Tag: bengaluru rain

  • ಬೆಂಗ್ಳೂರಲ್ಲಿ ಮಳೆಯಿಂದ ಜನರ ಪರದಾಟ… ರಾಜ್ಯ ಸರ್ಕಾರದ ಮೋಜು – ಬಿವೈವಿ ಸಿಡಿಮಿಡಿ

    ಬೆಂಗ್ಳೂರಲ್ಲಿ ಮಳೆಯಿಂದ ಜನರ ಪರದಾಟ… ರಾಜ್ಯ ಸರ್ಕಾರದ ಮೋಜು – ಬಿವೈವಿ ಸಿಡಿಮಿಡಿ

    ಬೆಂಗಳೂರು: ರಾಜ್ಯ ಕಾಂಗ್ರೆಸ್ (Congress) ಸರ್ಕಾರ ಬೆಂಗಳೂರಿನಲ್ಲಿ (Bengaluru) ಮಳೆಗಾಲಕ್ಕೆ ಸಂಬಂಧಿಸಿದ ಪೂರ್ವಭಾವಿ ಕೆಲಸ ಮಾಡಿಸುವುದನ್ನು ಬಿಟ್ಟು, ಹೊಸಪೇಟೆಯಲ್ಲಿ ಮೋಜು ಮಾಡುತ್ತಿರುವುದು ಅಕ್ಷಮ್ಯ ಅಪರಾಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅವರು ಟೀಕಿಸಿದ್ದಾರೆ.

    ಸಿಲ್ಕ್ ಬೋರ್ಡ್‌ನ ಮಳೆ ಹಾನಿ ಪ್ರದೇಶಗಳಿಗೆ ಬಿಜೆಪಿ ನಿಯೋಗ ಮಂಗಳವಾರ ಭೇಟಿ ನೀಡಿ, ಮಳೆ ಹಾನಿಗೆ ಕಾರಣ, ಆಗಿರುವ ಹಾನಿ ಕುರಿತು ಪರಿಶೀಲನೆ ನಡೆಸಿತು.ಇದನ್ನೂ ಓದಿ: ದರ್ಶನ್ ಮೇಕಪ್ ಆರ್ಟಿಸ್ಟ್ ಹೊನ್ನೆಗೌಡ ನಿಧನ- ಭಾವುಕ ಪೋಸ್ಟ್ ಹಂಚಿಕೊಂಡ ದಚ್ಚು

    ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಅಭಿವೃದ್ಧಿ ಕಾಮಗಾರಿಗಳ ಕಡೆ ಮುಖ್ಯಮಂತ್ರಿಗಳು ಗಮನ ಕೊಡಬೇಕು. ಕೆಲಸಗಳನ್ನು ತ್ವರಿತ ಗತಿಯಲ್ಲಿ ಮುಗಿಸಬೇಕು. ರಾಜ್ಯ ಸರ್ಕಾರ ಒಂದು ಅಯೋಗ್ಯ ಸರ್ಕಾರವಾಗಿದೆ. ಈ ಸರ್ಕಾರಕ್ಕೆ ಮಾನ ಮರ್ಯಾದೆ ಯಾವುದೂ ಇಲ್ಲ ಎಂದರು.

    ಕೆಲವೇ ಕೆಲವು ಗಂಟೆ ಮಳೆ ಬಂದ ಸಂದರ್ಭದಲ್ಲಿ ಇಡೀ ಬೆಂಗಳೂರು ಮಹಾನಗರವು ಜಲಾವೃತವಾಗಿದೆ. ನಾಲ್ಕು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯನವರು ಗ್ರೇಟರ್ ಬೆಂಗಳೂರು ಬಗ್ಗೆ ಮಾತನಾಡುತ್ತಾರೆ. ಬೆಂಗಳೂರಿಗೆ ಕೇವಲ ಗ್ರೇಟರ್ ಹೆಸರು ಸೇರಿಸಿದರೆ ಸಾಕಾಗುವುದಿಲ್ಲ ಸ್ವಾಮೀ, ಬೆಂಗಳೂರಿನ ಅಭಿವೃದ್ಧಿಗೆ ಎಷ್ಟು ಸಾವಿರ ಕೋಟಿ ಅನುದಾನ ಕೊಡಲಾಗಿದೆ ಎಂದು ಪ್ರಶ್ನಿಸಿದರು.

    ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಸಾವಿರಾರು ಕೋಟಿ ಅನುದಾನದಲ್ಲಿ ಅನೇಕ ಕಾಮಗಾರಿಗಳು ನಡೆಯುತ್ತಿತ್ತು. ಆ ಗುತ್ತಿಗೆದಾರರಿಗೆ ಹಣ ಪಾವತಿಸದ ಕಾರಣ ಇವತ್ತು ಕೆಲಸ ಕಾರ್ಯಗಳು, ಅಭಿವೃದ್ಧಿ ಕಾಮಗಾರಿಗಳು ಹಾಗೇ ನಿಂತಿವೆ ಎಂದು ಗಮನ ಸೆಳೆದರು. ಡಿ.ಕೆ.ಶಿವಕುಮಾರ್ ಅವರು ಟಾಲೆಸ್ಟ್ ಟವರ್, ಸುರಂಗ ರಸ್ತೆ ಕುರಿತು ಮಾತನಾಡುತ್ತಾರೆ. ಬೆಂಗಳೂರಿನ ಮಹಾಜನತೆ, ಜನಸಾಮಾನ್ಯರು ಇವುಗಳನ್ನು ಕೇಳುತ್ತಿಲ್ಲ. ಬಂದ ಮಳೆಯ ನೀರು ಸರಿಯಾಗಿ ಹೋಗುವ ವ್ಯವಸ್ಥೆ ಆಗಬೇಕು. ರಾಜಕಾಲುವೆಯನ್ನು ಸರಿಪಡಿಸಬೇಕು. ಕೆರೆಗಳ ಒತ್ತುವರಿ ಸರಿಪಡಿಸಲು ಬಯಸುತ್ತಾರೆ ಎಂದು ತಿಳಿಸಿದರು.

    ಹೂಳು ತೆಗೆಯುವಂತೆ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ನಿನ್ನೆ ಅಧಿಕಾರಿಗಳಿಗೆ ಹೇಳುತ್ತಿದ್ದರು. ಯಾಕೆ ಮಳೆ ಬರುತ್ತದೆ ಎಂದು ಗೊತ್ತಿಲ್ಲವೇ? ಮಳೆ ಯಾವ ತಿಂಗಳಲ್ಲಿ ಬರುತ್ತದೆಂದು ಇವರಿಗೆ ತಿಳಿದಿಲ್ಲವೇ? ಅಧಿಕಾರಿಗಳಿಗೆ ತಿಳಿಸಿ, ಮುಂಗಾರು ಮಳೆಗೆ ಮೊದಲು ಕೆಲಸ ಯಾಕೆ ಮಾಡಿಸಿಲ್ಲ ಎಂದು ಕಿಡಿಕಾರಿದರು.

