Tag: Bengaluru Bandh

  • ನಾಳೆ ಬೆಂಗಳೂರು ಬಂದ್; 500 ಹೆಚ್ಚುವರಿ ಬಸ್ ರಸ್ತೆಗಿಳಿಸಲು ಬಿಎಂಟಿಸಿ ನಿರ್ಧಾರ

    ನಾಳೆ ಬೆಂಗಳೂರು ಬಂದ್; 500 ಹೆಚ್ಚುವರಿ ಬಸ್ ರಸ್ತೆಗಿಳಿಸಲು ಬಿಎಂಟಿಸಿ ನಿರ್ಧಾರ

    ಬೆಂಗಳೂರು: ಖಾಸಗಿ ವಾಹನ ಚಾಲಕರ ಒಕ್ಕೂಟ ಸೆ.11 ರಂದು ಬೆಂಗಳೂರು ಬಂದ್‌ಗೆ (Bengaluru Bandh) ಕರೆ ನೀಡಿರುವ ಹಿನ್ನೆಲೆಯಲ್ಲಿ, ಪ್ರಯಾಣಿಕರಿಗೆ ಸಂಚಾರಕ್ಕೆ ಸಮಸ್ಯೆ ಆಗಬಾರದು ಎಂಬ ದೃಷ್ಟಿಯಿಂದ 500 ಹೆಚ್ಚುವರಿ ಬಿಎಂಟಿಸಿ (BMTC) ಬಸ್‌ಗಳನ್ನು (Bus) ಬಿಡಲು ಸಿದ್ಧತೆ ನಡೆದಿದೆ.

    ಸೋಮವಾರ ಮುಂಜಾನೆ 5 ಗಂಟೆಯಿಂದ ರಾತ್ರಿ 10 ಗಂಟೆವರೆಗೂ ಹೆಚ್ಚುವರಿ ಬಸ್‌ಗಳು ನಗರದಲ್ಲಿ (Bengaluru) ಸಂಚರಿಸಲಿವೆ. ಮುಖ್ಯವಾಗಿ ಏರ್ಪೋರ್ಟ್, ಸರ್ಜಾಪುರ, ಅತ್ತಿಬೆಲೆ, ಮೈಸೂರು ರಸ್ತೆ, ಎಲೆಕ್ಟ್ರಾನಿಕ್ ಸಿಟಿ, ಯಲಹಂಕ, ವೈಟ್ ಫೀಲ್ಡ್ ಹಾಗೂ ಔಟರ್ ರಿಂಗ್ ರಸ್ತೆ ಭಾಗದಲ್ಲಿ ಹೆಚ್ಚುವರಿ ಬಸ್ ಸೇವೆ ಒದಗಿಸಲು ನಿರ್ಧರಿಸಲಾಗಿದೆ. ಅಲ್ಲದೇ ಪ್ರಯಾಣಿಕರ ದಟ್ಟಣೆ ಅನುಸಾರ ಬಸ್ ಹೆಚ್ಚಳ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಸೆ.11ಕ್ಕೆ ಬೆಂಗಳೂರು ಬಂದ್ – ಏನಿದೆ? ಏನಿರಲ್ಲ?

    ಕೆಂಪೇಗೌಡ ಬಸ್ ನಿಲ್ದಾಣ, ಕೆ.ಆರ್ ಮಾರುಕಟ್ಟೆ ಹಾಗೂ ಶಿವಾಜಿನಗರ ಬಸ್ ನಿಲ್ದಾಣಗಳಿಂದ ಕಾಡುಗೋಡಿ, ಸರ್ಜಾಪುರ, ಅತ್ತಿಬೆಲೆ, ಆನೇಕಲ್, ಬನ್ನೇರುಘಟ್ಟ/ಜಿಗಣಿ, ಹಾರೋಹಳ್ಳಿ, ಬಿಡದಿ, ತಾವರೆಕೆರೆ, ನೆಲಮಂಗಲ, ಹೆಸರಘಟ್ಟ, ದೊಡ್ಡಬಳ್ಳಾಪುರ, ದೇವನಹಳ್ಳಿ, ಬಾಗಲೂರು, ಚನ್ನಸಂದ್ರ, ಹೊಸಕೋಟೆಗೆ ಹಾಗೂ ಹೊರ ವರ್ತುಲ – ಒಳ ವರ್ತುಲ ರಸ್ತೆಗಳಲ್ಲಿ ಮತ್ತು ನಗರದ ಪ್ರಮುಖ ಸ್ಥಳಗಳನ್ನು ಸಂಪರ್ಕಿಸುವ ಮಾರ್ಗಗಳಲ್ಲಿ ಹೆಚ್ಚುವರಿಯಾಗಿ 4,000 ಟ್ರಿಪ್ ಸಂಚರಿಸಲಿವೆ.

