ಬೆಂಗಳೂರು: ನಗರದಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್‌ನಲ್ಲಿ (Cabinet) ಇಂದು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಬೆಂಗಳೂರಿಗೆ (Bengaluru) ಒಟ್ಟು 2,296 ಕೋಟಿ ಅನುದಾನಕ್ಕೆ ಒಪ್ಪಿಗೆ ಸಿಕ್ಕಿದೆ. ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಅನುದಾನ ಒದಗಿಸಲು ಕ್ಯಾಬಿನೆಟ್ ಒಪ್ಪಿಗೆ ನೀಡಿದೆ.
ಸಿಎಂ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದಲ್ಲಿಂದು ನಡೆದ ಸಚಿವ ಸಂಪುಟ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಅನುದಾನ ಬಿಡುಗಡೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿರುವ 5 ನಗರ ಪಾಲಿಕೆಗಳಲ್ಲಿನ ವಾರ್ಡ್‌ಗಳಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗಾಗಿ ಒಟ್ಟು 2,296 ಕೋಟಿ ಮಂಜೂರಿಗೆ ಅನುಮೋದನೆ ನೀಡಿದೆ. ಇದನ್ನೂ ಓದಿ: ಚಡ್ಡಿ ಹಾಕುತ್ತಿದ್ದಾಗ ಇದ್ದ RSS ಬಿಜೆಪಿ ಪುಡಾರಿಗಳು ಬಂದ ಮೇಲೆ ಬದಲಾವಣೆ ಆಗಿದೆ: ಬೇಳೂರು ಗೋಪಾಲಕೃಷ್ಣ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ 5 ಬೆಂಗಳೂರು ನಗರ ಪಾಲಿಕೆಗಳ ವ್ಯಾಪ್ತಿಯ ವಾರ್ಡ್ ಅಭಿವೃದ್ಧಿ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಅನುಮೋದನೆ ಸಿಕ್ಕಿದ್ದು, 1,055 ಕೋಟಿ ರೂ. ಮೊತ್ತದಲ್ಲಿ ಕಾಮಗಾರಿಗಳನ್ನ ಕೈಗೊಳ್ಳುವ ಕ್ರಿಯಾಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ.
– ಎಸ್ಸಿ, ಎಸ್ಟಿ ಸಮುದಾಯದ ಜನರಿಗೆ ವಿಶೇಷ ನಿಧಿ ಸ್ಥಾಪನೆ
– ಜನನ ಮರಣ ನೊಂದಣಿ ತಿದ್ದುಪಡಿಗೆ ಸಂಪುಟ ಒಪ್ಪಿಗೆ
ಬೆಂಗಳೂರು: ಅಲ್ಪಸಂಖ್ಯಾತ ಶಿಕ್ಷಣ ಕಾಯ್ದೆ ತಿದ್ದುಪಡಿಗೆ ಒಪ್ಪಿಗೆ, ಬೆಂಗಳೂರು ಅಭಿವೃದ್ಧಿಗೆ ಅನುದಾನ ಬಿಡುಗಡೆ, ಸಂಪನ್ಮೂಲ ಕ್ರೋಢೀಕರಣಕ್ಕೆ ಒನ್ ಟೈಮ್ ಸೆಟಲ್ ಮೆಂಟ್ ಯೋಜನೆ ಜಾರಿಗೆ ತರುವುದು ಸೇರಿದಂತೆ ಹಲವು ಮಹತ್ವದ ಯೋಜನೆಗಳಿಗೆ ಇಂದಿನ ಸಂಪುಟ ಸಭೆಯಲ್ಲಿ (Cabinet Meeting) ಒಪ್ಪಿಗೆ ನೀಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಒಟ್ಟು 20 ವಿಷಯಗಳ ಕುರಿತು ಚರ್ಚಿಸಿ ಅನುಮೋದನೆ ನೀಡಲಾಗಿದೆ. ಆದ್ರೆ ಮೆಟ್ರೋ 2ನೇ ಹಂತದ ಕಾಮಗಾರಿಯ ಹೆಚ್ಚುವರಿ ಕ್ರಿಯಾ ಯೋಜನೆಗೆ ಹಣ ಬಿಡುಗಡೆ ಸಂಬಂಧ ಇಂದಿನ ಸಭೆಯಲ್ಲಿ ಯಾವುದೇ ತೀರ್ಮಾನ ಆಗಿಲ್ಲ. ಕೆಲವು ತಾಂತ್ರಿಕ ಕಾರಣಗಳಿಗೆ ಇದಕ್ಕೆ ಒಪ್ಪಿಗೆ ನೀಡುವುದನ್ನು ಮುಂದೂಡಲಾಗಿದೆ. ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಮುಖ್ಯಾಂಶಗಳು ಈ ಕೆಳಗಿನಂತಿವೆ. ಇದನ್ನೂ ಓದಿ: ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಮಾನ್ಯತೆ ನಿಯಮ ಸಡಿಲ – ಶೇ.25ರಷ್ಟು ವಿದ್ಯಾರ್ಥಿಗಳಿದ್ದರೂ ಮಾನ್ಯತೆ!
ಬಿಬಿಎಂಪಿ (BBMP) ವ್ಯಾಪ್ತಿಯ ಉಪಮುಖ್ಯರಸ್ತೆಗಳ ಅಭಿವೃದ್ಧಿಗೆ ಸಂಪುಟ ತೀರ್ಮಾನಿಸಿದೆ. 1,681 ಕಿ.ಮೀ ರಸ್ತೆಗಳ ಅಭಿವೃದ್ಧಿಗೆ ರಸ್ತೆ ಡಾಂಬರೀಕರಣಕ್ಕೆ 694 ಕೋಟಿ ರೂ. ಅನುದಾನ ಬಿಡುಗಡೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಖನಿಜಗಳನ್ನ ಹೊಂದಿರುವ ಭೂಮಿಗೆ ತೆರಿಗೆಯನ್ನ ಹಾಕಲು ಸರ್ಕಾರದ ನಿರ್ಧಾರ ಮಾಡಿದೆ. ಒಂದು ಟನ್‌ಗೆ 100 ರೂನಂತೆ ರಾಯಲ್ಟಿ ಹಾಕಲಿದ್ದು, ಈ ತೆರಿಗೆಯನ್ನ ಭೂಮಾಲಿಕರು ಕಟ್ಟಬೇಕಿದೆ. ಅಲ್ಲದೇ ಕೆಕೆಆರ್‌ಡಿಬಿಯಿಂದ ರಸ್ತೆಗಳ ಅಭಿವೃದ್ಧಿ, ಇಜೇರಿಯಿಂದ ಯಡ್ರಾಮಿ ವರೆಗೆ ರಸ್ತೆ ಅಭಿವೃದ್ಧಿಗೆ 25 ಕೋಟಿ ರೂ. ಅಂದಾಜು ವೆಚ್ಚಕ್ಕೆ ಸಂಪುಟ ಒಪ್ಪಿಗೆ. ನೀಡಲಾಗಿದೆ. ಅಲ್ಲದೇ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಸತಿ ಶಾಲೆಗಳಿಗೆ ಕೆಕೆಆರ್‌ಡಿಬಿಯಿಂದ 42.66 ಕೋಟಿ ರೂ. ವೆಚ್ಚದಲ್ಲಿ ಹಾಸಿಗೆ, ಮಂಚ ಖರೀದಿಸಲು ಅನುಮತಿ ನೀಡಲಾಗಿದೆ.