    ಈ ವೇಳೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್, ಶಾಸಕ ಸತೀಶ್ ರೆಡ್ಡಿ, ಪಕ್ಷದ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ ಮತ್ತು ಪಕ್ಷದ ಮುಖಂಡರು ಇದ್ದರು.ಇದನ್ನೂ ಓದಿ: ನ್ಯಾ. ವರ್ಮಾ ಪ್ರಕರಣದ ತನಿಖೆ ನಡೆಸಿದ ಆಂತರಿಕ ಸಮಿತಿಗೆ ಕಾನೂನು ಮಾನ್ಯತೆ ಇಲ್ಲ: ಜಗದೀಪ್ ಧನಕರ್

  • 1,600 ಕೋಟಿ ಕಾಮಗಾರಿ ನಡೆದಿದ್ದರೆ ಬೆಂಗ್ಳೂರಿಗೆ ಇಂತಹ ಸ್ಥಿತಿ ಬರುತ್ತಿರಲಿಲ್ಲ: ಆರ್. ಅಶೋಕ್

    1,600 ಕೋಟಿ ಕಾಮಗಾರಿ ನಡೆದಿದ್ದರೆ ಬೆಂಗ್ಳೂರಿಗೆ ಇಂತಹ ಸ್ಥಿತಿ ಬರುತ್ತಿರಲಿಲ್ಲ: ಆರ್. ಅಶೋಕ್

    – ಗ್ರೇಟರ್ ಬೆಂಗಳೂರು ಹೋಗಿ ವಾಟರ್ ಬೆಂಗಳೂರು ಆಗಿದೆ

    ಬೆಂಗಳೂರು: ಬಿಜೆಪಿ ಅವಧಿಯಲ್ಲಿ 1,600 ಕೋಟಿ ರೂ. ಹಣವನ್ನು ಬೆಂಗಳೂರಿನ ಅಭಿವೃದ್ಧಿಗೆ ನೀಡಿದ್ದು, ಆ ಕಾಮಗಾರಿಗಳನ್ನು ಕಾಂಗ್ರೆಸ್ ಸರ್ಕಾರ ರದ್ದು ಮಾಡಿದೆ. ಆ ಕಾಮಗಾರಿಗಳು ನಡೆದಿದ್ದರೆ ಇಂತಹ ಪ್ರವಾಹದ ಸ್ಥಿತಿ ಬರುತ್ತಿರಲಿಲ್ಲ ಎಂದು ತಿಳಿಸಿ ಎಂದು ವಿಪಕ್ಷ ನಾಯಕ ಆರ್. ಅಶೋಕ್(R Ashok) ಕಿಡಿಕಾರಿದರು.

    ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿ ಪ್ರವಾಹ ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರಿಗೆ(Bengaluru) ಕಳೆದ 2 ವರ್ಷಗಳಲ್ಲಿ ಏನು ಮಾಡಿದ್ದೀರಿ? ಇಡೀ ಬೆಂಗಳೂರು ಮಳೆಯಿಂದಾಗಿ ಮುಳುಗುತ್ತಿದ್ದು, ಜನರು ಪರದಾಡುತ್ತಿದ್ದಾರೆ. ಮಳೆಯಿಂದಾಗಿ 5 ಜನರು ಸತ್ತಿದ್ದಾರೆ. ಇಂಥವರ ಸಾವಿನ ಮೇಲೆ ಕಾಂಗ್ರೆಸ್ ಸಾಧನೆಯ ಸಮಾವೇಶ ಮಾಡುತ್ತಿದೆ. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಸಮಾವೇಶವನ್ನು ರದ್ದು ಮಾಡಬೇಕಿತ್ತು. ಕಾಂಗ್ರೆಸ್‌ನ ತಪ್ಪಿನಿಂದಲೇ ಜನರು ಸತ್ತಿದ್ದಾರೆ. ಇಂತಹ ಸಮಾವೇಶ ಮಾಡುವ ನೈತಿಕ ಅರ್ಹತೆ ಸರ್ಕಾರಕ್ಕೆ ಇಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಇರೋವರೆಗೂ ಗ್ಯಾರಂಟಿ ಸ್ಕೀಂ ನಿಲ್ಲೋದಿಲ್ಲ: ಡಿಕೆಶಿ ಸ್ಪಷ್ಟನೆ

    ಬೆಂಗಳೂರಿನ ಸಾಯಿ ಬಡಾವಣೆಗೆ ಡಿಸಿಎಂ ಡಿ.ಕೆ ಶಿವಕುಮಾರ್(D K Shivakumar) ಭೇಟಿ ನೀಡಿ, ಅಭಿವೃದ್ಧಿ ಮಾಡುತ್ತೇನೆಂದು ಹೇಳಿದ್ದರು. ಸಿಲ್ಕ್ ಬೋರ್ಡ್ ಬಳಿ ಕಳೆದ ಸಲವೂ ಪ್ರವಾಹವಾಗಿತ್ತು. ಇಷ್ಟಾದರೂ ಅಭಿವೃದ್ಧಿಗೆ ನಯಾಪೈಸೆ ಬಿಡುಗಡೆಯಾಗಿಲ್ಲ. ಬಿಜೆಪಿ ಅವಧಿಯಲ್ಲಿ ರಾಜಕಾಲುವೆ, ರಸ್ತೆ ಅಭಿವೃದ್ಧಿಗೆ 1,600 ಕೋಟಿ ರೂ. ನೀಡಲಾಗಿತ್ತು. ಅದನ್ನು ಕಾಂಗ್ರೆಸ್(Congress) ರದ್ದು ಮಾಡಿದೆ. ಆ ಅಭಿವೃದ್ಧಿ ಕಾರ್ಯ ನಡೆದಿದ್ದರೆ, ಈ ರೀತಿ ಪ್ರವಾಹ ಆಗುತ್ತಿರಲಿಲ್ಲ. ಬೆಂಗಳೂರಿನ ಪ್ರಗತಿಗೆ ಹಣ ನೀಡದೆ ಲೂಟಿ ಮಾಡಲು ಆ ಹಣವನ್ನು ಬಳಸಲಾಗಿದೆ. ಎಲ್ಲ ಹಣವನ್ನು ಸುರಂಗ ಮಾರ್ಗ ಯೋಜನೆಗೆ ಮೀಸಲಿಟ್ಟಿದ್ದಾರೆ. ಈಗ ಎಲ್ಲ ರಸ್ತೆಗಳಲ್ಲಿ ಸುರಂಗ ಆಗಿದೆ ಎಂದು ಗುಡುಗಿದರು. ಇದನ್ನೂ ಓದಿ: `ಆಪರೇಷನ್ ಸಿಂಧೂರ’ ಬೂಟಾಟಿಕೆ ಅಂದಿದ್ದ ಕೊತ್ತೂರು ಮಂಜುನಾಥ್ ವಿರುದ್ಧ ಪ್ರಕರಣ ದಾಖಲು

