Tag: bengaluru airport

  • ರಾಜ್ಯಕ್ಕೆ ಆಗಮಿಸಿದ ನೂತನ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್

    ರಾಜ್ಯಕ್ಕೆ ಆಗಮಿಸಿದ ನೂತನ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್

    ಬೆಂಗಳೂರು: ನೂತನ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ರವರು ಇಂದು ರಾಜ್ಯಕ್ಕೆ ಆಗಮಿಸಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಕಂದಾಯ ಸಚಿವ ಆರ್.ಆಶೋಕ್ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಬರಮಾಡಿಕೊಂಡರು.

    ಇದಕ್ಕೂ ಮುನ್ನ ಮಾತನಾಡಿದ ಸಚಿವ ಆರ್.ಅಶೋಕ್, ನೂತನ ರಾಜ್ಯಪಾಲರನ್ನು ನಾನು ಸಿಎಸ್ ರವಿಕುಮಾರ್ ಸರ್ಕಾರದ ಪರವಾಗಿ ಸ್ವಾಗತಿಸಲು ಬಂದಿದ್ದೇವೆ. ಗೆಹ್ಲೋಟ್ ಅವರು ಕರ್ನಾಟಕದ ರಾಜ್ಯಪಾಲರಾಗಿ ನೇಮಕಗೊಂಡಿರುವುದು ಸಂತೋಷವಾಗಿದೆ. ಈ ಹಿಂದೆಯೇ ರಾಜ್ಯದ ಉಸ್ತುವಾರಿಗಳಾಗಿ ಗೆಹ್ಲೋಟ್ ರವರು ಕೆಲಸ ಮಾಡಿದ್ದಾರೆ. ಕರ್ನಾಟಕದ ಪರಿಚಯ ಮತ್ತು ಇತಿಹಾಸ ಅವರಿಗೆ ಚೆನ್ನಾಗಿ ಗೊತ್ತಿದೆ ಎಂದರು.

    ಕೇಂದ್ರ ಸಚಿವರಾಗಿ ಕೆಲಸ ಮಾಡಿದ ಅನುಭವ ಗೆಹ್ಲೋಟ್ ಅವರಿಗಿದೆ. ತುಳಿತಕ್ಕೆ ಒಳಗಾದ ಸಮುದಾಯದಿಂದ ಬಂದವರಾಗಿದ್ದಾರೆ. ಅವರ ಸಲಹೆ ಸೂಚನೆ ಮತ್ತು ಒಳ್ಳೆಯ ಆಡಳಿತಕ್ಕೆ ಅವರ ಮಾರ್ಗದರ್ಶನ ಅಗತ್ಯವಾಗಿದೆ ಎಂದು ತಿಳಿಸಿದರು. ತಾವರ್ ಚಂದ್ ಗೆಹ್ಲೋಟ್ ಅವರು ನಾಳೆ ಕರ್ನಾಟಕದ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

  • ಬೆಂಗಳೂರು ವಿಮಾನ ನಿಲ್ದಾಣಕ್ಕೆ ಸೇವಾ ಗುಣಮಟ್ಟದ ಪ್ರಶಸ್ತಿ

    ಬೆಂಗಳೂರು ವಿಮಾನ ನಿಲ್ದಾಣಕ್ಕೆ ಸೇವಾ ಗುಣಮಟ್ಟದ ಪ್ರಶಸ್ತಿ

    ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹಲವು ಪ್ರಶಸ್ತಿಗಳಿಗೆ ಭಾಜನವಾಗಿದ್ದು, ಇದೀಗ 4ನೇ ಬಾರಿ ವಿಮಾನ ನಿಲ್ದಾಣ ಸೇವಾ ಗುಣಮಟ್ಟದ ವಾರ್ಷಿಕ ವಾರ್ಷಿಕ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

    ಏರ್ ಪೋರ್ಟ್ ಕೌನ್ಸಿಲ್ ಇಂಟರ್ ನ್ಯಾಷನಲ್ ನವರು ಈ ಪ್ರಶಸ್ತಿ ನೀಡಿದ್ದು, ವಿಮಾನ ನಿಲ್ದಾಣದ ಗಾತ್ರ ಹಾಗೂ ಪ್ರದೇಶವನ್ನು ಆಧರಸಿ ಪ್ರಶಸ್ತಿ ನೀಡಲಾಗಿದೆ. ಸತತ ನಾಲ್ಕನೇ ಬಾರಿ ಬೆಂಗಳೂರು ವಿಮಾನ ನಿಲ್ದಾಣ ಈ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಪ್ರತಿ ವರ್ಷ 2.5 ರಿಂದ – 4 ಕೋಟಿ ಪ್ರಯಾಣಿಕರು ಪ್ರಯಾಣಿಸುವ ವಿಭಾಗದಲ್ಲಿ ಅತ್ಯುತ್ತಮ ವಿಮಾನ ನಿಲ್ದಾಣ ಪ್ರಶಸ್ತಿಯನ್ನು ಪಡೆದುಕೊಂಡಿದೆ.

    ಬೆಂಗಳೂರು ವಿಮಾನ ನಿಲ್ದಾಣ ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿದ್ದು, ಅತ್ಯುತ್ತಮ ಸೇವೆಗಾಗಿ 2017, 2018 ಹಾಗೂ 2019ರಲ್ಲಿ ಅಸಿಐ-ಎಎಸ್‍ಕ್ಯೂ ಪ್ರಶಸ್ತಿಗಳನ್ನು ಪಡೆದಿದೆ. ವಿಮಾನ ನಿಲ್ದಾಣದಲ್ಲಿ ಸ್ವಚ್ಛತೆ ಹಾಗೂ ಕೊರೊನಾ ಸಂದರ್ಭದಲ್ಲಿ ಸ್ಯಾನಿಟೈಸ್ ಮಾಡುವ ಮೂಲಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