ಜನನ ಮರಣ ನೊಂದಣಿ ತಿದ್ದುಪಡಿಗೆ ಒಪ್ಪಿಗೆ ನೀಡಲಾಗಿದೆ. ಜೊತೆಗೆ ಹೊಸಕೋಟೆ ತಾಲೂಕಿನ ಕೊರಳೂರು ಗ್ರಾಮದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಒಪ್ಪಿಗೆ ಸೂಚಿಸಲಾಗಿದೆ. ಇದಕ್ಕಾಗಿ 97.27 ಕೋಟಿ ವೆಚ್ಚಕ್ಕೆ ಹೆಚ್ಚುವರಿ 54 ಕೋಟಿ ರೂ. ಸೇರ್ಪಡೆಗೆ ಸಮ್ಮತಿಸಲಾಗಿದೆ. ಬೆಂಗಳೂರಿನ ಸಂಪಂಗಿ ರಾಮನಗರದಲ್ಲಿ ಸಮಾಜ ಕಲ್ಯಾಣ ಭವನ ನಿರ್ಮಾಣಕ್ಕೆ 40.50 ಕೋಟಿ ರೂ. ಅನುದಾನಕ್ಕೆ ಸಮ್ಮತಿ ಸೂಚಿಸಲಾಗಿದೆ. ಸಮಾಜಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರ ನೀಡಲು 43.95 ಕೋಟಿ ರೂ. ಅನುದಾನ ಒದಗಿಸಲು ತೀರ್ಮಾನ. ಇದರೊಂದಿಗೆ ಆಹಾರ ಗುಣಮಟ್ಟ ಹಾಗೂ ಔಷಧ ನಿಯಂತ್ರಣ ಇಲಾಖೆ ವಿಲೀನಗೊಳಿಸಲು ಸಂಪುಟ ಒಪ್ಪಿಗೆ ಸೂಚಿಸಿದೆ.
ಎಸ್ಸಿ, ಎಸ್ಟಿ ಸಮುದಾಯದ ಜನರಿಗೆ ವಿಶೇಷ ನಿಧಿ ಸ್ಥಾಪನೆ:
ಸಂಪುಟದಲ್ಲಿ ಎಸ್ಸಿ, ಎಸ್ಟಿ ಸಮುದಾಯದ ಜನರಿಗೆ ವಿಶೇಷ ನಿಧಿ ಸ್ಥಾಪನೆ ಮಾಡಲಾಗಿದೆ. 33 ವಿರಳ ದುಬಾರಿ ಕಾಯಿಲೆಗಳಿಗೆ 3,4 ಲಕ್ಷ ರೂ. ವೆರೆಗೂ ಚಿಕಿತ್ಸೆ ನೀಡುವ ಯೋಜನೆಗೆ ಒಪ್ಪಿಗೆ ಸೂಚಿಸಲಾಗಿದೆ. SCSP, TSP ಹಣವನ್ನೂ ಇದಕ್ಕೆ ಬಳಕೆ ಮಾಡಲಾಗುತ್ತದೆ. ಪ್ರಸ್ತುತ 47 ಕೋಟಿ ರೂ. ಅನುದಾನ ಮೀಸಲಿಡಲಾಗುತ್ತದೆ ಎಂದು ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ. ಇದನ್ನೂ ಓದಿ: ಸಂಪನ್ಮೂಲ ಕ್ರೋಢೀಕರಣಕ್ಕೆ ಹೊಸ ದಾರಿ – 6,105 ಕೋಟಿ ದಂಡ ಸಂಗ್ರಹಕ್ಕೆ ಒನ್‌ಟೈಮ್ ಸೆಟಲ್ಮೆಂಟ್ ಆಫರ್!
ಬಾಣಂತಿಯರ ಸಾವಿನ ಬಗ್ಗೆ ಕಳವಳ:
ಇನ್ನೂ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸರಣಿ ಸಾವಿನ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು. ಈ ವೇಳೆ ಸಿಎಂ ಕಳವಳ ವ್ಯಕ್ತಪಡಿಸಿದರು. ಸಚಿವ ದಿನೇಶ್ ಗುಂಡೂರಾವ್ ಈ ಕುರಿತು ಸಭೆಗೆ ಮಾಹಿತಿ ನೀಡಿದರು. ಬಳಿಕ ಇದರ ಬಗ್ಗೆ ಜಾಗೃತರಾಗಿರಬೇಕು ಎಂದು ಸಚಿವರಿಗೆ ಸೂಚಿಸಲಾಯಿತು. ಇದನ್ನೂ ಓದಿ: ಗುರುಪ್ರಸಾದ್‌ಗೆ ಕೋಟಿಗಟ್ಟಲೇ ಸಾಲ, ರಮ್ಮಿ ಗೀಳು, ಖಿನ್ನತೆ ಇತ್ತಾ?: ಪತ್ನಿ ಸುಮಿತ್ರಾ ಸ್ಪಷ್ಟನೆ
– ಕಳೆದ 100 ವರ್ಷಗಳಲ್ಲಿ ಬೆಂಗಳೂರಿಗೆ 3ನೇ ಅತಿ ದೊಡ್ಡ ಮಳೆ
ಬೆಂಗಳೂರು: ರಾಜ್ಯದಲ್ಲಿ ಈ ತಿಂಗಳ ಮೊದಲ 25 ದಿನ ವಾಡಿಕೆಗಿಂತ ಶೇ.58ರಷ್ಟು ಹೆಚ್ಚು ಮಳೆಯಾಗಿದೆ. 116 ಎಂಎಂ ಮಳೆ ಆಗಬೇಕಿದ್ದ ಕಡೆ 181 ಮಿಲಿಮೀಟರ್ ಮಳೆ ಬಿದ್ದಿದೆ. ಬೆಂಗಳೂರಲ್ಲಿ 275 ಮಿಲಿಮೀಟರ್ ಮಳೆ (Bengaluru Rains) ಆಗಿದೆ. ಇದು ಶತಮಾನದಲ್ಲೇ 3ನೇ ಗರಿಷ್ಠ ಮಳೆಯಾಗಿದೆ.
