Tag: Bengaluru Bandh

  • ಮಂಗಳವಾರ ಗೊಂದಲ ಇಲ್ಲದೇ ಬೆಂಗ್ಳೂರು ಬಂದ್ ಆಗ್ಬೇಕು: ಬಿಎಸ್‍ವೈ

    ಮಂಗಳವಾರ ಗೊಂದಲ ಇಲ್ಲದೇ ಬೆಂಗ್ಳೂರು ಬಂದ್ ಆಗ್ಬೇಕು: ಬಿಎಸ್‍ವೈ

    – ನೀರು ಬಿಟ್ರೆ ಮುಂದಿನ ಆಗುಹೋಗುಗಳಿಗೆ ಸರ್ಕಾರವೇ ಹೊಣೆ

    ಬೆಂಗಳೂರು: ಕಾವೇರಿ (Cauvery Water) ವಿಚಾರದಲ್ಲಿ ಸವಿಸ್ತಾರವಾಗಿ ಚರ್ಚೆ ಮಾಡಿದ್ದೇವೆ. ನಾಳೆ (ಮಂಗಳವಾರ) ಗೊಂದಲ ಇಲ್ಲದೇ ಬೆಂಗಳೂರು ಬಂದ್ ಆಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (B.S Yediyurappa) ಹೇಳಿದ್ದಾರೆ.

    ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಬೆಂಗಳೂರು ಬಂದ್ ಗೆ (Bengaluru Bandh) ಕರೆ ಕೊಟ್ಟರು. ಹೊಟೇಲ್ ಮಾಲೀಕರು, ಸಂಘ ಸಂಸ್ಥೆಗಳಿಗೆ ಮನವಿ ಮಾಡ್ತೇವೆ, ಬೆಂಗಳೂರು ಬಂದ್ ಗೆ ಬೆಂಬಲ ಕೊಡಲಿ. ಹೊಟೇಲ್, ಅಂಗಡಿ ಮುಂಗಟ್ಟು ತೆರೆದು, ಕಾನೂನು ಸಮಸ್ಯೆ ಆದರೆ ಅದಕ್ಕೆ ನೀವೇ ಜವಾಬ್ದಾರರು. ಹಾಗಾಗಿ ಎಲ್ಲರೂ ಬೆಂಗಳೂರು ಬಂದ್‍ಗೆ ಬೆಂಬಲ ಕೊಡುವಂತೆ ಮನವಿ ಮಾಡ್ತೇನೆ ಎಂದರು.

    ಇನ್ನು ಒಂದೇ ಒಂದು ಹನಿ ನೀರು ಸರ್ಕಾರ ಬಿಟ್ಟರೆ ಹೋರಾಟ ತೀವ್ರ ಆಗಲಿದೆ. ಇನ್ಮುಂದೆ ನೀರು ಬಿಟ್ರೆ ಮುಂದಿನ ಆಗುಹೋಗುಗಳಿಗೆ ಸರ್ಕಾರವೇ ಕಾರಣ ಆಗಲಿದೆ. ಸಿಎಂ, ಡಿಸಿಎಂ ಬೇಜವಾಬ್ದಾರಿಯಿಂದ ನೀರು ಬಿಟ್ಟು ಗೊಂದಲಕ್ಕೆ ಸಿಕ್ಕಿಸಲಾಗಿದೆ. ತಮಿಳುನಾಡಿನ ಏಜೆಂಟರಂತೆ ಇವರು ವರ್ತಿಸುತ್ತಿದ್ದಾರೆ. ಸರ್ಕಾರ ತಪ್ಪು ಮುಂದುವರಿಸಿದೆ. ಈಗಲಾದರೂ ನೀರು ಬಂದ್ ಮಾಡಿ ಬೆಂಗಳೂರಿನ ಜನತೆಗೆ ಕುಡಿಯುವ ನೀರನ್ನು ಒದಗಿಸಲಿ ಎಂದು ಹೇಳಿದರು.

    ನಾಡಿದ್ದು ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಶಾಸಕರು, ಪರಿಷತ್ ಸದಸ್ಯರಿಂದ ಬಿಜೆಪಿ ಸತ್ಯಾಗ್ರಹ ನಡೆಸಲಿದೆ. ಜೆಡಿಎಸ್, ಬಿಜೆಪಿ ಎಲ್ಲರೂ ಒಟ್ಟಾಗಿ ಇರುತ್ತೇವೆ. ನಮ್ಮ ಹೋರಾಟಕ್ಕೆ ಜೆಡಿಎಸ್ ನಾಯಕರೂ ಕೈಜೋಡಿಸುವಂತೆ ಮನವಿ ಮಾಡ್ತೇನೆ. ಈ ಸರ್ಕಾರ ರಾಜ್ಯದ ಎಲ್ಲೆಡೆ ಸಾರಾಯಿ ಅಂಗಡಿ ತೆರೆಯಲು ಅವಕಾಶ ಕೊಡ್ತಿರೋದು ಅಕ್ಷಮ್ಯ ಅಪರಾಧ. ಕುಡಿಯಲು ನೀರು ಕೊಡಿ ಅಂದ್ರೆ ಸಾರಾಯಿ ಕೊಡ್ತಿದೆ. ತಕ್ಷಣ ಇದನ್ನ ನಿಲ್ಲಿಸಲಿ ಎಂದು ಬಿಎಸ್‍ವೈ ಆಗ್ರಹಿಸಿದರು.

    ಮುನಿರತ್ನ ವ್ಯಂಗ್ಯ: ಸರ್ಕಾರ ಮದ್ಯ ಮಾರಾಟಕ್ಕೆ ಅವಕಾಶ ನೀಡಿರುವ ವಿಚಾರದ ಕುರಿತು ಸರ್ಕಾರದ ವಿರುದ್ಧ ಮಾಜಿ ಸಚಿವ ಮುನಿರತ್ನ ವ್ಯಂಗ್ಯವಾಡಿದ್ದಾರೆ. ಮಾಲ್, ರೇಷನ್ ಅಂಗಡಿ, ಕೊನೆಗೆ ಫುಟ್ ಪಾತ್‍ಗಳಲ್ಲಿ ಮದ್ಯ ಮಾರಾಟ ಮಾಡುವ ಕಾಲ ಬರಲಿದೆ. ಅವರು ಕೊಡುವ 2 ಸಾವಿರ ವಾಪಸ್ ಪಡೆಯುವ ದಾರಿ ಇದು. ಪ್ರತಿಯಾಗಿ ನಾಲ್ಕು ಸಾವಿರ ಪಡೆಯುವ ಪ್ಲಾನ್ ಇದು. ಹಣ ವಾಪಸ್ ಪಡೆಯಲು ಜನರನ್ನು ಕುಡುಕರನ್ನಾಗಿ ಮಾಡ್ತಿದ್ದಾರೆ ಎಂದು ಕಿಡಿಕಾರಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕುಮಾರಸ್ವಾಮಿ ಒಬ್ಬರೇ ದೇವತಾ ಮನುಷ್ಯ, ಉಳಿದವರೆಲ್ಲರೂ ಪಾಪಿಗಳು – ಸಚಿವ ಬೈರತಿ ಸುರೇಶ್‌ ವ್ಯಂಗ್ಯ

    ಕುಮಾರಸ್ವಾಮಿ ಒಬ್ಬರೇ ದೇವತಾ ಮನುಷ್ಯ, ಉಳಿದವರೆಲ್ಲರೂ ಪಾಪಿಗಳು – ಸಚಿವ ಬೈರತಿ ಸುರೇಶ್‌ ವ್ಯಂಗ್ಯ

    ಕೋಲಾರ: ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಅವರೊಬ್ಬರೇ ದೇವತಾ ಮನುಷ್ಯ ಇನ್ನೆಲ್ಲರೂ ಪಾಪಿಗಳು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ (Byrathi Suresh) ವ್ಯಂಗ್ಯವಾಡಿದ್ದಾರೆ.