    ಇಡೀ ವಿಶ್ವದಲ್ಲಿ ಅರೈವಲ್ಸ್ ಹಾಗೂ ಡಿಪಾರ್ಚರ್ಸ್ ಎರಡರಲ್ಲೂ ಎಎಸ್‍ಕ್ಯೂ ಪ್ರಶಸ್ತಿ ಪಡೆದ ಏಕೈಕ ವಿಮಾನ ನಿಲ್ದಾಣವಾಗಿದೆ. 2018 ಹಾಗೂ 2019ರಲ್ಲಿ ಈ ಪ್ರಶಸ್ತಿ ಲಭಿಸಿದೆ. ವಿಶ್ವ ಮಟ್ಟದಲ್ಲಿ ಈ ರೀತಿ ಗುರುತಿಸುತ್ತಿರುವುದು ನಿಜಕ್ಕೂ ನಮಗೆ ಹೆಮ್ಮೆಯ ಸಂಗತಿ. ಬೆಂಗಳೂರು ವಿಮಾನ ನಿಲ್ದಾಣದಲ್ಲಿನ ನಮ್ಮ ಇಕೋಸಿಸ್ಟಮ್ ಪಾರ್ಟ್ನರ್ಸ್ ಯಿಂದ ಇದೆಲ್ಲ ಸಾಧ್ಯವಾಗಿದೆ ಎಂದು ಬಿಐಎಎಲ್ ಎಂಡಿ ಹಾಗೂ ಸಿಇಒ ಹರಿ ಮಾರಾರ್ ಸಂತಸ ವ್ಯಕ್ತಪಡಿಸಿದ್ದಾರೆ.

    ನಮ್ಮ ಕೈಗಾರಿಕೆಗಳು ಹಲವು ಸವಾಲುಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿಯೂ ಈ ಪ್ರಶಸ್ತಿ ಸಿಕ್ಕಿರುವುದು ವಿಮಾನ ನಿಲ್ದಾಣದಲ್ಲಿನ ತಂಡದ ಆತ್ಮಸ್ಥೈರ್ಯವನ್ನು ಹೆಚ್ಚಿಸಿದೆ. ನಮ್ಮ ಪ್ರಯಾಣಿಕರ ವಿಶ್ವಾಸ ಮತವು ನಮ್ಮ ಸೇವೆಯ ಶ್ರೇಷ್ಠತೆಯ ಸನ್ವೇಷಣೆಯಲ್ಲಿ ಮತ್ತಷ್ಟು ಪ್ರೇರಣೆ ನೀಡತ್ತದೆ. ನಮ್ಮ ಪ್ರಯಾಣಿಕರು, ಪಾರ್ಟ್ನರ್ಸ್ ಬೆಂಬಲಕ್ಕೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.

  • ವಿಮಾನ ನಿಲ್ದಾಣದಲ್ಲಿ ಹಳೇ ರನ್‌ ವೇ ಪುನರ್‌ ನಿರ್ಮಾಣ ತಿಂಗಳಾಂತ್ಯಕ್ಕೆ ಪೂರ್ಣ: ಡಿಸಿಎಂ

    ವಿಮಾನ ನಿಲ್ದಾಣದಲ್ಲಿ ಹಳೇ ರನ್‌ ವೇ ಪುನರ್‌ ನಿರ್ಮಾಣ ತಿಂಗಳಾಂತ್ಯಕ್ಕೆ ಪೂರ್ಣ: ಡಿಸಿಎಂ

    – ಕಾಮಗಾರಿ ಪರಿಶೀಲನೆ ಮಾಡಿದ ಉಪ ಮುಖ್ಯಮಂತ್ರಿ

    ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹಳೇ (ಮೊದಲಿನ) ರನ್‌ ವೇ ಪುನರ್‌ ನಿರ್ಮಾಣದ ಕಾಮಗಾರಿ ಈ ತಿಂಗಳಾಂತ್ಯಕ್ಕೆ ಮುಗಿಯಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ತಿಳಿಸಿದರು.

    ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲನೆ ನಡೆಸಿದ ಅವರು ಪ್ರಸ್ತುತ ಕಾಮಗಾರಿ ಬಹುತೇಕ ಮುಗಿಯುತ್ತಾ ಬಂದಿದ್ದು, ಅಂತಿಮ ಹಂತದ ಕೆಲಸಗಳು ನಡೆಯುತ್ತಿವೆ ಎಂದರು.

    ಸದ್ಯ ಹೊಸ ರನ್‌ ವೇ‌ನಲ್ಲಿಯೇ‌ ವಿಮಾನಗಳ ಸಂಚಾರ‌ ನಡೆಯುತ್ತಿದ್ದು, ಮುಂದಿನ ತಿಂಗಳ ಅಂತ್ಯದಿಂದ ಪುನರ್ ನಿರ್ಮಾಣವಾದ ಹಳೆಯ ರನ್ ವೇನಲ್ಲೂ ವಿಮಾನ ಸಂಚಾರ ಆರಂಭವಾಗಲಿದೆ. ಮುಂಬೈನ ಎಐಸಿ ಇನ್‌ಫ್ರಾಸ್ಟ್ರಕ್ಚರ್ ಸಂಸ್ಥೆ ಈ ಯೋಜನೆಯನ್ನು 260 ಕೋಟಿ ರೂ. ವೆಚ್ಚದಲ್ಲಿ ದಾಖಲೆಯ ಕಡಿಮೆ ಅವಧಿಯಲ್ಲಿ ನಿರ್ಮಿಸಿದೆ ಎಂದು ಡಿಸಿಎಂ ಮಾಹಿತಿ ನೀಡಿದರು.

    ರನ್ ವೇ ಉದ್ದ 4 ಕಿ.ಮೀ ದೂರವಿದ್ದು, ರನ್ ವೇ ಮಧ್ಯದಲ್ಲೂ ಈಗ ಲೈಟ್‌ಗಳನ್ನು ಅಳವಡಿಸಲಾಗಿದೆ. ಇದರಿಂದ ವಿಮಾನಗಳ ಸಂಚಾರಕ್ಕೆ ಹೆಚ್ಚು ಅನುಕೂಲ ಆಗುತ್ತದೆ. ಜತೆಗೆ, ಟ್ಯಾಕ್ಸಿ ವೇಯನ್ನು ಹಾಗೂ ಒಳಚರಂಡಿ, ಏರ್‌ಫೀಲ್ಡ್ ಬೆಳಕಿನ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದು ಅವರು ಹೇಳಿದರು.

    ಈ ರನ್‌ ವೇ ಕಾರ್ಯಾರಂಭವಾದ ಮೇಲೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಒಟ್ಟು ಎರಡೂ ರನ್‌ ವೇಗಳ ಮೂಲಕ ವರ್ಷಕ್ಕೆ 60 ರಿಂದ 75 ದಶಲಕ್ಷ ಪ್ರಯಾಣಿಕರನ್ನು ನಿಭಾಯಿಸಬಲ್ಲದು. ಇದರಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಉತ್ತಮ ಲಾಭವಾಗಲಿದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.

