Tag: Bengaluru International Airport

  • ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ರತಿಷ್ಠಿತ AAA ರೇಟಿಂಗ್ ಗರಿಮೆ

    ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ರತಿಷ್ಠಿತ AAA ರೇಟಿಂಗ್ ಗರಿಮೆ

    ಬೆಂಗಳೂರು/ಚಿಕ್ಕಬಳ್ಳಾಪುರ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು (Bengaluru Airport) ICRA ಲಿಮಿಟೆಡ್, ಇಂಡಿಯಾ ರೇಟಿಂಗ್ಸ್ ಮತ್ತು ರಿಸರ್ಚ್ ಪ್ರೈವೇಟ್ ಲಿಮಿಟೆಡ್ ಹಾಗೂ ಕ್ರಿಸಿಲ್ ರೇಟಿಂಗ್ ಅವರಿಂದ ಪ್ರತಿಷ್ಠಿತ ‘AAA’ ರೇಟಿಂಗ್ (ಸ್ಟೇಬಲ್ ಔಟ್‌ಲುಕ್‌) ಅನ್ನು ತನ್ನದಾಗಿಸಿಕೊಂಡಿದೆ.

    AAA ಅತ್ಯುನ್ನತ ಕ್ರೆಡಿಟ್ ರೇಟಿಂಗ್ ಆಗಿದ್ದು, ಇದು ಹಣಕಾಸಿನ ಜವಾಬ್ದಾರಿಗಳ ಸಮಯೋಚಿತ ಸೇವೆ ಮತ್ತು ಕಡಿಮೆ ಕ್ರೆಡಿಟ್ ಅಪಾಯದ ಬಗ್ಗೆ ಹೆಚ್ಚಿನ ಮಟ್ಟದ ಸುರಕ್ಷತೆಯನ್ನು ಹೊಂದಿರುವುದನ್ನು ಸೂಚಿಸುತ್ತದೆ. ಈ ಮನ್ನಣೆಯನ್ನು ಬಿಐಎಎಲ್‌ ಪಡೆದುಕೊಂಡಿದ್ದು, ಇದು ವಾರ್ಷಿಕವಾಗಿ 51.5 ಮಿಲಿಯನ್ ಪ್ರಯಾಣಿಕರ ನಿರ್ವಹಣಾ ಸಾಮರ್ಥ್ಯದ ಜೊತೆಗೆ, ಭಾರತದಲ್ಲಿ ಮೂರನೇ ಅತಿದೊಡ್ಡ ವಿಮಾನ ನಿಲ್ದಾಣವಾಗಿ ಮತ್ತು ದಕ್ಷಿಣ ಭಾರತದಲ್ಲಿ ಅತಿ ದೊಡ್ಡದಾದ ಏರ್‌ಪೋರ್ಟ್‌ ಎಂಬ ಘನ ಮಾರುಕಟ್ಟೆ ಸ್ಥಾನವನ್ನು ಎತ್ತಿ ತೋರಿಸುತ್ತದೆ. ಇದನ್ನೂ ಓದಿ: ವಕ್ಫ್‌ ಬೋರ್ಡ್‌ ರಾಕ್ಷಸನನ್ನ ಮೋದಿ ಸಂಹಾರ ಮಾಡ್ತಾರೆ: ಆರ್.‌ ಅಶೋಕ್‌

    BIAL ಗಾಗಿ ಗುರುತಿಸಲಾದ ಕೆಲವು ಪ್ರಮುಖ ಕ್ರೆಡಿಟ್ ಸಾಮರ್ಥ್ಯಗಳು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಒಳಗೊಂಡಿವೆ. 2025ರ ಹಣಕಾಸು ವರ್ಷದಲ್ಲಿ ಶೇ.10-11 ರಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಈ ಹಣಕಾಸಿನ ವರ್ಷದಲ್ಲಿ 37.5 ಮಿಲಿಯನ್‌ನಿಂದ ಸರಿಸುಮಾರು 41-42 ಮಿಲಿಯನ್ ತಲುಪಲಿದೆ. ಹೆಚ್ಚುವರಿಯಾಗಿ, 2068 ರವರೆಗೆ BIAL ನ ರಿಯಾಯಿತಿ ಒಪ್ಪಂದದ ವಿಸ್ತರಣೆಯು ದೀರ್ಘಾವಧಿಯನ್ನು ಒದಗಿಸುವ ಜೊತೆಗೆ, ಅದರ ಆರ್ಥಿಕ ನಮ್ಯತೆಯನ್ನು ಹೆಚ್ಚಿಸುತ್ತದೆ.