    ಕೋಲಾರದಲ್ಲಿ (Kolar) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನೆಮನೆಗೂ ಮದ್ಯಭಾಗ್ಯ ಕೊಟ್ಟು ಸರ್ಕಾರ ದುಡ್ಡು ಮಾಡಲು ಮುಂದಾಗಿದೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಬೆಂಗಳೂರು ಬಂದ್‌: ಬಿಎಂಟಿಸಿ ಸಂಚಾರ ಇರುತ್ತಾ? ಇಲ್ವೋ? – ಗೊಂದಲದಲ್ಲಿ ಚಾಲಕರು

    ಅಲ್ಲದೇ ಕಾವೇರಿ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಿ ನೀರು ಬಿಡುವುದನ್ನ ನಿಲ್ಲಿಸಬಹುದು ಎಂಬ ಹೆಚ್‌ಡಿಕೆ ಹೇಳಿಕೆಗೆ ಪ್ರತಿಕ್ರಿಯಿಸಿ, ಸಂವಿಧಾನ ಬರೆದಿರುವುದು ಅಂಬೇಡ್ಕರ್ ಅವರೇ ಹೊರತು ಕುಮಾರಸ್ವಾಮಿ ಅಲ್ಲ. ಸಂವಿಧಾನದ ನಿಯಮಗಳು ಏನು ಹೇಳುತ್ತವೆಯೋ ಅದನ್ನೇ ಮಾಡುತ್ತೇವೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ತಮಿಳುನಾಡು ಸರ್ಕಾರದಿಂದ ನಮಗೇನೂ ಆಗಬೇಕಿಲ್ಲ. ಯಾರನ್ನೂ ಓಲೈಕೆ ಮಾಡುವ ಪ್ರಶ್ನೆಯೇ ಇಲ್ಲ. ಸಂವಿಧಾನದ ನಿಯಮಗಳು ಏನು ಹೇಳುತ್ತವೆಯೋ ಅದನ್ನೇ ಮಾಡುತ್ತೇವೆ. ರಾಜ್ಯದ ಜನತೆಗೆ ಅನ್ಯಾಯ ಮಾಡಿ ನೀರು ಬಿಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಟಿ ಕಾರುಣ್ಯ ಆಲೋಚನೆ: ಅಂಗಾಂಗ ದಾನ ಶಿಬಿರಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಸಾಥ್

    ಬೆಂಗಳೂರು ಬಂದ್‌ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಬರ ಇದೆ, ನಮಗೇ ನೀರಿಗೆ ತತ್ವಾರ ಶುರುವಾಗಿದೆ. ಪ್ರಾಧಿಕಾರ ಆದೇಶ ಮಾಡಿದ ಮೇಲೆ ಹಳ್ಳ ಕೊಳ್ಳದಲ್ಲಿನ ನೀರು ಬಿಟ್ಟಿದ್ದೇವೆ. ಆದರೆ ಡ್ಯಾಂನಿಂದ ನೀರು ಬಿಡುವಂತಹದ್ದು ಆಗುವುದಿಲ್ಲ. ಅಲ್ಲದೆ ತಮಿಳುನಾಡು ಸರ್ಕಾರದಿಂದ ನಮಗೇನು ಆಗಬೇಕಿಲ್ಲ, ಯಾರನ್ನೂ ಓಲೈಸುವ ಪ್ರಶ್ನೆ ಇಲ್ಲ ಎಂದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಂಗಳೂರು ಬಂದ್‌: ಬಿಎಂಟಿಸಿ ಸಂಚಾರ ಇರುತ್ತಾ? ಇಲ್ವೋ? – ಗೊಂದಲದಲ್ಲಿ ಚಾಲಕರು

    ಬೆಂಗಳೂರು ಬಂದ್‌: ಬಿಎಂಟಿಸಿ ಸಂಚಾರ ಇರುತ್ತಾ? ಇಲ್ವೋ? – ಗೊಂದಲದಲ್ಲಿ ಚಾಲಕರು

    ಬೆಂಗಳೂರು: ಮಂಗಳವಾರದ ಬೆಂಗಳೂರು ಬಂದ್‌ಗೆ (Bengaluru Bandh) ಬಿಎಂಟಿಸಿ ಬಸ್‌ ಸಂಚಾರ ಇರುತ್ತಾ? ಇಲ್ವೋ ಎನ್ನುವುದರ ಬಗ್ಗೆ ಇನ್ನೂ ಸ್ಪಷ್ಟವಾದ ನಿರ್ಧಾರ ಪ್ರಕಟವಾಗಿಲ್ಲ.

    ಮಂಗಳವಾರ ಬಿಎಂಟಿಸಿ ಬಸ್ಸುಗಳನ್ನು (BMTC Bus) ರಸ್ತೆಗೆ ಇಳಿಸಬೇಕಾ? ಬೇಡವೇ ಎಂಬ ಗೊಂದಲದಲ್ಲಿ ಚಾಲಕರಿದ್ದಾರೆ. ಈಗಾಗಲೇ ಬಿಎಂಟಿಸಿ‌ ನೌಕರರ ಸಂಘಟನೆಗಳು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದೆ.

     

    ಕೆಲ ಸಂಘಟನೆಗಳಲ್ಲಿ ಬೆಂಬಲ ನೀಡಬೇಕೇ? ಬೇಡವೇ ಎಂಬುದರ ಬಗ್ಗೆ ಇನ್ನೂ ಗೊಂದಲ ಮುಂದುವರಿದಿದೆ. ಬೆಂಬಲ ನೀಡಿದ ಕೆಲ ಸಂಘಟನೆಗಳ ಪ್ರಕಾರ ಮಂಗಳವಾರ ಬಸ್ಸುಗಳು ಡಿಪೋದಿಂದ ಹೊರ ಬರುವುದು ಅನುಮಾನ. ಆದರೆ ಇಲ್ಲಿಯವರೆಗೂ ಸಂಪೂರ್ಣವಾಗಿ ನೌಕರರಲ್ಲಿ ಯಾವುದೇ ಒಮ್ಮತ ಮೂಡಿಲ್ಲ. ಇದನ್ನೂ ಓದಿ: ಮಂಗಳೂರು ಮೀನುಗಾರಿಕಾ ಬಂದರಿನಲ್ಲಿ ಈದ್ ಮಿಲಾದ್‍ಗೆ ಕಡ್ಡಾಯ ರಜೆ ಬ್ಯಾನರ್: ವ್ಯಾಪಕ ಆಕ್ರೋಶ

    ಇಂದು ಸಂಜೆ ಈ ಬಗ್ಗೆ ಸಂಘಟನೆಗಳ ನಾಯಕರ ಜೊತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಸಭೆ ನಡೆಸಲಿದ್ದಾರೆ. ಇತ್ತ ಕೆಲ ಸಂಘಟನೆಗಳಿಂದಲೂ ಪ್ರತ್ಯೇಕ ಸಭೆ ನಡೆಯಲಿದೆ. ಸಂಜೆಯ ಸಭೆಯ ಬಳಿಕವಷ್ಟೇ ಬಿಎಂಟಿಸಿ ಸಂಚಾರದ ಬಗ್ಗೆ ಸ್ಪಷ್ಟವಾದ ನಿರ್ಧಾರ ಸಿಗಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಳೆ ಬರುವುದಕ್ಕೂ ಸರ್ಕಾರಕ್ಕೂ ಸಂಬಂಧ ಇದೆಯಾ? ಇದು ನೈಸರ್ಗಿಕ ವಿಕೋಪ: ರಾಮಲಿಂಗಾ ರೆಡ್ಡಿ

    ಮಳೆ ಬರುವುದಕ್ಕೂ ಸರ್ಕಾರಕ್ಕೂ ಸಂಬಂಧ ಇದೆಯಾ? ಇದು ನೈಸರ್ಗಿಕ ವಿಕೋಪ: ರಾಮಲಿಂಗಾ ರೆಡ್ಡಿ

    ರಾಮನಗರ: ತಮಿಳುನಾಡಿಗೆ (Tamil Nadu) ಕಾವೇರಿ ನೀರು (Kaveri Water) ಹರಿಸುವುದನ್ನು ಖಂಡಿಸಿ ಮಂಗಳವಾರ ಬೆಂಗಳೂರು ಹಾಗೂ ರಾಮನಗರ (Ramanagara) ಬಂದ್ ವಿಚಾರದ ಬಗ್ಗೆ ರಾಮನಗರದಲ್ಲಿ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.