    ಕೋವಿಡ್‌ ಸಂಕಷ್ಟವು ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಅಪಾರ ನಷ್ಟವನ್ನೇ ಉಂಟು ಮಾಡಿದೆ. . ಕೋವಿಡ್‌ಗೂ ಮೊದಲು ವಾರ್ಷಿಕ 33 ದಶಲಕ್ಷ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಬಳಿಕ ಆ ಪ್ರಮಾಣ 12 ದಶಲಕ್ಷಕ್ಕೆ ಇಳಿದಿದೆ. ಮುಂದಿನ ದಿನಗಳಲ್ಲಿ ಪ್ರಯಾಣಿಕರ ಹೆಚ್ಚಳವನ್ನು ನಿರೀಕ್ಷೆ ಮಾಡಬಹುದಾಗಿದೆ ಎಂದರು ಅವರು. ಈ ವೇಳೆ ವಿಮಾನ ನಿಲ್ದಾಣದ ಅಧಿಕಾರಿಗಳು ಹಾಜರಿದ್ದರು.

  • ಕಸ್ಟಮ್ಸ್ ಅಧಿಕಾರಿ ಪತ್ನಿ ಬಾತ್ ರೂಂನಲ್ಲಿ ಬಿಸಾಡಿದ್ಲು 10 ಲಕ್ಷ- CISF ಪೊಲೀಸರ ಭರ್ಜರಿ ಬೇಟೆ

    ಕಸ್ಟಮ್ಸ್ ಅಧಿಕಾರಿ ಪತ್ನಿ ಬಾತ್ ರೂಂನಲ್ಲಿ ಬಿಸಾಡಿದ್ಲು 10 ಲಕ್ಷ- CISF ಪೊಲೀಸರ ಭರ್ಜರಿ ಬೇಟೆ

    ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಒಟ್ಟು 74.81 ಲಕ್ಷ ರೂ. ಜಪ್ತಿ

    ಬೆಂಗಳೂರು: ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂತೆ ಕಂತೆ ನೋಟುಗಳು ಸಿಕ್ಕಿದ್ದು, ಸಿಐಎಸ್‍ಎಫ್ ಪೊಲೀಸರು ಭರ್ಜರಿ ಬೇಟೆ ನಡೆಸಿ, ಕಸ್ಟಮ್ಸ್ ಅಧಿಕಾರಿಯನ್ನು ಬಲೆಗೆ ಕೆಡವಿದ್ದಾರೆ.

    ಸಿಐಎಸ್‍ಎಫ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕಸ್ಟಮ್ಸ್ ಅಧಿಕಾರಿ ಇರ್ಫಾನ್ ಅಹಮದ್ ಮಹಮದ್ ಸಿಕ್ಕಿಬಿದ್ದಿದ್ದಾರೆ. ಅಧಿಕಾರಿಯಿಂದ ಸೂಟ್ ಕೇಸ್, ಬ್ಯಾಗ್ ನಲ್ಲಿದ್ದ ಒಟ್ಟು 74,81,500 ರೂ.ಗಳನ್ನು ಜಪ್ತಿ ಮಾಡಲಾಗಿದೆ. ಅಲ್ಲದೆ ಬೆಲೆ ಬಾಳುವ ಮೊಬೈಲ್, ಆಪಲ್ ವಾಚ್ ಸೇರಿದಂತೆ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಪರಿಶೀಲನೆ ವೇಳೆ ಕಂತೆ ಕಂತೆ ಹಣ ಪತ್ತೆಯಾಗಿದ್ದು, ಸಿಐಎಸ್‍ಎಫ್ ಪೊಲೀಸರು ಬೆರಗಾಗಿದ್ದಾರೆ. ಹಣವನ್ನು ವಶಪಡಿಸಿಕೊಳ್ಳುವುದನ್ನು ನೋಡುತ್ತಿದ್ದಂತೆ ಸಿಐಎಸ್‍ಎಫ್ ಅಧಿಕಾರಿಗಳ ಪರಿಶೀಲನೆ ವೇಳೆ ಕಸ್ಟಮ್ಸ್ ಅಧಿಕಾರಿಯ ಪತ್ನಿ ಬಾತ್ ರೂಂ ನಲ್ಲಿ ಕಂತೆ ಕಂತೆ ನೋಟುಗಳನ್ನು ಬಿಸಾಡಿದ್ದಾರೆ. ಅಧಿಕಾರಿಯ ಪತ್ನಿ ಬಾತ್ ರೂಂ ನಲ್ಲಿ 10 ಲಕ್ಷ ರೂ. ಬಿಸಾಡಿರುವುದು ಪತ್ತೆಯಾಗಿದೆ.

    ಪ್ರಕರಣವನ್ನು ಐಟಿ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದ್ದು, ಕಸ್ಟಮ್ಸ್ ಅಧಿಕಾರಿ ಚೆನ್ನೈ ನಲ್ಲಿ ವಾಸ ಮಾಡುತ್ತಿದ್ದಾರೆ. ಚೆನ್ನೈನಿಂದ ಲಕ್ನೋಗೆ ತೆರಳಲು ಬೆಂಗಳೂರಿಗೆ ಬಂದಿದ್ದರು. ತಪಾಸಣೆ ವೇಳೆ ಅಧಿಕಾರಿ ಸಿಕ್ಕಿಬಿದ್ದಿದ್ದಾನೆ.

  • ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮನಮಿಡಿಯುವ ದೃಶ್ಯಗಳು- ಮಗನನ್ನು ನೋಡಿ ಕಣ್ಣೀರಿಟ್ಟ ತಾಯಿ

    ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮನಮಿಡಿಯುವ ದೃಶ್ಯಗಳು- ಮಗನನ್ನು ನೋಡಿ ಕಣ್ಣೀರಿಟ್ಟ ತಾಯಿ

    ಬೆಂಗಳೂರು: ಲಾಕ್‍ಡೌನ್ ಕಾರಣದಿಂದ ಸ್ಥಗಿತಗೊಂಡಿದ್ದ ದೇಶೀಯ ವಿಮಾನ ಹಾರಾಟ ಆರಂಭವಾಗಿದೆ. ಇತ್ತ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಕೇಂದ್ರ ಸರ್ಕಾರ ಮರಳಿ ಕರೆತರುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಮಾನ ನಿಲ್ದಾಣ ಹಲವು ಮನಮಿಡಿಯುವ ದೃಶ್ಯಗಳಿಗೆ ಸಾಕ್ಷಿಯಾಗಿದೆ.

