Tag: Bengaluru-Mysuru Expressway

  • ಎಕ್ಸ್‌ಪ್ರೆಸ್ ವೇಯಲ್ಲಿ ತಮಿಳುನಾಡು ಪಿಎಸ್‌ಐ ದರೋಡೆ ಪ್ರಕರಣ – ಮೂವರು ಆರೋಪಿಗಳು ಅರೆಸ್ಟ್

    ಎಕ್ಸ್‌ಪ್ರೆಸ್ ವೇಯಲ್ಲಿ ತಮಿಳುನಾಡು ಪಿಎಸ್‌ಐ ದರೋಡೆ ಪ್ರಕರಣ – ಮೂವರು ಆರೋಪಿಗಳು ಅರೆಸ್ಟ್

    ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇಯಲ್ಲಿ (Bengaluru-Mysuru Expressway) ವಾಹನ ಅಡ್ಡಗಟ್ಟಿ ತಮಿಳುನಾಡು ಮೂಲದ ಪಿಎಸ್‌ಐ (Tamil Nadu PSI) ದರೋಡೆ ಮಾಡಿದ್ದ ಪ್ರಕರಣ ಸಂಬಂಧ ಮೂವರು ದರೋಡೆಕೋರರನ್ನ ಬಂಧಿಸುವಲ್ಲಿ ಚನ್ನಪಟ್ಟಣ (Channapatna) ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.

    ಸೈಯದ್ ತನ್ವೀರ್ (30), ಫೈರೋಜ್ ಪಾಷ (28), ತನ್ವೀರ್ ಪಾಷ (32) ಬಂಧಿತ ಆರೋಪಿಗಳು. ಕಳೆದ ಮಂಗಳವಾರ ಬೆಂ-ಮೈ ಎಕ್ಸ್‌ಪ್ರೆಸ್ ಹೈವೇಯ ಚನ್ನಪಟ್ಟಣ ಬೈಪಾಸ್‌ನ ಲಂಬಾಣಿತಾಂಡ್ಯದ ಬಳಿ ದರೋಡೆ ಮಾಡಲಾಗಿತ್ತು. ಕಾರು ನಿಲ್ಲಿಸಿ ರೆಸ್ಟ್ ಮಾಡುತ್ತಿದ್ದ ತಮಿಳುನಾಡು ಚೀರಂಬಾಡಿ ಪೊಲೀಸ್ ಠಾಣೆ ಪಿಎಸ್‌ಐ ಶಾಜಿನ್ ದಂಪತಿಗೆ ಚಾಕು ತೋರಿಸಿದ ದರೋಡೆಕೋರರು, 16 ಗ್ರಾಂ ಚಿನ್ನದ ಸರ, 10 ಸಾವಿರ ನಗದು ಹಾಗೂ ಎರಡು ಮೊಬೈಲ್ ದರೋಡೆ ಮಾಡಿ ಎಸ್ಕೇಪ್ ಆಗಿದ್ದರು. ಇದನ್ನೂ ಓದಿ: ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್‌ ರೇಪ್‌; ಬಂಗಾಳದಲ್ಲಿ ಮತ್ತೊಂದು ಕ್ರೂರ ಘಟನೆ

    ಈ ಸಂಬಂಧ ಚನ್ನಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪಿಎಸ್‌ಐ ಶಾಜಿನ್ ದೂರು ದಾಖಲಿಸಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಒಂದು ದ್ವಿಚಕ್ರ ವಾಹನ ಹಾಗೂ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಪ್ರಧಾನಿ ಮೋದಿಯಿಂದ ರೈತರಿಗೆ ಬಿಗ್ ಗಿಫ್ಟ್ – 35 ಸಾವಿರ ಕೋಟಿ ಮೌಲ್ಯದ ಯೋಜನೆಗಳಿಗೆ ಚಾಲನೆ

  • ಸಾಧನಾ ಸಮಾವೇಶ ಮುಗಿಸಿ ವಾಪಸ್‌ ಬರುವಾಗ ಡಿಕೆಶಿ ಬೆಂಗಾವಲು ವಾಹನ ಪಲ್ಟಿ – ಪ್ರಾಣಾಪಾಯದಿಂದ ಪಾರು

    ಸಾಧನಾ ಸಮಾವೇಶ ಮುಗಿಸಿ ವಾಪಸ್‌ ಬರುವಾಗ ಡಿಕೆಶಿ ಬೆಂಗಾವಲು ವಾಹನ ಪಲ್ಟಿ – ಪ್ರಾಣಾಪಾಯದಿಂದ ಪಾರು

    ಮಂಡ್ಯ: ಮೈಸೂರಿನಲ್ಲಿ ನಡೆಯುತ್ತಿದ್ದ ಸಾಧನಾ ಸಮಾವೇಶ ಮುಗಿಸಿ ಬೆಂಗಳೂರಿಗೆ ವಾಪಸ್‌ ತೆರಳುತ್ತಿದ್ದ ವೇಳೆ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರ ಬೆಂಗಾವಲು ವಾಹನ ಪಲ್ಟಿಯಾಗಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ (Bengaluru Mysuru Expressway) ನಡೆದಿದೆ.

    ಮಂಡ್ಯ (Mandya) ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ವ್ಯಾಪ್ತಿಯ ಗೌಡಹಳ್ಳಿ ಟಿಎಂ ಹೊಸೂರು ಬಳಿಯ ಎಕ್ಸ್‌ಪ್ರೆಸ್‌ವೇನಲ್ಲಿ ಘಟನೆ ನಡೆದಿದೆ. ಬೆಂಗಾವಲು ವಾಹನ ಪಲ್ಟಿಯಾಗಿದ್ದು, ಇಬ್ಬರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ನಮ್ಮ ಸರ್ಕಾರ ದೇವರ ಮನೆಯಿದ್ದಂತೆ, ಸಿದ್ದರಾಮಯ್ಯ ನಮ್ಮೆಲ್ಲರ ನಾಯಕ: ಡಿಕೆಶಿ