ಇನ್ನೂ ರಾಜ್ಯದಲ್ಲಿ ಮಳೆಯಿಂದಾಗಿ 25 ಮಂದಿ ಸಾವನ್ನಪ್ಪಿದ್ದಾರೆ. 2,077 ಮನೆ ಹಾನಿಗೀಡಾಗಿವೆ. 1 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ಹಾನಿ ಸಂಭವಿಸಿದೆ. ಶೀಘ್ರ ಸೂಕ್ತ ಪರಿಹಾರ ನೀಡಲಾಗುತ್ತದೆ ಎಂದು ಸಿಎಂ ತಿಳಿಸಿದ್ದಾರೆ. ಇದೇ ವೇಳೆ, ಬೆಂಗಳೂರಿನ ರಾಜಕಾಲುವೆಗಳ ಅಭಿವೃದ್ಧಿಗೆ 2,000 ಕೋಟಿ ಮತ್ತು ರಸ್ತೆಗಳ ಅಭಿವೃದ್ಧಿಗೆ 5,000 ಕೋಟಿ ನೆರವು ನೀಡಲು ವಿಶ್ವಬ್ಯಾಂಕ್ ಒಪ್ಪಿದೆ. ಮತ್ತೆ ಗುಂಡಿ ಮುಚ್ತೇವೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ. ಅಂದ ಹಾಗೇ, ನವೆಂಬರ್, ಡಿಸೆಂಬರ್‌ನಲ್ಲಿಯೂ ಹೆಚ್ಚು ಮಳೆ ಆಗುವ ನಿರೀಕ್ಷೆ ಇದ್ದು, ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಡಿಸಿಗಳಿಗೆ ಸಿಎಂ ಸೂಚಿಸಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವರಿಗೆ ಕಾಂಗ್ರೆಸ್ ನಾಯಕಿ ಹನಿಟ್ರ್ಯಾಪ್; 20 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಮಹಿಳೆ ಪೊಲೀಸರಿಗೆ ಲಾಕ್
ಬೆಂಗಳೂರಿನಲ್ಲಿ ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ (Siddaramaiah), ಬೆಂಗಳೂರು ನಗರದ ಮಳೆಹಾನಿ ಬಗ್ಗೆ ಪರಿಶೀಲನೆ ಮಾಡಿದ್ದೇವೆ. ಬೆಂಗಳೂರಲ್ಲಿ ಅತಿ ಹೆಚ್ಚು ಮಳೆ ಆಗಿದೆ. ಸುಮಾರು 275 ಮಿಲಿ ಮೀಟರ್ ಮಳೆ, ನೂರು ವರ್ಷಗಳಲ್ಲಿ 3ನೇ ಅತಿ ಹೆಚ್ಚು ಮಳೆಯಾಗಿದೆ. ಪ್ರತಿ ಸಲ ಹೆಚ್ಚು ಮಳೆ ಬಂದಾಗ, ಪ್ರವಾಹ ಬಂದಾಗ ಹಾನಿ ಆಗುತ್ತಿದೆ. ಹಿಂದೆ ಸಿಎಂ ಆಗಿದ್ದಾಗ ರಾಜಕಾಲುವೆಗಳನ್ನ ಒತ್ತುವರಿ ತೆರವಿಗೆ ಸೂಚಿಸಿದ್ದೆ. 450 ಕಿಮೀ ರಾಜಕಾಲುವೆ ಅಭಿವೃದ್ಧಿ ಆಗಿತ್ತು, 173 ಕಿಮೀ ಉಳಿದುಕೊಂಡಿದೆ, ಅಲ್ಲದೇ 80 ಕಿಮೀ ಉಳಿದ ಕಾಲುವೆಗಳನ್ನ ಸರಿಪಡಿಸಬೇಕಿದೆ. ವಿಶ್ವಬ್ಯಾಂಕ್ 7,000 ಕೋಟಿ ರೂ. ಸಾಲ ನೀಡಲು ಒಪ್ಪಿದೆ. 3-4 ತಿಂಗಳಲ್ಲಿ ಅಂತಿಮವಾಗುತ್ತೆ ಎಂದು ಸಿಎಂ ಹೇಳಿದ್ದಾರೆ.
ಮುಂದುವರಿದು, ಕೆರೆಗಳ ಒತ್ತುವರಿ ತೆರವುಗೊಳಿಸಲು ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗಡುವು ವಿಧಿಸಲಾಗಿತ್ತು. ಕೆರೆಗಳ ಒತ್ತುವರಿ ತೆರವುಗೊಳಿಸುವುದು, ಬಳಿಕ ಕೆರೆಗಳ ಹೂಳೆತ್ತುವುದು ಸೇರಿದಂತೆ ಅಭಿವೃದ್ಧಿ ಕಾರ್ಯಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು. ಉದ್ಯೋಗ ಖಾತ್ರಿ ಯೋಜನೆಯನ್ನು ಸಹ ಇದಕ್ಕೆ ಸಮರ್ಪಕವಾಗಿ ಬಳಸಿಕೊಳ್ಳಬೇಕೆಂದು ಸೂಚನೆ ನೀಡಿದ್ದೇವೆ. ಹೆಚ್ಚುವರಿ ಬಿತ್ತನೆಗೆ ರೈತರಿಂದ ಬಿತ್ತನೆ ಬೀಜಕ್ಕೆ ಬೇಡಿಕೆ ಬಂದರೆ ಅದನ್ನು ಒದಗಿಸಲು ಕ್ರಮ ಕೈಗೊಳ್ಳಲು ಸೂಚಿಸಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಯಾರನ್ನೂ ರಾಜಕೀಯವಾಗಿ ಬೆಳೆಸಿಲ್ಲ – ಸಿಪಿವೈ
ರೈತರಿಗೆ ಪರ್ಯಾಯ ಬೆಳೆ ಬೆಳೆಸಲು ಬಿತ್ತನೆ ಬೀಜ ಲಭ್ಯವಿದೆ. ಬಿತ್ತನೆ ಬೀಜ ಮತ್ತು ಗೊಬ್ಬರ ಸಾಕಷ್ಟು ಪ್ರಮಾಣದಲ್ಲಿರುವಂತೆ ನೋಡಿಕೊಳ್ಳಬೇಕು ಸೂಚಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಪತ್ರ ಬರೆದಿದ್ದೇನೆ, ಪ್ರವಾಹ ಸ್ಥಳ, ಮಳೆಹಾನಿ ಸ್ಥಳಕ್ಕೆ ಭೇಟಿ ನೀಡಬೇಕು ಅಂತಾ ಸೂಚಿಸಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ದೀಪಾವಳಿಗೆ ಪಟಾಕಿ ಸಿಡಿಸಲು ಸಮಯ ನಿಗದಿ – ಹಸಿರು ಪಟಾಕಿಗೆ ಮಾತ್ರ ಅವಕಾಶ ಎಂದ ಸಿಎಂ