    ಪ್ರಯಾಣಿಕರಿಗೆ ತೊಂದರೆಯಾಗದಂತೆ ನಗರದ ಪ್ರಮುಖ ರಸ್ತೆ, ಬಸ್ ನಿಲ್ದಾಣ ಹಾಗೂ ಜಂಕ್ಷನ್‌ಗಳಲ್ಲಿ ಸಂಸ್ಥೆಯ ಸಿಬ್ಬಂದಿಯನ್ನು ಹಾಗೂ ಸಾರಥಿ ಗಸ್ತು ಪಡೆಗಳಿಂದ ಬಸ್ ಸಂಚಾರದ ಮೇಲ್ವಿಚಾರಣೆ ಮಾಡಲಾಗುತ್ತದೆ. ಈ ವೇಳೆ ಪ್ರಯಾಣಿಕರ ಅಧಿಕ ದಟ್ಟಣೆ ಕಂಡುಬಂದ ಮಾರ್ಗಗಳಲ್ಲಿ ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

    ಭಾನುವಾರ ರಾತ್ರಿ 12 ಗಂಟೆಯಿಂದಲೇ ಖಾಸಗಿ ವಾಹನ ಸಂಚಾರ ಬಂದ್ ಆಗಲಿದ್ದು, ಸೋಮವಾರ ರಾತ್ರಿ 12 ಗಂಟೆವರೆಗೆ ಬಂದ್ ಮಾಡಲು ಖಾಸಗಿ ವಾಹನ ಚಾಲಕರ ಒಕ್ಕೂಟ ನಿರ್ಧಾರ ಮಾಡಿದೆ. ಬಂದ್ ಬಗ್ಗೆ ಜನರಿಗೆ ತಿಳಿಸಲು ಮತ್ತು ಬಂದ್‌ಗೆ ಬೆಂಬಲ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಕೂಡ ಮಾಡಿದೆ.

    ಬಂದ್‌ನಿAದಾಗಿ 32 ಸಂಘಟನೆಗಳ 7 ಲಕ್ಷಕ್ಕೂ ಹೆಚ್ಚು ವಾಹನಗಳು ಸಂಚಾರ ನಿಲ್ಲಿಸಲಿವೆ. ಏರ್ಪೋಟ್ ಟ್ಯಾಕ್ಸಿ ಸಂಪೂರ್ಣ ಸ್ಥಗಿತಗೊಳಿಸಲಾಗುತ್ತದೆ. ಓಲಾ, ಊಬರ್, ಆಟೋ ಟ್ಯಾಕ್ಸಿ ಬಂದ್ ಆಗಲಿದೆ. ಕಾರ್ಪೊರೇಟ್ ಕಂಪನಿಗಳ ಜೊತೆ ಒಪ್ಪಂದ ಮಾಡಿಕೊಂಡಿರುವ ಬಸ್‌ಗಳು ಕೂಡ ಬಂದ್‌ಗೆ ಬೆಂಬಲ ನೀಡಿದ್ದು ಸಂಚಾರ ಸ್ಥಗಿತಗೊಳಿಸಲಿವೆ.

    ಖಾಸಗಿ ವಾಹನಗಳ ಮೂಲಕ ಮಕ್ಕಳನ್ನು ಶಾಲೆಗೆ ಕಳುಹಿಸುವವರಿಗೂ ಬಂದ್ ಬಿಸಿ ತಟ್ಟಲಿದೆ. ಗೂಡ್ಸ್ ವಾಹನಗಳು ಬಂದ್ ಆಗುವ ಸಾಧ್ಯತೆ ಇದೆ. ನಗರದಲ್ಲಿ 3 ಲಕ್ಷ ಆಟೋ, 1.5 ಲಕ್ಷ ಟ್ಯಾಕ್ಸಿ, 20 ಸಾವಿರ ಗೂಡ್ಸ್ ವಾಹನಗಳು, 5 ಸಾವಿರಕ್ಕೂ ಹೆಚ್ಚು ಖಾಸಗಿ ಶಾಲಾ ವಾಹನಗಳು, 80 ಸಾವಿರ ಸಿಟಿ ಟ್ಯಾಕ್ಸಿ ಮತ್ತು ಕಾರ್ಪೊರೇಟ್ ಕಂಪನಿಯ ಬಸ್‌ಗಳು ಸೇವೆಯಿಂದ ಹೊರಗುಳಿಯಲಿವೆ. ಒಟ್ಟು 5 ಲಕ್ಷಕ್ಕೂ ಹೆಚ್ಚು ವಾಹನಗಳು ಸಂಚಾರವನ್ನು ನಿಲ್ಲಿಸಲಿವೆ. ಅಲ್ಲದೇ ಹೋಟೆಲ್ ಮಾಲೀಕರ ಸಂಘದ ಬಳಿಯೂ ಬಂದ್‌ಗೆ ಬೆಂಬಲ ಸೂಚಿಸುವಂತೆ ಮನವಿ ಮಾಡಲಾಗಿದ್ದು ಹೋಟೆಲ್‌ಗಳು ಬಂದ್ ಆಗುವ ಸಾಧ್ಯತೆ ಇದೆ. ಇದರೊಂದಿಗೆ ವರ್ತಕರ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ಬೀದಿ ಬದಿ ವ್ಯಾಪಾರಿಗಳೊಂದಿಗೆ ಬಂದ್‌ಗೆ ಬೆಂಬಲಿಸುವಂತೆ ಕೇಳಿಕೊಳ್ಳಲಾಗಿದೆ.