    ಮೆಡಿಕಲ್ ಶಿಕ್ಷಣ ಪಡೆಯಲು ಫಿಲಿಫೈನ್ಸ್ ತೆರಳಿದ್ದ ಮಗ 6 ತಿಂಗಳ ಬಳಿಕ ಇಂದು ಮತ್ತೆ ವಾಪಸ್ ಆಗಿದ್ದ. ಬಹು ಸಮಯದ ಬಳಿಕ ಮಗನನ್ನು ನೋಡಿದ್ದ ಯುವಕನ ತಾಯಿಯ ಕಣ್ಣಲ್ಲಿ ಆನಂದ ಬಾಷ್ಪ ಮೂಡಿತ್ತು. ಇತ್ತ ಮಗ ಆರೋಗ್ಯವಾಗಿ ಹಿಂದಿರುಗಿದರೇ ತಿರುಪತಿಗೆ ಭೇಟಿ ನೀಡಿ ಕೂದಲು ನೀಡುವುದಾಗಿ ಕುಟುಂಬಸ್ಥರು ಹರಕೆ ಹೊತ್ತಿದ್ದರು. ಮಗ ಹಿಂದಿರುಗಿದ್ದನ್ನು ನೋಡಿದರೂ ತಾಯಿ ಆತನೊಂದಿಗೆ ಹತ್ತಿರದಿಂದ ಮಾತನಾಡಿಸಲು ಸಾಧ್ಯವಾಗಿರಲಿಲ್ಲ. ದೂರದಿಂದಲೇ ಮಗನನ್ನು ಕಣ್ತುಂಬಿಕೊಂಡ ತಾಯಿ ಮಗನನ್ನು ಕ್ವಾರಂಟೈನ್‍ಗೆ ಕಳುಹಿಸಿಕೊಟ್ಟರು.

    ಜೈಪುರದಿಂದ ಆಗಿಸಿದ್ದ ಪತ್ನಿ ಹಾಗೂ ಮಗನನ್ನು ನೋಡಿ ವ್ಯಕ್ತಿಯೊಬ್ಬರು ಖುಷಿ ಹಂಚಿಕೊಂಡರು. ಕಳೆದ 3 ತಿಂಗಳಿನಿಂದ ಇಬ್ಬರು ಜೈಪುರದಲ್ಲಿ ಸಿಲುಕಿದ್ದರು. ಇಂದು ಪತ್ನಿ, ಮಗಳು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದಂತೆ ಸಂತಸಗೊಂಡಿದ್ದ ವ್ಯಕ್ತಿ ಮಗಳಿಗೆ ಸಿಹಿ ತಿಂಡಿ ನೀಡಿ ಹರ್ಷ ವ್ಯಕ್ತಪಡಿಸಿದ್ದರು. ಸದ್ಯ ಬಾಲಕ ಜೊತೆಗಿರುವ ಕಾರಣ ಇಬ್ಬರಿಗೂ ಗಂಟಲು ದ್ರವ ಪರೀಕ್ಷೆ ನಡೆಸಿ ವರದಿ ನೆಗೆಟಿವ್ ಬಂದರೇ ಹೋಂ ಕ್ವಾರಂಟೈನ್ ಮಾಡಲು ಅವಕಾಶ ನೀಡಲಾಗಿದೆ.

    ಮುಂಬೈಯಿಂದ 3 ವರ್ಷಗಳ ಬಳಿಕ ಆಗಮಿಸಿದ್ದ ಮಗಳನ್ನು ಕಂಡ ಅಪ್ಪ ಸಂತಸಗೊಂಡಿದ್ದರು. ಫೋನ್ ಮೂಲಕ ಮಗಳನ್ನು ದೂರದಿಂದಲೇ ಮಾತನಾಡಿಸಿ ಬಳಿಕ ಮಗಳನ್ನು ಕ್ವಾರಂಟೈನ್‍ಗೆ ಕಳುಹಿಸಿಕೊಟ್ಟರು.

    ವಿವಿಧ ಪ್ರದೇಶಗಳಿಂದ ಪ್ರಯಾಣಿಕರು ಆಗಮಿಸುತ್ತಿರುವ ಕುರಿತು ಮಾಹಿತಿ ನೀಡಿದ ಡಿಸಿಪಿ ಭೀಮಾಶಂಕರ ಅವರು, ಈಗಾಗಲೇ 2 ಅಂತಾರಾಷ್ಟ್ರೀಯ ವಿಮಾನಗಳು ಈಗಾಗಲೇ ಬಂದಿವೆ. ವಿದೇಶದಿಂದ ಆಗಮಿಸಿದ್ದ ಒಟ್ಟು 177 ಪ್ರಯಾಣಿಕರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿದೆ. ಉಳಿದಂತೆ 18 ದೇಶೀಯ ವಿಮಾನಗಳು ಆಗಮಿಸಿದ್ದು, ಇವುಗಳಲ್ಲಿ ಸುಮಾರು 750 ಪ್ರಯಾಣಿಕರು ಆಗಮಿಸಿದ್ದಾರೆ. ಎಲ್ಲರನ್ನು ಕಡ್ಡಾಯವಾಗಿ ಕ್ವಾರಂಟೈನ್ ಮಾಡುತ್ತಿರುವುದಾಗಿ ಹಾಗೂ ಕೆಲವರು ಇಲ್ಲಿಂದ ತಪ್ಪಿಸಿಕೊಂಡು ಹೋಗಲು ಯತ್ನಿಸಿದ್ದರು. ಅವರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

    ಸದ್ಯ 80 ದೇಶೀಯ ವಿಮಾನಗಳು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲು ಬುಕ್ ಆಗಿವೆ. ಆದರೆ ಕ್ವಾರಂಟೈನ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಬಹುತೇಕ ಪ್ರಯಾಣಿಕರು ವಿಮಾನ ಟಿಕೆಟ್ ಕ್ಯಾನ್ಸಲ್ ಮಾಡುತ್ತಿದ್ದಾರೆ. ನಿನ್ನೆಯೂ ಕೂಡ ಅನೇಕ ವಿಮಾನಗಳು ಕ್ಯಾನ್ಸಲ್ ಆಗಿವೆ. ಹೀಗಾಗಿ ಎಷ್ಟು ಜನ ಆಗಮಿಸುತ್ತಾರೆ ಎಂಬ ಮಾಹಿತಿಯನ್ನು ಸಂಗ್ರಹ ಮಾಡುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಮಹಾರಾಷ್ಟ್ರ, ಗುಜರಾತ್, ತಮಿಳುನಾಡು, ಮಧ್ಯಪ್ರದೇಶ, ರಾಜಸ್ಥಾನ ದೆಹಲಿಯಿಂದ ಬರುವ ಪ್ರಯಾಣಿಕರನ್ನು 7 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್. ಈ ಆರು ರಾಜ್ಯಗಳನ್ನ ಹೊರತುಪಡಿಸಿ ಬೇರೆ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ 14 ದಿನ ಹೋಂ ಕ್ವಾರಂಟೈನ್ ಮಾಡಲಾಗುತ್ತಿದೆ.