    ಪ್ರವಾಹದ ಸ್ಥಳಗಳಲ್ಲಿ ಸೆನ್ಸರ್ ಅಳವಡಿಸಲಾಗುವುದು ಎಂದು ಸರ್ಕಾರ ಹೇಳಿತ್ತು. ಆದರೆ ಯಾವ ಕೆಲಸವೂ ಆಗಿಲ್ಲ. ಏ. 15ರಂದೇ ಹವಾಮಾನ ಇಲಾಖೆ ಮಳೆ ಜೋರಾಗಲಿದೆ ಎಂದು ಸೂಚನೆ ನೀಡಿತ್ತು. ಒಂದು ತಿಂಗಳ ಸಮಯದಲ್ಲಿ ಬಿಬಿಎಂಪಿಯಿಂದ(BBMP) ಮುಂಜಾಗ್ರತಾ ಸಭೆ ನಡೆಸಿಲ್ಲ. ಸಮಾವೇಶಕ್ಕೆ ಮಾತ್ರ ತರಾತುರಿಯಲ್ಲಿ ಸಿದ್ಧತೆ ಮಾಡಿಕೊಂಡರು. 14 ಸಾವಿರ ಗುಂಡಿ ಮುಚ್ಚಿದ್ದೇವೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಈಗ ಕಾಂಗ್ರೆಸ್ ಪಕ್ಷವನ್ನು ಮುಚ್ಚಿಹಾಕಲು ಜನರೇ ಗುಂಡಿ ತೆಗೆಯುತ್ತಿದ್ದಾರೆ ಎಂದರು. ಇದನ್ನೂ ಓದಿ: ಮುದ್ದಿನ ನಾಯಿಗೋಸ್ಕರ ಪವಿ ಪೂವಪ್ಪ ಲವ್ ಬ್ರೇಕಪ್ – ಕಣ್ಣೀರಿಟ್ಟ ‘ಬಿಗ್ ಬಾಸ್’ ಸ್ಪರ್ಧಿ

    ಯುದ್ಧಕ್ಕೆ ಸಾಕ್ಷಿ ಕೇಳುವ ಇವರು, ಜನರು ಸಾಯುತ್ತಿರುವುದನ್ನು ಬಂದು ನೋಡಲಿ. ಇದಕ್ಕೆ ಯಾವುದೇ ಸಾಕ್ಷಿ ಬೇಕಿಲ್ಲ. ಬಿಜೆಪಿ ಅವಧಿಯಲ್ಲಿ ಪ್ರತಿ ವರ್ಷ ಏಳೆಂಟು ಸಾವಿರ ಕೋಟಿ ರೂ. ನೀಡಲಾಗುತ್ತಿತ್ತು. ಕಾಂಗ್ರೆಸ್ ಸರ್ಕಾರ ಬೆಂಗಳೂರಿಗೆ ನೀಡಿರುವ ಹಣವೆಲ್ಲವನ್ನೂ ಸುರಂಗ ನಿರ್ಮಿಸಲು ಬಳಸಲಾಗುತ್ತಿದೆ. ಬೆಂಗಳೂರು ಮುಳುಗುತ್ತಿರುವ ಬಗ್ಗೆ ಸರ್ಕಾರಕ್ಕೆ ಯಾವುದೇ ಕಾಳಜಿ ಇಲ್ಲ. ಗ್ರೇಟರ್ ಬೆಂಗಳೂರು(Greater Bengaluru) ಹೋಗಿ ವಾಟರ್ ಬೆಂಗಳೂರು ಆಗಿದೆ. ಮನೆ ಬಾಗಿಲಿಗೆ ಅವಾಂತರ, ಸಾವುಗಳನ್ನು ಸರ್ಕಾರ ತರುತ್ತಿದೆ ಎಂದು ದೂರಿದರು.

  • ಬೆಂಗಳೂರಿನ ಮಹಾಮಳೆಗೆ ಕಾಂಪೌಂಡ್ ಗೋಡೆ ಕುಸಿದು ಮಹಿಳೆ ಸಾವು

    ಬೆಂಗಳೂರಿನ ಮಹಾಮಳೆಗೆ ಕಾಂಪೌಂಡ್ ಗೋಡೆ ಕುಸಿದು ಮಹಿಳೆ ಸಾವು

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾನುವಾರ ಸುರಿದ ಮಹಾಮಳೆಗೆ ಕಾಂಪೌಂಡ್ ಗೋಡೆ ಕುಸಿದು ಮಹಿಳೆ (Woman) ಸಾವನ್ನಪ್ಪಿದ ಘಟನೆ ಮಹದೇವಪುರದ (Mahadevapura) ಚನ್ನಸಂದ್ರದಲ್ಲಿ ನಡೆದಿದೆ.

    ಶಶಿಕಲಾ (35) ಮೃತ ಮಹಿಳೆ. ಇಂದು ಬೆಳಗ್ಗೆ ವೈಟ್ ಫೀಲ್ಡ್‌ನ ಖಾಸಗಿ ಕಂಪನಿಯಲ್ಲಿ ಹೌಸ್ ಕೀಪಿಂಗ್ ಕೆಲಸಕ್ಕೆ ಹೋದಾಗ ದುರ್ಘಟನೆ ನಡೆದಿದೆ. ಕೆಲಸದ ಸ್ಥಳದಲ್ಲಿದ್ದ ಕಾಂಪೌಂಡ್ ಗೋಡೆ ಕುಸಿದು ಶಶಿಕಲಾ ಸಾವನ್ನಪ್ಪಿದ್ದಾರೆ. ಇಡೀ ರಾತ್ರಿ ಮಳೆಗೆ ಗೋಡೆ ನೆನೆದಿದ್ದರಿಂದ ಕುಸಿದು ಶಶಿಕಲಾ ಮೇಲೆ ಬಿದ್ದಿದೆ. ಘಟನೆಯ ಪರಿಣಾಮ ಶಶಿಕಲಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: Bengaluru Rain | ನಾನು ನಿಮ್ಮಲ್ಲಿ ಒಬ್ಬ, ನಿಮ್ಮೊಂದಿಗೆ ನಿಲ್ಲುತ್ತೇನೆ: ಡಿಕೆಶಿ

