ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಶಂಕಿತ ಉಗ್ರನನ್ನು ಎನ್‌ಐಎ (NIA) ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತ ಶಂಕಿತನನ್ನು ಅಜೀಜ್ ಅಹ್ಮದ್ ಎಂದು ಗುರುತಿಸಲಾಗಿದೆ. ಶಂಕಿತ ಉಗ್ರ ಶುಕ್ರವಾರ ಬೆಂಗಳೂರು ವಿಮಾನ ನಿಲ್ದಾಣದಿಂದ ಸೌದಿಯ ಜಿದ್ದಾಗೆ ಹೋರಟಿದ್ದ. ವೇಳೆ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ಇಮಿಗ್ರೇಷನ್ ಅಧಿಕಾರಿಗಳು ನೀಡಿದ ಮಾಹಿತಿ ಮೆರೆಗೆ ಎನ್‌ಐಎ ಅಧಿಕಾರಿಗಳು ಶಂಕಿತನನ್ನು ಬಂಧಿಸಿದ್ದಾರೆ. ಈತ ತಮಿಳುನಾಡಿನ ಹಿಜ್ಬ್-ಉತ್-ತಹ್ರೀರ್ ಪ್ರಕರಣದ ಆರೋಪಿ ಎನ್ನಲಾಗಿದೆ.
ಬೆಂಗಳೂರು/ಚಿಕ್ಕಬಳ್ಳಾಪುರ: ಅನೈತಿಕ ಸಂಬಂಧ ಶಂಕೆ ವ್ಯಕ್ತಪಡಿಸಿ ಬೆಂಗಳೂರು ಏರ್‌ಪೋರ್ಟ್‌ನಲ್ಲಿ (Bengaluru Airport) ಕೆಲಸ ಮಾಡುತ್ತಿದ್ದ ವ್ಯಕ್ತಿ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಬಿಎಂಟಿಸಿ ಬಸ್‌ನಲ್ಲಿ ಏರ್‌ಪೋರ್ಟ್‌ಗೆ ಆಗಮಿಸಿದ ಕೊಲೆ ಆರೋಪಿ, ವಿಮಾನ ನಿಲ್ದಾಣದಲ್ಲಿ ಟ್ರಾಲಿ ಎಳೆಯುವ ಕೆಲಸ ಮಾಡುತ್ತಿದ್ದ ರಾಮಕೃಷ್ಣನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ನನ್ನ ಸಂಸಾರ ಹಾಳು ಮಾಡಿದ್ದೀಯ ಎಂದು ಫೋನ್‌ನಲ್ಲಿ ಆರೋಪಿ ಜಗಳ ಮಾಡಿದ್ದ. ಅದರ ಬೆನ್ನಲ್ಲೇ ಕೊಲೆ ಮಾಡಿದ್ದಾನೆ.
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು (KIAB/BLR ವಿಮಾನ ನಿಲ್ದಾಣ) FY 2023-24 ಸಾಲಿನ ಸತತ ನಾಲ್ಕನೇ ವರ್ಷವೂ ಪೆರಿಷಬಲ್ ಸರಕುಗಳ ರಫ್ತಿನಲ್ಲಿ ಭಾರತದಲ್ಲೇ ನಂಬರ್ 1 ಸ್ಥಾನ ಮುಂದುವರೆಸಿಕೊಂಡು ಬಂದಿದೆ.
ಈ ಆರ್ಥಿಕ ವರ್ಷದಲ್ಲಿ, BLR ವಿಮಾನ ನಿಲ್ದಾಣವು 63,188 ಮೆಟ್ರಿಕ್ ಟನ್‌ಗಳ (MT) ಪೆರಿಷಬಲ್ ಸರಕು ಸಾಗಣೆ ಮಾಡುವ ಮೂಲಕ ದಾಖಲೆ ನಿರ್ಮಿಸಿದೆ. ಹಿಂದಿನ ಆರ್ಥಿಕ ವರ್ಷಕ್ಕೆ ಹೋಲಿಸಿದರೆ ಶೇ.18ರಷ್ಟು ಏರಿಕೆ ಕಂಡಿದೆ. ಈ ಮೂಲಕ BLR ವಿಮಾನ ನಿಲ್ದಾಣವು ಪೆರಿಷಬಲ್ ಸರಕುಗಳ ಸಾಗಣೆಯಲ್ಲಿ ಭಾರತದಲ್ಲಿ ತನ್ನ ಸಾಧನೆಯನ್ನು ಎತ್ತಿ ತೋರಿಸುತ್ತದೆ. ದೇಶದ ಒಟ್ಟು ಪೆರಿಷಬಲ್ ಸರಕುಗಳ ಶೇ.28ರಷ್ಟು ಹಾಗೂ ದಕ್ಷಿಣ ಭಾರತದ ಪೆರಿಷಬಲ್ ಸರಕುಗಳ ಒಟ್ಟು ಶೇ.44 ಅನ್ನು BLR ವಿಮಾನ ನಿಲ್ದಾಣದ ಮೂಲಕವೇ ನಿರ್ವಹಿಸಲಾಗಿದೆ. FY 2023-24 ಸಾಲಿನಲ್ಲಿ ಪೆರಿಷಬಲ್ ಸರಕು ಸಾಗಣೆಯಲ್ಲಿ ಶೇ.28ರಷ್ಟು ರಾಷ್ಟ್ರೀಯ ಪಾಲನ್ನು ಹೊಂದಿದೆ. ಇದನ್ನೂ ಓದಿ: ಇನ್ಮುಂದೆ ಎಲ್ಲೆಂದರಲ್ಲಿ ಕಸ ಬಿಸಾಡಿದ್ರೆ 500ರೂ. ದಂಡ- ಬಿಬಿಎಂಪಿ ಆಯುಕ್ತ ಎಚ್ಚರಿಕೆ
BLR ವಿಮಾನ ನಿಲ್ದಾಣವು ವರ್ಷವಿಡೀ ವಿವಿಧ ಪೆರಿಷಬಲ್ ಸರಕುಗಳನ್ನು ರಫ್ತು ಮಾಡುವಲ್ಲಿ ಉತ್ಕೃಷ್ಟವಾಗಿದೆ. FY 2023-24 ಸಾಲಿನಲ್ಲಿ ಕೋಳಿ ಉತ್ಪನ್ನ ರಫ್ತಿನಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದು, 47,041 ಮೆಟ್ರಿಕ್ ಟನ್‌ಗಳನ್ನು ಸಾಗಿಸಿದೆ. ಇದಲ್ಲದೆ, 2,050 ಮೆಟ್ರಿಕ್ ಟನ್ ಹೂವುಗಳನ್ನು ರಫ್ತು ಮಾಡಿದೆ. ಒಟ್ಟಾರೆಯಾಗಿ ಕೋಳಿ, ತಾಜಾ ತರಕಾರಿಗಳು, ತಾಜಾ ಹಣ್ಣುಗಳು ಮತ್ತು ಹೂವುಗಳು ಸೇರಿದಂತೆ ಪ್ರಮುಖ ಪೆರಿಷಬಲ್ ಸರಕುಗಳು ಒಳಗೊಂಡಿದೆ.
ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ (Bengaluru Airport) ಲಿಮಿಟೆಡ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯಕಿ ರಘುನಾಥ್ ಮಾತನಾಡಿ, FY 2023-24 ರಲ್ಲಿ ಪೆರಿಷಬಲ್ ಸರಕುಗಳ ರಫ್ತಿನಲ್ಲಿ BLR ವಿಮಾನ ನಿಲ್ದಾಣದ ಬೆಳವಣಿಗೆ ಹಾಗೂ ನಾಯಕತ್ವದ ಬಗ್ಗೆ ಅಪಾರ ಹೆಮ್ಮೆ ಎನಿಸುತ್ತದೆ. ಈ ಮೈಲಿಗಲ್ಲು ಸಾಧಿಸಲು ನಮ್ಮ ಬಳಿ ಇರುವ ಕೋಲ್ಡ್‌ಚೇನ್ ಶ್ರೇಷ್ಠತೆ ಹಾಗೂ ನಮ್ಮ ಪಾಲುದಾರರು ಮತ್ತು ಗ್ರಾಹಕರು ನಮ್ಮ ಮೇಲಿರಿಸಿರುವ ನಂಬಿಕೆಯನ್ನು ಪ್ರತಿಬಿಂಬಿಸುತ್ತದೆ ಎಂದರು. ಇದನ್ನೂ ಓದಿ: ವಿಶ್ವನಾಥ್, ಪುತ್ರ ನನ್ನ ಮನೆಗೆ ಸೈಟ್ ಕೇಳೋಕೆ ಬಂದಿದ್ದ ಫೋಟೋ ಇದೆ: ಬೈರತಿ ಸುರೇಶ್ ಬಾಂಬ್!