    ಭಾಷೆ, ಜಲ, ರಾಜ್ಯದ ಬಗ್ಗೆ ಅನ್ಯಾಯವಾದ ವೇಳೆ ಸಂಘಟನೆಗಳು ಬಂದ್ ಮಾಡುವುದು ಸಹಜ. ಹೀಗಾಗಿ ಅವರಿಗೆ ನಮ್ಮಿಂದ ಯಾವುದೇ ಧಕ್ಕೆ ಉಂಟಾಗುವುದಿಲ್ಲ. ಮಳೆ ಬರುವುದಕ್ಕೂ ಸರ್ಕಾರಕ್ಕೂ ಸಂಬಂಧ ಇದೆಯಾ? ಇದೊಂದು ನೈರ್ಸಗಿಕ ವಿಕೋಪ. ಕಳೆದ ವರ್ಷ 660 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಟ್ಟಿದ್ದೇವೆ. ಈಗ ರಾಜ್ಯದಲ್ಲಿ ಮಳೆ ಇಲ್ಲ. ಈ ಬಗ್ಗೆ ಮಾನಿಟರಿಂಗ್ ವಿಂಗ್‌ಗೆ ಎಲ್ಲವೂ ಗೊತ್ತಿದೆ. ಸುಪ್ರೀಂ ಕೋರ್ಟ್ಗೂ ಸಹ ನೀರಿಲ್ಲದಿರುವ ಬಗ್ಗೆ ಮಾಹಿತಿ ಇದ್ದರೂ ತಡೆ ನೀಡಿಲ್ಲ. ಪ್ರಧಾನಿಗಳಿಗೆ ಮಾಹಿತಿ ಇದ್ದರೂ ಅವರೂ ಸಹ ಮಧ್ಯ ಪ್ರವೇಶ ಮಾಡುತ್ತಿಲ್ಲ. ನೀರಿಗಾಗಿ ಬೊಬ್ಬೆ ಹೊಡೆಯುತ್ತಿರುವ ಬಿಜೆಪಿ (BJP) ನಾಯಕರು, ಪ್ರಧಾನಿಗಳಿಗೆ ಮನವರಿಕೆ ಮಾಡಿಕೊಡಬೇಕಿತ್ತು. ಆದರೆ ಆ ಕೆಲಸ ಮಾಡದೇ ಸುಮ್ಮನೆ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ದೇವದುರ್ಗ ಕ್ಷೇತ್ರದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಜೊತೆ ಹೊಂದಾಣಿಕೆ ಇಲ್ಲ: ಕರೆಮ್ಮ ನಾಯಕ್

    ನಮ್ಮ ಸರ್ಕಾರ ರೈತರಿಗೆ ಮಾತ್ರವಲ್ಲದೇ ಯಾವುದೇ ವರ್ಗಕ್ಕೆ ಮೋಸ ಮಾಡಿಲ್ಲ. ಸುಳ್ಳು ಹೇಳುವುದು, ಮೋಸ ಮಾಡುವುದು ಬಿಜೆಪಿ ಕೆಲಸ. ನಾವು ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೆವೆ. ಬಿಜೆಪಿಗೆ ಮೋಸ ಮಾಡುವುದು ಅವರ ರಕ್ತದಲ್ಲಿಯೇ ಇದೆ. ಬಿಜೆಪಿಯವರು ಇಂಡಿಯಾ (INDIA) ಒಕ್ಕೂಟದ ಬಗ್ಗೆ ಮಾತನಾಡುವ ಮೊದಲು, ಅವರ ಎನ್‌ಡಿಎ (NDA) ಮೈತ್ರಿ ಕೂಟದಲ್ಲಿ ಅಣ್ಣ ಡಿಎಂಕೆ ಇದ್ದಾರೆ. ಅವರಿಗೆ ನೀರಿನ ಸಮಸ್ಯೆ ಬಗ್ಗೆ ಮನವರಿಕೆ ಮಾಡಿಕೊಡಬೇಕಿತ್ತು ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಬಂದ್ ಬಿಸಿ ನಡುವೆ ಮಂಗಳವಾರ CWRC ಸಭೆ – ಮತ್ತೆ ನೀರು ಹರಿಸಲು ಸೂಚಿಸುತ್ತಾ ನಿಯಂತ್ರಣ ಸಮಿತಿ?

    ಬೆಂಗಳೂರು ಬಂದ್‌ಗೆ (Bengaluru Bandh) ಬಿಎಂಟಿಸಿ ಬೆಂಬಲ ನೀಡುವ ವಿಚಾರದ ಕುರಿತು ಮಾತನಾಡಿ, ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಯೂನಿಯನ್‌ಗಳಿವೆ. ಅವರು ಬಂದ್ ಬಗ್ಗೆ ನಿರ್ಣಯ ಮಾಡುತ್ತಾರೆ. ಬಂದ್‌ಗೆ ನಮ್ಮ ವಿರೋಧ ಇಲ್ಲ. ಆದರೆ ಎರಡು ದಿನ ಬಂದ್ ಮಾಡುವುದರಿಂದ ಜನರಿಗೆ ಸಮಸ್ಯೆ ಆಗಲಿದೆ. ಈ ಬಗ್ಗೆ ಸಂಘಟನೆಗಳು ಚಿಂತನೆ ಮಾಡಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಬಿಜೆಪಿ ಜೊತೆ ಮೈತ್ರಿ – ಜೆಡಿಎಸ್‌ನಲ್ಲಿಅಸಮಾಧಾನವಿಲ್ಲ ಎಂದ ಖಾಶೆಂಪೂರ್

    3 ಡಿಸಿಎಂ ಹುದ್ದೆ ಬಗ್ಗೆ ಕಾಂಗ್ರೆಸ್‌ನಲ್ಲಿ ಚರ್ಚೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಈ ಸಮಯದಲ್ಲಿ ಡಿಸಿಎಂ ಹುದ್ದೆ ಬಗ್ಗೆ ಚರ್ಚೆ ಅನಾವಶ್ಯಕ. ವೇಣುಗೋಪಾಲ್ ಅವರು ಸಹ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅನಾವಶ್ಯಕ ಗೊಂದಲ ಸೃಷ್ಟಿಸುವುದು ಬೇಕಿಲ್ಲ. ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ. ಯಾರೂ ಡಿಸಿಎಂ ವಿಚಾರವಾಗಿ ಮಾತನಾಡಬಾರದು ಎಂದು ಸ್ವಪಕ್ಷೀಯ ಸಚಿವರಿಗೆ ಸೂಚನೆ ನೀಡಿದರು. ಇದನ್ನೂ ಓದಿ: ಶಾಂತಿಯುತ ಬಂದ್‌ಗೆ ಸರ್ಕಾರ ಅಡಚಣೆ ಮಾಡಲ್ಲ: ಡಿಕೆಶಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಂದ್ ಬಿಸಿ ನಡುವೆ ಮಂಗಳವಾರ CWRC ಸಭೆ – ಮತ್ತೆ ನೀರು ಹರಿಸಲು ಸೂಚಿಸುತ್ತಾ ನಿಯಂತ್ರಣ ಸಮಿತಿ?

    ಬಂದ್ ಬಿಸಿ ನಡುವೆ ಮಂಗಳವಾರ CWRC ಸಭೆ – ಮತ್ತೆ ನೀರು ಹರಿಸಲು ಸೂಚಿಸುತ್ತಾ ನಿಯಂತ್ರಣ ಸಮಿತಿ?