  • ರನ್ ವೇಗೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಬೆಂಗ್ಳೂರಿನಿಂದ ವಿಮಾನ ಟೇಕಾಫ್

    ರನ್ ವೇಗೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಬೆಂಗ್ಳೂರಿನಿಂದ ವಿಮಾನ ಟೇಕಾಫ್

    ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಎಂಟು ಗಂಟೆ ತಡವಾಗಿ ಥೈಲ್ಯಾಂಡ್‍ನ ಪುಕೆಟ್‍ನತ್ತ ಗೋ ಏರ್ ಜಿ8 041 ವಿಮಾನ ಹಾರಾಟ ನಡೆಸಿದೆ.

    ಗೋ ಏರ್ ಜಿ8 041 ವಿಮಾನ ತಡರಾತ್ರಿ 2:30 ಗಂಟಗೆ ಟೇಕಾಫ್ ಆಗಬೇಕಿತ್ತು. ಆದರೆ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ವಿಮಾನ ಟೇಕಾಫ್ ಆಗಿರಲಿಲ್ಲ. ಹೀಗಾಗಿ ಬೆಳಗ್ಗೆ 8ರಿಂದ 9 ಗಂಟೆ ಮಧ್ಯೆ ಆಕ್ರೋಶಗೊಂಡ ಪ್ರಯಾಣಿಕರು ಏರ್‌ಪೋರ್ಟ್‌ ರನ್ ವೇಗೆ ನುಗ್ಗಿ ಇತರೆ ವಿಮಾನಗಳ ಹಾರಾಟ ತಡೆಯಲು ಯತ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದರು.

    ಪ್ರಯಾಣಿಕರ ಆಕ್ರೋಶಕ್ಕೆ ತುತ್ತಾದ ಗೋ ಏರ್ ಸಿಬ್ಬಂದಿ ತಾಂತ್ರಿಕ ದೋಷವನ್ನು ಬಹುಬೇಗ ಸರಿಪಡಿಸಿದರು. ಬೆಳಗ್ಗೆ 10:40 ಗಂಟೆ ಗೋ ಏರ್ ವಿಮಾನ ಪುಕೆಟ್ ಕಡೆಗೆ ಹಾರಾಟ ನಡೆಸಿದ್ದು, ಏರ್‌ಪೋರ್ಟ್‌ ನಲ್ಲಿ ಪರದಾಡಿದ್ದ ಪ್ರಯಾಣಿಕರು ಕೊನೆಗೆ ನಿಟ್ಟುಸಿರುಬಿಟ್ಟಿದ್ದಾರೆ.

    ನಡೆದಿದ್ದೇನು?:
    ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎಎಲ್)ನಿಂದ ಥೈಲ್ಯಾಂಡ್‍ನ ಪುಕೆಟ್‍ಗೆ ತಡರಾತ್ರಿ 2:30 ಗಂಟೆಗೆ ಗೋ ಏರ್ ಪ್ರಯಾಣ ಬೆಳೆಸಬೇಕಿತ್ತು. ಆದರೆ ತಾಂತ್ರಿಕ ಸಮಸ್ಯೆಗಳಿಂದ ಗೋ ಏರ್ ಟೇಕಾಫ್ ಆಗದ ಕಾರಣ ಪುಕೆಟ್‍ಗೆ ಪ್ರಯಾಣಿಸಲು ಟಿಕೆಟ್ ಬುಕ್ ಮಾಡಿದ್ದ 120 ಮಂದಿ ಪ್ರಯಾಣಿಕರ ಆಕ್ರೋಶದ ಕಟ್ಟೆ ಒಡೆದಿತ್ತು. ಪರ್ಯಾಯ ವಿಮಾನ ಕಲ್ಪಿಸುವುದಾಗಿ ವಿಮಾನ ನಿಲ್ದಾಣದ ಸಿಬ್ಬಂದಿ ತಿಳಿಸಿದ್ದರು. ಆದರೆ ತಡರಾತ್ರಿ 2:30ರಿಂದ ಕಾದ ಪ್ರಯಾಣಿಕರಿಗೆ ಬೆಳಗ್ಗೆ 8 ಗಂಟೆಯಾದರೂ ಪರ್ಯಾಯ ವಿಮಾನ ಕಲ್ಪಿಸುವ ಕೆಲಸ ಮಾಡಲಿಲ್ಲ.

    ಕೆಲಸಕ್ಕೆ ಹಾಜರಾಗಿದ್ದ ಪೈಲಟ್ ಹಾಗೂ ಗಗನಸಖಿಯರು ಸಹ ಫ್ಲೈಟ್ ಟೇಕಾಫ್ ಆಗಲ್ಲ. ನಮ್ಮ ಕೆಲಸ ಮುಗಿಯಿತು ಅಂತ ಪ್ರಯಾಣಿಕರನ್ನು ಫ್ಲೈಟ್‍ನಲ್ಲೇ ಬಿಟ್ಟು ಹೊರಟು ಹೋಗಿದ್ದರು. ಇದರಿಂದ ಪ್ರಯಾಣಿಕರ ಆಕ್ರೋಶದ ಕಟ್ಟೆ ಒಡೆದು ಏಕಾಏಕಿ ರನ್ ವೇಗೆ ನುಗ್ಗಿ ಇತರೆ ವಿಮಾನಗಳ ಹಾರಾಟಕ್ಕೆ ಅಡ್ಡಿ ಉಂಟು ಮಾಡಲು ಯತ್ನಿಸಿದ್ದರು. ನಮಗೆ ವಿಮಾನ ಕಲ್ಪಿಸದೆ ಬೇರೆ ಯಾವುದೇ ವಿಮಾನ ಹಾರಾಟ ಮಾಡಬಾರದು ಅಂತ ಪ್ರತಿಭಟನಾಕಾರರು ಆಗ್ರಹಿಸಿದ್ದರು.