ದಕ್ಷಿಣ ಭಾರತದಲ್ಲಿಯೇ ಶೇ.44 ರಷ್ಟನ್ನು ಒಟ್ಟು ಪೆರಿಷಬಲ್ ಸರಕು ರಫ್ತು ಪಾಲನ್ನು ನಾವು ಹೊಂದಿದ್ದೇವೆ. BLR ವಿಮಾನ ನಿಲ್ದಾಣವನ್ನು ದಕ್ಷಿಣ ಮತ್ತು ಮಧ್ಯ ಭಾರತಕ್ಕೆ ಪ್ರಧಾನ ಗೇಟ್‌ವೇ ಆಗಿ ಪರಿವರ್ತಿಸಿದ್ದೇವೆ. ಪೆರಿಷಬಲ್ ಸರಕುಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಬೆಂಬಲಿಸಲು ಮತ್ತು ಜಾಗತಿಕ ವ್ಯಾಪಾರದಲ್ಲಿ ಪ್ರಮುಖ ರಫ್ತುದಾರರಾಗಿ ನಮ್ಮ ಸ್ಥಾನವನ್ನು ಇನ್ನಷ್ಟು ಗಟ್ಟಿಗೊಳಿಸಲು ಮೂಲಸೌಕರ್ಯ ಮತ್ತು ಸೇವೆಗಳನ್ನು ಹೆಚ್ಚಿಸುವುದರ ಮೇಲೆ ಗಮನ ಹರಿಸಿದ್ದೇವೆ ಎಂದು ತಿಳಿಸಿದರು.
ಸಂಪರ್ಕ ಸಾಧನೆಯಲ್ಲಿ BLR ವಿಮಾನ ನಿಲ್ದಾಣವು ಗೇಟ್‌ವೇಯಾಗಿದ್ದು, ಪ್ರಮುಖ ಅಂತಾರಾಷ್ಟ್ರೀಯ ಮಾರುಕಟ್ಟೆಗಳೊಂದಿಗೆ ಭಾರತೀಯ ಉತ್ಪಾದಕರನ್ನು ಸಂಪರ್ಕಿಸುತ್ತದೆ. ವಿಮಾನ ನಿಲ್ದಾಣದ ವಿಸ್ತಾರವಾದ ಜಾಲವಾದ ಓಮನ್, ಸಿಂಗಾಪುರ, ಕತಾರ್, ಯುಎಇ, ಮಾಲ್ಡೀವ್ಸ್, ಯುಕೆ ಮತ್ತು ಕುವೈತ್‌ನಂತಹ ಉನ್ನತ ಮಾರುಕಟ್ಟೆಗಳನ್ನು ಒಳಗೊಂಡಂತೆ 100ಕ್ಕೂ ಹೆಚ್ಚು ಜಾಗತಿಕ ಸ್ಥಳಗಳಿಗೆ ಪೆರಿಷಬಲ್ ಸರಕುಗಳ ತಡೆರಹಿತ ಸಾಗಣೆಯನ್ನು ಸುಗಮಗೊಳಿಸುತ್ತದೆ. ಈ ಸಂಪರ್ಕವು ದಕ್ಷಿಣ ಭಾರತದ ರಫ್ತು ಸಾಮರ್ಥ್ಯವನ್ನು ಹೆಚ್ಚಿಸುವುದಲ್ಲದೆ, ತಾಜಾ ಉತ್ಪನ್ನವು ಅಂತಾರಾಷ್ಟ್ರೀಯ ಖರೀದಿದಾರರನ್ನು ತ್ವರಿತವಾಗಿ ಮತ್ತು ಪರಿಣಾಮಕಾರಿಯಾಗಿ ತಲುಪಿಸುತ್ತದೆ. ಇದನ್ನೂ ಓದಿ: MUDA Scam| ಭೈರತಿ ಸುರೇಶ್ ಒಬ್ಬ ರಿಯಲ್ ಎಸ್ಟೇಟ್ ಗಿರಾಕಿ, ಬರೀ ಬೊಗಳೆ ಬಿಡ್ತಾನೆ: ಹೆಚ್‌ವಿಶ್ವನಾಥ್
BLR ವಿಮಾನ ನಿಲ್ದಾಣವು WFS BLR ಕೂಲ್‌ಪೋರ್ಟ್ ಅನ್ನು ಸಹ ಹೊಂದಿದ್ದು, ಇದು 40,000 ಮೆಟ್ರಿಕ್ ಟನ್‌ಗಳ ಟರ್ಮಿನಲ್ ಸಾಮರ್ಥ್ಯದೊಂದಿಗೆ ಭಾರತದ ಮೊದಲ ಏಕೀಕೃತ ಆನ್-ಏರ್‌ಪೋರ್ಟ್ ಪೆರಿಷಬಲ್ ಸರಕುಗಳ ನಿರ್ವಹಣಾ ಕೇಂದ್ರವಾಗಿದೆ. ಈ ಅತ್ಯಾಧುನಿಕ ಸೌಲಭ್ಯವು ಪೆರಿಷಬಲ್ ಕೋಲ್ಡ್ ಸ್ಟೋರೇಜ್ ಸರಕುಗಳಿಗಾಗಿ ಪ್ರತ್ಯೇಕವಾಗಿ ವಿನ್ಯಾಸಗೊಳಿಸಲಾಗಿದೆ. ಸಸ್ಯ ಮತ್ತು ಪ್ರಾಣಿಗಳ ಕ್ವಾರಂಟೈನ್ ತಪಾಸಣೆ, ಡ್ರಗ್ ಕಂಟ್ರೋಲರ್ ಲ್ಯಾಬ್ ಮತ್ತು ಭಾರತೀಯ ಕಸ್ಟಮ್ಸ್ ಸೇರಿದಂತೆ ಆನ್-ಸೈಟ್ ನಿಯಂತ್ರಕ ಸೇವೆಗಳನ್ನು ಒಳಗೊಂಡಿದೆ. ತನ್ನ ಮೂಲಸೌಕರ್ಯ ಮತ್ತು ಸೇವೆಗಳನ್ನು ನಿರಂತರವಾಗಿ ಸುಧಾರಿಸುವ ಮೂಲಕ, BLR ವಿಮಾನ ನಿಲ್ದಾಣವು ಪೆರಿಷಬಲ್ ಸರಕುಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಬೆಂಬಲಿಸುವ ಜೊತೆಗೆ, ಭಾರತದಲ್ಲಿ ಕೃಷಿ ಮತ್ತು ತೋಟಗಾರಿಕಾ ರಫ್ತಿಗೆ ಸಹಕಾರ ನೀಡುತ್ತದೆ. ಈ ಮೂಲಕ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಿ, ಅಂತಾರಾಷ್ಟ್ರೀಯ ವ್ಯಾಪಾರ ಸಂಬಂಧಗಳನ್ನು ಇನ್ನಷ್ಟು ಗಟ್ಟಿಗೊಳಿಸುತ್ತದೆ.
ಬೆಂಗಳೂರು: ಭದ್ರತೆ ಮತ್ತು ತುರ್ತು ಪ್ರತಿಕ್ರಿಯೆಯ ಪ್ರೋಟೋಕಾಲ್‌ನ ಭಾಗವಾಗಿ ರಾಷ್ಟ್ರೀಯ ಭದ್ರತಾ ಪಡೆ (NSG) ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru Airport) ಆ್ಯಂಟಿ-ಹೈಜಾಕ್ ಅಣುಕು ಪ್ರದರ್ಶನವನ್ನು ಯಶಸ್ವಿಯಾಗಿ ನಡೆಸಿತು.
