Tag: bengaluru rural

  • ಆನೇಕಲ್ | ಸಿಲಿಂಡರ್ ಸ್ಫೋಟಗೊಂಡು ಮೂವರು ಕಾರ್ಮಿಕರು ಗಂಭೀರ

    ಆನೇಕಲ್ | ಸಿಲಿಂಡರ್ ಸ್ಫೋಟಗೊಂಡು ಮೂವರು ಕಾರ್ಮಿಕರು ಗಂಭೀರ

    ಆನೇಕಲ್: ಅನಿಲ ಸೋರಿಕೆಯಾಗಿ ಸಿಲಿಂಡರ್ ಬ್ಲಾಸ್ಟ್ (Cylinder Blast) ಆಗಿರುವ ಪರಿಣಾಮ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ (Aenkal) ತಾಲ್ಲೂಕಿನ ಕಾಚನಾಯಕನಹಳ್ಳಿಯಲ್ಲಿ ನಡೆದಿದೆ.

    ಇಂದು (ಡಿ.02) ಬೆಳ್ಳಂಬೆಳಿಗ್ಗೆ ಸಿಲಿಂಡರ್ ಬ್ಲಾಸ್ಟ್ ಆಗಿದ್ದು, ಅಸ್ಸಾಂ ಮೂಲದ ಬಿದನ್ ದಾಸ್, ದಯಾಲ್ ಶಾಂತಿ ಹಾಗೂ ಗುಲಾಭ ಕರ್ಮಾಕರ ಎಂಬುವವರು ಗಂಭೀರ ಗಾಯಗೊಂಡಿದ್ದಾರೆ.ಇದನ್ನೂ ಓದಿ: ಉತ್ತರ ಕನ್ನಡ| ಬಲೂನ್ ಊದುವಾಗ ಗಂಟಲಲ್ಲಿ ಸಿಲುಕಿ 7ನೇ ತರಗತಿ ವಿದ್ಯಾರ್ಥಿ ದುರ್ಮರಣ

    ಹೆನ್ನಾಗರ ಸಮೀಪದ ಐಕಾನ್ ಬಡಾವಣೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಮೂವರು ರಮೇಶ್ ಎಂಬುವರ ಮನೆಯಲ್ಲಿ ಬಾಡಿಗೆಗಿದ್ದರು. ರಾತ್ರಿ ಸಿಲಿಂಡರ್ ಆನ್ ಮಾಡಿ ಮಲಗಿದ್ದ ಪರಿಣಾಮ ಬೆಳಿಗ್ಗೆ ಎದ್ದು ಲೈಟ್ ಹಾಕುತ್ತಿದ್ದಂತೆ ಸಿಲಿಂಡರ್ ಸ್ಫೋಟಗೊಂಡಿದೆ.

    ಸ್ಫೋಟಗೊಂಡ ತೀವ್ರತೆಗೆ ಮನೆಯ ಕಿಟಕಿ, ಬಾಗಿಲುಗಳು ಚೂರು ಚೂರಾಗಿವೆ. ಪರಿಣಾಮ ಮನೆಯಲ್ಲಿದ್ದ ಮೂವರಿಗೂ ಗಂಭೀರ ಗಾಯಗಳಾಗಿದ್ದು, ನಾರಾಯಣ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಬಿದನ್ ದಾಸ್ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದು, ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ತಂಡ ಭೇಟಿ ನೀಡಿದ್ದು, ಸೂರ್ಯಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ: 9,000 ಕೋಟಿ ವೆಚ್ಚದ 867 ಕಾಮಗಾರಿಗಳಿಗೆ ಇಂದು ಸಿಎಂ ಚಾಲನೆ

  • ವರದಕ್ಷಿಣೆ ಕಿರುಕುಳ – ಡೆತ್‌ ನೋಟ್‌ ಬರೆದಿಟ್ಟು ನವವಿವಾಹಿತೆ ನೇಣಿಗೆ ಶರಣು

    ವರದಕ್ಷಿಣೆ ಕಿರುಕುಳ – ಡೆತ್‌ ನೋಟ್‌ ಬರೆದಿಟ್ಟು ನವವಿವಾಹಿತೆ ನೇಣಿಗೆ ಶರಣು

    ಚಿಕ್ಕಬಳ್ಳಾಪುರ: ವರದಕ್ಷಿಣೆ (Dowry) ಕಿರುಕುಳಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರದ ಗುಮ್ಮನಹಳ್ಳಿಯಲ್ಲಿ ನಡೆದಿದೆ.

    ರೂಪಾ (29) ಮೃತ ದುರ್ದೈವಿ. 2 ವರ್ಷಗಳ ಹಿಂದೆಯಷ್ಟೇ ಸುರೇಶ್‌ ಎಂಬಾತನನ್ನ ಪ್ರೀತಿಸಿ ಮದುವೆಯಾಗಿದ್ದಳು. ಸುರೇಶ್‌ ಸಾಸಲು ಪಂಚಾಯಿತಿಯಲ್ಲಿ ಡಾಟಾ ಎಂಟ್ರಿ ಆಪರೇಟಿಂಗ್ ಆಗಿ ಕೆಲಸ ಮಾಡುತ್ತಿದ್ದ. ಇದನ್ನೂ ಓದಿ: ಭ್ರಷ್ಟಾಚಾರ ಆರೋಪ – 4 ಅಧಿಕಾರಿಗಳಿಗೆ ಸೇರಿದ 25 ಸ್ಥಳಗಳಿಗೆ ‘ಲೋಕಾ’ ದಾಳಿ

    2 ವರ್ಷಗಳ ಹಿಂದೆ ರೂಪಾ ಕುಟುಂಬದವರು ಸುರೇಶ್‌ನೊಂದಿಗೆ ಮದುವೆ ಮಾಡಿಸಿದ್ದರು. ಮದುವೆ (Marriage) ಸಮಯದಲ್ಲಿ 100 ಗ್ರಾಂ ಒಡವೆ ಸಹ ನೀಡಿದ್ದರು. ಆದ್ರೆ ಸುರೇಶ್‌ ಕುಟುಂಬಸ್ಥರು ಮದುವೆಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದೇವೆ. ಆ ಹಣವನ್ನು ತೆಗೆದುಕೊಂಡು ಬಾ ಎಂದು ಆಕೆಗೆ ಕಿರುಕುಳ ನೀಡುತ್ತಿದ್ದರು. ಕಿರುಕುಳಕ್ಕೆ ಬೇಸತ್ತ ರೂಪಾ ಆತ್ಮಹತ್ಯೆಯ ದಾರಿ ಹಿಡಿದಿದ್ದಾಳೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ರತಿಷ್ಠಿತ AAA ರೇಟಿಂಗ್ ಗರಿಮೆ