    ಮೈಸೂರಿನ ಸಾಧನಾ ಸಮಾವೇಶಕ್ಕೆ ತೆರಳಿದ್ದ ಡಿಕೆಶಿ ಬೆಂಗಳೂರಿಗೆ ವಾಪಸ್‌ ತೆರಳುತ್ತಿದ್ದರು. ಈ ವೇಳೆ ಡಿಕೆಶಿ ಬೆಂಗಾವಲು ವಾಹನ ಹೊಸೂರು ಬಳಿಯ ಎಕ್ಸ್‌ಪ್ರೆಸ್‌ವೇ ಬಳಿ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಎಸ್ಕಾರ್ಟ್‌ ವಾಹನದಲ್ಲಿದ್ದ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅದೃಷ್ಟವಶಾತ್‌ ಹಿಂದೆಯೇ ಇದ್ದ ಡಿಕೆಶಿ ಕಾರಿಗೆ ಯಾವುದೇ ಅಪಾಯ ಆಗಿಲ್ಲ, ಘಟನೆ ಬಳಿಕ ಬಳಿಕ ಬೆಂಗಳೂರಿಗೆ ಸೇಫಾಗಿ ಪ್ರಯಾಣ ಮಾಡಿದ್ದಾರೆ. ಇದನ್ನೂ ಓದಿ: ಜು.23-26ರವರೆಗೆ ಪ್ರಧಾನಿ ಮೋದಿ ಬ್ರಿಟನ್, ಮಾಲ್ಡೀವ್ಸ್‌ಗೆ ಭೇಟಿ

  • ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ತಡೆಗೋಡೆಗೆ ಕಾರು ಡಿಕ್ಕಿ – ನಾಲ್ವರ ದುರ್ಮರಣ

    ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ತಡೆಗೋಡೆಗೆ ಕಾರು ಡಿಕ್ಕಿ – ನಾಲ್ವರ ದುರ್ಮರಣ

    ರಾಮನಗರ: ಬೆಂಗಳೂರು – ಮೈಸೂರು ದಶಪಥ ಹೆದ್ದಾರಿಯಲ್ಲಿ (Bengaluru-Mysuru Expressway) ತಡೆಗೋಡೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ರಾಮನಗರ (Ramanagara) ತಾಲೂಕಿನ ಜಯಪುರ ಗೇಟ್ ಸಮೀಪ ನಡೆದಿದೆ.

    ಕೆಆರ್ ಪೇಟೆ ಮೂಲದ ಮುತ್ತುರಾಜು (55), ತಮ್ಮನಗೌಡ (27), ಸಂಜು (28) ಹಾಗೂ ಚಾಲಕ‌ ಸಚಿನ್‌(27) ಮೃತ ದುರ್ದೈವಿಗಳು. ಮೈಸೂರಿನಿಂದ ಬೆಂಗಳೂರು ಕಡೆಗೆ ಹೋಗ್ತಿದ್ದ ಸ್ವಿಫ್ಟ್ ಕಾರು, ಚಾಲಕನ ನಿದ್ರೆಯ ಮಂಪರಿನಿಂದ ಹೆದ್ದಾರಿಯಲ್ಲಿನ ತಡೆಗೋಡೆಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ – ಕೋರ್ಟ್ ಮೊರೆಹೋದ ಆಡಳಿತ ಮಂಡಳಿ

    ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ವ್ಯಕ್ತಿ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಮಂತ್ರಾಲಯ | ಸ್ನಾನಘಟ್ಟದ ಬಳಿ ಈಜಲು ಹೋಗಿದ್ದ ಮೂವರು ಯುವಕರು ನಾಪತ್ತೆ

  • ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಗೆ ಹೊಸ ಎಂಟ್ರಿ-ಎಕ್ಸಿಟ್!

    ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಗೆ ಹೊಸ ಎಂಟ್ರಿ-ಎಕ್ಸಿಟ್!

    – ಸಂಸದರು, ಶಾಸಕರಿಂದ ಸ್ಥಳ ಪರಿಶೀಲನೆ

    ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಗೆ (Bengaluru-Mysuru Expressway) ಹೊಸ ಎಂಟ್ರಿ-ಎಕ್ಸಿಟ್ (Entry-Exit) ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ರಾಮನಗರ-ಚನ್ನಪಟ್ಟಣ ನಡುವಿನ ಕಣ್ವ ಡ್ಯಾಂ ಜಂಕ್ಷನ್‌ನಲ್ಲಿ (Kanva Dam Junction) ಎಂಟ್ರಿ-ಎಕ್ಸಿಟ್ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಲಾಗಿದೆ. ಈ ಹಿನ್ನೆಲೆ ಇಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ.ಮಂಜುನಾಥ್ ಹಾಗೂ ಶಾಸಕ ಸಿ.ಪಿ.ಯೋಗೇಶ್ವರ್ ಸ್ಥಳ ಪರಿಶೀಲನೆ ನಡೆಸಿದರು.

    ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆ ಸ್ಥಳ ವೀಕ್ಷಣೆ ಮಾಡಿ ಹೊಸ ಎಂಟ್ರಿ-ಎಕ್ಸಿಟ್‌ನಿಂದಾಗುವ ಅನುಕೂಲಗಳ ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಡಾ.ಮಂಜುನಾಥ್ (Dr Manjunath), ಪ್ರವಾಸಿಗರು ಹಾಗೂ ವಾಹನ ಸವಾರರ ಅನುಕೂಲಕ್ಕಾಗಿ ಹೊಸ ಎಂಟ್ರಿ ಹಾಗೂ ಎಕ್ಸಿಟ್‌ಗೆ ಹೆದ್ದಾರಿ ಪ್ರಾಧಿಕಾರ ಅನುಮತಿ ನೀಡಿದೆ. ಚನ್ನಪಟ್ಟಣದ ರಾಂಪುರದ ಬಳಿ ಇದಕ್ಕೆ ಜಾಗ ಗುರುತಿಸಲಾಗಿತ್ತು. ಆದರೆ ಅಲ್ಲಿ ಸೂಕ್ತ ಜಾಗ ಇಲ್ಲದ್ದಕ್ಕೆ ಕಣ್ವ ಜಂಕ್ಷನ್ ಬಳಿ ಜಾಗ ಗುರುತು ಮಾಡಲಾಗಿದೆ. ಹಾಗಾಗಿ ಸ್ಥಳೀಯ ಶಾಸಕರು ಹಾಗೂ ಎನ್‌ಹೆಚ್‌ಎಐ (NHAI) ಅಧಿಕಾರಿಗಳ ಜೊತೆ ಸ್ಥಳ ಪರಿಶೀಲನೆ ಮಾಡಲಾಗಿದೆ. ಕಣ್ವ ಜಂಕ್ಷನ್‌ನಲ್ಲಿ ಎಕ್ಸಿಟ್-ಎಂಟ್ರಿ ನಿರ್ಮಾಣ ಆದರೆ ಪ್ರವಾಸೋದ್ಯಮಕ್ಕೂ ಅನುಕೂಲ. ಕಣ್ವ ಡ್ಯಾಂ, ಕೆಂಗಲ್ ಆಂಜನೇಯನ ದೇವಾಲಯ ಹಾಗೂ ಬೆಂ-ಮೈ ಹಳೇ ಹೆದ್ದಾರಿಗೆ ನೇರ ಸಂಪರ್ಕ ಕಲ್ಪಿಸುತ್ತದೆ. ಶೀಘ್ರದಲ್ಲೇ ಮೂರು ಕಡೆಗಳಲ್ಲಿ ಸ್ಕೈವಾಕ್ ಕಾಮಗಾರಿ ಸಂಪೂರ್ಣ ಆಗಲಿದೆ. ಚನ್ನಪಟ್ಟಣದ ಬಳಿ ಟಾಯ್ಸ್ ಪಾರ್ಕ್ ಕೂಡಾ ಬರಲಿದೆ. ಅದಕ್ಕೂ ಈಗಾಗಲೇ ಜಾಗ ಗುರುತು ಮಾಡಲಾಗಿದೆ. ಎಕ್ಸ್‌ಪ್ರೆಸ್ ಹೈವೇಯ ಎಲ್ಲಾ ಸಮಸ್ಯೆಗಳನ್ನ ಹಂತಹಂತವಾಗಿ ಬಗೆಹರಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಚೀನಾದ ಹೋಟೆಲ್‌ನಲ್ಲಿ ಭಾರೀ ಬೆಂಕಿ – 22 ಮಂದಿ‌ ಸಾವು, ಮೂವರಿಗೆ ಗಾಯ

    ಇನ್ನೂ ಇದೇವೇಳೆ ಪಹಲ್ಗಾಮ್ ದಾಳಿಗೆ ಕೇಂದ್ರದ ಭದ್ರತಾ ವೈಫಲ್ಯ ಕಾರಣ ಎಂಬ ವಿಪಕ್ಷಗಳ ಆರೋಪ ವಿಚಾರ ಕುರಿತು ಮಾತನಾಡಿ, ಈ ಸಂದರ್ಭದಲ್ಲಿ ಘಟನೆಗೆ ಯಾವ ರೀತಿ ಪ್ರತಿಕ್ರಿಯೆ ನೀಡಬೇಕು ಎಂಬುದು ಮುಖ್ಯ. ಈ ಕ್ಷಣಕ್ಕೆ ಭಯೋತ್ಪಾದನೆ ಹಾಗೂ ಭಯೋತ್ಪಾದಕರಿಗೆ ತಕ್ಕಪಾಠ ಕಲಿಸುವ ಬಗ್ಗೆ ಯೋಚನೆ ಮಾಡಬೇಕು. ಮಿಕ್ಕಿದ್ದೆಲ್ಲ ಆಮೇಲೆ ಮಾತನಾಡಬಹುದು. ಯುದ್ಧ ಎಂಬುದು ಸೂಕ್ಷ್ಮವಾದ ವಿಚಾರ. ಅದರ ಬಗ್ಗೆ ಎಲ್ಲೆಂದರಲ್ಲಿ ಚರ್ಚೆ ಮಾಡೋದು ಸೂಕ್ತ ಅಲ್ಲ ಎಂದರು. ಇದನ್ನೂ ಓದಿ: ಗಡಿಜಿಲ್ಲೆ ಬೀದರ್‌ನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ – ನೆಲಕ್ಕುರುಳಿದ ಬೃಹತ್ ಮರ

  • ಚನ್ನಪಟ್ಟಣ ಬೊಂಬೆ ಉದ್ಯಮಕ್ಕೆ ಮರುಜೀವ ನೀಡುವಂತೆ ಡಾ. ಮಂಜುನಾಥ್ ಮನವಿಗೆ ಸ್ಮಂದಿಸಿದ ಕೇಂದ್ರ

    ಚನ್ನಪಟ್ಟಣ ಬೊಂಬೆ ಉದ್ಯಮಕ್ಕೆ ಮರುಜೀವ ನೀಡುವಂತೆ ಡಾ. ಮಂಜುನಾಥ್ ಮನವಿಗೆ ಸ್ಮಂದಿಸಿದ ಕೇಂದ್ರ

    -ಶೀಘ್ರದಲ್ಲೇ ಟಾಯ್ಸ್ ಪಾರ್ಕ್ ನಿರ್ಮಾಣಕ್ಕೆ ಸ್ಥಳ ಗುರುತಿಸುವ ಭರವಸೆ – ನಿತಿನ್ ಗಡ್ಕರಿ

    ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ (Bengaluru-Mysuru Expressway) ನಿರ್ಮಾಣದ ಬಳಿಕ ಚನ್ನಪಟ್ಟಣಕ್ಕೆ ಬರುತ್ತಿದ್ದ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ. ಪ್ರವಾಸಿಗರ ಇಳಿಮುಖದಿಂದಾಗಿ ಚನ್ನಪಟ್ಟಣ ಬೊಂಬೆ ಉದ್ಯಮಕ್ಕೆ ದೊಡ್ಡ ಹೊಡೆತ ಬಿದ್ದಿದ್ದು, ಸದ್ಯ ಎಕ್ಸ್‌ಪ್ರೆಸ್‌ ವೇ ಕಾರಿಡಾರ್‌ನಲ್ಲಿ ಟಾಯ್ಸ್ ಪಾರ್ಕ್ ನಿರ್ಮಾಣದ ಮೂಲಕ ಮತ್ತೆ ಚನ್ನಪಟ್ಟಣ ಬೊಂಬೆ ಉದ್ಯಮಕ್ಕೆ ಮರುಜೀವ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.