ಬೆಂಗಳೂರು: ಅಭಿವೃದ್ಧಿ ಹೆಸರಿನಲ್ಲಿ ಬೆಂಗಳೂರಿನಲ್ಲಿ (Bengaluru Development) ಲೂಟಿ ಹೊಡೆಯುತ್ತಿದ್ದಾರೆ. ಬಿಲ್ಡರ್‌ಗಳಿಂದಲೂ (Builders) ಹಣ ಲೂಟಿ ಮಾಡುವ ಕೆಲಸ ಆಗುತ್ತಿದ್ದು, ಚದರ ಅಡಿಗೆ 100 ರೂ. ಕೊಡಬೇಕು ಅಂತ ಫಿಕ್ಸ್ ಆಗಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಜೆಡಿಎಸ್ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಈ ಹಿಂದೆ ಮಂತ್ರಿಯೊಬ್ಬರು ಪೆನ್ನು ಪೇಪರ್ ಕೊಡಿ ಅಂತ ಕೇಳಿದ್ದರು. ಪೆನ್ನು ಪೇಪರ್ ಕೊಟ್ಟರೆ ದುರ್ಬಳಕೆ ಮಾಡಿಕೊಂಡಿದ್ದಾರೆ. ಕೇವಲ ಎರಡೇ ತಿಂಗಳಲ್ಲಿ ರಾಜ್ಯದಲ್ಲಿ ಲೂಟಿ ಆಗ್ತಿದೆ. ಎರಡೇ ತಿಂಗಳಿಗೆ ಸರ್ಕಾರದ ವಿರೋಧಿ ಅಲೆ ಬಂದಿದೆ. ಈ ನಾಡಿನ ಜನತೆಯ ಬದುಕಿನ ವಿಷಯದಲ್ಲಿ ಜನತೆಯನ್ನ ದಾರಿ ತಪ್ಪಿಸಿದ್ದು ಕಾಂಗ್ರೆಸ್‌ನವರು. ಇವರದ್ದು ಸ್ವಾಭಿಮಾನ ಕಟ್ಟುವ ಗ್ಯಾರಂಟಿ ಯೋಜನೆಗಳಲ್ಲ, ನಾಡಿನ ಜನರನ್ನ ಪುನಃ ಕೈ ಒಡ್ಡಿ ನಿಲ್ಲಿಸೋ ಕೆಲಸ ಈ ಸರ್ಕಾರ ಮಾಡುತ್ತೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಉತ್ತಮ ಆರೋಗ್ಯ, ಶಿಕ್ಷಣ ಕೊಡಬೇಕು. ಇವತ್ತಿನ ದಿನ ರೈತರ ಬದುಕು ಹಾಳಾಗಿದೆ. ಮಳೆ ಆಗಿಲ್ಲ, ಬಿತ್ತನೆ ಮಾಡಿದ್ರೂ ಬೆಳೆ ಬಂದಿಲ್ಲ. ಇದು ನಮ್ಮ ರೈತನ ಸ್ಥಿತಿ. ರೈತರ ಅಭಿವೃದ್ಧಿಗೆ ಕಾರ್ಯಕ್ರಮಗಳನ್ನ ಕೊಡಬೇಕು. ಆದ್ರೆ ಅನ್ನದಾತನಿಗೆ ಈ ಸರ್ಕಾರ ಏನೂ ಕೊಡುಗೆ ಕೊಟ್ಟಿಲ್ಲ. 150ಕ್ಕೂ ಹೆಚ್ಚು ರೈತ ಕುಟುಂಬದ ಆತ್ಮಹತ್ಯೆ ಆಯ್ತು. ಒಬ್ಬ ಮಂತ್ರಿ ಹಣ ಪಡೆಯೋಕೆ ರೈತರು ಆತ್ಮಹತ್ಯೆ ಮಾಡಿಕೊಳ್ತಾರೆ ಅಂತಾರೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಭಾರತ-ಪಾಕ್ ಪಂದ್ಯಕ್ಕೆ ಕೃಪೆ ತೋರಿದ್ನಾ ವರುಣ? ರಾತ್ರಿ 7ರ ವರೆಗೂ ಮಳೆ ಮುನ್ಸೂಚನೆ ಇಲ್ಲ
ಜನರ ತೀರ್ಮಾನ ಅಚ್ಚರಿಯಾಗಿತ್ತು: ವಿಧಾನಸಭಾ ಚುನಾವಣೆ ಸಮಯದಲ್ಲಿ ನಿರಂತರವಾಗಿ ಪಕ್ಷ ಸಂಘಟನೆ ಮಾಡಿದೆ. ಸ್ವತಂತ್ರವಾಗಿ ಸರ್ಕಾರ ತರಬೇಕು ಅಂತ ಶ್ರಮ ಹಾಕಿದೆ. ಆದ್ರೆ ನಾಡಿನ ಜನರ ತೀರ್ಮಾನ ಅಚ್ಚರಿ ಫಲಿತಾಂಶ ಕೊಟ್ಟರು. ಈ ಫಲಿತಾಂಶದಿಂದ ಕಾರ್ಯಕರ್ತರು ಸಂಕಷ್ಟಕ್ಕೆ ಒಳಗಾಗಿದ್ದೀರಿ. ನಿಮ್ಮಿಂದ ಇಂದು ಮಹತ್ವದ ತೀರ್ಮಾನ ಆಗಬೇಕು. ನಾಡಿನ ಭವಿಷ್ಯದ ಬದುಕಿಗಾಗಿ ತೀರ್ಮಾನ ಆಗಬೇಕು ಕರೆ ನೀಡಿದ್ದಾರೆ.
ಇದೇ ವೇಳೆ ಅನಾರೋಗ್ಯ ಸಮಸ್ಯೆ ಬಗ್ಗೆ ಹೇಳಿಕೊಂಡ ಮಾಜಿ ಸಿಎಂ, ಕಳೆದ 10 ದಿನಗಳಿಂದ ಆರೋಗ್ಯ ಸಮಸ್ಯೆ ಆಯ್ತು. ಭಗವಂತನ ಪ್ರೇರಣೆಯಿಂದ ನಾನು ಆವತ್ತು ಆಸ್ಪತ್ರೆಗೆ ಸೇರಿದೆ. ನನ್ನ ಜೊತೆ ಇದ್ದ ಸತೀಶ್, ರಘು ನನ್ ನಿತ್ಯ ಕೆಲಸ ನೋಡ್ತಾರೆ. ಸತೀಶ್ ಆವತ್ತು ನನ್ನನ್ನ ಆಸ್ಪತ್ರೆಗೆ ಸೇರಿಸಿದ್ರು. ನಿಮ್ಮೆಲ್ಲರ ಆಶೀರ್ವಾದದಿಂದ ನಾನು ನಿಮ್ಮಮುಂದೆ ಇವತ್ತು ಮಾತಾಡುತ್ತಿದ್ದೇನೆ. ತಂದೆ-ತಾಯಿಯವರ ದೈವರ ಭಕ್ತಿಯಿಂದ ನಾನು ಇವತ್ತು ಉಳಿದಿದ್ದೇನೆ ಎಂದು ಹೇಳಿದ್ದಾರೆ.
ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಬೆಂಗಳೂರು ನಗರಾಭಿವೃದ್ಧಿಗೆ ಹಲವು ಅನುದಾನ ಪ್ರಕಟಿಸಿದ್ದಾರೆ.
ಭಾಷಣದಲ್ಲಿ ಹೇಳಿದ್ದೇನು?
ಬಜೆಟ್ ಮಂಡಿಸಿದ ಸಿಎಂ, ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನಗರಾಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿ ಪ್ರಾರಂಭಿಸಿದ ನಗರೋತ್ಥಾನ, ಇಂದಿರಾ ಕ್ಯಾಂಟೀನ್ ನಂತಹ ಹಲವಾರು ಜನಪರ ಯೋಜನೆಗಳನ್ನ ನಿರ್ಲಕ್ಷಿಸುವ ಮೂಲಕ ಹಿಂದಿನ ಸರ್ಕಾರದ ಅವಧಿಯಲ್ಲಿ ನಗರಗಳ ಅಭಿವೃದ್ಧಿಯು (Bengaluru Development) ಕುಂಠಿತಗೊಂಡಿರುತ್ತದೆ. ಅಲ್ಲದೇ, 2022-23ನೇ ಸಾಲಿಗೆ 45,000 ಕೋಟಿ ರೂ.ಗಳ ಅಪೂರ್ಣ ಕಾಮಗಾರಿಗಳ ಮತ್ತು ಬಾಕಿ ಮೊತ್ತದ ಹೊರೆಯನ್ನು ಹಿಂದಿನ ಸರ್ಕಾರ ನಮ್ಮ ಸರ್ಕಾರದ ಮೇಲೆ ಹೊರಿಸಿರುತ್ತದೆ. ಪ್ರಸ್ತುತ ಇರುವ ಆಯವ್ಯಯದ ಮಿತಿಯಲ್ಲಿ ಬಾಕಿ ಹೊರೆಯನ್ನು ತೀರಿಸಲು ಕನಿಷ್ಠ 6-8 ವರ್ಷಗಳ ಕಾಲಾವಕಾಶದ ಅಗತ್ಯತೆ ಇರುತ್ತದೆ. ಇದು ಅವರ ಅಶಿಸ್ತು ಮತ್ತು ಅವಿವೇಚನೆಗೆ ಹಿಡಿದ ಕನ್ನಡಿಯಾಗಿರುತ್ತದೆ. ಆದಾಗ್ಯೂ, ನಮ್ಮ ಸರ್ಕಾರ ನಗರಗಳ ಅಭಿವೃದ್ಧಿಗಾಗಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ.