    ಸದ್ಯ ವೈಟ್‌ಫೀಲ್ಡ್ ಪೊಲೀಸರು ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಯಾದಗಿರಿಯ ಶಹಾಪುರ ಮೂಲದ ಶಶಿಕಲಾ ಕಳೆದ ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು. ಮೃತ ಶಶಿಕಲಾಗೆ ಇಬ್ಬರು ಸಣ್ಣ ಮಕ್ಕಳಿದ್ದು, ಗಂಡ ಕೂಡ ಕೂಲಿ ಕೆಲಸ ಮಾಡುತ್ತಿದ್ದರು. ಘಟನಾ ಸ್ಥಳಕ್ಕೆ ಮಹದೇವಪುರ ಪೊಲೀಸರು, ಡಿಸಿಪಿ ಶಶಿಕುಮಾರ್ ಗುಣಾರೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: Ramanagara | 2 ಬೈಕ್‌ಗಳಿಗೆ ಗುದ್ದಿ ಹಳ್ಳಕ್ಕೆ ಬಿದ್ದ KSRTC ಬಸ್ – ಸಬ್ ಇನ್ಸ್‌ಪೆಕ್ಟರ್ ಸಾವು

  • ಮಾನ್ಯತಾ ಟೆಕ್‌ ಪಾರ್ಕ್‌ ಜಲಾವೃತ – ಪರ್ಯಾಯ ಮಾರ್ಗ ಬಳಸುವಂತೆ ಮನವಿ

    ಮಾನ್ಯತಾ ಟೆಕ್‌ ಪಾರ್ಕ್‌ ಜಲಾವೃತ – ಪರ್ಯಾಯ ಮಾರ್ಗ ಬಳಸುವಂತೆ ಮನವಿ

    ಬೆಂಗಳೂರು: ರಾತ್ರಿ (Bengaluru Rain) ಸುರಿದ ಭಾರೀ ಮಳೆಗೆ ಮಾನ್ಯತಾ ಟೆಕ್‌ ಪಾರ್ಕ್ (Manyata Tech Park) ಜಲಾವೃತವಾಗಿದೆ.

    ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ಮಳೆ ನೀರು ನಿಂತಿರುವುದರಿಂದ ಪ್ರಯಾಣಿಕರು ಪರ್ಯಾಯ ಮಾರ್ಗವನ್ನು ಬಳಸಬೇಕೆಂದು ಬೆಂಗಳೂರು ಸಂಚಾರ ಪೊಲೀಸರು (Bengaluru Traffic Police) ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಸಿಸಿಬಿ ಕಚೇರಿ ಜಲಾವೃತ | ಬೊಮ್ಮನಹಳ್ಳಿ -ಸಿಲ್ಕ್ ಬೋರ್ಡ್ ರಸ್ತೆಯಲ್ಲಿ 3 ಅಡಿ ನೀರು

     

     

    ಮಹಾದೇವಪುರ, ಬೆಂಗಳೂರು ಪೂರ್ವ ವಲಯ, ಬೊಮ್ಮನಹಳ್ಳಿ, ಯಲಹಂಕ ವಲಯದಲ್ಲಿ ಭಾರೀ ಮಳೆಯಾಗಿದ್ದು, 4 ವಲಯದ 100 ಕ್ಕೂ ಹೆಚ್ಚು ಪ್ರದೇಶಗಳಿಗೆ ಸಮಸ್ಯೆಯಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ವರುಣನ ಅಬ್ಬರ – 10 ವರ್ಷದಲ್ಲಿ ಮೇ ತಿಂಗಳಲ್ಲಿ ದಾಖಲೆಯ ಮಳೆ

    ಹಲವು ಮನೆಗಳಿಗೆ ನೀರು ನುಗ್ಗಿ ಲೇಔಟ್ ಗಳು ಜಲಾವೃತಗೊಂಡಿದೆ. ಶಾಂತಿನಗರ, ಕೋರಮಂಗಲ, ಬೊಮ್ಮನಹಳ್ಳಿಯಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ.

    ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ನಾಗವಾರ ವಾರ್ಡ್‌ನಲ್ಲಿ ನಿವಾಸಿಗಳು ರಾತ್ರಿ ಜಾಗರಣೆ ಮಾಡಿದ್ದಾರೆ. Bengaluru Rain| ಎಲೆಕ್ಟ್ರಾನಿಕ್‌ ಸಿಟಿ ಫ್ಲೈಓವರ್ ಬಂದ್ – ಶಿವಾನಂದ ಸರ್ಕಲ್‌ ಅಂಡರ್‌ ಪಾಸ್‌ ಮುಳುಗಡೆ

  • Bengaluru Rain| ಎಲೆಕ್ಟ್ರಾನಿಕ್‌ ಸಿಟಿ ಫ್ಲೈಓವರ್ ಬಂದ್ – ಶಿವಾನಂದ ಸರ್ಕಲ್‌ ಅಂಡರ್‌ ಪಾಸ್‌ ಮುಳುಗಡೆ

    Bengaluru Rain| ಎಲೆಕ್ಟ್ರಾನಿಕ್‌ ಸಿಟಿ ಫ್ಲೈಓವರ್ ಬಂದ್ – ಶಿವಾನಂದ ಸರ್ಕಲ್‌ ಅಂಡರ್‌ ಪಾಸ್‌ ಮುಳುಗಡೆ

    ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಭಾನುವಾರ ರಾತ್ರಿ ಮತ್ತು ಸೋಮವಾರ ನಸುಕಿನ ಜಾವ ಸುರಿದ ಭಾರೀ ಮಳೆಗೆ (Rain) ಹಲವು ಭಾಗಗಳಲ್ಲಿ ಅಲ್ಲೋಲ ಕಲ್ಲೋಲವಾಗಿದೆ. ಎಲೆಕ್ಟ್ರಾನಿಕ್‌ ಸಿಟಿ ಫ್ಲೈ ಓವರ್‌ನಲ್ಲಿ (Electronic City) ನೀರು ನಿಂತ ಹಿನ್ನೆಲೆಯಲ್ಲಿ ಸಂಚಾರವನ್ನು ಬಂದ್‌ ಮಾಡಲಾಗಿದೆ.

