Tag: bengaluru rural

  • ಆನೇಕಲ್‌ | ಪತ್ನಿ ತುಂಡರಿಸಿ ಸೂಟ್‌ಕೇಸ್‌ಗೆ ತುಂಬಿದ್ದ ಟೆಕ್ಕಿ ಪತಿ – ಮಹಾರಾಷ್ಟ್ರದಲ್ಲಿ ಹಂತಕ ಅರೆಸ್ಟ್

    ಆನೇಕಲ್‌ | ಪತ್ನಿ ತುಂಡರಿಸಿ ಸೂಟ್‌ಕೇಸ್‌ಗೆ ತುಂಬಿದ್ದ ಟೆಕ್ಕಿ ಪತಿ – ಮಹಾರಾಷ್ಟ್ರದಲ್ಲಿ ಹಂತಕ ಅರೆಸ್ಟ್

    ಆನೇಕಲ್‌: ಸುಂದರ ಸಂಸಾರವದು. ಗಂಡನಿಗೆ ಸಾಫ್ಟ್‌ವೇರ್‌ ಕೆಲಸ… ಕೈ ತುಂಬ ಸಂಬಳ… ಹೆಂಡ್ತಿ ಕೂಡ ಡಿಗ್ರಿ ಮುಗಿಸಿ ಕೆಲಸಕ್ಕಾಗಿ ಹುಡುಕ್ತಿದ್ದರು ಸ್ಫುರದ್ರೂಪಿ ಅವಳು. ಹೀಗಿದ್ದಾಗ ಹೆಂಡ್ತಿಯನ್ನ ಕೊಲೆ ಮಾಡಿ ಸೂಟ್ ಕೇಸ್‌ಗೆ ತುಂಬಿ ಪುಣೆಯಲ್ಲಿ ಅರೆಸ್ಟ್ ಆಗಿರೋ ಗಂಡನ ಕ್ರೈಂ ಸ್ಟೋರಿ ನೋಡಿದ್ರೆ ಬೆಚ್ಚಿಬೀಳೋದಂತೂ ಗ್ಯಾರಂಟಿ.

    ಗೌರಿ ಅನಿಲ್ ಸಾಂಬೇಕರ್ ಕೊಲೆಯಾದ ಮಹಿಳೆ. ಮಾಸ್ ಕಮ್ಯುನಿಕೇಷನ್‌ನಲ್ಲಿ ಡಿಗ್ರಿ ಮುಗಿಸಿದ್ರು, ಎರಡು ವರ್ಷದ ಹಿಂದೆ ರಾಕೇಶ್ ಜೊತೆ ವಿವಾಹ ಮಾಡಿಕೊಡಲಾಗಿತ್ತು. ಸಾಫ್ಟ್ ವೇರ್ ಕಂಪನಿಯಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಆಗಿದ್ದ ರಾಕೇಶ್ ವರ್ಕ್ ಫ್ರಂ ಹೋಮ್‌ನಲ್ಲೇ ಕೆಲಸ ನಿರ್ವಹಿಸ್ತಿದ್ದ. ಇಬ್ಬರೂ ಕೂಡ ಮಹಾರಾಷ್ಟ್ರ ಮೂಲದವರು. ಕಳೆದ ಒಂದು ತಿಂಗಳ ಹಿಂದೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡ ಕಮ್ಮನಹಳ್ಳಿಯಲ್ಲಿ ಬಾಡಿಗೆಗೆ ಬಂದಿದ್ರು ಈ ದಂಪತಿ. ಇದನ್ನೂ ಓದಿ: ಆನೇಕಲ್‌| ಪತ್ನಿ ದೇಹ ತುಂಡರಿಸಿ ಸೂಟ್‌ಕೇಸ್‌ಗೆ ತುಂಬಿದ ಪಾಪಿ ಪತಿ

    ಸೂಟ್‌ಕೇಸ್‌ಗಳನ್ನು ಟಾಯ್ಲೆಟ್‌ನಲ್ಲಿಟ್ಟಿದ್ದ ಪತಿ ರಾಕೇಶ್:
    ಇನ್ನು ನಿನ್ನೆ ಸಂಜೆ ಬಾಡಿಗೆ ಮನೆಯಲ್ಲಿದ್ದ ವ್ಯಕ್ತಿಗೆ ಕರೆ ಮಾಡಿ ಹೆಂಡ್ತಿಯನ್ನು ಕೊಲೆ ಮಾಡಿ ಸೂಟ್‌ಕೇಸ್‌ನಲ್ಲಿಟ್ಟಿರೋದಾಗಿ ಹೇಳಿದ್ದ. ಕೆಳಗಿನ ಮನೆಯ ಬಾಡಿಗೆದಾರ ಕೂಡಲೇ ಮಾಲೀಕರಿಗೆ ಕರೆ ಮಾಡಿ ವಿಷಯ ತಿಳಿಸಿದ್ರು. ಸ್ಥಳಕ್ಕೆ ಎಫ್‌ಎಸ್‌ಎಲ್ ಟೀಂ, ಸೋಕೊ ಟೀಂ ಜೊತೆ ಎಂಟ್ರಿ ಕೊಟ್ಟ ಹುಳಿಮಾವು ಪೊಲೀಸರಿಗೆ ಕೊಲೆಯಾಗಿರೋದು ಕನ್ಫರ್ಮ್ ಆಗಿತ್ತು. ಹೆಂಡತಿಯ ದೇಹವನ್ನು ಅರ್ಧ ಕತ್ತರಿಸಿ, ಹೊಟ್ಟೆಭಾಗ ಕೊಯ್ದು ಸೂಟ್‌ಕೇಸ್‌ನಲ್ಲಿ ತುರುಕಿ, ಟಾಯ್ಲೆಟ್ ರೂಂನಲ್ಲಿಟ್ಟು ಪತಿರಾಯ ಎಸ್ಕೇಪ್ ಆಗಿದ್ದ. ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯ ಕರಾವಳಿಗೆ ತಟ್ಟಿದ ಬರ – 20 ಗ್ರಾಮಗಳಲ್ಲಿ ಒಂದು ತೊಟ್ಟು ನೀರಿಲ್ಲ, ಬತ್ತಿದ ಬಾವಿಗಳ ಅಂತರ್ಜಲ