    ಅಲ್ಲದೇ ಸಾವಿಗೂ ಮುನ್ನ ರೂಪಾ ಡೆತ್‌ ನೋಟ್‌ ಬರೆದಿಟ್ಟು, ಅದರಲ್ಲಿ ನನ್ನ ಸಾವಿಗೆ ಗಂಡ ಸುರೇಶ್, ಮಾವ ನರಸಿಂಹಮೂರ್ತಿ ಅತ್ತೆ ದೇವಮ್ಮ ಕಾರಣ ಎಂದು ಬರೆದಿದ್ದಾರೆ. ಸದ್ಯ ದೊಡ್ಡಬೆಳವಂಗಲ ಪೊಲೀಸ್‌ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಆರೋಪಿ ಸುರೇಶ್‌ನನ್ನು ವಶಕ್ಕೆ ಪಡೆದಿರುವ ಪೊಲೀಸರು ತಲೆಮರಿಸಿಕೊಂಡಿರುವ ಸುರೇಶ್‌ ತಂದೆ ತಾಯಿಗಾಗಿ ಶೋಧ ನಡೆಸಿದ್ದಾರೆ. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಭುಗಿಲೆದ್ದ ವಕ್ಫ್‌ ಆಸ್ತಿ ವಿವಾದ – ಅಶೋಕ್‌ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ

  • ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ – ಸ್ಥಳೀಯರಲ್ಲಿ ಹೆಚ್ಚಿದ ಆತಂಕ

    ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ – ಸ್ಥಳೀಯರಲ್ಲಿ ಹೆಚ್ಚಿದ ಆತಂಕ

    ಬೆಂಗಳೂರು: ನಗರದ ಹೊರವಲಯದಲ್ಲಿ ಮತ್ತೆ ಚಿರತೆ (Leopard) ಆತಂಕ ಶುರುವಾಗಿದೆ. ರಾತ್ರಿ ಹೊತ್ತು ಆಗಾಗ್ಗೆ ಕಾಣಿಸಿಕೊಳ್ಳುತ್ತಿರುವ ಚಿರತೆ. ಯಲಹಂಕ ವಿಮಾನ ನಿಲ್ದಾಣದ (Airport) ಸುತ್ತಾ ಮುತ್ತಾ ಇರುವ ಜನರಲ್ಲಿ ಭಯ ಹುಟ್ಟಿಸಿದೆ.

    ಹೌದು. ಅದು ಅಕ್ಟೋಬರ್ 29ರ‌ ಸಂಜೆ 7 ಗಂಟೆಯ ಸಮಯ.. ಯಲಹಂಕ (Yalahanka) ತಾಲೂಕಿನ ನೆಲ್ಲುಕುಂಟೆ ಗ್ರಾಮದಲ್ಲಿರೊ ಇದೇ ಗೋಡೆಯ ಮೇಲೆ ಚಿರತೆ ಹೆಜ್ಜೆ ಹಾಕಿತ್ತು. ಅದೇ ಚಿರತೆಯ ದೃಶ್ಯ ಪಕ್ಕದಲ್ಲೇ ನಿರ್ಮಾಣ ಆಗ್ತಿರೊ ಕಟ್ಟಡದಲ್ಲಿ ಕೆಲಸ ಮಾಡ್ತಿದ್ದ ಕಾರ್ಮಿಕರ ಮೊಬೈಲ್ ನಲ್ಲಿ ಸೆರೆ ಹಿಡಿಯಲಾಗಿದೆ. ಆ ದೃಶ್ಯ ವೈರಲ್ ಆಗುತ್ತಿದ್ದಂತೆ ಸ್ಥಳೀಯರಲ್ಲಿ ಆತಂಕ ಹುಟ್ಟು ಹಾಕಿದೆ. ಏರ್ಪೋರ್ಟ್ ರಸ್ತೆಯ ಹುಣಸೆಮಾರನಹಳ್ಳಿ, ನೆಲ್ಲುಕುಂಟೆ, ಗಂಡಿಗೆನಹಳ್ಳಿ ಜನರು ಘಟನೆಯಿಂದ ತಲ್ಲಣಗೊಂಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ  ಕ್ಷೇತ್ರಗಳಿಗೆ ಅನುದಾನ ಹಂಚಿಕೆಯಲ್ಲೂ ರಾಜಕೀಯ – ಜಯನಗರಕ್ಕಿಲ್ಲ ಫಂಡ್; ಆಕ್ರೋಶ

    ಇನ್ನೂ ಚಿರತೆ ಕಾಣಿಸಿಕೊಂಡಿರೋದು ಇದೇ ಮೊದಲೇನಲ್ಲ. ಕಳೆದ ಭಾನುವಾರ ಕೂಡ ಇದೇ ಜಾಗದಲ್ಲಿ ಚಿರತೆ ಕಾಣಿಸಿಕೊಂಡಿತ್ತಂತೆ. ಆದ್ರೆ ಅದರ ವೀಡಿಯೋ ಸಿಕ್ಕಿರಲಿಲ್ಲ. ಯಾವಾಗಾ ಮಂಗಳವಾರ (ಅ.29) ಚಿರತೆ ಕಾಣಿಸಿಕೊಳ್ತೊ.. ಅದರ ವೀಡಿಯೊ ಸೆರೆ ಹಿಡಿಯಲಾಗಿದೆ. ಇದು ಸ್ಥಳೀಯರಲ್ಲಿ ಭಯ ಹುಟ್ಟಿಸಿದೆ. ತಕ್ಷಣ ಅಲರ್ಟ್ ಆದ ಸ್ಥಳೀಯರು, ಯಲಹಂಕ ವಲಯ ಅರಣ್ಯಾಧಿಕಾರಿಗಳಿಗೆ ವಿಚಾರ ತಿಳಿಸಿದ್ದು, ಇಂದಿನಿಂದ ಚಿರತೆ ಸೆರೆಹಿಡಿಯೊ ಕಾರ್ಯಾಚರಣೆಯ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಬಿಜೆಪಿಯಿಂದ 8 ಶಾಸಕರು ಕಾಂಗ್ರೆಸ್‌ ಸೇರ್ತಾರೆ: ಎಸ್‌.ಟಿ.ಸೋಮಶೇಖರ್‌ ಹೇಳಿಕೆಗೆ ಶಿವರಾಮ್‌ ಹೆಬ್ಬಾರ್‌ ಸಹಮತ