    ಧಾರಾಕಾರ ಮಳೆಗೆ ಬೆಂಗಳೂರು ತತ್ತರವಾಗಿದ್ದು, ಮೆಜೆಸ್ಟಿಕ್, ಕೆ ಆರ್ ಮಾರುಕಟ್ಟೆ, ಜಯನಗರ, ವಿಜಯನಗರ, ಚಂದ್ರಲೇಔಟ್, ರಾಜಾಜಿನಗರ, ಆರ್ ಟಿ ನಗರ, ಹೆಬ್ಬಾಳ, ಕೋರಮಂಗಲ, ಕಾಮಾಕ್ಷಿಪಾಳ್ಯ, ಸುಂಕದಕಟ್ಟೆ, ನಾಗರಬಾವಿ, ಯಶವಂತಪುರ, ಪೀಣ್ಯ, ಬೊಮ್ಮನ ಹಳ್ಳಿ, ನಾಯಂಡಹಳ್ಳಿ, ಕುಮಾರಸ್ವಾಮಿ ಲೇಔಟ್‌, ಆರ್ ಆರ್ ನಗರ ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗಿದೆ.

     

    ನಗರದ ಶಿವಾನಂದ ಸರ್ಕಲ್ (Shivananda Circle) ಅಂಡರ್ ಪಾಸ್ ಮುಳುಗಡೆಯಾಗಿದೆ. ನೀರಿನಲ್ಲಿ ಬಿಎಂಡಬ್ಲ್ಯೂ ಕಾರು ಕೆಟ್ಟು ನಿಂತು ವಿದೇಶಿ ಮಹಿಳೆಯೊಬ್ಬರು ಪರದಾಟ ನಡೆಸಿದ್ದಾರೆ. ಖಾಸಗಿ ಹೋಟೆಲಿಗೆ ತೆರಳುತ್ತಿದ್ದ ವಿದೇಶಿ ಮಹಿಳೆಯನ್ನು ಪಬ್ಲಿಕ್‌ ಟಿವಿ ರಕ್ಷಿಸಿದೆ.

    ಚಾಮರಾಜಪೇಟೆಯ ಶಿರಸಿ ವೃತ್ತದ ಬಳಿ ದೊಡ್ಡ ಮರ ರಸ್ತೆಗೆ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ವಾಹನ ಸಿಲುಕಿಲ್ಲ, ಪ್ರಾಣಾಪಾಯವಾಗಿಲ್ಲ.

    ಮತ್ತೆ ಸಾಯಿ ಲೇಔಟ್ ಜನರು ಸಂಕಷ್ಟ ಅನುಭವಿಸಿದ್ದು ರಾತ್ರಿಯಿಡೀ ಸುರಿದ ಮಳೆಗೆ ಲೇಔಟ್ ಪೂರ್ತಿ ಜಲಾವೃತವಾಗಿದೆ. ಮೊಣಕಾಲವರೆಗೂ ನೀರು ತುಂಬಿದ್ದು ಜನ ಆಕ್ರೋಶ ಹೊರಹಾಕಿದ್ದಾರೆ. ಮನೆಯ ಒಳಗಡೆಯೂ ನೀರು ತುಂಬಿದ್ದು ವಸ್ತುಗಳು ಚೆಲ್ಲಾಪಿಲ್ಲಿಯಾಗಿದೆ. ಭಾನುವಾರ ಈ ಜಾಗಕ್ಕೆ ಬಿಬಿಎಂಪಿ ಆಯುಕ್ತ ಮಹೇಶ್ವರರಾವ್ ಭೇಟಿ ನೀಡಿದ್ದರು.

  • ಬೆಂಗಳೂರು | ಮಳೆಗೆ ಬೈಕ್ ಮೇಲೆ ಬಿದ್ದ ಮರ – ಮೂರು ವರ್ಷದ ಮಗು ಸಾವು

    ಬೆಂಗಳೂರು | ಮಳೆಗೆ ಬೈಕ್ ಮೇಲೆ ಬಿದ್ದ ಮರ – ಮೂರು ವರ್ಷದ ಮಗು ಸಾವು

    ಬೆಂಗಳೂರು: ನಗರದಲ್ಲಿ (Bengaluru) ಸಂಜೆ ಸುರಿದ ಮಳೆಗೆ (Rain) ಮರ ಬೈಕ್ (Bike) ಮೇಲೆ ಮುರಿದು ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿದ ಘಟನೆ ಜೀವನಹಳ್ಳಿಯ ಪೂರ್ವ ಪಾರ್ಕ್ ಬಳಿ ನಡೆದಿದೆ.

    ಮೃತ ಮಗುವನ್ನು ರಕ್ಷಾ ಎಂದು ಗುರುತಿಸಲಾಗಿದೆ. ತಂದೆಯ ಜೊತೆ ಮಗು ಬೈಕ್‍ನಲ್ಲಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಮರ ಬಿದ್ದು ಮಗುವಿಗೆ ಗಂಭೀರ ಗಾಯವಾಗಿತ್ತು. ತಕ್ಷಣ ಮಗುವನ್ನು ಫೋಷಕರು ಬೌರಿಂಗ್ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಮಗು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ.

    ಪುಲಕೇಶಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಬೆಂಗಳೂರಿನ ಹಲವೆಡೆ ಬೆಳಗ್ಗೆಯೇ ತುಂತುರು ಮಳೆ

    ಬೆಂಗಳೂರಿನ ಹಲವೆಡೆ ಬೆಳಗ್ಗೆಯೇ ತುಂತುರು ಮಳೆ

    ಬೆಂಗಳೂರು: ಇಂದು ಬೆಳಗ್ಗೆಯೇ ಬೆಂಗಳೂರಿನ (Bengaluru Rain) ಹಲವೆಡೆ ತುಂತುರು ಮಳೆಯಾಗಿದೆ.

    ಬೆಳಗ್ಗೆ 6 ಗಂಟೆಯಿಂದ ಯಶವಂತಪುರ, ವಿಜಯನಗರ, ಕುಮಾರಸ್ವಾಮಿ ಲೇಔಟ್‌, ಮಾದವಾರ ಸೇರಿದಂತೆ ಹಲವೆಡೆ ತುಂತುರು ಮಳೆಯಾಗಿದೆ. ಇದನ್ನೂ ಓದಿ: ಕಡಿಮೆ ಮಕ್ಕಳಿರುವ ಸರ್ಕಾರಿ ಶಾಲೆಗಳನ್ನ ಮುಚ್ಚಲು ಮುಂದಾಯ್ತಾ ರಾಜ್ಯ ಸರ್ಕಾರ?