    2025 ರ ಹಣಕಾಸಿನ ವರ್ಷದಲ್ಲಿ BIAL ನ ಕಾರ್ಯಾಚರಣೆಯ ಆದಾಯವು ಶೇ.20 ರಷ್ಟು ಹೆಚ್ಚಾಗಲಿದೆ ಎಂದು ಸೂಚಿಸಿದ್ದು, ಈ ಬೆಳವಣಿಗೆಯು ವಿಮಾನ ನಿಲ್ದಾಣದ ವಿಸ್ತರಣೆ, ಪ್ರಯಾಣಿಕರ ಸಂಖ್ಯೆಯಲ್ಲಿ ಸ್ಥಿರವಾದ ಹೆಚ್ಚಳ ಮತ್ತು ಏರೋನಾಟಿಕಲ್ ಮತ್ತು ಏರೋನಾಟಿಕಲ್ ಅಲ್ಲದ ಆದಾಯಗಳಿಂದ ನಡೆಸಲ್ಪಡುತ್ತದೆ. ಫೇರ್ಫ್ಯಾಕ್ಸ್ ಗ್ರೂಪ್ (ಇದು 64% ಪಾಲನ್ನು ಹೊಂದಿದೆ), ಸೀಮೆನ್ಸ್ (10%), ಏರ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (13%), ಕರ್ನಾಟಕ ಸರ್ಕಾರ (13%) ನ ಕಾರ್ಯತಂತ್ರದ ಜಂಟಿ ಮಾಲೀಕತ್ವವು BIAL ನ ಆರ್ಥಿಕ ಮತ್ತು ಕಾರ್ಯಾಚರಣೆಯ ಸಾಮರ್ಥ್ಯಗಳನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ. ಇದನ್ನೂ ಓದಿ: ಬೆಂಗ್ಳೂರು | ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಅಗ್ನಿ ಅವಘಡ – ಯುವತಿ ಸಜೀವ ದಹನ

    ಈ ಸಾಧನೆಯ ಬಗ್ಗೆ ಪ್ರತಿಕ್ರಿಯಿಸಿದ ಬೆಂಗಳೂರು ಇಂಟರ್ನ್ಯಾಶನಲ್ ಏರ್ಪೋರ್ಟ್ ಲಿಮಿಟೆಡ್‌ನ ಮುಖ್ಯ ಹಣಕಾಸು ಅಧಿಕಾರಿ ಭಾಸ್ಕರ್ ಆನಂದ್ ರಾವ್, “ಐಸಿಆರ್‌ಎ, ಇಂಡಿಯಾ ರೇಟಿಂಗ್ಸ್ ಮತ್ತು ರಿಸರ್ಚ್ ಮತ್ತು ಕ್ರಿಸಿಲ್‌ನಿಂದ AAA ರೇಟಿಂಗ್ ಸ್ವೀಕರಿಸಲು ನಮಗೆ ಹೆಮ್ಮೆ ಎನಿಸುತ್ತದೆ. ಈ ಗುರುತಿಸುವಿಕೆಯು ನಮ್ಮ ದೃಢವಾದ ವ್ಯಾಪಾರ ಮಾದರಿ ಮತ್ತು ಸುಸ್ಥಿರ ಬೆಳವಣಿಗೆಗೆ ನಮ್ಮ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ನಿಯಂತ್ರಿತ ಏರೋನಾಟಿಕಲ್ ಆದಾಯ ಮತ್ತು ಸಾಮರ್ಥ್ಯವನ್ನು ವಿಸ್ತರಿಸುವಲ್ಲಿ ಹಾಗೂ ಪ್ರಯಾಣಿಕರ ಅನುಭವವನ್ನು ಹೆಚ್ಚಿಸುವಲ್ಲಿ ನಮ್ಮ ಕಾರ್ಯತಂತ್ರದ ಮೂಲಕ ಉತ್ತಮ ಸ್ಥಾನದಲ್ಲಿರುತ್ತೇವೆ. ದೃಢವಾದ ಆರ್ಥಿಕ ಅಡಿಪಾಯವನ್ನು ಉಳಿಸಿಕೊಂಡು ಎಲ್ಲಾ ಮಧ್ಯಸ್ಥಗಾರರಿಗೆ ದೀರ್ಘಾವಧಿಯ ಮೌಲ್ಯವನ್ನು ತಲುಪಿಸುವ ಕೆಲಸವನ್ನು ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