    ಚನ್ನಪಟ್ಟಣದ ಬೊಂಬೆಗಳಿಗೆ ಐತಿಹಾಸಿಕ ಹಿನ್ನೆಲೆ ಇದೆ. ಚನ್ನಪಟ್ಟಣ ಬೊಂಬೆಗಳ ನಾಡು ಎಂದೇ ಪ್ರಸಿದ್ಧವಾಗಿದೆ. ಸಾವಿರಾರು ಕುಟುಂಬಗಳು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಈ ಬೊಂಬೆ ಉದ್ಯಮದ ಮೇಲೆ ಅವಲಂಬಿತವಾಗಿವೆ. ಆದರೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ನಿರ್ಮಾಣದ ನಂತರ ಚನ್ನಪಟ್ಟಣ ನಗರಕ್ಕೆ ಪ್ರಯಾಣಿಸುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಇದರಿಂದಾಗಿ ಈ ಉದ್ಯಮದ ಮೇಲೆ ಅವಲಂಬಿತರಾಗಿರುವವರ ಸ್ಥಿತಿ ಶೋಚನೀಯವಾಗಿದೆ. ಇದೀಗ ಎಕ್ಸ್‌ಪ್ರೆಸ್‌ ವೇಯಲ್ಲಿ ಟಾಯ್ಸ್ ಪಾರ್ಕ್ ನಿರ್ಮಾಣ ಮಾಡಿ, ಬೊಂಬೆ ಮಾರಾಟಕ್ಕೆ ಅವಕಾಶ ನೀಡುತ್ತಿರುವುದು ಬೊಂಬೆ ಉದ್ಯಮಕ್ಕೆ ಮರುಜೀವ ನೀಡಿದಂತಾಗಿದೆ.ಇದನ್ನೂ ಓದಿ: 2024ರಲ್ಲಿ ಕೆಂಪೇಗೌಡ ಏರ್‌ಪೋರ್ಟ್‌ನಿಂದ ಹೊಸ ಮೈಲಿಗಲ್ಲು – 41 ದಶಲಕ್ಷ ಮಂದಿ ಪ್ರಯಾಣ

    ಕೊರೊನಾ ಸಮಯದಲ್ಲಿ ಶೇ.50ರಷ್ಟು ನೆಲಕಚ್ಚಿದ್ದ ಬೊಂಬೆ ಉದ್ಯಮ, ಎಕ್ಸ್‌ಪ್ರೆಸ್‌ ವೇ ಆದ ಬಳಿಕ ಸಂಪೂರ್ಣ ಕುಸಿತ ಕಂಡಿತ್ತು. ಹಳೇ ಹೆದ್ದಾರಿಯಲ್ಲಿ ವಾಹನ ಸಂಚಾರ ವಿರಳವಾದ ಬಳಿಕ ಬೊಂಬೆ ಉತ್ಪಾದನೆ ಹಾಗೂ ಮಾರಾಟದ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. ಸದ್ಯ ಹಳೇ ಹೆದ್ದಾರಿಯಲ್ಲಿ ಬೊಂಬೆಗಳ ಮಾರಾಟ ಮಾಡಿ, ಜೀವನ ಮಾಡುತ್ತಿರುವ ಬೊಂಬೆ ವರ್ತಕರು, ಗ್ರಾಹಕರಿಲ್ಲದೇ ಬೊಂಬೆ ಅಂಗಡಿಗಳನ್ನು ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ.

    ಇನ್ನೂ ಬೊಂಬೆ ಉದ್ಯಮದ ಪುನಶ್ಚೇತನ ಕುರಿತು ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಸಂಸದ ಡಾ. ಸಿ.ಎನ್ ಮಂಜುನಾಥ್ ಭೇಟಿಯಾಗಿ ಈ ಬಗ್ಗೆ ಮನವಿ ಸಲ್ಲಿಸಿದ್ದರು. ಬೊಂಬೆ ಉದ್ಯಮಿಗಳ ಸ್ಥಿತಿ-ಗತಿ ಕುರಿತು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿ, ಎಕ್ಸ್‌ಪ್ರೆಸ್‌ ವೇ ಪಕ್ಕದಲ್ಲಿ ಬೊಂಬೆ ಮಾರಾಟಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದರು. ಸದ್ಯ ಸಂಸದರ ಮನವಿಗೆ ನಿತಿನ್ ಗಡ್ಕರಿ ಸ್ಪಂದಿಸಿದ್ದು, ಶೀಘ್ರದಲ್ಲೇ ಟಾಯ್ಸ್ ಪಾರ್ಕ್ ನಿರ್ಮಾಣಕ್ಕೆ ಗುರುತು ಮಾಡುವ ಭರವಸೆ ನೀಡಿದ್ದಾರೆ. ಚನ್ನಪಟ್ಟಣ ಎಂಟ್ರಿ, ಎಕ್ಸಿಟ್ ಸಮೀಪ ಪುಡ್ ಕೋರ್ಟ್, ರೆಸ್ಟ್ ಏರಿಯಾ ಸೇರಿ ಬೃಹತ್ ಟಾಯ್ಸ್ ಪಾರ್ಕ್ ಶೀಘ್ರದಲ್ಲೇ ಆರಂಭ ಆಗುತ್ತದೆ ಎಂದು ಸಂಸದ ಮಂಜುನಾಥ್ ತಿಳಿಸಿದ್ದಾರೆ.

    ಒಟ್ಟಾರೆ ಬೊಂಬೆ ತಯಾರಿಕೆಯ ಮೇಲೆ ಅವಲಂಬಿತರಾಗಿರುವ ಸಾವಿರಾರು ಜನರಿಗೆ ಟಾಯ್ಸ್ ಪಾರ್ಕ್ ನಿರ್ಮಾಣ ಹೊಸ ಹುರುಪನ್ನು ತುಂಬುತ್ತಿದ್ದು, ಬೊಂಬೆಗಳ ನಾಡು ಎಂಬ ಚನ್ನಪಟ್ಟಣದ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿದಂತಾಗುತ್ತದೆ.ಇದನ್ನೂ ಓದಿ: ರನ್‌ ಹೊಳೆ ಹರಿಸಿ ಈಡನ್‌ ಗಾರ್ಡನ್‌ನಲ್ಲಿ ದಾಖಲೆ ಬರೆದ ಲಕ್ನೋ