    ತಮಿಳುನಾಡಿನ ಬಂಗಾಳಕೊಲ್ಲಿಯಲ್ಲಿ (Bay of Bengal) ವಾಯುಬಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದ ಹಲವಡೆ ಮಳೆಯಾಗಲಿದೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ (IMD) ನೀಡಿದೆ.

    ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಕೋಲಾರ ಮತ್ತು ಹಾಸನ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.

  • ಬ್ರ‍್ಯಾಂಡ್ ಬೆಂಗಳೂರು ಮುಳುಗುತ್ತಿದೆ – ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ

    ಬ್ರ‍್ಯಾಂಡ್ ಬೆಂಗಳೂರು ಮುಳುಗುತ್ತಿದೆ – ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ

    ಬೆಂಗಳೂರು: ಬ್ರ‍್ಯಾಂಡ್ ಬೆಂಗಳೂರು ಮುಳುಗುತ್ತಿದೆ ಎಂದು ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಜೆಡಿಎಸ್ (JDS) ವಾಗ್ದಾಳಿ ನಡೆಸಿದೆ.ಇದನ್ನೂ ಓದಿ: ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ

    ಸಿಲಿಕಾನ್ ಸಿಟಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಇಡೀ ಬೆಂಗಳೂರು ಅವ್ಯವಸ್ಥೆ ಆಗಿದೆ ಎಂದು ಎಕ್ಸ್ (X) ಖಾತೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಪೋಸ್ಟ್ ಹಾಕಿದೆ. ಸರ್ಕಾರದ ವಿರುದ್ಧ ಕಿಡಿಕಾರಿರುವ ಜೆಡಿಎಸ್ ಬ್ರ‍್ಯಾಂಡ್ ಬೆಂಗಳೂರು ಮುಳುಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದೆ.

    ಟ್ವೀಟ್‌ನಲ್ಲಿ ಏನಿದೆ?
    ಮಾನ್ಯ ಹೆಚ್‌ಡಿ ದೇವೇಗೌಡ (HD Devegowda) ಅವರು ದೂರದೃಷ್ಟಿಯಿಂದ ಬೆಂಗಳೂರು ನಗರಕ್ಕೆ ಮಾಹಿತಿ ತಂತ್ರಜ್ಞಾನದ ಅಡಿಪಾಯ ಹಾಕಿದರು. ಆ ನಂತರ ಬಂದ ಕಾಂಗ್ರೆಸ್ ಸರ್ಕಾರ ದೇವೇಗೌಡರ ದಿಸೆಯಿಂದ ಚಿನ್ನದ ಬೆಲೆ ಬಂದ ಭೂಮಿಯನ್ನು ಕೊಳ್ಳೆ ಹೊಡೆಯಲು ರಿಯಲ್ ಎಸ್ಟೇಟ್ ದಂಧೆಗೆ ನಾಂದಿ ಹಾಡಿತು. ಆ ರಿಯಲ್ ಎಸ್ಟೇಟ್ ದಂಧೆಯ ರಕ್ಕಸ ರೂಪವೇ ಡೂಪ್ಲಿಕೇಟ್ ಸಿಎಂ ಬ್ರ‍್ಯಾಂಡ್ ಬೆಂಗಳೂರು!! ಬ್ರ‍್ಯಾಂಡ್ ಬೆಂಗಳೂರು ಮುಳುಗುತ್ತಿದೆ! ಡೂಪ್ಲಿಕೇಟ್ ಸಿಎಂ ಫೋಟೋಶೂಟ್‌ನಲ್ಲಿ ಬ್ಯುಸಿಯಾಗಿದ್ದಾರೆ!! ರೋಮ್ ಹೊತ್ತಿ ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದ!! ಎಂದು ಜೆಡಿಎಸ್ ಲೇವಡಿ ಮಾಡಿದೆ.ಇದನ್ನೂ ಓದಿ: ವಾಯು ಮಾಲಿನ್ಯ ನಿಯಂತ್ರಣಕ್ಕೆ ಕ್ರಮಕೈಗೊಳ್ಳದ ಹರಿಯಾಣ, ಪಂಜಾಬ್ ಸರ್ಕಾರಕ್ಕೆ ಸುಪ್ರೀಂ ಛೀಮಾರಿ

  • ಮಳೆ ಬಂದಾಗ ನೀರನ್ನು ವಾಪಸ್ ಆಕಾಶಕ್ಕೆ ಕಳಿಸೋಕಾಗಲ್ಲ – ಬಿಜೆಪಿ ಟೀಕೆಗೆ ಪರಮೇಶ್ವರ್ ತಿರುಗೇಟು

    ಮಳೆ ಬಂದಾಗ ನೀರನ್ನು ವಾಪಸ್ ಆಕಾಶಕ್ಕೆ ಕಳಿಸೋಕಾಗಲ್ಲ – ಬಿಜೆಪಿ ಟೀಕೆಗೆ ಪರಮೇಶ್ವರ್ ತಿರುಗೇಟು

    ಬೆಂಗಳೂರು: ಮಳೆ ಬಂದಾಗ ಆ ನೀರನ್ನು ಮತ್ತೆ ಆಕಾಶಕ್ಕೆ ಕಳಿಸುವುದಕ್ಕೆ ಆಗುವುದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ಟಾಂಗ್ ಕೊಟ್ಟಿದ್ದಾರೆ.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಳೆ ಹಾನಿ ವಿಚಾರವಾಗಿ ಬಿಜೆಪಿ (BJP) ಟೀಕೆಗೆ ಪ್ರತಿಕ್ರಿಯಿಸಿ, ಇದು ಅನಿರೀಕ್ಷಿತ ಮಳೆ. ಯಾವತ್ತಾದರೂ ಅಕ್ಟೋಬರ್ ತಿಂಗಳಲ್ಲಿ ಈ ರೀತಿ ಮಳೆ ಬಿದ್ದದ್ದು ನಾವು ನೋಡಿದ್ದೀವಾ? ಮಳೆ ಬರುತ್ತಿದೆ ಎದುರಿಸಬೇಕು. ಮಳೆ ಬಂದಾಗ ಆ ನೀರನ್ನು ಮತ್ತೆ ಆಕಾಶಕ್ಕೆ ಕಳಿಸುವುದಕ್ಕೆ ಆಗುವುದಿಲ್ಲ. ಬಿದ್ದ ಮಳೆ ನೀರು ಭೂಮಿ ಮೇಲೆಯೇ ಹರಿದು ಹೋಗಬೇಕು ಎಂದು ತಿರುಗೇಟು ಕೊಟ್ಟಿದ್ದಾರೆ.ಇದನ್ನೂ ಓದಿ: ಜ್ಯೂಸ್‌ ಕುಡಿಸಿ ಪ್ರಯಾಣಿಕರಿಂದ ಚಿನ್ನಾಭರಣ ದೋಚುತ್ತಿದ್ದ ಖತರ್ನಾಕ್‌ ಕಳ್ಳಿ ಅಂದರ್‌