    ಬಿಐಎಎಲ್ ಹೂಡಿಕೆ ಮಾಡಲು ಮಹತ್ವಾಕಾಂಕ್ಷೆಯ ಯೋಜನೆಗಳನ್ನು ರೂಪಿಸಿದೆ. 2025 ರಿಂದ 2029 ರ ನಡುವಿನ ಹಣಕಾಸು ವರ್ಷದಲ್ಲಿ ಅಂದಾಜು 16,000 ಕೋಟಿ ರೂ., ವಾರ್ಷಿಕವಾಗಿ 80 ಮಿಲಿಯನ್ ಪ್ರಯಾಣಿಕರಿಗೆ ತನ್ನ ಸಾಮರ್ಥ್ಯವನ್ನು ವಿಸ್ತರಿಸುವ ಗುರಿಯನ್ನು ಹೊಂದಿದೆ. ಈ ಹೂಡಿಕೆಯು ಟರ್ಮಿನಲ್ 2 ರ ವಿಸ್ತರಣೆ, ಮೂಲಸೌಕರ್ಯ ನವೀಕರಣ ಮತ್ತು ಇತರ ಮಹತ್ವದ ಯೋಜನೆಗಳ ಮೇಲೆ ಕೇಂದ್ರೀಕರಿಸುತ್ತದೆ. AAA ರೇಟಿಂಗ್ BIAL ನ ಕಾರ್ಯಾಚರಣೆಯನ್ನು ಒತ್ತಿ ಹೇಳುತ್ತದೆ. ಹೆಚ್ಚುತ್ತಿರುವ ಪ್ರಯಾಣಿಕರ ದಟ್ಟಣೆ, ಟರ್ಮಿನಲ್ 2 ರ ಉದ್ಘಾಟನೆ ಮತ್ತು ಆದಾಯದಲ್ಲಿ ಸ್ಥಿರವಾದ ಬೆಳವಣಿಗೆಯಿಂದ ಉತ್ತೇಜಿಸಲ್ಪಟ್ಟಿದೆ. ಈ ಸ್ಥಿರ ದೃಷ್ಟಿಕೋನವು ದೀರ್ಘಾವಧಿಯ ಬೆಳವಣಿಗೆಗೆ BIAL ನ ಸಾಮರ್ಥ್ಯವನ್ನು ಇನ್ನಷ್ಟು ಬೆಳೆಸಲಿದೆ.

  • ಅಬ್ಬಬ್ಬಾ! ಬ್ಲೌಸ್‌ನಲ್ಲೂ ಚಿನ್ನ ಸಾಗಾಟ – ಬೆಂಗ್ಳೂರು ಏರ್ಪೋರ್ಟ್‌ನಲ್ಲಿ ಸಿಕ್ಕಿಬಿದ್ದ ಮಹಿಳೆ ಅಂದರ್‌

    ಅಬ್ಬಬ್ಬಾ! ಬ್ಲೌಸ್‌ನಲ್ಲೂ ಚಿನ್ನ ಸಾಗಾಟ – ಬೆಂಗ್ಳೂರು ಏರ್ಪೋರ್ಟ್‌ನಲ್ಲಿ ಸಿಕ್ಕಿಬಿದ್ದ ಮಹಿಳೆ ಅಂದರ್‌

    ಚಿಕ್ಕಬಳ್ಳಾಪುರ: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru International Airport) ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಮೂರು ಪ್ರಕರಣಗಳಲ್ಲಿ 67 ಲಕ್ಷ ರೂ. ಮೌಲ್ಯದ 1 ಕೆಜಿ 133 ಗ್ರಾಂ ಚಿನ್ನ ಸೀಜ್‌ (Gold Seized) ಮಾಡಿದ್ದಾರೆ.