    ಮೊನ್ನೆ ರಾತ್ರಿ ಊಟದ ಸಮಯಕ್ಕೆ ಗಂಡ ಹೆಂಡ್ತಿ ನಡುವೆ ಗಲಾಟೆಯಾಗಿದೆ. ಈ ವೇಳೆ ಹೆಂಡ್ತಿಯನ್ನ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಆರೋಪಿಯ ಸಿಡಿಆರ್ ಜಾಡು ಹಿಡಿದ ಪೊಲೀಸರು ಪುಣೆಯ ಶಿರವಾಲ್ ಪೊಲೀಸರು ಬಂಧಿಸಿದ್ದಾರೆ. ಹುಳಿಮಾವು ಪೊಲೀಸ್ರು ಪುಣೆ ರೀಚ್ ಆಗಿದ್ದು, ಆರೋಪಿಯನ್ನ ಕರೆತರ್ತಿದ್ದಾರೆ. ಇನ್ನು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ಕಳಿಸಿದ್ದು, ಗೌರಿ ಪೋಷಕರಿಗೆ ವಿಚಾರ ಮುಟ್ಟಿಸಿದ್ದಾರೆ.

    ಗಂಡ ಹೆಂಡ್ತಿ ಅಂದ್ ಮೇಲೆ ನೂರು ವಿಚಾರ ಬರುತ್ತೆ ಹೋಗುತ್ತೆ. ಅಷ್ಟಕ್ಕೆ ಹೆಂಡ್ತಿ ಕೊಲೆ ಮಾಡಿ ಸೂಟ್ ಕೇಸ್‌ಗೆ ತುಂಬ್ತಾನಂದ್ರೆ ಟೆಕ್ಕಿ ಎಂಥಾ ಕಟುಕನಿರಬೇಡ. ಸದ್ಯ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.  ಇದನ್ನೂ ಓದಿ: ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು ದುರಂತ – ಕೆಳಹಂತದ 4 ಅಧಿಕಾರಿಗಳು ಅಮಾನತು

  • ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು ದುರಂತ – ಕೆಳಹಂತದ 4 ಅಧಿಕಾರಿಗಳು ಅಮಾನತು

    ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು ದುರಂತ – ಕೆಳಹಂತದ 4 ಅಧಿಕಾರಿಗಳು ಅಮಾನತು

    ಬೆಂಗಳೂರು: ರಾಜಧಾನಿಯಲ್ಲೇ ಅತಿ ದೊಡ್ಡ ಜಾತ್ರೆಯೆಂದು ಪ್ರಸಿದ್ಧಿ ಪಡೆದಿದ್ದ ಹುಸ್ಕೂರು ಮದ್ದೂರಮ್ಮ ಜಾತ್ರೆಯ (Huskur Madduramma Fair) ಕುರ್ಜು(ತೇರು) ನೆಲಕ್ಕೆ ಉರುಳಿ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿತ್ತು. ಘಟನೆಯ ಒಂದು ವಾರದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ಕೆಳಹಂತದ 4 ಅಧಿಕಾರಿಗಳನ್ನು ಅಮಾನತು ಮಾಡಿದೆ.

    ಬೆಂಗಳೂರು ಹೊರವಲಯದ (Bengaluru Rural) ಆನೇಕಲ್ (Anekal) ತಾಲೂಕಿನ ಹುಸ್ಕೂರು ಜಾತ್ರೆ ಸಾಕಷ್ಟು ಪ್ರಸಿದ್ಧಿ ಪಡೆದಿರುವ ಜಾತ್ರೆಯಾಗಿದೆ. ಸುತ್ತಮುತ್ತಲ ಊರುಗಳಿಂದ ಸುಮಾರು ಹತ್ತಕ್ಕೂ ಹೆಚ್ಚು ತೇರುಗಳನ್ನು ಎಳೆದು ತಂದು ಜಾತ್ರೆ ನಡೆಸುತ್ತಿದ್ದರು. ಮಾ. 22ರ ಶನಿವಾರದಂದು ರಾಯಸಂದ್ರ ಹಾಗೂ ದೊಡ್ಡ ನಾಗಮಂಗಲ ಕುರ್ಜುಗಳು ನೆಲಕ್ಕೆ ಉರುಳಿದ್ದವು. ಇದೇ ಸಮಯದಲ್ಲಿ ರಾಯಸಂದ್ರ ಕುರ್ಜಿನ ಕೆಳಗೆ ಸಿಲುಕಿ ಇಬ್ಬರು ಮೃತಪಟ್ಟಿದ್ದು, 8ಕ್ಕೂ ಹೆಚ್ಚು ಜನ ಗಂಭೀರ ಗಾಯಗೊಂಡಿದ್ದರು. ಇದನ್ನೂ ಓದಿ: ಧರೆಗುರುಳಿದ ಮದ್ದೂರಮ್ಮ ಜಾತ್ರೆಯ ತೇರು – ಕುರ್ಜು ಕೆಳಗೆ ಸಿಲುಕಿ ಓರ್ವ ಸಾವು

    ಈ ವಿಚಾರವಾಗಿ ಆನೇಕಲ್‌ನ ತಾಲೂಕು ಆಡಳಿತ ಸಹ ಕಣ್ಣು ಮುಚ್ಚಿಕೊಂಡು ಕುಳಿತಿತ್ತು. ಇದೀಗ ಎಚ್ಚೆತ್ತುಕೊಂಡ ಜಿಲ್ಲಾಡಳಿತ 4 ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದೆ. ಕೂಡಲೇ ಸಂಬಂಧಪಟ್ಟ ಇನ್ಸ್‌ಪೆಕ್ಟರ್‌, ಸಬ್ ಇನ್ಸ್‌ಪೆಕ್ಟರ್‌ ಹಾಗೂ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಾಂತರ ಎಸ್ಪಿ ಸಿ.ಕೆ.ಬಾಬಾ ಅವರಿಗೆ ನೋಟಿಸ್ ನೀಡಿದ್ದಾರೆ. ಇದನ್ನೂ ಓದಿ: ಧರೆಗುರುಳಿದ ಮದ್ದೂರಮ್ಮ ಜಾತ್ರೆಯ ತೇರು – ಗಾಯಗೊಂಡಿದ್ದ ಯುವತಿ ಸಾವು

    ತೇರು 80 ಅಡಿಗೂ ಮೀರಿ ಕಟ್ಟಬಾರದು ಎಂದು ಆದೇಶವಿದ್ದರೂ ಸಹ 150 ಅಡಿಗೂ ಎತ್ತರದ ತೇರು ನಿರ್ಮಿಸಿ ಎಳೆದು ತರಲಾಗಿತ್ತು. ಈ ಅವಘಡದಲ್ಲಿ ಅಧಿಕಾರಿಗಳ ಬೇಜವಾಬ್ದಾರಿತನ ಎದ್ದು ಕಾಣುತ್ತಿದೆ ಎಂದ ಜಿಲ್ಲಾಧಿಕಾರಿಗಳು ಕಂದಾಯ ಅಧಿಕಾರಿಗಳಾದ ಆರ್.ಐ.ಪ್ರಶಾಂತ್ ಹಾಗೂ ಗ್ರಾಮ ಆಡಳಿತ ಅಧಿಕಾರಿ ಕಾರ್ತಿಕ್‌ರನ್ನು ಅಮಾನತು ಮಾಡುವಂತೆ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಕೆನಡಾ ಚುನಾವಣೆ| ಮೋದಿಯನ್ನು ಭೇಟಿಯಾಗಿದ್ದಕ್ಕೆ ಚಂದ್ರ ಆರ್ಯಗೆ ಟಿಕೆಟ್‌ ಮಿಸ್‌

    ಆನೇಕಲ್ ಶಾಸಕರು, ಸಂಸದರು ಹಾಗೂ ಅಧಿಕಾರಿಗಳ ಬೇಜವಾಬ್ದಾರಿತನ ಹಾಗೂ ಸ್ಥಳೀಯರ ಒಳ ಪ್ರತಿಷ್ಠೆಯಿಂದ ಇದೀಗ ಎರಡು ಜೀವಗಳು ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೂ 8 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

  • ಆನೇಕಲ್‌| ಪತ್ನಿ ದೇಹ ತುಂಡರಿಸಿ ಸೂಟ್‌ಕೇಸ್‌ಗೆ ತುಂಬಿದ ಪಾಪಿ ಪತಿ

    ಆನೇಕಲ್‌| ಪತ್ನಿ ದೇಹ ತುಂಡರಿಸಿ ಸೂಟ್‌ಕೇಸ್‌ಗೆ ತುಂಬಿದ ಪಾಪಿ ಪತಿ

    ಬೆಂಗಳೂರು ಗ್ರಾಮಾಂತರ: ಪತ್ನಿ ದೇಹ ತುಂಡರಿಸಿ ಸೂಟ್‌ಕೇಸ್‌ಗೆ ತುಂಬಿ ಪತಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಹುಳಿಮಾವು ಸಮೀಪದ ದೊಡ್ಡ ಕಮ್ಮನಹಳ್ಳಿಯಲ್ಲಿ ನಡೆದಿದೆ.

    ಮಹಾರಾಷ್ಟ್ರ ಮೂಲದ ರಾಕೇಶ್ ಕೃತ್ಯ ಎಸಗಿರುವ ಆರೋಪಿ. ಗೌರಿ ಅನಿಲ್ ಸಾಂಬೆಕರ್ ಮೃತ ಪತ್ನಿ. ಮಹಾರಾಷ್ಟ್ರದಲ್ಲಿರುವ ಪತ್ನಿ ಪೋಷಕರಿಗೆ ಪೋನ್ ಕರೆ ಮಾಡಿ ಆರೋಪಿ ರಾಕೇಶ್‌ ಸಾವಿನ ಸುದ್ದಿ ತಿಳಿಸಿದ್ದಾನೆ.

    ಪ್ರಕರಣ ಸಂಬಂಧ ಮಹಾರಾಷ್ಟ್ರ ಪೊಲೀಸರಿಂದ ಹುಳಿಮಾವು ಪೋಲಿಸರಿಗೆ ಮಾಹಿತಿ ಸಿಕ್ಕಿದೆ. ಮಾಹಿತಿ ಆಧರಿಸಿ ಹುಳಿಮಾವು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಡಿಸಿಪಿ ಸಾರಾ ಫಾತಿಮಾ ಭೇಟಿ ನೀಡಿದ್ದಾರೆ.

    ಖಾಸಗಿ ಕಂಪನಿಯಲ್ಲಿ ದಂಪತಿ ಕೆಲಸ ಮಾಡಿಕೊಂಡಿದ್ದರು. ವರ್ಕ್ ಫ್ರಂ ಹೋಂ ಹಿನ್ನೆಲೆ ಮನೆಯಿಂದಲೇ ಕೆಲಸ ಮಾಡುತ್ತಿದ್ದರು. ಕಳೆದ ಒಂದು ವರ್ಷದ ಹಿಂದೆ ದೊಡ್ಡಕಮ್ಮನಹಳ್ಳಿ ಮನೆಗೆ ಬಂದು ವಾಸವಿದ್ದರು. ಪತ್ನಿಯನ್ನು ಕೊಲೆ ಮಾಡಿ ನಂತರ ಸ್ನೇಹಿತನಿಗೆ ಫೋನ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿ ಹೇಳಿದ್ದ.

    ಪತಿ ರಾಕೇಶ್ ಇನ್ನೂ ಪೊಲೀಸರಿಗೆ ಸಿಕ್ಕಿಲ್ಲ. ಹುಳಿಮಾವು ಪೊಲೀಸರಿಂದ ರಾಕೇಶ್‌ಗಾಗಿ ಹುಡುಕಾಟ ನಡೆದಿದೆ.

  • ಧರೆಗುರುಳಿದ ಮದ್ದೂರಮ್ಮ ಜಾತ್ರೆಯ ತೇರು – ಗಾಯಗೊಂಡಿದ್ದ ಯುವತಿ ಸಾವು

    ಧರೆಗುರುಳಿದ ಮದ್ದೂರಮ್ಮ ಜಾತ್ರೆಯ ತೇರು – ಗಾಯಗೊಂಡಿದ್ದ ಯುವತಿ ಸಾವು

    ಆನೇಕಲ್‌: ಬೆಂಗಳೂರು ಗ್ರಾಮಾಂತರದ ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ (Madduramma Jathre) ಕುರ್ಜುಗಳು (ತೇರು) ಧರೆಗುರುಳಿದ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಇಂದು ಸಾವನ್ನಪ್ಪಿದ್ದಾರೆ.

    ಕುರ್ಜು ಕೆಳಗೆ ಸಿಲುಕಿ ನಿನ್ನೆ 28ರ ಯುವಕ ಲೋಹಿತ್‌ ದಾರುಣ ಸಾವನ್ನಪ್ಪಿದ್ದರು, ಇಂದು ಜ್ಯೋತಿ ಸಾವನ್ನಪ್ಪಿದ್ದಾರೆ. ದುರ್ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮತ್ತೊಬ್ಬ ಯುವಕ ರಾಕೇಶ್‌ ಸದ್ಯ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

    ಜಾತ್ರೆಗೆ ಗ್ರಾಮಗಳಿಂದ 150ಕ್ಕೂ ಹೆಚ್ಚು ಅಡಿ ಎತ್ತರದ ಕುರ್ಜುಗಳು ಆಗಮಿಸಿದ್ದವು. ತೇರು ಎಳೆದು ತರುವ ಸಂದರ್ಭದಲ್ಲಿ ಶನಿವಾರ ಅವಘಡ ಸಂಭವಿಸಿತ್ತು. ಇದನ್ನೂ ಓದಿ: ಅಲಹಾಬಾದ್ ಹೈಕೋರ್ಟ್ ಕಸದ ಬುಟ್ಟಿನಾ? – ನ್ಯಾ.ಯಶವಂತ್ ವರ್ಮಾ ವರ್ಗಾಯಿಸಿದ್ದಕ್ಕೆ ಬಾರ್ ಕೌನ್ಸಿಲ್ ಗರಂ

    ಮದ್ದೂರಮ್ಮ ಜಾತ್ರೆಗೆ 200 ವರ್ಷಗಳ ಇತಿಹಾಸವಿದೆ. ಟ್ರ್ಯಾಕ್ಟರ್ ಹಾಗೂ ನೂರಾರು ಎತ್ತುಗಳ‌‌ ಮೂಲಕ ಎಳೆದು ತರುವ ಹೆಸರಾಂತ ಜಾತ್ರೆ‌ ಇದು. ಪ್ರತಿಷ್ಟೆಗೆ ಅತೀ ಎತ್ತರ ತೇರು ಕಟ್ಟಿ ಎಳೆದು ತರುವ ಜಾತ್ರೆ ನೋಡಲು ಲಕ್ಷಾಂತರ ಜನ ಆಗಮಿಸುತ್ತಿದ್ದರು. ಗಾಳಿ ಸಹಿತ ಮಳೆಯಿಂದಾಗಿ ಆಯತಪ್ಪಿ ತೇರು ಬಿದ್ದಿದೆ.

    ತೇರಿನಲ್ಲಿ ಇದ್ದ ಹಲವರಿಗೆ ಗಾಯಗಳಾಗಿವೆ. ಕಳೆದ ವರ್ಷ ಹೀಲಲಿಗೆ ತೇರು ಬಿದ್ದಿತ್ತು. ಇಂದು ಗಾಳಿ‌ ಮಳೆ ಹೆಚ್ಚಾಗಿ‌ ಸುರಿದ ಹಿನ್ನೆಲೆ ಅವಘಡ ಸಂಭವಿಸಿದೆ. ಜಾತ್ರೆಮಯ ಸಂಭ್ರಮದ ದಿನ ಸೂತಕದ ಛಾಯೆ ಆವರಿಸಿದೆ. ಇದನ್ನೂ ಓದಿ: ಜಡ್ಜ್ ಮನೆಯಲ್ಲಿ ಹಣ ಸಿಕ್ಕಿಲ್ಲ ಎಂದು ಹೇಳೇ ಇಲ್ಲ, ನನ್ನ ಹೆಸರು ಯಾಕೆ ಉಲ್ಲೇಖಿಸಿದ್ದಾರೆ ಗೊತ್ತಿಲ್ಲ ಎಂದ ಅಗ್ನಿಶಾಮಕ ದಳದ ಮುಖ್ಯಸ್ಥ

  • ಆನೇಕಲ್‌ನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು- ಕೊಲೆ ಆರೋಪಿ ಕಾಲಿಗೆ ಪೊಲೀಸರ ಗುಂಡೇಟು

    ಆನೇಕಲ್‌ನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು- ಕೊಲೆ ಆರೋಪಿ ಕಾಲಿಗೆ ಪೊಲೀಸರ ಗುಂಡೇಟು

    ಆನೇಕಲ್: ಬೆಂಗಳೂರು ಗ್ರಾಮಾಂತರ ಆನೇಕಲ್‌ನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿಬಂದಿದೆ. ಪರಾರಿಯಾಗಲು ಯತ್ನಿಸಿದ ಕೊಲೆ ಆರೋಪಿ ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ.

    ಕೊಲೆ ಆರೋಪಿಯು ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆ ಮಾಡಿ, ಪರಾರಿಗೆ ಯತ್ನಿಸಿದ್ದಾನೆ. ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ಉಪವಿಭಾಗದ ಸರ್ಜಾಪುರದಲ್ಲಿ ನಡೆದಿದೆ.

    ಪರಾರಿಯಾಗಲು ಯತ್ನಿಸಿದ ರೌಡಿಶೀಟರ್ ಶ್ರೀನಿವಾಸ್ ಅಲಿಯಾಸ್ ಗುಬ್ಬಚ್ಚಿ ಸೀನಾ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.

    ಜ.28ರಂದು ಮಾಜಿ ರೌಡಿಶೀಟರ್ ವೆಂಕಟೇಶ್ ಅಲಿಯಾಸ್ ವೆಂಕಿಯನ್ನು ಗುಬ್ಬಚ್ಚಿ ಸೀನಾ ಗ್ಯಾಂಗ್ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿತ್ತು.

    ದೊಮ್ಮಸಂದ್ರದ ಬಳಿ ಅವಿತು ಕುಳಿತಿದ್ದ ರೌಡಿಶೀಟರ್ ಗುಬ್ಬಚ್ಚಿ ಸೀನನನ್ನು ಪೊಲೀಸರು ಬಂಧಿಸಲು ಹೋಗಿದ್ದರು. ಇನ್ಸ್ಪೆಕ್ಟರ್ ನವೀನ್ ಗಾಳಿಯಲ್ಲಿ ಗುಂಡು ಹಾರಿಸಿ ಆರೋಪಿಗೆ ಶರಣಾಗುವಂತೆ ತಿಳಿಸಿದ್ದರು. ಈ ವೇಳೆ ಸೀನಾ, ಪೊಲೀಸ್ ಪೇದೆ ಇರ್ಫಾನ್ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಇನ್ಸ್ಪೆಕ್ಟರ್ ನವೀನ್ ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಫೈಯರ್ ಮಾಡಿ ಬಂಧಿಸಿದ್ದಾರೆ.

  • ಕರ್ನಾಟಕ-ಆಂಧ್ರ ಬಸ್‌ಗಳ ಓವರ್‌ಟೆಕ್ ಪೈಪೋಟಿ – 8ರ ಬಾಲಕಿ ಸಮೇತ ಸೋದರ ಮಾವ ಸಾವು

    ಕರ್ನಾಟಕ-ಆಂಧ್ರ ಬಸ್‌ಗಳ ಓವರ್‌ಟೆಕ್ ಪೈಪೋಟಿ – 8ರ ಬಾಲಕಿ ಸಮೇತ ಸೋದರ ಮಾವ ಸಾವು

    ಚಿಕ್ಕಬಳ್ಳಾಪುರ: ಕರ್ನಾಟಕ ಹಾಗೂ ಆಂಧ್ರ ಸಾರಿಗೆ ಬಸ್‌ಗಳು ಓವರ್‌ಟೆಕ್ ಪೈಪೋಟಿಗೆ ಬಿದ್ದ ಪರಿಣಾಮ ಬೈಕ್‌ನಲ್ಲಿ ಹೊರಟಿದ್ದ 8 ವರ್ಷದ ಬಾಲಕಿ, ಆಕೆಯ ಸೋದರ ಮಾವ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ಗೊಲ್ಲಹಳ್ಳಿ ಗೇಟ್ ಬಳಿ ನಡೆದಿದೆ.

    ಮೃತರನ್ನು 8 ವರ್ಷದ ಮೋನಿಕಾ ಹಾಗೂ ಕೆಳಗಿನಜೋಗಹಳ್ಳಿ ನಿವಾಸಿ ವೆಂಕಟೇಶ್ ಎಂದು ಗುರುತಿಸಲಾಗಿದೆ. ಗೌರಿಬಿದನೂರು-ಬೆಂಗಳೂರು ಹೆದ್ದಾರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಿಂದೂಪುರದಿಂದ ಬೆಂಗಳೂರಿಗೆ ಬರುತ್ತಿತ್ತು. ಇದೇ ವೇಳೆ ಎಪಿಎಸ್‌ಆರ್‌ಟಿಸಿ ಬಸ್ ಬಂದಿದ್ದು, ಎರಡು ಬಸ್‌ಗಳ ನಡುವೆ ಓವರ್‌ಟೆಕ್ ಪೈಪೋಟಿ ನಡೆದಿದೆ.ಇದನ್ನೂ ಓದಿ: ಕೇಂದ್ರ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ – 8ನೇ ವೇತನ ಆಯೋಗ ರಚನೆಗೆ ಸಂಪುಟ ಅನುಮೋದನೆ

    ಇದೇ ಸಮಯದಲ್ಲಿ 8 ವರ್ಷದ ಬಾಲಕಿ, ಆಕೆಯ ಸೋದರ ಮಾವನ ಜೊತೆ ಬೈಕ್‌ನಲ್ಲಿ ಹೊರಟಿದ್ದರು. ಬಸ್‌ಗಳ ಮಧ್ಯೆ ಬೈಕ್ ಸವಾರ ಸಿಲುಕಿದ್ದು, ಎಪಿಎಸ್‌ಆರ್‌ಟಿಸಿ ಬಸ್ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ನೆಲಕ್ಕುರುಳಿದ್ದು, ಬೈಕ್ ಮೇಲೆ ಕೆಎಸ್‌ಆರ್‌ಟಿಸಿ ಬಸ್ ಹರಿದಿದೆ.

    ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಬಾಲಕಿ ತಲೆಗೆ ಗಂಭೀರ ಗಾಯವಾಗಿತ್ತು. ಬಾಲಕಿಯನ್ನು ಕೂಡಲೇ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾಳೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಎರಡು ಬಸ್‌ಗಳನ್ನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಇದನ್ನೂ ಓದಿ: ನಾನು ಕ್ಷೇಮವಾಗಿದ್ದೇನೆ: ಚೂರಿ ಇರಿತದ ಬಳಿಕ ಸೈಫ್ ಅಲಿ ಖಾನ್ ಫಸ್ಟ್ ರಿಯಾಕ್ಷನ್

     

  • ಬೊಮ್ಮಸಂದ್ರದಲ್ಲಿ ಭಾರೀ ಅಗ್ನಿ ಅವಘಡ – ಹೊತ್ತಿ ಉರಿದ ಬಟ್ಟೆ ಕಾರ್ಖಾನೆ

    ಬೊಮ್ಮಸಂದ್ರದಲ್ಲಿ ಭಾರೀ ಅಗ್ನಿ ಅವಘಡ – ಹೊತ್ತಿ ಉರಿದ ಬಟ್ಟೆ ಕಾರ್ಖಾನೆ

    ಆನೇಕಲ್: ಇಲ್ಲಿನ ಬೊಮ್ಮಸಂದ್ರದಲ್ಲಿ (Bommasandra) ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಬಟ್ಟೆ ಕಾರ್ಖಾನೆ ಹೊತ್ತಿ ಉರಿದಿದೆ.ಇದನ್ನೂ ಓದಿ: ಹೊಸ ವರ್ಷಕ್ಕೆ ಶಾಕ್‌ – ಜ.5 ರಿಂದ ಬಸ್‌ ಪ್ರಯಾಣ ದರ ಏರಿಕೆ

    ಅಗ್ನಿ ದುರಂತದ (Fire Accident) ಹಿನ್ನೆಲೆ ಇಡೀ ಕೈಗಾರಿಕಾ ಪ್ರದೇಶ ಹೊಗೆಯಿಂದ ಆವರಿಸಿದ್ದು, ಅಕ್ಕಪಕ್ಕದಲ್ಲಿಯೂ ಬೆಂಕಿ ಆವರಿಸುತ್ತಿದೆ. ಹೀಗಾಗಿ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

    ಕಾರ್ಖಾನೆಯಲ್ಲಿ ಬೆಂಕಿ ಆವರಿಸಿರುವ ಪರಿಣಾಮ ಒಳಗೆ ಇರುವ ಯಂತ್ರಗಳು ಸ್ಫೋಟಗೊಳ್ಳುತ್ತಿವೆ. ಕಾರ್ಖಾನೆಯೊಳಗೆ ಯಾರಾದರೂ ಕಾರ್ಮಿಕರು ಇದ್ದಾರಾ ಎನ್ನುವ ಪ್ರಶ್ನೆ ಎಲ್ಲರಲ್ಲಿ ಮೂಡಿದೆ. ಜೊತೆಗೆ ಸುತ್ತಮುತ್ತಲಿರುವ ಕಂಪನಿಗಳಿಗೆ ಹಾಗೂ ಹೋಟೆಲ್‌ಗಳಿಗೆ ಆತಂಕ ಸೃಷ್ಟಿಯಾಗಿದೆ.ಇದನ್ನೂ ಓದಿ: ಸೈಬರ್‌ ಕ್ರೈಂ ಪೇದೆಗೆ ಹನಿಟ್ರ್ಯಾಪ್‌ – ಪತ್ನಿ ಆತ್ಮಹತ್ಯೆಗೆ ಯತ್ನ

     

  • ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಖಾಸಗಿ ಬಸ್ – 42 ಭಕ್ತಾಧಿಗಳ ಸ್ಥಿತಿ ಗಂಭೀರ

    ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಖಾಸಗಿ ಬಸ್ – 42 ಭಕ್ತಾಧಿಗಳ ಸ್ಥಿತಿ ಗಂಭೀರ

    ಆನೇಕಲ್: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಹಳ್ಳಕ್ಕೆ ಬಿದ್ದ ಪರಿಣಾಮ 42 ಭಕ್ತಾಧಿಗಳ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಮಿಳುನಾಡಿನ (Tamilnadu) ಕೃಷ್ಣಗಿರಿ (Krishnagiri) ಜಿಲ್ಲೆಯಲ್ಲಿ ನಡೆದಿದೆ.

    ಇಂದು (ಡಿ.27) ಬಸ್ ಧರ್ಮಪುರಿ ಸಮೀಪದ ಇಟ್ಟಿಯಂಪಟ್ಟೆ ಗ್ರಾಮದಿಂದ ಹೋಗುತ್ತಿದ್ದ ಓಂ ಶಕ್ತಿ ದೇವಸ್ಥಾನಕ್ಕೆ ತೆರಳುತ್ತಿತ್ತು. ಈ ವೇಳೆ ಕೃಷ್ಣಗಿರಿ ಜಿಲ್ಲೆಯ ಉತಂಗರೈ ಚೆನ್ನಮಲೈ ಶಾಲೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಹಳ್ಳಕ್ಕೆ ಬಿದ್ದಿದೆ. ಬಿದ್ದ ಪರಿಣಾಮ ದೇವಸ್ಥಾನಕ್ಕೆ ತೆರಳುತ್ತಿದ್ದ 42 ಭಕ್ತಾದಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.ಇದನ್ನೂ ಓದಿ: 28ನೇ ವಯಸ್ಸಿನಲ್ಲಿದ್ದಾಗ ಒಂದೇ ದಿನ 300 ಪುರುಷರೊಂದಿಗೆ ಸೆಕ್ಸ್‌ ಮಾಡಿದ್ದೆ – ಲಿಲ್ಲಿಗೆ ಜಾಸ್ಮಿನ್‌ ಕೌಂಟರ್‌

    ತಕ್ಷಣವೇ ಸ್ಥಳೀಯರು ಗಾಯಳುಗಳನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಿದ್ದು, ಉತಂಗರೈ (Uthangarai) ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತುಂತುರು ಮಳೆಯಿಂದಾಗಿ ಖಾಸಗಿ ಬಸ್ ಅಪಘಾತಕ್ಕೀಡಾಗಿದ್ದು, ಅಪಘಾತದ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಸದ್ಯ ಉತಂಗರೈ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ವ್ಹೀಲಿಂಗ್ ಮಾಡ್ತಾ ಕ್ಯಾಂಟರ್‌ಗೆ ಡಿಕ್ಕಿ – ಇಬ್ಬರು ಯುವಕರ ದಾರುಣ ಸಾವು; ಬೈಕ್‌ ಅಪ್ಪಚ್ಚಿ!

  • ಭೀಕರ ಅಪಘಾತಕ್ಕೆ ಐಟಿ ಉದ್ಯಮಿ ಬಲಿ – ಬೆಂಗ್ಳೂರು ಕಂಪನಿಯಲ್ಲಿ 50 ಕ್ಕೂ ಹೆಚ್ಚು ಮಂದಿಗೆ ಉದ್ಯೋಗದಾತ ಚಂದ್ರಮ್

    ಭೀಕರ ಅಪಘಾತಕ್ಕೆ ಐಟಿ ಉದ್ಯಮಿ ಬಲಿ – ಬೆಂಗ್ಳೂರು ಕಂಪನಿಯಲ್ಲಿ 50 ಕ್ಕೂ ಹೆಚ್ಚು ಮಂದಿಗೆ ಉದ್ಯೋಗದಾತ ಚಂದ್ರಮ್

    – ಮಾಲೀಕನ ಕುಟುಂಬದ ಸಾವಿನ ಸುದ್ದಿ ಕೇಳಿ ಕಂಪನಿ ಸಿಬ್ಬಂದಿಗೆ ಅಘಾತ
    – ಕೆಲಸ ಅರ್ಧಕ್ಕೆ ನಿಲ್ಲಿಸಿ ದುಃಖದಿಂದ ಹೊರಟ ಸಿಬ್ಬಂದಿ

    ಬೆಂಗಳೂರು ಗ್ರಾಮಾಂತರ: ನೆಲಮಂಗಲದಲ್ಲಿ (Nelamangala Accident) ಸಂಭವಿಸಿದ ಭೀಕರ ಅಪಘಾತದಲ್ಲಿ ದಾರುಣ ಅಂತ್ಯ ಕಂಡ ಚಂದ್ರಮ್ ಯಾಗಪ್ಪಗೋಳ್ ಒಬ್ಬ ಐಟಿ ಉದ್ಯಮಿ. ಬೆಂಗಳೂರಿನಲ್ಲಿ ಕಂಪನಿಯೊಂದರ ಮಾಲೀಕರಾಗಿದ್ದ ಇವರು, 50 ಕ್ಕೂ ಹೆಚ್ಚು ಮಂದಿಗೆ ಉದ್ಯೋಗದಾತರಾಗಿದ್ದರು.

    ನೆಲಮಂಗಲದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತವಾಯಿತು. ಕಂಟೇನರ್ ಲಾರಿ ಕಾರಿನ ಮೇಲೆ ಬಿದ್ದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ದುರಂತ ಸಾವಿಗೀಡಾದರು. ಇದನ್ನೂ ಓದಿ: ನೆಲಮಂಗಲದಲ್ಲಿ ಭೀಕರ ಅಪಘಾತ – ಪ್ರವಾಸಕ್ಕೆ ಹೊರಟಿದ್ದ ಒಂದೇ ಕುಟುಂಬದ 6 ಮಂದಿ ದುರ್ಮರಣ

    ಮೃತರು ಬಿಜಾಪುರ ಮೂಲದವರು. ಐಟಿ ಉದ್ಯಮಿಗಳು ಒಂದೇ ಕುಟುಂಬ ಮೃತಪಟ್ಟಿದ್ದಾರೆ. ಚಂದ್ರಮ್ ಯಾಗಪ್ಪಗೋಳ್ ಬೆಂಗಳೂರಿನಲ್ಲಿ ಕಂಪನಿ ಮಾಲೀಕ. ಸುಮಾರು 50 ಕ್ಕೂ ಹೆಚ್ಚು ಮಂದಿಗೆ ಕೆಲಸ ನೀಡಿದ್ದ ಉದ್ಯಮಿ.

    ಹೆಚ್‌ಎಸ್‌ಆರ್ ಲೇಔಟ್ ಬಳಿಯಿರುವ ಐಎಎಸ್‌ಟಿ ಸಾಫ್ಟ್‌ವೇರ್‌ ಸಲ್ಯೂಷನ್ಸ್‌ನಲ್ಲಿ ಸುಮಾರು 50 ಕ್ಕೂ ಹೆಚ್ಚು ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. 2018 ರಲ್ಲಿ ಕಂಪನಿ ಶುರುವಾಗಿತ್ತು. ಅದಕ್ಕೆ ಚಂದ್ರಮ್ ಅವರೆ ಎಂಡಿ, ಸಿಇಒ ಆಗಿದ್ದರು. ಇದನ್ನೂ ಓದಿ: ಟಿವಿ ರಿಮೋಟ್ ಕೊಡದಿದ್ದಕ್ಕೆ ಬಾಲಕಿ ಆತ್ಮಹತ್ಯೆ

    ಅಪಘಾತದಲ್ಲಿ ಚಂದ್ರಮ್ ಅವರು ಮೃತಪಟ್ಟ ಸುದ್ದಿ ಕೇಳಿ ಕಂಪನಿ ಸಿಬ್ಬಂದಿ ಆಘಾತಕ್ಕೊಳಗಾಗಿದ್ದಾರೆ. ದುಃಖದಿಂದ ಅರ್ಧಕ್ಕೆ ಕೆಲಸ ನಿಲ್ಲಿಸಿ ಹೊರಟು ಹೋಗಿದ್ದಾರೆ. ಮಾಲೀಕನ ಸಾವಿನಿಂದ ಸಿಬ್ಬಂದಿ ದಿಗ್ಭ್ರಾಂತರಾಗಿದ್ದಾರೆ.

    ಗ್ರೂಪ್‌ನಲ್ಲಿ ಸಾವಿನ ಸುದ್ದಿಯ ಮೆಸೇಜ್ ನೋಡಿ ಎಲ್ಲರೂ ಶಾಕ್‌ಗೆ ಒಳಗಾಗಿದ್ದಾರೆ. ಸಿಸ್ಟಮ್‌ಗಳನ್ನು ಲಾಗೌಟ್ ಮಾಡಿ ಬೇಸರದಿಂದ ಮನೆಗೆ ಹಿಂದಿರುಗಿದ್ದಾರೆ.

  • ಆನೆ ದಾಳಿ ತಡೆಗೆ ಕಾಂಪಾ ಅನುದಾನ – ಡಾ. ಸಿ.ಎನ್.ಮಂಜುನಾಥ್ ಮನವಿ

    ಆನೆ ದಾಳಿ ತಡೆಗೆ ಕಾಂಪಾ ಅನುದಾನ – ಡಾ. ಸಿ.ಎನ್.ಮಂಜುನಾಥ್ ಮನವಿ

    ನವದೆಹಲಿ: ಬೆಂಗಳೂರು ಗ್ರಾಮಾಂತರ (Bengaluru Rural) ಕ್ಷೇತ್ರದಲ್ಲಿ ಆನೆಗಳ ಹಾವಳಿ ವ್ಯಾಪಕವಾಗಿದ್ದು, ಬ್ಯಾರಿಕೇಡ್ ಅಳವಡಿಕೆಗೆ ಕಾಂಪಾ (CAMPA) ನಿಧಿಯಿಂದ ವಿಶೇಷ ಅನುದಾನ ನೀಡಬೇಕು ಎಂದು ಸಂಸದ ಡಾ. ಸಿ.ಎನ್.ಮಂಜುನಾಥ್ (CN Manjunath) ಮನವಿ ಮಾಡಿಕೊಂಡರು.ಇದನ್ನೂ ಓದಿ: ಕಾಮನ್‌ ಮ್ಯಾನ್‌ಗೆ ಎದ್ದೇಳು ಅಂತ ಚಿವುಟುವ ಸಿನಿಮಾವಿದು- UI ಬಗ್ಗೆ ಡಾಲಿ ಮಾತು

    ಬನ್ನೇರುಘಟ್ಟ, ಸಾತನೂರು ಮತ್ತಿತರ ಕಡೆಗಳಲ್ಲಿ ಆನೆ ದಾಳಿಗಳಿಂದ ಮನುಷ್ಯರು ಮೃತಪಟ್ಟಿದ್ದಾರೆ. ಕೃಷಿಗೆ ಅಪಾರವಾದ ನಷ್ಟವಾಗಿದೆ. ಇದರಿಂದ ಬ್ಯಾರಿಕೇಡ್ ಅಳವಡಿಕೆಗೆ ಕಾಂಪಾ ನಿಧಿಯಿಂದ ವಿಶೇಷ ಅನುದಾನ ನೀಡಬೇಕು ಎಂದು ಆಗ್ರಹಿಸಿದರು.

    ಕಾಡು ಪ್ರಾಣಿಗಳ ದಾಳಿಯಿಂದ ಅರಣ್ಯ ಇಲಾಖೆಯವರು ಮೃತಪಟ್ಟರೆ 25 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ರೈತರಿಗೆ 15 ಲಕ್ಷ ರೂ.ಯಷ್ಟೇ ಪರಿಹಾರ ಒದಗಿಸಲಾಗುತ್ತದೆ. ಈ ತಾರತಮ್ಯ ಸರಿಯಲ್ಲ. ಪರಿಹಾರವನ್ನು 25 ಲಕ್ಷ ರೂ.ಗೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

    ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಕೇಂದ್ರ ಅರಣ್ಯ ಸಚಿವ ಭೂಪೇಂದರ್ ಯಾದವ್ ಭರವಸೆ ನೀಡಿದರು.ಇದನ್ನೂ ಓದಿ: ನಬಾರ್ಡ್ ನೆರವು ಕಡಿತದಿಂದ ರೈತರಿಗೆ ಸಂಕಷ್ಟ – ಜಿ.ಕುಮಾರ್ ನಾಯಕ್ ಕಳವಳ