Tag: bengaluru airport

  • ಕೆಂಪೇಗೌಡ ವಿಮಾನ ನಿಲ್ದಾಣದ ಅಂತರ್ಜಾಲದಲ್ಲಿ ಇನ್ಮುಂದೆ `ಕನ್ನಡ’ ಆಯ್ಕೆಗೆ ಅವಕಾಶ

    ಕೆಂಪೇಗೌಡ ವಿಮಾನ ನಿಲ್ದಾಣದ ಅಂತರ್ಜಾಲದಲ್ಲಿ ಇನ್ಮುಂದೆ `ಕನ್ನಡ’ ಆಯ್ಕೆಗೆ ಅವಕಾಶ

    ಬೆಂಗಳೂರು/ಚಿಕ್ಕಬಳ್ಳಾಪುರ: ಸದಾ ಹೊಸತನ ಹೊಸ ಆವಿಷ್ಕಾರ, ತಂತ್ರಜ್ಞಾನದಿಂದ ಜಾಗತಿಕ ಮಟ್ಟದಲ್ಲೇ ಜನಮನ್ನಣೆ ಗಳಿಸಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (International Airport) ಅಂತರ್ಜಾಲದಲ್ಲಿ ಇನ್ನೂ ಮುಂದೆ ಕನ್ನಡ (Kannada) ಭಾಷೆ ಆಯ್ಕೆ ಮಾಡಿಕೊಳ್ಳುವುದನ್ನು ಹೊಸದಾಗಿ ಪರಿಚಯಿಸಿದೆ.

    ಅಧಿಕೃತ ಅಂತರ್ಜಾಲದಲ್ಲಿ ಇಷ್ಟು ದಿನ ಇಂಗ್ಲೀಷ್ (English) ಭಾಷೆ ಆಯ್ಕೆಗೆ ಮಾತ್ರ ಅವಕಾಶವಿತ್ತು. ಆದರೆ ಇದೀಗ ಕನ್ನಡ ಭಾಷೆಗೆ ಆದ್ಯತೆ ಹಾಗೂ ಪ್ರಾಮುಖ್ಯತೆ ನೀಡಲಾಗಿದೆ. ಈ ಆಯ್ಕೆಯನ್ನು ಬಳಸುವ ಮೂಲಕ, ಸ್ಥಳೀಯ ಪ್ರಯಾಣಿಕರು ಇನ್ನು ಮುಂದೆ ವಿಮಾನ ನಿಲ್ದಾಣದ ಸೇವೆಗಳನ್ನು ಸುಲಭವಾಗಿ ತಮ್ಮದೇ ಕನ್ನಡ ಭಾಷೆಯಲ್ಲಿ ಪಡೆದುಕೊಳ್ಳಬಹುದಾಗಿದೆ. ಸ್ಥಳೀಯ ಭಾಷೆಯಲ್ಲಿ ಸಂವಹನ ನಡೆಸಲು ಆದ್ಯತೆ ನೀಡುವ ಪ್ರಯಾಣಿಕರಿಗಾಗಿ ಕನ್ನಡ ಭಾಷೆಯ ಆಯ್ಕೆಗೆ ಅವಕಾಶ ಕಲ್ಪಿಸಲಾಗಿದೆ.ಇದನ್ನೂ ಓದಿ:25 ಸಾವಿರ ಶಿಕ್ಷಕರ ವಜಾ – ಜಡ್ಜ್‌ಗಳ ಮನೆಯಲ್ಲಿ ಹಣ ಪತ್ತೆಯಾದ್ರೆ ವರ್ಗಾವಣೆ, ಶಿಕ್ಷಕರ ವಜಾ ಯಾಕೆ? – ಮಮತಾ ಬ್ಯಾನರ್ಜಿ ಪ್ರಶ್ನೆ

    ಏನೆಲ್ಲಾ ಮಾಹಿತಿ ಸಿಗಲಿದೆ?
    ವಿಮಾನದ ನೈಜಸಮಯದ, ವಿಮಾನಗಳ ಹಾರಾಟದ ಮಾಹಿತಿ, ನಿರ್ಗಮನ, ಆಗಮನ ಮತ್ತು ವಿಳಂಬಗಳ ಬಗ್ಗೆ ತಡೆರಹಿತ ಮಾಹಿತಿ, ಪ್ರಯಾಣಿಕರು ವಿಮಾನಗಳನ್ನು ಕಾಯ್ದಿರಿಸಲು, ಸಾರಿಗೆ ಆಯ್ಕೆ ಮತ್ತು ವಿಮಾನ ನಿಲ್ದಾಣದ ಸೌಲಭ್ಯಗಳನ್ನು ಅನ್ವೇಷಿಸಲು ಅನುವು, ಭದ್ರತಾ ಕಾರ್ಯವಿಧಾನ, ಬ್ಯಾಗೇಜ್ ನಿಯಮಗಳು, ಪ್ರಯಾಣಕ್ಕೆ ಬೇಕಾದ ಅನುಕೂಲತೆಯ ಮಾಹಿತಿಗಳು ಸೇರಿದಂತೆ ಹಲವು ವಿಚಾರಗಳು ಸ್ಥಳೀಯ ಭಾಷೆಯಲ್ಲಿ ದೊರೆಯಲಿವೆ.

    ಈಗಾಗಲೇ ವಿಮಾನ ನಿಲ್ದಾಣದಾದ್ಯಂತ ವಿಮಾನ ಮಾಹಿತಿ ಪ್ರದರ್ಶನ ವ್ಯವಸ್ಥೆ, ಸಾರ್ವಜನಿಕ ಪ್ರಕಟಣೆ ವ್ಯವಸ್ಥೆ, ಅಂಗಡಿ ಮತ್ತು ಮಳಿಗೆಗಳ ನಾಮಫಲಕಗಳಿಂದ ಹಿಡಿದು ಸಿಬ್ಬಂದಿಯವರೆಗೆ ಎಲ್ಲೆಡೆ ಕನ್ನಡವನ್ನು ವಿಮಾನ ನಿಲ್ದಾಣ ಅಳವಡಿಸಿಕೊಂಡಿದೆ. ಕರ್ನಾಟಕದ ಸಂಸ್ಕೃತಿ ಮತ್ತು ನೀತಿಗಳನ್ನು ಪ್ರತಿಬಿಂಬಿಸುವಂತೆ ವಿಮಾನ ನಿಲ್ದಾಣವನ್ನು ವಿನ್ಯಾಸಗೊಳಿಸಲಾಗಿದೆ.

    ಕನ್ನಡ ಭಾಷೆಯ ಆಯ್ಕೆಯ ಅವಕಾಶದ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಹರಿ ಮಾರಾರ್ ಅವರು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಕೇವಲ ಸಾರಿಗೆ ಕೇಂದ್ರವಾಗಿರದೇ, ಸಾಕಷ್ಟು ಬೆಳೆದಿದೆ. ಇದೀಗ ಸ್ಥಳೀಯ ಭಾಷೆಯಲ್ಲೇ ವಿಮಾನ ನಿಲ್ದಾಣದ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಲು ಕನ್ನಡ ಭಾಷಾ ಆಯ್ಕೆಯನ್ನು ಪರಿಚಯಿಸುವ ಮೂಲಕ ನಮ್ಮ ಭಾಷಾ ಪರಂಪರೆಯ ಶ್ರೀಮಂತಿಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

    ಒಟ್ಟಿನಲ್ಲಿ ಕೆಂಪೇಗೌಡ ಏರ್‌ಪೋರ್ಟ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಕನ್ನಡ ಭಾಷಾ ಆಯ್ಕೆಯ ಪರಿಚಯವು ವಿಮಾನ ನಿಲ್ದಾಣದಲ್ಲಿ ಕನ್ನಡದ ಪರಿಸರವನ್ನು ವೃದ್ಧಿಸಲಿದ್ದು, ಇದು ಕನ್ನಡಿಗರಿಗೆ ಸಂತಸ ಹಾಗೂ ಹೆಮ್ಮೆಯ ವಿಚಾರವಾಗಿದೆ.

    ಹೆಚ್ಚಿನ ಮಾಹಿತಿಗಾಗಿ, http://bengaluruairport.com/kn/ ಕನ್ನಡ ವೆಬ್‌ಸೈಟ್‌ಗೆ ಭೇಟಿ ನೀಡಿ.ಇದನ್ನೂ ಓದಿ:ರಣ ಬಿಸಿಲಿಗೆ ಕಂಗೆಟ್ಟಿದ್ದ ಬೀದರ್‌ಗೆ ತಂಪೆರೆದ ಅಕಾಲಿಕ ಮಳೆ

  • ಪೈಲಟ್‌ಗಳಿಲ್ಲದ ವಿಮಾನಕ್ಕೆ ಏಕೆ ಹತ್ತಿಸುತ್ತೀರಿ – ಏರ್‌ ಇಂಡಿಯಾ ವಿರುದ್ಧ ಡೇವಿಡ್‌ ವಾರ್ನರ್‌ ಗರಂ!

    ಪೈಲಟ್‌ಗಳಿಲ್ಲದ ವಿಮಾನಕ್ಕೆ ಏಕೆ ಹತ್ತಿಸುತ್ತೀರಿ – ಏರ್‌ ಇಂಡಿಯಾ ವಿರುದ್ಧ ಡೇವಿಡ್‌ ವಾರ್ನರ್‌ ಗರಂ!