    ಇನ್ನೂ ಬೆಂಗಳೂರಲ್ಲಿ ಪದೇ ಪದೇ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಜನ ಭಯಭೀತರಾಗಿದ್ದಾರೆ. ಆದಷ್ಟು ಬೇಗ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆ ಹಿಡಿದು ಜನರಲ್ಲಿನ ಆತಂಕ ದೂರ ಮಾಡಬೇಕಿದೆ. ಇದನ್ನೂ ಓದಿ: ಯಶ್ ‘ಟಾಕ್ಸಿಕ್’ ಸಿನಿಮಾಗಾಗಿ ಮರ ಕಡಿದ ಆರೋಪ – ಸಚಿವರ ಆರೋಪಕ್ಕೆ ಚಿತ್ರತಂಡದ ಸ್ಪಷ್ಟನೆ ಏನು? 

  • ಬೆಂಗ್ಳೂರಲ್ಲಿ ಬಂಧನವಾಗಿದ್ದ ಶಂಕಿತ ಉಗ್ರನಿಂದ ರಹಸ್ಯ ಸ್ಫೋಟ – ಆ.15ರಂದು ಸ್ಫೋಟಿಸಲು ಇರಿಸಿದ್ದ ಜೀವಂತ IED ವಶ

    ಬೆಂಗ್ಳೂರಲ್ಲಿ ಬಂಧನವಾಗಿದ್ದ ಶಂಕಿತ ಉಗ್ರನಿಂದ ರಹಸ್ಯ ಸ್ಫೋಟ – ಆ.15ರಂದು ಸ್ಫೋಟಿಸಲು ಇರಿಸಿದ್ದ ಜೀವಂತ IED ವಶ

    – ನಾಲ್ವರು ಪಾಕ್ ಪ್ರಜೆಗಳು ಅರೆಸ್ಟ್; ತನಿಖೆ ತೀವ್ರ

    ಬೆಂಗಳೂರು: ಅಸ್ಸಾಂ ಎನ್‌ಐಎ ಅಧಿಕಾರಿಗಳಿಂದ ಬೆಂಗಳೂರು ಗ್ರಾಮಾಂತರದ ಜಿಗಣಿಯಲ್ಲಿ ಬಂಧಿತನಾಗಿದ್ದ ಉಲ್ಫಾ ಉಗ್ರನಿಂದ ಸ್ಫೋಟಕ ರಹಸ್ಯವೊಂದು ಬಯಲಾಗಿದೆ. ಶಂಕಿತ ಉಗ್ರನ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿರುವ ಎನ್‌ಐಎ (NIA) ಅಧಿಕಾರಿಗಳು ಮಂಗಳವಾರ ಅಸ್ಸಾಂನ (Assam) ಉತ್ತರ ಲಖೀಂಪುರದಲ್ಲಿ ಜೀವಂತ ಐಇಡಿಗಳನ್ನ (ಸುಧಾರಿತ ಸ್ಫೋಟಕ ಸಾಧನ) ವಶಕ್ಕೆ ಪಡೆದಿದ್ದಾರೆ.

    ಎನ್‌ಐಎ ಅಧಿಕಾರಿಗಳ ವಿಚಾರಣೆ ವೇಳೆ ಶಂಕಿತ (Suspected Terrorist) ಉಗ್ರ ಗಿರಿಸ್ ಬೋರಾ ಅಲಿಯಾಸ್‌ ಗೌತಮ್, ಅಸ್ಸಾಂನಲ್ಲಿ ಐಇಡಿ ಇಟ್ಟ ಸ್ಫೋಟಕ ವಿಚಾರ ಬಾಯ್ಬಿಟ್ಟಿದ್ದಾನೆ. ಅಲ್ಲದೇ ಉಲ್ಫಾ(I) ಸಂಘಟನೆಯ ನಾಯಕರು ಹೇಳಿದಂತೆ ಐಇಡಿಗಳನ್ನ ಇಟ್ಟಿದ್ದೆ. ಆಗಸ್ಟ್‌ 15ರಂದು ಸ್ಫೋಟಿಸಲು ಸಂಜು ರೂಪಿಸಲಾಗಿತ್ತು ಎಂದೂ ಸಹ ಒಪ್ಪಿಕೊಂಡಿದ್ದಾನೆ. ಶಂಕಿತ ಉಗ್ರನ ಮಾಹಿತಿ ಮೇರೆಗೆ ತನಿಖೆ ನಡೆಸಿದ ಎನ್‌ಐಎ ಅಧಿಕಾರಿಗಳು ಲಖೀಂಪುರ ಜಿಲ್ಲೆಯಲ್ಲಿ ಇಟ್ಟಿದ್ದ ಕೆಲವು ಜೀವಂತ ಐಇಡಿಗಳನ್ನ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ತನಿಖೆಯನ್ನೂ ಮುಂದುವರಿಸಿದ್ದಾರೆ. ಇದನ್ನೂ ಓದಿ: ರಸ್ತೆ, ರೈಲು ಹಳಿಗಳನ್ನು ಅತಿಕ್ರಮಿಸುವ ಯಾವುದೇ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಬೇಕು: ಸುಪ್ರೀಂ