    ಕೂಡಲೇ ಎಚ್ಚೆತ್ತ ಏರ್‌ಪೋರ್ಟ್‌ ಭದ್ರತಾ ಸಿಬ್ಬಂದಿ ರನ್ ವೇಗೆ ನುಗ್ಗಿದ್ದ ಪ್ರಯಾಣಿಕರನ್ನು ವಾಪಸ್ ಕರೆತಂದಿದ್ದಾರೆ. ಬಳಿಕ ಪ್ರಯಾಣಿಕರು ಹಾಗೂ ಗೋ ಏರ್ ಸಿಬ್ಬಂದಿ ನಡುವೆ ವಾಗ್ವಾದ ನಡೆಯಿತು. ಬಳಿಕ ವಿಮಾನದ ತಾಂತ್ರಿಕ ದೋಷ ಸರಿಪಡಿಸಲಾಯಿತು.

    ಒಂದು ವೇಳೆ ಪ್ರಯಾಣಿಕರು ರನ್ ವೇಗೆ ನುಗ್ಗಿ ಪ್ರತಿಭಟನೆ ಮಾಡದೇ ಇದ್ದಿದ್ದರೆ ವಿಮಾನ ಟೇಕಾಫ್ ಆಗುವುದು ಇನ್ನೂ ತಡವಾಗುತ್ತಿತ್ತು. ಪ್ರತಿಭಟನೆಯಿಂದ ಎಚ್ಚೆತ್ತ  ಸಿಬ್ಬಂದಿ ಪ್ರಯಾಣಿಕರ ಸಮಸ್ಯೆಗೆ ಬಹುಬೇಗ ಸ್ಪಂದಿಸಿದರು ಎಂದು ಮಾತು ಸಾರ್ವಜನಿಕರಿಂದ ಕೇಳಿ ಬಂದಿದೆ.

  • ಬೆಂಗ್ಳೂರು ಏರ್‌ಪೋರ್ಟ್‌ ರನ್ ವೇಗೆ ನುಗ್ಗಿ ವಿಮಾನಗಳ ಹಾರಾಟಕ್ಕೆ ಅಡ್ಡಿ ಪಡಿಸಿದ ಪ್ರಯಾಣಿಕರು

    ಬೆಂಗ್ಳೂರು ಏರ್‌ಪೋರ್ಟ್‌ ರನ್ ವೇಗೆ ನುಗ್ಗಿ ವಿಮಾನಗಳ ಹಾರಾಟಕ್ಕೆ ಅಡ್ಡಿ ಪಡಿಸಿದ ಪ್ರಯಾಣಿಕರು

    ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್ ವೇಗೆ ನುಗ್ಗಿ ಪ್ರಯಾಣಿಕರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ ಘಟನೆ ನಡೆದಿದೆ.

    ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎಎಲ್)ನಿಂದ ಥೈಲ್ಯಾಂಡ್‍ನ ಪುಕೆಟ್‍ಗೆ ತಡರಾತ್ರಿ 2:30 ಗಂಟೆಗೆ ಗೋ ಏರ್ ಬಸ್ ಪ್ರಯಾಣ ಬೆಳೆಸಬೇಕಿತ್ತು. ಆದರೆ ತಾಂತ್ರಿಕ ಸಮಸ್ಯೆಗಳಿಂದ ಗೋ ಏರ್ ಟೇಕಾಫ್ ಆಗದ ಕಾರಣ ಪುಕೆಟ್‍ಗೆ ಪ್ರಯಾಣಿಸಲು ಟಿಕೆಟ್ ಬುಕ್ ಮಾಡಿದ್ದ 120 ಮಂದಿ ಪ್ರಯಾಣಿಕರ ಆಕ್ರೋಶದ ಕಟ್ಟೆ ಒಡೆಯಿತು. ಪರ್ಯಾಯ ವಿಮಾನ ಕಲ್ಪಿಸುವುದಾಗಿ ವಿಮಾನ ನಿಲ್ದಾಣದ ಸಿಬ್ಬಂದಿ ತಿಳಿಸಿದ್ದರು. ಆದರೆ ತಡರಾತ್ರಿ 2:30ರಿಂದ ಕಾದ ಪ್ರಯಾಣಿಕರಿಗೆ ಬೆಳಗ್ಗೆ 8 ಗಂಟೆಯಾದರೂ ಪರ್ಯಾಯ ವಿಮಾನ ಕಲ್ಪಿಸುವ ಕೆಲಸ ಮಾಡಲಿಲ್ಲ.

    ಕೆಲಸಕ್ಕೆ ಹಾಜರಾಗಿದ್ದ ಪೈಲಟ್ ಹಾಗೂ ಗಗನಸಖಿಯರು ಸಹ ಫ್ಲೈಟ್ ಟೇಕಾಫ್ ಆಗಲ್ಲ. ನಮ್ಮ ಕೆಲಸ ಮುಗಿಯಿತು ಅಂತ ಪ್ರಯಾಣಿಕರನ್ನು ಫ್ಲೈಟ್‍ನಲ್ಲೇ ಬಿಟ್ಟು ಹೊರಟು ಹೋದರು. ಇದರಿಂದ ಪ್ರಯಾಣಿಕರ ಆಕ್ರೋಶದ ಕಟ್ಟೆ ಒಡೆದು ಏಕಾಏಕಿ ರನ್ ವೇಗೆ ನುಗ್ಗಿ ಇತರೆ ವಿಮಾನಗಳ ಹಾರಾಟಕ್ಕೆ ಅಡ್ಡಿ ಉಂಟು ಮಾಡಲು ಯತ್ನಿಸಿದರು. ನಮಗೆ ವಿಮಾನ ಕಲ್ಪಿಸದೆ ಬೇರೆ ಯಾವುದೇ ವಿಮಾನ ಹಾರಾಟ ಮಾಡಬಾರದು ಅಂತ ಪ್ರತಿಭಟನಾಕಾರರು ಆಗ್ರಹಿಸಿದರು.