    ಪ್ರತಿಭಟನಾಕಾರರು ನಗರದೊಳಗೆ ಬೃಹತ್ ಮೆರವಣಿಗೆಗೆ ತಯಾರಿ ಮಾಡಿಕೊಂಡಿದ್ದು, ಮೆರವಣಿಗೆ ಬಳಿಕ ಫ್ರೀಡಂ ಪಾರ್ಕ್ನಲ್ಲಿ ಶಕ್ತಿ ಪ್ರದರ್ಶನಕ್ಕೆ ತಯಾರಾಗಿದ್ದಾರೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಬಿಎಂಟಿಸಿ ಹೆಚ್ಚುವರಿ ಬಸ್‌ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲು ಮುಂದಾಗಿದೆ. ಇದನ್ನೂ ಓದಿ: ಕೂಡ್ಲಿಗಿ ಶಾಸಕನಾಗಿದ್ದಾಗ ದೇಹ ಬಿಜೆಪಿಯಲ್ಲಿದ್ರೂ, ನನ್ನ ಹೃದಯ ಕಾಂಗ್ರೆಸ್‌ನಲ್ಲಿತ್ತು: ಎನ್‌ವೈ ಗೋಪಾಲಕೃಷ್ಣ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೆ.11ಕ್ಕೆ ಬೆಂಗಳೂರು ಬಂದ್ – ಏನಿದೆ? ಏನಿರಲ್ಲ?

    ಸೆ.11ಕ್ಕೆ ಬೆಂಗಳೂರು ಬಂದ್ – ಏನಿದೆ? ಏನಿರಲ್ಲ?

    ಬೆಂಗಳೂರು: ಸೆ.11 ರಂದು ನಗರದ ಬಂದ್‍ಗೆ (Bengaluru Bandh) ಖಾಸಗಿ ವಾಹನ ಚಾಲಕರ ಒಕ್ಕೂಟ ಸಕಲ ಸಿದ್ಧತೆ ಮಾಡಿಕೊಂಡಿದೆ. ಈ ಮೂಲಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮೊದಲ ಬಂದ್ ಬಿಸಿ ಮುಟ್ಟಲಿದೆ.

    ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಯಶಸ್ಸು ಸರ್ಕಾರಕ್ಕೆ ಅನುಕೂಲವಾದರೆ ಖಾಸಗಿ ವಾಹನಗಳಾದ ಆಟೋ, ಓಲಾ, ಉಬರ್ ಸೇರಿದಂತೆ ಖಾಸಗಿ ಬಸ್‍ಗಳಿಗೆ ದೊಡ್ಡ ಪೆಟ್ಟು ಕೊಟ್ಟಿದೆ. ಮಹಿಳೆಯರು ಅವುಗಳಲ್ಲಿ ಸಂಚರಿಸುವುದನ್ನೇ ಬಿಟ್ಟಿದ್ದಾರೆ. ಇದು ಖಾಸಗಿ ವಾಹನ ಚಾಲಕರ ಹಾಗೂ ಮಾಲೀಕರ ಆತಂಕಕ್ಕೆ ಕಾರಣವಾಗಿದೆ. ಈ ವಿಚಾರವಾಗಿ ಪರಿಹಾರ ಕೊಡುವಂತೆ ಸರ್ಕಾರಕ್ಕೆ ಒತ್ತಡ ಕೂಡ ತರಲಾಗಿತ್ತು. ಆದರೆ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಬೆಂಗಳೂರು ಬಂದ್‍ಗೆ ಕರೆ ನೀಡಲಾಗಿದೆ. ಇದನ್ನೂ ಓದಿ: ಭ್ರಷ್ಟಾಚಾರ ಕೇಸ್‌ – ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅರೆಸ್ಟ್‌

    ಭಾನುವಾರ ರಾತ್ರಿ 12 ಗಂಟೆಯಿಂದಲೇ ಖಾಸಗಿ ವಾಹನ ಸಂಚಾರ ಬಂದ್ ಆಗಲಿದ್ದು, ಸೋಮವಾರ ರಾತ್ರಿ 12 ಗಂಟೆವರೆಗೆ ಬಂದ್ ಮಾಡಲು ಒಕ್ಕೂಟ ನಿರ್ಧಾರ ಮಾಡಿದೆ. ಬಂದ್ ಬಗ್ಗೆ ಜನರಿಗೆ ತಿಳಿಸಲು ಮತ್ತು ಬಂದ್‍ಗೆ ಬೆಂಬಲ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಕೂಡ ಮಾಡಿದೆ. ಕೆ.ಜಿ ರೋಡ್, ಮೆಜೆಸ್ಟಿಕ್, ಆನಂದ್ ರಾವ್ ಸರ್ಕಲ್, ಕೆ.ಆರ್ ಮಾರ್ಕೆಟ್, ಮಲ್ಲೇಶ್ವರಂ ಸೇರಿದಂತೆ ಹಲವೆಡೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

    ಬಂದ್ ದಿನ ಏನಿದೆ, ಏನಿಲ್ಲ?
    32 ಸಂಘಟನೆಗಳ 7 ಲಕ್ಷಕ್ಕೂ ಹೆಚ್ಚು ವಾಹನಗಳು ಸಂಚಾರ ನಿಲ್ಲಿಸಲಿವೆ. ಏರ್‌ಪೋರ್ಟ್ ಟ್ಯಾಕ್ಸಿ ಸಂಪೂರ್ಣ ಸ್ಥಗಿತಗೊಳಿಸಲಾಗುತ್ತದೆ. ಓಲಾ, ಊಬರ್ ಆಟೋ ಟ್ಯಾಕ್ಸಿ ಬಂದ್ ಆಗಲಿದೆ. ಕಾರ್ಪೋರೇಟ್ ಕಂಪನಿಗಳ ಜೊತೆ ಒಪ್ಪಂದ ಮಾಡಿಕೊಂಡಿರುವ ಬಸ್‍ಗಳು ಕೂಡ ಬಂದ್‍ಗೆ ಬೆಂಬಲ ನೀಡಿದ್ದು ಸಂಚಾರ ಸ್ಥಗಿತಗೊಳಿಸಲಿವೆ.