    ನವದೆಹಲಿ: ಕಾವೇರಿ ನೀರಿಗಾಗಿ (Kaveri Water) ಕರ್ನಾಟಕ ಮತ್ತು ತಮಿಳುನಾಡು ಎರಡೂ ರಾಜ್ಯಗಳಲ್ಲಿ ಪ್ರತಿಭಟನೆ ತೀವ್ರಗೊಳ್ಳುತ್ತಿದೆ. ಕಾವೇರಿ ನೀರು ಹರಿಸುವಂತೆ ತಮಿಳುನಾಡು (Tamil Nadu) ರೈತರು ಪ್ರತಿಭಟನೆ ನಡೆಸುತ್ತಿದ್ದರೇ ಇತ್ತ ಕರ್ನಾಟಕದಲ್ಲಿ (Karnataka) ನೀರು ಹರಿಸದಂತೆ ಒತ್ತಾಯಿಸಿ ಮಂಡ್ಯ ಬಂದ್ ಬಳಿಕ ಬೆಂಗಳೂರು ಬಂದ್‌ಗೂ (Bengaluru Bandh) ಕರೆ ನೀಡಲಾಗಿದೆ. ಎರಡೂ ರಾಜ್ಯಗಳಲ್ಲಿ ರೈತರ ಹೋರಾಟ ತೀವ್ರವಾಗುತ್ತಿರುವ ಹೊತ್ತಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಮಂಗಳವಾರ ಸಭೆ ಕರೆದಿದೆ.

    ಮಂಗಳವಾರ ಬೆಳಗ್ಗೆ 11 ಗಂಟೆಗೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದೆ. ಸೆ.13ರಂದು ಹದಿನೈದು ದಿನ ನಿತ್ಯ 5,000 ಕ್ಯೂಸೆಕ್ ನೀರು ಹರಿಸುವಂತೆ ನೀಡಿದ ಆದೇಶ ಅಂತ್ಯವಾಗುತ್ತಿರುವ ಹಿನ್ನೆಲೆ ಈ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ತಮಿಳುನಾಡಿಗೆ ನೀರು ಹರಿಸುವ ಬಗ್ಗೆ ಚರ್ಚೆ ನಡೆಯಲಿದೆ. ಇದನ್ನೂ ಓದಿ: ಹೈದರಾಬಾದ್‌ನಲ್ಲಿ ಚುನಾವಣೆಗೆ ನಿಂತು ನನ್ನ ವಿರುದ್ಧ ಹೋರಾಡಿ: ರಾಹುಲ್‌ಗೆ ಓವೈಸಿ ಚಾಲೆಂಜ್

    ಮಂಗಳವಾರದ ಸಭೆಯಲ್ಲಿ ನೀರು ಹರಿಸಲು ಸಾಧ್ಯವಿಲ್ಲ ಎಂದು ಹೇಳಲು ಕರ್ನಾಟಕ ನಿರ್ಧರಿಸಿದೆ. ನೀರಿನ ಕೊರತೆ ನಡುವೆ CWRC, CWMA ನೀಡಿರುವ ಎಲ್ಲಾ ಆದೇಶಗಳನ್ನು ಪಾಲಿಸಿದೆ. ಈಗ ನೀರಿನ ಕೊರತೆ ಹೆಚ್ಚಳವಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ. ಸಣ್ಣ ಪ್ರಮಾಣದ ಕೃಷಿಗೂ ಸಮಸ್ಯೆಯಾಗುವ ಸಾಧ್ಯತೆಗಳಿದೆ. ಈಗಾಗಲೇ ರಾಜ್ಯದಲ್ಲಿ ಪ್ರತಿಭಟನೆಗಳು ಶುರುವಾಗಿದ್ದು, ಬೆಂಗಳೂರು ಬಂದ್‌ಗೂ ಕರೆ ನೀಡಲಾಗಿದೆ. ಈ ಹಂತದಲ್ಲಿ ನೀರು ಹರಿಸಲು ಸೂಚಿಸುವುದು ಸೂಚ್ಯವಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ ಎಂದು ಮೂಲಗಳು ಹೇಳಿವೆ. ಇದನ್ನೂ ಓದಿ: ಬೆಂಗಳೂರು-ಹೈದರಾಬಾದ್‌ ಸೇರಿ 9 ವಂದೇ ಭಾರತ್‌ ರೈಲುಗಳಿಗೆ ಮೋದಿ ಚಾಲನೆ

    ಈ ನಡುವೆ ತಮಿಳುನಾಡು ಕೂಡಾ ಕಾವೇರಿ ನೀರಿಗಾಗಿ ಬೇಡಿಕೆ ಇಡಲಿದೆ. ಈವರೆಗೂ 5,000 ಕ್ಯೂಸೆಕ್ ನೀರು ನಿತ್ಯ ಹರಿಸಲು ಸೂಚಿಸಿದರೂ ಕರ್ನಾಟಕ ಕಡಿಮೆ ಪ್ರಮಾಣದ ನೀರು ಹರಿಸಿ ಅನ್ಯಾಯ ಮಾಡಿದೆ. ಬೆಳೆ ಒಣಗುತ್ತಿರುವ ಹಿನ್ನೆಲೆ ತಮಿಳುನಾಡಿನಲ್ಲೂ ರೈತರು ಪ್ರತಿಭಟನೆ ಆರಂಭಿಸಿದ್ದಾರೆ. ಈ ಹಿನ್ನೆಲೆ ಹೆಚ್ಚುವರಿ ನೀರು ಹರಿಸಲು ನಿರ್ದೇಶನ ನೀಡಬೇಕು ಎಂದು ಒತ್ತಾಯಿಸುವ ಸಾಧ್ಯತೆಯಿದೆ. ಇದನ್ನೂ ಓದಿ: ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ ರಾಷ್ಟ್ರೀಯ ಪ್ರಶಸ್ತಿ

    ಕಾವೇರಿ ನೀರಿಗಾಗಿ ಎರಡು ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆ ಕಾವೇರಿ ನೀರು ನಿಯಂತ್ರಣ ಸಮಿತಿ ಇಕ್ಕಟ್ಟಿನ ಪರಿಸ್ಥಿತಿಯಲ್ಲಿದೆ. ಈ ಹಿನ್ನೆಲೆ ಮಳೆ ಪ್ರಮಾಣ, ಅಣೆಕಟ್ಟುಗಳಿಗೆ ಬರುತ್ತಿರುವ ಒಳ ಹರಿವು ಹಾಗೂ ಜಲಾಶಯಗಳಲ್ಲಿನ ನೀರಿನ ಮಟ್ಟವನ್ನು ಲೆಕ್ಕ ಹಾಕಿ ನೀರು ಬಿಡುವ ಬಗ್ಗೆ ಸೂಕ್ಷ್ಮವಾಗಿ ಪರಿಶೀಲಿಸಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಪ್ರಧಾನಿ ಮೋದಿಗೆ ‘ನಮೋ’ ಜೆರ್ಸಿ ಗಿಫ್ಟ್ ನೀಡಿದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶಾಂತಿಯುತ ಬಂದ್‌ಗೆ ಸರ್ಕಾರ ಅಡಚಣೆ ಮಾಡಲ್ಲ: ಡಿಕೆಶಿ

    ಶಾಂತಿಯುತ ಬಂದ್‌ಗೆ ಸರ್ಕಾರ ಅಡಚಣೆ ಮಾಡಲ್ಲ: ಡಿಕೆಶಿ

    ಬೆಂಗಳೂರು: ಶಾಂತಿಯುತವಾಗಿ, ಜನರಿಗೆ ತೊಂದರೆ ಆಗದಂತೆ ಬಂದ್ ಮಾಡಿದ್ರೆ ಸರ್ಕಾರ ಅದಕ್ಕೆ ಅಡಚಣೆ ಮಾಡುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