    ಸಂಡೂರು ಉಪಚುನಾವಣೆ:
    ಸಂಡೂರು ಉಪಚುನಾವಣೆಯಲ್ಲಿ ಬಿಜೆಪಿಯವರು ವಾಲ್ಮೀಕಿ ಪ್ರಕರಣ (Valmiki Scam) ಬಗ್ಗೆ ಪ್ರಚಾರ ಮಾಡಬಹುದು. ನಾವು ಕೂಡ ಅದರ ಬಗ್ಗೆ ಏನು ನಡೆದಿದೆ ಅದನ್ನು ಹೇಳುತ್ತೇವೆ. ಅದು ಅಧಿಕಾರಿಗಳ ಮಟ್ಟದಲ್ಲಿ ಆಯಿತಾ? ರಾಜಕಾರಣಿಗಳ ಮಟ್ಟದಲ್ಲಿ ಆಯಿತಾ? ಎಂದು ಹೇಳುತ್ತೇವೆ. ಇದು ಅಧಿಕಾರಿಗಳ ಮಟ್ಟದಲ್ಲಿ ನಡೆದ ಪ್ರಕರಣ. ಇದನ್ನು ನಾವು ಚುನಾವಣಾ ಪ್ರಚಾರ ವೇಳೆ ತಿಳಿಸುತ್ತೇವೆ. ದದ್ದಲ್ ಅವರನ್ನು ವಿಚಾರಣೆಗೆ ಕರೆದಿದ್ದರು. ಆದರೆ ಅವರ ಹೆಸರು ಪ್ರಕರಣದಲ್ಲಿ ಬರಲಿಲ್ಲ. ನಾಗೇಂದ್ರ ಅವರ ವಿಚಾರಣೆಯೂ ಆಗಿದೆ ಎಂದು ಹೇಳಿದರು.

    ಇನ್ನೂ ಹರಿಯಾಣದಲ್ಲಿ (Hariyana) ಮೋದಿಯವರು ಮುಡಾ ಬಗ್ಗೆ ಪ್ರಚಾರ ಮಾಡಿರಬಹುದು. ಅಲ್ಲಿ ಎಷ್ಟು ಜನಕ್ಕೆ ಇದು ಗೊತ್ತಿದೆ? ಅವರು ರಾಜಕೀಯ ಕಾರಣಕ್ಕೆ ಪ್ರಚಾರ ಮಾಡಿರುತ್ತಾರೆ. ಮಹಾರಾಷ್ಟ್ರದಲ್ಲೂ ಪ್ರಚಾರ ಮಾಡಿದರೆ ನಾವು ಸತ್ಯ ಏನಿದೆ ಎಂದು ಹೇಳಿ, ಗೆದ್ದು ಬರುತ್ತೇವೆ. ವೇಣುಗೋಪಾಲ್ ರಾಜ್ಯಕ್ಕೆ ಭೇಟಿ ನೀಡುತ್ತಾರೆ. ಆಗ ಭೇಟಿಗೆ ಸಮಯ ಕೇಳುತ್ತೇನೆ ಎಂದರು.

    ಡಿಜೆ ಹಳ್ಳಿ, ಕೆಜಿ ಹಳ್ಳಿ ಕೇಸ್ ವಾಪಸ್ ವಿಚಾರ:
    ನಮಗೆ ಮುಂಬೈ ಮತ್ತು ಕೊಂಕಣ್ ಚುನಾವಣಾ ಉಸ್ತುವಾರಿಯಾಗಿ ನೇಮಿಸಲಾಗಿದೆ. ಎಂಬಿ ಪಾಟೀಲರಿಗೆ ಕೊಲ್ಹಾಪುರ, ಸೊಲ್ಹಾಪುರ ಭಾಗದಲ್ಲಿ ಉಸ್ತುವಾರಿ ನೀಡಲಾಗಿದೆ. ಡಿಜೆ ಹಳ್ಳಿ, ಕೆಜಿ ಹಳ್ಳಿ, ಕೇಸ್‌ಗಳ ವಿಚಾರವಾಗಿ ಯಾವುದೇ ಪ್ರಸ್ತಾಪ ಬಂದಿಲ್ಲ. ಪ್ರಸ್ತಾಪ ಬಂದರೆ ಸುಳ್ಳು ಕೇಸ್ ಹಾಕಿದ್ದಾರಾ ಇಲ್ವಾ ಎಂದು ಪರಿಶೀಲನೆ ಮಾಡುತ್ತೇವೆ. ಹಿಂದೆ ಪ್ರಸ್ತಾಪ ಬಂದಿರುವ ಬಗ್ಗೆ ನನಗೆ ಗೊತ್ತಿಲ್ಲ. ನಾನು ಈ ಕೇಸ್‌ಗಳನ್ನು ವಾಪಸ್ ಪಡೀತೀವಿ ಎಂದು ಎಲ್ಲಿಯೂ ಹೇಳಿಲ್ಲ. ಪ್ರಸ್ತಾಪ ಬಂದರೆ ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದ್ದೇನೆ ಎಂದು ತಿಳಿಸಿದರು.

    ಹರಿಪ್ರಸಾದ್ ಯಾವುದೋ ಕಾರಣಕ್ಕೆ ಹೇಳಿರಬಹುದು. ಅವರು ಹೇಳಿದ್ದಾರೆ ಎಂದು ನಾವು ಕೇಸ್ ವಾಪಸ್ ಪಡೆಯಲು ಆಗಲ್ಲ. ಪ್ರಸ್ತಾಪ ಬಂದಾಗ ಪರಿಶೀಲನೆ ಮಾಡುತ್ತೇವೆ. ಯಾರೂ ಪತ್ರ ಬರೆದಿಲ್ಲ, ಪ್ರಸ್ತಾವನೆ ಬಂದಿಲ್ಲ. ಹಿಂದೆ ಬರೆದಿದ್ದ ಪತ್ರ ಅದು ಅಲ್ಲಿಗೇ ನಿಂತಿದೆ. ಈಗ ಮತ್ತೇ ಪ್ರಸ್ತಾಪ ಬಂದರೆ ಪರಿಶೀಲನೆ ಮಾಡುತ್ತೇವೆ. ಪ್ರಸ್ತಾಪ ಬಂದರೆ ಕ್ಯಾಬಿನೆಟ್ ಸಬ್ ಕಮಿಟಿಯ ಮುಂದಿಟ್ಟು, ನಂತರ ಸಂಪುಟದಲ್ಲಿ ಚರ್ಚೆ ಆಗುತ್ತದೆ. ಹುಬ್ಬಳ್ಳಿ ಕೇಸ್ ವಿಚಾರದಲ್ಲಿ ಕೋರ್ಟ್ ಏನು ಮಾಡುತ್ತದೆ ನೋಡಬೇಕು ಎಂದು ಹೇಳಿದರು.