    ಖಾಸಗಿ ವಾಹನಗಳ ಮೂಲಕ ಮಕ್ಕಳನ್ನು ಶಾಲೆಗೆ ಕಳುಹಿಸುವವರಿಗೂ ಬಂದ್ ಬಿಸಿ ತಟ್ಟಲಿದೆ. ಗೂಡ್ಸ್ ವಾಹನಗಳು ಬಂದ್ ಆಗುವ ಸಾಧ್ಯತೆ ಇದೆ. ನಗರದಲ್ಲಿ 3 ಲಕ್ಷ ಆಟೋ (Auto), 1.5 ಲಕ್ಷ ಟ್ಯಾಕ್ಸಿ, 20 ಸಾವಿರ ಗೂಡ್ಸ್ ವಾಹನಗಳು, 5 ಸಾವಿರಕ್ಕೂ ಹೆಚ್ಚು ಖಾಸಗಿ ಶಾಲಾ ವಾಹನಗಳು, 80 ಸಾವಿರ ಸಿಟಿ ಟ್ಯಾಕ್ಸಿ ಮತ್ತು ಕಾರ್ಪೋರೇಟ್ ಕಂಪನಿಯ ಬಸ್‍ಗಳು ಸೇವೆಯಿಂದ ಹೊರಗುಳಿಯಲಿವೆ. ಒಟ್ಟು 5 ಲಕ್ಷಕ್ಕೂ ಹೆಚ್ಚು ವಾಹನಗಳು ಸಂಚಾರವನ್ನು ನಿಲ್ಲಿಸಲಿವೆ. ಅಲ್ಲದೇ ಹೋಟೆಲ್ ಮಾಲೀಕರ ಸಂಘದ ಬಳಿಯೂ ಬಂದ್‍ಗೆ ಬೆಂಬಲ ಸೂಚಿಸುವಂತೆ ಮನವಿ ಮಾಡಲಾಗಿದ್ದು ಹೋಟೆಲ್‍ಗಳು ಬಂದ್ ಆಗುವ ಸಾಧ್ಯತೆ ಇದೆ. ಇದರೊಂದಿಗೆ ವರ್ತಕರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ಬೀದಿ ಬದಿ ವ್ಯಾಪಾರಿಗಳೊಂದಿಗೆ ಬಂದ್‍ಗೆ ಬೆಂಬಲಿಸುವಂತೆ ಕೇಳಿಕೊಳ್ಳಲಾಗಿದೆ.

    ಪ್ರತಿಭಟನಾಕಾರರು ನಗರದೊಳಗೆ ಬೃಹತ್ ಮೆರವಣಿಗೆಗೆ ತಯಾರಿ ಮಾಡಿಕೊಂಡಿದ್ದು, ಮೆರವಣಿಗೆ ಬಳಿಕ ಫ್ರೀಡಂ ಪಾರ್ಕ್‍ನಲ್ಲಿ (Freedom Park) ಶಕ್ತಿ ಪ್ರದರ್ಶನಕ್ಕೆ ತಯಾರಾಗಿದ್ದಾರೆ. ಇದನ್ನೂ ಓದಿ: ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿದ ಸರ್ಕಾರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೆ.11ಕ್ಕೆ ಬೆಂಗಳೂರು ಬಂದ್ – ಸರ್ಕಾರದ ವಿರುದ್ಧ ಸಿಡಿದ ಖಾಸಗಿ ಸಾರಿಗೆ ಒಕ್ಕೂಟ

    ಸೆ.11ಕ್ಕೆ ಬೆಂಗಳೂರು ಬಂದ್ – ಸರ್ಕಾರದ ವಿರುದ್ಧ ಸಿಡಿದ ಖಾಸಗಿ ಸಾರಿಗೆ ಒಕ್ಕೂಟ

    ಬೆಂಗಳೂರು: ಶಕ್ತಿ ಯೋಜನೆ (Shakti Scheme) ಜಾರಿಯಾಗಿರುವ ಬಳಿಕ ಖಾಸಗಿ ಸಾರಿಗೆ (Private Transport)ಉದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ. ಈ ಸಮಸ್ಯೆಗೆ ಪರಿಹಾರ ನೀಡುವಂತೆ ಖಾಸಗಿ ಸಾರಿಗೆ ಒಕ್ಕೂಟ ಸರ್ಕಾರಕ್ಕೆ 10 ದಿನಗಳ ಗಡುವು ನೀಡಿತ್ತು. ಆದರೂ ಕೂಡಾ ಸಮಸ್ಯೆಗೆ ಸರ್ಕಾರ ಯಾವುದೇ ಸ್ಪಂದನೆ ನೀಡದೇ ಹೋಗಿರುವ ಹಿನ್ನೆಲೆ ಸೆಪ್ಟೆಂಬರ್ 11 ರಂದು ಬೆಂಗಳೂರು ಬಂದ್‌ಗೆ (Bengaluru Bandh) ಖಾಸಗಿ ಸಾರಿಗೆ ಒಕ್ಕೂಟ ಕರೆ ನೀಡಿದೆ.