  • ಬೆಂ-ಮೈ ಎಕ್ಸ್‌ಪ್ರೆಸ್‌ವೇನಲ್ಲಿ ಕಾರಿಗೆ ಐರಾವತ ಬಸ್ ಡಿಕ್ಕಿ – ನಾಲ್ವರು ದುರ್ಮರಣ

    ಬೆಂ-ಮೈ ಎಕ್ಸ್‌ಪ್ರೆಸ್‌ವೇನಲ್ಲಿ ಕಾರಿಗೆ ಐರಾವತ ಬಸ್ ಡಿಕ್ಕಿ – ನಾಲ್ವರು ದುರ್ಮರಣ

    ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ (Bengaluru-Mysuru Expressway) ಕಾರಿಗೆ ಐರಾವತ ಬಸ್ ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಭೀಕರ ಅಪಘಾತ ಮಂಡ್ಯ (Mandya) ತಾಲ್ಲೂಕು ತೂಬಿನಕೆರೆ ಎಕ್ಸಿಟ್ ಬಳಿ ನಡೆದಿದೆ.ಇದನ್ನೂ ಓದಿ: ಮಹಿಳೆಯರು ಬ್ಯಾಗ್‌ನಲ್ಲಿ ತ್ರಿಶೂಲ ಇಟ್ಕೊಳ್ಳಿ: ಮುತಾಲಿಕ್ ಪ್ರಚೋದನಕಾರಿ ಹೇಳಿಕೆ

    ಕಾರು ಮೈಸೂರು ಕಡೆಗೆ ಹೊರಟಿತ್ತು. ಈ ವೇಳೆ ಎಕ್ಸ್ಪ್ರೆಸ್‌ವೇನಿಂದ ಎಕ್ಸಿಟ್ ಆಗುವಾಗ ಕಾರು ಚಾಲಕನಿಗೆ ಗೊಂದಲ ಉಂಟಾಗಿದ್ದು, ಮತ್ತೆ ಕಾರನ್ನು ಎಕ್ಸ್ಪ್ರೆಸ್ ವೇಗೆ ತಿರುಗಿಸಿದ್ದಾನೆ. ಇದೇ ವೇಳೆ ಹಿಂದಿನಿಂದ ಕೆಎಸ್‌ಆರ್‌ಟಿಸಿ ಐರಾವತ ಬಸ್ ಬಂದಿದ್ದು, ಎದುರಿಗೆ ಬಂದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ.

    ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರ ಗುರುತು ಪತ್ತೆಯಾಗಿಲ್ಲ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ (Mandya Rural Police Station) ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಇದನ್ನೂ ಓದಿ: ಬೆಂಗಳೂರಲ್ಲಿ ಬಿಹಾರದ ಯುವತಿ ಮೇಲೆ ರೇಪ್ – ಅಣ್ಣನಿಗೆ ಥಳಿಸಿ ತಂಗಿಯನ್ನು ಎಳೆದೊಯ್ದು ಅತ್ಯಾಚಾರ

  • ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ – ಸವಾರರು ಗ್ರೇಟ್‌ ಎಸ್ಕೇಪ್‌

    ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ – ಸವಾರರು ಗ್ರೇಟ್‌ ಎಸ್ಕೇಪ್‌

    ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ (Bengaluru Mysuru Expressway) ಅಪಘಾತ ಸಂಭವಿಸಿ ಇಬ್ಬರು ಗಾಯಗೊಂಡಿರುವ ಘಟನೆ ಚನ್ನಪಟ್ಟಣ ತಾಲೂಕಿನ ಕಣ್ವ ರಸ್ತೆ ಬಳಿ ನಡೆದಿದೆ.

    ಎಕ್ಸ್‌ಪ್ರೆಸ್‌ವೇನಲ್ಲಿ ಬ್ಯಾರಿಕೇಡ್ ಹಾಕಿ ರಸ್ತೆ ಸ್ವಚ್ಛಗೊಳಿಸುವ ವೇಳೆ ಅವಘಡ (Road Accident) ಸಂಭವಿಸಿದೆ. ಬೆಂಗಳೂರು ಕಡೆಗೆ ಹೋಗ್ತಿದ್ದ ಕಾರು ಬ್ಯಾರಿಕೇಡ್ ಗಮನಿಸದೇ ಸಡನ್ ಆಗಿ ಬ್ರೇಕ್ ಹಾಕಿದೆ. ಈ ವೇಳೆ ಹಿಂಬದಿಯಿಂದ ಬಂದ ಮತ್ತೊಂದು ಕಾರು ಮುಂದೆ ನಿಂತಿದ್ದ ಕಾರಿಗೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಮುಂಬದಿ ಕಾರಿನ ಕೆಳಗೆ ನುಗ್ಗಿ ಸಂಪೂರ್ಣ ಜಖಂಗೊಂಡಿದೆ. ಇದನ್ನೂ ಓದಿ: ಸಿದ್ದರಾಮಯ್ಯ ರಾಜ್ಯಕ್ಕಷ್ಟೇ ಅಲ್ಲ ದೇಶಕ್ಕೆ ಅನಿವಾರ್ಯ – ಕಂಪ್ಲಿ ಶಾಸಕ ಗಣೇಶ್

    ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರ ಪೋಲಿಸರು ಭೇಟಿ ನೀಡಿ ಕಾರುಗಳನ್ನ ತೆರವು ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಸಿಬಿಐ ನಿರ್ದೇಶಕರಂತಹ ಕಾರ್ಯನಿರ್ವಾಹಕ ನೇಮಕಾತಿಗಳಲ್ಲಿ ಸಿಜೆಐ ಯಾಕೆ ಭಾಗಿಯಾಗಬೇಕು – ಉಪ ರಾಷ್ಟ್ರಪತಿ ಪ್ರಶ್ನೆ

  • ಟೋಲ್ ತಪ್ಪಿಸುತ್ತಿದ್ದ ವಾಹನ ಸವಾರರಿಗೆ ಹೆದ್ದಾರಿ ಪ್ರಾಧಿಕಾರ ಶಾಕ್; ಬಿಡದಿ ಬಳಿಯ ಎಕ್ಸಿಟ್ ರೋಡ್ ಬಂದ್

    ಟೋಲ್ ತಪ್ಪಿಸುತ್ತಿದ್ದ ವಾಹನ ಸವಾರರಿಗೆ ಹೆದ್ದಾರಿ ಪ್ರಾಧಿಕಾರ ಶಾಕ್; ಬಿಡದಿ ಬಳಿಯ ಎಕ್ಸಿಟ್ ರೋಡ್ ಬಂದ್

    ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ (Bengaluru Mysuru Expressway) ಟೋಲ್ ತಪ್ಪಿಸುತ್ತಿದ್ದ ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಶಾಕ್ ಕೊಟ್ಟಿದೆ.

    ಟೋಲ್‌ನಿಂದ (Toll) ಎಸ್ಕೇಪ್‌ ಆಗುವುದನ್ನ ತಪ್ಪಿಸಲು ಬಿಡದಿ ಬಳಿಯ ನಿರ್ಗಮನ ರಸ್ತೆ ಬಂದ್ ಮಾಡಿದೆ. ಈ ಮೂಲಕ ಹೆದ್ದಾರಿಯಿಂದ ಸರ್ವೀಸ್ ರಸ್ತೆಗೆ ಇದ್ದ ಸಂಪರ್ಕವನ್ನು ಕಡಿತಗೊಳಿಸಿದೆ. ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ 3 ಸಾವಿರಕ್ಕೆ ವಾರ್ಷಿಕ, 30 ಸಾವಿರಕ್ಕೆ ಜೀವಿತಾವಧಿ ಟೋಲ್‌ ಪಾಸ್‌

    ಮೈಸೂರಿನಿಂದ ಬರುತ್ತಿದ್ದ ವಾಹನ ಸವಾರರು ಬಿಡದಿಯಿಂದ ಮುಂದೆ ಸರ್ವೀಸ್‌ ರಸ್ತೆಗೆ ಇಳಿದು ಟೋಲ್‌ ತಪ್ಪಿಸಿಕೊಳ್ಳುತ್ತಿದ್ದರು. ಎಕ್ಸ್‌ಪ್ರೆಸ್‌ವೇನಲ್ಲಿ ಸಂಚರಿಸಿ ಶೇಷಗಿರಿಹಳ್ಳಿ ಬಳಿ ಟೋಲ್ ಕಟ್ಟದೇ ಸರ್ವೀಸ್ ರಸ್ತೆ ಮೂಲಕ ಬೆಂಗಳೂರು ತಲುಪುತ್ತಿದ್ದರು. ಹೀಗಾಗಿ ಟೋಲ್‌ ತಪ್ಪಿಸುವ ವಾಹನಗಳಿಗೆ ಕಡಿವಾಣ ಹಾಕಲು ಹೆದ್ದಾರಿ ಪ್ರಾಧಿಕಾರ ಎಂಟ್ರಿಗೆ ಅವಕಾಶ ಕೊಟ್ಟು, ಎಕ್ಸಿಟ್‌ ರಸ್ತೆಯನ್ನು ಬಂದ್‌ ಮಾಡಿದೆ. ಇದನ್ನೂ ಓದಿ: ಗೌತಮ್‌ ಅದಾನಿ ಪುತ್ರನ ವಿವಾಹ ಪ್ರತಿಜ್ಞೆ – ಪ್ರತಿ ವರ್ಷ 500 ಅಂಗವಿಕಲ ಹೆಣ್ಣುಮಕ್ಕಳ ವಿವಾಹಕ್ಕೆ 10 ಲಕ್ಷ ನೆರವು ಘೋಷಣೆ

    ಹೆದ್ದಾರಿ ಪ್ರಾಧಿಕಾರದ ನಡೆಗೆ ವಾಹನ ಸವಾರರು ಆಕ್ರೋಶ ಹೊರಹಾಕಿದ್ದಾರೆ. ಸೂಚನಾ ಫಲಕವನ್ನೂ ಅಳವಡಿಸದೇ ಏಕಾಏಕಿ ಎಕ್ಸಿಟ್‌ ರಸ್ತೆಯನ್ನು ಬಂದ್‌ ಮಾಡಿರುವುದು ಸರಿಯಲ್ಲ. ರಾಮನಗರದಿಂದ ಬೆಂಗಳೂರಿಗೆ ಹೋಗೋದಕ್ಕೂ ದುಬಾರಿ ಟೋಲ್ ಕಟ್ಟಬೇಕಾ ಎಂದು ಪ್ರಶ್ನೆ ಮಾಡಿದ್ದಾರೆ.

    ಶೀಘ್ರವೇ ವಾರ್ಷಿಕ, ಜೀವಿತಾವಧಿ ಟೋಲ್‌ ಪಾಸ್‌:
    ಇನ್ನೂ ಟೋಲ್‌ ಸಂಗ್ರಹದಲ್ಲಿ ಉಂಟಾಗುತ್ತಿದ್ದ ಕಿರಿಕಿರಿ ತಪ್ಪಿಸಲು ಹಾಗೂ ಕಾರು ಮಾಲೀಕರಿಗೆ ಅನುಕೂಲ ಮಾಡಿಕೊಡಲು ʻವಾರ್ಷಿಕ ಟೋಲ್‌ ಪಾಸ್‌ʼ ವ್ಯವಸ್ಥೆಯ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಚಿಂತನೆ ನಡೆಸಿದೆ. ಅದರಂತೆ ಒಮ್ಮೆಲೆ 3,000 ರೂ. ಪಾವತಿಸಿ ಒಂದು ವರ್ಷದಲ್ಲಿ ಎಷ್ಟು ಬಾರಿ ಬೇಕಾದರೂ ಟೋಲ್‌ಗಳಲ್ಲಿ ಸಂಚಾರ ಮಾಡಬಹುದು. 30,000 ರೂ. ಪಾವತಿಸಿದ್ರೆ ʻಜೀವಮಾನದ ಪಾಸ್‌ʼ ಒದಗಿಸುವ ಸಾಧ್ಯತೆಯೂ ಇದೆ. 30,000 ರೂ.ಗಳ ಪಾಸ್‌ ಪಡೆದರೆ 15 ವರ್ಷಗಳವರೆಗೆ ಟೋಲ್‌ಗಳಲ್ಲಿ ಸಂಚಾರಕ್ಕೆ ಅವಕಾಶ ಇರಲಿದೆ ಎಂದು ಮೂಲಗಳು ತಿಳಿಸಿವೆ.

  • ಎಕ್ಸ್‌ಪ್ರೆಸ್‌ವೇಯಲ್ಲಿ ಸಂಚರಿಸುವ ಚಾಲಕರೇ ಎಚ್ಚರವಾಗಿರಿ – ಕೇವಲ 16 ದಿನದಲ್ಲಿ 12 ಸಾವಿರ ಕೇಸ್‌ ದಾಖಲು

    ಎಕ್ಸ್‌ಪ್ರೆಸ್‌ವೇಯಲ್ಲಿ ಸಂಚರಿಸುವ ಚಾಲಕರೇ ಎಚ್ಚರವಾಗಿರಿ – ಕೇವಲ 16 ದಿನದಲ್ಲಿ 12 ಸಾವಿರ ಕೇಸ್‌ ದಾಖಲು

    – ಪಕ್ಕದಲ್ಲಿ ಕುಳಿತ ವ್ಯಕ್ತಿ ಸೀಟ್‌ ಬೆಲ್ಟ್‌ ಧರಿಸದೇ ಇದ್ದರೂ ಬೀಳುತ್ತೆ ಕೇಸ್‌
    – ಮನೆಗೆ ಬರುತ್ತೆ ದಂಡದ ನೋಟಿಸ್‌

    ಬೆಂಗಳೂರು: ಎಕ್ಸ್‌ಪ್ರೆಸ್‌ವೇಯಲ್ಲಿ (Bengaluru-Mysuru Expressway) ಸಂಚಾರ ನಿಯಮ ಉಲ್ಲಂಘನೆ ಮಾಡುವ ವಾಹನ ಚಾಲಕರೇ ಎಚ್ಚರವಾಗಿರಿ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವಾಹನ ಚಾಲನೆ ಮಾಡಿಕೊಂಡು ಹೋಗುವಾಗ ಮೈಮರೆತು ಸಂಚಾರ ನಿಯಮ ಉಲ್ಲಂಘನೆ (Traffic Rules violation) ಮಾಡಿಕೊಂಡು ಹೋಗಿರುವ ವಾಹನ ಮಾಲೀಕರ ಮೇಲೆ ಬರೋಬ್ಬರಿ 12 ಸಾವಿರಕ್ಕೂ ಅಧಿಕ ಕೇಸ್‌ ದಾಖಲಾಗಿದೆ.

    ಮೇ 1 ರಿಂದ ಮೇ 16 ವರೆಗೆ ಒಟ್ಟು 12,192 ಕೇಸ್‌ಗಳು ದಾಖಲಾಗಿದೆ. ಹೆದ್ದಾರಿಯಲ್ಲಿ ಅಳವಡಿಸಿರುವ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (Artificial Intelligence) ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾಗಿರುವ ದೃಶ್ಯಾವಳಿಗಳ ಆಧಾರದ ಮೇಲೆ ಕೇಸ್ ಮಾಡಲಾಗಿದೆ.

    https://twitter.com/alokkumar6994/status/1791152277211725861?t=vdXcOd2Tic6tlzJN17QeSw&s=08

    ಅತಿಯಾದ ವೇಗ, ಚಾಲಕರು ಚಾಲಕ ಸೀಟ್ ಬೆಲ್ಟ್ ಧರಿಸದೇ ಇರುವುದು ಹಾಗೂ ಪಕ್ಕದಲ್ಲಿ ಕುಳಿತುಕೊಂಡಿರೋ ವ್ಯಕ್ತಿ ಸೀಟ್ ಬೆಲ್ಟ್ ಧರಿಸದೇ ಇರುವುದು ಈ ಎಲ್ಲಾ ಸಂಚಾರಿ ನಿಯಮ ಉಲ್ಲಂಘನೆ ಮೇಲೆ ಪೊಲೀಸರು ಸಂಬಂಧಪಟ್ಟ ಮಾಲೀಕನ ವಿಳಾಸಕ್ಕೆ ನೋಟಿಸ್ ಕಳುಹಿಸಿದ್ದಾರೆ.

    ಸಂಚಾರಿ ಪೊಲೀಸರು ಕಳುಹಿಸಿದ ನೋಟಿಸ್ ತಲುಪಿದ 7 ದಿನದಲ್ಲಿ ಸಂಬಂಧಪಟ್ಟ ಸಂಚಾರಿ ಠಾಣೆಗೆ ಹೋಗಿ ದಂಡ ಪಾವತಿಸಬೇಕು. ಇಲ್ಲದಿದ್ದರೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ದಂಡ ಕಟ್ಟದೇ ಮೊಂಡಾಟ ಮಾಡಿದರೆ 6 ತಿಂಗಳು ಜೈಲು ಅಥವಾ 5,000 ರೂ. ದಂಡ ವಿಧಿಸುವ ಎಚ್ಚರಿಕೆಯನ್ನು ನೋಟಿಸ್‌ನಲ್ಲಿ ನೀಡಲಾಗಿದೆ.  ಇದನ್ನೂ ಓದಿ: ಕೇಂದ್ರದ ಸಾಧನೆ ಹಾಡಿಹೊಗಳಿದ ರಶ್ಮಿಕಾ ಮಂದಣ್ಣಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

    ಏನಿದು ತಂತ್ರಜ್ಞಾನ?
    ಎಕ್ಸ್‌ಪ್ರೆಸ್‌ವೇಯಲ್ಲಿ ವೇಗ ನಿಯಂತ್ರಣಕ್ಕೆ ಪೊಲೀಸರು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (Artificial Intelligence) ಮೊರೆ ಹೊಗಿದ್ದು ಎಐ ಕ್ಯಾಮೆರಾ ಅಳವಡಿಕೆ ಮಾಡಿದ್ದಾರೆ. ರಾಜ್ಯ ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ (Alok Kumar) ಆದೇಶದ ಮೇರೆಗೆ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವ (Automatic Number Plate Recognition – ANPR) ಕ್ಯಾಮೆರಾವನ್ನು ಅಳವಡಿಕೆ ಮಾಡಲಾಗಿದೆ. ವಾಹನದ ನಂಬರ್‌ನಿಂದ ಆರ್‌ಟಿಒ ಸಂಪರ್ಕ ಪಡೆದು ಮೊಬೈಲಿಗೆ ದಂಡ ಪಾವತಿಸುವಂತೆ ನೋಟಿಸ್ ಬರುತ್ತದೆ.