    ಭಾರತ ಮೂಲದ ಮಹಿಳೆ ಕೌಲಾಲಂಪುರ್‌ನಿಂದ ಬೆಂಗಳೂರಿಗೆ ಬಂದಿದ್ದಳು. ಈಕೆ ತನ್ನ ಬ್ಲೌಸ್‌ನ ಒಳಭಾಗದಲ್ಲಿ 300 ಗ್ರಾಂ ನಷ್ಟು ಪೇಸ್ಟ್‌ ರೂಪದ ಚಿನ್ನವನ್ನ ಇಟ್ಟುಕೊಂಡಿದ್ದಳು. ಇನ್ನೂ ಮಲೇಷಿಯಾ ಮೂಲದ ಮಹಿಳೆ ಸಹ 34 ಲಕ್ಷ ರೂ. ಮೌಲ್ಯದ 578 ಗ್ರಾಂ ಚಿನ್ನ ಸಾಗಾಟ ಮಾಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾಳೆ. ಇದನ್ನೂ ಓದಿ: ಪಾಕಿಸ್ತಾನ್‌ ಜಿಂದಾಬಾದ್‌ ಅನ್ನದೇ ಇನ್ನೇನು ಹೇಳ್ಬೇಕು? – ಪೊಲೀಸ್‌ ಅಧಿಕಾರಿ ಜೊತೆ ಪಾಕ್‌ ಅಭಿಮಾನಿ ವಾಗ್ವಾದ

    ಮತ್ತೊಂದು ಪ್ರಕರಣದಲ್ಲಿ ಭಾರತ ಮೂಲದ ವ್ಯಕ್ತಿಯೊರ್ವ ಕುವೈತ್‌ನಿಂದ ಬಂದಿದ್ದು, ಡ್ರೈಫ್ರೂಟ್ಸ್‌ ಪಾಕೆಟ್‌ನಲ್ಲಿ ಸಣ್ಣ ಸಣ್ಣ ಚೂರುಗಳ ರೂಪದಲ್ಲಿ ಚಿನ್ನ ಸಾಗಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದು, 15 ಲಕ್ಷ ರೂ. ಮೌಲ್ಯದ 250 ಗ್ರಾಂ ಚಿನ್ನ ಸೀಜ್‌ ಮಾಡಿದ್ದಾರೆ. ಜೊತೆಗೆ 1 ಐಪೋನ್ (iPhone) ಸಹ ಅಧಿಕಾರಿಗಳು ವಶಪಡಿಸಿಕೊಂಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಕಿರುತೆರೆಯಲ್ಲಿ ಕ್ರಿಕೆಟ್: TPL-ಮೂರನೇ ಸೀಸನ್ ಟೀಂ ಲೋಗೋ ಲಾಂಚ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಮಾನದ ಪ್ರಯಾಣಿಕರ ಸೀಟ್ ಕೆಳಗೆ 61 ಲಕ್ಷದ ಚಿನ್ನದ ಪೇಸ್ಟ್, ಕಡ್ಡಿಗಳು ಪತ್ತೆ

    ವಿಮಾನದ ಪ್ರಯಾಣಿಕರ ಸೀಟ್ ಕೆಳಗೆ 61 ಲಕ್ಷದ ಚಿನ್ನದ ಪೇಸ್ಟ್, ಕಡ್ಡಿಗಳು ಪತ್ತೆ

    – ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ

    ಬೆಂಗಳೂರು: ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಇಂಡಿಗೋ ವಿಮಾನದ ಸೀಟ್ ಕೆಳಗೆ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಪತ್ತೆಯಾಗಿದ್ದು, ಆರೋಪಿಗಳ ಪತ್ತೆಗಾಗಿ ಕಸ್ಟಮ್ಸ್ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.