    32 ಸಂಘಟನೆಗಳಿರುವ ರಾಜ್ಯದ ಖಾಸಗಿ ಸಾರಿಗೆ ಒಕ್ಕೂಟ ಸುದ್ದಿಗೋಷ್ಠಿ ನಡೆಸಿ ಬೆಂಗಳೂರು ಬಂದ್ ನಡೆಸುವುದಾಗಿ ತಿಳಿಸಿದೆ. ಸೆಪ್ಟೆಂಬರ್ 11 ಸೋಮವಾರ ಆಟೋ, ಟ್ಯಾಕ್ಸಿ, ಏರ್ ಪೋರ್ಟ್ ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್, ಕಾರ್ಪೋರೇಟ್ ವಾಹನಗಳು, ಸ್ಕೂಲ್ ಬಸ್ ಚಾಲಕರು, ಫ್ಯಾಕ್ಟರಿ ವಾಹನ, ಸ್ಟೇಜ್ ಗ್ಯಾರೇಜ್ ಬಸ್‌ಗಳು ಇರುವುದಿಲ್ಲ. ಭಾನುವಾರ ಮಧ್ಯರಾತ್ರಿಯಿಂದಲೇ ಬೆಂಗಳೂರು ಬಂದ್ ಇರಲಿದೆ ಎಂದು ತಿಳಿಸಿದೆ. ಇದನ್ನೂ ಓದಿ: One Nation, One Election – ಮಾಜಿ ರಾಷ್ಟ್ರಪತಿ ಕೋವಿಂದ್‌ ನೇತೃತ್ವದಲ್ಲಿ ಸಮಿತಿ ರಚನೆ

    ಖಾಸಗಿ ಸಾರಿಗೆ ಬೇಡಿಕೆಗಳೇನು?
    * ಚಾಲಕರಿಗೆ 10 ಸಾವಿರ ಮಾಸಿಕ ಪರಿಹಾರ ಧನ
    * ಬೈಕ್, ರ್ಯಾಪಿಡ್ ಟ್ಯಾಕ್ಸಿಗಳ ಸಂಪೂರ್ಣ ನಿಷೇಧ
    * ಅಸಂಘಟಿತ ವಾಣಿಜ್ಯ ಚಾಲಕರ ಮತ್ತು ಸಾರಿಗೆ ಅಭಿವೃದ್ಧಿ ನಿಗಮ ಸ್ಥಾಪನೆ
    * ಸೌಲಭ್ಯ ಯೋಜನೆಯಡಿ ಆಟೋ, ಟ್ಯಾಕ್ಸಿ ಚಾಲಕರಿಗೆ ಕಡಿಮೆ ಬಡ್ಡಿ ಸಾಲ
    * ವೈಟ್ ಬೋರ್ಡ್ ವಾಹನದಲ್ಲಿ ಬಾಡಿಗೆ ಮಾಡುವುದಕ್ಕೆ ಬ್ರೇಕ್ ಹಾಕಬೇಕು
    * ಚಾಲಕರ ಮಕ್ಕಳಿಗೆ ವಿದ್ಯಾರ್ಥಿ ವೇತನ
    * ಓಲಾ, ಊಬರ್ ಆ್ಯಪ್ ಆಧಾರಿತ ಸೇವೆಗಳ ನಿರ್ಬಂಧ
    * ಖಾಸಗಿ ಬಸ್‌ಗಳಿಗೂ ಶಕ್ತಿ ಯೋಜನೆ ಅಡಿ ಸೇವೆಗೆ ಅವಕಾಶ
    * ಖಾಸಗಿ ವಾಹನಗಳನ್ನು ಕಿ.ಮೀ ಆಧಾರದಲ್ಲಿ ಸರ್ಕಾರ ಬಾಡಿಗೆಗೆ ಪಡೆಯುವುದು
    * ನಿಯಮ ಬಾಹಿರವಾಗಿ ವಾಹನ ವಶಕ್ಕೆ ಪಡೆಯುವ ಫೈನಾನ್ಸ್ ಕಂಪನಿಗಳ ವಿರುದ್ಧ ಕ್ರಮ ಇದನ್ನೂ ಓದಿ: ಜಿಡಿಪಿ ಬೆಳವಣಿಗೆಯಲ್ಲಿ ಮೊದಲ ಸ್ಥಾನದಲ್ಲೇ ಮುಂದುವರಿದ ಭಾರತ – ಯಾವ ದೇಶದ್ದು ಎಷ್ಟು?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜ.22 ರಂದು ಮುಸ್ಲಿಂ ಸಂಘಟನೆಗಳಿಂದ ಬೆಂಗಳೂರು ಬಂದ್‌ – ಬೇಡಿಕೆಗಳು ಏನು?

    ಜ.22 ರಂದು ಮುಸ್ಲಿಂ ಸಂಘಟನೆಗಳಿಂದ ಬೆಂಗಳೂರು ಬಂದ್‌ – ಬೇಡಿಕೆಗಳು ಏನು?

    ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಮುಸ್ಲಿಂ ಸಂಘಟನೆಗಳ ಒಕ್ಕೂಟ ಜ.22 ರಂದು ಶಾಂತಿಯುತ ಬೆಂಗಳೂರು ಬಂದ್‌ಗೆ ಕರೆ ನೀಡಿವೆ.