    ಸ್ನೇಹಮಯಿ ಕೃಷ್ಣ ದೂರು ವಿಚಾರ:
    ಮುಡಾ ಪ್ರಕರಣದಲ್ಲಿ (MUDA Scam) ಎ1, 12 ಆರೋಪಿಗಳನ್ನು ವಿಚಾರಣೆ ಮಾಡುತ್ತಿಲ್ಲ ಎಂದು ಸ್ನೇಹಮಯಿ ಕೃಷ್ಣ ದೂರು ಕೊಟ್ಟ ವಿಚಾರವಾಗಿ ಮಾತನಾಡಿ, ಲೋಕಾಯುಕ್ತದವರ ಕಾರ್ಯವೈಖರಿ ಬಗ್ಗೆ ನಾನು ಏನೂ ಹೇಳುವುದಿಲ್ಲ. ಅವರ ಕೆಲಸವನ್ನು ಅವರು ಮಾಡುತ್ತಿದ್ದಾರೆ. ಲೋಕಾಯುಕ್ತ ಪೊಲೀಸರಿಗೆ ಯಾವಾಗ, ಯಾರನ್ನು ವಿಚಾರಣೆಗೆ ಕರೆಯಬೇಕು ಎಂಬುದು ಗೊತ್ತಿದೆ. ಅದರಂತೆ ಅವರು ವಿಚಾರಣೆಗೆ ಕರೆಯುತ್ತಾರೆ. ಅವರನ್ನು ಕರೆದಿಲ್ಲ, ಇವರನ್ನು ಕರೆದಿಲ್ಲ ಎಂದು ನಾವು ಹೇಳಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಬಿಜೆಪಿ ಶಾಸಕ ಮುನಿರತ್ನ ಜೈಲಿನಿಂದ ಬಿಡುಗಡೆ

  • ಭಾರೀ ಮಳೆಗೆ ಟ್ರ್ಯಾಕ್‌ಗೆ ಬಿದ್ದ ಮರ: ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

    ಭಾರೀ ಮಳೆಗೆ ಟ್ರ್ಯಾಕ್‌ಗೆ ಬಿದ್ದ ಮರ: ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

    – ಮರ ತೆರವು ಬಳಿಕ ಮೆಟ್ರೋ ಸಂಚಾರ ಮತ್ತೆ ಆರಂಭ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Silicon City) ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಟ್ರ್ಯಾಕ್‌ಗೆ ಮರ ಉರುಳಿ, ನೇರಳ ಮಾರ್ಗದಲ್ಲಿ ನಮ್ಮ ಮೆಟ್ರೋ ರೈಲು (Namma Metro) ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಸಿಬ್ಬಂದಿ ಮರ ತೆರವುಗೊಳಿಸಿದ ಬಳಿಕ ಮೆಟ್ರೋ ಸಂಚಾರ ಮತ್ತೆ ಆರಂಭವಾಯಿತು.

    ಎರಡು ದಿನಗಳಿಂದ ಬೆಂಗಳೂರಿನಲ್ಲಿ ವರುಣ ಅಬ್ಬರಿಸುತ್ತಿದ್ದು, ಮಳೆಯ ಪರಿಣಾಮ ನಮ್ಮ ಮೆಟ್ರೋ ರೈಲಿನ ನೇರಳೆ ಬಣ್ಣದ (Purple Line Metro) ಮಾರ್ಗದಲ್ಲಿ ಮರವೊಂದು ಟ್ರ್ಯಾಕ್‌ಗೆ ಉರುಳಿ, ಎಸ್‌ವಿ ರೋಡ್ ಹಾಗೂ ಇಂದಿರಾನಗರ ನಡುವೆ ಮೆಟ್ರೋ ಸಂಚಾರ ಸ್ಥಗಿತಗೊಂಡು ವ್ಯತ್ಯಯ ಉಂಟಾಗಿತ್ತು.ಇದನ್ನೂ ಓದಿ:

    ಬುಧವಾರ ಬೆಳಗ್ಗೆ 6:05ರಿಂದ 8 ಗಂಟೆಯವರೆಗೆ ಮೆಟ್ರೋ ಸಂಚಾರ ಸ್ಥಗಿತಗೊಂಡಿತ್ತು. ಬಿಎಂಆರ್‌ಸಿಎಲ್ (BMRCL) ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಮರವನ್ನು ತೆರವುಗೊಳಿಸಿದರು. ಈ ವೇಳೆ ಇಂದಿರಾನಗರ -ಚಲಘಟ್ಟ ಹಾಗೂ ಬೈಯಪ್ಪನಹಳ್ಳಿ – ವೈಟ್‌ಫೀಲ್ಡ್ ನಿಲ್ದಾಣದವರೆಗೆ ಮೆಟ್ರೋ ಸುಗಮ ಸಂಚಾರಗೊಂಡಿದ್ದು, ಈ ಎರಡು ಮೆಟ್ರೋ ನಿಲ್ದಾಣಗಳ ಮಧ್ಯೆ ರೈಲು ಸಂಚಾರ ಸ್ಥಗಿತಗೊಂಡಿತ್ತು.

    ಮೆಟ್ರೋ ಸಂಚಾರ ಪುನರಾರಂಭ:
    ಬುಧವಾರ ಬೆಳಗ್ಗೆ 6:05 ಸ್ಥಗಿತಗೊಂಡ ಮೆಟ್ರೋ, ಮರವು ತೆರವುಗೊಳಿಸಿದ ಬಳಿಕ 8 ಗಂಟೆಗೆ ಮತ್ತೆ ಪುನರಾರಂಭಗೊಂಡಿದೆ. ಇದೀಗ ಎಂದಿನಂತೆ ಮೆಟ್ರೋ ರೈಲು ಸಂಚಾರ ಆರಂಭಗೊಂಡಿದೆ.ಇದನ್ನೂ ಓದಿ: