ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬಲಿಯಾಗಿದೆ. ಮಹದೇವಪುರದ ಗುಂಜೂರಿನ ಡೀನ್ಸ್ ಅಕಾಡಮಿ ಬಳಿ ದುರ್ಘಟನೆ ನಡೆದಿದೆ. ಬೈಕ್‌ವೊಂದಕ್ಕೆ ಸ್ಕೂಲ್ ಬಸ್ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಕುರಿತ ವಿಡಿಯೋ ಇಲ್ಲಿದೆ
– ಜನರ ಕಷ್ಟ ನಿಮ್ಮ ಕಣ್ಣಿಗೆ ಬೀಳ್ತೀಲ್ವಾ? ನಿಮ್ಮಿಂದ ಸರ್ಕಾರಕ್ಕೆ ಕೆಟ್ಟ ಹೆಸರು; ಸಿಎಂ ಫುಲ್ ಗರಂ
– ಒಟ್ಟು 14,795 ರಸ್ತೆ ಗುಂಡಿಗಳ ಗುರುತು; 8,046 ಗುಂಡಿಗಳು ಮುಚ್ಚಲು ಬಾಕಿ
ಬೆಂಗಳೂರು: ಬೆಂಗಳೂರು ನಗರ ರಸ್ತೆಗಳ (Bengaluru City Roads) ಸುಧಾರಣೆ ಹಾಗೂ ಸಂಚಾರ ವ್ಯವಸ್ಥೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿದಂದು ಮಹತ್ವದ ಸಭೆ ನಡೆಯಿತು. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಸಿದ್ದರಾಮಯ್ಯ (Siddaramaiah) ಅವರು ಎಂಜಿನಿಯರ್‌ಗಳನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು.
ಸಭೆಯಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಂದ ಮಾಹಿತಿ ಪಡೆದ ಸಿಎಂ, ಹಾಳಾಗಿರುವ ನಗರದ ರಸ್ತೆ ಗುಂಡಿಗಳಿಂದ (Potholes) ಜನ ಹೈರಾಣಾಗಿದ್ದಾರೆಂದು ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ರಸ್ತೆ ಗುಂಡಿಗಳನ್ನು ಮುಚ್ಚಲು ನಿಮಗೇನು ಕಷ್ಠ? ನಿಮ್ಮಿಂದ ಸರ್ಕಾರಕ್ಕೆ ಕೆಟ್ಟ ಹೆಸರು, ನಾಚಿಕೆ ಆಗುವುದಲ್ಲವೇ ನಿಮ್ಗೆ? ಮಚ್ಚಿರುವ ಗುಂಡಿಗಳೂ ನೆಟ್ಟಗಿಲ್ಲ. ಜನರ ಪ್ರತಿನಿತ್ಯದ ಸಂಕಷ್ಟ ನಿಮ್ಮ ಕಣ್ಣಿಗೆ ಬೀಳುತ್ತಿಲ್ಲವಾ? ತುರ್ತು ಕ್ರಮ ಏಕೆ ತೆಗೆದುಕೊಳ್ಳುತ್ತಿಲ್ಲ? ಪ್ರತಿ ವಾರ್ಡ್‌ನ ಎಂಜಿನಿಯರ್‌ಗಳು, ಮುಖ್ಯ ಎಂಜಿನಿಯಋಗಳು ಏನ್ ಮಾಡ್ತಿದ್ದಾರೆ? ಇನ್ನು ಒಂದು ತಿಂಗಳ ಕಾಲಾವಕಾಶ ನೀಡುತ್ತೇವೆ. ರಸ್ತೆ ಗುಂಡಿಗಳನ್ನು ಮುಚ್ಚಲು ಕಟ್ಟುನಿಟ್ಟಿನ ಕ್ರಮ ವಹಿಸಲೇಬೇಕು ಮತ್ತು ರಸ್ತೆಗಳನ್ನು ಸಂಚಾರ ಯೋಗ್ಯ ಮಾಡಲೇಬೇಕು. ರಸ್ತೆ ನಿರ್ವಹಣೆಗೆ ಸೂಕ್ತ ಕ್ರಮ ವಹಿಸದ ಅಧಿಕಾರಿಗಳ ಮೇಲೆ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಲಾಗುವುದು. ನಾನು ಯಾರ ಮುಖವನ್ನೂ ನೋಡಲ್ಲ. ಗುಂಡಿ ಮುಚ್ಚದಿದ್ದರೇ ಎಲ್ಲ ಚೀಫ್ ಎಂಜಿನಿಯರ್‌ಗಳನ್ನ ಸಸ್ಪೆಂಡ್ ಮಾಡಿ ಮನೆಗೆ ಕಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಗುತ್ತಿಗೆದಾರರೊಂದಿಗೆ ಶಾಮೀಲಾಗದೇ ಒದಗಿಸಿರುವ ಅನುದಾನಕ್ಕೆ ಉತ್ತಮ ಗುಣಮಟ್ಟದ, ವೈಜ್ಞಾನಿಕವಾದ ಕಾಮಗಾರಿಗಳನ್ನು ಪೂರೈಸಲು ಕ್ರಮ ವಹಿಸಿ. ಮಳೆಗಾಲಕ್ಕೆ ಮುನ್ನವೇ ರಸ್ತೆ ಕಾಮಗಾರಿಗಳನ್ನು ಯಾಕೆ ಮಾಡುತ್ತಿಲ್ಲ? ಮಳೆಗಾಲದಲ್ಲಿಯೇ ಏಕೆ ಪ್ರಾರಂಭಿಸುವಿರಿ? ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ನೂತನವಾಗಿ ನೇಮಕಗೊಂಡಿರುವ ಆಯುಕ್ತರು ಫೀಲ್ಡ್ ವರ್ಕ್ ಮಾಡಿ, ನಿಗಾ ಇರಿಸಬೇಕು ಎಂದು ತಾಕೀತು ಮಾಡಿದರು.
ಬಿಡಿಎ, ಬಿಎಂಆರ್ ಸಿಎಲ್, ಜಲಮಂಡಳಿ ಅಧಿಕಾರಿಗಳ ನಡುವೆ ಸಮನ್ವಯವೇ ಇರುವುದಿಲ್ಲ. ರಸ್ತೆ ಗುಂಡಿಗಳನ್ನು ಮುಚ್ಚಲು ಹಾಗೂ ಎಲ್ಲಾ ರಸ್ತೆಗಳನ್ನು ಸಂಚಾರ ಯೋಗ್ಯ ಮಾಡಲು ಒಂದು ತಿಂಗಳ ಗಡುವು ನೀಡಲಾಗುವುದು. ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಮುಖ್ಯ ಆಯುಕ್ತರು ಪ್ರತಿ ವಾರ 5 ವಲಯಗಳ ಆಯುಕ್ತರೊಂದಿಗೆ ಸಭೆ ನಡೆಸಿ, ನಿರಂತರ ಸಂಪರ್ಕದಲ್ಲಿರಬೇಕು. ಹಣದ ಕೊರತೆಯಿದ್ದರೆ ಆರ್ಥಿಕ ಇಲಾಖೆಯಿಂದ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳುತ್ತೇವೆ. ಆದ್ಯತೆ ಮೇರೆಗೆ ಕ್ರಮ ವಹಿಸಿ. ಒಂದು ತಿಂಗಳ ನಂತರ ಮತ್ತೆ ಮೌಲ್ಯ ಮಾಪನ ನಡೆಸಲಾಗುವುದು ಎಂದು ಹೇಳಿದರು ಸಿಎಂ
14,795 ರಸ್ತೆ ಗುಂಡಿಗಳ ಗುರುತು
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ರಸ್ತೆ ಜಾಲದಲ್ಲಿ 1,648.43 ಕಿ.ಮೀ ಉದ್ದದ ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆಗಳಿವೆ. 46.61 ಕಿ.ಮೀ ಹೈಡೆನ್ಸಿಟಿ ಕಾರಿಡಾರ್ ರಸ್ತೆಗಳಿವೆ. ಬೆಂಗಳೂರು ಕೇಂದ್ರ, ಬೆಂಗಳೂರು ಪೂರ್ವ, ಪಶ್ಚಿಮ ಉತ್ತರ ಮತ್ತು ದಕ್ಷಿಣ ನಗರಪಾಲಿಕೆಗಳಲ್ಲಿ ಒಟ್ಟು 14,795 ರಸ್ತೆ ಗುಂಡಿಗಳನ್ನು ಗುರುತಿಸಿಲಾಗಿದೆ. ಈಗಾಗಲೇ 6,749 ಗುಂಡಿಗಳನ್ನು ಮುಚ್ಚಲಾಗಿದ್ದು 8,046 ಗುಂಡಿಗಳು ಮುಚ್ಚಲು ಬಾಕಿ ಇವೆ. ಅಕ್ಟೋಬರ್ ಅಂತ್ಯ ವೇಳೆಗೆ ಎಲ್ಲಾ ಗುಂಡಿಗಳನ್ನು ಮುಚ್ಚಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈಗಾಗಲೇ 108.20 ಕಿ.ಮೀ ಉದ್ದದ ರಸ್ತೆಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಪೂರ್ಣಗೊಂಡಿದೆ. 143.68 ಕಿ.ಮೀ ಉದ್ದದ ರಸ್ತೆ ಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಪ್ರಗತಿಯಲ್ಲಿದೆ. 401.63 ಕಿ. ಮೀ ರಸ್ತೆಗಳು ಡಾಂಬರೀಕರಣ ಗೊಂಡಿದ್ದು, 440.92 ಕಿ.ಮೀ ಡಾಂಬರೀಕರಣ ಕಾಮಗಾರಿ ಪ್ರಗತಿಯಲ್ಲಿದೆ. ಒಟ್ಟಾರೆ 584.60 ಕಿ ಮೀ ಉದ್ದದ ರಸ್ತೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ ಎಂದು ಸಭೆಗೆ ಅಧಿಕಾರಿಗಳು ಮಾಹಿತಿ ನೀಡಿದರು.
* ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚಲು 2025-26ರ ಆಯವ್ಯಯದಲ್ಲಿ 18 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದೆ.
* ಎಲ್ಲಾ ನಗರ ಪಾಲಿಕೆಗಳಿಗೂ ತುರ್ತು ಕಾಮಗಾರಿ ಕೈಗೊಳ್ಳಲು 25 ಕೋಟಿ ರೂ.ಗಳ ಹಣ ಬಿಡುಗಡೆ ಮಾಡಲಾಗಿದ್ದು, ಪಾಲಿಕೆಗಳಿಂದ ರಸ್ತೆ ಗುಂಡಿಗಳನ್ನು ಮುಚ್ಚಲು ಕ್ರಮ ವಹಿಸಲಾಗಿದೆ.
* ನೂತನ ತಂತ್ರಜ್ಞಾನ JETPATCHER ಬಳಸಿಕೊಳ್ಳಲು 2.50 ಕೋಟಿ ರೂ.ಗಳ ಮೊತ್ತದ ಟೆಂಡರ್ ಚಾಲ್ತಿಯಲ್ಲಿದ್ದು ಸದರಿ ತಂತ್ರಜ್ಞಾನದಿಂದ ತೇವಾಂಶವಿರುವ ಸಮಯದಲ್ಲಿಯೂ ಗುಂಡಿಗಳನ್ನು ಮುಚ್ಚಬಹುದಾಗಿದೆ.
* ಐದೂ ಪಾಲಿಕೆಗಳೊಂದಿಗೆ ಸಮನ್ವಯ ಸಾಧಿಸಲು ಒಬ್ಬ ತಾಂತ್ರಿಕ ಸಮನ್ವಯಾಧಿಕಾರಿ ನೇಮಿಸಲು ಕ್ರಮ.
* ಇಬ್ಬಲೂರು ಜಂಕ್ಷನ್, ಅಗರ, ವೀರಣ್ಣನ ಪಾಳ್ಯ, ನಾಗವಾರ ಮತ್ತು ಹೆಬ್ಬಾಳ ಜಂಕ್ಷನ್‌ಗಳಲ್ಲಿ ಜಲಮಂಡಳಿ ಮತ್ತು ಮೆಟ್ರೋ ಕಾಮಗಾರಿಯಿಂದ ಜಂಕ್ಷನ್ ಹಾಳಾಗಿದ್ದು 400 ಕೋಟಿ ರೂ.ಗಳ ಹೊರವರ್ತುಲ ರಸ್ತೆ ಅಭಿವೃದ್ಧಿ ಯೋಜನೆಯಡಿ ಸಮಗ್ರವಾಗಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ ಎಂದು ಸಿಎಂ ತಿಳಿಸಿದರು.