    ಈ ಬಂದ್‌ಗೆ 22 ಕ್ಕೂ ಹೆಚ್ಚು ಮುಸ್ಲಿಂ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಬಂದ್ ಬಗ್ಗೆ ಕರ್ನಾಟಕ ಮುಸ್ಲಿಂ ಸಂಘಟನೆಗಳ ಒಕ್ಕೂಟಗಳ ಸಮನ್ವಯಕಾರ ಮಸೂದ್ ಅಬ್ದುಲ್ ಖಾದರ್ ಪ್ರತಿಕ್ರಿಯಿಸಿ, ಈ ಬಂದ್ ಶಾಂತಿಯುತವಾಗಿ ಇರಲಿದೆ. ಯಾವುದೇ ರೀತಿ ಗುಂಪು ಮಾಡಿ ಪ್ರತಿಭಟನೆ ಇರುವುದಿಲ್ಲ. ‌ ಸ್ವಯಂಪ್ರೇರಿತವಾಗಿ ಬೆಂಗಳೂರಿನಲ್ಲಿ ಇರುವ ಮುಸ್ಲಿಮರು ಶುಕ್ರವಾರ ಉದ್ಯಮಗಳನ್ನು ಬಂದ್‌ ಮಾಡಿ ಮನೆಯಲ್ಲಿರಬೇಕು. ಬೆಳಗ್ಗೆಯಿಂದ ಸಂಜೆ 5 ಗಂಟೆಯವರೆಗೂ ಮುಸ್ಲಿಮರ ಎಲ್ಲಾ ಅಂಗಡಿಗಳು ಬಂದ್‌ ಆಗಲಿದೆ ಎಂದು ತಿಳಿಸಿದರು.

    ಬೇಡಿಕೆಗಳು ಏನು?
    – ದೇವರಜೀವನಹಳ್ಳಿ(ಡಿಜೆಹಳ್ಳಿ) ಮತ್ತು ಕಾಡುಗೊಂಡನ ಹಳ್ಳಿ(ಕೆಜಿ ಹಳ್ಳಿ) ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಸಂಬಂಧ ಬಂಧನಕ್ಕೆ ಒಳಗಾಗಿರುವ ಅಮಾಯಕರನ್ನು ಕೂಡಲೇ ಬಿಡುಗಡೆ ಮಾಡಬೇಕು.

    – ಲವ್ ಜಿಹಾದ್ ವಿರುದ್ಧ ಮತ್ತು ಕೃಷಿ ವಿರೋಧಿ‌ ಕಾಯ್ದೆಗಳನ್ನು ರದ್ದುಗೊಳಿಸಬೇಕು.

    – ಈಗಾಗಲೇ ಕೆಜೆಹಳ್ಳಿ ಮತ್ತು ಡಿಜೆಹಳ್ಳಿ ಕೇಸ್ ಸಂಬಂಧ ಎಸ್‌ಡಿಪಿಐ ಮುಖಂಡ ಮುಜಾಮ್ಮಿಲ್ ಪಾಷಾ ಸೇರಿದಂತೆ 421 ಜನರನ್ನ ಬಂಧಿಸಲಾಗಿದ್ದು ಬಿಡುಗಡೆ ಮಾಡುವಂತೆ ಒತ್ತಾಯ.

    – ಗೋ ಹತ್ಯೆ ಕಾಯ್ದೆಯನ್ನು ವಾಪಸ್‌ ಪಡೆಯಬೇಕು.

  • ಫೆಬ್ರವರಿ 04 ಬೆಂಗಳೂರು ಬಂದ್ ಇಲ್ಲ: ವಾಟಾಳ್ ನಾಗರಾಜ್

    ಫೆಬ್ರವರಿ 04 ಬೆಂಗಳೂರು ಬಂದ್ ಇಲ್ಲ: ವಾಟಾಳ್ ನಾಗರಾಜ್

    ಬೆಂಗಳೂರು: ಫೆ.4 ರಂದು ಬೆಂಗಳೂರು ಬಂದ್‍ಗೆ ಹೈಕೋರ್ಟ್ ತಡೆ ಹಿನ್ನೆಲೆ ಬೆಂಗಳೂರು ಬಂದ್ ನಡೆಸುವುದಿಲ್ಲ. ಆದರೆ ಮಹದಾಯಿಗಾಗಿ ನಮ್ಮ ಹೋರಾಟ ಮುಂದುವರೆಯಲಿದ್ದು, ಮೋದಿ ರಾಜ್ಯಕ್ಕೆ ಬರುವ ದಿನವನ್ನು ಕರಾಳ ದಿನವಾಗಿ ಆಚರಣೆ ಮಾಡುವುದಾಗಿ ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

    ಅಸಮರ್ಪಕ ಬಂದ್ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಬಂದ್ ಗೆ ತಡೆ ನೀಡಿತ್ತು. ಈ ಕುರಿತು ನಗರದ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಬಂದ್ ನಡೆಸದಿರುವ ಕುರಿತು ಮಾಹಿತಿ ನೀಡಿದರು. ಕಳೆದ ಮೂರು ವರ್ಷಗಳಿಂದ ಮಹದಾಯಿ ಹೋರಾಟ ನಡೆಸಲಾಗುತ್ತಿದೆ. ಈ ಕುರಿತು ಪ್ರಧಾನಿಗಳ ಗಮನ ಸೆಳೆಯಲು ಫೆಬ್ರವರಿ 4 ರಂದು ಬಂದ್ ಗೆ ಕರೆ ನೀಡಲಾಗಿತ್ತು ಎಂದರು.