ಬೆಂಗಳೂರು ನಗರದ ಮೂಲಸೌಕರ್ಯ ಅಭಿವೃದ್ಧಿಗಾಗಿ ಅಮೃತ ನಗರೋತ್ಥಾನ, ಹೈಡೆನ್ಸಿಟಿ ಕಾರಿಡಾರ್, ವೈಟ್ ಟಾಪಿಂಗ್ ರಸ್ತೆ, ತ್ಯಾಜ್ಯ ನಿರ್ವಹಣೆ, ರಾಜಕಾಲುವೆಗಳ ತೆರವು ಮತ್ತು ದುರಸ್ತಿ, ರಸ್ತೆ ಗುಂಡಿ ಮುಚ್ಚುವುದು ಮತ್ತಿತರ ಹಲವಾರು ಪ್ರಗತಿಯಲ್ಲಿರುವ ಯೋಜನೆಗಳಿಗೆ ಪ್ರಸ್ತುತ 12,000 ಕೋಟಿ ರೂ.ಗಳಿಗೂ ಹೆಚ್ಚು ಮೊತ್ತ ವ್ಯಯಿಸಲಾಗುತ್ತಿದೆ. ಇದಲ್ಲದೇ ಸಂಚಾರ ದಟ್ಟಣೆ ನಿವಾರಣೆಗಾಗಿ 30,000 ಕೋಟಿ ರೂ.ಗಳಿಗೂ ಹೆಚ್ಚಿನ ಅಂದಾಜು ವೆಚ್ಚದಲ್ಲಿ ನಮ್ಮ ಮೆಟ್ರೋ ಹಾಗೂ ಬೆಂಗಳೂರು ಉಪನಗರ ರೈಲು ಯೋಜನೆ ಜಾರಿಗೊಳಿಸಲಾಗುತ್ತಿದೆ. ಈ ಯೋಜನೆಗಳು ಪೂರ್ಣಗೊಳ್ಳಲು 5 ವರ್ಷಗಳ ಕಾಲಾವಕಾಶದ ಅಗತ್ಯವಿದೆ. ಇಷ್ಟು ಬೃಹತ್ ಮೊತ್ತದ ಕಾಮಗಾರಿಗಳು ಅನುಷ್ಠಾನಗೊಳ್ಳುತ್ತಿದ್ದರೂ ಹಿಂದಿನ ಸರ್ಕಾರದ ಮಿತಿ ಮೀರಿದ ಭ್ರಷ್ಟಾಚಾರ ಹಾಗೂ ಅಸಮರ್ಪಕ ನಿರ್ವಹಣೆಯ ಕಾರಣದಿಂದ ನಗರದ ಮೂಲ ಸೌಕರ್ಯಗಳಲ್ಲಿ ಗಮನಾರ್ಹ ಬದಲಾವಣೆ ಕಂಡು ಬಂದಿರುವುದಿಲ್ಲ.
ʻಬ್ರ್ಯಾಂಡ್ ಬೆಂಗಳೂರುʼ ಪರಿಕಲ್ಪನೆಯು ಬೆಂಗಳೂರು ನಗರದ ನಿವಾಸಿಗಳ ಸುರಕ್ಷತೆ ಹಾಗೂ ಅನುಕೂಲವನ್ನು ಕೇಂದ್ರಬಿಂದುವಾಗಿಸಿದೆ. ಈ ಪರಿಕಲ್ಪನೆಯು ನಗರದ ಸಂಚಾರ ವ್ಯವಸ್ಥೆ, ಪರಿಸರ, ಘನತ್ಯಾಜ್ಯ ನಿರ್ವಹಣೆ, ಸಾರ್ವಜನಿಕ ಸ್ಥಳಗಳ ಸದ್ಬಳಕೆ, ಸಾರ್ವಜನಿಕರ ಆರೋಗ್ಯ, ಪ್ರಾಣಿಗಳ ಆರೋಗ್ಯ, ಜನಸ್ನೇಹಿ ಇ-ಆಡಳಿತ, ನೀರಿನ ಭದ್ರತೆ ಹಾಗೂ ಪ್ರವಾಹ ನಿರ್ವಹಣೆ – ಈ 9 ಸವಾಲುಗಳನ್ನು ಯಶಸ್ವಿಯಾಗಿ ಎದುರಿಸುವ ಮೂಲಕ ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸುವುದು ನಮ್ಮ ಗುರಿಯಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ 20 ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು ಮೇಲ್ದರ್ಜೆಗೇರಿಸಲು 1,411 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಂಪನ್ಮೂಲದಿಂದ ಅನುಷ್ಠಾನಗೊಳಿಸಲು ಅನುಮೋದನೆ ನೀಡಿದ್ದು, ಮಾರ್ಚ್ 2026 ರೊಳಗೆ ಪೂರ್ಣಗೊಳಿಸಲು ಯೋಜಿಸಲಾಗಿದೆ. ಈ ಯೋಜನೆಗಳ ಮೂಲಕ ಬೆಂಗಳೂರಿನಲ್ಲಿ ಸುಸ್ಥಿರ ಜಲ ಮತ್ತು ಪರಿಸರ ಸಂರಕ್ಷಣೆಯಾಗಲಿದೆ.
ನೈಋತ್ಯ ರೈಲ್ವೆ ಇಲಾಖೆಯವರು ಬೈಯ್ಯಪ್ಪನಹಳ್ಳಿ ಪ್ರದೇಶದಲ್ಲಿ ನಿರ್ಮಿಸಿರುವ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಅನ್ನು ತಲುಪಲು ಸರಿಯಾದ ಮೆಟ್ರೋ ಮತ್ತು ರಸ್ತೆಗಳ ಸಂಪರ್ಕ ಇಲ್ಲದೇ ಇರುವುದರಿಂದ ಲಕ್ಷಾಂತರ ಪ್ರಯಾಣಿಕರಿಗೆ ಅನಾನುಕೂಲ ಹಾಗೂ ಸಂಚಾರ ದಟ್ಟಣೆಗೆ ಕಾರಣವಾಗಿದೆ. ಈ ಸಮಸ್ಯೆಯ ನಿವಾರಣೆಗಾಗಿ 263 ಕೋಟಿ ರೂ.ಗಳ ವೆಚ್ಚದಲ್ಲಿ ಒಂದು ಹೊಸ ಮೇಲ್ಸೇತುವೆ ನಿರ್ಮಿಸಲಾಗುವುದು.
ಪದೇ ಪದೇ ದುರಸ್ತಿಗೆ ಮರುಕಳಿಸುವ ವೆಚ್ಚವನ್ನು ತಪ್ಪಿಸಲು ನಗರದ ರಸ್ತೆಗಳನ್ನು ವೈಟ್ ಟ್ಯಾಪಿಂಗ್ ಮಾಡಲು ಕ್ರಿಯಾ ಯೋಜನೆ ರೂಪಿಸಲಾಗಿದೆ. ನಮ್ಮ ಸರ್ಕಾರದಿಂದ 2016-17 2017-18ರಲ್ಲಿ ವೈಟ್ ಟಾಪಿಂಗ್ ರಸ್ತೆಗಳಾಗಿ ಅಭಿವೃದ್ಧಿಪಡಿಸಲಾದ 190 ಕಿ.ಮೀ. ರಸ್ತೆಗಳು ಇಂದಿಗೂ ಅತ್ಯುತ್ತಮ ಸ್ಥಿತಿಯಲ್ಲಿವೆ. ತದನಂತರ, ಹಿಂದಿನ ಸರ್ಕಾರ ಯಾವುದೇ ವೈಟ್ ಟ್ಯಾಪಿಂಗ್ ಯೋಜನೆಯನ್ನು ಕೈಗೊಂಡಿರುವುದಿಲ್ಲ. ಈ ಯೋಜನೆಯನ್ನು ಪುನರಾರಂಭಿಸಿ 2023-24ನೇ ಸಾಲಿನಲ್ಲಿ 800 ಕೋಟಿ ರೂ. ವೆಚ್ಚದಲ್ಲಿ 100 ಕಿ.ಮೀ. ಉದ್ದದ ಮುಖ್ಯ ರಸ್ತೆಗಳನ್ನು ವೈಟ್ ಟಾಸ್ ರಸ್ತೆಗಳಾಗಿ ಅಭಿವೃದ್ಧಿಪಡಿಸಲಾಗುವುದು.
ಬೆಂಗಳೂರು ನಗರದಲ್ಲಿರುವ ಹೆಚ್ಚಿನ ಸಂಚಾರ ದಟ್ಟಣೆಯನ್ನು ಹೊಂದಿರುವ 192 ಕಿ.ಮೀ. ಉದ್ದದ ವಿವಿಧ 12 ಪ್ರಮುಖ ರಸ್ತೆಗಳನ್ನು ಹೈಡೆನ್ಸಿಟಿ ಕಾರಿಡಾರ್‌ಗಳೆಂದು (High Density Corridor) 2016ರಲ್ಲಿ ಗುರುತಿಸಲಾಗಿರುತ್ತದೆ. ಈ ಪೈಕಿ 92 ಕಿ.ಮೀ. ಉದ್ದದ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ. 2023-24ನೇ ಸಾಲಿನಲ್ಲಿ 83 ಕಿ.ಮೀ. ಉದ್ದದ ರಸ್ತೆಗಳನ್ನು ರಸ್ತೆಗಳನ್ನು 273 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.
ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ನಿವಾರಣೆಗಾಗಿ ರೂಪಿಸಿರುವ ಬೆಂಗಳೂರು ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ ಪ್ರಕ್ರಿಯೆಯು ಕಳೆದ 15 ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. ಈ ಯೋಜನೆಗೆ ಎದುರಾದ ತಾಂತ್ರಿಕ ಅಡಚಣೆಗಳನ್ನು ನಿವಾರಿಸಲು ಸರ್ವೋಚ್ಛ ನ್ಯಾಯಾಲಯದಿಂದ ದಿನಾಂಕ: 25.11.2021 ರಂದು ಅನುಮತಿ ದೊರಕಿದೆ. ಇದೀಗ ನಮ್ಮ ಸರ್ಕಾರವು ಎಲ್ಲಾ ಕಾನೂನಾತ್ಮಕ ಸಮಸ್ಯೆಗಳನ್ನ ಬಗೆಹರಿಸಿಕೊಂಡು ತ್ವರಿತವಾಗಿ ಯೋಜನೆಯನ್ನ ಜಾರಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಳೆನೀರು ಸರಾಗವಾಗಿ ಹರಿಯದಿರಲು ರಾಜಕಾಲುವೆಗಳ ಒತ್ತುವರಿ ಪ್ರಮುಖ ಕಾರಣವಾಗಿದ್ದು, ಇದರಿಂದಾಗಿ ಪ್ರವಾಹ ಉಂಟಾಗುವುದಲ್ಲದೆ, ಮಳೆ ಬಂದಾಗ ರಸ್ತೆಗಳಲ್ಲಿ ನೀರು ನಿಂತು, ಮನೆಗಳಿಗೆ ನೀರು ನುಗ್ಗಿ ಅನಾಹುತಗಳು ಸಂಭವಿಸುತ್ತಿವೆ. ಈ ಸಮಸ್ಯೆಯನ್ನು ನಿವಾರಿಸಲು ಕಂದಾಯ ಇಲಾಖೆ ಗುರುತಿಸಿರುವ ಒತ್ತುವರಿಗಳನ್ನು ಆದ್ಯತೆ ಮೇಲೆ ತೆರವುಗೊಳಿಸಲಾಗುವುದು.
ಬೆಂಗಳೂರು ನಗರದಲ್ಲಿ ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗೆ ನಮ್ಮ ಸರ್ಕಾರ ಆದ್ಯತೆ ನೀಡಲಿದೆ. ಬೆಂಗಳೂರು ನಗರದ 97 ಲಕ್ಷ ಟನ್ ನಷ್ಟು ಹಳೆ ತ್ಯಾಜ್ಯವನ್ನು (Legacy Waste) ಜೈವಿಕ ಗಣಿಗಾರಿಕೆ ಮತ್ತು ಜೈವಿಕ ಪರಿಹಾರದ ಮೂಲಕ ಸಂಸ್ಕರಿಸಲಾಗುವುದು ಮತ್ತು ಮುಂದಿನ ಐದು ವರ್ಷಗಳ ಅವಧಿಯಲ್ಲಿ ಇಂತಹ 256 ಎಕರೆ ಭೂಮಿಯನ್ನು ಉದ್ಯಾನವನಗಳಾಗಿ ಪರಿವರ್ತಿಸಲಾಗುವುದು.
ಸುಮಾರು 5.7 ಲಕ್ಷ ಪ್ರಯಾಣಿಕರು ದಿನಂಪ್ರತಿ ಸಂಚರಿಸುವ 70 ಕಿ.ಮೀ. ಉದ್ದದ ಸಂಪರ್ಕ ಜಾಲವನ್ನು ಹೊಂದಿರುವ ನಮ್ಮ ಮೆಟ್ರೋ ರಾಷ್ಟ್ರದಲ್ಲಿಯೇ 2ನೇ ಅತೀ ದೊಡ್ಡ ಮೆಟ್ರೋ ಸೇವೆಯಾಗಿರುತ್ತದೆ. 2040 ಅಂತ್ಯದ ವೇಳೆಗೆ ಬೈಯಪ್ಪನಹಳ್ಳಿಯಿಂದ ಕೃಷ್ಣರಾಜಪುರದವರೆಗೆ, ಕೆಂಗೇರಿಯಿಂದ ಚಲ್ಲಘಟ್ಟದವರೆಗೆ, ನಾಗಸಂದ್ರದಿಂದ ಮಾದಾವರದವರೆಗೆ, ಆರ್.ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ ಒಟ್ಟು 27 ಕಿ.ಮೀ.ಗಳ ನೂತನ ಮಾರ್ಗಗಳನ್ನು ಪ್ರಾರಂಭಿಸಲಾಗುವುದು. ಮುಂದಿನ 3 ವರ್ಷಗಳಲ್ಲಿ ಈಗಿರುವ 70 ಕಿಮೀ ನ ಸಂಪರ್ಕಜಾಲವನ್ನ 176 ಕಿಮೀಗೆ ವಿಸ್ತರಿಸುವ ಮೂಲಕ ಮೆಟ್ರೊ ಕಾರ್ಯಾಚರಣೆಯ ಸಂಪರ್ಕ ಜಾಲವನ್ನು ಎರಡೂವರೆ ಪಟ್ಟು ಹೆಚ್ಚಿಸಲಾಗುವುದು. ಪ್ರಗತಿಯಲ್ಲಿರುವ ಏರ್‌ಪೋರ್ಟ್ ಲೈನ್ ಕಾಮಗಾರಿಯನ್ನು ಪೂರ್ಣಗೊಳಿಸಿ 2026 ರಲ್ಲಿ ಕಾರ್ಯಾರಂಭ ಮಾಡಲಾಗುವುದು.
ಇದಲ್ಲದೇ, ಮೆಟ್ರೋ 3ನೇ ಹಂತದಡಿ ಅಂದಾಜು 16,328 ಕೋಟಿ ರೂ. ವೆಚ್ಚದಲ್ಲಿ ಕೆಂಪಾಪುರದಿಂದ ಜೆ.ಪಿ. ನಗರ 4ನೇ ಹಂತದವರೆಗಿನ ಮತ್ತು ಹೊಸಹಳ್ಳಿಯಿಂದ ಕಡಬಗೆರೆವರೆಗಿನ ಪಶ್ಚಿಮ ಓ.ಆರ್.ಆರ್. ಮಾರ್ಗವನ್ನು ಒಳಗೊಳ್ಳುವಂತಹ 45 ಕಿ.ಮೀ. ಉದ್ದದ ಮಾರ್ಗದ ವಿಸ್ತ್ರತ ಯೋಜನಾ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಅನುಮೋದನೆಗಾಗಿ ಸಲ್ಲಿಸಲಾಗಿದೆ. ಅಷ್ಟೇ ಅಲ್ಲದೆ, 15,000 ಕೋಟಿ ರೂ. ಅಂದಾಜು ವೆಚ್ಚದ, ಹೆಬ್ಬಾಳದಿಂದ ಸರ್ಜಾಪುರದವರೆಗಿನ 37 ಕಿ.ಮೀ. ಉದ್ದದ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರಕ್ಕೆ ಅನುಮೋದನೆಗಾಗಿ ಸಲ್ಲಿಸಲಾಗುವುದು.
ಬೆಂಗಳೂರು ರೂಪಿಸಲಾಗಿರುವ ನಗರದ ಸುಗಮ ಸಂಚಾರಕ್ಕೆ ಪೂರಕವಾಗಿ ಬೆಂಗಳೂರು ಉಪನಗರ ರೈಲು ಯೋಜನೆಯನ್ನು ಜಾರಿಗೊಳಿಸಲು ಡಬಲ್ ಇಂಜಿನ್ ಎಂದು ಹೇಳಿಕೊಳ್ಳುವ ಹಿಂದಿನ ಸರ್ಕಾರವು ವಿಫಲವಾಗಿದೆ. ಈ ಯೋಜನೆಯ ಒಟ್ಟು ಮೊತ್ತ 15,767 ಕೋಟಿ ರೂ.ಗಳಾಗಿದ್ದು, ಕೇಂದ್ರ ಸರ್ಕಾರದ ಪಾಲು 3,242 ಕೋಟಿ ರೂ.ಗಳು, ರಾಜ್ಯ ಸರ್ಕಾರದ ಪಾಲು 5,087 ಕೋಟಿ ರೂ.ಗಳು ಮತ್ತು ಸಾಲದ (ಬಾಹ್ಯ ಮೂಲಗಳಿಂದ) ಮೊತ್ತ 7,438 ಕೋಟಿ ರೂ.ಗಳಾಗಿರುತ್ತದೆ. ಸದರಿ ಯೋಜನೆಗೆ ಈವರೆಗೂ ಕೇಂದ್ರ ಸರ್ಕಾರವು 500 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, ರಾಜ್ಯ ಸರ್ಕಾರದಿಂದ 660 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿರುತ್ತದೆ. ಪ್ರಸ್ತುತ ಸಾಲಿನಲ್ಲಿ ಈ ಯೋಜನೆಗೆ ರಾಜ್ಯ ಸರ್ಕಾರವು 1,000 ಕೋಟಿ ರೂ.ಗಳನ್ನು ಒದಗಿಸಲಾಗಿದೆ.
ಪಾರಂಪರಿಕ ಮತ್ತು ದ್ರವ ತ್ಯಾಜ್ಯದ ಸಮರ್ಪಕ ನಿರ್ವಹಣೆ ಹಾಗೂ ಒಳಚರಂಡಿ ನೀರು ಸಂಸ್ಕರಿಸುವ ಆಧುನಿಕ ಪದ್ಧತಿಗಳನ್ನು ಅಳವಡಿಸುವ ಮೂಲಕ ನದಿಗಳು ಮತ್ತು ಕೆರೆಗಳಿಗೆ ಹರಿಯುವ ಮಾಲಿನ್ಯ ನಿಯಂತ್ರಿಸಲು 1,250 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನಲ್ಲಿ ಮತ್ತು ಇತರೇ ಪಟ್ಟಣಗಳಲ್ಲಿ 2,150 ಕೋಟಿ ರೂ. ವೆಚ್ಚದಲ್ಲಿ ಒಟ್ಟಾರೆ 3,400 ಕೋಟಿ ರೂ.ಗಳ ಅನುದಾನದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.
ಕೇಂದ್ರ ಪುರಸ್ಕೃತ ಸ್ವಚ್ಛ ಭಾರತ 2.0 ಯೋಜನೆಯನ್ನು ವೆಚ್ಚ ಹಂಚಿಕೆ ಆಧಾರದಲ್ಲಿ ಜಾರಿಗೊಳಿಸಿದ್ದು, ಬಿಬಿಎಂಪಿ ಸೇರಿದಂತೆ ರಾಜ್ಯದ 314 ನಗರ ಸ್ಥಳೀಯ ಸಂಸ್ಥೆಗಳಿಗೆ ಒಟ್ಟು 4,500 ಕೋಟಿ ರೂ.ಗಳ ಕ್ರಿಯಾ ಯೋಜನೆಗೆ ಅನುಮೋದನೆ ದೊರೆತಿದೆ. ಇದರಲ್ಲಿ ಕೇಂದ್ರ ಸರ್ಕಾರದ ಪಾಲು 1,900 ಕೋಟಿ ರೂ. ಮತ್ತು ರಾಜ್ಯ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಪಾಲು 2,600 ಕೋಟಿ ರೂ. ಗಳಾಗಿವೆ. ಈ ಯೋಜನೆಯಡಿಯಲ್ಲಿ ಸುಸ್ಥಿರ ಘನತ್ಯಾಜ್ಯ ನಿರ್ವಹಣೆ ಮತ್ತು ಬಳಸಿದ ನೀರಿನ ನಿರ್ವಹಣೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.
ಕೇಂದ್ರ ಪುರಸ್ಕೃತ ಅಮೃತ್ 2.0 ಯೋಜನೆಯಡಿ ರಾಜ್ಯದ ಒಂದು ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆ ಇರುವ 287 ಪಟ್ಟಣಗಳಲ್ಲಿ ನೀರು ಸರಬರಾಜು ಮತ್ತು ಜಲಮೂಲಗಳ ಸಂರಕ್ಷಣೆ ಕಾಮಗಾರಿ ಕೈಗೊಳ್ಳಲು 9,230 ಕೋಟಿ ರೂ. ಗಳ ಮೊತ್ತದಲ್ಲಿ ಯೋಜಿಸಲಾಗಿದೆ. ಈ ಅನುದಾನದಲ್ಲಿ ಕೇಂದ್ರ ಸರ್ಕಾರದ ಪಾಲು 4,615 ಕೋಟಿ ರೂ.ಗಳು, ರಾಜ್ಯ ಸರ್ಕಾರದ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಪಾಲು 4,612 ಕೋಟಿ ರೂ.ಗಳಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಈ ಯೋಜನೆಗೆ ಒಟ್ಟು 800 ಕೋಟಿ ರೂ. ಗಳನ್ನು ಒದಗಿಸಲಾಗಿದೆ.
ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಜಾರಿಗೆ ತಂದ ಇಂದಿರಾ ಕ್ಯಾಂಟೀನ್ ಯೋಜನೆಯು ನಗರ ಪ್ರದೇಶಗಳಲ್ಲಿ ಬಡವರು ಹಾಗೂ ಶ್ರಮಿಕರಿಗೆ ಅತ್ಯಂತ ಕಡಿಮೆ ದರದಲ್ಲಿ ಊಟ, ಉಪಾಹಾರ ಒದಗಿಸುವ ಮೂಲಕ ಅವರ ನೆಮ್ಮದಿಗೆ ಕಾರಣವಾಗಿತ್ತು. ಆದರೆ ಹಿಂದಿನ ಸರ್ಕಾರ ವಿವಿಧ ನೆಪಗಳೊಡ್ಡಿ, ಈ ಯೋಜನೆಯನ್ನು ಸ್ಥಗಿತಗೊಳಿಸಿ, ಬಡವರ ವಿರೋಧಿ ಕ್ರಮವನ್ನು ಅನುಸರಿಸಿತು. ಇದೀಗ ಮೊದಲನೇ ಹಂತದಲ್ಲಿ (Phase-1) ಹೊಸ ಮೆನುವಿನೊಂದಿಗೆ, ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಬಿಬಿಎಂಪಿ ಹಾಗೂ ರಾಜ್ಯದ – ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪುನರಾರಂಭ ಮಾಡಲಾಗುವುದು. 2ನೇ ಹಂತದಲ್ಲಿ (Phase-2) ಎಲ್ಲಾ ಹೊಸ ಪಟ್ಟಣಗಳಲ್ಲಿ ಮತ್ತು ಬಿಬಿಎಂಪಿಯ ಹೊಸ ವಾರ್ಡ್‌ಗಳಲ್ಲಿ ಈ ಯೋಜನೆಯನ್ನು ವಿಸ್ತರಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಇಂದಿರಾ ಕ್ಯಾಂಟೀನ್‌ಗಳ ದುರಸ್ತಿ, ನವೀಕರಣ ಹಾಗೂ ನಿರ್ವಹಣೆಗೆ ರಾಜ್ಯ ಸರ್ಕಾರವು 100 ಕೋಟಿ ರೂ. ಒದಗಿಸಲಿದೆ.
ತ್ಯಾಜ್ಯ ಸಂಗ್ರಹಣೆ ಮತ್ತು ಸಂಸ್ಕರಣೆಯನ್ನು ಹೆಚ್ಚು ವೈಜ್ಞಾನಿಕವಾಗಿ ಮತ್ತು ಸುಸ್ಥಿರ ರೀತಿಯಲ್ಲಿ ವಿಲೇವಾರಿ ಮಾಡಲು ಬೆಂಗಳೂರು ಘನತಾಜ್ಯ ನಿರ್ವಹಣಾ ಸಂಸ್ಥೆಯ (BSWMCL) ಪರಿಣಾಮಕಾರಿ ಕಾರ್ಯಾಚರಣೆಗಾಗಿ 100 ಕೋಟಿ ರೂ.ಗಳನ್ನು ಒದಗಿಸಲಾಗುವುದು.
ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ (Karnataka Budget 2023-24) ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಬೆಂಗಳೂರು ಸಮಗ್ರ ಅಭಿವೃದ್ಧಿಗೆ (Bengaluru Development) ಭರ್ಜರಿ ಉಡುಗೊರೆ ನೀಡಿದ್ದಾರೆ. ಬೆಂಗಳೂರು ಸಮಗ್ರ ಅಭಿವೃದ್ಧಿ ವಲಯಕ್ಕೆ 2023-24ನೇ ಸಾಲಿಗೆ 9,698 ಕೋಟಿ ರೂ. ಅನುದಾನ ಒದಗಿಸಿರುವುದಾಗಿ ಘೋಷಿಸಿದರು.
ಮುಖ್ಯಾಂಶಗಳು:
ಬೆಂಗಳೂರು (Bengaluru) ನಗರದ ಸಂಚಾರ ದಟ್ಟಣೆ ಕಡಿಮೆ ಮಾಡಲು, ಹೆಚ್ಚು ಸಂಚಾರ ದಟ್ಟಣೆ ಇರುವ ಪ್ರಮುಖ 75 ಜಂಕ್ಷನ್‌ಗಳನ್ನು 150 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಿದೆ. ಇದಕ್ಕೆ ಪೂರಕವಾಗಿ ಕೃತಕ ಬುದ್ಧಿಮತ್ತೆ (Artificial Intelligence) ಬಳಕೆಯೊಂದಿಗೆ ಟ್ರಾಫಿಕ್ ಸಿಗ್ನಲ್‌ಗಳ (Traffic Signal) ನಿರ್ವಹಣೆ ಮಾಡುವ ಮೂಲಕ `ಸೀಮ್‌ಲೆಸ್ ಸಿಗ್ನಲಿಂಗ್’ ಅನ್ನು ಅಳವಡಿಸಿಕೊಂಡು ಸಂಚಾರ ದಟ್ಟಣೆ ಕಡಿಮೆ ಮಾಡಲಾಗುವುದು.
ಟಿನ್ ಫ್ಯಾಕ್ಟರಿ (Tin Factory) ಮೇಡಹಳ್ಳಿ ವರೆಗೆ 350 ಕೋಟಿ ರೂ. ವೆಚ್ಚದಲ್ಲಿ 5 ಕಿ.ಮೀ. ಎಲಿವೇಟೆಡ್ ರಸ್ತೆ ನಿರ್ಮಾಣ ಹಾಗೂ ಸಬ್ ಅರ್ಬನ್ ರೈಲ್ವೆ ನಿಗಮದ ರೈಲು ಜಾಲದೊಂದಿಗೆ ಸಮನ್ವಯ ಸಾಧಿಸಿ ಯಶವಂತಪುರ ರೈಲು ನಿಲ್ದಾಣದಿಂದ ಮತ್ತಿಕೆರೆ ಹಾಗೂ ಬಿಇಎಲ್ (BEL) ರಸ್ತೆಯ ವರೆಗೆ ಮೇಲ್ವೇತುವೆ ನಿರ್ಮಿಸಿ ನೇರ ಸಂಪರ್ಕ ಒದಗಿಸಲಾಗುವುದು. ಇದನ್ನೂ ಓದಿ: Karnataka Budget 2023: ರೈತರಿಗೆ ಬಂಪರ್ ಗಿಫ್ಟ್ – 5 ಲಕ್ಷದವರೆಗೆ ಬಡ್ಡಿ ರಹಿತ ಸಾಲ
ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಉದ್ದದ ಸ್ಯಾಟಲೈಟ್ ಟೌನ್ ರಿಂಗ್ ರಸ್ತೆ ನಿರ್ಮಿಸಲು ಕಡಿತಗೊಳಿಸಲು 13,139 ಕೋಟಿ ರೂ. ವೆಚ್ಚದಲ್ಲಿ 288 ಕಿಮೀ ಕೇಂದ್ರ ಸರ್ಕಾರದ ಅನುಮೋದನೆ ದೊರೆತಿದೆ. ಈ ಯೋಜನೆಗೆ ಭೂಸ್ವಾಧೀನದ ಶೇ.30 ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರದ ವತಿಯಿಂದ ಭರಿಸಲು ಒಪ್ಪಿಗೆ ನೀಡಲಾಗಿದೆ.
ಬೆಂಗಳೂರು ನಗರದಲ್ಲಿ ಉತ್ಪಾದನೆಯಾಗುವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಿಸಲು ವಿವಿಧ ಕ್ರಮ ತೆಗೆದುಕೊಳ್ಳಲಾಗುವುದು. ಒಂದೇ ವಾಹನದಲ್ಲಿ ಹಸಿ ಕಸ ಹಾಗೂ ಒಣ ಕಸ ಸಂಗ್ರಹಿಸುವ ವಿನ್ಯಾಸದ ಆಟೋ ಟಿಪ್ಪರ್ ಹಾಗೂ ಕಾಂಪಾಕ್ಟರ್‌ಗಳು ಕಾರ್ಯ ನಿರ್ವಹಿಸಲಿವೆ. ಪ್ರತಿ ವಾರ್ಡ್ ಒಂದರಂತೆ ತ್ಯಾಜ್ಯ ಸಂಸ್ಕರಣಾ ಕೇಂದ್ರ ಸಹ ಸ್ಥಾಪಿಸಲಾಗುತ್ತದೆ.
Live Tv
[brid partner=56869869 player=32851 video=960834 autoplay=true]