    ಮಂಗಳವಾರ ಬೆಂಗಳೂರು ಬಂದ್ (Bengaluru Bandh) ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಪ್ರತಿಭಟನೆ ಮಾಡಲು, ರಾಜ್ಯದ ಹಿತ ಕಾಪಾಡಲು ನಾವು ಎಲ್ಲಾ ರೀತಿಯ ಸಹಕಾರ ಕೊಡುತ್ತೇವೆ. ನಮ್ಮ ನೆಲ, ಜಲ, ಭಾಷೆ ಎಲ್ಲರೂ ಉಳಿಸಿಕೊಳ್ಳಬೇಕು. ಯಾವುದೇ ಪಾರ್ಟಿ ಆದರೂ ಉಳಿಸಿಕೊಳ್ಳಬೇಕು. ನಮ್ಮ ಪಕ್ಷದವರು ಏನು ಮಾಡುವುದು ಎಂದು ನನಗೆ ಕರೆ ಮಾಡಿದ್ದರು. ನಿಮ್ಮ ರಕ್ಷಣೆ, ಯಾರು ತಪ್ಪಬೇಡಿ ಎಂದು ಹೇಳಿದ್ದೇನೆ. ನಿಮ್ಮ ಹೋರಾಟಕ್ಕೆ ನಾವು ಅಡಚಣೆ ಮಾಡುವುದಿಲ್ಲ. ಆದರೆ ಎಲ್ಲರೂ ಶಾಂತಿ ಕಾಪಾಡಬೇಕು. ಜನರಿಗೆ ತೊಂದರೆ ಆಗಬಾರದು. ಹೋರಾಟ ಮಾಡಲಿ, ಅದು ಅವರ ಹಕ್ಕು. ಆದರೆ ಶಾಂತಿ ಕಾಪಾಡಬೇಕು. ಯಾವ ಪಕ್ಷದವರಿಗೂ, ಯಾರಿಗೂ ನಾವು ತೊಂದರೆ ಕೊಡಲು ಹೋಗಲ್ಲ ಎಂದರು. ಇದನ್ನೂ ಓದಿ: ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಬಿಜೆಪಿ-ಜೆಡಿಎಸ್ ಶಾಸಕರು ಚರ್ಚೆ ಮಾಡಿದ್ದಾರೆ: ಡಿಕೆಶಿ

    ನಾವು ನಮ್ಮ ರಾಜ್ಯದ ಹಕ್ಕು ಉಳಿಸಲು ಕೆಲಸ ಮಾಡುತ್ತಿದ್ದೇವೆ. ಸುಪ್ರೀಂ ಕೋರ್ಟ್, ಹೈಕೋರ್ಟ್ ತೀರ್ಪು ಇದೆ. ಅದನ್ನು ಅರಿತುಕೊಳ್ಳಬೇಕು. ಟಿವಿಯವರು ಕರೆಯುತ್ತಾರೆ ಹೆಸರು ಕೊಡುತ್ತಾರೆ ಎಂದು ಮಾತನಾಡಿ ನಾಳೆ ಕೋರ್ಟ್‌ನಲ್ಲಿ ಸಮಸ್ಯೆ ಆಗೋದು ಬೇಡ. ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಬಂದ್ ಮಾಡುವವರು ತೀರ್ಮಾನ ಮಾಡಲಿ ಎಂದು ಸಲಹೆ ನೀಡಿದರು. ಇದನ್ನೂ ಓದಿ: ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯಾದ್ಯಂತ ಏಕಕಾಲಕ್ಕೆ ಜನತಾ ದರ್ಶನ

    ನಿನ್ನೆ-ಮೊನ್ನೆ ಮಳೆ ಆಗಿ ಒಳ ಹರಿವು ಉತ್ತಮವಾಗಿ ಆಗಿದೆ. ಮೋಡ ಬಿತ್ತನೆ ಬಗ್ಗೆಯೂ ನಾವು ಚರ್ಚೆ ಮಾಡಿದ್ದೇವೆ. ಏನಾದರೂ ಮಾಡಲು ಸಾಧ್ಯವಿದೆಯಾ ಎಂದು ಚರ್ಚೆ ಮಾಡಿದ್ದೇವೆ. ಎರಡು-ಮೂರು ಅಭಿಪ್ರಾಯ ಅದಕ್ಕೆ ಬಂದಿದೆ. ಈಗ ಇರುವ ಪರಿಸ್ಥಿತಿಯಲ್ಲಿ ಮುಂದೆ ನೀರು ಬಿಡೋದು ಕಷ್ಟ ಆಗುತ್ತದೆ. ನಾನು ಒಬ್ಬ ಮಂತ್ರಿಯಾಗಿ ಏನೂ ಮಾತನಾಡಲು ಆಗುತ್ತಿಲ್ಲ. ನಾನು ಕೋರ್ಟ್‌ಗೂ ಗೌರವ ಕೊಡಬೇಕು. ಜನರನ್ನೂ ಉಳಿಸಿಕೊಳ್ಳಬೇಕು. ಡೆವಿಲ್ ಅಂಡ್ ದಿ ಡೀಪ್ ಸೀ ಅನ್ನೋ ರೀತಿ ನನ್ನ ಮತ್ತು ನಮ್ಮ ಸರ್ಕಾರದ ಪರಿಸ್ಥಿತಿ ಆಗಿದೆ. ಏನೇ ಆದರೂ ನಮ್ಮ ರಾಜ್ಯದ ಹಿತ ನಾವು ಕಾಪಾಡಬೇಕು. ಇದು ನಮ್ಮ ಡ್ಯೂಟಿ ಎಂದು ತಿಳಿಸಿದರು. ಇದನ್ನೂ ಓದಿ: ಹೈದರಾಬಾದ್‌ನಲ್ಲಿ ಚುನಾವಣೆಗೆ ನಿಂತು ನನ್ನ ವಿರುದ್ಧ ಹೋರಾಡಿ: ರಾಹುಲ್‌ಗೆ ಓವೈಸಿ ಚಾಲೆಂಜ್

    ಒಂದೇ ವಾರ ಎರೆಡೆರಡು ಬಂದ್ ವಿಚಾರವಾಗಿ ಮಾತನಾಡಿದ ಅವರು, ನಾವು ನಿಮ್ಮ ಜೊತೆ ಇದ್ದೇವೆ. ಜನಕ್ಕೆ ತೊಂದರೆ ಆಗಬಾರದು. ಜನರು ಸಹಕಾರ ಕೊಡಲಿಲ್ಲ ಅಂದರೆ ಆ ಬಂದ್‌ಗೆ ಮರ್ಯಾದೆ ಹೋಗುತ್ತದೆ. ಅವರಲ್ಲೆ ಚರ್ಚೆಗಳು ಆಗುತ್ತದೆ. ಅದರಲ್ಲಿ ನಾವು ಮಧ್ಯಪ್ರವೇಶ ಮಾಡಲ್ಲ. ಕೋರ್ಟ್ ವಿಚಾರವೂ ಅವರಿಗೆ ಗೊತ್ತಿದೆ. ಅದನ್ನು ಅವರು ನೋಡಲಿ ಎಂದು ಬಂದ್ ಮಾಡುವವರಿಗೆ ಸಲಹೆ ನೀಡಿದರು. ಇದನ್ನೂ ಓದಿ: ತಮಿಳುನಾಡಿಗೆ ನೀರು ಬಿಡುಗಡೆ ಭಾರೀ ಪ್ರಮಾಣದಲ್ಲಿ ಹೆಚ್ಚಳ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಂಗಳೂರು ಬಂದ್‌ನಿಂದ ಸಮಸ್ಯೆ ಪರಿಹಾರ ಆಗಲ್ಲ, ಬಂದ್ ಕೈಬಿಡಿ: ಪರಮೇಶ್ವರ್ ಮನವಿ

    ಬೆಂಗಳೂರು ಬಂದ್‌ನಿಂದ ಸಮಸ್ಯೆ ಪರಿಹಾರ ಆಗಲ್ಲ, ಬಂದ್ ಕೈಬಿಡಿ: ಪರಮೇಶ್ವರ್ ಮನವಿ

    ಬೆಂಗಳೂರು: ಮಂಗಳವಾರ ಬೆಂಗಳೂರು ಬಂದ್‌ಗೆ (Bengaluru Bandh) ಕರೆ ಕೊಟ್ಟಿರುವ ಸಂಘಟನೆಗಳಿಗೆ ಬಂದ್ ಕೈ ಬಿಡುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwar) ಮನವಿ ಮಾಡಿದ್ದಾರೆ.