ಜೂನ್ 24, ಸೋಮವಾರ ರಾತ್ರಿ 8 ಗಂಟೆಗೆ ಆರಂಭಗೊಂಡು, ಮಧ್ಯರಾತ್ರಿ ಮುಕ್ತಾಯಗೊಂಡ ಈ ಅಣುಕು ಪ್ರದರ್ಶನವು ನೈಜ-ಸಮಯದ ಸಂವಹನ ವ್ಯವಸ್ಥೆ, ಸುಧಾರಿತ ಕಣ್ಗಾವಲು ಉಪಕರಣಗಳು ಮತ್ತು ಅತ್ಯಾಧುನಿಕ ಭಯೋತ್ಪಾದನಾ-ವಿರೋಧಿ ಕ್ರಮಗಳಂತಹ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಳ್ಳುವಲ್ಲಿ ಎನ್ಎಸ್‌ಜಿಯ ಸಮರ್ಪಣೆಯನ್ನು ಉದಾಹರಿಸುತ್ತದೆ.
ಈ ಅಣುಕು ಪ್ರದರ್ಶನವು ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯನ್ನು ಖಾತ್ರಿಪಡಿಸುವಲ್ಲಿ ನಿರ್ಣಾಯಕ ನಿಲುವು ಹೊಂದಿರುತ್ತದೆ. ವಿಮಾನ ನಿಲ್ದಾಣದ ಯುದ್ಧತಂತ್ರದ ಸಿದ್ಧತೆಯನ್ನು ನಿರ್ಣಯಿಸಲು ಮತ್ತು ಸುಧಾರಿಸಲು ವಿನ್ಯಾಸಗೊಳಿಸಲಾದ ವಿವಿಧ ಸನ್ನಿವೇಶಗಳನ್ನು ಒಳಗೊಂಡಿತ್ತು.
ಅಪಹರಿಸಿದ ವಿಮಾನ ಏರ್‌ಪೋರ್ಟ್‌ಗೆ ಬಂದು ಇಳಿದ ಕೃತಕ ಸನ್ನಿವೇಶವನ್ನು ನಿರ್ಮಾಣ ಮಾಡಲಾಗಿತ್ತು. ಇದು ಏರೋಡ್ರೋಮ್ ಎಮರ್ಜೆನ್ಸಿ ಮ್ಯಾನೇಜ್‌ಮೆಂಟ್ ಕಮಿಟಿ (ಎಇಎಂಸಿ) ಅನ್ನು ತಕ್ಷಣವೇ ಸಕ್ರಿಯಗೊಳಿಸಿತು. ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ (ಡಿಜಿಸಿಎ) ಭಾರತ ಸರ್ಕಾರ, ಸಿಐಎಸ್‌ಎಫ್, ಗ್ರೌಂಡ್ ಹ್ಯಾಂಡ್ಲಿಂಗ್ ಏಜೆನ್ಸಿಗಳು, ಸಿಟಿ ಆಸ್ಪತ್ರೆಗಳು, ಭಾರತೀಯ ವಾಯುಪಡೆ (ಐಎಎಫ್), ಪೊಲೀಸ್, ಟ್ರಾಫಿಕ್ ಪೊಲೀಸ್, ಏರ್ ಟ್ರಾಫಿಕ್ ಸರ್ವೀಸಸ್ ಕಂಟ್ರೋಲ್ (ಎಟಿಸಿ), ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಸ್ಥಳೀಯ ಸಮುದಾಯಗಳು, ನಾಗರಿಕ ಸಂಘ ಸಂಸ್ಥೆಗಳು, ವಾಯುಯಾನ ಸಂಸ್ಥೆಗಳು ಮತ್ತು ಜಿಲ್ಲಾ ಆಡಳಿತ ಅಧಿಕಾರಿಗಳು ಸೇರಿದಂತೆ ಪ್ರಮುಖ ಪಾಲುದಾರರ ಸಹಯೋಗದಲ್ಲಿ ಈ ಅಣುಕು ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಕೇಸ್ – ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್
ತರಬೇತಿ ಪಡೆದ ಸಮಾಲೋಚಕರು, ವಿಮಾನ ಆಗಮನದ ನಂತರ ಹೈಜಾಕರ್ಸ್‌ನೊಂದಿಗೆ ಸಂಧಾನ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳುತ್ತಾರೆ. ಪರಿಸ್ಥಿತಿಯನ್ನು ಶಾಂತಿಯುತವಾಗಿ ನಿಭಾಹಿಸುವ ಗುರಿ ಹೊಂದಿರುತ್ತಾರೆ. ಒಂದು ವೇಳೆ ಮಾತುಕತೆ ವಿಫಲವಾದಲ್ಲಿ ರಾಷ್ಟ್ರೀಯ ಭದ್ರತಾ ಪಡೆಯು (NSG) ಮಧ್ಯಪ್ರವೇಶಿಸಲು ಮುಂದಾಗುತ್ತದೆ. ಬೆದರಿಕೆಯ ಮುಂಜಾಗರುಕತೆ ಮತ್ತು ಪರಿಣಾಮಕಾರಿ ನಿಯಂತ್ರಣದಲ್ಲಿ ಕಡಿಮೆ ಹಾನಿ ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಪ್ರಮುಖವಾಗಿ ಇರಿಸಲಾಗುತ್ತದೆ.
ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ (ಬಿಐಎಎಲ್) ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಹರಿ ಮರಾರ್ ಅವರು ಅಣುಕು ಪ್ರದರ್ಶನದ ಮಹತ್ವವನ್ನು ಉಲ್ಲೇಖಿಸುತ್ತಾ, “ಈ ನೈಜ-ಸಮಯದ ಸಿಮ್ಯುಲೇಟೆಡ್ ಆಂಟಿ-ಹೈಜಾಕ್ ಅಣುಕು ಪ್ರದರ್ಶನ ನಡೆಸುವುದು ಬಿಎಲ್‌ಆರ್ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಬಲಪಡಿಸುವಲ್ಲಿ ಪ್ರಮುಖ ಹೆಜ್ಜೆಯಾಗಿದೆ. ಇದು ನಮ್ಮ ಪ್ರತಿಕ್ರಿಯೆ ಪ್ರೋಟೋಕಾಲ್‌ಗಳನ್ನು ಕಟ್ಟುನಿಟ್ಟಾಗಿ ಪರೀಕ್ಷಿಸಲು, ಅಂತರ್-ಇಲಾಖೆಯ ಸಮನ್ವಯವನ್ನು ಹೆಚ್ಚಿಸಲು ಮತ್ತು ನೈಜ-ಜೀವನದ ಸನ್ನಿವೇಶಗಳಿಗೆ ಸನ್ನದ್ಧತೆಯನ್ನು ಖಚಿತಪಡಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಈ ಅಣುಕು ಪ್ರದರ್ಶನವನ್ನು ಸಾಧ್ಯವಾಗಿಸಿದ ಎಲ್ಲಾ ಆಂತರಿಕ ಮತ್ತು ಬಾಹ್ಯ ವ್ಯಕ್ತಿಗಳಿಗೆ ಮೆಚ್ಚುಗೆ ವ್ಯಕ್ತಪಡಿಸುತ್ತೇನೆ. ಅವರ ಸಾಮೂಹಿಕ ಪ್ರಯತ್ನ ನಮ್ಮ ಸಾಮರ್ಥ್ಯ ಮತ್ತು ಕಾರ್ಯಾಚರಣೆಯನ್ನು ಮೌಲ್ಯೀಕರಿಸುತ್ತದೆ. ಈ ನಿರಂತರ ಸುಧಾರಣೆ ಮತ್ತು ಬಿಕ್ಕಟ್ಟಿನ ಸಿದ್ಧತೆಗೆ ನಮ್ಮ ಬದ್ಧತೆ ತೋರುತ್ತದೆ. ನಮ್ಮ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಸುರಕ್ಷತೆ ಮತ್ತು ಭದ್ರತೆಯನ್ನು ಒದಗಿಸಲು ಇಂತಹ ಪೂರ್ವಭಾವಿ ಉಪಕ್ರಮಗಳು ಅಗತ್ಯವಾಗಿದೆ ಎಂದರು.
ಇಂಟರ್ನ್ಯಾಷನಲ್ ಸಿವಿಲ್ ಏವಿಯೇಷನ್ ಆರ್ಗನೈಸೇಶನ್ ಮತ್ತು ಡಿಜಿಸಿಎ ನಿಯಮಗಳಿಗೆ ಅನುಸಾರವಾಗಿ ಬೆಂಗಳೂರು ಏರ್‌ಪೋರ್ಟ್‌ನ ಭದ್ರತಾ ಕ್ರಮಗಳು ಮತ್ತು ತುರ್ತು ಪ್ರತಿಕ್ರಿಯೆ ಸಾಮರ್ಥ್ಯವನ್ನು ಹೆಚ್ಚಿಸಲು ನಡೆಯುತ್ತಿರುವ ಬದ್ಧತೆಯೊಂದಿಗೆ ಈ ಅಣುಕು ಪ್ರದರ್ಶನ ಹೊಂದಿಕೆಯಾಗುತ್ತಿದೆ. ಯಾವುದೇ ಪರಿಸ್ಥಿತಿ ಅಥವಾ ಸನ್ನಿವೇಶದಲ್ಲಿ ಎಲ್ಲಾ ವಿಮಾನ ನಿಲ್ದಾಣ ಬಳಕೆದಾರರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಆದ್ಯತೆ ನೀಡುವ ಸುರಕ್ಷಿತ ವಾತಾವರಣವನ್ನು ಒದಗಿಸುವ ಗುರಿಯನ್ನು ಹೊಂದಿದೆ.
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರ ಪಾಸ್‌ಪೋರ್ಟ್‌ಗೆ ಸಂಬಂಧಿಸಿದಂತೆ ಮುಂದಿನ ಕ್ರಮವನ್ನು ಜೂ.2ರ ಬಳಿಕ ಕೈಗೊಳ್ಳುವುದಾಗಿ ವಿದೇಶಾಂಗ ಸಚಿವಾಲಯ (MEA) ಹೇಳಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಇಲಾಖೆ ವಕ್ತಾರ ರಣಧೀರ್ ಜೈಸ್ವಾಲ್, ಪಾಸ್‌ಪೋರ್ಟ್ ರದ್ದತಿ ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮನವಿ ಆಧರಿಸಿ, ನಿಮ್ಮ ರಾಜತಾಂತ್ರಿಕ ಪಾಸ್ಪೋರ್ಟ್ ಏಕೆ ರದ್ದು ಮಾಡಬಾರದು? ಎಂದು ಪ್ರಶ್ನಿಸಿ ಮೇ 23 ರಂದು ಶೋಕಾಸ್ ನೋಟಿಸ್ ನೀಡಲಾಗಿದೆ. ಅದಕ್ಕೆ ಸ್ಪಷ್ಟಿಕರಣ ನೀಡಲು ಪ್ರಜ್ವಲ್ ರೇವಣ್ಣಗೆ 10 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಜೈಸ್ವಾಲ್ ಹೇಳಿದ್ದಾರೆ. ಇದನ್ನೂ ಓದಿ: ಕೊನೆಗೂ ಪ್ರಜ್ವಲ್ ರೇವಣ್ಣ ಬಂಧನ: ಎಸ್‌ಐಟಿ ಮುಂದಿನ ತನಿಖೆ ಪ್ರಕ್ರಿಯೆ ಏನು?
ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನ ಕೊನೆಗೂ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧನದ ಬಳಿಕ ಪ್ರಜ್ವಲ್ ಅವರನ್ನ ಎಸ್‌ಐಟಿ ಕಚೇರಿಗೆ ಕರೆದೊಯ್ಯಲಾಗಿದ್ದು, ಇಂದು (ಶುಕ್ರವಾರ) ರಾತ್ರಿ ಎಸ್‌ಐಟಿ ಕಚೇರಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ಏಪ್ರಿಲ್ 27ರಂದು ಜರ್ಮನಿಗೆ ಹಾರಿದ್ದ ಪ್ರಜ್ವಲ್ ಮೇ 31ರ ತಡರಾತ್ರಿ ಜರ್ಮನಿಯ ಮ್ಯೂನಿಕ್‌ನಿಂದ ಬಂದ ಲುಫ್ತಾನ್ಸಾ ಏರ್‌ಲೈನ್ಸ್‌ನ DLH 764 A-359 ವಿಮಾನದಲ್ಲಿ ಬೆಂಗಳೂರಿಗೆ ಬಂದಿಳಿದಿದ್ದಾರೆ.
ಅಷ್ಟಕ್ಕೂ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ಪೆನ್‌ಡ್ರೈವ್ ಪ್ರಕರಣ (Prajwal Pendrive Case) ಹುಟ್ಟಿಕೊಂಡದ್ದು ಹೇಗೆ? ಕಳೆದ ಏಪ್ರಿಲ್ 23 ರಿಂದ ಮೇ 31ರ ವರೆಗೆ ಏನೇನಾಯ್ತು? ಅನ್ನೋದರ ಕಂಪ್ಲೀಟ್ ಮಾಹಿತಿ ಇಲ್ಲಿದೆ… ಇದನ್ನೂ ಓದಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಧ್ಯರಾತ್ರಿ ಏರ್‌ಪೋರ್ಟ್‌ನಲ್ಲೇ ಅರೆಸ್ಟ್!
ಏ.23: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋಗಳ ಪೆನ್‌ಡ್ರೈವ್ ಹಂಚಿಕೆ ಆರೋಪ ಪ್ರಕರಣ ಬೆಳಕಿಗೆ ಬಂದಿತು.
ಏ.27: ದೇಶದ 2ನೇ ಹಂತ ಹಾಗೂ ರಾಜ್ಯದಲ್ಲಿ ಮೊದಲ ಹಂತದ ಲೋಕಚಣಾ ಚುನಾವಣೆ (Lok Sabha Elections) ಮುಗಿಯುತ್ತಿದ್ದಂತೆ ಪ್ರಜ್ಬಲ್ ವಿದೇಶಕ್ಕೆ ಎಸ್ಕೇಪ್ ಆಗಿದ್ದರು.
ಏ.28: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ಪೆನ್‌ಡ್ರೈವ್ ಪ್ರಕರಣವನ್ನು ತನಿಖೆ ನಡೆಸಲು ರಾಜ್ಯ ಸರ್ಕಾರ ಬೆಂಗಳೂರಿನ ಎಡಿಜಿಪಿ ಬಿಜಯಕುಮಾರ್ ಸಿಂಗ್, ಸಹಾಯಕ ಪೊಲೀಸ್ ಮಹಾ ನಿರೀಕ್ಷಕರಾದ ಸುಮನ್ ಡಿ. ಪನ್ನೇಕರ್ ಹಾಗೂ ಮೈಸೂರು ಎಸ್ಪಿ ಸೀಮಾ ಲಾಠ್ಕರ್ ಅವರನ್ನೊಳಗೊಂಡ ತನಿಖಾ ತಂಡವನ್ನು ರಚನೆ ಮಾಡಿತು.
ಏ.29: ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಪ್ರಜ್ವಲ್ ರೇವಣ್ಣ ಅವರಿಗೆ ಎಸ್‌ಐಟಿ ಮೊದಲ ನೋಟಿಸ್ ಜಾರಿಗೊಳಿಸಿತು.
ಮೇ 1: ಜರ್ಮನಿಗೆ ತೆರಳಿದ್ದ ಪೊಲೀಸ್ ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗಲು ತಮ್ಮ ವಕೀಲರ ಮೂಲಕ 7 ದಿನಗಳ ಕಾಲವಕಾಶ ಕೋರಿದ್ದರು.
ಮೇ 2: ಅಶ್ಲೀಲ ವೀಡಿಯೋ ಪ್ರಕರಣದ ಆರೋಪಿಯಾಗಿದ್ದ ಪ್ರಜ್ವಲ್ ರೇವಣ್ಣ ಅವರನ್ನ ಬಂಧಿಸಲು ಎಸ್‌ಐಟಿ ಲುಕ್‌ಔಟ್ ನೋಟಿಸ್ ಜಾರಿಗೊಳಿಸಿತು.
ಮೇ 5: ಪ್ರಜ್ವಲ್ ರೇವಣ್ಣ ಅವರು ಜರ್ಮನಿಗೆ ತೆರಳಿದ್ದರಿಂದ ಎಸ್‌ಐಟಿ ಇಂಟರ್‌ಪೋಲ್ ಮೂಲಕ ಬ್ಲೂಕಾರ್ನರ್ ನೋಟಿಸ್ ಜಾರಿಗೊಳಿಸಿತು.
ಮೇ 6: ಪ್ರಧಾನಿ ನರೇಂದ್ರ ಮೋದಿ ಅವರು ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದರು.
ಮೇ 18: ಸಂಸದ ಪ್ರಜ್ವಲ್ ರೇವಣ್ಣ ಅವರ ಬಂಧನಕ್ಕೆ ವಾರಂಟ್ ಜಾರಿಗೊಳಿಸಲಾಯಿತು.
ಮೇ 20: ಪ್ರಜ್ವಲ್ ಎಲ್ಲಿದ್ದರೂ ಬಂದು ಧೈರ್ಯವಾಗಿ ತನಿಖೆ ಎದುರಿಸುವಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮನವಿ. ಹಾಗೂ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡುವಂತೆ ವಿದೇಶಾಂಗ ಸಚಿವಾಲಯಕ್ಕೆ ಎಸ್‌ಐಟಿ ಪತ್ರ.
ಮೇ 23: ಪ್ರಜ್ವಲ್ ಎಲ್ಲಿದ್ದರೂ ಬಂದು ಶರಣಾಗುವಂತೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ವಾರ್ನಿಂಗ್.
ಮೇ 24: ಪ್ರಜ್ವಲ್ ರೇವಣ್ಣಗೆ ಕೇಂದ್ರದಿಂದ ಶೋಕಾಸ್ ನೋಟಿಸ್.
ಮೇ 27: ವಿದೇಶದಲ್ಲಿದ್ದುಕೊಂಡೇ ವೀಡಿಯೋ ಬಿಡುಗಡೆ ಮಾಡಿದ್ದ ಪ್ರಜ್ವಲ್ ರೇವಣ್ಣ, ಮೇ 31 ರಂದು ನಾನು ರಾಜ್ಯಕ್ಕೆ ಬರುತ್ತೇನೆ, ಎಸ್‌ಐಟಿ ಮುಂದೆ ಹಾಜರಾಗಿ ವಿಚಾರಣೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಹೇಳಿಕೆ.
ಮೇ 28: ಮ್ಯೂನಿಕ್‌ನಿಂದ ಬೆಂಗಳೂರಿಗೆ ಬರೋದಕ್ಕೆ ಲುಫ್ತಾನ್ಸಾ ಏರ್‌ಲೈನ್ಸ್ ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ.
ಮೇ 29: ಹಾಸನ ನಗರದ ಆರ್.ಸಿ ರಸ್ತೆಯಲ್ಲಿರುವ ಸಂಸದರ ನಿವಾಸದಲ್ಲಿ ಸತತ 10 ಗಂಟೆಗಳ ಕಾಲ ಎಸ್‌ಐಟಿ ಹಾಗೂ ಎಫ್‌ಎಸ್‌ಎಲ್ ತಂಡ ಪರಿಶೀಲನೆ ನಡೆಸಿತ್ತು. ಪ್ರಜ್ವಲ್ ರೇವಣ್ಣ ಮಲಗುತ್ತಿದ್ದ ಕೊಠಡಿಯಲ್ಲಿದ್ದ ಹಾಸಿಗೆ, ದಿಂಬು, ಹೊದಿಕೆ ಹಾಗೂ ಇತರೆ ವಸ್ತುಗಳನ್ನು ಅಧಿಕಾರಿಗಳು ಕೊಂಡೊಯ್ದರು.
ಮೇ 30: ಮ್ಯೂನಿಕ್‌ನಿಂದ ಹೊರಟ ಲುಫ್ತಾನ್ಸಾ ಏರ್ಲೈನ್ಸ್ನ ಡಿಎಲ್‌ಎಚ್ 764 ಎ-359 ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು.
ಮೇ 31: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಜ್ವಲ್ ರೇವಣ್ಣ ಆಗಮನ. ಇಮಿಗ್ರೇಷನ್ ಬಳಿಕ ಎಸ್‌ಐಟಿ ಅರೆಸ್ಟ್, ರಾತ್ರಿ ಎಸ್‌ಐಟಿ ಕಚೇರಿಯಲ್ಲೇ ವಾಸ್ತವ್ಯ.
ಬೆಂಗಳೂರು: 35 ದಿನಗಳ ಬಳಿಕ ಬೆಂಗಳೂರಿಗೆ ಬಂದಿಳಿದ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನ ಎಸ್‌ಐಟಿ ಅಧಿಕಾರಿಗಳು ಏರ್‌ಪೋರ್ಟ್‌ನಲ್ಲೇ ಬಂಧಿಸಿ, ಎಸ್‌ಐಟಿ ಕಚೇರಿಗೆ ಕರೆದೊಯ್ದಿದ್ದಾರೆ. ಪ್ರಜ್ವಲ್ ಅವರನ್ನು ಅರೆಸ್ಟ್ ಮಾಡಿದ ಬಳಿಕ ಏನೆಲ್ಲಾ ಬೆಳವಣಿಗೆ ಆಯ್ತು? ಮುಂದಿನ ಕ್ರಮಗಳೇನು ಎಂಬ ಪಿನ್ ಟು ಪಿನ್ ಡಿಟೇಲ್ಸ್ ಇಲ್ಲಿದೆ…
* ಶುಕ್ರವಾರ ಮಧ್ಯರಾತ್ರಿ 12:35ರ ವೇಳೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಜ್ವಲ್ ರೇವಣ್ಣ ಅವರಿದ್ದ ಲುಫ್ತಾನ್ಸಾ ಏರ್‌ಲೈನ್ಸ್‌ನ (Lufthansa Airlines) DLH 764 A-359 ವಿಮಾನ ಲ್ಯಾಂಡಿಗ್ ಆಯಿತು. ಇದನ್ನೂ ಓದಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಧ್ಯರಾತ್ರಿ ಏರ್‌ಪೋರ್ಟ್‌ನಲ್ಲೇ ಅರೆಸ್ಟ್!
* ವಿಮಾನ ಲ್ಯಾಂಡಿಂಗ್ ಪ್ರಕ್ರಿಯೆ ಪೂರ್ಣಗೊಳ್ಳುತ್ತಿದ್ದಂತೆ ಸಿಐಎಸ್‌ಎಫ್ ಸಿಬ್ಬಂದಿ ವಿಮಾನದ್ವಾರದಲ್ಲೇ ಸುತ್ತುವರಿದು ಪ್ರಜ್ವಲ್ ಅವರನ್ನ ವಶಕ್ಕೆ ಪಡೆಯಲು ಮುಂದಾದರು. ವಿಮಾನ ನಿಲ್ದಾಣದಲ್ಲಿ ಮಿಗ್ರೇಷನ್ ಅಧಿಕಾರಿಗಳು ಇಮಿಗ್ರೇಷನ್ ಪ್ರಕ್ರಿಯೆ (ಲಗೇಜ್ ಪರಿಶೀಲಿಸಿ, ಭಾರತಕ್ಕೆ ಮರಳಿರುವುದಾಗಿ ಸ್ಟ್ಯಾಂಪ್ ಹಾಕಿದ್ದಾರೆ) ಪೂರ್ಣಗೊಳಿಸುತ್ತಿದ್ದಂತೆ ಎಸ್‌ಐಟಿಗೆ ಹಸ್ತಾಂತರಿಸಿದ್ದಾರೆ.
* ಮಾಧ್ಯಮದವರ ಕಣ್ತಪ್ಪಿಸಲು ಮಾರ್ಗ ಬದಲಿಸಿದ್ದ ಎಸ್‌ಐಟಿ ಅಧಿಕಾರಿಗಳು ಮಧ್ಯರಾತ್ರಿ 2 ಗಂಟೆ ವೇಳೆಗೆ ಎಸ್‌ಐಟಿ ಕಚೇರಿಗೆ ಕರೆತಂದಿದ್ದಾರೆ.
* ಪ್ರಜ್ವಲ್ ರೇವಣ್ಣ ಅವರು ಮೇಲ್ನೋಟಕ್ಕೆ ಆರೋಗ್ಯವಾಗಿರುವಂತೆ ಕಂಡುಬಂದಿದ್ದಾರೆ. ಹಾಗಾಗಿ ಎಸ್‌ಐಟಿ ಕಚೇರಿಗೆ ಕರೆದೊಯ್ಯಲಾಗಿದೆ. ಶುಕ್ರವಾರ ಬೆಳಗ್ಗಿನ ಜಾವ ಅವರನ್ನ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗುತ್ತದೆ. ವೈದ್ಯಕೀಯ ಪರೀಕ್ಷೆ ನಂತರ ಕೋರ್ಟ್‌ಗೆ ಹಾಜರುಪಡಿಸಲಾಗುತ್ತದೆ ಎಸ್‌ಐಟಿ ಮೂಲಗಳು ತಿಳಿಸಿವೆ.
ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಪ್ರಕರಣ ನಡೆದ 35 ದಿನಗಳ ಬಳಿಕ ಬೆಂಗಳೂರಿನಲ್ಲಿ ಅರೆಸ್ಟ್ ಆಗಿದ್ದಾರೆ.
ಏಪ್ರಿಲ್ 26ರಂದು ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಏಪ್ರಿಲ್ 27ರಂದು ಜರ್ಮನಿಗೆ ಹಾರಿದ್ದ ಪ್ರಜ್ವಲ್ ಜರ್ಮನಿಯ ಮ್ಯೂನಿಕ್‌ನಿಂದ ಬಂದ ಲುಫ್ತಾನ್ಸಾ ಏರ್‌ಲೈನ್ಸ್‌ನ (lufthansa airlines) DLH 764 A-359 ವಿಮಾನದಲ್ಲಿ ಬೆಂಗಳೂರಿಗೆ ವಾಪಸ್ ಆದರು. ಶುಕ್ರವಾರ ಮಧ್ಯರಾತ್ರಿ 12:35ರ ವೇಳೆಗೆ ವೇಳೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಯಿತು. ವಿಮಾನ ಲ್ಯಾಂಡಿಂಗ್ ಆಗುತ್ತಿದ್ದಂತೆ ವಿಮಾನ ಸುತ್ತುವರಿದ ಸಿಐಎಸ್‌ಎಫ್ ಸಿಬ್ಬಂದಿ, ಪ್ರಜ್ವಲ್ ಅವರನ್ನ ಬಂಧಿಸಿ ಕರೆದೊಯ್ದಿದ್ದಾರೆ. ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ಪ್ರಕ್ರಿಯೆ ಮುಕ್ತಾಯಗೊಂಡ ಬಳಿಕ ಅವರನ್ನ ಎಸ್‌ಐಟಿಗೆ ಹಸ್ತಾಂತರಿಸಲಿದ್ದಾರೆ.
ಭಾರೀ ಭದ್ರತೆ:
ಪ್ರಜ್ವಲ್ ಆಗಮನದ ವೇಳೆ ಹೆಚ್ಚು ಜನ ಸೇರುವ ಸಾಧ್ಯತೆಯಿದ್ದ ಕಾರಣ ಸಂಚಾರಕ್ಕೆ ತೊಂದರೆ ಆಗದಂತೆ ನೋಡಿಕೊಳ್ಳಲು ಮುನ್ನೆಚ್ಚರಿಕಾ ಕ್ರಮವಾಗಿ ಸಂಚಾರ ಪೊಲೀಸರು ಅಲರ್ಟ್ ಆಗಿದ್ದರು. ಪ್ರಜ್ವಲ್ ಬಂಧನ ಮಾಡಿ ಕರೆದುಕೊಂಡು ಹೋಗುವ ವೇಳೆಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಏರ್‌ಪೋರ್ಟ್ ರಸ್ತೆಯಲ್ಲಿ ವಾಹನಗಳನ್ನು ನಿಲುಗಡೆ ಮಾಡದಂತೆ ಸೂಚಿಸಲಾಗಿತ್ತು, ಜನಸಂದಣಿ ಸೇರದಂತೆ ಎಚ್ಚರಿಕೆ ವಹಿಸಲಾಗಿತ್ತು. ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಟ್ರಾಫಿಕ್ ಪೊಲೀಸರು ಹಾಗೂ ಕಾನೂನು ಸುವ್ಯವಸ್ಥೆ ಪೊಲೀಸರು ಭೇಟಿ ನೀಡಿದ್ದು, ಪ್ರಜ್ವಲ್ ಕರೆದೊಯ್ಯುವ ಮಾರ್ಗವನ್ನು ಪರಿಶೀಲನೆ ನಡೆಸಿದ್ದರು.
ಮ್ಯೂನಿಕ್ ವಿಮಾನ ನಿಲ್ದಾಣದ ವಲಸೆ ವಿಭಾಗ ಬೆಂಗಳೂರು ವಿಮಾನ ನಿಲ್ದಾಣದ ವಲಸೆ ವಿಭಾಗಕ್ಕೆ ಮೊದಲೇ ಪ್ರಯಾಣಿಕರ ಪಟ್ಟಿ ಕಳುಹಿಸಿತ್ತು. ಈ ಪಟ್ಟಿಯಲ್ಲಿ ಪ್ರಜ್ವಲ್ ರೇವಣ್ಣ ಹೆಸರು ಇರುವುದನ್ನು ಎಸ್‌ಐಟಿ ಖಚಿತ ಪಡಿಸಿತ್ತು. ಲುಫ್ತನ್ಸಾ ವಿಮಾನದಲ್ಲಿ 3 ಲಕ್ಷ ರೂ. ಖರ್ಚು ಮಾಡಿ ಬಿಸಿನೆಸ್ ದರ್ಜೆಯ ಟಿಕೆಟ್ ಖರೀದಿಸಿ ಪ್ರಜ್ವಲ್ ಮ್ಯೂನಿಕ್‌ನಿಂದ ಹೊರಟಿದ್ದರು. ಒಟ್ಟು 23 ಬಿಸಿನೆಸ್ ದರ್ಜೆಯ ಟಿಕೆಟ್ ಪೈಕಿ 8 ಮಂದಿ ಮಾತ್ರ ಪ್ರಜ್ವಲ್ ಅವರಿದ್ದ ವಿಮಾನದಲ್ಲಿ ಪ್ರಯಾಣ ಮಾಡಿದ್ದರು. ಪ್ರಜ್ವಲ್ ರೇವಣ್ಣ ಒಬ್ಬಂಟಿಯಾಗಿ ವಿಂಡೋ ಸೀಟ್‌ನಲ್ಲಿ ಕುಳಿತಿದ್ದರು.
ಪ್ರಕರಣ ಬೆಳಕಿಗೆ ಬಂದಿದ್ದು ಯಾವಾಗ?
ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಅಶ್ಲೀಲ ವೀಡಿಯೋಗಳನ್ನೊಳಗೊಂಡ ಏಪ್ರಿಲ್ 23ರಂದು ಬೆಳಕಿಗೆ ಬಂದಿತ್ತು. ಈ ಬಗ್ಗೆ ದೂರುಗಳು ಕೇಳಿಬರುತ್ತಿದ್ದಂತೆ ಎಸ್‌ಐಟಿ ರಚನೆಗೆ ರಾಜ್ಯ ಸರ್ಕಾರ ಮುಂದಾಗಿತ್ತು. ಅಶ್ಲೀಲ ವೀಡಿಯೋ ಪ್ರಕರಣ ಹೊರಬರುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿ ತಲೆಮರೆಸಿಕೊಂಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಪೆನ್‌ಡ್ರೈವ್ ಪ್ರಕರಣ ಸಂಬಧ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿತ್ತು. ಈ ಬೆಳವಣಿಗೆಯ ನಂತರ, ಮೇ 1 ರಂದು ಪ್ರಜ್ವಲ್ ವಿಚಾರಣೆಗೆ ಹಾಜರಾಗಲು 7 ದಿನಗಳ ಕಾಲಾವಕಾಶ ಕೇಳಿದ್ದರು. ಬಳಿಕ ಯಾರೊಟ್ಟಿಗೂ ಸಂಪರ್ಕದಲ್ಲಿಲ್ಲದೇ ನಾಪತ್ತೆಯಾಗಿದ್ದ ಪ್ರಜ್ವಲ್ ಇದೇ ಮೇ 27ರಂದು ಅಜ್ಞಾತ ಸ್ಥಳದಿಂದ ವೀಡಿಯೋವೊಂದನ್ನ ಬಿಡುಗಡೆ ಮಾಡಿದ್ದರು.
ವೀಡಿಯೋದಲ್ಲಿ ಪ್ರಜ್ವಲ್ ಹೇಳಿದ್ದೇನು?
