಕಾರ್ಗೋ ಟರ್ಮಿನಲ್ ಮ್ಯಾನೇಜ್‌ಮೆಂಟ್ ಇಂಡಿಯಾ ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸರಕು ಸೇವೆಗಳನ್ನು ಮೇಲ್ವಿಚಾರಣೆ ಮಾಡುತ್ತಿತ್ತು. ಇದನ್ನೂ ಓದಿ: `ಆಪರೇಷನ್ ಸಿಂಧೂರ’ ಇನ್ನೂ ಮುಗಿದಿಲ್ಲ, ಇದು ಟ್ರೇಲರ್ ಅಷ್ಟೇ – ರಾಜನಾಥ್ ಸಿಂಗ್
ಸೆಲೆಬಿ 2008 ರಲ್ಲಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಂಟಿ ಉದ್ಯಮದ ಮೂಲಕ ಭಾರತವನ್ನು ಪ್ರವೇಶಿಸಿತು. ಸೆಲೆಬಿ ಕಂಪನಿಗೆ ಕೆಲಸ ನಿರ್ವಹಿಸಲು ಯುಪಿಎ ಸರ್ಕಾರ ಅನುಮತಿ ನೀಡಿತ್ತು.
ಚಿಕ್ಕಬಳ್ಳಾಪುರ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu And Kashmir) ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಗಡಿ ಭಾಗದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ. ಈ ಸಂಘರ್ಷದಲ್ಲಿ ಬಾಗೇಪಲ್ಲಿ ಸಮೀಪದ ಆಂಧ್ರಪ್ರದೇಶದ (Andhra Pradesh) ಗೋರಂಟ್ಲು ತಾಲೂಕಿನ ಕಲ್ಲಿಕೊಂಡ ಗ್ರಾಮದ ಯೋಧನೊಬ್ಬ (Soldier) ಹುತಾತ್ಮರಾಗಿದ್ದಾರೆ.
ಮುರಳಿ ನಾಯಕ್ ಹುತಾತ್ಮ ಯೋಧ. ಪಾಕಿಸ್ತಾನ ಗಡಿಯಲ್ಲಿ (Pakistan Border) ನಡೆದ ದಾಳಿಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಸಮೀಪದ ಆಂಧ್ರಪ್ರದೇಶಕ್ಕೆ ಸೇರಿದ ಕಲ್ಲಿಕೊಂಡ ಗ್ರಾಮದ ಶ್ರೀರಾಮುಲು ನಾಯಕ್ ಹಾಗೂ ಜ್ಯೋತಿಬಾಯಿ ಅವರ ಏಕೈಕ ಪುತ್ರ ಮುರಳಿ ನಾಯಕ್ ದೇಶಕ್ಕಾಗಿ ಹೋರಾಡಿ ವೀರಮರಣ ಹೊಂದಿದ್ದಾರೆ. ಮುರಳಿ ಹುತಾತ್ಮನಾಧ ಸುದ್ದಿ ತಿಳಿಯುತ್ತಿದ್ದಂತೆಯೇ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಇದನ್ನೂ ಓದಿ: ಬೆಂಗಳೂರು ಪಾಕಿಸ್ತಾನದ ಹಿಟ್‌ಲಿಸ್ಟ್‌ನಲ್ಲಿ ಇದ್ಯಾ? – ಗೃಹಸಚಿವ ಪರಮೇಶ್ವರ್ ಹೇಳಿದ್ದಿಷ್ಟು…
ಹುತಾತ್ಮ ಯೋಧ ಮುರಳಿ ನಾಯಕ್ (Murali Naik) ಪಾರ್ಥೀವ ಶರೀರವನ್ನು ಇಂದು ಜಮ್ಮುವಿನಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ತಂದು ಅಲ್ಲಿಂದ ಇಂಡಿಗೋ ವಿಮಾನದ ಮೂಲಕ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತರಲಾಯಿತು. ಏರ್‌ಪೋರ್ಟ್‌ನ ಕಾರ್ಗೋ ಟರ್ಮಿನಲ್‌ನಲ್ಲಿ ಯೋಧರಿಂದ ಅಂತಿಮ ನಮನ ಸಲ್ಲಿಸಿದ ಬಳಿಕ ಸ್ವಗ್ರಾಮಕ್ಕೆ ಪಾರ್ಥೀವ ಶರೀರವನ್ನು ಕೊಂಡೊಯ್ಯಲಾಗುತ್ತಿದೆ. ಇದನ್ನೂ ಓದಿ: ದೇಶದ ಕರೆಗೆ ಹನಿಮೂನ್ ಮೊಟಕುಗೊಳಿಸಿ ಸೇವೆಗೆ ತೆರಳಿದ ಯೋಧ