    ಬೆಂಗಳೂರು ಬಂದ್ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಸಂಘಟನೆಗಳಿಗೆ ಬಂದ್ ಮಾಡದಂತೆ ಮನವಿ ಮಾಡಿದ್ದೇನೆ. ಮತ್ತೊಂದು ಬಾರಿ ಮನವಿ ಮಾಡುತ್ತೇನೆ. ನೀವು ಪ್ರತಿಭಟನೆ (Protest) ಮಾಡಲು ನಮ್ಮ ತಕರಾರು ಇಲ್ಲ. ಪ್ರತಿಭಟನೆ ಮಾಡೋದು ನಿಮ್ಮ ಹಕ್ಕು. ರಾಜ್ಯದ ಹಿತದೃಷ್ಟಿಯಿಂದ ಪ್ರತಿಭಟನೆ ಮಾಡಬಹುದು. ಆದರೆ ಯಾವುದೇ ಅಹಿತಕರ ಘಟನೆಗೆ ಅವಕಾಶ ಕೊಡಬಾರದು. ಸಾರ್ವಜನಿಕ ಆಸ್ತಿಗಳಿಗೆ ತೊಂದರೆ ಮಾಡಬಾರದು. ಜನರಿಗೆ ತೊಂದರೆ ಮಾಡಬಾರದು. ಕಾನೂನುಬಾಹಿರ ಚಟುವಟಿಕೆಗಳು ಆಗದಂತೆ ನೋಡಿಕೊಳ್ಳಬೇಕು ಎಂದರು. ಇದನ್ನೂ ಓದಿ: ಬಿಎಸ್‌ವೈ ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ

    ಬೆಂಗಳೂರಿನಲ್ಲಿ ಬಂದ್ ಮಾಡುವಾಗ ಸ್ವಲ್ಪ ಆತಂಕ ಇರುತ್ತದೆ. ಜನ ಸಮುದಾಯ ಓಡಾಡಲು ಸಮಸ್ಯೆ ಆಗುತ್ತದೆ. ಇದೆಲ್ಲವನ್ನೂ ಗಮನಕ್ಕೆ ತೆಗೆದುಕೊಂಡಿದ್ದೇವೆ. ಪೊಲೀಸ್ ಇಲಾಖೆ ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕೋ ಅದೆಲ್ಲವನ್ನು ತೆಗೆದುಕೊಳ್ಳಲಾಗಿದೆ. ಈಗಾಗಲೇ ಅಧಿಕಾರಿಗಳ ಸಭೆ ಮಾಡಿಕೊಂಡು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ ಮತ್ತಷ್ಟು ನೀರು

    ಬಂದ್ ಮಾಡುವುದರಿಂದ ನಮ್ಮ ಸಮಸ್ಯೆ ಬಗೆಹರಿಯುವುದಿಲ್ಲ. ನಮಗೆ ನೀರಿಲ್ಲದ ಕಾಲದಲ್ಲಿ ನೀರು ಬಿಡಿ ಎಂದು ಹೇಳುತ್ತಿದ್ದಾರೆ. ಕಾವೇರಿ ಬೋರ್ಡ್ ಅವರಿಗೆ ಒಂದು ಸಂದೇಶ ಕೊಟ್ಟ ಹಾಗೆ ಆಗುತ್ತದೆ ಎಂದು ಸಂಘಟನೆಗಳು ಬಂದ್ ಮಾಡುತ್ತಿದ್ದಾರೆ ಎನಿಸುತ್ತಿದೆ. ಸರ್ಕಾರ ಏನು ಕೆಲಸ ಮಾಡಬೇಕೋ ಅದನ್ನು ಮಾಡಿದೆ. ಬೋರ್ಡ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ನಮ್ಮ ವಕೀಲರ ತಂಡ ಎಫೆಕ್ಟಿವ್ ಆಗಿ ಕೆಲಸ ಮಾಡುತ್ತಿದ್ದಾರೆ. ಆದರೆ ಒಂದೊಂದು ಸಾರಿ ಕಾನೂನಿನ ವ್ಯವಸ್ಥೆ ಯಾವ ಕಡೆ ಹೋಗುತ್ತದೆ ಎಂದು ಹೇಳಲು ಆಗುವುದಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಇದನ್ನೂ ಓದಿ: KPSC ಸದಸ್ಯರಾಗಿ ಮುಸ್ತಫಾ ನೇಮಕ

    ಬಂದ್‌ನಿಂದ ಜನ ಸಾಮಾನ್ಯರಿಗೆ, ಸಾರ್ವಜನಿಕರಿಗೆ ಸಮಸ್ಯೆ ಆಗುತ್ತದೆ. ಬಂದ್‌ನಿಂದ ನಾವೇನು ಸಾಧನೆ ಮಾಡುವುದಿಲ್ಲ. ಸರ್ಕಾರ ಮನವಿ ಮಾಡಿದ ಮೇಲೂ ಬಂದ್ ಮಾಡೋದು ಸಂಘಟನೆಗಳ ವಿವೇಚನೆಗೆ ಬಿಟ್ಟಿದ್ದು. ಬೆಂಗಳೂರು ಬಂದ್‌ಗೆ ಪೊಲೀಸ್ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಬಿಗಿ ಭದ್ರತೆ ಮಾಡಿಕೊಂಡಿದ್ದೇವೆ. ಕೆಎಸ್‌ಆರ್‌ಪಿ ಟೀಂ ರೆಡಿ ಇದೆ. ಅದನ್ನು ನಿಯೋಜನೆ ಮಾಡಲಾಗುತ್ತದೆ. ಎಲ್ಲೆಲ್ಲಿ ಅಗತ್ಯ ಇದೆಯೋ ಅಲ್ಲಿಗೆ ಪೊಲೀಸ್ ಫೋರ್ಸ್ ಹಾಕತ್ತೇವೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಮಂಗಳವಾರ ಬೆಂಗಳೂರು ಬಂದ್ ಇರುತ್ತಾ? – ಕನ್ನಡ ಸಂಘಟನೆಗಳಿಂದ ತಟಸ್ಥ ಧೋರಣೆ

    ಬಂದ್‌ಗೆ ಬಿಜೆಪಿ-ಜೆಡಿಎಸ್ ಬೆಂಬಲ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅವರಿಬ್ಬರು ಈಗ ತಾನೆ ಒಂದಾಗಿದ್ದಾರೆ. ದೋಸ್ತಿ ಮಾಡಿಕೊಂಡಿದ್ದಾರೆ. ಹಾಗಾಗಿ ಒಂದು ಪ್ರದರ್ಶನ ಮಾಡಬೇಕು ಅಲ್ಲವಾ. ಅದಕ್ಕೆ ಬಂದ್‌ಗೆ ಬೆಂಬಲ ಕೊಡುತ್ತಿದ್ದಾರೆ. ರಾಜ್ಯದ ಹಿತದೃಷ್ಟಿ ಅವರಿಗೂ ಇದೆ. ಬಿಜೆಪಿ-ಜೆಡಿಎಸ್ ಕೂಡಾ ಜವಾಬ್ದಾರಿಯುತವಾಗಿ ನಡೆದುಕೊಂಡರೆ ಒಳ್ಳೆಯದು ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಕಾವೇರಿ, ಹೇಮಾವತಿ ನೀರಿಗಾಗಿ ಮಂಗಳವಾರ ಕೆಆರ್ ಪೇಟೆ ಬಂದ್