ವಿದೇಶಕ್ಕೆ ಹೋಗುವ ಬಗ್ಗೆ ಮೊದಲೇ ಪ್ಲಾನ್ ಆಗಿತ್ತು. ವಿದೇಶಕ್ಕೆ ಹೋಗುವಾಗ ನನ್ನ ಮೇಲೆ ಯಾವುದೇ ಆರೋಪ ಇರಲಿಲ್ಲ. ನಾನು ವಿದೇಶದಲ್ಲಿದ್ದಾಗ ಯೂಟ್ಯೂಬ್ ನ್ಯೂಸ್ ನೋಡಿ ನನ್ನ ಮೇಲೆ ಗಂಭೀರ ಆರೋಪ ಬಂದಿರುವುದು ಕಂಡುಬAದಿದೆ. ಇದಾದ ನಂತರ ನನ್ನ ಹೆಸರನ್ನು ರಾಜಕೀಯವಾಗಿ ಬಳಸಿಕೊಂಡಿದ್ದಾರೆ. ಎಸ್‌ಐಟಿ ನೋಟಿಸ್ ನೀಡಿದ ವಿಚಾರ ಗೊತ್ತಾಯಿತು. ನಾನು ರಾಜಕೀಯವಾಗಿ ಬೆಳೆಯಬಾರದು ಎಂಬ ಕಾರಣಕ್ಕೆ ನನ್ನ ಮೇಲೆ ಪಿತೂರಿ ಮಾಡಿದ್ದಾರೆ ಎಂದು ಆರೋಪಿಸಿದ್ದರು.
ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರು 35 ದಿನಗಳ ಬಳಿಕ ಕೊನೆಗೂ ಬೆಂಗಳೂರಿಗೆ (Bengaluru) ವಾಪಸ್ ಆಗಿದ್ದಾರೆ.
ಏಪ್ರಿಲ್ 26ರಂದು ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಏಪ್ರಿಲ್ 27ರಂದು ಜರ್ಮನಿಗೆ ಹಾರಿದ್ದ ಪ್ರಜ್ವಲ್ ಜರ್ಮನಿಯ ಮ್ಯೂನಿಕ್‌ನಿಂದ ಬಂದ ಲುಫ್ತಾನ್ಸಾ ಏರ್‌ಲೈನ್ಸ್‌ನ (lufthansa airlines) DLH 764 A-359 ವಿಮಾನದಲ್ಲಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.
ಗುರುವಾರ (ಮೇ 30) ಭಾರತೀಯ ಕಾಲಮಾನ ಸಂಜೆ 4:09ಕ್ಕೆ ಟೇಕಾಪ್ ಆಗಿದ್ದ ಲುಫ್ತಾನ್ಸಾ ಏರ್‌ಲೈನ್ಸ್ ವಿಮಾನವು 8 ಗಂಟೆ ಪ್ರಯಾಣದ ಬಳಿಕ ಮಧ್ಯರಾತ್ರಿ 12:35ರ ವೇಳೆಗೆ ವೇಳೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಯಿತು. ವಿಮಾನ ಲ್ಯಾಂಡಿಂಗ್ ಆಗುತ್ತಿದ್ದಂತೆ ಸಿಐಎಸ್‌ಎಫ್ ಸಿಬ್ಬಂದಿ ವಿಮಾನವನ್ನು ಸುತ್ತುವರಿದಿದ್ದರು. ಬಳಿಕ ಪ್ರಜ್ವಲ್ ಇಳಿಯುತ್ತಿದ್ದಂತೆ ವಿಮಾನ ದ್ವಾರದಲ್ಲೇ ಅವರನ್ನು ವಶಕ್ಕೆ ಪಡೆಯಲು ಮುಂದಾದರು. ಪ್ರಜ್ವಲ್ ವಿರುದ್ಧ ಲುಕ್‌ಔಟ್ ನೊಟೀಸ್ ಹಾಗೂ ಬ್ಲೂ ಕಾರ್ನರ್ ನೊಟೀಸ್ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಇಮಿಗ್ರೇಷನ್‌ನಲ್ಲೇ ಇಮಿಗ್ರೇಷನ್ ಅಧಿಕಾರಿಗಳು ವಶಕ್ಕೆ ಪಡೆದುಕೊಳ್ಳಲಿದ್ದಾರೆ. ಬಳಿಕ ಎಸ್‌ಐಟಿ ತಂಡಕ್ಕೆ ಹಸ್ತಾಂತರಿಸಲಿದ್ದಾರೆ.
ಮ್ಯೂನಿಕ್ ವಿಮಾನ ನಿಲ್ದಾಣದ ವಲಸೆ ವಿಭಾಗ ಬೆಂಗಳೂರು ವಿಮಾನ ನಿಲ್ದಾಣದ ವಲಸೆ ವಿಭಾಗಕ್ಕೆ ಮೊದಲೇ ಪ್ರಯಾಣಿಕರ ಪಟ್ಟಿ ಕಳುಹಿಸಿತ್ತು. ಈ ಪಟ್ಟಿಯಲ್ಲಿ ಪ್ರಜ್ವಲ್ ರೇವಣ್ಣ ಹೆಸರು ಇರೋದನ್ನ ಎಸ್‌ಐಟಿ ಸಹ ಖಚಿತಪಡಿಸಿತ್ತು. ಲುಫ್ತನ್ಸಾ ವಿಮಾನದಲ್ಲಿ 3 ಲಕ್ಷ ರೂ. ಖರ್ಚು ಮಾಡಿ ಬಿಸಿನೆಸ್ ದರ್ಜೆಯ ಟಿಕೆಟ್ ಖರೀದಿಸಿ ಪ್ರಜ್ವಲ್ ಮ್ಯೂನಿಕ್‌ನಿಂದ ಹೊರಟಿದ್ದರು. ಒಟ್ಟು 23 ಬಿಸಿನೆಸ್ ದರ್ಜೆಯ ಟಿಕೆಟ್ ಪೈಕಿ 8 ಮಂದಿ ಮಾತ್ರ ಪ್ರಜ್ವಲ್ ಅವರಿದ್ದ ವಿಮಾನದಲ್ಲಿ ಪ್ರಯಾಣ ಮಾಡಿದ್ದರು. ಪ್ರಜ್ವಲ್ ರೇವಣ್ಣ ಒಬ್ಬಂಟಿಯಾಗಿ ವಿಂಡೋ ಸೀಟ್‌ನಲ್ಲಿ ಕುಳಿತಿದ್ದರು.
ಏರ್ಪೋರ್ಟ್ ರಸ್ತೆಯಲ್ಲಿ ಹೈ ಅಲರ್ಟ್:
ಪ್ರಜ್ವಲ್ ಆಗಮನದ ವೇಳೆ ಹೆಚ್ಚು ಜನ ಸೇರುವ ಸಾಧ್ಯತೆಯಿದ್ದ ಕಾರಣ ಸಂಚಾರಕ್ಕೆ ತೊಂದರೆ ಆಗದಂತೆ ನೋಡಿಕೊಳ್ಳಲು ಭಾರೀ ಭದ್ರತೆ ನಿಯೋಜಿಸಲಾಗಿದೆ. ಟರ್ಮಿನಲ್ 1 ಹಾಗೂ ಅಲ್ಫಾ ಗೇಟ್ ಬಳಿ ವಾಹನ ಸಂಚಾರಗಳ ಮೇಲೆ ನಿಗಾ ವಹಿಸಲಾಗಿದೆ. ಅನಗತ್ಯವಾಗಿ ವಾಹನಗಳನ್ನು ನಿಲ್ಲಿಸದಂತೆ ಹಾಗೂ ಹೆಚ್ಚು ಜನ ಸೇರದಂತೆ ಕಟ್ಟೆಚ್ಚರ ವಹಿಸಲಾಗಿದೆ. ಅನುಮತಿ ಪಡೆದ, ಪ್ರಯಾಣಿಕರನ್ನು ಕರೆತರುವ, ಕರೆದೊಯ್ಯುವ ವಾಹನಗಳಿಗೆ ಮಾತ್ರ ಪ್ರವೇಶ ಅವಕಾಶ ಮಾಡಿಕೊಡಲಾಗಿದೆ. ಟರ್ಮಿನಲ್ -2 ಮುಖ್ಯದ್ವಾರದ ಬಳಿಯೂ ಬ್ಯಾರಿಕೇಟ್ ಅಳವಡಿಕೆ ಮಾಡಲಾಗಿದೆ. ಸಿಐಎಸ್‌ಎಫ್ ಅಧಿಕಾರಿಗಳ ತಂಡದಿಂದಲೂ ಭದ್ರತೆ ನಿಯೋಜಿಸಲಾಗಿದೆ. ವಿಐಪಿ ಲೇನ್ ಅನ್ನು ಸಹ ಬಂದ್ ಮಾಡಲಾಗಿದೆ. ಅಲ್ಲದೇ ಪ್ರಜ್ವಲ್ ಅವರ ಫೋಟೋ, ವೀಡಿಯೋಗಳನ್ನು ಮಾಡದಂತೆ ಸೂಚನೆ ನೀಡಲಾಗಿದೆ.