    ಕೂಡಲೇ ಎಚ್ಚೆತ್ತ ಏರ್‌ಪೋರ್ಟ್‌ ಭದ್ರತಾ ಸಿಬ್ಬಂದಿ ರನ್ ವೇಗೆ ನುಗ್ಗಿದ್ದ ಪ್ರಯಾಣಿಕರನ್ನು ವಾಪಸ್ ಕರೆತಂದಿದ್ದಾರೆ. ಬಳಿಕ ಪ್ರಯಾಣಿಕರು ಹಾಗೂ ಗೋ ಏರ್ ಸಿಬ್ಬಂದಿ ನಡುವೆ ವಾಗ್ವಾದ ನಡೆಯಿತು. ಪುಕೆಟ್‍ಗೆ ಮತ್ತೊಂದು ವಿಮಾನ ಹಾರಾಟ ಮಾಡಲು ಬಿಸಿಎಎಸ್‍ನಿಂದ ಅನುಮತಿ ಸಿಕ್ಕಿಲ್ಲ. ಹೀಗಾಗಿ ಪುಕೆಟ್‍ಗೆ ತೆರಳಬೇಕಿದ್ದ ಪ್ರಯಾಣಿಕರು ಏರ್‌ಪೋರ್ಟ್‌ ನಲ್ಲೇ ಪರದಾಡುವಂತಾಗಿದೆ.

  • ಐಎಂಎ ವಂಚನೆ ಪ್ರಕರಣ: ಎಸ್‍ಐಟಿ ವಶಕ್ಕೆ ಶಾಸಕ ರೋಷನ್ ಬೇಗ್?

    ಐಎಂಎ ವಂಚನೆ ಪ್ರಕರಣ: ಎಸ್‍ಐಟಿ ವಶಕ್ಕೆ ಶಾಸಕ ರೋಷನ್ ಬೇಗ್?

    ಬೆಂಗಳೂರು: ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಾಜಿನಗರ ಶಾಸಕ ರೋಷನ್ ಬೇಗ್ ಅವರನ್ನು ಎಸ್‍ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭಿಸಿದೆ.

    ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಎಸ್‍ಐಟಿ ಅಧಿಕಾರಿಗಳು ರೋಷನ್ ಬೇಗ್ ಅವರನ್ನು ವಶಕ್ಕೆ ಪಡೆದಿದ್ದು, ವಿಮಾನ ನಿಲ್ದಾಣದಲ್ಲೇ ಹಿರಿಯ ಅಧಿಕಾರಿಗಳಿಂದ ಅವರ ವಿಚಾರಣೆ ನಡೆದಿದೆ ಎನ್ನಲಾಗಿದೆ. ಅಂದಹಾಗೇ ರೋಷನ್ ಬೇಗ್ ಮುಂಬೈಗೆ ತೆರಳಲು ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು ಎಂಬ ಮಾಹಿತಿ ಎಸ್‍ಐಟಿ ಅಧಿಕಾರಿಗಳಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

    ಎಸ್‍ಐಟಿಯ ಅಧಿಕಾರಿ ಗಿರೀಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಸಮ್ಮಿಶ್ರ ಸರ್ಕಾರ ವಿಶ್ವಾಸ ಮತಯಾಚನೆ ಗುರುವಾರ ಫಿಕ್ಸ್ ಆಗಿರುವುದರಿಂದ ಕೊನೆ ಗಳಿಗೆಯಲ್ಲಿ ದೋಸ್ತಿ ನಾಯಕರು ಮನವೊಲಿಕೆಗೆ ಮುಂದಾಗಬಹುದು ಎಂಬ ಉದ್ದೇಶದಿಂದ ರೋಷನ್ ಬೇಗ್ ಮುಂಬೈ ತೆರಳುವ ನಿರ್ಧಾರ ಮಾಡಿದ್ದರು ಎನ್ನಲಾಗಿದೆ.

    ಐಎಂಎ ವಂಚನೆ ಬಳಿಕ ಬಿಡುಗಡೆಯಾದ ಆಡಿಯೋದಲ್ಲಿ ಮನ್ಸೂರ್ ಖಾನ್, ರೋಷನ್ ಬೇಗ್ ಹೆಸರು ಪ್ರಸ್ತಾಪ ಆಗಿತ್ತು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ರೋಷನ್ ಬೇಗ್‍ಗೆ ಎಸ್‍ಐಟಿ ನೊಟೀಸ್ ನೀಡಿತ್ತು. ಆದರೆ, ಜುಲೈ 11ರಂದು ರೋಷನ್ ಬೇಗ್ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಕಾರಣಕ್ಕೆ ಎಸ್‍ಐಟಿ ಮತ್ತೊಮ್ಮೆ ನೊಟೀಸ್ ಜಾರಿ ಮಾಡಿತ್ತು. ಇಂದು ರೋಷನ್ ಬೇಗ್ ವಿಚಾರಣೆ ಹಾಜರಾಗಬೇಕಿತ್ತು. ಆದರೆ ಸದನದ ಕಾರಣ ನೀಡಿ ವಿಚಾರಣೆಗೆ ಹಾಜರಾಗಿರಲಿಲ್ಲ. ಪರಿಣಾಮ ಜುಲೈ 19 ರಂದು ವಿಚಾರಣೆಗೆ ಹಾಜರಾಗಲು ಎಸ್‍ಐಟಿ ನೋಟಿಸ್ ನೀಡಿತ್ತು ಎಂಬ ಮಾಹಿತಿ ಲಭಿಸಿದೆ. ಆದರೆ ಅವರು ಬೆಂಗಳೂರು ಬಿಟ್ಟು ತೆರಳುವ ಮಾಹಿತಿ ಅನ್ವಯ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

    ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಹೈಡ್ರಾಮಾದ ನಡುವೆ ಅಮಾಯಕರಿಗೆ ಮೊಸ ಮಾಡಿದ ಬಹುಕೋಟಿ ಹಗರಣದ ಸುದ್ದಿ ಕಡಿಮೆಯಾಗಿದೆ. ಆದರೆ ಎಸ್‍ಐಟಿ ಮಾತ್ರ ನಮಗೂ ರಾಜಕೀಯ ವಿಷಯಕ್ಕೂ ಸಂಬಂಧವಿಲ್ಲ ಎಂದು ವಿಚಾರಣೆ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ಹಿಂದೆ ಜಮೀರ್ ಅಹ್ಮದ್ ಅವರನ್ನ ಇಡಿ ವಿಚಾರಣೆ ನಡೆಸಿತ್ತು. ಈಗ ರೋಷನ್ ಬೇಗ್ ಸರದಿಯಾಗಿದೆ.