    ನವದೆಹಲಿ/ಕ್ಯಾನ್ಬೆರಾ: ಏರ್‌ ಇಂಡಿಯಾ (Air India) ವಿಮಾನ ವಿಳಂಬವಾಗಿದ್ದಕ್ಕೆ ಆಸ್ಟ್ರೇಲಿಯಾ ಮಾಜಿ ಸ್ಟಾರ್‌ ಕ್ರಿಕೆಟರ್‌ ಡೇವಿಡ್‌ ವಾರ್ನರ್‌ (David Warner) ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

    ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ʻʻನಾವು ಪೈಲಟ್‌ಗಳಿಲ್ಲದ ಏರ್‌ ಇಂಡಿಯಾ ವಿಮಾನ ಹತ್ತಿದ್ದೇವೆ. ಗಂಟೆಗಟ್ಟಲೆ ವಿಮಾನದಲ್ಲಿ ಕಾಯುತ್ತಿದ್ದೇವೆ. ಪೈಲಟ್‌ಗಳಿಲ್ಲದ ವಿಮಾನಕ್ಕೆ ನೀವು ಏಕೆ ಪ್ರಯಾಣಿಕರನ್ನು ಹತ್ತಿಸುತ್ತೀರಿ?ʼ ಅಂತ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ವಾಸ್ತವ್ಯ – ಶೀಘ್ರದಲ್ಲೇ ಭಾರತಕ್ಕೆ ಕರೆತರಲು ಪ್ಲ್ಯಾನ್‌

    ಇದಕ್ಕೆ ಪ್ರತಿಕ್ರಿಯಿಸಿರುವ ಏರ್‌ ಇಂಡಿಯಾ ವಿಮಾನಯಾನ ಸಂಸ್ಥೆ, ಬೆಂಗಳೂರು ಏರ್‌ಪೋರ್ಟ್‌ನಿಂದ (Bengaluru Airport) ಹವಾಮಾನ ಸಂಬಂಧಿತ ಅಡಚಣೆಗಳಿಂದಾಗಿ ಎಲ್ಲಾ ವಿಮಾನಯಾನ ಸಂಸ್ಥೆಗಳ ಮಾರ್ಗ ಬದಲಾವಣೆ ಮತ್ತು ಕೆಲ ವಿಮಾನಗಳ ಹಾರಾಟದಲ್ಲಿ ವ್ಯತ್ಯವಾಗಿದೆ. ಹೀಗಾಗಿ ನಿಮ್ಮ ವಿಮಾನ ನಿರ್ವಹಿಸುವ ಸಿಬ್ಬಂದಿಯನ್ನ ತಡೆಯಹಿಡಿಯಲಾಗಿದ್ದು, ವಿಳಂಬಕ್ಕೆ ಕಾರಣವಾಗಿದೆ.. ನಿಮ್ಮ ತಾಳ್ಮೆಯನ್ನು ಪ್ರಸಂಶಿಸುತ್ತೇವೆ, ನಮ್ಮ ವಿಮಾನ ಆಯ್ಕೆ ಮಾಡಿಕೊಂಡಿದ್ದಕ್ಕೆ ಧನ್ಯವಾದಗಳು ಎಂದು ಹೇಳಿದೆ.

    ಡೇವಿಡ್‌ ವಾರ್ನರ್‌ ಅವರು ಟ್ರಾವೆಲ್‌ ಏಜೆಂಟ್‌ ಮೂಲಕ ಟಿಕೆಟ್‌ ಬುಕ್‌ ಮಾಡಿದ್ದರು. ಮರುಪಾವತಿ ಲಭ್ಯವಿಲ್ಲದ ಟಿಕೆಟ್‌ ಬುಕ್‌ ಮಾಡಿದ ಕಾರಣ ಟ್ರಾವೆಲ್‌ ಏಜೆಂಟ್‌ ಟಿಕೆಟ್‌ ಹಣ ವಾಪಸ್‌ ನೀಡಲು ನಿರಾಕರಿಸಿದ್ದಾರೆ ಎಂದು ಸಹ ವರದಿಗಳು ತಿಳಿಸಿವೆ. ಇದನ್ನೂ ಓದಿ: ಅಮೆರಿಕ | ಗುಜರಾತ್‌ ಮೂಲದ ಅಪ್ಪ-ಮಗಳಿಗೆ ಗುಂಡಿಕ್ಕಿ ಹತ್ಯೆ – ಶೂಟರ್‌ ಅರೆಸ್ಟ್‌

    ಕಳೆದ ಫೆಬ್ರವರಿಯಲ್ಲಿ ಮಧ್ಯಪ್ರದೇಶ ಮಾಜಿ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌, ಮುರಿದ ಸೀಟನ್ನು ನೀಡಿದ್ದಕ್ಕೆ ಏರ್‌ ಇಂಡಿಯಾ ವಿರುದ್ಧ ಕಿಡಿ ಕಾರಿದ್ದರು. ಇತ್ತೀಚೆಗೆ ಭಾರತೀಯ-ಕೆನಡಾದ ನಟಿ ಲೀಸಾ ರೇ ಸಹ ತಮ್ಮ ಎಕ್ಸ್‌ ಪೋಸ್ಟ್‌ನಲ್ಲಿ ಏರ್‌ ಇಂಡಿಯಾವನ್ನು ಟೀಕಿಸಿದ್ದರು. ಇದನ್ನೂ ಓದಿ: ಮುರಿದ ಸೀಟ್‌ ನೀಡಿ ಮೋಸ ಮಾಡಿದ್ದೀರಿ: ಏರ್‌ ಇಂಡಿಯಾ ವಿರುದ್ಧ ಶಿವರಾಜ್‌ ಸಿಂಗ್‌ ಚೌಹಾಣ್‌ ಕೆಂಡಾಮಂಡಲ

  • Bengaluru Rains: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತುಂತುರು ಮಳೆ

    Bengaluru Rains: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತುಂತುರು ಮಳೆ

    ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Bengaluru Airport) ರನ್‌ವೇನಲ್ಲಿ ತುಂತುರು ಮಳೆಯಾಗಿದೆ.

    ಇಂದು ಬೆಂಗಳೂರು (Bengaluru Rains) ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅದರಂತೆ ಬೆಂಗಳೂರು ಏರ್ಪೋರ್ಟ್‌ನಲ್ಲಿ ತುಂತುರು ಮಳೆಬಂದಿದೆ.

    ದಕ್ಷಿಣ ಕನ್ನಡ, ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು. ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಚಿಕ್ಕಮಗಳೂರು, ತುಮಕೂರು, ರಾಮನಗರ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗಲಿದೆ ಎಂದು ಸೂಚನೆ ನೀಡಿತ್ತು.

    ಉಳಿದ ಜಿಲ್ಲೆಗಳಲ್ಲಿ ಒಣಹವೆ ಅಧಿಕ ಇದ್ದು, ಬಿಸಿಲಿನ ತಾಪಮಾನ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು.

  • Gold Smuggling Case | ಸ್ವಂತ ಚಿನ್ನಾಭರಣ ಮಳಿಗೆ ಆರಂಭಿಸಲು ಪ್ಲ್ಯಾನ್‌ ಮಾಡಿದ್ದ ರನ್ಯಾ

    Gold Smuggling Case | ಸ್ವಂತ ಚಿನ್ನಾಭರಣ ಮಳಿಗೆ ಆರಂಭಿಸಲು ಪ್ಲ್ಯಾನ್‌ ಮಾಡಿದ್ದ ರನ್ಯಾ

    – 2020ರಿಂದ ಈವರೆಗೆ 90 ಬಾರಿ ವಿದೇಶಿ ಪ್ರಯಾಣ ಬೆಳೆಸಿದ್ದ ನಟಿ

    ಬೆಂಗಳೂರು: ಸ್ಯಾಂಡಲ್ ವುಡ್ ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ (Gold Smuggling Case) ದಿನಕ್ಕೊಂದು ಟ್ವಿಸ್ಟ್ ಸಿಗ್ತಾ ಇದೆ. ನಟಿ ರನ್ಯಾ ರಾವ್ (Ranya Rao) ಬೇರೆಯವರಿಗೆ ಚಿನ್ನ ನೀಡಿ ಅದರ ಲಾಭಾಂಶದಿಂದ ಬೇಸತ್ತಿದ್ಲಂತೆ. ಅಷ್ಟೊಂದು ಕಷ್ಟ ಪಟ್ಟು ವಿದೇಶದಿಂದ ಬೆಂಗಳೂರಿಗೆ ತರ್ತೀನಿ ಅದ್ರಲ್ಲಿ ಸಿಗ್ತಾ ಇರೋದು ಪುಡಿಗಾಸು, ಜೀವ, ಜೀವನ ಪಣಕ್ಕಿಟ್ಟು ಚಿನ್ನ ತಂದ್ರೆ ಲಕ್ಷ ಲೆಕ್ಕದಲ್ಲಿ ಲಾಭ ಪಡೆಯೋದರ ಬದಲಾಗಿ ತಾನಗಿಯೇ ಚಿನ್ನಾಭರಣದ ಅಂಗಡಿ ಪ್ರಾರಂಭಿಸೋ ಚಿಂತನೆಯಲ್ಲಿದ್ಲಂತೆ ರನ್ಯಾರಾವ್.