    ನನ್ನ ವಿರುದ್ಧ ಅಪಪ್ರಚಾರ: ನಮ್ಮ ಬಂದ್ ಕನ್ನಡದ ನಾಡು ನುಡಿಗಾಗಿ ಮಾಡುತ್ತಿದ್ದೇವೆ, ವಿನಃ ಯಾವುದೇ ಪಕ್ಷದ ಹಿತಾಸಕ್ತಿಯಿಂದ ಅಲ್ಲ. ನನ್ನ ಹೋರಾಟ ಜೀವನದಲ್ಲಿ ಇದೇ ಮೊದಲ ಬಾರಿಗೆ ಒಬ್ಬ ವ್ಯಕ್ತಿಯ ಬಗ್ಗೆ ಕೂತು ಮಾತನಾಡುವ ಸ್ಥಿತಿ ಎದುರಾಗಿದೆ. ನ್ಯಾಯಾಲಯದಲ್ಲಿ ನನ್ನ ವಿರುದ್ಧ ಅರ್ಜಿ ಸಲ್ಲಿಸಲಾಗಿದ್ದು, ಈ ಕುರಿತು ನನಗೆ ಕೋರ್ಟ್ ನಿಂದ ನೋಟಿಸ್ ಜಾರಿಯಾಗಿದೆ. ಬಂದ್ ಗೆ ಕರೆ ನೀಡಿದ್ದು ಕನ್ನಡ ಚಳುವಳಿ ವಾಟಾಳ್ ಪಕ್ಷ ಅಲ್ಲ, ಕನ್ನಡ ಒಕ್ಕೂಟಗಳು ಆದರೆ ನನ್ನ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.

    ನ್ಯಾಯಾಲಯದ ತೀರ್ಪನ್ನು ನಾವು ಗೌರವಿಸುತ್ತೇವೆ. ಆದರೆ ಈ ವೇಳೆ ನನಗೆ ತಂದೆ ತಾಯಿ ಸಾವನ್ನಪ್ಪಿದ ವೇಳೆ ಉಂಟಾಗುತ್ತಿರುವ ನೋವು ಆಗುತ್ತಿದೆ. ಅದ್ದರಿಂದ ನಾವು ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಬಂದ್ ರದ್ದು ಮಾಡುತ್ತಿದ್ದೇವೆ. ಆದರೆ ಭಾನುವಾರ ಕರಾಳ ದಿನವಾಗಿ ಆಚರಣೆ ಮಾಡುತ್ತೇವೆ. ಫ್ರೀಡಂ ಪಾರ್ಕ್ ನಿಂದ ಮೋದಿ ಅವರ ಸಭೆಗೆ ಜಾಥ ನಡೆಸಿ ಪ್ರಧಾನಿಗಳಿಗೆ ಮನವಿ ಸಲ್ಲಿಸುತ್ತೇವೆ ಎಂದರು.

    ಬಂದ್ ಸಂವಿಧಾನ ವಿರೋಧಿ ಎಂದು ತೀರ್ಪು ನೀಡಿದ ನ್ಯಾಯಾಲಯದ ತೀರ್ಪಿನ ವಿರುದ್ಧ ಮೂಲಭೂತ ಹಕ್ಕಿಗಾಗಿ ಹೋರಾಟ ನಡೆಸುವುದಾಗಿ ತಿಳಿಸಿದರು. ನಮ್ಮ ದೇಹದಲ್ಲಿ ಒಂದು ತೊಟ್ಟು ರಕ್ತ ಇರುವರೆಗೂ ರಾಜ್ಯಕ್ಕಾಗಿ ಹೋರಾಟ ಮಾಡುತ್ತೇವೆ. 25 ರ ಬಂದ್ ರಾಜ್ಯದ ಜನರ ಕಣ್ಣು ತೆರೆಸಿದೆ ಅಂತಾ ಅಂದ್ರು.