  • ಸಿಎಂ ಏನು ಮಾಡಲು ಹೇಸಲ್ಲ, ನಮ್ಮ ಶಾಸಕರನ್ನು ಹಿಡಿದುಕೊಳ್ಳುತ್ತೇವೆ: ಸದಾನಂದಗೌಡ

    ಸಿಎಂ ಏನು ಮಾಡಲು ಹೇಸಲ್ಲ, ನಮ್ಮ ಶಾಸಕರನ್ನು ಹಿಡಿದುಕೊಳ್ಳುತ್ತೇವೆ: ಸದಾನಂದಗೌಡ

    ಬೆಂಗಳೂರು: ಇವತ್ತಿನ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳ ಕೈಯಲ್ಲಿ ಅಧಿಕಾರವಿದೆ. ಅವರು ಏನು ಮಾಡಲು ಹೇಸಲ್ಲ ಎಂದು ಕೇಂದ್ರ ಸಚಿವರ ಸದಾನಂದಗೌಡ ದೂರಿದ್ದಾರೆ.

    ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಕೇಂದ್ರ ಸಚಿವರು, ರಾಜ್ಯ ರಾಜಕೀಯದಲ್ಲಿ ಇಷ್ಟು ದೊಡ್ಡ ಅಲ್ಲೋಲ ಕಲ್ಲೋಲ ಉಂಟಾಗಿದೆ. ಈ ಸಮಯದಲ್ಲಿ ಸಿಎಂ ಅಧಿಕಾರದಲ್ಲಿ ಮುಂದುವರಿಯುವುದು ಸರಿಯಲ್ಲ. ಈ ಅಭಿಪ್ರಾಯ ಅವರಿಂದಲೇ ಬರಬೇಕು. ಮುಖ್ಯಮಂತ್ರಿಗಳ ಮೇಲೆ ನಂಬಿಕೆ ಇಲ್ಲ ಎನ್ನುವುದು ಇಡೀ ಜಗತ್ತಿಗೆ ಗೊತ್ತಾಗಿದೆ. ಇನ್ನು ವಿಶ್ವಾಸ ಮತಯಾಚನೆ ಮಾಡುವುದರಲ್ಲಿ ಅರ್ಥ ಏನಿದೆ? ಕಾಲ ದೂಡಲು ಸಿಎಂ ಈ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

    ಗೊಂದಲದ ಸುಳಿಯಲ್ಲಿ ಮುಂದುವರಿಯುವುದು ಸರಿಯಲ್ಲ ಎಂದು ಅರ್ಥ ಮಾಡಿಕೊಂಡು ಸಿಎಂ ರಾಜೀನಾಮೆ ಕೊಡಬೇಕಿತ್ತು. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವು ರಾಜ್ಯದ ಜನರ ನಂಬಿಕೆ ಕಳೆದುಕೊಂಡಿದೆ. ಇಂತಹ ಪರಿಸ್ಥಿತಿಯನ್ನು ರಾಜ್ಯದ ಜನತೆಗೆ ಎಷ್ಟು ದಿನ ಸಹಿಸಿಕೊಳ್ಳಬೇಕು ಎಂದು ಗುಡುಗಿದರು.

    ಬಿಜೆಪಿ ಶಾಸಕರನ್ನು ರೆಸಾರ್ಟಿಗೆ ಕಳುಹಿಸುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವರು, ನಾವು ರೆಸಾರ್ಟಿಗೆ ಹೋಗಬೇಕಂತೆನಿಲ್ಲ. ಸಿಎಂ ಅಧಿಕಾರ ದುರುಪಯೋಗಪಡಿಸಿಕೊಂಡು ಏನು ಬೇಕಾದರೂ ಮಾಡುತ್ತಾರೆ. ಹೀಗಾಗಿ ನಮ್ಮ ಎಲ್ಲಾ ಶಾಸಕರನ್ನು ಒಟ್ಟಾಗಿ ಹಿಡಿದುಕೊಳ್ಳುವ ಜವಾಬ್ದಾರಿ ಹೊಂದಿದ್ದೇವೆ. ಅವರು ಆಪರೇಷನ್ ಮಾಡುತ್ತಾರೋ? ಬಿಡುತ್ತಾರೋ ಗೊತ್ತಿಲ್ಲ. ಆದರೆ ಮುಂಜಾಗ್ರತೆಯ ವಹಿಸುವುದು ನಮ್ಮ ಕರ್ತವ್ಯ ಎಂದು ತಿಳಿಸಿದರು.

  • ಗೋವಾಗೆ ತೆರಳಿದ ಆನಂದ್ ಸಿಂಗ್

    ಗೋವಾಗೆ ತೆರಳಿದ ಆನಂದ್ ಸಿಂಗ್

    ಬೆಂಗಳೂರು: ಕಾಂಗ್ರೆಸ್‍ನ ರೆಬೆಲ್ ಶಾಸಕ ಆನಂದ್ ಸಿಂಗ್ ಅವರು ಗೋವಾಗೆ ತೆರಳಿದ್ದಾರೆ

    ಆನಂದ್ ಸಿಂಗ್ ಅವರು ಕಾರಿನಲ್ಲಿ ಶುಕ್ರವಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ ಅತೃಪ್ತ ಶಾಸಕರ ರಾಜೀನಾಮೆ ವಿಚಾರವಾಗಿ ಮಾಧ್ಯಮಗಳು ಪ್ರಶ್ನೆ ಮಾಡಿದವು. ಆದರೆ ಆನಂದ್ ಸಿಂಗ್ ಅವರು ಯಾವುದೇ ಪ್ರತಿಕ್ರಿಯೆ ನೀಡದೇ ಅಲ್ಲಿಂದ ವಿಮಾನ ನಿಲ್ದಾಣದ ಒಳಗೆ ನಡೆದರು.

    ಶಾಸಕ ಆನಂದ್ ಸಿಂಗ್ ಅವರು ಕೆಐಎಎಲ್‍ನಿಂದ 6ಇ992 ಇಂಡಿಗೋ ವಿಮಾನದ ಮೂಲಕ ಗೋವಾಗೆ ಪ್ರಯಾಣ ಬೆಳೆಸಿದ್ದಾರೆ. ಅತೃಪ್ತ ಶಾಸಕರ ಜೊತೆಗೆ ಮುಂಬೈ ರೆಸಾರ್ಟಿಗೆ ಹೋಗದೆ ರಾಜ್ಯದಲ್ಲಿಯೇ ಉಳಿದಿದ್ದ ಅವರು ಇಂದು ದಿಢೀರ್ ಪ್ರಯಾಣ ಕೈಗೊಂಡಿದ್ದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.