ದೇವನಹಳ್ಳಿ ಚಿಕ್ಕಬಳ್ಳಾಪುರ ಬಾಗೇಪಲ್ಲಿ ಮಾರ್ಗವಾಗಿ ಸ್ವಗ್ರಾಮದತ್ತ ಪಾರ್ಥಿವ ಶರೀರವನ್ನ ಸೇನಾ ವಾಹನದ ಸಾರಥಿಯೊಂದಿಗೆ ಅಂಬುಲೆನ್ಸ್‌ನಲ್ಲಿ ಕೊಂಡೊಯ್ಯಲಾಗುತ್ತಿದೆ. ಈ ವೇಳೆ ಚಿಕ್ಕಬಳ್ಳಾಪುರದಲ್ಲಿ ಮಳೆ ಬಂದರೂ ಜಗದ್ದೇ ದಾರಿಯಲ್ಲೇ ನಿಂತಿದ್ದ ಜನ ಹುತಾತ್ಮ ಯೋಧನಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಚಿಕ್ಕಬಳ್ಳಾಪುರದ ವಾಪಸಂದ್ರದ ಬಳಿ ಜನರು ಆಗಮಿಸಿ ಪುಷ್ಪ ನಮನ ಸಲ್ಲಿಸಿದ್ದಾರೆ. ಇದನ್ನೂ ಓದಿ: ಭಾರತದ 36 ಕಡೆ 400 ಮಿಸೈಲ್‌ನಿಂದ ಪಾಕ್ ದಾಳಿ: ಕರ್ನಲ್ ಸೋಫಿಯಾ ಖುರೇಷಿ
ಬೆಂಗಳೂರು: ರಾಜ್ಯ ರಾಜಧಾನಿಯ ಸಮೀಪ ನಿರ್ಮಿಸಲು ಉದ್ದೇಶಿಸಿರುವ 2ನೇ ಏರ್ಪೋರ್ಟ್ ಸಂಬಂಧ ಮೂರೂ ಸ್ಥಳಗಳ ಪರಿಶೀಲನೆ ನಡೆಸಿರುವ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (AAI) ಉನ್ನತ ಮಟ್ಟದ ತಂಡವು ಇನ್ನೊಂದು ತಿಂಗಳಲ್ಲಿ ತನ್ನ ಅಭಿಪ್ರಾಯ ತಿಳಿಸುವ ಸಾಧ್ಯತೆ ಇದೆ. ಬಳಿಕ ಇದನ್ನು ವಿಸ್ತೃತ ಅಧ್ಯಯನಕ್ಕೆ ವಿಮಾನ ನಿಲ್ದಾಣಗಳ ಅಭಿವೃದ್ಧಿಪಡಿಸುವಂತಹ ಪರಿಣಿತ ಕಂಪನಿಗಳ ಮುಂದೆ ಕೊಂಡೊಯ್ಯಲಾಗುವುದು. ಬಳಿಕ ಸರ್ಕಾರವು ವಿಮಾನ ನಿಲ್ದಾಣಕ್ಕೆ ಸ್ಥಳವನ್ನು ಅಂತಿಮಗೊಳಿಸಲಿದೆ ಎಂದು ಮೂಲಸೌಕರ್ಯಗಳ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ (MB Patil) ಹೇಳಿದ್ದಾರೆ.
ಈಗ ದೇವನಹಳ್ಳಿ ಬಳಿ ವಿಮಾನ ನಿಲ್ದಾಣವಿದೆ. 2033ರ ವರೆಗೂ ಇಲ್ಲಿಂದ 150 ಕಿ.ಮೀ. ಅಂತರದಲ್ಲಿ ಇನ್ನೊಂದು ಏರ್ಪೋರ್ಟ್ ಮಾಡಬಾರದು ಎನ್ನುವ ಷರತ್ತಿದೆ. ನಾವು ಈಗಿನಿಂದಲೇ ಪ್ರಾರಂಭಿಸಿದರೆ, 2030ರ ವೇಳೆಗೆ 2ನೇ ಏರ್ಪೋರ್ಟ್ ಅಭಿವೃದ್ಧಿ ಮಾಡಬಹುದು. ಇಲ್ಲದೇ ಹೋದ್ರೆ 2040ನೇ ಇಸವಿ ಬಂದರೂ ವಿಮಾನ ನಿಲ್ದಾಣ ಆಗುವುದಿಲ್ಲ ಎಂದು ಅವರು ವಿವರಿಸಿದ್ದಾರೆ. ಇದನ್ನೂ ಓದಿ: ಮುಂದಿನ ದಿನಗಳಲ್ಲಿ ಭಾರೀ ಇಳಿಕೆಯಾಗಲಿದೆ ಟಿವಿ, ಫ್ರಿಡ್ಜ್, ಮೊಬೈಲ್ ಬೆಲೆ!
ಹಿರಿಯ ನಾಯಕ ಟಿ.ಬಿ ಜಯಚಂದ್ರ (TB Jayachandra) ಅವರು ತಮ್ಮ ಕ್ಷೇತ್ರವಾದ ಶಿರಾ ಸಮೀಪ ಏರ್ಪೋರ್ಟ್ ಬರಲೆಂದು ಪ್ರಯತ್ನ ಶುರು ಮಾಡಿದ್ದಾರೆ. ಅಲ್ಲಿ ಜಿಲ್ಲಾ ಮಟ್ಟದ ಏರ್ಪೋರ್ಟ್ ಮಾಡಬಹುದೇ ವಿನಾ ಅದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (International Airport) ಆಗುವುದಿಲ್ಲ. ಬಿಜೆಪಿಯ ಅರವಿಂದ ಬೆಲ್ಲದ್ ಕೂಡ ಉತ್ತರ ಕರ್ನಾಟಕಕ್ಕೆ ಅನುಕೂಲವಾಗುವ ಜಾಗದಲ್ಲಿ ಹೊಸ ಏರ್ಪೋರ್ಟ್ ಬರಲಿ ಎನ್ನುತ್ತಿದ್ದಾರೆ. ಕೇವಲ ಜಾಗವನ್ನು ಕೊಟ್ಟ ಮಾತ್ರಕ್ಕೆ ಎಲ್ಲವೂ ಆಗುವುದಿಲ್ಲ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ. ಇದನ್ನೂ ಓದಿ: ಗುತ್ತಿಗೆದಾರರು ಕಮಿಷನ್ ಆರೋಪದ ಸಾಕ್ಷಿ ಕೊಟ್ಟರೆ ತನಿಖೆ ಮಾಡಿಸುತ್ತೇವೆ – ಕೃಷ್ಣಬೈರೇಗೌಡ
ಚಿಕ್ಕಬಳ್ಳಾಪುರ: ಸೈಡ್ ಪಿಕಪ್ ಹೆಸರಿನಲ್ಲಿ ನಮ್ಮ ಯಾತ್ರಿ ಹಾಗೂ ರ‍್ಯಾಪಿಡ್ ಚಾಲಕರಿಗೆ (Airport Taxi Drivers) ಕಿರುಕುಳ ನೀಡುತ್ತಿರುವ ಆರೋಪದ ಮೇಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 20ಕ್ಕೂ ಹೆಚ್ಚು ಟ್ಯಾಕ್ಸಿಗಳನ್ನು ಪೊಲೀಸರು (Airport Police) ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಪ್ರಯಾಣಿಕರನ್ನು ಪಿಕಪ್ ಮಾಡಲು ಬಂದಿದ್ದ 20ಕ್ಕೂ ಅಧಿಕ ಟ್ಯಾಕ್ಸಿಗಳನ್ನ ವಶಕ್ಕೆ ಪಡೆದು ಕಿರುಕುಳ ನೀಡುತ್ತಿದ್ದಾರೆ. ನಿನ್ನೆ ಸಂಜೆಯಿಂದ ಟ್ಯಾಕ್ಸಿಗಳನ್ನ ಬಿಡದೇ ಕುರುಕುಳ ಕೊಡು್ತಿದ್ದಾರೆ. ಹಬ್ಬದ ದಿನವೂ ಟ್ಯಾಕ್ಸಿ ಬಿಡದೇ ಸತಾಯಿಸುತ್ತಿದ್ದಾರೆ, ಅಂತ ಠಾಣೆ ಎದುರೇ ಬೀಡುಬಿಟ್ಟಿರುವ ಟ್ಯಾಕ್ಸಿ ಚಾಲಕರು ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಮೈಸೂರು | ಕ್ಯಾತಮಾರನಹಳ್ಳಿ ವಿವಾದಿತ ಸ್ಥಳದಲ್ಲಿ ಮದರಸಾ ತೆರೆಯಲು ಡಿಸಿ ಅನುಮತಿ – ಗ್ರಾಮಸ್ಥರ ಆಕ್ರೋಶ
ನಿನ್ನೆ ಸಂಜೆ ಪಿಕಪ್‌ಗೆ ಬಂದಿದ್ದ ಟ್ಯಾಕ್ಸಿಗಳ ಕೀ ಕಿತ್ತುಕೊಂಡು ಕರ್ನಾಟಕ ಪ್ರವಾಸೋದ್ಯಮ ಟ್ಯಾಕ್ಸಿ ಚಾಲಕರೇ ಪೊಲೀಸರಿಗೆ ನೀಡಿದ್ದಾರೆ. ಅವರಿಗೆ ಬಾಡಿಗೆ ಸಿಕ್ಕಿಲ್ಲ ಅಂತ ನಮ್ಮ ಮೇಲೆ ಪ್ರಹಾರ ಮಾಡ್ತಿದ್ದಾರೆ. 2 ದಿನಗಳ ಕಾಲ ಟ್ಯಾಕ್ಸಿ ನಿಲ್ಲಿಸಿದ್ರೆ ನಮ್ಮ ಜೀವನ ಹೇಗೆ ನಡೆಯುತ್ತೆ? ನಮಗೆ ನ್ಯಾಯ ಕೊಡಿಸಿ ಅಂತ ಪೊಲೀಸ್ ಠಾಣೆ ಮುಂದೆ ಟ್ಯಾಕ್ಸಿ ಚಾಲಕರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ವಿನಯ್ ಸೋಮಯ್ಯ ಆತ್ಮಹತ್ಯೆ ಕೇಸ್ ಸಿಬಿಐಗೆ ವಹಿಸುವ ಅಗತ್ಯ ಇಲ್ಲ: ಪರಮೇಶ್ವರ್