    ಸರ್ಕಾರ ಹೇಳದೇ ಕೇಳದೇ ನೀರು ಬಿಟ್ಟಿಲ್ಲ. ಮೊದಲ ಬಾರಿಗೆ ಎಲ್ಲಾ ಪಕ್ಷಗಳ ಸಭೆ ಕರೆಯಲಾಗಿತ್ತು. ಆ ಸಮಯದಲ್ಲಿ ಸಿಎಂ, ಡಿಸಿಎಂ, ಲೀಗಲ್ ಟೀಂ ಎಲ್ಲಾ ಪಕ್ಷಗಳಿಗೂ ವಿವರಣೆ ನೀಡಿದ್ದಾರೆ. ಎಲ್ಲಾ ವಿಷಯಗಳನ್ನು ಎಲ್ಲರಿಗೂ ತಿಳಿಸಿದ್ದೇವೆ. ಯಾವುದೇ ಮುಚ್ಚಿಟ್ಟು ವ್ಯವಹಾರ ಮಾಡುವ ಕೆಲಸ ಮಾಡಿಲ್ಲ. ರಾಜ್ಯದ ಹಿತವನ್ನು ಕಾಪಾಡಲು ನಾವು ಹೇಗೆ ಬದ್ಧವಾಗಿ ಇದ್ದೇವೋ ಅವರು ಕೂಡಾ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಬಂದ್ ಮಾಡಿದರೆ ಬ್ರ್ಯಾಂಡ್‌ ಬೆಂಗಳೂರಿಗೆ ಧಕ್ಕೆ – ಡಿಕೆಶಿ ಹೇಳಿಕೆಗೆ ಆಕ್ರೋಶ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೆಪ್ಟೆಂಬರ್‌ 26ರಂದು ಬೆಂಗಳೂರು ಬಂದ್‌

    ಸೆಪ್ಟೆಂಬರ್‌ 26ರಂದು ಬೆಂಗಳೂರು ಬಂದ್‌

    ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು (Tamil Nadu Cauvery Water) ಬಿಡದಂತೆ ಆಗ್ರಹಿಸಿ ಇದೇ ಸೆಪ್ಟೆಂಬರ್‌ 26ರಂದು (ಮಂಗಳವಾರ) ಬೆಂಗಳೂರು ಬಂದ್‌ಗೆ (Bengaluru Bandh) ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಬೆಂಗಳೂರು ಸಂಘ ಕರೆ ನೀಡಿದೆ.

    ಕುರುಬೂರು ಶಾಂತಕುಮಾರ್‌ ನೇತೃತ್ವದ ಸಮಿತಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಭೆ ನಡೆಸಿದ ಬಳಿಕ ಅಧಿಕೃತ ನಿರ್ಧಾರ ಪ್ರಕಟಿಸಿದೆ. ಬೆಂಗಳೂರು ಮತ್ತು ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಬಂದ್‌ಗೆ ಕರೆ ನೀಡಲಾಗಿದೆ. ಅಂದು ಬೆಳಗ್ಗೆ 11 ಗಂಟೆಗೆ ಟೌನ್ ಹಾಲ್ ನಿಂದ ಮೈಸೂರು ಬ್ಯಾಂಕ್ ಸರ್ಕಲ್ ವರೆಗೆ ರ‍್ಯಾಲಿ ನಡೆಯಲಿದೆ ಎಂದು ಸಮಿತಿ ತಿಳಿಸಿದೆ.

    ರಾಜ್ಯ ಕಬ್ಬು ಬೆಳೆಗಾರರ ಸಂಘ, ಆಮ್ ಆದ್ಮಿ ಪಕ್ಷ, ಕನ್ನಡ ಚಳುವಳಿ ಕೇಂದ್ರ ಸಮಿತಿ, ಜಯಕರ್ನಾಟಕ ಸಂಘಟನೆ, ತಲಕಾಡು ಸಂಶೋಧಕರ ಸಂಘ, ರಾಷ್ಟ್ರೀಯ ಚಾಲಕರ ಒಕ್ಕೂಟ, ಕನ್ನಡಪರ ಹೋರಾಟಗಾರರ ಸಂಘ, ಬಿಬಿಎಂಪಿ ನೌಕರರ ಕ್ಷೇಮಾಭಿವೃದ್ಧಿ ಸಂಘ, ತಮಿಳುಸಂಘ, ಕೆಂಪೇಗೌಡ ಸಮಿತಿ, ರಾಜಸ್ಥಾನಿ ಭಾಷಿಕರ ಸಂಘ, ಕರ್ನಾಟಕ ರಕ್ಷಣಾ ಸೇನೆ ಸೇರಿದಂತೆ 100ಕ್ಕೂ ಹೆಚ್ಚು ಸಂಘಟನೆಗಳು ಬೆಂಗಳೂರು ಬಂದ್‌ಗೆ ಬೆಂಬಲ ಸೂಚಿಸಿವೆ.

    ಕೈಗಾರಿಕೆಗಳು, ಐಟಿ ಕಂಪನಿಗಳು, ಕಾರ್ಮಿಕರು, ಕೈಗಾರಿಕೋದ್ಯಮಿಗಳು, ಸಾರ್ವಜನಿಕರು, ಶಾಲಾ, ಕಾಲೇಜುಗಳ ಮುಖ್ಯಸ್ಥರು ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿ ಕೂಡ ಬೆಂಬಲ ನೀಡಬೇಕು. ಸ್ವಯಂ ಪ್ರೇರಿತವಾಗಿ ಬಂದ್‌ಗೆ ಬೆಂಬಲಿಸುಂತೆ ಸಂಘಟನೆಗಳು ಮನವಿ ಮಾಡಿದ್ದೇವೆ.

    ಅಲ್ಲದೇ ತುರ್ತಾಗಿ ವಿಶೇಷ ವಿಧಾನ ಮಂಡಲ ಅಧಿವೇಶನ ಕರೆಯಬೇಕು. ಕಾವೇರಿ ವಿಚಾರವಾಗಿ ಸಂಕಷ್ಟ ಸೂತ್ರದ ಬಗ್ಗೆ ಚರ್ಚೆ ಆಗಬೇಕು ಎಂದು ಆಗ್ರಹಿಸಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾವೇರಿ ಕಿಚ್ಚು – ಬೆಂಗಳೂರು ಬಂದ್‌ಗೆ ಸಿದ್ಧತೆ

    ಕಾವೇರಿ ಕಿಚ್ಚು – ಬೆಂಗಳೂರು ಬಂದ್‌ಗೆ ಸಿದ್ಧತೆ

    ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು (TamilNadu Cauvery Water) ಬಿಡದಂತೆ ಆಗ್ರಹಿಸಿ ನಡೆಸುತ್ತಿರುವ ರೈತರ ಹೋರಾಟದ ಕಿಚ್ಚು ಮುಗಿಲು ಮುಟ್ಟಿದೆ. ಮಂಡ್ಯ ಬಂದ್ ಬೆನ್ನಲ್ಲೇ ಬೆಂಗಳೂರು ಬಂದ್‌ಗೂ (Bengaluru Bandh) ಭರದ ಸಿದ್ಧತೆ ನಡೆಯುತ್ತಿದೆ.

    ಸೋಮವಾರ (ಸೆ.25) ಅಥವಾ ಮಂಗಳವಾರ (ಸೆ.26) ಬೆಂಗಳೂರು ಬಂದ್‌ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಪ್ರಾಥಮಿಕವಾಗಿ 10ಕ್ಕೂ ಹೆಚ್ಚು ಸಂಘಟನೆಗಳು ಬೆಂಗಳೂರು ಬಂದ್‌ಗೆ ಬೆಂಬಲ ಸೂಚಿಸಿವೆ. ಇದನ್ನೂ ಓದಿ: ಕಾವೇರಿ ಹೋರಾಟದ ಕಿಚ್ಚು; ಬಾಯಿಗೆ ಮಣ್ಣು ಹಾಕಿಕೊಂಡು ಸರ್ಕಾರದ ವಿರುದ್ಧ ರೈತರ ಆಕ್ರೋಶ