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯ ರಸ್ತೆಗುಂಡಿಗಳನ್ನು ಇನ್ನೂ 15 ದಿನಗಳ ಒಳಗಾಗಿ ಮುಚ್ಚಿ ದುರಸ್ತಿ ಮಾಡಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಈ ಸಂಬಂಧ ಡಿಸಿಎಂ ಡಿ.ಕೆ ಶಿವಕುಮಾರ್ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಲಾಗಿದೆ. ರಸ್ತೆ ಗುಂಡಿಗಳ (Road Potholes) ಬಗ್ಗೆ ಸಾಕಷ್ಟು ದೂರುಗಳು ಕೇಳಿಬರುತ್ತಿವೆ. ಈ ಬಗ್ಗೆ ತುರ್ತಾಗಿ ಗಮನ ಹರಿಸಬೇಕು ಈಗಾಗಲೇ ʻರಸ್ತೆ ಗುಂಡಿ ಗಮನʼ ಎನ್ನುವ ಆಪ್ ಮೂಲಕ ಸಾರ್ವಜನಿಕರು ರಸ್ತೆ ಗುಂಡಿಗಳ ಫೋಟೋ ತೆಗೆದು ಅಪ್‌ಲೋಡ್ ಮಾಡುವ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಡಿಕೆಶಿ ಓಡಿಸುತ್ತಿದ್ದ ಹಳೇ ಬೈಕ್‌ಗೆ ಹೊಸ ರೂಪ – 1981 ರ ಮಾಡೆಲ್ ಎಝಡಿ ರೋಡ್ ಕಿಂಗ್ ಬೈಕ್
ನಗರದ ಅನೇಕ ಕಡೆ ರಸ್ತೆ ಹಾಳಾಗಿರುವುದರ ಬಗ್ಗೆ ಇಲ್ಲಿಯೂ ಸಹ ದೂರುಗಳು ಬರುತ್ತಿವೆ. ಮಳೆಗಾಲದ ಕಾರಣಕ್ಕೂ ರಸ್ತೆಗಳು ಗುಂಡಿ ಬೀಳುತ್ತಿರಬಹುದು. ಇದರ ಬಗ್ಗೆಯೂ ಬಿಬಿಎಂಪಿ ಆಯುಕ್ತರು ಗಮನ ಹರಿಸಬೇಕು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: Gujarat Floods | ಸ್ಕೂಟಿ ಮೇಲೆ ಹೊತ್ತೊಯ್ದು ಮೊಸಳೆ ರಕ್ಷಣೆ – ವೀಡಿಯೋ ವೈರಲ್
ರಸ್ತೆ ಗುಂಡಿಗಳನ್ನು ಮುಚ್ಚಲು ಗಡುವು ನೀಡಿರುವ 15 ದಿನಗಳ ನಂತರ ಇಡೀ ಬೆಂಗಳೂರು ನಗರವನ್ನು ತಾವೇ ಸ್ವತಃ ಪ್ರದಕ್ಷಿಣೆ ಹಾಕಲಿದ್ದೇನೆ. ಪ್ರತಿ ರಸ್ತೆಗಳನ್ನು ಪರಿಶೀಲನೆ ಮಾಡುತ್ತೇನೆ. ಅಷ್ಟರಲ್ಲಿ ಕೆಲಸ ಮುಗಿಸಿರಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ತಿಳಿಸಿದ್ದಾರೆ. ಇದನ್ನೂ ಓದಿ: ಉಡುಪಿ | ಸಮುದ್ರದಲ್ಲಿ ಮುಳುಗುತ್ತಿದ್ದ ಮೀನುಗಾರ – ಸತತ 1 ಗಂಟೆ ಕಾರ್ಯಾಚರಣೆ ನಡೆಸಿ ರಕ್ಷಣೆ