Tag: Bengaluru Mysuru Express Way

  • ಎಕ್ಸ್‌ಪ್ರೆಸ್ ವೇಯಲ್ಲಿ ಕಾರುಗಳ ನಡುವೆ ಅಪಘಾತ – ಇಬ್ಬರು ಸಾವು, ನಾಲ್ವರು ಗಂಭೀರ

    ಎಕ್ಸ್‌ಪ್ರೆಸ್ ವೇಯಲ್ಲಿ ಕಾರುಗಳ ನಡುವೆ ಅಪಘಾತ – ಇಬ್ಬರು ಸಾವು, ನಾಲ್ವರು ಗಂಭೀರ

    ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ (Bengaluru-Mysuru Expressway) ಕಾರುಗಳ ನಡುವೆ ಭೀಕರ ಅಪಘಾತ ಉಂಟಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಂಡ್ಯ (Mandya) ಜಿಲ್ಲೆ ಮದ್ದೂರಿನ ನಿಡಘಟ್ಟ ಬಳಿ ನಡೆದಿದೆ.

    ಅಪಘಾತದಲ್ಲಿ ಮಸೂದ್ ಹಾಗೂ ಅಯಾನ್ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಖುಷಿ, ಚಿಕ್ಕು, ಮುಜಾಯಿದ್ ಪಾಷ, ಬಸವರಾಜು, ಪಾರ್ವತಿ ಗಂಭೀರ ಗಾಯಗೊಂಡಿದ್ದಾರೆ. ಬೆಂಗಳೂರಿನ ಕಡೆಯಿಂದ ಬರುತ್ತಿದ್ದ ಕಾರು ಡಿವೈಡರ್ ದಾಟಿ ಮಂಡ್ಯದ ಕಡೆಯಿಂದ ಬರುತ್ತಿದ್ದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಹಾಸನ| ನಿಲ್ಲಿಸಿದ್ದ ಕಾರಿನ ಡೋರ್‌ ತೆಗೆದು 6.30 ಲಕ್ಷ ಹಣ ಎಗರಿಸಿದ ಕಳ್ಳ

    ಅತಿವೇಗ ಮತ್ತು ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಭಾನುವಾರ ತಡರಾತ್ರಿ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ಹೈವೇ ರಸ್ತೆಯನ್ನು ಬಂದ್ ಮಾಡಿ ಸರ್ವಿಸ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಘಟನೆಯಲ್ಲಿ ಗಾಯಗೊಂಡ ಕೆಲವರಿಗೆ ಬೆಂಗಳೂರು ಹಾಗೂ ಇನ್ನೂ ಕೆಲವರಿಗೆ ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಕಾಲ್ತುಳಿತದಲ್ಲಿ ಗಾಯಗೊಂಡವರಿಗೆ ಡಿಸಿ ನೋಟಿಸ್ – ತನಿಖೆಗೆ ಹಾಜರಾಗುವಂತೆ 45 ಮಂದಿಗೆ ಸೂಚನೆ

  • ಬೆಂ-ಮೈ ಎಕ್ಸ್‌ಪ್ರೆಸ್‌ವೇನಲ್ಲಿ ಹೊತ್ತಿ ಉರಿದ ಬಸ್‌ – 18 ಪ್ರಯಾಣಿಕರು ಗ್ರೇಟ್‌ ಎಸ್ಕೇಪ್‌

    ಬೆಂ-ಮೈ ಎಕ್ಸ್‌ಪ್ರೆಸ್‌ವೇನಲ್ಲಿ ಹೊತ್ತಿ ಉರಿದ ಬಸ್‌ – 18 ಪ್ರಯಾಣಿಕರು ಗ್ರೇಟ್‌ ಎಸ್ಕೇಪ್‌

    ಮಂಡ್ಯ: ಚಲಿಸುತ್ತಿದ್ದ ಬಸ್‌ನ ಟೈಯರ್‌ ಬ್ಲಾಸ್ಟ್‌ ಆಗಿ ಖಾಸಗಿ ಬಸ್‌ವೊಂದು (Private Bus) ಧಗ ಧಗನೆ ಹೊತ್ತಿ ಉರಿದ ಘಟನೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ (Bengaluru Mysuru Expressway) ನಡೆದಿದೆ.

    ಮಂಡ್ಯದ (Mandya) ಸ್ಯಾಂಜೋ ಆಸ್ಪತ್ರೆ ಸಮೀಪ ಘಟನೆ ನಡೆದಿದ್ದು, 18 ಮಂದಿ ಪ್ರಯಾಣಿಕರು ಗ್ರೇಟ್‌ ಎಸ್ಕೇಪ್‌ ಆಗಿದ್ದಾರೆ. ಅಶೋಕ್ ಅಂಡ್ ಲಾಜೆಸ್ಟಿಕ್ ಟ್ರಾವೆಲ್ಸ್‌ಗೆ ಸೇರಿದ KA01 AL 5736 ಸಂಖ್ಯೆಯ ಬಸ್‌ ಬೆಂಗಳೂರಿನಿಂದ ಕಣ್ಣೂರಿಗೆ ತೆರಳುತ್ತಿದ್ದ ವೇಳೆ ಟೈಯರ್‌ ಬ್ಲಾಸ್ಟ್‌ ಆಗಿ ದುರಂತ ಸಂಭವಿಸಿದೆ. ಇದನ್ನೂ ಓದಿ: ಐಶ್ವರ್ಯ ಕೇಸಲ್ಲೀಗ ಪೊಲೀಸರಿಗೆ ಸಿಡಿಆರ್‌ ಸಂಕಷ್ಟ – ಎಸಿಪಿ ಚಂದನ್‌ಗೆ ಹೆಗಲಿಗೆ ತನಿಖೆ ಹೊಣೆ

    ಟೈಯರ್‌ ಬ್ಲಾಸ್ಟ್‌ ಆಗ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಎಚ್ಚೆತ್ತ ಚಾಲಕ ಕೂಡಲೇ ಬಸ್‌ ನಿಲ್ಲಿಸಿ ಪ್ರಯಾಣಿಕರನ್ನ ಕೆಳಗಿಳಿಸಿದ್ದಾರೆ. ಇದಾದ ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಬಸ್‌ ವ್ಯಾಪಿಸಿದೆ. ಇದನ್ನೂ ಓದಿ: ಬೆಂ-ಮೈ ಎಕ್ಸ್‌ಪ್ರೆಸ್‌ವೇನಲ್ಲಿ ಹೊತ್ತಿ ಉರಿದ ಬಸ್‌ – 18 ಪ್ರಯಾಣಿಕರು ಗ್ರೇಟ್‌ ಎಸ್ಕೇಪ್‌

    ವಿಚಾರ ತಿಳಿಯುತ್ತಿದ್ದಂತೆ ಮಂಡ್ಯ ಅಗ್ನಿಶಾಮಕ ದಳದ ಅಧಿಕಾರಿಗಳು, ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಡಿಎಸ್‌ಪಿ ರಾಘವೇಂದ್ರ ನೇತೃತ್ವದಲ್ಲಿ ಬೆಂಕಿ ನಂದಿಸಲಾಯಿತು. ಆದ್ರೆ ಅಗ್ನಿಶಾಮಕ ತಂಡ ಬೆಂಕಿ ನಂದಿಸುವಷ್ಟರಲ್ಲಿ ಬಸ್‌ ಬಹುತೇಕ ಸುಟ್ಟು ಕರಕಲಾಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

    ಬಳಿಕ ಟ್ರಾವೆಲ್ಸ್ ಸಂಸ್ಥೆ ಪ್ರಯಾಣಿಕರಿಗೆ ಬೇರೆ ಬಸ್ ವ್ಯವಸ್ಥೆ ಮಾಡಿ ಕಳುಹಿಸಿದೆ. ಮಂಡ್ಯದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ನಾಳೆಯಿಂದ ಏರೋ ಇಂಡಿಯಾ ಶೋ – ಬಾನಂಗಳದಲ್ಲಿ ಮೋಡಿ ಮಾಡಲಿವೆ ಲೋಹದ ಹಕ್ಕಿಗಳು

  • ಮಂಡ್ಯ | ನಿಂತಿದ್ದ ಕಂಟೈನರ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ – 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

    ಮಂಡ್ಯ | ನಿಂತಿದ್ದ ಕಂಟೈನರ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ – 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

    – ಸರ್ಕಾರ ಶಕ್ತಿ ಯೋಜನೆ ನಿಲ್ಲಿಸಬೇಕು ಎಂದು ವಿದ್ಯಾರ್ಥಿಗಳ ಆಕ್ರೋಶ

    ಮಂಡ್ಯ: ನಿಂತಿದ್ದ ಕಂಟೈನರ್‌ಗೆ ಕೆಎಸ್‌ಆರ್‌ಟಿಸಿ (KSRTC) ಬಸ್ ಡಿಕ್ಕಿ ಹೊಡೆದಿದ್ದು, 20ಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಸಾಂಜೋ ಆಸ್ಪತ್ರೆ (Sanjo Hospital) ಬಳಿ ನಡೆದಿದೆ.

    ಬೆಂಗಳೂರು-ಮೈಸೂರು (Bengaluru-Mysuru) ದಶಪತ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು, ಬೆಂಗಳೂರು ಕಡೆಯಿಂದ ಮಂಡ್ಯಕ್ಕೆ ತೆರಳುತ್ತಿದ್ದ ಬಸ್ ಎಕ್ಸ್‌ಪ್ರೆಸ್‌ ವೇ ನಿಂದ ಸರ್ವಿಸ್ ರಸ್ತೆಗೆ ಬರುತ್ತಿದ್ದ ವೇಳೆಯಲ್ಲಿ ಈ ಅವಘಡ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬಸ್ ಪಲ್ಟಿ ಹೊಡೆದಿದೆ.ಇದನ್ನೂ ಓದಿ: ಜನಾರ್ದನ ರೆಡ್ಡಿಗೆ ಸುಪ್ರೀಂ ರಿಲೀಫ್ – ಬಳ್ಳಾರಿ ಪ್ರವೇಶಕ್ಕೆ ಇದ್ದ ನಿರ್ಬಂಧ ತೆರವು

    ಬೆಳಿಗ್ಗೆ 9:50ಕ್ಕೆ ಅಪಘಾತ ಸಂಭವಿಸಿದೆ. ಅಪಘಾತದ ವೇಳೆ ಬಸ್‌ನಲ್ಲಿ 80ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದು, ಕಾಲೇಜು ವಿದ್ಯಾರ್ಥಿಗಳೇ ಹೆಚ್ಚು ಪ್ರಯಾಣ ಮಾಡುತ್ತಿದ್ದರು. 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗೊಂಡಿದ್ದು, 30ಕ್ಕೂ ಹೆಚ್ಚು ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳ ಪೈಕಿ ವಿದ್ಯಾರ್ಥಿಗಳೇ ಹೆಚ್ಚು ಗಾಯಗೊಂಡಿದ್ದು, ಜಿಲ್ಲೆಯ ಮಿಮ್ಸ್ ಆಸ್ಪತ್ರೆಗೆ (MIMS Hospital) ರವಾನಿಸಲಾಗಿದೆ. ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.

    ಬಸ್ ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿನಿ ಅನುಷಾ ಮಾತನಾಡಿ, ಮೊದಲು ಫ್ರೀ ಬಸ್ ಯೋಜನೆ ನಿಲ್ಲಿಸಿ. ಶಕ್ತಿ ಯೋಜನೆಯಿಂದ ಬಸ್‌ಗಳು ಸಿಕ್ಕಾಪಟ್ಟೆ ರಶ್ ಆಗುತ್ತಿವೆ. ಇವತ್ತು ಕೂಡ ಬಸ್‌ನಲ್ಲಿ 60-70 ಪ್ರಯಾಣಿಕರಿದ್ದರು. ಬಸ್ ಓವರ್ ಸ್ಪೀಡ್‌ನಲ್ಲಿದ್ದ ಕಾರಣ ನಿಯಂತ್ರಣ ಸಿಗದೇ ಪಲ್ಟಿಯಾಯಿತು. ಬಸ್ ಒಳಗಿದ್ದ ನಾವೆಲ್ಲರು ಗಾಬರಿಯಾಗಿದ್ದೆವು. ಕಿಟಕಿ ಗಾಜು ಒಡೆದು ಯುವಕರು ಹೊರಬಂದಿದ್ದು, ಸ್ಥಳೀಯರು ನಮ್ಮನ್ನೆಲ್ಲಾ ರಕ್ಷಿಸಿದ್ದಾರೆ. ಸರ್ಕಾರ ಮೊದಲು ಶಕ್ತಿ ಯೋಜನೆ ನಿಲ್ಲಿಸಬೇಕು ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು,

    ಬಸ್ ಪಲ್ಟಿ ಹೊಡೆದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅತಿವೇಗದ ಹಿನ್ನೆಲೆ ತಿರುವು ಇದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್‌ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾಗಿದೆ. ಇದೇ ವೇಳೆ ಎದುರಿಗೆ ಬರುತ್ತಿದ್ದ ಬೈಕ್ ಸವಾರ ಕ್ಷಣಾರ್ಧದಲ್ಲಿ ಪಾರಾಗಿದ್ದಾನೆ.

    ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ.ಇದನ್ನೂ ಓದಿ: ಧಾರಾಕಾರ ಮಳೆಯಿಂದಾಗಿ ಹಳ್ಳದಲ್ಲಿ ಕೊಚ್ಚಿ ಹೋದ ಯುವಕರು – ಓರ್ವನ ಶವ ಪತ್ತೆ

  • ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ – ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದುರ್ಮರಣ

    ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ – ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದುರ್ಮರಣ

    – ಕಾರು ಚಾಲಕ ಗಂಭೀರ

    ರಾಮನಗರ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ (Bengaluru-Mysuru Expressway) ತಡರಾತ್ರಿ ಭೀಕರ ಅಪಘಾತ (Accident) ಸಂಭವಿಸಿದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು (Engineering Students) ಸಾವನ್ನಪ್ಪಿರುವ ಘಟನೆ ರಾಮನಗರ (Ramanagara) ತಾಲೂಕಿನ ಕಪನಯ್ಯನದೊಡ್ಡಿ ಬಳಿ ನಡೆದಿದೆ.

    ಮೈಸೂರಿನಿಂದ ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಫಾರ್ಚುನರ್ ಕಾರು ಓವರ್ ಟೇಕ್ ಮಾಡಲು ಹೋಗಿ ಲಾರಿಗೆ (Lorry) ಹಿಂಭಾಗದಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಡಿಕ್ಕಿ ರಭಸಕ್ಕೆ ಕಾರಿನಲ್ಲಿದ್ದ ವಿಶ್ವ (21) ಮತ್ತು ಸೂರ್ಯ (21) ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ ಸುಹಾಸ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ನಾನು ಶೆಡ್‌ನಿಂದ ಬಂದ ಮೇಲೆ ಇವ್ರೆಲ್ಲಾ ಸೇರಿ ಹಿಂಗೆ ಮಾಡಿ ನನ್‌ ತಲೆಗೆ ತಂದಿದ್ದಾರೆ: ದರ್ಶನ್‌ ಅಳಲು

    ಆಂಧ್ರ ಮೂಲದ ವಿದ್ಯಾರ್ಥಿಗಳು ಬೆಂಗಳೂರಿನ ವಿದ್ಯಾರಣ್ಯಪುರದ ಖಾಸಗಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ. ಕಾರ್ಯನಿಮಿತ್ತ ಮೈಸೂರಿಗೆ ಹೋಗಿ ಬೆಂಗಳೂರಿಗೆ ವಾಪಸ್ಸಾಗುವ ಸಂದರ್ಭ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಹತ್ಯೆಯಾದ ರೇಣುಕಾಸ್ವಾಮಿ ಮನೆಗೆ ಇಂದು ಚಲನಚಿತ್ರ ವಾಣಿಜ್ಯ ಮಂಡಳಿ ಭೇಟಿ

  • ಎಕ್ಸ್‌ಪ್ರೆಸ್‌ ವೇಯಲ್ಲಿ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು- ನಾಲ್ವರು ಗಂಭೀರ

    ಎಕ್ಸ್‌ಪ್ರೆಸ್‌ ವೇಯಲ್ಲಿ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು- ನಾಲ್ವರು ಗಂಭೀರ

    ರಾಮನಗರ: ನಿಯಂತ್ರಣ ತಪ್ಪಿ ಕಾರೊಂದು (Car) ಹೆದ್ದಾರಿ ಪಕ್ಕದ ಕೆರೆಗೆ ಬಿದ್ದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ಬೆಂಗಳೂರು-ಮೈಸೂರು ದಶಪಥ (Express Way) ಹೆದ್ದಾರಿಯಲ್ಲಿ ನಡೆದಿದೆ.

    ಬೆಂಗಳೂರಿನಿಂದ (Bengaluru) ಸ್ಕೋಡಾ ಕಾರು ಮೈಸೂರು ಕಡೆಗೆ ಹೋಗುತ್ತಿತ್ತು. ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗೇಟ್ ಬಳಿ ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಬರುವ ವೇಳೆ ಘಟನೆ ನಡೆದಿದೆ. ಫಿಲ್ಮೀ ಸ್ಟೈಲ್‌ನಲ್ಲಿ ಕಾರು ಕೆರೆಗೆ ಬಿದ್ದಿದ್ದು, ಓವರ್ ಸ್ಪೀಡ್‌ನಿಂದಾಗಿ (Over Speed) ಸರ್ವಿಸ್ ರಸ್ತೆಗೆ ಬರುವ ವೇಳೆ ಕಾರು ಕೆರೆಗೆ ಹಾರಿದೆ. ಘಟನೆಯಲ್ಲಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಕುಮಾರ್ ಬಂಗಾರಪ್ಪ ನಿವಾಸಕ್ಕೆ ಶಿವಣ್ಣ ಅಭಿಮಾನಿಗಳಿಂದ ಮುತ್ತಿಗೆ

    ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಇಂದಿನಿಂದ ಜೂನ್ 12 ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯ ಎಚ್ಚರಿಕೆ

  • ಬೆಂ-ಮೈ ದಶಪಥ ಹೆದ್ದಾರಿಯಲ್ಲಿ ಕಾರು ಅಪಘಾತ – RBI ನೌಕರ ಸಾವು

    ಬೆಂ-ಮೈ ದಶಪಥ ಹೆದ್ದಾರಿಯಲ್ಲಿ ಕಾರು ಅಪಘಾತ – RBI ನೌಕರ ಸಾವು

    ರಾಮನಗರ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ (Bengaluru Mysuru Expressway) ಅಪಘಾತ (Accident) ಸಂಭವಿಸಿ ಆರ್‌ಬಿಐ ನೌಕರ (RBI employee) ಸಾವನ್ನಪ್ಪಿರುವ ಘಟನೆ ರಾಮನಗರ (Ramanagara) ಬಳಿಯ ಜೈಪುರ ಗೇಟ್ ಬಳಿ ನಡೆದಿದೆ.

    ಮೈಸೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಆರ್‌ಬಿಐ ನೌಕರ ಜಗದೀಶ್ (48) ಮೃತಪಟ್ಟಿದ್ದಾರೆ. ಪತ್ನಿ ನಂದಿತಾ ಹಾಗೂ ಇಬ್ಬರು ಮಕ್ಕಳೊಂದಿಗೆ ಕ್ರೆಟಾ ಕಾರಿನಲ್ಲಿ ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಬ್ಬಿಣದ ಬೇಲಿಗೆ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಹರಿದು ಪೊಲೀಸ್ ಪೇದೆ ಸಾವು

    ಡಿಕ್ಕಿ ರಭಸಕ್ಕೆ ಕಾರು ಸರ್ವಿಸ್ ರಸ್ತೆಗೆ ಉರುಳಿದ್ದು, ಜಗದೀಶ್ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಜಗದೀಶ್ ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ರಾಮನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಯೋಗದಿಂದ ಪರಿವರ್ತನೆ – ಅಂದು ಖೈದಿಯಾಗಿದ್ದಾತ ಈಗ ಯೋಗ ಗುರು

  • ಬೆಂ-ಮೈಸೂರು ಎಕ್ಸ್‌ಪ್ರೆಸ್‌ ಹೈವೇನಲ್ಲಿ ಮತ್ತೊಂದು ಭೀಕರ ಅಪಘಾತ – ಓರ್ವ ಸಾವು

    ಬೆಂ-ಮೈಸೂರು ಎಕ್ಸ್‌ಪ್ರೆಸ್‌ ಹೈವೇನಲ್ಲಿ ಮತ್ತೊಂದು ಭೀಕರ ಅಪಘಾತ – ಓರ್ವ ಸಾವು

    – ಮೂವರಿಗೆ ಗಂಭೀರ ಗಾಯ

    ರಾಮನಗರ: ವೇಗವಾಗಿ ಚಲಿಸುತ್ತಿದ್ದ ಕಾರು ಡಿವೈಡರ್‌ಗೆ ಡಿಕ್ಕಿಹೊಡೆದ ಪರಿಣಾಮ ಚಾಲಕ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ (Bengaluru Mysuru Express Way) ನಡೆದಿದೆ.

    ಚನ್ನಪಟ್ಟಣ ತಾಲೂಕಿನ ಕೋಲೂರು ಗೇಟ್ ಬಳಿಯ ಚಾಮುಂಡೇಶ್ವರಿ ಆಸ್ಪತ್ರೆ ಮುಂಭಾಗ ಅಪಘಾತ (Road Accident) ಸಂಭವಿಸಿದ್ದು, ಮದ್ದೂರು ಮೂಲದ ಚಾಲಕ ಮಂಜೇಶ್ (28) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡು, ಚಾಮುಂಡೇಶ್ವರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಮೈಸೂರು ಮಾರ್ಗದಿಂದ ಬರುತ್ತಿದ್ದ ಟಾಟಾ ಇಂಡಿಕಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಅಳವಡಿಸಿದ್ದ ಡಿವೈಡರ್‌ಗೆ ಡಿಕ್ಕಿಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.  ಇದನ್ನೂ ಓದಿ: ಬೆಂ-ಮೈಸೂರು ಎಕ್ಸ್‌ಪ್ರೆಸ್ ಹೈವೇನಲ್ಲಿ ಭಯಾನಕ ಅಪಘಾತ- 5 ತಿಂಗಳಲ್ಲೇ 55 ಮಂದಿ ಸಾವು!

    ಇನ್ನೂ ರಸ್ತೆ ಅಪಘಾತದ ಹಿನ್ನೆಲೆಯಲ್ಲಿ ಬೆಂ-ಮೈಸೂರು ಎಕ್ಸ್‌ಪ್ರೇಸ್‌ವೇನಲ್ಲಿ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಅಪಘಾತದಿಂದಾಗಿ ಕೆಲಕಾಲ ಟ್ರಾಫಿಕ್‌ಜಾಮ್ ಆಗಿ ಪ್ರಯಾಣಿಕರು ಪರದಾಡುವಂತಾಗಿತ್ತು. ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು (Channapattana Rural Police) ಭೇಟಿ ನೀಡಿ ಸಂಚಾರ ಸುಗಮಗೊಳಿಸಿದರು.

    ಚನ್ನಪಟ್ಟಣ ಸಂಚಾರ ಪೊಲೀಸ್ ಠಾಣೆಯಲ್ಲಿ (Channapattana Traffic Police) ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮುಂಬೈ, ದೆಹಲಿಯಷ್ಟೇ ಅಲ್ಲ ಬೆಂಗ್ಳೂರಲ್ಲೂ ಹೆಚ್ಚಾಗ್ತಿದೆ ಲಿವಿಂಗ್ ರಿಲೇಷನ್ ಕೊಲೆ ಕೇಸ್