    ಇಂಡಿಗೋ 6ಇ 096 ವಿಮಾನ ದುಬೈ ನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಬೆಂಗಳೂರು ಕಸ್ಟಮ್ಸ್ ವಿಭಾಗದ ಏರ್ ಇಂಟೆಲಿಜೆನ್ಸ್ ಯೂನಿಟ್ (AIU) ಅಧಿಕಾರಿಗಳಿಗೆ ವಿಮಾನದಲ್ಲಿ ಚಿನ್ನದ ಸ್ಮಗ್ಲಿಂಗ್ ನಡೆದಿರುವ ಬಗ್ಗೆ ಅನುಮಾನ ಬಂದಿದೆ. ಈ ವೇಳೆ ವಿಮಾನದಲ್ಲಿ ಪರಿಶೀಲನೆ ನಡೆಸಿದ್ದು, 29 ಚಿನ್ನದ ಕಡ್ಡಿಗಳು ಮತ್ತು ಪೇಸ್ಟ್ ರೂಪದ ಚಿನ್ನ ಪತ್ತೆಯಾಗಿದೆ. ಪಾಕೆಟ್ ನಲ್ಲಿ 599 ಗ್ರಾಂ. ಚಿನ್ನದ ಕಡ್ಡಿಗಳು ಮತ್ತು 701 ಗ್ರಾಂ. ಚಿನ್ನದ ಪೇಸ್ಟ್ ಇದ್ದು, ಒಟ್ಟು 61 ಲಕ್ಷ ರೂ. ಮೌಲ್ಯದ ಚಿನ್ನವನ್ನ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: 39 ಕೋಟಿ ತೆರಿಗೆ ಬಾಕಿ- ಬಿಬಿಎಂಪಿಯಿಂದ ಮಂತ್ರಿ ಮಾಲ್‍ಗೆ ಬೀಗ

    ವಿಮಾನದಿಂದ ಪ್ರಯಾಣಿಕರೆಲ್ಲ ನಿರ್ಗಮಿಸಿದ ನಂತರ ಅಧಿಕಾರಿಗಳು ವಿಮಾನವನ್ನು ತಪಾಸಣೆ ನಡೆಸಿದ್ದಾರೆ. ಈ ವೇಳೆ ಎಕಾನಾಮಿ ಕ್ಲಾಸ್ ನ ಸೀಟ್ ಕೆಳಗೆ ಪೊಟ್ಟಣವೊಂದು ಪತ್ತೆಯಾಗಿದ್ದು, ಪೊಟ್ಟಣವನ್ನ ಬಿಚ್ಚಿ ನೋಡಿದಾಗ 29 ಚಿನ್ನದ ಕಡ್ಡಿಗಳು ಮತ್ತು ಪೇಸ್ಟ್ ರೂಪದ ಚಿನ್ನ ಪತ್ತೆಯಾಗಿದೆ.

    ಪಾಕೆಟ್ ನಲ್ಲಿ 599 ಗ್ರಾಂ. ಚಿನ್ನದ ಕಡ್ಡಿಗಳು ಮತ್ತು 701 ಗ್ರಾಂ. ಚಿನ್ನದ ಪೇಸ್ಟ್ ಇದ್ದು ಒಟ್ಟು 61 ಲಕ್ಷ ಮೌಲ್ಯದ ಚಿನ್ನವನ್ನ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರೆಸಿರುವ ಅಧಿಕಾರಿಗಳು, ಪ್ರಯಾಣಿಕರ ಲಿಸ್ಟ್ ಪಡೆದುಕೊಂಡಿದ್ದಾರೆ. ಸ್ಮಗ್ಲರ್ ಗ್ಯಾಂಗ್ ತೆಗೆದುಕೊಳ್ಳಲು ಚಿನ್ನವನ್ನು ಸೀಟ್ ಕೆಳಗೆ ಬಿಟ್ಟು ಹೋಗಿರುವ ಅನುಮಾನದ ಮೇಲೆ ತನಿಖೆ ಮುಂದುವರಿದಿದೆ.