    ಬಿಜೆಪಿ ನಾಯಕರ ವಿರುದ್ಧ ಆಕ್ರೋಶ: ಈ ವೇಳೆ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ ಅವರು, ಬಿಜೆಪಿಯವರು ನಾಲಿಗೆ ಬಿಗಿ ಹಿಡಿದುಕೊಂಡು ಮಾತನಾಡಬೇಕಿದೆ. ನಮ್ಮನ್ನು ಕಾಂಗ್ರೆಸ್ ಏಜೆಂಟರು ಎನ್ನುವ ರೀತಿ ಮಾತನಾಡುತ್ತಾರೆ. ಮೈಸೂರನಲ್ಲಿ ಅಮೀತ್ ಶಾ ಅವರು ಮಹಾದಾಯಿ ಬಗ್ಗೆ ಯಾಕೆ ಏನು ಮಾತಾನಾಡಿಲ್ಲ ಎಂದು ಬಿಜೆಪಿ ನಾಯಕರನ್ನು ಪ್ರಶ್ನಿಸಿದರು. ಕರ್ನಾಟಕ ರಾಜ್ಯದ ಬಿಜೆಪಿ ನಾಯಕರು ಯಾರ ಪರ ಇದ್ದೀರಾ. ಸಂಸತ್ ನಲ್ಲಿ ರಾಜ್ಯದ ಬಿಜೆಪಿ ಸಂಸದರು ಒಮ್ಮೆಯೂ ಮಹದಾಯಿ ಬಗ್ಗೆ ಮಾತಾಡಿಲ್ಲ. ಪ್ರಧಾನ ಮಂತ್ರಿಯರವರ ಗಮನ ಸೆಳೆಯಲು 25 ಕ್ಕೆ ಬಂದ್ ಮಾಡಿದ್ದು, ಫೆಬ್ರವರಿ 4 ಕ್ಕೆ ಪ್ರಧಾನಿ ಬೆಂಗಳೂರಿಗೆ ಬರುತ್ತಿದ್ದಾರೆ. ಅವರ ಗಮನ ಸೆಳೆಯಲು ನಮ್ಮ ಹೋರಾಟ ಮುಂದುವರೆಯುತ್ತದೆ. ನಾವು ಮೋದಿ ಅವರ ವಿರುದ್ಧ ಪ್ರತಿಭಟನೆ ನಡೆಸುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

  • ಬೆಂಗಳೂರು ಬಂದ್: ಬಿಜೆಪಿಗೆ ವಾಟಾಳ್ ನಾಗರಾಜ್ ಡೆಡ್‍ಲೈನ್

    ಬೆಂಗಳೂರು ಬಂದ್: ಬಿಜೆಪಿಗೆ ವಾಟಾಳ್ ನಾಗರಾಜ್ ಡೆಡ್‍ಲೈನ್

    ಬೆಂಗಳೂರು: ಮಹದಾಯಿ ಸಮಸ್ಯೆಯನ್ನು ಪ್ರಧಾನಿ ನರೇಂದ್ರ ಮೋದಿ ಬಗೆ ಹರಿಸುವ ಭರವಸೆಯನ್ನು ನೀಡದೇ ಇದ್ದರೆ ಫೆ.4 ರಂದು ಬೆಂಗಳೂರು ಬಂದ್ ನಡೆಸಲಾಗುವುದು ಎಂದು ವಾಟಾಳ್ ನಾಗರಾಜ್ ರಾಜ್ಯ ಬಿಜೆಪಿಗೆ ಡೆಡ್‍ಲೈನ್ ನೀಡಿದ್ದಾರೆ.

    ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾವು ಜನವರಿ 25ರಂದು ಸ್ವಯಂ ಪ್ರೇರಿತವಾಗಿ ಕರ್ನಾಟಕ ಬಂದ್ ನಡೆಸಿದ್ದೇವೆ. ಇದಕ್ಕೆ ಯಾವ ಸರ್ಕಾರ ಕೂಡ ಬೆಂಬಲ ನೀಡಿರಲಿಲ್ಲ. ಆದರೆ ಬಿಜೆಪಿ ನಾಯಕರು ನಮ್ಮ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಅವರ ನಾಲಗೆ ಸರಿ ಇಲ್ಲ. ಹಾದಿಬೀದಿಯಲ್ಲಿ ಮಾತನಾಡುವುದನ್ನು ಬಿಟ್ಟು ಪ್ರಧಾನ ಮಂತ್ರಿ ಬಳಿ ಮಾತನಾಡಿ ಸಮಸ್ಯೆ ಬಗೆಹರಿಸಿ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.

    ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಫೆ. 4ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಬರುತ್ತಿದ್ದಾರೆ. ಹೀಗಾಗಿ 3ನೇ ತಾರೀಖಿನ ಒಳಗಡೆ ಮಹದಾಯಿ ನೀರಿನ ಸಮಸ್ಯೆಯನ್ನು ನಾನು ಬಗೆಹರಿಸುತ್ತೇನೆ ಎಂದು ಭರವಸೆ ಕೊಡಿಸಿ. ಇಲ್ಲದೇ ಇದ್ದರೆ 4ರಂದು ಬೆಂಗಳೂರು ಬಂದ್ ಮಾಡಬೇಕಾಗುತ್ತದೆ. ನಮಗೆ ಸ್ಪಷ್ಟವಾದ ಭರವಸೆ ಕೊಡಿಸಬೇಕು. ಶನಿವಾರ ಮಧ್ಯಾಹ್ನದ ತನಕ ಕಾಯುತ್ತೇವೆ. ಮಧ್ಯಾಹ್ನದ ಒಳಗಡೆ ಭರವಸೆ ಸಿಗದೇ ಹೋದರೆ ಬಂದ್ ಗೆ ಕರೆ ನೀಡಬೇಕಾಗುತ್ತದೆ ಎಂದು ವಾಟಾಳ್ ನಾಗರಾಜ್ ಡೆಡ್‍ಲೈನ್ ನೀಡಿದ್ದಾರೆ,

    ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಮಾತನಾಡಿ ಪ್ರಧಾನಮಂತ್ರಿಯವರಿಗೆ ಪತ್ರ ಬರೆಯುವಂತೆ ಮನವಿ ಮಾಡುತ್ತೇವೆ ಎಂದು ವಾಟಾಳ್ ನಾಗರಾಜ್ ತಿಳಿಸಿದ್ದಾರೆ.