    ಬೆಂಗಳೂರಿನಲ್ಲೊಂದು (Bengaluru) ದೊಡ್ಡದಾದ ಗ್ರ್ಯಾಂಡ್ ಜ್ಯುವೆಲ್ಲರ್ಸ್ ತೆರೆಯೋದಕ್ಕೆ ತಯಾರಿ ನಡೆದಿತ್ತು ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಪುತ್ರನ ನಾಮಕರಣ ಸಂಭ್ರಮದ ಫೋಟೋ ಹಂಚಿಕೊಂಡ ಅಂಬಿ ಸೊಸೆ

    ಇತರ ಮಹಾನಗರಗಳಿಂದ್ಲೂ ರನ್ಯಾ ದುಬೈ ಪ್ರವಾಸ:
    ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ಸಂಭಂಧ ಟ್ರಾವೆಲ್ ಹಿಸ್ಟರಿಯಲ್ಲಿ ಭಾರತದ ಯಾವ ಯಾವ ಏರ್ಪೋರ್ಟ್‌ನಿಂದ ದುಬೈ ಟ್ರಿಪ್ ಮಾಡಿದ್ದಾಳೆ ಅನ್ನೊ ಅಂಶ ಹೊರಬಿದ್ದಿದೆ. 2020 ರಿಂದ ಇದುವರೆಗೆ 90 ಬಾರಿ ವಿದೇಶ ಪ್ರಯಾಣ ಮಾಡಿರುವ ರನ್ಯಾ ರಾವ್, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 60 ಬಾರಿ ಪ್ರಯಾಣ ಮಾಡಿದ್ದಾಳೆ ಎಂಬುದು ಗೊತ್ತಾಗಿದೆ.

    ಇನ್ನೂ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 25 ಬಾರಿ ಪ್ರಯಾಣ, ಚೆನ್ನೈ, ಹೈದರಾಬಾದ್‌ನಿಂದ ತಲಾ ಎರಡು ಬಾರಿ ಪ್ರಯಾಣ, ಕೋಲ್ಕತ್ತಾದಿಂದ ಒಂದು ಬಾರಿ ರನ್ಯಾ ಪ್ರಯಾಣ ಮಾಡಿರೋದು ಗೊತ್ತಾಗಿದೆ. ಕಳೆದ 5 ವರ್ಷಗಳ ಟ್ರಾವಲ್ ಹಿಸ್ಟರಿಯಲ್ಲಿ 2024 ಈಕೆಗೆ ಗೋಲ್ಡನ್ ಎರಾ ಆಗಿದ್ದು, 2024ರ ಜನವರಿಯಿಂದ ಮಾರ್ಚ್ 2025ರ ವರೆಗೆ 46 ಬಾರಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದದಿಂದ ದುಬೈಗೆ ಪ್ರಯಾಣ ಮಾಡಲಾಗಿದೆ. ಇನ್ನು ತನಿಖೆಯಲ್ಲಿ 2023 ಜುಲೈ 28 ರಿಂದ ಸ್ಮಗ್ಲಿಂಗ್ ನಡೆಸಿರೊ ಶಂಕೆ ವ್ಯಕ್ತಪಡಿಸಲಾಗಿದ್ದು, 51 ಬಾರಿ ದುಬೈಗೆ ತೆರಳಿ 24 ಘಂಟೆ ಒಳಗೆ ರನ್ಯಾ ವಾಪಸ್ಸು ಬಂದಿರೋದು ಅನುಮಾನಕ್ಕೆ ಕಾರಣವಾಗಿದೆ. ಹೀಗಾಗಿ ಇಷ್ಟು ಬಾರಿಯೂ ಗೋಲ್ಡ್ ಸ್ಮಗ್ಲಿಂಗ್ ಮಾಡಿರುವ ಬಗ್ಗೆ ಅನುಮಾನಗೊಂಡಿರುವ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ. ಇದನ್ನೂ ಓದಿ: ಹೈಕೋರ್ಟ್‌ ಆದೇಶದ ಬೆನ್ನಲ್ಲೇ ಹೆಚ್‍ಡಿಕೆ ಕೇತಗಾನಹಳ್ಳಿ ಜಮೀನು ಒತ್ತುವರಿ ತೆರವು ಕಾರ್ಯಾಚರಣೆ

  • 2ನೇ ಏರ್‌ಪೋರ್ಟ್‌ ನಿರ್ಮಾಣಕ್ಕೆ ತಮಿಳುನಾಡು ಸರ್ಕಾರಕ್ಕೆ ಗ್ರೀನ್‌ ಸಿಗ್ನಲ್‌ – ಹೊಸೂರು ಬಳಿ 2 ಸ್ಥಳ ಫೈನಲ್‌

    2ನೇ ಏರ್‌ಪೋರ್ಟ್‌ ನಿರ್ಮಾಣಕ್ಕೆ ತಮಿಳುನಾಡು ಸರ್ಕಾರಕ್ಕೆ ಗ್ರೀನ್‌ ಸಿಗ್ನಲ್‌ – ಹೊಸೂರು ಬಳಿ 2 ಸ್ಥಳ ಫೈನಲ್‌

    ನವದೆಹಲಿ: ಸಿಲಿಕಾನ್‌ ಸಿಟಿಯಲ್ಲಿ 2ನೇ ವಿಮಾನ ನಿಲ್ದಾಣಕ್ಕೆ ಸ್ಥಳ ಆಯ್ಕೆ ಮಾಡಿ ಮೊನ್ನೆಯಷ್ಟೇ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ಈ ನಡುವೆ ತಮಿಳುನಾಡು ಸರ್ಕಾರವು (Tamil Nadu Government) ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಿಸಲು 2 ಸ್ಥಳ ಸೂಕ್ತ ಅಂತ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ಗ್ರೀನ್ ಸಿಗ್ನಲ್ ಪಡೆದುಕೊಂಡು ಬಂದಿದೆ.

    ಕರ್ನಾಟಕ ಸರ್ಕಾರವು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ (Bengalur Airport) ದಟ್ಟಣೆ ತಗ್ಗಿಸಲು 2ನೇ ವಿಮಾನ ನಿಲ್ದಾಣವನ್ನು ಸ್ಥಾಪಿಸಲು ನಿರ್ಧಾರ ಕೈಗೊಂಡಿತ್ತು. ಇತ್ತ ತಮಿಳುನಾಡು ಸರ್ಕಾರ ಕೂಡ ಹೊಸೂರಿನಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ಮಾಡಲು ಮುಂದಾಗಿತ್ತು. ಸದ್ಯ ಕರ್ನಾಟಕ ಸರ್ಕಾರವು ಸ್ಥಳ ಹುಡುಕಾಟ ನಡೆಸಿ 2-3 ದಿನಗಳ ಹಿಂದಷ್ಟೇ ಕೇಂದ್ರ ಸರ್ಕಾರದ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಅಷ್ಟರೊಳಗೆ ತಮಿಳುನಾಡು ಸರ್ಕಾರವು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ಹೊಸೂರು ಬಳಿಯ 2 ಸ್ಥಳ ಸೂಕ್ತ ಎಂಬ ವರದಿಯನ್ನು ಪಡೆದುಕೊಂಡಿದೆ. ಇದನ್ನೂ ಓದಿ: ರಾಜ್ಯದಲ್ಲಿರೋದು ಸಿದ್ದರಾಮಯ್ಯನ ಸರ್ಕಾರ… ನಿಮ್ಮಪ್ಪನ ಸರ್ಕಾರ ಅಲ್ಲ – ಬಿಜೆಪಿ ಕಾರ್ಯಕರ್ತರ ವಿರುದ್ಧ ರೊಚ್ಚಿಗೆದ್ದ ಪ್ರದೀಪ್‌ ಈಶ್ವರ್‌

    ಆಯ್ಕೆಯಾದ ಸ್ಥಳಗಳಾವುವು?
    ಒಂದು ತನೇಜಾ ಏರೋಸ್ಪೇಸ್ ಮತ್ತು ಏವಿಯೇಷನ್ ಲಿಮಿಟೆಡ್ (TAAL) ವಿಮಾನ ನಿಲ್ದಾಣದಿಂದ ಸುಮಾರು 1.5 ಕಿ.ಮೀ ದೂರದಲ್ಲಿದೆ. ಮತ್ತೊಂದು ಉಲಗಂ ಬಳಿ (ಹೊಸೂರಿನ ಪೂರ್ವ ಮತ್ತು ಶೂಲಗಿರಿಯ ಉತ್ತರ) ಹೊಸೂರಿನಿಂದ ಸುಮಾರು 15.5 ಕಿ.ಮೀ ದೂರದಲ್ಲಿದೆ. ಎಲೆಕ್ಟ್ರಾನಿಕ್‌ ಸಿಟಿ ಹಾಗೂ ಸರ್ಜಾಪುರ ಎರಡಕ್ಕೂ ಉಲಗಂ ಸಮೀಪದಲ್ಲಿಯೇ ಇದೆ. ಎರಡರಲ್ಲಿ ಒಂದು ಸ್ಥಳವನ್ನು ಆಯ್ಕೆ ಮಾಡಿಕೊಳ್ಳುವಂತೆ ತಮಿಳುನಾಡಿಗೆ ಕೇಂದ್ರ ತಿಳಿಸಿದೆ. ಇದನ್ನೂ ಓದಿ: ಗ್ಯಾರಂಟಿಗಳಿಗೆ SCSP – TSP ಹಣ ಬಳಕೆ – ದಲಿತರ ಎಷ್ಟು ಕೋಟಿ ಹಣ ಬಳಕೆ? ಇಲ್ಲಿದೆ ಲೆಕ್ಕ..

    ಅಕ್ಟೋಬರ್‌ನಲ್ಲೇ ಅರ್ಜಿ ಸಲ್ಲಿಸಿದ್ದ ತಮಿಳುನಾಡು
    ತಮಿಳುನಾಡು ಸರ್ಕಾರವು 2024ರ ಅಕ್ಟೋಬರ್‌ನಲ್ಲಿ ಅಧ್ಯಯನಕ್ಕಾಗಿ ಐದು ಸ್ಥಳಗಳನ್ನು ಆಯ್ಕೆ ಮಾಡಿತ್ತು. ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಕುರಿತು ಸಾಧ್ಯಾಸಾಧ್ಯತಾ ವರದಿಯನ್ನು ತಮಿಳುನಾಡು ಸರ್ಕಾರಕ್ಕೆ ನೀಡಿದೆ. ಎರಡು ಸ್ಥಳಗಳನ್ನು ಪರಿಶೀಲಿಸಿದ ನಂತರ ಈ ವರದಿಯನ್ನು ಸಿದ್ಧಪಡಿಸಿದೆ. ಈ ವರದಿಯ ಪ್ರಕಾರ, ಎರಡೂ ಸ್ಥಳಗಳು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸೂಕ್ತವಾಗಿವೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಯುಪಿಯ ಪುರುಷನಿಗೆ ಪಾಕ್ ಏಜೆಂಟ್ ನೇಹಾ ಆಮಿಷ – ರಕ್ಷಣಾ ಇಲಾಖೆಯ ಮಾಹಿತಿ ಸೋರಿಕೆ ಮಾಡ್ತಿದ್ದವನ ಬಂಧನ 

  • ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾರತದ ಅತಿದೊಡ್ಡ ಗ್ರೀನ್‌ಫೀಲ್ಡ್ ‘ದೇಶೀಯ ಕಾರ್ಗೋ ಟರ್ಮಿನಲ್’ ಪ್ರಾರಂಭ

    ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾರತದ ಅತಿದೊಡ್ಡ ಗ್ರೀನ್‌ಫೀಲ್ಡ್ ‘ದೇಶೀಯ ಕಾರ್ಗೋ ಟರ್ಮಿನಲ್’ ಪ್ರಾರಂಭ

    ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ವಿನ್ಯಾಸ ಸಾಮರ್ಥ್ಯದಲ್ಲಿ ಭಾರತದಲ್ಲೇ ಅತಿದೊಡ್ಡ ಗ್ರೀನ್‌ಫೀಲ್ಡ್ ದೇಶೀಯ ಕಾರ್ಗೋ ಟರ್ಮಿನಲ್‌ (ಡಿಸಿಟಿ) ಪ್ರಾರಂಭವಾಗಿದೆ.

    ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ ಮತ್ತು ವಾಯುಯಾನ ಸರಕು ಸಾಗಣೆ ಕ್ಷೇತ್ರದ ಮೆನ್ಜೀಸ್ ಏವಿಯೇಷನ್ ಸಂಸ್ಥೆಗಳ ಸಹಯೋಗದಲ್ಲಿ ನಿರ್ಮಾಣವಾದ 245,000 ಚದರ ಅಡಿ ವ್ಯಾಪ್ತಿಯ ಈ ಕಾರ್ಗೋ ಟರ್ಮಿನಲ್‌ನ್ನು, ದೇಶೀಯವಾಗಿ ಹೆಚ್ಚುತ್ತಿರುವ ವಾಯುಮಾರ್ಗ ಸರಕು ಸಾಗಣೆಯ ಬೇಡಿಕೆಯನ್ನು ಪೂರೈಸುವ ನಿಟ್ಟಿನಲ್ಲಿ ಅತ್ಯಾಧುನಿಕ ಮೂಲಸೌಕರ್ಯದೊಂದಿಗೆ ವಿಶಾಲವಾಗಿ ವಿನ್ಯಾಸಗೊಳಿಸಲಾಗಿದೆ.

    ಕೈಗಾರಿಕೆಗಳ ಸಂಪರ್ಕ ಮತ್ತು ಪೂರೈಕೆ ಸರಪಳಿಗಳ ಬಲಪಡಿಸುವಿಕೆಯಲ್ಲಿ ಹೊಸ ಕಾರ್ಗೋ ಟರ್ಮಿನಲ್‌ ಮಹತ್ವದ ಪಾತ್ರ ವಹಿಸಲಿದ್ದು, ದೇಶದಲ್ಲಿ ಸರಕು ಸಾಗಣೆ ಮತ್ತು ಪ್ರಾದೇಶಿಕ ವ್ಯಾಪಾರದ ಭವಿಷ್ಯವನ್ನು ಸುಸ್ಥಿರಗೊಳಿಸಲಿದೆ. ಜೊತೆಗೆ, ದೇಶೀಯ ವಾಯುಮಾರ್ಗ ಸರಕು ಸಾಗಣೆಯ ನಿರ್ವಹಣೆಯಲ್ಲಿ ಬೆಂಗಳೂರು ವಿಮಾನ ನಿಲ್ದಾಣವನ್ನು ಮುಂಚೂಣಿಯಲ್ಲಿರಿಸಲಿದೆ.

    ಅತಿದೊಡ್ಡ, ಉತ್ತಮ ಮತ್ತು ಸುಧಾರಿತ ಸೌಕರ್ಯ:
    ಬರೋಬ್ಬರಿ 7 ಎಕರೆಯಲ್ಲಿ ವ್ಯಾಪಿಸಿರುವ ಬೃಹತ್‌ ದೇಶೀಯ ಕಾರ್ಗೋ ಟರ್ಮಿನಲ್‌, ಸುಮಾರು 360,000 ಮೆಟ್ರಿಕ್ ಟನ್‌ಗಳ ಗರಿಷ್ಠ ನಿರ್ವಹಣಾ ಸಾಮರ್ಥ್ಯ ಮತ್ತು 400,000 ಮೆಟ್ರಿಕ್ ಟನ್‌ಗಳವರೆಗೆ ವಿಸ್ತರಿಸಬಹುದಾದ ಅವಕಾಶವನ್ನು ಸಹ ಹೊಂದಿದೆ. ಜೊತೆಗೆ, ಸುಮಾರು 42 ಬೃಹತ್‌ ಟ್ರಕ್‌ಗಳು, 400 ಕ್ಕೂ ಹೆಚ್ಚು ವಿಶೇಷವಾಗಿ ವಿನ್ಯಾಸಗೊಳಿಸಲಾದ ಕಾರ್ಗೋ ಬೋಗಿಗಳು ಸಂಚರಿಸುವ ಸಾಮರ್ಥ್ಯವನ್ನು ಹೊಸ ಕಾರ್ಗೋ ಟರ್ಮಿನಲ್‌ ಹೊಂದಿದೆ.

    ಸರಕುಗಳನ್ನು ಪರೀಕ್ಷಿಸುವ ಎಕ್ಸ್‌-ರೇ ಯಂತ್ರದ ಜೊತೆ ಸಂಯೋಜಿಸಲ್ಪಟ್ಟ ಸಾಧನಗಳು, ವಿಮಾನಕ್ಕೆ ಸರಕುಗಳನ್ನು ಸಾಗಿಸುವ ಮುನ್ನ ನಿರ್ವಹಣೆ ಮಾಡುವ ಸರಿಸುಮಾರು 30 ಕೇಂದ್ರಗಳು (ಯುಎಲ್‌ಡಿ), ನೈಜ ಸಮಯದಲ್ಲಿ ಸರಕುಗಳ ದತ್ತಾಂಶ ಸಂಗ್ರಹಿಸುವ 40 ಹ್ಯಾಂಡ್‌ಹೆಲ್ಡ್ ಟರ್ಮಿನಲ್‌ ಸಾಧನಗಳು ಮತ್ತು ಏಜೆಂಟರಿಗೆ ಸ್ವಯಂ ಸೇವಾ ಕಿಯೋಸ್ಕ್‌ ಸೌಲಭ್ಯಗಳು ಈ ಹೊಸ ವಾಯುಯಾನ ಸರಕು ಸಾಗಣೆ ಟರ್ಮಿನಲ್‌ನಲ್ಲಿ ಇರಲಿದ್ದು, ಯಾವುದೇ ಅಡೆತಡೆಯಿಲ್ಲದ ಸುಲಲಿತ ಸೇವೆಯು ನೈಜ ಸಮಯದಲ್ಲಿ ದೊರೆಯಲಿದೆ.

    ಅಷ್ಟೇ ಅಲ್ಲದೇ, ಅತ್ಯಾಧುನಿಕ ತಂತ್ರಜ್ಞಾನ ಹಾಗೂ ಡಿಜಿಟಲ್‌ ಸೌಲಭ್ಯಗಳ ಜೊತೆಗೆ ಸುಸಜ್ಜಿತಗೊಂಡಿರುವ ಈ ಹೊಸ ಕಾರ್ಗೋ ಟರ್ಮಿನಲ್‌ನಲ್ಲಿ, ಸರಕುಗಳ ಸಾಗಣೆಯ ನೈಜ ಸಮಯದ ಟ್ರ್ಯಾಕಿಂಗ್, ದತ್ತಾಂಶ ವಿಶ್ಲೇಷಣೆ ಪರಿಕರಗಳು, ಬಾರ್‌ಕೋಡ್‌ ಮತ್ತು ಕ್ಯೂಆರ್ ಕೋಡ್‌ಗಳೊಂದಿಗೆ ಸಂಯೋಜಿಸಲ್ಪಟ್ಟ ವರ್ಧಿತ ಸಂವಹನ ವ್ಯವಸ್ಥೆಗಳಂತಹ ನವೀನ ಸೌಲಭ್ಯಗಳನ್ನು ಪರಿಚಯಿಸಲಾಗಿದೆ. ಹೀಗೆ ಹಲವು ಸೌಲಭ್ಯಗಳು ಏಕೀಕರಣಗೊಂಡಿರುವುದು ತಡೆರಹಿತ ದತ್ತಾಂಶ ವಿನಿಮಯಕ್ಕೆ ಅವಕಾಶ ಕಲ್ಪಿಸಿ, ಒಟ್ಟಾರೆ ಸರಕು ಸಾಗಣೆ ಪ್ರಕ್ರಿಯೆಯ ಸಮಯವನ್ನು ಕಡಿಮೆಗೊಳಿಸುತ್ತದೆ. ಜೊತೆಗೆ, ಮಾನವನ ಅವಲಂಬನೆಯನ್ನು ಕಡಿಮೆ ಮಾಡಿ, ವೇಗ ಮತ್ತು ಸುರಕ್ಷಿತವಾಗಿ ಸರಕು ನಿರ್ವಹಣೆ ಮಾಡಲು ಅನುವು ಮಾಡಿಕೊಡಲಿದೆ. ಡಿಜಿಟಲೀಕರಣಕ್ಕೆ ಒತ್ತು ನೀಡಿರುವುದು ಕಾರ್ಯಾಚರಣೆ, ಪೂರೈಕೆ ಸರಪಳಿಗಳನ್ನು ಸುಲಲಿತಗೊಳಿಸುತ್ತದೆ. ಒಟ್ಟಾರೆಯಾಗಿ, ಹೊಸ ಟರ್ಮಿನಲ್‌ ವಿಮಾನಯಾನ ಸಂಸ್ಥೆಗಳು, ಸರಕು ಏಜೆಂಟರು, ಅಂತಿಮ ಬಳಕೆದಾರರ ಸರಕು ನಿರ್ವಹಣಾ ಅನುಭವವನ್ನು ಹೆಚ್ಚಿಸುತ್ತದೆ.

    ನಿರ್ವಹಣಾ ಸಾಮರ್ಥ್ಯ ಇನ್ನಷ್ಟು ಹೆಚ್ಚಳ:
    ಮಾವಿನಹಣ್ಣು, ಕೊತ್ತಂಬರಿ ಸೊಪ್ಪು ಸೇರಿದಂತೆ ಕೊಳೆತು ಹೋಗುವ ಹಲವು ಸರಕುಗಳ ರಫ್ತಿನಲ್ಲಿ ಬೆಂಗಳೂರಿನ ವಿಮಾನ ನಿಲ್ದಾಣವು ಈಗಾಗಲೇ ಖ್ಯಾತಿ ಪಡೆದಿದೆ. ಇದೀಗ, ಹೊಸದಾಗಿ ದೇಶೀಯ ಕಾರ್ಗೋ ಟರ್ಮಿನಲ್‌ನ್ನು ಆರಂಭಿಸಿರುವುದರಿಂದ ಬೆಂಗಳೂರು ವಿಮಾನ ನಿಲ್ದಾಣದ ಸರಕು ಸಾಗಣೆ ನಿರ್ವಹಣಾ ಸಾಮರ್ಥ್ಯ ಇನ್ನಷ್ಟು ಹೆಚ್ಚಲಿದೆ. ಇದಷ್ಟೇ ಅಲ್ಲದೆ, ಬೆಲೆಬಾಳುವ ವಸ್ತುಗಳು, ದುರ್ಬಲ ವಸ್ತುಗಳು, ಜೀವಂತ ಪ್ರಾಣಿಗಳು, ಅಪಾಯಕಾರಿ ಸರಕುಗಳು ಮತ್ತು ವಿಕಿರಣಶೀಲ ವಸ್ತುಗಳಂತಹ ವಿಶೇಷ ಸರಕುಗಳಿಗೆ ಮೀಸಲಾದ ಶೇಖರಣಾ ವ್ಯವಸ್ಥೆಯನ್ನು ಸಹ ಟರ್ಮಿನಲ್ ಒಳಗೊಂಡಿದ್ದು, ಇದು ಸಮಗ್ರ ಸರಕು ನಿರ್ವಹಣಾ ಸಾಮರ್ಥ್ಯವನ್ನು ಬಲಪಡಿಸುತ್ತದೆ.

    ಸುಸ್ಥಿರತೆಯ ಬಲ:
    ಭಾರತೀಯ ಹಸಿರು ಕಟ್ಟಡ ಮಂಡಳಿಯ (ಇಂಡಿಯನ್ ಗ್ರೀನ್ ಬಿಲ್ಡಿಂಗ್ ಕೌನ್ಸಿಲ್) ಮಾನದಂಡಗಳಿಗೆ ಅನುಗುಣವಾಗಿ ಭವಿಷ್ಯದ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು, ಪರಿಸರ ಪರವಾಗಿ ಹೊಸ ಕಾರ್ಗೋ ಟರ್ಮಿನಲ್‌ನ ವಿನ್ಯಾಸ ಮಾಡಲಾಗಿದೆ. ಪೂರೈಕೆ ಸರಪಳಿ ಸ್ಥಿತಿಸ್ಥಾಪಕತ್ವವನ್ನು ಹೆಚ್ಚಿಸುವುದು, ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು, ವ್ಯಾಪಾರ-ವಾಣಿಜ್ಯ ವಹಿವಾಟುಗಳಿಗೆ ಹೊಸ ಮಾರ್ಗಗಳನ್ನು ಹೆಚ್ಚಿಸುವ ಮೂಲಕ, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಕಾರ್ಗೋ ಟರ್ಮಿನಲ್ ಸುಸ್ಥಿರ ಆರ್ಥಿಕ ಬೆಳವಣಿಗೆಗೆ ಕಾರಣವಾಗಲಿದೆ. ಅಷ್ಟೇ ಅಲ್ಲದೇ, ಹೊಸ ಕಾರ್ಗೋ ಟರ್ಮಿನಲ್ ಪರಿಸರ ಸ್ನೇಹಿ ವೈಶಿಷ್ಟ್ಯಗಳಾದ ಸ್ಕೈಲೈಟಿಂಗ್, ಸುಧಾರಿತ ವಾತಾಯನ ವ್ಯವಸ್ಥೆ, ನೀರು ಸಂರಕ್ಷಣಾ ಅಭ್ಯಾಸಗಳು ಮತ್ತು ಇಂಧನ-ಸಮರ್ಥ ಮೂಲಸೌಕರ್ಯಗಳನ್ನು ಒಳಗೊಂಡಿದೆ. ಇವೆಲ್ಲವೂ ವಾಯುಯಾನ ಸರಕು ಸಾರಿಗೆ ಪ್ರಕ್ರಿಯೆಯಿಂದ ಪರಿಸರದ ಮೇಲೆ ಬೀರುವ ಪರಿಣಾಮವನ್ನು ಕಡಿಮೆ ಮಾಡಲು ಸಹಕರಿಸುತ್ತವೆ. ಪರಿಸರ ಸುಸ್ಥಿರತೆ, ಸಿಬ್ಬಂದಿಗಳ ಯೋಗಕ್ಷೇಮ ಎರಡಕ್ಕೂ ಆದ್ಯತೆ ನೀಡಿ, ನವೀಕರಿಸಬಹುದಾದ ಇಂಧನ ಪರಿಹಾರಗಳನ್ನು ಹೊಸ ಟರ್ಮಿನಲ್‌ನಲ್ಲಿ ಸಂಯೋಜಿಸುವ ಮೂಲಕ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಪರಿಸರ ಸ್ನೇಹಿ ಸರಕು ಕಾರ್ಯಾಚರಣೆಗಳಿಗೆ ವೇದಿಕೆ ಕಲ್ಪಿಸಿಕೊಡಲಿದೆ.

    ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತದ ಮುಖ್ಯ ಕಾರ್ಯಾಚರಣಾ ಅಧಿಕಾರಿ (ಸಿಒಒ) ಸತ್ಯಕಿ ರಘುನಾಥ್ ಅವರು ಮಾತನಾಡಿ, ಹೊಸ ದೇಶೀಯ ಕಾರ್ಗೋ ಟರ್ಮಿನಲ್ ಆರಂಭವು ಸುಸ್ಥಿರ ಬೆಳವಣಿಗೆಯನ್ನು ಸಾಧಿಸಲು ನಾವು ಹೊಂದಿರುವ ಅಚಲ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಅತ್ಯಾಧುನಿಕ ತಂತ್ರಜ್ಞಾನ ಮತ್ತು ಪರಿಸರ ಸ್ನೇಹಿ ವಾತಾವರಣವನ್ನು ಅಳವಡಿಸಿಕೊಳ್ಳುವ ಮೂಲಕ, ದೇಶೀಯವಾಗಿ ವಾಯುಮಾರ್ಗ ಸರಕು ಸಾಗಣೆಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ನಾವು ಈ ಹೊಸ ಹೆಜ್ಜೆ ಇಟ್ಟಿದ್ದೇವೆ. ಈ ಸೌಲಭ್ಯವು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಪ್ರಮುಖ ವಾಯು ಸರಕು ಸಾಗಣೆ ಕೇಂದ್ರವಾಗಿಸಲಿದ್ದು, ಹೊಸ ಅವಕಾಶಗಳಿಗೆ ವೇದಿಕೆ ಕಲ್ಪಿಸಿ ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸಲಿದೆ ಎಂದು ತಿಳಿಸಿದರು.

    ಮೆನ್ಜೀಸ್ ಏವಿಯೇಷನ್‌ ಸಂಸ್ಥೆಯ ಮಧ್ಯಪ್ರಾಚ್ಯ, ಆಫ್ರಿಕಾ ಮತ್ತು ಏಷ್ಯಾ ವಿಭಾಗಗಳ ಕಾರ್ಯನಿರ್ವಾಹಕ ಉಪಾಧ್ಯಕ್ಷ ಚಾರ್ಲ್ಸ್ ವೈಲಿ ಅವರು ಮಾತನಾಡಿ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನಲ್ಲಿ ಆರಂಭವಾದ ಪರಿಸರ ಸ್ನೇಹಿ ದೇಶೀಯ ಕಾರ್ಗೋ ಟರ್ಮಿನಲ್‌; ಪರಿಣಾಮಕಾರಿ, ವಿಶ್ವಾಸಾರ್ಹ ಮತ್ತು ಭವಿಷ್ಯದ ಸರಕು ಸಾಗಣೆ ಬೇಡಿಕೆಯನ್ನು ಪೂರೈಸುವ ನಮ್ಮ ಬದ್ಧತೆಯನ್ನು ಪ್ರತಿಬಿಂಬಿಸುವ ಪ್ರಮುಖ ಹೆಜ್ಜೆಯಾಗಿದೆ. ಭಾರತದಲ್ಲಿ ವಾಯುಯಾನ ಸರಕು ಸಾಗಣೆಯಲ್ಲಿ ತ್ವರಿತ ಬೆಳವಣಿಗೆ ಆಗುತ್ತಿದ್ದು, ಬೇಡಿಕೆಯು 2029 ರ ವೇಳೆಗೆ 5.8 ದಶಲಕ್ಷ ಟನ್ ತಲುಪುವುದರಲ್ಲಿ ಯಾವುದೇ ಅನುಮಾನವಿಲ್ಲ. ಇಂದಿನ ಬೇಡಿಕೆಯ ಪೂರೈಕೆಗಷ್ಟೇ ಅಲ್ಲದೆ, ಭವಿಷ್ಯದ ಅಗತ್ಯತೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ನೂತನ ಕಾರ್ಗೋ ಟರ್ಮಿನಲ್‌ನ್ನು ವಿನ್ಯಾಸಗೊಳಿಸಲಾಗಿದೆ ಎಂದರು.

  • ಮಹಾ ಕುಂಭಮೇಳ – ಬೆಂಗಳೂರು To ಪ್ರಯಾಗ್‌ರಾಜ್‌ ವಿಮಾನ ಟಿಕೆಟ್‌ ದರ ದುಬಾರಿಯೋ ದುಬಾರಿ

    ಮಹಾ ಕುಂಭಮೇಳ – ಬೆಂಗಳೂರು To ಪ್ರಯಾಗ್‌ರಾಜ್‌ ವಿಮಾನ ಟಿಕೆಟ್‌ ದರ ದುಬಾರಿಯೋ ದುಬಾರಿ

    – ಬುಧವಾರ ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ ಮೌನಿ ಅಮವಾಸ್ಯೆ ಸ್ನಾನ
    – 10 ರಿಂದ 15 ಕೋಟಿಗೂ ಹೆಚ್ಚು ಜನ ಸೇರುವ ನಿರೀಕ್ಷೆ

    ಬೆಂಗಳೂರು: 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳ (Maha Kumbh 2025) ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಅದ್ಧೂರಿಯಾಗಿ ನಡೆಯುತ್ತಿದೆ. ಕುಂಭಮೇಳವನ್ನ ಕಣ್ತುಂಬಿಕೊಳ್ಳಲು ಕೋಟ್ಯಂತರ ಸಂಖ್ಯೆಯಲ್ಲಿ ಭಕ್ತರು ಪ್ರಯಾಗ್‌ರಾಜ್‌ಗೆ (Prayagraj) ಭೇಟಿ ಕೊಡ್ತಿದ್ದಾರೆ.

    ಬುಧವಾರ (ನಾಳೆ) ವಿಶೇಷವಾದ ಮೌನಿ ಅಮವಾಸ್ಯೆ ದಿನವಾಗಿರೋದ್ರಿಂದ ಪ್ರಯಾಗ್‌ರಾಜ್‌ನಲ್ಲಿರೋ ತ್ರಿವೇಣಿ ಸಂಗಮದಲ್ಲಿ ಸ್ನಾನ (Holy Bath) ಮಾಡಿದ್ರೇ ಎಲ್ಲವೂ ಒಳ್ಳೆಯದಾಗುತ್ತೆ, ಆರೋಗ್ಯ ವೃದ್ಧಿಸುತ್ತೆ, ಕಷ್ಟಕಾರ್ಪಣ್ಯಗಳು ನಶಿಸುತ್ತದೆ ಅನ್ನೋ ನಂಬಿಕೆ ಇದೆ. ಹೀಗಾಗಿ ಬುಧವಾರ ಕುಂಭಮೇಳದಲ್ಲಿ 10 ರಿಂದ 15 ಕೋಟಿ ಜನ ಸೇರುವ ನಿರೀಕ್ಷೆ ಇದೆ.

    ಬುಧವಾರ ಪ್ರಯಾಗ್‌ರಾಜ್‌ಗೆ ಹೋಗಲು ವಿಮಾನದ ಟಿಕೆಟ್‌ ಬುಕ್ (Flight Ticket Book) ಮಾಡಲು ಹೊರಟವರಿಗೆ ಡಬಲ್ ಶಾಕ್ ಆಗಿದೆ. ಹೌದು.. ಬುಧವಾರ ಬೆಂಗಳೂರಿನಿಂದ ಪ್ರಯಾಗ್‌ರಾಜ್‌ಗಿರುವ ಫ್ಲೈಟ್‌ ಟಿಕೆಟ್‌ ದರ 30 ರಿಂದ 39,000 ವರೆಗೆ ಏರಿಕೆಯಾಗಿದ್ದು, ಬೆಂಗಳೂರಿನಿಂದ ಪ್ರಯಾಗ್‌ರಾಜ್‌ಗೆ ಹೋಗುವ ಅಷ್ಟು ವಿಮಾನಗಳ ಟಿಕೆಟ್ ಸೋಲ್ಡ್ ಔಟ್ ಆಗಿದೆ.

    ಇದರಿಂದ ಟಿಕೆಟ್ ದರ ಹೆಚ್ಚಾಗಿದರೂ ಪರವಾಗಿಲ್ಲ, ಇತಂಹ ಮಹಾಪುಣ್ಯದ ದಿನ ಹೇಗಾದರೂ ಮಾಡಿ ಕುಂಭಮೇಳದ ಮಹಾ ಸ್ನಾನ ಮಾಡಬೇಕು ಅಂತಿದ್ದವರಿಗೆ ಫೈಟ್‌ಗಳು ಹೌಸ್ ಪುಲ್ ಆಗಿರೋದು ಬೇಸರ ತಂದಿದೆ.

    ವಿಮಾನ ಟಿಕೆಟ್‌ ದರ ಹೇಗಿದೆ?
    * ಬೆಂಗಳೂರು ಟು ಪ್ರಯಾಗ್ ರಾಜ್

    • ಸಾಮಾನ್ಯ ದಿನಗಳ ದರ 4 ರಿಂದ 8 ಸಾವಿರ ರೂ.
    • ಇಂದಿನ ದರ- 30 ರಿಂದ 45 ಸಾವಿರ ರೂ.
    • ಫೆಬ್ರವರಿ 26ರ ವರಗೆ ಕನಿಷ್ಠ ದರ 24 ಸಾವಿರ ರೂ.

    ದೆಹಲಿಯಿಂದ ಪ್ರಯಾಗ್‌ರಾಜ್‌ಗೆ

    • ಸಾಮಾನ್ಯ ದಿನಗಳ ದರ – 3 ರಿಂದ 6 ಸಾವಿರ ರೂ.
    • ಇಂದಿನ ದರ-20 ರಿಂದ 30 ಸಾವಿರ ರೂ.
    • ಫೆಬ್ರವರಿ 26ರ ವರೆಗೆ 18 ರಿಂದ 24 ಸಾವಿರದ ವರೆಗೆ ರೂ.

  • `ನಮ್ಮ ಮೆಟ್ರೋ’ದಿಂದ ಬಿಗ್ ಅಪ್ಡೇಟ್ – ಒಂದೂವರೆ ವರ್ಷದೊಳಗೆ ಬರಲಿದ್ಯಾ ಹೆಬ್ಬಾಳ-ಏರ್‌ಪೋರ್ಟ್ ಮೆಟ್ರೋ?