  • ಏರ್‌ಪೋರ್ಟಿನಲ್ಲಿ ಆತಂಕ ಸೃಷ್ಟಿಸಿದ ಅನುಮಾನಾಸ್ಪದ ಬ್ಯಾಗ್

    ಏರ್‌ಪೋರ್ಟಿನಲ್ಲಿ ಆತಂಕ ಸೃಷ್ಟಿಸಿದ ಅನುಮಾನಾಸ್ಪದ ಬ್ಯಾಗ್

    ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾರಸುದಾರರಿಲ್ಲದ ಅನುಮಾನಾಸ್ಪದ ಬ್ಯಾಗ್ ಒಂದು ಪತ್ತೆಯಾಗಿ ಕೆಲ ಕಾಲ ಆತಂಕ ಸೃಷ್ಟಿಯಾದ ಘಟನೆ ನಡೆಯಿತು.

    ವಿಮಾನ ನಿಲ್ದಾಣದ ಅರೈವಲ್ಸ್ ಗೇಟ್ ಬಳಿಯ ಲಗೇಜ್ ಸಾಗಿಸುವ ಟ್ರಾಲಿ ಮೇಲೆ ಬ್ಯಾಗ್ ಒಂದು ಯಾರೂ ವಾರಸುದಾರರಿಲ್ಲದೆ ಪತ್ತೆಯಾಗಿತ್ತು. ಇದನ್ನು ಗಮನಿಸಿದ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ, ಸಾಕಷ್ಟು ಸಮಯ ಕಾದರೂ ಬ್ಯಾಗ್ ತೆಗೆದುಕೊಳ್ಳಲು ಯಾರೂ ಬರಲಿಲ್ಲ. ಹೀಗಾಗಿ ಏಕಾಂಗಿಯಾಗಿದ್ದ ಬ್ಯಾಗ್ ಕಂಡ ಭದ್ರತಾ ಸಿಬ್ಬಂದಿ ಅನುಮಾನ ಪಡುವಂತಾಯಿತು.

    ಸ್ಥಳಕ್ಕೆ ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳದ ಯಂತ್ರದ ಮೂಲಕ ಭದ್ರತಾ ಸಿಬ್ಬಂದಿ ಅನುಮಾನಾಸ್ಪದ ಬ್ಯಾಗನ್ನು ಪರಿಶೀಲನೆ ನಡೆಸಿದರು. ಕೊನೆಗೆ ಯಾವುದೇ ಅನುಮಾನಾಸ್ಪದ ರೀತಿಯ ಸ್ಫೋಟಕ ವಸ್ತುಗಳಿಲ್ಲ ಎಂದು ಖಚಿತ ಪಡಿಸಿಕೊಂಡು ಟ್ರಾಲಿ ಸಮೇತ ಬ್ಯಾಗನ್ನು ಭದ್ರತಾ ಸಿಬ್ಬಂದಿ ತೆಗೆದುಕೊಂಡು ಹೋದರು. ಇನ್ನು ಭದ್ರತಾ ಸಿಬ್ಬಂದಿ ಕೊಂಡೊಯ್ದು ಬ್ಯಾಗ್ ವಿಮಾನ ನಿಲ್ದಾಣದ ಟರ್ಮಿನಲ್ ಮ್ಯಾನೇಜರ್ ಕಚೇರಿಗೆ ಕೊಡಲಾಗಿದೆ. ವಿಮಾನ ನಿಲ್ದಾಣದಲ್ಲಿ ಕೆಲ ಪ್ರಯಾಣಿಕರು ಆತುರದಲ್ಲಿ ಬ್ಯಾಗ್ ಬಿಟ್ಟು ಹೋಗುವ ಕಾರಣ ಈ ರೀತಿಯ ಘಟನೆಗಳು ಆಗಾಗ್ಗೆ ಸಂಭವಿಸುತ್ತಿರುತ್ತವೆ. ಆದರೆ ಯಾವುದೇ ಸಮಯದಲ್ಲೂ ನಿರ್ಲಕ್ಷ್ಯ ವಹಿಸುವಂತಿಲ್ಲ. ಏರ್‌ಪೋರ್ಟಿನಲ್ಲಿ ಭದ್ರತೆಯ ಹಿತದೃಷ್ಟಿಯಿಂದ ಪರಿಶೀಲನೆ ನಡೆಸಲಾಗುತ್ತದೆ.