    ಅಪಘಾತ ಇಳಿಕೆ:
    ಎಕ್ಸ್‌ಪ್ರೆಸ್‌ವೇನಲ್ಲಿ ಗರಿಷ್ಠ ವೇಗದ ಮಿತಿಯನ್ನು ಗಂಟೆಗೆ 100 ಕಿ.ಮೀ ನಿಗದಿ ಪಡಿಸಲಾಗಿದೆ. ಅಷ್ಟೇ ಅಲ್ಲದೇ ರೆಡಾರ್ ಗನ್ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ. ವೇಗ ಮಿತಿ ದಾಟಿದರೆ 1000 ರೂ. ದಂಡ ಹಾಗೂ ಡಿಎಲ್ ರದ್ದುಪಡಿಸುವ ಕಠಿಣ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ. ನಿಯಮ ಉಲ್ಲಂಘನೆಯ ಫೋಟೋ ಹಾಗೂ ನೋಟಿಸ್ ನೀಡಿ ದಂಡ ವಸೂಲಿ ಮಾಡಲಾಗುತ್ತಿದೆ. ಈ ಕಠಿಣ ಕ್ರಮದಿಂದಾಗಿ ಈಗ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತಗಳ ಸಂಖ್ಯೆ ಭಾರೀ ಇಳಿಕೆಯಾಗಿದೆ.

     

  • ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ದರ ಹೆಚ್ಚಳ

    ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ದರ ಹೆಚ್ಚಳ

    ಬೆಂಗಳೂರು: ಬೆಂಗಳೂರು-ಮೈಸೂರು ಹೆದ್ದಾರಿಯನ್ನು (Bengaluru-Mysuru Expressway) ಬಳಸುವ ಕಾರುಗಳಿಗೆ ಟೋಲ್‌ ದರ ಹೆಚ್ಚಿಸಲಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.

    ಟ್ರಕ್, ಬಸ್‌ಗಳ ಒಂದೇ ಪ್ರಯಾಣಕ್ಕೆ 15 ರೂಪಾಯಿ ಹೆಚ್ಚಳ ಮಾಡಲಾಗಿದೆ. ಬೆಂಗಳೂರೂ-ಮೈಸೂರು ಹೆದ್ದಾರಿಯನ್ನು ಬಳಸುವ ಕಾರುಗಳಿಗೆ ಟೋಲ್‌ ದರದಲ್ಲಿ 10 ರೂ. ಹೆಚ್ಚಿಸಲಾಗಿದೆ. ಏಪ್ರಿಲ್‌ 1 ರಿಂದ ಇದು ಅನ್ವಯವಾಗಲಿದೆ. ಇದನ್ನೂ ಓದಿ: KSRTC ನೌಕರರಿಗೆ ಗುಡ್‌ನ್ಯೂಸ್ – ಡಬಲ್ ಡ್ಯೂಟಿಯಿಂದ ಮುಕ್ತಿ

    ಕಣಿಮಿಣಿಕೆ ಮತ್ತು ಶೇಷಗಿರಿ ಟೋಲ್ ಪ್ಲಾಜಾಗಳಲ್ಲಿ ಸಂಗ್ರಹಿಸಲಾದ ಟೋಲ್ ಶುಲ್ಕ ಪರಿಷ್ಕರಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಾರ್ವಜನಿಕ ಪ್ರಕಟಣೆಯಲ್ಲಿ ತಿಳಿಸಿದೆ.

    ಕಣಿಮಿಣಿಕೆ ಮತ್ತು ಶೇಷಗಿರಿ ಟೋಲ್ ಪ್ಲಾಜಾ
    1.ನಾಲ್ಕು ಚಕ್ರವಾಹನ
    ಏಕಮುಖ ಪ್ರಯಾಣ – 170 ರೂ‌.
    ದ್ವಿಮುಖ ಪ್ರಯಾಣ – 255 ರೂ.
    ತಿಂಗಳ ಪಾಸ್ – 5,715
    ಲೋಕಲ್ ತಿಂಗಳ ಪಾಸ್ – 340

    2.ಎಲ್‌ಸಿವಿ, ಎಲ್‌ಜಿವಿ/ಮಿನಿಬಸ್
    ಏಕಮುಖ ಪ್ರಯಾಣ – 275 ರೂ‌.
    ದ್ವಿಮುಖ ಪ್ರಯಾಣ – 415 ರೂ.
    ತಿಂಗಳ ಪಾಸ್ – 9,230 ರೂ.
    ಲೋಕಲ್ ತಿಂಗಳ ಪಾಸ್ – 340 ರೂ.

    3.ಟ್ರಕ್, ಬಸ್ 2 ಎಕ್ಸೆಲ್
    ಏಕಮುಖ ಪ್ರಯಾಣ – 580 ರೂ.
    ದ್ವಿಮುಖ ಪ್ರಯಾಣ – 870 ರೂ.
    ತಿಂಗಳ ಪಾಸ್ – 19,345 ರೂ.
    ಲೋಕಲ್ ತಿಂಗಳ ಪಾಸ್ – 340 ರೂ.

    4. 3 ಎಕ್ಸೆಲ್ ವೆಹಿಕಲ್
    ಏಕಮುಖ ಪ್ರಯಾಣ – 635 ರೂ.‌
    ದ್ವಿಮುಖ ಪ್ರಯಾಣ – 950 ರೂ.
    ತಿಂಗಳ ಪಾಸ್ – 21,100 ರೂ.
    ಲೋಕಲ್ ತಿಂಗಳ ಪಾಸ್ – 340 ರೂ.

    5. ಮಲ್ಟಿ ಎಕ್ಸೆಲ್ ವೆಹಿಕಲ್, ಹೆವಿ ಕನ್ಸಟ್ರಕ್ಷನ್, ಮಿಷನರಿ ಮೂವಿಂಗ್ ವೆಹಿಕಲ್
    ಏಕಮುಖ ಪ್ರಯಾಣ – 910 ರೂ.
    ದ್ವಿಮುಖ ಪ್ರಯಾಣ – 1,365 ರೂ.
    ತಿಂಗಳ ಪಾಸ್ – 30,335 ರೂ.

    6. ಓವರ್ ಸೈಜ್ ವೆಹಿಕಲ್ 7 ಕ್ಕಿಂತ ಹೆಚ್ಚು ಎಕ್ಸೆಲ್ ವೆಹಿಕಲ್
    ಏಕಮುಖ ಪ್ರಯಾಣ – 1,110 ರೂ.
    ದ್ವಿಮುಖ ಪ್ರಯಾಣ – 1,660 ರೂ.
    ತಿಂಗಳ ಪಾಸ್ – 36,930 ರೂ.