ಪ್ರಜ್ವಲ್ ರೇವಣ್ಣ ಸಂಸದರಾಗಿರುವ ಕಾರಣ, ಅವರ ಬಳಿ ಡಿಪ್ಲೋಮ್ಯಾಟಿಕ್ ಪಾಸ್‌ಪೋರ್ಟ್ ಇರುವ ಕಾರಣ ವಿಮಾನ ನಿಲ್ದಾಣದಲ್ಲಿಯೇ ಇನ್ನಷ್ಟು ಪ್ರಕ್ರಿಯೆ ನಡೆಯಲಿದೆ. ಪ್ರಜ್ವಲ್ ರೇವಣ್ಣ ಬಂಧನದ ಕುರಿತು ಲೋಕಸಭೆ ಸ್ಪೀಕರ್‌ಗೆ ಎಸ್‌ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಷ್ಟೇ ಅಲ್ಲ, ಸುಮಾರು 45 ಪುಟಗಳ ದಾಖಲೆಗಳನ್ನು ಎಸ್‌ಐಟಿ ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದಾರೆ. ಇಮಿಗ್ರೇಷನ್ ಅಧಿಕಾರಿಗಳ ಬಳಿ ಎಸ್‌ಐಟಿ ಅಧಿಕಾರಿಗಳು ಹಲವು ದಾಖಲೆಗಳ ಪರಿಶೀಲನೆ ಸೇರಿ ವಿವಿಧ ಪ್ರಕ್ರಿಯೆ ನಡೆಯಲಿದೆ. ಇದಾದ ಬಳಿಕವೇ ಎಸ್‌ಐಟಿ ಅಧಿಕಾರಿಗಳ ವಶಕ್ಕೆ ನೀಡಲಾಗುತ್ತದೆ.
ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು 35 ದಿನಗಳ ಬಳಿಕ ವಾಪಸ್ಸಾಗುತ್ತಿದ್ದು, ಕೆವಲೇ ಕ್ಷಣಗಳಲ್ಲಿ ಬೆಂಗಳೂರಿಗೆ ಬಂದಿಳಿಯಲಿದ್ದಾರೆ.
ಏಪ್ರಿಲ್ 26ರಂದು ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಏಪ್ರಿಲ್ 27ರಂದು ಜರ್ಮನಿಗೆ ಹಾರಿದ್ದ ಪ್ರಜ್ವಲ್ ಜರ್ಮನಿಯ ಮ್ಯೂನಿಕ್‌ನಿಂದ ಬಂದ ಲುಫ್ತಾನ್ಸಾ ಏರ್ಲೈನ್ಸ್ನ ಡಿಎಲ್‌ಎಚ್ 764 ಎ 359 ವಿಮಾನದಲ್ಲಿ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ.
ಗುರುವಾರ (ಮೇ 30) ಭಾರತೀಯ ಕಾಲಮಾನ ಸಂಜೆ 4:09ಕ್ಕೆ ಟೇಕಾಪ್ ಆಗಿದ್ದ ಲುಫ್ತಾನ್ಸಾ ಏರ್‌ಲೈನ್ಸ್ ವಿಮಾನವು ಮಧ್ಯರಾತ್ರಿ 12:35ರ ವೇಳೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗಲಿದೆ. ಪ್ರಜ್ವಲ್ ವಿರುದ್ಧ ಲುಕ್‌ಔಟ್ ನೊಟೀಸ್ ಹಾಗೂ ಬ್ಲೂ ಕಾರ್ನರ್ ನೊಟೀಸ್ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಇಮಿಗ್ರೇಷನ್‌ನಲ್ಲೇ ಇಮಿಗ್ರೇಷನ್ ಅಧಿಕಾರಿಗಳು ವಶಕ್ಕೆ ಪಡೆದುಕೊಳ್ಳಲಿದ್ದಾರೆ. ಬಳಿಕ ಎಸ್‌ಐಟಿ ತಂಡಕ್ಕೆ ಹಸ್ತಾಂತರಿಸಲಿದ್ದಾರೆ.
ಮ್ಯೂನಿಕ್ ವಿಮಾನ ನಿಲ್ದಾಣದ ವಲಸೆ ವಿಭಾಗ ಬೆಂಗಳೂರು ವಿಮಾನ ನಿಲ್ದಾಣದ ವಲಸೆ ವಿಭಾಗಕ್ಕೆ ಮೊದಲೇ ಪ್ರಯಾಣಿಕರ ಪಟ್ಟಿ ಕಳುಹಿಸಿತ್ತು. ಈ ಪಟ್ಟಿಯಲ್ಲಿ ಪ್ರಜ್ವಲ್ ರೇವಣ್ಣ ಹೆಸರು ಇರೋದನ್ನ ಎಸ್‌ಐಟಿ ಸಹ ಖಚಿತಪಡಿಸಿತ್ತು. ಲುಫ್ತನ್ಸಾ ವಿಮಾನದಲ್ಲಿ 3 ಲಕ್ಷ ರೂ. ಖರ್ಚು ಮಾಡಿ ಬಿಸಿನೆಸ್ ದರ್ಜೆಯ ಟಿಕೆಟ್ ಖರೀದಿಸಿ ಪ್ರಜ್ವಲ್ ಮ್ಯೂನಿಕ್‌ನಿಂದ ಹೊರಟಿದ್ದರು. ಒಟ್ಟು 23 ಬಿಸಿನೆಸ್ ದರ್ಜೆಯ ಟಿಕೆಟ್ ಪೈಕಿ 8 ಮಂದಿ ಮಾತ್ರ ಪ್ರಜ್ವಲ್ ಅವರಿದ್ದ ವಿಮಾನದಲ್ಲಿ ಪ್ರಯಾಣ ಮಾಡಿದ್ದರು. ಪ್ರಜ್ವಲ್ ರೇವಣ್ಣ ಒಬ್ಬಂಟಿಯಾಗಿ ವಿಂಡೋ ಸೀಟ್‌ನಲ್ಲಿ ಕುಳಿತಿದ್ದರು.
ಏರ್ಪೋರ್ಟ್ ರಸ್ತೆಯಲ್ಲಿ ಹೈ ಅಲರ್ಟ್:
ಪ್ರಜ್ವಲ್ ಆಗಮನದ ವೇಳೆ ಹೆಚ್ಚು ಜನ ಸೇರುವ ಸಾಧ್ಯತೆಯಿದ್ದ ಕಾರಣ ಸಂಚಾರಕ್ಕೆ ತೊಂದರೆ ಆಗದಂತೆ ನೋಡಿಕೊಳ್ಳಲು ಭಾರೀ ಭದ್ರತೆ ನಿಯೋಜಿಸಲಾಗಿದೆ. ಅರ್ಮಿನಲ್ 1 ಹಾಗೂ ಅಲ್ಫಾ ಗೇಟ್ ಬಳಿ ವಾಹನ ಸಂಚಾರಗಳ ಮೇಲೆ ನಿಗಾ ವಹಿಸಲಾಗಿದೆ. ಅನಗತ್ಯವಾಗಿ ವಾಹನಗಳನ್ನು ನಿಲ್ಲಿಸದಂತೆ ಹಾಗೂ ಹೆಚ್ಚು ಜನ ಸೇರದಂತೆ ಕಟ್ಟೆಚ್ಚರ ವಹಿಸಲಾಗಿದೆ. ಅನುಮತಿ ಪಡೆದ, ಪ್ರಯಾಣಿಕರನ್ನು ಕರೆತರುವ, ಕರೆದೊಯ್ಯುವ ವಾಹನಗಳಿಗೆ ಮಾತ್ರ ಪ್ರವೇಶ ಅವಕಾಶ ಮಾಡಿಕೊಡಲಾಗಿದೆ. ಟರ್ಮಿನಲ್ -2 ಮುಖ್ಯದ್ವಾರದ ಬಳಿಯೂ ಬ್ಯಾರಿಕೇಟ್ ಅಳವಡಿಕೆ ಮಾಡಲಾಗಿದೆ. ಸಿಐಎಸ್‌ಎಫ್ ಅಧಿಕಾರಿಗಳ ತಂಡದಿಂದಲೂ ಭದ್ರತೆ ನಿಯೋಜಿಸಲಾಗಿದೆ.