  • ಕೆಂಪೇಗೌಡ ವಿಮಾನ ನಿಲ್ದಾಣದ ಹೆಸರು ಬದಲಾವಣೆ?

    – ದೇಶದ ಏರ್‍ಪೋರ್ಟ್‍ಗಳಿಗೆ ಇನ್ಮುಂದೆ ವ್ಯಕ್ತಿಗಳ ಹೆಸರಿಲ್ಲ
    – ಹೊಸ ಮಸೂದೆಗೆ ಕೇಂದ್ರ ಸರ್ಕಾರ ಸಿದ್ಧತೆ

    ಬೆಂಗಳೂರು: ಇನ್ಮುಂದೆ ವಿಮಾನ ನಿಲ್ದಾಣಗಳನ್ನ ಆಯಾ ಊರಿನ ಹೆಸರಿನಿಂದಲೇ ಕರೆಯಬೇಕು. ಇಷ್ಟು ದಿನ ಐತಿಹಾಸಿಕ ಪುರುಷರು, ಅಥವಾ ಗಣ್ಯ ವ್ಯಕ್ತಿಗಳ ಹೆಸರನಿಂದ ಕರೆಯುತ್ತಿದ್ದ ವಿಮಾನ ನಿಲ್ದಾಣಗಳ ಹೆಸರುಗಳು ಇತಿಹಾಸದ ಪುಟ ಸೇರಲಿವೆ. ಈ ಮೂಲಕ ಬೆಂಗಳೂರು ವಿಮಾನ ನಿಲ್ದಾಣವನ್ನು ಕೆಂಪೇಗೌಡ ಏರ್‍ಪೋರ್ಟ್ ಮಾಡಿದ್ದ ಮೋದಿ ಸರ್ಕಾರ, ಆ ಹೆಸರನ್ನ ಅಳಿಸೋಕೆ ಮುಂದಾಗಿದೆ.

    ಕೆಂಪೇಗೌಡ ಏರ್‍ಪೋರ್ಟ್, ಇಂದಿರಾಗಾಂಧಿ ಏರ್‍ಪೋರ್ಟ್, ರಾಜೀವ್ ಗಾಂಧಿ ಏರ್‍ಪೋರ್ಟ್, ಅಂಬೇಡ್ಕರ್ ಏರ್‍ಪೋರ್ಟ್ ಅನ್ನೋ ಹೆಸರುಗಳು ಇನ್ಮುಂದೆ ಮೆರಯಾಗಲಿದೆ. ಯಾಕಂದ್ರೆ ಕೇಂದ್ರ ಸರ್ಕಾರ ಹೊಸ ಮಸೂದೆಯೊಂದನ್ನ ಜಾರಿಗೆ ತರುತ್ತಿದೆ. ಯಾವುದೇ ವಿಮಾನ ನಿಲ್ದಾಣಗಳಿಗೆ ವ್ಯಕ್ತಿಗಳ ಹೆಸರನ್ನ ಇಡುವಂತಿಲ್ಲ ಅಂತ ಮಸೂದೆ ಸಿದ್ದಪಡಿಸಿದೆ. ಅಷ್ಟೇ ಅಲ್ಲದೆ ಈ ಮಸೂದೆಯಲ್ಲಿ ಪ್ರಸ್ತುತ ಇರೋ ವಿಮಾನ ನಿಲ್ದಾಣಗಳ ಹೆಸರನ್ನು ಬದಲಾವಣೆ ಮಾಡುವಂತಹ ನಿಯಮವನ್ನು ಅಳವಡಿಸಲಾಗಿದೆ. ಈ ಮಸೂದೆ ಅಂಗೀಕಾರವಾದಲ್ಲಿ ದೇಶದ 24 ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳ ಪೈಕಿ 14 ವಿಮಾನ ನಿಲ್ದಾಣಗಳ ಹೆಸರುಗಳನ್ನ ಬದಲಾಯಿಸಬೇಕಾಗುತ್ತದೆ.