    ರಾಜ್ಯ ಕಬ್ಬು ಬೆಳೆಗಾರರ ಸಂಘ, ಆಮ್ ಆದ್ಮಿ ಪಕ್ಷ (AAP), ಕನ್ನಡ ಚಳುವಳಿ ಕೇಂದ್ರ ಸಮಿತಿ, ಜಯಕರ್ನಾಟಕ ಸಂಘಟನೆ, ತಲಕಾಡು ಸಂಶೋಧಕರ ಸಂಘ, ರಾಷ್ಟ್ರೀಯ ಚಾಲಕರ ಒಕ್ಕೂಟ, ಕನ್ನಡಪರ ಹೋರಾಟಗಾರರ ಸಂಘ, ಬಿಬಿಎಂಪಿ (BBMP) ನೌಕರರ ಕ್ಷೇಮಾಭಿವೃದ್ಧಿ ಸಂಘ, ತಮಿಳುಸಂಘ, ಕೆಂಪೇಗೌಡ ಸಮಿತಿ, ರಾಜಸ್ಥಾನಿ ಭಾಷಿಕರ ಸಂಘ, ಕರ್ನಾಟಕ ರಕ್ಷಣಾ ಸೇನೆ ಸೇರಿದಂತೆ ಹಲವು ಸಂಘಟನೆಗಳು ಈಗಾಗಲೇ ಬೆಂಬಲ ಸೂಚಿಸಿವೆ.  ಇದನ್ನೂ ಓದಿ: ಕಾವೇರಿ ನದಿ ನೀರಿನ ವಿಷಯದಲ್ಲಿ ನಾವು ಮೇಲ್ಮನವಿ ಸಲ್ಲಿಸಬೇಕು: ಬಿಎಸ್‍ವೈ

    ಬೆಂಗಳೂರು ಬಂದ್ ಭರದ ಸಿದ್ಧತೆ ನಡೆಸಲಾಗುತ್ತಿದೆ. ಆದ್ರೆ ಅಧಿಕೃತ ದಿನಾಂಕ ಇನ್ನೂ ಘೋಷಣೆಯಾಗಿಲ್ಲ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಂಗಳೂರು ಬಂದ್‌ ವೇಳೆ ಕಾನೂನು ಉಲ್ಲಂಘನೆ – 13 ಕೇಸ್‌, 12 ಮಂದಿ ಅರೆಸ್ಟ್‌

    ಬೆಂಗಳೂರು ಬಂದ್‌ ವೇಳೆ ಕಾನೂನು ಉಲ್ಲಂಘನೆ – 13 ಕೇಸ್‌, 12 ಮಂದಿ ಅರೆಸ್ಟ್‌

    ಬೆಂಗಳೂರು: ಖಾಸಗಿ ಬಸ್‌ಗಳನ್ನ (Private Bus) ಶಕ್ತಿಯೋಜನೆ ವ್ಯಾಪ್ತಿಗೆ ತರಬೇಕು, 3.64 ಲಕ್ಷ ಆಟೋ ಚಾಲಕರಿಗೆ ಮಾಸಿಕ 10 ಸಾವಿರ ರೂ. ನೀಡಬೇಕು, ರ‍್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧ ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನ ಆಗ್ರಹಿಸಿ ಬೆಂಗಳೂರು ಬಂದ್‌ಗೆ (Bengaluru Bandh) ಕರೆ ನೀಡಿದ್ದ ಖಾಸಗಿ ಸಾರಿಗೆ ಒಕ್ಕೂಟ ಮಧ್ಯಾಹ್ನದ ವೇಳೆಗೆಲ್ಲಾ ಬಂದ್ ವಾಪಸ್ ಪಡೆದಿದೆ.

    ಇಂದಿನ ಪ್ರತಿಭಟನೆಯಲ್ಲಿ ಪೊಲೀಸರು ಒಟ್ಟು 13 ಪ್ರಕರಣಗಳನ್ನ ದಾಖಲಿಸಿದ್ದಾರೆ. 13 ಕೇಸ್‌ ದಾಖಲಿಸಿ ಕಾನೂನು ಉಲ್ಲಂಘನೆ ಮಾಡಿದ 12 ಮಂದಿಯನ್ನ ಬಂಧಿಸಿದ್ದಾರೆ. ಇದನ್ನೂ ಓದಿ: ಸರ್ಕಾರದಿಂದ ಬೇಡಿಕೆ ಈಡೇರಿಸುವ ಭರವಸೆ – ಬೆಂಗಳೂರು ಬಂದ್ ವಾಪಸ್

    ಕೇಂದ್ರ ವಿಭಾಗದಲ್ಲಿ 1 ಕೇಸ್, ಆಗ್ನೇಯ ವಿಭಾಗದಲ್ಲಿ 1 ಕೇಸ್, ಉತ್ತರ ವಿಭಾಗದಲ್ಲಿ 2 ಕೇಸ್, ಈಶಾನ್ಯ ವಿಭಾಗದಲ್ಲಿ 2 ಕೇಸ್, ಹಾಗೂ ಪಶ್ಚಿಮ ವಿಭಾಗದಲ್ಲಿ 7 ಪ್ರಕರಣಗಳು ದಾಖಲಾಗಿವೆ. ಒಟ್ಟು 13 ಕೇಸ್‌ನಲ್ಲಿ 12 ಜನರನ್ನ ಅರೆಸ್ಟ್ ಮಾಡಿರುವ ನಗರ ಪೊಲೀಸರು (Bengaluru City Police) ವಿಚಾರಣೆಗೊಳಪಡಿಸಿದ್ದಾರೆ. ಇದನ್ನ ಹೊರತುಪಡಿಸಿದ್ರೆ ಬಹುತೇಕ ಬಂದ್ ಶಾಂತಿಯುತವಾಗಿ ನಡೆದಿದ್ದು, ಖಾಸಗಿ ಸಾರಿಗೆಗಳು ತಮ್ಮ ಬೇಡಿಕೆಯನ್ನ ಸರ್ಕಾರಕ್ಕೆ ಮನವರಿಕೆ ಮಾಡುವ ಕೆಲಸ ಮಾಡಿದ್ದಾರೆ.

    ಸೋಮವಾರ ಮಧ್ಯಾಹ್ನ ಸಚಿವ ರಾಮಲಿಂಗಾರೆಡ್ಡಿ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಅಂತ್ಯಗೊಳಿಸಿರುವುದಾಗಿ ಖಾಸಗಿ ಸಾರಿಗೆ ಒಕ್ಕೂಟ ತಿಳಿಸಿದೆ. ಇದನ್ನೂ ಓದಿ: ಫುಡ್‌ ಡೆಲಿವರಿ ಬಾಯ್ಸ್‌ ಸೇರಿದಂತೆ ಎಲ್ಲಾ ಗಿಗ್‌ ಕಾರ್ಮಿಕರಿಗೆ 4 ಲಕ್ಷ ವಿಮೆ ಘೋಷಣೆ

    ಪ್ರಮುಖ ಬೇಡಿಕೆ ಏನಿತ್ತು?
    – ಖಾಸಗಿ ಬಸ್‌ಗಳನ್ನ ಶಕ್ತಿಯೋಜನೆ ವ್ಯಾಪ್ತಿಗೆ ತರಬೇಕು
    – 3.64 ಲಕ್ಷ ಆಟೋ ಚಾಲಕರಿಗೆ ಮಾಸಿಕ 10 ಸಾವಿರ ನೀಡಬೇಕು
    – ರ‍್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧ ಮಾಡಬೇಕು
    – 10-15 ಲಕ್ಷ ಮೌಲ್ಯದ ವಾಹನಗಳಿಗೆ ಜೀವಿತಾವಧಿ ತೆರಿಗೆ ಬದಲು ಈ ಹಿಂದಿನ ನಿಯಮವೇ ಜಾರಿಗೆ ತರಬೇಕು
    – ಏರ್‌ಪೋರ್ಟ್ ಟ್ಯಾಕ್ಸಿಗಳಿಗೆ ಒಂದೇ ದರ ನಿಗದಿ ಮಾಡಬೇಕು
    – ಅಸಂಘಟಿತ ವಾಣಿಜ್ಯ ಚಾಲಕರ ಸಾರಿಗೆ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು
    – ಚಾಲಕರಿಗೆ ವಸತಿ ಯೋಜನೆ ನೀಡಬೇಕು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]