ತುಮಕೂರು: 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆಕೆ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯಾಗಲು ಕಾರಣನಾದ ಆರೋಪದ ಮೇಲೆ ವಿನಯ್ (21) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಬಾಲಕಿ ಮತ್ತು ಯುವಕ ಅಕ್ಕಪಕ್ಕದ ಮನೆಯ ನಿವಾಸಿಗಳು. ‘ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ ವಿನಯ್ ವಿರುದ್ಧ ಕ್ರಮ ಕೈಗೊಳ್ಳುವಂತೆ’ ಕೋರಿ ಬಾಲಕಿ ತಾಯಿ ನೀಡಿದ ದೂರಿನ ಮೇರೆಗೆ ಕುಣಿಗಲ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಮಗಳ ಆರೋಗ್ಯ ಸರಿ ಇಲ್ಲದಿದ್ದಾಗ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದೆ. ಆಗ 8 ತಿಂಗಳ ಗರ್ಭಿಣಿ ಎಂಬುವುದು ಗೊತ್ತಾಯಿತು. ಆಕೆಯನ್ನು ವಿಚಾರಿಸಿದಾಗ ಎಲ್ಲ ವಿಷಯ ಹೇಳಿದಳು. ಕೂಡಲೇ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತು. ಆಸ್ಪತ್ರೆಯಲ್ಲಿ ಹೆರಿಗೆಯಾಗಿದೆ ಎಂದು ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಬೆಂಗಳೂರು/ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಅವರ ಪುತ್ರ ಮಿಲಿಂದ್ ಖರ್ಗೆ (Milind Kharge) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕ್ಯಾನ್ಸರ್‌ನಿಂದ ಬಳಲುತ್ತಿರುವ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ (ತೀವ್ರ ನಿಗಾ ಘಟಕ) ಚಿಕಿತ್ಸೆ ಮುಂದುವರಿಸಲಾಗಿದೆ.
ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಮತ್ತು ಮೂವರು ಗಂಡು ಮಕ್ಕಳಿದ್ದಾರೆ. ಮಿಲಿಂದ್ ಯುನಿವರ್ಸಿಟಿ ಆಫ್ ಪೆನ್ಸಿಲ್ವೇನಿಯಾದ ವಾರ್ಟನ್ ಸ್ಕೂಲ್‌ನಲ್ಲಿ ಎಂಬಿಎ ಪದವಿ ಪಡೆದಿದ್ದಾರೆ. ವಿದೇಶದಲ್ಲಿದ್ದ ಮಿಲಿಂದ್ ಅವರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಮಿಲಿಂದ್ ಸಾರ್ವಜನಿಕವಾಗಿ ಹೆಚ್ಚಾಗಿ ಕಾಣಿಸಿಕೊಂಡಿಲ್ಲ. ಇದನ್ನೂ ಓದಿ: ಈಗಲೂ ಅದೇ ಖದರ್ – 15 ಫೋರ್, 8 ಸಿಕ್ಸ್, ಆಸೀಸ್ ವಿರುದ್ಧ ತೂಫಾನ್ ಶತಕ ಸಿಡಿಸಿದ ಎಬಿಡಿ
ಕನ್ನಡ ಚಲನಚಿತ್ರ ನಟ, ನಿರ್ದೇಶಕ ಉಪೇಂದ್ರ (Upendra) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೇ 5ರಂದು (ಇಂದು) ಮಧ್ಯಾಹ್ನದ ಹೊತ್ತಿಗೆ ಹೊಟ್ಟೆಯುರಿಯಿಂದ (ಓವರ್ ಅಸಿಡಿಟಿಯಿಂದ) ಬಳಲುತ್ತಿದ್ದ ಅವರು ಪ್ರಾಥಮಿಕ ಚಿಕಿತ್ಸೆಗಳನನ್ನು ಮನೆಯಲ್ಲೇ ತೆಗೆದುಕೊಂಡಿದ್ದರಾದೂ ಅದು ಶಮನವಾಗದ ಕಾರಣ, ತಮ್ಮ ನಿವಾಸಕ್ಕೆ ಹತ್ತಿರವಿರುವ ಸ್ಪರ್ಶ್ ಆಸ್ಪತ್ರೆಗೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ದಾಖಲಾಗಿದ್ದಾರೆ.
ಸದ್ಯ ಆಸ್ಪತ್ರೆಯಲ್ಲಿ (Hospital) ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. ಯುಐ ಸಿನಿಮಾ ಚಿತ್ರೀಕರಣ ಸಂದರ್ಭದಲ್ಲೂ ಇದೇ ರೀತಿ ಆಗಿತ್ತು. ಉಪ್ಪಿ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ಅಭಿಮಾನಿಗಳು ಗಾಬರಿಪಡುವ ಅವಶ್ಯಕತೆಯಿಲ್ಲ ಅಂತ ಆಪ್ತ ಮೂಲಗಳು ತಿಳಿಸಿವೆ.
ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ (Gauribidanur Police Station) ನಗರಗೆರೆ ಬಳಿಯ ತಿರುವಿನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ತಗ್ಗು ಪ್ರದೇಶಕ್ಕೆ ನುಗ್ಗಿದ ಪರಿಣಾಮ ಕಾರಿನಲ್ಲಿದ್ದ ನಾಲ್ವರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಗುರುವಾರ ತಡರಾತ್ರಿ ನಡೆದ ಘಟನೆಯಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಗೌರಿಬಿದನೂರು ತಾಲ್ಲೂಕು ವಾಟದಹೊಸಹಳ್ಳಿ ಬೆಸ್ಕಾಂ ಶಾಖೆಯ ಲೈನ್‌ಮ್ಯಾನ್‌ಗಳಾದ (BESCOM Lineman) ಶ್ರೀಧರ್, ವೇಣು ಗೋಪಾಲ್, ಮಂಜುನಾಥ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಸಾವಿನ ಕೂಪದಂತಿದ್ದ ಸಹಸ್ರತಾಲ್ ಹಿಮದ ಹೊದಿಕೆಯಿಂದ ಬದುಕುಳಿದವರು ಬೆಂಗಳೂರಿಗೆ ವಾಪಸ್
ಅಷ್ಟಕ್ಕೂ ಆಗಿದ್ದೇನು?
ಕಳೆದ ರಾತ್ರಿ ಗೌರಿಬಿದನೂರು ತಾಲ್ಲೂಕು ನಗರಗೆರೆ-ವಾಟದಹೊಸಹಳ್ಳಿ ರಸ್ತೆಯಲ್ಲಿ ವೇಣುಗೋಪಾಲ್ KA40-N-5668 ಬ್ರಿಜಾ ಕಾರಿನಲ್ಲಿ ಬರುವಾಗ, ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಪಕ್ಕದ ತಗ್ಗು ಪ್ರದೇಶಕ್ಕೆ ಉರುಳಿದೆ. ಇದರಿಂದ ಶ್ರೀಧರ್ (28) ವೇಣುಗೋಪಾಲ (38), ಮಂಜುನಾಥ (37), ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನೂ ಕಾರಿನಲ್ಲಿದ್ದ ಶಿವಕುಮಾರ್ ಎಂಬಾತ ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದ್ರೆ ನಗರಗೆರೆ ಬಳಿ ತಿರುವು ಇರುವುದರಿಂದ ಮುಂಜಾನೆ ಸಮಯದಲ್ಲಿ ಚಾಲಕ ನಿದ್ರೆಗೆ ಜಾರಿದ್ದು ಅಪಘಾತಕ್ಕೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಹಾಸನ: ಚಾಲಕನ ನಿಯಂತ್ರಣ ತಪ್ಪಿ ಫ್ಲೈ ಓವರ್‌ನಲ್ಲೇ ಕಾರು ಪಲ್ಟಿಯಾಗಿ (Car Sccident) ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ (Hassan) ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ ಶೆಟ್ಟಿಹಳ್ಳಿ ಗ್ರಾಮದ ಸಮೀಪ ನಡೆದಿದೆ.
ಬೆಂಗಳೂರಿನಿಂದ ಹಾಸನದ ಕಡೆಗೆ ಸ್ವಿಫ್ಟ್ ಕಾರಿನಲ್ಲಿ ಬರುತ್ತಿದ್ದ ವೇಳೆ ಅತಿ ವೇಗವಾಗಿ ಕಾರು ಚಾಲನೆ ಮಾಡುತ್ತಿದ್ದರಿಂದ ಕಾರು ಚಾಲಕನ ನಿಯಂತ್ರಣ ತಪ್ಪಿದೆ. ಇದರಿಂದ ರಾಷ್ಟ್ರೀಯ ಹೆದ್ದಾರಿ-75 ರಲ್ಲಿ ನಾಲ್ಕೈದು ಬಾರಿ ಕಾರು ಪಲ್ಟಿಯಾಗಿದೆ. ಪಲ್ಟಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಆದ್ರೆ ಕೂದಲೆಳೆ ಅಂತರದಲ್ಲಿ ಕಾರು ಫ್ಲೈಓವರ್‌ನಿಂದ ಕೆಳಗೆ ಬೀಳುವುದು ತಪ್ಪಿದೆ. ಇದನ್ನೂ ಓದಿ: ರಾಷ್ಟ್ರಪತಿ ವಿಚಾರದಲ್ಲಿ ಕಾಂಗ್ರೆಸ್‌ನಿಂದ ಚಿಲ್ಲರೆ ರಾಜಕಾರಣ – ಪ್ರಹ್ಲಾದ್ ಜೋಶಿ ಕಿಡಿ
ಗಾಯಗೊಂಡವರ ಸ್ಥಿತಿ ಗಂಭೀರವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಚನ್ನರಾಯಪಟ್ಟಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ ಮತ್ತಷ್ಟು ನೀರು