    ನಾಲ್ವರು ಪಾಕ್ ಪ್ರಜೆಗಳು ಅರೆಸ್ಟ್; ತನಿಖೆ ತೀವ್ರ
    ಪಾಕಿಸ್ತಾನಿ ನ್ಯಾಷನಲಾಟಿ ಗುಮಾನಿ ಮೇಲೆ ನಾಲ್ವರು ಪಾಕ್ ಪ್ರಜೆಗಳು ಅರೆಸ್ಟ್ ಪ್ರಕರಣದ ತನಿಖೆ ದಿನ ಕಳೆದಂತೆ ತೀವ್ರಗೊಳ್ಳುತ್ತಿದೆ. IB, NIA ಮತ್ತು ಆನೇಕಲ್ ಉಪವಿಭಾಗದ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಆರ್ ಹಿತೇಂದ್ರ ಭೇಟಿ ನೀಡಿ ತನಿಖೆ ಬಗ್ಗೆ ಚರ್ಚೆ ನಡೆಸಿದ್ದು, ಒಂದಷ್ಟು ಸಲಹೆ ಸೂಚನೆ ನೀಡಿದೆ. ಇದನ್ನೂ ಓದಿ: ಪ್ರವಾದಿ ಮೊಹಮ್ಮದ್‌ರ ವಿರುದ್ಧ ಅವಹೇಳನಕಾರಿ ಹೇಳಿಕೆ – ಧಾರ್ಮಿಕ ಮುಖಂಡ ಮಹಂತ್ ರಾಮಗಿರಿ ಮಹಾರಾಜ್ ವಿರುದ್ಧ 67 FIR

    ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಜಿಗಣಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ರಶೀದ್ ಆಲಿ ಸಿದ್ಧಕಿ ಕುಟುಂಬದ ತನಿಖೆ ಮುಂದುವರಿದಿದೆ. IB, NIA ಮತ್ತು ಆನೇಕಲ್ ಉಪವಿಭಾಗದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳ ಹಿನ್ನೆಲೆ ಭಾರತಕ್ಕೆ ಅಕ್ರಮವಾಗಿ ಎಂಟ್ರಿ ಕೊಟ್ಟ ಉದ್ದೇಶ ಮತ್ತು ಭಾಗ ದಾಖಲೆಗಳ ಸೃಷ್ಟಿ ಬಗ್ಗೆ ತನಿಖೆಯನ್ನು ಕೇಂದ್ರಿಕರಿಸಲಾಗಿದೆ. ಆರೋಪಿಗಳು ಮೆಹದಿ ಫೌಂಡೇಷನ್ ನ ಪರ್ವೇಜ್ ಭಾರತಕ್ಕೆ ಬರುವಂತೆ ಹೇಳಿ ದಾಖಲೆಗಳು ಸೇರಿದಂತೆ ಅಗತ್ಯ ಸೌಲಭ್ಯ ವ್ಯವಸ್ಥೆ ಕಲ್ಲಿಸಿದನು. ಯೂನಸ್ ಅಲ್ಗೋರ್ ಧರ್ಮ ಗುರುಗಳ ಪ್ರವಚನ ಪ್ರಚಾರಕ್ಕೆ ಹಣ ನೀಡುತ್ತಿದ್ದರು. ಜೀವನಕ್ಕಾಗಿ ಬಿರಿಯಾನಿ ಹೊಟೇಲ್ ವ್ಯವಹಾರ ಮಾಡುತ್ತಿದ್ದೆವು ಎನ್ನುತ್ತಿದ್ದಾರೆ. ಆದ್ರೆ ಆರೋಪಿಗಳ ಹೇಳಿಕೆ ನಂಬಲು ಸಾಧ್ಯವಿಲ್ಲ ಎಂಬ ವಿಚಾರಗಳು ಪ್ರಾಥಮಿಕ ತನಿಖೆಯಲ್ಲಿ ಲಭ್ಯವಾಗಿದೆ. ಇದನ್ನೂ ಓದಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬಳಕೆದಾರರಿಗೆ ದರ ಏರಿಕೆ ಬಿಸಿ – ಇಂದಿನಿಂದಲೇ ಹೊಸ ದರ ಅನ್ವಯ

    ಬಂಧಿತ ಪಾಕ್ ಪ್ರಜೆಗಳಾದ ರಶೀದ್ ಅಲಿ ಸಿದ್ಧಕಿ ಮತ್ತು ಆತನ ಪತ್ನಿ ಆಯೇಷಾ ಹನೀಫ್‌ಳನ್ನು IB ಮತ್ತು NIA ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಬಾಂಗ್ಲಾದೇಶ ದೇಶದ ಗಲಭೆಯಲ್ಲಿ ಜೈಲಿನಿಂದ ಪರಾರಿಯಾದ ಖೈದಿಗಳ ಸಂಪರ್ಕ. ಪಾಕಿಸ್ತಾನಿ ಉಗ್ರ ಸಂಘಟನೆಗಳ ಲಿಂಕ್ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಸದ್ಯ ಆರೋಪಿಗಳ ವಾಸವಿದ್ದ ಮನೆಯಲ್ಲಿ ಮೊಬೈಲ್, ಲ್ಯಾಪ್‌ಟಾಪ್, ಕೆಲ ಎಲೆಕ್ಟ್ರಾನಿಕ್ ವಸ್ತುಗಳು ದೊರೆತ್ತಿದ್ದು, ಅವುಗಳನ್ನು FSLಗೆ ರವಾನಿಸಲಾಗಿದೆ. ಧರ್ಮ ಪ್ರಚಾರದ ಜೊತೆ ದೇಶದಲ್ಲಿ ವಿಧ್ವಂಸಕ ಕೃತ್ಯ ಎಸಗುವ ಉದ್ದೇಶದ ಬಗ್ಗೆ ಯಾವುದೇ ಪುರಾವೆ ಇಲ್ಲಿಯವರೆಗೆ ಸಿಕ್ಕಿಲ್ಲ. ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ. ಬಂಧಿತ ಮೊಹಮ್ಮದ್ ಹನೀಫ್ ಮಗಳಾದ ಫಾತಿಮಾ ಪತಿ ಅಲ್ತಾಫ್‌ ದಾವಣಗೆರೆ ಮೂಲದವನಾಗಿದ್ದು, ಚೆನ್ನೈನಲ್ಲಿ ಬಂಧಿಸಲಾಗಿದೆ. ಚೆನ್ನೈ NIA ಅಧಿಕಾರಿಗಳ ಜೊತೆಯು ಸಂಪರ್ಕದಲ್ಲಿದ್ದು, ತನಿಖೆ ಇನ್ನೂ ಪ್ರಗತಿಯಲ್ಲಿದೆ ಎಂದು ಎಡಿಜಿಪಿ ಅರ್‌. ಹಿತೇಂದ್ರ ತಿಳಿಸಿದ್ದಾರೆ.

    ಪಾಕ್ ಪ್ರಜೆಗಳ ಬಂಧನದ ಪ್ರಕರಣದ ಜಾಡು ಮುಂಬೈ ಮತ್ತು ದೆಹಲಿವರೆಗೆ ವ್ಯಾಪಿಸಿದ್ದು, ಬಂಧಿತರ ಜೊತೆ ನೂರಕ್ಕೂ ಅಧಿಕ ಮಂದಿ ನಿರಂತರ ಸಂಪರ್ಕದಲ್ಲಿರುವುದು ತನಿಖೆ ವೇಳೆ ಪತ್ತೆಯಾಗಿದ್ದು, ಅವರೆಲ್ಲರೂ ಪಾಕಿಸ್ತಾನ ಮೂಲದವರ ಎಂಬುದು ಪೊಲೀಸರ ತನಿಖೆಯಿಂದ ದೃಢವಾಗಬೇಕಿದೆ.

  • 2 ಟಿಪ್ಪರ್ ಲಾರಿ, ಕಾರು ನಡುವೆ ಭೀಕರ ರಸ್ತೆ ಅಪಘಾತ – ಇಬ್ಬರು ಗಂಭೀರ

    2 ಟಿಪ್ಪರ್ ಲಾರಿ, ಕಾರು ನಡುವೆ ಭೀಕರ ರಸ್ತೆ ಅಪಘಾತ – ಇಬ್ಬರು ಗಂಭೀರ

    ಆನೇಕಲ್: ಎರಡು ಟಿಪ್ಪರ್ ಲಾರಿಗಳು (Lorry) ಹಾಗೂ ಕಾರಿನ (Car) ನಡುವೆ ಸರಣಿ ಅಪಘಾತ (Accident) ಸಂಭವಿಸಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆ ಹೊಸಕೋಟೆ ಕೋಲಾರ ಹೆದ್ದಾರಿಯ ಗೊಟ್ಟಿಪುರ ಗೇಟ್ ಬಳಿ ನಡೆದಿದೆ.

    ಇಂದು ಮುಂಜಾನೆ ಸಮಯದಲ್ಲಿ ಈ ಘಟನೆ ನಡೆದಿದ್ದು, ಎರಡು ಲಾರಿಗಳ ನಡುವೆ ಸಿಲುಕಿ ಕಾರು ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರಿಗೂ ಸಹ ಗಂಭೀರ ಗಾಯಗಳಾಗಿದೆ. ಇನ್ನು ಗಾಯಾಳುಗಳನ್ನು ಹೊಸಕೋಟೆ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಹಿನ್ನೆಲೆ ಹೊಸಕೋಟೆ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದನ್ನೂ ಓದಿ: ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲಿಸ್ತೀನ್‌ ಧ್ವಜ ಪ್ರದರ್ಶನ – 8 ಜನರ ವಿರುದ್ಧ ಕೇಸ್‌

    ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೋಲೀಸರು ಭೇಟಿ ನೀಡಿ ವಾಹನಗಳನ್ನು ಹೆದ್ದಾರಿಯಿಂದ ಪಕ್ಕಕ್ಕೆ ನಿಲ್ಲಿಸಿ ಟ್ರಾಫಿಕ್ ಜಾಮ್ ಕ್ಲಿಯರ್ ಮಾಡಿದ್ದಾರೆ. ಘಟನೆ ಸಂಬಂಧ ಹೊಸಕೋಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ. ಇದನ್ನೂ ಓದಿ: ಅಹಿಂದ ಹೆಸರಿನಲ್ಲಿ ಸಮಾಜವಾದಿಯೆಂದು ಆಡಳಿತಕ್ಕೆ ಬಂದವರು ಸಿಎಂ: ಪ್ರಹ್ಲಾದ್ ಜೋಶಿ ಕಿಡಿ

  • ಎಲ್ಲವನ್ನೂ ದೇವರು ನೋಡ್ಕೋತಾನೆ: ಡಿಕೆ ಸುರೇಶ್ ಭಾವುಕ!

    ಎಲ್ಲವನ್ನೂ ದೇವರು ನೋಡ್ಕೋತಾನೆ: ಡಿಕೆ ಸುರೇಶ್ ಭಾವುಕ!

    ರಾಮನಗರ: ಲೋಕಸಭಾ ಚುನಾವಣೆಯಲ್ಲಿ (Lok sabha Elections 2024) ಈ ಬಾರಿ ಡಿಕೆ ಸುರೇಶ್ (DK Suresh) ಅವರಿಗೆ ಸೋಲಾಗಿದ್ದು, ಈ ಹಿನ್ನೆಲೆಯಲ್ಲಿ ನಡೆದ ಆತ್ಮಾವಲೋಕನ ಸಭೆಯಲ್ಲಿ ಮಾಜಿ ಸಂಸದರು ಭಾವುಕರಾಗಿದ್ದಾರೆ.

    ಕನಕಪುರದ ಡಿಕೆ ಶಿವಕುಮಾರ್ ನಿವಾಸದಲ್ಲಿ ಭಾನುವಾರ ಸಂಜೆ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಡಿಕೆ ಸುರೇಶ್ ಕಣ್ಣೀರು ಹಾಕಿದ್ದಾರೆ. ಸೋತಿದ್ದೀನಿ ಅಂತಾ ಸುಮ್ನೆ ಕೂರುವುದಿಲ್ಲ. ನಿಮ್ಮೆಲ್ಲರಿಗೂ ಒಂದು ಕೊರಗಿತ್ತು. ನಿಮ್ಮ ಮನೆಗೆ ಬರಲ್ಲ ಅಂತಿದ್ರೀ, ಇನ್ಮುಂದೆ ನಿಮ್ಮ ಮನೆಗೂ ಬರ್ತಿನಿ, ನಿಮ್ಮ ಬೀದಿಗೂ ಬರ್ತಿನಿ. ಎಲ್ಲಾ ಕೆಲಸ ಕಾರ್ಯಗಳನ್ನು ನಿಮ್ಮ ಜೊತೇಲಿ ಇದ್ದು ಮಾಡ್ತೀನಿ ಎಂದು ಹೇಳಿದರು.

    ನಾನು ಬದುಕಬೇಕು, ಬಾಳಬೇಕು ನನ್ನ ಕೆಲಸಾನೂ ನೋಡಬೇಕು. ಅದೆಲ್ಲದರ ಜೊತೆ ನಿಮ್ಮ ಕೆಲಸವನ್ನೂ ಮಾಡ್ತೀನಿ. ಧೈರ್ಯವಾಗಿರಿ ಯಾರಿಗೂ ಅಂಜಬೇಕಾಗಿಲ್ಲ, ಯಾರಿಗೂ ಹೇದರಿಕೊಳ್ಳಬೇಡಿ. ಯಾರು ಯಾರು ಏನೆಲ್ಲಾ ಮಾಡಿದ್ದಾರೆ, ಅದೆಲ್ಲವನ್ನೂ ದೇವರು ನೋಡ್ಕೊತಾನೆ ಎಂದು ಡಿಕೆ ಸುರೇಶ್ ಗದ್ಗದಿತರಾದರು.

    ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಾಕ್ಟರ್ ಮಂಜುನಾಥ್ ಅವರು ಒಟ್ಟು 10,79,002 ಹಾಗೂ ಡಿ.ಕೆ.ಸುರೇಶ್ 8,09,355 ಮತಗಳನ್ನು ಪಡೆದರು. ಡಾಕ್ಟರ್ ಬರೋಬ್ಬರಿ 2,69,647 ಮತಗಳ ಅಂತರದಿಂದ ಹಾಲಿ ಸಂಸದರನ್ನು ಪರಾಭವಗೊಳಿಸಿದ್ದಾರೆ. ಈ ಮೂಲಕ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಡಿ.ಕೆ.ಸುರೇಶ್‍ಗೆ ನಿರಾಸೆಯಾಗಿದೆ.

  • ಬೆಂಗಳೂರು ಗ್ರಾಮಾಂತರ ಸೋಲಿನಿಂದ ನಾನಿನ್ನೂ ಹೊರ ಬಂದಿಲ್ಲ: ಡಿಕೆಶಿ

    ಬೆಂಗಳೂರು ಗ್ರಾಮಾಂತರ ಸೋಲಿನಿಂದ ನಾನಿನ್ನೂ ಹೊರ ಬಂದಿಲ್ಲ: ಡಿಕೆಶಿ

    ಬೆಂಗಳೂರು: ಬೆಂಗಳೂರು ಗ್ರಾಮಾಂತರ ಸೋಲಿನಿಂದ ನಾನು ಇನ್ನೂ ಹೊರ ಬಂದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದ್ದಾರೆ.

    ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮತ ಹಾಕಿದವರಿಗೆ ಕೃತಜ್ಞತೆ ಸಲ್ಲಿಸೋಣ. ಮತ ಹಾಕದವರ ಹೃದಯವನ್ನೂ ಗೆಲ್ಲಬೇಕು. ಈ ಮಾತನ್ನ ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ. ನಾವು ಓವರ್ ಕಾನ್ಫಿಡೆಂಟ್ ಆಗಿ ಇದ್ವಿ. ಅವರು ಒಳ್ಳೆಯ ಸ್ಟ್ರಾಟಜಿ ಮಾಡಿದ್ರು. ನಾನ್ ಕಾಂಟ್ರವರ್ಶಿಯಲ್ ಕ್ಯಾಂಡಿಡೇಟ್ ಹಾಕಿದ್ರು. ದಳದಿಂದ ನಿಲ್ಲಿಸಲಿಲ್ಲ, ಬಿಜೆಪಿಯಿಂದ (BJP) ಅಭ್ಯರ್ಥಿಗಳನ್ನು ಹಾಕಿದ್ರು ಎಂದರು.

    ನಮಗೆ ಬರುವ ಮತಗಳು ಬಂದಿವೆ. ಅವರಿಗೆ ಒಂದೂವರೆ ಲಕ್ಷ ವೋಟು ಹೋಗಿದೆ. ಕನಕಪುರದಲ್ಲಿ 60 ಸಾವಿರ ವೋಟು ನಿರೀಕ್ಷೆ ಇತ್ತು. ಅಲ್ಲಿ 25 ಸಾವಿರ ಮತ‌ ಮಾತ್ರ ಬಂದಿದೆ. ದೇವೇಗೌಡರು (HD Devegowda) ಸೋತಿದ್ರಲ್ಲಾ, ಕುಮಾರಸ್ವಾಮಿನೂ (HD Kumaraswamy) ಸೋತಿದ್ರಲ್ಲ. ಅವರ ಸೊಸೆಯೂ‌ ಸೋತಿದ್ರಲ್ಲ. ನಿಖಿಲ್ (Nikhil Kumaraswamy) ಕೂಡ ಸೋತಿರಲಿಲ್ವೇ. ಈಗ ಸುರೇಶ್ ಸೋತಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯ ಹಾಗೂ ಜನರ ಧ್ವನಿಯಾಗಿ ಕೆಲಸ ಮಾಡಲು, ಮತ ಹಾಕದವರ ಮನಗೆಲ್ಲಲು ರಾಗಾ ಸಲಹೆ: ಡಿಕೆಶಿ

  • ಡಿಕೆ ಬ್ರದರ್ಸ್‌ಗೆ ಠಕ್ಕರ್‌; ಜನರ ಹೃದಯ ಗೆದ್ದ ಡಾಕ್ಟರ್‌ – ಮಂಜುನಾಥ್‌ಗೆ ಯಾವ ಕ್ಷೇತ್ರದಲ್ಲಿ ಎಷ್ಟು ವೋಟ್‌?

    ಡಿಕೆ ಬ್ರದರ್ಸ್‌ಗೆ ಠಕ್ಕರ್‌; ಜನರ ಹೃದಯ ಗೆದ್ದ ಡಾಕ್ಟರ್‌ – ಮಂಜುನಾಥ್‌ಗೆ ಯಾವ ಕ್ಷೇತ್ರದಲ್ಲಿ ಎಷ್ಟು ವೋಟ್‌?

    ಬೆಂಗಳೂರು ಗ್ರಾಮಾಂತರ: ಗೆಲುವಿನ ಭರವಸೆಯಲ್ಲಿದ್ದ ಡಿಕೆ ಸಹೋದರರಿಗೆ ಬೆಂಗಳೂರು ಗ್ರಾಮಾಂತರ ಮತದಾರರು ಸೋಲಿನ ರುಚಿ ತೋರಿಸಿದ್ದಾರೆ. ವೈದ್ಯಕೀಯ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿ ಜನಪ್ರಿಯರಾಗಿರುವ ಡಾ. ಮಂಜುನಾಥ್‌ (Dr.Manjunath) ಅವರಿಗೆ ಗೆಲುವಿನ ಸಿಹಿ ನೀಡಿದ್ದಾರೆ.

    ಪ್ರಭಾವಿಗಳಾದ ಡಿಕೆ ಬ್ರದರ್ಸ್‌ ಮಣಿಸುವುದು ಸುಲಭದ ಮಾತಾಗಿರಲಿಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್‌ (D.K.Shivakumar) ಸಹೋದರ ಡಿ.ಕೆ.ಸುರೇಶ್‌ (D.K.Suresh) ಗೆದ್ದೇ ಬಿಡುತ್ತಾರೆ. ಮಂಜುನಾಥ್‌ ಅವರನ್ನು ಹರಕೆಯ ಕುರಿ ಮಾಡಲಾಗಿದೆ ಎಂದೇ ಬಿಂಬಿಸಲಾಗಿತ್ತು. ಆದರೆ ಫಲಿತಾಂಶವು ಅಚ್ಚರಿ ಮೂಡಿಸಿದೆ. ಇದನ್ನೂ ಓದಿ: ತುಕಾರಂ ʼಕೈʼ ಹಿಡಿದ ಬಳ್ಳಾರಿ ಜನ – ಶ್ರೀರಾಮುಲುಗೆ ಸೋಲು

    ಡಾಕ್ಟರ್‌ ಮಂಜುನಾಥ್‌ ಅವರು ಒಟ್ಟು 10,79,002 ಹಾಗೂ ಡಿ.ಕೆ.ಸುರೇಶ್‌ 8,09,355 ಮತಗಳನ್ನು ಪಡೆದರು. ಡಾಕ್ಟರ್‌ ಬರೋಬ್ಬರಿ 2,69,647 ಮತಗಳ ಅಂತರದಿಂದ ಹಾಲಿ ಸಂಸದರನ್ನು ಪರಾಭವಗೊಳಿಸಿದ್ದಾರೆ. ಹ್ಯಾಟ್ರಿಕ್‌ ಗೆಲುವಿನ ನಿರೀಕ್ಷೆಯಲ್ಲಿ ಡಿ.ಕೆ.ಸುರೇಶ್‌ಗೆ ನಿರಾಸೆಯಾಗಿದೆ. ಇದನ್ನೂ ಓದಿ: ಮೈತ್ರಿ ಅಭ್ಯರ್ಥಿ ಎಂದಲ್ಲ, ಜೆಡಿಎಸ್ ಅಭ್ಯರ್ಥಿ ಎಂದು ಭಾವಿಸಿ ಮತ ನೀಡಿದ್ದಾರೆ: ಕೆ.ಸುಧಾಕರ್

    ಯಾವ ಕ್ಷೇತ್ರದಲ್ಲಿ ಎಷ್ಟು ಮತ?

    ರಾಮನಗರ ವಿಧಾನಸಭಾ ಕ್ಷೇತ್ರ
    ಡಾ.ಮಂಜುನಾಥ್- 91,945
    ಡಿ.ಕೆ.ಸುರೇಶ್- 92,090
    ಕ್ಷೇತ್ರದ ಲೀಡ್- 145 (ಕಾಂಗ್ರೆಸ್)

    ಮಾಗಡಿ ವಿಧಾನಸಭಾ ಕ್ಷೇತ್ರ
    ಡಾ.ಮಂಜುನಾಥ್- 1,13,911
    ಡಿ.ಕೆ.ಸುರೇಶ್- 83,938
    ಕ್ಷೇತ್ರದ ಲೀಡ್- 29,973 (ಬಿಜೆಪಿ)

    ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ
    ಡಾ.ಮಂಜುನಾಥ್- 1,06,971
    ಡಿ.ಕೆ.ಸುರೇಶ್- 85,357
    ಕ್ಷೇತ್ರದ ಲೀಡ್- 21,614 (ಬಿಜೆಪಿ)

    ಕನಕಪುರ ವಿಧಾನಸಭಾ ಕ್ಷೇತ್ರ
    ಡಾ.ಮಂಜುನಾಥ್- 83,303
    ಡಿ.ಕೆ.ಸುರೇಶ್- 1,08,980
    ಕ್ಷೇತ್ರದ ಲೀಡ್- 25,677 (ಕಾಂಗ್ರೆಸ್)

    ಕುಣಿಗಲ್ ವಿಧಾನಸಭಾ ಕ್ಷೇತ್ರ
    ಡಾ.ಮಂಜುನಾಥ್- 97,248
    ಡಿ.ಕೆ.ಸುರೇಶ್- 73,410
    ಕ್ಷೇತ್ರದ ಲೀಡ್- 23,838 (ಬಿಜೆಪಿ)

    ಆನೇಕಲ್ ವಿಧಾನಸಭಾ ಕ್ಷೇತ್ರ
    ಡಾ.ಮಂಜುನಾಥ್- 1,37,693
    ಡಿ.ಕೆ.ಸುರೇಶ್- 1,15,328
    ಕ್ಷೇತ್ರದ ಲೀಡ್- 22,365 (ಬಿಜೆಪಿ)

    ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ
    ಡಾ.ಮಂಜುನಾಥ್- 2,55,756
    ಡಿ.ಕೆ.ಸುರೇಶ್- 1,58,627
    ಕ್ಷೇತ್ರದ ಲೀಡ್- 97,129 (ಬಿಜೆಪಿ)

    ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ
    ಡಾ.ಮಂಜುನಾಥ್- 1,88,726
    ಡಿ.ಕೆ.ಸುರೇಶ್- 89,729
    ಕ್ಷೇತ್ರದ ಲೀಡ್- 98,997 (ಬಿಜೆಪಿ)

  • ಸಂಸದ ಡಿ.ಕೆ ಸುರೇಶ್ ಗೆಲುವಿಗಾಗಿ ʻವಿಜಯದುರ್ಗ ಯಾಗʼ!

    ಸಂಸದ ಡಿ.ಕೆ ಸುರೇಶ್ ಗೆಲುವಿಗಾಗಿ ʻವಿಜಯದುರ್ಗ ಯಾಗʼ!

    ರಾಮನಗರ: ಮಂಗಳವಾರ ಬಹುನಿರೀಕ್ಷಿತ ಲೋಕಸಭಾ ಚುನಾವಣೆ ಫಲಿತಾಂಶ (Lok Sabha Election Result) ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಡಿ.ಕೆ .ಸುರೇಶ್ (DK Suresh) ಗೆಲುವಿಗಾಗಿ ಬೆಂಬಲಿಗರು ಪೂಜೆ ಸಲ್ಲಿಸಿದ್ದಾರೆ.

    ಕನಕಪುರ ಪಟ್ಟಣದಲ್ಲಿರುವ ಡಿ.ಕೆ ಸುರೇಶ್ ಕುಲದೇವತೆ ಕೆಂಕೆರಮ್ಮ ದೇವಾಲಯದಲ್ಲಿ ಹೋಮ-ಹವನಗಳ ನಡೆಸುವ ಮೂಲಕ ಡಿಕೆಸು ಗೆಲುವಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: `400 ಪಾರ್ vs 295′ – ಯಾರಾಗ್ತಾರೆ ಭಾರತದ ಅಧಿಪತಿ?

    4ನೇ ಬಾರಿ ಡಿ.ಕೆ ಸುರೇಶ್ ಜಯಶೀಲರಾಗಬೇಕು ಎಂದು ಬರಂಬಲಿಗರು ʻವಿಜಯದುರ್ಗ ಯಾಗʼ (Vijayadurga Yaga) ಮಾಡಿದ್ದಾರೆ. ಕಾಂಗ್ರೆಸ್ ಯುವಘಟಕದ ಅನಿಲ್ ಮತ್ತು ದೀಪು ಎಂಬುವವರಿಂದ ಹೋಮ-ಹವನ ನೆರವೇರಿಸಲಾಗಿದ್ದು, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲುವಂತೆ ಕಾಂಗ್ರೆಸ್ ಮುಖಂಡರು ಹರಕೆ ಕಟ್ಟಿಕೊಂಡಿದ್ದಾರೆ.

    ತೀವ್ರ ಜಿದ್ದಾಜಿದ್ದಿನ ಕಣವಾಗಿರೋ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ತಮ್ಮ ತಮ್ಮ ನಾಯಕರ ಗೆಲುವಿಗಾಗಿ ಬೆಂಬಲಿಗರು ಹಾಗೂ ಮುಖಂಡರು ದೇವರ ಮೊರೆಹೋಗ್ತಿದ್ದಾರೆ. ಇದನ್ನೂ ಓದಿ: ಬಿಸಿ ನೀರಿಗೆ ಮದ್ಯ ಮಿಕ್ಸ್‌ ಮಾಡಿ ಮಾವ ಕುಡಿಯುತ್ತಾರೆ- ಬಾಲಯ್ಯ ಅಳಿಯನ ಮಾತು ವೈರಲ್

  • ಡಾ.ಮಂಜುನಾಥ್ ಗೆಲುವಿಗೆ ಹರಕೆಹೊತ್ತ ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ

    ಡಾ.ಮಂಜುನಾಥ್ ಗೆಲುವಿಗೆ ಹರಕೆಹೊತ್ತ ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ

    ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ (Dr.Manjunath) ಗೆಲುವಿಗಾಗಿ ಇನ್ಫೋಸಿಸ್ ಮುಖ್ಯಸ್ಥೆ ಡಾ.ಸುಧಾಮೂರ್ತಿ (Sudha Murty) ಹರಕೆಹೊತ್ತಿದ್ದಾರೆ.

    ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ ಮಾತನಾಡಿ, ಸುಧಾಮೂರ್ತಿ ಅವರು ಮಂತ್ರಾಲಯದಲ್ಲಿ 6 ಕಿಮೀ ಪಾದಯಾತ್ರೆ ಮಾಡಿ ರಾಯರಸೇವೆ ಮಾಡುತ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಚಿವ ನಾಗೇಂದ್ರ ರಾಜೀನಾಮೆ ಅಗತ್ಯ ಇಲ್ಲ: ಮಹದೇವಪ್ಪ

    Sudha Murty

    ನನ್ನ ಗೆಲುವಿನ ಬಗ್ಗೆ ಸಾಕಷ್ಟು ಜನ ವಿಶ್ವಾಸ ತುಂಬುತ್ತಿದ್ದಾರೆ. ಜಯದೇವ ಆಸ್ಪತ್ರೆಯ ಕೆಲಸದ ಬಗ್ಗೆ ಜನ ಮಾತನಾಡುತ್ತಾರೆ‌. ಜಯದೇವ ಆಸ್ಪತ್ರೆ ಅಭಿವೃದ್ಧಿಗೆ ಇನ್ಫೋಸಿಸ್ ಮುಖ್ಯಸ್ಥೆ ಡಾ.ಸುಧಾಮೂರ್ತಿ ಹಾಗೂ ನಾರಾಯಣಮೂರ್ತಿ ಅವರ ಕೊಡುಗೆ ಕೂಡಾ ಇದೆ ಎಂದು ಹೇಳಿದ್ದಾರೆ.

    ಆಗ ಆಸ್ಪತ್ರೆ ಅಭಿವೃದ್ಧಿಗೆ ಸಾಕಷ್ಟು ಸಹಾಯ ಮಾಡಿದರು. ಅವರಿಗೆ ನನ್ನ ಮೇಲೆ ಅಷ್ಟೊಂದು ನಂಬಿಕೆ ಇತ್ತು. ಮೊನ್ನೆಯೂ ಅವರ ಮನೆಗೆ ಹೋದಾಗ ನನ್ನ ಗೆಲುವಿಗೆ ಹರಕೆ ಹೊತ್ತೊರುವುದಾಗಿ ತಿಳಿಸಿದರು ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಎನ್‌ಡಿಎ ಅಧಿಕಾರಕ್ಕೆ ಬಂದ್ರೆ ಜೂನ್‌ 9 ರಂದು ಮೋದಿ ಪ್ರಮಾಣ ವಚನ!

    ಮಂತ್ರಾಲಯದ ರಾಯರ ಸನ್ನಿಧಿಯಲ್ಲಿ 6 ಕಿಮೀ ಪಾದಯಾತ್ರೆ ಮಾಡಿ ಸೇವೆ ಮಾಡ್ತೀನಿ ಅಂದ್ರು. ಅವರ ಅಭಿಮಾನಕ್ಕೆ ನಾನು ಚಿರಋಣಿ ಆಗಿ ಇರ್ತೇನೆ ಎಂದಿರುವ ಡಾ.ಮಂಜುನಾಥ್ ಅವರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.