    `ನಮ್ಮ ಮೆಟ್ರೋ’ದಿಂದ ಬಿಗ್ ಅಪ್ಡೇಟ್ – ಒಂದೂವರೆ ವರ್ಷದೊಳಗೆ ಬರಲಿದ್ಯಾ ಹೆಬ್ಬಾಳ-ಏರ್‌ಪೋರ್ಟ್ ಮೆಟ್ರೋ?

    ಬೆಂಗಳೂರು: ಬೆಂಗಳೂರಿನ ಇಂಟರ್‌ನ್ಯಾಷನಲ್ ಏರ್‌ಪೋರ್ಟ್ (Bengaluru International Airport)  ಮತ್ತು ಸಿಟಿಯ ನಡುವಿನ ಸಂಚಾರಕ್ಕಾಗಿ ಇದೀಗ ನಮ್ಮ ಮೆಟ್ರೋ (Namma Metro) ಒಂದು ಬಿಗ್ ಅಪ್ಡೇಟ್ ನೀಡಿದೆ.

    ಏರ್‌ಪೋರ್ಟ್‌ನಿಂದ ಸಿಟಿಯವರೆಗೂ ಮೆಟ್ರೋ ಮಾರ್ಗದ ಸಂಚಾರಕ್ಕಾಗಿ ಲಕ್ಷಾಂತರ ಬೆಂಗಳೂರಿಗರು ಕಾಯುತ್ತಿದ್ದಾರೆ. ಇದೀಗ ಬಿಎಂಆರ್‌ಸಿಎಲ್ (BMRCL) ಬಿಗ್ ಅಪ್ಡೇಟ್ ಕೊಟ್ಟಿದ್ದು, 2026ರ ಜೂನ್‌ನಲ್ಲಿ ವಿಮಾನ ನಿಲ್ದಾಣ ಮಾರ್ಗವನ್ನು ಹೆಬ್ಬಾಳದವರೆಗೆ ಸಂಚಾರ ಮುಕ್ತಗೊಳಿಸುವ ಬಗ್ಗೆ ಮಾಹಿತಿ ನೀಡಿದೆ.ಇದನ್ನೂ ಓದಿ: ‌ಭಾರತದಲ್ಲಿ ಬ್ರಿಟಿಷರ ಆಡಳಿತ ವಿರೋಧಿಸಿದ ಕೀರ್ತಿ ಟಿಪ್ಪುವಿನದ್ದು: ವಿದೇಶಾಂಗ ಸಚಿವ ಜೈಶಂಕರ್

    ಸಿಲಿಕಾನ್ ಸಿಟಿಯ ಹಲವೆಡೆ ಮೆಟ್ರೋ ಕಾಮಗಾರಿ ಭರದಿಂದ ಸಾಗುತ್ತಿದೆ. ಜೊತೆಗೆ ಅನೇಕ ಹೊಸ ಮಾರ್ಗಗಳಿಗೆ ಪ್ಲ್ಯಾನ್ ಕೂಡ ಆಗುತ್ತಿದೆ. ಈ ಮಧ್ಯೆ ನಗರದ ಬಹುನಿರೀಕ್ಷಿತ ಏರ್‌ಪೋರ್ಟ್ ಮಾರ್ಗ ಸಂಬಂಧ ನಮ್ಮ ಮೆಟ್ರೋ ಸಿಹಿ ಸುದ್ದಿಯನ್ನು ನೀಡಿದೆ. ಇದರಿಂದ ಲಕ್ಷಾಂತರ ಜನರ ಬಹುವರ್ಷಗಳ ಕನಸು ನನಸಾಗಲಿದೆ.

    ಬೆಂಗಳೂರು ನಗರ ಮತ್ತು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಡುವೆ ನಿತ್ಯ ಲಕ್ಷಾಂತರ ಜನ ಓಡಾಟ ಮಾಡುತ್ತಾರೆ. ಈ ಭಾಗದ ಸವಾರರು ಟ್ರಾಫಿಕ್ ಕಿರಿಕಿರಿಗಳಿಂದ ಬೇಸತ್ತಿದ್ದಾರೆ. ಹೀಗಾಗಿ ಮೆಟ್ರೋ ಯಾವಾಗ ಆರಂಭ ಆಗುತ್ತದೆ ಎಂದು ಜನ ಕಾಯುತ್ತಿದ್ದರು. ಈ ಮಧ್ಯೆ ಮೆಟ್ರೋ ಮಾರ್ಗ ಶುರುವಾಗುವ ಬಗ್ಗೆ ಬಿಎಂಆರ್‌ಸಿಎಲ್ ಪಬ್ಲಿಕ್ ಟಿವಿ ಮೂಲಕ ಅಪ್ಡೇಟ್ ನೀಡಿದೆ.

    ಇನ್ನೂ ಒಂದೂವರೆ ವರ್ಷದೊಳಗೆ ಸಂಚಾರ ಮುಕ್ತವಾಗುವ ಸಾಧ್ಯತೆ ಇದೆ. ಇದು ಕೆಆರ್‌ಪುರ ಮತ್ತು ವಿಮಾನ ನಿಲ್ದಾಣ ನಡುವಿನ 38 ಕಿ.ಮೀ ಉದ್ದದ ಮಾರ್ಗವಾಗಿದ್ದು, ಹೆಬ್ಬಾಳದ ಮೂಲಕ ಹಾದು ಹೋಗಲಿದೆ. ಸದ್ಯ ಹೆಬ್ಬಾಳದವರೆಗೂ ಮೆಟ್ರೋ ಓಪನ್ ಆಗುವ ಸಾಧ್ಯತೆ ಇದೆ. ಹೆಬ್ಬಾಳದಿಂದ ಕೆಆರ್‌ಪುರವರೆಗೆ ಮಾರ್ಗ ಪೂರ್ಣಗೊಳ್ಳಲು ಮತ್ತಷ್ಟು ಕಾಲವಾಕಾಶ ಬೇಕಿದ್ದು, 2026ರ ಜೂನ್‌ನಲ್ಲಿ ವಿಮಾನ ನಿಲ್ದಾಣ ಮಾರ್ಗವನ್ನು ಹೆಬ್ಬಾಳದವರೆಗೆ ಸಂಚಾರ ಮುಕ್ತಗೊಳಿಸುವ ಬಗ್ಗೆ ಮಾಹಿತಿ ನೀಡಿದೆ.

    ಸದ್ಯ ಈ ಮಾರ್ಗವನ್ನು ಅಂದುಕೊಂಡಂತೆ ಆರಂಭಗೊಳಿಸುವ ನಿಟ್ಟಿನಲ್ಲಿ ಕಾಮಗಾರಿಗಳಿಗೆ ಮತ್ತಷ್ಟು ವೇಗ ನೀಡುವಂತೆ ಗುತ್ತಿಗೆ ಕಂಪನಿಗೆ ಬಿಎಂಆರ್‌ಸಿಎಲ್ ಸೂಚನೆ ನೀಡಿದೆ. ಅದರಂತೆ ಸಿವಿಲ್ ಕೆಲಸಗಳಿಗೆ ವೇಗ ಸಿಗಲಿದೆ. ಮಾರ್ಗದಲ್ಲಿ ಸಿವಿಲ್ ಕಾಮಗಾರಿ ಶೇಕಡಾ 50ರಷ್ಟು ಮುಗಿದಿದೆ. ಮಾರ್ಗದಲ್ಲಿ ಟ್ರ‍್ಯಾಕ್‌ನ ವಯಾಡಕ್ಟ್ಗಳನ್ನ ಕೂಡ ಜೋಡಿಸುವ ಕಾರ್ಯ ವೇಗವಾಗಿ ಸಾಗುತ್ತಿದೆ. ಯಾವುದೇ ಸಮಸ್ಯೆ ಇಲ್ಲದೇ ಕಾಮಗಾರಿ ವೇಗವಾಗಿ ಮುಗಿದರೆ 2026ರ ಜೂನ್‌ನಲ್ಲಿ ಸಂಚಾರ ಮುಕ್ತವಾಗಿ ಈ ಭಾಗದ ಜನರ ಟ್ರಾಫಿಕ್ ಜಂಜಾಟಕ್ಕೆ ಬ್ರೇಕ್ ಬೀಳಲಿದೆ.ಇದನ್ನೂ ಓದಿ: Cyclone Fengal | ಚಂಡಮಾರುತಕ್ಕೆ ಮೂವರು ಬಲಿ – 100ಕ್ಕೂ ಹೆಚ್ಚು ಮಂದಿ ರಕ್ಷಣೆ

  • ಬಿಎಂಟಿಸಿ ವೋಲ್ವೋ ಬಸ್, ಲಾರಿ, ಕಾರು ನಡುವೆ ಭೀಕರ ಅಪಘಾತ – ಇಬ್ಬರು ದುರ್ಮರಣ

    ಬಿಎಂಟಿಸಿ ವೋಲ್ವೋ ಬಸ್, ಲಾರಿ, ಕಾರು ನಡುವೆ ಭೀಕರ ಅಪಘಾತ – ಇಬ್ಬರು ದುರ್ಮರಣ

    ಬೆಂಗಳೂರು: ಲಾರಿಗೆ ಬಿಎಂಟಿಸಿ (BMTC) ವೋಲ್ವೋ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಏರ್‌ಪೋರ್ಟ್‌ ರಸ್ತೆಯ ಮೇಲ್ಸೇತುವೆ ಮೇಲೆ ನಡೆದಿದೆ.

    ಅಪಘಾತದಲ್ಲಿ (Accident) ಮೃತಪಟ್ಟವರ ಗುರುತು ಪತ್ತೆಯಾಗಿಲ್ಲ. ಇನ್ನೂ ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಲಹಂಕ (Yelahanka) ಸಂಚಾರಿ ಪೊಲೀಸರು ಮೃತರ ಸಂಬಂಧಿಕರ ಸಂಪರ್ಕಕ್ಕೆ ಪ್ರಯತ್ನಿಸುತ್ತಿದ್ದಾರೆ.

    ಯಲಹಂಕ ಮೇಲ್ಸೇತುವೆ ಮೇಲೆ ಇನೋವಾ ಕಾರಿಗೆ (Car) ಮೊದಲು ಸಿಮೆಂಟ್ ಲಾರಿ ಡಿಕ್ಕಿ ಹೊಡೆದಿತ್ತು. ಇದರಿಂದ ಲಾರಿ ಚಾಲಕ ಹಾಗೂ ಕಾರಿನ ಚಾಲಕ ಇಬ್ಬರು ಬಲಭಾಗದಲ್ಲಿ ನಿಲ್ಲಿಸಿಕೊಂಡು ಗಲಾಟೆ ಮಾಡುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಬಿಎಂಟಿಸಿ ವೋಲ್ವೋ ಬಸ್ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    ಅಪಘಾತದಲ್ಲಿ ಬಸ್‍ನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಬಸ್‍ನಲ್ಲಿ ಏರ್‌ಪೋರ್ಟ್‌ಗೆ ಹೋಗುವ ಒಬ್ಬರೆ ಪ್ರಯಾಣಿಕರಿದ್ದ ಕಾರಣ ಹೆಚ್ಚಿನ ಅವಘಡ ಸಂಭವಿಸಿಲ್ಲ.

    ಈ ಸಂಬಂಧ ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನೋವಾ ಕಾರು, ಸಿಮೆಂಟ್ ಲಾರಿ ಹಾಗೂ ಬಸ್‍ನ್ನು ಕ್ರೇನ್ ಮೂಲಕ ತೆರವು ಮಾಡಲಾಗಿದೆ.

  • 6 ಇಂಡಿಗೋ ವಿಮಾನಗಳಲ್ಲಿ 12 ಬಾಂಬ್‌ – ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತೊಂದು ಬೆದರಿಕೆ

    6 ಇಂಡಿಗೋ ವಿಮಾನಗಳಲ್ಲಿ 12 ಬಾಂಬ್‌ – ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತೊಂದು ಬೆದರಿಕೆ

    ಬೆಂಗಳೂರು: ಕಳೆದ ಒಂದು ವಾರದಿಂದಲೂ ಭಾರತೀಯ ವಿಮಾನಗಳು (Flights) ಮಾತ್ರವಲ್ಲದೇ ವಿದೇಶಿ ವಿಮಾನಗಳಿಗೂ ಬಾಂಬ್‌ ಬೆದರಿಕೆ ಹೆಚ್ಚಾಗಿ ಕೇಳಿಬರುತ್ತಿದೆ. ಭಾನುವಾರವೂ ಇಂಡಿಗೋ, ವಿಸ್ತಾರ ಮತ್ತು ಏರ್ ಇಂಡಿಯಾದ (Air India) ತಲಾ 6 ವಿಮಾನಗಳಿಗೆ ಬಾಂಬ್‌ ಬೆದರಿಕೆ ಸಂದೇಶ ಬಂದಿದೆ.

    6 ಇಂಡಿಗೋ ವಿಮಾನಗಳಲ್ಲಿ (IndiGo Flights) ತಲಾ 2 ಬಾಂಬ್‌ಗಳಿವೆ ಎಂಬ ಬೆದರಿಕೆ ಸಂದೇಶ ಬೆಂಗಳೂರು ವಿಮಾನ ನಿಲ್ದಾಣದ ಕಮಾಂಡ್ ಸೆಂಟರ್‌ಗೆ ಬಂದಿರುವುದಾಗಿ ಎಂದು ಮೂಲಗಳು ತಿಳಿಸಿವೆ. ಕಳೆದ ಒಂದು ವಾರದಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿರುವ 2ನೇ ಬೆದರಿಕೆ (Bomb Threat) ಇದಾಗಿದೆ. ಇದನ್ನೂ ಓದಿ: ತಾಯಿಯನ್ನು ಇಷ್ಟೊಂದು ಪ್ರೀತಿಸುವ ವ್ಯಕ್ತಿಯನ್ನ ನಾನು ನೋಡಿಲ್ಲ: ಜಯಮಾಲ

    ಇಂಡಿಗೋ 6E58 ವಿಮಾನ (ಜೆಡ್ಡಾ ಮುಂಬೈ), 6E87 (ಕೋಯಿಕೋಡ್- ದಮಾಮ್), 6E11 (ದೆಹಲಿ- ಇಸ್ತಾನ್‌ಬುಲ್), 6E17 (ಮುಂಬೈ-ಇಸ್ತಾನ್‌ಬುಲ್), 6E133 (ಪುಣೆಯಿಂದ ಜೋಧಪುರ), ಮತ್ತು 6E112 (ಗೋವಾ ಅಹಮದಾಬಾದ್) ವಿಮಾನಗಳಿಗೆ ಬೆದರಿಕೆ ಸಂದೇಶ ಬಂದಿದೆ ಎಂದು ಇಂಡಿಗೋದ ವಕ್ತಾರರು ತಿಳಿಸಿದ್ದಾರೆ.  ಇದನ್ನೂ ಓದಿ: ಬೆಳಗಾವಿ| ಉದ್ಯಮಿ ಹತ್ಯೆ ಕೇಸ್ – 13 ಹಾರ್ಡ್ ಡಿಸ್ಕ್‌ಗಳಲ್ಲಿ ಸಂತೋಷ್‍ನ ಖಾಸಗಿ ವೀಡಿಯೋ ಪತ್ತೆ!

    ವಿಸ್ತಾರದ UK25 (ದೆಹಲಿ-ಫ್ರಾಂಕ್‌ ಫರ್ಟ್), UK106 (ಸಿಂಗಪುರ-ಮುಂಬೈ), UK146 (ಬಾಲಿ-ದೆಹಲಿ), UK116 (ಸಿಂಗಪುರ-ದೆಹಲಿ), UK110 (ಸಿಂಗಪುರ-ಪುಣೆ) ಮತ್ತು UK107 (ಮುಂಬೈ-ಸಿಂಗಪುರ) ಈ ಆರು ವಿಮಾನಗಳಿಗೆ ಬೆದರಿಕೆ ಬಂದಿದೆ ಎಂದು ವಿಸ್ತಾರ ಹೇಳಿದೆ.

    ಪ್ರೋಟೋಕಾಲ್‌ ಪ್ರಕಾರ ಎಲ್ಲಾ ಸಂಬಂಧಿತ ಅಧಿಕಾರಿಗಳಿಗೆ ತಕ್ಷಣ ಮಾಹಿತಿ ನೀಡಲಾಗಿದೆ. ಅವರು ತಪಾಸಣೆ ನಡೆಸಿದ್ದಾರೆ ಎಂದು ವಿಸ್ತಾರ ಪ್ರಕಟಣೆಯಲ್ಲಿ ತಿಳಿಸಿದೆ. ಆಕಾಶ ಏರ್‌ನ ಕೆಲವು ವಿಮಾನಗಳಿಗೂ ಬಾಂಬ್ ಬೆದರಿಕೆ ಹಾಕಲಾಗಿದೆ. ತುರ್ತು ಪ್ರತಿಕ್ರಿಯೆ ತಂಡಗಳು ಪರಿಶೀಲನೆ ನಡೆಸುತ್ತಿವೆ. ಭದ್ರತಾ ಮತ್ತು ನಿಯಂತ್ರಣ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿವೆ ಎಂದು ಆಕಾಶ ಏರ್ ಹೇಳಿದೆ.

    ಏರ್ ಇಂಡಿಯಾದ ಕನಿಷ್ಠ ಆರು ವಿಮಾನಗಳಿಗೆ ಬೆದರಿಕೆ ಸಂದೇಶ ಬಂದಿದ್ದಾಗಿ ಮೂಲಗಳು ಹೇಳಿವೆ. ಆದರೆ ಈ ಬಗ್ಗೆ ಏರ್‌ಲೈನ್‌ನಿಂದ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ. ಇದನ್ನೂ ಓದಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ – ಬಿಜೆಪಿಯ 99 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌

    ಪ್ರಸ್ತುತ ಕಳೆದ ಒಂದು ವಾರದಲ್ಲಿ 90ಕ್ಕೂ ಹೆಚ್ಚು ದೇಶ-ವಿದೇಶ ವಿಮಾನಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಅವುಗಳಲ್ಲಿ ಹೆಚ್ಚಿನವು ಹುಸಿ ಬೆದರಿಕೆಗಳಾಗಿವೆ.