    ಈಗಾಗಲೇ ಮಸೂದೆಯ ಸಿದ್ಧತೆ ಅಂತಿಮ ರೂಪಕ್ಕೆ ಬಂದಿದ್ದು ಇದೇ ಸಂಸತ್ ಅಧಿವೇಶನದಲ್ಲಿ ಅಥವಾ ಮುಂದಿನ ಅಧಿವೇಶನದಲ್ಲಿ ಮಂಡಿಸಲಾಗುವುದು ಅಂತ ಕೇಂದ್ರ ವಿಮಾನಯಾನ ರಾಜ್ಯ ಸಚಿವ ಜಯಂತ್ ಸಿನ್ಹಾ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಮೋದಿ ಸರ್ಕಾರವಿದ್ದಾಗಲೇ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರು ಬಂತು. ಈಗ ಅದೇ ಸರ್ಕಾರದ ಅವಧಿಯಲ್ಲಿ ಕೆಂಪೇಗೌಡರ ಹೆಸರು ಕಳೆದುಕೊಳ್ಳುವುದು ಸನ್ನಿಹಿತವಾಗ್ತಿದೆ.

    ಯಾಕೆ ಈ ಬದಲಾವಣೆ?: ಭಾರತದ ಗಣ್ಯರು, ರಾಜ್ಯದ ಪ್ರಸಿದ್ಧ ವ್ಯಕ್ತಿಗಳ ಹೆಸರಿನ ಬಗ್ಗೆ ಮಾಹಿತಿ ಇಲ್ಲದ ವಿದೇಶಿಯರಿಗೆ ನಿಲ್ದಾಣಗಳ ಹೆಸರನ್ನು ಗುರುತಿಸಲು ಕಷ್ಟವಾಗುತ್ತಿದ್ದ ಹಿನ್ನೆಲೆಯಲ್ಲಿ ಈ ಪ್ರಸ್ತಾಪವನ್ನು ಸಲ್ಲಿಸಲಾಗಿತ್ತು.

    ಉಗ್ರ ಹೋರಾಟ: ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ಉಗ್ರವಾಗಿ ಖಂಡಿಸಿರೋ ರಾಜ್ಯ ಒಕ್ಕಲಿಗರ ಸಂಘ, ಯಾವುದೇ ಕಾರಣಕ್ಕೂ ಕೇಂದ್ರ ಸರ್ಕಾರದ ಈ ಮಸೂದೆಯನ್ನು ಒಪ್ಪಲು ಸಾಧ್ಯವಿಲ್ಲ ಅಂತ ಹೇಳಿದೆ. ಬೆಂಗಳೂರಿನ ನಿರ್ಮಾತೃ ಕೆಂಪೇಗೌಡ. ಹಾಗಾಗಿ ಅವರ ಹೆಸರು ಇಡೀ ಪ್ರಪಂಚಕ್ಕೆ ಗೋತ್ತಾಗಬೇಕು ಅನ್ನೋ ದೃಷ್ಠಿಯಿಂದ ಆ ಹೆಸರನ್ನು ಇಡಲಾಗಿದೆ. ಅಕಸ್ಮಾತ್ ಸರ್ಕಾರ ಏನಾದ್ರೂ ಈ ಹೆಸರನ್ನು ಬದಲಾವಣೆ ಮಾಡಿದ್ರೆ ಉಗ್ರ ಹೋರಾಟ ಮಾಡಬೇಕಾಗುತ್ತೆ ಅಂತ ಸಂಘದ ನಿರ್ದೇಶಕ ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ.